ಕನ್ನಡದ ಹೆಸರಾಂತ ಸಾಹಸ (Stunt) ನಿರ್ದೇಶಕ ರವಿ ವರ್ಮಾ (Ravi Verma) ವಿರುದ್ಧ ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಲ್ಲದೇ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೂ ಹಾಗೂ ನಿರ್ಮಾಪಕರ ಸಂಘಕ್ಕೆ ದೂರು (Complaint) ನೀಡಿದ್ದಾರೆ ಮತ್ತೋರ್ವ ಸಾಹಸ ನಿರ್ದೇಶಕ ಡ್ಯಾನಿ.
ಡ್ಯಾನಿ (Danny) ಮಾಸ್ಟರ್ ಮತ್ತು ರವಿ ವರ್ಮಾ ಮಾಸ್ಟರ್ ಜಗಳ ನಿನ್ನೆ ಮೊನ್ನೆಯದ್ದಲ್ಲ. ಹಲವಾರು ವರ್ಷಗಳಿಂದ ಮುಸುಕಿನ ಗುದ್ದಾಟ ಇದ್ದೇ ಇದೆ. ಅದು ಈಗ ಪೊಲೀಸ್ ಠಾಣೆ ಮೆಟ್ಟಿಲು ಏರುವ ಹಂತಕ್ಕೆ ತಲುಪಿದೆ. ಈ ಹಿಂದೆ ಸಂದರ್ಶನವೊಂದರಲ್ಲಿ ಡ್ಯಾನಿ ಮಾಸ್ಟರ್, ತಮ್ಮ ಹೆಸರು ಹೇಳಿಕೊಂಡು ಪರಭಾಷಾ ಸಿನಿಮಾ ರಂಗದಲ್ಲಿ ರವಿ ವರ್ಮಾ ಕೆಲಸ ಗಿಟ್ಟಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಇದು ರವಿ ವರ್ಮಾರನ್ನು ಕೆರಳಿಸಿತ್ತು.
ಜಾಕಿ ಸಿನಿಮಾದಲ್ಲಿ ಬೆಂಕಿಯಲ್ಲಿ ನಡೆಯುವಂತಹ ಫೈಟ್ ಇದೆ. ಅದನ್ನು ಕಂಪೋಸ್ ಮಾಡಿದ್ದು ಡ್ಯಾನಿ ಮಾಸ್ಟರ್. ಆದರೆ, ಅದು ತಾವು ಮಾಡಿದ್ದು ಎಂದು ಪ್ರಭುದೇವ ಅವರ ಬಳಿ ರವಿ ವರ್ಮಾ ಹೇಳಿ ಚಾನ್ಸ್ ಗಿಟ್ಟಿಸಿಕೊಂಡಿದ್ದರು ಎಂದೆಲ್ಲ ಡ್ಯಾನಿ ಆರೋಪ ಮಾಡಿದ್ದರು. ಈ ಕಾರಣಕ್ಕಾಗಿ ರವಿ ವರ್ಮಾ ಅವರು ಜೀವ ಬೆದರಿಕೆ ಹಾಕಿದ್ದಾರೆ ಎನ್ನುವುದು ಡ್ಯಾನಿ ಆರೋಪ.
ಈ ಕುರಿತಾಗಿ ಮಾತನಾಡಲು ಡ್ಯಾನಿ ಅವರಿಗೆ ರವಿ ವರ್ಮಾ ಕರೆ ಮಾಡಿದ್ದರಂತೆ. ಅನಾರೋಗ್ಯದ ಕಾರಣದಿಂದಾಗಿ ಮಾತನಾಡಲು ಆಗಿರಲಿಲ್ಲ. ಅಷ್ಟರಲ್ಲಿ ಕೆರಳಿದ್ದ ರವಿ ವರ್ಮಾ ತಮಗೆ ಕೊಲ್ಲುವ ಬೆದರಿಕೆಯನ್ನು ಹಾಕಿದ್ದಾರೆ ಎಂದು ಡ್ಯಾನಿ ಆರೋಪ ಮಾಡಿದ್ದಾರೆ.
ನಟ-ನಿರ್ದೇಶಕ ರಾಜ್ ಬಿ ಶೆಟ್ಟಿ ಅವರು 3ನೇ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ಸ್ 2022 ರಲ್ಲಿ ತಮ್ಮ ಗರುಡ ಗಮನ ವೃಷಬ ವಾಹನ ಚಿತ್ರಕ್ಕಾಗಿ ಪ್ರಶಸ್ತಿಗಳ ಬೇಟೆಯಾಡಿದ್ದಾರೆ. ಅತ್ಯುತ್ತಮ ನಿರ್ದೇಶಕ, ಅತ್ಯುತ್ತಮ ನಟ ಮತ್ತು ಅತ್ಯುತ್ತಮ ಚಿತ್ರಕಥೆಗಾಗಿ ಮೂರು ವೈಯಕ್ತಿಕ ಪ್ರಶಸ್ತಿಗಳನ್ನು ಗಳಿಸಿ ಇತಿಹಾಸ ಸೃಷ್ಟಿಸಿದ್ದಾರೆ.
ಹೀರೋ ಚಿತ್ರದಲ್ಲಿನ ಅಭಿನಯಕ್ಕಾಗಿ ನಟಿಸಿದ ಮೊದಲ ಚಿತ್ರಕ್ಕೆ ನಟಿ ಗಾನವಿ ಲಕ್ಷ್ಮಣ್ ಅತ್ಯುತ್ತಮ ನಟಿ ಪ್ರಶಸ್ತಿ ಪಡೆಯುವುದರ ಮೂಲಕ ಸಂಭ್ರಮಿಸಿದ್ದಾರೆ. ಮೂರು ವಿಭಾಗಗಳಲ್ಲಿ ನಾಮ ನಿರ್ದೇಶನಗೊಂಡಿದ್ದ ಪುಗ್ಸಟ್ಟೆ ಲೈಫ್ ಚಿತ್ರಕ್ಕೆ ಅತ್ಯುತ್ತಮ ಚಿತ್ರ ಪ್ರಶಸ್ತಿ ದೊರೆತಿದ್ದು, ಮೊದಲ ಸಿನಿಮಾದ ನಿರ್ದೇಶನಕಕ್ಕಾಗಿ ನಿರ್ದೇಶಕ ಅರವಿಂದ್ ಕುಪ್ಲಿಕರ್ ಅವರು ಪುಕ್ಸಟ್ಟೆ ಲೈಫು ಚಿತ್ರಕ್ಕಾಗಿ ಪ್ರಶಸ್ತಿ ಪಡೆದದ್ದು ವಿಶೇಷ. ಇದನ್ನೂ ಓದಿ : ಕಾಂಗ್ರೆಸ್ ಅವಧಿಯಲ್ಲಿ ನಡೆದ ಭಯೋತ್ಪಾದನೆ ತಿಳಿಯಲು ‘ದಿ ಕಾಶ್ಮೀರ್ ಫೈಲ್ಸ್’ ನೋಡಿ: ಅಮಿತ್ ಶಾ
ಪ್ರವೀಣ್ ಶ್ರೀಯಾನ್ ಅತ್ಯುತ್ತಮ ಸಂಕಲನ ಪ್ರಶಸ್ತಿಯನ್ನು ಗೆಲ್ಲುವ ಮೂಲಕ GGVV ಗಾಗಿ ನಾಲ್ಕನೇ ಪ್ರಶಸ್ತಿ ಗಳಿಸಿದರು. ತರುಣ್ ಸುಧೀರ್ ನಿರ್ದೇಶನದ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ನಾಲ್ಕು ಪ್ರಶಸ್ತಿಗಳನ್ನು ಗೆದ್ದಿದೆ. (ಅತ್ಯುತ್ತಮ ಸಂಗೀತ ಸಂಯೋಜಕ – ಅರ್ಜುನ್ ಜನ್ಯ, ಅತ್ಯುತ್ತಮ ಗೀತರಚನೆಕಾರ – ಕಣ್ಣು ಹೊಡೆಯಾಕೆ ಹಾಡಿಗೆ ಯೋಗರಾಜ್ ಭಟ್, ಸುಧಾಕರ್ ಎಸ್ ರಾಜ್ ಅತ್ಯುತ್ತಮ ಛಾಯಾಗ್ರಹಣ ಮತ್ತು ಭೂಷಣ್ ಅತ್ಯುತ್ತಮ ನೃತ್ಯ ಸಂಯೋಜನೆ)ಈ ನಾಲ್ಕು ಪ್ರಶಸ್ತಿಗಳು ರಾಬರ್ಟ್ ಚಿತ್ರಕ್ಕಾಗಿ ಬಂದಿದ್ದು ಮತ್ತೊಂದು ವಿಶೇಷ.
ಎ.ಹರ್ಷ ನಿರ್ದೇಶನದ ಭಜರಂಗಿ 2 ಮತ್ತು ದುನಿಯಾ ವಿಜಯ್ ನಿರ್ದೇಶನದ ಚೊಚ್ಚಲು ಸಿನಿಮಾ ಸಲಗ ಮತ್ತು ಧನಂಜಯ್ ನಟನೆಯ ಬಡವ ರಾಸ್ಕಲ್ ತಲಾ ಮೂರು ಪ್ರಶಸ್ತಿ ಗಳಿಸಿವೆ. ಭಜರಂಗಿ 2 ಸಿನಿಮಾ ತಾಂತ್ರಿಕ ವಿಭಾಗಗಳಲ್ಲಿ ಅತ್ಯುತ್ತಮ VFX (ಶಿಬೀಶ್ ಮತ್ತು ಇಳಂಗೋವ್), ಅತ್ಯುತ್ತಮ ಸಾಹಸ ನಿರ್ದೇಶಕ (ರವಿ ವರ್ಮ) ಮತ್ತು ಅತ್ಯುತ್ತಮ ಕಲಾ ನಿರ್ದೇಶನ (ರವಿ ಸಂತೆಹೈಕ್ಲು) ಪ್ರಶಸ್ತಿ ಪಡೆದಿದೆ. ಇದನ್ನೂ ಓದಿ: ಫ್ಯಾನ್ಸ್ ಜೊತೆ ‘ಜೇಮ್ಸ್’ ವೀಕ್ಷಿಸಿದ ಶಿವಣ್ಣ ದಂಪತಿ – ಏನ್ ಹೇಳಲಿ ನನ್ನ ತಮ್ಮನ ಆ್ಯಕ್ಟಿಂಗ್ ಬಗ್ಗೆ
ಬಡವ ರಾಸ್ಕಲ್ ಚಿತ್ರವು ಅತ್ಯುತ್ತಮ ಪೋಷಕ ನಟಿ ಸ್ಪರ್ಶ ರೇಖಾ ಮತ್ತು ಅತ್ಯತ್ತಮ ಪೋಷಕ ನಟ ರಂಗಾಯಣ ರಘು ಹಾಗೂ ಇದೇ ಚಿತ್ರಕ್ಕಾಗಿ ವಾಸುಕಿ ವೈಭವ್ ಅತ್ಯುತ್ತಮ ಗಾಯಕಿ ಪ್ರಶಸ್ತಿಯನ್ನೂ ಪಡೆದರು. ನಟ ದುನಿಯಾ ವಿಜಯ್ ಅವರ ಚೊಚ್ಚಲ ನಿರ್ದೇಶನದ ಚಿತ್ರಕ್ಕಾಗಿ ಅತ್ಯುತ್ತಮ ಸಂಭಾಷಣೆ (ಮಾಸ್ತಿ), ಅತ್ಯುತ್ತಮ ಬಿಜಿಎಂ (ಚರಣ್ ರಾಜ್) ಮತ್ತು ಅತ್ಯುತ್ತಮ ಗಾಯಕಿಯಾಗಿ ಗಿರಿಜಾ ಅವರಿಗೆ ಪ್ರಶಸ್ತಿ ಬಂದಿವೆ.
ಡಾ.ರಾಘವೇಂದ್ರ ಬಿಎಸ್ ಅವರು ಪ್ರೇಮಂ ಪೂಜ್ಯಂ ಚಿತ್ರಕ್ಕಾಗಿ ಅತ್ಯುತ್ತಮ ಚೊಚ್ಚಲ ನಿರ್ದೇಶನ ಪ್ರಶಸ್ತಿ ಪಡೆದರೆ, ಅರ್ಜುನ್ ಗೌಡ ಚಿತ್ರದ ಹಾಡಿಗೆ ರಾಘವೇಂದ್ರ ಕಾಮತ್ ಅವರು ಅತ್ಯುತ್ತಮ ಸಾಹಿತ್ಯ ಪ್ರಶಸ್ತಿಯನ್ನು ಯೋಗರಾಜ್ ಭಟ್ ಜತೆ ಹಂಚಿಕೊಂಡಿದ್ದಾರೆ. ಅತ್ಯುತ್ತಮ ಬಾಲ ನಟ ಪ್ರಶಸ್ತಿ ಅಕ್ಷಿ ಸಿನಿಮಾ ನಟನೆಗಾಗಿ ಮಾಸ್ಟರ್ ಮಿಥುನ್ ಪಡೆದುಕೊಂಡಿದ್ದಾರೆ. ಇದನ್ನು ಓದಿ : ಮತ್ತೆ ನಟನೆಗೆ ಮರಳಿದ ಮಾಲಾಶ್ರೀ
ಶನಿವಾರ ಸಂಜೆ ಬೆಂಗಳೂರಿನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. 2021 ರಲ್ಲಿ ಬಿಡುಗಡೆಯಾದ ಚಲನಚಿತ್ರಗಳಿಗಾಗಿ ಒಟ್ಟು 23 ಸಿನಿಮಾ ತಾರೆಯರು 21 ವಿಭಾಗಗಳಲ್ಲಿದ್ದ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಕನ್ನಡ ಚಲನಚಿತ್ರ ವಿಮರ್ಶಕರು ಮತ್ತು ಪತ್ರಕರ್ತರು ನಾಮನಿರ್ದೇಶನ ಮೂಲಕ ಪ್ರಶಸ್ತಿಗಳನ್ನು ಆಯ್ಕೆ ಮಾಡಿದ್ದರೆ, ಬಿಬಿಎಂಪಿಯ ಸ್ವಚ್ಛ ಬೆಂಗಳೂರು ಅಭಿಯಾನವನ್ನು ಪ್ರಶಸ್ತಿ ಸಮಾರಂಭದ ವಿಷಯವಾಗಿ ಅಳವಡಿಸಿಕೊಂಡಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಸಿನಿಮಾ ರಂಗದ ಸಾಕಷ್ಟು ತಾರೆಯರು, ಗಣ್ಯರು ಮತ್ತು ವಿವಿಧ ಕ್ಷೇತ್ರಗಳ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
3ನೇ ಚಂದನವನ ಫಿಲ್ಮ್ಸ್ ಕ್ರಿಟಿಕ್ಸ್ ಅಕಾಡಮಿ ಪ್ರಶಸ್ತಿ ವಿಜೇತರು ಪಟ್ಟಿ – 2022