Tag: Ravi d Channannavar

  • ರವಿ.ಡಿ ಚನ್ನಣ್ಣನವರ್ ಸೇರಿ 11 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ

    ರವಿ.ಡಿ ಚನ್ನಣ್ಣನವರ್ ಸೇರಿ 11 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ

    ಬೆಂಗಳೂರು: ರಾಜ್ಯ ಸರ್ಕಾರ 11 ಮಂದಿ ಐಪಿಎಸ್ (IPS) ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಏಳು ಅಧಿಕಾರಿಗಳು ವರ್ಗಾವಣೆಯಾದರೆ, 4 ಅಧಿಕಾರಿಗಳಿಗೆ ಮುಂಬಡ್ತಿ ನೀಡಲಾಗಿದೆ.

    ಎಂ.ಎ ಸಲೀಂ ಅವರನ್ನು ಸ್ಪೆಷಲ್ ಟ್ರಾಫಿಕ್ ಕಮಿಷನರ್ ಆಗಿ ನೇಮಕ ಮಾಡಲಾಗಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಬೆಂಗಳೂರಿಗೆ ಸ್ಪೆಷಲ್ ಟ್ರಾಫಿಕ್ ಕಮಿಷನರ್ ನೇಮಕ ಮಾಡುವ ಮೂಲಕ ನೂತನ ಹುದ್ದೆಯನ್ನು ಸೃಷ್ಟಿಸಲಾಗಿದೆ. ಜೊತೆಗೆ ಟ್ರಾಫಿಕ್ ಕಮೀಷನರ್ ಹುದ್ದೆಗೆ ಎಡಿಜಿಪಿ ದರ್ಜೆ ಅಧಿಕಾರಿ ನೇಮಿಸಿರುವುದು ಇಲ್ಲಿ ಗಮನಿಸಬೇಕಾದ ಅಂಶವಾಗಿದೆ.

    ರಮೇಶ್ ಬಾನೋತ್ ಅವರನ್ನು ಮೈಸೂರು ಕಮಿಷನರ್ ಆಗಿ ವರ್ಗಾವಣೆ ಮಾಡಲಾಗಿದೆ. ಸಿಐಡಿ ವಿಭಾಗದಲ್ಲಿ ಎಡಿಜಿಪಿಯಾಗಿದ್ದ ಉಮೇಶ್ ಕುಮಾರ್ ಅವರನ್ನು ಆಡಳಿತ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆಗೊಳಿಸಲಾಗಿದೆ. ಸಿಐಡಿ ಎಸ್‍ಪಿಯಾಗಿದ್ದ ರವಿ.ಡಿ ಚನ್ನಣ್ಣನವರ್ (Ravi D channannavar) ಅವರನ್ನು ಕಿಯೋನಿಕ್ಸ್ ಎಂಡಿಯಾಗಿ, ಮಂಗಳೂರು ಪಶ್ಚಿಮ ವಲಯ ಐಜಿಪಿಯಾಗಿದ್ದ ದಿವ್ಯಜ್ಯೋತಿ ರೇ ಅವರನ್ನು ಐಜಿಪಿಯಾಗಿ ಕುಂದುಕೊರತೆಗಳು ಮತ್ತು ಮಾನಹ ಹಕ್ಕುಗಳ ಇಲಾಖೆಗೆ ಮತ್ತು ರವಿಕಾಂತೇಗೌಡ (Ravikanthe Gowda) ಅವರನ್ನು ಸಿಐಡಿ ವಿಭಾಗದ ಡಿಐಜಿಯಾಗಿ ವರ್ಗಾವಣೆಗೊಳಿಸಲಾಗಿದೆ.

    ರಮಣ್ ಗುಪ್ತ ಸಿಐಡಿ ಜಂಟಿ ಪೊಲೀಸ್ ಆಯುಕ್ತ, ಶರಣಪ್ಪ ಎಸ್.ಡಿ ಬೆಂಗಳೂರು ಸಿಸಿಬಿ ಕಮಿಷನರ್, ಚಂದ್ರಗುಪ್ತ ಡಿಐಜಿ ಮಂಗಳೂರು ಪಶ್ಚಿಮ ವಲಯ, ಎಂ.ಎನ್ ಅನುಚೇತ್ ಜಾಯಿಂಟ್ ಕಮಿಷನರ್ ಟ್ರಾಫಿಕ್ ಬೆಂಗಳೂರು ನಗರ, ದಿವ್ಯಜ್ಯೋತಿ ರೇ ಐಜಿಪಿ ಕುಂದುಕೊರತೆಗಳು ಮತ್ತು ಮಾನಹ ಹಕ್ಕುಗಳ ಇಲಾಖೆ, ಲೋಕೇಶ್ ಕುಮಾರ್ ಡಿಐಜಿ ಬಳ್ಳಾರಿ ರೇಂಜ್‍ಗೆ ವರ್ಗಾವಣೆ ಮಾಡಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ರವಿ ಡಿ.ಚನ್ನಣ್ಣನವರ್‌ ಒಬ್ಬ ಪ್ರಾಮಾಣಿಕ ಅಧಿಕಾರಿ: ಶ್ರೀರಾಮುಲು

    ರವಿ ಡಿ.ಚನ್ನಣ್ಣನವರ್‌ ಒಬ್ಬ ಪ್ರಾಮಾಣಿಕ ಅಧಿಕಾರಿ: ಶ್ರೀರಾಮುಲು

    ಬಳ್ಳಾರಿ: ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್‌ ಒಬ್ಬ ಪ್ರಾಮಾಣಿಕ ಅಧಿಕಾರಿ, ಅವರನ್ನು ನಾನು ತುಂಬಾ ಹತ್ತಿರದಿಂದ ನೋಡಿದ್ದೇನೆ. ಅವರು ಬೆಳೆದುಬಂದ ಹಾದಿ, ಶಿಕ್ಷಣ ಪಡೆದ ರೀತಿ, ಅವರ ತಂದೆ, ತಾಯಿ ಎಲ್ಲವನ್ನೂ ನಾನು ನೋಡಿದ್ದೇನೆ. ಹೀಗಾಗಿ ಅವರ ಮೇಲೆ ಬಂದಿರುವ ಆರೋಪ ಶುದ್ಧ ಸುಳ್ಳು ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ.

