Tag: Ravi D Channannanavar

  • ನಿಮ್ಮೊಂದಿಗೆ ನಾವಿದ್ದೇವೆ- ಸಾವನ್ನಪ್ಪಿದ್ದ ಪೊಲೀಸ್ ಕುಟುಂಬಕ್ಕೆ ಧೈರ್ಯ ತುಂಬಿದ ರವಿಚನ್ನಣ್ಣನವರ್

    ನಿಮ್ಮೊಂದಿಗೆ ನಾವಿದ್ದೇವೆ- ಸಾವನ್ನಪ್ಪಿದ್ದ ಪೊಲೀಸ್ ಕುಟುಂಬಕ್ಕೆ ಧೈರ್ಯ ತುಂಬಿದ ರವಿಚನ್ನಣ್ಣನವರ್

    ಬೆಂಗಳೂರು: ಎಎಸ್‍ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರು ಅಕಾಲಿಕ ಮರಣ ಹೊಂದಿದ್ದು, ಬೆಂಗಳೂರು ಗ್ರಾಮಾಂತರ ಎಸ್.ಪಿ ರವಿ ಡಿ ಚನ್ನಣ್ಣನವರ್ ಹಾಗೂ ಸಿಬ್ಬಂದಿ ವರ್ಗದವರು ಶ್ರದ್ಧಾಂಜಲಿ ಸಲ್ಲಿಸಿದರು.

    ಬೆಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ಜಾಪುರ ಠಾಣೆಯಲ್ಲಿ ಎಎಸ್‍ಐ ಆಗಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಶೋಕ್ ಅವರು ಇನ್ನೂ ಎರಡು ವರ್ಷ ವೃತ್ತಿ ಜೀವನ ಬಾಕಿ ಇರುವಾಗಲೇ ಸಾವನ್ನಪ್ಪಿದ್ದಾರೆ. ಸಹಜ ಕಾಯಿಲೆಗೆ ತುತ್ತಾಗಿ ಅಶೋಕ್ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಕೊನೆಯುಸಿರೆಳೆದಿದ್ದಾರೆ.

    ಇವರ ಸಾವಿನಿಂದ ಕುಟುಂಬ ವರ್ಗ ಹಾಗು ಪೊಲೀಸ್ ಸಿಬ್ಬಂದಿ ಸಂತಾಪ ಸೂಚಿಸಿದ್ದು, ಬೆಂಗಳೂರು ಗ್ರಾಮಾಂತರ ನೂತನ ಎಸ್.ಪಿ ರವಿ ಡಿ ಚನ್ನಣ್ಣನವರ್, ಅಶೋಕ್ ಅವರ ಅಂತಿಮ ದರ್ಶನ ಪಡೆದುಕೊಂಡರು. ಈ ವೇಳೆ ಮಾತನಾಡಿದ ಅವರು, ಅಶೋಕ್ ಅವರು ನಮ್ಮ ಜಿಲ್ಲೆಯಲ್ಲಿ 34 ವರ್ಷಗಳ ಸೇವೆಯನ್ನು ಸಲ್ಲಿಸಿದ್ದಾರೆ. ಅವರು ಇಂದು ಅಕಾಲಿಕ ಮರಣವೊಂದಿದ್ದಾರೆ, ಇಲಾಖೆಯೂ ಒಬ್ಬ ಒಳ್ಳೆಯ ಅಧಿಕಾರಿಯನ್ನು ಕಳೆದಿಕೊಂಡಿದೆ. ಅವರ ಕುಟುಂಬದೊಂದಿಗೆ ಸದಾ ನಾವು ಜೊತೆಗಿರುತ್ತೇವೆಂದು ತಿಳಿಸಿದರು.