Tag: Ravi Krishna Reddy

  • ಸರ್ಕಾರಿ ನೌಕರರ ಕ್ಷಮೆಯಾಚಿಸಿ: ಸಿ.ಎಸ್‌.ಷಡಕ್ಷರಿಗೆ ರವಿ ಕೃಷ್ಣಾರೆಡ್ಡಿ ಪತ್ರ

    ಸರ್ಕಾರಿ ನೌಕರರ ಕ್ಷಮೆಯಾಚಿಸಿ: ಸಿ.ಎಸ್‌.ಷಡಕ್ಷರಿಗೆ ರವಿ ಕೃಷ್ಣಾರೆಡ್ಡಿ ಪತ್ರ

    ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಮೊಬೈಲ್‌ ಬಳಸುವಂತಿಲ್ಲ ಎಂದು ಆದೇಶ ಹೊರಡಿಸಿ ತೀವ್ರ ಟೀಕೆಗಳ ನಂತರ ಆದೇಶವನ್ನು ವಾಪಸ್‌ ತೆಗೆದುಕೊಂಡು ರಾಜ್ಯ ಸರ್ಕಾರ ಮುಜುಗರಕ್ಕೀಡಾಗಿದೆ. ಈ ಆದೇಶ ಜಾರಿಗೆ ಪ್ರಮುಖ ಕಾರಣ ನಾನೇ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರಿಗೆ ಪತ್ರ ಬರೆದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ತರಾಟೆಗೆ ತೆಗೆದುಕೊಂಡಿದ್ದಾರೆ.

    ಸರ್ಕಾರದ ದುರುದ್ದೇಶಪೂರಿತ ಆದೇಶಕ್ಕೆ ನಾನೇ ಕಾರಣ ಎಂದು ಸಭೆಯೊಂದರಲ್ಲಿ ಕೊಚ್ಚಿಕೊಳ್ಳುವ ಮೂಲಕ ನಿಮ್ಮ ತಪ್ಪನ್ನು ಒಪ್ಪಿಕೊಂಡಿದ್ದೀರಿ. ಈ ಆದೇಶದಿಂದ ಆದ ಬೆಳವಣಿಗೆಯಿಂದ ರಾಜ್ಯದ ಲಕ್ಷಾಂತರ ಪ್ರಮಾಣಿಕ ಸರ್ಕಾರಿ ನೌಕರರ ಭಾವನೆಗಳಿಗೆ ಧಕ್ಕೆಯಾಗಿದೆ. ಇದಕ್ಕೆ ಕಾರಣರಾದ ನೀವು ಸರ್ಕಾರಿ ನೌಕರರ ಕ್ಷಮೆಯಾಚಿಸಬೇಕು ಎಂದು ಪತ್ರದಲ್ಲಿ ರವಿ ಕೃಷ್ಣಾರೆಡ್ಡಿ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವೀಡಿಯೋ ಮಾಡುವಂತಿಲ್ಲ

    ಪತ್ರದಲ್ಲೇನಿದೆ?
    ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌.ಷಡಕ್ಷರಿ,

    ನನ್ನ ತಂದೆ ಕೃಷ್ಣಾರೆಡ್ಡಿ ವಿ.ಯವರು 1970-80ರ ದಶಕದಲ್ಲಿ ಸರ್ಕಾರಿ ನೌಕರರಾಗಿದ್ದವರು. ಹಾಗಾಗಿ ಸರ್ಕಾರದ ಹಾಗೂ ಜನರ ತೆರಿಗೆಯ ಹಣದ ಋಣ ನನ್ನ ಮತ್ತು ನನ್ನ ಕುಟುಂಬದ ಮೇಲಿದೆ. ಆ ಹಿನ್ನೆಲೆಯಲ್ಲಿ ನಾನು ಅತ್ಯಂತ ಪ್ರೀತಿ, ನೋವು, ಬೇಸರ, ದುಃಖ, ಕಾಳಜಿ, ಅಸಹನೆಯಿಂದ ಕೂಡಿದ ಮಿಶ್ರಭಾವದಿಂದ ನಿಮಗೆ ಮತ್ತು ನಿಮ್ಮ ಸಂಘದ ಎಲ್ಲಾ ಪದಾಧಿಕಾರಿಗಳಿಗೆ ಈ ಬಹಿರಂಗ ಪತ್ರವನ್ನು ಬರೆಯುತ್ತಿದ್ದೇನೆ.

    ನಿಮ್ಮ ದುರಾಲೋಚನೆ, ವ್ಯಾಪ್ತಿ ಮೀರಿದ ನಡವಳಿಕೆ ಮತ್ತು ದುಷ್ಕೃತ್ಯದಿಂದಾಗಿ ನೀವು ರಾಜ್ಯದ ಲಕ್ಷಾಂತರ ಪ್ರಾಮಾಣಿಕ ಸರ್ಕಾರಿ ನೌಕರರ ಘನತೆ ಮತ್ತು ಗೌರವಕ್ಕೆ ಚ್ಯುತಿ ತಂದಿದ್ದೀರಿ. ರಾಜ್ಯದ ಮುಖ್ಯಮಂತ್ರಿಯನ್ನು ಮತ್ತು DPAR ಇಲಾಖೆಯ ಅಯೋಗ್ಯ ಅಧಿಕಾರಿಗಳನ್ನು ದಾರಿ ತಪ್ಪಿಸಿ, ಅವರಿಂದ ಕಾನೂನುಬಾಹಿರ ಮತ್ತು ಜನವಿರೋಧಿ ಆದೇಶವನ್ನು ಹೊರಡಿಸಿ, ತದನಂತರ ಕೇವಲ ಒಂದೇ ದಿನದಲ್ಲಿ ಜನಾಕ್ರೋಶಕ್ಕೆ ಮಣಿದು ಸರ್ಕಾರ ಆ Draconian ಆದೇಶವನ್ನು ಹಿಂಪಡೆಯುವಂತೆ ಆಗಿ, ರಾಜ್ಯ ಸರ್ಕಾರಕ್ಕೆ ಹಾಗೂ ಅದರ ನೌಕರರಿಗೆ ಮುಜುಗರ ಮತ್ತು ಅವಮಾನ ಆಗುವಂತಾಗಲು ನೇರ ಕಾರಣ ಆಗಿದ್ದೀರಿ. ಆ ದುರುದ್ದೇಶಪೂರಿತ ಆದೇಶಕ್ಕೆ ನಾನೇ ಕಾರಣ ಎಂದು ಆಲಮಟ್ಟಿಯಲ್ಲಿ ನಡೆದ ಸಭೆಯಲ್ಲಿ ಕೊಚ್ಚಿಕೊಳ್ಳುವ ಮೂಲಕ ನಿಮ್ಮ ತಪ್ಪನ್ನು ಒಪ್ಪಿಕೊಂಡಿದ್ದೀರಿ. ಇದರಲ್ಲಿ ಯಾವ ಪಾತ್ರವೂ ಇಲ್ಲದ ಮತ್ತು ಈ ಘಟನೆಯ ಕಾರಣಕ್ಕಾಗಿ ತೀವ್ರವಾಗಿ ನೊಂದಿರುವ ರಾಜ್ಯದ ಲಕ್ಷಾಂತರ ಪ್ರಾಮಾಣಿಕ ಸರ್ಕಾರಿ ನೌಕರರ ಭಾವನೆಗಳಿಗೆ ಧಕ್ಕೆ ತಂದಿದ್ದೀರಿ. ಹಾಗಾಗಿ, ಈ ಕೂಡಲೇ ನೀವು ರಾಜ್ಯದ ಎಲ್ಲಾ ಸರ್ಕಾರಿ ನೌಕರರಲ್ಲಿ Unconditional ಕ್ಷಮೆ ಯಾಚಿಸಬೇಕು ಎಂದು ನಾನು ಮೊದಲಿಗೆ ಆಗ್ರಹಿಸುತ್ತೇನೆ.

    ಅಂದಹಾಗೆ, ನೀವು ಸರ್ಕಾರಿ ನೌಕರರ ಸ್ವಾಭಿಮಾನದ ಬಗ್ಗೆ ಮಾತನಾಡಿದ್ದೀರಿ. ರಾಜ್ಯದ 6 ಲಕ್ಷ ಸರ್ಕಾರಿ ನೌಕರರಲ್ಲಿ ಕನಿಷ್ಠ ನಾಲ್ಕೈದು ಲಕ್ಷ ಸರ್ಕಾರಿ ನೌಕರರು ಈಗಲೂ ಸ್ವಾಭಿಮಾನ ಮತ್ತು ಘನತೆಯಿಂದ ಬದುಕುತ್ತಿದ್ದಾರೆ. ಯಾಕೆಂದರೆ ಅವರ ಇಲಾಖೆಗಳಲ್ಲಿ ಭ್ರಷ್ಟಾಚಾರ ಮತ್ತು ಲಂಚಕ್ಕೆ ಅವಕಾಶ ಬಹಳ ಕಡಿಮೆ ಇರುತ್ತದೆ. ಲಂಚಗುಳಿತನ ಮತ್ತು ಅಕ್ರಮಗಳಿಗೆ ಅಪಾರ ಅವಕಾಶ ಇರುವ ಕಂದಾಯ ಇಲಾಖೆ, ಪೊಲೀಸ್ ಇಲಾಖೆ, RDPR ಇಲಾಖೆ, ಅಬಕಾರಿ ಇಲಾಖೆ, ಕೃಷಿ ಇಲಾಖೆಯಂತಹ ಕೆಲವೇ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇಲ್ಲಿಯೂ ಎಲ್ಲರೂ ಭ್ರಷ್ಟರಲ್ಲ. ಆದರೆ ಭ್ರಷ್ಟರ ಅಟ್ಟಹಾಸ ಮಾತ್ರ ಮಿತಿಮೀರಿದೆ. ತಮ್ಮ ಹಾಗೆ ಎಲ್ಲರೂ ಪರಮಭ್ರಷ್ಟರೇ ಎನ್ನುವ ಸಾರ್ವತ್ರಿಕ ಭಾವನೆಯನ್ನು ಸೃಷ್ಟಿಸಿರುವುದು ಆ ಅಲ್ಪಸಂಖ್ಯಾತ ಭ್ರಷ್ಟರೇ. ಬಹುಸಂಖ್ಯಾತ ಪ್ರಾಮಾಣಿಕ ನೌಕರರು ಹೆದರುಪುಕ್ಕಲರಾಗಿ ಭ್ರಷ್ಟಾಚಾರ ಬೆಳೆಯಲು ಪರೋಕ್ಷವಾಗಿ ಕಾರಣರಾಗಿದ್ದಾರೆ. ಆ ಕಾರಣದಿಂದಾಗಿಯೇ ಅವರೂ ಆರೋಪಗಳಿಗೆ ಗುರಿಯಾಗುತ್ತಿದ್ದಾರೆ.

    ಅಂದಹಾಗೆ, ಸ್ವಾಭಿಮಾನ ಇರುವ ಯಾವುದೇ ನೌಕರ ಭ್ರಷ್ಟ ಅಥವಾ ಲಂಚಕೋರ ಆಗಲು ಸಾಧ್ಯವಿಲ್ಲ. ಹಾಗಾಗಿ ಭ್ರಷ್ಟರನ್ನು ಮತ್ತು ಲಂಚಕೋರರನ್ನು ಪ್ರಶ್ನಿಸಿದಾಗ ಮಾನಧನರೇ ಅಲ್ಲದ ಅವರ ಯಾವ ರೀತಿಯ ಸ್ವಾಭಿಮಾನಕ್ಕೆ ಧಕ್ಕೆ ಆಗುತ್ತದೆ? ಇದನ್ನೂ ಓದಿ: ಚಾಮುಂಡೇಶ್ವರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ- ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟನೆ

    ನೀವು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ. ಇಂದು ಸರ್ಕಾರಿ ನೌಕರರ ಘನತೆಗೆ ಹೆಚ್ಚು ಚ್ಯುತಿ ಬಂದಿರುವುದು ಈಗಾಗಲೇ ಹೇಳಿದಂತೆ ನಿಮ್ಮಲ್ಲಿಯ ಕೆಲವರು ಮಾಡುವ ಭ್ರಷ್ಟಾಚಾರ, ಲಂಚಕೋರತನ, ಕರ್ತವ್ಯಲೋಪ, ಸಾರ್ವಜನಿಕರೊಂದಿಗಿನ ದುರ್ನಡತೆ ಮುಂತಾದ ಅವಗುಣಗಳ ಕಾರಣಕ್ಕೆ. ಸರ್ಕಾರಿ ನೌಕರರಿಗೆ ತಕ್ಕುದಲ್ಲದ ನಡವಳಿಕೆಯ ಕಾರಣಕ್ಕೆ. ಸಮಾಜದಲ್ಲಿ ಸರ್ಕಾರಿ ನೌಕರರ ಘನತೆ ಮತ್ತು ಗೌರವ ಹೆಚ್ಚಾಗಬೇಕು ಎಂದರೆ ಅವರು ತಮ್ಮ ದುರ್ನಡತೆ, ದುಷ್ಕೃತ್ಯ, ಅಕ್ರಮ ಮತ್ತು ಕಾನೂನುಬಾಹಿರ ಕೆಲಸಗಳನ್ನು ನಿಲ್ಲಿಸಬೇಕು. ಜನರ ವಿಶ್ವಾಸ ಪಡೆಯಬೇಕು.

    ಹಾಗಾಗಿ ನೀವು ಸರ್ಕಾರಿ ನೌಕರರ ಯಾವುದೇ ಸಭೆಯಲ್ಲಿ ನಿಮ್ಮ ಸಹನೌಕರರಿಗೆ ಅವರು “ಯಾವುದೇ ಕಾರಣಕ್ಕೂ ಲಂಚ ತೆಗೆದುಕೊಳ್ಳಬಾರದು, ಅಕ್ರಮಗಳನ್ನು ಮಾಡಬಾರದು, ಸಾರ್ವಜನಿಕರನ್ನು ವಿನಾಕಾರಣ ಸತಾಯಿಸಬಾರದು, ಅವರೊಂದಿಗೆ ಸೌಜನ್ಯ ಮತ್ತು ಗೌರವದಿಂದ ನಡೆದುಕೊಳ್ಳಬೇಕು” ಎಂದು ಎಂದಾದರೂ ಹೇಳಿದ್ದೀರಾ? ಇಲ್ಲವಾದಲ್ಲಿ ನೀವು ಎಂತಹ ನೌಕರರ ಸಂಘದ ಅಧ್ಯಕ್ಷ? ನಿಮ್ಮ ಸಂಘದ ಲಕ್ಷಾಂತರ ಸದಸ್ಯರ ಗೌರವ ಮತ್ತು ಘನತೆಯನ್ನು ನೀವು ಇನ್ಯಾವ ರೀತಿ ಕಾಪಾಡುತ್ತೀರಿ, ಹೆಚ್ಚಿಸುತ್ತೀರಿ?

    ಬಹುಶಃ, ಮೊನ್ನೆ ಮಾಡಿದ ರೀತಿಯಲ್ಲಿಯೇ ಇರಬೇಕು. ಒಬ್ಬ ಸುಳ್ಳುಗಾರ ಮತ್ತು ಅದಕ್ಷ ಮುಖ್ಯಮಂತ್ರಿಯ ಜೊತೆ ಕಾರಿನಲ್ಲಿ ಖಾಸಗಿಯಾಗಿ ಕುಳಿತು ಅವರಿಂದ ಹೀನ ಮತ್ತು ಜನದ್ರೋಹಿ ಆದೇಶ ಹೊರಡಿಸುವಂತೆ ಮಾಡುವ ಮೂಲಕ ಅಲ್ಲವೇ? ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಫೋಟೋ/ವೀಡಿಯೋ ತೆಗೆಯಬಾರದು ಎಂದು ಸರ್ಕಾರ ಆದೇಶ ಹೊರಡಿಸಿದ ನಂತರ ನಡೆದ ಕ್ಷಿಪ್ರ ಬೆಳವಣಿಗೆಯಲ್ಲಿ ರಾಜ್ಯದ ಸರ್ಕಾರಿ ನೌಕರರ ಮಾನ ಮತ್ತು ಮರ್ಯಾದೆ ಯಾವ ರೀತಿ ಹರಾಜು ಆಗಿದೆ ಎಂದು ನಿಮಗೆ ಗೊತ್ತಿದೆಯೇ?

    ಈ ವಿಷಯದಲ್ಲಿ ನಿಮ್ಮ ದುರಾಲೋಚನೆ ಮತ್ತು ಅಹಂಕಾರದ ಏಕೈಕ ಕಾರಣದಿಂದಾಗಿ ತಮಗಾಗಿರುವ ಮಾನಹಾನಿ ಕುರಿತು ಸರ್ಕಾರಿ ನೌಕರರು ಇಷ್ಟೊತ್ತಿಗೆ ನಿಮ್ಮಿಂದ ರಾಜೀನಾಮೆ ಪಡೆಯಬೇಕಿತ್ತು. ಆದರೆ ಅದನ್ನು ಮಾಡದ ಅವರ ಮೌನವೂ ಸಹ ಸರ್ಕಾರಿ ನೌಕರರು ಈಗ ಯಾವ ಮನಸ್ಥಿತಿಗೆ ತಲುಪಿದ್ದಾರೆ ಎನ್ನುವುದನ್ನು ಸೂಚಿಸುತ್ತದೆ. ಇದು ದುರಂತ.

    ನಮಗೆ ತಿಳಿದು ಬಂದಿರುವ ಹಾಗೆ, ನೀವೂ ಸೇರಿದಂತೆ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಾಗಿರುವ ಅನೇಕರು ಸರ್ಕಾರದಲ್ಲಿ ತಮಗೆ ಕೊಟ್ಟಿರುವ ಕೆಲಸ ಮಾಡುವುದನ್ನು ಬಿಟ್ಟು ಇತರೆ ನೌಕರರ ವರ್ಗಾವಣೆ ಮಾಡಿಸುವುದು, ಭ್ರಷ್ಟರನ್ನು ಕಾನೂನಿನ ಪ್ರಕ್ರಿಯೆಗಳಿಂದ ರಕ್ಷಿಸುವುದು, ಕೆಲವು ಭ್ರಷ್ಟ ರಾಜಕಾರಣಿಗಳ ಚೇಲಾಗಳಾಗಿ ವರ್ತಿಸುವುದು, ತಮ್ಮ ಮಾತು ಒಪ್ಪದ ಇತರೆ ಪ್ರಾಮಾಣಿಕ ಸರ್ಕಾರಿ ನೌಕರರ ಮೇಲೆ ದಬ್ಬಾಳಿಕೆ ಮಾಡುವುದೂ ಸೇರಿದಂತೆ ಹಲವು ಕುಕೃತ್ಯ ಮತ್ತು ಸರ್ಕಾರಿ ನೌಕರರಿಗೆ ತಕ್ಕುದಲ್ಲದ ನಡವಳಿಕೆಯಲ್ಲಿ ತೊಡಗಿರುವ ಕುರಿತು ಆರೋಪಗಳಿವೆ. ನೀವಂತೂ KAS/IAS/IPS ಅಧಿಕಾರಿಗಳನ್ನೂ ವರ್ಗಾವಣೆ ಮಾಡಿಸುವಷ್ಟು ಪ್ರಭಾವಶಾಲಿ ಎನ್ನುತ್ತಾರೆ. ನಿಮ್ಮಂತಹವರ ಇಂತಹ ಅನುಚಿತ ಮತ್ತು ವ್ಯಾಪ್ತಿ ಮೀರಿದ ನಡವಳಿಕೆಯೂ ಇವತ್ತಿನ ದುರಾಡಳಿತಕ್ಕೆ ತನ್ನದೇ ಆದ ಕೆಟ್ಟ ಕೊಡುಗೆ ನೀಡಿದೆ.

    ಅಂದಹಾಗೆ, ನೀವು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು. ಸಂಘದ ಕೆಲಸ ಕಾರ್ಯಗಳನ್ನು ಕಚೇರಿಯ ಅವಧಿಯ ನಂತರ ಮಾಡಬೇಕೇ ವಿನಃ ದಿನಪೂರ್ತಿ ಅದನ್ನೇ ಮಾಡುವಂತಿಲ್ಲ. ಆ ರೀತಿಯ ವಿಶೇಷ ಹಕ್ಕುಗಳು ನೌಕರರ ಸಂಘದ ಪದಾಧಿಕಾರಿಗಳಿಗೆ ಇಲ್ಲ. ಯಾವ ಕೆಲಸಕ್ಕಾಗಿ ನಿಮಗೆ ಜನರ ತೆರಿಗೆಯ ಹಣವನ್ನು ಸರ್ಕಾರ ಸಂಬಳವಾಗಿ ನೀಡುತ್ತಿದೆಯೋ, ಅದನ್ನು ಮಾಡಿಯೇ ನೀವು ಇತರೆ ಖಾಸಗಿ ಕೆಲಸಗಳನ್ನು ಮಾಡಬೇಕು. ಆದರೆ ನೀವು ನಿಮ್ಮ ದುಷ್ಪ್ರಭಾವ ಬಳಸಿ ನಿಮ್ಮ ಅಧಿಕೃತ ಸರ್ಕಾರಿ ಕೆಲಸವನ್ನೇ ಮಾಡುತ್ತಿಲ್ಲ ಎನ್ನುವ ಮಾಹಿತಿ ಬಂದಿದೆ.

    ಇದೆಲ್ಲವೂ ಭ್ರಷ್ಟ J.C.B ಪಕ್ಷಗಳ ಕಾಲದಲ್ಲಿ ನಡೆಯುತ್ತಿತ್ತು. ಈಗ ಜನ ಎಚ್ಚತ್ತಿದ್ದಾರೆ. KRS ಪಕ್ಷದ ನಿರಂತರ ಹೋರಾಟದ ಕಾರಣಕ್ಕೆ ಇಂದು ರಾಜ್ಯದ ಲಕ್ಷಾಂತರ ಜನಸಾಮಾನ್ಯರಲ್ಲಿ ನವಚೈತನ್ಯ ಸಂಚರಿಸುತ್ತಿದೆ. ಅನ್ಯಾಯವನ್ನು ಸಾರ್ವಜನಿಕವಾಗಿ ಪ್ರಶ್ನಿಸುವ ಸ್ಥೈರ್ಯ ಬೆಳೆಸಿಕೊಂಡಿದ್ದಾರೆ. ಹಾಗಾಗಿ ನೀವೂ ಸೇರಿದಂತೆ ಯಾವೆಲ್ಲಾ ಸರ್ಕಾರಿ ನೌಕರರು ತಮ್ಮ ನಿಯೋಜಿತ ಸ್ಥಾನದಲ್ಲಿ ಕರ್ತವ್ಯ ನಿರ್ವಹಣೆ ಮಾಡುವುದನ್ನು ಬಿಟ್ಟು ರಾಜಕಾರಣಿಗಳ ಹಾಗೆ ಊರೂರು ಸುತ್ತಿ ಸರ್ಕಾರಿ ನೌಕರರ ದಾರಿ ತಪ್ಪಿಸುವ ಕೆಲಸವನ್ನು ಮಾಡುತ್ತಿದ್ದೀರೋ, ಅದೆಲ್ಲವೂ ಈ ಕೂಡಲೇ ಬಂದ್ ಆಗಬೇಕು. ಇದನ್ನೂ ಓದಿ: ಉಕ್ಕಿ ಹರಿಯುವ ತುಂಗಭದ್ರಾ ನದಿಯಲ್ಲಿ ಪ್ರವಾಸಿಗರ ಮೋಜುಮಸ್ತಿ – ಮಿತಿಮೀರಿದ ಹುಚ್ಚಾಟ

    ಇನ್ನು, ನೀವು ಮಾಡಿದ್ದೀರಿ ಎನ್ನಲಾದ ಹಲವು ಕುಕೃತ್ಯಗಳು ಮತ್ತು ಅಕ್ರಮ ಆಸ್ತಿಯ ಬಗ್ಗೆ ನಮಗೆ ಶಿವಮೊಗ್ಗ ಜಿಲ್ಲೆಯ ಹಲವರು ಕೆಲವು ವಿವರಗಳ ಸಹಿತ ಮಾಹಿತಿ ನೀಡಿದ್ದಾರೆ. ಮೇಲ್ನೋಟಕ್ಕೆ ಇವೆಲ್ಲವೂ ಗಂಭೀರ ಆರೋಪಗಳು. ಈ ವಿಚಾರದಲ್ಲಿ ಏನೆಲ್ಲಾ ಕಾನೂನು ಕ್ರಮಗಳನ್ನು ಜರುಗಿಸಬೇಕೋ ಅದನ್ನು ನಾವು ಶೀಘ್ರದಲ್ಲಿಯೇ ಜರುಗಿಸಲಿದ್ದೇವೆ.

    ಅದರ ಜೊತೆಗೆ, ನೀವು ಯಾವ ಹುದ್ದೆಯಲ್ಲಿ ಮತ್ತು ಸ್ಥಳದಲ್ಲಿ ಕೆಲಸ ಮಾಡುತ್ತಿದ್ದೀರೋ ಅದೇ ಸ್ಥಳಕ್ಕೆ ಇಷ್ಟರಲ್ಲಿಯೇ KRS ಪಕ್ಷದ ನಿಯೋಗ ಭೇಟಿ ನೀಡಿ, ನಿಮ್ಮ ಅನುಚಿತ ವರ್ತನೆ, ಕೆಲಸದ ಸ್ಥಳದಲ್ಲಿ ಗೈರು ಹಾಜರಿ, ಕರ್ತವ್ಯಲೋಪ ಮುಂತಾದ ವಿಚಾರಗಳ ಕುರಿತು ನಿಮ್ಮ ಮೇಲಧಿಕಾರಿಗೆ ದೂರು ನೀಡಲಿದೆ. ಲೋಕಾಯುಕ್ತದ ಗಮನಕ್ಕೂ ತರಲಿದೆ.

    ಸಂಬಳ ನನ್ನ ಹಕ್ಕು, ಗಿಂಬಳ ನನ್ನ ತಾಕತ್ತು, ಕೆಲಸ ನನ್ನ ಮರ್ಜಿ ಎನ್ನುವ ಮನಸ್ಥಿತಿಯ ಕೆಲವು ಭ್ರಷ್ಟ ಸರ್ಕಾರಿ ನೌಕರರಿಗೆ ಅವರ ನೈಜ ಕರ್ತವ್ಯವನ್ನು ನೆನಪಿಸುವ ಕೆಲಸವನ್ನು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ನಿರಂತರವಾಗಿ ಮಾಡುತ್ತಾ ಬಂದಿದೆ. ಆ ಮೂಲಕ ಲಂಚ ಮುಕ್ತ ಕರ್ನಾಟಕ, ಬಸವಣ್ಣನ ಕಲ್ಯಾಣ ಕರ್ನಾಟಕ, ಕುವೆಂಪುರ ಸರ್ವೋದಯ ಕರ್ನಾಟಕವನ್ನು ಕಟ್ಟಲು ಕಟಿಬದ್ಧವಾಗಿದೆ. ಆ ಹಾದಿಯಲ್ಲಿ ಎದುರಾಗುವ ಎಂತಹ ದುಷ್ಟಶಕ್ತಿಗಳನ್ನೂ ಜನ ಬಲ ಮತ್ತು ಸಂಘ ಬಲದಿಂದ KRS ಪಕ್ಷ ಮೆಟ್ಟಿ ನಿಲ್ಲುತ್ತದೆ. ಇದು ಸತ್ಯ ಮತ್ತು ವಾಸ್ತವ.

    ಇದನ್ನು ನೀವೂ ಸೇರಿದಂತೆ ಕರ್ನಾಟಕ ಸರ್ಕಾರಿ ನೌಕರರ ಸಂಘದ ಎಲ್ಲಾ ಪದಾಧಿಕಾರಿಗಳು ನೆನಪಿಡಬೇಕು. ನಾಡು ಕಟ್ಟುವ ಕೆಲಸದಲ್ಲಿ ಪ್ರಾಮಾಣಿಕ ನೌಕರರು ನಮ್ಮೊಡನೆ ಕೈಜೋಡಿಸಬೇಕು ಎಂದು ಮನವಿ ಮಾಡುತ್ತೇವೆ. ಇದೆಲ್ಲವನ್ನೂ ನಾನು ಕರುನಾಡಿನ ಹಿತದೃಷ್ಟಿಯಿಂದ ಹೇಳಿದ್ದೇನೆ. ನೀವೂ ಸೇರಿದಂತೆ ರಾಜ್ಯದ ಎಲ್ಲಾ ಸರ್ಕಾರಿ ನೌಕರರು ಇದನ್ನು ಸಕಾರಾತ್ಮಕವಾಗಿ ಸ್ವೀಕರಿಸುತ್ತಾರೆ ಎನ್ನುವ ವಿಶ್ವಾಸ ನನಗಿದೆ.

    ಏನೇ ಆಗಲಿ, ಒಳ್ಳೆಯದನ್ನೇ ಮಾಡಿ; ಮಾಡುತ್ತಲೇ ಇರಿ. ಶುಭವಾಗಲಿ ಎಂದು ರವಿ ಕೃಷ್ಣಾರೆಡ್ಡಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವಿದೇಶದಲ್ಲಿ ಭಾರೀ ಹೂಡಿಕೆ – ಜಾರ್ಜ್ ವಿರುದ್ಧ ತನಿಖೆ ಆರಂಭಿಸಿದ ಇಡಿ

    ವಿದೇಶದಲ್ಲಿ ಭಾರೀ ಹೂಡಿಕೆ – ಜಾರ್ಜ್ ವಿರುದ್ಧ ತನಿಖೆ ಆರಂಭಿಸಿದ ಇಡಿ

    ಬೆಂಗಳೂರು: ವಿದೇಶದಲ್ಲಿ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೆಜೆ ಜಾರ್ಜ್ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ತನಿಖೆ ಆರಂಭಿಸಿದೆ.

    ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ(ಫೇಮಾ) ಅಡಿ ಇಡಿ ಪ್ರಕರಣ ದಾಖಲಿಸಿದ್ದು, ಈಗ ಜಾರ್ಜ್ ಹೊಂದಿರುವ ಆಸ್ತಿಯ ಅಧಿಕೃತ ಮಾಹಿತಿಯನ್ನು ಅಧಿಕಾರಿಗಳು ಸಂಗ್ರಹಿಸುತ್ತಿದ್ದಾರೆ. ಜಾರ್ಜ್ ಅವರು 1985 ರಿಂದ 2019ರವರೆಗೆ ವಿಧಾನಸಭೆಗೆ ಆಯ್ಕೆ ಆಗಿದ್ದಾರೆ. ಹೀಗಾಗಿ ವಿಧಾನಸಭೆಗೆ ಆಯ್ಕೆಯಾದ ವರ್ಷದಿಂದ ಇಲ್ಲಿಯವರೆಗೆ ಲೋಕಾಯುಕ್ತದಲ್ಲಿ ಜಾರ್ಜ್ ಘೋಷಿಸಿಕೊಂಡಿರುವ ಆಸ್ತಿಯ ವಿವರವನ್ನು ಆಧಾರವಾಗಿಟ್ಟುಕೊಂಡು ತನಿಖೆ ಆರಂಭಿಸಲಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಲೋಕಾಯುಕ್ತದಲ್ಲಿ ಜಾರ್ಜ್ ಘೋಷಿಸಿಕೊಂಡಿರುವ ಆಸ್ತಿ ವಿವರಗಳನ್ನು ಇಡಿ ಈಗಾಗಲೇ ಪಡೆದುಕೊಂಡಿದೆ.

    ಜಾರ್ಜ್ ಅಥವಾ ಅವರ ಕುಟುಂಬ ಸದಸ್ಯರು, ಜಾರ್ಜ್ ಗೆ ಸಂಬಂಧಿಸಿದ ವ್ಯವಹಾರಗಳ ಜೊತೆ ಪಾಲುದಾರಿಕೆ ಹೊಂದಿರುವವರ ವಿಚಾರಣಾ ವರದಿಗಳಿದ್ದರೆ ಅವುಗಳನ್ನೂ ನೀಡುವಂತೆ ಇಡಿ ಲೋಕಾಯುಕ್ತಕ್ಕೆ ಪತ್ರ ಬರೆದಿದೆ.

    ಅಮೆರಿಕದ ನ್ಯೂಯಾರ್ಕಿನಲ್ಲಿ ಜಾರ್ಜ್ ಭಾರಿಪ್ರಮಾಣದ ಆಸ್ತಿ ಹೊಂದಿದ್ದಾರೆ. ಜಾರ್ಜ್ ಅವರ ಮಗಳು ರೇನಿತಾ ಅಬ್ರಹಾಂ ಮತ್ತು ಅಳಿಯ ಕೆವಿನ್ ಅಬ್ರಹಾಂ ನ್ಯೂಯಾರ್ಕಿನಲ್ಲಿದ್ದು, ಈ ಆಸ್ತಿಗಳ ಮೌಲ್ಯ ಹತ್ತಾರು ಕೋಟಿಯಾಗಿದ್ದು ಇದು ಜಾರ್ಜ್ ಅವರಿಗೆ ಸೇರಿದೆ. ನ್ಯೂಯಾರ್ಕ್‍ನ ಮ್ಯಾನ್ ಹಟನ್‍ನ ಲಫಯೇಟ್ ಸ್ಟ್ರೀಟ್‍ನಲ್ಲಿರುವ ಕೆಲವು ಆಸ್ತಿಗಳೂ ಸೇರಿದಂತೆ ಅನೇಕ ಆಸ್ತಿಗಳನ್ನು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

    ಆರೋಪ ಏನು?
    ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕೆ.ಜೆ.ಜಾರ್ಜ್ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದರು. ಅಕ್ರಮವಾಗಿ ಹಣ ವರ್ಗಾವಣೆ, ವಿದೇಶದಲ್ಲಿ ಆಸ್ತಿ, ಆಸ್ತಿ ವಿವರ ಘೋಷಣಾ ಪತ್ರದಲ್ಲಿ ಈ ಕುರಿತು ಮುಚ್ಚಿಟ್ಟಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರವಿ ಕೃಷ್ಣಾರೆಡ್ಡಿ ಮತ್ತು ಪ್ರಧಾನ ಕಾರ್ಯದರ್ಶಿ ದೀಪಕ್ ಅವರು ಅಗಸ್ಟ್ ತಿಂಗಳಿನಲ್ಲಿ ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದರು.

    ಈ ಕುರಿತು ಪ್ರತಿಕ್ರಿಯಿಸಿರುವ ರವಿ ಕೃಷ್ಣಾರೆಡ್ಡಿ, ಪ್ರಮುಖ ರಾಜಕೀಯ ನಾಯಕರು ತಮ್ಮ ಶಕ್ತಿ ಬಳಸಿ ಹಣ ಸಂಪಾದನೆ ಮಾಡುತ್ತಿದ್ದಾರೆ. ಈಗ ಇಡಿ ವಶದಲ್ಲಿರುವ ಡಿ.ಕೆ.ಶಿವಕುಮಾರ್ ಮೇಲೆ ಸಹ ಈ ಬಗ್ಗೆ ನಾವು ಇಡಿಗೆ ದೂರು ನೀಡಿದ್ದೆವು. ಎರಡು ವರ್ಷದ ಹಿಂದೆಯೇ ದೂರು ನೀಡಿದ್ದೆವು ಆದರೆ, ನಿಧಾನವಾಗಿ ತನಿಖೆ ನಡೆಸಿ ಇಡಿ ಕ್ರಮ ಕೈಗೊಂಡಿದೆ. ಇಂದೂ ಸಹ ಅನೇಕ ಮಂತ್ರಿಗಳ ಮಕ್ಕಳ ಹೆಸರಲ್ಲಿ ನೂರಾರು ಕೋಟಿ ರೂ. ಆಸ್ತಿ ಇದೆ. ಕುಮಾರಸ್ವಾಮಿ, ಸಿದ್ದರಾಮಯ್ಯ ಹಾಗೂ ಯಡಿಯೂರಪ್ಪ ಸೇರಿದಂತೆ ವಿವಿಧ ನಾಯಕರ ಮಕ್ಕಳ ಹೆಸರಿನಲ್ಲಿ ಬೇನಾಮಿ ಆಸ್ತಿಗಳಿವೆ ಎಂದು ಆರೋಪಿಸಿದ್ದರು.

    ಕೇರಳದಿಂದ ಕೊಡಗಿಗೆ ಬಂದು, ಸಣ್ಣ ಪುಟ್ಟ ಟಿಂಬರ್ ಕೆಲಸ ಮಾಡಿಕೊಂಡಿದ್ದ ಜಾರ್ಜ್ ನಂತರ ರಾಜಕಾರಣ ಮಾಡಿಕೊಂಡು ಬೆಂಗಳೂರಿಗೆ ಬಂದು ಇಷ್ಟೆಲ್ಲ ಆಸ್ತಿ ಸಂಪಾದಿಸಿದ್ದಾರೆ. ಕೆ.ಜೆ.ಜಾರ್ಜ್ ಇದೀಗ ಸಾವಿರಾರು ಕೋಟಿ ರೂ.ಗಳ ಆಸ್ತಿಯ ಒಡೆಯ. ಅವರ ಮಗನ ಹೆಸರಿನಲ್ಲಿ  ಬೇನಾಮಿ ಆಸ್ತಿ ಇದೆ. ಮಗಳ ಹೆಸರಿನಲ್ಲಿ ಅಮೆರಿಕದಲ್ಲಿ ಆಸ್ತಿ ಇದೆ. ಲೋಕಾಯುಕ್ತಕ್ಕೆ ಆಸ್ತಿ ಘೋಷಣೆ ಮಾಡುವಾಗ ಸಲ್ಲಿಸಿರುವ ಅಫಿಡೆವಿಟ್‍ನಲ್ಲಿ ಆಸ್ಟ್ರೇಲಿಯಾದಲ್ಲಿ ಆಸ್ತಿ ಇದೆ ಎಂದು ನಮೂದಿಸಿದ್ದಾರೆ. ಆದರೆ, ಚುನಾವಣೆಗೆ ಸ್ಪರ್ಧಿಸುವಾಗ ಈ ಆಸ್ತಿಗಳನ್ನು ಘೋಷಿಸಿಲ್ಲ ಎಂದು ತಿಳಿಸಿದ್ದರು.

    ಜನ ಪ್ರತಿನಿಧಿಗಳು ಸಿಂಗಾಪುರ ಮಾರ್ಗವಾಗಿ ತಮ್ಮ ಎಲ್ಲ ವ್ಯವಹಾರಗಳನ್ನು ನಡೆಸುತ್ತಾರೆ. ಅಮೇರಿಕ, ಮಲೇಷ್ಯಾ, ಸಿಂಗಾಪುರ ಹೋಗುವುದು ಕೇವಲ ಕ್ಯಾಸಿನೋ ಆಡಿ ಮಜಾ ಮಾಡುವುದಕ್ಕಲ್ಲ. ತಮ್ಮ ಆಸ್ತಿಗಳನ್ನು ನಿರ್ವಹಿಸಿಕೊಂಡು ಬರಲು ಹೋಗುತ್ತಾರೆ. ತಾವು ಸಂಪಾದಿಸಿರುವ ಹಣವನ್ನು ಹವಾಲಾ ಮೂಲಕ ವಿದೇಶಗಳಿಗೆ ಸಾಗಿಸುತ್ತಾರೆ. ಹೀಗಾಗಿ ನೀವು ರಾಜಕಾರಣ ಮಾಡಿ ಇಲ್ಲವೇ ಕೈಗಾರಿಕೋದ್ಯಮಿ, ವ್ಯಾಪಾರಸ್ಥರಾಗುವುದು ಒಳ್ಳೆಯದು. ಆದರೆ ಎರಡೂ ಮಾಡುವುದು ಜನದ್ರೋಹದ ಕೆಲಸವಾಗಿದ್ದು ಭ್ರಷ್ಟಾಚಾರಕ್ಕೆ ಎಡೆಮಾಡಿಕೊಡುತ್ತದೆ. ಜನರ ದುಡ್ಡನ್ನು ವೈಯಕ್ತಿಕ ವಿಚಾರಕ್ಕೆ ಬಳಸಿಕೊಳ್ಳಲಾಗುತ್ತದೆ ಎಂದು ದೂರಿದ್ದರು.

  • ವಿದೇಶದಲ್ಲಿ ಭಾರೀ ಆಸ್ತಿ – ಡಿಕೆಶಿ ಆಯ್ತು ಈಗ ಜಾರ್ಜ್ ವಿರುದ್ಧ ಇಡಿಗೆ ದೂರು

    ವಿದೇಶದಲ್ಲಿ ಭಾರೀ ಆಸ್ತಿ – ಡಿಕೆಶಿ ಆಯ್ತು ಈಗ ಜಾರ್ಜ್ ವಿರುದ್ಧ ಇಡಿಗೆ ದೂರು

    ಬೆಂಗಳೂರು: ಮಾಜಿ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರವಿಕೃಷ್ಣಾ ರೆಡ್ಡಿ ಜಾರಿ ನಿರ್ದೇಶನಾಲಯ(ಇಡಿ)ಕ್ಕೆ ದೂರು ನೀಡಿದ್ದಾರೆ.

    ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕೆ.ಜೆ.ಜಾರ್ಜ್ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದರು. ಅಕ್ರಮವಾಗಿ ಹಣ ವರ್ಗಾವಣೆ, ವಿದೇಶದಲ್ಲಿ ಆಸ್ತಿ, ಆಸ್ತಿ ವಿವರ ಘೋಷಣಾ ಪತ್ರದಲ್ಲಿ ಈ ಕುರಿತು ಮುಚ್ಚಿಟ್ಟಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರವಿ ಕೃಷ್ಣಾರೆಡ್ಡಿ ಮತ್ತು ಪ್ರಧಾನ ಕಾರ್ಯದರ್ಶಿ ದೀಪಕ್ ಅವರು ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ರವಿ ಕೃಷ್ಣಾರೆಡ್ಡಿ, ಪ್ರಮುಖ ರಾಜಕೀಯ ನಾಯಕರು ತಮ್ಮ ಶಕ್ತಿ ಬಳಸಿ ಹಣ ಸಂಪಾದನೆ ಮಾಡುತ್ತಿದ್ದಾರೆ. ಈಗ ಇಡಿ ವಶದಲ್ಲಿರುವ ಡಿ.ಕೆ.ಶಿವಕುಮಾರ್ ಮೇಲೆ ಸಹ ಈ ಬಗ್ಗೆ ನಾವು ಇಡಿಗೆ ದೂರು ನೀಡಿದ್ದೆವು. ಎರಡು ವರ್ಷದ ಹಿಂದೆಯೇ ದೂರು ನೀಡಿದ್ದೆವು ಆದರೆ, ನಿಧಾನವಾಗಿ ತನಿಖೆ ನಡೆಸಿ ಇಡಿ ಕ್ರಮ ಕೈಗೊಂಡಿದೆ. ಇಂದೂ ಸಹ ಅನೇಕ ಮಂತ್ರಿಗಳ ಮಕ್ಕಳ ಹೆಸರಲ್ಲಿ ನೂರಾರು ಕೋಟಿ ರೂ. ಆಸ್ತಿ ಇದೆ. ಕುಮಾರಸ್ವಾಮಿ, ಸಿದ್ದರಾಮಯ್ಯ ಹಾಗೂ ಯಡಿಯೂರಪ್ಪ ಸೇರಿದಂತೆ ವಿವಿಧ ನಾಯಕರ ಮಕ್ಕಳ ಹೆಸರಿನಲ್ಲಿ ಬೇನಾಮಿ ಆಸ್ತಿಗಳಿವೆ ಎಂದು ತಿಳಿಸಿದರು.

    ಇಂದು ಕೆ.ಜೆ.ಜಾರ್ಜ್ ವಿರುದ್ಧ ಇಡಿಗೆ ದೂರು ನೀಡಲು ಬಂದಿದ್ದೇವೆ. ಕೇರಳದಿಂದ ಕೊಡಗಿಗೆ ಬಂದು, ಸಣ್ಣ ಪುಟ್ಟ ಟಿಂಬರ್ ಕೆಲಸ ಮಾಡಿಕೊಂಡಿದ್ದವರು. ನಂತರ ರಾಜಕಾರಣ ಮಾಡಿಕೊಂಡು ಬೆಂಗಳೂರಿಗೆ ಬಂದು ಇಷ್ಟೆಲ್ಲ ಆಸ್ತಿ ಸಂಪಾದಿಸಿದ್ದಾರೆ. ಕೆ.ಜೆ.ಜಾರ್ಜ್, ಇದೀಗ ಸಾವಿರಾರು ಕೋಟಿ ರೂ.ಗಳ ಆಸ್ತಿಯ ಒಡೆಯ. ಅವರ ಮಗನ ಹೆಸರಿನಲ್ಲಿ ಹೆಸರಿನಲ್ಲಿ ಬೇನಾಮಿ ಆಸ್ತಿ ಇದೆ. ಮಗಳ ಹೆಸರಿನಲ್ಲಿ ಅಮೆರಿಕದಲ್ಲಿ ಆಸ್ತಿ ಇದೆ. ಲೋಕಾಯುಕ್ತಕ್ಕೆ ಆಸ್ತಿ ಘೋಷಣೆ ಮಾಡುವಾಗ ಸಲ್ಲಿಸಿರುವ ಅಫಿಡೆವಿಟ್‍ನಲ್ಲಿ ಆಸ್ಟ್ರೇಲಿಯಾದಲ್ಲಿ ಆಸ್ತಿ ಇದೆ ಎಂದು ನಮೂದಿಸಿದ್ದಾರೆ. ಆದರೆ, ಚುನಾವಣೆಗೆ ಸ್ಪರ್ಧಿಸುವಾಗ ಈ ಆಸ್ತಿಗಳನ್ನು ಘೋಷಿಸಿಲ್ಲ ಎಂದು ಆರೋಪಿಸಿದ್ದಾರೆ.

    ಜನ ಪ್ರತಿನಿಧಿಗಳು ಸಿಂಗಪೂರ ಮಾರ್ಗವಾಗಿ ತಮ್ಮ ಎಲ್ಲ ವ್ಯವಹಾರಗಳನ್ನು ನಡೆಸುತ್ತಾರೆ. ಅಮೇರಿಕ, ಮಲೇಷ್ಯಾ, ಸಿಂಗಪೂರಕ್ಕೆ ಹೋಗುವುದು ಕೇವಲ ಕ್ಯಾಸಿನೋ ಆಡಿ ಮಜಾ ಮಾಡುವುದಕ್ಕಲ್ಲ. ತಮ್ಮ ಆಸ್ತಿಗಳನ್ನು ನಿರ್ವಹಿಸಿಕೊಂಡು ಬರಲು ಹೋಗುತ್ತಾರೆ. ತಾವು ಸಂಪಾದಿಸಿರುವ ಹಣವನ್ನು ಹವಾಲಾ ಮೂಲಕ ವಿದೇಶಗಳಿಗೆ ಸಾಗಿಸುತ್ತಾರೆ. ಹೀಗಾಗಿ ನೀವು ರಾಜಕಾರಣ ಮಾಡಿ ಇಲ್ಲವೇ ಕೈಗಾರಿಕೋದ್ಯಮಿ, ವ್ಯಾಪಾರಸ್ಥರಾಗಿ. ಆದರೆ, ಎರಡೂ ಮಾಡುವುದು ಜನದ್ರೋಹದ ಕೆಲಸವಾಗಿದ್ದು ಭ್ರಷ್ಟಾಚಾರಕ್ಕೆ ಎಡೆಮಾಡಿಕೊಡುತ್ತದೆ. ಜನರ ದುಡ್ಡನ್ನು ವೈಯಕ್ತಿಕ ವಿಚಾರಕ್ಕೆ ಬಳಸಿಕೊಳ್ಳುತ್ತೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.