Tag: Rape accused

  • ಬೇಲ್‌ನಲ್ಲಿ ಹೊರಬಂದ ಅತ್ಯಾಚಾರ ಆರೋಪಿ ಅಪ್ರಾಪ್ತೆ ಮೇಲೆ ಆ್ಯಸಿಡ್ ದಾಳಿ – ಬಳಿಕ ಆತ್ಮಹತ್ಯೆ

    ಬೇಲ್‌ನಲ್ಲಿ ಹೊರಬಂದ ಅತ್ಯಾಚಾರ ಆರೋಪಿ ಅಪ್ರಾಪ್ತೆ ಮೇಲೆ ಆ್ಯಸಿಡ್ ದಾಳಿ – ಬಳಿಕ ಆತ್ಮಹತ್ಯೆ

    ನವದೆಹಲಿ: ಅತ್ಯಾಚಾರ ಆರೋಪಿಯೊಬ್ಬ (Rape Accused) ಜಾಮೀನಿನ (Bail) ಮೇಲೆ ಜೈಲಿನಿಂದ ಹೊರಬಂದು ತನ್ನ ಮೇಲೆ ಆರೋಪ ಹೊರಿಸಿದ್ದ ಮಹಿಳೆಯ ಅಪ್ರಾಪ್ತ ಮಗಳ ಮೇಲೆ ಆ್ಯಸಿಡ್ ದಾಳಿ (Acid Attack) ನಡೆಸಿ ನಂತರ ತಾನು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ದೆಹಲಿಯಲ್ಲಿ (Delhi) ನಡೆದಿದೆ.

    ಆಘಾತಕಾರಿ ಘಟನೆ ಮಧ್ಯ ದೆಹಲಿಯಲ್ಲಿ ನಡೆದಿದೆ. ಅತ್ಯಾಚಾರ ಆರೋಪಿ ಪ್ರೇಮ್ ಸಿಂಗ್‌ಗೆ ಕುಟುಂಬದವರ ವಿವಾಹದಲ್ಲಿ ಪಾಲ್ಗೊಳ್ಳಲು ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿತ್ತು. ಗುರುವಾರ ಸಂಜೆ ತನ್ನ ಮೇಲೆ ಆರೋಪ ಹೊರಿಸಿದ್ದ ಮಹಿಳೆಯ ಬಳಿಗೆ ತೆರಳಿ ದೂರನ್ನು ಹಿಂಪಡೆಯುವಂತೆ ಕೇಳಿದ್ದಾನೆ. ಅದನ್ನು ನಿರಾಕರಿಸಿದ್ದಕ್ಕೆ ಆತ ಮಹಿಳೆಯ 17 ವರ್ಷದ ಮಗಳ ಮೇಲೆ ಆ್ಯಸಿಡ್ ಎರಚಿದ್ದಾನೆ. ಬಳಿಕ ತಾನೂ ಕುಡಿದಿದ್ದಾನೆ.

    ಪ್ರೇಮ್ ಸಿಂಗ್ ಹಾಗೂ ಮಹಿಳೆ ದೆಹಲಿಯ ಆನಂದ್ ಪರ್ಬತ್ ಪ್ರದೇಶದಲ್ಲಿ ನೆರೆಹೊರೆಯವರು. ವ್ಯಕ್ತಿ ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಾಗ ಪ್ರಕರಣವನ್ನು ಹಿಂಪಡೆಯುವಂತೆ ಮಹಿಳೆಗೆ ಬೆದರಿಕೆ ಹಾಕಿದ್ದಾನೆ. ಆಕೆ ನಿರಾಕರಿಸಿದಾಗ ಈ ಕೃತ್ಯ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಹೋಂ ವರ್ಕ್ ಮಾಡಿಲ್ಲವೆಂದು ಕೈಗೆ ರಾಡ್‍ನಿಂದ ಹೊಡೆದ್ರಾ ಶಿಕ್ಷಕಿ?

