Tag: Rashtrapati Bhawan

  • ಮೋದಿ ಪ್ರಮಾಣ ವಚನಕ್ಕೆ ಸಕಲ ಸಿದ್ಧತೆ – ರಾಷ್ಟ್ರಪತಿ ಭವನಕ್ಕೆ ಭಾರೀ ಭದ್ರತೆ

    ಮೋದಿ ಪ್ರಮಾಣ ವಚನಕ್ಕೆ ಸಕಲ ಸಿದ್ಧತೆ – ರಾಷ್ಟ್ರಪತಿ ಭವನಕ್ಕೆ ಭಾರೀ ಭದ್ರತೆ

    ನವದೆಹಲಿ: ಜೂನ್ 9 ರಂದು ರಾಷ್ಟ್ರಪತಿ ಭವನದಲ್ಲಿ (Rashtrapati Bhawan) ನಡೆಯಲಿರುವ ನರೇಂದ್ರ ಮೋದಿಯವರ  (Narendra Modi) ಪ್ರಮಾಣ ವಚನ ಸ್ವೀಕಾರ ಸಮಾರಂಭದ ಸಲುವಾಗಿ ಭಾರೀ ಭದ್ರತೆ ಕಲ್ಪಿಸಲು ಸಿದ್ಧತೆ ನಡೆದಿದೆ. ರಾಷ್ಟ್ರಪತಿ ಭವನದ ಸುತ್ತ ಅರೆಸೇನಾ ಪಡೆ ಸಿಬ್ಬಂದಿ, ಎನ್‍ಎಸ್‍ಜಿ ಕಮಾಂಡೋಗಳು, ಡ್ರೋನ್‍ಗಳು ಮತ್ತು ಸ್ನೈಪರ್‌ಗಳ ಬಹು ಹಂತದ ಭದ್ರತೆಯನ್ನು ಕಲ್ಪಿಸಲಾಗಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    ಸಾರ್ಕ್ (ದಕ್ಷಿಣ ಏಷ್ಯಾದ ಪ್ರಾದೇಶಿಕ ಸಹಕಾರ ಸಂಘ) ರಾಷ್ಟ್ರಗಳ ಗಣ್ಯರನ್ನು ಸಮಾರಂಭಕ್ಕೆ ಆಹ್ವಾನಿಸಿರುವುದರಿಂದ ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ. ಪ್ರಮಾಣ ವಚನದಲ್ಲಿ ಪಾಲ್ಗೊಳ್ಳುವ ಗಣ್ಯರಿಗೆ ಅವರ ಹೋಟೆಲ್‍ಗಳಿಂದ ರಾಷ್ಟ್ರಪತಿ ಭವನಕ್ಕೆ ತೆರಳಲು ಮತ್ತು ಹಿಂತಿರುಗಲು ನಿಗದಿತ ಮಾರ್ಗವನ್ನು ಸೂಚಿಸಲಾಗುತ್ತದೆ. ಇದನ್ನೂ ಓದಿ: ನಕಲಿ ಆಧಾರ್‌ ಕಾರ್ಡ್‌ ಬಳಸಿ ಸಂಸತ್‌ ಪ್ರವೇಶಿಸಲು ಯತ್ನಿಸಿದ ಮೂವರ ಬಂಧನ

    ಬಾಂಗ್ಲಾದೇಶ, ಶ್ರೀಲಂಕಾ, ಮಾಲ್ಡೀವ್ಸ್, ಭೂತಾನ್, ನೇಪಾಳ, ಮಾರಿಷಸ್ ಮತ್ತು ಸೆಶೆಲ್ಸ್‌ನ ಉನ್ನತ ನಾಯಕರು ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ. ನಗರದ ಲೀಲಾ, ತಾಜ್, ಐಟಿಸಿ ಮೌರ್ಯ, ಕ್ಲಾರಿಡ್ಜಸ್ ಮತ್ತು ಒಬೆರಾಯ್ ಹೋಟೆಲ್‍ಗಳಲ್ಲಿ ಈಗಾಗಲೇ ಭದ್ರತೆ ಕೈಗೊಳ್ಳಲಾಗಿದೆ.

    ರಾಷ್ಟ್ರಪತಿ ಭವನದ ಆವರಣದ ಒಳಗೆ ಮತ್ತು ಹೊರಗೆ ಮೂರು ಹಂತದ ಭದ್ರತೆಯನ್ನು ಹೊಂದಿರುತ್ತದೆ. ದೆಹಲಿ ಪೊಲೀಸ್ ಸಿಬ್ಬಂದಿಯನ್ನು ಹೊರ ಆವರಣದಲ್ಲಿ ನಿಯೋಜಿಸಲಾಗುವುದು ಮತ್ತು ಅರೆಸೇನಾ ಸಿಬ್ಬಂದಿಯನ್ನು ಭವನದ ಆಂತರಿಕ ಭದ್ರತೆಗೆ ನಿಯೋಜಿಸಲಾಗಿದೆ. ದೆಹಲಿ ಸಶಸ್ತ್ರ ಪೊಲೀಸ್ (ಡಿಎಪಿ) ಜವಾನರು ಸೇರಿದಂತೆ ಸುಮಾರು 2500 ಪೊಲೀಸ್ ಸಿಬ್ಬಂದಿಯನ್ನು ಸ್ಥಳದ ಸುತ್ತಲೂ ನಿಯೋಜಿಸಲು ಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಗಣ್ಯರ ಮಾರ್ಗಗಳಲ್ಲಿ ಸ್ನೈಪರ್‌ಗಳು ಮತ್ತು ಶಸ್ತ್ರಸಜ್ಜಿತ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಮತ್ತು ಹೊಸ ದೆಹಲಿ ಜಿಲ್ಲೆಯ ಆಯಕಟ್ಟಿನ ಸ್ಥಳಗಳಲ್ಲಿ ಡ್ರೋನ್‍ಗಳನ್ನು ನಿಯೋಜಿಸಲಾಗುವುದು. ಕಳೆದ ಜಿ 20 ಶೃಂಗಸಭೆಯ ಭದ್ರತೆಯನ್ನು ಇದು ಹೋಲಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ದೆಹಲಿಯ ಮಧ್ಯ ಭಾಗದ ಕಡೆಗೆ ಹೋಗುವ ಹಲವಾರು ರಸ್ತೆಗಳನ್ನು ಭಾನುವಾರ ಮುಚ್ಚಬಹುದು. ಶನಿವಾರದಿಂದಲೇ ರಾಷ್ಟ್ರ ರಾಜಧಾನಿಯ ಗಡಿಗಳಲ್ಲಿ ತಪಾಸಣೆಯನ್ನು ಹೆಚ್ಚಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ರಾಷ್ಟ್ರಪತಿ ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಮೋದಿ

  • 2ನೇ ಎಲಿಜಬೆತ್ ನಿಧನಕ್ಕೆ ಇಂದು ದೇಶಾದ್ಯಂತ ಶೋಕಾಚರಣೆ

    2ನೇ ಎಲಿಜಬೆತ್ ನಿಧನಕ್ಕೆ ಇಂದು ದೇಶಾದ್ಯಂತ ಶೋಕಾಚರಣೆ

    ನವದೆಹಲಿ: ಗುರುವಾರ ನಿಧನರಾದ ಬ್ರಿಟನ್ ರಾಣಿ 2ನೇ ಎಲಿಜಬೆತ್‌ಗೆ ಗೌರವಾರ್ಥವಾಗಿ ಭಾನುವಾರ ಭಾರತದಾದ್ಯಂತ ಒಂದು ದಿನದ ಶೋಕಾಚರಣೆಯನ್ನು ಆಚರಿಸಲಾಗಿದೆ. ಬ್ರಿಟನ್‌ನ ರಾಣಿಯಾಗಿ ಸುದೀರ್ಘ ಸೇವೆ ಸಲ್ಲಿಸಿದ ಎಲಿಜಬೆತ್ ಗುರುವಾರ ಸ್ಕಾಟ್ಲೆಂಡ್‌ನಲ್ಲಿ ತಮ್ಮ 96 ನೇ ವಯಸ್ಸಿನಲ್ಲಿ ನಿಧನರಾದರು.

    ಅಗಲಿದ ಗಣ್ಯರಿಗೆ ಗೌರವದ ಸೂಚಕವಾಗಿ ಸೆಪ್ಟೆಂಬರ್ 11ರಂದು ಒಂದು ದಿನದ ಶೊಕಾಚರಣೆಯನ್ನು ಮಾಡಬೇಕೆಂದು ಭಾರತ ಸರ್ಕಾರ ನಿರ್ಧರಿಸಿತ್ತು. ಇದರ ಹಿನ್ನೆಲೆ ಇಂದು ಭಾರತದ ಕೆಂಪು ಕೋಟೆ ಹಾಗೂ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಯಿತು.

    ಪ್ರಧಾನಿ ನರೇಂದ್ರ ಮೋದಿ ಅವರು ರಾಣಿಯ ಅಗಲಿಕೆಗೆ ಸಂತಾಪ ಸೂಚಿಸಿ, 2015 ಹಾಗೂ 2018ರಲ್ಲಿ ಬ್ರಿಟನ್‌ಗೆ ಭೇಟಿ ನೀಡಿದ್ದಾಗ ರಾಣಿಯೊಂದಿಗಿನ ಭೇಟಿಯನ್ನು ಸ್ಮರಿಸಿದ್ದರು. ಈ ಬಗ್ಗೆ ಟ್ವೀಟ್‌ನಲ್ಲಿ, ಬ್ರಿಟನ್ ರಾಣಿಯ ಕಾಳಜಿ ಹಾಗೂ ದಯೆಯನ್ನು ನಾನು ಎಂದಿಗೂ ಮರೆಯುವುದಿಲ್ಲ. ಸಭೆಯೊಂದರಲ್ಲಿ ಅವರು ತಮ್ಮ ಮದುವೆಯ ಸಂದರ್ಭ ಮಹಾತ್ಮ ಗಾಂಧಿಯವರು ನೀಡಿದ್ದ ಕರವಸ್ತ್ರವನ್ನು ನನಗೆ ತೋರಿಸಿದ್ದರು. ನಾನು ಅವರ ನಡವಳಿಕೆಗೆ ಯಾವಾಗಲೂ ಋಣಿಯಾಗಿರುತ್ತೇನೆ ಎಂದು ಬರೆದಿದ್ದರು. ಇದನ್ನೂ ಓದಿ: ನಾಳೆಯಿಂದ ಮಳೆಗಾಲದ ಅಧಿವೇಶನ- ಕಾಂಗ್ರೆಸ್ ವಿರುದ್ಧ ರೀಡೂ ಅಸ್ತ್ರಕ್ಕೆ ಬಿಜೆಪಿ ಸಿದ್ಧತೆ

    ಅಗಲಿದ ರಾಣಿಯ ಸರ್ಕಾರಿ ಅಂತ್ಯಕ್ರಿಯೆ ಸೋಮವಾರ ಲಂಡನ್‌ನ ವೆಸ್ಟ್ಮಿನಿಸ್ಟರ್ ಅಬ್ಬೆಯಲ್ಲಿ ನಡೆಯಲಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಸೈಮಾ ಅವಾರ್ಡ್ ಕಾರ್ಯಕ್ರಮದಲ್ಲಿ ಅಪ್ಪು ನೆನಪು

     

    Live Tv
    [brid partner=56869869 player=32851 video=960834 autoplay=true]