Tag: ravi belegere

  • ರವಿ ಬೆಳಗೆರೆ ಆರೋಗ್ಯದಲ್ಲಿ ಏರುಪೇರು- ಜಯದೇವ ಹೃದ್ರೋಗ ಆಸ್ಪತ್ರೆಗೆ ಶಿಫ್ಟ್ ಮಾಡೋ ಸಾಧ್ಯತೆ

    ರವಿ ಬೆಳಗೆರೆ ಆರೋಗ್ಯದಲ್ಲಿ ಏರುಪೇರು- ಜಯದೇವ ಹೃದ್ರೋಗ ಆಸ್ಪತ್ರೆಗೆ ಶಿಫ್ಟ್ ಮಾಡೋ ಸಾಧ್ಯತೆ

    ಬೆಂಗಳೂರು: ರವಿ ಬೆಳಗೆರೆ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ. ಉಸಿರಾಟದ ತೊಂದರೆ ಮತ್ತು ತೀವ್ರ ಬೆನ್ನು ನೋವು ಹಿನ್ನೆಲೆಯಲ್ಲಿ ಅವರನ್ನ ಆಸ್ಪತ್ರೆಗೆ ಶಿಫ್ಟ್ ಮಾಡೋ ಸಾಧ್ಯತೆಯಿದೆ.

    ಅನಾರೋಗ್ಯಕ್ಕೆ ತುತ್ತಾಗಿದ್ದ ಅವರನ್ನು ಮಂಗಳವಾರ ಜೈಲಾಧಿಕಾರಿಗಳು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ವೈದ್ಯರು ರವಿ ಬೆಳಗೆರೆಯವರನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳುವ ಅಗತ್ಯವಿಲ್ಲ. ರಕ್ತಪರೀಕ್ಷೆ ವರದಿ ಬಂದ ಬಳಿಕ ನೋಡೋಣ ಎಂದು ಹೇಳಿ ವಾಪಸ್ ಕಳುಹಿಸಿದ್ದರು.

    ಸೋಮವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ರವಿ ಬೆಳಗೆರೆ ಪರಪ್ಪನ ಅಗ್ರಹಾರ ಸೇರಿದ್ದರು. ಆರೋಗ್ಯದಲ್ಲಿ ಮೊದಲೇ ಏರುಪೇರು ಆಗಿದ್ದರಿಂದ ಜೈಲಿನ ಆಸ್ಪತ್ರೆಯಲ್ಲೇ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಆದರೆ ಇಂದು ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದಿದ್ದರಿಂದ ಜಯದೇವ ಹೃದ್ರೋಗ ಆಸ್ಪತ್ರೆಗೆ ರವಾನಿಸುವ ಸಾಧ್ಯತೆಯಿದೆ.

    ಅತ್ತ ಜಾಮೀನಿಗಾಗಿ ಚೇತನಾ ಬೆಳಗೆರೆ ಅರ್ಜಿಯನ್ನು ಸಲ್ಲಿಸಲಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಚೇತನಾ ಬೆಳಗೆರೆ, ನಮ್ಮ ತಂದೆಯವರಿಗೆ ಮೊದಲೇ ಆರೋಗ್ಯ ಸರಿಯಿಲ್ಲ. ಇದರ ಮಧ್ಯೆ ಅವರನ್ನು ಒಂದು ಕಡೆಯಿಂದ ಮತ್ತೊಂದು ಕಡೆಗೆ ಕರೆದೊಯ್ಯಲಾಗುತ್ತಿದೆ ಎಂದು ಹೇಳಿದರು.

  • ವಿಜಯಪುರದಲ್ಲಿ ಬೀಡುಬಿಟ್ಟ ಸಿಸಿಬಿ ತಂಡ- ಮಾಹಿತಿ ತಿಳಿದು ವಿಜು ಬಡಿಗೇರ್ ಎಸ್ಕೇಪ್

    ವಿಜಯಪುರದಲ್ಲಿ ಬೀಡುಬಿಟ್ಟ ಸಿಸಿಬಿ ತಂಡ- ಮಾಹಿತಿ ತಿಳಿದು ವಿಜು ಬಡಿಗೇರ್ ಎಸ್ಕೇಪ್

    ವಿಜಯಪುರ: ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಪ್ರಕರಣ ಸಂಬಂಧ ತನಿಖೆ ತೀವ್ರಗೊಳಿಸಿರುವ ಸಿಸಿಬಿ, ವಿಜಯಯಪುರದ ಸಿಂಧಗಿಯಲ್ಲಿ ಮತ್ತೊಬ್ಬ ಆರೋಪಿ ವಿಜು ಬಡಿಗೇರ್‍ಗಾಗಿ ತೀವ್ರ ಶೋಧ ನಡೆಸಿದೆ.

    ಭೀಮಾತೀರದ ಹಂತಕ ಶಶಿಧರ್ ಮುಂಡೆವಾಡಿ ಅಳಿಯ ವಿಜು ಬಡಿಗೇರ್ ಮನೆಯನ್ನು ಪತ್ತೆಹಚ್ಚಿರುವ ಸಿಸಿಬಿ, ಅಲ್ಲಿಗೆ ಹೋಗುವಷ್ಟರಲ್ಲಿ ಬಡಿಗೇರ್ ಎಸ್ಕೇಪ್ ಆಗಿದ್ದಾನೆ. ಸಿಂಧಗಿ ಪಟ್ಟಣದ ಕಂಟೆಪ್ಪನ ಪ್ಲಾಟ್ ನಲ್ಲಿರುವ ವಿಜು ಬಡಿಗೇರ ಮನೆಯಲ್ಲಿ ಇದೀಗ ಸಿಸಿಬಿ ಪೊಲೀಸರು ಶೋಧ ನಡೆಸ್ತಿದ್ದಾರೆ. ವಿಜು ಸದ್ಯ ಸಿಂಧಗಿಯಲ್ಲೇ ಅಡಗಿ ಕುಳಿತಿರುವ ಬಗ್ಗೆ ಸಿಸಿಬಿ ಪೊಲೀಸರಿಗೆ ಅನುಮಾನಗಳಿವೆ.

    ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಆರೋಪವನ್ನು ಎದುರಿಸುತ್ತಿರುವ ಪತ್ರಕರ್ತ ರವಿ ಬೆಳಗೆರೆ ಸಿಸಿಬಿ ಕಚೇರಿಯಲ್ಲೇ ಮೂರನೇ ದಿನ ಕಳೆದಿದ್ದಾರೆ. ಇಂದು ಮಧ್ಯಾಹ್ನ ಸುಮಾರು 12 ಗಂಟೆಗೆ ಎಸಿಎಂಎಂ ಕೋರ್ಟ್‍ಗೆ ಪೊಲೀಸರು ಹಾಜರುಪಡಿಸಲಿದ್ದಾರೆ. ರವಿ ಬೆಳಗೆರೆ ಪರ ವಕೀಲ ದಿವಾಕರ್ ಜಾಮೀನಿಗೆ ಅರ್ಜಿ ಸಲ್ಲಿಸಲಿಸಿದ್ದಾರೆ. ಆದರೆ ಸಿಸಿಬಿ ಅಕ್ರಮ ಶಸ್ತ್ರಾಸ್ತ್ರ, ಕೊಲೆ ಸಂಚು ಸೇರಿ ಇನ್ನಿತರ ಜಾಮೀನು ರಹಿತ ಸೆಕ್ಷನ್ ಹಾಕಿದ್ದಾರೆ. ಆದ್ದರಿಂದ ಅನಾರೋಗ್ಯದ ನೆಪವೊಡ್ಡಿ ಜಾಮೀನು ನೀಡುವಂತೆ ವಕೀಲರು ವಾದ ಮಂಡಿಸಲಿದ್ದಾರೆ.

    ಇದಕ್ಕಾಗಿ ಬಿಪಿ, ಶುಗರ್, ನರ ದೌರ್ಬಲ್ಯ ಸೇರಿದಂತೆ ಹಲವು ಕಾಯಿಲೆಗಳಿಂದ ಬೆಳಗೆರೆ ಬಳಲುತ್ತಿರುವ ಕುರಿತು ಮೆಡಿಕಲ್ ಸರ್ಟಿಫಿಕೇಟ್‍ಗಳನ್ನು ಕೂಡ ರೆಡಿ ಮಾಡಿಕೊಂಡಿದ್ದಾರೆ. ಒಂದು ವೇಳೆ ಜಾಮೀನು ನೀಡದಿದ್ದರೆ ಕನಿಷ್ಠ ಪಕ್ಷ ಆಸ್ಪತ್ರೆಗೆ ಸೇರಿಸಲು ಮನವಿ ಮಾಡುವ ಸಾಧ್ಯತೆ ಇದೆ. ಜೊತೆಗೆ ಜಾಮೀನು ಅರ್ಜಿ ಇತ್ಯರ್ಥವಾಗುವವರೆಗೆ ಮಧ್ಯಂತರ ಜಾಮೀನಿಗೂ ಮನವಿ ಮಾಡಿದ್ದಾರೆ.

     

  • ಕಮಿಷನರ್ ಹೇಳಿಕೆಗೂ, ಎಫ್‍ಐಆರ್ ಅಂಶಗಳಿಗೂ ವ್ಯತ್ಯಾಸವಿದೆ- ರವಿ ಪರ ವಕೀಲ ದಿವಾಕರ್ ಹೇಳಿಕೆ

    ಕಮಿಷನರ್ ಹೇಳಿಕೆಗೂ, ಎಫ್‍ಐಆರ್ ಅಂಶಗಳಿಗೂ ವ್ಯತ್ಯಾಸವಿದೆ- ರವಿ ಪರ ವಕೀಲ ದಿವಾಕರ್ ಹೇಳಿಕೆ

    ಬೆಂಗಳೂರು: ಸಹೋದ್ಯೋಗಿ ಹತ್ಯೆಗೆ ಸುಪಾರಿ ನೀಡಿರುವ ಆರೋಪದ ಮೇಲೆ ಪತ್ರಕರ್ತ ರವಿ ಬೆಳಗೆರೆ ಬಂಧನವಾಗಿದ್ದು, ಈ ಪ್ರಕರಣ ಸಂಬಂಧ ಕಾನೂನು ಹೋರಾಟ ನಡೆಸಲಾಗುವುದು ಎಂದು ರವಿ ಬೆಳೆಗೆರೆ ಪರ ವಕೀಲ ದಿವಾಕರ್ ತಿಳಿಸಿದ್ದಾರೆ.

    ಪ್ರಕರಣ ಸಂಬಂಧ ಪೊಲೀಸ್ ಕಮಿಷನರ್ ಸುನಿಲ್ ಕುಮಾರ್ ಹೇಳಿಕೆಗೂ, ಎಫ್‍ಐಆರ್‍ನಲ್ಲಿ ದಾಖಲಾಗಿರುವ ಅಂಶಗಳಿಗೂ ಭಿನ್ನತೆಯಿದೆ. ವ್ಯತಿರಿಕ್ತ ಅಂಶಗಳು ಕಂಡು ಬಂದಿವೆ. ಹೀಗಾಗಿ ಇದೇ ವಿಚಾರವಾಗಿ ಕಾನೂನು ಹೋರಾಟ ನಡಸಲಾಗುವುದು ಎಂದು ವಕೀಲರು ತಿಳಿಸಿದ್ದಾರೆ.

    ಬೆಳಗೆರೆಯನ್ನು ಕೋರ್ಟ್ ಸಿಸಿಬಿ ಕಸ್ಟಡಿಗೆ ನೀಡಿದ ಬಳಿಕ ಮಾತನಾಡಿದ ಅವರು, ಬೆಳೆಗೆರೆ ಮೇಲೆ ಕೊಲೆ ಯತ್ನ ಪ್ರಕರಣ ದಾಖಲಾಗಿರುವುದರಿಂದ ಜಾಮೀನು ಅರ್ಜಿ ವಿಚಾರಣೆ ಎಸಿಎಂಎಂ ನ್ಯಾಯಾಧೀಶರ ವ್ಯಾಪ್ತಿಗೆ ಬರುವುದಿಲ್ಲ. ಹೀಗಾಗಿ ಸೆಷನ್ಸ್ ನ್ಯಾಯಾಲಯದಲ್ಲಿ ಸೋಮವಾರ ಜಾಮೀನು ಅರ್ಜಿ ಸಲ್ಲಿಸುತ್ತೇವೆ ಅಂದ್ರು.

    ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಬೆಳೆಗೆರೆಗೆ ಅಗತ್ಯವಿದ್ದಲ್ಲಿ ವೈದ್ಯಕೀಯ ನೆರವು ನೀಡುವಂತೆ ನ್ಯಾಯಾಧೀಶರು ಆದೇಶಿಸಿದ್ದಾರೆ. ಅದೇ ರೀತಿ ಯಾವುದೇ ರೀತಿಯ ತೊಂದರೆ ನೀಡದಂತೆಯೂ ಆದೇಶ ನೀಡಲಾಗಿದೆ ಎಂದು ತಿಳಿಸಿದ್ರು.

    ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಆರೋಪದಲ್ಲಿ ರವಿ ಬೆಳಗೆರೆ ಅವರನ್ನು ಬಂಧಿಸಲಾಗಿದೆ ಎಂದು ಪಬ್ಲಿಕ್ ಟಿವಿಗೆ ಸಿಸಿಬಿ ಮುಖ್ಯಸ್ಥ ಸತೀಶ್ ಕುಮಾರ್ ತಿಳಿಸಿದ್ದಾರೆ. ಶಶಿಧರ್ ಮುಂಡೇವಾಡಿ ಸ್ನೇಹಿತರಿಗೆ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ನೀಡಿದ ಆರೋಪದಲ್ಲಿ ರವಿ ಬೆಳಗೆರೆ ಅವರನ್ನು ಬಂಧಿಸಲಾಗಿದೆ.

    ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯ ವೇಳೆ ವಿಶೇಷ ತನಿಖಾ ತಂಡ ಬೆಂಗಳೂರಿನಲ್ಲಿ ಸುಪಾರಿ ಕಿಲ್ಲರ್ ವಿಜಯಪುರದ ಚಡಚಣದ ಶಾರ್ಪ್ ಶೂಟರ್ ಶಶಿ ಮುಂಡೇವಾಡಗಿಯನ್ನು ಶುಕ್ರವಾರ ಬಂಧಿಸಿತ್ತು. ಆತನ ವಿಚಾರಣೆ ವೇಳೆ ರವಿ ಬೆಳೆಗೆರೆಯವರು ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಪತ್ರಕರ್ತ ರವಿ ಬೆಳಗೆರೆಯನ್ನು ಬಂಧಿಸಲಾಗಿತ್ತು.

    ರವಿ ಬೆಳಗೆರೆ ಎರಡನೇ ಪತ್ನಿ ಜತೆ ಹಾಯ್ ಬೆಂಗಳೂರು ಪತ್ರಿಕೆ ವರದಿಗಾರ ಸನೀಲ್ ಹೆಗ್ಗರವಳ್ಳಿ ಅಕ್ರಮ ಸಂಬಂಧದ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸುನೀಲ್ ಹತ್ಯೆ ಮಾಡಲು ನಿರ್ಧರಿಸಿದ್ದ ಬೆಳಗೆರೆ ಶಾರ್ಪ್ ಶೂಟರ್ ಶಶಿ ಮುಂಡೇವಾಡಗಿಗೆ 30 ಲಕ್ಷ ರುಪಾಯಿ ಸುಪಾರಿ ಕೊಟ್ಟಿದ್ದರು ಎಂಬುದಾಗಿ ತಿಳಿದುಬಂದಿತ್ತು.

    https://www.youtube.com/watch?v=lgEoaxQ1l44

    https://www.youtube.com/watch?v=tvAkOpM6ZZo

    https://www.youtube.com/watch?v=kJ5uYUEgVeM

    https://www.youtube.com/watch?v=rgZqwcCWW3w

    https://www.youtube.com/watch?v=qGy8AT5j-zQ