    ಆ್ಯಸಿಡ್ ದಾಳಿ ಮಾಡಿ ತಾನೂ ಆ್ಯಸಿಡ್ ಅನ್ನು ಕುಡಿದಿದ್ದಾನೆ. ತಕ್ಷಣ ಅಲ್ಲೇ ನೆರೆದಿದ್ದವರು ಆರೋಪಿ ಹಾಗೂ ಅಪ್ರಾಪ್ತೆಯನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದಾರೆ. ಚಿಕಿತ್ಸೆ ವೇಳೆ ಪ್ರೇಮ್ ಸಿಂಗ್ ಮೃತಪಟ್ಟರೆ, ಚಿಕಿತ್ಸೆ ನೀಡಿದ ಬಳಿಕ ಸಂತ್ರಸ್ತೆಯನ್ನು ಡಿಸ್ಚಾರ್ಜ್ ಮಾಡಲಾಗಿದೆ. ಇದನ್ನೂ ಓದಿ: ನೀರಿನ ತೊಟ್ಟಿಯಲ್ಲಿ ಮುಳುಗಿಸಿ ಹೆತ್ತ ಮಕ್ಕಳನ್ನು ಕೊಂದು ತಾಯಿ ನೇಣಿಗೆ ಶರಣು

  • ಅತ್ಯಾಚಾರ ಆರೋಪ ಪ್ರಕರಣ – ರಮೇಶ್ ಜಾರಕಿಹೊಳಿಗಿಲ್ಲ ಮುಕ್ತಿ

    ಅತ್ಯಾಚಾರ ಆರೋಪ ಪ್ರಕರಣ – ರಮೇಶ್ ಜಾರಕಿಹೊಳಿಗಿಲ್ಲ ಮುಕ್ತಿ

    ನವದೆಹಲಿ : ಅತ್ಯಾಚಾರ ಆರೋಪ ಹೊತ್ತಿರುವ ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿಗೆ ಕಾನೂನು ಸಂಕಷ್ಟಗಳು ಅಂತ್ಯವಾಗುವ ಲಕ್ಷಣಗಳು ಕಾಣುತ್ತಿಲ್ಲ. ಪ್ರಕರಣ ತನಿಖೆಗೆ ರಚನೆಯಾದ ಎಸ್‍ಐಟಿ ‘ಬಿ – ರಿಪೋರ್ಟ್’ ಸಲ್ಲಿಸಿದ ಬಳಿಕವೂ ಸಂತ್ರಸ್ತೆಯಿಂದ ಕಾನೂನು ಹೋರಾಟ ಮುಂದುವರಿದಿದೆ.

    ಹೈಕೋರ್ಟ್ ಆದೇಶವನ್ನು ಪ್ರಶ್ನೆ ಮಾಡಿ ಪ್ರಕರಣದ ಸಂತ್ರಸ್ತೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಿಚಾರಣೆ ನಡೆಸಿದೆ. ನ್ಯಾ. ಇಂದಿರಾ ಬ್ಯಾನರ್ಜಿ ನೇತೃತ್ವದ ದ್ವಿ ಸದಸ್ಯ ಪೀಠ ವಿಚಾರಣೆ ನಡೆಸಿದ್ದು, ಎಸ್‍ಐಟಿ ರಚನೆಯ ವಿಧಾನದ ಬಗ್ಗೆ ಹೈಕೋರ್ಟ್ ನಿರ್ಧರಿಸಲಿ ಎಂದು ಹೇಳಿದೆ. ಇದನ್ನೂ ಓದಿ: ಯತ್ನಾಳ್ ಸತ್ತಿದ್ದಾರೆ, ಅದಕ್ಕಾಗಿ ಶವಯಾತ್ರೆ ಮಾಡ್ತಿದ್ದೇವೆ: ಮೊಹಮ್ಮದ್ ನಲಪಾಡ್

