Tag: Ration rice

  • ಯಾದಗಿರಿಯಲ್ಲಿ ಪಡಿತರ ಅಕ್ಕಿಗೆ ಕನ್ನ – 69,000 ರೂ. ಮೌಲ್ಯದ ಅಕ್ಕಿ ವಶ

    ಯಾದಗಿರಿಯಲ್ಲಿ ಪಡಿತರ ಅಕ್ಕಿಗೆ ಕನ್ನ – 69,000 ರೂ. ಮೌಲ್ಯದ ಅಕ್ಕಿ ವಶ

    ಯಾದಗಿರಿ: 2 ಕೋಟಿ ರೂ. ಮೌಲ್ಯದ 6,077 ಕ್ವಿಂಟಲ್ ಪಡಿತರ ಅಕ್ಕಿ ಕಳ್ಳತನ ಪ್ರಕರಣದ ತನಿಖೆ ನಡೆಯುತ್ತಿರುವ ಹೊತ್ತಿನಲ್ಲೇ ಮತ್ತೊಂದು ಪ್ರಕರಣ ಯಾದಗಿರಿಯಲ್ಲಿ (Yadgir) ಬೆಳಕಿಗೆ ಬಂದಿದೆ.

    ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ವಿತರಿಸುವ ಪಡಿತರ ಅಕ್ಕಿಗೆ (Ration Rice) ಕನ್ನ ಹಾಕಿರುವ ಘಟನೆ ರಾಯಚೂರಿನ ಸುರಪುರದಲ್ಲಿ ನಡೆದಿದೆ. ಇದನ್ನೂ ಓದಿ: ಚುನಾವಣೆ ಟಿಕೆಟ್ ಕೊಡಿಸೋದಾಗಿ ಹಣ ಪಡೆದು ವಂಚಿಸಿದ ಡ್ರೋನ್ ‍ಪ್ರತಾಪ್: ದೂರು ದಾಖಲು

    ಟಾಟಾ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಾಟ ಮಾಡಲಾಗುತ್ತಿತ್ತು. ಯಾದಗಿರಿ ಜಿಲ್ಲೆಯ ಸುರಪುರದಿಂದ ರಾಯಚೂರು ಜಿಲ್ಲೆಯ ಲಿಂಗಸೂರಿಗೆ ಸಾಗಾಟಮಾಡಲಾಗುತ್ತಿತ್ತು. ಈ ಸಂಬಂಧ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸುರಪುರ ಠಾಣೆ ಪೊಲೀಸರು 69,000 ರೂ. ಮೌಲ್ಯದ ಪಡಿತರ ಅಕ್ಕಿಯನ್ನ ವಶಪಡಿಸಿಕೊಂಡಿದ್ದಾರೆ.

    50 ಕೆಜಿಯ 45 ಪ್ಲಾಸ್ಟಿಕ್ ಚೀಲಗಳಲ್ಲಿ ತುಂಬಿದ್ದ ಪಡಿತರ ಅಕ್ಕಿ ಪತ್ತೆಯಾಗಿದ್ದು, ಗೂಡ್ಸ್ ವಾಹನದಲ್ಲಿ ಪತ್ತೆಯಾಗಿದೆ. ಪೊಲೀಸರು ತಡೆಹಿಡಿಯುತ್ತಿದ್ದಂತೆ ಚಾಲಕ ಅಲ್ಲೇ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಇದನ್ನೂ ಓದಿ: ಪಂಜಾಬ್‌ ರಾಜ್ಯಪಾಲ ಸ್ಥಾನಕ್ಕೆ ಬನ್ವಾರಿಲಾಲ್ ಪುರೋಹಿತ್ ರಾಜೀನಾಮೆ

    ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಾರಿಯಾದ ಚಾಲಕನನ್ನ ಬಂಧಿಸಲು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಪೂನಂ ಅರೆಸ್ಟ್ ಮಾಡಿ: ‘ಬಾಯ್ಕಾಟ್‌ ಪಾಂಡೆ’ ಟ್ರೆಂಡ್ ಶುರು

  • 6,000 ಕ್ವಿಂಟಾಲ್ ಪಡಿತರ ಅಕ್ಕಿ ಕಳ್ಳತನ ಕೇಸ್ – ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಸಹೋದರ ಅರೆಸ್ಟ್

    6,000 ಕ್ವಿಂಟಾಲ್ ಪಡಿತರ ಅಕ್ಕಿ ಕಳ್ಳತನ ಕೇಸ್ – ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಸಹೋದರ ಅರೆಸ್ಟ್

    ಯಾದಗಿರಿ: ಯಾದಗಿರಿ (Yagdiri) ಜಿಲ್ಲೆಯ ಶಹಾಪುರದ ಗೋದಾಮಿನಲ್ಲಿದ್ದ 6 ಸಾವಿರ ಕ್ವಿಂಟಾಲ್ ಪಡಿತರ ಅಕ್ಕಿ (Ration Rice) ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ (BJP) ಮುಖಂಡ ಮಣಿಕಂಠ ರಾಠೋಡ್ (Manikanta Rathod) ಅವರ ಸಹೋದರ ರಾಜು ರಾಠೋಡ್‌ನನ್ನ (Raju Rathod) ಬಂಧಿಸಲಾಗಿದೆ.

    ರಾಜು ರಾಠೋಡ್‌ಗೆ ಸೇರಿದ ಗುರುಮಠಕಲ್‌ನಲ್ಲಿನ ಲಕ್ಷ್ಮಿ ತಿಮ್ಮಪ್ಪ ವೇರ್ ಹೌಸ್ ಗೋಡೌನ್‌ನಲ್ಲಿ 550 ಕ್ವಿಂಟಾಲ್ ಪಡಿತರ ಅಕ್ಕಿ ಸೀಜ್ ಮಾಡಿದ ಸುರಪುರ ಡಿವೈಎಸ್ಪಿ ಜಾವೇದ್ ಇನಾಮ್ದಾರ್ ಹಾಗೂ ಸುರಪುರ ಸಿಪಿಐ ಎಸ್.ಎಂ ಪಾಟೀಲ್ ನೇತೃತ್ವದ ತಂಡ ತಡರಾತ್ರಿ ರಾಜು ರಾಠೋಡ್‌ನನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಇದನ್ನೂ ಓದಿ: ಚಿತ್ರದುರ್ಗದಲ್ಲಿಂದು ಶೋಷಿತ ಸಮುದಾಯಗಳ ಬೃಹತ್ ಸಮಾವೇಶ – 2 ಲಕ್ಷಕ್ಕೂ ಅಧಿಕ ಜನ ಭಾಗಿ ನಿರೀಕ್ಷೆ

    ಕಳೆದ 15 ದಿನಗಳ ಹಿಂದೆ ಇದೇ ರಾಜು ರಾಠೋಡ್ ಒಡೆತನದ ಲಕ್ಷ್ಮಿ ವೆಂಕಟೇಶ್ವರ ರೈಸ್ ಮಿಲ್‌ನಲ್ಲಿ ಬರೋಬ್ಬರಿ 700 ಕ್ವಿಂಟಾಲ್ ಪಡಿತರ ಅಕ್ಕಿ ವಶಕ್ಕೆ ಪಡೆಯಲಾಗಿತ್ತು. ಈ ಘಟನೆಯ ನಂತರ ತಲೆ ಮರೆಸಿಕೊಂಡಿದ್ದ ರಾಜು ರಾಠೋಡ್ ವಾರದ ಹಿಂದೆ ಬೇಲ್ ಪಡೆದಿದ್ದ. ಶನಿವಾರ ತಡರಾತ್ರಿ ಮತ್ತೆ ದಾಳಿ ಮಾಡಿದ ಪೊಲೀಸರಿಗೆ ವೇರ್‌ಹೌಸ್‌ನಲ್ಲಿ ಸಂಗ್ರಹಿಸಿಟ್ಟಿದ್ದ ಅಕ್ಕಿ ಪತ್ತೆಯಾಗಿದೆ. ಇದನ್ನೂ ಓದಿ: ಕಾರ್ಯಕ್ರಮದ ನಡುವೆ ಯತೀಂದ್ರ ಸಿದ್ದರಾಮಯ್ಯಗೆ ಅವಾಚ್ಯ ಶಬ್ದಗಳಿಂದ ನಿಂದನೆ – ವ್ಯಕ್ತಿ ಬಂಧನ

    ಈ ಹಿಂದೆ ಇದೇ ಅಕ್ಕಿ ಕಳ್ಳತನ ಕೇಸ್ ನಲ್ಲಿ ಶಹಾಪುರ ಪೊಲೀಸರು ತನ್ನನ್ನ ಬಂಧಿಸಿದ್ದಾರೆ ಎಂದು ದೆಹಲಿಯಿಂದಲೇ ಹೇಳಿಕೊಂಡಿದ್ದ ಮಣಿಕಂಠ ರಾಠೋಡ್ ತದನಂತರ ಬಂಧನಕ್ಕೆ ಒಳಗಾಗದೇ ನೇಪಾಳದ ಕಠ್ಮಂಡುವಿಗೆ ಪ್ರಯಾಣ ಬೆಳೆಸಿದ್ದ. ಇದೀಗ ಮಣಿಕಂಠ ರಾಠೋಡ್ ಸಹೋದರ ರಾಜು ರಾಠೋಡ್ ನನ್ನ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಜಾಗದಲ್ಲಿ ಸಿಕ್ಕ ಶಾಸನಕ್ಕೂ, ಕೋಲಾರಮ್ಮ ದೇವಾಲಯದ ಶಾಸನಕ್ಕೂ ಇದೆ ಲಿಂಕ್!

  • ಸಚಿವ ಶರಣಬಸಪ್ಪ ದರ್ಶನಾಪೂರ ಕ್ಷೇತ್ರದಲ್ಲೇ 6,000 ಕ್ವಿಂಟಲ್‌ ಪಡಿತರ ಅಕ್ಕಿಗೆ ಕನ್ನ!

    ಸಚಿವ ಶರಣಬಸಪ್ಪ ದರ್ಶನಾಪೂರ ಕ್ಷೇತ್ರದಲ್ಲೇ 6,000 ಕ್ವಿಂಟಲ್‌ ಪಡಿತರ ಅಕ್ಕಿಗೆ ಕನ್ನ!

    – ಬರೋಬ್ಬರಿ 2.66 ಕೋಟಿ ಮೌಲ್ಯದ ಪಡಿತರ ಅಕ್ಕಿ ಕಳವು

    ಯಾದಗಿರಿ: ಯಾದಗಿರಿಯಲ್ಲಿ (Yadgir) ಅನ್ನ ಭಾಗ್ಯ ಅಕ್ಕಿಗೆ ಕನ್ನ ಹಾಕಿರೋ ಘಟನೆ ನಡೆದಿದೆ. ಬೇಲಿಯೇ ಎದ್ದು ಹೊಲ ಮೇಯ್ದಂತಾಗಿರೋ ಈ ಪ್ರಕರಣದಲ್ಲಿ ಪಡಿತರ ಅಕ್ಕಿ ಸಂಗ್ರಹಿಸಿಟ್ಟಿದ್ದ ಗೋದಾಮಿನಿಂದಲೇ ಕಳ್ಳತನವಾಗಿದೆ. ಯಾದಗಿರಿ ಜಿಲ್ಲಾಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ (Sharanabasappa Darshanapur) ಅವರ ಕ್ಷೇತ್ರದ ಸರ್ಕಾರಿ ಗೋದಾಮಿನಲ್ಲಿ ಅಕ್ಕಿ ನಾಪತ್ತೆಯಾಗಿರುವ ಘಟನೆ ನಡೆದಿದೆ.

    ಜಿಲ್ಲೆಯ ಶಹಾಪುರ ನಗರದ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಗೋದಾಮಿನಲ್ಲಿ ಪಡಿತರ ಅಕ್ಕಿ‌ (Ration Rice) ಪರಿಶೀಲನೆ ವೇಳೆ ವ್ಯತ್ಯಾಸ ಕಂಡುಬಂದ ನಂತರ ಪ್ರಕರಣ ಬೆಳಕಿಗೆ ಬಂದಿದೆ.

    ನ್ಯಾಯಬೆಲೆ ಅಂಗಡಿಗೆ ಸಾಗಾಟ ಮಾಡಬೇಕಾದ ಅಕ್ಕಿಯನ್ನ ಅಧಿಕಾರಿಗಳೇ ಸಾಗಾಟ ಮಾಡಿದ್ರಾ ಎಂಬ ಅನುಮಾನ ಕಾಡುತ್ತಿದೆ. ಕಳೆದ ಜೂನ್‌ 2 ರಿಂದ ನವೆಂಬರ್‌ 23ರ ಅವಧಿಯಲ್ಲಿ ಪಡಿತರ ಗೋಲ್ಮಾಲ್ ನಡೆದಿದೆ. ತಂತ್ರಾಂಶದಲ್ಲಿ ತೋರಿಸಿದ ದಾಸ್ತಾನಿಗೂ ಭೌತಿಕ ದಾಸ್ತಾನಿಗೂ ಅಜಗಜಾಂತರ ವ್ಯತ್ಯಾಸ ಕಂಡು ಬಂದಿದೆ. 6,077 ಕ್ವಿಂಟಲ್‌ನಷ್ಟು ಪಡಿತರ ಅಕ್ಕಿಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಆಹಾರ ಇಲಾಖೆಯ (Food and Civil Supplies Department) ಉಪನಿರ್ದೇಶಕ ಭೀಮರಾಯ ಅವರು ಗೋದಾಮು ಪರಿಶೀಲನೆ ಮಾಡಿದಾಗ 2.66 ಕೋಟಿ ಮೌಲ್ಯದ ಅಕ್ಕಿ ಕಳವಾಗಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಸೋಶಿಯಲ್‌ ಮೀಡಿಯಾದಲ್ಲಿ ಯುವತಿಯರ ಫೋಟೋ ಬಳಸಿಕೊಂಡು ಲಕ್ಷ ಲಕ್ಷ ದೋಚಿದ ಖದೀಮ

    ಗೋದಾಮಿನ ಈಗಿನ ಮುಖ್ಯ ಕಾರ್ಯನಿರ್ವಾಹಕ ಶಿವಪ್ಪ ಹಾಗೂ ಈ ಹಿಂದಿನ ಸಿಇಒ ಶಿವರಾಜ ಅವರು ಸ್ವಂತ ಲಾಭಕ್ಕೆ ಬಳಸಿ ಸಾಗಾಟ ಮಾಡಿದ್ರಾ ಎಂಬ ಅನುಮಾನವಿದೆ. ಈ ಬಗ್ಗೆ ಶಹಾಪುರ ಠಾಣೆಯಲ್ಲಿ ಶಿವಪ್ಪ ಹಾಗೂ ಶಿವರಾಜ ಸಂಘದ ಆಡಳಿತ ಮಂಡಳಿ ವಿರುದ್ಧ ದೂರು ದಾಖಲಾಗಿದೆ.

    ಕಳೆದ ಜೂನ್ ತಿಂಗಳಲ್ಲಿ ಅಕ್ಕಿ ಸಹಿತ ಲಾರಿ ಕಳ್ಳತನ ಘಟನೆ ನಡೆದಿತ್ತು. ಈ ಘಟನೆ ನಂತರ ಆಹಾರ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳು ಎಚ್ಚೆತ್ತುಕೊಂಡು ಕಟ್ಟುನಿಟ್ಟಿನ ಕ್ರಮಕೈಗೊಂಡಿದ್ದರೇ ಇಂತಹ ಘಟನೆ ಮರುಕಳಿಸ್ತಿರಲಿಲ್ಲ. ಅದೇ ರೀತಿ ಗೋದಾಮಿನ ಸುತ್ತಲೂ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಮಾಡಿಲ್ಲ. ತಡೆಗೋಡೆ ಕೂಡ ನಿರ್ಮಾಣವಾಗಿಲ್ಲ. ಪಡಿತರ ಸಾಗಾಟ ಮಾಡುವ ಲಾರಿಗಳಿಗೆ ಜಿಪಿಎಸ್ ಅಳವಡಿಕೆ ಮಾಡಿಲ್ಲ. ಇದು ಕಳ್ಳತನಕ್ಕೆ ದಾರಿ ಮಾಡಿ ಕೊಟ್ಟಂತಾಗಿದೆ. 6 ತಿಂಗಳ ಅವಧಿಯಲ್ಲಿ 2.66 ಕೋಟಿ ಮೌಲ್ಯದ 6 ಸಾವಿರ ಕ್ವಿಂಟಲ್ ಪಡಿತರ ಅಕ್ಕಿ ಕಳ್ಳತನ ಆಗಿರೋದು ಗೊತ್ತಾದ ಬಳಿಕ ಕೇಸ್‌ ದಾಖಲಾಗಿದೆ.

    ಕೇಸ್ ದಾಖಲಾದ ಮೇಲೆ ಅಧಿಕಾರಿಗಳ ಮೊಬೈಲ್ ‌ಸ್ವಿಚ್ ಆಫ್‌ ಆಗಿದೆ. ಆಹಾರ ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಭೀಮರಾಯ ಅವರ ಮೊಬೈಲ್‌ ಕೂಡ ಆಫ್‌ ಆಗಿದ್ದು, ಮಾಹಿತಿ ನೀಡಲು ಹಿಂದೇಟು ಹಾಕ್ತಿದ್ದಾರೆ. ಇದನ್ನೂ ಓದಿ: ನಕಲಿ ಟಿಕೆಟ್ ತೋರಿಸಿ ಏರ್‌ಪೋರ್ಟ್ ಒಳಗೆ ನುಗ್ಗಿದ ಮಹಿಳೆ- ಎಫ್‍ಐಆರ್ ದಾಖಲು

    ಸದ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರೋ ಶಹಾಪುರ ಪೊಲೀಸರು ಎಸ್ಕೇಪ್ ಆಗಿರೋ ಆರೋಪಿಗಳ ಬೆನ್ನು ಬಿದ್ದಿದ್ದಾರೆ. ಆರೋಪಿಗಳಿಬ್ಬರೂ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆ ಆಗಿರೋದ್ರಿಂದ ಆರೋಪಿಗಳ ಮೊಬೈಲ್ ನಂಬರ್ ಲೊಕೇಷನ್ ಆಧಾರದಲ್ಲಿ ಹುಡುಕಾಟಕ್ಕೆ ಮುಂದಾಗಿದ್ದಾರೆ. ಇದರ ನಡುವೆ ಆರೋಪಿಗಳಿಗೆ ದೊಡ್ಡವರ ಶ್ರೀ ರಕ್ಷೆ ಇದೆ. ಅದರಿಂದಲೇ ಪಡಿತರ ಅಕ್ಕಿ ಕಳ್ಳತನ ಆಗ್ತಿದೆ ಅಂತ ಜನ ಆರೋಪಿಸುತ್ತಿದ್ದಾರೆ. ಹೀಗಾಗಿ ಪೊಲೀಸರು ಕೂಡಲೇ ಬಡವರ ಅನ್ನಕ್ಕೆ ಕನ್ನ ಹಾಕಿರೋ ಆರೋಪಿಗಳನ್ನ ಹೆಡೆಮುರಿ ಕಟ್ಟಿ, ಕಠಿಣ ಕ್ರಮ ಕೈಗೊಳ್ಳಬೇಕಿದೆ ಎಂದು ಜನ ಒತ್ತಾಯಿಸಿದ್ದಾರೆ.

  • ಶಹಾಪುರದಲ್ಲಿ 20 ಟನ್ ಪಡಿತರ ಅಕ್ಕಿ ಕಳ್ಳತನ ಪ್ರಕರಣ – ಖಾಲಿ ಲಾರಿ ಬಿಟ್ಟು ಖದೀಮರು ಪರಾರಿ

    ಶಹಾಪುರದಲ್ಲಿ 20 ಟನ್ ಪಡಿತರ ಅಕ್ಕಿ ಕಳ್ಳತನ ಪ್ರಕರಣ – ಖಾಲಿ ಲಾರಿ ಬಿಟ್ಟು ಖದೀಮರು ಪರಾರಿ

    ಯಾದಗಿರಿ: ಜಿಲ್ಲೆಯ ಶಹಾಪುರ (Shahapura) ನಗರದ ಎಪಿಎಂಸಿ ಬಳಿ ಅನ್ನಭಾಗ್ಯ ಅಕ್ಕಿ (Ration Rice) ಲೋಡ್ ಆಗಿದ್ದ ಲಾರಿಯನ್ನು (Lorry) ಮೇ. 29ರಂದು ರಾತ್ರಿ ಕಳ್ಳರು ಕದ್ದು ಪರಾರಿಯಾಗಿದ್ದರು. ಇದೀಗ ತಾಲೂಕಿನ ಹೊರ್ತಿ ಗ್ರಾಮದ ಹೊರವಲಯದಲ್ಲಿ ಖಾಲಿ ಲಾರಿ ಪತ್ತೆಯಾಗಿದೆ.

    ಲಾರಿಯಲ್ಲಿ ಲೋಡ್ ಆಗಿದ್ದ 7.50 ಲಕ್ಷ ರೂ. ಮೌಲ್ಯದ 20 ಟನ್ ಸರ್ಕಾರದ ಪಡಿತರ ಅಕ್ಕಿಯನ್ನು ಮಾತ್ರ ಎಗರಿಸಿರುವ ಕಳ್ಳರು ಖಾಲಿ ಲಾರಿಯನ್ನು ನಿಲ್ಲಿಸಿ ಪರಾರಿಯಾಗಿದ್ದಾರೆ. ಶಹಾಪುರ ಪೊಲೀಸರು ಇದೀಗ ವಿಶೇಷ ತಂಡ ರಚಿಸಿ ಚಾಲಾಕಿ ಕಳ್ಳರ ಬಂಧನಕ್ಕೆ ಜಾಲ ಬೀಸಿದ್ದಾರೆ.

    ಕಳ್ಳತನವಾಗಿದ್ದ ಲಾರಿ ಬಿಟ್ಟು ಹೋದದ್ದನ್ನು ನೋಡಿದರೆ ಇದು ಕಳ್ಳರು ಮಾಡಿದ ಕೆಲಸವಲ್ಲ. ಪಡಿತರ ಅಕ್ಕಿಯ ದಂಧೆಕೋರರ ಕೈವಾಡ ಈ ಕೃತ್ಯದ ಹಿಂದಿದೆ ಇದೆ ಎನ್ನುವ ಅನುಮಾನ ದಟ್ಟವಾಗಿ ಕಾಡಲಾರಂಭಿಸಿದೆ. ಇದನ್ನೂ ಓದಿ: ಪ್ರತಾಪ್ ಸಿಂಹ ಅಣ್ಣನವರು ಸರ್ವಜ್ಞ ಇದ್ದಂತೆ: ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು

    ಅಕ್ಕಿ ಲಾರಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಹಾಪುರ ಶಾಸಕ ಹಾಗೂ ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ಯಮಗಳ ಸಚಿವ ಶರಣಬಸಪ್ಪ ದರ್ಶನಾಪುರ ಪ್ರತಿಕ್ರಿಯಿಸಿ, ಈಗಾಗಲೇ ಖಾಲಿ ಲಾರಿ ಸಿಕ್ಕಿದೆ. ಅನ್ನಭಾಗ್ಯ ಅಕ್ಕಿ ಸಾಗಿಸುವ ಲಾರಿಗೆ ಜಿಪಿಎಸ್ ಅಳವಡಿಸಿರಬೇಕು. ಈ ವಿಷಯದಲ್ಲಿ ಅಧಿಕಾರಿಗಳ ನಿರ್ಲಕ್ಷ ಇದೆಯೋ, ಗುತ್ತಿಗೆದಾರರು ನಿಯಮ ಉಲ್ಲಂಘನೆ ಮಾಡಿದ್ದಾರೋ ಎಲ್ಲವನ್ನು ಕೂಡ ಕೂಲಕುಂಷವಾಗಿ ತನಿಖೆ ನಡೆಸಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಇಂಟರ್‌ಲಾಕ್ ಸಿಸ್ಟಮ್ ಸಮಸ್ಯೆಯಿಂದ ರೈಲು ಅಪಘಾತ ಸಂಭವಿಸಿದೆ – ರೈಲ್ವೇ ಸಚಿವ ಅಶ್ವಿನಿ ವೈಷ್ಣವ್

  • 20 ಟನ್ ಅಕ್ಕಿ ಕದ್ದೊಯ್ದ ಪ್ರಕರಣ – ಕಳುವಾದ ಲಾರಿಯಲ್ಲಿ ಇರಲೇ ಇಲ್ಲ GPS

    20 ಟನ್ ಅಕ್ಕಿ ಕದ್ದೊಯ್ದ ಪ್ರಕರಣ – ಕಳುವಾದ ಲಾರಿಯಲ್ಲಿ ಇರಲೇ ಇಲ್ಲ GPS

    ಯಾದಗಿರಿ: ಸಾಮಾನ್ಯವಾಗಿ ಸಣ್ಣ ಪುಟ್ಟ ಅಂಗಡಿಗಳಲ್ಲಿ 1-2 ಮೂಟೆ ಅಕ್ಕಿ (Rice) ಕದಿಯುವುದನ್ನು, ಐಷಾರಾಮಿ ಜೀವನ ನಡೆಸಲು ಹಣ ಕದಿಯೋದನ್ನು ನಾವು ಕೇಳಿರುತ್ತೇವೆ. ಆದರೆ ಬಡವರ ಹೊಟ್ಟೆ ತುಂಬಿಸುವ ಸಲುವಾಗಿ ಅನ್ನಭಾಗ್ಯ ಯೋಜನೆಯಡಿ ವಿತರಣೆ ಮಾಡಲು ಸಾಗಾಟ ಮಾಡುತ್ತಿದ್ದ ಅಕ್ಕಿ ತುಂಬಿದ ಲಾರಿಯನ್ನೇ ಕಳ್ಳತನ ಮಾಡಿರುವ ವಿಚಿತ್ರ ಘಟನೆ ಯಾದರಿಗಿಯಲ್ಲಿ (Yadagiri) ನಡೆದಿದೆ.

    ಬಡವರ ಹಸಿವು ನೀಗಿಸುವ ಸಲುವಾಗಿ ಸರ್ಕಾರ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು ಪ್ರತಿ ಕಾರ್ಡುದಾರ ಕುಟುಂಬಕ್ಕೆ ಐದೈದು ಕೆಜಿ ಅಕ್ಕಿಯನ್ನು ನೀಡುತ್ತಿದೆ. ಆಯಾ ನ್ಯಾಯಬೆಲೆ ಅಂಗಡಿಗಳಿಗೆ ಅಧಿಕೃತ ಪರವಾನಗಿ ಪಡೆದಿರುವ ವಾಹನಗಳ ಮೂಲಕ ಅಕ್ಕಿಯನ್ನು ಸಾಗಾಟ ಮಾಡಲಾಗುತ್ತದೆ. ಆದರೆ ನಿಯಮಗಳನ್ನು ಮೀರಿರುವ ಯಾದಗಿರಿಯ ಆಹಾರ ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ಹಾಗೂ ಗುತ್ತಿಗೆದಾರನ ನಿರ್ಲಕ್ಷ್ಯದಿಂದ 420 ಮೂಟೆಯ ಬರೋಬ್ಬರಿ 20 ಟನ್ ಪಡಿತರ ಅಕ್ಕಿ (Ration Rice) ಲಾರಿ (Lorry) ಮೇತವಾಗಿ ಕಳ್ಳತನ ಆಗಿದೆ.

    ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ವಿವಿಧ ಗ್ರಾಮಗಳ ಪಡಿತರ ಕೇಂದ್ರಗಳಿಗೆ ವಿತರಿಸಲು ಲಾರಿಯಲ್ಲಿ ಅನ್ನಭಾಗ್ಯದ ಅಕ್ಕಿಯನ್ನು ತುಂಬಿಕೊಂಡು ಹೋಗಲಾಗಿತ್ತು. ಅಕ್ಕಿ ತುಂಬಿದ್ದ ಲಾರಿಯನ್ನು ಶಹಾಪುರದ ನಗರದ ಎಪಿಎಂಸಿ ಬಳಿ ನಿಲ್ಲಿಸಿದ್ದಾಗ ಲಾರಿ ಸಮೇತ ಅಕ್ಕಿಯನ್ನು ಕಳವು ಮಾಡಲಾಗಿದೆ. ಎಪಿಎಂಸಿಯಲ್ಲಿ ಅನ್ನಭಾಗ್ಯ ಅಕ್ಕಿ ಸರಬರಾಜು ಮಾಡುವ 4 ಲಾರಿಗಳನ್ನು ನಿಲ್ಲಿಸಲಾಗಿತ್ತು. ಅದರಲ್ಲಿ ಒಂದು ಲಾರಿಯಲ್ಲಿ 420 ಮೂಟೆಯ 20 ಟನ್ ಅಕ್ಕಿ ಇತ್ತು.

    ಚಾಲಕ ಕೀಯನ್ನು ಲಾರಿಯಲ್ಲೇ ಬಿಟ್ಟಿದ್ದ. ಮಾತ್ರವಲ್ಲದೇ ತಾನು ರಾತ್ರಿ ಲಾರಿಯಲ್ಲಿ ಮಲಗುವುದನ್ನು ಬಿಟ್ಟು ತನ್ನ ಸ್ವಗ್ರಾಮ ಸುರಪುರಕ್ಕೆ ಹೋಗಿದ್ದ. ಊರಿನಿಂದ ಬೆಳಗ್ಗೆ ವಾಪಸ್ ಬಂದು ನೋಡಿದರೆ ನಿಲ್ಲಿಸಿದ್ದ ಜಾಗದಲ್ಲಿ ಲಾರಿಯೇ ಇರಲಿಲ್ಲ. ಎಪಿಎಂಸಿ ಸೇರಿ ಇಡೀ ಪಟ್ಟಣದಲ್ಲಿ ಲಾರಿ ಹುಡುಕಿದರೂ ಎಲ್ಲಿಯೂ ಸಿಗಲಿಲ್ಲ. ಇದರಲ್ಲಿ ಗುತ್ತಿಗೆದಾರನ ನಿರ್ಲಕ್ಷ್ಯ ಇರುವುದರಿಂದ ಕಠಿಣ ಕ್ರಮ ಕೈಗೊಳ್ಳಲಾಗುವುದು ಅಧಿಕಾರಿಗಳು ತಿಳಿಸಿದ್ದಾರೆ.

    ಈಗಾಗಲೇ ಘಟನೆ ಸಂಬಂಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಆದರೆ ಪಡಿತರ ಅಕ್ಕಿ ಸಾಗಾಟ ಮಾಡುವ ವಾಹನಗಳಿಗೆ ಕಡ್ಡಾಯವಾಗಿ ಜಿಪಿಎಸ್ ಇರಬೇಕಿದ್ದರೂ ಇಲ್ಲಿ ಅದು ಸಂಪೂರ್ಣ ಉಲ್ಲಂಘನೆಯಾಗಿದೆ. ಜಿಪಿಎಸ್ (GPS) ಇಲ್ಲದ ವಾಹನದಲ್ಲಿ ಅಕ್ಕಿ ಸಾಗಾಟಕ್ಕೆ ಅಧಿಕಾರಿಗಳು ಹೇಗೆ ಅವಕಾಶ ಮಾಡಿಕೊಟ್ಟರು ಎನ್ನುವ ಸಂಶಯ ವ್ಯಕ್ತವಾಗಿದೆ. ಇದನ್ನೂ ಓದಿ: ತುಂಗಾನದಿಗೆ ಅಲ್ಯುಮಿನಿಯಂ ಅಂಶ ಸೇರ್ಪಡೆ – ಪ್ರಯೋಗಾಲಯದಿಂದ ನೀರಿನ ವರದಿ ಬಹಿರಂಗ

    ಇಲ್ಲಿ ಗುತ್ತಿಗೆದಾರನ ತಪ್ಪು ಎಷ್ಟಿದೆಯೋ ಅಷ್ಟೇ ಅಧಿಕಾರಿಗಳ ನಿರ್ಲಕ್ಷ್ಯವೂ ಇದೆ. ಹೀಗಾಗಿ 2 ದಿನಗಳಿಂದ ವಾಹನ ಹುಡುಕಾಟ ಮಾಡುತ್ತಿದ್ದರೂ ಪೊಲೀಸರಿಗೆ ಯಾವುದೇ ಸುಳಿವು ಸಿಗುತ್ತಿಲ್ಲ. ಸಿಪಿಐ ಚೆನ್ನಯ್ಯ ಹಿರೇಮಠ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚನೆ ಮಾಡಿ ಲಾರಿಯನ್ನು ಹುಡುಕಲು ಕಾರ್ಯಾಚರಣೆ ಆರಂಭಿಸಿದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸ್ ತನಿಖೆಯೂ ಚುರುಕುಗೊಂಡಿದೆ. ಮಾತ್ರವಲ್ಲದೇ ನಗರದ ಎಲ್ಲ ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆ ಮಾಡಲಾಗುತ್ತಿದೆ.

    ಅಧಿಕಾರಿಗಳು ಮಾಡೋ ಕೆಲಸ ಸರಿಯಾಗಿ ಮಾಡಿದರೆ ಯಾವುದೇ ಎಡವಟ್ಟು ಆಗುವುದಿಲ್ಲ ಎನ್ನುವುದಕ್ಕೆ ಯಾದಗಿರಿಯಲ್ಲಿ ನಡೆದಿರುವ ಈ ಪ್ರಕರಣ ಸಾಕ್ಷಿ. ಹೀಗಾಗಿ ಇಲಾಖೆ ಕೂಡಲೆ ಎಚ್ಚೆತ್ತುಕೊಂಡು ತಪ್ಪಿತಸ್ಥ ಅಧಿಕಾರಿಗಳು ಹಾಗೂ ಗುತ್ತಿಗೆದಾರನ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕಿದೆ. ಅಲ್ಲದೇ ಇಲಾಖೆಗೆ ಆಗಿರುವ ನಷ್ಟ ಭರಿಸುವ ಜೊತೆಗೆ ಮತ್ತೊಮ್ಮೆ ಈ ರೀತಿಯ ಅವಾಂತರ ಆಗದಂತೆ ಕ್ರಮ ಕೈಗೊಳ್ಳಬೇಕಿದೆ. ಇದನ್ನೂ ಓದಿ: ಪಿಎಫ್‌ಐ ನಿಷೇಧಕ್ಕೆ ಪ್ರತೀಕಾರ – ವಿಧ್ವಂಸಕ ಕೃತ್ಯಕ್ಕೆ ದಕ್ಷಿಣ ಕನ್ನಡ, ಶಿವಮೊಗ್ಗದಲ್ಲಿ ಪ್ಲ್ಯಾನ್‌

  • 20 ಟನ್ ಪಡಿತರ ಅಕ್ಕಿ ತುಂಬಿದ್ದ ಲಾರಿ ಕಳ್ಳತನ – ಅಧಿಕಾರಿಗಳು ಕಂಗಾಲು

    20 ಟನ್ ಪಡಿತರ ಅಕ್ಕಿ ತುಂಬಿದ್ದ ಲಾರಿ ಕಳ್ಳತನ – ಅಧಿಕಾರಿಗಳು ಕಂಗಾಲು

    ಯಾದಗಿರಿ: ಬರೋಬ್ಬರಿ 20 ಟನ್ ಪಡಿತರ ಅಕ್ಕಿಯನ್ನು (Ration Rice) ತುಂಬಿದ್ದ ಲಾರಿಯನ್ನೇ (Lorry) ಖದೀಮರು ಎಗರಿಸಿರುವ ಘಟನೆ ಯಾದಗಿರಿ (Yadagiri) ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ನಡೆದಿದೆ.

    ತಾಲೂಕಿನ ವಿವಿಧ ಗ್ರಾಮಗಳ ಪಡಿತರ ಕೇಂದ್ರಗಳಿಗೆ ವಿತರಿಸಲೆಂದು ಲಾರಿಯಲ್ಲಿ ಅನ್ನಭಾಗ್ಯದ ಅಕ್ಕಿಯನ್ನು ತುಂಬಿಕೊಂಡು ಹೋಗಲಾಗುತ್ತಿತ್ತು. ನಗರದ ಎಪಿಎಂಸಿ ಬಳಿ ನಿಲ್ಲಿಸಿದ್ದ ಲಾರಿಯನ್ನು ಅಕ್ಕಿ ಸಮೇತ ಕಳವು ಮಾಡಲಾಗಿದೆ.

    ಎಪಿಎಂಸಿಯಲ್ಲಿ ಅನ್ನಭಾಗ್ಯ ಅಕ್ಕಿ ಸರಬರಾಜು ಮಾಡುವ 4 ಲಾರಿಗಳನ್ನು ನಿಲ್ಲಿಸಲಾಗಿತ್ತು. ಅದರಲ್ಲಿ 1 ಲಾರಿಯಲ್ಲಿ 420 ಮೂಟೆಯ 20 ಟನ್ ಅಕ್ಕಿ ಇತ್ತು. ಚಾಲಕ ಕೀಯನ್ನು ಲಾರಿಯಲ್ಲೇ ಬಿಟ್ಟು ನಿರ್ಲಕ್ಷ್ಯವಹಿಸಿದ್ದ. ಆತ ರಾತ್ರಿ ಲಾರಿಯಲ್ಲಿ ಮಲಗುವುದನ್ನು ಬಿಟ್ಟು ತನ್ನ ಸ್ವಗ್ರಾಮ ಸುರಪುರಕ್ಕೆ ಹೋಗಿದ್ದ. ಇದನ್ನೂ ಓದಿ: ರಾಜ್ಯದಲ್ಲಿ ವರುಣಾರ್ಭಟ – ರಾಜಧಾನಿಗೆ 2 ದಿನ ಯೆಲ್ಲೋ ಅಲರ್ಟ್

    ಚಾಲಕ ಊರಿನಿಂದ ಬೆಳಗ್ಗೆ ವಾಪಸ್ ಬಂದು ನೋಡಿದರೆ ನಿಲ್ಲಿಸಿದ್ದ ಜಾಗದಲ್ಲಿ ಲಾರಿಯೇ ಇರಲಿಲ್ಲ. ಎಪಿಎಂಸಿ ಸೇರಿ ಇಡೀ ಪಟ್ಟಣದಲ್ಲಿ ಲಾರಿಯನ್ನು ಹುಡುಕಿದರೂ ಎಲ್ಲಿಯೂ ಅದರ ಸುಳಿವೇ ಸಿಕ್ಕಿಲ್ಲ.

    ಅಕ್ಕಿ ತುಂಬಿದ್ದ ಲಾರಿ ಎಲ್ಲಿಯೂ ಸಿಗದ ಹಿನ್ನೆಲೆಯಲ್ಲಿ ಘಟನೆ ಕುರಿತಂತೆ ಶಹಾಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಸಿಪಿಐ ಚೆನ್ನಯ್ಯ ಹಿರೇಮಠ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚನೆ ಮಾಡಿ ಲಾರಿಯನ್ನು ಹುಡಕಲು ಕಾರ್ಯಾಚರಣೆ ಆರಂಭಿಸಿದ್ದಾರೆ. ಆರೋಪಿಗಳ ಪತ್ತೆಗೆ ಪೋಲಿಸ್ ತನಿಖೆಯೂ ಚುರುಕುಗೊಂಡಿದೆ. ನಗರದ ಎಲ್ಲ ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆ ಮಾಡಲಾಗುತ್ತಿದೆ. ಇದನ್ನೂ ಓದಿ: ಬೆಂಗಳೂರು ಮೆಟ್ರೋ ಲಿಖಿತ ಪರೀಕ್ಷೆ ಮುಂದೂಡಿಕೆ

  • ಪಡಿತರ ಅಕ್ಕಿ ಅಕ್ರಮ ಸಾಗಾಟ – ಲಕ್ಷಾಂತರ ಮೌಲ್ಯದ ಅಕ್ಕಿ ಜಪ್ತಿ

    ಪಡಿತರ ಅಕ್ಕಿ ಅಕ್ರಮ ಸಾಗಾಟ – ಲಕ್ಷಾಂತರ ಮೌಲ್ಯದ ಅಕ್ಕಿ ಜಪ್ತಿ

    ರಾಯಚೂರು: ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಲಕ್ಷಾಂತರ ರೂಪಾಯಿ ಮೌಲ್ಯದ ಪಡಿತರ ಅಕ್ಕಿ ಜಪ್ತಿ ಮಾಡಿರುವ ಘಟನೆ ಜಿಲ್ಲೆಯ ಮುದಗಲ್ ಪಟ್ಟಣದಲ್ಲಿ ನಡೆದಿದೆ.

    ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದ ಅಂಕಲಿಮಠ ಕ್ರಾಸ್ ಬಳಿ ದಾಳಿ ನಡೆಸಿದ ಮುದಗಲ್ ಠಾಣೆ ಪೊಲೀಸರು ಅಕ್ರಮವಾಗಿ ಸಾಗಿಸುತ್ತಿದ್ದ 5.92 ಲಕ್ಷ ರೂ. ಮೌಲ್ಯದ ಪಡಿತರ ಅಕ್ಕಿ ಜಪ್ತಿ ಮಾಡಿದ್ದಾರೆ. ಇದನ್ನೂ ಓದಿ: ಹೆಸರಾಂತ ಹಾಸ್ಯ ಕಲಾವಿದ ಮೋಹನ್ ಜೂನೇಜ ಇನ್ನಿಲ್ಲ

    ಸುಮಾರು 5.92 ಲಕ್ಷ ಮೌಲ್ಯದ 296 ಕ್ವಿಂಟಾಲ್‍ನ 605 ಅಕ್ಕಿ ಮೂಟೆಗಳು ಜಪ್ತಿಯಾಗಿವೆ. ಪಡಿತರದಾರರಿಂದಲೇ ಪಡಿತರ ಅಕ್ಕಿ ಖರೀದಿ ಮಾಡಿದ್ದ ಆರೋಪಿ ನಾಗೇಶ್ ವಿರೂಪಾಕ್ಷ ಗೌಡ, ಮಣಿಕಂಠ ಎಂಬುವವರಿಗೆ ಒಂದು ಲೋಡ್ ಮಾರಲು ಮುಂದಾಗಿದ್ದ. ಈ ವೇಳೆ ದಾಳಿ ನಡೆಸಿದ್ದ ಪೊಲೀಸರು ಪಡಿತರ ಅಕ್ಕಿ ದಂಧೆ ನಡೆಸುತ್ತಿದ್ದ ನಾಗೇಶ್‍ನನ್ನು ಸೆರೆ ಹಿಡಿದಿದ್ದಾರೆ. ಪೊಲೀಸರ ಮುಂದೆ ನಾಗೇಶ್ ತಪ್ಪೊಪ್ಪಿಕೊಂಡಿದ್ದು, ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಇದನ್ನೂ ಓದಿ: ಹೈದರಾಬಾದ್‍ ಮರ್ಯಾದಾ ಹತ್ಯೆಯನ್ನು ಖಂಡಿಸುತ್ತೇನೆ – ಅಸಾದುದ್ದೀನ್ ಓವೈಸಿ

  • 4 ಲಕ್ಷ ರೂ.ಮೌಲ್ಯದ ಪಡಿತರ ಅಕ್ಕಿ ಅಕ್ರಮ ಸಂಗ್ರಹ

    4 ಲಕ್ಷ ರೂ.ಮೌಲ್ಯದ ಪಡಿತರ ಅಕ್ಕಿ ಅಕ್ರಮ ಸಂಗ್ರಹ

    ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗುರಗುಂಟಾದಲ್ಲಿ ಗೋದಾಮೊಂದರ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ರೂ ಮೌಲ್ಯದ ಪಡಿತರ ಅಕ್ಕಿಯನ್ನ ಜಪ್ತಿ ಮಾಡಿದ್ದಾರೆ.

    ಗುರಗುಂಟಾದ ತಿಮ್ಮಾರೆಡ್ಡಿಗೆ ಸೇರಿದ ಗೋದಾಮಿನಲ್ಲಿ ಪಡಿತರ ಅಕ್ಕಿ ಪತ್ತೆಯಾಗಿದೆ. ಪೊಲೀಸರ ರಕ್ಷಣೆಯೊಂದಿಗೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ 4,92,600 ರೂ ಮೌಲ್ಯದ 821 ಚೀಲ ಪಡಿತರ ಅಕ್ಕಿ ಜಪ್ತಿ ಮಾಡಲಾಗಿದೆ. ಇದನ್ನೂ ಓದಿ: 500 ರೂಪಾಯಿಗೆ ಕೈ ಮಿಲಾಯಿಸಿದ ಆಶಾ ಕಾರ್ಯಕರ್ತೆಯರು

    ಆರೋಪಿ ತಿಮ್ಮಾರೆಡ್ಡಿ ಸ್ಥಳದಿಂದ ಪರಾರಿಯಾಗಿದ್ದಾನೆ. ದಾಳಿ ಹಿನ್ನೆಲೆ ಆಹಾರ ನಿರೀಕ್ಷಕ ಅಬ್ದುಲ್ ರೌಫ್ ದೂರು ದಾಖಲಿಸಿದ್ದು, ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಬಣ ರಾಜಕೀಯ ಬಲು ಜೋರು – ಕತ್ತಿ ಸಭೆಗೆ ಪ್ರತಿಯಾಗಿ ಜಾರಕಿಹೊಳಿ ಮೀಟಿಂಗ್

  • ಮಂಡ್ಯದಲ್ಲಿ ಪಡಿತರ ಅಕ್ಕಿ ಪಾಲಿಶ್ ಮಾಡಿ ವಿದೇಶಕ್ಕೆ ರಫ್ತು

    ಮಂಡ್ಯದಲ್ಲಿ ಪಡಿತರ ಅಕ್ಕಿ ಪಾಲಿಶ್ ಮಾಡಿ ವಿದೇಶಕ್ಕೆ ರಫ್ತು

    ಮಂಡ್ಯ: ಸಕ್ಕರೆ ನಾಡಿನಲ್ಲಿ ಪಡಿತರ ಅಕ್ಕಿ ಪಾಲಿಶ್ ಮಾಡಿ ವಿದೇಶಕ್ಕೆ ರಫ್ತು ಮಾಡುವ ದಂಧೆ ನಡೆಯುತ್ತಿದೆ.

    ಅಧಿಕಾರಿಗಳು ಮಂಡ್ಯದ ಲಕ್ಷ್ಮೀದೇವಿ ರೈಸ್ ಮಿಲ್ ಮೇಲೆ ದಾಳಿ ಮಾಡಿದ್ದು, ಈ ವೇಳೆ ಬಡವರ ಅಕ್ಕಿಗೆ ಕನ್ನ ಹಾಕಿ ಶ್ರೀಮಂತರಿಗೆ ಅಕ್ರಮವಾಗಿ ಅಕ್ಕಿಯನ್ನು ಮಾರಾಟ ಮಾಡುತ್ತಿರುವುದು ತಿಳಿದುಬಂದಿದೆ. ಈ ದಂಧೆಕೋರರು ಪಂಜಾಬ್ ರಾಜ್ಯದಿಂದ ಪಡಿತರ ಅಕ್ಕಿ ತಂದು ಪಾಲಿಶ್ ಮಾಡುತ್ತಿದ್ದರು ಎಂದು ದಾಳಿಯ ವೇಳೆ ತಿಳಿದುಬಂದಿದೆ. ಈ ವೇಳೆ ನೂರಾರು ಚೀಲ ಅಕ್ಕಿಯನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಇಂದು ಸಂಜೆ ದೆಹಲಿಗೆ ರಾವತ್ ಪಾರ್ಥಿವ ಶರೀರ – ನಾಳೆ ಮಧ್ಯಾಹ್ನವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ

    ರೈಸ್ ಮಿಲ್ ನಲ್ಲಿ ನೂರಾರು ಕ್ವಿಂಟಾಲ್ ಪಡಿತರ ಅಕ್ಕಿ, ಒಂದು ಕ್ಯಾಂಟರ್ ಅನ್ನು ಅಧಿಕಾರಿಗಳು ವಶಕ್ಕೆ ಪಡೆಯಲಾಗಿದೆ. ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ಚಾಲಕ ಅಲ್ಲಿಂದ ಪರಾರಿಯಾಗಿದ್ದಾನೆ. ಈ ಪಾಲಿಶ್ ಅಕ್ಕಿಯನ್ನೇ ಸಣ್ಣ ಅಕ್ಕಿ ರೀತಿ ಪ್ಯಾಕ್ ಮಾಡಿ ಖದೀಮರು ಮಾರಾಟ ಮಾಡುತ್ತಿದ್ದರು. ಅದು ಅಲ್ಲದೇ ಇವರು ವಿವಿಧ ಬ್ರಾಂಡ್‍ಗಳ ಮೂಲಕ ದೇಶ-ವಿದೇಶಗಳಿಗೆ ಅಕ್ಕಿಯನ್ನು ರಫ್ತು ಮಾಡುತ್ತಿದ್ದರು ಎಂದು ಸಹ ದಾಳಿಯ ವೇಳೆ ತಿಳಿದಿದೆ.

    ರೈಸ್ ಮಿಲ್ ನ ಖದೀಮರು ಯಾವುದೇ ರೀತಿಯ ಅನುಮತಿ ಪಡೆಯದೆ ನಕಲಿ ಬ್ರಾಂಡ್ ಸೃಷ್ಟಿಸಿ ಪಾಲಿಶ್ ಅಕ್ಕಿಯನ್ನು ಆಫ್ರಿಕಾ, ಮಲೇಶಿಯಾ, ಅರಬ್ ರಾಷ್ಟ್ರ ಸೇರಿದಂತೆ ಹಲವು ದೇಶಗಳಿಗೆ ರಫ್ತು ಮಾಡುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದರು.

  • ಕಂಟೇನರ್ ಲಾರಿಗಳಲ್ಲಿ ಸಾಗಾಟವಾಗುತ್ತಿದ್ದ 500 ಕ್ವಿಂಟಲ್ ಪಡಿತರ ಅಕ್ಕಿ ವಶ

    ಕಂಟೇನರ್ ಲಾರಿಗಳಲ್ಲಿ ಸಾಗಾಟವಾಗುತ್ತಿದ್ದ 500 ಕ್ವಿಂಟಲ್ ಪಡಿತರ ಅಕ್ಕಿ ವಶ

    ಕಾರವಾರ: ಕಂಟೇನರ್ ಲಾರಿಗಳಲ್ಲಿ ಸಾಗಾಟವಾಗುತ್ತಿದ್ದ ದಾಖಲೆ ರಹಿತ 500 ಕ್ವಿಂಟಲ್ ಪಡಿತರ ಅಕ್ಕಿಯನ್ನು ಪೊಲೀಸರು ವಶ ಪಡೆದಿದ್ದಾರೆ.

    ದಾಖಲೆ ರಹಿತವಾಗಿ ಹಾವೇರಿ ಜಿಲ್ಲೆಯ ಅಕ್ಕಿಆಲೂರು ಕಡೆಯಿಂದ ಮಂಗಳೂರು ಕಡೆಗೆ ಎರಡು ಕಂಟೇನರ್ ಲಾರಿಗಳಲ್ಲಿ ಸಾಗಾಟ ಮಾಡಲಾಗುತ್ತಿತ್ತು. ಈ ಲಾರಿಗಳಲ್ಲಿ ಸುಮಾರು 500 ಕ್ವಿಂಟಲ್ ರೇಷನ್ ಅಕ್ಕಿ ಇದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಹೊನ್ನಾವರ ಪೊಲೀಸರು ಲಾರಿ ಸಮೇತ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ:  ಕ್ರಿಸ್‍ಮಸ್ ಮೆರವಣೆಗೆಯಲ್ಲಿ ಭಾರೀ ಅಪಘಾತ – 20 ಜನರಿಗೆ ತೀವ್ರಗಾಯ

     ಹೊನ್ನಾವರ ತಾಲೂಕಿನ ಆರೊಳ್ಳಿಯ ರಾಷ್ಟ್ರೀಯ ಹೆದ್ದಾರಿ 69ರಲ್ಲಿ 500 ಕ್ವಿಂಟಲ್ ಅಕ್ಕಿ, ವಾಹನ ಸೇರಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಇದು ಅನ್ನಭಾಗ್ಯ ಪಡಿತರ ಅಕ್ಕಿ ಎನ್ನುವ ಅನುಮಾನ ಹುಟ್ಟುಹಾಕಿದೆ. 500 ಕ್ವಿಂಟಲ್ ಅಕ್ಕಿ ತುಂಬಿದ 2 ಲಾರಿಯನ್ನು ತಾಲೂಕು ತಹಶಿಲ್ದಾರ್ ಹಾಗೂ ಆಹಾರ ನಿರೀಕ್ಷಕರು ಮಾಹಿತಿ ಪಡೆದು ಪರಿಶೀಲನೆ ನಡೆಸಿದ್ದಾರೆ.

    ವಶಪಡಿಸಿಕೊಂಡ ಅಕ್ಕಿಯನ್ನು ಹೊನ್ನಾವರದ ಕರ್ಕಿಯಲ್ಲಿರುವ ದಾಸ್ತಾನು ಮಳಿಗೆಯಲ್ಲಿ ಸಂಗ್ರಹ ಮಾಡಲಾಗಿದೆ. ಹೊನ್ನಾವರ ಪೆÇಲೀಸರು ತನಿಖೆ ಕೈಗೊಂಡಿದ್ದು, ಚುರುಕುಗೊಳಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಹೊನ್ನಾವರ ಸಿಪಿಐ ಶ್ರೀಧರ್ ಎಸ್.ಆರ್., ಪಿಎಸ್‍ಐ ಶಶಿಕುಮಾರ್, ನಿರಂಜನ್, ತಹಶೀಲ್ದಾರ್ ನಾಗರಾಜ್ ನಾಯ್ಕಡ್, ಆಹಾರ ನಿರೀಕ್ಷಕ ವೆಂಕಟ್ರಮಣ, ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದರು.