Tag: rasha

  • ರಾಮ್ ಚರಣ್‌ಗೆ ನಾಯಕಿಯಾದ ರವೀನಾ ಟಂಡನ್ ಪುತ್ರಿ ರಾಶಾ

    ರಾಮ್ ಚರಣ್‌ಗೆ ನಾಯಕಿಯಾದ ರವೀನಾ ಟಂಡನ್ ಪುತ್ರಿ ರಾಶಾ

    ‘ಆರ್‌ಆರ್‌ಆರ್’ (RRR) ಚಿತ್ರದ ಸ್ಟಾರ್ ರಾಮ್ ಚರಣ್ (Ram Charan) ಇದೀಗ ‘ಉಪ್ಪೇನ’ ನಿರ್ದೇಶಕನ ಜೊತೆ ಕೈಜೋಡಿಸಿದ್ದಾರೆ. ಹೊಸ ಪ್ರಾಜೆಕ್ಟ್‌ಗೆ ರಾಮ್ ಚರಣ್‌ಗೆ ಜೋಡಿಯಾಗಿ ಸ್ಟಾರ್ ನಟಿಯ ಪುತ್ರಿ ಟಾಲಿವುಡ್‌ಗೆ ಪರಿಚಿತರಾಗುತ್ತಿದ್ದಾರೆ. ಇದನ್ನೂ ಓದಿ:ದೊಡ್ಮನೆ ಆಟಕ್ಕೆ ಜೊತೆಯಾಗ್ತಾರಾ ಮೇಘಾ ಶೆಟ್ಟಿ? ಕೊನೆಗೂ ಸಿಕ್ತು ಉತ್ತರ

    ಗೇಮ್ ಜೇಂಜರ್ ಸಿನಿಮಾದಲ್ಲಿ ರಾಮ್ ಚರಣ್ ಬ್ಯುಸಿಯಾಗಿದ್ದಾರೆ. ಈ ಬೆನ್ನಲ್ಲೇ ಉಪ್ಪೇನ ಡೈರೆಕ್ಟರ್ ಬುಚ್ಚಿಬಾಬು ಹೊಸ ಚಿತ್ರದ ಕಥೆ ಕೇಳಿ, ಚರಣ್ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ. ಈ ಚಿತ್ರಕ್ಕೆ ಬಾಲಿವುಡ್ ನಟಿ ರವೀನಾ ಟಂಡನ್ (Raveena Tandon) ಪುತ್ರಿ ರಾಶಾ (Rasha) ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

    ರಾಮ್ ಚರಣ್‌ಗೆ ನಾಯಕಿಯಾಗುವ ಮೂಲಕ ರಾಶಾ ತೆಲುಗಿಗೆ (Tollywood) ಎಂಟ್ರಿ ಕೊಡುತ್ತಿದ್ದಾರೆ. ಚಿತ್ರತಂಡದಿಂದ ಯಾವುದೇ ಅಧಿಕೃತ ಅಪ್‌ಡೇಟ್ ಹೊರಬಿದ್ದಿಲ್ಲ. ಆದರೆ ಈ ಸುದ್ದಿ ಕೇಳಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ರವೀನಾರಂತೆಯೇ ರಾಶಾ ಕೂಡ ಚಿತ್ರರಂಗದಲ್ಲಿ ಗಟ್ಟಿ ನೆಲೆ ಗಿಟ್ಟಿಸಿಕೊಳ್ಳುತ್ತಾರಾ? ಕಾಯಬೇಕಿದೆ.

    ಒಂದು ಕಾಲದಲ್ಲಿ ಸೌತ್ ಸಿನಿಮಾ ಅಂದರೆ ಕಡೆಗಣಿಸುತ್ತಿದ್ದರು. ಆದರೆ ಈಗ ಕಾಲ ಬದಲಾಗಿದೆ. ದಕ್ಷಿಣ ಭಾರತದ ಸಿನಿಮಾದಲ್ಲಿ ನಟಿಸಲು ಬಾಲಿವುಡ್ ನಟಿಯರು ಆಸಕ್ತಿ ತೋರುತ್ತಿದ್ದಾರೆ. ಹಿಂದಿ ಸಿನಿಮಾಗಿಂತ ಸೌತ್ ಸಿನಿಮಾಗಳೇ ಗಲ್ಲಾಪೆಟ್ಟಿಗೆಯಲ್ಲಿ ಕಲೆಕ್ಷನ್ ಮಾಡುತ್ತಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 18 ವಯಸ್ಸಿಗೆ ನಾಯಕಿಯಾಗಿ ಬಾಲಿವುಡ್‌ಗೆ ಎಂಟ್ರಿ ಕೊಡ್ತಿದ್ದಾರೆ ರವೀನಾ ಟಂಡನ್ ಪುತ್ರಿ

    18 ವಯಸ್ಸಿಗೆ ನಾಯಕಿಯಾಗಿ ಬಾಲಿವುಡ್‌ಗೆ ಎಂಟ್ರಿ ಕೊಡ್ತಿದ್ದಾರೆ ರವೀನಾ ಟಂಡನ್ ಪುತ್ರಿ

    ಬಾಲಿವುಡ್‌ನ (Bollywood) ಸ್ಟಾರ್ ಕಲಾವಿದರ ಮಕ್ಕಳು ಒಬ್ಬಬ್ಬರೇ ಸಿನಿರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ಇದೀಗ ಈ ಸಾಲಿಗೆ ‘ಕೆಜಿಎಫ್ 2ʼ (KGF 2) ಖ್ಯಾತಿಯ ರವೀನಾ ಟಂಡನ್ ಮುದ್ದಿನ ಮಗಳು ರಾಶಾ ಬಿಟೌನ್‌ಗೆ ಲಗ್ಗೆ ಇಡ್ತಿದ್ದಾರೆ. ಸಾಕಷ್ಟು ದಿನಗಳಿಂದ ರವೀನಾ(Raveena Tandon) ಪುತ್ರಿ ನಟಿಸುತ್ತಾರೆ ಎಂಬ ಸುದ್ದಿಯಿತ್ತು. ಆದರೆ ಯಾರು ಕೂಡ ಈ ಬಗ್ಗೆ ಸ್ಪಷ್ಟನೆ ನೀಡಿರಲಿಲ್ಲ. ಆದರೆ ಈಗ ನಾಯಕಿಯಾಗಿ ಮಿಂಚಲು ರಾಶಾಗೆ (Rasha) ವೇದಿಕೆ ಸಿದ್ಧವಾಗಿದೆ.

