Tag: Rashi Khanna

  • ರಾಶಿ ಖನ್ನಾಗೆ ಕಾಮಿಡಿಗಿಂತ ಹೀರೋಗಳ ಜೊತೆ ರೊಮ್ಯಾನ್ಸ್ ಸಲೀಸಂತೆ

    ರಾಶಿ ಖನ್ನಾಗೆ ಕಾಮಿಡಿಗಿಂತ ಹೀರೋಗಳ ಜೊತೆ ರೊಮ್ಯಾನ್ಸ್ ಸಲೀಸಂತೆ

    ಬಾಲಿವುಡ್ ನಲ್ಲಿ ಅನೇಕ ಚಿತ್ರಗಳನ್ನು ಮಾಡಿರುವ ರಾಶಿ ಖನ್ನಾ ಇದೀಗ ಪಕ್ಕಾ ಕಮರ್ಷಿಯಲ್ ಹೆಸರಿನ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರವು ಇಂದು ರಿಲೀಸ್ ಆಗಿದೆ. ಈ ಸಿನಿಮಾದ ಪ್ರಚಾರದ ಸಂದರ್ಭದಲ್ಲಿ ಅವರು ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ. ಆ ಹೇಳಿಕೆ ಸಖತ್ ವೈರಲ್ ಕೂಡ ಆಗಿದೆ. ರಾಶಿ ಅವರ ಸ್ವಅನುಭವದ ಪ್ರಕಾರ ಕಾಮಿಡಿ ಮಾಡುವುದಕ್ಕಿಂತ ಸಲೀಸಾಗಿ ಹೀರೋಗಳ ಜೊತೆ ರೋಮ್ಯಾನ್ಸ್ ಮಾಡಬಹುದು ಎಂದಿದ್ದಾರೆ.

    ಅಂದರೆ, ಕಾಮಿಡಿ ಪಾತ್ರಗಳನ್ನು ಮತ್ತು ಕಾಮಿಡಿ ಮಾಡುವ ಹೀರೋಗಳ ಜೊತೆ ನಟಿಸುವುದು ತೀರಾ ಕಷ್ಟ. ಅದು ಅಸಾಧ್ಯದ ಮಾತೂ ಕೂಡ. ಆದರೆ, ಹೀರೋಗಳ ಜೊತೆ ರೋಮ್ಯಾನ್ಸ್ ಮಾಡುವಂತಹ ದೃಶ್ಯಗಳಲ್ಲಿ ನಾನು ಸಲೀಸಾಗಿ ನಟಿಸಬಲ್ಲೆ ಎಂದು ಹೇಳಿದ್ದಾರೆ. ಹಾಗಾಗಿ ತಾವು ಕಾಮಿಡಿ ಪಾತ್ರಗಳನ್ನು ಒಪ್ಪಿಕೊಳ್ಳುವಾಗ ಹಿಂದೆಮುಂದೆ ನೋಡುತ್ತೇನೆ ಎಂದೂ ಅವರು ತಿಳಿಸಿದ್ದಾರೆ. ಇದನ್ನೂ ಓದಿ:`ರಾ ರಾ ರಕ್ಕಮ್ಮ’ ನಂತರ ನಾಳೆ ಮತ್ತೊಂದು ಸಾಂಗ್ ರಿಲೀಸ್: ವಿಕ್ರಾಂತ್ ರೋಣ

    ಮದ್ರಾಸ್ ಕೆಫೆ ಸಿನಿಮಾದ ಮೂಲಕ ಬಾಲಿವುಡ್ ಗೆ ಕಾಲಿಟ್ಟ ರಾಶಿ ಖನ್ನಾ, ಹಲವಾರು ಚಿತ್ರಗಳನ್ನು ಮಾಡಿದ್ದಾರೆ. ಬಹುತೇಕ ಚಿತ್ರಗಳಲ್ಲಿ ಅವರು ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಸದ್ಯ ರಿಲೀಸ್ ಆಗಿರುವ ಚಿತ್ರದಲ್ಲೂ ಅವರು ಹೊಸ ಬಗೆಯ ಪಾತ್ರ ಮಾಡಿದ್ದಾರೆ. ಈ ಪಾತ್ರದ ಬಗ್ಗೆ ಅವರು ಕನಸು ಕೂಡ ಕಟ್ಟಿಕೊಂಡಿದ್ದಾರಂತೆ.

    Live Tv

  • ನಾನು ನಿಮ್ಮವಳು, ಕೆಟ್ಟದ್ದಾಗಿ ಮಾತನಾಡಬೇಡಿ ಎಂದ ರಾಶಿ ಖನ್ನಾ

    ನಾನು ನಿಮ್ಮವಳು, ಕೆಟ್ಟದ್ದಾಗಿ ಮಾತನಾಡಬೇಡಿ ಎಂದ ರಾಶಿ ಖನ್ನಾ

    ಹುಭಾಷಾ ನಟಿ ರಾಶಿ ಖನ್ನಾ ತಮ್ಮ ಬೋಲ್ಡ್ ವ್ಯಕ್ತಿತ್ವದ ಮೂಲಕ ಬಣ್ಣದ ಲೋಕದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಆದರೆ ರಾಶಿ ಸೌತ್ ಸಿನಿಮಾದಿಂದಲೇ ಬಾಲಿವುಡ್‌ಗೆ ಹೋಗಿದ್ದರೂ, ತಮ್ಮ ನೆಲದ ಮೇಲೆಯೇ ಗೌರವವಿಲ್ಲ ಎಂಬ ಗಾಸಿಪ್ ಎಲ್ಲಾ ಕಡೆ ಹಬ್ಬಿತ್ತು. ಈ ಗಾಸಿಪ್‌ಗೆ ರಾಶಿ ತೆರೆ ಎಳೆದಿದ್ದಾರೆ.

    ರಾಶಿ ಖನ್ನಾ ತಮ್ಮ ಬಾಲಿವುಡ್ ಸಿನಿಮಾ ‘ರುದ್ರ’ ಪ್ರಚಾರದ ವೇಳೆ ದಕ್ಷಿಣ ಚಲನಚಿತ್ರೋದ್ಯಮದ ಬಗ್ಗೆ ಅಷ್ಟಾಗಿ ಹೋಗಲಿಲ್ಲ ಎಂದು ನೆಟ್ಟಿಗರು ಆಕ್ರೋಶ ಹೊರಹಾಕುತ್ತಿದ್ದರು. ಈ ನಟಿಗೆ ತಮ್ಮ ನೆಲದ ಮೇಲೆ ಗೌರವ ಕಮ್ಮಿಯಾಗಿದೆ ಎಂದು ಟ್ರೋಲ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ರಾಶಿ ಮಾತನಾಡಿದ್ದು, ನಾನು ಎಲ್ಲ ಭಾಷೆಗಳನ್ನು, ಚಿತ್ರೋದ್ಯಮವನ್ನು ತುಂಬಾ ಇಷ್ಟಪಡುತ್ತೇನೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಗರ್ಲ್‍ಫ್ರೆಂಡ್, ಮಾಜಿ ಪತ್ನಿ ಜೊತೆ ಗೋವಾದಲ್ಲಿ ಪಾರ್ಟಿ ಮಾಡಿದ ಹೃತಿಕ್ ರೋಷನ್