    ರವಿ ಚೆನ್ನಣ್ಣನವರ್ ಬಗ್ಗೆ ಬಳ್ಳಾರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶ್ರೀರಾಮುಲು, ಆರೋಪಗಳು ಯಾರಿಗೂ ಬಿಟ್ಟಿಲ್ಲ, ಹಾಗೆ ಅವರ ಮೇಲೆ ಈಗ ಆರೋಪ ಬಂದಿದೆ, ಆರೋಪ ಮಾಡಿದ್ದಾರೆ ಎಂದಾಕ್ಷಣ, ಅವರ ಭ್ರಷ್ಟ ಅಧಿಕಾರಿ ಎನ್ನುವುದು ತಪ್ಪು. ಇಡೀ ರಾಜ್ಯದಲ್ಲಿ ಯುವಕರಿಗೆ ಮಾದರಿಯಾದ ವ್ಯಕ್ತಿ ರವಿ, ಲಕ್ಷಾಂತರ ಜನರು ಅವರನ್ನು ಮೆಚ್ಚಿದ್ದಾರೆ. ಭ್ರಷ್ಟಾಚಾರದ ಆರೋಪಗಳು ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರನ್ನು ಬಿಟಿಲ್ಲ, ಅವರು ಕಾನೂನು ಹೋರಾಟದ ಮೂಲಕ ಗೆದ್ದ ಬರಲಿದ್ದಾರೆ ಎನ್ನುವ ವಿಶ್ವಾಸ ನನಗಿದೆ ಎಂದರು. ಇದನ್ನೂ ಓದಿ: IPS ರವಿ ಚೆನ್ನಣ್ಣವರ್ ವರ್ಗ ಆದೇಶಕ್ಕೆ ಬ್ರೇಕ್

    ಸಚಿವ ಆನಂದ್ ಸಿಂಗ್ ಹಾಗೂ ಡಿ.ಕೆ ಶಿವಕುಮಾರ್ ಭೇಟಿ ಕುರಿತಾಗಿ ಮಾತನಾಡಿ, ಅವರಿಬ್ಬರ ಬೇಟಿ ಬಗ್ಗೆ ಯಾವುದೇ ರಾಜಕೀಯ ಬಣ್ಣ ಬರೆಯುವುದು ಬೇಡ, ಆನಂದ್ ಸಿಂಗ್ ನೇರಾ, ನೇರಾ ವ್ಯಕ್ತಿ ಹಾಗೂ ನನ್ನ ಆತ್ಮೀಯ ಸ್ನೇಹಿತ. ಆನಂದ್ ಸಿಂಗ್ ದೂರ ದೃಷ್ಟಿ ಇರುವ ನಾಯಕರು. ಬೇರೆ ಯಾವುದೋ ಕಾರಣಕ್ಕೆ ಡಿ.ಕೆ ಶಿವಕುಮಾರನ್ನು ಮೀಟ್ ಆಗಿರಬಹುದಷ್ಟೇ, ಆನಂದ್ ಸಿಂಗ್ ಮೇಲೆ ನನಗೆ ಪೂರ್ಣ ನಂಬಿಕೆ ಇದೆ. ಅವರು ದೂರ ಹೋಗುವುದಾದರೆ ನೇರವಾಗಿ ಹೇಳುತ್ತಿದ್ದರು. ಅವರು ಮೋಸ ಮಾಡುವಂತಹ ವ್ಯಕ್ತಿ ಅಲ್ಲ. ಅವರು ಎಲ್ಲೂ ಹೋಗಲ್ಲ. 2023 ಚುನಾವಣೆಯಲ್ಲಿ ಅವರ ನೇತೃತ್ವದಲ್ಲೇ ಚುನಾವಣೆ ಮಾಡ್ತೀವಿ. ಅವರು ನಾವು ಒಟ್ಟಾಗಿ ಅಖಂಡ ಬಳ್ಳಾರಿ ಜಿಲ್ಲೆಯನ್ನು ಅಭಿವೃದ್ಧಿ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: Budget 2022: ಆದಾಯ ತೆರಿಗೆ ಮಿತಿಯಲ್ಲಿ ಬದಲಾವಣೆ ಇಲ್ಲ

  • ಅಕ್ರಮ ಆಸ್ತಿ ಖರೀದಿಸಿಲ್ಲ – 3 ಕೋಟಿ ಮಾನನಷ್ಟ ಕೇಸ್‌ ಹಾಕ್ತೀನಿ ಎಂದ ಚನ್ನಣ್ಣನವರ್‌

    ಅಕ್ರಮ ಆಸ್ತಿ ಖರೀದಿಸಿಲ್ಲ – 3 ಕೋಟಿ ಮಾನನಷ್ಟ ಕೇಸ್‌ ಹಾಕ್ತೀನಿ ಎಂದ ಚನ್ನಣ್ಣನವರ್‌

    ಬೆಂಗಳೂರು: ನನ್ನ ಮೇಲೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಆರೋಪ ಮಾಡಲಾಗಿದೆ. ಸುಳ್ಳು ಆರೋಪ ಮಾಡಿದವರ ವಿರುದ್ಧ 3 ಕೋಟಿ ರೂ. ಮಾನನಷ್ಟ (Defamation)ಪ್ರಕರಣ ದಾಖಲಿಸಲಾಗುವುದು ಎಂದು ಐಪಿಎಸ್‌ ಅಧಿಕಾರಿ ರವಿ ಡಿ ಚನ್ನಣ್ಣನವರ್‌(Ravi D Channannavar) ಹೇಳಿದ್ದಾರೆ.

    ತನ್ನ ವಿರುದ್ಧ ಕೇಳಿ ಬಂದಿರುವ ಆರೋಪಗಳಿಗೆ ಚನ್ನಣ್ಣನವರ್‌ ಮಾಧ್ಯಮ ಹೇಳಿಕೆಯನ್ನು ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದಾರೆ.

    ಹೇಳಿಕೆಯಲ್ಲಿ ಏನಿದೆ?
    ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ(Social Media) ಕೆಲ ವ್ಯಕ್ತಿಗಳು ನನ್ನ ಮೇಲೆ ಮತ್ತು ನನ್ನ ಕುಟುಂಬದ ಮೇಲೆ ಆಧಾರರಹಿತ ಆರೋಪ ಮಾಡಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಇವೆಲ್ಲವೂ ಸುಳ್ಳಾಗಿದ್ದು, ದುರುದ್ದೇಶದಿಂದ ಕೂಡಿರುತ್ತವೆ. ಸಾಮಾಜಿಕ ಜಾಲತಾಣದಲ್ಲಿ, ನನ್ನ ತಂದೆ-ತಾಯಿಯವರ ಹೆಸರಲ್ಲಿರುವ ಕೆಲ ಪಹಣಿ ಹಾಕಿ, ಆರೋಪಿಸಿದ್ದು, ಅವುಗಳೆಲ್ಲ ಕಾನೂನು ಬದ್ಧವಾಗಿಯೇ ಖರೀದಿಸಿದ್ದೇನೆ. ಇವುಗಳು ಪಿತ್ರಾರ್ಜಿತ ಹಾಗೂ ಸ್ವಯಾರ್ಜಿತ ಆಸ್ತಿಗಳಾಗಿವೆ. ಅವುಗಳನ್ನೆಲ್ಲ ಆಯಾ ವರ್ಷವೇ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಲಾಗಿದೆ.

    ಇವುಗಳನ್ನು ನಾನು ಭ್ರಷ್ಟ ರೀತಿಯಿಂದ ಸಂಪಾದಿಸಿದ್ದೇನೆ ಎಂದು ಸುಳ್ಳು ಸುದ್ದಿಗಳನ್ನು ಹರಡಿ ನನ್ನನ್ನು ತೇಜೋವಧೆ ಮಾಡಬೇಕೆಂದೇ ಸಾಮಾಜಿಕ ಜಾಲತಾಣದಲ್ಲಿ ಬಿಂಬಿಸುತ್ತಿದ್ದು, ನಾನೊಬ್ಬ ಅಖಿಲ ಭಾರತೀಯ ಸೇವಕನಾಗಿದ್ದು, ಸೇವಾ ನಿಯಮಗಳ ಅಡಿ ವರ್ತಿಸಬೇಕಾದ್ದು ನನ್ನ ಕರ್ತವ್ಯ. ಆದ್ದರಿಂದ ಈ ಕುರಿತಂತೆ ನಾನು ಇದಾವುದಕ್ಕೂ ನಾನು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸದೇ ಕಾನೂನುಬದ್ಧವಾಗಿ ಕ್ರಮ ಕೈಗೊಂಡಿರುತ್ತೇನೆ.

    ನಾನು ಈಗಾಗಲೇ ಕಾನೂನಾತ್ಮಕವಾಗಿ ನಮ್ಮ ನ್ಯಾಯವಾದಿಗಳ ಮೂಲಕ ಲೀಗಲ್ ನೋಟಿಸ್ ನೀಡಿರುತ್ತೇನೆ. ಇದಕ್ಕೆ ಉತ್ತರ ಬಂದಿರುವುದಿಲ್ಲ ಈ ಕುರಿತು ಸಂಬಂಧಪಟ್ಟ ಮಾನ್ಯ ನ್ಯಾಯಾಲಯದಲ್ಲಿ 3 ಕೋಟಿ ರೂ. ಮಾನನಷ್ಟ ಮೊಕದ್ದಮೆಯನ್ನು(Criminal Defamation) ದಾಖಲಿಸಲಿದ್ದೇನೆ. ಹಾಗೆಯೇ ಸುಳ್ಳು ಆಪಾದನೆ ಮಾಡಿದ್ದಕ್ಕೆ, ಎರಡು ವರ್ಷ ಜೈಲು ಶಿಕ್ಷೆ ವಿಧಿಸುವಂತೆ ಸಂಬಂಧಪಟ್ಟ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಕೇಸ್ ಹೂಡಲಿದ್ದೇನೆ.

    ನನಗೆ ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಂಪೂರ್ಣ ನಂಬಿಕೆ ಇದೆ. ನ್ಯಾಯಾಲಯ ತೀರ್ಪು ಕೊಡುವವರಿಗೆ, ಎಲ್ಲಾ ಸುಳ್ಳು ಸುದ್ದಿಗಳನ್ನು ನಂಬದಂತೆ, ಎಲ್ಲ ಆತ್ಮೀಯರಲ್ಲಿ ಮನವಿ ಮಾಡಿಕೊಳ್ಳುತ್ತೇನೆ.

    ಮಾಧ್ಯಮಗಳು ಪ್ರಚಾರ ಮಾಡದಂತೆ ತಡೆಯಜ್ಞೆ ತಂದದ್ದು ಅವುಗಳ ಅಭಿವ್ಯಕ್ತಿ ಸತ್ವವನ್ನು ಕುಗ್ಗಿಸಲು ಅಲ್ಲ. ಅನೇಕ ಸಂಕಷ್ಟಗಳ ನಡುವೆ ಬೆಳೆದ ನಾನು ನನ್ನ ಸ್ವಾಭಿಮಾನ ಮತ್ತು ವ್ಯಕ್ತಿತ್ವದ ಬಗ್ಗೆ ಸದಾ ಎಚ್ಚರದಲ್ಲಿ ಇದ್ದೇನೆ. ಕೆಲವು ಸುಳ್ಳು ಸುದ್ದಿಗಳು ನನ್ನ ಬಗ್ಗೆ ಹರಿದಾಡಿದ ಕಾರಣ ನಾನು ತಡೆಯಜ್ಞೆ ತಂದದ್ದನ್ನು ಅನ್ಯತಾ ಭಾವಿಸಬಾರದೆಂದು ಈ ಮೂಲಕ ತಮ್ಮ ಗಮನಕ್ಕೆ ತರಲು ಇಚ್ಚಿಸಿದ್ದೇನೆ.

    ನನಗೆ ನ್ಯಾಯವಾದಿಗಳ ಬಗ್ಗೆ ಸ್ವಚ್ಛ ವ್ಯವಸ್ಥೆ ಬಯಸುವವರ ಬಗ್ಗೆ, ಅಪಾರ ಗೌರವವಿದೆ, ಈ ಮೂಲಕ ನನ್ನ ಆತ್ಮೀಯರೆಲ್ಲರಿಗೂ ಮನವಿ ಮಾಡುವುದೇನೆಂದರೆ, ತಾವು ದಯಮಾಡಿ ಯಾವುದೇ ಪ್ರತಿಕ್ರಿಯೆ ನೀಡಬಾರದು, ಅಶ್ಲೀಲ ಪದ ಬಳಕೆ, ಹೀಯಾಳಿಸುವುದನ್ನು ಮಾಡಬಾರದು. ಎಂದು ಎಲ್ಲಾ ಮಾಧ್ಯಮಗಳ ಮೂಲಕ ಕೇಳಿಕೊಳ್ಳುತ್ತೇನೆ.

  • IPS ರವಿ ಚೆನ್ನಣ್ಣವರ್ ವರ್ಗ ಆದೇಶಕ್ಕೆ ಬ್ರೇಕ್

    IPS ರವಿ ಚೆನ್ನಣ್ಣವರ್ ವರ್ಗ ಆದೇಶಕ್ಕೆ ಬ್ರೇಕ್

    ಬೆಂಗಳೂರು: ಐಪಿಎಸ್ ರವಿ ಚೆನ್ನಣ್ಣವರ್ ವರ್ಗಾವಣೆ ಆದೇಶಕ್ಕೆ ಸದ್ಯ ಬ್ರೇಕ್ ಬಿದ್ದಿದೆ. ಈ ಮೂಲಕ ಒಂದೇ ದಿನಕ್ಕೆ ಸರ್ಕಾರ ತನ್ನ ಆದೇಶವನ್ನು ತಡೆಹಿಡಿದಿದೆ.

