Tag: Ravi Basrur

  • ರವಿ ಬಸ್ರೂರು ಅವರ ಕಟಕ-2ಗೆ ಸದ್ದಿಲ್ಲದೇ ತಯಾರಿ

    ರವಿ ಬಸ್ರೂರು ಅವರ ಕಟಕ-2ಗೆ ಸದ್ದಿಲ್ಲದೇ ತಯಾರಿ

    ವಿ ಬಸ್ರೂರು (Ravi Basrur) ನಿರ್ದೇಶನದ ಕಟಕ (Kataka 2) ಸಿನಿಮಾ ವಿಭಿನ್ನ ಕಥೆ ಹಾಗೂ ವಿಭಿನ್ನ ಜಾನರ್‌ನಿಂದ ಗಮನ ಸೆಳೆದಿತ್ತು. ಅಶೋಕ್ ರಾಜ್, ಸ್ಪಂದನ ಪ್ರಸಾದ್ ಹಾಗೂ ಶಾಲಗಾ ಸಾಲಿಗ್ರಾಮ ಈ ಚಿತ್ರದ ಮುಖ್ಯಪಾತ್ರದಲ್ಲಿ ನಟಿಸಿದ್ದರು. ರವಿ ಬಸ್ರೂರು ಈ ಸಿನಿಮಾಗೆ ನಿರ್ದೇಶನ ಮಾಡುವುದರ ಜೊತೆಗೆ ಸಂಗೀತ ನಿರ್ದೇಶನವನ್ನ ಕೂಡಾ ನಿಭಾಯಿಸಿದ್ದರು.

    ಅಂದಹಾಗೆ ಕಟಕ ನೈಜ ಘಟನೆಯಾಧಾರಿತ ಸಿನಿಮಾವಾಗಿದ್ದು, ಸಿಂಪಲ್ ಆಗಿ ಒಂದು ಹಳ್ಳಿಯಲ್ಲಿ ನಡೆಯುವ ಕಥೆಯಲ್ಲಿ ಹಾರರ್ ಹಾಗೂ ಸಸ್ಪೆನ್ಸ್ ಅಂಶಗಳೇ ಹೈಲೈಟ್ ಆಗಿದ್ದವು. ಇದೀಗ ಕಟಕ ಚಿತ್ರದ ಭಾಗ-2 ಬರುವ ಬಗ್ಗೆ ಸುಳಿವು ನೀಡಿದೆ ಚಿತ್ರತಂಡ. ಈ ಸಿನಿಮಾ ಟೈಟಲ್ ಟ್ರ್ಯಾಕ್ ಬಿಡುಗಡೆ ಮಾಡಿದೆ ಕಟಕ-2 ಚಿತ್ರತಂಡ. ಇದನ್ನೂ ಓದಿ: ತಮಿಳಿನ ಜನಪ್ರಿಯ ಹಾಸ್ಯನಟ ಮಧನ್ ಬಾಬ್ ನಿಧನ

    ಕಟಕ ಸಿನಿಮಾದ ಮೊದಲ ಭಾಗಕ್ಕೆ ಬಂಡವಾಳ ಹೂಡಿ ನಿರ್ಮಾಣ ಮಾಡಿದ್ದರು ಎನ್‌ಎಸ್ ರಾಜ್‌ಕುಮಾರ್. ಕಟಕ-2 ಸಿನಿಮಾದ ಇಂಗ್ಲಿಷ್ ವರ್ಷನ್ ಟೈಟಲ್ ಟ್ರಾö್ಯಕ್ ಬಿಡುಗಡೆಯಾಗಿದ್ದು, ರವಿ ಬಸ್ರೂರು ಸಂಗೀತ ಸಂಯೋಜನೆ ಮಾಡಿದ್ದಾರೆ. ಸಂತೋಷ್ ವೆಂಕಿ, ಐರಾ ಉಡುಪಿ ಹಾಗೂ ರೋಹಿತ್ ಸಿದ್ದಪ್ಪ ಈ ಟ್ರ್ಯಾಕ್‌ಗೆ ಧ್ವನಿಯಾಗಿದ್ದಾರೆ. ಈ ಟೈಟಲ್ ಟ್ರ್ಯಾಕ್ ಮೂಲಕ ಕಟಕ-2 ಚಿತ್ರದ ಬಗ್ಗೆ ಹಿಂಟ್ ಕೊಟ್ಟಿದೆ ಚಿತ್ರತಂಡ. ವೀರ ಚಂದ್ರಹಾಸ ಸಿನಿಮಾದ ನಂತರ ಇದೀಗ ತೆರೆಮರೆಯಲ್ಲಿ ಕಟಕ-2 ಭರ್ಜರಿ ಸಿದ್ಧತೆಗಳು ನಡೆದಿವೆ.

  • ಮೊದಲ ಬಾರಿಗೆ ಬೆಳ್ಳಿ ತೆರೆಯಲ್ಲಿ ಯಕ್ಷಗಾನ ‘ವೀರ ಚಂದ್ರಹಾಸ’ ಚಿತ್ರದ ಮೂಲಕ ಹೊಸ ಪ್ರಯೋಗ: ರವಿ ಬಸ್ರೂರು

    ಮೊದಲ ಬಾರಿಗೆ ಬೆಳ್ಳಿ ತೆರೆಯಲ್ಲಿ ಯಕ್ಷಗಾನ ‘ವೀರ ಚಂದ್ರಹಾಸ’ ಚಿತ್ರದ ಮೂಲಕ ಹೊಸ ಪ್ರಯೋಗ: ರವಿ ಬಸ್ರೂರು

    ಮಂಗಳೂರು: ಪ್ರಪಂಚದ ಚಿತ್ರರಂಗದ ಇತಿಹಾಸದಲ್ಲಿ ಪ್ರಥಮ ಬಾರಿಗೆ, ಕರಾವಳಿ ಕರ್ನಾಟಕದ ಸಮೃದ್ಧ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾದ ಯಕ್ಷಗಾನವನ್ನು ‘ವೀರ ಚಂದ್ರಹಾಸ’ (Veera Chandrahasa) ಚಿತ್ರದ ಮೂಲಕ ಬೆಳ್ಳಿಪರದೆಗೆ ತರಲಾಗಿದೆ. ಏ.18 ರಂದು ಇದನ್ನು ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಲಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದೀಗ ಕರವಾಳಿಯಲ್ಲಿ ಬಿಡುಗಡೆಗೊಳಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಬೇರೆ ಕಡೆಗಳಲ್ಲೂ ಹಂತಹಂತವಾಗಿ ಬಿಡುಗಡೆಗೊಳಿಸಲಾಗುವುದು ಎಂದು ಖ್ಯಾತ ಸಂಗೀತ, ಚಲನಚಿತ್ರ ನಿರ್ದೇಶಕ ರವಿ ಬಸ್ರೂರು (Ravi Basrur) ಹೇಳಿದರು.

    ಮಂಗಳೂರಿನ (Mangaluru) ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ನನ್ನ ಅಜ್ಜ ಯಕ್ಷಗಾನ ಕಲಾವಿದರಾಗಿದ್ದು, ಒಮ್ಮೆಲೆ ಐದು ವಾದ್ಯಗಳನ್ನು ನುಡಿಸಬಲ್ಲ ಸಾಮರ್ಥ್ಯದವರು. ನನ್ನ ತಂದೆ ಸೇರಿ ಇಡೀ ಕುಟುಂಬದಲ್ಲಿ ಎಲ್ಲರೂ ಯಕ್ಷಗಾನ ಕಲಾವಿದರಾಗಿದ್ದಾರೆ. ಯಕ್ಷಗಾನವನ್ನು ಎಲ್ಲೋ ಮಿಸ್ ಮಾಡುತ್ತಿದ್ದೇನೆ ಎಂದೆನಿಸಿತು. ಸುಮಾರು ಹನ್ನೆರಡು ವರ್ಷಗಳ ಮುಂಚೆ ಪ್ರಯತ್ನಿಸಿದ್ದೆ. ಆದರೆ, ಆಗ ನನ್ನ ಕಿಸೆಯಲ್ಲಿ ದುಡ್ಡಿರಲಿಲ್ಲ, ಅನುಭವವೂ ಇರಲಿಲ್ಲ. ಆದರೆ ಈ ವರ್ಷ ಅದಕ್ಕೆ ಕಾಲ ಕೂಡಿ ಬಂದಿತು ಎಂದರು. ಇದನ್ನೂ ಓದಿ: ಉಗ್ರರ ದಾಳಿ ಸ್ಥಳದಲ್ಲೇ ಮಾರ್ಟಿನ್ ಸಿನಿಮಾ ಶೂಟಿಂಗ್ ನಡೆದಿತ್ತು, ಆಗ ಸೆಕ್ಯೂರಿಟಿ ಚೆನ್ನಾಗಿತ್ತು: ಧ್ರುವ ಸರ್ಜಾ

    ಎಲ್ಲರೂ ಇದನ್ನು ಸಿನಿಮಾ ಆಂಗಲ್‌ನಲ್ಲಿ ನೋಡುತ್ತಿದ್ದರು. ಆದರೆ ಇದು ಬರೇ ಸಿನಿಮಾ ಅಲ್ಲ, ಇದು ತುಳುನಾಡಿನ ಕಲೆ. ಆದ್ದರಿಂದ ಇದನ್ನು ಅದೇ ಶೈಲಿಯಲ್ಲಿ ನೋಡಿದರೆ, ವೀಕ್ಷಕನ ದೃಷ್ಟಿಕೋನ ಬದಲಾಗುತ್ತೆ. ಅದ್ಭುತ ಜ್ಞಾನ ಭಂಡಾರವನ್ನೇ ಹೊಂದಿರುವ ಯಕ್ಷಗಾನವನ್ನು ಯಾಕೆ ಇಷ್ಟಕ್ಕೇ ಸೀಮಿತವಾಗಿಟ್ಟುಕೊಳ್ಳಬೇಕು? ಇದನ್ನು ಪ್ರಪಂಚದ ಮುಂದೆ ತರಬೇಕು ಎನ್ನುವ ನಿಟ್ಟಿನಲ್ಲಿ ಈ ಚಿತ್ರ ರೂಪಿಸಲಾಗಿದೆ. ಬಾಹುಬಲಿಯನ್ನು ಮೀರಿಸುವ ಎಲ್ಲಾ ಲಕ್ಷಣವನ್ನು ಈ ಚಿತ್ರ ಹೊಂದಿದೆ. ಇಲ್ಲಿ ಯಕ್ಷಗಾನ ಮಾತ್ರವಲ್ಲ ಕಲಾವಿದರ ಬದುಕೂ ಕೂಡಾ ಅನಾವರಣಗೊಂಡಿದೆ. 1,500 ಕ್ಕೂ ಹೆಚ್ಚು ಇತಿಹಾಸ ಹೊಂದಿರುವ ಯಕ್ಷಗಾನ ಕಲೆಯನ್ನು ವಿಜೃಂಭಣೆಯಿಂದ ವಿಶ್ವದ ಮುಂದೆ ಮೆರೆಸುವ ಒಂದು ಪ್ರಯತ್ನ. ಇದು ಕೇವಲ ಮನೋರಂಜನೆ ಉದ್ದೇಶವಷ್ಟೇ ಅಲ್ಲದೆ, ಭವಿಷ್ಯದ ಅನೇಕ ಚಿತ್ರಗಳಿಗೆ ದಾರಿ ತೋರುವ, ಪರಂಪರೆ ಉಳಿಸುವ, ಭವಿಷ್ಯದ ಪೀಳಿಗೆಗೆ ನಮ್ಮ ಕಲೆಯನ್ನು ಪರಿಚಯಿಸುವ ಒಂದು ಹೊಸ ಆರಂಭ. ಇದರಲ್ಲಿ ಹೆಚ್ಚಾಗಿ ಯಕ್ಷ ಕಲಾವಿದರೇ ಅಭಿನಯಿಸಿದ್ದಾರೆ‌ ಎಂದರು ರವಿ ಬಸ್ರೂರು.