    ರಾಶಿ ಖನ್ನಾ ತಮ್ಮ ಟ್ವಿಟ್ಟರ್‌ನಲ್ಲಿ, ದಕ್ಷಿಣ ಸಿನಿಮಾಗಳ ಬಗ್ಗೆ ನನಗೆ ಗೌರವವಿಲ್ಲವೆಂದು ಸೋಶಿಯಲ್ ಮೀಡಿಯಾದಲ್ಲಿ ನನ್ನ ಬಗ್ಗೆ ತಪ್ಪಾಗಿ ಅರ್ಥೈಸಲಾಗಿದೆ. ನನ್ನ ಬಗ್ಗೆ ಕೆಟ್ಟದಾಗಿ ಮಾತನಾಡಲಾಗುತ್ತಿದೆ. ನನ್ನ ಬಗ್ಗೆ ತಪ್ಪುಗ್ರಹಿಕೆಯುಳ್ಳ ವಿಷಯಗಳ ಬಗ್ಗೆ ನಾನು ರೌಂಡ್ ಮಾಡುತ್ತಿದ್ದೇನೆ. ಯಾರೇ ಇದನ್ನು ಮಾಡುತ್ತಿದ್ದರೂ ದಯವಿಟ್ಟು ನಿಲ್ಲಿಸಿ ಎಂದು ನಾನು ವಿನಂತಿಸುತ್ತೇನೆ. ನಾನು ಮಾಡುವ ಪ್ರತಿಯೊಂದು ಭಾಷೆ ಮತ್ತು ಚಿತ್ರದ ಬಗ್ಗೆ ನನಗೆ ಹೆಚ್ಚಿನ ಗೌರವವಿದೆ ಎಂದು ವಿನಂತಿ ಮಾಡಿಕೊಂಡಿದ್ದಾರೆ.

    ದಕ್ಷಿಣ ಇಂಡಸ್ಟ್ರಿ ಬಗ್ಗೆ ರಾಶಿ ಅವರಿಗೆ ಗೌರವ ಇಲ್ಲ ಎಂದು ತೆಲುಗು ಪ್ರೇಕ್ಷಕರಲ್ಲಿ ನೆಗೆಟಿವ್ ಇಮೇಜ್ ಕ್ರಿಯೇಟ್ ಆಗಿತ್ತು. ಆದರೆ ಈ ಗಾಸಿಪ್ಗಳಿಗೆ ರಾಶಿ ತೆರೆಎಳೆದಿದ್ದಾರೆ. ಇದನ್ನೂ ಓದಿ: ಡ್ರಾಮಾ ಕ್ವೀನ್ ಭಾರತಿ ಸಿಂಗ್ ಗಂಡನಿಗೆ 6 ಮಕ್ಕಳು ಬೇಕಂತೆ : ಹೆರಿಗೆ ನೋವಿನ ಕ್ಷಣಗಳನ್ನು ಹಂಚಿಕೊಂಡ ಹಾಸ್ಯ ಕಲಾವಿದೆ

