Tag: Ravi Kumar

  • ಇನ್ನೆರಡು ದಿನಗಳಲ್ಲಿ ಜಮೀರ್ ಅರೆಸ್ಟ್ ಆಗ್ತಾರೆ: ರವಿ ಕುಮಾರ್

    ಇನ್ನೆರಡು ದಿನಗಳಲ್ಲಿ ಜಮೀರ್ ಅರೆಸ್ಟ್ ಆಗ್ತಾರೆ: ರವಿ ಕುಮಾರ್

    ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಇಬ್ಬರು ನಟಿಯರು ಅರೆಸ್ಟ್ ಆದ ಬಳಿಕ ಕೇಸ್‍ನಲ್ಲಿ ರಾಜಕೀಯ ನಂಟಿನ ಕುರಿತ ಚರ್ಚೆ ಜೋರಾಗಿದೆ. ಶಾಸಕ ಜಮೀರ್ ಅಹ್ಮದ್ ಅವರ ಹೆಸರನ್ನು ಪ್ರಕರಣದಲ್ಲಿ ಬಿಜೆಪಿ ಎಳೆದು ತಂದಿದೆ. ಇದರ ಬೆನ್ನಲ್ಲೇ ಇನ್ನೆರಡು ದಿನಗಳಲ್ಲಿ ಜಮೀರ್ ಬಂಧನವಾಗುತ್ತದೆ ಎಂದು ಬಿಜೆಪಿ ವಕ್ತಾರ ರವಿ ಕುಮಾರ್ ಹೇಳಿದ್ದಾರೆ.

    ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ರವಿ ಕುಮಾರ್ ಅವರು, ಇನ್ನು ಕೆಲ ದಿನಗಳಲ್ಲಿ ಶಾಸಕ ಜಮೀರ್ ಅವರನ್ನು ಪ್ರಕರಣದಲ್ಲಿ ಬಂಧನ ಮಾಡುವ ಸಮಯ ಬರುತ್ತದೆ. ಜವಾಬ್ದಾರಿಯುತ ಸರ್ಕಾರ ಆಗಿರುವುದರಿಂದ ಅರೆಸ್ಟ್ ಮಾಡಲು ಬೇಕಾದ ಸೂಕ್ತ ಆಧಾರಗಳನ್ನು ಇಟ್ಟುಕೊಂಡು ಬಂಧನ ಮಾಡಬೇಕಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಸಂಜನಾ, ಜಮೀರ್ ಸಹಾಯ ಕೇಳಿದ್ದೇಕೆ?- ಡ್ರಗ್ಸ್ ಪ್ರಕರಣದಲ್ಲಿ ರಾಹುಲ್‍ಗೆ ಬಿಜೆಪಿ ಟಾಂಗ್

    ಪ್ರಶಾಂತ್ ಸಂಬರಗಿ ಅವರು ನೀಡಿದ ಹೇಳಿಕೆಯಂತೆ ಸಚಿವ ಸಿಟಿ ರವಿ ಅವರು ಕೂಡ ಹವಾಲಾ ಹಣದ ಕುರಿತು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವು ನಾಯಕರು ಜಮೀರ್ ಅವರ ಹೆಸರನ್ನು ಇಂದು ಎಳೆದು ತಂದಿದ್ದರು. ಡ್ರಗ್ಸ್ ವಿರುದ್ಧ ಈ ಬಾರಿ ಮಾತ್ರವಲ್ಲ, ಹಿಂದಿನ ಸರ್ಕಾರ ಇದ್ದಾಗಲೂ ಕೂಗು ಕೇಳಿ ಬರುತ್ತಿತ್ತು. ಆದರೆ ಬಿಜೆಪಿ ಸರ್ಕಾರ ಮಾತ್ರ ಈ ಬಗ್ಗೆ ಕಠಿಣವಾದ ನಿರ್ಧಾರ ತೆಗೆದುಕೊಂಡು ಮಾಫಿಯಾ ಮಟ್ಟಹಾಕಲು ಮುಂದಾಗಿದೆ ಎಂದು ಕಟೀಲ್ ಹೇಳಿದ್ದಾರೆ. ಇದನ್ನೂ ಓದಿ: ಜಮೀರ್‌ನನ್ನು ಯಾಕೆ ಬಂಧಿಸಿಲ್ಲ- ಸರ್ಕಾರಕ್ಕೆ ಪ್ರತಾಪ್ ಸಿಂಹ ಪ್ರಶ್ನೆ

    ಇತ್ತ ಜಮೀರ್ ಅವರ ಪಾತ್ರದ ಕುರಿತು ಟ್ವೀಟ್ ಮಾಡಿರುವ ಸಚಿವ ಸಿಟಿ ರವಿ ಅವರು, ಶ್ರೀಲಂಕಾದಲ್ಲಿ ನಡೆದ ಪಾರ್ಟಿಯಲ್ಲಿ ಜಮೀರ್ ಉಪಸ್ಥಿತರಿದ್ದರು, ಇದರಲ್ಲಿ ಬಂಧನಕ್ಕೊಳಗಾಗಿರುವ ನಟಿ ಇದ್ದರು ಎಂಬುದು ನಿಜವಲ್ಲವೇ? ಬಂಧಿತ ಇನ್ನೊಬ್ಬ ನಟಿ ಸಹಾಯಕ್ಕಾಗಿ ಯಾಕೆ ಮನವಿ ಮಾಡಿದರು? ಅವನ ಮತ್ತು ಡ್ರಗ್ ಮಾಫಿಯಾ ನಡುವಿನ ಸಂಬಂಧ ಏನು ಎಂದು ಪ್ರಶ್ನಿಸಿದ್ದಾರೆ. ನಟಿ ಸಂಜನಾ ಬಂಧನ ಮುನ್ನ ಜಮೀರ್ ಅವರ ಸಹಾಯ ಕೋರಿದನ್ನೇ ಆಸ್ತ್ರವನ್ನಾಗಿ ಮಾಡಿಕೊಂಡಿರುವ ಬಿಜೆಪಿ, ಪ್ರಕರಣದಲ್ಲಿ ಜಮೀರ್ ಅವರಿಗೆ ನೋಟಿಸ್ ನೋಡಿ ವಿಚಾರಣೆಗೆ ಕರೆತರಲು ಆಗ್ರಹಿಸಿದ್ದಾರೆ. ಬಿಜೆಪಿ ನಾಯಕರ ಹೇಳಿಕೆಗಳಿಗೆ ಪಕ್ಷದ ರಾಜ್ಯ ಘಟಕವೂ ಬೆಂಬಲ ನೀಡಿ ಸರಣಿ ಟ್ವೀಟ್ ಮಾಡಿದೆ. ಇದನ್ನೂ ಓದಿ: ‘ಗಂಡ-ಹೆಂಡತಿ’ ನಟಿ ಮದುವೆ ಸೀಕ್ರೆಟ್- ಮ್ಯಾರೇಜ್ ಆಗಿಲ್ಲ ಅಂತ ಸುಳ್ಳು ಹೇಳಿದ್ರಾ ಸಂಜನಾ?   

  • ನೆಹರು ಕಾಲದಿಂದ ದೇಶದಲ್ಲಿ ಭ್ರಷ್ಟಾಚಾರ ಆರಂಭ: ರವಿಕುಮಾರ್

    ನೆಹರು ಕಾಲದಿಂದ ದೇಶದಲ್ಲಿ ಭ್ರಷ್ಟಾಚಾರ ಆರಂಭ: ರವಿಕುಮಾರ್

    ಬೆಂಗಳೂರು: ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರಿಂದಲೇ ಭಾರತದಲ್ಲಿ ಭ್ರಷ್ಟಾಚಾರ ಆರಂಭವಾಗಿದ್ದು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿ ಕುಮಾರ್ ಹೇಳಿದ್ದಾರೆ.

    ನಗರದ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ವಿಜಯ ಲಕ್ಷ್ಯ- 2019 ಕಾರ್ಯಾಗಾರದಲ್ಲಿ ಮಾತನಾಡಿದ ರವಿ ಕುಮಾರ್, ಭ್ರಷ್ಟ ಇತಿಹಾಸ ಕಾಂಗ್ರೆಸ್‍ನಲ್ಲಿ ತುಂಬಿ ತುಳುಕುತ್ತಿದೆ. ಮಾಜಿ ಪ್ರಧಾನಿ ಜವಾಹರಲಾರ್ ನೆಹರು ಅವರ ಕಾಲದಿಂದ ಆರಂಭವಾದ ಭ್ರಷ್ಟಾಚಾರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಂದಲೂ ಮುಂದುವರಿಯುತ್ತಿದೆ ಎಂದು ಆರೋಪಿಸಿದರು.

    ದೇಶದ ಅಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಒಂದು ದಿನವೂ ರಜೆ ಹಾಕದೇ ಕೆಲಸ ಮಾಡುತ್ತಿದ್ದಾರೆ. ಇತ್ತ ರಾಹುಲ್ ಗಾಂಧಿ ಅವರು ಒಂದು ದಿನ ಪ್ರವಾಸ ಮಾಡಿದರೆ ಎರಡು ದಿನ ವಿದೇಶಕ್ಕೆ ಹೋಗಿ ವಿಶ್ರಾಂತಿ ಪಡೆಯುತ್ತಾರೆ. ಪಾರ್ಲಿಮೆಂಟ್‍ನಲ್ಲಿ ರಾಹುಲ್ ಗಾಂಧಿ ಕಣ್ಣು ಹೊಡೆಯುತ್ತಾರೆ. ಆದರೆ ಅವರು ಯಾರಿಗೆ ಕಣ್ಣು ಹೊಡೆಯುತ್ತಾರೆ ಅಂತ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದರು.

    ವಿಧಾನಸೌಧದಲ್ಲಿ ಸಿಕ್ಕಿದ್ದ 25 ಲಕ್ಷ ರೂ. ಲಂಚದ ಹಣ ಪುಟ್ಗೋಸಿ ಎಂದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ನಾಚಿಕೆ ಇಲ್ಲ. 25 ಲಕ್ಷ ಸಿಕ್ಕಿರೋದಕ್ಕೆ ಪುಟ್ಗೋಸಿ ಅಂತ ಹೇಳುತ್ತೀರಲ್ಲ ಅದು ಭ್ರಷ್ಟಚಾರದ ಹಣ ಅಲ್ವಾ? ಭ್ರಷ್ಟಚಾರಿಗಳನ್ನು ಬಚಾವು ಮಾಡೋಕೆ ದಿನೇಶ್ ಗುಂಡೂರಾವ್ ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಮುಂಬರುವ ಲೋಕಸಭಾ ಚುನಾವಣೆ ಸಿದ್ಧತೆಗೆ ಮುಂದಾಗಿರುವ ರಾಜ್ಯ ಬಿಜೆಪಿಯು, ಯುವ ಮತದಾರರನ್ನು ಸೆಳೆಯಲು ವಿಜಯ ಲಕ್ಷ್ಯ ಕಾರ್ಯಾಗಾರ ಹಮ್ಮಿಕೊಂಡಿದೆ. ಈ ಯೋಜನೆ ಅಡಿ ಕೆಲಸ ಮಾಡುತ್ತಿರುವ ಯುವ ಮೋರ್ಚಾ ಕಾರ್ಯಕರ್ತರಿಗೆ ಇಂದು ಕಾರ್ಯಾಗಾರ ನಡೆಸಲಾಯಿತು. ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ, ರಾಷ್ಟ್ರೀಯ ಯುವ ಮೋರ್ಚಾ ಉಪಾಧ್ಯಕ್ಷ ಮಧುಕೇಶ್ವರ್ ದೇಸಾಯಿ ಭಾಗವಹಿಸಿದ್ದರು. ಆದರೆ ಕಾರ್ಯಾಗಾರದಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ, ಸಂಸದ ಪ್ರತಾಪ್ ಸಿಂಹ ಅವರ ಗೈರು ಎದ್ದು ಕಾಣಿಸುತ್ತಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv