Tag: Ranya Rao

  • ನಟಿ ರನ್ಯಾಗೆ ಸರ್ಕಾರ ಕ್ಲೀನ್‌ಚಿಟ್‌ ಕೊಟ್ಟರೂ ಆಶ್ಚರ್ಯ ಇಲ್ಲ: ಸುರೇಶ್‌ ಬಾಬು

    ನಟಿ ರನ್ಯಾಗೆ ಸರ್ಕಾರ ಕ್ಲೀನ್‌ಚಿಟ್‌ ಕೊಟ್ಟರೂ ಆಶ್ಚರ್ಯ ಇಲ್ಲ: ಸುರೇಶ್‌ ಬಾಬು

    – ಚಿನ್ನ ಕಳ್ಳಸಾಗಣೆ ಕೇಸಲ್ಲಿ ಗೃಹ ಇಲಾಖೆಯೇ ಶಾಮೀಲು: ಜೆಡಿಎಸ್‌ ಶಾಸಕ ಆರೋಪ

    ಬೆಂಗಳೂರು: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ರಾಜ್ಯ ಸರ್ಕಾರ ಬೇಕಾದ್ರೆ, ರನ್ಯಾಗೆ (Ranya Rao) ಕ್ಲೀನ್‌ಚಿಟ್ ಕೊಟ್ಟರೂ ಆಶ್ಚರ್ಯ ಇಲ್ಲ ಎಂದು ಜೆಡಿಎಸ್ ಶಾಸಕಾಂಗ ನಾಯಕ ಸುರೇಶ್ ಬಾಬು (Suresh Babu) ಅನುಮಾನ ವ್ಯಕ್ತಪಡಿಸಿದರು.

    ರನ್ಯಾ ರಾವ್ ಕೇಸ್ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ಇಂತಹ ಮಾಫಿಯಾಗಳು ಹೆಚ್ಚಾಗಿ ತಲೆ ಎತ್ತುತ್ತಿವೆ. ಗೃಹ ಇಲಾಖೆ ಸರಿಯಾಗಿ ಕೆಲಸ ಮಾಡ್ತಿಲ್ಲ. ದಕ್ಷ ಅಧಿಕಾರಿಗಳು ಇದ್ದರೂ ಸರ್ಕಾರ ಸರಿಯಾಗಿ ಬಳಕೆ ಮಾಡಿಕೊಳ್ತಿಲ್ಲ. ರನ್ಯಾ ರಾವ್ ಅನೇಕ ಬಾರಿ ದುಬೈಗೆ ಹೋಗಿ ಬಂದಿದ್ದಾರೆ. ತಂದೆ IPS ಅಧಿಕಾರಿ ಅಂತ ರನ್ಯಾಗೆ ರಕ್ಷಣೆ ಕೊಡ್ತಿದ್ದಾರಾ ಎಂದು ಅನುಮಾನ ವ್ಯಕ್ತಪಡಿಸಿದರು. ಇದನ್ನೂ ಓದಿ: EXCLUSIVE |ರನ್ಯಾ ಬಳಿ ಇದೆ ದುಬೈ ರೆಸಿಡೆಂಟ್ ವೀಸಾ – ಜಾಮೀನು ಸಿಕ್ರೆ ದೇಶ ಬಿಟ್ಟು ಹೋಗ್ತಾರಾ?

    ಪೊಲೀಸರ ರಕ್ಷಣೆಯಲ್ಲಿ ರನ್ಯಾ ಓಡಾಡಿದ್ದಾಳೆ. ಸರ್ಕಾರಕ್ಕೆ ನಾಚಿಕೆ ಆಗಬೇಕು.14 ಕೆಜಿ ಚಿನ್ನ ಸಾಗಾಣೆ ಮಾಡ್ತಾರೆ ಅಂದರೆ ಗೃಹ ಇಲಾಖೆ ಇದರಲ್ಲಿ ಶಾಮೀಲಾಗಿದೆ ಅನ್ನಿಸುತ್ತೆ. ಸಿಐಡಿ ತನಿಖೆ ಯಾಕೆ ವಾಪಸ್ ಪಡೆದ್ರಿ? ಇದು ನಮಗೆ ಅನುಮಾನ ಬರ್ತಿದೆ. ರನ್ಯಾ ರಾವ್ ಉಳಿಸೋಕೆ ಸರ್ಕಾರ ಮುಂದಾಗ್ತಿರುವ ಅನುಮಾನ ಬರ್ತಿದೆ ಎಂದು ತಿಳಿಸಿದರು.

    ರನ್ಯಾ ರಾವ್ ಉಳಿಸಲು ಈ ಸರ್ಕಾರದವರು ಬೇಕಾದ್ರೆ ಮುಡಾ ಕೇಸ್‌ನಲ್ಲಿ ಸೈಟ್ ವಾಪಸ್ ಕೊಟ್ಟಂತೆ ಚಿನ್ನವನ್ನ ದುಬೈಗೆ ವಾಪಸ್ ಇಟ್ಟು ಬಾ ಅಂತ ಹೇಳಿದ್ರೂ ಅಚ್ಚರಿಯಿಲ್ಲ ಎಂದು ಲೇವಡಿ ಮಾಡಿದರು. ರಾಜ್ಯ ಸರ್ಕಾರ ಬೇಕಾದ್ರೆ ರನ್ಯಾಗೆ ಕ್ಲೀನ್ ಚಿಟ್ ಕೊಡ್ತಾರೆ. ಸರ್ಕಾರದ ವರ್ತನೆ ನೋಡಿದ್ರೆ ನಮಗೆ ಅನುಮಾನ ಬರುತ್ತದೆ. ರನ್ಯಾ ಪ್ರಕರಣದಲ್ಲಿ ಇಬ್ಬರು ಸಚಿವರ ಹೆಸರು ಕೇಳಿ ಬಂದಿದೆ. ಯಾರು ಅ ಸಚಿವರು ಎಂಬುದು ತನಿಖೆ ಆಗಬೇಕು. ಯಾರೇ ಪ್ರಭಾವಿಗಳು ಇದ್ದರೂ ಕ್ರಮ ಆಗಬೇಕು. ಯಾರು ಇದರ ಹಿಂದೆ ಇದ್ದಾರೆ ಬೆಳಕಿಗೆ ಬರಬೇಕು. ಸಿಬಿಐ ಇದರ ಬಗ್ಗೆ ತನಿಖೆ ಮಾಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ರನ್ಯಾ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ – ನಾಲ್ವರಿಗೆ ಸಿಬಿಐ ನೋಟಿಸ್‌

    ಕುಮಾರಸ್ವಾಮಿ ಇವತ್ತು ಇದ್ದಿದ್ದರೆ ಚೆನ್ನಾಗಿ ಇರುತ್ತಿತ್ತು. ಕುಮಾರಸ್ವಾಮಿ ಕೂಡಾ ಸುದ್ದಿಗೋಷ್ಠಿ ಮಾಡಲಿದ್ದಾರೆ. ಇಷ್ಟು ದಿನ ರನ್ಯಾ ಏರ್ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳನ್ನ ಕಣ್ಣು ತಪ್ಪಿಸಿ ಬಂದಿದ್ದಾಳೆ. ಇದೆಲ್ಲವನ್ನೂ ನೋಡಿದರೆ ಪೊಲೀಸರು ಶಾಮೀಲಾಗಿರುವ ಅನುಮಾನ ಇದೆ. ರಾಜ್ಯ ಸರ್ಕಾರದಿಂದ ಈ‌ ತನಿಖೆ ಆಗೊಲ್ಲ. ಸಿಬಿಐ ತನಿಖೆ ಆಗಬೇಕು ಎಂದರು.

