Tag: Ravi Shankar

  • ರವಿಶಂಕರ್ ಮಗನ ಚಿತ್ರಕ್ಕೆ ಶಿವಣ್ಣ ಸಾಥ್: ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್

    ರವಿಶಂಕರ್ ಮಗನ ಚಿತ್ರಕ್ಕೆ ಶಿವಣ್ಣ ಸಾಥ್: ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್

    ಪ್ರೀ-ಲುಕ್ ಮೂಲಕ ಗಮನ ಸೆಳೆದಿದ್ದ ಖ್ಯಾತ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ (Subrahmanya) ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಫಸ್ಟ್ ಲುಕ್ ರಿವೀಲ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದ್ದಾರೆ. ಉದ್ದನೆಯ ಕೂದಲು ಬಿಟ್ಟು ವಿನ್ಯಾಸಗೊಳಿಸಲಾದ ಉಡುಪಿನಲ್ಲಿ ಸುಂದರವಾಗಿ ಹಾಗೂ ಸೊಗಸಾಗಿ ಅದ್ವೈ ಕಾಣಿಸಿಕೊಂಡಿದ್ದಾರೆ. ಕಾಡು, ನಿಗೂಢ ಪ್ರವೇಶ ದ್ವಾರ, ಅದ್ವೈನನ್ನು ಬೆನ್ನಟ್ಟಿರುವ ತಂಡ ಫಸ್ಟ್ ಲುಕ್ ಪೋಸ್ಟರ್ ನಲ್ಲಿ ಗಮನಸೆಳೆಯುತ್ತಿದೆ.

    ಸೋಶಿಯೋ-ಫ್ಯಾಂಟಸಿ ಅಡ್ವೆಂಚರ್ಸ್ ಶೈಲಿಯ ಸುಬ್ರಹ್ಮಣ್ಯ ಸಿನಿಮಾದ 60% ಕೆಲಸ ಪೂರ್ಣಗೊಂಡಿದ್ದು, ಮುಂಬೈನ ರೆಡ್ ಚಿಲ್ಲಸ್ ಸ್ಟುಡಿಯೋದಲ್ಲಿ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಬೆಂಗಳೂರು, ಮುಂಬೈ, ಹೈದರಾಬಾದ್ ಮತ್ತು ಚೆನ್ನೈನ ಹಲವಾರು ಪ್ರತಿಷ್ಠಿತ ಸ್ಟುಡಿಯೋಗಳಲ್ಲಿ ಗ್ರಾಫಿಕ್ಸ್​ ಕೆಲಸಗಳು ನಡೆಯುತ್ತಿವೆ.

    ‘ಎಸ್.ಜಿ ಮೂವೀ ಮೇಕರ್ಸ್’ ಸಂಸ್ಥೆಯ ಮೂಲಕ ತಿರುಮಲ ರೆಡ್ಡಿ ಹಾಗೂ ಅನಿಲ್ ಕಡಿಯಾಲ ಅವರು ನಿರ್ಮಾಣ ಮಾಡುತ್ತಿದ್ದಾರೆ. ಪ್ರವೀಣಾ ಕಡಿಯಾಲ ಮತ್ತು ರಮಾ ಲಕ್ಷ್ಮೀ ಪ್ರಸ್ತುತಪಡಿಸುತ್ತಿದ್ದಾರೆ. ರವಿ ಬಸ್ರೂರ್ ಅವರು ಈ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ. ಸುಬ್ರಹ್ಮಣ್ಯ’ ಸಿನಿಮಾಗೆ ವಿಘ್ನೇಶ್ ರಾಜ್ ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ. ವಿಜಯ್ ಎಂ. ಕುಮಾರ್ ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ

    ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಮಾಲಾಶ್ರೀ ಅಭಿನಯದ ‘ದುರ್ಗಿ’ ಸಿನಿಮಾಗೆ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದ ರವಿಶಂಕರ್​ ಅವರು ಈಗ ಮಗನ ಸಿನಿಮಾಗಾಗಿ ಮತ್ತೆ ನಿರ್ದೇಶನ ಮಾಡುತ್ತಿದ್ದಾರೆ. ಈ ಮೂಲಕ ಬರೋಬ್ಬರಿ 2 ದಶಕದ ಬಳಿಕ ಅವರು ಡೈರೆಕ್ಟರ್​ ಕ್ಯಾಪ್​ ಧರಿಸಿದ್ದಾರೆ.

  • ವಿಲನ್ ರವಿಶಂಕರ್ ಪುತ್ರನ ಚೊಚ್ಚಲ ಸಿನಿಮಾ: ಪ್ರೀ ಲುಕ್ ಅನಾವರಣ

    ವಿಲನ್ ರವಿಶಂಕರ್ ಪುತ್ರನ ಚೊಚ್ಚಲ ಸಿನಿಮಾ: ಪ್ರೀ ಲುಕ್ ಅನಾವರಣ

    ಕ್ಷಿಣ ಚಿತ್ರರಂಗದಲ್ಲಿ ಖ್ಯಾತಿ ಪಡೆದಿರುವ ಆರ್ಮುಗ ರವಿಶಂಕರ್ (Ravi Shankar) ಮತ್ತೆ ನಿರ್ದೇಶನಕ್ಕೆ ಮರಳಿರುವುದು ಗೊತ್ತೇ ಇದೆ. ಮತ್ತೊಮ್ಮೆ ಡೈರೆಕ್ಟರ್ ಕ್ಯಾಪ್ ತೊಟ್ಟಿರುವ ಅವರು ಸುಬ್ರಹ್ಮಣ್ಯ ಸಿನಿಮಾ ಮೂಲಕ ಮಗ ಅದ್ವೆಯನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರೆ. ಕಳೆದ ಆಯುಧ ಪೂಜೆಗೆ ಟೈಟಲ್ ಪೋಸ್ಟರ್ ಬಿಡುಗಡೆ ಮಾಡಲಾಗಿತ್ತು. ಅಲ್ಲಿಂದ ಇಲ್ಲಿವರೆಗೂ ಸುಬ್ರಹ್ಮಣ್ಯ ಸಿನಿಮಾದ ಬಗ್ಗೆ ಸಣ್ಣ ಅಪ್ ಡೇಟ್ ಕೂಡ ಸಿಕ್ಕಿರಲಿಲ್ಲ. ಈಗ ಚಿತ್ರತಂಡದ ಹೊಸ ಸಮಾಚಾರ ರಿವೀಲ್ ಮಾಡಿದೆ.

    ಸುಬ್ರಹ್ಮಣ್ಯ ಸಿನಿಮಾದ 60% ಭಾಗದ ಶೂಟಿಂಗ್ ಮುಕ್ತಾಯಗೊಂಡಿದ್ದು, ಸದ್ಯ ಪೋಸ್ಟ್-ಪ್ರೊಡಕ್ಷನ್ ಕೆಲಸ ಮುಂಬೈನ ಶಾರುಖ್ ಒಡೆತನದ ರೆಡ್ ಚಿಲ್ಲೀಸ್ ಸ್ಟುಡಿಯೋದಲ್ಲಿ ಪೂರ್ಣ ಪ್ರಮಾಣದಲ್ಲಿ ನಡೆಯುತ್ತಿದೆ. ಮುಂಬೈ, ಹೈದರಾಬಾದ್, ಬೆಂಗಳೂರು ಮತ್ತು ಚೆನ್ನೈನ ಹಲವಾರು ಪ್ರತಿಷ್ಠಿತ ಸ್ಟುಡಿಯೋಗಳಲ್ಲಿ VFX ಮತ್ತು CGI ಕೆಲಸಗಳು ನಡೆಯುತ್ತಿವೆ. ಪ್ರೀಮಿಯಂ ಲಾರ್ಜ್ ಫಾರ್ಮ್ಯಾಟ್ ಮತ್ತು ಐಮ್ಯಾಕ್ಸ್ ಥಿಯೇಟರ್‌ಗಳಲ್ಲಿ ಅದ್ಭುತ ಫೀಲ್ ಕೊಡುವ ರೀತಿಯಲ್ಲಿ ಸುಬ್ರಹ್ಮಣ್ಯ ಸಿನಿಮಾವನ್ನು ಕಟ್ಟಿಕೊಡಲಾಗುತ್ತಿದೆ.

    ಸುಬ್ರಹ್ಮಣ್ಯ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಚಿತ್ರತಂಡ ಶೀಘ್ರದಲ್ಲೇ ಅನಾವರಣಗೊಳಿಸಲು ಮುಂದಾಗಿದೆ. ಈ ಪೋಸ್ಟರ್ ಮೂಲಕ ಸುಬ್ರಹ್ಮಣ್ಯ ಪ್ರಪಂಚವನ್ನು ಚಿತ್ರತಂಡ ಪರಿಚಯಸಲು ಹೊರಟಿದೆ. ಸೋಷಿಯೋ ಫ್ಯಾಂಟಸಿ ಅಡ್ವೆಂಚರ್ಸ್ ಸಿನಿಮಾವನ್ನು ಎಸ್ ಜಿ ಮೂವೀ ಮೇಕರ್ಸ್ ಬ್ಯಾನರ್ ನಡಿ ತಿರುಮಲ ರೆಡ್ಡಿ ಮತ್ತು ಅನಿಲ್ ಕಡಿಯಾಲ ಬಂಡವಾಳ ಹಾಕಿದ್ದು, ಪ್ರವೀಣಾ ಕಡಿಯಾಲ ಹಾಗೂ ರಮಾ ಲಕ್ಷ್ಮೀ ಪ್ರಸ್ತುತಪಡಿಸುತ್ತಿದ್ದಾರೆ. ಸಲಾರ್ ಮತ್ತು ಕೆಜಿಎಫ್ ಸರಣಿ ಸಿನಿಮಾಗಳ ಸಂಗೀತ ನೀಡಿರುವ ರವಿ ಬಸ್ರೂರ್ ಈ ಚಿತ್ರಕ್ಕೂ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

    ಸುಬ್ರಹ್ಮಣ್ಯ ಸಿನಿಮಾದ ಫಸ್ಟ್ ಲುಕ್ ಬಿಡುಗಡೆಗೂ ಮುನ್ನ ಚಿತ್ರತಂಡ ಪ್ರೀ ಲುಕ್ ಅನಾವರಣ ಮಾಡಲಾಗಿದೆ. ಪಾಳು ಬಿದ್ದಿರುವ ದೇಗುಲದ ಮುಂದೆ ನಾಯಕ ಅದ್ವೆ ಕೈಯಲ್ಲಿ ಪಂಜು ಹಿಡಿದು ಬ್ಯಾಕ್ ಪೋಸ್ ಕೊಟ್ಟಿರುವ ಪ್ರೀ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಬಹಳ ಕುತೂಹಲ ಹೆಚ್ಚಿಸುವ ಪ್ರೀ ಲುಕ್ ಫಸ್ಟ್ ಲುಕ್ ಮೇಲೆ ನಿರೀಕ್ಷೆ ಹೆಚ್ಚಿಸಿದೆ. ವಿಘ್ನೇಶ್ ರಾಜ್ ಕ್ಯಾಮೆರಾ ಹಿಡಿದಿದ್ದು, ವಿಜಯ್ ಎಂ ಕುಮಾರ್ ಸಂಕಲನ ಸುಬ್ರಹ್ಮಣ್ಯ ಸಿನಿಮಾಕ್ಕಿದೆ.. ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಸುಬ್ರಹ್ಮಣ್ಯ ಸಿನಿಮಾ ತಯಾರಾಗುತ್ತಿದೆ. ಕಳೆದ 20 ವರ್ಷಗಳ ಹಿಂದೆ ಆ್ಯಕ್ಷನ್ ಕ್ವೀನ್ ಮಾಲಾಶ್ರೀಗೆ ಮೊದಲ ಬಾರಿಗೆ ಪಿ.ರವಿಶಂಕರ್ ಆ್ಯಕ್ಷನ್ ಕಟ್ ಹೇಳಿದ್ದರು. ದುರ್ಗಿ ಸಿನಿಮಾ ಡೈರೆಕ್ಷನ್ ಮಾಡುವ ಮೂಲಕ ನಿರ್ದೇಶಕನಾಗಿ ಬಡ್ತಿ ಪಡೆದಿದ್ದರು. ಅವತ್ತಿಗೆ ಸಿನಿಮಾ ಸೂಪರ್ ಡೂಪರ್ ಹಿಟ್ ಆಗಿ ತೆಲುಗಿಗೆ ರಿಮೇಕ್ ಕೂಡ ಆಗಿತ್ತು. ಈಗ 20 ವರ್ಷದ ಬಳಿಕ ಮಗ ಅದ್ವೆಗಾಗಿ ಅವರು ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ.

  • ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ನಟ ರವಿಶಂಕರ್

    ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ನಟ ರವಿಶಂಕರ್

    ಸ್ಟಾರ್ ಸುವರ್ಣ ವಾಹಿನಿಯಲ್ಲಿ ಮಧ್ಯಾಹ್ನದ ಮನರಂಜನೆಯಾಗಿ ಆರಂಭವಾದ ‘ಸುವರ್ಣ ಗೃಹಮಂತ್ರಿ’ ಎಂಬ ಹೊಸ ಬಗೆಯ ರಿಯಾಲಿಟಿ ಶೋ ಈಗಾಗಲೇ ಪ್ರೇಕ್ಷಕರ ಮನಗೆದ್ದು ಯಶಸ್ವಿಯಾಗಿ ಮುನ್ನುಗ್ಗುತ್ತಿದೆ. ಆದರೆ ಇದೀಗ ಮತ್ತಷ್ಟು ಮೆರುಗು ನೀಡಲು ಇದೇ ಮೊದಲ ಬಾರಿಗೆ ಸುವರ್ಣ ವಾಹಿನಿಯ ಮೂಲಕ ಖ್ಯಾತ ನಟ ರವಿಶಂಕರ್ ಕಿರುತೆರೆಗೆ ಪದಾರ್ಪಣೆ ಮಾಡಿದ್ದಾರೆ. ಇನ್ಮುಂದೆ ‘ಸುವರ್ಣ ಗೃಹಮಂತ್ರಿ’ ಕಾರ್ಯಕ್ರಮದ ನಿರೂಪಣೆಯ ಜವಾಬ್ದಾರಿಯನ್ನು ನಟ ರವಿಶಂಕರ್ (Ravi Shankar)  ಹೊರಲಿದ್ದಾರೆ. ವರ್ಷಗಳ ಬಳಿಕ ನಟ ರವಿ ಶಂಕರ್ ಅವರನ್ನು ಗೃಹಮಂತ್ರಿ ಪ್ರೋಮೋದಲ್ಲಿ ನೋಡಿದ ವೀಕ್ಷಕರು ಸಾಮಾಜಿಕ ಜಾಲತಾಣದಲ್ಲಿ ಸಂತಸವನ್ನು ವ್ಯಕ್ತ ಪಡಿಸಿದ್ದು, ‘ಸುವರ್ಣ ಗೃಹಮಂತ್ರಿ’ಯ ಸಂಚಿಕೆಯಲ್ಲಿ ರವಿಶಂಕರ್ ರವರ ನಿರೂಪಣೆಯನ್ನು ನೋಡಲು ಕಾತುರತೆಯಿಂದ ಕಾಯುತ್ತಿದ್ದಾರೆ.

    ಸಾಮಾನ್ಯವಾಗಿ ಮನೆಯಲ್ಲಿ ಕೆಲಸ ಮಾಡೋ ಗೃಹಿಣಿಯರನ್ನು, ಹೆಣ್ಮಕ್ಕಳನ್ನು ಯಾರೂ ಗುರುತಿಸುವುದಿಲ್ಲ, ಮನೆ ಮಂದಿಯನ್ನು ಅವ್ರು ಎಷ್ಟೇ ಚೆನ್ನಾಗಿ ನೋಡ್ಕೊಂಡ್ರು ‘ಥ್ಯಾಂಕ್ ಯು’ ಅಂತನೂ ಹೇಳಲ್ಲ. ಅಂತಹ ಮನೆ ಬೆಳಗೋ ಗೃಹಿಣಿಯರನ್ನು ಗುರುತಿಸಿ, ಗಂಡ-ಹೆಂಡ್ತಿಯ ಅನ್ಯೂನ್ಯತೆಯ ಬಗ್ಗೆ ತಿಳಿದು, ಅವರಿಗೆ ಸನ್ಮಾನಿಸಿ, ಮಾತುಕತೆ ನಡೆಸಿ ಆಟದ ಜೊತೆ ರೇಷ್ಮೆ ಜೊತೆ ಮತ್ತಷ್ಟು ಬೆಲೆಬಾಳುವ ಬಹುಮಾನಗಳನ್ನು ನೀಡುವುದೇ “ಸುವರ್ಣ ಗೃಹಮಂತ್ರಿ” ಕಾರ್ಯಕ್ರಮದ ಶೈಲಿಯಾಗಿದೆ.

     

    ಕರ್ನಾಟಕದ ಗೃಹಿಣಿಯರಿಗಾಗಿಯೇ ಸಿದ್ಧವಾಗಿರೋ ಈ ಕಾರ್ಯಕ್ರಮದಲ್ಲಿ ಇನ್ಮುಂದೆ ನಟ ರವಿಶಂಕರ್ ರವರು ಅಣ್ಣನ ಸ್ಥಾನದಲ್ಲಿ ನಿಂತು ತವರು ಮನೆ ಉಡುಗೊರೆಯಾಗಿ ರೇಷ್ಮೆ ಸೀರೆಯನ್ನು ಕೊಟ್ಟು ಮನೆ ಗೃಹಿಣಿಯನ್ನು ಹಾರೈಸಿ, ರಾಣಿ ಸೀಟಿನಲ್ಲಿ ಕೂರಿಸಿ ಗೌರವಿಸಲಿದ್ದಾರೆ. ಅಷ್ಟೇ ಅಲ್ಲದೆ ಅವರ ಮನೆಗೆ ಬಂದಿರುವ ಆಪ್ತ ಸಂಬಂಧಿಕರಿಗೆ ಹಾಗೂ ಸ್ನೇಹಿತರಿಗೂ ಆಟವನ್ನು ಆಡಿಸಿ ಬಹುಮಾನಗಳನ್ನು ನೀಡಲಿದ್ದಾರೆ. ಇದೇ ಸೋಮವಾರದಿಂದ ಶನಿವಾರ ಮಧ್ಯಾಹ್ನ 1 ಗಂಟೆಗೆ ಈ ಸಂಚಿಕೆಗಳು ಪ್ರಸಾರವಾಗಲಿವೆ.

  • ‘ಗರಡಿ’ ಶೂಟಿಂಗ್ ಮುಗಿಸಿ, ಹೊಸ ಸಿನಿಮಾದಲ್ಲಿ ಯೋಗರಾಜ್ ಭಟ್ ಬ್ಯುಸಿ

    ‘ಗರಡಿ’ ಶೂಟಿಂಗ್ ಮುಗಿಸಿ, ಹೊಸ ಸಿನಿಮಾದಲ್ಲಿ ಯೋಗರಾಜ್ ಭಟ್ ಬ್ಯುಸಿ

    ಟ ಹಾಗೂ ಶಾಸಕ  ಬಿ.ಸಿ.ಪಾಟೀಲ್ ಅವರ ಪತ್ನಿ ವನಜಾ ಪಾಟೀಲ್ ಹಾಗೂ ಪುತ್ರಿ ಸೃಷ್ಟಿ ಪಾಟೀಲ್ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ “ಗರಡಿ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ರಾಮುಹಳ್ಳಿಯ ಜಿ.ವಿ.ಅಯ್ಯರ್ ಸ್ಟುಡಿಯೋದಲ್ಲಿ ‌ಗರಡಿಮನೆ ಸೆಟ್ ಹಾಕಲಾಗಿತ್ತು. ಅಲ್ಲಿ ಕೆಲವು ದಿನಗಳ ಚಿತ್ರೀಕರಣ ನಡೆಸುವುದರೊಂದಿಗೆ “ಗರಡಿ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಈ ಕುರಿತು ಚಿತ್ರತಂಡದ ಸದಸ್ಯರು ಮಾಧ್ಯಮಕ್ಕೆ ಮಾಹಿತಿ ನೀಡಿದರು.

    ಸುಮಾರು ಎಪ್ಪತ್ತು ದಿನಗಳ ಚಿತ್ರೀಕರಣದ ನಂತರ ಇಂದು “ಗರಡಿ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಈ ಸ್ಟುಡಿಯೋದಲ್ಲಿ ನಿರ್ಮಿಸಲಾಗಿದ್ದ “ಗರಡಿ” ಮನೆ ಸೆಟ್ ನಲ್ಲಿ ಚಿತ್ರೀಕರಣ ಮಾಡಿದ್ದೇವೆ. ಈ ಹಂತದ ವಿಶೇಷವೆಂದರೆ, ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಅವರು  ನಾಯಕನ ತಂದೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಯಶಸ್ ಸೂರ್ಯ, ಸೋನಾಲ್ ‍ಮೊಂತೆರೊ, ಬಿ.ಸಿ.ಪಾಟೀಲ್, ರವಿಶಂಕರ್, ಸುಜಯ್ ಬೇಲೂರು, ರಘು, ಧರ್ಮಣ್ಣ, ಚೆಲುವರಾಜ್, ಪೃಥ್ವಿ ಮುಂತಾದವರು ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ. ನಿರ್ಮಾಪಕರಾದ ಬಿ.ಸಿ.ಪಾಟೀಲ್ ಅವರಿಗೆ ವಿಶೇಷ ಧನ್ಯವಾದ. “ಗರಡಿ” ಹಳೇ ಮೈಸೂರು ಭಾಗದಲ್ಲಿ ನಡೆಯುವ ಕಥೆ. ದೇಸಿ ಕ್ರೀಡೆಗೆ ಒತ್ತು ನೀಡುವ ಸಲುವಾಗಿ ಈ ವಿಭಿನ್ನ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದೇವೆ.‌ ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ‌ಪ್ರೋತ್ಸಾಹವಿರಲಿ ಎಂದರು ನಿರ್ದೇಶಕ ಯೋಗರಾಜ್ ಭಟ್. ಇದನ್ನೂ ಓದಿ: ದುಬೈಗೆ ಹಾರಿದ ಮಾಲಾಶ್ರೀ ಪುತ್ರಿ ರಾಧನಾ ರಾಮ್

    ಇಂದು “ಗರಡಿ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರ ಚೆನ್ನಾಗಿ ಬಂದಿದೆ. ಚಿತ್ರದ ಆಡಿಯೋ ಹಕ್ಕು ಸರಿಗಮಪ‌ ಸಂಸ್ಥೆಗೆ ಒಂದು ಕೋಟಿಗೆ ಮಾರಾಟವಾಗಿದೆ. ಡಬ್ಬಿಂಗ್, ರಿಮೇಕ್ ರೈಟ್ಸ್ ಗೂ ಸಾಕಷ್ಟು ಬೇಡಿಕೆ ಇದೆ. ನಮ್ಮ  ಸಂಸ್ಥೆಯ ನಿರ್ಮಾಣದ ಹದಿನಾರನೇ ಚಿತ್ರ. ಫೆಬ್ರವರಿ ಕೊನೆ ಅಥವಾ ಮಾರ್ಚ್ ಮೊದಲ ವಾರದಲ್ಲಿ ಚಿತ್ರ ತೆರೆಗೆ ಬರಲಿದೆ ಎಂದ ಬಿ.ಸಿ.ಪಾಟೀಲ್ ಅವರು ಚಿತ್ರತಂಡಕ್ಕೆ ಧನ್ಯವಾದ ತಿಳಿಸಿದರು. ನಾನು ಪೈಲ್ವಾನ್ ಪಾತ್ರದಲ್ಲಿ‌ ಕಾಣಿಸಿಕೊಂಡಿದ್ದೇನೆ. ಇದಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದೆ.  ಅನುಭವಿ ಕಲಾವಿದರೊಂದಿಗೆ ‌ನಟಿಸಿರುವ ಖುಷಿಯಿದೆ. ಅವಕಾಶ ನೀಡಿದ ನಿರ್ಮಾಪಕ ಹಾಗೂ ನಿರ್ದೇಶಕರಿಗೆ ವಂದನೆಗಳು ಎಂದರು ನಾಯಕ ಯಶಸ್ ಸೂರ್ಯ.

    ನಾಯಕಿ ಸೋನಾಲ್ ಮೊಂತೆರೊ ಸಹ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು. ನಟ “ಆರ್ಮುಗಂ” ರವಿಶಂಕರ್ ಮಾತನಾಡಿ, ಈ ಚಿತ್ರದಲ್ಲಿ ಅಭಿನಯಿಸಿರುವುದು ಖುಷಿಯಾಗಿದೆ. ಯೋಗರಾಜ್ ಭಟ್ ಹಾಗೂ ಬಿ.ಸಿ.ಪಾಟೀಲ್ ಅವರ ಜೊತೆ ಇದು ನನ್ನ ಮೊದಲ ಚಿತ್ರ ಎಂದರು. ನಟ ಸುಜಯ್ ಬೇಲೂರ್ ಸಹ ತಮ್ಮ ಪಾತ್ರ ಪರಿಚಯ ಮಾಡಿಕೊಂಡರು. ಕಲಾವಿದರಾದ ರಘು, ಧರ್ಮಣ್ಣ, ಚೆಲುವರಾಜ್, ಪೃಥ್ವಿ ಹಾಗೂ ಕಥೆ ಬರೆದಿರುವ  ವಿಕಾಸ್ “ಗರಡಿ” ಚಿತ್ರದ ಕುರಿತು ಮಾತನಾಡಿದರು. ನಿರ್ಮಪಕಿ ಸೃಷ್ಟಿ ಪಾಟೀಲ್ ಚಿತ್ರೀಕರಣ ಸರಾಗವಾಗಿ ಮುಗಿಯಲು ಸಹಕಾರ ನೀಡಿದ್ದ ಸಮಸ್ತ ತಂಡಕ್ಕೂ ಧನ್ಯವಾದ ತಿಳಿಸಿದರು. ನಿರ್ಮಾಪಕ ಬಿ.ಸಿ.ಪಾಟೀಲ್, ನಿರ್ದೇಶಕ ಯೋಗರಾಜ್ ಭಟ್ ಹಾಗೂ ನಾಯಕ ಯಶಸ್ ಸೂರ್ಯ ಸೇರಿದಂತೆ ಚಿತ್ರತಂಡದ ಸದಸ್ಯರು ದರ್ಶನ್ ಅವರಿಗೆ ಧನ್ಯವಾದ ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜವಾರಿ ಭಾಷೆಯಲ್ಲಿ ರೆಡಿ ಆಯಿತು ‘ಬಯಲುಸೀಮೆ’ ಸಿನಿಮಾ

    ಜವಾರಿ ಭಾಷೆಯಲ್ಲಿ ರೆಡಿ ಆಯಿತು ‘ಬಯಲುಸೀಮೆ’ ಸಿನಿಮಾ

    ಭಾಷೆಯ ಗಡಿ ಎಂಬ ಎಲ್ಲೆಯನ್ನು ಮೀರಿದ್ದು ಸಿನಿಮಾ. ಅದರ ಉದ್ದೇಶ ಒಂದೇ ಮನರಂಜನೆ. ಇದೀಗ ಅದೇ ಮನರಂಜನೆ ಉದ್ದೇಶ ಇಟ್ಟುಕೊಂಡು ಉತ್ತರ ಕರ್ನಾಟಕದ ಜವಾರಿ ಭಾಷೆಯ ಘಮ ಹೊತ್ತ ‘ಬಯಲು ಸೀಮೆ’ ಸಿನಿಮಾ ರೆಡಿಯಾಗಿದೆ.  ವರುಣ್ ಕಟ್ಟೀಮನಿ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಬಯಲುಸೀಮೆ’ ಸಿನಿಮಾ ಹೆಸರೇ ಸೂಚಿಸುವಂತೆ ಪಕ್ಕಾ ಉತ್ತರ ಕರ್ನಾಟಕ ಸೊಗಡಿರುವ ಚಿತ್ರ. ರಗಡ್ ಕಥೆ ಈ ಸಿನಿಮಾದ ಜೀವಾಳ. ಪೊಲಿಟಿಕಲ್ ಕ್ರೈಂ ಥ್ರಿಲ್ಲರ್ ಸಬ್ಜೆಕ್ಟ್ ಚಿತ್ರದ ಕಥಾವಸ್ತು. ಎಂಬತ್ತರ ದಶಕ ಹಾಗೂ ಈಗಿನ ಕಾಲಘಟ್ಟವನ್ನಿಟ್ಟುಕೊಂಡು ಕಥೆ ಹೆಣೆದು ನಿರ್ದೇಶನ ಮಾಡಿದ್ದಾರೆ ವರುಣ್ ಕಟ್ಟೀಮನಿ. ಕಥೆಗೆ ತಕ್ಕಂತೆ ಸಾಕಷ್ಟು ಟ್ವಿಸ್ಟ್ ಟರ್ನ್ ಗಳು ಚಿತ್ರದಲ್ಲಿದ್ದು, ನೋಡುಗರನ್ನು ಥ್ರಿಲ್ ಗೊಳಿಸುವ ಕಥಾಹಂದರ ಸಿನಿಮಾದಲ್ಲಿದೆ. ಈಗಾಗಲೇ ಸಿನಿಮಾದ ಹಾಡುಗಳು ಬಿಡುಗಡೆಯಾಗಿ ಗಮನ ಸೆಳೆದಿವೆ. ಸೆನ್ಸಾರ್ ನಲ್ಲಿ ‘ಎ’ ಸರ್ಟಿಫಿಕೇಟ್ ಪಡೆದುಕೊಂಡಿರುವ ಈ ಸಿನಿಮಾ ಸದ್ಯದಲ್ಲೇ ತೆರೆ ಕಾಣೋದಕ್ಕೆ ರೆಡಿಯಾಗಿದೆ.

    ವರುಣ್ ಕಟ್ಟೀಮನಿ ನಿರ್ದೇಶನದ ಜೊತೆಗೆ ಚಿತ್ರದಲ್ಲಿ ನಾಯಕ ನಟನಾಗಿ ನಟಿಸಿದ್ದು, ಸಂಯುಕ್ತ ಹೊರನಾಡು ನಾಯಕಿಯಾಗಿ ನಟಿಸಿದ್ದಾರೆ. ಆರ್ಮುಗಂ ರವಿಶಂಕರ್, ಟಿ.ಎಸ್ ನಾಗಾಭರಣ, ಯಶ್ ಶೆಟ್ಟಿ, ಭವಾನಿ ಪ್ರಕಾಶ್, ಅರ್ಚನಾ ಕೊಟ್ಟಿಗೆ, ಲಕ್ಷ್ಮೀ ನಾಡಗೌಡರ್, ಸಂತೋಷ್ ಉಪ್ಪಿನ್, ನಾಗರಾಜ ಭಟ್, ಮಹೇಶ್ ದೊಡ್ಡಕಲ್ನವರ್, ಪ್ರದೀಪ್ ರಾಜ್ ಸೇರಿದಂತೆ ಬಹುದೊಡ್ಡ ತಾರಾಗಣ ಚಿತ್ರದಲ್ಲಿದೆ.  ಇದನ್ನೂ ಓದಿ: ರಚನಾ ದಶರಥ್ ಜೊತೆ ಎಂಗೇಜ್‌ಮೆಂಟ್ ಮಾಡಿಕೊಂಡ ಲೋಕೇಶ್ ಬಸವಟ್ಟಿ

    ಈ ಸಿನಿಮಾ ಉತ್ತರ ಕರ್ನಾಟಕದ ಖಡಕ್ ಖಾನಾವಳಿ ಊಟ ಇದ್ದಂಗೆ. ಕಂಪ್ಲೀಟ್ ಸಿನಿಮಾ ಉತ್ತರ ಕರ್ನಾಟಕ ಸ್ಲ್ಯಾಂಗ್ ಇರುತ್ತೆ. ಎಲ್ಲಾ ಕಲಾವಿದರು ಆ ಸ್ಲ್ಯಾಂಗ್ ನಲ್ಲೇ ಡಬ್ ಮಾಡಿದ್ದಾರೆ. ಉತ್ತರ ಕರ್ನಾಟಕ ಭಾಗದ ಪೊಲಿಟಿಕಲ್, ಕ್ರೈಂ,ಅಲ್ಲಿನ ಸಂಸ್ಕೃತಿ ಎಲ್ಲವನ್ನು ಈ ಚಿತ್ರದಲ್ಲಿ ಕಟ್ಟಿಕೊಡಲಾಗಿದೆ. ಕಮರ್ಶಿಯಲ್ ಎಲಿಮೆಂಟ್ ಗಳನ್ನು ಇಟ್ಟುಕೊಂಡು ವಿಭಿನ್ನವಾಗಿ ಕಥೆಯನ್ನು ಹೇಳುವ ಪ್ರಯತ್ನ ಮಾಡಿದ್ದೇವೆ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ ನಿರ್ದೇಶಕ ವರುಣ್ ಕಟ್ಟೀಮನಿ.

    ಗಾಯಿತ್ರಿ ದೇವಿ ಕ್ರಿಯೇಷನ್ಸ್ ಮತ್ತು ಪಿ ಆರ್ ಎಸ್ ಕ್ರಿಯೇಷನ್ಸ್ ಬ್ಯಾನರ್ ನಡಿ ಲಕ್ಷ್ಮಣ್ ಸಾ ಶಿಂಗ್ರಿ, ಶ್ರೀಧರ್ ಬಿದರಳ್ಳಿ, ರಶ್ಮೀ ವರುಣ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಗಜೇಂದ್ರಗಡ, ಬೀಳಗಿ, ಮುಂಬೈನಲ್ಲಿ ಚಿತ್ರವನ್ನು ಸೆರೆ ಹಿಡಿಯಲಾಗಿದ್ದು, ಸುಜಯ್ ಕುಮಾರ್ ಬಾವಿಕಟ್ಟಿ ಕ್ಯಾಮೆರಾವರ್ಕ್, ಮಾನಸಾ ಹೊಳ್ಳ ಸಂಗೀತ ನಿರ್ದೇಶನ, ಕಿರಣ್ ಕುಮಾರ್ ಸಂಕಲನ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

  • ದಂಡುಪಾಳ್ಯ ನಿರ್ದೇಶಕನ ಮತ್ತೊಂದು ಸಿನಿಮಾ ‘ಹುಬ್ಬಳ್ಳಿ ಡಾಬಾ’

    ದಂಡುಪಾಳ್ಯ ನಿರ್ದೇಶಕನ ಮತ್ತೊಂದು ಸಿನಿಮಾ ‘ಹುಬ್ಬಳ್ಳಿ ಡಾಬಾ’

    ಶ್ರೀನಿವಾಸರಾಜು (Srinivas Raju) ನಿರ್ದೇಶನದ, ಚರಣ್ ಅರ್ಜುನ್ ಸಂಗೀತ ನೀಡಿರುವ “ಹುಬ್ಬಳ್ಳಿ ಡಾಬಾ” (Hubli Dhaba)  ಚಿತ್ರದ ಹಾಡೊಂದು‌ ಆದಿತ್ಯ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ.  ಡಾ||ವಿ.ನಾಗೇಂದ್ರಪ್ರಸಾದ್ ಈ ಹಾಡನ್ನು ಬರೆದಿದ್ದಾರೆ. ಮೋಹನ ಭೋಗರಾಜು ಹಾಡಿರುವ ಈ  ಹಾಡು ಮೆಚ್ಚುಗೆ ಪಡೆಯುತ್ತಿದೆ.  ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ನವೆಂಬರ್ 4 ರಂದು ತೆರೆಗೆ ಬರಲಿದೆ.

    “ದಂಡುಪಾಳ್ಯ”, ” ಶಿವಂ” ಸೇರಿದಂತೆ ವಿಭಿನ್ನ ರೀತಿಯ ಚಿತ್ರಗಳನ್ನು ನಿರ್ದೇಶಿಸಿರುವ ಶ್ರೀನಿವಾಸರಾಜು ಅವರ ನಿರ್ದೇಶನದ 10ನೇ ಚಿತ್ರವಿದು. ನಿರ್ದೇಶಕರೆ ಕಥೆ ಹಾಗೂ ಚಿತ್ರಕಥೆ ಬರೆದಿದ್ದಾರೆ. “ಹುಬ್ಬಳ್ಳಿ ಡಾಬಾ” ಚಿತ್ರ ಮರ್ಡರ್ ಮಿಸ್ಟರಿ ಕಥಾಹಂದರ ಹೊಂದಿದ್ದು, ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ಏಕಕಾಲಕ್ಕೆ ನಿರ್ಮಾಣವಾಗಿದೆ. ನವೆಂಬರ್ 4 ರಂದು ಎರಡೂ ಭಾಷೆಗಳಲ್ಲಿ ಬಿಡುಗಡೆ ಆಗಲಿದೆ. ಇದನ್ನೂ ಓದಿ:ರೂಪೇಶ್-ಸಾನ್ಯ ಲವ್‌ಸ್ಟೋರಿಯಲ್ಲಿ ಹೊಸ ಟ್ವಿಸ್ಟ್: ಗುರೂಜಿ ಸೊಸೆಯಂತೆ ಸಾನ್ಯ

    ನವೀನ್ ಚಂದ್ರ, ದಿವ್ಯ ಪಿಳ್ಳೈ, ಅನನ್ಯ ಸೇನ್ ಗುಪ್ತ, ರವಿಶಂಕರ್ (Ravi Shankar), ರಾಜಾ ರವೀಂದರ್, ಅಯ್ಯಪ್ಪ ಶರ್ಮ, ನಾಗಾ ಬಾಬು, ಪೃಥ್ವಿ, ಪೂಜಾ ಗಾಂಧಿ (Pooja Gandhi), ರವಿ ಕಾಳೆ, ಪೆಟ್ರೋಲ್ ಪ್ರಸನ್ನ, ಡ್ಯಾನಿ ಕುಟ್ಟಪ್ಪ, ಮುನಿರಾಜು, ಜೈದೇವ್ ಮೋಹನ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.  ವೆಂಕಟ್ ಪ್ರಸಾದ್ ಛಾಯಾಗ್ರಹಣ, ಗ್ಯಾರಿ ಬಿ.ಹೆಚ್ ಸಂಕಲನ ಹಾಗೂ ವೆಂಕಟ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

  • ಹೊಸ ಹುಡುಗರ ಸಾಹಸಕ್ಕೆ ಸಾಥ್ ನೀಡಿದ ಡಾಲಿ ಧನಂಜಯ್: ಸ್ಯಾಂಡಲ್ ವುಡ್ ಗೆ ನವ ‘ಸೂರ್ಯ’

    ಹೊಸ ಹುಡುಗರ ಸಾಹಸಕ್ಕೆ ಸಾಥ್ ನೀಡಿದ ಡಾಲಿ ಧನಂಜಯ್: ಸ್ಯಾಂಡಲ್ ವುಡ್ ಗೆ ನವ ‘ಸೂರ್ಯ’

    ನ್ನಡ ಸಿನಿಮಾ ರಂಗದ ಖ್ಯಾತ ನಿರ್ದೇಶಕ, ನಟ ಬಿ.ಸುರೇಶ ಬಳಿ ಕೆಲಸ ಮಾಡಿದ ಸಾಗರ್ (Sagar), ಇದೀಗ ಸಿನಿಮಾ ರಂಗಕ್ಕೆ ನಿರ್ದೇಶಕರಾಗಿ ಪ್ರವೇಶ ಮಾಡುತ್ತಿದ್ದಾರೆ. ಇವರ ನಿರ್ದೇಶನದಲ್ಲಿ ಬರುತ್ತಿರುವ ಚಿತ್ರಕ್ಕೆ ‘ಸೂರ್ಯ’ (Surya) ಎಂದು ಹೆಸರಿಡಲಾಗಿದೆ. ಈ ಸಿನಿಮಾದ ಮೂಲಕ ಕನ್ನಡ ಸಿನಿಮಾ ರಂಗಕ್ಕೆ ಮತ್ತೋರ್ವ ನಾಯಕ ನಟನ ಎಂಟ್ರಿ ಆಗುತ್ತಿದ್ದು, ಸೂರ್ಯ ಚಿತ್ರದ ಮೂಲಕ ಪ್ರಶಾಂತ್ (Prashant) ಚಿತ್ರ ರಂಗಕ್ಕೆ ಪ್ರವೇಶ ಮಾಡುತ್ತಿದ್ದಾರೆ. ಇಂದು ಪ್ರಶಾಂತ್ ಅವರ ಹುಟ್ಟು ಹಬ್ಬವಾಗಿದ್ದು, ಈ ದಿನದಂದು ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ. ಡಾಲಿ ಧನಂಜಯ್ (Dhananjay) ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಮಾಡುವ ಮೂಲಕ ತಂಡಕ್ಕೆ ಸಾಥ್ ನೀಡಿದ್ದಾರೆ.

    ನಿರ್ದೇಶಕ ಸಾಗರ್ ಈ ಹಿಂದೆ ಕಿರುತೆರೆ ಜಗತ್ತಿನಲ್ಲಿ ಸಾಕಷ್ಟು ಕೆಲಸ ಮಾಡಿದ್ದು, ಇದೀಗ ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದ್ದಾರೆ. ಮೊದಲ ಸಿನಿಮಾದಲ್ಲೇ ಲವ್ ಸ್ಟೋರಿ ಜೊತೆಗೆ ಸಾಹಸ ಪ್ರಧಾನ ಅಂಶಗಳನ್ನು ಬೆರೆಸಿ, ಪಕ್ಕಾ ಕಮರ್ಷಿಯಲ್ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪ್ರಶಾಂತ್ ಅವರನ್ನು ಪರಿಚಯಿಸುತ್ತಿದ್ದು, ಪ್ರಶಾಂತ್ ಕೂಡ ಪಾತ್ರಕ್ಕೆ ಬೇಕಾದ ಎಲ್ಲ ಸಿದ್ಧತೆಯನ್ನೂ ಮಾಡಿಕೊಂಡು ಕ್ಯಾಮೆರಾ ಮುಂದೆ ನಿಲ್ಲುತ್ತಿದ್ದಾರೆ. ಇದನ್ನೂ ಓದಿ:ಸೋಮಣ್ಣ – ಗುರೂಜಿ ಗೆಲುವು ನೋಡಿ, ಗಳಗಳನೆ ಅತ್ತ ಸಾನ್ಯ ಅಯ್ಯರ್

    ಪಕ್ಕಾ ತಯಾರಿಯೊಂದಿಗೆ ಸಿನಿಮಾ ಶುರು ಮಾಡಿರುವ ತಂಡ, ಈ ತಿಂಗಳು ಚಿತ್ರಕ್ಕೆ ಮುಹೂರ್ತ ಸಮಾರಂಭ ನಡೆಯುತ್ತಿದ್ದು, ಅಕ್ಟೋಬರ್ ನಿಂದ ಚಿತ್ರೀಕರಣ ಆರಂಭಿಸಲಿದೆ. ಚಿತ್ರದ ಟ್ಯಾಗ್ ಲೈನ್ ‘ದಿ ಪವರ್ ಆಫ್ ಲವ್’ ಹೇಳುವಂತೆ, ಅದ್ಭುತವಾದ ಲವ್ ಸ್ಟೋರಿಯನ್ನು ಈ ಸಿನಿಮಾದಲ್ಲಿ ಹೇಳಲಿದ್ದಾರಂತೆ ನಿರ್ದೇಶಕರು. ರವಿಶಂಕರ್ (Ravi Shankar), ಶ್ರುತಿ, ಪ್ರಮೋದ್ ಶೆಟ್ಟಿ ಸೇರಿದಂತೆ ಪ್ರತಿಭಾವಂತ ಕಲಾವಿದರ ತಂಡವೇ ಸಿನಿಮಾದಲ್ಲಿದೆ.

    ತಾಂತ್ರಿಕ ವರ್ಗವೂ ಇದಕ್ಕೆ ಹೊರತಾಗಿಲ್ಲ. ಕೆಜಿಎಫ್ ಸಿನಿಮಾದ ಸಿನಿಮಾಟೋಗ್ರಾಫರ್ ಭುವನ್ ಜೊತೆ ಕೆಲಸ ಮಾಡಿರುವ ಮನುರಾಜ್ ಕ್ಯಾಮೆರಾಮೆನ್ ಆಗಿದ್ದು, ಖ್ಯಾತ ಸಂಗೀತ ನಿರ್ದೇಶಕ ಯುವನ್ ಶಂಕರ್ ರಾಜ್ ಬಳಿ ಕೆಲಸ ಮಾಡಿರುವ ಶ್ರೀಸಸ್ತ ಅವರ ಸಂಗೀತ ಸಂಯೋಜನೆ ಚಿತ್ರಕ್ಕಿರಲಿದೆ. ನಂದಿ ಸಿನಿಮಾಸ್ ಬ್ಯಾನರ್ ಅಡಿ ಬಸವರಾಜ್ ಬೆಣ್ಣಿ (Basavaraj Benni) ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸ್ಯಾಂಡಲ್‍ವುಡ್ ನಟಿಯ ಸ್ನೇಹಿತ ವಂಚನೆ ಕೇಸಲ್ಲಿ ಅರೆಸ್ಟ್

    ಸ್ಯಾಂಡಲ್‍ವುಡ್ ನಟಿಯ ಸ್ನೇಹಿತ ವಂಚನೆ ಕೇಸಲ್ಲಿ ಅರೆಸ್ಟ್

    ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ಕೇಸ್ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಇದೀಗ ಡ್ರಗ್ಸ್ ಕೇಸ್‍ನಲ್ಲಿ ಸಿಲುಕಿದ್ದ ಚಂದನವನದ ನಟಿಯ ಸ್ನೇಹಿತ ಪೊಲೀಸರ ಬಲೆಗೆ ಬಿದ್ದಿದ್ದಾನೆ.

    ಸಿಸಿಬಿಯಲ್ಲಿ ಡ್ರಗ್ಸ್ ಕೇಸ್‍ನಲ್ಲಿ ಬಂಧನವಾಗಿ ಸದ್ದು ಮಾಡಿದ್ದ ಸ್ಯಾಂಡಲ್‍ವುಡ್ ನಟಿಯ ಆಪ್ತ, ಆರ್‍ಟಿಒ ಎಸ್‍ಡಿಎ ರವಿಶಂಕರ್ ವಂಚನೆ ಪ್ರಕರಣದಲ್ಲಿ ಮಲ್ಲೇಶ್ವರಂ ಪೊಲೀಸರ ಅತಿಥಿಯಾಗಿದ್ದಾನೆ. ವಾಹನ ಮಾಲೀಕರ ಬಳಿ ಒಂದು ವರ್ಷದ ಟ್ಯಾಕ್ಸ್ ಪಡೆದು ಟ್ಯಾಕ್ಸ್ ಕಟ್ಟದೇ ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಮೇಲೆ ಅಜಯ್ ಹಾಗೂ ರವಿಶಂಕರ್ ಅನ್ನು ಬಂಧಿಸಲಾಗಿದೆ.  ಇದನ್ನೂ ಓದಿ: ಸಿದ್ದರಾಮೋತ್ಸವದಲ್ಲಿ ರಾಹುಲ್ ಪಾಲ್ಗೊಳ್ತಾರೆ, `ಸರಿಯಾಗಿ ನಡ್ಕೊಳಿ’ – ಕೆಪಿಸಿಸಿಗೆ ಹೈಕಮಾಂಡ್ ವಾರ್ನಿಂಗ್

    ಆರೋಪಿಗಳಾದ ರವಿಶಂಕರ್ ಹಾಗೂ ಅಜಯ್, ಆಶಾ ಯೋಗೇಶ್ ಬಳಿ ಲೈಫ್ ಟೈಮ್ ಟ್ಯಾಕ್ಸ್ ಮಾಡಿಸಿಕೊಡುವುದಾಗಿ 1,37,529 ರೂಪಾಯಿ ಪಡೆದು ಟ್ಯಾಕ್ಸ್ ಕಟ್ಟದೆ ವಂಚಿಸಿರುತ್ತಾರೆ. ಆರೋಪಿತರ ವಂಚನೆ ಬಗ್ಗೆ ಮಹಿಳೆ ಆಶಾ ಯೋಗೇಶ್ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಮಹಿಳೆ ಕೊಟ್ಟ ದೂರಿನ ಆಧಾರದ ಮೇಲೆ ಇಬ್ಬರನ್ನು ಪೊಲೀಸರು ಕಸ್ಟಡಿಗೆ ಪಡೆದು ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ನಾಳೆಯಿಂದ ದುಬಾರಿ ದುನಿಯಾ – ಮೀನು, ಮಾಂಸ, ಗೋಧಿ ಸೇರಿ ಎಲ್ಲವೂ ಕಾಸ್ಟ್ಲಿ

    Live Tv
    [brid partner=56869869 player=32851 video=960834 autoplay=true]

  • ಚಾಮುಂಡಿ ದರ್ಶನ ಮುಗಿಸಿ ಮೈಸೂರಿನಲ್ಲಿ ಉಪಾಧ್ಯಕ್ಷನನ್ನು ಭೇಟಿಯಾದ ಶಿವರಾಜ್ ಕುಮಾರ್

    ಚಾಮುಂಡಿ ದರ್ಶನ ಮುಗಿಸಿ ಮೈಸೂರಿನಲ್ಲಿ ಉಪಾಧ್ಯಕ್ಷನನ್ನು ಭೇಟಿಯಾದ ಶಿವರಾಜ್ ಕುಮಾರ್

    ಚಿಕ್ಕಣ್ಣ ಇದೇ ಮೊದಲ ಬಾರಿಗೆ ಹೀರೋ ಆಗಿ ನಟಿಸುತ್ತಿರುವ ಉಪಾಧ್ಯಕ್ಷ ಸಿನಿಮಾ ಶೂಟಿಂಗ್ ಮೈಸೂರು ಸುತ್ತಮುತ್ತ ನಡೆಯುತ್ತಿದೆ. ಈ ಸಂದರ್ಭದಲ್ಲಿ ಶೂಟಿಂಗ್ ಸ್ಥಳಕ್ಕೆ ನಟ ಶಿವರಾಜ್ ಕುಮಾರ್ ಭೇಟಿ ಮಾಡಿ ಕೆಲ ಹೊತ್ತು ಕಳೆದಿದ್ದಾರೆ. ಬೈರಾಗಿ ಸಿನಿಮಾದ ಪ್ರಚಾರಕ್ಕಾಗಿ ಇಂದು ಮೈಸೂರು ಮತ್ತು ಚಾಮರಾಜನಗರಕ್ಕೆ ಭೇಟಿ ನೀಡುತ್ತಿರುವ ಶಿವರಾಜ್ ಕುಮಾರ್, ಈ ಸಂದರ್ಭದಲ್ಲಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹೋಗಿ  ದೇವಿಯ ದರ್ಶನ ಕೂಡ ಪಡೆದಿದ್ದಾರೆ.

    ಚಾಮುಂಡಿ ದರ್ಶನದ ನಂತರ ಉಪಾಧ್ಯಕ್ಷ ಸಿನಿಮಾದ ಶೂಟಿಂಗ್ ಸ್ಥಳಕ್ಕೆ ತೆರಳಿದ ಶಿವರಾಜ್ ಕುಮಾರ್, ಕೆಲ ಹೊತ್ತು ಸಿನಿಮಾ ತಂಡದೊಂದಿಗೆ ಕಳೆದರು. ಈ ಸಂದರ್ಭದಲ್ಲಿ ಡಾಲಿ ಧನಂಜಯ್ ಕೂಡ ಶಿವಣ್ಣನಿಗೆ ಸಾಥ್ ನೀಡಿದರು. ಶೂಟಿಂಗ್ ಸ್ಥಳದಲ್ಲಿ ಚಿಕ್ಕಣ್ಣ, ರವಿಶಂಕರ್ ಸೇರಿದಂತೆ ಹಲವು ಕಲಾವಿದರು ಹಾಜರಿದ್ದರು. ಉಪಾಧ್ಯಕ್ಷ ಸಿನಿಮಾಗೆ ಒಳ್ಳೆಯದಾಗಲಿ ಎಂದು ಹಾರೈಸಿ, ಬೈರಾಗಿ ಟೀಮ್ ಜೊತೆ ಶಿವರಾಜ್ ಕುಮಾರ್ ಚಾಮರಾಜನಗರದತ್ತ ಹೊರಟರು. ಇದನ್ನು ಓದಿ:ರಶ್ಮಿಕಾ ಮಂದಣ್ಣ ಸಂಭಾವನೆ 5 ಕೋಟಿನಾ? : ನಂ.1 ಸ್ಥಾನಕ್ಕೆ ಏರಿದ ಕೊಡಗಿನ ಬೆಡಗಿ

    ಇಂದು ಚಾಮರಾಜನಗರದಲ್ಲಿ ಬೈರಾಗಿ ಸಿನಿಮಾದ ಪ್ರಿ ರಿಲೀಸ್ ಇವೆಂಟ್ ಆಯೋಜನೆಯಾಗಿದೆ. ಆ ಕಾರ್ಯಕ್ರಮದಲ್ಲಿ ಶಿವರಾಜ್ ಕುಮಾರ್, ಡಾಲಿ, ಪೃಥ್ವಿ ಅಂಬರ್ ಸೇರಿದಂತೆ ಹಲವು ಕಲಾವಿದರು ಭಾಗಿಯಾಗಲಿದ್ದಾರೆ. ಅಲ್ಲದೇ, ಸಿನಿಮಾ ರಂಗದ ಅನೇಕ ಗಣ್ಯರು ಕೂಡ ಈ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ. ಇಂದು ಸಂಜೆ ಪ್ರಿ ರಿಲೀಸ್ ಇವೆಂಟ್ ಚಾಮರಾಜನಗರದಲ್ಲಿ ನಡೆಯಲಿದೆ.

    Live Tv

  • ವಿರೋಧ ಪಕ್ಷಗಳು ಹೇಳಿದ್ದನ್ನು ಜಾರಿಗೆ ತಂದಿದ್ದೇವೆ – ದಾಖಲೆ ರಿಲೀಸ್‌ ಮಾಡಿದ ರವಿಶಂಕರ್‌ ಪ್ರಸಾದ್‌

    ವಿರೋಧ ಪಕ್ಷಗಳು ಹೇಳಿದ್ದನ್ನು ಜಾರಿಗೆ ತಂದಿದ್ದೇವೆ – ದಾಖಲೆ ರಿಲೀಸ್‌ ಮಾಡಿದ ರವಿಶಂಕರ್‌ ಪ್ರಸಾದ್‌

    – ವಿರೋಧ ಪಕ್ಷಗಳ ಪ್ರಣಾಳಿಕೆಯಲ್ಲಿ ಉಲ್ಲೇಖ
    – ವಿರೋಧಿಸಬೇಕೆಂಬ ಕಾರಣಕ್ಕೆ ವಿರೋಧ

    ನವದೆಹಲಿ: ವಿರೋಧ ಮಾಡಬಕೇಂಬ ಉದ್ದೇಶಕ್ಕಾಗಿ ಕಾಂಗ್ರೆಸ್‌ ಮತ್ತು ವಿಪಕ್ಷಗಳು ಕೃಷಿ ಮಸೂದೆಯನ್ನು ವಿರೋಧಿಸುತ್ತಿದ್ದಾರೆ ಎಂದು ಕಾನೂನು ಸಚಿವ ರವಿಶಂಕರ್‌ ಪ್ರಸಾದ್‌ ಹೇಳಿದ್ದಾರೆ.

    ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 2019ರ ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿಕೃಷಿ ಉತ್ಪಾದನಾ ಮಾರುಕಟ್ಟೆ ಸಮಿತಿ(ಎಪಿಎಂಸಿ) ಯನ್ನು ರದ್ದುಪಡಿಸುವ /ತಿದ್ದುಪಡಿ ಮಾಡುವ ಭರವಸೆ ನೀಡಲಾಗಿತ್ತು. ಬಿಜೆಪಿ ಈಗ ಮಸೂದೆ ತಂದಿದ್ದಕ್ಕೆ ವಿರೋಧಿಸುವ ಮೂಲಕ ಕಾಂಗ್ರೆಸ್‌ ದ್ವಿಮುಖ ನೀತಿಯನ್ನು ತೋರಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

    ಯುಪಿಎ ಅವಧಿಯಲ್ಲಿ ಕೃಷಿ ಅಭಿವೃದ್ಧಿಗೆ ಕಾಂಗ್ರೆಸ್‌ ಏನು ಮಾಡಲು ಮುಂದಾಗಿತ್ತೋ ಅದನ್ನೇ ಮೋದಿ ಸರ್ಕಾರ ಜಾರಿಗೆ ತರಲು ಮುಂದಾಗಿದೆ. ವಿರೋಧ ಪಕ್ಷಗಳು ಚುನಾವಣೆಯಲ್ಲಿ ಸೋತಿವೆ. ಈಗ ಪ್ರತಿಭಟನೆಗಳಿಗೆ ಬೆಂಬಲ ನೀಡುವ ಮೂಲಕ ಅಸ್ವಿತ್ವ ಉಳಿಸಿಕೊಳ್ಳಲು ಮುಂದಾಗಿವೆ ಎಂದು ಕಿಡಿಕಾರಿದರು.

    ಎಪಿಎಂಸಿ ಕಾಯ್ದೆಯನ್ನು ರದ್ದುಪಡಿಸುತ್ತೇವೆ. ರಫ್ತು ಸೇರಿದಂತೆ ಕೃಷಿ ಉತ್ಪನ್ನಗಳ ವ್ಯಾಪಾರವನ್ನು ಎಲ್ಲಾ ನಿರ್ಬಂಧಗಳಿಂದ ಮುಕ್ತಗೊಳಿಸುತ್ತೇವೆ ಎಂದು 2019 ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ ಹೇಳಿತ್ತು. ಈಗ ನಾವು ಜಾರಿಗೆ ತಂದಿದ್ದಕ್ಕೆ ವಿರೋಧಿಸುತ್ತಿದೆ ಎಂದು ಹೇಳಿದರು.

    ಹೊಸ ಕೃಷಿ ಕಾನೂನುಗಳನ್ನು ವಿರೋಧಿಸುತ್ತಿರುವ ಶರದ್ ಪವಾರ್ ಅವರು ಕೃಷಿ ಸಚಿವರಾಗಿದ್ದಾಗ 2010ರಲ್ಲಿ ಕೃಷಿ ಮಾರುಕಟ್ಟೆ ಮೂಲಸೌಕರ್ಯದಲ್ಲಿ ಖಾಸಗಿ ವಲಯ ಭಾಗವಹಿಸುವ ಸಂಬಂಧ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು. ಈ ಪತ್ರದಲ್ಲಿ ಮಾರುಕಟ್ಟೆಯಲ್ಲಿ ಸ್ಪರ್ಧೆ ಹೆಚ್ಚಿ ರೈತರಿಗೆ ನೆರವಾಗಲು ಖಾಸಗಿ ವಲಯಗಳು ಪಾಲ್ಗೊಳ್ಳುವಿಕೆಯ ಬಗ್ಗೆ ನಿಮ್ಮ ಅಭಿಪ್ರಾಯ ಏನು ತಿಳಿಸಿ ಎಂದು ಪತ್ರದ ಬರೆದು ಕೋರಿದ್ದರು. ಆದರೆ ಈಗ ಬಿಜೆಪಿಯನ್ನು ವಿರೋಧಿಸಬೇಕು ಎಂಬ ಕಾರಣಕ್ಕೆ ವಿರೋಧಿಸುತ್ತಿದ್ದಾರೆ ಎಂದು ರವಿಶಂಕರ್‌ ಪ್ರಸಾದ್‌ ಟೀಕಿಸಿದರು.

    ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್‌ ಸಂತೋಷ್‌ ಭಾನುವಾರ ಶರದ್‌ ಪವಾರ್‌ ಪತ್ರವನ್ನು ಟ್ವೀಟ್‌ ಮಾಡಿ, 2010ರಲ್ಲಿ ಕೃಷಿಯಲ್ಲಿ ಖಾಸಗಿ ವಲಯಗಳು ಇರಬೇಕೆಂದು ಬೇಡಿಕೆ ಇಟ್ಟು ಪತ್ರ ಬರೆದಿದ್ದರು. ಆದರೆ ಈಗ ತನ್ನ ಹೇಳಿಕೆಯನ್ನು ಬದಲಾಯಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

    2016ರ ಚುನಾವಣಾ ಪ್ರಚಾರದ ಸಮಯದಲ್ಲಿ ಡಿಎಂಕೆ ಯಾವುದೇ ಮಧ್ಯವರ್ತಿಗಳಿಲ್ಲದೇ ರೈತರು ನೆರವಾಗಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟಕ್ಕೆ ಕೃಷಿ ಉತ್ಪನ್ನಗಳನ್ನು ಉತ್ತಮ ಬೆಲೆಗೆ ಮಾರಾಟ ಮಾಡಲು ಮುಂದಾಗುವಂತೆ ಹೊಸ ನೀತಿಯನ್ನು ತರುತ್ತೇವೆ ಎಂದು ಹೇಳಿತ್ತು. ಈ ರೀತಿ ಪ್ರಣಾಳಿಕೆಯಲ್ಲಿ ಘೋಷಿಸಿದ ಡಿಎಂಕೆ ಇಂದು ಭಾರತ ಬಂದ್‌ಗೆ ಕರೆ ನೀಡಿದೆ. ವಿರೋಧ ಪಕ್ಷಗಳು ಅವರಾಗಿಯೇ ಬಯಲಾಗುತ್ತಿದ್ದಾರೆ ಎಂದು ಟ್ವೀಟ್‌ ಮಾಡಿ ಕಿಡಿಕಾರಿದ್ದಾರೆ.