    SUPREME COURT

    ಇಂದು ವಿಚಾರಣೆ ವೇಳೆ ಸಂತ್ರಸ್ತೆ ಪರ ವಾದ ಮಂಡಿಸಿದ ವಕೀಲರು, ಎಸ್‍ಐಟಿ ರಚನೆ ಸರಿ ಇಲ್ಲ, ತನಿಖಾ ಮುಖ್ಯಸ್ಥರ ಅನುಪಸ್ಥಿತಿಯಲ್ಲಿ ತನಿಖೆ ನಡೆದಿದೆ. ಎಲ್ಲದಕ್ಕಿಂತ ಮುಖ್ಯವಾಗಿ ಎಸ್‍ಐಟಿ ಸರ್ಕಾರದ ತನ್ನ ಇಚ್ಛೆನುಸಾರ ರಚನೆ ಮಾಡಿಲ್ಲ, ರಾಜಕೀಯ ಒತ್ತಡ ಹೇರಿ ರಚನೆ ಮಾಡಿಸಲಾಗಿದೆ. ಈ ಎಸ್‍ಟಿಯು ಬಿ-ರಿಪೋರ್ಟ್ ಸಲ್ಲಿಸಿದ್ದು ಈ ವರದಿಯ ಮೇಲೆ ನಮ್ಮಗೆ ನಂಬಿಕೆ ಇಲ್ಲ ಎಂದರು.

    ಹೀಗೆ ಸಿದ್ದವಾಗಿರುವ ವರದಿಯನ್ನು ಸೆಷನ್ಸ್ ನ್ಯಾಯಲಯಕ್ಕೆ ಸಲ್ಲಿಸಲು ಹೈಕೋರ್ಟ್ ಅನುಮತಿ ನೀಡಿದೆ, ಸುಪ್ರೀಂಕೋರ್ಟ್ ಈ ಆದೇಶಕ್ಕೆ ತಡೆ ನೀಡಬೇಕು, ಎಸ್‍ಐಟಿ ರಚನೆ ಬಗ್ಗೆ ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಹಿಜಬ್ ಹಾಕಿಸೋಕೆ ಅಥವಾ ತೆಗಿಸೋಕೆ ಯಾರೇ ಬಂದ್ರು ಒದ್ದು ಒಳಗೆ ಹಾಕಿ: ಪ್ರಹ್ಲಾದ್ ಜೋಶಿ

    ವಾದ ಆಲಿಸಿದ ಪೀಠ, ಎಸ್‍ಐಟಿ ರಚನೆಯೂ ಸರಿ ಇದಿಯೇ, ಅದು ಪಾರದರ್ಶಕವಾಗಿದಿಯೇ ಎಂದು ಖಚಿತಪಡಿಸಿಕೊಳ್ಳಲು ರಾಜ್ಯ ಹೈಕೋರ್ಟ್ ಗೆ ಸೂಚಿಸಿ ಪ್ರಕರಣವನ್ನು ಇತ್ಯರ್ಥ ಪಡಿಸಿದೆ. ಮಾರ್ಚ್ 9 ರಂದು ಈ ಸಂಬಂಧ ಹೈಕೋರ್ಟ್ ನಲ್ಲಿ ವಿಚಾರಣೆ ಕೂಡ ನಡೆಸಲಿದೆ. ಸುಪ್ರೀಂಕೋರ್ಟ್ ಈ ನಿರ್ದೇಶನದಿಂದ ಎಸ್‍ಐಟಿ ಬಿ – ರಿಪೋರ್ಟ್ ಸಲ್ಲಿಸಿದ್ದರು, ಹೈಕೋರ್ಟ್ ನಲ್ಲಿ ವಿಚಾರಣೆ ಅಂತ್ಯವಾಗುವವರೆಗೂ ವರದಿಯನ್ನು ಸೆಷನ್ಸ್ ನ್ಯಾಯಲಯಕ್ಕೆ ಸಲ್ಲಿಸಲ್ಲಿಸಲು ತಡೆಯಾಜ್ಞೆ ನೀಡದಂತಾಗಿದೆ.