  • PUBLiC TV Exclusive | ರನ್ಯಾ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ – ಸಿಐಡಿ ವಿಚಾರಣೆ ಆದೇಶ ವಾಪಸ್ ಪಡೆದ ಸರ್ಕಾರ!

    PUBLiC TV Exclusive | ರನ್ಯಾ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ – ಸಿಐಡಿ ವಿಚಾರಣೆ ಆದೇಶ ವಾಪಸ್ ಪಡೆದ ಸರ್ಕಾರ!

    ಬೆಂಗಳೂರು: ನಟಿ ರನ್ಯಾ ರಾವ್‌ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ (Ranya Rao Gold Smuggling Case) ಸ್ಫೋಟಕ ವಿಚಾರಗಳು ಬಯಲಿಗೆ ಬರ್ತಿವೆ. ಈ ನಡುವೆ ರಾಜ್ಯ ಸರ್ಕಾರವೇ ಸಿಐಡಿ ವಿಚಾರಣೆಗೆ (CID Investigation) ನೀಡಿದ್ದ ಆದೇಶವನ್ನು ವಾಪಸ್‌ ಪಡೆದಿದೆ.

    ಶಿಷ್ಟಾಚಾರ ಉಲ್ಲಂಘಟನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಗೆ ಆದೇಶ ನೀಡಿದ್ದ ಸರ್ಕಾರ ಒಂದೇ ದಿನದಲ್ಲಿ ಯೂಟರ್ನ್‌ ಹೊಡೆದಿದೆ. ಮೊನ್ನೆ ರಾತ್ರಿ ಆದೇಶ ನೀಡಿ, ನಿನ್ನೆ ರಾತ್ರಿಯೇ ಆದೇಶ ವಾಪಸ್ ಪಡೆದಿದೆ. ಸದ್ಯ ಸರ್ಕಾರದ ದಿಢೀರ್‌ ಯೂಟರ್ನ್‌ ನಿರ್ಧಾರ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ರನ್ಯಾ ರಾವ್ ಪ್ರಕರಣದಲ್ಲಿ ಯಾರ ಒತ್ತಡ ಹೆಚ್ಚಾಗಿತ್ತು..? ಎಂಬ ಪ್ರಶ್ನೆಯೂ ಹುಟ್ಟುಹಾಕಿದೆ. ಇದನ್ನೂ ಓದಿ: ಭೂಸ್ವಾಧೀನ ಪರಿಹಾರ ನೀಡದ ಜಿಲ್ಲಾಡಳಿತ – ಹಾವೇರಿ ಜಿಲ್ಲಾಧಿಕಾರಿ ಕಾರು ಜಪ್ತಿ

    ಸಿಐಡಿ ತನಿಖೆ ಆದೇಶ ಬೆನ್ನಲ್ಲೇ ಐಓ ಆಗಿ ರಾಘವೇಂದ್ರ ಹೆಗ್ಡೆ ಅವರ ನೇಮಕ ಆಗಿತ್ತು. ಆದ್ರೆ ಆದೇಶ ಹಿಂಪಡೆಯಲಾಗಿದ್ದು, ಸಿಐಡಿ ಡಿಜಿಪಿ ತನಿಖಾಧಿಕಾರಿಯನ್ನ ನೇಮಕಗೊಳಿಸಿದ ಬಳಿಕ ಏಕೆ ಸರ್ಕಾರದ ವರಸೆ ಬದಲಾಯ್ತು..? ಎಂಬುದು ಮತ್ತಷ್ಟು ಅನುಮಾನಕ್ಕೆ ಕಾರಣವಾಗಿದೆ.

    ಈಗ ಐಎಎಸ್ ಅಧಿಕಾರಿ ಗೌರವ್ ಗುಪ್ತಾ ತನಿಖೆಯಷ್ಟೇ ನಡೆಯಲಿದೆ. ಅದು ಪ್ರೋಟೋಕಾಲ್ ಉಲ್ಲಂಘನೆಗೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ರಾಮಚಂದ್ರರಾವ್ ವಿರುದ್ಧದ ಆರೋಪದ ಬಗ್ಗೆ ತನಿಖೆ ಮಾತ್ರ ನಡೆಯಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಅಮೆರಿಕದ ಮದ್ಯದ ಮೇಲೆ ಭಾರತ 150%, ಕೃಷಿ ಉತ್ಪನ್ನಗಳ ಮೇಲೆ 100% ತೆರಿಗೆ ವಿಧಿಸುತ್ತಿದೆ: ವೈಟ್‌ಹೌಸ್

    ಬಗೆದಷ್ಟೂ ರಹಸ್ಯ ಬಯಲು:
    ರನ್ಯಾ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಸ್ಫೋಟಕ ವಿಚಾರಗಳು ಬಯಲಿಗೆ ಬರ್ತಿವೆ. ಕಳೆದ ವರ್ಷದ ಕೊನೆಯಲ್ಲಿ 2 ಬಾರಿ ದುಬೈನಲ್ಲಿ ಚಿನ್ನ ಖರೀದಿ ಮಾಡಿದ್ದ ರನ್ಯಾರಾವ್, ಅದನ್ನು ಸ್ವಿಟ್ಜರ್‌ಲೆಂಡ್‌ಗೆ ಕೊಂಡೊಯ್ಯೋದಾಗಿ ಹೇಳಿ ಅಲ್ಲಿನ ಕಸ್ಟಮ್ಸ್ ಅಧಿಕಾರಿಗಳನ್ನು ಯಾಮಾರಿಸಿದ್ರು. ಜಿನೇವಾಗೆ ಹೋಗೋದಾಗಿ ಸುಳ್ಳು ಹೇಳಿದ್ದ ರನ್ಯಾರಾವ್ ನೇರವಾಗಿ ಭಾರತಕ್ಕೆ ಬಂದಿದ್ರು ಎಂಬುದು ಆಕೆಯ ಟ್ರಾವೆಲ್ ಹಿಸ್ಟರಿ ಪರಿಶೀಲಿಸಿದಾಗ ಗೊತ್ತಾಗಿದೆ ಎಂದು ಡಿಆರ್‌ಐ, ಅರೆಸ್ಟ್ ಮೆಮೋದಲ್ಲಿ ತಿಳಿಸಿದೆ. ಇದನ್ನೂ ಓದಿ: ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಿಂದ ಶಾಸಕರ ಹಕ್ಕು ಮೊಟಕುಗೊಳಿಸುವ ಕಾರ್ಯ: ರಾಜ್ಯಪಾಲರಿಗೆ ಬಿಜೆಪಿ ದೂರು

    ರನ್ಯಾ ರಾವ್ ನಿರಂತರವಾಗಿ ಚಿನ್ನ ಕಳ್ಳಸಾಗಣೆ ಮಾಡಿದ್ದಾರೆ. ಗೋಲ್ಡ್ ಸ್ಮಗ್ಲಿಂಗ್ ಕಿಂಗ್‌ಪಿನ್ ಆಗಿರುವ ಈಕೆ ಆರು ತಿಂಗಳು ದೇಶದಿಂದ ಹೊರಗೆ ಇರ್ತಿದ್ರು.. ಎಂದಿದೆ. ರನ್ಯಾ ಜಾಮೀನು ಅರ್ಜಿ ವಿಚಾರಣೆ ವೇಳೆ ಈ ಎಲ್ಲಾ ಅಂಶಗಳು ಪ್ರಸ್ತಾಪವಾದ್ವು. ಸರ್ಚ್ ಪ್ರಕ್ರಿಯೆ ಕಾನೂನು ಪ್ರಕಾರ ನಡೆದಿಲ್ಲ. ನಿದ್ದೆ ಮಾಡೋಕೂ ಬಿಡದೇ ವಿಚಾರಣೆ ನಡೆಸಿದ್ದಾರೆ. ನಿದ್ದೆಯ ಹಕ್ಕನ್ನು ಕಿತ್ಕೊಂಡಿದ್ದಾರೆ ಎಂದು ರನ್ಯಾ ಪರ ವಕೀಲರು ವಾದ ಮಂಡಿಸಿದ್ರು. ರನ್ಯಾ ಮದ್ವೆಯಾದ ಮಹಿಳೆ. ಅವರೆಲ್ಲೂ ಹೋಗಲ್ಲ.. ಜಾಮೀನು ನೀಡಿ ಎಂದು ಮನವಿ ಮಾಡಿದ್ರು. ಆದ್ರೆ, ಇದನ್ನು ಡಿಆರ್‌ಐ ಪರ ವಕೀಲರು ಆಕ್ಷೇಪಿಸಿದ್ರು. ರನ್ಯಾಗೆ ಕರೆ ಮಾಡಿದ್ದ ವ್ಯಕ್ತಿಗೆ ಸಮನ್ಸ್ ನೀಡಿ ಹೇಳಿಕೆ ಪಡೆಯಲಾಗಿದೆ. ಯಾವುದೇ ಲೋಪ ಎಸಗಿಲ್ಲ. ಆಕೆ ಬಳಿ ಯುಎಇ ರೆಸಿಡೆನ್ಸಿ ಕಾರ್ಡ್ ಸಿಕ್ಕಿದೆ. ಹೀಗಾಗಿ ಜಾಮೀನು ಕೊಡಬಾರದು ಎಂದು ಪ್ರತಿವಾದ ಮಾಡಿದ್ರು. ಕಡೆಗೆ ಕೋರ್ಟ್ ಮಾರ್ಚ್ 14ಕ್ಕೆ ಆದೇಶ ಕಾಯ್ದಿರಿಸಿತು.

  • ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಮಾ.14ಕ್ಕೆ ರನ್ಯಾ ಬೇಲ್ ಭವಿಷ್ಯ

    ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಮಾ.14ಕ್ಕೆ ರನ್ಯಾ ಬೇಲ್ ಭವಿಷ್ಯ

    ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ (Gold Smuggling Case) ಸಿಲುಕಿರುವ ನಟಿ ರನ್ಯಾ (Ranya Rao) ಬೇಲ್ ಆದೇಶವನ್ನು ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಮಾ.14ಕ್ಕೆ ಕಾಯ್ದಿರಿಸಿದೆ.

    ರನ್ಯಾ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಸ್ಫೋಟಕ ವಿಚಾರಗಳು ಬಯಲಿಗೆ ಬರುತ್ತಿವೆ. ಕಳೆದ ವರ್ಷದ ಕೊನೆಯಲ್ಲಿ 2 ಬಾರಿ ದುಬೈನಲ್ಲಿ ಚಿನ್ನ ಖರೀದಿ ಮಾಡಿದ್ದ ರನ್ಯಾ ರಾವ್, ಅದನ್ನು ಸ್ವಿಟ್ಜರ್‌ಲೆಂಡ್‌ಗೆ ಕೊಂಡೊಯ್ಯೋದಾಗಿ ಅಲ್ಲಿನ ಕಸ್ಟಮ್ಸ್ ಅಧಿಕಾರಿಗಳನ್ನು ಯಾಮಾರಿಸಿದ್ದರು. ಜಿನೇವಾಗೆ ಹೋಗೋದಾಗಿ ಸುಳ್ಳು ಹೇಳಿದ್ದ ರನ್ಯಾ ರಾವ್ ನೇರವಾಗಿ ಭಾರತಕ್ಕೆ ಬಂದಿದ್ದರು ಎಂಬುದು ಆಕೆಯ ಟ್ರಾವೆಲ್ ಹಿಸ್ಟರಿ ಪರಿಶೀಲಿಸಿದಾಗ ಗೊತ್ತಾಗಿದೆ ಎಂದು ಡಿಆರ್‌ಐ, ಅರೆಸ್ಟ್ ಮೆಮೋದಲ್ಲಿ ತಿಳಿಸಿದೆ. ರನ್ಯಾರಾವ್ ನಿರಂತರವಾಗಿ ಚಿನ್ನ ಕಳ್ಳಸಾಗಣೆ ಮಾಡಿದ್ದಾರೆ. ಗೋಲ್ಡ್ ಸ್ಮಗ್ಲಿಂಗ್ ಕಿಂಗ್‌ಪಿನ್ ಆಗಿರುವ ಈಕೆ ಆರು ತಿಂಗಳು ದೇಶದಿಂದ ಹೊರಗೆ ಇರುತ್ತಿದ್ದರು ಎಂದಿದೆ. ಇದನ್ನೂ ಓದಿ: ಮನೆಯ ಬಾಗಿಲಲ್ಲೇ ಕುಳಿತ ಮೈಕ್ರೋಫೈನಾನ್ಸ್ ಸಿಬ್ಬಂದಿ – ಬೇಸತ್ತು ಮಹಿಳೆ ಆತ್ಮಹತ್ಯೆ

    ರನ್ಯಾ ಜಾಮೀನು ಅರ್ಜಿ ವಿಚಾರಣೆ ವೇಳೆ ಈ ಎಲ್ಲಾ ಅಂಶಗಳು ಪ್ರಸ್ತಾಪವಾಯಿತು. ರನ್ಯಾರಾವ್ ಸರ್ಚ್ ಪ್ರಕ್ರಿಯೆ ಕಾನೂನು ಪ್ರಕಾರ ನಡೆದಿಲ್ಲ. ನಿದ್ದೆ ಮಾಡೋಕೂ ಬಿಡದೇ ವಿಚಾರಣೆ ನಡೆಸಿದ್ದಾರೆ. ನಿದ್ದೆಯ ಹಕ್ಕನ್ನು ಕಿತ್ತಕೊಂಡಿದ್ದಾರೆ ಎಂದು ರನ್ಯಾ ಪರ ವಕೀಲರು ವಾದ ಮಂಡಿಸಿದರು. ರನ್ಯಾ ಮದುವೆಯಾದ ಮಹಿಳೆ. ಅವರೆಲ್ಲೂ ಹೋಗಲ್ಲ. ಜಾಮೀನು ನೀಡಿ ಎಂದು ಮನವಿ ಮಾಡಿದರು. ಇದನ್ನೂ ಓದಿ: ತಂದೆ-ತಾಯಿ ಹಾಗೂ ಹಿರಿಯರ ಆರೈಕೆ ಮಾಡದಿದ್ರೆ ಅವ್ರ ಆಸ್ತಿಯಲ್ಲಿ ಪಾಲಿಲ್ಲ: ಕೃಷ್ಣ ಬೈರೇಗೌಡ

    ಆದರೆ ಇದನ್ನು ಡಿಆರ್‌ಐ ಪರ ವಕೀಲರು ಆಕ್ಷೇಪಿಸಿದರು. ರನ್ಯಾಗೆ ಕರೆ ಮಾಡಿದ್ದ ವ್ಯಕ್ತಿಗೆ ಸಮನ್ಸ್ ನೀಡಿ ಹೇಳಿಕೆ ಪಡೆಯಲಾಗಿದೆ. ಯಾವುದೇ ಲೋಪ ಎಸಗಿಲ್ಲ. ಆಕೆ ಬಳಿ ಯುಎಇ ರೆಸಿಡೆನ್ಸಿ ಕಾರ್ಡ್ ಸಿಕ್ಕಿದೆ. ಹೀಗಾಗಿ ಜಾಮೀನು ಕೊಡಬಾರದು ಎಂದು ವಾದ ಮಂಡಿಸಿದರು. ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ ಮಾರ್ಚ್ 14ಕ್ಕೆ ಆದೇಶ ಕಾಯ್ದಿರಿಸಿತು. ಇದನ್ನೂ ಓದಿ: ಬಿಜೆಪಿ ಅವಧಿಯಲ್ಲಿ ಒಂದೇ ಒಂದು ಮನೆ ಕೊಟ್ಟಿದ್ರೆ ನಾನು ರಾಜಕೀಯ ನಿವೃತ್ತಿ ತಗೋತೀನಿ: ಜಮೀರ್ ಸವಾಲ್

  • ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಸೂಕ್ತ ತನಿಖೆಯಾಗಲಿ: ಲಕ್ಷ್ಮಿ ಹೆಬ್ಬಾಳ್ಕರ್

    ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಸೂಕ್ತ ತನಿಖೆಯಾಗಲಿ: ಲಕ್ಷ್ಮಿ ಹೆಬ್ಬಾಳ್ಕರ್

    ಬೆಂಗಳೂರು: ಚಿತ್ರನಟಿ ರನ್ಯಾ ರಾವ್ (Ranya Rao) ಚಿನ್ನ ಕಳ್ಳಸಾಗಣೆ ಪ್ರಕರಣ (Gold Smuggling Case) ಸೂಕ್ತ ತನಿಖೆಯಾಗಲಿ. ಆ ಬಳಿಕವಷ್ಟೇ ಪ್ರಕರಣದ ಸತ್ಯಾಸತ್ಯತೆ ತಿಳಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹೇಳಿದರು.

    ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಪ್ರಭಾವಿ ಸಚಿವರೊಬ್ಬರ ಕೈವಾಡವಿದೆ ಎಂಬ ಆರೋಪದ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಪ್ರಕರಣ ಸೂಕ್ತ ತನಿಖೆಯಾಗಲಿ, ಆಗ ಗೊತ್ತಾಗಲಿದೆ ಎಂದರು. ಇದನ್ನೂ ಓದಿ: ದೆಹಲಿಯಲ್ಲಿ ಅಕ್ರಮವಾಗಿ ನೆಲೆಸಿದ್ದ 20ಕ್ಕೂ ಅಧಿಕ ಬಾಂಗ್ಲಾ ಪ್ರಜೆಗಳ ಬಂಧನ

    ಗ್ಯಾರಂಟಿ ಸಮಿತಿಗಳ ವಿರುದ್ಧದ ಬಿಜೆಪಿ ಪ್ರತಿಭಟನೆ ಕುರಿತು ಮಾತನಾಡಿದ ಅವರು, 2023ರಲ್ಲಿ ಸರ್ಕಾರ ರಚನೆಯಾದ ಬಳಿಕ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಬಳಿಕ ಸೂಕ್ತ ರೀತಿಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ದೃಷ್ಟಿಯಿಂದ ಗ್ಯಾರಂಟಿ ಸಮಿತಿಗಳನ್ನು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ರಚಿಸಲಾಯಿತು. ಈಗ ಸಮಿತಿಗಳನ್ನು ರದ್ದುಗೊಳಿಸುವಂತೆ ಪ್ರತಿಪಕ್ಷಗಳು ನಡೆಸುತ್ತಿರುವ ಹೋರಾಟಕ್ಕೆ ಅರ್ಥವಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಡಿಸಿಎಂ ಡಿಕೆಶಿಗೆ ಬೆಳ್ಳಿ ಕಿರೀಟ ಹಾಕಿದ ಪಾಲನಹಳ್ಳಿ ಮಠದ ಸ್ವಾಮೀಜಿ

    ನಮ್ಮ ಯೋಜನೆಗಳನ್ನೇ ಬಿಜೆಪಿ ಇತರ ರಾಜ್ಯಗಳಲ್ಲಿ ಜಾರಿಗೆ ತಂದಿದೆ. ಮಹಾರಾಷ್ಟ್ರ ಸರ್ಕಾರ ನಮ್ಮದೇ ಗೃಹಲಕ್ಷ್ಮಿ ಯೋಜನೆಯನ್ನು ಲಾಡ್ಲಿ ಬೆಹೆನಾ ಹೆಸರಿನಲ್ಲಿ ಚುನಾವಣೆಗೂ ಮುನ್ನ ಎರಡು ತಿಂಗಳು ಹಣ ನೀಡಿತ್ತು. ಆದರೆ ಚುನಾವಣೆಯಲ್ಲಿ ಗೆದ್ದ ಬಳಿಕ ಈ ಯೋಜನೆಯನ್ನೇ ಬಂದ್ ಮಾಡಲಾಗಿದೆ. ಇದು ಬಿಜೆಪಿ ಸರ್ಕಾರಗಳ ಸ್ಥಿತಿ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಇರಾಕ್, ಬಾಂಗ್ಲಾದೇಶ ಸೈಕ್ಲೋನ್ ಎಫೆಕ್ಟ್ – ಭಾರತದ 18 ರಾಜ್ಯಗಳಿಗೆ ಮಳೆ ಅಲರ್ಟ್

    ಮಹಾರಾಷ್ಟ್ರ ಸರ್ಕಾರದ ಸಚಿವರಿಗೆ ಆರ್‌ಎಸ್‌ಎಸ್ ಕಾರ್ಯಕರ್ತರು ಸಹಾಯಕರಾಗಿದ್ದಾರೆ. ಅವರಿಗೆ ಅಲ್ಲಿನ ಸರ್ಕಾರ ಸಂಬಳ ನೀಡುತ್ತಿದೆ. ಅವರಲ್ಲೇ ತಪ್ಪು ಇಟ್ಟುಕೊಂಡು ನಮ್ಮ ಕಡೆ ಬೆಟ್ಟು ಮಾಡಿ ತೋರಿಸುತ್ತಿದ್ದಾರೆ ಎಂದು ದೂರಿದರು. ಇದನ್ನೂ ಓದಿ: ದರ್ಶನ್‌, ಮದರ್‌ ಇಂಡಿಯಾ ನಡುವೆ ಬಿರುಕು?- ನಿಮ್ಮನ್ನು ಅರ್ಥ ಮಾಡಿಕೊಳ್ಳುವವರ ಜೊತೆಯಿರಿ ಎಂದ ನಟಿ

  • EXCLUSIVE |ರನ್ಯಾ ಬಳಿ ಇದೆ ದುಬೈ ರೆಸಿಡೆಂಟ್ ವೀಸಾ – ಜಾಮೀನು ಸಿಕ್ರೆ ದೇಶ ಬಿಟ್ಟು ಹೋಗ್ತಾರಾ?

