Tag: ravi

  • ‘ಗದಾಧಾರಿ ಹನುಮಾನ್’ ಶೀರ್ಷಿಕೆ ರಿಲೀಸ್: ರವಿ ಚಿತ್ರದ ನಾಯಕ

    ‘ಗದಾಧಾರಿ ಹನುಮಾನ್’ ಶೀರ್ಷಿಕೆ ರಿಲೀಸ್: ರವಿ ಚಿತ್ರದ ನಾಯಕ

    ದೀರ್ಘಕಾಲದ ಗ್ಯಾಪ್ ನಂತರ ಹನುಮಾನ್ ಕುರಿತಾದ ಚಿತ್ರವೊಂದು ಸಿದ್ದಗೊಳ್ಳುತ್ತಿದೆ. ಹಾಗಂತ ಇದು ಭಕ್ತಿಪ್ರಧಾನ ಸಿನಿಮಾವಾಗಿರುವುದಿಲ್ಲ. ಕಳೆದವರ್ಷ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಗೊಂಡು ಎಲ್ಲರ ಮನಸೆಳೆದ ’ಹನುಮಾನ್’ದಂತೆ ಇರುತ್ತದೆ. ಪ್ರಚಾರದ ಮೊದಲ ಹಂತವಾಗಿ ’ಗದಾಧಾರಿ ಹನುಮಾನ್’ (Gadadhari Hanuman) ಹೆಸರಿನ ಪೋಸ್ಟರ್ ಬಿಡುಗಡೆಯಾಗಿದ್ದು, ಕನ್ನಡ, ತೆಲುಗು ಮತ್ತು ಹಿಂದಿ ಭಾಷೆಯಲ್ಲಿ ಸಿದ್ದಗೊಳ್ಳುತ್ತಿದೆ.

    ವಿರಭ್ ಸ್ಟುಡಿಯೋಸ್ ಬ್ಯಾನರ್‌ನಲ್ಲಿ ಬಸವರಾಜ್ ಹುರಕಡ್ಲಿ ಮತ್ತು ರೇಣುಕ ಪ್ರಸಾದ್.ಕೆ.ಆರ್ ಜಂಟಿಯಾಗಿ ಬಂಡವಾಳ ಹೂಡುತ್ತಿರುವುದು ಹೊಸ ಅನುಭವ. ಈ ಪೈಕಿ ಬಸವರಾಜ್ ಹುರಕಡ್ಲಿ ಮಹತ್ವದ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ರಚನೆ, ನಿರ್ದೇಶನ ರೋಹಿತ್ ಕೊಲ್ಲಿ (Rohit Kolli) ಅವರದಾಗಿದೆ.

    ‘ತಾರಕಾಸುರ’ ಖ್ಯಾತಿಯ ರವಿ (Ravi) ನಾಲ್ಕನೇ ಬಾರಿ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಹೊಸ ಪ್ರತಿಭೆ ಹರ್ಷಿತಾ ನಾಯಕಿ. ಉಳಿದಂತೆ ಕಲ್ಯಾಣ್ ಕೃಷ್ಣ, ರಮೇಶ್ ಪಂಡಿತ್, ಸುನಂದ ಕಲ್ಬುರ್ಗಿ, ನಾಗೇಶ್ ಮಯ್ಯ, ಶಿವಪ್ಪ, ಅರ್ಜುನ್ ಜೋಯಸ್, ಭೀಷ್ಮ, ಲೋಕೇಶ್ ನಟಿಸುತ್ತಿದ್ದಾರೆ.

    ಸಂಗೀತ ಜ್ಯೂಡಾ ಸ್ಯಾಂಡಿ, ಛಾಯಾಗ್ರಹಣ ಅರುಣ್ ಗೌಡ, ಸಂಕಲನ ಸಿ.ಎನ್.ಕಿಶೋರ್, ಸಾಹಸ ಟೈಗರ್ ಶಿವ, ಕಲರಿಸ್ಟ್ ಚೇತನ್.ಎ.ಸಿ ನಿರ್ವಹಿಸುತ್ತಿದ್ದಾರೆ. ಬೆಂಗಳೂರು, ಚಿತ್ರದುರ್ಗ, ಗಂಗಾವತಿ, ಹಂಪಿ, ಅಂಜನಾದ್ರಿಬೆಟ್ಟ, ಕಿತ್ತೂರು, ಹೊನ್ನಾಪುರ್, ದಾಂಡೇಲಿ ಸುಂದರ ತಾಣಗಳಲ್ಲಿ ನಾಲ್ಕು ಹಂತಗಳಲ್ಲಿ ಚಿತ್ರೀಕರಣ ನಡೆಸಲು ಯೋಜನೆ ರೂಪಿಸಲಾಗಿದೆ. ಈಗಾಗಲೇ ಎರಡು ಹಂತದ ಶೂಟಿಂಗ್ ಮುಗಿದಿದ್ದು, ಸದ್ಯದಲ್ಲೆ ಬಾಕಿ ಭಾಗದ ದೃಶ್ಯಗಳನ್ನು ಸೆರೆಹಿಡಿಯಲು ತಂಡವು ಸಿದ್ದತೆ ಮಾಡಿಕೊಳ್ಳುತ್ತಿದೆ.

  • ಚಿತ್ರಹಿಂಸೆ ನೀಡಿ ಕೊಲೆಗೈದು ಸ್ವಾಮಿ ಮೈಮೇಲಿದ್ದ ಚಿನ್ನಾಭರಣವನ್ನೂ ದೋಚಿದ್ದ ‘Devil’ ಗ್ಯಾಂಗ್!

    ಚಿತ್ರಹಿಂಸೆ ನೀಡಿ ಕೊಲೆಗೈದು ಸ್ವಾಮಿ ಮೈಮೇಲಿದ್ದ ಚಿನ್ನಾಭರಣವನ್ನೂ ದೋಚಿದ್ದ ‘Devil’ ಗ್ಯಾಂಗ್!

    – ತನಿಖೆ ವೇಳೆ ಸ್ಫೋಟಕ ಮಾಹಿತಿ ಔಟ್

    ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ‘ಡೆವಿಲ್’ ಗ್ಯಾಂಗ್ ಕರಾಳ ಮುಖಗಳು ಒಂದೊಂದಾಗಿಯೇ ರಿವೀಲ್ ಆಗುತ್ತಿದೆ. ಬಡಪಾಯಿಯನ್ನು ಚಿತ್ರ-ವಿಚಿತ್ರವಾಗಿ ಹಿಂಸೆ ನೀಡಿ ಕೊಲೆ ಮಾಡಿದ್ದು ಮಾತ್ರವಲ್ಲದೇ ಮೈಮೇಲಿದ್ದ ಒಡವೆಯನ್ನು ಕೂಡ ದೋಚಿರುವುದು ತನಿಖೆಯ ವೇಳೆ ಬಯಲಾಗಿದೆ.

    ರೇಣುಕಾಸ್ವಾಮಿ ಬರ್ಬರ ಕೊಲೆಯ ಬಳಿಕ ಅವರ ಮೈಮೇಲಿದ್ದ ಚಿನ್ನಾಭರಣವನ್ನು ಕಳವು ಮಾಡಲಾಗಿದೆ. ಪೊಲೀಸರ ತನಿಖೆ ವೇಳೆ ಈ ಸ್ಫೋಟಕ ಮಾಹಿತಿಯನ್ನು ಆರೋಪಿ ರವಿ ಬಾಯ್ಬಿಟ್ಟಿದ್ದಾನೆ. ರೇಣುಕಾಸ್ವಾಮಿ ಮೈಮೇಲಿದ್ದ ಚಿನ್ನವನ್ನು ಆರೋಪಿ ಜಗ್ಗ ದೋಚಿದ್ದಾನೆ ಎಂದು ಪೊಲೀಸರ ಮುಂದೆ ರವಿ ಸತ್ಯ ಕಕ್ಕಿದ್ದಾನೆ.

    ಸುಮ್ಮನಹಳ್ಳಿ ಬಳಿ ರೇಣುಕಾಸ್ವಾಮಿ ಶವವನ್ನ ಎಸೆದರು. ಬಳಿಕ ಪೊಲೀಸ್ ಠಾಣೆಗೆ ಶರಣಾಗುವಂತೆ ಹೇಳಿದರು. ಆದರೆ ಭಯದಿಂದ ಠಾಣೆಗೆ ಹೋಗದೆ ಕಾರಿನಲ್ಲಿ ದುರ್ಗಕ್ಕೆ ಬಂದೆ. ಕಾರಿನಲ್ಲಿ ಜಗ್ಗನ ಜೊತೆ ಚಿತ್ರದುರ್ಗಕ್ಕೆ ಬಂದುಬಿಟ್ಟೆ. ಆರೋಪಿ ಜಗ್ಗ ಚಿನ್ನಾಭರಣ ತೆಗೆದುಕೊಂಡು ಬಂದಿದ್ದ ಎಂದು ರವಿ ಹೇಳಿದ್ದಾನೆ. ಇದನ್ನೂ ಓದಿ: ಮೈಸೂರಿನಲ್ಲಿ `ದಾಸ’ ತಂಗಿದ್ದ ಹೊಟೇಲ್, ಇತರೆಡೆ ಮಹಜರ್- ಡಿಫೆಂಡರ್ ಕಾರಿಗೆ ಬರುತ್ತಾ ಕಂಟಕ?

    ಘಟನೆ ವಿವರ: ಜೂನ್ 8 ರಂದು ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿ ಬೆಂಗಳೂರಿಗೆ ಕರೆತರಲಾಗಿತ್ತು. ಬಳಿಕ ಬೆಂಗಳೂರಿನ ಪಟ್ಟಣಗೆರೆ ಶೆಡ್‍ನಲ್ಲಿ ರೇಣುಕಾಸ್ವಾಮಿಗೆ ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿತ್ತು. ಹತ್ಯೆಯ ನಂತರ ಶವವನ್ನು ಸುಮ್ಮನಹಳ್ಳಿ ಮೋರಿಗೆ ಬಿಸಾಕಿ ಪಾತಕಿಗಳು ತೆರಳಿದ್ದಾರೆ. ಇತ್ತ ಮೂವರು ಹಣದ ವಿಚಾರಕ್ಕೆ ಕೊಲೆ ನಡೆದಿರುವುದಾಗಿ ಕಾಮಾಕ್ಷಿಪಾಳ್ಯ ಪೊಲೀಸರ ಮುಂದೆ ಶರಣಾಗಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ಪೊಲೀಸರಿಗೆ ಸ್ಟಾರ್ ನಟ ಭಾಗಿಯಾಗಿರುವುದು ಗಮನಕ್ಕೆ ಬಂದಿದೆ.

    ಕೂಡಲೇ ಎಸಿಪಿ ಚಂದನ್ ಮತ್ತು ಇನ್ಸ್ ಪೆಕ್ಟರ್ ಗಿರೀಶ್ ನಾಯ್ಕ್ ತಂಡ ಮೈಸೂರಗೆ ತೆರಳಿ ದರ್ಶನ್‍ನನ್ನು ಅರೆಸ್ಟ್ ಮಾಡಿ ಬೆಂಗಳೂರಿಗೆ ಕರೆತಂದಿದ್ದಾರೆ. ಇತ್ತ ದರ್ಶನ್ ಗೆಳತಿ ಪವಿತ್ರಾ ಗೌಡರನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ಸದ್ಯ ಪ್ರಕರಣ ಸಂಬಂಧ ಇದುವರೆಗೆ 17 ಮಂದಿಯನ್ನು ಪೊಲೀಸರು ಬಂಧಿಸಿದ್ದು, ಸ್ಥಳ ಮಹಜರು ಜೊತೆಗೆ ತನಿಖೆ ನಡೆಸುತ್ತಿದ್ದಾರೆ.

  • ‘ಕೈಲಾಸ ಕಾಸಿದ್ರೆ’ ಟ್ರೈಲರ್ ಔಟ್: ನಶಾ ಜಗತ್ತಿನ ಝಗಮಗ ಅನಾವರಣ

    ‘ಕೈಲಾಸ ಕಾಸಿದ್ರೆ’ ಟ್ರೈಲರ್ ಔಟ್: ನಶಾ ಜಗತ್ತಿನ ಝಗಮಗ ಅನಾವರಣ

    ಹಿಂದೆ ಬಿಡುಗಡೆಯಾಗಿದ್ದ ಟ್ರಾನ್ಸ್ ಸಾಂಗ್ ಮೂಲಕ ವ್ಯಾಪಕ ಕ್ರೇಜ್ ಸೃಷ್ಟಿಸಿದ್ದ ಚಿತ್ರ `ಕೈಲಾಸ ಕಾಸಿದ್ರೆ’ (Kailasa Kasidre). ನಾಗ್ ವೆಂಕಟ್ (Nagvenkat)ನಿರ್ದೇಶನದಲ್ಲಿ ಮೂಡಿ ಬಂದಿರೋ ಈ ಚಿತ್ರ ಈ ದಿನಮಾನದ ಯುವ ಜನಾಂಗದ ಕಥೆಯನ್ನೊಳಗೊಂಡಿರುವ, ಎಲ್ಲ ಅಭಿರುಚಿಯ ಯುವ ಪ್ರೇಕ್ಷಕರನ್ನೂ ಕೂಡಾ ಆವರಿಸಿಕೊಳ್ಳುವ ಕಥೆ ಹೊಂದಿರುವ ಚಿತ್ರವೆಂಬ ವಿಚಾರವನ್ನ ಚಿತ್ರತಂಡವೇ ಜಾಹೀರು ಮಾಡಿತ್ತು. ಹಾಡುಗಳ ಮೂಲಕ ಹಂತ ಹಂತವಾಗಿ ಸೆಳೆಯುತ್ತಾ ಸಾಗಿ ಬಂದಿರುವ ಈ ಸಿನಿಮಾದ ಟ್ರೈಲರ್ ಇದೀಗ ಬಿಡುಗಡೆಗೊಂಡಿದೆ. ಯುವ ಆವೇಗದ ಕಥೆಯೊಂದರ ಸ್ಪಷ್ಟ ಸುಳಿವಿನೊಂದಿಗೆ ಈ ಟ್ರೈಲರ್ ನೋಡುಗರನ್ನೆಲ್ಲ ಸೆಳೆದುಕೊಂಡಿದೆ.

    ಈ ಹಿಂದೆ ತಾರಕಾಸುರ ಚಿತ್ರದ ರಗಡ್ ಪಾತ್ರದ ಮೂಲಕ ಪ್ರೇಕ್ಷಕರಿಗೆ ಪರಿಚಯವಾಗಿದ್ದವರು ರವಿ (Ravi). ಚಿತ್ರವಿಚಿತ್ರ ಪಾತ್ರಗಳ ಮೂಲಕ ಅಚ್ಚರಿ ಮೂಡಿಸಿದ್ದ ರವಿ ಈ ಟ್ರೈಲರ್ ನಲ್ಲಿ ಲವರ್ ಬಾಯ್ ಲುಕ್ಕಿನಲ್ಲಿ ಕಂಗೊಳಿಸಿದ್ದಾರೆ. ಇದೊಂದು ಇಮದಿನ ಯುವ ಜನಾಂಗದ ಒಳತೋಟಿಗಳ ಕಥೆ ಎಂಬುದನ್ನು ಸದರಿ ಟ್ರೈಲರ್ ಸಾಕ್ಷೀಕರಿಸಿದೆ. ವಯಸ್ಸಿನ ತುಮುಲಗಳಿಗೆ ವಶವಾಗಿ, ನಶೆಯ ಜಗತ್ತಿನೊಳಗೆ ಪ್ರವೇಶಿಸುವ ಯುವಕನೋರ್ವನ ಕಥಾ ಸಾರಾಂಶವನ್ನು ಧ್ವನಿಸುವಂತಿರುವ ಈ ಟ್ರೈಲರ್ ಅನ್ನು ನಾಗ್ ವೆಂಕಟ್ ಪರಿಣಾಮಕಾರಿಯಾಗಿ ರೂಪಿಸಿದ್ದಾರೆ.

    ನಾಯಕ ರವಿ ಸೇರಿದಂತೆ ಒಂದಷ್ಟು ಪಾತ್ರಗಳ ಮಜಲುಗಳು ಈ ಮೂಲಕ ಪ್ರೇಕ್ಷಕರೆದುರು ತೆರೆದುಕೊಂಡಿವೆ. ದರಲ್ಲಿಯೂ ವಿಶೇಷವಾಗಿ ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೂರಜ್ ಪಾತ್ರವಿಲ್ಲಿ ಪ್ರಧಾನವಾಗಿಯೇ ಸೆಳೆದಿದೆ. ಸೂರಜ್ ಒಂದಿಡೀ ಚಿತ್ರದ ತುಂಬಾ ಕ್ಯಾಟಿ ಆಗುವಂಥಾ ಹಾಸ್ಯ ಪಾತ್ರದಲ್ಲಿ ನಟಿಸಿದ್ದಾರೆ. ನಾಯಕನಿಗೆ ಸರಿ ಸಮನಾಗಿರುವ ಆ ಪಾತ್ರ ಕೂಡಾ ಈ ಟ್ರೈಲರ್ ನ ಹೈಲೈಟ್ ಗಳಲ್ಲೊಂದು.

    ಇನ್ನುಳಿದಂತೆ ಒಂದು ಪಾತ್ರದ ಸುತ್ತಲೇ ನಿರೀಕ್ಷೆ ಮೊಳೆತುಕೊಳ್ಳುವಂಥಾ ಅಪರೂಪದ ಸೆಳೆತವೊಂದು ಈ ಟ್ರೈಲರ್ ನಲ್ಲಿ ಕಾಣಿಸುತ್ತದೆ. ಅದರ ಜೊತೆಜೊತೆಗೇ ದೃಷ್ಯ ಶ್ರೀಮಂತಿಕೆಯೂ ಸ್ಪಷ್ಟವಾಗಿ ಗೋಚರಿಸುವಂತಿದೆ. ಮಾಸ್ ಮಾತ್ರವಲ್ಲದೇ ಭರಪೂರ ನಗುವಿಗೂ ಕೊರತೆಯೇನಿಲ್ಲ ಎಂಬ ನಿಖರ ಸಂದೇಶವೊಂದು ಈ ಟ್ರೈಲರ್ ಮೂಲಕವೇ ರವಾನೆಯಾದಂತೆ ಭಾಸವಾಗುತ್ತಿದೆ. ಅಂದಹಾಗೆ, ಇದೊಂದು ಕ್ರೈಂ ಕಾಮಿಡಿ ಜಾನರಿನ ಸಿನಿಮಾ ಎಂಬ ವಿಚಾರವನ್ನು ನಿರ್ದೇಶಕರು ಹೇಳಿಕೊಂಡಿದ್ದರು. ಅದಕ್ಕೆ ತಕ್ಕುದಾದ ಪುರಾವೆಗಳು ಟ್ರೈಲರ್ ನಲ್ಲಿ ಕಾಣಿಸಿವೆ.

     

    ರವಿ ಗೆ ಜೋಡಿಯಾಗಿ ಸುಕನ್ಯಾ ನಟಿಸಿದ್ದಾರೆ. ಶಿವಾಜಿ ಸುರತ್ಕಲ್ ಚಿತ್ರದ ಸಣ್ಣ ಪಾತ್ರದಲ್ಲಿ ನಟಿಸಿದ್ದ ಸುಕನ್ಯಾ ಈ ಮೂಲಕ ನಾಯಕಿಯಾಗಿದ್ದಾರೆ. ವಾಸಿಕ್ ಅಲ್ಸಾದ್ ನಿರ್ಮಾಣ ಮಾಡಿರುವ ಕೈಲಾಸ ಚಿತ್ರಕ್ಕೆ ಆಶಿಕ್ ಅರುಣ್ ಸಂಗೀತ, ತ್ಯಾಗರಾಜನ್ ಸಂಕಲನ, ಲೇಖಕ್ ಎಂ ಸಾಹಿತ್ಯ, ವಿನೋದ್ ರಾಜೇಂದ್ರನ್ ಛಾಯಾಗ್ರಹಣ, ಧನಂಜಯ ಬಿ ನೃತ್ಯ ನಿರ್ದೇಶನವಿದೆ. ವಾಸಿಕ್ ಅಲ್ಸಾದ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಸಾಫ್ಟ್‍ವೇರ್ ಜಗತ್ತಿನಿಂದ ಆಗಮಿಸಿರುವ ನಾಗ್ ವೆಂಕಟ್ ಚೊಚ್ಚಲ ನಿರ್ದೇಶನದ ಚಿತ್ರವಿದು. ಅವರು ಮೊದಲ ಹೆಜ್ಜೆಯಲ್ಲಿಯೇ ಗಟ್ಟಿ ಕಥೆಯೊಂದಿಗೆ ಪ್ರೇಕ್ಷಕರನ್ನು ಮುಖಾಮುಖಿ ಆಗಲಿದ್ದಾರೆಂಬುದಕ್ಕೂ ಈ ಟ್ರೈಲರ್ ಸಾಕ್ಷಿಯಂತಿದೆ. ಈಗಾಗಲೇ ಕೈಲಾಸ ಕಾಸಿದ್ರೆ ಚಿತ್ರ ನಾನಾ ಬಗೆಯಲ್ಲಿ ಪ್ರೇಕ್ಷಕರನ್ನು ತಲುಪಿಕೊಂಡಿದೆ. ಇದೇ ಮಾರ್ಚ್ 8ನೇ ತಾರೀಕಿನಂದು ಈ ಸಿನಿಮಾ ತೆರೆಗಾಣಲಿದೆ.

  • `ಕೈಲಾಸ’ದಲ್ಲಿ ಕಿಕ್ಕೇರಿಸೋ ಟ್ರಾನ್ಸ್ ಸಾಂಗ್

    `ಕೈಲಾಸ’ದಲ್ಲಿ ಕಿಕ್ಕೇರಿಸೋ ಟ್ರಾನ್ಸ್ ಸಾಂಗ್

    ತಾರಕಾಸುರ ಚಿತ್ರದ ಮೂಲಕ ಅಬ್ಬರದ ಎಂಟ್ರಿ ಕೊಟ್ಟಿದ್ದವರು ರವಿ (Ravi). ಇದೀಗ ಅವರು ಕೈಲಾಸ (Kailas) ಎಂಬ ಚಿತ್ರದ ಮೂಲಕ ಮತ್ತೆ ಪ್ರೇಕ್ಷಕರನ್ನು ಮುಖಾಮುಖಿಯಾಗಲು ತಯಾರಾಗಿದ್ದಾರೆ. ನಾಗ್ ವೆಂಕಟ್ (Nag Venkat) ನಿರ್ದೇಶನದ ಕೈಲಾಸ ಚಿತ್ರಕ್ಕೆ ಕಾಸಿದ್ರೆ ಎಂಬ ಅಡಿ ಬರಹವಿದೆ. ಈಗಾಗಲೇ ಟೀಸರ್ ಮೂಲಕ ಝಲಕ್ ಅನಾವರಣಗೊಳಿಸಿದ್ದ ಚಿತ್ರತಂಡವೀಗ ಕನ್ನಡದ ಮಟ್ಟಿಗೆ ಹೊಸತೆನ್ನಿಸುವಂತಹ ಟ್ರಾನ್ಸ್ ಸಾಂಗ್ ವೊಂದನ್ನು ಬಿಡುಗಡೆಗೊಳಿಸಿದೆ. ದೃಶ್ಯಗಳ ಮೂಲಕವೇ ಕಿಕ್ಕೇರಿಸೋ ಶೈಲಿಯ ಈ ಟ್ರಾನ್ಸ್ (Trance Song) ವೀಡಿಯೋ ಸಾಂಗ್ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ನೋಡುಗರ ಕಡೆಯಿಂದ ಮೆಚ್ಚುಗೆಯನ್ನೂ ಪಡೆದುಕೊಳ್ಳುತ್ತಿದೆ.

    ಈ ಸಿನಿಮಾದ ಆಂತರ್ಯಕ್ಕನುಗುಣವಾಗಿ ಈ ಟ್ರಾನ್ಸ್ ವೀಡಿಯೋ ಸಾಂಗ್ ಅನ್ನು ನಿರ್ದೇಶಕರು ರೂಪಿಸಿದ್ದಾರಂತೆ. ಮಾದಕ ಜಗತ್ತಿನ ಉನ್ಮತ್ತ ಕ್ಷಣಗಳನ್ನು ಹಿಡಿದಿಟ್ಟಂತೆ ಭಾಸವಾಗುವ ಈ ಹಾಡಿನ ಮಧ್ಯೆ ಪೂರಕವಾದ ಒಂದಷ್ಟು ಸಾಲುಗಳು, ಪಾತ್ರದ ಕಡೆಯಿಂದ ತಗೇಲಿ ಬರುತ್ತದೆ. ಅದಕ್ಕೆ ಲೇಖಕ್ ಎಂ ಸಿದ್ದಾರ್ಥ ಸಾಹಿತ್ಯ ಒದಗಿಸಿದ್ದಾರೆ. ಆಶಿಕ್ ಅರುಣ್ ಸಂಗೀತ ಸಂಯೋಜನೆಯೊಂದಿಗೆ ಈ ಟ್ರಾನ್ಸ್ ವೀಡಿಯೋ ಸಾಂಗ್ ಮೂಡಿ ಬಂದಿದೆ. ಇದರ ಮೂಲಕವೇ ನಾಯಕ ರವಿಯ ಪಾತ್ರ ಕೂಡಾ ಪ್ರೇಕ್ಷಕರ ಮುಂದೆ ಸುಳಿದಂತಾಗಿದೆ. ಇದುವರೆಗೂ ಕನ್ನಡ ಸಿನಿಮಾಗಳಲ್ಲಿ ಇಂಥಾ ಟ್ರಾನ್ಸ್ ವೀಡಿಯೋ ಸಾಂಗ್ ಅಲ್ಲಲ್ಲಿ ಕಾಣಿಸಿಕೊಂಡಿವೆ. ಆದರೆ ಈ ಚಿತ್ರದಲ್ಲಿ ಅದನ್ನು ಪೂರ್ಣಪ್ರಮಾಣದಲ್ಲಿ ಪ್ರಯೋಗ ಮಾಡಲಾಗಿದೆಯಂತೆ.

    ಇದು ಕ್ರೈಂ ಕಂ ಕಾಮಿಡಿ ಜಾನರಿಗೊಳಪಡುವ ಚಿತ್ರ. ಪಕ್ಕಾ ಕಮರ್ಶಿಯಲ್ ಬಗೆಯಲ್ಲಿ ತಯಾರುಗೊಂಡಿರುವ ಇದು ನಾಗ್ ವೆಂಕಟ್ ನಿರ್ದೇಶನದ ಮೊದಲ ಸಿನಿಮಾ. ಮೂಲತಃ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದ ನಾಗ್ ವೆಂಕಟ್ ಈಗೊಂದಷ್ಟು ವರ್ಷಗಳ ಹಿಂದೆಯೇ ಪೂರ್ಣಪ್ರಮಾಣದಲ್ಲಿ ಸಿನಿಮಾ ರಂಗದಲ್ಲಿ ತೊಡಗಿಸಿಕೊಂಡಿದ್ದಾರೆ. ಈವರೆಗೂ ಸಾಕಷ್ಟು ಕಿರು ಚಿತ್ರಗಳ ಮೂಲಕ ಪರೀಕ್ಷೆಗೊಡ್ಡಿಕೊಂಡಿದ್ದ ನಾಗ್ ವೆಂಕಟ್, ಕೈಲಾಸ ಕಾಸಿದ್ರೆ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ.

     

    ತಿಂಗಳೊಪ್ಪತ್ತಿನಲ್ಲಿ ಈ ಸಿನಿಮಾವನ್ನು ತೆರೆಗಾಣಿಸಲು ತಯಾರಿ ನಡೆಯುತ್ತಿದೆ. ಇದೇ ತಿಂಗಳ 24ರಂದು ಟ್ರೈಲರ್ ಬಿಡುಗಡೆಗೊಳ್ಳಲಿದೆ. ತಾರಕಾಸುರ ನಂತರ ರವಿ ಮತ್ತೊಂದು ವಿಶೇಷವಾದ ಪಾತ್ರದ ಮೂಲಕ ಪ್ರೇಕ್ಷಕರನ್ನು ಅಚ್ಚರಿಗೀಡು ಮಾಡಲಿದ್ದಾರಂತೆ. ಈಗ ಬಿಡುಗಡೆಯಾಗಿರೋ ನಶೆ ಹಾಡಿನ ಪ್ರಭೆಯಲ್ಲಿಯೇ, ಪ್ರೇಮಿಗಳ ದಿನದಂದು ಚೆಂದದ್ದೊಂದು ಹಾಡು ಬಿಡುಗಡೆಗೊಳಿಸಲು ಚಿತ್ರತಂಡ ತೀರ್ಮಾನಿಸಿದೆ. ವಿಶೇಷವೆಂದರೆ, ಈ ಚಿತ್ರದಲ್ಲಿ ಕ್ರೈಂ ಹಾಗೂ ಕಾಮಿಡಿ ಮಿಳಿತವಾಗಿರೋದರಿಂದಾಗಿ ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೂರಜ್ ಕೂಡಾ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇಲ್ಲಿ ರವಿ ಗೆ ಜೋಡಿಯಾಗಿ ಸುಕನ್ಯಾ ನಟಿಸಿದ್ದಾರೆ. ಶಿವಾಜಿ ಸುರತ್ಕಲ್ ಚಿತ್ರದ ಸಣ್ಣ ಪಾತ್ರದಲ್ಲಿ ನಟಿಸಿದ್ದ ಸುಕನ್ಯಾ ಈ ಮೂಲಕ ನಾಯಕಿಯಾಗಿದ್ದಾರೆ. ವಾಸಿಕ್ ಅಲ್ಸಾದ್ ನಿರ್ಮಾಣ ಮಾಡಿರುವ ಕೈಲಾಸ ಚಿತ್ರಕ್ಕೆ ಆಶಿಕ್ ಅರುಣ್ ಸಂಗೀತ, ತ್ಯಾಗರಾಜನ್ ಸಂಕಲನ, ಲೇಖಕ್ ಎಂ ಸಾಹಿತ್ಯ, ವಿನೋದ್ ರಾಜೇಂದ್ರನ್ ಛಾಯಾಗ್ರಹಣ, ಧನಂಜಯ ಬಿ ನೃತ್ಯ ನಿರ್ದೇಶನವಿದೆ.

  • ಜೈಲರ್ ಸಿನಿಮಾ ವಿರುದ್ಧ ಕೋರ್ಟಿಗೆ ಹೋದ ಎನ್.ಪಿ.ಪಿ ಮುಖಂಡ ರವಿ

    ಜೈಲರ್ ಸಿನಿಮಾ ವಿರುದ್ಧ ಕೋರ್ಟಿಗೆ ಹೋದ ಎನ್.ಪಿ.ಪಿ ಮುಖಂಡ ರವಿ

    ಜನಿಕಾಂತ್ ನಟನೆಯ ಜೈಲರ್ (Jailer) ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಸಖತ್ ಸದ್ದು ಮಾಡುತ್ತಿದೆ. ಸಿನಿಮಾ ರಿಲೀಸ್ ದಿನದಿಂದಲೂ ಈವರೆಗೂ ಪ್ರೇಕ್ಷಕರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುತ್ತಲೇ ಇದೆ. ಒಂದು ಕಡೆ ಚಿತ್ರತಂಡ ಗೆಲುವನ್ನು ಸಂಭ‍್ರಮಿಸುತ್ತಿದ್ದರೆ ಮತ್ತೊಂದು ಕಡೆ ಕೋರ್ಟ್ ಕಾರಣದಿಂದಾಗಿ ಆತಂಕವನ್ನೂ ಪಡುತ್ತಿದ್ದಾರೆ. ಈ ಸಿನಿಮಾದಲ್ಲಿ ಸಾಕಷ್ಟು ಹಿಂಸಾತ್ಮಕ ದೃಶ್ಯಗಳು ಇವೆ ಎಂದು ಎನ್.ಪಿ.ಪಿ ಮುಖಂಡ ರವಿ (Ravi) ಮದ್ರಾಸ್ (Madras) ಹೈಕೋರ್ಟ್ ಮೆಟ್ಟಿಲು ಏರಿದ್ದಾರೆ.

    ಜೈಲರ್ ಸಿನಿಮಾದಲ್ಲಿ ಸಾಕಷ್ಟು ಹಿಂಸಾತ್ಮಕ ದೃಶ್ಯಗಳಿವೆ. ಅವುಗಳು ಸಮಾಜದ ಮೇಲೆ ಭಾರೀ ಪರಿಣಾಮ ಬೀರುವಂತವುಗಳು. ಆದರೂ, ಚಿತ್ರಕ್ಕೆ ಯು/ಎ ಪ್ರಮಾಣ ಪತ್ರವನ್ನು ಸೆನ್ಸಾರ್ ಮಂಡಳಿ ನೀಡಿದೆ. ಅದು ಹೇಗೆ ಯು/ಎ ಪ್ರಮಾಣ ಪತ್ರ ನೀಡಿತು ಎಂದು ಅರ್ಥವಾಗುತ್ತಿಲ್ಲ. ಈ ಸಿನಿಮಾದ ಪ್ರದರ್ಶನವನ್ನು ಕೂಡಲೇ ನಿಲ್ಲಿಸಿ, ಸೆನ್ಸಾರ್ ಮಂಡಳಿಗೆ ನೋಟಿಸ್ ಜಾರಿ ಮಾಡಬೇಕು ಎಂದು ರವಿ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ:‘ಟೈಗರ್ ನಾಗೇಶ್ವರ್ ರಾವ್’ ಟೀಸರ್ ಔಟ್- ಮಾಸ್ ಆಗಿ ಎಂಟ್ರಿ ಕೊಟ್ಟ ರವಿತೇಜ

    ಜೈಲರ್ ಸಿನಿಮಾ ಯಶಸ್ಸಿನ ಬೆನ್ನಲ್ಲೇ ಸೂಪರ್ ಸ್ಟಾರ್ ರಜನಿಕಾಂತ್ ಟೆಂಪಲ್ ರನ್ ಮಾಡುತ್ತಿದ್ದಾರೆ. ಸಿನಿಮಾ ರಿಲೀಸ್ ವೇಳೆ ಅವರು ಹಿಮಾಲಯಕ್ಕೆ ಹಾರಿದ್ದರು. ಅಲ್ಲಿ ಧ್ಯಾನಕ್ಕೆ ಶರಣಾಗಿದ್ದರು. ಅಲ್ಲಿಂದ ಹೊರಟು ಇದೀಗ ಉತ್ತರ ಪ್ರದೇಶದ ಹಲವು ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಇಂದು ಅಯೋಧ್ಯಗೆ ತೆರಳಿ ಶ್ರೀ ರಾಮನ ದರ್ಶನ ಪಡೆದಿದ್ದಾರೆ. ನಿರ್ಮಾಣ ಹಂತದಲ್ಲಿರುವ ದೇವಸ್ಥಾನವನ್ನೂ ಅವರು ವೀಕ್ಷಣೆ ಮಾಡಿದರು. ಡಲಿದ್ದಾರೆ.

    ಮೊನ್ನೆಯಷ್ಟೇ ರಜನಿಕಾಂತ್ (Rajanikanth) ಅವರು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ಭೇಟಿಯಾಗಿದ್ದರು. ನಿನ್ನೆ  (ಆಗಸ್ಟ್ 19) ಜೈಲರ್ (Jailer) ಚಿತ್ರವನ್ನ ಅವರೊಂದಿಗೆ ವೀಕ್ಷಿಸಿದ್ದರು. ಲಕ್ನೋದಲ್ಲಿ ಸಿಎಂ ಮತ್ತು ಅಭಿಮಾನಿಗಳ ಜೊತೆಗೆ ‘ಜೈಲರ್’ ಸಿನಿಮಾ ವೀಕ್ಷಣೆ ಮಾಡಿದ್ದಾರೆ.

     

    ತಲೈವಾ-ಶಿವಣ್ಣ ಕಾಂಬೋ ‘ಜೈಲರ್’ (Jailer) ಸಿನಿಮಾ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದೆ. ತಲೈವಾ ಸಿನಿಮಾವನ್ನ ಒಪ್ಪಿ ಜನ ಮೆಚ್ಚಿಕೊಂಡಿದ್ದಾರೆ. ಸದ್ಯ ಸಿನಿಮಾ ಪ್ರಚಾರಕ್ಕಾಗಿ ಲಕ್ನೋದಲ್ಲಿ ತಲೈವಾ ಬೀಡು ಬಿಟ್ಟಿದ್ದಾರೆ. ಯುಪಿ ಸಿಎಂ ಯೋಗಿ ಆದಿತ್ಯನಾಥ್ ಜೊತೆ ನಿನ್ನೆ ಸಂಜೆ 7ಕ್ಕೆ ‘ಜೈಲರ್’ ಸಿನಿಮಾ ನೋಡೋದು ಫಿಕ್ಸ್ ಆಗಿತ್ತು. ಅಷ್ಟೇ ಅಲ್ಲದೇ, ರಾಜ್ಯಪಾಲರಾದ ಆನಂದಿಬೇನ್ ಪಟೇಲ್ ಅವರನ್ನು ಕೂಡ ತಲೈವಾ ಭೇಟಿಯಾಗಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿಯ ಕೊಲೆ ಯತ್ನ ಪ್ರಕರಣ – ಪ್ರಮುಖ ಆರೋಪಿಯ ಬಂಧನ

    ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿಯ ಕೊಲೆ ಯತ್ನ ಪ್ರಕರಣ – ಪ್ರಮುಖ ಆರೋಪಿಯ ಬಂಧನ

    ಬೆಂಗಳೂರು: ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮೇಲೆ ಕೊಲೆ ಯತ್ನ ನಡೆದಿದ್ದು, ಈ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಶಶಿಕುಮಾರ್ ಅವರ ಮೇಲೆ ಜುಲೈ 29 ರಂದು ಕೊಲೆಗೆ ಪ್ರಯತ್ನ ನಡೆದಿತ್ತು. ಈ ಹಿನ್ನೆಲೆ ಶಶಿಕುಮಾರ್ ಕೊಲೆಗೆ ಸುಪಾರಿ ನೀಡಿದ್ದ ಪ್ರಮುಖ ಆರೋಪಿ ರವಿಯನ್ನು ಇಂದು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರವಿ ಖಾಸಗಿ ಶಾಲೆಗಳ ಪೋಷಕರ ಸಂಘದ ಪ್ರಧಾನ ಕಾರ್ಯದರ್ಶಿ ಮತ್ತು ಆರ್ ಟಿಐ ಕಾರ್ಯಕರ್ತನಾಗಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ:  ಬ್ರಾಹ್ಮಣ ವಿರೋಧಿ ಅಂತ ಛತ್ತಿಸ್‍ಗಢದ ಸಿಎಂ ತಂದೆ ಅರೆಸ್ಟ್

    ಕೊಲೆಯ ಉದ್ದೇಶವೇನು?
    ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಸ್ಥಾನದ ಆಸೆಗೆ ಬಿದ್ದ ಆರೋಪಿ ರವಿ, ಶಶಿಕುಮಾರ್ ಕೊಲೆಗೈದ್ರೆ ಮುಂದಿನ ಕಾರ್ಯದರ್ಶಿ ನಾನೇ ಆಗಬಹುದು ಎನ್ನುವ ಕಾರಣಕ್ಕೆ ಹತ್ಯೆಯ ಸ್ಕೆಚ್ ಹಾಕಿದ್ದರು. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಆರೋಪಿಯನ್ನು ಸಂಪರ್ಕಿಸಿ ಶಶಿಕುಮಾರ್ ಅವರನ್ನು ಕೊಲೆ ಮಾಡಲು ಸುಪಾರಿ ನೀಡಿದ್ದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಕೋಳಿ ಪಂದ್ಯ ಪ್ರಕರಣ – ಜೂಜಾಟಕ್ಕೆ ಬ್ರೇಕ್ ಹಾಕಲು ಪೊಲೀಸರ ಹಿಂದೇಟು

    ಶಶಿಕುಮಾರ್ ಅವರು ಜಾಲಹಳ್ಳಿಯ ಮುತ್ಯಾಲ ನಗರದಲ್ಲಿ ವಾಸವಾಗಿದ್ದು, ಅವರ ಕೊಲೆಗೆ ಐವರು ಆರೋಪಿಗಳು ಪ್ಲಾನ್ ಮಾಡಿಕೊಂಡಿದ್ದರು. ಈ ಹಿನ್ನೆಲೆ ಆರೋಪಿಗಳು ಆ ಏರಿಯಾದಲ್ಲಿ ಆರು ತಿಂಗಳಿನಿಂದ ಬಾಡಿಗೆ ಮನೆ ಮಾಡ್ಕೊಂಡು ಅವರ ಚಲನವಲನಗಳನ್ನು ಗಮನಿಸುತ್ತಿದ್ದರು. ಕಳೆದ ಜುಲೈ 29 ರ ರಾತ್ರಿ ಮುತ್ಯಾಲನಗರದ ಮನೆ ಬಳಿ ಯಾರು ಇಲ್ಲದಿರುವುದನ್ನು ಗಮನಿಸಿ ಶಶಿಕುಮಾರ್ ಕೊಲೆಗೆ ಯತ್ನಿಸಲಾಗಿತ್ತು.

    ಈ ವೇಳೆ ತಕ್ಷಣ ಎಚ್ಚೆದ್ದ ಶಶಿಕುಮಾರ್, ತಮ್ಮ ಬಳಿಯಿದ್ದ ಗನ್ ನಿಂದ ಬೆದರಿಸಿ ಪ್ರಾಣಾಪಾಯದಿಂದ ಪಾರಾಗಿದ್ದರು. ಈ ಸಂಬಂಧ ಜಾಲಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ದಿಲೀಪ್, ಅಭಿಷೇಕ್, ಕಾರ್ತಿಕ್, ಪವನ್, ಭರತ್ ಎಂಬ ಅರೋಪಿಗಳನ್ನು ಬಂಧಿಸಲಾಗಿತ್ತು. ಇದನ್ನೂ ಓದಿ: ಹಳೆ ಬೆಳೆ ಕೊಚ್ಚಿ ಹೋಯ್ತು – ಹೊಸ ಬೆಳೆ ಬಿತ್ತನೆಗೆ ಪರದಾಡುತ್ತಿದ್ದಾರೆ ರೈತರು

    ಪೊಲೀಸರು ಆರೋಪಿಗಳನ್ನು ವಿಚಾರಣೆ ನಡೆಸುವ ವೇಳೆ ಶಶಿಕುಮಾರ್ ಕೊಲೆಗೆ ಸುಪಾರಿ ನೀಡಿದ್ದು, ಪೋಷಕರ ಸಂಘದ ಪ್ರಧಾನ ಕಾರ್ಯದರ್ಶಿ ರವಿ ಎನ್ನುವುದು ಗೊತ್ತಾಗಿತ್ತು. ಅಂದಿನಿಂದ ತಲೆಮರೆಸಿಕೊಂಡಿದ್ದ ಆರೋಪಿ ರವಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದು, ಸದ್ಯ ಆರೋಪಿಯನ್ನು ಬಂಧಿಸಿದ್ದಾರೆ.

  • ನಿನ್ನ ಬಳಿ ದುಡ್ಡಿಲ್ಲ ಎಂದು ಮಜಾ ಭಾರತದ ಕಲಾವಿದನಿಗೆ ಕೈ ಕೊಟ್ಟ ಪತ್ನಿ

    ನಿನ್ನ ಬಳಿ ದುಡ್ಡಿಲ್ಲ ಎಂದು ಮಜಾ ಭಾರತದ ಕಲಾವಿದನಿಗೆ ಕೈ ಕೊಟ್ಟ ಪತ್ನಿ

    ಮಂಡ್ಯ: ನಿನ್ನ ಬಳಿ ದುಡ್ಡಿಲ್ಲ ಎಂದು ಹಾಸ್ಯ ಕಲಾವಿದನಿಗೆ ಪತ್ನಿ ಕೈ ಕೊಟ್ಟು ಬೇರೊಬ್ಬನೊಂದಿಗೆ ಮದುವೆಯಾಗಿರುವ ಪ್ರಸಂಗವೊಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕಾಳಸಿದ್ದನಹುಂಡಿಯಲ್ಲಿ ನಡೆದಿದೆ.

    ಕೊರೊನಾ ಕಾರಣದಿಂದ ಹಲವಾರು ಜನ ದುಡ್ಡಿಲ್ಲದೆ ಕಷ್ಟವನ್ನು ಅನುಭವಿಸುತ್ತಿದ್ದಾರೆ. ಅದರಲ್ಲೂ ನಟನೆಯೇ ಜೀವನವೆಂದು ಬದುಕುತ್ತಿರುವ ಕಲಾವಿದರು ತಮ್ಮ ದಿನನಿತ್ಯದ ಜೀವನ ಸಾಗಿಸಲು ತುಂಬಾ ಕಷ್ಟ ಪಡುತ್ತಿದ್ದಾರೆ. ಮಜಾಭಾರತ ಕಾಮಿಡಿ ಶೋ ಹಾಸ್ಯ ಕಲಾವಿದ ಕಾಳಸಿದ್ದನಹುಂಡಿಯ ರವಿ ಅವರು, ಸಣ್ಣ-ಪುಟ್ಟ ಸೀರಿಯಲ್‍ಗಳಲ್ಲಿ ನಟಿಸುತ್ತಿದ್ದರು. ಅವರು 4 ವರ್ಷದ ಹಿಂದೆ ಮೈಸೂರು ಮೂಲದ ಬೇಬಿ ಎಂಬಾಕೆಯನ್ನು ಪ್ರೀತಿಸಿ, ಮನೆಯವರ ವಿರೋಧವಿದ್ದರೂ ಮದುವೆಯಾಗಿದ್ದರು. ಆ ಬಳಿಕ ಕೊರೊನಾ ಕಷ್ಟಕಾಲದಲ್ಲಿ ರವಿ ಅವರಿಗೆ ಎಲ್ಲಿಯೂ ಸಹ ಅವಕಾಶಗಳು ಸಿಗದೆ ಕಷ್ಟದ ಜೀವನ ನಡೆಸುತ್ತಿದ್ದರು. ಇದನ್ನೂ ಓದಿ: ಕಿಚ್ಚನ ಹೊಸ ಹೇರ್ ಸ್ಟೈಲ್‍ಗೆ ಫ್ಯಾನ್ಸ್ ಫಿದಾ

    ಈ ಹಿನ್ನೆಲೆ ಪತ್ನಿ ಬೇಬಿ ಮತ್ತೊಬ್ಬನ ಜೊತೆ ಅಕ್ರಮ ಸಂಬಂಧವನ್ನು ಇಟ್ಟುಕೊಂಡಿದ್ದರು. ಇದು ರವಿ ಅವರಿಗೆ ತಿಳಿದು ಪ್ರಶ್ನಿಸಿದ್ದಾರೆ. ಬಳಿಕ ನಿನ್ನ ಬಳಿ ದುಡ್ಡಿಲ್ಲ ಎಂದು ಬೇಬಿ ಕಾರಣ ಕೊಟ್ಟು ರವಿ ಅವರನ್ನು ಬಿಟ್ಟು ಹೋಗಿದ್ದಾರೆ. ಅಲ್ಲದೇ ದೂರವಾದ ಬಳಿಕ ಮತ್ತೊಂದು ಮದುವೆಯನ್ನು ಮಾಡಿಕೊಂಡಿದ್ದಾರೆ. ಇದನ್ನು ತಡೆಯಲು ಹೋಗಿದ್ದ ರವಿ ಮೇಲೆ ಬೇಬಿ ಅವರ ಎರಡನೇ ಗಂಡ ಹಾಗೂ ಆಕೆ ತಮ್ಮನಿಂದ ಹಲ್ಲೆ ನಡೆದಿದ್ದು, ಈ ಕುರಿತು ಅವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ವಿಭಿನ್ನವಾಗಿ ರಕ್ಷಾ ಬಂಧನ ಆಚರಿಸಿದ ಸೆಲೆಬ್ರಿಟಿಗಳು

    ರವಿ ಮತ್ತು ಬೇಬಿ 4 ವರ್ಷದ ಹಿಂದೆ ಪರಸ್ಪರ ಪ್ರೀತಿಸಿ ಮನೆಯವರ ವಿರೋಧದ ನಡುವೆಯೂ ರಿಜಿಸ್ಟರ್ ಮ್ಯಾರೇಜ್ ಆಗಿದ್ರು. ಇವರು ಮೈಸೂರಿನಲ್ಲಿ 4 ವರ್ಷ ಬಾಡಿಗೆ ಮನೆಯಲ್ಲಿ ಸಂಸಾರ ಮಾಡಿದ್ದರು. ಅದು ಅಲ್ಲದೇ ಖಾಸಗಿ ವಾಹಿನಿಯ ಆದರ್ಶ ದಂಪತಿ ಶೋನಲ್ಲೂ ಸಹ ಭಾಗವಹಿಸಿದ್ದರು. ಈ ಶೋನಲ್ಲಿ ನಿರೂಪಕರು ಅವರ ಮದುವೆಗೆ ಗೈರಾಗಿದ್ದ ತಾಯಿ ಮುಂದೆ ಮತ್ತೊಮ್ಮೆ ಇಬ್ಬರಿಗೂ ತಾಳಿಕಟ್ಟಿಸಿದ್ದರು. ಈ ನಡುವೆ ಕೊರೊನಾ ಮೊದಲನೇ ಅಲೆಯಲ್ಲಿ ಅವರಿಗೆ ಕೆಲಸವಿಲ್ಲದೆ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದರು. ಅದಕ್ಕೆ ಅವರ ಪತ್ನಿ ಬೇಬಿ ಅವರನ್ನು ತೊರೆದು ಹೋಗಿದ್ದಾರೆ. ಇದನ್ನೂ ಓದಿ: ಕೆಜಿಎಫ್ ಬಿಡುಗಡೆಗೆ ದಿನಾಂಕ ನಿಗದಿ – ಏಪ್ರಿಲ್‍ನಲ್ಲಿ ರಾಖಿಬಾಯ್ ಆರ್ಭಟ

    ತನಗಾದ ಮೋಸದಂತೆ ಮತ್ಯಾರಿಗೂ ಆಗಬಾರದು, ಆಕೆಗೆ ಶಿಕ್ಷೆ ಆಗಬೇಕು ಎಂದು ಕಲಾವಿದ ರವಿ ಪಟ್ಟು ಹಿಡಿದಿದ್ದು, ನ್ಯಾಯಕ್ಕಾಗಿ ಕೋರ್ಟ್ ಮೊರೆ ಹೋಗಿದ್ದಾರೆ.

  • 3 ವರ್ಷದಲ್ಲಿ 85 ಅನಾಥ ಶವಗಳಿಗೆ ಚನ್ನಪಟ್ಟಣದ ಆಶ್ರಯ ಚಾರಿಟಬಲ್ ಟ್ರಸ್ಟ್ ಮುಕ್ತಿ..!

    3 ವರ್ಷದಲ್ಲಿ 85 ಅನಾಥ ಶವಗಳಿಗೆ ಚನ್ನಪಟ್ಟಣದ ಆಶ್ರಯ ಚಾರಿಟಬಲ್ ಟ್ರಸ್ಟ್ ಮುಕ್ತಿ..!

    ರಾಮನಗರ: ಅನಾಥ ಶವಗಳಿಗೆ ಶಾಸ್ತ್ರೋಕ್ತವಾಗಿ ಅಂತಿಮ ಸಂಸ್ಕಾರ ಮಾಡೋ ಇಬ್ಬರು ಯುವಕರು ಇಂದಿನ ಪಬ್ಲಿಕ್ ಹೀರೋಗಳು. ಚನ್ನಪಟ್ಟಣದ ಅರುಣ್ ಹಾಗೂ ರವಿ ಇದೂವರೆಗೆ 85 ಅನಾಥ ಶವಗಳಿಗೆ ಮುಕ್ತಿ ಕೊಟ್ಟಿದ್ದಾರೆ.

    ರಾಮನಗರ ಜಿಲ್ಲೆಯಲ್ಲಿ ಎಲ್ಲೇ ಅನಾಥ ಶವಗಳ ಬಗ್ಗೆ ಮಾಹಿತಿ ಸಿಕ್ಕರೂ ಸಂಪ್ರದಾಯ ಬದ್ಧವಾಗಿ ಅಂತ್ಯಕ್ರಿಯೆ ನೆರವೇರಿಸುತ್ತಾರೆ. ಹೀಗೆ, 3 ವರ್ಷದಲ್ಲಿ ಇಲ್ಲಿವರಗೆ 85 ಅನಾಥ ಶವಗಳನ್ನು ಸಮಾಧಿ ಮಾಡಿದ್ದಾರೆ. ಆಶ್ರಯ ಚಾರಿಟಬಲ್ ಟ್ರಸ್ಟ್ ಎಂಬ ಸಂಸ್ಥೆಯಡಿ 6 ಜನ ಯುವಕರೂ ಇದಕ್ಕೆ ಕೈ ಜೋಡಿಸಿದ್ದಾರೆ.

    ಚನ್ನಪಟ್ಟಣ ತಾಲೂಕಿನ ಬೇರೆ ಬೇರೆ ಗ್ರಾಮದವರಾದ ಈ ಯುವಕರು ಟೀ ಕುಡಿಯುತ್ತಾ ಸೇರಿದ್ದ ವೇಳೆ ಇಂತಹದೊಂದು ಕಾರ್ಯ ಮಾಡಬೇಕು ಎಂದು ನಿರ್ಧರಿಸಿದ್ದಾರೆ. ಚಕ್ಕರೆ ಅರುಣ್, ರಾಜೇಶ್, ರವಿ, ಅಪ್ಪು, ಹಾಗೂ ಅಂಬುಲೆನ್ಸ್ ಡ್ರೈವರ್ ಅರುಣ್ ಎಲ್ಲರೂ ಸೇರಿ ಚರ್ಚೆ ನಡೆಸಿ ಟ್ರಸ್ಟ್ ನಿರ್ಮಿಸಿದ್ದಾರೆ.

    ಶವ ಯಾವುದೇ ರೀತಿಯಲ್ಲಿದ್ರೂ ಸಹ ಯುವಕರು ಶವವನ್ನು ತಾವೇ ತೆಗೆದುಕೊಂಡು ಹೋಗಿ ಸಂಸ್ಕಾರ ನಡೆಸ್ತಾರೆ. ಅನಾಥ ಶವ ಅಂದ್ರೆ ದೂರ ನಿಲ್ಲುವ ಜನರ ಮಧ್ಯೆ ಅರುಣ್-ರವಿ ತಂಡ ವಿಭಿನ್ನವಾಗಿದೆ.

    https://www.youtube.com/watch?v=I1JIBk9zX0w

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv