Tag: rastrapathi bhavan

  • ಮೋದಿ ಪ್ರಮಾಣವಚನಕ್ಕೆ ವಿದೇಶಿ ಗಣ್ಯರು, ಪೌರಕಾರ್ಮಿಕರು- ಕಾರ್ಯಕ್ರಮಕ್ಕೆ ಯಾರಿಗೆಲ್ಲ ಆಹ್ವಾನ?

    ಮೋದಿ ಪ್ರಮಾಣವಚನಕ್ಕೆ ವಿದೇಶಿ ಗಣ್ಯರು, ಪೌರಕಾರ್ಮಿಕರು- ಕಾರ್ಯಕ್ರಮಕ್ಕೆ ಯಾರಿಗೆಲ್ಲ ಆಹ್ವಾನ?

    – ರಾಷ್ಟ್ರಪತಿ ಭವನದ ಬಳಿ ಟೈಟ್ ಸೆಕ್ಯೂರಿಟಿ

    ನವದೆಹಲಿ: ಭಾನುವಾರ ಸಂಜೆ 7:15 ಕ್ಕೆ ನರೇಂದ್ರ ಮೋದಿಯವರು ಮೂರನೇ ಬಾರಿ ಪ್ರಧಾನಿಯಾಗಿ ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಪೌರ ಕಾರ್ಮಿಕರಿಂದ ಹಿಡಿದು ವಿದೇಶಿ ಗಣ್ಯರು ಕೂಡ ಸಾಕ್ಷಿಯಾಗಲಿದ್ದಾರೆ.

    ಮೋದಿ ಹ್ಯಾಟ್ರಿಕ್ ಸಾಧನೆಯ ಈ ಸಮಾರಂಭಕ್ಕೆ 8 ರಿಂದ 9 ಸಾವಿರ ಮಂದಿ ಅತಿಥಿಗಳಿಗೆ ಆಹ್ವಾನ ನೀಡಿದ್ದು, ರಾಷ್ಟ್ರಪತಿ ಭವನದ (Rastrapathi Bhavan) ಮುಂಭಾಗದಲ್ಲಿ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

    ಯಾರೆಗೆಲ್ಲ ಆಹ್ವಾನ..?: ಮೋದಿ (Narendra Modi) ಪ್ರಮಾಣ ವಚನ ಕಾರ್ಯಕ್ರಮಕ್ಕೆ ಪೌರ ಕಾರ್ಮಿಕರು, ಸೆಂಟ್ರಲ್ ವಿಸ್ತಾ ಯೋಜನೆ, ನೂತನ ಸಂಸತ್ ಕಟ್ಟಡ ನಿರ್ಮಾಣ ಕಾರ್ಮಿಕರು, ತೃತೀಯ ಲಿಂಗಿಗಳು, ಕೇಂದ್ರ ಸರ್ಕಾರದ ಕಲ್ಯಾಣ ಯೋಜನೆಗಳ ಫಲಾನುಭವಿಗಳು, ಉತ್ತರಾಖಂಡ್ ಗಣಿ ಕಾರ್ಮಿಕರ ರಕ್ಷಿಸಿದ ತಂಡ, ವಂದೇ ಭಾರತ್, ಮೆಟ್ರೋದಂಥ ರೈಲ್ವೆ ಯೋಜನೆಯಲ್ಲಿ ಪ್ರಮುಖ ಪಾತ್ರವಹಿಸಿದವರು, ಎಲ್ಲಾ ಧರ್ಮಗಳ 50 ಧರ್ಮ ಗುರುಗಳಿಗೂ ಜೊತೆಗೆ ಪದ್ಮಭೂಷಣ, ಪದ್ಮವಿಭೂಷಣ, ಪದ್ಮಶ್ರೀ ಪುರಸ್ಕøತರಿಗೆ, ವಿಕಸಿತ ಭಾರತ್ ಅಂಬಾಸಿಡರ್‍ಗಳು ಹಾಗೂ ಆದಿವಾಸಿ ಮಹಿಳೆಯರಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ.

    ವಿದೇಶಿ ಗಣ್ಯರು ಯಾರ‍್ಯಾರು..?: ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ, ಸೀಷೆಲ್ಸ್ ಅಧ್ಯಕ್ಷ ವಾವೆಲ್ ರಾಮ್‍ಕಾಲಾವನ್, ಭೂತಾನ್ ಪ್ರಧಾನಿ ತ್ಶೆರಿಂಗ್ ತೋಗ್ಬೆ, ಮಾರಿಷಸ್ ಪ್ರಧಾನಿ ಪ್ರವೀಂದ್ ಜುಗ್ನಾಥ್, ಬಾಂಗ್ಲಾ ದೇಶದ ಪ್ರಧಾನಿ ಶೇಖ್ ಹಸೀನಾ, ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಲ್ ಹಾಗೂ ಮಾಲ್ಡಿವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜುಗೆ ಆಹ್ವಾನ ನೀಡಲಾಗಿದೆ.

    ರಾಷ್ಟ್ರಪತಿ ಭವನದ ಸುತ್ತ ಬಿಗಿಭದ್ರತೆ: ಮೋದಿ ಪ್ರಮಾಣ ವಚನ ಕಾರ್ಯಕ್ರಮ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಭವನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗುತ್ತಿದೆ. ದೆಹಲಿ ಪೊಲೀಸರು 5 ಹಂತದಲ್ಲಿ ಭದ್ರತೆ ಹೆಚ್ಚಿಸಿದ್ದಾರೆ. ಅರೆಸೈನಿಕ ಸಿಬ್ಬಂದಿ, ಎನ್‍ಎಸ್‍ಜಿ ಕಮಾಂಡೋಗಳು, ಡ್ರೋನ್‍ಗಳು, ಸ್ನೈಪರ್‍ಗಳ ಸೇರಿ ಬಹು ಹಂತದ ಭದ್ರತೆ ಕೈಗೊಳ್ಳಲಾಗುತ್ತಿದೆ.

    ರಾಷ್ಟ್ರಪತಿ ಭವನದ ಒಳಗೆ ಹಾಗೂ ಹೊರಗೆ 3 ಹಂತದಲ್ಲಿ ಭದ್ರತೆ ನೀಡಲಾಗುತ್ತಿದ್ದು, 5 ಕಂಪನಿಗಳ ಅರೆಸೇನಾಪಡೆ, ದೆಹಲಿ ಸಶಸ್ತ್ರ ಪೊಲೀಸ್ ಹೀಗೆ ಭದ್ರತೆಗಾಗಿ 2,500 ಪೊಲೀಸರ ಸುತ್ತಲೂ ನೇಮಕ ಮಾಡಲಾಗಿದೆ. ಗಣ್ಯರ ಮಾರ್ಗದಲ್ಲಿ ಸ್ನೈಪರ್‍ಗಳು, ಶಸ್ತ್ರಸಜ್ಜಿತ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ವಿದೇಶಿ ಗಣ್ಯರು ಉಳಿಯುವ ಲೀಲಾ, ತಾಜ್, ಐಟಿಸಿ ಮೌರ್ಯ, ಕ್ಲಾರಿಡ್ಜಸ್ ಮತ್ತು ಒಬೆರಾಯ್ ಹೋಟೆಲ್‍ಗಳಲ್ಲೂ ಜಿ20 ಮಾದರಿಯಲ್ಲೇ ವಿಶೇಷ ಭದ್ರತೆ ನಿಯೋಜನೆ ಮಾಡಲಾಗಿದೆ.

  • ರಾಷ್ಟ್ರಪತಿ ಭವನಕ್ಕೆ ಕೊರೊನಾ ಭೀತಿ-125 ಕುಟುಂಬ ಕ್ವಾರಂಟೈನ್

    ರಾಷ್ಟ್ರಪತಿ ಭವನಕ್ಕೆ ಕೊರೊನಾ ಭೀತಿ-125 ಕುಟುಂಬ ಕ್ವಾರಂಟೈನ್

    ನವದೆಹಲಿ: ಪ್ರಪಂಚದಾದ್ಯಂತ ಹಬ್ಬುತ್ತಿರುವ ಮಹಾಮಾರಿ ಕೊರೊನಾ ಭೀತಿ ಇದೀಗ ದೆಹಲಿಯಲ್ಲಿರುವ ರಾಷ್ಟ್ರಪತಿ ಭವನಕ್ಕೂ ತಟ್ಟಿದೆ. ಭವನದ ಕಾಂಪ್ಲೆಕ್ಸ್ ನಲ್ಲಿ ವಾಸವಾಗಿರುವ ಮಹಿಳೆಯೊಬ್ಬರಿಗೆ ಕೊರೊನಾ ಬಂದಿದ್ದು, ಇದೀಗ ಸುತ್ತಮುತ್ತಲಿರುವ 125 ಕುಟುಂಬವನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ.

    ಕೊರೊನಾ ಪಾಸಿಟಿವ್ ಬಂದಿರುವ ಮಹಿಳೆ ರಾಷ್ಟ್ರಪತಿ ಭವನದಲ್ಲಿ ಸ್ವಚ್ಛತಾ ಕಾರ್ಯ ಮಾಡುತ್ತಿರುವ ವ್ಯಕ್ತಿಯ ಸಂಬಂಧಿಯಾಗಿದ್ದಾರೆ. ಇತ್ತೀಚೆಗೆ ಮಹಿಳೆಯ ಸೊಸೆ ತಾಯಿ ಕೋವಿಡ್ 19ಗೆ ಬಲಿಯಾಗಿದ್ದರು. ಹೀಗಾಗಿ ಕುಟುಂಬದವರೆಲ್ಲ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದರು. ಸದ್ಯ ಮಹಿಳೆಯ ಕುಟುಂಬದವರಿಗೆ ಕೊರೊನಾ ನೆಗೆಟಿವ್ ಎಂಬುದಾಗಿ ವರದಿ ಬಂದಿದ್ದು, ಎಲ್ಲರನ್ನೂ ಐಸೋಲೇಷನ್ ನಲ್ಲಿಡಲಾಗಿದೆ.

    ಸೊಸೆಗೂ ಕೊರೊನಾ ಪಾಸಿಟಿವ್ ಎಂಬುದಾಗಿ ಸೋಮವಾರ ವರದಿ ಬಂದಿದೆ. ಈಕೆಯ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದವರಿಗೆಲ್ಲ ನೆಗೆಟಿವ್ ಎಂಬುದಾಗಿ ವರದಿ ಬಂದಿದೆ. ಸದ್ಯ ರಾಷ್ಟ್ರಪತಿ ಭವನದ ಸುತ್ತಮುತ್ತ ಇರೋ 125 ಮನೆಗಳ ಸದಸ್ಯರನ್ನು ಹೋಂ ಕ್ವಾರಂಟೈನ್ ನಲ್ಲಿಡಲಾಗಿದ್ದು, ಒಂದೇ ಬ್ಲಾಕ್ ನಲ್ಲಿರುವ 25 ಮನೆಗಳನ್ನು ಕಟ್ಟುನಿಟ್ಟಾಗಿ ಪ್ರತ್ಯೇಕಿಸಲಾಗಿದೆ.

    ಭಾರತದಲ್ಲಿ ಕೊರೊನಾ ಸೋಂಕಿತ ಸಂಖ್ಯೆ 18 ಸಾವುರಕ್ಕೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 47 ಮಂದಿ ಸಾವನ್ನಪಿದ್ದಾರೆ. ಹೀಗಾಗಿ ಕೊರೊನಾಗೆ ಒಟ್ಟು 590 ಮಂದಿ ಬಲಿಯಾಗಿದ್ದು, 3,252 ಮಂದಿ ಗುಣಮುಖರಾಗಿದ್ದಾರೆ.