Tag: Rashtrapathi Bhavan

  • ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ನ್ಯಾ.ಸಂಜೀವ ಖನ್ನಾ ಪ್ರಮಾಣವಚನ

    ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ನ್ಯಾ.ಸಂಜೀವ ಖನ್ನಾ ಪ್ರಮಾಣವಚನ

    ನವದೆಹಲಿ: ಸುಪ್ರೀಂಕೋರ್ಟ್ (Supreme Court) ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಸಂಜೀವ ಖನ್ನಾ (Justice Sanjiv Khanna) ಇಂದು (ನ.11) ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

    ಇಂದು ರಾಷ್ಟ್ರಪತಿ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ಸುಪ್ರೀಂ ಕೋರ್ಟ್‌ನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಲಿರುವ ನ್ಯಾ.ಸಂಜೀವ ಖನ್ನಾ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಪ್ರಮಾಣ ವಚನ ಬೋಧಿಸಲಿದ್ದಾರೆ.ಇದನ್ನೂ ಓದಿ: ಚಳಿಗಾಲದಲ್ಲಿ ಅಯೋಧ್ಯೆ ರಾಮನನ್ನು ಬೆಚ್ಚಗಿಡಲು ಚಾದರ, ಪಶ್ಮಿನಾ ಶಾಲು, ಹೀಟರ್‌ ವ್ಯವಸ್ಥೆ

    ಎರಡು ವರ್ಷಗಳ ಅವಧಿಯ ಬಳಿಕ ಹಾಲಿ ಸಿಜೆಐ ಡಿವೈ ಚಂದ್ರಚೂಡ್ (DY Chandrachud) ಅವರು ಭಾನುವಾರ ತಮ್ಮ ಅಧಿಕಾರದಿಂದ ನಿವೃತ್ತಿ ಹೊಂದಿದರು. ಅವರ ಶಿಫಾರಸಿನ ಮೇರೆಗೆ ಅ.24 ರಂದು ನ್ಯಾ.ಸಂಜೀವ ಖನ್ನಾ ಅವರನ್ನು ಮುಖ್ಯ ನ್ಯಾರ್ಯಮೂರ್ತಿಯಾಗಿ ನೇಮಕ ಮಾಡುವ ಕುರಿತು ಅಧಿಕೃತವಾಗಿ ಪ್ರಕಟಿಸಲಾಗಿತ್ತು. ಸೋಮವಾರ ಅಧಿಕಾರ ಸ್ವೀಕರಿಸಲಿರುವ ನ್ಯಾ.ಖನ್ನಾ 2025ರ ಮೇ.31ರವರೆಗೆ ಅಧಿಕಾರದಲ್ಲಿರಲಿದ್ದಾರೆ.

    2019ರ ಜನವರಿಯಿಂದ ಸುಪ್ರೀಂ ಕೋರ್ಟ್‌ನ ನ್ಯಾಯಧೀಶರಾಗಿ ಸೇವೆ ಸಲ್ಲಿಸಿದ ನ್ಯಾ.ಖನ್ನಾ ಅವರು, ಸುಪ್ರೀಂ ಕೋರ್ಟ್‌ನ ಭಾಗವಾಗಿ ಹಲವಾರು ಪ್ರಮುಖ ತೀರ್ಪುಗಳನ್ನು ನೀಡಿದ್ದಾರೆ. ಚುನಾವಣಾ ಬಾಂಡ್‌ಗಳ ಯೋಜನೆ ರದ್ದು, ಭಾರತದ ಸಂವಿಧಾನದ 370ನೇ ವಿಧಿಯ ರದ್ದತಿಯನ್ನು ಎತ್ತಿಹಿಡಿದ ಸಂವಿಧಾನ ಪೀಠದ ಭಾಗವಾಗಿದ್ದರು.

    ಇನ್ನೂ ಜುಲೈನಲ್ಲಿ ಅವರ ನೇತೃತ್ವದ ಪೀಠವು ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಗಿನ ದೆಹಲಿ (Delhi) ಮುಖ್ಯಮಂತ್ರಿಯಾಗಿದ್ದ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ (AAP Arvind Kejrival) ಅವರಿಗೆ ಮಧ್ಯಂತರ ಜಾಮೀನು ನೀಡಿತ್ತು.ಇದನ್ನೂ ಓದಿ: ಕ್ಯೂಬಾದಲ್ಲಿ ಒಂದೇ ಗಂಟೆಯಲ್ಲಿ 2 ಪ್ರಬಲ ಭೂಕಂಪ

  • ರಾಷ್ಟ್ರಪತಿ ಭವನದ ಉದ್ಯಾನವನ ನಿರ್ವಹಣೆಗೆ 12.70 ಕೋಟಿ ರೂ. ವೆಚ್ಚ!

    ರಾಷ್ಟ್ರಪತಿ ಭವನದ ಉದ್ಯಾನವನ ನಿರ್ವಹಣೆಗೆ 12.70 ಕೋಟಿ ರೂ. ವೆಚ್ಚ!

    ಬೆಳಗಾವಿ: ನವದೆಹಲಿಯಲ್ಲಿರುವ ರಾಷ್ಟ್ರಪತಿ ಭವನದ ಉದ್ಯಾನವನದ ನಿರ್ವಹಣೆಗಾಗಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಸುಮಾರು 12.70 ಕೋಟಿ ರೂಪಾಯಿ ವೆಚ್ಚಮಾಡಲಾಗಿದೆ ಎಂದು ಆರ್ ಟಿಐ ಮೂಲಕ ಬಹಿರಂಗವಾಗಿದೆ.

    ನಗರದ ಆರ್ ಟಿಐ ಕಾರ್ಯಕರ್ತರಾದ ಭೀಮಪ್ಪ ಗಡಾದ ರವರು, ರಾಷ್ಟ್ರಪತಿ ಭವನ ಉದ್ಯಾನವನದ ಖರ್ಚು-ವೆಚ್ಚಗಳ ಬಗ್ಗೆ ಆರ್ ಟಿಐ ಅಡಿಯಲ್ಲಿ ಪ್ರಶ್ನಿಸಿದಾಗ ಈ ಸತ್ಯ ಹೊರಬಂದಿದೆ. ಉದ್ಯಾನವನದ ನಿರ್ವಹಣೆಗಾಗಿ ಇಷ್ಟೊಂದು ಹಣ ವೆಚ್ಚ ಮಾಡುವ ಅವಶ್ಯಕತೆ ಇದೆಯೇ ಎಂದು ಭೀಮಪ್ಪ ಗಡಾದ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

    ಆರ್ ಟಿಐ ಅಡಿಯಲ್ಲಿ ರಾಷ್ಟ್ರಪತಿ ಭವನದಿಂದ ಪಡೆದಿರುವ ಮಾಹಿತಿಯನ್ನು ಗುರುವಾರ ಸುದ್ದಿಮಾಧ್ಯಮಗಳಿಗೆ ಭೀಮಪ್ಪ ಗಡಾದ್ ಬಿಡುಗಡೆ ಮಾಡಿದ್ದಾರೆ. ಈ ವೇಳೆ ಮಾಹಿತಿ ನೀಡಿದ ಅವರು, ಉದ್ಯಾನವನ ನಿರ್ವಹಣೆಗಾಗಿ ಕಳೆದ ಮೂರು ವರ್ಷಗಳಲ್ಲಿ ಸುಮಾರು 12.70 ಕೋಟಿ ರೂ., ಹೂದೋಟ ಯಂತ್ರೋಪಕರಣಗಳ ಖರೀದಿಗಾಗಿ 1.46 ಕೋಟಿ ರೂ. ಹಾಗೂ ಉದ್ಯಾನವನ ಸಿಬ್ಬಂದಿಯವರ ವೇತನಕ್ಕಾಗಿ ಪ್ರತಿವರ್ಷ ಅಂದಾಜು 8.64 ಕೋಟಿ ರೂ. ವೆಚ್ಚ ಮಾಡಲಾಗಿದ್ದು ಸುಮಾರು 20 ಕೋಟಿ ಉದ್ಯಾನವನ ನಿರ್ವಹಣೆಗೆ ಖರ್ಚಾಗಿದೆ ಎಂದು ತಿಳಿಸಿದ್ದಾರೆ.

    ಇಷ್ಟೊಂದು ಹಣ ವೆಚ್ಚ ಮಾಡಿ ಉದ್ಯಾನವನ ನಿರ್ವಹಣೆ ಮಾಡುವುದರಿಂದ ಏನಾದರೂ ಪ್ರಯೋಜನವಾಗುತ್ತಿದೆಯೇ ಎಂದು ಪ್ರಶ್ನಿಸಿದ ಅವರು, ಕೂಡಲೇ ರಾಷ್ಟ್ರಪತಿಗಳ ಈ ಕುರಿತು ಪತ್ರ ಬರೆಯುವುದಾಗಿ ತಿಳಿಸಿದ್ದಾರೆ.

    ಸರ್ಕಾರದ ವಿವಿಧ ಯೋಜನೆಗಳ ಪಿಂಚಣಿಗೆ ಹಣ ಪ್ರತಿ ತಿಂಗಳು ಸಮಯಕ್ಕೆ ಸರಿಯಾಗಿ ಬಿಡುಗಡೆಯಾಗುತ್ತಿಲ್ಲ. ಪಿಂಚಣಿ ಬಂದಿಲ್ಲವೆಂದು ವಯೋವೃದ್ಧರು, ವಿಧವೆಯರು ಧರಣಿ ಮಾಡುವುದು ಎಲ್ಲಾ ಕಡೆ ನಡೆಯುತ್ತಲೇ ಇರುತ್ತದೆ. ಪರಿಸ್ಥಿತಿ ಹೀಗಿರುವಾಗ, ಸಾರ್ವಜನಿಕರಿಂದ ಸಂಗ್ರಹವಾದ ತೆರಿಗೆ ಹಣವನ್ನು ಈ ರೀತಿ ಪೋಲು ಮಾಡುತ್ತಿರುವುದು ಎಷ್ಟು ಸರಿ ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ.