Tag: ravichandran

  • ತುಮಕೂರು ದಸರಾಗೆ ರಮ್ಯಾ – ರವಿಚಂದ್ರನ್

    ತುಮಕೂರು ದಸರಾಗೆ ರಮ್ಯಾ – ರವಿಚಂದ್ರನ್

    ತುಮಕೂರು: ತುಮಕೂರು ದಸರಾ (Tumakuru Dasara) ಹಿನ್ನೆಲೆ ಸೆ.30 ರಂದು ಸಂಜೆ ನಡೆಯುವ ಸಾಂಸ್ಕೃತಿಕ ವೈಭವ ಕಾರ್ಯಕ್ರಮಕ್ಕೆ ಖ್ಯಾತ ಚಲನಚಿತ್ರ ನಟರಾದ ವಿ ರವಿಚಂದ್ರನ್ (V Ravichandran) ಹಾಗೂ ನಟಿ ರಮ್ಯಾ (Ramya) ಆಗಮಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ ಪರಮೇಶ್ವರ್ (G Parameshwar) ತಿಳಿಸಿದರು.

    ಜಿಲ್ಲಾಧಿಕಾರಿ ಕಚೇರಿ ನ್ಯಾಯಿಕ ಸಭಾಂಗಣದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಸರಾ ಉತ್ಸವದ ಅಂಗವಾಗಿ ಅಕ್ಟೋಬರ್ 2ರಂದು ನಡೆಯಲಿರುವ ವೈಭವಯುತ ಮೆರವಣಿಗೆಯಲ್ಲಿ ಜಂಬೂ ಸವಾರಿಯೊಂದಿಗೆ ಸಾರೋಟಿನಲ್ಲಿ 50 ಗ್ರಾಮ ದೇವತೆಗಳು ಸಾಗಲಿವೆ. ಈ ಬಾರಿ ಜಿಲ್ಲೆಯ ಸಾಂಸ್ಕೃತಿಕ, ಸಾಹಿತ್ಯ, ಕಲಾ ಪರಂಪರೆಯನ್ನು ಯುವ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಎರಡನೇ ಬಾರಿ ತುಮಕೂರು ದಸರಾ ಉತ್ಸವವನ್ನು ಅದ್ಧೂರಿಯಾಗಿ ಆಯೋಜಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಬೆಂಗಳೂರು| ಆಸ್ತಿ ಆಸೆಗೆ ಸ್ನೇಹಿತನೊಂದಿಗೆ ಸೇರಿ ತಂದೆಯನ್ನೇ ಕೊಂದ ಪಾಪಿ ಮಗ

    ದಸರಾ ಉತ್ಸವವು ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ 11 ದಿನಗಳ ಕಾಲ ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದ್ದು, ಉತ್ಸವವನ್ನು ನೋಡಲು ಸಾರ್ವಜನಿಕರಿಗಾಗಿ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಪ್ರತೀ ದಿನ 250 ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಅಧಿಕಾರ ಉಳಿಸಿಕೊಳ್ಳಲು ಎಲ್ಲರನ್ನೂ ಸೋನಿಯಾ ಧರ್ಮಕ್ಕೆ ಸೇರಿಸಲು ಸಿದ್ದರಾಮಯ್ಯ ಹೊರಟಿದ್ದಾರೆ: ಅಶೋಕ್‌ ಕಿಡಿ

    ದಸರಾ ಪ್ರಯುಕ್ತ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಸೆಪ್ಟೆಂಬರ್ 22ರಂದು ಬೆಳಿಗ್ಗೆ 9:30ಕ್ಕೆ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ ಪರಮೇಶ್ವರ್ ಅವರು ಧಾರ್ಮಿಕ ಉತ್ಸವ, ನವರಾತ್ರಿ ಉತ್ಸವ, ಧ್ವಜಾರೋಹಣ, ದುರ್ಗಾಪೂಜೆಯನ್ನು ನೆರವೇರಿಸಲಿದ್ದಾರೆ. ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು, ಡಾ. ಹನುಮಂತನಾಥ ಮಹಾಸ್ವಾಮೀಜಿ, ಶಿವಯೋಗೀಶ್ವರ ಮಹಾಸ್ವಾಮೀಜಿ, ವೀರಪತ್ರ ಶಿವಾಚಾರ್ಯ ಸ್ವಾಮೀಜಿ ಹಾಗೂ ವೀರೇಶಾನಂದ ಸರಸ್ವತ ಸ್ವಾಮೀಜಿಗಳ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಸಂಸದ ವಿ. ಸೋಮಣ್ಣ, ಜನಪ್ರತಿನಿಧಿಗಳಾದ ಟಿ.ಬಿ ಜಯಚಂದ್ರ, ಎಸ್.ಆರ್ ಶ್ರೀನಿವಾಸ್, ಶಿವರಾಜ್ ತಂಗಡಗಿ, ಕೆ.ಎನ್ ರಾಜಣ್ಣ ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಲಿದ್ದು, ಶಾಸಕ ಜಿ.ಬಿ. ಜ್ಯೋತಿ ಗಣೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು. ಇದನ್ನೂ ಓದಿ: ಗಾಜಾ ಮೇಲೆ ಇಸ್ರೇಲ್‌ ದಾಳಿ – ಒಂದೇ ದಿನ 91 ಮಂದಿ ಸಾವು

  • ನನ್ನ ಹಂಸಲೇಖ ನಡುವೆ ಮನಸ್ತಾಪ ಯಾಕೆ ಗೊತ್ತಾ – ಕ್ರೇಜಿಸ್ಟಾರ್ ಮನದಾಳ

    ನನ್ನ ಹಂಸಲೇಖ ನಡುವೆ ಮನಸ್ತಾಪ ಯಾಕೆ ಗೊತ್ತಾ – ಕ್ರೇಜಿಸ್ಟಾರ್ ಮನದಾಳ

    ನಾದಬ್ರಹ್ಮ ಹಂಸಲೇಖ (Hamsalekha) ಅವರ 74ನೇ ಹುಟ್ಟುಹಬ್ಬದ ಪ್ರಯುಕ್ತ ತಮ್ಮ ಚೊಚ್ಚಲ ನಿರ್ದೇಶನದ ಸಿನಿಮಾದ ಘೋಷಣೆ ಮಾಡಿದ್ದಾರೆ. ಈ ಕಾರ್ಯಕ್ರಮಕ್ಕೆ ಹಂಸಲೇಖ ಅವರ ಆಪ್ತ ಗೆಳೆಯರು, ನಿರ್ದೇಶಕರು ಹಾಗೂ ಕ್ರೇಜಿಸ್ಟಾರ್ ರವಿಚಂದ್ರನ್ (Ravichandran) ಆಗಮಿಸಿ ಶುಭಾಶಯ ಕೋರಿದ್ದಾರೆ. ಜೊತೆಗೆ ಹಂಸಲೇಖ ಹಾಗೂ ಕ್ರೇಜಿಸ್ಟಾರ್ ನಡುವಿನ ಸ್ನೇಹ ಹಾಗೂ ಮನಸ್ತಾಪದ ಬಗ್ಗೆ ಮನಬಿಚ್ಚಿ ಮಾತಾಡಿದ್ದಾರೆ ನಟ ರವಿಚಂದ್ರನ್. ಹಂಸಲೇಖ ಹುಟ್ಟುಹಬ್ಬದ ವೇದಿಕೆ ಮೇಲೆ ಕ್ರೇಜಿಸ್ಟಾರ್ ಮಾತಾಡಿದ ಮಾತುಗಳು ಕನ್ನಡ ಸಿನಿಮಾ ಅಭಿಮಾನಿಗಳ ಹುಬ್ಬೇರಿಸುವಂತೆ ಮಾಡಿದೆ.

    ”ನಮ್ಮಿಬ್ಬರ ಸ್ನೇಹ ದೂರಾಗಿದ್ದಕ್ಕೆ ಕಾರಣವಿಲ್ಲ. ಯಾವತ್ತೂ ಜಗಳ ಮಾಡಿ ದೂರಾಗಲಿಲ್ಲ. ಹೇಗೆ ಸೇರಿದ್ದೇವೋ ಹಾಗೆ ದೂರಾದೆವು. ನಾನು ಪೆನ್ನು ಪೇಪರ್ ಹಿಡಿಬೇಕು ಅಂತಾ ಇತ್ತೋ ಏನೋ ಹೀಗಾಗಿ ನಾವು ದೂರವಾಗಿದ್ದಿರಬಹುದು. ಈಗ ನನ್ನ ಜಾಗಕ್ಕೆ ರಾಜು (ಹಂಸಲೇಖ) ಬಂದಿದ್ದಾರೆ. ನಾನು ಹೃದಯ ಆದ್ರೆ ನೀವು ನಮ್ಮ ಹಾರ್ಟ್ ಬೀಟ್” ಎಂದು ಹಂಸಲೇಖ ಬರ್ತ್ ಡೇ ದಿನ ಕ್ರೇಜಿಸ್ಟಾರ್ ಮನಬಿಚ್ಚಿ ಮಾತಾಡಿದ್ದಾರೆ. ಅದೆಷ್ಟೋ ವರ್ಷಗಳಿಂದ ತಮ್ಮ ಮನಸ್ಸಲ್ಲಿದ್ದ, ಮುಕ್ತವಾಗಿ ಹೇಳಬೇಕೆಂದುಕೊಂಡಿದ್ದ ಮನದಾಳದ ಇಂಗಿತವನ್ನ ತೋಡಿಕೊಂಡಿದ್ದಾರೆ. ಇದನ್ನೂ ಓದಿ: `ಸುದೀಪ್ ಸರ್ ನನ್ನ ದೇವರು’..ಅವ್ರೇನ್ ಮಾಡ್ತಾರೆ – ನಂದಕಿಶೋರ್ ವಿರುದ್ಧ ದೂರು ಕೊಟ್ಟ ಶಬರೀಶ್ ಮಾತು

    ಕ್ರೇಜಿಸ್ಟಾರ್ ರವಿಚಂದ್ರನ್ ಸ್ನೇಹ ಹಾಗೂ ಅವರು ಸಪೋರ್ಟ್ ಮಾಡಿದ ಬಗೆಯನ್ನ ಹಂಸಲೇಖ ಎಳೆಎಳೆಯಾಗಿ ವಿವರಿಸಿದರು. ಈಗಲೂ ಕ್ರೇಜಿಸ್ಟಾರ್ 10 ಕೆಜಿ ತೂಕ ಕಡಿಮೆ ಮಾಡಿ ನಿಂತರೆ, ಸ್ಪುರದೃಪಿ ನಟರು. ಅತೀ ಹೆಚ್ಚು ಲೇಡಿ ಅಭಿಮಾನಿಗಳು ಇರುವ ಇರುವ ಏಕೈಕ ನಟ ಅದು ಕ್ರೇಜಿಸ್ಟಾರ್ ಎಂದು ಗುಣಗಾನ ಮಾಡಿದರು. ಅಲ್ಲದೇ ಎಂಜಿ ರೋಡ್ ಕಡೆ ತಿರುಗಿಕೊಂಡಿದ್ದ ಪ್ರೇಕ್ಷಕರನ್ನು ಗಾಂಧಿನಗರಕ್ಕೆ ಕರೆದಕೊಂಡು ಬಂದವರು ರವಿಚಂದ್ರನ್. ನನ್ನ ಜೀವನದ ಫಸ್ಟ್ ಪಾಸಿಟಿವ್ ಪರ್ಸಾನಾಲಿಟಿ ರವಿಚಂದ್ರನ್ ಎಂದು ಕೊಂಡಾಡಿದರು. ಇದನ್ನೂ ಓದಿ: ಗಂಭೀರ ಸಮಸ್ಯೆಯಿಂದ ಬಳಲುತ್ತಿದ್ದಾರೆ ನಟ ಸಲ್ಮಾನ್ ಖಾನ್

    ಒಟ್ಟಿನಲ್ಲಿ ಸ್ಯಾಂಡಲ್‌ವುಡ್ ಇಬ್ಬರು ದಿಗ್ಗಜರ ಸಮಾಗಮ. ಸ್ನೇಹ, ಪ್ರೀತಿಯ ಮಾತುಗಳು ಕನ್ನಡ ಚಿತ್ರರಂಗದ ಯುವ ಪ್ರತಿಭೆಗಳಿಗೆ ಕರುನಾಡಿನ ಜನತೆಗೆ ಮತ್ತಷ್ಟು ಉತ್ಸಾಹ ನಂಬಿಕೆ ಭರವಸೆಯನ್ನು ಮೂಡಿಸಿದೆ.

  • `ಪುಟ್ಟಕ್ಕ’ ಉಮಾಶ್ರೀ ಹೋರಾಟಕ್ಕೆ ನಟ ರವಿಚಂದ್ರನ್ ಸಾಥ್

    `ಪುಟ್ಟಕ್ಕ’ ಉಮಾಶ್ರೀ ಹೋರಾಟಕ್ಕೆ ನಟ ರವಿಚಂದ್ರನ್ ಸಾಥ್

    ಜೀ಼ ಕನ್ನಡ ವಾಹಿನಿಯಲ್ಲಿ ಸಂಜೆ 6-30 ಕ್ಕೆ ಪ್ರಸಾರವಾಗುವ ಅತ್ಯಂತ ಯಶಸ್ವಿ ಧಾರಾವಾಹಿ ‘ಪುಟ್ಟಕ್ಕನ ಮಕ್ಕಳು’ (Puttakkana Makkalu). ಪ್ರಸಾರದ ಮೊದಲ ವಾರದಲ್ಲಿ ಅತೀ ಹೆಚ್ಚು ಕನ್ನಡಿಗರ ಮನಸುಗಳನ್ನ ಗೆದ್ದ ಖ್ಯಾತಿ ಈ ಧಾರಾವಾಹಿಯದು. ಇದೀಗ 900 ಸಂಚಿಕೆಗಳನ್ನು ಪೂರೈಸಿ ಸಾವಿರ ಸಂಚಿಕೆಗಳತ್ತ ಹೆಜ್ಜೆ ಇಡುತ್ತಿದ್ದರೂ ತನ್ನ ಜನಪ್ರಿಯತೆಯನ್ನು ಕಳೆದುಕೊಳ್ಳದೆ ಮುನ್ನುಗ್ಗುತ್ತಿದೆ. ಈ ಸಮಯದಲ್ಲಿ ನಟ ರವಿಚಂದ್ರನ್ ಧಾರಾವಾಹಿಗೆ ಎಂಟ್ರಿ ಕೊಟ್ಟು ಕುತೂಹಲ ಮೂಡಿಸಿದ್ದಾರೆ.

    ‘ಹೆಣ್ಣು ಮಕ್ಕಳ ಹೆತ್ತೋರು ಎಲ್ಲ ದೇವರಿಗು ದೊಡ್ಡೋರು’ ಅನ್ನುವ ಈ ಧಾರಾವಾಹಿಯ ಹಾಡಿನ ಸಾಲು ಪುಟ್ಟಕ್ಕನ ಕತೆಯ ಸಾರವನ್ನು ತೋರಿಸುತ್ತದೆ. ಗಂಡು ಮಗು ಆಗಿಲ್ಲ ಅನ್ನುವ ಕಾರಣಕ್ಕೆ ಗಂಡ ಗೋಪಾಲ ಪುಟ್ಟಕ್ಕನನ್ನು ಬಿಟ್ಟು ಹೋಗುತ್ತಾನೆ. ತಂದೆ ಇಲ್ಲದೆ ತಬ್ಬಲಿಯಾದ ಮೂರು ಹೆಣ್ಣು ಮಕ್ಕಳನ್ನು ಹೆಗಲಿಗೆ ಕಟ್ಟಿಕೊಂಡು, ಅವರಿಗೆ ಬದುಕಿನ ದಾರಿ ತೋರಿಸಲು ಹೋರಾಡುವ ದಿಟ್ಟ ಮಹಿಳೆಯ ಕಥೆಯೇ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ.

    ಧಾರಾವಾಹಿಯ ಮುಖ್ಯ ಪಾತ್ರವಾದ ‘ಪುಟ್ಟಕ್ಕ’ನ ಪಾತ್ರವನ್ನು ಕನ್ನಡದ ಖ್ಯಾತ ನಟಿ ಉಮಾಶ್ರೀ (Umashree) ಮಾಡುತ್ತಿದ್ದಾರೆ. ಪುಟ್ಟಕ್ಕನಿಗೆ ಜೊತೆಯಾಗಿ ನಿಂತವರು ಮಗಳು ಸಹನಾ, ಸ್ನೇಹಾ, ಸುಮಾ. ಗೆಳತಿ ಬಂಗಾರಮ್ಮ. ಅಳಿಯ ಕಂಠಿ ಮತ್ತಿತರ ಪಾತ್ರ. ಇದೀಗ ಈ ಧಾರಾವಾಹಿ ಮಹತ್ತರ ಘಟ್ಟದಲ್ಲಿ ಬಂದು ನಿಂತಿದೆ. ತನ್ನ ಆಸೆ, ಕನಸಿನಂತೆ ಜಿಲ್ಲಾಧಿಕಾರಿ ಆಗಿದ್ದ ಸ್ನೇಹಾ, ರಸ್ತೆ ಅಪಘಾತದಲ್ಲಿ ತೀರಿಕೊಂಡಿದ್ದಳು. ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿ ಆಗಿದ್ದ ಅವಳ ಮೇಲೆ ನಿಧನದ ಬಳಿಕವೂ ಅವ್ಯವಹಾರದ ಆರೋಪ ಬಂದಿದ್ದು, ಮಗಳ ಪರವಾಗಿ ಪುಟ್ಟಕ್ಕ ಹೋರಾಟಕ್ಕೆ ಮುಂದಾಗಿದ್ದಾಳೆ.

    ಮಗಳು ಸ್ನೇಹಾ ಮೇಲಿನ ಸುಳ್ಳು ಆರೋಪಕ್ಕೆ ಪ್ರತಿಯಾಗಿ ಪಾದಯಾತ್ರೆ ಮಾಡುತ್ತಿದ್ದು, ನ್ಯಾಯಕ್ಕಾಗಿ ಹಂಬಲಿಸುತ್ತಿದ್ದಾಳೆ. ಮಗಳಿಗೆ ಅಂಟಿದ ಕಳಂಕ ತೊಳೆಯುವ ಈ ಕಾರ್ಯಕ್ಕೆ ಯಾರಿಂದಲೂ ನಿರೀಕ್ಷಿತ ಬೆಂಬಲ ಸಿಕ್ಕಿಲ್ಲ. ಹೀಗೆ ಬೇಸತ್ತಿರುವ ಪುಟ್ಟಕ್ಕನಿಗೆ ಸಾಥ್ ಕೊಡಲು ‘ಕ್ರೇಜಿ ಸ್ಟಾರ್ ರವಿಚಂದ್ರನ್’ ಮುಂದಾಗಿದ್ದಾರೆ. ಜಸ್ಟಿಸ್ ಫಾರ್ ಸ್ನೇಹಾ ಹೋರಾಟಕ್ಕೆ ಪುಟ್ನಂಜ ಕೈ ಜೋಡಿಸಿದ್ದಾರೆ.

    ಪುಟ್ನಂಜ ಸಿನಿಮಾದಲ್ಲಿ ಮೊಡಿ ಮಾಡಿದ್ದ ಉಮಾಶ್ರೀ ಮತ್ತು ರವಿಚಂದ್ರನ್ (Ravichandran), ಇದೀಗ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೂಲಕ ಕಿರುತೆರೆಯಲ್ಲಿ ಒಂದಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ರವಿಚಂದ್ರನ್ ಅವರಿಂದ ಪುಟ್ಟಕ್ಕನ ಹೋರಾಟಕ್ಕೆ ನ್ಯಾಯ ಸಿಗುತ್ತಾ? ಮಗಳಿಗೆ ಅಂಟಿದ ಕಳಂಕ ಹೋಗುತ್ತಾ?  ಅನ್ನೋದನ್ನು ನೋಡಲು ಪ್ರೇಕ್ಷಕರು ಕಾಯುತ್ತಿದ್ದಾರೆ.

  • ರಾಜ್ಯಪಾಲರ ವಿರುದ್ಧ ಸುದ್ದಿಗೋಷ್ಠಿ – ಸಿಎಂ ಬೆಂಬಲಿಗನಿಗೆ ಹೃದಯಾಘಾತ, ಸಾವು

    ರಾಜ್ಯಪಾಲರ ವಿರುದ್ಧ ಸುದ್ದಿಗೋಷ್ಠಿ – ಸಿಎಂ ಬೆಂಬಲಿಗನಿಗೆ ಹೃದಯಾಘಾತ, ಸಾವು

    ಬೆಂಗಳೂರು: ಸಿಎಂ ಸಿದ್ದರಾಮಯ್ಯನವರನ್ನು (CM Siddaramaiah) ಬೆಂಬಲಿಸಿ ರಾಜ್ಯಪಾಲರ (Thawar Chand Gehlot) ವಿರುದ್ಧ ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಕೋಲಾರದ ಕಾಂಗ್ರೆಸ್‌ ಮುಖಂಡರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

    ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತರ ಸಂಘದ ವತಿಯಿಂದ ಇಂದು ಸುದ್ದಿಗೋಷ್ಠಿ ನಡೆಯುತ್ತಿತ್ತು. ಈ ವೇಳೆ ಕೋಲಾರ ಕಾಂಗ್ರೆಸ್ ಮುಖಂಡ ರವಿಚಂದ್ರನ್ (Ravichandran) ಅವರು ಮಾತನಾಡುತ್ತಿದ್ದರು. ಇದನ್ನೂ ಓದಿ: ರಾಜ್ಯಪಾಲರ ವಿರುದ್ಧ ಸಿಡಿದೆದ್ದ ಸಾಹಿತಿಗಳು – ಪ್ರತಿಭಟನೆಗೆ ಕರೆ

     

    ಮೈಕ್‌ ಹಿಡಿದು ಮಾತನಾಡುತ್ತಿದ್ದ ರವಿಚಂದ್ರನ್‌ ಅವರು ಕುಳಿತ ಚಯರ್‌ನಿಂದಲೇ ಕುಸಿದು ಬಿದ್ದರು. ಕೂಡಲೇ ಅವರನ್ನು ಕನ್ನಿಂಗ್ ಹ್ಯಾಮ್ ರಸ್ತೆಯ ಪೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಪೋರ್ಟಿಸ್ ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ.

    ಕೋಲಾರದ ಚಿಂತಾಮಣಿ ಮೂಲದ ಸಿ.ಕೆ ರವಿಚಂದ್ರನ್ ಮಾಜಿ ಸಿಎಂ ದಿವಂಗತ ಬಂಗಾರಪ್ಪ ಜೊತೆ ಓಡನಾಟ ಹೊಂದಿದ್ದರು. ಬೆಂಗಳೂರು ನಗರದ ಆರ್.ಆರ್ .ನಗರದ ಚನ್ನಸಂದ್ರದಲ್ಲಿ ವಾಸವಾಗಿದ್ದ ಇವರು ಅಮ್ಮ ಕಾನ್ವೆಂಟ್ ಹೆಸರಿನ ಶಾಲೆ ನಡೆಸುತ್ತಿದ್ದರು. ಸಿಎಂ ಸಿದ್ದರಾಮಯ್ಯ ಜೊತೆ ಸಹ ಓಡನಾಟ ಹೊಂದಿದ್ದ ಇವರು ಕಾಂಗ್ರೆಸ್ ಪ್ರಚಾರ ಸಮಿತಿ ಸದಸ್ಯರಾಗಿ ನೇಮಕವಾಗಿದ್ದರು.

     

  • ಪ್ರೇಮಲೋಕ 2: ವಾರದಲ್ಲಿ ದೊಡ್ಡ ನ್ಯೂಸ್ ಕೊಡ್ತೀನಿ ಅಂದ ರವಿಚಂದ್ರನ್

    ಪ್ರೇಮಲೋಕ 2: ವಾರದಲ್ಲಿ ದೊಡ್ಡ ನ್ಯೂಸ್ ಕೊಡ್ತೀನಿ ಅಂದ ರವಿಚಂದ್ರನ್

    ಮ್ಮ ಹುಟ್ಟು ಹಬ್ಬದ ದಿನದಂದು ರವಿಚಂದ್ರನ್ ಪ್ರೇಮಲೋಕ 2 ಕುರಿತಂತೆ ದೊಡ್ಡದೊಂದು ಸುದ್ದಿ ಕೊಡುವುದಾಗಿ ಹೇಳಿಕೊಂಡಿದ್ದಾರೆ. ಆದರೆ, ಇವತ್ತು ಈ ಸಿನಿಮಾದ ಯಾವುದೇ ಅಪ್ ಡೇಟ್ ನೀಡಲಿಲ್ಲ. ಅದಕ್ಕೆ ಕಾರಣವನ್ನೂ ಅವರು ಹೇಳಿಕೊಂಡಿದ್ದಾರೆ. ಗಜಿಬಿಜಿ ಮಾಡಿಕೊಳ್ಳಲು ನನಗೆ ಇಷ್ಟವಿಲ್ಲ. ಹಾಗಾಗಿ ಇವತ್ತು ಕೊಡಲಿಲ್ಲ. ವಾರ ಕಾಯಿರಿ. ದೊಡ್ಡದೊಂದು ಸುದ್ದಿಯನ್ನೇ ಕೊಡುತ್ತೇನೆ ಅಂದಿದ್ದಾರೆ ಕ್ರೇಜಿಸ್ಟಾರ್.

    ಮೊದಲ ಪ್ರೇಮಲೋಕಕ್ಕೆ ರವಿಮಾಮ ಬಾಲಿವುಡ್ ನಿಂದ ಜೂಹಿ ಚಾವ್ಲಾ ಅವರನ್ನು ಕರೆತಂದಿದ್ದರು. ಪ್ರೇಮಲೋಕ 2 ಚಿತ್ರಕ್ಕೆ ತಮಿಳು ನಟಿಗೆ ಬಲೆಹಾಕಿದ್ದಾರೆ ಎಂದು ಹೇಳಲಾಗುತ್ತಿದೆ. ತಮಿಳು ನಟ ತೇಜು ಅಶ್ವಿನಿ (Teju Ashwini) ಈ ಸಿನಿಮಾದ ನಾಯಕಿ ಎನ್ನುವುದು ಸದ್ಯಕ್ಕಿರುವ ವರ್ತಮಾನ.

    ಈ ನಡುವೆ ಪ್ರೇಮಲೋಕ 2 ಸಿನಿಮಾ ಕುರಿತಂತೆ ಅನೇಕ ವಿಶೇಷಗಳು ಆಚೆ ಬರುತ್ತಿವೆ. ಅದರಲ್ಲಿ ರವಿಮಾಮ ಮಕ್ಕಳ ಸುದ್ದಿಯೂ ಸೇರಿಕೊಂಡಿದೆ. ಈ ಸಿನಿಮಾದಲ್ಲಿ ತಮ್ಮ ಇಬ್ಬರೂ ಮಕ್ಕಳಿಗೆ ಪಾತ್ರ ಕೊಟ್ಟಿದ್ದಾರೆ. ಆ ಪಾತ್ರಕ್ಕಾಗಿ ತಯಾರಿ ಕೂಡ ಮಾಡಿಸುತ್ತಿದ್ದಾರೆ. ಪ್ರೇಮಲೋಕ 2 ಚಿತ್ರಕ್ಕಾಗಿ ಡಾನ್ಸ್ ಮತ್ತು ಮೈ ಹುರಿಗೊಳಿಸಿಕೊಳ್ಳುತ್ತಿರುವೆ. ಅಪ್ಪನೇ ಮಾರ್ಗದರ್ಶನ ಮಾಡುತ್ತಿದ್ದಾರೆ. ಪ್ರೇಮಲೋಕ ಸಿನಿಮಾದ ಹೆಸರೇ ದೊಡ್ಡದು. ಹಾಗಾಗಿ ನಿರೀಕ್ಷೆ ಇದ್ದೇ ಇರುತ್ತದೆ. ಹಾಗಾಗಿ ಸಾಕಷ್ಟು ತಯಾರಿ ಮಾಡಿಕೊಂಡು ಕ್ಯಾಮೆರಾ ಮುಂದೆ ನಿಲ್ಲುತ್ತೇನೆ ಎನ್ನುತ್ತಾರೆ (Manoranjan) ಮನೋರಂಜನ್.

     

    ರವಿಚಂದ್ರನ್ (Ravichandran) ಕೆರಿಯರ್ ಬದಲಿಸಿದ ಸಿನಿಮಾ ಅಂದರೆ 1987ರಲ್ಲಿ ತೆರೆಕಂಡ ಪ್ರೇಮಲೋಕ. ತಾವೇ ನಿರ್ದೇಶಿಸಿ, ನಟಿಸಿ ಗೆದ್ದಿದ್ದರು. ಈಗ ಪ್ರೇಮಲೋಕ ಪಾರ್ಟ್ 2  ಸಿನಿಮಾ ಮಾಡೋಕೆ ಮುಂದಾಗಿದ್ದಾರೆ. ‘ಪ್ರೇಮಲೋಕ 2’ ಸಿನಿಮಾದಲ್ಲಿ ಬರೀ 20-25 ಹಾಡುಗಳು ಇರುತ್ತೆದೆ ಅಷ್ಟೇ. ಆದರೆ ಜೀವನಪೂರ್ತಿ ಇಡೀ ಸಿನಿಮಾ ಚಿಕ್ಕವರಿಂದಿಡಿದು ದೊಡ್ಡವರ ತನಕ ಎಲ್ಲರಿಗೂ ಕಾಡುತ್ತದೆ. ಈ ಸಿನಿಮಾದಲ್ಲಿ ಪ್ರೀತಿ ಇದೆ, ಜಾತಿ ಇಲ್ಲ. ಭೇದ ಭಾವ ಇಲ್ಲ, ಹಣದ ಕುರಿತು ಇಲ್ಲ. ಇದೇ ಬೇರೆ ಥರದ ಕಥೆ ಇರುವ ಸಿನಿಮಾ. ನನಗೆ ಪ್ರೀತಿ ಬಿಟ್ಟರೆ ಬೇರೆ ಏನೂ ಗೊತ್ತಿಲ್ಲ ಎಂದು ರವಿಚಂದ್ರನ್ ಹೇಳಿದ್ದಾರೆ.

  • ನಟ ರವಿಚಂದ್ರನ್ ಹುಟ್ಟುಹಬ್ಬ: ಕನಸುಗಾರನ ಹೊಸ ಕನಸೇನು?

    ನಟ ರವಿಚಂದ್ರನ್ ಹುಟ್ಟುಹಬ್ಬ: ಕನಸುಗಾರನ ಹೊಸ ಕನಸೇನು?

    ಕ್ರೇಜಿಸ್ಟಾರ್ ರವಿಚಂದ್ರನ್ ಇಂದು ಹುಟ್ಟುಹಬ್ಬವನ್ನು ಅಭಿಮಾನಿಗಳ ಸಮ್ಮುಖದಲ್ಲಿ ಆಚರಿಸಿಕೊಂಡರು. ರಾಜಾಜಿನಗರದ ತಮ್ಮ ನಿವಾಸದಲ್ಲಿ 63ನೇ ಹುಟ್ಟು ಹಬ್ಬವನ್ನು ಆಚರಿಸಿಕೊಂಡ ಕನಸುಗಾರ, ಅಭಿಮಾನಿಗಳು ತಂದಿದ್ದ ಕೇಕ್ ಕಟ್ ಮಾಡಿ ಸಂಭ್ರಮಿಸಿದರು. ಸಾಕಷ್ಟು ಅಭಿಮಾನಿಗಳು ರಾಜಾಜಿನಗರದ ನಿವಾಸಕ್ಕೆ ಆಗಮಿಸಿದ್ದರು.

    ಕನಸುಗಾರ ಇದೀಗ ಮತ್ತೊಂದು ಪ್ರೇಮಲೋಕ ಹಾಡಲು ಸಜ್ಜಾಗಿರುವ ವಿಷಯ ಗೊತ್ತೇ ಇದೆ. ಮೊದಲ ಪ್ರೇಮಲೋಕಕ್ಕೆ ರವಿಮಾಮ ಬಾಲಿವುಡ್‌ನಿಂದ ಜೂಹಿ ಚಾವ್ಲಾ ಅವರನ್ನು ಕರೆತಂದಿದ್ದರು. ಪ್ರೇಮಲೋಕ 2 ಚಿತ್ರಕ್ಕೆ ತಮಿಳು ನಟಿಗೆ ಬಲೆ ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ. ತಮಿಳು ನಟ ತೇಜು ಅಶ್ವಿನಿ (Teju Ashwini) ಈ ಸಿನಿಮಾದ ನಾಯಕಿ ಎನ್ನುವುದು ಸದ್ಯಕ್ಕಿರುವ ವರ್ತಮಾನ. ಈ ನಡುವೆ ಪ್ರೇಮಲೋಕ 2 ಸಿನಿಮಾ ಕುರಿತಂತೆ ಅನೇಕ ವಿಶೇಷಗಳು ಆಚೆ ಬರುತ್ತಿವೆ. ಅದರಲ್ಲಿ ರವಿಮಾಮ ಮಕ್ಕಳ ಸುದ್ದಿಯೂ ಸೇರಿಕೊಂಡಿದೆ. ಈ ಸಿನಿಮಾದಲ್ಲಿ ತಮ್ಮ ಇಬ್ಬರೂ ಮಕ್ಕಳಿಗೆ ಪಾತ್ರ ಕೊಟ್ಟಿದ್ದಾರೆ. ಆ ಪಾತ್ರಕ್ಕಾಗಿ ತಯಾರಿ ಕೂಡ ಮಾಡಿಸುತ್ತಿದ್ದಾರೆ.

    ಪ್ರೇಮಲೋಕ 2 ಚಿತ್ರಕ್ಕಾಗಿ ಡಾನ್ಸ್ ಮತ್ತು ಮೈ ಹುರಿಗೊಳಿಸಿಕೊಳ್ಳುತ್ತಿರುವೆ. ಅಪ್ಪನೇ ಮಾರ್ಗದರ್ಶನ ಮಾಡುತ್ತಿದ್ದಾರೆ. ಪ್ರೇಮಲೋಕ ಸಿನಿಮಾದ ಹೆಸರೇ ದೊಡ್ಡದು. ಹಾಗಾಗಿ ನಿರೀಕ್ಷೆ ಇದ್ದೇ ಇರುತ್ತದೆ. ಹಾಗಾಗಿ ಸಾಕಷ್ಟು ತಯಾರಿ ಮಾಡಿಕೊಂಡು ಕ್ಯಾಮೆರಾ ಮುಂದೆ ನಿಲ್ಲುತ್ತೇನೆ ಎನ್ನುತ್ತಾರೆ (Manoranjan) ಮನೋರಂಜನ್.

    ರವಿಚಂದ್ರನ್ (Ravichandran) ಕೆರಿಯರ್ ಬದಲಿಸಿದ ಸಿನಿಮಾ ಅಂದರೆ 1987ರಲ್ಲಿ ತೆರೆಕಂಡ ಪ್ರೇಮಲೋಕ. ತಾವೇ ನಿರ್ದೇಶಿಸಿ, ನಟಿಸಿ ಗೆದ್ದಿದ್ದರು. ಈಗ ಪ್ರೇಮಲೋಕ ಪಾರ್ಟ್ 2  ಸಿನಿಮಾ ಮಾಡೋಕೆ ಮುಂದಾಗಿದ್ದಾರೆ. ಮೇ 30ರಿಂದ ಶೂಟಿಂಗ್ ಕೂಡ ಶುರುವಾಗಲಿದೆ. ಕಾರ್ಯಕ್ರವೊಂದರಲ್ಲಿ ಅತಿಥಿಯಾಗಿ ರವಿಚಂದ್ರನ್ ಭಾಗವಹಿಸಿದ್ದರು. ‘ಪ್ರೇಮಲೋಕ 2’ ಬಗ್ಗೆ ಮಾಹಿತಿ ನೀಡಿದ್ದಾರೆ. ಮೇ 30ರಂದು ‘ಪ್ರೇಮಲೋಕ 2’ (Premaloka 2) ಸಿನಿಮಾವನ್ನು ಆರಂಭಿಸುತ್ತೇನೆ. ನನ್ನ ದೊಡ್ಡ ಮಗ ಮನೋರಂಜನ್ ಅದರಲ್ಲಿ ನಟಿಸುತ್ತಾನೆ. ಚಿಕ್ಕ ಮಗ ವಿಕ್ರಮ್ ಚಿಕ್ಕ ಪಾತ್ರ ನಟಿಸುತ್ತಾನೆ. ನಾನು ತಂದೆ ಪಾತ್ರದಲ್ಲಿ ನಟಿಸುತ್ತಿದ್ದೇನೆ ಎಂದು ಕ್ರೇಜಿಸ್ಟಾರ್ ತಿಳಿಸಿದ್ದಾರೆ.

     

    ‘ಪ್ರೇಮಲೋಕ 2’ ಸಿನಿಮಾದಲ್ಲಿ ಬರೀ 20-25 ಹಾಡುಗಳು ಇರುತ್ತದೆ ಅಷ್ಟೇ. ಆದರೆ ಜೀವನಪೂರ್ತಿ ಇಡೀ ಸಿನಿಮಾ ಚಿಕ್ಕವರಿಂದಿಡಿದು ದೊಡ್ಡವರ ತನಕ ಎಲ್ಲರಿಗೂ ಕಾಡುತ್ತದೆ. ಈ ಸಿನಿಮಾದಲ್ಲಿ ಪ್ರೀತಿ ಇದೆ, ಜಾತಿ ಇಲ್ಲ. ಭೇದ-ಭಾವ ಇಲ್ಲ, ಹಣದ ಕುರಿತು ಇಲ್ಲ. ಇದೇ ಬೇರೆ ಥರದ ಕಥೆ ಇರುವ ಸಿನಿಮಾ. ನನಗೆ ಪ್ರೀತಿ ಬಿಟ್ಟರೆ ಬೇರೆ ಏನೂ ಗೊತ್ತಿಲ್ಲ ಎಂದು ರವಿಚಂದ್ರನ್ ಹೇಳಿದ್ದಾರೆ.

  • ಪ್ರೇಮಲೋಕ 2: ಅಂದು ಜೂಹಿ, ಇಂದು ತಮಿಳಿನ ತೇಜು

    ಪ್ರೇಮಲೋಕ 2: ಅಂದು ಜೂಹಿ, ಇಂದು ತಮಿಳಿನ ತೇಜು

    ಕ್ರೇಜಿಸ್ಟಾರ್ ರವಿಚಂದ್ರನ್ ಮತ್ತೊಂದು ಪ್ರೇಮಲೋಕ ಹಾಡಲು ಸಜ್ಜಾಗಿರುವ ವಿಷಯ ಗೊತ್ತೇ ಇದೆ. ಮೊದಲ ಪ್ರೇಮಲೋಕಕ್ಕೆ ರವಿಮಾಮ ಬಾಲಿವುಡ್ ನಿಂದ ಜೂಹಿ ಚಾವ್ಲಾ ಅವರನ್ನು ಕರೆತಂದಿದ್ದರು. ಪ್ರೇಮಲೋಕ 2 ಚಿತ್ರಕ್ಕೆ ತಮಿಳು ನಟಿಗೆ ಬಲೆಹಾಕಿದ್ದಾರೆ ಎಂದು ಹೇಳಲಾಗುತ್ತಿದೆ. ತಮಿಳು ನಟ ತೇಜು ಅಶ್ವಿನಿ (Teju Ashwini) ಈ ಸಿನಿಮಾದ ನಾಯಕಿ ಎನ್ನುವುದು ಸದ್ಯಕ್ಕಿರುವ ವರ್ತಮಾನ.

    ಈ ನಡುವೆ ಪ್ರೇಮಲೋಕ 2 ಸಿನಿಮಾ ಕುರಿತಂತೆ ಅನೇಕ ವಿಶೇಷಗಳು ಆಚೆ ಬರುತ್ತಿವೆ. ಅದರಲ್ಲಿ ರವಿಮಾಮ ಮಕ್ಕಳ ಸುದ್ದಿಯೂ ಸೇರಿಕೊಂಡಿದೆ. ಈ ಸಿನಿಮಾದಲ್ಲಿ ತಮ್ಮ ಇಬ್ಬರೂ ಮಕ್ಕಳಿಗೆ ಪಾತ್ರ ಕೊಟ್ಟಿದ್ದಾರೆ. ಆ ಪಾತ್ರಕ್ಕಾಗಿ ತಯಾರಿ ಕೂಡ ಮಾಡಿಸುತ್ತಿದ್ದಾರೆ.

    ಪ್ರೇಮಲೋಕ 2 ಚಿತ್ರಕ್ಕಾಗಿ ಡಾನ್ಸ್ ಮತ್ತು ಮೈ ಹುರಿಗೊಳಿಸಿಕೊಳ್ಳುತ್ತಿರುವೆ. ಅಪ್ಪನೇ ಮಾರ್ಗದರ್ಶನ ಮಾಡುತ್ತಿದ್ದಾರೆ. ಪ್ರೇಮಲೋಕ ಸಿನಿಮಾದ ಹೆಸರೇ ದೊಡ್ಡದು. ಹಾಗಾಗಿ ನಿರೀಕ್ಷೆ ಇದ್ದೇ ಇರುತ್ತದೆ. ಹಾಗಾಗಿ ಸಾಕಷ್ಟು ತಯಾರಿ ಮಾಡಿಕೊಂಡು ಕ್ಯಾಮೆರಾ ಮುಂದೆ ನಿಲ್ಲುತ್ತೇನೆ ಎನ್ನುತ್ತಾರೆ (Manoranjan) ಮನೋರಂಜನ್.

    ರವಿಚಂದ್ರನ್ (Ravichandran) ಕೆರಿಯರ್ ಬದಲಿಸಿದ ಸಿನಿಮಾ ಅಂದರೆ 1987ರಲ್ಲಿ ತೆರೆಕಂಡ ಪ್ರೇಮಲೋಕ. ತಾವೇ ನಿರ್ದೇಶಿಸಿ, ನಟಿಸಿ ಗೆದ್ದಿದ್ದರು. ಈಗ ಪ್ರೇಮಲೋಕ ಪಾರ್ಟ್ 2  ಸಿನಿಮಾ ಮಾಡೋಕೆ ಮುಂದಾಗಿದ್ದಾರೆ. ಮೇ 30ರಿಂದ ಶೂಟಿಂಗ್ ಕೂಡ ಶುರುವಾಗಲಿದೆ. ಕಾರ್ಯಕ್ರವೊಂದರಲ್ಲಿ ಅತಿಥಿಯಾಗಿ ರವಿಚಂದ್ರನ್ ಭಾಗವಹಿಸಿದ್ದರು. ‘ಪ್ರೇಮಲೋಕ 2’ ಬಗ್ಗೆ ಮಾಹಿತಿ ನೀಡಿದ್ದಾರೆ. ಮೇ 30ರಂದು ‘ಪ್ರೇಮಲೋಕ 2’ (Premaloka 2) ಸಿನಿಮಾವನ್ನು ಆರಂಭಿಸುತ್ತೇನೆ. ನನ್ನ ದೊಡ್ಡ ಮಗ ಮನೋರಂಜನ್ ಅದರಲ್ಲಿ ನಟಿಸುತ್ತಾನೆ. ಚಿಕ್ಕ ಮಗ ವಿಕ್ರಮ್ ಚಿಕ್ಕ ಪಾತ್ರ ನಟಿಸುತ್ತಾನೆ. ನಾನು ತಂದೆ ಪಾತ್ರದಲ್ಲಿ ನಟಿಸುತ್ತಿದ್ದೇನೆ ಎಂದು ಕ್ರೇಜಿ ಸ್ಟಾರ್ ತಿಳಿಸಿದ್ದಾರೆ.

     

    ‘ಪ್ರೇಮಲೋಕ 2’ ಸಿನಿಮಾದಲ್ಲಿ ಬರೀ 20-25 ಹಾಡುಗಳು ಇರುತ್ತೆದೆ ಅಷ್ಟೇ. ಆದರೆ ಜೀವನಪೂರ್ತಿ ಇಡೀ ಸಿನಿಮಾ ಚಿಕ್ಕವರಿಂದಿಡಿದು ದೊಡ್ಡವರ ತನಕ ಎಲ್ಲರಿಗೂ ಕಾಡುತ್ತದೆ. ಈ ಸಿನಿಮಾದಲ್ಲಿ ಪ್ರೀತಿ ಇದೆ, ಜಾತಿ ಇಲ್ಲ. ಭೇದ ಭಾವ ಇಲ್ಲ, ಹಣದ ಕುರಿತು ಇಲ್ಲ. ಇದೇ ಬೇರೆ ಥರದ ಕಥೆ ಇರುವ ಸಿನಿಮಾ. ನನಗೆ ಪ್ರೀತಿ ಬಿಟ್ಟರೆ ಬೇರೆ ಏನೂ ಗೊತ್ತಿಲ್ಲ ಎಂದು ರವಿಚಂದ್ರನ್ ಹೇಳಿದ್ದಾರೆ.

  • ‘ದ ಜಡ್ಜ್ ಮೆಂಟ್’ ಚಿತ್ರಕ್ಕೆ ರಿಲಯನ್ಸ್ ಎಂಟರ್ಟೈನ್ಮೆಂಟ್ ಸಾಥ್

    ‘ದ ಜಡ್ಜ್ ಮೆಂಟ್’ ಚಿತ್ರಕ್ಕೆ ರಿಲಯನ್ಸ್ ಎಂಟರ್ಟೈನ್ಮೆಂಟ್ ಸಾಥ್

    ಕ್ರೇಜಿಸ್ಟಾರ್ ವಿ. ರವಿಚಂದ್ರನ್ (Ravichandran) ಪ್ರಮುಖಪಾತ್ರದಲ್ಲಿ ನಟಿಸಿರುವ, ಅದ್ದೂರಿ ತಾರಾಬಳಗ ಹೊಂದಿರುವ ‘ದ ಜಡ್ಜ್ ಮೆಂಟ್’ (The Judgment) ಚಿತ್ರದ ವಿತರಣೆ ಹಕ್ಕನ್ನು ಭಾರತದ ಹೆಸರಾಂತ ರಿಲಯನ್ಸ್ ಎಂಟರ್ಟೈನ್ಮೆಂಟ್ ಸಂಸ್ಥೆ ಪಡೆದುಕೊಂಡಿದೆ. ಚಿತ್ರದ ಟೀಸರ್ ಸಹ ಬಿಡುಗಡೆಯಾಗಿದ್ದು ಕುತೂಹಲ ಮೂಡಿಸಿದೆ. ಚಿತ್ರವನ್ನು ನೋಡುವ ಕಾತುರವನ್ನು ಹೆಚ್ಚಿಸಿದೆ.

    ಇತ್ತೀಚಿಗೆ ಡಾ.ರಾಜಕುಮಾರ್ ಅವರ ಹುಟ್ಟುಹಬ್ಬದ ದಿನದಂದು ನಮ್ಮ ಚಿತ್ರದ ಚಿತ್ರೀಕರಣ ಮುಕ್ತಾಯ ಮಾಡಿ ಕುಂಬಳಕಾಯಿ ಒಡೆಯಲಾಯಿತು. ಟೀಸರ್ ಸಹ ಬಿಡುಗಡೆಯಾಗಿದ್ದು, ಪ್ರಶಂಸೆಯ ಮಾತುಗಳು ಕೇಳಿ ಬರುತ್ತದೆ. ಮತ್ತೊಂದು ಖುಷಿಯ ವಿಚಾರವೆಂದರೆ ನಮ್ಮ ಚಿತ್ರದ ವಿತರಣೆ ಹಕ್ಕನ್ನು ಪ್ರತಿಷ್ಠಿತ ರಿಲಯನ್ಸ್ ಎಂಟರ್ಟೈನ್ಮೆಂಟ್ ಸಂಸ್ಥೆ ಪಡೆದುಕೊಂಡಿದೆ. ಈ ಹೆಸರಾಂತ ಸಂಸ್ಥೆಯ ಮೂಲಕ ಚಿತ್ರ ಬಿಡುಗಡೆಯಾಗಲಿದೆ. ಈ ಚಿತ್ರದ ವಿತರಣೆ ಅಷ್ಟೇ ಅಲ್ಲದೆ, ಮುಂದೆ ನಮ್ಮ ಸಂಸ್ಥೆಯಿಂದ ನಿರ್ಮಾಣವಾಗುವ  ಚಿತ್ರಗಳ ನಿರ್ಮಾಣದಲ್ಲೂ ಸಹಯೋಗ ನೀಡುವುದಾಗಿ ರಿಲಯನ್ಸ್ ಎಂಟರ್ಟೈನ್ಮೆಂಟ್ ಸಂಸ್ಥೆ ತಿಳಿಸಿದೆ.

    ಈವರೆಗೂ ಸಾಕಷ್ಟು ಜನಪ್ರಿಯ ಚಿತ್ರಗಳನ್ನು ವಿತರಣೆ ರಿಲಯನ್ಸ್ ಎಂಟರ್ಟೈನ್ಮೆಂಟ್ ಸಂಸ್ಥೆ ವಿತರಣೆ ಮಾಡಿದೆ. ಆ ಪೈಕಿ ಹತ್ತೊಂಬತ್ತು ಚಿತ್ರಗಳು ಆಸ್ಕರ್ ಪ್ರಶಸ್ತಿಗೆ ಆಯ್ಕೆಯಾಗಿರುವ ಚಿತ್ರಗಳಾಗಿದೆ. ಇಂತಹ ಸಂಸ್ಥೆ ನಮ್ಮ ಚಿತ್ರವನ್ನು ವಿತರಣೆ ಮಾಡುತ್ತಿರುವುದು ನಿಜಕ್ಕೂ ಹೆಮ್ಮೆ. ಕೋರ್ಟ್ ಡ್ರಾಮ ಜಾನರ್ ನ ಈ ಚಿತ್ರವನ್ನು ಸದ್ಯದಲ್ಲೇ ತೆರೆಗೆ ತರುವುದಾಗಿ ನಿರ್ಮಾಪಕ ಹಾಗೂ ನಿರ್ದೇಶಕ ಗುರುರಾಜ ಕುಲಕರ್ಣಿ (Gururaja Kulkarni) (ನಾಡಗೌಡ) ತಿಳಿಸಿದ್ದಾರೆ.

    ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ ಹಾಗೂ ಕೆಂಪರಾಜ್ ಅವರ ಸಂಕಲನ ಈ ಚಿತ್ರಕ್ಕಿದೆ.  ಕ್ರೇಜಿಸ್ಟಾರ್ ರವಿಚಂದ್ರನ್, ದಿಗಂತ್ , ಧನ್ಯ ರಾಮಕುಮಾರ್, ಮೇಘನಾ ಗಾಂವ್ಕರ್, ಲಕ್ಷ್ಮೀ ಗೋಪಾಲಸ್ವಾಮಿ, ನಾಗಾಭರಣ, ಪ್ರಕಾಶ್ ಬೆಳವಾಡಿ, ರಂಗಾಯಣ ರಘು, ರವಿಶಂಕರ್ ಗೌಡ, ಸುಜಯ್ ಶಾಸ್ತ್ರಿ ಕೃಷ್ಣ ಹೆಬ್ಬಾಳೆ, ರೇಖಾ ಕೂಡ್ಲಿಗಿ, ನವಿಲ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

  • ಹಕ್ಕು ಚಲಾಯಿಸಿದ್ದೇನೆ, ನೀವು ವೋಟು ಮಾಡಿ: ನಟ ರವಿಚಂದ್ರನ್

    ಹಕ್ಕು ಚಲಾಯಿಸಿದ್ದೇನೆ, ನೀವು ವೋಟು ಮಾಡಿ: ನಟ ರವಿಚಂದ್ರನ್

    ಕ್ರೇಜಿಸ್ಟಾರ್ ರವಿಚಂದ್ರನ್ (Ravichandran) ಒಬ್ಬರೇ ಬಂದು ರಾಜಾಜಿನಗರದ ಠಾಗೂರು ಸ್ಕೂಲ್ ನಲ್ಲಿ ಮತದಾನ (Voting) ಮಾಡಿದ್ದಾರೆ. ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದ ರವಿಚಂದ್ರನ್, ನಂತರ ತಮ್ಮ ಹಕ್ಕನ್ನು ಚಲಾಯಿಸಿದ್ದರ ಬಗ್ಗೆ ಮಾತನಾಡಿದ್ದರು. ಇದು ನನ್ನ ಹಕ್ಕು, ಮತದಾನ ಮಾಡುವ ಮೂಲಕ ಹಕ್ಕು ಚಲಾಯಿಸಿದ್ದೇನೆ. ಎಲ್ಲರೂ ಬಂದು ವೋಟು ಮಾಡಿ ಎಂದರು.

    ಉತ್ತರಕಾಂಡ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ಡಾಲಿ ಧನಂಜಯ್ ಕೂಡ ಮತದಾನ ಮಾಡಿದ್ದಾರೆ. ಕಳೆದ ಎರಡು ವಾರಗಳಿಂದ ಅವರು ಉತ್ತರ ಕರ್ನಾಟಕದಲ್ಲಿ ಬೀಡು ಬಿಟ್ಟಿದ್ದರು. ಉತ್ತರ ಕರ್ನಾಟದಲ್ಲಿ ನಡೆಯುತ್ತಿದ್ದ ಶೂಟಿಂಗ್ ಗೆ ಬ್ರೇಕ್ ಹಾಕಿ ಮತದಾನದ ಪ್ರಕ್ರಿಯೆಯಲ್ಲಿ ಅವರು ಪಾಲ್ಗೊಂಡಿದ್ದಾರೆ.

    ಹೌದು, ಅರಸಿಕೆರೆಯ ಕಾಳೇನಹಳ್ಳಿಯಲ್ಲಿ ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ್ದಾರೆ ಡಾಲಿ ಧನಂಜಯ. ಪ್ರತಿ ಬಾರಿಯಂತೆ ಈ ಬಾರಿಯೂ ಕುಟುಂಬದ ಜೊತೆ ಮತದಾನ ಮಾಡಿ ಮಾದರಿಯಾಗಿದ್ದಾರೆ. ಬಿಳಿ ಪಂಚೆ ಹಾಗೂ ಬಿಳಿ ಶರ್ಟ್ ಧರಿಸಿ ಹಳ್ಳಿ ಸ್ಟೈಲ್ ನಲ್ಲಿ ಬಂದು ಹಕ್ಕು ಚಲಾಯಿಸಿದ್ದಾರೆ.

    ಬಘೀರ ಸಿನಿಮಾದ ಶೂಟಿಂಗ್ ವೇಳೆ ಏಟು ಮಾಡಿಕೊಂಡು, ಶಸ್ತ್ರ ಚಿಕಿತ್ಸೆಯ ನಂತರ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ನಟ ಶ್ರೀಮುರಳಿ ತಪ್ಪದೇ ಮತಗಟ್ಟಿಗೆ ಬಂದು ಮತದಾನ ಮಾಡಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಅವರು ಆಸ್ಪತ್ರೆಯಿಂದ ಮನೆಗೆ ಬಂದಿದ್ದಾರೆ.

     

    ಮತದಾನದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀಮುರಳಿ, ‘ಮತದಾನ ನಮ್ಮ ಹಕ್ಕು ಮತ ಚಲಾಯಿಸಿದ್ದೇವೆ. ನಮ್ಮ ಬೂತ್ ಅಲ್ಲಿ ತುಂಬಾ ಜನ ಇದ್ರು, ನೋಡಿ ತುಂಬಾ ಖುಷಿ ಆಯ್ತು. ಹಿರಿಯ ನಾಗರೀಕರು ಬರ್ತಾ ಇದ್ದಾರೆ. ಪ್ರಜಾಪ್ರಭುತ್ವ ನಾವು ಆಯ್ಕೆ ಮಾಡಿಕೊಳ್ಳೋದು. ಯೂತ್ ಇನ್ನೂ ಬರ್ತಿಲ್ಲ ಅಂತಾ ಅಂದರೆ ಏನು ಹೇಳಬೇಕು. ಇಂತಹ ಜವಾಬ್ದಾರಿ ಮೆರೆಯಬಾರದು.  ಇಲ್ಲೇನೂ ಎಕ್ಸಾಂ ಬರೆಸಲ್ಲ ಬಂದು ಮತದಾನ ಮಾಡಿ. ನಿಮಗೆ ಬೇಕಾದ ನಾಯಕನನ್ನ ಆಯ್ಕೆ ಮಾಡಿಕೊಳ್ಳಿ. ಯಾರು ಯಾರು ಓಟ್ ಮಾಡಿಲ್ಲ ಅವರಿಗೆ ಏನು ಹೇಳಬೇಕು ಮಾಧ್ಯಮ ಮುಂದೆ ಮಾತಾಡಬಾರದು’ ಎಂದಿದ್ದಾರೆ.

  • ಡಾ.ರಾಜ್ ಹುಟ್ಟು ಹಬ್ಬದ ದಿನದಂದು ಶೂಟಿಂಗ್ ಮುಗಿಸಿದ ‘ದ ಜಡ್ಜ್ ಮೆಂಟ್’ ಟೀಮ್

    ಡಾ.ರಾಜ್ ಹುಟ್ಟು ಹಬ್ಬದ ದಿನದಂದು ಶೂಟಿಂಗ್ ಮುಗಿಸಿದ ‘ದ ಜಡ್ಜ್ ಮೆಂಟ್’ ಟೀಮ್

    ಕ್ರೇಜಿಸ್ಟಾರ್ ವಿ. ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ  ‘ದ ಜಡ್ಜ್ ಮೆಂಟ್’ (The Judgment) ಚಿತ್ರದ ಚಿತ್ರೀಕರಣ ಡಾ.ರಾಜಕುಮಾರ್ ಅವರ ಹುಟ್ಟುಹಬ್ಬದಂದು ಮುಕ್ತಾಯವಾಗಿದೆ. ಈ ಸಂದರ್ಭದಲ್ಲಿ ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಮೊದಲಿಗೆ ಮಾತನಾಡಿದ ನಿರ್ದೇಶಕ ಗುರುರಾಜ ಕುಲಕರ್ಣಿ (ನಾಡಗೌಡ), ನಮ್ಮ ಚಿತ್ರದ ಚಿತ್ರೀಕರಣ ಇಂದಿಗೆ  ಪೂರ್ಣವಾಗಿದೆ. ಕಾಕತಾಳೀಯ ಎಂದರೆ ನಮ್ಮ ಚಿತ್ರದ ಚಿತ್ರೀಕರಣ (Shooting) ಕಳೆದ ವರ್ಷ ರಾಜಕುಮಾರ್ ಅವರ ಹುಟ್ಟುಹಬ್ಬದಂದು ಆರಂಭವಾಗಿತ್ತು. ಈ ವರ್ಷ ಅವರ ಹುಟ್ಟುಹಬ್ಬದ ದಿನ ಮುಕ್ತಾಯವಾಗಿದೆ. ಚಿತ್ರ ಇಷ್ಟು ಸರಾಗವಾಗಿ ಮುಕ್ತಾಯವಾಗಲು ರವಿಚಂದ್ರನ್ ಅವರು ಸೇರಿದಂತೆ ಎಲ್ಲಾ ಕಲಾವಿದರ ಹಾಗೂ ತಂತ್ರಜ್ಞರ  ಸಹಕಾರವೇ ಕಾರಣ.  ಈ ಸಂದರ್ಭದಲ್ಲಿ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ಈ ಚಿತ್ರವನ್ನು ನಾನು ಸೇರಿದಂತೆ ಐವರು ನಿರ್ಮಾಪಕರು ನಿರ್ಮಿಸಿದ್ದೇವೆ. ಕೋರ್ಟ್ ರೂಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ “ದ ಜಡ್ಜ್ ಮೆಂಟ್” ಚಿತ್ರವನ್ನು ಮೇ ನಲ್ಲಿ ತೆರೆಗೆ ತರುವ ಪ್ರಯತ್ನ ಮಾಡುತ್ತಿದ್ದೇವೆ ಎಂದರು.

    ನಮ್ಮ ಚಿತ್ರ ಕಳೆದವರ್ಷ ಯಾವ ದಿನ‌ ಆರಂಭವಾಗಿತ್ತೊ, ಈ ವರ್ಷ ಅದೇ ದಿನ ಮುಕ್ತಾಯವಾಗಿದೆ. ಇಂತಹ ಅದ್ದೂರಿ ತಾರಾಬಳಗ ಹಾಗೂ ತಾಂತ್ರಿಕವರ್ಗ ಹೊಂದಿರುವ ಈ ಚಿತ್ರ ಯಾವುದೇ ತೊಂದರೆಯಿಲ್ಲದೆ ಪೂರ್ಣವಾಗಲು ಸಹಕಾರ ನೀಡಿದ ಪ್ರತಿಯೊಬ್ಬರಿಗೂ ನಮ್ಮ ಧನ್ಯವಾದ ಎಂದರು ನಿರ್ಮಾಪಕರಾದ ಶರದ್ ನಾಡಗೌಡ ಹಾಗೂ ರಾಮು ರಾಯಚೂರು. ನಿರ್ಮಾಪಕರಾದ ವಿಶ್ವನಾಥ್ ಗುಪ್ತ ಹಾಗು ರಾಜಶೇಖರ ಪಾಟೀಲ್ ಅವರೂ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

    “ದ ಜಡ್ಜ್ ಮೆಂಟ್” ಚಿತ್ರದಲ್ಲಿ ನಟಿಸಿರುವುದಕ್ಕೆ ಖುಷಿಯಾಗಿದೆ‌. ಈ ತಂಡದವರು ಕಲಾವಿದರನ್ನು ನೋಡಿಕೊಂಡ ರೀತಿ ನಿಜಕ್ಕೂ ಶ್ಲಾಘನೀಯ ಎಂದು ಧನ್ಯಾ ರಾಮಕುಮಾರ್ ತಿಳಿಸಿದರು. ಈ ತಂಡಕ್ಕೆ ತಡವಾಗಿ ಬಂದು ಸೇರಿಕೊಂಡವಳು ನಾನೇ ಎಂದು ಮಾತು ಆರಂಭಿಸಿದ ನಟಿ ಮೇಘನಾ ಗಾಂವ್ಕರ್, ರವಿಚಂದ್ರನ್ ಅವರ ಜೊತೆ ನಟಿಸಿದ್ದು ನನಗೆ ಸಂತೋಷವಾಗಿದೆ.  ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ಆರಂಭವಾಗಿ, ಈ ವರ್ಷದ ಅವರ ಹುಟ್ಟುಹಬ್ಬದ ದಿನವೇ ಚಿತ್ರೀಕರಣ ಮುಕ್ತಾಯವಾಗಿರುವುದು ನಿಜಕ್ಕೂ ಅಚ್ಚರಿಯಾಗಿದೆ. ಅಣ್ಣಾವ್ರ ಆಶೀರ್ವಾದ ನಮ್ಮ ತಂಡಕ್ಕೆ ಇದೆ ಎಂದರು.

    ರಾಜಕುಮಾರ್ ಪುತ್ರಿ ಪೂರ್ಣಿಮಾ ರಾಮಕುಮಾರ್ ಚಿತ್ರತಂಡಕ್ಕೆ ಶುಭ ಕೋರಿದರು. ಗೀತರಚನೆಕಾರ  ಪ್ರಮೋದ್ ಮರವಂತೆ ಹಾಗು ಚಿತ್ರದಲ್ಲಿ ನಟಿಸಿರುವ ರೇಖಾ ಕೂಡ್ಲಗಿ, ನವಿಲ ಚಿತ್ರದ ಕುರಿತು ಮಾತನಾಡಿದರು. ಛಾಯಾಗ್ರಾಹಕ ಪಿ.ಕೆ.ಹೆಚ್ ದಾಸ್ ಹಾಗೂ ಸಂಕಲನಕಾರ ಕೆಂಪರಾಜ್ ಸೇರಿದಂತೆ ಅನೇಕ ತಂತ್ರಜ್ಞರು ಪತ್ರಿಕಾಗೋಷ್ಠಿಯಲ್ಲಿದ್ದರು.

    ಕ್ರೇಜಿಸ್ಟಾರ್ ರವಿಚಂದ್ರನ್ (Ravichandran), ದಿಗಂತ್ , ಧನ್ಯ ರಾಮಕುಮಾರ್, ಮೇಘನಾ ಗಾಂವ್ಕರ್, ಲಕ್ಷ್ಮೀ ಗೋಪಾಲಸ್ವಾಮಿ, ನಾಗಾಭರಣ, ಪ್ರಕಾಶ್ ಬೆಳವಾಡಿ, ರಂಗಾಯಣ ರಘು, ರವಿಶಂಕರ್ ಗೌಡ, ಸುಜಯ್ ಶಾಸ್ತ್ರಿ ಕೃಷ್ಣ ಹೆಬ್ಬಾಳೆ, ರೇಖಾ ಕೂಡ್ಲಿಗಿ, ನವಿಲ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಅನೂಪ್ ಸೀಳಿನ್ “ದ ಜಡ್ಜ್ ಮೆಂಟ್” ಚಿತ್ರಕ್ಕೆ ಸಂಗೀತ ನೀಡಿದ್ದಾರೆ.