    ಎರಡು ದಿನಗಳ ಹಿಂದೆ ರವಿ ಡಿ.ಚನ್ನಣ್ಣನವರ್ ಸೇರಿದಂತೆ 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸಿಐಡಿ ಎಸ್‍ಪಿ ಆಗಿದ್ದ ರವಿ ಡಿ. ಚನ್ನಣ್ಣನವರ್ ಅವರನ್ನು ವಾಲ್ಮೀಕಿ ಅಭಿವೃದ್ಧಿ ನಿಗಮದ ಎಂಡಿಯಾಗಿ ವರ್ಗಾಯಿಸಲಾಗಿತ್ತು. ಆದರೆ ಇದೀಗ ಸರ್ಕಾರ ಮುಂದಿನ ಆದೇಶದವರೆಗೆ ತಡೆಹಿಡಿದಿದೆ.

    ಕೆಲ ದಿನಗಳಿಂದ ರವಿ ಡಿ.ಚನ್ನಣ್ಣನವರ್ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಕೇಳಿ ಬರುತ್ತಿವೆ. ಈ ಸಂಬಂಧ ಪರ-ವಿರೋಧ ಚರ್ಚೆಗಳೂ ನಡೆಯುತ್ತಿವೆ. ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಸುದ್ದಿಗಳು ಪ್ರಸಾರವಾಗದಂತೆ ಕ್ರಮವಹಿಸಲು ಚನ್ನಣ್ಣನವರ್ ಕೋರ್ಟ್‍ನಿಂದ ತಡೆಯಾಜ್ಞೆ ತಂದಿದ್ದರು. ಇದರ ಮಧ್ಯೆಯೇ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿತ್ತು.

    ಸಿಐಡಿಯಿಂದ ಭೀಮಾಶಂಕರ್ ಗುಳೇದ್ ಅವರನ್ನು ಬೆಂಗಳೂರು ಪೂರ್ವ ವಿಭಾಗದ ಡಿಸಿಪಿ, ಎಸಿಬಿಯಿಂದ ಅಬ್ದುಲ್ ಅಹದ್‍ರನ್ನು ಕೆಎಸ್‍ಆರ್‍ಟಿಸಿ ವಿಜಿಲೆನ್ಸ್, ಕಾರಾಗೃಹ ಇಲಾಖೆ ಎಸ್‍ಪಿ ಟಿ.ಪಿ.ಶಿವಕುಮಾರ್ರನ್ನು ಚಾಮರಾಜನಗರ ಎಸ್‍ಪಿ, ಡೆಕ್ಕ ಕಿಶೋರ್ ಬಾಬುರನ್ನು ಬೀದರ್ ಎಸ್‍ಪಿ ಹಾಗೂ ಅರುಣಂಗ್ಯು ಗಿರಿ ಅವರನ್ನು ಕೊಪ್ಪಳ ಎಸ್‍ಪಿಯಾಗಿ ವರ್ಗಾವಣೆ ಮಾಡಲಾಗಿತ್ತು.

  • ಆರೋಪಿಗಳ ರಕ್ಷಣೆಗೆ ಲಂಚ – ರವಿ ಡಿ.ಚನ್ನಣ್ಣನವರ್ ಅಮಾನತಿಗೆ AAP ಆಗ್ರಹ

    ಆರೋಪಿಗಳ ರಕ್ಷಣೆಗೆ ಲಂಚ – ರವಿ ಡಿ.ಚನ್ನಣ್ಣನವರ್ ಅಮಾನತಿಗೆ AAP ಆಗ್ರಹ

    ಬೆಂಗಳೂರು: ಅಕ್ರಮ ಮರಳು ದಂಧೆ ಪ್ರಕರಣವನ್ನು ಮುಚ್ಚಿ ಹಾಕಲು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್‌ರನ್ನು ಅಮಾನತು ಮಾಡಿ, ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ.ಸದಂ ಆಗ್ರಹಿಸಿದ್ದಾರೆ.

    ಈ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ಜಗದೀಶ್ ವಿ ಸದಂ, ಕ್ರಷರ್ ಉದ್ಯಮಿ ಸೇರಿ ಹಲವರಿಂದ 3.96 ಕೋಟಿ ಮೊತ್ತ ವಂಚನೆಯಾಗಿದೆ ಎಂದು ಸಲ್ಲಿಕೆಯಾಗಿದ್ದ ದೂರನ್ನು ಆಧರಿಸಿ ಆರೋಪಿಗಳ ವಿರುದ್ಧ ರವಿ ಡಿ.ಚನ್ನಣ್ಣನವರ್ ಹಾಗೂ ಇತರೆ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಬೇಕಾಗಿತ್ತು. ಆದರೆ ಬೇಲಿಯೇ ಎದ್ದು ಹೊಲ ಮೇಯ್ತು ಎಂಬ ಗಾದೆಯಂತೆ, ಪೊಲೀಸ್ ಅಧಿಕಾರಿಗಳೇ ಆರೋಪಿಗಳಿಂದ 50 ಲಕ್ಷ ರೂ. ಲಂಚ ಪಡೆದಿರುವ ಆರೋಪ ಕೇಳಿಬಂದಿದೆ. ಇಂತಹ ಗಂಭೀರ ಆರೋಪ ಹೊತ್ತಿರುವ ರವಿ ಡಿ.ಚನ್ನಣ್ಣನವರ್ ಸಿಐಡಿ ಎಸ್‍ಪಿ ಹುದ್ದೆಯಲ್ಲಿ ಮುಂದುವರಿಯುವುದು ಸರಿಯಲ್ಲ. ತಕ್ಷಣವೇ ಅಮಾನತು ಮಾಡಿ ಸಮಗ್ರ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಮೋದಿಯ ಮೆಚ್ಚುಗೆಗೆ ಪಾತ್ರವಾಗಿದ್ದ ಕಾಮೇಗೌಡರ ಸಾಮಾಜಿಕ ಸೇವೆಗೆ ಅಧಿಕಾರಿಗಳು ಅಡ್ಡಿ

    ಪ್ರಕರಣ ಸಂಬಂಧ ಮಂಜುನಾಥ್ ಎಂಬುವವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ರವಿ ಚನ್ನಣ್ಣನವರ್ 25 ಲಕ್ಷ, ಡಿವೈಎಸ್‍ಪಿ 15 ಲಕ್ಷ ಹಾಗೂ ಮತ್ತೊಬ್ಬ ಅಧಿಕಾರಿ 10 ಲಕ್ಷ ರೂಪಾಯಿ ಸ್ವೀಕರಿಸಿರುವ ಕುರಿತು ದೂರಿನಲ್ಲಿ ಸ್ಪಷ್ವವಾಗಿ ಉಲ್ಲೇಖಿಸಿದ್ದಾರೆ. ಪ್ರಭಾವಿಗಳ ವಿರುದ್ಧ ಎಫ್‍ಐಆರ್ ದಾಖಲಿಸಲು ಕೂಡ ಪೊಲೀಸ್ ಅಧಿಕಾರಿಗಳು ಲಕ್ಷಗಟ್ಟಲೆ ಲಂಚ ಕೇಳಿರುವ ಮಾಹಿತಿ ದೂರಿನಲ್ಲಿದೆ. ಆರೋಪಗಳಿಗೆ ಸಂಬಂಧಿಸಿ ಧ್ವನಿ ಮುದ್ರಣ, ವಾಟ್ಸಪ್ ಸಂದೇಶ ಮುಂತಾದ ಸಾಕ್ಷಿಗಳಿವೆ ಎಂದು ಮಂಜುನಾಥ್ ಹೇಳಿದ್ದಾರೆ. ಅವೆಲ್ಲದರ ಆಧಾರದಲ್ಲಿ ತನಿಖೆ ನಡೆಸಿ, ನೈಸರ್ಗಿಕ ಸಂಪತ್ತನ್ನು ಕೊಳ್ಳೆ ಹೊಡೆದವರಿಗೆ ಹಾಗೂ ಅವರನ್ನು ರಕ್ಷಣೆ ಮಾಡಿದವರಿಗೆ ಕಠಿಣ ಶಿಕ್ಷೆ ನೀಡಬೇಕು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನಾಚಿಕೆಗೇಡಿನ ಶಿಕ್ಷಣ ಸಚಿವ: ಬಿ.ಸಿ.ನಾಗೇಶ್ ವಿರುದ್ಧ ಹೆಚ್.ಡಿ.ರೇವಣ್ಣ ಕಿಡಿ

  • ನಾನು ರಾಜಕೀಯ ಸೇರುವುದು ಸತ್ಯಕ್ಕೆ ದೂರವಾದ ಸಂಗತಿ: ಚನ್ನಣ್ಣವರ್ ಸ್ಪಷ್ಟನೆ

    ನಾನು ರಾಜಕೀಯ ಸೇರುವುದು ಸತ್ಯಕ್ಕೆ ದೂರವಾದ ಸಂಗತಿ: ಚನ್ನಣ್ಣವರ್ ಸ್ಪಷ್ಟನೆ

    ನವದೆಹಲಿ: ಬಿಜೆಪಿ ಸೇರುತ್ತಾರೆ ಎಂಬ ಸುದ್ದಿಗೆ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣವರ್ ಸ್ಪಷ್ಟನೆ ಕೊಟ್ಟಿದ್ದಾರೆ.

    ನಾನು ಭರವಸೆ ಎಂಬ ಪುಸ್ತಕವನ್ನು ಬರೆಯುತ್ತಿದ್ದು, ಇದರ ಪ್ರಯುಕ್ತ ಇತ್ತೀಚೆಗೆ ನನ್ನ ಇತ್ತೀಚಿನ ರಜೆ ದಿನಗಳಲ್ಲಿ ನನ್ನ ಹಳೆಯ ಸ್ನೇಹಿತರ ಮನೆಗಳನ್ನು ದೇವಸ್ಥಾನಗಳನ್ನು, ಶ್ರೀ ಮಠಗಳನ್ನು ಭೇಟಿಯಾಗಿ ಮಾಹಿತಿ ಕಲೆಹಾಕುತ್ತಿದ್ದೇನೆ. ಆ ಸಂದರ್ಭದ ವಿವಿಧ ಫೋಟೋಗಳನ್ನು ಉಪಯೋಗಿಸಿಕೊಂಡು ಕೆಲವು ಮಾಧ್ಯಮಗಳು ವಿಶೇಷವಾದ ಅರ್ಥವನ್ನು ಕಲ್ಪಸಿ ಬಿತ್ತರಿಸುತ್ತಿವೆ. ಈ ವಿಚಾರ ನನ್ನ ಗಮನಕ್ಕೆ ಬಂದಿದೆ. ಈ ಸುದ್ದಿಗಳು ಸತ್ಯಕ್ಕೆ ದೂರವಾಗಿದ್ದು, ಅದಕ್ಕೆ ಯಾವುದೇ ವಿಶೇಷತೆ ಮತ್ತು ಅಪಾರ್ಥವನ್ನು ಕಲ್ಪಿಸಬೇಡಿ. ನಾನು ರಾಜಕೀಯ ಸೇರುವುದು ಸತ್ಯಕ್ಕೆ ದೂರವಾದ ಸಂಗತಿ ಎಂಬುದನ್ನು ಈ ಮೂಲಕವಾಗಿ ಸ್ಪಷ್ಟಪಡಿಸುತ್ತೇನೆ ಎಂದು ಹೇಳಿ ಪತ್ರ ಬರೆದಿದ್ದಾರೆ. ಇದನ್ನೂ ಓದಿ:  ಬಿಜೆಪಿ ಸೇರುತ್ತಾರಾ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್?

    ರಾಜ್ಯದಲ್ಲಿ ಸೂಪರ್ ಕಾಪ್ ಎಂದೇ ಫೇಮಸ್ ಆಗಿರುವ ರವಿ ಡಿ ಚನ್ನಣ್ಣನವರ್ ಅವರನ್ನು  ಬಿಜೆಪಿ ಸೆಳೆಯಲು ಮುಂದಾಗಿದೆಯಂತೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿತ್ತು.

    ಕಳೆದ ಮಂಗಳವಾರ ದೆಹಲಿಯಲ್ಲಿ ರವಿ ಚನ್ನಣ್ಣನವರ್ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿಯಾಗಿದ್ದರು. ಕೊಳ್ಳೇಗಾಲದ ಶಾಸಕ ಎನ್.ಮಹೇಶ್ ಬಿಜೆಪಿ ಸೇರ್ಪಡೆಗೂ ಮುನ್ನ ಸಂತೋಷ್ ಅವರನ್ನು ಭೇಟಿಯಾಗಿದ್ದರು. ಇದೇ ಸಂದರ್ಭದಲ್ಲಿ ರವಿ ಚನ್ನಣ್ಣನವರ್ ಕೂಡಾ ಇದ್ದರು ಎಂದು ಮೂಲಗಳು ಹೇಳಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸಮ್ಮುಖದಲ್ಲಿ ಸಭೆ ಕೂಡಾ ನಡೆದಿದೆ ಎಂದು ಹೇಳಲಾಗುತ್ತಿತ್ತು

  • ಬಿಜೆಪಿ ಸೇರುತ್ತಾರಾ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್?

    ಬಿಜೆಪಿ ಸೇರುತ್ತಾರಾ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್?

    ಶಬ್ಬೀರ್ ನಿಡಗುಂದಿ
    ನವದೆಹಲಿ: ಅಣ್ಣಾಮಲೈ ಬಳಿಕ ರಾಜ್ಯದ ಮತ್ತೊಬ್ಬ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಶೀಘ್ರದಲ್ಲಿ ಬಿಜೆಪಿ ಸೇರುವ ತಯಾರಿಯಲ್ಲಿದ್ದಾರಾ ಎಂಬ ಪ್ರಶ್ನೆ ಎದ್ದಿದೆ.

    ಹೌದು. ಉನ್ನತ ಹುದ್ದೆಯ ಕನಸು ಕಂಡು ಹಗಲಿರುಳು ಓದಿ ದಕ್ಕಿಸಿಕೊಂಡ ಐಎಎಸ್, ಐಪಿಎಸ್ ನಂತಹ ಉನ್ನತ ಸ್ಥಾನಗಳನ್ನು ತೊರೆದು ರಾಜಕೀಯಕ್ಕೆ ಎಂಟ್ರಿ ಕೊಡುವ ಅಧಿಕಾರಿಗಳ ಸಂಖ್ಯೆ ಹೆಚ್ಚಾಗುತ್ತಿದೆ. 2014ರಲ್ಲಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಇಂತಹದೊಂದು ಟ್ರೆಂಡ್ ಶುರುವಾಗಿದ್ದು ಯುವ ಅಧಿಕಾರಿಗಳು ರಾಜಕೀಯದತ್ತ ಮುಖ ಮಾಡಿದ್ದು ಈಗ ಚನ್ನಣ್ಣನವರ್ ಬಿಜೆಪಿ ಸೇರುವ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂಬ ವಿಚಾರವನ್ನು  ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.

    ರಾಜ್ಯದಲ್ಲಿ ಸೂಪರ್ ಕಾಪ್ ಎಂದೇ ಫೇಮಸ್ ಆಗಿರುವ ರವಿ ಡಿ ಚನ್ನಣ್ಣನವರ್‍ರನ್ನ ಬಿಜೆಪಿ ಸೆಳೆಯಲು ಮುಂದಾಗಿದೆಯಂತೆ. ಈ ಬಗ್ಗೆ ಪ್ರಾಥಮಿಕ ಮಾತುಕತೆಗಳು ನಡೆಯುತ್ತಿದ್ದು ರವಿ ಡಿ ಚನ್ನಣ್ಣನವರ್ ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ಬಿಜೆಪಿ ಮೂಲಗಳು ಹೇಳುತ್ತಿವೆ.

    ಕಳೆದ ಮಂಗಳವಾರ ದೆಹಲಿಯಲ್ಲಿ ರವಿ ಚನ್ನಣ್ಣನವರ್ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿಯಾಗಿದ್ದಾರೆ. ಕೊಳ್ಳೇಗಾಲದ ಶಾಸಕ ಎನ್ ಮಹೇಶ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಸೇರ್ಪಡೆಗೂ ಮುನ್ನ ಮಹೇಶ್ ಸಂತೋಷ್ ಅವರನ್ನು ಭೇಟಿಯಾಗಿದ್ದರು. ಇದೇ ಸಂದರ್ಭದಲ್ಲಿ ರವಿ ಚನ್ನಣ್ಣನವರ್ ಕೂಡಾ ಇದ್ದರು ಎಂದು ಮೂಲಗಳು ಹೇಳಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸಮ್ಮುಖದಲ್ಲಿ ಸಭೆ ಕೂಡಾ ನಡೆದಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಜೋಗ ವೀಕ್ಷಣೆಗೆ ಕೊರೊನಾ ನೆಗೆಟಿವ್ ವರದಿ ಕಡ್ಡಾಯ

     

    ಅಣ್ಣಾಮಲೈ ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಳಿಕ ರವಿ ಚನ್ನಣ್ಣನವರ್ ಕೂಡಾ ರಾಜಕೀಯಕ್ಕೆ ಸೇರಲು ಉತ್ಸುಕರಾಗಿದ್ದು ಮುಂದಿನ ದಿನಗಳಲ್ಲಿ ಅಣ್ಣಾಮಲೈ ದಾರಿ ಹಿಡಿಯಬಹುದು ಎಂದು ಹೇಳಲಾಗುತ್ತಿದೆ. ರಾಜ್ಯದಲ್ಲೂ ಜನಪ್ರಿಯ ಅಧಿಕಾರಿಗಳಿಗೆ ಆದ್ಯತೆ ನೀಡಲು ಬಿಜೆಪಿ ಪ್ಲ್ಯಾನ್ ಮಾಡಿದ್ದು ವರ್ಚಸ್ಸು ಹೆಚ್ಚಿಸುವ ಲೆಕ್ಕ ಲೆಕ್ಕಚಾರದಲ್ಲಿ ಇದೆಯಂತೆ.

    ರಾಜ್ಯದ ಮಟ್ಟಿಗೆ ರವಿ ಡಿ ಚನ್ನಣ್ಣನವರ್ ಪ್ರಖ್ಯಾತಿ ಪಡೆದಿದ್ದು ಸಿಂಗಂ ಎಂದು ಕರೆಸಿಕೊಳ್ಳುತ್ತಿದ್ದಾರೆ. ಗದಗ ಮೂಲದ ಈ ಐಪಿಎಸ್ ಅಧಿಕಾರಿಯನ್ನು ರಾಜ್ಯದ ದೊಡ್ಡ ಪ್ರಮಾಣದ ಯುವ ಸಮುದಾಯದ ಸ್ಫೂರ್ತಿಯಾಗಿಸಿಕೊಂಡಿದ್ದು ಮುಂದಿನ ಚುನಾವಣೆಗೆ ಇವರನ್ನು ಚುನಾವಣಾ ಅಖಾಡಕ್ಕೆ ಇಳಿಸುವ ಲೆಕ್ಕಚಾರದಲ್ಲಿ ಬಿಜೆಪಿ ಇದೆ ಎನ್ನಲಾಗುತ್ತಿದೆ.

  • ಯುವಜನತೆ ನಿರುದ್ಯೋಗ ಮುಕ್ತವಾಗಲು ಕೌಶಲ್ಯಾಭಿವೃದ್ಧಿ ಅಗತ್ಯ: ರವಿ.ಡಿ ಚನ್ನಣ್ಣವರ್

    ಯುವಜನತೆ ನಿರುದ್ಯೋಗ ಮುಕ್ತವಾಗಲು ಕೌಶಲ್ಯಾಭಿವೃದ್ಧಿ ಅಗತ್ಯ: ರವಿ.ಡಿ ಚನ್ನಣ್ಣವರ್

    ಚಿತ್ರದುರ್ಗ: ವಿದ್ಯೆ ಕೌಶಲ್ಯಾಭಿವೃದ್ಧಿಗೆ ಪೂರಕವಾಗಿರಬೇಕು, ಯುವಕರು ನಿರುದ್ಯೋಗದಿಂದ ಮುಕ್ತರಾಗಲು ಕೌಶಲ್ಯಾಭಿವೃದ್ದಿ ಅಗತ್ಯವೆಂದು ಸಿ.ಐ.ಡಿ ಎಸ್.ಪಿ. ರವಿ.ಡಿ ಚನ್ನಣ್ಣನವರ್ ಅಭಿಪ್ರಾಯಪಟ್ಟಿದ್ದಾರೆ.

    ಕೋಟೆನಾಡು ಚಿತ್ರದುರ್ಗದ ಭೋವಿಗುರುಪೀಠದ ಪೀಠಾಧ್ಯಾಕ್ಷರಾದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರ ದರ್ಶನ ಪಡೆದು ಬಳಿಕ ಮಾತನಾಡಿದ ರವಿ.ಡಿ ಚನ್ನಣ್ಣನವರ್, ವಿದ್ಯೆ ಕೌಶಲ್ಯಾಭಿವೃದ್ಧಿಗೆ ತಕ್ಕಂತೆ ಇರಬೇಕು. ಕೌಶಲ್ಯತೆಯನ್ನು ಯುವಕರು ಹೇಗೆ ಬಳಸಬೇಕು ಎಂಬುದನ್ನು ಅರಿತಾಗ ಮಾತ್ರ ಬದುಕಲ್ಲಿ ಯಶಸ್ವಿಯಾಗಲು ಸಾಧ್ಯ. ಅಲ್ಲದೇ ಬದುಕಿನಲ್ಲಿ ಕ್ರಿಯಾಶೀಲತೆಯಿಂದ ಸೃಜನಶೀಲತೆ ಹುಟ್ಟಿದಾಗ ಮಾತ್ರ ರಾಷ್ಟ್ರ ಅಭಿವೃದ್ಧಿಯಾಗಲು ಸಾಧ್ಯ ಎಂದು ಯುವಕರಿಗೆ ಮನವರಿಕೆ ಮಾಡಿಕೊಟ್ಟರು. ಇದನ್ನೂ ಓದಿ: ಡಿಕೆಶಿ ಹೊಡೆದಿದ್ದು ಕಾಂಗ್ರೆಸ್ ಅಲ್ಲ, ಜೆಡಿಎಸ್ ಕಾರ್ಯಕರ್ತನಿಗೆ


    ಯುವಕರಿಗೆ ಬದುಕಿನ ಭರವಸೆ ಮುಖ್ಯ, ಅವರು ಪರಾವಲಂಬಿಯಾಗಿರಬಾರದು, ಉದ್ಯೋಗದಲ್ಲಾಗಲೀ, ಬದುಕಿನಲ್ಲಾಗಲೀ, ಸ್ವಾವಲಂಬಿಯಾಗಿ ಬದುಕಬೇಕು. ರಾಷ್ಟ್ರದ ಅಭಿವೃದ್ಧಿಯೊಟ್ಟಿಗೆ ಸಮಾಜದ ಅಭಿವೃದ್ಧಿಯು ಸಹ ಮುಖ್ಯವಾಗಿರುತ್ತದೆ. ಹಾಗಾಗಿ ಯುವಕರು ತಮ್ಮ ಮೇಲಿರುವ ಬಹುದೊಡ್ಡ ಜವಾಬ್ದಾರಿಯನ್ನು ಅರಿತು ಬದುಕಿನ ಹೆಜ್ಜೆಗಳನ್ನು ಇಡಬೇಕು ಎಂದು ಸಲಹೆ ನೀಡಿದರು.

    ಈ ವೇಳೆ ಭೋವಿ ಗುರುಪೀಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಸಿಒಓ ಗೋವಿಂದಪ್ಪ, ಮುಖಂಡರಾದ ಲಕ್ಷ್ಮಣ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

  • 100ಕ್ಕೂ ಹೆಚ್ಚು ರೌಡಿಶೀಟರ್‌ಗಳ ಪರೇಡ್- ರವಿ ಚನ್ನಣ್ಣನವರ್ ಖಡಕ್ ವಾರ್ನಿಂಗ್

    100ಕ್ಕೂ ಹೆಚ್ಚು ರೌಡಿಶೀಟರ್‌ಗಳ ಪರೇಡ್- ರವಿ ಚನ್ನಣ್ಣನವರ್ ಖಡಕ್ ವಾರ್ನಿಂಗ್

    ನೆಲಮಂಗಲ: ಗ್ರಾಮ ಪಂಚಾಯ್ತಿ ಚುನಾವಣೆ ಮತ್ತು ಮುಂದೆ ಬರುವ ಹಬ್ಬ, ಸೇರಿದಂತೆ ಅಕ್ರಮ ಚಟುವಟಿಕೆಗಳಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ನೆಲಮಂಗಲ ಉಪವಿಭಾಗ ಪೊಲೀಸರು ದಿಟ್ಟ ಕ್ರಮ ಕೈಗೊಂಡಿದ್ದಾರೆ.

    ಬೆಂಗಳೂರು ಹೊರವಲಯ ನೆಲಮಂಗಲ ಉಪವಿಭಾಗದಲ್ಲಿ, ರಾತ್ರೋರಾತ್ರಿ ರೌಡಿಗಳಿಗೆ ಶಾಕ್ ನೀಡಿದ ಪೊಲೀಸರು, 100ಕ್ಕೂ ರೌಡಿಗಳ ಪರೇಡ್ ನಡೆಸಿದ್ದಾರೆ. ನೆಲಮಂಗಲ ಉಪವಿಭಾಗದ ರೌಡಿಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿ ರೌಡಿಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ರೌಡಿಗಳ ಬಳಿಯಿದ್ದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ.

    100ಕ್ಕೂ ಹೆಚ್ಚು ರೌಡಿಗಳ ಮನೆ ಮೇಲೆ ಪೊಲೀಸ್ ಸಿಬ್ಬಂದಿ ಹಾಗೂ ಬೆಂಗಳೂರು ಗ್ರಾಮಾಂತರ ಎಸ್‍ಪಿ ರವಿ ಚೆನ್ನಣ್ಣನವರ್ ನೇತೃತ್ವದಲ್ಲಿ ದಾಳಿ ನಡೆದಿದೆ. ನಂತರ ಇಂದು ಡಾ.ಬಿ.ಆರ್. ಅಂಬೇಡ್ಕರ್ ಮೈದಾನದಲ್ಲಿ ಪರೇಡ್ ನಡೆಸಿದರು. ಇತ್ತಿಚೇಗೆ ರಿಯಲ್ ಎಸ್ಟೇಟ್, ಲ್ಯಾಂಡ್ ಮಾಫಿಯಾ ದಲ್ಲಿ ಸ್ಥಳೀಯರ ರೌಡಿಗಳ ಹೆಸರು ಕೇಳಿ ಬಂದಿತ್ತು. ಈ ಹಿನ್ನೆಲೆ ನೆಲಮಂಗಲ ಡಿವೈಎಸ್‍ಪಿ ಮೋಹನ್, ಸರ್ಕಲ್ ಇನ್ಸ್ ಪೆಕ್ಟರ್ ಶಿವಣ್ಣ ಹಾಗೂ ಮಾದನಾಯಕನಹಳ್ಳಿ ಇನ್ಸ್ ಪೆಕ್ಟರ್ ಸತ್ಯನಾರಯಣ ನೇತೃತ್ವದಲ್ಲಿ ದಾಳಿ ನಡೆಸಿ ರೌಡಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.

    ಇತ್ತೀಚೆಗೆ ನೆಲಮಂಗಲದಲ್ಲಿ ಯುವಕನ ಕೊಲೆ ಕೇಸ್ ನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ರೌಡಿ ಚಟುವಟಿಕೆಗೆ ಖಡಕ್ ಆಗಿ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

  • ನಿಮ್ಗೆ ಒದೆ ಬಿದ್ದಿಲ್ಲ ಅನ್ಸುತ್ತೆ- ಕ್ಯಾಟ್‍ಫಿಶ್ ಮಾಲೀಕರಿಗೆ ಚನ್ನಣ್ಣವರ್ ವಾರ್ನಿಂಗ್

    ನಿಮ್ಗೆ ಒದೆ ಬಿದ್ದಿಲ್ಲ ಅನ್ಸುತ್ತೆ- ಕ್ಯಾಟ್‍ಫಿಶ್ ಮಾಲೀಕರಿಗೆ ಚನ್ನಣ್ಣವರ್ ವಾರ್ನಿಂಗ್

    ಬೆಂಗಳೂರು: ಅಕ್ರಮವಾಗಿ ಕ್ಯಾಟ್ ಫಿಶ್ ಸಾಕಣೆ ಮಾಡುತ್ತಿದ್ದ ರೌಡಿಗಳನ್ನು ತಪಾಸಣೆ ಮಾಡಲು ಹೋದ ಪೊಲೀಸರಿಗೆ ರೌಡಿಗಳು ಆವಾಜ್ ಹಾಕಿದ್ದರು. ಇದೀಗ ಆ ರೌಡಿಗಳಿಗೆ ಬೆಂಗಳೂರು ಗ್ರಾಮಾಂತರ ಎಸ್.ಪಿ ರವಿ.ಡಿ.ಚನ್ನಣ್ಣನವರ್ ಖಡಕ್ ವಾರ್ನಿಂಗ್ ನೀಡಿರುವ ಘಟನೆ ನಂದಗುಡಿಯಲ್ಲಿ ನಡೆದಿದೆ.

    ನಂದಗುಡಿ ಪೊಲೀಸ್ ಠಾಣೆಯಲ್ಲಿ ಸೋಮವಾರ ಜನಸಂಪರ್ಕ ಸಭೆ ನಡೆಸಿದ್ದು, ಈ ಸಭೆಯಲ್ಲಿ ಭಾಗವಹಿಸಿದ್ದ ಅಕ್ರಮ ಕ್ಯಾಟ್ ಫಿಶ್ ಸಾಕಣೆದಾರನಿಗೆ ರವಿ ಚನ್ನಣ್ಣನವರ್ ಕ್ಲಾಸ್ ತೆಗೆದುಕೊಂಡರು. ಇದೇ ವೇಳೆ ಕ್ಯಾಟ್ ಫಿಶ್ ಸಾಕಾಣೆದಾರ, ನಮಗೆ ಬೇರೆ ಬ್ಯುಸಿನೆಸ್ ಇಲ್ಲ. ಹೀಗಾಗಿ ಕ್ಯಾಟ್ ಫಿಶ್ ಸಾಕುತ್ತಿದ್ದೇವೆ ಎಂದು ಹೇಳಿದ್ದಾನೆ. ಇದನ್ನೂ ಓದಿ:  ಕ್ಯಾಟ್ ಫಿಶ್ ಹೊಂಡಗಳ ಮೇಲೆ ಅಧಿಕಾರಿಗಳ ದಾಳಿ – ಈ ಮೀನುಗಳು ಅಪಾಯಕಾರಿ ಯಾಕೆ?

    ತಕ್ಷಣ ಗರಂ ಆದ ಚನ್ನಣ್ಣನವರ್, ಬೇರೆ ಕೆಲಸ ಇಲ್ಲ ಎಂದು ದರೋಡೆ ಮಾಡೋಕಾಗುತ್ತಾ, ಕೆಲಸ ಇಲ್ಲ ಅಂತಾ ಗಾಂಜಾ ಬೆಳೆಯೋಕೆ ಆಗುತ್ತಾ, ಇಸ್ಪೀಟ್ ಆಡೋಕಾಗುತ್ತಾ. ನಿಮಗೆ ಒದೆ ಬಿದ್ದಿಲ್ಲ ಅನ್ಸುತ್ತೆ ಎಂದು ಕ್ಲಾಸ್ ತೆಗೆದುಕೊಂಡರು.

    ನಾನು 10 ಗಂಟೆ ರಾತ್ರಿಯಲ್ಲಿ ಬಂದಿದ್ದೀನಿ. ಆದರೂ 18 ವರ್ಷದ ಹುಡುಗ ಡ್ಯಾಗರ್ ಹಿಡಿದುಕೊಂಡು ಓಡಾಡ್ತಾನೆ. ನಮ್ಮ ವ್ಯಾಪ್ತಿಯಲ್ಲಿ 1900 ಹಳ್ಳಿ ಇದೆ. ಆ ಊರಲ್ಲಿ ಮಾತ್ರ ಯಾಕೆ ಕ್ಯಾಟ್ ಫಿಶ್ ಸಾಕುತ್ತಾರೆ. ಯಾಕೆಂದರೆ ಅಲ್ಲಿ ಕೆಟ್ಟವರ ಸಂಖ್ಯೆ ಜಾಸ್ತಿ ಇದೆ. ಒಂದು ಕೆಲಸ ಮಾಡು ನಿನಗೆ ಫುಲ್ ಫ್ರೀಡಂ ಕೊಡುತ್ತೀನಿ ಅಲ್ಲಿ ಯಾರ‍್ಯಾರು ಕೆಟ್ಟ ಕೆಲಸ ಮಾಡುತ್ತಾರೆ ಅವರ ಲಿಸ್ಟ್ ಮಾಡು ಎಂದು ಕ್ಯಾಟ್‍ಫಿಶ್ ಮಾಲೀಕರಿಗೆ ವಾರ್ನಿಂಗ್ ನೀಡಿದರು.