    EXCLUSIVE |ರನ್ಯಾ ಬಳಿ ಇದೆ ದುಬೈ ರೆಸಿಡೆಂಟ್ ವೀಸಾ – ಜಾಮೀನು ಸಿಕ್ರೆ ದೇಶ ಬಿಟ್ಟು ಹೋಗ್ತಾರಾ?

    ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಬಂಧನಕ್ಕೆ ಒಳಗಾಗಿರುವ ರನ್ಯಾ ರಾವ್ (Ranya Rao) ಬಗ್ಗೆ ಮತ್ತೊಂದು ಎಕ್ಸ್‌ಕ್ಲೂಸಿವ್‌ ವಿಚಾರ `ಪಬ್ಲಿಕ್ ಟಿವಿ’ಗೆ ಲಭ್ಯವಾಗಿದೆ. ರನ್ಯಾ ರಾವ್ ಬಳಿ ದುಬೈ ರೆಸಿಡೆಂಟ್ ವೀಸಾ ಇದೆ ಎನ್ನುವ ಮಾಹಿತಿ ಲಭ್ಯವಾಗಿದೆ.

    ರನ್ಯಾ ರಾವ್ ಬಳಿ ದುಬೈ ರೆಸಿಡೆಂಟ್ ವೀಸಾ ಇದ್ದು, 83 ಲಕ್ಷ ರೂ. ನೀಡಿ 2 ವರ್ಷಗಳ ರೆಸಿಡೆಂಟ್ ವೀಸಾ ಪಡೆದಿದ್ದಾರೆ. ಪ್ರಕರಣದಲ್ಲಿ ರನ್ಯಾ ರಾವ್‌ಗೆ ಜಾಮೀನು ಮಂಜೂರು ಮಾಡಿದರೆ ದೇಶ ಬಿಟ್ಟು ಹೋಗುವ ಸಾಧ್ಯತೆ ಇದೆ. ಡಿಆರ್‌ಐ ತನಿಖೆಯಲ್ಲಿ ಎಲ್ಲಾ ಮಾಹಿತಿಯು ಬಹಿರಂಗವಾಗಿದೆ. ಹೀಗಾಗಿ ಜಾಮೀನು ಮಂಜೂರು ಮಾಡದಂತೆ ಕೋರ್ಟ್‌ಗೆ ಡಿಆರ್‌ಐ ಆಕ್ಷೇಪಣೆ ಸಲ್ಲಿಸಿದೆ. ಇದನ್ನೂ ಓದಿ: WPL | ಆಟಕ್ಕುಂಟು ಲೆಕ್ಕಕ್ಕಿಲ್ಲ ಪಂದ್ಯದಲ್ಲಿ ರೋಷಾವೇಷ – ಗೆದ್ದು ಆಟ ಮುಗಿಸಿದ ಆರ್‌ಸಿಬಿ!

    ಪಬ್ಲಿಕ್ ಟಿವಿಗೆ ರನ್ಯಾ ರಾವ್ ಟ್ರಾವೆಲ್ ಹಿಸ್ಟರಿಗೆ ದಾಖಲೆಯ ಸಾಕ್ಷ್ಯ ಲಭ್ಯವಾಗಿದೆ. ರನ್ಯಾ ರಾವ್ ಪಾಸ್‌ಪೋರ್ಟ್ ಪ್ರತಿ ಲಭ್ಯವಾಗಿದ್ದು, ಎರಡನೇ ಪಾಸ್‌ಪೋರ್ಟ್ನಲ್ಲಿ 6 ಬಾರಿ ದುಬೈಗೆ ಪ್ರಯಾಣ ಬೆಳೆಸಿರುವುದು ತಿಳಿದುಬಂದಿದೆ. 2015 ಜ. 25ರಂದು ಮೊದಲ ಪಾಸ್‌ಪೋರ್ಟ್ ಹೊಂದಿದ್ದರು. ಬಳಿಕ 2025 ಜ. 25ರಲ್ಲಿ ರನ್ಯಾರಾವ್ ಪಾಸ್‌ಪೋರ್ಟ್ ರಿನಿವಲ್ ಮಾಡಿಸಿದ್ದರು. ಫೆ.25ರಂದು ಅಮೆರಿಕಾದಿಂದ ಬೆಂಗಳೂರಿಗೆ ಬಂದಿರುವುದು ಇದರಿಂದ ಗೊತ್ತಾಗಿದೆ. ಇದನ್ನೂ ಓದಿ: ರನ್ಯಾ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ – ನಾಲ್ವರಿಗೆ ಸಿಬಿಐ ನೋಟಿಸ್‌

  • ರನ್ಯಾ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ – ನಾಲ್ವರಿಗೆ ಸಿಬಿಐ ನೋಟಿಸ್‌

    ರನ್ಯಾ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ – ನಾಲ್ವರಿಗೆ ಸಿಬಿಐ ನೋಟಿಸ್‌

    – ರನ್ಯಾ ಕೇಸಲ್ಲಿ ಶಿಷ್ಟಾಚಾರ ದುರ್ಬಳಕೆ ಆರೋಪ – ಐಪಿಎಸ್ ರಾಮಚಂದ್ರರಾವ್ ವಿರುದ್ಧವೂ ತನಿಖೆ

    ಬೆಂಗಳೂರು: ರನ್ಯಾ ಚಿನ್ನ ಕಳ್ಳ ಸಾಗಣೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಏರ್‌ಪೋರ್ಟ್‌ನಲ್ಲಿ ರನ್ಯಾಗೆ ಪ್ರೊಟೋಕಾಲ್ ಒದಗಿಸಿದ್ದ ವಿಚಾರವಾಗಿ ತನಿಖೆಗೆ ರಾಜ್ಯ ಸರ್ಕಾರ ಆದೇಶ ನೀಡಿದೆ. ಈ ಬೆನ್ನಲ್ಲೇ ಪ್ರತ್ಯೇಕ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುತ್ತಿರುವ ಸಿಬಿಐ ನಾಲ್ವರಿಗೆ ನೋಟಿಸ್‌ ನೀಢಿದೆ.

    ಶಿಷ್ಟಾಚಾರ ಉಲ್ಲಂಘನೆ ಆರೋಪ ಎದುರಿಸುತ್ತಿರುವ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೋಟಿಸ್‌ ನೀಡಿದೆ. ತನಿಖಾಧಿಕಾರಿ ಅನುಭವ್‌ ತ್ಯಾಗಿ ನೇತೃತ್ವದಲ್ಲಿ ವಿಚಾರಣೆ ನಡೆಯಲಿದೆ. ಇದನ್ನೂ ಓದಿ: 2020ನೇ ಸಾಲಿನ ರಾಜ್ಯ ಪ್ರಶಸ್ತಿ ಪ್ರಕಟ – ʻಜಂಟಲ್‍ಮನ್ʼ ಪ್ರಜ್ವಲ್ ದೇವರಾಜ್ ಅತ್ಯುತ್ತಮ ನಟ!

    ಇನ್ನೂ ಶಿಷ್ಟಾಚಾರ ದುರ್ಬಳಕೆ ಪ್ರಕರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ರಾಮಚಂದ್ರರಾವ್ ಪಾತ್ರ ಇದ್ಯಾ…? ಇಲ್ಲವೇ ಎಂಬ ಬಗ್ಗೆ ತನಿಖೆ ನಡೆಸಲು ಸರ್ಕಾರ ಮುಂದಾಗಿದೆ. ಹಿರಿಯ ಐಪಿಎಸ್ ಗೌರವ್ ಗುಪ್ತಾಗೆ ವಾರದಲ್ಲಿ ವರದಿ ನೀಡಲು ಸೂಚಿಸಿದೆ. ಇದೇ ವೇಳೆ, ರನ್ಯಾ ಪ್ರಕರಣದಲ್ಲಿ ಪೊಲೀಸರ ವಿರುದ್ಧ ಕರ್ತವ್ಯಲೋಪ ಎಸಗಿದ ಆರೋಪ ಸಂಬಂಧ ಸರ್ಕಾರ ಸಿಐಡಿ ತನಿಖೆಗೆ ಆದೇಶ ನೀಡಿದೆ. ಇದನ್ನೂ ಓದಿ: ಇನ್ಮುಂದೆ `ಇಂಡಿಯಾ’ ಅನ್ನಬೇಡಿ, `ಭಾರತ’ ಎಂದೇ ಕರೆಯಿರಿ – ಆರ್‌ಎಸ್‌ಎಸ್ ನಾಯಕ ಹೊಸಬಾಳೆ ಕರೆ

    ಶೀಘ್ರವೇ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸರ್ಕಾರ ಸೂಚಿಸಿದೆ. ಪರಿಣಾಮ ಐಪಿಎಸ್ ಅಧಿಕಾರಿ ರಾಮಚಂದ್ರರಾವ್, ರನ್ಯಾ ಏರ್‌ಪೋರ್ಟ್‌ಗೆ ಬಂದಾಗ ಪ್ರೋಟೋಕಾಲ್ ನೀಡಲು ಬಂದಿದ್ದ ಹೆಡ್ ಕಾನ್‌ಸ್ಟೇಬಲ್, ಗುಪ್ತಚರ ಇಲಾಖೆ ಕಾನ್‌ಸ್ಟೇಬಲ್‌ಗೆ ವಿಚಾರಣೆ ಬಿಸಿ ತಾಕುವುದು ಖಚಿತವಾಗಿದೆ. ಈ ಬೆಳವಣಿಗೆ ನಡುವೆ ಡಿಸಿಎಂ ಜೊತೆ, ಗೃಹ ಸಚಿವರ ಜೊತೆ ಸಿಎಂ ಪ್ರತ್ಯೇಕವಾಗಿ ಸಭೆ ನಡೆಸಿದ್ರು. ಗೌರವ್ ಗುಪ್ತಾ ಸಹ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ರು. ಈ ವಿಚಾರದಲ್ಲಿ ರಾಜಕೀಯ ಕೆಸರೆರಚಾಟ ಸಹ ಜೋರಾಗಿದೆ.

  • ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಕೇಸ್ – ವಿಜಯೇಂದ್ರಗೆ ದುಬೈ ನಂಟಿದೆ: ಪ್ರಿಯಾಂಕ್ ಖರ್ಗೆ ಟಕ್ಕರ್

    ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಕೇಸ್ – ವಿಜಯೇಂದ್ರಗೆ ದುಬೈ ನಂಟಿದೆ: ಪ್ರಿಯಾಂಕ್ ಖರ್ಗೆ ಟಕ್ಕರ್

    ಬೆಂಗಳೂರು: ನಟಿ ರನ್ಯಾ ರಾವ್ (Ranya Rao) ಕೇಸ್‌ನಲ್ಲಿ ಕಾಂಗ್ರೆಸ್ ವರ್ಸಸ್ ಬಿಜೆಪಿ ನಡುವೆ ಕೆಸರೆರಚಾಟ ಜೋರಾಗಿದೆ. ವಿಜಯೇಂದ್ರಗೆ ದುಬೈ ನಂಟು ಇದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಆರೋಪಿಸಿದ್ದಾರೆ.

    ವಿಧಾನಸೌಧದಲ್ಲಿ, ರನ್ಯಾ ರಾವ್ ಕೇಸ್‌ನಲ್ಲಿ ಕೆಲವು ಸಚಿವರು ಇದ್ದಾರೆ ಎಂದಿದ್ದ ವಿಜಯೇಂದ್ರ ಅವರ ಹೇಳಿಕೆ ಕುರಿತು ಅವರು ಮಾತನಾಡಿದರು. ರನ್ಯಾ ರಾವ್ ಪ್ರಕರಣದಲ್ಲಿ ಸಚಿವರ ಕೈವಾಡದ ಬಗ್ಗೆ ಹೆಸರು ಇದ್ದರೆ ಹೇಳಲಿ. ಡಿಆರ್‌ಐ ಇದೆ, ಸಿಬಿಐ ಇದೆ. ಬಿಜೆಪಿ ರಾಜ್ಯಾಧ್ಯಕ್ಷರು ಇಬ್ಬರು ಸಚಿವರು ಎಂದಿದ್ದಾರೆ. ಹೆಸರು ಹೇಳಲಿ ನೋಡೋಣ ಎಂದು ಸವಾಲು ಹಾಕಿದ್ದಾರೆ. ಇದನ್ನೂ ಓದಿ: ಉದ್ಯೋಗ ಅರಸಿ ವಿದೇಶಕ್ಕೆ ತೆರಳಿ ವಂಚನೆಗೊಳಗಾಗಿದ್ದ 28 ಕನ್ನಡಿಗರ ರಕ್ಷಣೆ

    ದುಬೈನಲ್ಲಿ ವಿಜಯೇಂದ್ರ ಅವರ ಸಾಕಷ್ಟು ದುಡ್ಡಿದೆ ಎಂದು ಯತ್ನಾಳ್ ಹೇಳುತ್ತಾರೆ. ವಿಜಯೇಂದ್ರ ದುಬೈಗೆ ಹೋಗೋದು ಬರೋದು ಮಾಡ್ತಾರೆ ಎಂದೂ ಹೇಳುತ್ತಾರೆ. ಸಚಿವರ ವಿಚಾರವಾಗಿ ಸುಮ್ಮನೆ ಗಾಳಿಯಲ್ಲಿ ಗುಂಡು ಹೋಡಿಯೋದು ಬೇಡ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಕೇಸ್ | ಮಿನಿಸ್ಟರ್ ಕೈವಾಡವಿದೆ ಅನ್ನೋದು ಊಹಾಪೋಹ ಎಂದ ಜಮೀರ್

    ಬಳಿಕ ಶಾಸಕ ರಿಜ್ವಾನ್ ಅರ್ಷಾದ್ ಮಾತನಾಡಿ, ಏರ್‌ಪೋರ್ಟ್ ಒಳಗೆ ರನ್ಯಾ ರಾವ್‌ಗೆ ಸಹಾಯ ಮಾಡಿದ್ದಾರೆ ಎನ್ನುತ್ತಿದ್ದಾರೆ. ಪ್ರೋಟೋಕಾಲ್ ಯಾರು ಕೊಟ್ಟಿದ್ದಾರೆ ಎನ್ನುವುದು ಗೊತ್ತಾಗಬೇಕು ಎಂದಿದ್ದಾರೆ. ಸಚಿವರ ಮಗ, ಅಧಿಕಾರಿ ಮಗಳು ಎಂದು ಪ್ರೋಟೋಕಾಲ್ ಕೊಡಲು ಬರುವುದಿಲ್ಲ.ಪ್ರೋಟೋಕಾಲ್ ಕೊಡಲು ಅದರದೇ ಆದ ನಿಯಮಗಳು ಇವೆ. ಅದಕ್ಕೆ ತನಿಖೆಗೆ ಕೊಟ್ಟಿದೆ. ಆದರೆ ಸಚಿವರು ಯಾರು ಎನ್ನುವುದನ್ನು ಸಿಬಿಐ, ಡಿಆರ್‌ಐ ಹೇಳಲಿ. ಕೇಂದ್ರ ಸರ್ಕಾರವೇ ತನಿಖೆ ನಡೆಸುತ್ತಿದೆ. ಅದನ್ನ ಬಿಟ್ಟು ಇಲ್ಲಿ ರಾಜ್ಯದಲ್ಲಿ ಕೇಳಿದ್ರೆ ಹೇಗೆ? ಎಂದು ಟಾಂಗ್ ಕೊಟ್ಟರು. ಇದನ್ನೂ ಓದಿ:  ರೈತರ ಹೊಟ್ಟು, ಮೇವಿನ ಬಣವೆಗೆ ಬೆಂಕಿ – ಕೃಷಿ ಸಲಕರಣೆಗಳು ಬೆಂಕಿಗಾಹುತಿ

  • ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಕೇಸ್ | ಮಿನಿಸ್ಟರ್ ಕೈವಾಡವಿದೆ ಅನ್ನೋದು ಊಹಾಪೋಹ ಎಂದ ಜಮೀರ್

    ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಕೇಸ್ | ಮಿನಿಸ್ಟರ್ ಕೈವಾಡವಿದೆ ಅನ್ನೋದು ಊಹಾಪೋಹ ಎಂದ ಜಮೀರ್

    -ಪ್ರೋಟೋಕಾಲ್ ಉಲ್ಲಂಘನೆ ಆರೋಪದ ಬಗ್ಗೆ ಪ್ರತಿಕ್ರಿಯೆಗೆ ಪರಂ ನಕಾರ

    ಬೆಂಗಳೂರು: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಿನಿಸ್ಟರ್ ಕೈವಾಡವಿದೆ ಎನ್ನುವುದು ಊಹಾಪೋಹ ಎಂದು ಸಚಿವ ಜಮೀರ್ ಅಹ್ಮದ್ (Zameer Ahmed) ಪ್ರತಿಕ್ರಿಯಿಸಿದ್ದಾರೆ.

    ವಿಧಾನಸೌಧದಲ್ಲಿ ಮಾತನಾಡಿದ ಅವರು, ರನ್ಯಾ ರಾವ್ ಕೇಸಲ್ಲಿ ಸಚಿವರು ಭಾಗಿಯಾಗಿರುವ ಆರೋಪಗಳು ಬಿಜೆಪಿಯವರ ಊಹಾಪೋಹ. ತನಿಖೆ ವೇಳೆ ಯಾರ ಕೈವಾಡವಿದೆ ಎನ್ನುವುದು ಗೊತ್ತಾಗುತ್ತದೆ. ಆ ಮಿನಿಸ್ಟರ್ ಕೈವಾಡವಿದೆ. ಈ ಮಿನಿಸ್ಟರ್ ಕೈವಾಡವಿದೆ ಎನ್ನುವುದು ಊಹಾಪೋಹ. ಎಲ್ಲ ಸತ್ಯ ತನಿಖೆಯಿಂದ ಹೊರಗೆ ಬರಲಿ ಎಂದರು.ಇದನ್ನೂ ಓದಿ:ಕೇಂದ್ರ ಬಜೆಟ್‍ನಲ್ಲಿ ಕರ್ನಾಟಕದ ಹೆಸರೇ ಇರಲಿಲ್ಲ: ರೇವಣ್ಣಗೆ ಶ್ರೇಯಸ್ ಪಟೇಲ್ ತಿರುಗೇಟು

    ಇದಕ್ಕೂ ಮುನ್ನ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್, ಪ್ರೋಟೋಕಾಲ್ ಉಲ್ಲಂಘನೆ ಆರೋಪದ ತನಿಖೆಗೆ ಆದೇಶ ವಿಚಾರವಾಗಿ ಪ್ರತಿಕ್ರಿಯಿಸಲು ನಿರಾಕರಿಸಿ, ನಿನ್ನೆ ಆದೇಶ ಆಗಿದೆ, ಇವತ್ತು ಗೊತ್ತಾಗಿದೆ ಅಷ್ಟೇ ಎಂದು ಹೇಳಿದರು.

    ಗೃಹ ಸಚಿವ ಪರಮೇಶ್ವರ್ ಅವರಿಗೆ ಸಿಎಂ ಸಿದ್ದರಾಮಯ್ಯ ಬುಲಾವ್ ಕೊಟ್ಟು ಕರೆಸಿಕೊಂಡಿದ್ದು, ಕಲಾಪ ಮುಗಿಯುತ್ತಿದ್ದಂತೆ ಸಿಎಂ ಕೊಠಡಿಯಲ್ಲಿ ರನ್ಯಾರಾವ್ ಕೇಸ್ ಪ್ರೋಟೋಕಾಲ್ ಉಲ್ಲಂಘನೆ ಆರೋಪದ ಬಗ್ಗೆ ಮಾಹಿತಿ ಪಡೆದುಕೊಂಡರು.ಇದನ್ನೂ ಓದಿ: ರೈತರ ಹೊಟ್ಟು, ಮೇವಿನ ಬಣವೆಗೆ ಬೆಂಕಿ – ಕೃಷಿ ಸಲಕರಣೆಗಳು ಬೆಂಕಿಗಾಹುತಿ

  • ಡಿಜಿಪಿ ಅಪ್ಪನಿಗೆ ಮಗಳು ತಂದ ಸಂಕಷ್ಟ – ಸರ್ಕಾರದಿಂದ ಎರಡೆರಡು ತನಿಖೆಗೆ ಆದೇಶ

    ಡಿಜಿಪಿ ಅಪ್ಪನಿಗೆ ಮಗಳು ತಂದ ಸಂಕಷ್ಟ – ಸರ್ಕಾರದಿಂದ ಎರಡೆರಡು ತನಿಖೆಗೆ ಆದೇಶ

    ಏರ್‌ಪೋರ್ಟ್‌ನಲ್ಲಿ ಪ್ರೋಟೊಕಾಲ್‌ ಉಲ್ಲಂಘನೆ; CID ತನಿಖೆಗೆ ಸರ್ಕಾರ ಆದೇಶ
    – ಇಬ್ಬರು ಪೊಲೀಸ್‌ ಕಾನ್‌ಸ್ಟೇಬಲ್‌ಗಳಿಗೆ ಸಂಕಷ್ಟ 

    ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ರನ್ಯಾಳಿಂದ (Ranya Rao) ಚಿನ್ನ ಕಳ್ಳಸಾಗಣೆ ಪ್ರಕರಣ ಸಂಬಂಧ ಡಿಜಿಪಿ ರಾಮಚಂದ್ರ ರಾವ್‌ಗೆ (Ramachandra Rao) ಮಗಳಿಂದ ಸಂಕಷ್ಟ ಶುರುವಾಗಿದೆ. ಮಗಳಿಂದ ಇದೀಗ ತಂದೆಗೂ ಸಹ ವಿಚಾರಣೆ ಭಾಗ್ಯ ಬಂದೊದಗಿದೆ.

    ಐಎಎಸ್ ಅಧಿಕಾರಿ ಗೌರವ್ ಗುಪ್ತ ನೇತೃತ್ವದಲ್ಲಿ ತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಮಚಂದ್ರರಾವ್‌ಗೆ ಕೊಟ್ಟಿದ್ದ ಪ್ರೋಟೋಕಾಲ್‌ಗಳನ್ನು ದುರುಪಯೋಗ ಪಡಿಸಿಕೊಂಡು ವಿಮಾನ ನಿಲ್ದಾಣಗಳಲ್ಲಿ ಅಧಿಕಾರಿಗಳ ಕಣ್ತಪ್ಪಿಸಿಕೊಂಡು ಅಕ್ರಮ ಅಪರಾಧ ಎಸಗಿರುವ ಆರೋಪ ಇದೆ. ಇದನ್ನೂ ಓದಿ: ಝೀರೋ ಬ್ಯಾಲೆನ್ಸ್ ಇದ್ದ ರನ್ಯಾ ಅಕೌಂಟ್‌ಗೆ 2 ದಿನದಲ್ಲಿ 10 ಲಕ್ಷ ಹಣ!

    ಸದ್ಯ ರಾಜ್ಯ ಪೊಲೀಸ್ ಗೃಹ ನಿರ್ಮಾಣ ನಿಗಮದ‌ ವ್ಯವಸ್ಥಾಪಕ ನಿರ್ದೇಶಕರಾಗಿರುವ ರಾಮಚಂದ್ರರಾವ್ ಅವರನ್ನು ತನಿಖೆ ನಡೆಸುವುದು ಅಗತ್ಯವೆಂದು ಸರ್ಕಾರ ಪರಿಗಣಿಸಿದೆ. ತನಿಖೆಗೆ ಅಗತ್ಯವಿರುವ ದಾಖಲೆಗಳನ್ನು ಮತ್ತು ನೆರವನ್ನು ನೀಡಲು ಡಿಜಿಐಜಿಪಿ ಅಲೋಕ್ ಮೋಹನ್‌ಗೆ ಸೂಚನೆ ನೀಡಲಾಗಿದ್ದು, ತನಿಖೆ ನಡೆಸಿ ಒಂದು ವಾರದಲ್ಲಿ ವರದಿಯನ್ನು‌ ಸರ್ಕಾರಕ್ಕೆ ಸಲ್ಲಿಸಲು ಖಡಕ್ ಸೂಚನೆ ನೀಡಲಾಗಿದೆ.

    ಇದಲ್ಲದೇ‌, ಪೊಲೀಸ್ ಸಿಬ್ಬಂದಿ ಪ್ರೋಟೋಕಾಲ್ ಉಲ್ಲಂಘನೆಯಲ್ಲಿ ಭಾಗಿಯಾಗಿರುವ ಬಗ್ಗೆ ಸಿಐಡಿ ತನಿಖೆ ನಡೆಸುವಂತೆ ಸಹ ಸರ್ಕಾರ ಆದೇಶ ನೀಡಿದೆ. ಇಬ್ಬರು ಪೊಲೀಸ್ ಕಾನ್‌ಸ್ಟೇಬಲ್‌ಗಳಿಗೆ ಇದರಿಂದ ಸಂಕಷ್ಟ ಎದುರಾಗಿದೆ. ಓರ್ವ ಪ್ರೋಟೋಕಾಲ್‌ನ ಹೆಡ್ ಕಾನ್‌ಸ್ಟೇಬಲ್, ಇನ್ನೊಬ್ಬ ಗುಪ್ತಚರ ಇಲಾಖೆ ಕಾನ್‌ಸ್ಟೇಬಲ್ ಆಗಿದ್ದರು. ರನ್ಯಾ ರಾವ್ ಏರ್‌ಪೋರ್ಟ್‌ಗೆ ಬಂದಾಗ ಪಾಳಿಯಲ್ಲಿ ಈ ಇಬ್ಬರೂ ಇದ್ದರು. ಪ್ರೋಟೋಕಾಲ್‌ ಕಾನ್‌ಸ್ಟೇಬಲ್ ಕರೆದ ಅಂತ ಗುಪ್ತಚರ ಇಲಾಖೆಯ ಅಧಿಕಾರಿಯೂ ರನ್ಯಾ ರಾವ್ ಭೇಟಿಗೆ ಹೋಗಿದ್ದರು. ಹೀಗಾಗಿ, ಇಬ್ಬರಿಗೂ ಕೂಡ ವಿಚಾರಣೆಯ ಬಿಸಿ ತಟ್ಟಿದೆ. ಇದನ್ನೂ ಓದಿ: ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಸ್ಟಾರ್ ಹೋಟೆಲ್ ಮಾಲೀಕನ ಮೊಮ್ಮಗ ಅರೆಸ್ಟ್

  • ಝೀರೋ ಬ್ಯಾಲೆನ್ಸ್ ಇದ್ದ ರನ್ಯಾ ಅಕೌಂಟ್‌ಗೆ 2 ದಿನದಲ್ಲಿ 10 ಲಕ್ಷ ಹಣ!

    ಝೀರೋ ಬ್ಯಾಲೆನ್ಸ್ ಇದ್ದ ರನ್ಯಾ ಅಕೌಂಟ್‌ಗೆ 2 ದಿನದಲ್ಲಿ 10 ಲಕ್ಷ ಹಣ!

    ಬೆಂಗಳೂರು: ನಟಿ ರನ್ಯಾ ರಾವ್ (Ranya Rao) ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ (Gold Smuggling Case) ಬಗೆದಷ್ಟು ಮಾಹಿತಿಗಳು ಬಯಲಾಗುತ್ತಿವೆ. ಇದೀಗ ಝೀರೋ ಬ್ಯಾಲೆನ್ಸ್ ಇದ್ದ ರನ್ಯಾ ಅಕೌಂಟ್‌ಗೆ ಎರಡೇ ದಿನದಲ್ಲಿ 10 ಲಕ್ಷ ಹಣ ಸಂದಾಯವಾಗಿರುವ ಬಗ್ಗೆ ಮಾಹಿತಿ ಹೊರಬಿದ್ದಿದೆ.

    4 ಲಕ್ಷ, 1 ಲಕ್ಷ, 5 ಲಕ್ಷದಂತೆ ಒಟ್ಟು 10 ಲಕ್ಷ ಹಣ ಇದ್ದಕ್ಕಿದ್ದಂತೆ ರನ್ಯಾ ಅಕೌಂಟ್‌ಗೆ ಸಂದಾಯವಾಗಿದೆ. ಓಂಕಾರ ಕೋ ಆಪರೇಟಿವ್ ಬ್ಯಾಂಕ್ ಅಕೌಂಟ್‌ನಿಂದ ಟ್ರಿನಿಟಿಯ ಕೆನರಾ ಬ್ಯಾಂಕ್‌ನಲ್ಲಿರುವ ರನ್ಯಾ ಅಕೌಂಟ್‌ಗೆ 10 ಲಕ್ಷ ಹಣ ಸಂದಾಯವಾಗಿದೆ. 2022ರ ಏ.27 ಹಾಗೂ 28ರಂದು ಹಣ ಸಂದಾಯ ಆಗಿದೆ ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಕೊಪ್ಪಳ ಗ್ಯಾಂಗ್‌ರೇಪ್ ಪ್ರಕರಣ – ಮೂವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

    ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್‌ಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಮಾ.24 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. ಸದ್ಯ ರನ್ಯಾ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಇದನ್ನೂ ಓದಿ: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ವಿರೋಧ