Tag: Ravi Shankar Gowda

  • TPL-2: ಮಾರ್ಚ್ 12 ರಿಂದ ಟೆಲಿವಿಷನ್ ಪ್ರೀಮಿಯರ್ ಲೀಗ್ ಸೀಸನ್ -2

    TPL-2: ಮಾರ್ಚ್ 12 ರಿಂದ ಟೆಲಿವಿಷನ್ ಪ್ರೀಮಿಯರ್ ಲೀಗ್ ಸೀಸನ್ -2

    ನ್ 1 ಕ್ರಿಕೆಟ್ (Cricket) ಅಕಾಡೆಮಿ ವತಿಯಿಂದ ಕಳೆದ ಬಾರಿ ಅದ್ದೂರಿಯಾಗಿ ಆರಂಭಗೊಂಡಿದ್ದ ಟಿಪಿಎಲ್ (TPL) ಇದೀಗ ಸೀಸನ್ -2 ಕ್ಕೆ ರೆಡಿಯಾಗಿದೆ. ಮಾರ್ಚ್ ನಲ್ಲಿ ಟೆಲಿವಿಷನ್ (Television) ಪ್ರೀಮಿಯರ್ ಲೀಗ್ ಸೀಸನ್-2 ಆರಂಭವಾಗುತ್ತಿದೆ. ಸೀಸನ್ 2ಕ್ಕೆ ವೇದಿಕೆ ಸಜ್ಜಾಗುತ್ತಿದ್ದು ಮಾರ್ಚ್ 12,13,14,15ರಂದು ಒಟ್ಟು ನಾಲ್ಕು ದಿನಗಳ ಕಾಲ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ.

    ಎನ್ 1 ಕ್ರಿಕೆಟ್ ಅಕಾಡೆಮಿ ಆಯೋಜಕರಾದ ಬಿ.ಆರ್. ಸುನಿಲ್ ಕುಮಾರ್ ಮಾತನಾಡಿ, ಕಳೆದ ವರ್ಷದಿಂದ ಟಿಪಿಎಲ್ ಆರಂಭಿಸಿದ್ದೇವೆ. ಮೊದಲ ಸೀಸನ್ ಯಶಸ್ವಿಯಾಗಿತ್ತು. ಇದೀಗ ಎರಡನೇ ಸೀಸನ್ ನಡೆಸಲು ಎಲ್ಲಾ ತಯಾರಿ ನಡೆಯುತ್ತಿದೆ. ಮಾರ್ಚ್ ಎರಡನೇ ವಾರ ಟಿಪಿಎಲ್ ಸೀಸನ್ 2 ನಡೆಯಲಿದೆ. ಈ ಬಾರಿ ಡೇ ಅಂಡ್ ನೈಟ್ ಪಂದ್ಯಾವಳಿ ನಡೆಯಲಿದೆ. ತಂಡ, ನಾಯಕರ ಆಯ್ಕೆ ಎಲ್ಲವೂ ನಡೆದಿದೆ. ಮಾರ್ಚ್ 7ರಂದು ಜೆರ್ಸಿ ಲಾಂಚ್ ಮಾಡಲಿದ್ದೇವೆ. ಟಿಪಿಎಲ್ ಟ್ರೋಫಿ ಗೆದ್ದ ತಂಡದ ಸದಸ್ಯರಿಗೆ ಪರ್ಪಲ್ ರಾಕ್ ಎಂಟರ್ಟೈನರ್ಸ್ ದ್ವಿಚಕ್ರ ವಾಹನವನ್ನು ನೀಡುತ್ತಿದೆ. ಕಳೆದ ಬಾರಿ ಟೂರ್ನಮೆಂಟ್ ಮುಗಿದ ಮೇಲೆ ಪ್ರೊಡಕ್ಷನ್ ಮ್ಯಾನೇಜರ್ ಪಾರ್ಥ ಅವರಿಗೆ ಧನ ಸಹಾಯ ಮಾಡಿದ್ದೇವು. ಈ ಬಾರಿಯೂ ಕೂಡ ಹಿರಿಯ ಕಲಾವಿದರಿಗೆ ಸಹಾಯ ಧನ ನೀಡಲು ಚಿಂತನೆ ಮಾಡಿದ್ದೇವೆ ಎಂದು ಬಿ. ಆರ್. ಸುನೀಲ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: `ಆಚಾರ್ಯ’ ಚಿತ್ರಕ್ಕಾಗಿ ನಿರ್ಮಿಸಿದ್ದ 20 ಕೋಟಿ ವೆಚ್ಚದ ಸೆಟ್ ಬೆಂಕಿಗಾಹುತಿ

    ಬೆಂಗಳೂರಿನ ಅಶೋಕ ರೈಸಿಂಗ್ ಸ್ಟಾರ್ ಕ್ರಿಕೆಟ್ ಗ್ರೌಂಡ್ ನಲ್ಲಿ ಟಿಪಿಎಲ್ ಸೀಸನ್ -2 ನಡೆಯಲಿದೆ. ದಿ ಪರ್ಪಲ್ ರಾಕ್ ಪ್ಯಾಂಥರ್ಸ್, ಅಶ್ವಸೂರ್ಯ ರಿಯಾಲಿಟೀಸ್, ಆ್ಯನಿಲೀಪ್ ಟೂರ್ನಿವಲ್, ಇನ್ಸೇನ್ ಕ್ರಿಕೆಟ್ ಟೀಂ, ದಿ ಬುಲ್ ಸ್ಕ್ವಾಡ್, ಆಕ್ಸ್ ಫರ್ಡ್ ವಿನ್ ಟೀಂ ಎಂಬ ಆರು ತಂಡಗಳಿದ್ದು, ಲೂಸ್ ಮಾದ ಯೋಗಿ, ಮಂಜು ಪಾವಗಡ, ಹರ್ಷ ಸಿ.ಎಂ ಗೌಡ, ರವಿಶಂಕರ್ ಗೌಡ, ಶರತ್ ಪದ್ಮನಾಭ್, ಸಾಗರ್ ಬಿಳಿಗೌಡ ಒಂದೊಂದು ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ.

    ಪ್ರತಿತಂಡಕ್ಕೂ ಓನರ್ ಹಾಗೂ ಸೆಲೆಬ್ರೆಟಿ ಅಂಬಾಸಿಡರ್ ಗಳಿರಲಿದ್ದು, ‘ದಿ ಪರ್ಪಲ್ ರಾಕ್ ಪ್ಯಾಂಥರ್ಸ್’ ತಂಡದ ಮಾಲಿಕತ್ವವನ್ನು ಗಣೇಶ್ ಪಾಪಣ್ಣ, ಯತೀಶ್ ವೆಂಕಟೇಶ್ ವಹಿಸಿಕೊಂಡಿದ್ದು, ರಂಜಿತ್ ಕುಮಾರ್ ‘ಅಶ್ವಸೂರ್ಯ ರಿಯಾಲಿಟೀಸ್’, ಮೊಹಮ್ಮದ್ ಜಾಕೀರ್ ಹುಸೇನ್ ಮತ್ತು ಪೂಜಾ ಶ್ರೀ ‘ಆನಿಹೆಲ್ಪ್ ಟೂರ್ನಿವಲ್’, ಫೈಜಾನ್ ಖಾನ್ ‘ಇನ್ಸೇನ್ ಕ್ರಿಕೆಟ್ ಟೀಂ’, ಮೊನೀಶ್ ‘ದಿ ಬುಲ್ ಸ್ಕ್ವಾಡ್’, ಅನಿಲ್ ಬಿ.ಆರ್,ದೇವನಾಥ್.ಡಿ, ರವಿ.ಜಿ.ಎಸ್  ‘ಆಕ್ಸ್ ಫರ್ಡ್ ವಿನ್ ಟೀಂ’ ಮಾಲಿಕತ್ವ ವಹಿಸಿಕೊಂಡಿದ್ದಾರೆ. ಐಶ್ವರ್ಯ ಸಿಂದೋಗಿ, ವಿರಾನಿಕ ಶೆಟ್ಟಿ, ರಾಶಿಕ ಶೆಟ್ಟಿ, ಸೊಹಾರ್ಧ, ಗಾನವಿ ಸುರೇಶ್, ಸೀಮಾ ವಸಂತ್, ಅದ್ವಿತಿ ಶೆಟ್ಟಿ, ಶ್ವೇತ ಪ್ರಸಾದ್, ಲಿಖಿತಾ ಅನಂತ್, ಯಶಸ್ವಿನಿ, ಆಶಿಕಾ ಗೌಡ, ಶ್ವೇತ ಕೊಗ್ಲೂರ್ ಟಿಪಿಎಲ್ ಸೀಸನ್ -2 ಅಂಬಾಸಿಡರ್ ಪಟ್ಟಿಯಲ್ಲಿದ್ದಾರೆ.

  • ಮನಸಿಗೆ ಮುತ್ತಿಕ್ಕುವ ಮಿಸ್ಸಿಂಗ್ ಬಾಯ್!

    ಮನಸಿಗೆ ಮುತ್ತಿಕ್ಕುವ ಮಿಸ್ಸಿಂಗ್ ಬಾಯ್!

    ಬೆಂಗಳೂರು: ರಘುರಾಮ್ ನಿರ್ದೇಶನದ ಮಿಸ್ಸಿಂಗ್ ಬಾಯ್ ಚಿತ್ರ ತೆರೆ ಕಂಡಿದೆ. ಮನಮಿಡಿಯುವ ಸತ್ಯ ಕಥೆಯಾಧಾರಿತ ಚಿತ್ರವೆಂಬ ಕಾರಣದಿಂದ ಮಿಸ್ಸಿಂಗ್ ಬಾಯ್ ದೊಡ್ಡ ಮಟ್ಟದಲ್ಲಿಯೇ ಸದ್ದು ಮಾಡಿತ್ತು. ಆ ನಂತರದಲ್ಲಿ ನಿರ್ದೇಶಕರು ಪ್ರತಿಯೊಂದು ಹಂತದಲ್ಲಿಯೂ ಈ ಸಿನಿಮಾವನ್ನು ಕುತೂಹಲದ ಉತ್ತುಂಗದಲ್ಲಿಯೇ ಕಾಪಾಡಿಕೊಂಡು ಬಂದಿದ್ದರು. ಬಿಡುಗಡೆಯಾಗೋದು ತಡವಾದರೂ ಪ್ರೇಕ್ಷಕರ ಗಮನ ಅತ್ತಿತ್ತ ಸರಿಯದಂತೆ ನೋಡಿಕೊಂಡಿದ್ದ ಮಿಸ್ಸಿಂಗ್ ಬಾಯ್ ನ ಭಾವುಕ ಕಥೆಯನ್ನು ಕಣ್ತುಂಬಿಕೊಂಡ ಪ್ರತಿಯೊಬ್ಬರೂ ಮೆಚ್ಚಿಕೊಂಡಿದ್ದಾರೆ.

    ಕೊಲ್ಲ ಪ್ರವೀಣ್ ನಿರ್ಮಾಣ ಮಾಡಿರೋ ಮಿಸ್ಸಿಂಗ್ ಬಾಯ್ ಚಿತ್ರ ತೊಂಬತ್ತರ ದಶಕದಲ್ಲಿ ಇದೇ ಕರ್ನಾಟಕದಲ್ಲಿ ನಡೆದಿದ್ದ ಕಥೆಯಾಧಾರಿತ ಚಿತ್ರ. ಉತ್ತರ ಕರ್ನಾಟಕದ ಹುಬ್ಬಳ್ಳಿಯಲ್ಲಿ ನಡೆದಿದ್ದ ಈ ಕಥೆಯನ್ನು ರಘುರಾಮ್ ಕೈಗೆತ್ತಿಕೊಂಡಾಗ ಎಲ್ಲರೂ ಬೆರಗಾಗಿದ್ದದ್ದು ನಿಜ. ಆದರೆ ಇಂಥಾ ಬೆರಗನ್ನು ಸತ್ಯ ಘಟನೆಯೊಂದರ ಸುತ್ತಾ ದೃಶ್ಯ ಕಟ್ಟಿದ ನಂತರವೂ ಜೀವಂತವಾಗಿಡೋದು ಕಷ್ಟ. ನಿರ್ದೇಶಕ ಕಥೆಯ ಪಾತ್ರಗಳನ್ನೇ ಉಸಿರಾಡದಿದ್ದರೆ ಅದು ಖಂಡಿತಾ ಸಾಧ್ಯವಾಗೋದಿಲ್ಲ. ಆದರೆ ರಘುರಾಮ್ ನೈಜ ಘಟನೆಯ ಎಲ್ಲ ಭಾವಗಳನ್ನೂ ಬೊಗಸೆಯಲ್ಲಿ ಹಿಡಿದು ತಾಜಾತನದಿಂದಲೇ ಪ್ರೇಕ್ಷಕರ ಮನಸಿಗೆ ಸೋಕಿಸುವಲ್ಲಿ ಗೆದ್ದಿದ್ದಾರೆ. ಮಿಸ್ಸಿಂಗ್ ಬಾಯ್ ಚಿತ್ರ ಆಪ್ತ ಅನ್ನಿಸೋದು ಈ ಕಾರಣದಿಂದಲೇ.

    ಸತ್ಯ ಘಟನೆಗೆ ಬದ್ಧವಾಗಿಯೇ ಹುಬ್ಬಳ್ಳಿಯ ನೆಲದಿಂದಲೇ ಈ ಚಿತ್ರದ ದೃಶ್ಯಾವಳಿಗಳು ಬಿಚ್ಚಿಕೊಳ್ಳುತ್ತವೆ. ಅಲ್ಲಿನ ರೈಲ್ವೇ ನಿಲ್ದಾಣದಲ್ಲಿ ಹೆತ್ತವರ ಕೈ ತಪ್ಪಿಸಿಕೊಂಡು ರೈಲಿನಲ್ಲಿ ಕಾಣೆಯಾಗೋ ಹುಡುಗನ ಆರ್ತಸ್ಥಿತಿಯನ್ನು ಎಲ್ಲರ ಮನಸಿಗೂ ಅಂಟಿಕೊಳ್ಳುವಂಥಾ ಭಾವ ತೀವ್ರತೆಯೊಂದಿಗೆ ನಿರ್ದೇಶಕರು ಕಟ್ಟಿ ಕೊಟ್ಟಿದ್ದಾರೆ. ಅದೇ ಬಿಗಿಯಲ್ಲಿಯೇ ಕಥೆ ವಿದೇಶಕ್ಕೂ ಸಂಚರಿಸುತ್ತೆ. ಮಗುವನ್ನು ಕಳೆದುಕೊಂಡ ಹೆತ್ತವರ ಸಂಕಟ ಮತ್ತು ಕರುಳ ಬಂಧದ ಸ್ವಪ್ನ ಬಿದ್ದಂತೆ ದೂರದ ದೇಶದಲ್ಲಿ ತಲ್ಲಣಿಸೋ ನಾಯಕನ ಮಿಡಿತಗಳನ್ನು ಪ್ರೇಕ್ಷಕರು ಅತ್ತಿತ್ತ ಹಂದಾಡಲೂ ಆಸ್ಪದ ಕೊಡದ ರೀತಿಯಲ್ಲಿ ನಿರೂಪಿಸಲಾಗಿದೆ.

    ನಾಯಕ ಗುರುನಂದನ್ ಇದೇ ಮೊದಲ ಸಾರಿ ಅವರ ಇಮೇಜಿನಾಚೆಗಿನ ಪಾತ್ರವೊಂದಕ್ಕೆ ಜೀವ ತುಂಬಿದ್ದಾರೆ. ಭಾವಪ್ರಧಾನ ಸನ್ನಿವೇಶಗಳಲ್ಲಿಯಂತೂ ನೋಡುಗರು ತಲ್ಲಣಿಸುವಂತೆ ಪರಿಣಾಮಕಾರಿಯಾದ ನಟನೆ ನೀಡಿದ್ದಾರೆ. ಈ ಚಿತ್ರದ ಮೂಲಕವೇ ಗುರುನಂದನ್ ಚಿತ್ರ ಜೀವನದಲ್ಲಿ ಹೊಸ ಅಧ್ಯಾಯವೊಂದು ಶುರುವಾಗೋ ಎಲ್ಲ ಲಕ್ಷಣಗಳೂ ದಟ್ಟವಾಗಿಯೇ ಗೋಚರಿಸಿದೆ. ಇನ್ನುಳಿದಂತೆ ರಂಗಾಯಣ ರಘು ನಟನೆ ಎಂದಿನಂತೆ ಸೊಗಸಾಗಿದೆ. ನಾಯಕನ ತಾಯಿ ಸೇರಿದಂತೆ ಪ್ರತೀ ಪಾತ್ರಗಳೂ ಕಾಡುವಂತೆ ಮೂಡಿ ಬಂದಿದೆ. ರವಿಶಂಕರ್ ಗೌಡ ಕೂಡಾ ಪರಿಣಾಮಕಾರಿಯಾಗಿ ನಟಿಸಿದ್ದಾರೆ. ನಾಯಕನ ತಾಯಿಯಾಗಿ ಭಾಗೀರಥಿ ಬಾಯಿ ಕದಂ ನಟನೆ ನಿಜಕ್ಕೂ ಅದ್ಭುತ.

    ಒಟ್ಟಾರೆಯಾಗಿ ಮಿಸ್ಸಿಂಗ್ ಬಾಯ್ ಭಿನ್ನ ಪಥದ ಚಿತ್ರ. ತುಂಬಾ ಕಾಲದ ನಂತರ ಮನಮಿಡಿಯುವ ಕಥಾ ಹಂದರದ ವಿಶಿಷ್ಟ ಸಿನಿಮಾ ನೋಡಿದ ಅನುಭವಕ್ಕಾಗಿ ಒಮ್ಮೆ ಮಿಸ್ಸಿಂಗ್ ಬಾಯ್ ಚಿತ್ರವನ್ನು ನೋಡಲೇಬೇಕಿದೆ.

    ರೇಟಿಂಗ್: 4/5