Tag: Ravi Kumar

  • ಶಾಲಿನಿ ರಜನೀಶ್‌ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ರೆ ನೇಣು ಹಾಕಿಕೊಳ್ಳುತ್ತೇನೆ: ರವಿಕುಮಾರ್‌

    ಶಾಲಿನಿ ರಜನೀಶ್‌ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ರೆ ನೇಣು ಹಾಕಿಕೊಳ್ಳುತ್ತೇನೆ: ರವಿಕುಮಾರ್‌

    ಬೆಂಗಳೂರು: ತನ್ನ ವಿರುದ್ಧ ಎಫ್‌ಐಆರ್‌ (FIR) ದಾಖಲಾದ ಬೆನ್ನಲ್ಲೇ ಎನ್ ರವಿಕುಮಾರ್ (Ravikumar) ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ (Shalini Rajneesh) ವಿರುದ್ಧ ನಾನು ಯಾವುದೇ ಅವಹೇಳನಕಾರಿಯಾಗಿ ಹೇಳಿಕೆ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

    ಈ ಸಂಬಂಧ ಪಬ್ಲಿಕ್‌ ಟಿವಿಗೆ ಪ್ರತಿಕ್ರಿಯೆ ನೀಡಿದ ಅವರು, ಶಾಲಿನಿ ರಜನೀಶ್ ಅವರ ಬಗ್ಗೆ ಬಹಳ ಗೌರವ ಇದೆ. ಅವರ ಬಗ್ಗೆ ಯಾವುದೇ ಆಕ್ಷೇಪಾರ್ಹ ಹೇಳಿಕೆ ಕೊಟ್ಟಿಲ್ಲ. ಆಕ್ಷೇಪಾರ್ಹ ಹೇಳಿಕೆ ನೀಡಿದರೆ ನಾನು ನೇಣು ಹಾಕಿಕೊಳ್ಳುತ್ತೇನೆ ಎಂದು ರವಿಕುಮಾರ್ ಹೇಳಿದ್ದಾರೆ. ಇದನ್ನೂ ಓದಿ: ಶಾಲಿನಿ ರಜನೀಶ್‌ ವಿರುದ್ಧ ಅಸಭ್ಯ ಹೇಳಿಕೆ ರವಿಕುಮಾರ್ವಿರುದ್ಧ ಕೇಸ್ದಾಖಲು

     

    ಮುಖ್ಯ ಕಾರ್ಯದರ್ಶಿಯವರು ಅವರು 24 ಗಂಟೆ ಬ್ಯುಸಿ ಇದ್ದಾರೆ. ಹಾಗಾಗಿ ಅವರು ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ ಎಂದೆ. ಹಗಲಲ್ಲಿ ಸಿಎಂ ಕಾರ್ಯಕ್ರಮಗಳಲ್ಲಿ ಭಾಗವಹಿಸ್ತಾರೆ, ರಾತ್ರಿಯೆಲ್ಲ ಸರ್ಕಾರದ ಕೆಲಸ ಮಾಡ್ತಾರೆ ಅಂದೆ. ಇದರೊಳಗೆ ಏನು ತಪ್ಪಿದೆ? ನಾನು ಅವಾಚ್ಯ ಶಬ್ಧ ಬಳಸಿಲ್ಲ ಎಂದು ತಿಳಿಸಿದರು.

    ಅವಾಚ್ಯ ಶಬ್ಧ ಬಳಸಿದರೆ ಕಾಂಗ್ರೆಸ್‌ನವರು ಬಹಿರಂಗಪಡಿಸಲಿ. ನನಗೂ ನನ್ನ ಮನೆಯಲ್ಲಿ ಸಹೋದರಿಯರು ಇದ್ದಾರೆ. ಯಾರ ಜತೆ ಹೇಗೆ ಮಾತನಾಡಬೇಕೆಂಬ ಪರಿಜ್ಞಾನ ಇದೆ. ಮುಖ್ಯ ಕಾರ್ಯದರ್ಶಿಗೆ ಆ ರೀತಿ ಮಾತನಾಡಲು

    ಆತರಹ ಮಾತಾಡಲು ಸಾಧ್ಯಾನಾ? ಯಾರಿಗೇ ಆಗಲೀ ಆಥರ ಮಾತಾಡೋದು ಸಾಧ್ಯನಾ? ಅವಾಚ್ಯ ಶಬ್ಧ ಇದ್ದರೆ ನೇಣು ಹಾಕಿಕೊಳ್ತೇನೆ. ನನ್ನ ವಿರುದ್ಧ ದ್ವೇಷದಿಂದ ಕಾಂಗ್ರೆಸ್‌ನವರು ದೂರು ಕೊಟ್ಟಿದ್ದಾರೆ ಎಂದು ರವಿಕುಮಾರ್ ಸ್ಪಷ್ಟ ಪಡಿಸಿದರು. ಇದನ್ನೂ ಓದಿ: Public TV Explainer | ಕಾಲ್ತುಳಿತ ದುರಂತದ ಬಳಿಕ ಎಚ್ಚೆತ್ತ ಪೊಲೀಸ್ಇಲಾಖೆ ಇನ್ಮುಂದೆ ಸಭೆ, ಸಮಾರಂಭಗಳಿಗೆ ಹೊಸ `SOP’

  • ಶಾಲಿನಿ ರಜನೀಶ್‌ ವಿರುದ್ಧ ಅಸಭ್ಯ ಹೇಳಿಕೆ – ರವಿಕುಮಾರ್‌ ವಿರುದ್ಧ ಕೇಸ್‌ ದಾಖಲು

    ಶಾಲಿನಿ ರಜನೀಶ್‌ ವಿರುದ್ಧ ಅಸಭ್ಯ ಹೇಳಿಕೆ – ರವಿಕುಮಾರ್‌ ವಿರುದ್ಧ ಕೇಸ್‌ ದಾಖಲು

    ಬೆಂಗಳೂರು: ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ (Shalini Rajneesh) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಬಿಜೆಪಿ ಪರಿಷತ್‌ ಸದಸ್ಯ ರವಿಕುಮಾರ್‌ (BJP MLC Ravikumar) ವಿರುದ್ಧ ವಿಧಾನಸೌದ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

    ಜೆಪಿನಗರದ ನಿವಾಸಿಯಾಗಿರುವ ನಂದಾದೀಪಾ ಮಹಿಳಾ ಸಂಘದ ಅಧ್ಯಕ್ಷೆ ನಾಗರತ್ನ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಬಿಎನ್‌ಎಸ್‌ ಸೆಕ್ಷನ್‌ 351(3)(ಅನೈತಿಕತೆಯ ಆರೋಪ), 75(3) (ಅಶ್ಲೀಲ ಹೇಳಿಕೆ), 79(ಮಹಿಳೆಯ ಮಾನಕ್ಕೆ ಕುಂದು ತರುವ ಉದ್ದೇಶದಿಂದ ಪ್ರಯೋಗಿಸಲಾದ ಪದ) ಅಡಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹಾಸನ| ಪತ್ನಿಯನ್ನು ಕೊಂದು ಹೃದಯಾಘಾತವಾಗಿದೆ ಎಂದು ಬಿಂಬಿಸಿದ್ನಾ ಪತಿ?


    ದೂರಿನಲ್ಲಿ ಏನಿದೆ?
    ನಾನು ನಂದಾದೀಪಾ ಮಹಿಳಾ ಸಂಘದ ಅಧ್ಯಕ್ಷಿಯಾಗಿರುತ್ತೇನೆ. ಜುಲೈ 1 ರಂದು ಬಿಜೆಪಿ ನಾಯಕರು ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ ಮಾತನಾಡುತ್ತಿದ್ದರು.

    ಈ ಸಂದರ್ಭದಲ್ಲಿ ರವಿಕುಮಾರ್‌ ಅವರು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶ್ರೀಮತಿ, ಶಾಲಿನಿ ರಜಿನೀಶ್ ಅವರನ್ನು ಅಸಭ್ಯ ರೀತಿಯಲ್ಲಿ “ಅವರು ರಾತ್ರಿ ಸರ್ಕಾರಕ್ಕೆ ಹಗಲು ಸಿಎಂಗೆ ಕೆಲಸ ಮಾಡುತ್ತಾರೆಂದು” ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದು ಟಿವಿಯಲ್ಲಿ ಪ್ರಸಾರವಾಗಿತ್ತು. ಇದನ್ನೂ ಓದಿ: ಎಂಎಲ್‌ಸಿ ರವಿಕುಮಾರ್ ಮೇಲೆ ನಿಯಮಾವಳಿಗಳ ಪ್ರಕಾರ ಕ್ರಮ ಹೊರಟ್ಟಿ

    ಟಿವಿಯಲ್ಲಿ ಬಂದ ಸುದ್ದಿ ನೋಡಿ ನನಗೆ ನೋವುಂಟಾಗಿದ್ದು, ಅವರ ಹೇಳಿಕೆಯು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಆಗೌರವ ತೋರಿದಂತಾಗಿದೆ. ಶಾಲಿನಿ ರಜನೀಶ್ ಅವರ ಗೌರವಕ್ಕೆ ಕುಂದುಂಟು ಮಾಡಿ ಇಡಿ ಮಹಿಳಾ ಕುಲಕ್ಕೆ ಆಗೌರವ ತೋರಿರುತ್ತಾರೆ. ಇವರ ಮಾತು ಲೈಂಗಿಕ ಅರ್ಥ ಬರುವಂತಹ ಹೇಳಿಕೆಯಾಗಿದ್ದು ಮುಖ್ಯ ಕಾರ್ಯದರ್ಶಿರವರ ಖ್ಯಾತಿಗೆ ಹಾನಿ ಉಂಟು ಮಾಡಿದೆ. ರವಿಕುಮಾರ್ ಹೇಳಿಕೆಯಿಂದ ಮಹಿಳೆ ಹಾಗೂ ಮಹಿಳಾ ಸಮಾಜಕ್ಕೂ ಆಗೌರವ ಉಂಟಾಗಿದ್ದು, ಅವರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಬೇಕೆಂದು ಮನವಿ ಮಾಡುತ್ತಿದ್ದೇನೆ.

  • ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ

    ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ

    ಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajanish) ಕುರಿತು ಅವಹೇಳನಕಾರಿ ಹೇಳಿಕೆ ಆರೋಪ ಹೊತ್ತಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ವಿರುದ್ಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebalkar) ಕಿಡಿಕಾರಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಬಿಜೆಪಿ (BJP) ನಾಯಕರಿಂದ ಮಹಿಳೆಯರ ನಿಂದನೆ ನಿರಂತರವಾಗಿ ನಡೆಯುತ್ತಿದೆ. ಓರ್ವ ಹಿರಿಯ ಮಹಿಳಾ ಐಎಎಸ್ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರೀತಿ ಬಿಜೆಪಿ ಎಂಎಲ್‌ಸಿ ಅವರ ಮನಸ್ಥಿತಿ ಎಂಥಹದ್ದು ಎಂದು ತೋರಿಸುತ್ತದೆ. ರವಿಕುಮಾರ್ (Ravi Kumar) ಅವರು ಸಮಸ್ತ ಮಹಿಳಾ ಕುಲಕ್ಕೆ ಮಾಡಿರುವ ಅವಮಾನ ಇದಾಗಿದೆ. ರವಿಕುಮಾರ್ ಅವರ ಹೇಳಿಕೆಯನ್ನು ಕೇಂದ್ರ ಬಿಜೆಪಿ ನಾಯಕರು ಸಮರ್ಥಿಸಿಕೊಳ್ಳುವರೇ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಬಾಬಾನಗರದ ಬಳಿ ಹೊಸ ಕೆರೆ ನಿರ್ಮಿಸಲು 550 ಕೋಟಿ ರೂ. ಅನುದಾನಕ್ಕೆ ಎಂ.ಬಿ ಪಾಟೀಲ್ ಮನವಿ

    ಕಳೆದ ಬೆಳಗಾವಿ ಅಧಿವೇಶನದ ವೇಳೆಯಲ್ಲಿ ಸಿಟಿ ರವಿ ಅವರು ನನ್ನ ಬಗ್ಗೆ ಕೆಟ್ಟದಾಗಿ ಮಾತನಾಡಿದಾಗ ಆ ಪಕ್ಷದ ನಾಯಕರು ಒಂದೂ ಮಾತನಾಡಲಿಲ್ಲ. ಇಂತಹ ನಾಯಕರ ಹೇಳಿಕೆಗಳಿಗೆ ಕೇಂದ್ರದ ನಾಯಕರು ಪರೋಕ್ಷ ಬೆಂಬಲ ನೀಡಿದಂತಿದೆ. ಇದು ಬಿಜೆಪಿ ನಾಯಕರು ಮಹಿಳೆಯರಿಗೆ ಕೊಡುವ ಗೌರವ ಎಂತಹದ್ದು ಎಂಬುದನ್ನು ತೋರಿಸುತ್ತದೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಇಂತಹ ಅವಹೇಳನಕಾರಿ ಪದಗಳನ್ನು ಬಳಸುವ ಬಿಜೆಪಿ ನಾಯಕರಿಗೆ ಬುದ್ಧಿ ಭ್ರಮಣೆಯಾಗಿದೆ ಅನಿಸುತ್ತದೆ. ಇನ್ನು ಮುಂದಾದರೂ ಇಂತಹ ಹೇಳಿಕೆಗಳನ್ನು ನೀಡದೇ ಜವಾಬ್ದಾರಿಯಿಂದ ವರ್ತಿಸಲಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಮೀಕ್ಷೆ ಮಾಡದೇ ಜಾತಿಗಣತಿ ಸ್ಟಿಕ್ಕರ್ ಅಂಟಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ ಕೇಸ್ – ಮೂವರು BBMP ನೌಕರರು ಅಮಾನತು

    ಕ್ಷಮೆಯಾಚನೆಗೆ ಪಟ್ಟು
    ಸಾರ್ವಜನಿಕವಾಗಿ ಮಹಿಳಾ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರವಿಕುಮಾರ್ ಅವರು ಕೂಡಲೇ ಕ್ಷಮೆಯಾಚಿಸಬೇಕು. ತಮ್ಮ ತಪ್ಪನ್ನು ಅರಿವು ಮಾಡಿಕೊಂಡು ಕ್ಷಮೆ ಕೇಳಲಿ, ಇಲ್ಲವಾದರೆ ರವಿಕುಮಾರ್ ಅವರು ಸಾರ್ವಜನಿಕರ ಪ್ರತಿಭಟನೆಯನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

  • ಜೂನ್‌ 6ರ ಒಳಗಡೆ ನಾಗೇಂದ್ರ ರಾಜೀನಾಮೆ ನೀಡದೇ ಇದ್ರೆ ರಾಜ್ಯಾದ್ಯಂತ ಉಗ್ರ ಹೋರಾಟ: ರವಿಕುಮಾರ್‌ ಎಚ್ಚರಿಕೆ

    ಜೂನ್‌ 6ರ ಒಳಗಡೆ ನಾಗೇಂದ್ರ ರಾಜೀನಾಮೆ ನೀಡದೇ ಇದ್ರೆ ರಾಜ್ಯಾದ್ಯಂತ ಉಗ್ರ ಹೋರಾಟ: ರವಿಕುಮಾರ್‌ ಎಚ್ಚರಿಕೆ

    ಬಳ್ಳಾರಿ: ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್‌ 6 ರ ಒಳಗಡೆ ನಾಗೇಂದ್ರ (Nagendra) ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡದೇ ಇದ್ದರೆ ಜೂನ್‌ 7 ರಿಂದ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಬಿಜೆಪಿ (BJP) ಪರಿಷತ್‌ ಸದಸ್ಯ ರವಿಕುಮಾರ್‌ (MLC Ravikumar)s ಎಚ್ಚರಿಕೆ ನೀಡಿದ್ದಾರೆ.

    ಬಳ್ಳಾರಿ ಜಿಲ್ಲೆಯ ಎಲ್ಲಾ ಮಾಜಿ ಶಾಸಕರ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ 224 ಕ್ಷೇತ್ರದಲ್ಲಿ ನಿರಂತರವಾಗಿ ಹೋರಾಟ ಮಾಡುತ್ತೇವೆ. ತನಿಖೆ ನಡೆಯುವ ವೇಳೆ ಸಚಿವರು ತನಿಖಾಧಿಕಾರಿ ಮೇಲೆ ಪ್ರಭಾವ ಬೀರಬಹುದು. ಹೀಗಾಗಿ ನಾಗೇಂದ್ರ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಸರ್ಕಾರ ನಾಶ ಮಾಡೋದಕ್ಕೆ ನನ್ನ, ಸಿಎಂ ಮೇಲೆ ಶತ್ರು ಭೈರವಿ ಯಾಗ ಮಾಡಿಸ್ತಿದ್ದಾರೆ: ಡಿಕೆಶಿ ಬಾಂಬ್

    ಸಾಮಾನ್ಯ ಕ್ರಿಮಿನಲ್ ಕೇಸ್ ಅಲ್ಲ. ಸರ್ಕಾರಿ ಅಧಿಕಾರಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐಟಿ ಕಂಪನಿಗಳಿಗೆ ಹಣ ವರ್ಗಾವಣೆಯಾಗಿದೆ. ಭ್ರಷ್ಟಾಚಾರ ಹೊರಗೆ ತರಲಾಗದೇ ಬೇಸತ್ತು ಚಂದ್ರಶೇಖರನ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದರು.  ಇದನ್ನೂ ಓದಿ: ಡೆತ್‌ನೋಟ್‌ನಲ್ಲಿರುವ ನಾಗರಾಜ್‌ ಜೊತೆ ನಾಗೇಂದ್ರಗೆ ವ್ಯವಹಾರ ಇದೆ: ಸಿಟಿ ರವಿಯಿಂದ ಫೋಟೋ ರಿಲೀಸ್

    ಸರ್ಕಾರದ ಅನೇಕ ಅಧಿಕಾರಿಗಳು ಶಾಮಿಲಾಗಿದ್ದಾರೆ. ಮಂತ್ರಿ ಮತ್ತು ಹಿರಿಯ ಅಧಿಕಾರಿಗಳ ವಿರುದ್ಧ ಧ್ವನಿ ಎತ್ತಲಾಗದೆ ಸಾವನ್ನಪ್ಪಿದ್ದಾರೆ. ಅಧಿಕಾರಿ ಅಸಹಾಯಕತೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೂ ಮೊದಲು ಅಕ್ರಮಕ್ಕೆ ಕಾರಣರಾದ ಅಧಿಕಾರಿಗಳ ಹೆಸರು ಬರೆದಿಟ್ಟಿದ್ದಾರೆ. ಹೀಗಾಗಿ ಪ್ರಕರಣವನ್ನು ಸಿಐಡಿ ತನಿಖೆ ನಡೆಸುವುದು ಬೇಡ . ಸಿಬಿಐಗೆ ಕೇಸ್ ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದರು.

    ತೆಲಂಗಾಣಕ್ಕೆ ಹಣ ವರ್ಗಾವಣೆಯಾಗಿರುವುದು ಸಿಎಂ ಮತ್ತು ಸಚಿವರ ಗಮನಕ್ಕೆ ಇದೆ. ಹಣ ವಾಪಸ್ ಬರಬಹುದು ಆದರೆ ಮೃತ ಚಂದ್ರಶೇಖರನ್‌ ಅವರ ಜೀವ ವಾಪಸ್ ಬರುತ್ತದೆಯೇ? ಪ್ರಿಯಾಂಕ್ ಖರ್ಗೆ ಮತ್ತು ಗೃಹ ಸಚಿವ ಪರಮೇಶ್ವರ್ ಪ್ರಕರಣವನ್ನು ಹಗುರವಾಗಿ ತೆಗೆದುಕೊಂಡಿದ್ದಾರೆ ಎಂದು ಕಿಡಿಕಾರಿದರು.

  • ನಾರಾಯಣಗುರು ಅಭಿವೃದ್ಧಿ ನಿಗಮಕ್ಕೆ 500 ಕೋಟಿ ಅನುದಾನ ಕೊಡಿ: ರವಿಕುಮಾರ್

    ನಾರಾಯಣಗುರು ಅಭಿವೃದ್ಧಿ ನಿಗಮಕ್ಕೆ 500 ಕೋಟಿ ಅನುದಾನ ಕೊಡಿ: ರವಿಕುಮಾರ್

    ಬೆಂಗಳೂರು/ಬೆಳಗಾವಿ: ನಾರಾಯಣಗುರು ಅಭಿವೃದ್ಧಿ ನಿಗಮಕ್ಕೆ ಸಿಎಂ ಸಿದ್ದರಾಮಯ್ಯ ಕೂಡಲೇ 500 ಕೋಟಿ ಅನುದಾನ ಬಿಡುಗಡೆ ಮಾಡಬೇಕು ಅಂತ ಬಿಜೆಪಿ ಸದಸ್ಯ ರವಿಕುಮಾರ್ (Ravi Kumar) ಆಗ್ರಹಿಸಿದ್ದಾರೆ.

    ವಿಧಾನ ಪರಿಷತ್ತಿನ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪ ಮಾಡಿದ ರವಿಕುಮಾರ್, ಬೆಂಗಳೂರಿನಲ್ಲಿ ಈಡಿಗ, ಬಿಲ್ಲವ ಸಮುದಾಯದ ಸಮಾವೇಶ ನಡೆಯಿತು. ಸಿಎಂ ಸಿದ್ದರಾಮಯ್ಯ ಅವರು ನಾರಾಯಣಗುರು ನಿಗಮನಕ್ಕೆ 500 ಕೋಟಿ ಬಿಡುಗಡೆ ಮಾಡಿ ಅಂದರೆ ಅಧಿವೇಶನ ಇದೆ ಅಂತ ಹೇಳಿ ಘೋಷಣೆ ಮಾಡಿರಲಿಲ್ಲ. ಆದರೆ ಹುಬ್ಬಳ್ಳಿಯಲ್ಲಿ ನಡೆದ ಅಲ್ಪಸಂಖ್ಯಾತ ಸಮುದಾಯ ಸಮಾವೇಶದಲ್ಲಿ 10 ಸಾವಿರ ಕೋಟಿ ಕೊಡೋದಾಗಿ ಘೋಷಣೆ ಮಾಡಿದ್ದಾರೆ. ಮುಸ್ಲಿಂ ಸಮುದಾಯಕ್ಕೆ 10 ಸಾವಿರ ಘೋಷಣೆ ಮಾಡಿ ನಾರಾಯಣಗುರು ನಿಗಮಕ್ಕೆ 500 ಕೋಟಿ ಬಿಡುಗಡೆ ಮಾಡದೇ ಹೋದರೆ ಹೇಗೆ ಅಂತ ಪ್ರಶ್ನೆ ಮಾಡಿದರು.

    ಸಿದ್ದರಾಮಯ್ಯ (Siddaramaiah) ಅವರ ಈ ನಡೆ ಹಿಂದುಳಿದ ವರ್ಗಕ್ಕೆ ಮಾಡಿದ ಅಪಮಾನ, ಅನ್ಯಾಯ. ಇಂದು ಅಥವಾ ನಾಳೆ ಒಳಗೆ ಸದನದಲ್ಲಿ ನಾರಾಯಣಗುರು ನಿಗಮಕ್ಕೆ 500 ಕೋಟಿ ಘೋಷಣೆ ಮಾಡಬೇಕು ಅಂತ ಸಿಎಂ ಸಿದ್ದರಾಮಯ್ಯರನ್ನ ರವಿಕುಮಾರ್ ಒತ್ತಾಯ ಮಾಡಿದರು. ರವಿಕುಮಾರ್ ಆಗ್ರಹಕ್ಕೆ ಸಿಎಂ ಸಿದ್ದರಾಮಯ್ಯರಿಂದ ಉತ್ತರ ಕೊಡಿಸುವುದಾಗಿ ಸಭಾನಾಯಕ ಬೋಸರಾಜು ತಿಳಿಸಿದರು. ಇದನ್ನೂ ಓದಿ: ಮೈಸೂರು ಕಾಗದ ಕಾರ್ಖಾನೆ ಮರುಪ್ರಾರಂಭಕ್ಕೆ ಕ್ರಮ: ಎಂಬಿ ಪಾಟೀಲ್

  • ಪರೇಶ್ ಮೇಸ್ತಾದು ಕೊಲೆಯೇ, ಸಿದ್ದು ಸರ್ಕಾರದಿಂದ ಸಾಕ್ಷ್ಯ ನಾಶ: ರವಿಕುಮಾರ್‌ ಕಿಡಿ

    ಪರೇಶ್ ಮೇಸ್ತಾದು ಕೊಲೆಯೇ, ಸಿದ್ದು ಸರ್ಕಾರದಿಂದ ಸಾಕ್ಷ್ಯ ನಾಶ: ರವಿಕುಮಾರ್‌ ಕಿಡಿ

    ಬೆಂಗಳೂರು: ಸಿಬಿಐ(CBI) ವರದಿಯನ್ನು ನಾವು ಒಪ್ಪುವುದಿಲ್ಲ. ಪರೇಶ್ ಮೇಸ್ತಾದು(Paresh Mesta) ಕೊಲೆಯೇ. ಇವತ್ತು ಏನಾದ್ರು ಸಾಕ್ಷಿ ಸಿಗದಿದ್ದರೆ ಅದಕ್ಕೆ ಸಿದ್ದರಾಮಯ್ಯ(Siddaramaiah) ಸರ್ಕಾರವೇ ಕಾರಣ ಎಂದು ಬಿಜೆಪಿಯ(BJP) ಪರಿಷತ್‌ ಸದಸ್ಯ, ಪ್ರಧಾನ ಕಾರ್ಯದರ್ಶಿ ರವಿಕುಮಾರ್‌(Ravi Kumar) ಕಿಡಿಕಾರಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಾಕ್ಷಿ ನಾಶ ಮಾಡಿದ್ದು ಹಾಗೂ ಪಿಎಫ್‌ಐ ಪೋಷಣೆ ಮಾಡಿದ್ದಕ್ಕೆ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ವಿಧಾನಸಭೆ ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಕಾಂಗ್ರೆಸ್‌ನವರು ಹೇಳುವುದೆಲ್ಲ ಸತ್ಯ ಅಲ್ಲ ಎಂದು ಸಿದ್ದರಾಮಯ್ಯ ಆರೋಪಕ್ಕೆ ತಿರುಗೇಟು ನೀಡಿದರು. ಇದನ್ನೂ ಓದಿ: ಬಿಜೆಪಿ ಗೆದ್ದಿರೋ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್‍ನಂತಹ ಅಮಾಯಕರ ರಕ್ತ ಇದೆ: ಸಿದ್ದರಾಮಯ್ಯ

    ಮಗನನ್ನು ಕೊಲೆ ಮಾಡಲಾಗಿದೆ ಎಂದು ಪರೇಶ್ ಮೇಸ್ತಾ ತಂದೆಯೇ ಹೇಳಿದ್ದಾರೆ. ಇಡೀ ರಾಜ್ಯದ ಜನ ಇದು ಕೊಲೆ ಅಂತ ಹೇಳುತ್ತಿದ್ದಾರೆ. ನಾವು ಸಿಬಿಐ ವರದಿಯನ್ನು ಒಪ್ಪುವುದಿಲ್ಲ. ಸಂಪೂರ್ಣ ವರದಿ ಬಂದ ಮೇಲೆ ನಾವು ಏನು ಮಾಡಬೇಕು ಅಂತ ತೀರ್ಮಾನ ಮಾಡುತ್ತೇವೆ ಎಂದರು. ಇದನ್ನೂ ಓದಿ: ಪರೇಶ್ ಮೇಸ್ತಾ ಹತ್ಯೆಯಲ್ಲ, ಅದು ಆಕಸ್ಮಿಕ ಸಾವು – ಸಿಬಿಐ ವರದಿ ಸಲ್ಲಿಕೆ

    ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅರೆಸ್ಟ್ ಆಗಿದ್ದರು. ವಿನಯ್ ಕುಲಕರ್ಣಿ ಯಾರು? ರುದ್ರೇಶ್ ಸೇರಿದಂತೆ 30 ಹಿಂದೂ ಕಾರ್ಯಕರ್ತರ ಕೊಲೆ ಆಯ್ತು. ಈ ಕೊಲೆಗಳಿಗೆ ಕಾಂಗ್ರೆಸ್‌ ಕಾರಣ. ಪಿಎಫ್‌ಐ ಸೇರಿದಂತೆ ಅನೇಕ ಸಂಘಟನೆಗಳ ಪರ ಕಾಂಗ್ರೆಸ್ ಸರ್ಕಾರ ಇತ್ತು. ಸಿದ್ದರಾಮಯ್ಯ ಸರ್ಕಾರ ಯಾವ ಆಧಾರದಲ್ಲಿ ಪಿಎಫ್‌ಐ ಕೇಸ್ ವಾಪಸ್‌ ಪಡೆದರು ಎಂದು ಪ್ರಶ್ನೆ ಮಾಡಿದರು.

    ಡಿವೈಎಸ್‌ಪಿ ಗಣಪತಿ ಹತ್ಯೆಗೆ ಕೆಜೆ ಜಾರ್ಜ್ ಕಾರಣ. ಆದರೆ ಅಂದು ಅಧಿಕಾರದಲ್ಲಿದ್ದ ಸಿದ್ದರಾಮಯ್ಯ ಸರ್ಕಾರ ಸಾಕ್ಷಿ ನಾಶ ಮಾಡಿದ್ದರಿಂದ ಬಿ ರಿಪೋರ್ಟ್ ಬಂತು. ಡಿಕೆ ರವಿ ಪ್ರಕರಣದಲ್ಲೂ ಸಿದ್ದರಾಮಯ್ಯ ಸರ್ಕಾರ ಸಾಕ್ಷಿ ನಾಶ ಮಾಡಿದೆ. ಈಗ ಪರೇಶ್‌ ಮೇಸ್ತಾ ಪ್ರಕರಣದಲ್ಲೂ ಸಾಕ್ಷ್ಯಗಳನ್ನು ನಾಶ ಮಾಡಲಾಗಿದೆ. ಈ ಕಾರಣಕ್ಕೆ ಸಿಬಿಐ ವರದಿಯನ್ನು ನಾವು ಒಪ್ಪುವುದಿಲ್ಲ ಎಂದು ಹೇಳಿದರು.

    Live Tv
    [brid partner=56869869 player=32851 video=960834 autoplay=true]

  • ಮೈಸೂರಿನಲ್ಲಿದೆ ಕಾಡುವ ಕಥನ: ಕೇವಲ ಪ್ರೀತಿಕಥೆಯಲ್ಲ ರೋಚಕತೆಯೂ ಇಲ್ಲುಂಟು

    ಮೈಸೂರಿನಲ್ಲಿದೆ ಕಾಡುವ ಕಥನ: ಕೇವಲ ಪ್ರೀತಿಕಥೆಯಲ್ಲ ರೋಚಕತೆಯೂ ಇಲ್ಲುಂಟು

    ಚಿತ್ರ: ಮೈಸೂರು
    ನಿರ್ದೇಶನ: ವಾಸುದೇವ ರೆಡ್ಡಿ
    ನಿರ್ಮಾಪಕ: ವಾಸುದೇವ ರೆಡ್ಡಿ, ಜಗದೀಶ್ ಕೆ. ಆರ್ ಅಪ್ಪಾಜಿ
    ಛಾಯಾಗ್ರಹಣ: ಭಾಸ್ಕರ್ ವಿ ರೆಡ್ಡಿ
    ಸಂಗೀತ: ರಮಣಿ ಸುಂದರೇಶನ್, ಅನಿಲ್ ಕೃಷ್ಣ ಮತ್ತು ವಿಜಯ್ ರಾಜ್
    ತಾರಾಗಣ: ಸಂಹಿತ್, ಪೂಜಾ, ಕುರಿ ಪ್ರತಾಪ್, ಜ್ಯೂನಿಯರ್ ನರಸಿಂಹರಾಜು, ರವಿಕುಮಾರ್, ಇತರರು

    ಕಿರುತೆರೆಯಲ್ಲಿ ಧಾರಾವಾಹಿಗಳಿಗೆ ನಿರ್ದೇಶನದ ವಿಭಾಗದಲ್ಲಿ ದುಡಿದ ಅನುಭವವುಳ್ಳ ವಾಸುದೇವ ರೆಡ್ಡಿ ನಿರ್ದೇಶನ ಮತ್ತು ನಿರ್ಮಾಣದ ಮೊದಲ ಚಿತ್ರ ಮೈಸೂರು. ಅನಿವಾಸಿ ಕನ್ನಡಿಗನ ಪ್ರೇಮಕಥೆ ಹೊತ್ತ ಈ ಚಿತ್ರ ಇಂದು ಬಿಡುಗಡೆಯಾಗಿದೆ.

    ಮೂಲತಃ ಮೈಸೂರಿನವರೇ ಆದ ನಾಯಕನ ತಂದೆ ಒಡಿಸ್ಸಾದಲ್ಲಿ ಬ್ಯುಸಿನೆಸ್ ಮಾಡಿಕೊಂಡಿರುತ್ತಾರೆ. ಬ್ಯುಸಿನೆಸ್‌ನಲ್ಲಿ ಆದ ಲಾಸ್ ಆತನ ಸಾವಿಗೆ ಕಾರಣವಾಗುತ್ತೆ. ತಾಯಿಯ ಆಶ್ರಯದಲ್ಲಿ ಬೆಳೆಯುವ ಮಗ ನಕ್ಸಲ್ ನಂಟಿಗೆ ಬೀಳುತ್ತಾನೆ. ಇದರಿಂದ ಬಂಧಿಯಾಗೋ ನಾಯಕನಿಗೆ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸುತ್ತೆ. ಆತನ ಕೊನೆಯ ಆಸೆಯ ಬಗ್ಗೆ ಪೊಲೀಸರು ಕೇಳಿದಾಗ ತನ್ನ ಅಂಗಾಂಗ ದಾನಕ್ಕೆ ಆತ ಬೇಡಿಕೆ ಇಡುತ್ತಾನೆ. ಕೊನೆಯ ಆಸೆ ಕಂಡು ಬೆರಗಾಗೋ ಪೊಲೀಸರು ಒಳ್ಳೆಯ ಆಲೋಚನೆ ಇರುವ ವ್ಯಕ್ತಿ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿದ್ದು ಹೇಗೆ ಎಂದು ಪ್ರಕರಣದ ಮರು ತನಿಖೆ ಆರಂಭಿಸುತ್ತಾರೆ. ಇಲ್ಲಿಂದ ಅಸಲಿ ಕಥೆ ಅನಾವರಣವಾಗುತ್ತೆ. ನಾಯಕನ ಸುಂದರ ಪ್ರೇಮ ಕಥೆಯೂ ತೆರೆದುಕೊಳ್ಳುತ್ತೆ. ಅಸಲಿಗೆ ನಾಯಕ ಅಪರಾಧಿನಾ..? ಗಲ್ಲು ಶಿಕ್ಷೆಯಾಗಲೂ ಕಾರಣವೇನು.? ಶಿಕ್ಷೆಯಿಂದ ಪಾರಾಗಿ ನಾಯಕಿಯನ್ನು ಮತ್ತೆ ಸಂಧಿಸುತ್ತಾನಾ..? ಎಂಬೆಲ್ಲ ಕುತೂಹಲದ ಪ್ರಶ್ನೆ ನಿಮ್ಮನ್ನು ಕಾಡುತ್ತಿದ್ರೆ ಸಿನಿಮಾ ನೋಡಿಯೇ ಆ ಕುತೂಹಲವನ್ನು ತಣಿಸಿಕೊಳ್ಳಬೇಕು. ಇದನ್ನೂ ಓದಿ: ಅದ್ಧೂರಿಯಾಗಿ ಗಾಂಧಿನಗರಕ್ಕೆ ಎಂಟ್ರಿ ಕೊಟ್ಟ ಬಳ್ಳಾರಿ ಕುವರ ಕಿರೀಟಿ – ಸ್ಟಂಟ್, ಆ್ಯಕ್ಟಿಂಗ್, ಡ್ಯಾನ್ಸ್ ರಾಜಮೌಳಿ ಮೆಚ್ಚುಗೆ!

    ಎರಡು ರಾಜ್ಯದಲ್ಲಿ ನಡೆಯೋ ಕಥೆಯಲ್ಲಿ ಒಡಿಸ್ಸಾ ಕಲಾವಿದರನ್ನು ಕಣ್ತುಂಬಿಕೊಳ್ಳಬಹುದು. ಒಡಿಸ್ಸಾ ಮೂಲದ ನಾಯಕ ಸಂಹಿತ್ ನಟನೆ ಇಷ್ಟವಾಗುತ್ತೆ, ನಾಯಕಿ ಪೂಜಾಗೆ ಇದು ಮೊದಲ ಚಿತ್ರವಾದರೂ ಗಮನ ಸೆಳೆಯುತ್ತಾರೆ. ನಾಯಕಿ ತಾಯಿ ಪಾತ್ರದಲ್ಲಿ ಪ್ರತಿಭಾ ಫಂಡಾ, ಕಾಮಿಡಿ ಕಿಕ್‌ನಲ್ಲಿ ಕುರಿ ಪ್ರತಾಪ್, ಉಳಿದಂತೆ ರವಿಶಂಕರ್, ಜ್ಯೂನಿಯರ್ ನರಸಿಂಹ ರಾಜು, ಸತ್ಯಜಿತ್ ಎಲ್ಲರೂ ತಮ್ಮ ಪಾತ್ರಕ್ಕೆ ನ್ಯಾಯ ಸಲ್ಲಿಸಿದ್ದಾರೆ. ಚಿತ್ರದ ಪ್ರಮುಖ ಆಕರ್ಷಣೆ ಸಂಗೀತ. ಹಾಡಿನೊಂದಿಗೆ ಸಾಗೋ ಪ್ರೇಮಕಥೆಗೆ ರಮಣಿ ಸುಂದರೇಶನ್, ಅನಿಲ್ ಮತ್ತು ವಿಜಯ್ ರಾಜ್ ಮನಮುಟ್ಟೋ ಸಂಗೀತ ನೀಡಿ ಆವರಿಸಿಕೊಂಡಿದ್ದಾರೆ. ಇದನ್ನೂ ಓದಿ: ಪ್ರೀತಿ ಅರಸಿ ಹೊರಟವನ ಮ್ಯೂಸಿಕಲ್ ಲವ್ ಸ್ಟೋರಿ ಸಿನಿಮಾ ‘ಮೈಸೂರು’

    ಕೇವಲ ಅನಿವಾಸಿ ಕನ್ನಡಿಗನೊಬ್ಬನ ಪ್ರೇಮ್ ಕಹಾನಿಯ ಇರದೇ ಒಂದೊಳ್ಳೆ ಸಂದೇಶವನ್ನು ತನ್ನೊಡಲೊಳಗೆ ಇಟ್ಟುಕೊಂಡಿದೆ ಮೈಸೂರು. ಹೊಸತನದ ಎಳೆ. ಊಹೆಗೂ ಮೀರಿದ ಟ್ವಿಸ್ಟ್, ಹೊಸತನದ ನಿರೂಪಣೆಯಲ್ಲಿ ನಿರ್ದೇಶಕ ವಾಸುದೇವ ರೆಡ್ಡಿ ಗಮನ ಸೆಳೆಯುತ್ತಾರೆ. ಹೆಸರಿಗೆ ತಕ್ಕಂತೆ ಮೈಸೂರಿನಲ್ಲಿಯೇ ಬಹುಭಾಗದ ಚಿತ್ರೀಕರಣ ನಡೆಸಿರೋ ಈ ಸಿನಿಮಾದಲ್ಲಿ ಒಡಿಸ್ಸಾದ ಸುಂದರ ತಾಣಗಳೂ ಇವೆ. ಮೈಸೂರಿನ ಪ್ರವಾಸಿ ತಾಣಗಳನ್ನು ಅತ್ಯಂತ ಸುಂದರವಾಗಿ ಸೆರೆ ಹಿಡಿಯಲಾಗಿದೆ. ಈ ನಿಟ್ಟಿನಲ್ಲಿ ಭಾಸ್ಕರ್ ವಿ ರೆಡ್ಡಿ ಪರಿಶ್ರಮಕ್ಕೆ ಭೇಷ್ ಎನ್ನಲೇಬೇಕು. ಸುಂದರ ಪ್ರೇಮಕಥೆಯನ್ನು ಎಲ್ಲಾ ವರ್ಗದ ಪ್ರೇಕ್ಷಕರು ಕುಳಿತು ನೋಡುವಂತೆ ಕಟ್ಟಿಕೊಟ್ಟ ನಿರ್ದೇಶಕರ ಪ್ರರಿಶ್ರಮಕ್ಕೂ ಚಪ್ಪಾಳೆ ಸಲ್ಲಲೇಬೇಕು.

    ರೇಟಿಂಗ್:3.5/5

  • ವಿಪ್ ಉಲ್ಲಂಘನೆ –   ಚಾಮರಾಜನಗರದ 7 ನಗರಸಭಾ ಸದಸ್ಯರು ಅನರ್ಹ

    ವಿಪ್ ಉಲ್ಲಂಘನೆ – ಚಾಮರಾಜನಗರದ 7 ನಗರಸಭಾ ಸದಸ್ಯರು ಅನರ್ಹ

    ಚಾಮರಾಜನಗರ: ಬಿಎಸ್‍ಪಿ ಪಕ್ಷದ ವಿಪ್ ಉಲ್ಲಂಘಿಸಿ ಬಿಜೆಪಿಯೊಂದಿಗೆ ಬಹಿರಂಗವಾಗಿ ಗುರುತಿಸಿಕೊಂಡು ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಮತ ಚಲಾಯಿಸಿದ ಕಾರಣ ಕೊಳ್ಳೇಗಾಲ ನಗರಸಭೆಯ 7 ಮಂದಿ ಬಿಎಸ್‍ಪಿ ಸದಸ್ಯರ ಸದಸ್ಯತ್ವವನ್ನು ಜಿಲ್ಲಾಧಿಕಾರಿಗಳ ನ್ಯಾಯಾಲಯ ರದ್ದುಗೊಳಿಸಿದೆ.

    ಕೊಳ್ಳೇಗಾಲ ನಗರಸಭೆಯ ಅಧ್ಯಕ್ಷೆ ಗಂಗಮ್ಮ, ಸದಸ್ಯರಾದ ಎಲ್. ನಾಗಮಣಿ, ನಾಸೀರ್ ಷರೀಫ್, ಎನ್. ಪವಿತ್ರಾ, ಪ್ರಕಾಶ್, ಎನ್. ರಾಮಕೃಷ್ಣ, ನಾಗಸುಂದ್ರಮ್ಮ ಅವರ ಸದಸ್ಯತ್ವವನ್ನು ಕರ್ನಾಟಕ ಸ್ಥಳೀಯ ಪ್ರಾಧಿಕಾರಗಳ (ಪಕ್ಷಾಂತರ ನಿಷೇಧ) ಅಧಿನಿಯಮ 1987ರ ಸೆಕ್ಷನ್ 4ರಲ್ಲಿ ಪ್ರದತ್ತವಾಗಿರುವ ಅಧಿಕಾರದನ್ವಯ ರದ್ದುಗೊಳಿಸಿ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಆದೇಶ ಹೊರಡಿಸಿದ್ದಾರೆ.

    ಬಿಎಸ್‍ಪಿಯ ನಗರಸಭಾ ಸದಸ್ಯರಾದ ಈ ಏಳು ಮಂದಿ ತಮ್ಮ ಪಕ್ಷದ ಅಧ್ಯಕ್ಷರು ನೀಡಿದ ನಿರ್ದೇಶನಕ್ಕೆ ವಿರುದ್ಧವಾಗಿ ಮತ ಚಲಾಯಿಸಿರುವುದು ಸಾಬೀತಾಗಿದೆ. 2020 ರ ಅಕ್ಟೋಬರ್ 29ರಂದು ಕೊಳ್ಳೇಗಾಲ ನಗರಸಭೆಯ ಅಧ್ಯಕ್ಷ ಉಪಾಧ್ಯಕ್ಷರನ್ನು ಆಯ್ಕೆ ಮಾಡಲು ನಡೆದ ಸಭೆಯಲ್ಲಿ ಪಕ್ಷದ ವಿಪ್ ಆದೇಶದ ವಿರುದ್ಧ ಮತ ಚಲಾಯಿಸಿದ್ದಾರೆ. ಸಭೆ ನಡೆದ 15 ದಿನಗಳ ಒಳಗೆ ಬಿಎಸ್‍ಪಿ ಈ ಸದಸ್ಯರನ್ನು ಮನ್ನಿಸದ ಕಾರಣ ಪಕ್ಷಾಂತರದ ಆಧಾರದ ಮೇಲೆ ಅನರ್ಹತೆಗೆ ಕಾರಣರಾಗಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.  ಇದನ್ನೂ ಓದಿ: ಒಗ್ಗಟ್ಟು ಇಲ್ಲದೆ 3 ಪಾಲಿಕೆಯಲ್ಲಿ ಸೋಲು – ಸಿದ್ದರಾಮಯ್ಯ ವಿರುದ್ಧ ಹೈಕಮಾಂಡ್‍ಗೆ ಡಿಕೆಶಿ ಚಾರ್ಜ್‍ಶೀಟ್

    ಪ್ರಕರಣದ ಹಿನ್ನೆಲೆ: ಕೊಳ್ಳೇಗಾಲ ನಗರಸಭೆಯು ಒಟ್ಟು 31 ಸದಸ್ಯರನ್ನು ಹೊಂದಿದೆ. ಕಳೆದ ಬಾರಿ ನಡೆದ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್‍ನಿಂದ 11, ಬಿಜೆಪಿಯಿಂದ 7, ಬಿಎಸ್‍ಪಿಯಿಂದ 9 ಹಾಗೂ ಪಕ್ಷೇತರರಾಗಿ 4 ಮಂದಿ ಗೆದ್ದಿದ್ದರು. ಇದನ್ನೂ ಓದಿ: ಬೇಬಿ ಹಾಡಿಗೆ ಹೆಜ್ಜೆ ಹಾಕಿದ ಯಥರ್ವ್, ಐರಾ- ವೀಡಿಯೋ ನೋಡಿ

    2020 ಅಕ್ಟೋಬರ್ 29ರಂದು ನಗರಸಭಾ ಅಧ್ಯಕ್ಷ,ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಅಧ್ಯಕ್ಷರಾಗಿ ಬಿಎಸ್‍ಪಿಯ ಗಂಗಮ್ಮ, ಉಪಾಧ್ಯಕ್ಷರಾಗಿ ಬಿಜೆಪಿಯ ಕವಿತಾ 17 ಮತಗಳನ್ನು ಪಡೆದು ಆಯ್ಕೆಯಾದರು. ಈ ಚುನಾವಣೆಯಲ್ಲಿ ಬಿಎಸ್‍ಪಿಯಿಂದ ಗೆದ್ದಿದ್ದ 9 ಸದಸ್ಯರ ಪೈಕಿ 7 ಮಂದಿ ಸದಸ್ಯರು ಬಿಜೆಪಿ ಜೊತೆ ಕೈಜೋಡಿಸಿದ್ದರು. ಬಿಎಸ್‍ಪಿಯ 9 ಸದಸ್ಯರಿಗೂ ತಮ್ಮ ಪಕ್ಷದ ಅಭ್ಯರ್ಥಿ ಪರವಾಗಿ ಮತ ಚಲಾಯಿಸುವಂತೆ ವಿಪ್ ಜಾರಿ ಮಾಡಲಾಗಿತ್ತು. ಆದರೂ 7 ಮಂದಿ ಸದಸ್ಯರು ವಿಪ್ ಉಲ್ಲಂಘಿಸಿ ಮತ ಚಲಾಯಿಸಿದ್ದರು.

    ಅಧ್ಯಕ್ಷ ಸ್ಥಾನಕ್ಕೆ ಬಿಎಸ್‍ಪಿಯಿಂದ ಜಯಮರಿ, ಕಾಂಗ್ರೆಸ್‍ನಿಂದ ಪುಷ್ಪಲತಾ ಸ್ಪರ್ಧಿಸಿ ಸೋತಿದ್ದರು. ಜಯಮರಿ ಅವರಿಗೆ ಎರಡು ಮತಗಳು (ಜಯಮರಿ ಹಾಗೂ ಜಯಂತ್) ಬಂದಿದ್ದವು. 2020ರ ಡಿಸೆಂಬರ್ 1ರಂದು ಬಿಎಸ್‍ಪಿ ಸದಸ್ಯೆ ಜಯಮರಿ ಅವರು ಬಿಎಸ್‍ಪಿ ಸದಸ್ಯರು ಪಕ್ಷ ನೀಡಿದ ವಿಪ್ ಆದೇಶದ ನಿರ್ದೇಶನಗಳನ್ನು ಉಲ್ಲಂಸಿರುವ ಬಗ್ಗೆ ನಗರಸಭೆ ಪೌರಾಯುಕ್ತರಿಗೆ ಪಕ್ಷಾಂತರ ನಿಷೇಧ ಅಧಿನಿಯಮದ ಅಡಿಯಲ್ಲಿ ದೂರು ಸಲ್ಲಿಸಿದ್ದರು. ಈ ದೂರನ್ನು ನಗರಸಭೆ ಪೌರಾಯುಕ್ತರು ಡಿ.2ರಂದು ಜಿಲ್ಲಾಧಿಕಾರಿಗಳ ನ್ಯಾಯಾಲಯಕ್ಕೆ ರವಾನಿಸಿದ್ದರು. ಜಿಲ್ಲಾಧಿಕಾರಿಗಳ ನ್ಯಾಯಾಲಯ ವಾದಿ ಪ್ರತಿವಾದಿಗಳಿಗೆ ನೋಟೀಸ್ ಜಾರಿ ಮಾಡಿ ಪ್ರಕರಣದ ವಿಚಾರಣೆ ನಡೆಸಿತು.

  • ಕರ್ನಾಟಕದ ಮುಖ್ಯ ಕಾರ್ಯದರ್ಶಿಯಾಗಿ ರವಿಕುಮಾರ್ ನೇಮಕ

    ಕರ್ನಾಟಕದ ಮುಖ್ಯ ಕಾರ್ಯದರ್ಶಿಯಾಗಿ ರವಿಕುಮಾರ್ ನೇಮಕ

    ಬೆಂಗಳೂರು: ನಿರೀಕ್ಷೆಯಂತೆ ರಾಜ್ಯ ಸರ್ಕಾರದ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಪಿ.ರವಿಕುಮಾರ್ ನೇಮಕವಾಗಿದ್ದಾರೆ. ಪಿ ರವಿಕುಮಾರ್ ಅವರನ್ನು ಮಂದಿನ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಿ ಇಂದು ಸರ್ಕಾರ ಆದೇಶಿಸಿದೆ.

    ಹಾಲಿ ಸಿಎಸ್ ಟಿ ಎಂ ವಿಜಯ್ ಭಾಸ್ಕರ್ ಸೇವಾವಧಿ ನಾಳೆ ಮುಕ್ತಾಯವಾಗಲಿದ್ದು, ತೆರವಾಗಲಿರುವ ಸ್ಥಾನಕ್ಕೆ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿರುವ ಪಿ ರವಿಕುಮಾರ್‌ನ್ನು  ನೇಮಿಸಲಾಗಿದೆ.

    ಪಿ ರವಿಕುಮಾರ್ 1984ರ ಬ್ಯಾಚ್  ಐಎಎಸ್ ಅಧಿಕಾರಿಯಾಗಿದ್ದಾರೆ. ನಾಳೆ ವಿಧಾನಸೌಧದಲ್ಲಿ ಪಿ ರವಿಕುಮಾರ್‌ಗೆ ವಿಜಯಭಾಸ್ಕರ್ ಅವರು ಅಧಿಕಾರ ಹಸ್ತಾಂತರ ಮಾಡಲಿದ್ದಾರೆ. ಪಿ ರವಿಕುಮಾರ್ ಸರ್ಕಾರದ 38ನೇ ಮುಖ್ಯಕಾರ್ಯದರ್ಶಿಯಾಗಿ ನೇಮಕವಾಗಿದ್ದಾರೆ.

    1984 ಬ್ಯಾಚ್‍ನ ಅಧಿಕಾರಿಯಾಗಿರುವ ರವಿ ಕುಮಾರ್ ಹಿರಿತನದ ಆಧಾರದ ಮೇಲೆ ಮುಖ್ಯ ಕಾರ್ಯದರ್ಶಿಯಾಗಿ ನೇಮಕವಾಗಿದ್ದಾರೆ. ಕರ್ನಾಟಕ ಕೇಡರ್‌ನ  ವಿವಿಧ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಉತ್ತರ ಕನ್ನಡ ಜಿಲ್ಲಾಧಿಕಾರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನಿರ್ದೇಶಕ, ಸಹಕಾರ, ಸಾರಿಗೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.

    ಕೆಪಿಟಿಸಿಎಲ್ ಎಂಡಿ, ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ. ಪ್ರಸ್ತುತ ರಾಜ್ಯ ಸರ್ಕಾರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿರುವ ರವಿ ಕುಮಾರ್ ಅವರ ಸೇವಾವಧಿ 2022ರ ಮೇ ವರೆಗೆ ಇದೆ. 1 ವರ್ಷ 5 ತಿಂಗಳು ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿಯಾಗಿ ರವಿ ಕುಮಾರ್ ಸೇವೆಯಲ್ಲಿ ಇರಲಿದ್ದಾರೆ

  • ಬಿಜೆಪಿ ಪರಿಷತ್ ಸದಸ್ಯ ರವಿಕುಮಾರ್‌ಗೆ ಕೊರೊನಾ ಸೋಂಕು ದೃಢ

    ಬಿಜೆಪಿ ಪರಿಷತ್ ಸದಸ್ಯ ರವಿಕುಮಾರ್‌ಗೆ ಕೊರೊನಾ ಸೋಂಕು ದೃಢ

    ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

    ಟ್ವೀಟ್ ಮಾಡುವ ಮೂಲಕ ಸ್ವತಃ ಅವರೇ ಖಚಿತಪಡಿಸಿದ್ದು, ಇಂದು ಕೊರೊನಾ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದೆ. ಯಾವುದೇ ರೋಗ ಲಕ್ಷಣಗಳು ಇಲ್ಲ. ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗಿದ್ದೇನೆ. ಚಿಕಿತ್ಸೆ ಕಾರಣ ನಿಮ್ಮ ಕರೆಗಳಿಗೆ ಸ್ಪಂದಿಸಲಾಗುತ್ತಿಲ್ಲ, ಕ್ಷಮೆ ಇರಲಿ. ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಚಿಕಿತ್ಸೆಗೆ ಒಳಪಡಬೇಕೆಂದು ವಿನಂತಿಸುತ್ತೇನೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

    ಉಪಚುನಾವಣೆ ಹಿನ್ನೆಲೆ ಶುಕ್ರವಾರವಷ್ಟೆ ಶಿರಾ ಕ್ಷೇತ್ರಕ್ಕೆ ತೆರಳಿದ್ದ ರವಿ ಕುಮಾರ್, ವಿವಿಧೆಡೆ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಸಭೆಯೊಂದರಲ್ಲಿ ಒಬ್ಬರಿಗೊಬ್ಬರ ಕೈ ಹಿಡಿದು ನಿಲ್ಲುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದ್ದರು. ಆದರೆ ಇಂದು ಅವರಿಗೆ ಕೊರೊನಾ ಸೋಂಕು ದೃಢವಾಗಿದೆ.