    ಚಿತ್ರರಂಗದಲ್ಲಿ ನಟ- ನಟಿಯರ ಮಕ್ಕಳು ಚಿತ್ರರಂಗಕ್ಕೆ ಎಂಟ್ರಿ ಕೊಡುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಲೇ ಇದೆ. ಇದೀಗ ಮತ್ತೊಬ್ಬ ಸ್ಟಾರ್‌ಕಿಡ್ ನಟನೆಗೆ ಪದಾರ್ಪಣೆ ಮಾಡುವ ಸುದ್ದಿ ಕೇಳಿ ಬರುತ್ತಿದೆ. ಬಾಲಿವುಡ್‌ನ ಜನಪ್ರಿಯ ನಟಿ ರವೀನಾ ಟಂಡನ್ ಮತ್ತು ಅನಿಲ್ ಥಡಾನಿ ಅವರ ಪುತ್ರಿ ರಾಶಾ ಬಾಲಿವುಡ್‌ಗೆ ಎಂಟ್ರಿ ಕೊಡಲು ಸಕಲ ತಯಾರಿ ಮಾಡಿಕೊಂಡೇ ಬರುತ್ತಿದ್ದಾರೆ. ಇದೆಲ್ಲಕ್ಕೂ ಉತ್ತರ ಇಲ್ಲಿದೆ. ಇದನ್ನೂ ಓದಿ:ರಣಬೀರ್- ರಶ್ಮಿಕಾ ನಟನೆಯ ‘ಅನಿಮಲ್’ ಸಿನಿಮಾದ ನ್ಯೂ ರಿಲೀಸ್ ಡೇಟ್ ಅನೌನ್ಸ್

    ರಾಶಾಗೆ ಈಗ 18ರ ಹರೆಯ. ಈಕೆ ಈಗ ತಾಯಿ ರವೀನಾ ಅವರಂತೆಯೇ ಸಾಗಲು ಸಿದ್ಧತೆ ನಡೆಸಿದ್ದಾಳೆ. ರವೀನಾ ಅವರ ಮಗಳು ಸದ್ಯ ಸಿನಿಮಾಗಳಲ್ಲಿ ಕಾಣಿಸಿಕೊಳ್ಳದೇ ಇದ್ದರು ಕೂಡ ಸೋಷಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿದ್ದಾರೆ. ನಿರ್ದೇಶಕ ಅಭಿಷೇಕ್ ಕಪೂರ್ ತಮ್ಮ ಮುಂದಿನ ಚಿತ್ರದಲ್ಲಿ, ರವೀನಾ ಟಂಡನ್ ಮತ್ತು ಅನಿಲ್ ಥಡಾನಿ ಅವರ ಪುತ್ರಿ ರಾಶಾ ಅವರನ್ನು ಪರಿಚಯಿಸಲಿದ್ದಾರೆ. ಇದೊಂದು ಅಡ್ವೆಂಚರ್- ಆ್ಯಕ್ಷನ್ ಓರಿಯೆಂಟೆಡ್ ಚಿತ್ರವಾಗಿದ್ದು, ಅಜಯ್ ದೇವಗನ್ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಇನ್ನೂ ಅಜಯ್ ದೇವಗನ್ ಅವರ ಸೋದರಳಿಯ ಅಮನ್ ದೇವಗನ್ ಕೂಡ ಈ ಚಿತ್ರದ ಮೂಲಕ ಬಾಲಿವುಡ್‌ಗೆ ಪದಾರ್ಪಣೆ ಮಾಡಲಿದ್ದಾರೆ. ಅಜಯ್ ದೇವಗನ್ ಅವರು ಹಿಂದೆಂದೂ ಮಾಡಿರದಂಥ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

    ಅಮನ್ ದೇವಗನ್- ರಾಶಾ ಅವರು ಜೋಡಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರಕ್ಕಿನ್ನೂ ಟೈಟಲ್ ಫಿಕ್ಸ್ ಆಗಿಲ್ಲ. ಆದರೆ ಮುಂದಿನ ವರ್ಷ ಫೆ.9ರಂದು ಸಿನಿಮಾ ರಿಲೀಸ್ ತೆರೆಗೆ ಬರುವ ಬಗ್ಗೆ ಚಿತ್ರತಂಡ ತಿಳಿಸಿದೆ. ರೋನಿ ಸ್ಕ್ರೀವ್‌ವಾಲಾ ಮತ್ತು ಪ್ರಾಗ್ಯಾ ಕಪೂರ್ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಒಟ್ನಲ್ಲಿ ಮಗಳ ಸಿನಿಮಾ ಲಾಂಚ್ ಬಗ್ಗೆ ರವೀನಾ ದಂಪತಿಗೆ ಖುಷಿಕೊಟ್ಟಿದೆ. ಸದ್ಯದಲ್ಲೇ ಈ ಬಗ್ಗೆ ಮತ್ತಷ್ಟು ಮಾಹಿತಿ ಸಿಗಲಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]