  • ಬೇಲ್ ಮೇಲೆ ಬಿಡುಗಡೆಯಾದ ಅತ್ಯಾಚಾರ ಆರೋಪಿಗೆ ರಾಜಮರ್ಯಾದೆ- 500 ಬೈಕ್, ಕಾರ್‍ಗಳ ಜೊತೆ ಮೆರವಣಿಗೆ

    ಬೇಲ್ ಮೇಲೆ ಬಿಡುಗಡೆಯಾದ ಅತ್ಯಾಚಾರ ಆರೋಪಿಗೆ ರಾಜಮರ್ಯಾದೆ- 500 ಬೈಕ್, ಕಾರ್‍ಗಳ ಜೊತೆ ಮೆರವಣಿಗೆ

    ಧಾರವಾಡ: ಇವನು ಯಾವುದೇ ಘನಂಧಾರಿ ಕೆಲಸ ಮಾಡಿದವನಲ್ಲ. ಯಾವುದೇ ಸಮಾಜ ಉದ್ಧಾರ ಕೆಲಸ ಕೂಡ ಮಾಡಿಲ್ಲ. ಆದ್ರೂ ತೆರೆದ ವಾಹನದಲ್ಲಿ ಈತನನ್ನ ಮೆರವಣಿಗೆ ಮಾಡಿದ್ರು, ಘೋಷಣೆ ಕೂಗಿದ್ರು. ಅತ್ಯಾಚಾರ ಪ್ರಕರಣದ ಆರೋಪಿಯೊಬ್ಬನಿಗೆ ರಾಜ ಮರ್ಯಾದೆ ಮೂಲಕ ಬೆಂಬಲಿಗರು ಕರೆಯೊಯ್ದ ಘಟನೆ ಧಾರವಾಡದಲ್ಲಿ ನಡೆದಿದೆ.

    ಪೆಂಡಾರಗಲ್ಲಿಯ ರಿಯಲ್ ಎಸ್ಟೇಟ್ ಉದ್ಯಮಿ ಮಕ್ತುಮ್ ಸೊಗಲದ ಎರಡು ತಿಂಗಳ ಹಿಂದೆ ಹುಬ್ಬಳ್ಳಿಯ ಲಾಡ್ಜ್ ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ. ಗುರುವಾರದಂದು ನ್ಯಾಯಾಲಯದಿಂದ ಜಾಮೀನಿನ ಮೇಲೆ ಆರೋಪಿ ಮುಕ್ತುಂ ಸೊಗಲದ ಬಿಡುಗಡೆಯಾಗಿದ್ದ.

    ಬಿಡುಗಡೆಯಾದ ನಂತರ ಆರೋಪಿ ಮುಕ್ತುಂ ಸೊಗಲದಗೆ ಬೆಂಬಲಿಗರು ರಾಜಾ ಮರ್ಯಾದೆಯಿಂದ ಮೆರವಣಿಗೆ ಮಾಡುವ ಮೂಲಕ ಕರೆದುಕೊಂಡು ಹೋಗಿದ್ದಾರೆ.

    ಅತ್ಯಾಚಾರ ಆರೋಪಿಗೆ 500 ಬೈಕ್, ಕಾರು, ಆಟೋಗಳ ಮೂಲಕ ತೆರೆದ ವಾಹನದಲ್ಲಿ ಮೆರವಣಿಗೆ ಮಾಡಲಾಗಿದೆ. ಮುಕ್ತುಂ ಸೊಗಲದ ಬೆಂಬಲಿಗರು ಸಿಹಿ ಹಂಚಿ ಸಂಭ್ರಮಿಸಿದ್ದಾರೆ.