    ಖ್ಯಾತ ಭಾಗವತ ಪಟ್ಲ ಸತೀಶ್ ಶೆಟ್ಟಿ ಮಾತನಾಡಿ, ಯಕ್ಷಗಾನ ಕಲಾವಿದರನ್ನೇ ಬಳಸಿ, ಯಕ್ಷಗಾನೀಯವಾಗಿ ಚಲನಚಿತ್ರವನ್ನು ಹೇಗೆ ಮಾಡಬಹುದು ಎನ್ನುವುದನ್ನು ಬಸ್ರೂರು ತೋರಿಸಿಕೊಟ್ಟಿದ್ದಾರೆ. ಕಾಂತಾರ ಚಲನಚಿತ್ರ ಬಂದ ಮೇಲೆ ದೈವಾರಾಧನೆಗೆ ವಿಶ್ವಮಟ್ಟದ ಮನ್ನಣೆ ಸಿಕ್ಕಿತು. ಅದೇ ರೀತಿ ಈ ಚಿತ್ರದಲ್ಲಿ ಯಕ್ಷಗಾನ ಕಲೆ ಹಾಗೂ ಕಲಾವಿದರಿಗೆ ಮನ್ನಣೆ ಸಿಕ್ಕಿದೆ. ಈ ಚಿತ್ರದಲ್ಲಿ ನಾನೂ ಒಂದು ಹಾಡನ್ನು ಯಕ್ಷಗಾನ ಶೈಲಿಯಲ್ಲೇ ಹಾಡಿದ್ದು ವಿಶೇಷ. ಈ ಚಿತ್ರದಲ್ಲಿ ಯಕ್ಷಗಾನಕ್ಕೆ ಎಲ್ಲಿಯೂ ಲೋಪ, ಅಪಚಾರ ಆಗದ ಹಾಗೆ ನೋಡಲಾಗಿದೆ. ಮುಂದಿನ ಜನಾಂಗಕ್ಕೆ ಮಾತ್ರವಲ್ಲ ಯಕ್ಷಗಾನದ ಮೇಲೆ ಆಸಕ್ತಿ ಇಲ್ಲದವನೂ ಕೂಡ ಆಸಕ್ತಿ ಬೆಳೆಸುವಂತೆ ಈ ಚಿತ್ರದಲ್ಲಿ ತೋರಿಸಲಾಗಿದೆ. ಸಿನಿಮಾದ ಮೂಲಕ ಯಕ್ಷಗಾನದ ಕಂಪನ್ನು ವಿಶ್ವದೆಲ್ಲೆಡೆ ರವಿ ಬಸ್ರೂರು ಪಸರಿಸಿದ್ದಾರೆ ಎಂದರು. ಇದನ್ನೂ ಓದಿ: ಗೋಲ್ಡ್ ಸ್ಮಗ್ಲಿಂಗ್ ಕೇಸ್ – ರನ್ಯಾರಾವ್ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

    ಖ್ಯಾತ ಯಕ್ಷಗಾನ ಭಾಗವತ ರಾಘವೇಂದ್ರ ಝನ್ಸಾಲೆ ಮಾತನಾಡಿ, ಆರೇಳು ಗಂಟೆ ಇರುವ ಯಕ್ಷಗಾನವನ್ನು ಎರಡೂವರೆ ಗಂಟೆಗೆ ಸೀಮಿತಗೊಳಿಸಲಾಗಿದೆ. ಆದರೆ ಚಿತ್ರದಲ್ಲಿ ಯಕ್ಷಗಾನಕ್ಕೆ ಎಲ್ಲೂ ಲೋಪವಾಗಿಲ್ಲ. ಅವರ ಚಿತ್ರದ ಉದ್ದೇಶ ಉತ್ತಮವಾಗಿದ್ದು, ನಾವದಕ್ಕೆ ಪ್ರೋತ್ಸಾಹಿಸೋಣ ಎಂದರು.

    ರವಿ ಬಸ್ರೂರು ತಂಡದ ಪರಿಶ್ರಮದಲ್ಲಿ ಮೂಡಿಬಂದ ಈ ಚಲನಚಿತ್ರವನ್ನು ಎನ್‌.ಎಸ್‌. ರಾಜಕುಮಾರ್ ನಿರ್ಮಿಸಿದ್ದಾರೆ. ಗೀತಾ ರವಿ ಬಸ್ರೂರು, ಅನೂಪ್ ಗೌಡ, ಅನುಲ್ ಕುಮಾರ್ ಪೂವ್ವಾಡಿ ಸಹ‌ ನಿರ್ಮಾಪಕರಾಗಿ, ರವಿ ಬಸ್ರೂರು ಸಂಗೀತ, ಕಿರಣ್ ಕುಮಾರ್ ಆರ್ ಛಾಯಾಗ್ರಹಣ ಮಾಡಿದ್ದಾರೆ. ಸ್ಯಾಂಡಲ್‌ವುಡ್ ನಟ ಡಾ. ಶಿವರಾಜ್ ಕುಮಾರ್ ಕೂಡಾ ಬಣ್ಣ ಹಚ್ಚಿದ್ದು ಸುಮಾರು 900 ಕಲಾವಿದರಿದ್ದಾರೆ‌. ಖ್ಯಾತ ಭಾಗವತರುಗಳಾದ ಪಟ್ಲ ಸತೀಶ್ ಶೆಟ್ಟಿ ಮತ್ತು ರಾಘವೇಂದ್ರ ಝನ್ಸಾಲೆ ಈ ಸಿನಿಮಾದಲ್ಲಿ ಹಾಡಿದ್ದಾರೆ.

  • ‘ಸಿಂಹರೂಪಿಣಿ’ ಟೀಸರ್ ರಿಲೀಸ್ ಮಾಡಿದ ‘ಕೆಜಿಎಫ್ 2’ ಸಂಗೀತ ನಿರ್ದೇಶಕ

    ‘ಸಿಂಹರೂಪಿಣಿ’ ಟೀಸರ್ ರಿಲೀಸ್ ಮಾಡಿದ ‘ಕೆಜಿಎಫ್ 2’ ಸಂಗೀತ ನಿರ್ದೇಶಕ

    ಹೊಸಬರ ‘ಸಿಂಹರೂಪಿಣಿ’ (Simharoopini) ಚಿತ್ರದ ಟೀಸರ್ ಬಿಡುಗಡೆ ಮಾಡಿ ‘ಕೆಜಿಎಫ್ 2’ (KGF 2) ಸಂಗೀತ ನಿರ್ದೇಶಕ ರವಿ ಬಸ್ರೂರು (Ravi Basrur) ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ. ಸದ್ಯ ಸಿನಿಮಾದ ಟೀಸರ್‌ಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದನ್ನೂ ಓದಿ:ರಶ್ಮಿಕಾ ಮಂದಣ್ಣಗೆ ಸ್ವೀಟ್ ಹಾರ್ಟ್ ಎಂದ ವಿಕ್ಕಿ ಕೌಶಲ್

    ಕಲಾವಿದರ ಭವನದಲ್ಲಿ ಸಿಂಹರೂಪಿಣಿ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಅದ್ಧೂರಿಯಾಗಿ ನೆರವೇರಿದೆ. ಟೀಸರ್‌ ರಿಲೀಸ್‌ ಮಾಡಿ ಚಿತ್ರತಂಡಕ್ಕೆ ರವಿ ಬಸ್ರೂರು ಬೆಂಬಲಿಸಿದ್ದಾರೆ. ಈ ಚಿತ್ರಕ್ಕೆ ಕಿನ್ನಾಳ್ ರಾಜ್ ಚಿತ್ರಕಥೆ, ಸಂಭಾಷಣೆ, ಸಾಹಿತ್ಯದ ಜೊತೆ ನಿರ್ದೇಶನ ಕೂಡ ಮಾಡಿದ್ದಾರೆ. ದೊಡ್ಡಬಳ್ಳಾಪುರ ಕೆ.ಎಂ ನಂಜುಂಡೇಶ್ವರ ಕಥೆ ಬರೆದು ಶ್ರೀ ಚಕ್ರ ಫಿಲಿಂಸ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಆಕಾಶ್ ಪರ್ವ ಸಂಗೀತ, ಕಿರಣ್ ಕುಮಾರ್ ಛಾಯಾಗ್ರಹಣ, ವೆಂಕಿ ಸಂಕಲನ, ಕಿಶೋರ್ ಕಲರಿಸ್ಟ್, ಸಾಹಸ ನಿರ್ದೇಶನ ಥ್ರಿಲ್ಲರ್ ಮಂಜು, ಚಂದ್ರು, ಬಂಡೆ ಮಂಜುನಾಗಪ್ಪ, ಸೌಂಡ್ ಎಫೆಕ್ಟ್ ನಂದು.ಜೆ ಇವರುಗಳ ಶ್ರಮದಿಂದ ಸಿದ್ಧಗೊಂಡಿರುವ 1.45 ನಿಮಿಷದ ತುಣುಕುಗಳು ದೊಡ್ಡ ಪರದೆ ಮೇಲೆ ಅನಾವರಣ ಮಾಡಲಾಯಿತು.

    ಪ್ಯಾನ್ ಇಂಡಿಯಾ ಸಂಗೀತ ಸಂಯೋಜಕ ರವಿ ಬಸ್ರೂರು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿ, ನಿರ್ದೇಶಕರು, ನಿರ್ಮಾಪಕರ ದೇವಿಯ ಮೇಲಿನ ಭಕ್ತಿ, ತಂತ್ರಜ್ಞರ ಕೆಲಸಗಳು ಚೆನ್ನಾಗಿ ಮೂಡಿ ಬಂದಿದೆ. ದೃಶ್ಯಗಳನ್ನು ನೋಡಿ ನನಗೆ ಆದಂತ ಕಂಪನ ಎಲ್ಲರಿಗೂ ಆಗಿದೆ ಅಂತ ಭಾವಿಸುತ್ತೇನೆ. ನನ್ನ ಮತ್ತು ನಿರ್ದೇಶಕರಾದ ಕಿನ್ನಾಳ್ ರಾಜ್ ಪಯಣ ಸುಮಾರು 15 ವರ್ಷದಷ್ಟು ಹಳೆಯದು. ಇವರ ನಿರ್ದೇಶನದಲ್ಲಿ ನಾನು ಸಂಗೀತ ಕಂಪೋಸ್ ಮಾಡಬೇಕೆಂದು ಆ ಸಮಯದಲ್ಲಿ ಮಾತಾಡಿಕೊಂಡಿದ್ದೇವು. ಅಲ್ಲಿಂದ ಒಂದಷ್ಟು ಸಿನಿಮಾಗಳಲ್ಲಿ ನಾವಿಬ್ಬರು ಸೇರಿದ್ದೇವು. ಉದ್ಯಮದ ಬೆಳವಣಿಗೆಗೆ ಇಂತಹ ಪ್ರತಿಭೆಗಳ ಪಾತ್ರ ತುಂಬ ಅಗತ್ಯವಿದೆ ಎಂದರು.

    ‘ಕಾಟೇರ’ ಖ್ಯಾತಿಯ ಜಡೇಶ್ ಕುಮಾರ್ ಪೋಸ್ಟರ್ ಬಿಡುಗಡೆ ಮಾಡಿದ ನಂತರ ಮಾತನಾಡಿ, ನಿರ್ದೇಶಕರು ನಮ್ಮ ಊರಿನ ಪಕ್ಕದವರು. ಪ್ರಾರಂಭದಿಂದಲೂ ಅವರ ಶ್ರಮವನ್ನು ನೋಡುತ್ತಾ ಬಂದಿದ್ದೇನೆ. ಈ ಚಿತ್ರದಲ್ಲಿ ನಮ್ಮ ಊರಿನ, ಭಾಗದ ಸಂಸ್ಕೃತಿಯನ್ನು ತೋರಿಸಲಾಗಿದೆ. ಅಂತಹ ಪ್ರಯತ್ನಗಳು ನಡೆದಾಗಲೇ ಮಾಹಿತಿಗಳು ಎಲ್ಲರಿಗೂ ತಿಳಿಯುತ್ತದೆ. ಮ್ಯೂಸಿಕ್ ಚೆನ್ನಾಗಿದೆ. ‘ಕಾಟೇರ’ ಕೋಣ ಇಲ್ಲಿಗೆ ಯಾಕೆ ಬಂತು ಅಂತ ಕೇಳಿದೆ. ಸಿನಿಮಾ ನೋಡಿ ಅಂತಾರೆ. ನಿಮ್ಮಗಳ ಪ್ರಯತ್ನಕ್ಕೆ ಶುಭವಾಗಲಿ ಎಂದು ಹಾರೈಸಿದರು.

    ಸಿನಿಮಾದ ಕುರಿತು ಡೈರೆಕ್ಟರ್ ಕಿನ್ನಾಳ್ ರಾಜ್ ಮಾತನಾಡಿ, ಜೀವನದಲ್ಲಿ ನನ್ನ ಹೆಸರು ಟೈಟಲ್ ಕಾರ್ಡ್ದಲ್ಲಿ ಕಾಣಿಸಬೇಕೆಂದು ಆಸೆಪಟ್ಟವನು. ರವಿಬಸ್ರೂರು ‘ಅಂಜನಿಪುತ್ರ’ ಸಿನಿಮಾಗೆ ಹಾಡು ಬರೆಯಲು ಅವಕಾಶ ಮಾಡಿಕೊಟ್ಟರು. ನಂತರ ‘ಕೆಜಿಎಫ್’ನಿಂದ ಎಲ್ಲರೂ ಗುರುತು ಹಿಡಿಯುವಂತಾಯಿತು. ಈಗ ತಾಯಿ ಚಿತ್ರ ಮಾಡುತ್ತಿದ್ದೇನೆ. ಶೀರ್ಷಿಕೆ ಹೇಳುವಂತೆ ಶ್ರೀ ಮಾರಮ್ಮ ದೇವಿ ಕುರಿತಾಗಿದ್ದು, ಗ್ರಾಫಿಕ್ಸ್ ತಂತ್ರಜ್ಞಾನ ಇರುವುದು ವಿಶೇಷ. ಸಪ್ತ ಮಾತ್ರ‍್ರಿಕೆಯರ ವಿಷಯಗಳನ್ನು ಹೊಂದಿದ್ದು, ರಾಕ್ಷಸನನ್ನು ಸಂಹಾರ ಮಾಡಲು ಪಾರ್ವತಿದೇವಿ ಏಳು ಅವತಾರಗಳಲ್ಲಿ ಭೂಮಿಗೆ ಬರುತ್ತಾಳೆ. ಅದರಲ್ಲಿ ಕೊನೆಯದು ಶ್ರೀ ಮಾರಮ್ಮ ದೇವಿಯದು ಆಗಿರುತ್ತದೆ. ತಾಯಿಯ ಮಹಿಮೆ,ಪವಾಡಗಳು, ಈಗಿನ ಟ್ರೆಂಡ್‌ಗೆ ತಕ್ಕಂತೆ ಕಮರ್ಷಿಯಲ್ ಅಂಶಗಳನ್ನು ತೋರಿಸುವ ಪ್ರಯತ್ನ ಮಾಡಲಾಗಿದೆ. ನಿರ್ಮಾಪಕರ ಹುಟ್ಟಿದ ಹಬ್ಬ, ಗುರುಪೂರ್ಣೀಮೆ ಶುಭದಿನವಾಗಿದ್ದರಿಂದ ಕಾರ್ಯಕ್ರಮ ಏರ್ಪಾಟು ಮಾಡಲಾಗಿದೆ. ಚಿತ್ರದಲ್ಲಿ 132 ಕಲಾವಿದರು ಅಭಿನಯಿಸಿದ್ದಾರೆ. ನಿರ್ಮಾಪಕರ ಕಥೆಗೆ ಚಿತ್ರರೂಪ ಕೊಟ್ಟಿದ್ದೇನೆ. ಹಾಡು ಬರೆಯಲು ಹೋದವನು, ಅಂತಿಮವಾಗಿ ನಿರ್ದೇಶನ ಮಾಡಲು ಹೇಳಿದ್ದೆ, ಇಲ್ಲಿಯ ತನಕ ತಂದು ನಿಲ್ಲಿಸಿದೆ. ಗ್ರಾಫಿಕ್ಸ್ 15 ನಿಮಿಷದ ಕಾಲ ಬರುತ್ತದೆ. ಸದ್ಯ ಸಿಜಿ ನಡೆಯುತ್ತಿದ್ದು, ಕೋಣ ಯಾಕೆ ಇದೆ ಎಂಬುದು ಸಿನಿಮಾ ನೋಡಿದರೆ ತಿಳಿಯುತ್ತದೆಂದು ಕುತೂಹಲ ಕಾಯ್ದಿರಿಸಿದರು.

    ನಿರ್ಮಾಪಕ ಕೆ.ಎಂ.ನಂಜುಡೇಶ್ವರ ಹೇಳುವಂತೆ ಪ್ರತಿಯೊಬ್ಬರ ಜೀವನದಲ್ಲಿ ಒಂದೊಂದು ಅನುಭವ ಆಗಿರುತ್ತದೆ. ತಾಯಿ ವಿರಾಜಮಾನವಾಗಿ ಕೂತಿದ್ದಾಳೆ. ನೀವುಗಳು ದರ್ಶನ ಮಾಡಿದ್ದೀರಾ. ನಿಮ್ಮ ಸಮಸ್ಯೆಗಳು ನಿವಾರಣೆಯಾಗುತ್ತದೆ. ತಾಯಿಯ ಅನುಭವವನ್ನು ಫೀಲ್ ಮಾಡಿ. ತ್ರಿಮೂರ್ತಿ, ತ್ರಿಶಕ್ತಿ , ಸರ್ವಶಕ್ತಿ ಸ್ವರೂಪಿಣಿ ಗ್ರಾಮ ದೇವತೆ ಮಾರಮ್ಮ. ಮೂರು ದೇವತೆಗಳು, ತ್ರಿಮೂರ್ತಿಗಳು. ಎಲ್ಲಾ ದೇವರುಗಳಿಗೆ ಮೂಲ ದೇವರು ಗ್ರಾಮ ದೇವತೆ. ನಿಮ್ಮೂರಿನ ದೇವತೆಯ ಪೂಜೆ ಮಾಡಿ, ಶ್ರೀಮನ್ ನಾರಾಯಣ ತಿರುಪತಿಯಲ್ಲಿ ದರ್ಶನವಾದಂತೆ ಆಗುತ್ತದೆ. ಚಿತ್ರ ನೋಡಿದ ಮೇಲೆ ನೀವುಗಳು ತಾಯಿ ಪ್ರೀತಿ ಬಗ್ಗೆ ಮಾತನಾಡುತ್ತಿರಾ. ಮನುಷ್ಯನಾಗಿ ಹುಟ್ಟಿ ಎಲ್ಲವನ್ನು ದೇವರ ಅನುಗ್ರಹದಿಂದ ಪಡೆದುಕೊಂಡು ನಾವು ಏನು ಮಾಡಿಲ್ಲ. ಅದಕ್ಕಾಗಿ ಸಿನಿಮಾ ಮಾಡಿದ್ದೇನೆ. ಅಮ್ಮ ಅಂತ ಒಂದು ಹೆಜ್ಜೆ ಇಟ್ಟರೆ, ತಾಯಿ ಮೂರು ಹೆಜ್ಜೆ ಮುಂದಿಡುತ್ತಾಳೆ. ನಮಗೆ ಹರಸಲು ಎಲ್ಲಾ ವರ್ಗದಿಂದ ಹಿತೈಷಿಗಳು ಬಂದಿದ್ದಾರೆ. ನಿಮ್ಮಗಳ ಪ್ರೋತ್ಸಾಹ ಇದೇ ರೀತಿ ಇರಬೇಕೆಂದು ಕೋರಿಕೊಂಡರು.

    ಖ್ಯಾತ ನಿರೂಪಕಿ ಅಂಕಿತಾ ಗೌಡ ಈ ಚಿತ್ರದ ಮೂಲಕ ನಾಯಕಿಯಾಗಿ ಗುರುತಿಸಿಕೊಂಡಿದ್ದಾರೆ. ದೇವಿಯಾಗಿ ಯಶಸ್ವಿನಿ ಸಿದ್ದೇಗೌಡ, ರವಿಬಸ್ರೂರು ಪುತ್ರಿ ಖುಷಿ ಬಸ್ರೂರು ಬಾಲ ದೇವಿಯಾಗಿ ಕಾಣಿಸಿಕೊಂಡಿದ್ದಾರೆ. ಇವರೊಂದಿಗೆ ಹರೀಶ್ ರಾಯ್, ಯಶ್ ಶೆಟ್ಟಿ, ದಿನೇಶ್ ಮಂಗಳೂರು, ಪುನೀತ್ ರುದ್ರನಾಗ್, ಭಜರಂಗಿ ಪ್ರಸನ್ನ, ನೀನಾಸಂ ಅಶ್ವತ್ಥ್, ಹಿರಿಯ ನಟ ಸುಮನ್, ತಮಿಳಿನ ದಿನಾ, ಸಾಗರ್ ಕೂಡ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಉಳಿದಂತೆ ತಬಲನಾಣಿ, ವಿಜಯ್‌ಚೆಂಡೂರು, ದಿವ್ಯಾ ಆಲೂರು, ಮನಮೋಹನ್ ರೈ, ಆರವ್ ಲೋಹಿತ್, ಪಿಳ್ಳಣ್ಣ, ಮಧುಶ್ರೀ, ದಿವ್ಯಾ ಆಲೂರು., ವೇದಾಹಾಸನ್, ಸುನಂದಕಲ್ಬುರ್ಗಿ, ಶಶಿಕುಮಾರ್, ಕೆ.ಬಾಲಸುಬ್ರಮಣ್ಯಂ ಮುಂತಾದವರು ನಟಿಸಿದ್ದಾರೆ. ಕಲಾವಿದರು, ತಂತ್ರಜ್ಞರು ಹಾಗೂ ಚಿತ್ರಕ್ಕೆ ದುಡಿದವರನ್ನು ವೇದಿಕೆಗೆ ಆಹ್ವಾನಿಸಿ ಅವರುಗಳಿಗೂ ಮಾತನಾಡಲು ಅವಕಾಶ ಕಲ್ಪಸಿದ್ದು ನಿರ್ದೇಶಕರ ದೊಡ್ಡ ಗುಣವೆಂದು ಹೇಳಬಹುದು. ಸುಮಾರು ಎರಡೂವರೆ ಗಂಟೆಗಳ ಕಾಲ ನಡೆದ ಸುಂದರ ಸಮಾರಂಭವು ಎಲ್ಲರಿಗೂ ಭಕ್ತಿಭಾವದಲ್ಲಿ ಮಿಂದಂತೆ ಆಗಿತ್ತು.

  • ರವಿ ಬಸ್ರೂರ್ ಪುತ್ರನ ಚಿತ್ರಕ್ಕೆ ಇಂಜಿನಿಯರ್ ಶಶಿಕಿರಣ್ ಡೈರೆಕ್ಟರ್

    ರವಿ ಬಸ್ರೂರ್ ಪುತ್ರನ ಚಿತ್ರಕ್ಕೆ ಇಂಜಿನಿಯರ್ ಶಶಿಕಿರಣ್ ಡೈರೆಕ್ಟರ್

    ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರ್ (Ravi Basrur)  ಪುತ್ರ ಮಾಸ್ಟರ್ ಪವನ್ ಬಸ್ರೂರು ಕ್ಲಿಕ್ ಸಿನಿಮಾ ಮೂಲಕ ಪರಿಪೂರ್ಣವಾಗಿ ಚಂದನವನಕ್ಕೆ ಕಾಲಿಟ್ಟಿದ್ದಾರೆ. ಗಿರ್ಮಿಟ್ ಚಿತ್ರದಲ್ಲಿ ಸಣ್ಣದೊಂದು ಪಾತ್ರ ನಿರ್ವಹಿಸಿದ್ದ ಪವನ್, ಕ್ಲಿಕ್ ಚಿತ್ರದ ಪ್ರಮುಖ ಪಾತ್ರಧಾರಿಯಾಗಿ ಬಣ್ಣ ಹಚ್ಚಿದ್ದಾರೆ.  ಐಟಿ ಉದ್ಯೋಗಿಯಾಗಿರುವ ಶಶಿಕಿರಣ್ (Shashikiran) ಸಿನಿಮಾ ಮೇಲಿನ ಅಪಾರ ಪ್ರೀತಿಯಿಂದ ತಮ್ಮದೇ ಶರಣ್ಯ ಫಿಲ್ಮಂಸ್ ನಡಿ ಕ್ಲಿಕ್ (Click) ಸಿನಿಮಾ ನಿರ್ಮಾಣ ಮಾಡಿದ್ದಾರೆ.   ಪವನ್ ಜೊತೆ ಮತ್ತೊಬ್ಬ ಯುವ ನಟ ಕಾರ್ತಿಕ್ ಕೂಡ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಉಳಿದಂತೆ ಚಂದ್ರಕಲಾ ಮೋಹನ್, ರಚನಾ ದಶರತ್, ಸಂಜು ಬಸಯ್ಯ, ಸಿಲ್ಲಿಲಲ್ಲಿ ಆನಂದ್, ಸುಮನಾ ಶಶಿ ಸೇರಿದಂತೆ ಹಲವರು ಚಿತ್ರದ ತಾರಾಬಳಗದಲ್ಲಿದ್ದಾರೆ.

    ನಮ್ಮಲ್ಲಿ ಹೆಚ್ಚಿನ ಪಾಲು ಪೋಷಕರು ಮಕ್ಕಳು ಡಾಕ್ಟರ್-ಇಂಜಿನಿಯರ್ ಆಗಬೇಕು ಎಂದು ಬಯಸುತ್ತಾರೆ. ಆದರೆ ಈ ಎರಡು ವಲಯದ ಹೊರತಾಗಿ ನಮ್ಮ ಮುಂದೆ ತುಂಬಾ ಆಯ್ಕೆಗಳಿವೆ. ಮಕ್ಕಳ ಇಚ್ಛೆಗೆ ತಕ್ಕಂತೆ ಓದಲು, ಆಯ್ಕೆ ಮಾಡಲು ಬಿಡಬೇಕು ಎಂಬ ಶಿಕ್ಷಣದ ಕಥೆ ಸುತ್ತ ಕ್ಲಿಕ್ ಸಿನಿಮಾ ಸಾಗುತ್ತದೆ. ಈ ಚಿತ್ರಕ್ಕೆ ಯುವ ನಿರ್ದೇಶಕ ಶಶಿಕುಮಾರ್ ಆಕ್ಷನ್ ಕಟ್ ಹೇಳಿರುವ ಈ ಸಿನಿಮಾದ ಟ್ರೇಲರ್ ಸದ್ಯದಲ್ಲೇ ಬಿಡುಗಡೆಯಾಗಲಿದೆ.

    ಮೂಲತಃ ಬೆಂಗಳೂರಿನವರಾದ ಶಶಿಕಿರಣ್, ಐಟಿ ಉದ್ಯೋಗಿ. ಚಿಕ್ಕಂದಿನಿಂದಲೂ ಕಲೆಯ ಬಗ್ಗೆ ಆಸಕ್ತಿ ಇದ್ದರೂ, ಮನೆಯವರ ಸಲಹೆಯ ಮೇರೆಗೆ ಇಂಜಿನಿಯರಿಂಗ್ ಮುಗಿಸಿ, ಕೆಲಸಕ್ಕೆ ಸೇರಿಕೊಂಡರು. ಆದರೂ ಶಶಿಗೆ ಸಿನಿಮಾ ಕಡೆಯೇ ಮನಸ್ಸು ಸೆಳೆಯುತ್ತಿತ್ತು. ಹೀಗಾಗಿ ಕೆಲಸದ ಜತೆ ಜತೆಗೆ ಸಿನಿಮಾದತ್ತ ಮುಖ ಮಾಡಿದರು ಶಶಿಕಿರಣ್.

    “ಮೊದಲಿಗೆ ಫಿಲಂ ಮೇಕಿಂಗ್ ಬಗ್ಗೆ ತಿಳಿದುಕೊಳ್ಳಬೇಕು ಅಂತ ಶುರು ಮಾಡಿದ ಸಿನಿಮಾವಿದು. ಆದರೆ ತುಂಬಾ ದೊಡ್ಡ ಮಟ್ಟದಲ್ಲಿ ನನ್ನ ಕನಸು ಈಡೇರಿದ ಖುಷಿಯಲ್ಲಿದ್ದೇನೆ. ತುಂಬಾ ಸಿನಿಮಾ ನೋಡಿ ಪಾಠ ಕಲಿತಿದ್ದೀನಿ. ಒಳ್ಳೆ ಅನುಭವ ಕೊಟ್ಟಿದೆ. ಈ ಚಿತ್ರದಲ್ಲಿ ಸಾಕಷ್ಟು ಹೊಸತನವಿದೆ. ರವಿ ಬಸ್ರೂರು ಅವರಿಗೆ ಕಥೆ ಹೇಳಲು ಹೋಗಿದ್ದೆ. ಒನ್ ಲೈನ್ ಕೇಳಿದ್ರು. ಪವನ್ ಜತೆಯೂ ಮಾತನಾಡಿದ್ವಿ. “ನನ್ ಮಗ ಅಂತ ತಗೋಬೇಡಿ… ಆಡಿಷನ್ ಮಾಡಿಯೇ ಸೆಲೆಕ್ಟ್ ಮಾಡಿ” ಅಂತ ಹೇಳಿದ್ದರು ರವಿ ಬಸ್ರೂರು. ಆಡಿಷನ್ ಮೂಲಕ ಸೆಲೆಕ್ಟ್ ಆದ ನಂತರ ವರ್ಕ್ ಶಾಪ್ ಕೂಡಾ ಮಾಡಿದೆವು. ಪವನ್ ಅವರಿಗೆ ನಟನೆಯಲ್ಲಿ ಸೆಳೆಯುವ ಪವರ್ ಇದೆ. ಚಿಕ್ಕ ವಯಸ್ಸಿನಲ್ಲೇ ದೊಡ್ಡ ಮಟ್ಟದಲ್ಲಿ ಸಾಧನೆ ಮಾಡುವ ಹಂಬಲ ಪವನ್ ಅವರಿಗಿದೆ. ನಾನು ನಿರ್ಮಾಣ ಮಾಡಿದ್ದರೂ ಕಥೆ ಓಕೆ ಮಾಡುವುದರಿಂದ ಹಿಡಿದು ಆರ್ಟಿಸ್ಟ್ ಸೆಲೆಕ್ಷನ್, ಕಾಸ್ಟ್ಯೂಮ್, ಲೊಕೇಷನ್, ಎಡಿಟ್, ದಿ.ಐ, ಮ್ಯೂಸಿಕ್… ಎಲ್ಲದರಲ್ಲೂ ತೊಡಗಿಸಿಕೊಂಡು ಬಂದಿದ್ದೇನೆ. ಸಮಯ ತೆಗೆದುಕೊಂಡು, ಸಿನಿಮಾಕ್ಕೆ ಬೇಕಾದ ಎಲ್ಲವನ್ನೂ ಒದಗಿಸಿ ಕ್ವಾಲಿಟಿ ಕಾಪಾಡಿಕೊಂಡು ಕ್ಲಿಕ್ ಸಿನಿಮಾ ಮಾಡಿದ್ದೇನೆ” ಎನ್ನುತ್ತಾರೆ ನಿರ್ಮಾಪಕ ಶಶಿಕಿರಣ್.

    ಬೆಂಗಳೂರು, ಬಿಡದಿ ರಾಮನಗರ ಕುಂದಾಪುರ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಕ್ಲಿಕ್ ಸಿನಿಮಾಗೆ ಆಕಾಶ್ ಪರ್ವ-ವಿಶ್ವಾಸ್ ಕೌಶಿಕ್ ಸಂಗೀತ ನಿರ್ದೇಶನ, ಜೀವನ್ ಗೌಡ ಛಾಯಾಗ್ರಹಣ, ವಿನಯ್ ಕುಮಾರ್ ಸಂಕಲನವಿದೆ.

  • ‘ಸಲಾರ್’ ಚಿತ್ರಕ್ಕೆ ಹಿನ್ನೆಲೆ ಸಂಗೀತ : ಬಸ್ರೂರಿನಲ್ಲಿ ಬೀಡುಬಿಟ್ಟ ಪ್ರಶಾಂತ್ ನೀಲ್

    ‘ಸಲಾರ್’ ಚಿತ್ರಕ್ಕೆ ಹಿನ್ನೆಲೆ ಸಂಗೀತ : ಬಸ್ರೂರಿನಲ್ಲಿ ಬೀಡುಬಿಟ್ಟ ಪ್ರಶಾಂತ್ ನೀಲ್

    ಪ್ರಭಾಸ್ ಮತ್ತು ಪ್ರಶಾಂತ್ ನೀಲ್ (Prashant Neel)ಕಾಂಬಿನೇಷನ್ ನ ‘ಸಲಾರ್’ ಚಿತ್ರಕ್ಕೆ ಹಿನ್ನೆಲೆ ಸಂಗೀತ ನೀಡುವ ಕೆಲಸ ನಡೆಯುತ್ತಿದೆ. ಕೆಜಿಎಫ್ ಚಿತ್ರಕ್ಕೆ ಹಿನ್ನೆಲೆ ಸಂಗೀತ (Background Music) ನೀಡಿದ ರವಿ ಬಸ್ರೂರ್ (Ravi Basrur) ಅವರೇ ಈ ಚಿತ್ರಕ್ಕೂ ಸಂಗೀತ ನೀಡಿದ್ದಾರೆ. ಕಳೆದ ಎರಡು ವಾರದಿಂದಲೂ ಸಲಾರ್ ಚಿತ್ರಕ್ಕೆ ಹಿನ್ನೆಲೆ ಸಂಗೀತದ ಕೆಲಸ ನಡೆಯುತ್ತಿದ್ದ ತಮ್ಮ ತಂಡದೊಂದಿಗೆ ನಿರ್ದೇಶಕ ಪ್ರಶಾಂತ್ ನೀಲ್ ಬಸ್ರೂರಿನ ಸ್ಟುಡಿಯೋದಲ್ಲೇ ಬೀಡುಬಿಟ್ಟಿದ್ದಾರೆ.

    ಒಂದು ಕಡೆ ಸಿನಿಮಾ ತಯಾರಿ ಕೆಲಸ ನಡೆಯುತ್ತಿದ್ದರೆ ಮತ್ತೊಂದು ಕಡೆ ಬಿಡುಗಡೆಯ ಸಿದ್ದತೆಯನ್ನೂ ಚಿತ್ರತಂಡ ಶುರು ಮಾಡಿದೆ. ನಿರ್ಮಾಪಕರು ಇನ್ನೂ ಚಿತ್ರದ ಪ್ರಚಾರವನ್ನೇ ಶುರು ಮಾಡಿಲ್ಲ. ಆಗಲೇ ನಿರೀಕ್ಷೆಯನ್ನು ಮಿತಿಮೀರಿ ಹೆಚ್ಚಿಸಿಕೊಂಡಿದೆ. ಅದರಲ್ಲೂ ಈ ಬಾರಿ ಅಮೆರಿಕಾದಲ್ಲಿ (America) ಈ ಸಿನಿಮಾ ದಾಖಲೆಯ ರೀತಿಯಲ್ಲಿ ಬಿಡುಗಡೆಯಾಗಲಿದೆ. ಅಮೆರಿಕಾದ ಖ್ಯಾತ ವಿತರಣಾ ಸಂಸ್ಥೆಯೇ ಹಂಚಿಕೊಂಡಂತೆ, ಸಲಾರ್ ಸಿನಿಮಾ ಉತ್ತರ ಅಮೆರಿಕಾದಲ್ಲಿ 1979ಕ್ಕೂ ಹೆಚ್ಚು ಸ್ಥಳಗಳಲ್ಲಿ ರಿಲೀಸ್  (Release) ಆಗಲಿದೆಯಂತೆ.

    ಸೆಪ್ಟೆಂಬರ್ 27ಕ್ಕೆ ಈ ಸಿನಿಮಾ ರಿಲೀಸ್ ಆಗಲಿದ್ದು, ಇದೇ ಮೊದಲ ಬಾರಿಗೆ ಭಾರತದ ಸಿನಿಮಾವೊಂದು ಉತ್ತರ ಅಮೆರಿಕಾದಲ್ಲಿ ಈ ಪ್ರಮಾಣದಲ್ಲಿ ಸಿನಿಮಾ ರಿಲೀಸ್ ಆಗುತ್ತಿರುವುದು ದಾಖಲೆ ಎಂದು ಹೇಳಲಾಗುತ್ತಿದೆ. ಈವರೆಗೂ ಭಾರತೀಯ ಯಾವುದೇ ಭಾಷೆಯ ಸಿನಿಮಾ ಇಷ್ಟು ಪ್ರಮಾಣದ ಸ್ಥಳಗಳಲ್ಲಿ ಬಿಡುಗಡೆಯಾಗಿಲ್ಲ ಎನ್ನುತ್ತದೆ ಪ್ರತ್ಯಂಗಿರಾ ವಿತರಣಾ ಸಂಸ್ಥೆ.

    ಮೊನ್ನೆಯಷ್ಟೇ ಪ್ರಭಾಸ್ (Prabhas) ನಟನೆಯ ಸಲಾರ್ ಸಿನಿಮಾದ ಟೀಸರ್ ರಿಲೀಸ್ ಆಗಿದ್ದು, ಈ ಟೀಸರ್ ನಲ್ಲಿ ಹೆಚ್ಚು ಅಬ್ಬರಿಸಿದ್ದು ಪ್ರಭಾಸ್ ಅಲ್ಲ. ಪುಷ್ಪಕ ವಿಮಾನ (Pushpaka Vimana) ಸಿನಿಮಾದ ಮೂಲಕ ಸಾಕಷ್ಟು ಫೇಮಸ್ ಆಗಿರುವ ಟಿನ್ನು ಆನಂದ್ (Tinnu Anand). ಪುಷ್ಪಕ ವಿಮಾನ ಸಿನಿಮಾದಲ್ಲಿ ಟಿನ್ನುಗೆ ಮಾತೇ ಇರಲಿಲ್ಲ. ಯಾಕೆಂದರೆ ಅದು ಮೂಕಿ ಚಿತ್ರವಾಗಿತ್ತು. ಸಲಾರ್ ಸಿನಿಮಾದ ಟೀಸರ್ ನಲ್ಲಿ ಟಿನ್ನುಗೆ ಮಾತು ಬಿಟ್ಟರೆ ಬೇರೇನೂ ಇಲ್ಲ.

    ತಮ್ಮ ಅದ್ಭುತ ಕಂಠ ಮತ್ತು ಧ್ವನಿ ಏರಿಳಿತದಿಂದಾಗಿ ಟಿನ್ನು ಸಲಾರ್ (Salaar) ನಲ್ಲಿ ಹೊಡೆದ ಅಷ್ಟೂ ಡೈಲಾಗ್ ಗಳು ಪ್ರಭಾಸ್ ಅಭಿಮಾನಿಗಳ ಸಂಭ್ರಮಕ್ಕೆ ಕಾರಣವಾಗಿವೆ. ಸಲಾರ್ ಸಿನಿಮಾದ ಹೀರೋ ಅನ್ನು ಅವರು ಪರಿಚಯಿಸಿದ ರೀತಿಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಸಲಾರ್ ಸಿನಿಮಾದ ಕಥೆಯನ್ನು ಅವರ ನಾಲಿಗೆಯಿಂದಲೇ ಕೇಳುವುದು ಚಂದ ಎಂದು ಕಾಮೆಂಟ್ ಮಾಡಿದ್ದಾರೆ. ಈ ಮೂಲಕ ಪ್ರಭಾಸ್ ಅಭಿಮಾನಿಗಳ ಮನ ಗೆದ್ದಿದ್ದಾರೆ ಟಿನ್ನು.

    ಒಂದು ಕಡೆ ಟಿನ್ನು ಪಾತ್ರದ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ ಮತ್ತೊಂದು ಕಡೆ ಸಲಾರ್ ಸಿನಿಮಾದ ಟೀಸರ್ ಬಗ್ಗೆ ಹಲವರು ಹಲವು ರೀತಿಯಲ್ಲಿ ವಿಶ್ಲೇಷಣೆ ಮಾಡುತ್ತಿದ್ದಾರೆ. ಟೀಸರ್ ನಲ್ಲಿ ಬಳಕೆಯಾದ ದೃಶ್ಯಗಳಲ್ಲಿ ಕೆಜಿಎಫ್ ಸಿನಿಮಾವನ್ನೂ ಹಲವರು ಹುಡುಕಿದ್ದಾರೆ. ಹಾಗಾಗಿ ಫ್ಯಾನ್ಸ್ ತಲೆಕೆಡಿಸಿಕೊಂಡು ತಮ್ಮದೇ ಆದ ರೀತಿಯಲ್ಲಿ ಕಥೆ ಕಟ್ಟುತ್ತಿದ್ದಾರೆ. ಆ ಕಥೆಗಳು ಕೂಡ ತುಂಬಾ ಸ್ವಾರಸ್ಯಕರವಾಗಿವೆ.

     

    ಬಿಡುಗಡೆಯಾದ ಸಲಾರ್ ಟೀಸರ್ ನಲ್ಲಿ ಕೆಜಿಎಫ್ ಸಿನಿಮಾದ ಕೋಲಾರ್ ಗೋಲ್ಡ್ ಫಿಲ್ಡನ್ ಮೂನಿಂಗ್ ಒಳಗಿನ ಸಾಮ್ರಾಜ್ಯವನ್ನು ತರುವ ಪ್ರಯತ್ನ ನಡೆದಿದೆಯಾ ಎನ್ನುವ ಅನುಮಾನ ಮೂಡಿಸಿದೆ. ಕೆಜಿಎಫ್ ಕಥೆಯಲ್ಲಿ ಬರುವ ಬಂಗಾರದ ಕಣಜಗಳ ಗೇಟ್ ಗಳು ಸಲಾರ್ ನಲ್ಲಿ ಎಂಟ್ರಿ ಪಡೆದಿವೆ. ಕೆಲ ನಂಬರ್ ಗಳು ಕೂಡ ಯಥಾವತ್ತಾಗಿ ದಾಖಲಾಗಿವೆ. ಹಾಗಾಗಿ ಕೆಜಿಎಫ್ ಅಧ್ಯಾಯದ ಒಂದಷ್ಟು ಭಾಗವನ್ನು ಸಲಾರ್ ಸಿನಿಮಾದಲ್ಲಿ ಹೇಳಿದ್ದಾರಾ ಎಂದು ಹಲವರು ಪ್ರಶ್ನೆ ಮಾಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನವೀನ್ ಶಂಕರ್ ಅಭಿನಯದ ‘ಕ್ಷೇತ್ರಪತಿ’ ರಿಲೀಸ್ ಡೇಟ್ ಫಿಕ್ಸ್

    ನವೀನ್ ಶಂಕರ್ ಅಭಿನಯದ ‘ಕ್ಷೇತ್ರಪತಿ’ ರಿಲೀಸ್ ಡೇಟ್ ಫಿಕ್ಸ್

    ಗುಲ್ಟು, ಹೊಂದಿಸಿ ಬರೆಯಿರಿ, ಹೊಯ್ಸಳ ಚಿತ್ರಗಳ ಮೂಲಕ  ಜನಮನ್ನಣೆ ಪಡೆದಿರುವ ನವೀನ್ ಶಂಕರ್ (Naveen) ಅಭಿನಯದ ‘ಕ್ಷೇತ್ರಪತಿ’ (Kshetrapati) ಚಿತ್ರದ ನೂತನ ಪೋಸ್ಟರ್ ಬಿಡುಗಡೆಯಾಗಿದೆ‌. ಬಸವ ಪಾತ್ರದಲ್ಲಿ ನವೀನ್ ಶಂಕರ್ ಕಾಣಿಸಿಕೊಳ್ಳುತ್ತಿದ್ದು, ಭೂಮಿಕಾ ಎಂಬ ಹೆಸರಿನಿಂದ ಹೊಸ ತಲೆಮಾರಿನ ಪತ್ರಕರ್ತೆ ಪಾತ್ರದಲ್ಲಿ ಅರ್ಚನಾ ಜೋಯಿಸ್ ಅಭಿನಯಿಸಿದ್ದಾರೆ.

    ರೈತರ ಹೋರಾಟಕ್ಕೆ ಮಹಿಳಾ ಆಯಾಮ (women perspective) ಅರ್ಚನಾ ಜೋಯಿಸ್ ಪಾತ್ರ ನೀಡುತ್ತದೆ. ಈ ಹಿಂದೆ ಹೊಂದಿಸಿ ಬರೆಯಿರಿ ಚಿತ್ರದಲ್ಲಿ ಮೋಡಿ ಮಾಡಿದ್ದ ನವೀನ್ ಶಂಕರ್ ಹಾಗೂ ಅರ್ಚನಾ ಜೋಯಿಸ್ (Archana Jois) ಜೋಡಿ ಕ್ಷೇತ್ರಪತಿ ಚಿತ್ರದಲ್ಲಿ ಮತ್ತೆ ಪ್ರೇಕ್ಷಕರನ್ನು ರಂಜಿಸಲಿದೆ. ಈಗಾಗಲೇ ಕ್ಷೇತ್ರಪತಿ ಚಿತ್ರದ ಟೀಸರ್ ನೋಡುಗರ ಮನ ಗೆದ್ದಿದೆ.  ಇದನ್ನೂ ಓದಿ:ಮತ್ತೆ ಪ್ರೀತಿಯಲ್ಲಿ ಬಿದ್ರಾ ಸಮಂತಾ- ಏನಿದು ಹೊಸ ಕಹಾನಿ?

    ರವಿ ಬಸ್ರೂರ್ ಮ್ಯೂಸಿಕ್ ಮತ್ತು ಮೂವೀಸ್ ಅರ್ಪಿಸುತ್ತಿರುವ, ಆಶ್ರಗ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಕ್ಷೇತ್ರಪತಿ ಚಿತ್ರ ಪೊಲಿಟಿಕಲ್ ಡ್ರಾಮಾ ಕಥಾಹಂದರ ಹೊಂದಿದೆ. ದಿ ಇಮೋಷನ್ಸ್ ಫ್ಯಾಕ್ಟರಿ ಗ್ರೂಪ್ ಸಹ ನಿರ್ಮಾಣವಿರುವ ಈ ಚಿತ್ರ ಆಗಸ್ಟ್ 18 ರಂದು ಕೆ.ಆರ್.ಜಿ ಸ್ಟುಡಿಯೋಸ್ ಮೂಲಕ ಬಿಡುಗಡೆಯಾಗುತ್ತಿದೆ. ಶ್ರೀಕಾಂತ್ ಕಟಗಿ (Srikanta Katagi) ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

    ಕೆ.ಜಿ.ಎಫ್ ಖ್ಯಾತಿಯ ರವಿ ಬಸ್ರೂರ್ (Ravi Basrur) ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ವೈ. ವಿ. ಬಿ. ಶಿವಸಾಗರ್ ಛಾಯಾಗ್ರಹಣ, ಮನು ಶೇಡ್ಗಾರ್ ಸಂಕಲನ, ನರಸಿಂಹ ಸಾಹಸ ನಿರ್ದೇಶನ ಹಾಗೂ ಜೀವನ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.  ನವೀನ್ ಶಂಕರ್ , ಅರ್ಚನಾ ಜೋಯಿಸ್, ಅಚ್ಯುತ್ ಕುಮಾರ್, ರಾಹುಲ್ ಐನಾಪುರ, ಕೃಷ್ಣ ಹೆಬ್ಬಾಳೆ, ಶೈಲಶ್ರೀ ಅರಸ್, ನಾಟ್ಯ ರಂಗ, ಹರ್ಷ ಅರ್ಜುನ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ’ಕ್ಲಿಕ್’ ಸಿನಿಮಾ ಮೂಲಕ ಬಣ್ಣ ಹಚ್ಚಿದ ಮಾಸ್ಟರ್ ಪವನ್ ಬಸ್ರೂರ್

    ’ಕ್ಲಿಕ್’ ಸಿನಿಮಾ ಮೂಲಕ ಬಣ್ಣ ಹಚ್ಚಿದ ಮಾಸ್ಟರ್ ಪವನ್ ಬಸ್ರೂರ್

    ಗ್ರಂ, ಮಫ್ತಿ, ಕೆಜಿಎಫ್ ನಂತಹ ಸೂಪರ್ ಹಿಟ್ ಸಿನಿಮಾಗಳಿಗೆ ಸಂಗೀತ ನೀಡಿರುವ ರವಿ ಬಸ್ರೂರ್ (Ravi Basrur)  ಗಾಯಕರಾಗಿಯೂ, ನಿರ್ಮಾಪಕರಾಗಿಯೂ ಸ್ಯಾಂಡಲ್ ವುಡ್ ಗೆ ಚಿರಪರಿತ.. ಪರಭಾಷೆಯ ಚಿತ್ರಗಳಿಗೂ ಸಂಗೀತ ನಿರ್ದೇಶಕರಾಗಿ ಕೆಲಸ ಮಾಡುತ್ತಿರುವ ರವಿ ಬಸ್ರೂರ್ ಪುತ್ರ ಮಾಸ್ಟರ್ ಪವನ್ ಬಸ್ರೂರು (Pawan Basrur) ಸಿನಿಮಾ ಇಂಡಸ್ಟ್ರೀಗೆ ಎಂಟ್ರಿ ಕೊಟ್ಟಿದ್ದಾರೆ.

    ಐಟಿ ಉದ್ಯೋಗಿಯಾಗಿರುವ ಶಶಿಕಿರಣ್ ಸಿನಿಮಾ ಮೇಲಿನ ಅಪಾರ ಪ್ರೀತಿಯಿಂದ ತಮ್ಮದೇ ಶರಣ್ಯ ಫಿಲ್ಮಂಸ್ ನಡಿ ಕ್ಲಿಕ್  (Click)ಎಂಬ ಹೊಸ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಈ ಚಿತ್ರದ ಮೂಲಕ ರವಿ ಬಸ್ರೂರ್ ಮಗ ಪವನ್ ಬಸ್ರೂರ್ ಸ್ಯಾಂಡಲ್ ವುಡ್ ಗೆ ಪದಾರ್ಪಣೆ ಮಾಡಿದ್ದಾರೆ. ಮಾಸ್ಟರ್ ಪವನ್ ಜೊತೆಯಲ್ಲಿ ಮತ್ತೊಬ್ಬ ಯುವ ನಟ ಕಾರ್ತಿಕ್ ಕೂಡ ಮುಖ್ಯಭೂಮಿಕೆಯಲ್ಲಿ ನಟಿಸ್ತಿದ್ದು, ಉಳಿದಂತೆ ಚಂದ್ರಕಲಾಮೋಹನ್, ರಚನಾ ದಶರತ್, ಸಂಜು ಬಸಯ್ಯ, ಸಿಲ್ಲಿಲಲ್ಲಿ ಆನಂದ್, ಸುಮನ್ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ. ಇದನ್ನೂ ಓದಿ:27 ವರ್ಷಗಳ ಬಳಿಕ ಮಲಯಾಳಂ ಸಿನಿಮಾ ರಂಗಕ್ಕೆ ಕೀರವಾಣಿ ಎಂಟ್ರಿ

    ನಮ್ಮಲ್ಲಿ ಹೆಚ್ಚಿನ ಪಾಲು ಪೋಷಕರು ಮಕ್ಕಳು ಡಾಕ್ಟರ್-ಇಂಜಿನಿಯರ್ ಆಗಬೇಕು ಎಂದು ಬಯಸುತ್ತಾರೆ. ಆದರೆ ಈ ಎರಡು ವಲಯದ ಹೊರತಾಗಿ ನಮ್ಮ ಮುಂದೆ ತುಂಬಾ ಆಯ್ಕೆಗಳಿವೆ. ಮಕ್ಕಳ ಇಚ್ಛೆಗೆ ತಕ್ಕಂತೆ ಓದಲು, ಆಯ್ಕೆ ಮಾಡಲು ಬಿಡಬೇಕು ಎಂಬ ಶಿಕ್ಷಣದ ಕಥೆ ಸುತ್ತ ಸಾಗುವ ಈ ಚಿತ್ರಕ್ಕೆ ಯುವ ನಿರ್ದೇಶಕ ಶಶಿಕುಮಾರ್ ಆಕ್ಷನ್ ಕಟ್ ಹೇಳಿದ್ದಾರೆ. ಕೋ ಡೈರೆಕ್ಟರ್ ಆಗಿ ವೀರು ಸಾಥ್ ಕೊಟ್ಟಿದ್ದಾರೆ. ಬೆಂಗಳೂರು, ಬಿಡದಿ ರಾಮನಗರ ಕುಂದಾಪುರ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಈಗಾಗ್ಲೇ ಶೂಟಿಂಗ್ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಕ್ಲಿಕ್ ಸಿನಿಮಾಗೆ ಆಕಾಶ್ ಪರ್ವ-ವಿಶ್ವಾಸ್ ಕೌಶಿಕ್ ಸಂಗೀತ ನಿರ್ದೇಶನ, ಜೀವನ್ ಗೌಡ ಛಾಯಾಗ್ರಹಣ, ವಿನಯ್ ಕುಮಾರ್ ಸಂಕಲನವಿದೆ. ಶೀಘ್ರದಲ್ಲಿಯೇ ಸಿನಿಮಾವನ್ನು ತೆರೆಗೆ ತರುಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

  • ಭೈರತಿ ರಣಗಲ್‌ಗೆ `ಕೆಜಿಎಫ್ 2′ ರವಿ ಬಸ್ರೂರು ಸಂಗೀತ

    ಭೈರತಿ ರಣಗಲ್‌ಗೆ `ಕೆಜಿಎಫ್ 2′ ರವಿ ಬಸ್ರೂರು ಸಂಗೀತ

    ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ (Shivarajkumar) ಅವರು ತಮ್ಮ ಸಿನಿಮಾಗಳ ಮೂಲಕ ಹಿಟ್ ಮೇಲೆ ಹಿಟ್ ಕೊಡುತ್ತಿದ್ದಾರೆ. ಸಾಲು ಸಾಲು ಚಿತ್ರಗಳ ಮೂಲಕ ಶಿವಣ್ಣ ಸುದ್ದಿಯಲ್ಲಿದ್ದಾರೆ. ಇತ್ತೀಚಿಗೆ ಶಿವಣ್ಣ `ಭೈರತಿ ರಣಗಲ್’ ಚಿತ್ರದ ಪೋಸ್ಟರ್ ರಿವೀಲ್ ಮಾಡಿದ್ದರು. ಈ ಬೆನ್ನಲ್ಲೇ ಸಿನಿಮಾ ಬಗ್ಗೆ ಚಿತ್ರತಂಡ ಮತ್ತೊಂದು ಅಪ್‌ಡೇಟ್ ಹಂಚಿಕೊಂಡಿದೆ. ಇದನ್ನೂ ಓದಿ: ನಟಿ ಸ್ವರಾ ಭಾಸ್ಕರ್ ಆರತಕ್ಷತೆಯಲ್ಲಿ ಕಾಣಿಸಿಕೊಂಡ ರಾಹುಲ್ ಗಾಂಧಿ

     

    View this post on Instagram

     

    A post shared by Geetha Pictures (@geethapictures)

    2017ರಲ್ಲಿ ‘ಮಫ್ತಿ’ (Mufti)ಸಿನಿಮಾದಲ್ಲಿ ಶಿವಣ್ಣನ ನಿರ್ವಹಿಸಿದ್ದ `ಭೈರತಿ ರಣಗಲ್’ ಪಾತ್ರ ಸೂಪರ್ ಹಿಟ್ ಆಗಿತ್ತು. ಆ ಸಿನಿಮಾಕ್ಕೆ ಗೆಲ್ಲುವ ಶಕ್ತಿ ತಂದುಕೊಟ್ಟಿದ್ದೇ ಶಿವಣ್ಣನ ಪಾತ್ರ. ಈಗ ಅದೇ ಪಾತ್ರವನ್ನು ಪ್ರಧಾನವಾಗಿರಿಸಿಕೊಂಡು ಸಿನಿಮಾ ತೆರೆಗೆ ಬರುತ್ತಿದ್ದು, ಪಾತ್ರದ ಹೆಸರಾದ `ಭೈರತಿ ರಣಗಲ್’ ಅನ್ನು ಸಿನಿಮಾಕ್ಕೂ ಇಡಲಾಗಿದೆ.

    `ಮಫ್ತಿ’ ಪ್ರೀಕ್ವೆಲ್ ಭೈರತಿ ರಣಗಲ್‌ಗೆ ನರ್ತನ್ ನಿರ್ದೇಶನ ಮಾಡಲಿದ್ದಾರೆ. ಈ ಚಿತ್ರಕ್ಕೆ `ಕೆಜಿಎಫ್ 2′ (KGF 2) ಖ್ಯಾತಿಯ ರವಿ ಬಸ್ರೂರು (Ravi Basrur) ಸಂಗೀತ ನಿರ್ದೇಶನ ಮಾಡಲಿದ್ದಾರೆ ಎಂಬುದನ್ನು ಚಿತ್ರತಂಡ ಘೋಷಿಸಿದೆ. ಪೋಸ್ಟರ್ ಒಂದನ್ನು ಬಿಡುಗಡೆ ಮಾಡುವ ಮೂಲಕ ರವಿ ಬಸ್ರೂರು ಅವರನ್ನು ತಂಡಕ್ಕೆ ಸ್ವಾಗತಿಸಿದೆ. ಈ ಹಿಂದೆ ಇದೇ ತಂಡದ ಜೊತೆ ಕೈ ಜೋಡಿಸಿ `ಮಫ್ತಿ’ಗೂ ಸಂಗೀತ ನಿರ್ದೇಶನ ಮಾಡಿ ಗೆದ್ದಿದ್ದ ರವಿ ಬಸ್ರೂರು ಈಗ `ಭೈರತಿ ರಣಗಲ್’ ಸಿನಿಮಾಗೂ ಕೆಲಸ ನಿರ್ವಹಿಸಲಿದ್ದಾರೆ. ಈ ಮೂಲಕ ಹಿಟ್ ಕಾಂಬಿನೇಷನ್ ಒಂದ್ತಾಗಿದೆ.

     

    View this post on Instagram

     

    A post shared by Geetha Pictures (@geethapictures)

    ಶಿವರಾಜ್ ಕುಮಾರ್ ಅವರ ಹೋಂ ಬ್ಯಾನರ್ ಗೀತಾ ಪಿಕ್ಚರ್ಸ್‌ ಇದು ಎರಡನೇ ಸಿನಿಮಾ ಆಗಿದ್ದು, ಮೊದಲ ಸಿನಿಮಾ `ವೇದ’ ಮೂಲಕ ಹಿಟ್ ನೀಡಿರುವ ನಿರ್ಮಾಪಕಿ ಗೀತಾ `ಭೈರತಿ ರಣಗಲ್’ ಪ್ಯಾನ್ ಇಂಡಿಯಾ ಸಿನಿಮಾಗೂ ಸಾಥ್ ನೀಡುತ್ತಿದ್ದಾರೆ. ಸದ್ಯದಲ್ಲಿಯೇ ಈ ಸಿನಿಮಾದ ಚಿತ್ರೀಕರಣ ಆರಂಭ ಮಾಡಲಿದ್ದಾರೆ.

  • ಕನ್ನಡದ ಮತ್ತೊಂದು ಪ್ಯಾನ್ ಇಂಡಿಯಾ ಟೀಸರ್ ಬಿಡುಗಡೆಗೆ ದಿನಗಣನೆ: ಉಪ್ಪಿ ಬರ್ತಡೇಗೆ ‘ಕಬ್ಜ’ ಝಲಕ್

    ಕನ್ನಡದ ಮತ್ತೊಂದು ಪ್ಯಾನ್ ಇಂಡಿಯಾ ಟೀಸರ್ ಬಿಡುಗಡೆಗೆ ದಿನಗಣನೆ: ಉಪ್ಪಿ ಬರ್ತಡೇಗೆ ‘ಕಬ್ಜ’ ಝಲಕ್

    ಕೆಜಿಎಫ್ 2 ಸಿನಿಮಾದ ನಂತರ ಕನ್ನಡದಲ್ಲಿ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ ‘ಕಬ್ಜ’ ತಯಾರಾಗಿದ್ದು, ಈಗಾಗಲೇ ಹಲವು ಲುಕ್ ಗಳಿಂದ ಗಮನ ಸೆಳೆದಿದೆ. ಇದೇ ಮೊದಲ ಬಾರಿಗೆ ಈ ಚಿತ್ರದ ಟೀಸರ್ (Teaser) ರೆಡಿಯಾಗಿದ್ದು, ಚಿತ್ರದ ನಾಯಕ ಉಪೇಂದ್ರ (Upendra) ಅವರ ಹುಟ್ಟು ಹಬ್ಬದ ದಿನದಂದು ಬಿಡುಗಡೆ ಆಗುತ್ತಿರುವುದು ವಿಶೇಷ. ಕನ್ನಡದ ಹೆಸರಾಂತ ನಿರ್ದೇಶಕ ಆರ್.ಚಂದ್ರು (R. Chandru) ಈಗಾಗಲೇ ಟೀಸರ್ ರೆಡಿ ಮಾಡುತ್ತಿದ್ದು ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಹೀಗೆ ಐದು ಭಾಷೆಗಳಲ್ಲಿ ಟೀಸರ್ ರಿಲೀಸ್ ಆಗುತ್ತಿರುವುದು ವಿಶೇಷ.

    ಸೆಪ್ಟಂಬರ್ 18ಕ್ಕೆ ಉಪ್ಪಿ ಹುಟ್ಟು ಹಬ್ಬ. ಈ ಹುಟ್ಟು ಹಬ್ಬವನ್ನು ಮತ್ತಷ್ಟು ರಂಗಾಗಿಸಲು ಕಬ್ಜ ನಿರ್ದೇಶಕ ಆರ್.ಚಂದ್ರು ಸಜ್ಜಾಗಿದ್ದು, ಉಪ್ಪಿ ಅಭಿಮಾನಿಗಳಿಗೆ ಭರ್ಜರಿ ಬಹುಮಾನವನ್ನೇ ಕೊಡಲಿದ್ದಾರಂತೆ. ‘ಕೆಜಿಎಫ್ 2’ ಚಿತ್ರಕ್ಕೆ ಸಂಗೀತ ನೀಡಿದ್ದ ರವಿ ಬಸ್ರೂರ್ (Ravi Basrur) ಅವರೇ ಈ ಸಿನಿಮಾಗೂ ಸಂಗೀತ ನೀಡುತ್ತಿದ್ದು, ಟೀಸರ್ ಹೇಗೆ ಇರಲಿದೆ ಎನ್ನುವ ಕುತೂಹಲವಂತೂ ಮೂಡಿದೆ. ಚಂದ್ರು ಅವರು ಸೆರೆ ಹಿಡಿದಿರುವ ವಿಷ್ಯುವೆಲ್ಸ್, ರವಿ ಬಸ್ರೂರ್ ಮ್ಯೂಸಿಕ್ ಅಭಿಮಾನಿಗಳನ್ನು ಮೋಡಿ ಮಾಡುವದಂತೂ ಕಂಡಿತ. ಇದನ್ನೂ ಓದಿ:‘ಮದುವೆ’ ನಂತರ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆದ ಮಹಾಲಕ್ಷ್ಮಿ ರವೀಂದರ್

    ಕನ್ನಡ ಸಿನಿಮಾ ರಂಗಕ್ಕೆ (Sandalwood) ಅನೇಕ ಹಿಟ್ ಚಿತ್ರಗಳನ್ನು ನೀಡಿರುವ ನಿರ್ದೇಶಕ ಆರ್.ಚಂದ್ರು ‘ಕಬ್ಜ’ (Kabzaa) ಸಿನಿಮಾವನ್ನು ಮತ್ತೊಂದು ಲೇವಲ್ ಗೆ ತಗೆದುಕೊಂಡು ಹೋಗಿದ್ದು, ಯಾವುದೇ ರೀತಿಯಲ್ಲಿ ಕಾಂಪ್ರಮೈಸ್ ಮಾಡಿಕೊಳ್ಳದೇ ಅದ್ಧೂರಿಯಾಗಿ ಚಿತ್ರ ಮಾಡಿದ್ದು, ಭಾರತೀಯ ಸಿನಿಮಾ ರಂಗದಲ್ಲಿ ‘ಕಬ್ಜ’ ಮತ್ತೊಂದು ಇತಿಹಾಸವನ್ನು ನಿರ್ಮಿಸಲಿದೆ ಎಂದು ಅಂದಾಜಿಸಲಾಗಿದೆ. ಚಿತ್ರಕ್ಕೆ ಭಾರೀ ಬೇಡಿಕೆ ಕೂಡ ಬರುತ್ತಿದ್ದು, ಸಿನಿಮಾ ರಿಲೀಸ್ ಗೂ ಮುನ್ನವೇ ಸೇಫ್ ಆಗಲಿದೆ ಎನ್ನುವ ಲೆಕ್ಕಾಚಾರವೂ ಶುರುವಾಗಿದೆ.

    ಹೊಸ ರೀತಿಯಲ್ಲಿ ಆಲೋಚಿಸುವ ನಿರ್ದೇಶಕ ಚಂದ್ರು, ಸೂಪರ್ ಸ್ಟಾರ್ ಉಪೇಂದ್ರ ಮತ್ತು ಕಿಚ್ಚ ಸುದೀಪ್ (Sudeep) ಕಾಂಬಿನೇಷನ್ ನ ಮೊದಲ ಸಿನಿಮಾ ಇದಾಗಿದ್ದು, ಹೀಗಾಗಿ ಪ್ಯಾನ್ ಇಂಡಿಯಾ ಲೇವಲ್ ನಲ್ಲಿ ಸುದ್ದಿ ಆಗುತ್ತಿದೆ. ಕೆಜಿಎಫ್ 2 ಸಿನಿಮಾದಲ್ಲಿ ಕೆಲಸ ಮಾಡಿರುವ ಅನೇಕ ತಂತ್ರಜ್ಞರು ಈ ಸಿನಿಮಾಗೂ ಕೆಲಸ ಮಾಡಿದ್ದಾರೆ. ಹಾಗಾಗಿ ಕೆಜಿಎಫ್ 2 ಚಿತ್ರದ ಜೊತೆಗೆ ಕಬ್ಜ ಸಿನಿಮಾವನ್ನು ಹೋಲಿಕೆ ಮಾಡಲಾಗುತ್ತಿದೆ. ಹಾಗಾಗಿ ಭಾರತೀಯ ಸಿನಿಮಾ ರಂಗದಲ್ಲಿ ಕನ್ನಡದ ಮತ್ತೊಂದು ಸಿನಿಮಾ ಗೆಲುವಿನ ಬಾವುಟ ಹಾರಿಸಲು ರೆಡಿ ಆಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಸಲ್ಮಾನ್ ಸಿನಿಮಾಗೆ ರವಿ ಬಸ್ರೂರ್ ಸಂಗೀತ ಸಂಯೋಜನೆ

    ಸಲ್ಮಾನ್ ಸಿನಿಮಾಗೆ ರವಿ ಬಸ್ರೂರ್ ಸಂಗೀತ ಸಂಯೋಜನೆ

    ಬೆಂಗಳೂರು: ಕನ್ನಡಿಗ ರವಿ ಬಸ್ರೂರ್ ಈಗ ಬಾಲಿವುಡ್ ನಲ್ಲಿ ಮಿಂಚಲಿದ್ದು, ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಸಿನಿಮಾಗೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

    ಕೆಜಿಎಫ್ ಸಿನಿಮಾಗೆ ಸಂಗೀತದ ನೀಡಿ ದೇಶಾದ್ಯಂತ ಮೋಡಿ ಮಾಡಿದ್ದ ರವಿ ಬಸ್ರೂರ್ ಈಗ ಬಾಲಿವುಡ್‍ಗೆ ಹಾರಿದ್ದು, ಸಲ್ಮಾನ್ ನ ‘ಅಂತಿಮ್’ ಸಿನಿಮಾಗೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.

    ಈ ವಿಚಾರವನ್ನು ಖುದ್ದು ಅವರೇ ಟ್ವಿಟ್ವರ್ ನಲ್ಲಿ, ಬಾಲಿವುಡ್ ಬಾಯಿಜಾನ್ ಸಲ್ಮಾನ್ ಖಾನ್ ಅವರ ಜೊತೆ ಕೆಲಸ ಮಾಡುತ್ತಿರುವುದು ನನಗೆ ಸಂತಸ ತಂದಿದೆ. ಅವರ ಸಿನಿಮಾದಲ್ಲಿ ಹಿನ್ನೆಲೆ ಸಂಗೀತ ಹಾಗೂ ಹಾಡುಗಳಿಗೆ ರಾಗ ಸಂಯೋಜನೆ ಮಾಡುತ್ತಿದ್ದೇನೆ. ನನ್ನ ಪಯಣಕ್ಕೆ ನಿಮ್ಮ ಬೆಂಬಲ ಇರಲಿ ಎಂದು ಬರೆದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಎಂಜಿನಿಯರಿಂಗ್ ಓದುತ್ತಿರುವಾಗಲೇ ಜಿ.ಪಂ.ಅಧ್ಯಕ್ಷೆಯಾದ ಯುವತಿ

    ಪ್ರಸ್ತುತ ಸಲ್ಮಾನ್ ‘ಅಂತಿಮ್’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿಯೂ ಸಹ ಅವರು ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಮಹೇಶ್ ಮಂಜ್ರೆಕರ್ ಆಕ್ಷನ್ ಕಟ್ ಹೇಳುತ್ತಿದ್ದು, ಆಯುಷ್ ಶರ್ಮಾ ಈ ಚಿತ್ರದ ನಾಯಕರಾಗಿದ್ದಾರೆ.

    ರವಿ ಬಸ್ರೂರು ಅವರು ಕೆಜಿಎಫ್ ಸಿನಿಮಾ ನಂತರ ತಮಿಳು ಮತ್ತು ಮಲಯಾಳಂ ಸಿನಿಮಾಗಳಿಗೂ ಸಂಗೀತ ಸಂಯೋಜಿಸಿದ್ದರು. ಈ ಹಿಂದೆ ಮೂರು ಹಿಂದಿ ಸಿನಿಮಾಗಳಿಗೆ ಸಂಗೀತ ನೀಡಿದ್ದ ಬಸ್ರೂರು ಬಾಲಿವುಡ್ ನಲ್ಲಿ ಇದೇ ಮೊದಲ ಬಾರಿಗೆ ದೊಡ್ಡ ಬ್ಯಾನರ್ ನಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಇದನ್ನೂ ಓದಿ: ಯಶ್, ರಾಧಿಕಾ ದುಬೈ ಟ್ರಿಪ್