  • ಇದೇ ಶುಕ್ರವಾರ ತೆರೆಗೆ ಬರಲಿದೆ ರಾಕ್‍ಲೈನ್ ನಿರ್ಮಾಣದ ಮೋಹನ್‍ಲಾಲ್ ಅಭಿನಯದ ವಿಲನ್

    ಇದೇ ಶುಕ್ರವಾರ ತೆರೆಗೆ ಬರಲಿದೆ ರಾಕ್‍ಲೈನ್ ನಿರ್ಮಾಣದ ಮೋಹನ್‍ಲಾಲ್ ಅಭಿನಯದ ವಿಲನ್

    ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ 25ಕ್ಕೂ ಹೆಚ್ಚು ಸೂಪರ್ ಹಿಟ್ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ರಾಕ್‍ಲೈನ್ ವೆಂಕಟೇಶ್ ಈಗ ಭಾರತೀಯ ಚಿತ್ರರಂಗದ ಹೆಸರಂತ ನಿರ್ಮಾಪಕರಾಗಿದ್ದಾರೆ. ಸೂಪರ್ ಸ್ಟಾರ್ ರಜನಿಕಾಂತ್, ರವಿತೇಜ, ಬಾಲಿವುಡ್ ಬಾಕ್ಸಾಫೀಸ್ ಸುಲ್ತಾನ್ ಸಲ್ಮಾನ್ ಖಾನ್ ಚಿತ್ರಗಳಿಗೆ ಬಂಡವಾಳ ಹೂಡಿದ ಹೆಗ್ಗಳಿಕೆ ರಾಕ್‍ಲೈನ್ ವೆಂಕಟೇಶ್‍ಗೆ ಸಲ್ಲುತ್ತದೆ. ಬಾಲಿವುಡ್, ಟಾಲಿವುಡ್ ಹಾಗೂ ಕಾಲಿವುಡ್‍ನಲ್ಲಿ ಬಿಗ್ ಬಜೆಟ್ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ರಾಕ್‍ಲೈನ್ ಈಗ ಮಲೆಯಳಂ ನಟ ಮೋಹನ್ ಲಾಲ್ ನಟನೆಯ `ವಿಲನ್’ ನಿರ್ಮಾಪಕರಾಗಿದ್ದು ಚಿತ್ರ ಇದೇ 28ಕ್ಕೆ ಬಿಡುಗಡೆಯಾಗಲಿದೆ.

    ಒಬ್ಬ ಸಾಮಾನ್ಯ ಸಹ ಕಲಾವಿದನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ರಾಕ್‍ಲೈನ್ ವೆಂಕಟೇಶ್ ಅವರು ಇಂದು ಆಕಾಶದೇತ್ತರಕ್ಕೆ ಬೆಳೆದು ನಿಂತಿದ್ದಾರೆ. ತಮಗೇ ಯಾವುದೇ ಬೌಂಡರಿ ಲೈನ್ ಹಾಕಿಕೊಳ್ಳದೆ ಟಾಲಿವುಡ್, ಕಾಲಿವುಡ್ ಹಾಗೂ ದೂರದ ಬಾಲಿವುಡ್ ತನಕ ತಮ್ಮ ಛಾಪನ್ನು ಈಗಾಗಲೇ ಮೂಡಿಸಿದ್ದಾರೆ. ಇನ್ನೂ ಭಾರತೀಯ ಚಿತ್ರರಂಗದಲ್ಲೇ ಸ್ಟೋರಿ ಬೆಸ್ಟ್ ಸಿನಿಮಾಗಳಿಗೆ ಹೆಸರು ವಾಸಿಯಾಗಿರುವ ಮಾಲಿವುಡ್ ಚಿತ್ರರಂಗಕ್ಕೆ ರಾಕ್‍ಲೈನ್ ವೆಂಕಟೇಶ್ ವಿಲನ್ ಮೂಲಕ ಪ್ರವೇಶವನ್ನು ಪಡೆಯುತ್ತಿದ್ದಾರೆ.

    ಕಳೆದ ವರ್ಷ `ಪುಲಿ ಮುರುಗನ್’ ಚಿತ್ರದ ಮೂಲಕ ಬಾಕ್ಸಾಫೀಸ್‍ನಲ್ಲಿ ಸೆಂಚುರಿ ಬಾರಿಸಿದ ಮೋಹನ್ ಲಾಲ್‍ಗೆ ಈ ಬಾರಿ ಕ್ರೈಂ ಥ್ರಿಲ್ಲರ್ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದು, ಈ ಚಿತ್ರದಲ್ಲಿ ಕೇವಲ ಮೋಹನ್ ಲಾಲ್ ಮಾತ್ರವಲ್ಲ ಕಾಲಿವುಡ್‍ನ ಪ್ರಮುಖ ನಟರಾದ ವಿಶಾಲ್, ನಟಿ ಮಂಜು ವಾರಿಯರ್, ಹನ್ಸಿಕಾ ಮೊಟ್ವಾನಿ, ರಾಶಿ ಖನ್ನಾ ರಂಥ ಫೇಮಸ್ ಸ್ಟಾರ್‍ಗಳು ಬಣ್ಣ ಹಚ್ಚಿದ್ದಾರೆ.

    ಮಾಲಿವುಡ್‍ನ ಖ್ಯಾತ ನಿರ್ದೇಶಕ ಬಿ.ಉನ್ನಿಕೃಷ್ಣನ್ ಸಾರಥ್ಯದಲ್ಲಿ ವಿಲನ್ ಮೂಡಿಬಂದಿದ್ದು, ಕೆಲ ದಿನಗಳ ಹಿಂದೆ ಬಿಡುಗಡೆಯಾದ ಟ್ರೇಲರ್ ಸೋಷಿಯಲ್ ಮಿಡಿಯದಲ್ಲಿ ಸಖತ್ ಸದ್ದು ಮಾಡಿತ್ತು.

    ರಾಕ್‍ಲೈನ್ ವೆಂಕಟೇಶ್‍ರವರ ಬಗ್ಗೆ ಮತ್ತೊಂದು ಇಂಟ್ರಸ್ಟಿಂಗ್ ವಿಷಯ ನಿಮಗೇ ಹೇಳಲೇ ಬೇಕು. ಏಕೆಂದರೆ ಇದು ಕನ್ನಡ ಚಿತ್ರರಸಿಕರಿಗೆ ಹೆಮ್ಮೆಯಾಗುವ ಸಮಾಚಾರ. ನಿರ್ಮಾಣದ ಜೊತೆಗೆ ಕೆಲ ಸಿನಿಮಾಗಳಲ್ಲಿ ಡಿಫರೆಂಟ್ ಪಾತ್ರಗಳನ್ನ ಮಾಡುತ್ತಿರುವ ವೆಂಕಟೇಶ್ ಮತ್ತೊಂದು ಸಾಧನೆಯ ಮೈಲುಗಲ್ಲು ಹತ್ತಲೂ ಸಜ್ಜಾಗಿದ್ದಾರೆ. ಮೂಲಗಳ ಪ್ರಕಾರ ರಾಕ್‍ಲೈನ್ ಚೀನಾ ಭಾಷೆಯಲ್ಲೊಂದು ಅದ್ದೂರಿ ಸಿನಿಮಾ ಮಾಡಲು ಸಜ್ಜಾಗುತ್ತಿದ್ದಾರಂತೆ. ಚೀನಾದಲ್ಲಿಯೇ ಒಬ್ಬ ಹೊಸ ಪ್ರತಿಭೆಯೊಬ್ಬನನ್ನು ತಯಾರಿ ಮಾಡುತ್ತಿದ್ದಾರಂತೆ. ಚೀನಾ ಭಾಷೆಯ ಜೊತೆಗೆ ಜಗತ್ತಿನ ಬೇರೆ ಬೇರೆ ಭಾಷೆಯಲ್ಲಿ ಈ ಸಿನಿಮಾ ರಿಲೀಸ್ ಮಾಡುವ ಮಹತ್ತರ ಯೋಜನೆಯಲ್ಲಿ ರಾಕ್‍ಲೈನ್ ಇದ್ದಾರೆ ಎನ್ನಲಾಗುತ್ತಿದೆ.

    ಈಗಾಗಲೇ `ವಿಲನ್’ ಚಿತ್ರದ ಬಗ್ಗೆ ಬಹಳಷ್ಟು ನಿರೀಕ್ಷೆಗಳು ಮೂಡಿಸಿರುವ ಸಂದರ್ಭದಲ್ಲಿ ಹೊಸ ಸುದ್ದಿ ಎಲ್ಲರನ್ನು ಹೆಮ್ಮೆ ಪಡುವಂತೆ ಮಾಡಿದೆ. `ವಿಲನ್’ ಸಿನಿಮಾದ ಪೋಸ್ಟರ್ ಹಾಗೂ ಟ್ರೇಲರ್‍ನ ನೋಡಿದ ಸೂಪರ್ ಸ್ಟಾರ್ ರಜನಿಕಾಂತ್, ಈ ಸಿನಿಮಾವನ್ನು ನಾನು ಖಂಡಿತ ಮೋಡುತ್ತೇನೆ ಎಂದು ತಿಳಿಸಿದ್ದಾರೆ.