Tag: Rashtriya Janata Dal

  • ಪ್ರಾಣಿಗಳ ಮೇವು ತಿಂದವರು ರೈತರ ಕಲ್ಯಾಣದ ಬಗ್ಗೆ ಯೋಚಿಸಲ್ಲ: ಲಾಲು ವಿರುದ್ಧ ಮೋದಿ ವ್ಯಂಗ್ಯ

    ಪ್ರಾಣಿಗಳ ಮೇವು ತಿಂದವರು ರೈತರ ಕಲ್ಯಾಣದ ಬಗ್ಗೆ ಯೋಚಿಸಲ್ಲ: ಲಾಲು ವಿರುದ್ಧ ಮೋದಿ ವ್ಯಂಗ್ಯ

    – ಜಂಗಲ್‌ ರಾಜ್ಯದವ್ರು ಮಹಾಕುಂಭ ಮೇಳ ಟೀಕಿಸ್ತಾರೆ

    ಪಾಟ್ನಾ: ಬಿಹಾರದ (Bihar) ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ (Lalu Prasad Yadav) ವಿರುದ್ಧ‌ ಪ್ರಧಾನಿ ನರೇಂದ್ರ ಮೋದಿ (Narendra Modi) ವಾಗ್ದಾಳಿ ನಡೆಸಿದ್ದಾರೆ. ಪ್ರಾಣಿಗಳಿಗೆ ಮೀಸಲಾದ ಮೇವು ತಿಂದವರು ರೈತರ ಕಲ್ಯಾಣದ ಬಗ್ಗೆ ಯೋಚಿಸಲು ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

    ಬಿಹಾರದ ಭಾಗಲ್ಪುರದಲ್ಲಿ ನಡೆದ ರ‍್ಯಾಲಿಯಲ್ಲಿ ಅವರು ಮಾತನಾಡಿದರು. ಈ ವೇಳೆ, ಮಹಾಕುಂಭ ಮೇಳ ಕುರಿತು ಬಿಜೆಪಿ ವಿರುದ್ಧ ಆರ್‌ಜೆಡಿ ನಾಯಕರ ಟೀಕೆಗಳನ್ನು ಉಲ್ಲೇಖಿಸಿ, ಜಂಗಲ್‌ ರಾಜ್ಯದವ್ರು ನಮ್ಮ ಪರಂಪರೆ ಮತ್ತು ನಂಬಿಕೆಯನ್ನು ದ್ವೇಷಿಸುತ್ತಾರೆ. ಯುರೋಪಿನ ಇಡೀ ಜನಸಂಖ್ಯೆಗಿಂತ ಹೆಚ್ಚಿನ ಜನರು ಈ ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ಇಂತಹ ಪವಿತ್ರ ಆಚರಣೆಯನ್ನು ಟೀಕಿಸುತ್ತಿದ್ದಾರೆ. ರಾಮ ಮಂದಿರವನ್ನು ವಿರೋಧಿಸುವವರು ಮಹಾ ಕುಂಭದ ಬಗ್ಗೆ ಅಪಪ್ರಚಾರ ಮಾಡಲು ಪ್ರತಿಯೊಂದು ಅವಕಾಶವನ್ನೂ ಬಳಸಿಕೊಳ್ಳುತ್ತಿದ್ದಾರೆ. ಈ ರೀತಿ ಕೆಟ್ಟದಾಗಿ ಮಾತನಾಡುವವರನ್ನು ಬಿಹಾರದ ಜನರು ಎಂದಿಗೂ ಕ್ಷಮಿಸುವುದಿಲ್ಲ ಎಂದು ನನಗೆ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.

    ಕೇಂದ್ರ ಮತ್ತು ಬಿಹಾರದಲ್ಲಿ ಎನ್‌ಡಿಎ ಸರ್ಕಾರ ಯಾವಾಗಲೂ ರೈತರ ಕಲ್ಯಾಣಕ್ಕೆ ಆದ್ಯತೆ ನೀಡುತ್ತದೆ. ಈ ಸರ್ಕಾರ ಅಧಿಕಾರದಲ್ಲಿಲ್ಲದಿದ್ದರೆ, ದೇಶಾದ್ಯಂತ ನನ್ನ ರೈತ ಸಹೋದರ ಸಹೋದರಿಯರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ ಪ್ರಯೋಜನಗಳನ್ನು ಪಡೆಯುತ್ತಿರಲಿಲ್ಲ. ಸರ್ಕಾರದ ಪ್ರಯತ್ನಗಳಿಂದಾಗಿ ಇತ್ತೀಚಿನ ವರ್ಷಗಳಲ್ಲಿ ಭಾರತದ ಕೃಷಿ ರಫ್ತು ಗಮನಾರ್ಹವಾಗಿ ಹೆಚ್ಚಾಗಿದೆ ಎಂದಿದ್ದಾರೆ.

    ನಮ್ಮ ಸರ್ಕಾರದ ಅವಧಿಯಲ್ಲಿ ಹಲವಾರು ಕೃಷಿ ಉತ್ಪನ್ನಗಳನ್ನು ಮೊದಲ ಬಾರಿಗೆ ರಫ್ತು ಮಾಡಲಾಗಿದೆ. ಈಗ, ಬಿಹಾರದ ಮಖಾನಾ (ಫಾಕ್ಸ್‌ನಟ್) ಆ ಅವಕಾಶ ಸಿಕ್ಕಿದೆ. ಇದು ಜಾಗತಿಕ ಮಾರುಕಟ್ಟೆಗಳನ್ನು ತಲುಪಬೇಕಾದ ಸೂಪರ್‌ಫುಡ್ ಆಗಿದೆ. ಈ ವರ್ಷದ ಬಜೆಟ್‌ನಲ್ಲಿ, ಸರ್ಕಾರವು ಮಖಾನಾ ಮಂಡಳಿಯನ್ನು ಸ್ಥಾಪಿಸುವುದಾಗಿ ಘೋಷಿಸಿದೆ. ಅದನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದಿದ್ದಾರೆ.

  • ನೂತನ ಸಂಸತ್ ಭವನವನ್ನು ಶವಪೆಟ್ಟಿಗೆಗೆ ಹೋಲಿಸಿದ ಆರ್‌ಜೆಡಿ – ಕಾನೂನು ಸಮರಕ್ಕೆ ಮುಂದಾದ ಬಿಜೆಪಿ

    ನೂತನ ಸಂಸತ್ ಭವನವನ್ನು ಶವಪೆಟ್ಟಿಗೆಗೆ ಹೋಲಿಸಿದ ಆರ್‌ಜೆಡಿ – ಕಾನೂನು ಸಮರಕ್ಕೆ ಮುಂದಾದ ಬಿಜೆಪಿ

    ನವದೆಹಲಿ: ಹೊಸ ಸಂಸತ್ ಭವನವನ್ನು ಶವಪೆಟ್ಟಿಗೆಗೆ (Coffin) ಹೋಲಿಸಿ ಟ್ವೀಟ್ ಮಾಡಿದ ರಾಷ್ಟ್ರೀಯ ಜನತಾ ದಳದ (Rashtriya Janata Dal) ವಿರುದ್ಧ ದೇಶದ್ರೋಹದ ಪ್ರಕರಣವನ್ನು ದಾಖಲಿಸಲು ಬಿಜೆಪಿ (BJP) ಮುಂದಾಗಿದೆ.

    ಶವಪೆಟ್ಟಿಗೆಯ ಆಕಾರಕ್ಕೆ ಹೋಲಿಸಿದ ಟ್ವೀಟ್‍ಗೆ ಬಿಜೆಪಿ, ಆರ್‌ಜೆಡಿ (RJD) ವಿರುದ್ಧ ವಾಗ್ದಾಳಿ ನಡೆಸಿದೆ. ಅಲ್ಲದೆ ಟ್ವಿಟರ್ ಪೋಸ್ಟ್‌ನ ಹಿಂದೆ ಇರುವವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಎಂದು ಹೇಳಿಕೊಂಡಿದೆ. ಇದನ್ನೂ ಓದಿ: ನೂತನ ಸಂಸತ್ ಉದ್ಘಾಟನೆಗೂ ಮುನ್ನ ಕಾರ್ಮಿಕರನ್ನು ಸನ್ಮಾನಿಸಿದ ಮೋದಿ

    ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಮುಖಂಡ ಸುಶೀಲ್ ಕುಮಾರ್ ಮೋದಿಯವರು, ಹೊಸ ಸಂಸತ್ತಿನ ಕಟ್ಟಡವನ್ನು ಸಾರ್ವಜನಿಕ ಹಣದಿಂದ ನಿರ್ಮಿಸಲಾಗಿದೆ. ಅದನ್ನು ಶವ ಪೆಟ್ಟಿಗೆಗೆ ಹೋಲಿಸಿರುವುದು ದುರದೃಷ್ಟಕರ ವಿಷಯವಾಗಿದೆ. ಅಲ್ಲದೆ ಸಂಸತ್ ಉದ್ಘಾಟನೆ ಬಹಿಷ್ಕರಿಸಿರುವವರು ಸಂಸತ್ತಿನ ಕಲಾಪಕ್ಕೆ ಹಾಜರಾಗುತ್ತಾರೆ. ಅವರೇನು ಶಾಶ್ವತವಾಗಿ ಸಂಸತ್ತನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರಾ? ಅವರ ಲೋಕಸಭೆ ಮತ್ತು ರಾಜ್ಯಸಭೆಯ ಸ್ಥಾನಗಳಿಗೆ ರಾಜೀನಾಮೆ ನೀಡುತ್ತಾರೆಯೇ? ಎಂದು ಕುಟುಕಿದ್ದಾರೆ.

    ಇಂದು ಶವಪೆಟ್ಟಿಗೆಗೆ ಹೋಲಿಸಿದವರನ್ನು, ದೇಶದ ಜನರು 2024 ರಲ್ಲಿ ಅದೇ ಶವಪೆಟ್ಟಿಗೆಯಲ್ಲಿ ಹೂಳುತ್ತಾರೆ. ಜನರು ಪ್ರಜಾಪ್ರಭುತ್ವದ ಹೊಸ ಮಂದಿರವನ್ನು ಪ್ರವೇಶಿಸಲು ನಿಮಗೆ ಅವಕಾಶ ನೀಡುವುದಿಲ್ಲ ಎಂದು ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಕಿಡಿಕಾರಿದ್ದಾರೆ.

    ಆರ್‌ಜೆಡಿಯ ಟ್ವೀಟ್ ಸಮರ್ಥಿಸಿಕೊಂಡಿರುವ ಪಕ್ಷದ ಮುಖಂಡ ಶಕ್ತಿ ಸಿಂಗ್ ಯಾದವ್, ನಮ್ಮ ಟ್ವೀಟ್‍ನಲ್ಲಿರುವ ಶವಪೆಟ್ಟಿಗೆಯು ಬಿಜೆಪಿ ಪ್ರಜಾಪ್ರಭುತ್ವವನ್ನು ಸಮಾಧಿ ಮಾಡುತ್ತಿರುವುದನ್ನು ಪ್ರತಿನಿಧಿಸುತ್ತದೆ ಎಂದಿದ್ದಾರೆ.

    ತೇಜಸ್ವಿ ಯಾದವ್ ನೇತೃತ್ವದ ಆರ್‌ಜೆಡಿ ಸೇರಿದಂತೆ 20 ರಾಜಕೀಯ ಪಕ್ಷಗಳು ಹೊಸ ಸಂಸತ್ತಿನ ಉದ್ಘಾಟನೆಯನ್ನು ಬಹಿಷ್ಕರಿಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಹೊಸ ಕಟ್ಟಡವನ್ನು ಏಕೆ ಉದ್ಘಾಟಿಸುತ್ತಿದ್ದಾರೆ ಎಂದು ಪ್ರಶ್ನಿಸಿವೆ. ರಾಷ್ಟ್ರಧ್ಯಕ್ಷೆ ದ್ರೌಪದಿ ಮುರ್ಮು (Droupadi Murmu) ಅವರನ್ನು ಸಂಪೂರ್ಣವಾಗಿ ಬದಿಗೊತ್ತಿ ನೂತನ ಸಂಸತ್ ಭವನವನ್ನು ತಾವೇ ಉದ್ಘಾಟಿಸುವ ಪ್ರಧಾನಿ ಮೋದಿಯವರ ನಿರ್ಧಾರ ಸರಿಯಲ್ಲ. ಅಲ್ಲದೆ ಇದು ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿಯಾಗಿದೆ ಎಂದು ಪ್ರತಿಪಕ್ಷಗಳು ವಾಗ್ದಾಳಿ ನಡೆಸಿವೆ. ಇದನ್ನೂ ಓದಿ: ಭಾರತದ ನೂತನ ಸಂಸತ್ ಭವನಕ್ಕೆ ದೇಶದ ವಿವಿಧತೆಯ ಮೆರುಗು