Tag: Rave Party

  • ದೇವನಹಳ್ಳಿ ಬಳಿಯ ಫಾರ್ಮ್‌ ಹೌಸ್‌ನಲ್ಲಿ ರೇವ್‌ ಪಾರ್ಟಿ – 4 ಜನ ಅರೆಸ್ಟ್‌

    ದೇವನಹಳ್ಳಿ ಬಳಿಯ ಫಾರ್ಮ್‌ ಹೌಸ್‌ನಲ್ಲಿ ರೇವ್‌ ಪಾರ್ಟಿ – 4 ಜನ ಅರೆಸ್ಟ್‌

    – 27 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಪೊಲೀಸರು

    ಚಿಕ್ಕಬಳ್ಳಾಪುರ: ದೇವನಹಳ್ಳಿ (Devanahalli) ತಾಲೂಕಿನ ಕನ್ನಮಂಗಲ ಗ್ರಾಮದ ಬಳಿಯ ಪಾರ್ಮ್ ಹೌಸ್‌ನಲ್ಲಿ ರೇವ್ ಪಾರ್ಟಿ (Rave party) ಮೇಲೆ ಪೊಲೀಸರು ದಾಳಿ ನಡೆಸಿ 4 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಖಚಿತ ಮಾಹಿತಿ ಮೇರೆಗೆ ದೇವನಹಳ್ಳಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಪಾರ್ಟಿಯಲ್ಲಿ 7 ಯುವತಿಯರು ಹಾಗೂ 24 ಯುವಕರು ಭಾಗಿಯಾಗಿರುವುದು ಗೊತ್ತಾಗಿದೆ. ಎಲ್ಲರನ್ನೂ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಬಳಿಕ 4 ಜನರನ್ನು ಬಂಧಿಸಿದ್ದು, ಉಳಿದವರನ್ನು ಸ್ಟೇಷನ್‌ ಬೇಲ್‌ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಈಶಾನ್ಯ ವಿಭಾಗ ಡಿಸಿಪಿ ಸಜೀತ್ ತಿಳಿಸಿದ್ದಾರೆ. ಇದನ್ನೂ ಓದಿ: ಕಾಳಿ ನದಿಯಲ್ಲಿ ಕಾಲುಜಾರಿ ಬಿದ್ದು ಯುವಕ ನಾಪತ್ತೆ

    ಬೆಳಗ್ಗೆ 5:00 ಗಂಟೆ ಸುಮಾರಿಗೆ ಕನ್ನಮಂಗಲ ಫಾರ್ಮ್ ಹೌಸ್ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಬರ್ತ್ ಡೇ ಪಾರ್ಟಿಯಲ್ಲಿ, ರಾತ್ರಿ ಇಡೀ ಮಾದಕ ವಸ್ತು ಬಳಕೆ ಮಾಡಿದ್ದಾರೆ ಎಂಬುದು ತಿಳಿದು ಬಂದಿತ್ತು. ಪಾರ್ಟಿಯಲ್ಲಿ ಪೆಡ್ಲರ್ ಕೂಡ ಇದ್ದ. ಆರೋಪಿಗಳು ಐಟಿ ಸೆಕ್ಟರ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

    ಫಾರ್ಮ್‌ ಹೌಸ್‌ ಮಾಲೀಕ ಸೇರಿ ಎಲ್ಲಾ ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಚಿಕ್ಕಮಗಳೂರು | ಭಾರೀ ಮಳೆಗೆ ಆಟೋ ಮೇಲೆ ಮುರಿದು ಬಿದ್ದ ಮರ – ಚಾಲಕ ದುರ್ಮರಣ

  • Mysuru | ಅನುಮತಿ ಪಡೆಯದೇ ಪಾರ್ಟಿ – 8 ಯುವತಿಯರು ಸೇರಿ 64 ಮಂದಿ ವಿರುದ್ಧ ಕೇಸ್‌

    Mysuru | ಅನುಮತಿ ಪಡೆಯದೇ ಪಾರ್ಟಿ – 8 ಯುವತಿಯರು ಸೇರಿ 64 ಮಂದಿ ವಿರುದ್ಧ ಕೇಸ್‌

    ಮೈಸೂರು: ನಗರದ ಹೊರವಲಯದಲ್ಲಿ ಅನುಮತಿ ಪಡೆಯದೇ ಪಾರ್ಟಿ ನಡೆಸಿದ್ದ ಅಲ್ಲದೇ 64 ಮಂದಿ ವಿರುದ್ಧ ಪೊಲೀಸರು (Mysuru Police) ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

    ಬಿಎನ್‌ಎಸ್‌ ಕಲಂ 221, 223, 121(2), 15(A), 32, 34, 38(A) KE ಅನ್ವಯ ಪ್ರಕರಣ ದಾಖಲಾಗಿದೆ. ಬಂಧಿತರು ಮೈಸೂರು, ಮಡಿಕೇರಿ, ಬೆಂಗಳೂರು ಹಾಗೂ ತಮಿಳುನಾಡು (Tamil Nadu) ಮೂಲದವರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಶೂದ್ರರಿಗೆ ಮಾನ ಮರ್ಯಾದೆ ಇದ್ದರೆ ದೇವಸ್ಥಾನಕ್ಕೆ ಹೋಗಬಾರದು: ಪ್ರೊ.ಕೆ.ಎಸ್.ಭಗವಾನ್

    ಏನಾಗಿತ್ತು?
    ಕೆಆರ್‌ಎಸ್‌ ಹಿನ್ನೀರಿನ (KRS Back Water) ಬಳಿಯಿರುವ ಎಡಹಳ್ಳಿ ಗ್ರಾಮದಲ್ಲಿ ಮಧು ಎಂಬಾತನಿಗೆ ಸೇರಿದ ಜಮೀನಿನಲ್ಲಿ ಕೆ.ಆರ್.ನಗರ ತಾಲೂಕಿನ ಮೂಲೆಪೆಟ್ಲು ಗ್ರಾಮದ ಸಂತೋಷ್ ಅಂಬಾತ ಪಾರ್ಟಿ ಆಯೋಜನೆ ಮಾಡಿದ್ದ. ಅಧಿಕೃತವಾಗಿ ಪಾರ್ಟಿಗೆ ಅನುಮತಿ ಪಡೆಯಲಾಗಿದೆ ಎಂದು ಸೋಶಿಯಲ್‌ ಮೀಡಿಯಾದಲ್ಲಿಯೂ ಬರೆದುಕೊಂಡಿದ್ದ. ಈ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಯುವಕ-ಯುವತಿಯರು ನೋಂದಣಿ ಮಾಡಿಕೊಂಡಿದ್ದರು. ಆದ್ರೆ ಡಿಜೆ ಮೂಲಕ ಅಬ್ಬರದ ಮ್ಯೂಸಿಕ್ ಹಾಕಿದ್ದ ಕಾರಣ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಅವರಿಗೆ ಮಾಹಿತಿ ನೀಡಲಾಗಿತ್ತು. ಎಸ್ಪಿ ಆದೇಶದಂತೆ ಹೆಚ್ಚುವರಿ ಎಸ್ಪಿ ನಾಗೇಶ್ ಹಾಗೂ ಡಿವೈಎಸ್‌ಪಿ ಕರೀಂ ರಾವತರ್‌ ದಾಳಿ ನಡೆಸಿ ಸಾಕಷ್ಟು ಯುವಕ-ಯುವತಿಯರನ್ನ ವಶಕ್ಕೆ ಪಡೆದುಕೊಂಡಿದ್ದರು. ಕಾರ್ಯಾಚರಣೆ ವೇಳೆ ತಪ್ಪಿಸಿಕೊಳ್ಳಲು ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪವೂ ವ್ಯಕ್ತವಾಗಿದೆ.

    ಇದಕ್ಕೆ ಸಂಬಂಧಿಸಿದಂತೆ ಎಸ್‌ಪಿ ವಿಷ್ಣುವರ್ಧನ್ ಮಾತನಾಡಿ, ಪಾರ್ಟಿಯಲ್ಲಿ ಯಾವುದೇ ಮಾದಕ ವಸ್ತು, ಮಾದಕ ದ್ರವ್ಯ ಸಿಕ್ಕಿಲ್ಲ. ಆದರೆ ಸ್ಥಳದಲ್ಲಿ ಮದ್ಯ ಹಾಗೂ ಸಿಗರೇಟ್ ದೊರೆತಿದೆ. ಎಫ್‌ಎಸ್‌ಎಲ್ ತಂಡ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಜೊತೆಗೆ ಪಾರ್ಟಿಯಲ್ಲಿದ್ದ ಎಲ್ಲರ ರಕ್ತದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗುವುದು ಹಾಗೂ ವರದಿ ಬಂದ ನಂತರ ಈ ಬಗ್ಗೆ ಸ್ಪಷ್ಟನೆ ಸಿಗಲಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮೈಸೂರಿನಲ್ಲಿ ರೇವ್ ಪಾರ್ಟಿ? – ಪೊಲೀಸರು ದಾಳಿ ನಡೆಸಿ 50ಕ್ಕೂ ಹೆಚ್ಚು ಯುವಕರು ವಶಕ್ಕೆ

    ಇಸ್ರೇಲ್‌ನ ರ‍್ಯಾಪರ್ ಗ್ರೇನ್ ರಿಪ್ಪರ್ ಭಾಗಿ:
    ಒಟ್ಟು 150ಕ್ಕೂ ಹೆಚ್ಚು ಯುವಕ-ಯುವತಿಯರು ಪಾರ್ಟಿಯಲ್ಲಿ ಭಾಗಿಯಾಗಿದ್ದರು. ಜೊತೆಗೆ ಪಾರ್ಟಿಯಲ್ಲಿ ಇಸ್ರೇಲ್‌ನಿಂದ ರ‍್ಯಾಪರ್ ಗ್ರೇನ್ ರಿಪ್ಪರ್ ಬಂದಿದ್ದನು. ಆಯೋಜಕರಿಂದ ಪಾರ್ಟಿಗೆ ಬರಲು ತಲಾ 2000 ರೂ. ಹಣವನ್ನು ನಿಗದಿ ಮಾಡಿದ್ದರು. ಪೊಲೀಸರ ದಾಳಿ ವೇಳೆ ಅಲ್ಲಿದ್ದ ಯುವಕ-ಯುವತಿಯರು ಎದ್ನೋ ಬಿದ್ನೋ ಎಂದು ಓಡಿ ಹೋಗಿದ್ದಾರೆ. ಇದನ್ನೂ ಓದಿ: ಲಾ ಕಾಲೇಜ್‌ಗೆ ಸೇರಿಸದಿದ್ದರೇ ಆಸ್ತಿಯಲ್ಲಿ ಭಾಗ ಕೊಡು ಅಂತ ನಮ್ಮಪ್ಪನನ್ನ ಕೇಳಿದ್ದೆ: ಸಿಎಂ

  • ಮೈಸೂರಿನಲ್ಲಿ ರೇವ್ ಪಾರ್ಟಿ? – ಪೊಲೀಸರು ದಾಳಿ ನಡೆಸಿ 50ಕ್ಕೂ ಹೆಚ್ಚು ಯುವಕರು ವಶಕ್ಕೆ

    ಮೈಸೂರಿನಲ್ಲಿ ರೇವ್ ಪಾರ್ಟಿ? – ಪೊಲೀಸರು ದಾಳಿ ನಡೆಸಿ 50ಕ್ಕೂ ಹೆಚ್ಚು ಯುವಕರು ವಶಕ್ಕೆ

    ಮೈಸೂರು: ನಗರದ ಹೊರವಲಯದಲ್ಲಿ ತಡರಾತ್ರಿ ನಡೆಯುತ್ತಿದ್ದ ರೇವ್ ಪಾರ್ಟಿ ಅನುಮಾನದ ಮೇರೆಗೆ (Rave Party) ಪೊಲೀಸರು ದಾಳಿ ನಡೆಸಿ, 50ಕ್ಕೂ ಹೆಚ್ಚು ಯುವಕರನ್ನು ವಶಕ್ಕೆ ಪಡೆದಿದ್ದಾರೆ.

    ಸಾಂಸ್ಕೃತಿಕ ನಗರಿ ಮೈಸೂರಿನ (Mysuru) ಹೊರವಲಯದಲ್ಲಿ ರೇವ್ ಪಾರ್ಟಿ ಬಗ್ಗೆ ಅನುಮಾನಗೊಂಡು ಮೈಸೂರು ಜಿಲ್ಲಾ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

    ತಡರಾತ್ರಿ ಪಾರ್ಟಿ ಮಾಡುತಿದ್ದ ವೇಳೆ ಪೊಲೀಸರು ದಿಢೀರ್ ಎಂಟ್ರಿ ಕೊಟ್ಟಿದ್ದು, ಪಾರ್ಟಿಯಲ್ಲಿ 50ಕ್ಕೂ ಹೆಚ್ಚು ಯುವಕರನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆ ವೇಳೆ ತಪ್ಪಿಸಿಕೊಳ್ಳಲು ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪ ವ್ಯಕ್ತವಾಗಿದೆ. ಅಡಿಷನಲ್ ಎಸ್‌ಪಿ ನಾಗೇಶ್ ಹಾಗೂ ಡಿವೈಎಸ್‌ಪಿ ಕರೀಂ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ.ಇದನ್ನೂ ಓದಿ: ಕ್ರಿಮಿನಲ್‍ಗಳ ಮಾಹಿತಿ ನೀಡಲು ನಿರಾಕರಣೆ – ವಾಟ್ಸಾಪ್ ನಿರ್ದೇಶಕರ ವಿರುದ್ಧ ಎಫ್‍ಐಆರ್

    ಇದಕ್ಕೆ ಸಂಬಂಧಿಸಿದಂತೆ ಎಸ್‌ಪಿ ವಿಷ್ಣುವರ್ಧನ್ ಮಾತನಾಡಿ, ಪಾರ್ಟಿಯಲ್ಲಿ ಯಾವುದೇ ಮಾದಕ ವಸ್ತು, ಮಾದಕ ದ್ರವ್ಯ ಸಿಕ್ಕಿಲ್ಲ. ಆದರೆ ಸ್ಥಳದಲ್ಲಿ ಮದ್ಯ ಹಾಗೂ ಸಿಗರೇಟ್ ದೊರೆತಿದೆ. ಎಫ್‌ಎಸ್‌ಎಲ್ ತಂಡ (FSL) ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಜೊತೆಗೆ ಪಾರ್ಟಿಯಲ್ಲಿದ್ದ ಎಲ್ಲರ ರಕ್ತದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗುವುದು ಹಾಗೂ ವರದಿ ಬಂದ ನಂತರ ಈ ಬಗ್ಗೆ ಸ್ಪಷ್ಟನೆ ಸಿಗಲಿದೆ ಎಂದು ಮಾಹಿತಿ ನೀಡಿದ್ದಾರೆ.

    ಒಟ್ಟು 150ಕ್ಕೂ ಹೆಚ್ಚು ಯುವಕ-ಯುವತಿಯರು ಪಾರ್ಟಿಯಲ್ಲಿ ಭಾಗಿಯಾಗಿದ್ದರು. ಜೊತೆಗೆ ಪಾರ್ಟಿಯಲ್ಲಿ ಇಸ್ರೇಲ್‌ನಿಂದ ರ‍್ಯಾಪರ್ ಗ್ರೇನ್ ರಿಪ್ಪರ್ (Rapper Grain Ripper) ಬಂದಿದ್ದನು. ಆಯೋಜಕರಿಂದ ಪಾರ್ಟಿಗೆ ಬರಲು ತಲಾ 2000 ರೂ. ಹಣವನ್ನು ನಿಗದಿ ಮಾಡಿದ್ದರು. ಪೊಲೀಸರ ದಾಳಿ ವೇಳೆ ಅಲ್ಲಿದ್ದ ಯುವಕ-ಯುವತಿಯರು ಎದ್ನೋ ಬಿದ್ನೋ ಎಂದು ಓಡಿ ಹೋಗಿದ್ದಾರೆ.ಇದನ್ನೂ ಓದಿ: ತಮಿಳುನಾಡು ಡಿಸಿಎಂ ಆಗಿ ಉದಯನಿಧಿ ಸ್ಟಾಲಿನ್ ಇಂದು ಪ್ರಮಾಣವಚನ

  • ರೇವ್ ಪಾರ್ಟಿ ಪ್ರಕರಣ: ತೆಲುಗು ನಟಿ ಹೇಮಾಗೆ ಷರತ್ತುಬದ್ಧ ಜಾಮೀನು

    ರೇವ್ ಪಾರ್ಟಿ ಪ್ರಕರಣ: ತೆಲುಗು ನಟಿ ಹೇಮಾಗೆ ಷರತ್ತುಬದ್ಧ ಜಾಮೀನು

    ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿ ಬಳಿಯ ರೇವ್ ಪಾರ್ಟಿ (Rave Party) ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ತೆಲುಗು ನಟಿ ಹೇಮಾಗೆ (Actress Hema) ಬೆಂಗಳೂರು ಗ್ರಾಮಾಂತರ ಜಿಲ್ಲೆ ಎನ್‌ಡಿಪಿಎಸ್ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.‌ ಇದನ್ನೂ ಓದಿ:ಕೈ ನಡುಗುತ್ತಿದೆ, ದಯಮಾಡಿ ಒಂದು ಸಿಗರೇಟ್ ಕೊಡಿಸಿ – ಪೊಲೀಸರ ಬಳಿ ದರ್ಶನ್‌ ಮನವಿ!

    ರೇವ್ ಪಾರ್ಟಿ ಪ್ರಕರಣದಲ್ಲಿ ಹೇಮಾರನ್ನ ಬಂಧಿಸಲಾಗಿತ್ತು. ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟಿ ಹೇಮಾಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ಎನ್‌ಡಿಪಿಎಸ್ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

    ಇತ್ತೀಚೆಗೆ ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ನಟಿ ಭಾಗಿಯಾಗಿದ್ದರು. ನಾನು ಬೆಂಗಳೂರಿನಲ್ಲಿ ಇಲ್ಲ, ಹೈದರಾಬಾದ್‌ನಲ್ಲಿರೋದಾಗಿ ವಿಡಿಯೋ ಮಾಡಿ ಹೇಮಾ ದಿಕ್ಕು ತಪ್ಪಿಸಿದ್ದರು ಎಂಬ ಆರೋಪವೂ ಕೇಳಿಬಂದಿತ್ತು. ಬಳಿಕ ಡ್ರಗ್ಸ್ ಪಡೆದಿರುವ ಬಗ್ಗೆ ಪಾಸಿಟಿವ್ ರಿಪೋರ್ಟ್ ಬಂದ ಬೆನ್ನಲ್ಲೇ ನಟಿಗೆ 2 ಬಾರಿ ನೋಟಿಸ್ ಪೊಲೀಸರು ನೀಡಿದ್ದರು.

    ವಿಚಾರಣೆಗೆ ಬಂದ ಹೇಮಾರನ್ನು ಪೊಲೀಸರು ಬಂಧಿಸಿದ್ದರು. ಬಳಿಕ ಜೂನ್ 14ರವರೆಗೆ ನಾಲ್ಕನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಮ್‌ಎಫ್‌ಸಿ ನ್ಯಾಯಾಧೀಶರಾದ ಸಲ್ಮಾ ಎ.ಎಸ್ ಅವರಿದ್ದ ಪೀಠ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿತ್ತು. ಈಗ ನಟಿಗೆ ಜಾಮೀನು ಸಿಕ್ಕಿದೆ.

    ಅಂದಹಾಗೆ, ಹೇಮಾ ಸುಮಾರು 250 ಚಿತ್ರಗಳಲ್ಲಿ ನಟಿಸಿದ್ದಾರೆ. ಸ್ಟಾರ್ ನಟರ ಚಿತ್ರಗಳಲ್ಲಿ ಖಾಯಂ ಪೋಷಕ ನಟಿಯಾಗಿ ಹೇಮಾ ಕೆಲಸ ಮಾಡಿದ್ದಾರೆ. ಕನ್ನಡದಲ್ಲೂ ನಟಿಸಿದ್ದ ಹೇಮಾ 2014ರಲ್ಲಿ ಪುನೀತ್ ರಾಜ್‌ಕುಮಾರ್ ನಟನೆಯ ಪವರ್ ಚಿತ್ರದಲ್ಲೂ ಕಾಣಿಸಿಕೊಂಡಿದ್ದರು. ವಿನಯ ವಿಧೇಯ ರಾಮ, ಸನ್ ಆಫ್ ಸತ್ಯಮೂರ್ತಿ, ಡಿಕ್ಟೆಟರ್, ಅತ್ತಾರಿಂಟಿಕಿ ದಾರೇದಿ, ಮಿರ್ಚಿ, ರಭಸ, ಬೃಂದಾವನಂ, ರೆಬೆಲ್, ಜುಲಾಯ್, ಮಗಧೀರ ಸೇರಿ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ.

  • ರೇವ್ ಪಾರ್ಟಿ ಪ್ರಕರಣ: ಹೇಮಾಗೆ ಮತ್ತೆ ನ್ಯಾಯಾಂಗ ಬಂಧನ

    ರೇವ್ ಪಾರ್ಟಿ ಪ್ರಕರಣ: ಹೇಮಾಗೆ ಮತ್ತೆ ನ್ಯಾಯಾಂಗ ಬಂಧನ

    ರೇವ್ ಪಾರ್ಟಿಯಲ್ಲಿ (Rave Party) ಡ್ರಗ್ಸ್ (Drugs) ಸೇವಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಹೇಮಾಗೆ (Hema) ಮತ್ತೆ ನ್ಯಾಯಾಂಗ ಬಂಧನ ಮುಂದುವರೆದಿದೆ. ನಿನ್ನೆಯಷ್ಟೇ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಸಿಸಿಬಿ ಹೇಮಾರನ್ನು ತಮ್ಮ ವಶಕ್ಕೆ ಕೇಳಿತ್ತು. ಆನೇಕಲ್‌ನ ನಾಲ್ಕನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯವು ಹೇಮಾರನ್ನು 24 ಗಂಟೆಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿತ್ತು. ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಮತ್ತೆ ಇಂದು ನಟಿಯನ್ನು ಕೋರ್ಟ್‌ಗೆ ಕರೆತರಲಾಗಿತ್ತು. ಈ ಹಿಂದೆ ನ್ಯಾಯಾಲಯವು ಹೇಮಾಗೆ ಜೂನ್ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಈಗ ಅದನ್ನು ಮತ್ತೆ ಮುಂದುವರೆಸಿದೆ. ಇದನ್ನೂ ಓದಿ:ರೇವ್ ಪಾರ್ಟಿ ಪ್ರಕರಣ: ತೆಲುಗು ಕಲಾವಿದರ ಸಂಘದಿಂದ ಹೇಮಾ ಅಮಾನತಿಗೆ ಚರ್ಚೆ

    ಡ್ರಗ್ಸ್ ಸೇವನೆಗೆ ಸಂಬಂಧಿಸಿದಂತೆ ಹೇಮಾ ರಿಪೋರ್ಟ್ ಪಾಸಿಟಿವ್ ಬಂದಿದ್ದ ಹಿನ್ನೆಲೆಯಲ್ಲಿ ಸಿಸಿಬಿ ನಟಿಗೆ ಎರಡು ಬಾರಿ ನೋಟಿಸ್ ನೀಡಿತ್ತು. ಎರಡಕ್ಕೂ ಪ್ರತಿಕ್ರಿಯಿಸದೇ ಇದ್ದಾಗ ವಿಚಾರಣೆಗಾಗಿ ಬಂದಿದ್ದ ನಟಿಯನ್ನು ಬಂಧಿಸಿ, ಕೋರ್ಟ್ ಮುಂದೆ ಹಾಜರು ಪಡಿಸಲಾಗಿತ್ತು. ಜೂನ್ 5ರಂದು ವಾದ ಪ್ರತಿವಾದವನ್ನು ಆಲಿಸಿದ್ದ ಕೋರ್ಟ್ ಹೇಮಾರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

    ನಿನ್ನೆ ನಡೆದ ವಿಚಾರಣೆ ಹೇಗಿತ್ತು?

    ನಿನ್ನೆ ಹೆಚ್ಚಿನ ವಿಚಾರಣೆಗಾಗಿ ಹೇಮಾರನ್ನು ಸಿಸಿಬಿ ವಶಕ್ಕೆ ನೀಡುವಂತೆ ಕೋರ್ಟ್‌ಗೆ ಸಿಸಿಬಿ ಪರ ವಕೀಲರು ಮನವಿ ಮಾಡಿದ್ದರು. ಪಬ್ಲಿಕ್ ಪ್ರಾಸಿಕ್ಯೂಟರ್ ವಾದಕ್ಕೆ ಹೇಮಾ ಪರ ವಕೀಲರ ಆಕ್ಷೇಪ ವ್ಯಕ್ತಪಡಿಸಿದರು. ಸಂತೋಷ ಎಂಬ ಖಾಸಗಿ ಆಸ್ಪತ್ರೆಯಲ್ಲಿ ಬ್ಲಡ್ ಟೆಸ್ಟ್ ಮಾಡಲಾಗಿದೆ. ನ್ಯಾಯಾಲಯ ಖಾಸಗಿ ಆಸ್ಪತ್ರೆ ವರದಿಗೆ ಮನ್ನಣೆ ನೀಡಬಾರದು. ಎಫ್‌ಎಸ್‌ಎಲ್ ವರದಿ ಇನ್ನೂ ಬಂದಿಲ್ಲ. ಹಾಗಾಗಿ ಸಿಸಿಬಿ ಕಸ್ಟಡಿಗೆ ನೀಡಬಾರದು ಎಂದು ನ್ಯಾಯಾಧೀಶರಿಗೆ ಮನವಿ ಮಾಡಿದರು ಹೇಮಾ ಪರ ವಕೀಲರು. ವಾದ ಪ್ರತಿವಾದ ಅಲಿಸಿದ ನ್ಯಾಯಾಧೀಶರು ಮಧ್ಯಾಹ್ನ ಮೂರು ಗಂಟೆಗೆ ಆದೇಶ ಕಾಯ್ದಿರಿಸಿದ್ದರು.

    ಮೂರು ಗಂಟೆಯ ನಂತರ ಆನೇಕಲ್ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಎ.ಎಸ್ ಸಲ್ಮಾ ಅವರು 24 ಗಂಟೆಗಳ ಕಾಲ ಸಿಸಿಬಿ ವಶಕ್ಕೆ ನೀಡಿ ಎಂದು ಆದೇಶ ಹೊರಡಿಸಿದರು. ಸಿಸಿಬಿ ವಶಕ್ಕೆ ಪಡೆದ ನಂತರ ಕೋರ್ಟ್‌ನಿಂದ ಹೊರಬಂದ ವೇಳೆ ನ್ಯಾಯ ಸಿಗುವ ಭರವಸೆ ವ್ಯಕ್ತಪಡಿಸಿದರು ಹೇಮಾ ಮತ್ತು ಆಕೆಯ ವಕೀಲ ಪಟಾಪಟ್ ಪ್ರಕಾಶ್. ಬಳಿಕ ವಿಶೇಷ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಅರ್ಜಿ ಹಾಕಲಾಗುವುದು ಎಂದು ತಿಳಿಸಿದ್ದರು.

  • ಡ್ರಗ್ಸ್ ಪ್ರಕರಣ: ನಟಿ ಹೇಮಾರನ್ನು ಸಿಸಿಬಿ ವಶಕ್ಕೆ ನೀಡಿದ ಕೋರ್ಟ್

    ಡ್ರಗ್ಸ್ ಪ್ರಕರಣ: ನಟಿ ಹೇಮಾರನ್ನು ಸಿಸಿಬಿ ವಶಕ್ಕೆ ನೀಡಿದ ಕೋರ್ಟ್

    ರೇವ್ ಪಾರ್ಟಿಯಲ್ಲಿ (Rave Party) ಡ್ರಗ್ಸ್ (Drugs) ಸೇವಿಸಿದ್ದಾರೆ ಎಂದು ಆರೋಪಿಸಿ ಬಂಧನಕ್ಕೆ ಒಳಗಾಗಿರೋ ನಟಿ ಹೇಮಾರನ್ನು (Hema) ಇಂದು ಸಿಸಿಬಿ ಅಧಿಕಾರಿಗಳು ಆನೇಕಲ್ ಕೋರ್ಟ್‌ಗೆ (Court) ನಟಿ ಹಾಜರು ಪಡಿಸಿದ್ದರು. ಹೆಚ್ಚುವರಿ ವಿಚಾರಣೆಗಾಗಿ ಸಿಸಿಬಿ ವಶಕ್ಕೆ ನೀಡಬೇಕು ಎಂದು ಅಧಿಕಾರಿಗಳು ಕೋರ್ಟ್‍ಗೆ ಮನವಿ ಮಾಡಿದ್ದರು. ವಾದ ಆಲಿಸಿದ ನಾಲ್ಕನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು 24 ಗಂಟೆಗಳ ಕಾಲ ಸಿಸಿಬಿ ವಶಕ್ಕೆ ಹೇಮಾರನ್ನು ಕೊಟ್ಟಿದೆ.

    ಕೋರ್ಟಿಗೆ ಬರುತ್ತಿದ್ದಂತೆಯೇ ಮತ್ತೆ ಮಾಧ್ಯಮಗಳ ಮೇಲೆ ಹೇಮಾ ಗರಂ ಆದರು. ‘ನಾನು ಮರ್ಡರ್ ಮಾಡಿದ್ದೀನಾ. ಅರ್ಧ ರಾತ್ರಿಯಲ್ಲಿ ಕರ್ಕೊಂಡು ಹೋಗಿ ಕಾಡಿನಲ್ಲಿ ಸಹಿ ಮಾಡಿಕೊಂಡಿಸಿಕೊಂಡಿದ್ದಾರೆ. ನಾನು ಏನು ಮಾಡಿದ್ದೀನಿ. ನನ್ನನ್ನು ನಡುರಾತ್ರಿಯಲ್ಲಿ ಯಾಕೆ ಹಂಗೆ ಕರೆದುಕೊಂಡು ಹೋದ್ರು. ಇಲ್ಲಿಯ ವರೆಗೆ ನೀವು ಮಾಧ್ಯಮದವರು ಮಾತನಾಡಿಲ್ಲ. ಈಗಲಾದ್ರು ಮಾತನಾಡಿ’ ಎಂದು ಗರಂ ಆದರು.

    ಹೆಚ್ಚಿನ ವಿಚಾರಣೆಗಾಗಿ ಹೇಮಾರನ್ನು ಸಿಸಿಬಿ ವಶಕ್ಕೆ ನೀಡುವಂತೆ ಕೋರ್ಟಿಗೆ ಸಿಸಿಬಿ ಪರ ವಕೀಲರು ಮನವಿ ಮಾಡಿಕೊಂಡರು. ಪಬ್ಲಿಕ್‌ ಪ್ರಾಸಿಕ್ಯೂಟರ್‌ ವಾದಕ್ಕೆ ಹೇಮಾ ಪರ ವಕೀಲರ ಆಕ್ಷೇಪ ವ್ಯಕ್ತಪಡಿಸಿದರು. ಸಂತೋಷ ಎಂಬ ಖಾಸಗಿ ಆಸ್ಪತ್ರೆಯಲ್ಲಿ ಬ್ಲಡ್ ಟೆಸ್ಟ್ ಮಾಡಲಾಗಿದೆ. ನ್ಯಾಯಾಲಯ ಖಾಸಗಿ ಆಸ್ಪತ್ರೆ ವರದಿಗೆ ಮನ್ನಣೆ ನೀಡಬಾರದು. ಎಫ್ಎಸ್ಎಲ್ ವರದಿ ಇನ್ನೂ ಬಂದಿಲ್ಲ. ಹಾಗಾಗಿ ಸಿಸಿಬಿ ಕಸ್ಟಡಿಗೆ ನೀಡಬಾರದು ಎಂದು ನ್ಯಾಯಾಧೀಶರಿಗೆ ಮನವಿ ಮಾಡಿದರು ಹೇಮಾ ಪರ ವಕೀಲರು.  ವಾದ ಪ್ರತಿವಾದ ಅಲಿಸಿದ ನ್ಯಾಯಾಧೀಶರು ಮಧ್ಯಾಹ್ನ ಮೂರು ಗಂಟೆಗೆ ಆದೇಶ ಕಾಯ್ದಿರಿಸಿದ್ದರು.

    ಮೂರು ಗಂಟೆಯ ನಂತರ ಆನೇಕಲ್ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಎ.ಎಸ್ ಸಲ್ಮಾ ಅವರು 24 ಗಂಟೆಗಳ ಕಾಲ ಸಿಸಿಬಿ ವಶಕ್ಕೆ ನೀಡಿ ಆದೇಶ ಹೊರಡಿಸಿದರು. ಸಿಸಿಬಿ ವಶಕ್ಕೆ ಪಡೆದ ನಂತರ ಕೋರ್ಟ್‌ನಿಂದ ಹೊರಬಂದ ವೇಳೆ ನ್ಯಾಯ ಸಿಗುವ ಭರವಸೆ ವ್ಯಕ್ತಪಡಿಸಿದರು ಹೇಮಾ ಮತ್ತು ಆಕೆಯ ವಕೀಲ ಪಟಾಪಟ್ ಪ್ರಕಾಶ್. ಬಳಿಕ ವಿಶೇಷ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಅರ್ಜಿ ಹಾಕಲಾಗುವುದು ಎಂದರು.

     

    ಹೇಮಾರನ್ನು ನಾಳೆ ಸಂಜೆ 6 ಗಂಟೆ ವರೆಗೆ ಹೆಚ್ಚಿನ ವಿಚಾರಣೆಗಾಗಿ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ. ನಾಳೆ ಸಂಜೆ 6 ಗಂಟೆ ವೇಳೆಗೆ ಮತ್ತೆ ನ್ಯಾಯಾಲಯದ ಮುಂದೆ  ಹಾಜರುಪಡಿಸಲಿದ್ದಾರೆ ಸಿಸಿಬಿ ಪೊಲೀಸರು. ಹೇಮಾರನ್ನು ಕೋರ್ಟಿಗೆ ಹಾಜರು ಪಡಿಸಿದಾಗ  ಹೈದ್ರಾಬಾದ್‌ನಿಂದ ಹೇಮಾ ಪುತ್ರಿ ಮತ್ತು ಕುಟುಂಬ ಆಗಮಿಸಿತ್ತು.  ಕೋರ್ಟ್ ಹಾಲ್‌ನಲ್ಲಿ ನಿಂತು ಪುತ್ರಿ ಮತ್ತು ಕುಟುಂಬಸ್ಥರು ಕಾಯುತ್ತಿದ್ದರು.

  • ರೇವ್ ಪಾರ್ಟಿ ಪ್ರಕರಣ – ನಟಿ ಹೇಮಾಗೆ ಜೂ.14ರವರೆಗೆ ನ್ಯಾಯಾಂಗ ಬಂಧನ

    ರೇವ್ ಪಾರ್ಟಿ ಪ್ರಕರಣ – ನಟಿ ಹೇಮಾಗೆ ಜೂ.14ರವರೆಗೆ ನ್ಯಾಯಾಂಗ ಬಂಧನ

    ಬೆಂಗಳೂರು: ರೇವ್ ಪಾರ್ಟಿ (Rave Party) ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ದಿಕ್ಕು ತಪ್ಪಿಸುವ ಯತ್ನ ಮಾಡಿದ್ದ ಆರೋಪದ ಮೇಲೆ ತೆಲಗು ನಟಿ ಹೇಮಾ (Hema) ಅವರನ್ನು ಸಿಸಿಬಿ ಪೊಲೀಸರು (CCB) ಬಂಧಿಸಿದ್ದಾರೆ. ಬಂಧನಕ್ಕೊಳಗಾದ ನಟಿಯನ್ನು ಜೂ.14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನಾಲ್ಕನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಮ್ಎಫ್‌ಸಿ ನ್ಯಾಯಾಧೀಶರಾದ ಸಲ್ಮಾ ಎ.ಎಸ್ ಅವರಿದ್ದ ಪೀಠ ನ್ಯಾಂಯಾಂಗ ಬಂಧನಕ್ಕೆ ಆದೇಶಿಸಿದೆ.

    ಇತ್ತೀಚೆಗೆ ಡ್ರಗ್ಸ್ ಸೇವನೆಗೆ ಸಂಬಂಧಿಸಿದಂತೆ ಹೇಮಾ ರಿಪೋರ್ಟ್ ಪಾಸಿಟೀವ್ ಬಂದಿತ್ತು. ಈ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮೊದಲು ವಿಚಾರಣೆಗೆ ಹಾಜರಾಗುವಂತೆ ಅವರಿಗೆ ನೋಟಿಸ್ ನೀಡಲಾಗಿತ್ತು. ಆದರೆ ಅವರು ಅನಾರೋಗ್ಯದ ನೆಪ ಹೇಳಿ ವಿಚಾರಣೆಗೆ ಹಾಜರಾಗದೇ ಸಮಯಾವಕಾಶ ಕೇಳಿದ್ದರು. ಹಾಜರಾಗದ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು 2ನೇ ನೋಟಿಸ್ ಕೂಡ ನೀಡಿದ್ದರು.

    ಇಂದು ಸಂಜೆ 4 ಗಂಟೆಗೆ ಬೆಂಗಳೂರಿಗೆ ಆಗಮಿಸಿರುವ ಅವರು ಬುರ್ಖಾ ತೊಟ್ಟು ಅಧಿಕಾರಿಗಳ ಮುಂದೆ ಹಾಜರಾಗಿದ್ದರು. ಈ ವೇಳೆ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

    ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಅವರು ಸಮರ್ಪಕ ಉತ್ತರ ನೀಡಿಲ್ಲ. ಅವರನ್ನು ಕೆಸಿ ಜನರಲ್ ಆಸ್ಪತ್ರೆಗೆ ಮೆಡಿಕಲ್ ಟೆಸ್ಟ್‌ಗಾಗಿ ಪೊಲೀಸರು ಕರೆದೊಯ್ದಿದ್ದಾರೆ. ವೈದ್ಯರು ನಟಿ ಹೇಮಾ ಅವರ ಹೇರ್ ಸ್ಯಾಂಪಲ್ ಸಂಗ್ರಹಿಸಿದ್ದಾರೆ. ಅಲ್ಲದೇ ಅವರಿಗೆ ಜ್ವರ ಇರುವ ಹಿನ್ನೆಲೆ ಚಿಕಿತ್ಸೆ ನೀಡಿದ್ದಾರೆ.

  • Breaking- ಡ್ರಗ್ಸ್ ಪಾರ್ಟಿ ಪ್ರಕರಣ : ಸಿಸಿಬಿ ಕಚೇರಿಗೆ ಹಾಜರಾದ ನಟಿ ಹೇಮಾ

    Breaking- ಡ್ರಗ್ಸ್ ಪಾರ್ಟಿ ಪ್ರಕರಣ : ಸಿಸಿಬಿ ಕಚೇರಿಗೆ ಹಾಜರಾದ ನಟಿ ಹೇಮಾ

    ಬೆಂಗಳೂರಿನ ಡ್ರಗ್ಸ್ ಪಾರ್ಟಿ (Drugs) ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಹೇಮಾ (Hema) ಇಂದು ಬೆಂಗಳೂರಿನ ಸಿಸಿಬಿ (CCB) ಕಚೇರಿಗೆ ವಿಚಾರಣೆಗಾಗಿ (Inquiry) ಹಾಜರಾಗಿದ್ದಾರೆ. ಈ ಮೊದಲು ಹಾಜರಾಗುವಂತೆ ಅವರಿಗೆ ಮೊದಲ ನೋಟಿಸ್ ನೀಡಲಾಗಿತ್ತು. ಆದರೆ, ಅವರು ಅಂದು ಹಾಜರಾಗದೇ ಸಮಯಾವಕಾಶ ಕೇಳಿದ್ದರು.

    ಹೇಮಾ ಹಾಜರಾಗದ ಹಿನ್ನೆಲೆಯಲ್ಲಿ 2ನೇ ನೋಟಿಸ್ ಕೂಡ ನೀಡಿದ್ದರು ಸಿಸಿಬಿ ಅಧಿಕಾರಿಗಳು. ಇಂದು ಸಂಜೆ 4 ಗಂಟೆಗೆ ಬೆಂಗಳೂರಿಗೆ ಆಗಮಿಸಿರುವ ಹೇಮಾ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ. ಹೇಮಾ ಅವರ ವಿಚಾರಣೆಯನ್ನು ಅಧಿಕಾರಿಗಳು ಸಿಸಿಬಿ ಕಚೇರಿಯಲ್ಲಿ ಮಾಡುತ್ತಿದ್ದಾರೆ.

     

    ಮೊನ್ನೆಯಷ್ಟೇ ಡ್ರಗ್ಸ್ ಸೇವನೆಗೆ ಸಂಬಂಧಿಸಿದಂತೆ ಹೇಮಾ ರಿಪೋರ್ಟ್ ಪಾಸಿಟೀವ್ ಬಂದಿತ್ತು. ಆನಂತರ ಮೊದಲ ನೋಟಿಸ್  ನೀಡಲಾಗಿತ್ತು. ಅನಾರೋಗ್ಯದ ಕಾರಣಕೊಟ್ಟು  ಕಾಲಾವಕಾಶ ಕೇಳಿದ್ದರು ನಟಿ ಹೇಮಾ. ಆನಂತರ 2ನೇ ನೋಟಿಸ್ ನೀಡಲಾಗಿತ್ತು.  ಎರಡನೇ ನೋಟಿಸ್ ಗೆ ಸಿಸಿಬಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

  • ರೇವ್ ಪಾರ್ಟಿ ಪ್ರಕರಣ- ನಟಿ ಹೇಮಾಗೆ ಸಿಸಿಬಿ ನೋಟಿಸ್

    ರೇವ್ ಪಾರ್ಟಿ ಪ್ರಕರಣ- ನಟಿ ಹೇಮಾಗೆ ಸಿಸಿಬಿ ನೋಟಿಸ್

    ನಾನು ಹೈದರಾಬಾದ್‍ನಲ್ಲಿ ಇದ್ದೇನೆ ಎಂದು ವೀಡಿಯೋ ಹೇಳಿಕೆ ಬಿಡುಗಡೆ ಮಾಡುವ ಮೂಲಕ ಹೈಡ್ರಾಮ ಸೃಷ್ಟಿಸಿದ್ದ ತೆಲುಗು ನಟಿ ಹೇಮಾಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ.

    ನಗರದ ಎಲೆಕ್ಟ್ರಾನಿಕ್ ಸಿಟಿಯ ಫಾರ್ಮ್‍ಹೌಸ್‍ನಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 27ಕ್ಕೆ ವಿಚಾರಣೆಗೆ ಬರುವಂತೆ ಹೇಮಾ ಸೇರಿ ಐವರಿಗೆ ಸಿಸಿಬಿ ನೋಟಿಸ್ ಜಾರಿ ಮಾಡಿದೆ. ಇದನ್ನೂ ಓದಿ: ಫಾರ್ಮ್‍ಹೌಸ್‍ನಲ್ಲಿ ರೇವ್ ಪಾರ್ಟಿ ಪ್ರಕರಣ- ಐವರ ಬ್ಯಾಂಕ್ ಅಕೌಂಟ್ ಸೀಜ್

    ರೇವ್ ಪಾರ್ಟಿ ವಿಚಾರ ಬಯಲಾಗುತ್ತಿದ್ದಂತೆಯೇ ನಟಿ ಹೇಮಾ ಅವರು ವೀಡಿಯೋ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದರು. ವೀಡಿಯೋದಲ್ಲಿ ನಾನು ಹೈದರಾಬಾದ್‍ನಲ್ಲಿ ಇರುವುದಾಗಿ ಹೈಡ್ರಾಮಾ ಮಾಡಿದ್ದರು. ಇತ್ತ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರು ಹೇಮಾ ಅವರು ಡ್ರಗ್ಸ್ ಪಾರ್ಟಿಯಲ್ಲಿ ಇದ್ದರು ಎಂಬುದಾಗಿ ಸ್ಪಷ್ಟನೆ ನೀಡಿದ್ದರು.

    ಹೇಮಾ ಅವರ ರಕ್ತದ ಮಾದರಿ ತೆಗೆದುಕೊಂಡು ಅವರನ್ನು ಕಳುಹಿಸಲಾಗಿದೆ. ಮೆಡಿಕಲ್ ಟೆಸ್ಟ್ ಬಳಿಕ ಸ್ಟೇಷನ್ ಬೇಲ್ ಮೇಲೆ ಹೇಮಾರನ್ನು ಬಿಡುಗಡೆ ಮಾಡಲಾಗಿದೆ ಎಂದು ದಯಾನಂದ್ ಹೇಳಿದ್ದರು. ಅಲ್ಲದೇ ಪಾರ್ಟಿಯಲ್ಲಿ ಭಾಗವಹಿಸಿದ್ದ 103 ಮಂದಿಯ ಪೈಕಿ 86 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಬಂದಿತ್ತು.

    73 ಮಂದಿ ಪುರುಷರಲ್ಲಿ 59 ಮಂದಿ ಹಾಗೂ 30 ಮಂದಿ ಯುವತಿಯರ ಪೈಕಿ 27 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಎಂದು ಬಂದಿತ್ತು. ಈ ಮೂಲಕ ಪಾರ್ಟಿಯಲ್ಲಿ ಸೇರಿದ್ದ ಬಹುತೇಕ ಮಂದಿ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿತ್ತು.

  • ಫಾರ್ಮ್‍ಹೌಸ್‍ನಲ್ಲಿ ರೇವ್ ಪಾರ್ಟಿ ಪ್ರಕರಣ- ಐವರ ಬ್ಯಾಂಕ್ ಅಕೌಂಟ್ ಸೀಜ್

    ಫಾರ್ಮ್‍ಹೌಸ್‍ನಲ್ಲಿ ರೇವ್ ಪಾರ್ಟಿ ಪ್ರಕರಣ- ಐವರ ಬ್ಯಾಂಕ್ ಅಕೌಂಟ್ ಸೀಜ್

    ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಫಾರ್ಮ್‍ಹೌಸ್‍ನಲ್ಲಿ ನಡೆದ ರೇವ್ ಪಾರ್ಟಿ (Rave Party) ಪ್ರಕರಣದ ತನಿಖೆ ಚುರುಕುಗೊಂಡಿದೆ.

    ಬಂಧಿತರ ಐವರು ಆರೋಪಿಗಳ ಅಕೌಂಟ್‍ನಲ್ಲಿದ್ದ ಹಣವನ್ನು ಸಿಸಿಬಿ ಪೊಲೀಸರು (CCB Police) ಸೀಜ್ ಮಾಡಿದ್ದಾರೆ. ಆರೋಪಿಗಳ ಅಕೌಂಟ್‍ನಲ್ಲಿ ಲಕ್ಷಲಕ್ಷ ಹಣ ಪತ್ತೆಯಾಗಿತ್ತು. ಹೀಗಾಗಿ ಸಿಸಿಬಿ ಅಧಿಕಾರಿಗಳು ಎಲ್ಲಾ ಅಕೌಂಟ್‍ಗಳನ್ನ ಫ್ರೀಜ್ ಮಾಡಿಸಿದ್ದಾರೆ. ಅಲ್ಲದೆ ಆರೋಪಿಗಳ ಮೊಬೈಲ್ ಮಿರರ್ ಇಮೇಜ್ ಮಾಡಿಸಲು ಸಿದ್ಧತೆ ನಡೆಸುತ್ತಿದ್ದಾರೆ.

    ಬೇರೆ ಎಲ್ಲೆಲ್ಲಿ ರೇವ್ ಪಾರ್ಟಿ ಮಾಡಿಸಿದ್ರು..? ಯಾರೆಲ್ಲ ಭಾಗಿಯಾಗಿದ್ರು..?, ರೇವ್ ಪಾರ್ಟಿಗೆ ಎಷ್ಟು ಹಣ ವಸೂಲಿ ಮಾಡ್ತಿದ್ರು..? ಡ್ರಗ್ಸ್ ಎಲ್ಲಿಂದ ಬರ್ತಿತ್ತು..?, ಎಲ್ಲ ಮಾಹಿತಿ ಪತ್ತೆ ಮಾಡಲು ಮೊಬೈಲ್ ಮಿರರ್ ಇಮೇಜಿಂಗ್ ಮಾಡಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅಲ್ಲದೇ ಐವರು ಆರೋಪಿಗಳನ್ನ ಬಾಡಿ ವಾರೆಂಟ್ ಮೇಲೆ ಕಸ್ಟಡಿಗೆ ಪಡೆಯಲು ಕೂಡ ತಯಾರಿ ನಡೆಯುತ್ತಿದೆ.

    ಸೋಮವಾರ ಕೋರ್ಟ್ ಗೆ ಅರ್ಜಿ ಹಾಕಿ ಆರೋಪಿಗಳನ್ನ ಕಸ್ಟಡಿಗೆ ಪಡೆಯಲು ಸಿಸಿಬಿ ಹಾಗೂ ಆರೋಪಿಗಳ ವಿಚಾರಣೆ ಬಳಿಕ ನಟಿ ಹೇಮ ಸೆರಿದಂತೆ ಪಾರ್ಟಿಯಲ್ಲಿದ್ದವರಿಗೆ ನೋಟಿಸ್ ನೀಡಲು ಸಿದ್ಧತೆ ಮಾಡಿಕೊಂಡಿದೆ.

    ವಾಸು ಎಂಬಾತನ ಹುಟ್ಟುಹಬ್ಬದ ಅಂಗವಾಗಿ Sunset To Sun Rise victory ಶೀರ್ಷಿಕೆಯಲ್ಲಿ ರೇವ್ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಪಾರ್ಟಿಯಲ್ಲಿ ನೂರರಿಂದ ನೂರೈವತ್ತು ಮಂದಿ ಜಮಾವಣೆಗೊಂಡಿದ್ದರು ಎನ್ನಲಾಗಿದೆ. ರೇವ್ ಪಾರ್ಟಿಯಲ್ಲಿ ದೊಡ್ಡ ಮಟ್ಟದ ಮಾದಕ ವಸ್ತು ಬಳಕೆ ಮಾಡಿರುವ ಸುಳಿವು ಸಿಕ್ಕಿದೆ. ಎಂಡಿಎಂಎ, ಕೊಕೇನ್, ಹೈಡೋಗಾಂಜಾ ಪತ್ತೆಯಾಗಿತ್ತು.

    ಪಾರ್ಟಿಯಲ್ಲಿ ಭಾಗಿಯಾಗಿದ್ದ 73 ಮಂದಿ ಪುರುಷರಲ್ಲಿ 59 ಮಂದಿ ಹಾಗೂ 30 ಮಂದಿ ಯುವತಿಯರ ಪೈಕಿ 27 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಎಂದು ಬಂದಿತ್ತು. ಈ ಮೂಲಕ ಪಾರ್ಟಿಯಲ್ಲಿ ಸೇರಿದ್ದ ಬಹುತೇಕ ಮಂದಿ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿತ್ತು. ತೆಲುಗು ಕಿರುತೆರೆ ನಟಿ ಹೇಮಾ(ಕೃಷ್ಣವೇಣಿ) ಪಾಲ್ಗೊಂಡಿರುವುದು ಕೂಡ ಬಯಲಾಗಿತ್ತು.