Tag: Ravi D. Chechenannavar

  • ರವಿ ಡಿ.ಚನ್ನಣ್ಣನವರ್‌ ಸೇರಿ 9 ಐಪಿಎಸ್ ಅಧಿಕಾರಿಗಳ ವರ್ಗಾವಣೆ

    ರವಿ ಡಿ.ಚನ್ನಣ್ಣನವರ್‌ ಸೇರಿ 9 ಐಪಿಎಸ್ ಅಧಿಕಾರಿಗಳ ವರ್ಗಾವಣೆ

    ಬೆಂಗಳೂರು: ರವಿ ಡಿ.ಚನ್ನಣ್ಣನವರ್‌ ಸೇರಿದಂತೆ 9 ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ಸಿಐಡಿ ಎಸ್‌ಪಿ ಆಗಿದ್ದ ರವಿ ಡಿ. ಚನ್ನಣ್ಣನವರ್ ಅವರನ್ನು ವಾಲ್ಮೀಕಿ ಅಭಿವೃದ್ಧಿ ನಿಗಮದ ಎಂಡಿಯಾಗಿ ವರ್ಗಾಯಿಸಲಾಗಿದೆ. ಸಿಐಡಿಯಿಂದ ಭೀಮಾಶಂಕರ್ ಗುಳೇದ್ ಅವರನ್ನು ಬೆಂಗಳೂರು ಪೂರ್ವ ವಿಭಾಗದ ಡಿಸಿಪಿ, ಎಸಿಬಿಯಿಂದ ಅಬ್ದುಲ್ ಅಹದ್‌ರನ್ನು ಕೆಎಸ್‌ಆರ್‌ಟಿಸಿ ವಿಜಿಲೆನ್ಸ್‌, ಕಾರಾಗೃಹ ಇಲಾಖೆ ಎಸ್‌ಪಿ ಟಿ.ಪಿ.ಶಿವಕುಮಾರ್ರನ್ನು ಚಾಮರಾಜನಗರ ಎಸ್‌ಪಿ, ಡೆಕ್ಕ ಕಿಶೋರ್ ಬಾಬುರನ್ನು ಬೀದರ್ ಎಸ್‌ಪಿ ಹಾಗೂ ಅರುಣಂಗ್ಯು ಗಿರಿ ಅವರನ್ನು ಕೊಪ್ಪಳ ಎಸ್‌ಪಿಯಾಗಿ ವರ್ಗಾವಣೆ ಮಾಡಲಾಗಿದೆ. ಇದನ್ನೂ ಓದಿ: ನಾಪತ್ತೆಯಾಗಿದ್ದ ಅರುಣಾಚಲ ಪ್ರದೇಶದ ಯುವಕನನ್ನು ಬಿಡುಗಡೆ ಮಾಡಿದ ಚೀನಾ

    * ಭೀಮಾಶಂಕರ ಗುಳೇದ್- ಡಿಸಿಪಿ, ಬೆಂಗಳೂರು ಪೂರ್ವ
    * ಡಿ. ಕಿಶೋರ್ ಬಾಬು- ಬೀದರ್ ಪೊಲೀಸ್ ವರಿಷ್ಠಾಧಿಕಾರಿ(SP)
    * ಅರುಣಾಂಗ್ಸು ಗಿರಿ- ಕೊಪ್ಪಳ ಪೊಲೀಸ್ ವರಿಷ್ಠಾಧಿಕಾರಿ
    * ಡಿ.ಎಲ್.ನಾಗೇಶ್- ಸಿಐಡಿ ಎಸ್‌ಪಿ
    * ಅಬ್ದುಲ್ ಅಹಾದ್- ಕೆಎಸ್‌ಆರ್‌ಟಿಸಿ ನಿರ್ದೇಶಕ
    * ಟಿ.ಶ್ರೀಧರ್- ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಎಸ್​ಪಿ
    *ಟಿ.ಪಿ.ಶಿವಕುಮಾರ್- ಚಾಮರಾಜನಗರ ಎಸ್‌ಪಿ
    * ದಿವ್ಯಸಾರ ಥಾಮಸ್- ಪೊಲೀಸ್ ಅಕಾಡೆಮಿ ಉಪ ನಿರ್ದೇಶಕ

    VIDHAN SHOUDHA

    ಕೆಲ ದಿನಗಳಿಂದ ರವಿ ಡಿ.ಚನ್ನಣ್ಣನವರ್‌ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಕೇಳಿ ಬರುತ್ತಿವೆ. ಈ ಸಂಬಂಧ ಪರ-ವಿರೋಧ ಚರ್ಚೆಗಳೂ ನಡೆಯುತ್ತಿವೆ. ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಸುದ್ದಿಗಳು ಪ್ರಸಾರವಾಗದಂತೆ ಕ್ರಮವಹಿಸಲು ಚನ್ನಣ್ಣನವರ್‌ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದರು. ಇದರ ಮಧ್ಯೆಯೇ ಅವರನ್ನು ವರ್ಗಾಯಿಸಲಾಗಿದೆ. ಇದನ್ನೂ ಓದಿ: ಭಟ್ಕಳದಲ್ಲಿ ಪಾಕಿಸ್ತಾನಿ ಮಹಿಳೆಗೆ ಆಧಾರ್ ಕಾರ್ಡ್ – ಚುನಾವಣೆ ಆಯೋಗದಿಂದ 100ಕ್ಕೂ ಹೆಚ್ಚು ಅರ್ಜಿಗಳು ವಜಾ

  • ತನ್ನ ಹೆಸರನ್ನು ದುರ್ಬಳಕೆ ಮಾಡೋ ಮಂದಿಗೆ ವಾರ್ನಿಂಗ್ ಕೊಟ್ಟ ಎಸ್‍ಪಿ ರವಿ ಚೆನ್ನಣ್ಣನವರ್

    ತನ್ನ ಹೆಸರನ್ನು ದುರ್ಬಳಕೆ ಮಾಡೋ ಮಂದಿಗೆ ವಾರ್ನಿಂಗ್ ಕೊಟ್ಟ ಎಸ್‍ಪಿ ರವಿ ಚೆನ್ನಣ್ಣನವರ್

    ಮೈಸೂರು: ತನ್ನ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಗಳು ಸೃಷ್ಟಿಯಾದ ಹಿನ್ನೆಲೆಯಲ್ಲಿ ಆ ಖಾತೆಯನ್ನು ನಿರ್ವಹಿಸುತ್ತಿರುವ ಮಂದಿಗೆ ಎಸ್‍ಪಿ ರವಿ ಡಿ.ಚೆನ್ನಣ್ಣನವರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

    ಫೇಸ್‍ಬುಕ್, ಟ್ವಿಟ್ಟರ್, ಇನ್ ಸ್ಟಾಗ್ರಾಮ್ ನಲ್ಲಿ ನನ್ನ ಹೆಸರಿನಲ್ಲಿ ನಕಲಿ ಖಾತೆಗಳಿದ್ದು, ಆ ವ್ಯಕ್ತಿಗಳ ವಿರುದ್ಧ ಕ್ರಮಗಳನ್ನು ಕೈಗೊಳ್ಳುತ್ತೇನೆ ಎಂದು ಎಸ್‍ಪಿ ರವಿ ಡಿ.ಚನ್ನಣನವರ್ ಫೇಸ್ ಬುಕ್ ನಲ್ಲಿ ಸ್ಟೇಟಸ್ ಅಪ್‍ಡೇಟ್ ಮಾಡಿಕೊಂಡಿದ್ದಾರೆ.

    ಫೇಸ್ ಬುಕ್ ಸ್ಟೇಟಸ್ ನಲ್ಲಿ ಏನಿದೆ?
    ಟ್ವಿಟ್ಟರ್, ಫೇಸ್ ಬುಕ್, ಇನ್ ಸ್ಟಾಗ್ರಾಮ್, ವಾಟ್ಸಪ್ ನಲ್ಲಿ ನನ್ನ ಹೆಸರಿನಲ್ಲಿ ನಕಲಿ ಖಾತೆಗಳು ನಿರ್ವಹಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ನನ್ನ ಫೋಟೋ ಮತ್ತು ಹೆಸರನ್ನು ಹಾಕಿ ಖಾತೆ ತೆರೆದಿರುವುದು ಸರಿಯಲ್ಲ. ಇದು ಕ್ರಿಮಿನಲ್ ಅಪರಾಧ. ಯಾರು ಈ ಖಾತೆಗಳನ್ನು ತೆರೆದು ಓಪನ್ ಮಾಡಿದ್ದಾರೋ ಅವರ ವಿರುದ್ಧ ಕ್ರಮಗಳನ್ನು ಕೈಗೊಳ್ಳುತ್ತೇನೆ. ನಾನು ಜನರ ಸೇವೆ ಮಾಡುವ ಸಾಮಾನ್ಯ ಮನುಷ್ಯನಾಗಿದ್ದು ನನಗೆ ಯಾವುದೇ ಪ್ರಚಾರದ ಅಗತ್ಯವಿಲ್ಲ. ನಿಮ್ಮ ಸಲಹೆ ಮತ್ತು ಬೆಂಬಲ ನನಗಿರಲಿ. ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

    ಇದು ಎಸ್‍ಪಿ ರವಿ ಡಿ.ಚನ್ನಣನವರ್ ಅಧಿಕೃತ ಖಾತೆ