Tag: Ravindra Jadeja

  • ಜಡೇಜಾ ಜಾದು – ಭಾರತಕ್ಕೆ 6 ವಿಕೆಟ್‌ಗಳ ಭರ್ಜರಿ ಜಯ

    ಜಡೇಜಾ ಜಾದು – ಭಾರತಕ್ಕೆ 6 ವಿಕೆಟ್‌ಗಳ ಭರ್ಜರಿ ಜಯ

    ನವದೆಹಲಿ: ಜಡೇಜಾ (Ravindra Jadeja) ಸ್ಪಿನ್ ಜಾದುವಿನಿಂದಾಗಿ ಆಸ್ಟ್ರೇಲಿಯಾ (Australia) ವಿರುದ್ಧ ಭಾರತ 6 ವಿಕೆಟ್‌ಗಳ ಜಯ ಸಾಧಿಸಿ ಬಾರ್ಡರ್ ಗಾವಾಸ್ಕರ್ ಟೆಸ್ಟ್ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ.

    ಇಂದು ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ರವೀಂದ್ರ ಜಡೇಜಾ ಬೌಲಿಂಗ್ ದಾಳಿಗೆ ಪಲ್ಟಿ ಹೊಡೆಯಿತು. ನಿನ್ನೆ ಸ್ಫೋಟಕ ಬ್ಯಾಟಿಂಗ್ ನಡೆಸಿದ್ದ ಆಸ್ಟ್ರೇಲಿಯಾ ಆಟಗಾರ ಟ್ರಾವಿಸ್ ಹೆಡ್ (Travis Head) 43 ರನ್, ಲಾಬುಶೇನ್ 35 ರನ್‌ಗಳಿಗೆ ಔಟಾದರು. ಪರಿಣಾಮ ಆಸ್ಟ್ರೇಲಿಯಾ 31.1 ಓವರ್‌ಗಳಲ್ಲಿ 113 ರನ್‌ಗಳಿಗೆ ಸರ್ವಪತನ ಕಂಡಿತು. ಇದನ್ನೂ ಓದಿ: ಬೌಲರ್‌ಗಳ ಆಟಕ್ಕೆ ಕಂಗಾಲು – ಮೊದಲ ದಿನವೇ ಆಸೀಸ್ ಸರ್ವಪತನ

    Team India 3

    114 ರನ್‌ಗಳ ಸುಲಭ ಗುರಿ ಪಡೆದ ಭಾರತ 26.4 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 118 ರನ್‌ಗಳಿಸಿ ಭರ್ಜರಿ ಜಯ ಸಾಧಿಸಿತು. ಆರಂಭಿಕರಾದ ನಾಯಕ ರೋಹಿತ್ ಶರ್ಮಾ (Rohit Sharma) 20 ಎಸೆತಗಳಲ್ಲಿ 3 ಬೌಂಡರಿ 2 ಸಿಕ್ಸರ್ ಸಹಿತ 31 ರನ್ ಗಳಿಸುವ ಮೂಲಕ ಉತ್ತಮ ಆರಂಭ ನೀಡಿದರು. ಇದನ್ನೂ ಓದಿ: ಲಿಯಾನ್ ಬೌಲಿಂಗ್‌ಗೆ ಭಾರತ ಪಲ್ಟಿ – ಆಸ್ಟ್ರೇಲಿಯಾಗೆ 62 ರನ್‌ಗಳ ಮುನ್ನಡೆ

    Axar Patel

    ಕೆ.ಎಲ್ ರಾಹುಲ್ ಮತ್ತೆ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿ ಟೀಕೆಗೆ ಗುರಿಯಾದರು. ಕೇವಲ 1 ರನ್ ಗಳಿಸಿ ಔಟಾಗುವ ಮೂಲಕ ನಿರಾಸೆ ಮೂಡಿಸಿದರು. 2ನೇ ಕ್ರಮಾಂಕದಲ್ಲಿ ಕ್ರೀಸ್‌ಗಳಿದ ವಿರಾಟ್ ಕೊಹ್ಲಿ (Virat Kohli) 31 ಎಸೆತಗಳಲ್ಲಿ 20 ರನ್ ಗಳಿಸಿ ಔಟ್ ಆದರು. ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಶ್ರೀಕರ್ ಭರತ್ ಹಾಗೂ ಚೇತೇಶ್ವರ ಪೂಜಾರ ಉತ್ತಮ ಇನ್ನಿಂಗ್ಸ್ ಕಟ್ಟಿದ್ದರು. ತಾಳ್ಮೆಯ ಆಟವಾಡಿದ ಪೂಜಾರ ಅಜೇಯ 31 ರನ್ (74 ಎಸೆತ, 4 ಬೌಂಡರಿ) ಗಳಿಸಿದರೆ, 22 ಎಸೆತ ಎದುರಿಸಿದ ಶ್ರೀಕರ್ ಭರತ್ 3 ಬೌಂಡರಿ, 1 ಸಿಕ್ಸರ್ ನೊಂದಿಗೆ 23 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

    Australia 2

    2ನೇ ಟೆಸ್ಟ್ ಪಂದ್ಯದಲ್ಲೂ ಅದ್ಭುತ ಫಾರ್ಮ್ ಮುಂದುವರಿಸಿದ ಜಡೇಜಾ 7 ವಿಕೆಟ್ ಪಡೆದು ಮಿಂಚಿದರೆ, ರವಿಚಂದ್ರನ್ ಅಶ್ವಿನ್ 3 ವಿಕೆಟ್‌ಗೆ ತೃಪ್ತಿಪಟ್ಟುಕೊಂಡರು.

    ಆಸ್ಟ್ರೇಲಿಯಾ ತಂಡದ ಪರ ನಥನ್ ಲಿಯಾನ್ (Nathan Lyon) 2 ವಿಕೆಟ್, ಟಾಡ್ ಮರ್ಫಿ 1 ವಿಕೆಟ್ ಪಡೆದರು.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬೌಲರ್‌ಗಳ ಆಟಕ್ಕೆ ಕಂಗಾಲು – ಮೊದಲ ದಿನವೇ ಆಸೀಸ್ ಸರ್ವಪತನ

    ಬೌಲರ್‌ಗಳ ಆಟಕ್ಕೆ ಕಂಗಾಲು – ಮೊದಲ ದಿನವೇ ಆಸೀಸ್ ಸರ್ವಪತನ

    ನವದೆಹಲಿ: ಮೊಹಮ್ಮದ್ ಶಮಿ (Mohammed Shami) ಮಾರಕ ಬೌಲಿಂಗ್ ಹಾಗೂ ರವೀಂದ್ರ ಜಡೇಜಾ (Ravindra Jadeja), ಆರ್.ಅಶ್ವಿನ್ (Ravichandran Ashwin) ಸ್ಪಿನ್ ದಾಳಿಗೆ ಕಂಗಾಲಾದ ಕಾಂಗರೂಪಡೆ ಮೊದಲ ದಿನವೇ 263 ರನ್‌ಗಳಿಗೆ ಆಲೌಟ್ ಆಗಿದೆ.

    ಆಸ್ಟ್ರೇಲಿಯಾ (Australia) ಎದುರು ಇನ್ನಿಂಗ್ಸ್ ಆರಂಭಿಸಿದ ಭಾರತ (India) ಮೊದಲ ದಿನದಾಟದ ಅಂತ್ಯಕ್ಕೆ 9 ಓವರ್‌ಗಳಲ್ಲಿ 21 ರನ್‌ಗಳಿಸಿ 242 ರನ್‌ಗಳ ಹಿನ್ನಡೆಯಲ್ಲಿದೆ. ಇದನ್ನೂ ಓದಿ: ಟೀಂ ಇಂಡಿಯಾ ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ ರಾಜೀನಾಮೆ

    ಬಾರ್ಡರ್ ಗಾವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ 2ನೇ ಪಂದ್ಯದಲ್ಲಿ ಟಾಸ್ ಗೆದ್ದು ಕ್ರೀಸ್‌ಗಿಳಿದ ಆಸ್ಟ್ರೇಲಿಯಾ ತಂಡ 78.4 ಓವರ್‌ಗಳಲ್ಲಿ 263 ರನ್‌ಗಳಿಸಿ ಸರ್ವಪತನಕಂಡಿತು. ಇದನ್ನೂ ಓದಿ: ಕ್ರಿಕೆಟಿಗ ಪೃಥ್ವಿ ಶಾ ಕಾರಿನ ಮೇಲೆ ದಾಳಿ – ಸಿನಿ ತಾರೆ ಸಪ್ನಾ ಗಿಲ್ ಅರೆಸ್ಟ್

    ಆರಂಭಿಕರಾಗಿ ಕಣಕ್ಕಿಳಿದ ಡೇವಿಡ್ ವಾರ್ನರ್ (David Warner) ಹಾಗೂ ಉಸ್ಮಾನ್ ಖವಾಜ (Usman Khawaja) ಜೋಡಿ ಅಧಿಕ ರನ್‌ಗಳಿಸುವಲ್ಲಿ ವಿಫಲವಾಯಿತು. 15.2 ಓವರ್‌ಗಳಲ್ಲಿ 50 ರನ್‌ಗಳಿಸಿದ್ದಾಗಲೇ ಆಸ್ಟ್ರೇಲಿಯಾ ತಂಡ ಮೊದಲ ವಿಕೆಟ್ ಕಳೆದುಕೊಂಡಿತು. 44 ಎಸೆತಗಳಲ್ಲಿ ಕೇವಲ 15 ರನ್‌ಗಳಿಸಿದ್ದ ಡೇವಿಡ್ ವಾರ್ನರ್ ಶೀಘ್ರವೇ ಪೆವಿಲಿಯನ್ ಸೇರಿದ್ರು. ನಂತರ ಜೊತೆಗೂಡಿದ ಮತ್ತೋರ್ವ ಆರಂಭಿಕ ಉಸ್ಮಾನ್ ಖವಾಜ ಹಾಗೂ ಮಾರ್ನಸ್ ಲಾಬುಶೇನ್ 2ನೇ ವಿಕೆಟ್ ಜೊತೆಯಾಟಕ್ಕೆ 91 ರನ್ ಪೇರಿಸಿದರು. ಈ ವೇಳೆ ಲಾಬುಶೇನ್ 4 ಬೌಂಡರಿಗಳಿಗೆ 18 ರನ್‌ಗಳಿಸಿ ಔಟಾದರು.

    ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟ್ಸ್‌ಮ್ಯಾನ್‌ ಸ್ಟೀವನ್ ಸ್ಮಿತ್ (Steven Smith) ಎರಡೇ ಎಸೆತಗಳಲ್ಲಿ ಡಕೌಟ್ ಆಗಿ ಪೆವಿಲಿಯನ್ ಹಾದಿ ಹಿಡಿದರು. ಇದರ ಬೆನ್ನಲ್ಲೇ 81 ರನ್‌ಗಳಿಸಿ (12 ಬೌಂಡರಿ, 1 ಸಿಕ್ಸರ್) ಶತಕದ ನಿರೀಕ್ಷೆಯಲ್ಲಿದ್ದ ಖವಾಜ ಸಹ ಜಡೇಜಾಗೆ ವಿಕೆಟ್ ಒಪ್ಪಿಸಿದರು. ನಂತರದಲ್ಲಿ ಪ್ಯಾಟ್ ಕಮ್ಮಿನ್ಸ್ (Pat Cummins) 33 ರನ್ ಗಳಿಸಿ ಔಟಾಗುತ್ತಿದ್ದಂತೆ ಒಂದೊಂದೇ ವಿಕೆಟ್‌ಗಳು ಪತನಗೊಂಡಿತು.

    ಅಂತಿಮವಾಗಿ ಆಸ್ಟ್ರೇಲಿಯಾ 78.4 ಓವರ್‌ಗಳಲ್ಲಿ 263 ರನ್‌ಗಳಿಸಿ ಆಲೌಟ್ ಆಯಿತು. ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಪೀಟರ್ ಹ್ಯಾಂಡ್ಸ್‌ಕೋಬ್‌ 9 ಬೌಂಡರಿಯೊಂದಿಗೆ 72 ರನ್‌ಗಳಿಸಿ ಅಜೇಯರಾಗುಳಿದರು.

    ಟೀಂ ಇಂಡಿಯಾ ಪರ ಮೊಹಮ್ಮದ್ ಶಮಿ 4 ವಿಕೆಟ್ ಪಡೆದು ಅಬ್ಬರಿಸಿದರೆ, ರವೀಂದ್ರ ಜಡೇಜಾ, ಆರ್. ಅಶ್ವಿನ್ ತಲಾ 3 ವಿಕೆಟ್ ಪಡೆದರು.

    ಮೊದಲ ದಿನದ ಅಂತ್ಯಕ್ಕೆ ಭಾರತ 9 ಓವರ್‌ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೇ 21 ರನ್‌ಗಳಿಸಿ 242 ರನ್‌ಗಳ ಹಿನ್ನಡೆಯಲ್ಲಿದ್ದಾರೆ. ನಾಯಕ ರೋಹಿತ್ ಶರ್ಮಾ (Rohit Sharma) 13 ರನ್ (34 ಎಸೆತ, 1 ಬೌಂಡರಿ) ಗಳಿಸಿದ್ದರೆ, ಕೆ.ಎಲ್ ರಾಹುಲ್ (KL Rahul) 20 ಎಸೆಗಳಲ್ಲಿ 4 ರನ್‌ಳಿಸಿದ್ದು, ಶನಿವಾರ ಬ್ಯಾಟಿಂಗ್ ಮುಂದುವರಿಸಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪಂದ್ಯಶ್ರೇಷ್ಠ ಜಡೇಜಾಗೆ ಬಿಸಿ ಮುಟ್ಟಿಸಿದ ICC

    ಪಂದ್ಯಶ್ರೇಷ್ಠ ಜಡೇಜಾಗೆ ಬಿಸಿ ಮುಟ್ಟಿಸಿದ ICC

    ನಾಗ್ಪುರ: ಆಸ್ಟ್ರೇಲಿಯಾ (Australia) ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ (Test Cricket) ಉತ್ತಮ ಪ್ರದರ್ಶನ ನೀಡಿದ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ (Ravindra Jadeja) ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಈ ಬೆನ್ನಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ದಂಡದ ಬಿಸಿ ಮುಟ್ಟಿಸಿದೆ.

    ಪ್ರಥಮ ಇನ್ನಿಂಗ್ಸ್ನಲ್ಲಿ ಜಡೇಜಾ ಮೊದಲ ಹಂತದ ಐಸಿಸಿ ಕೋಡ್ ಆಫ್ ಕಂಡಕ್ಟ್ (ICC Code of Conduct) ನಿಯಮ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಡೇಜಾ ಅವರ ಪಂದ್ಯದ ಸಂಭಾವನೆಯಲ್ಲಿ ಶೇ.25 ರಷ್ಟು ದಂಡವನ್ನು ವಿಧಿಸಲಾಗಿದೆ ಎಂದು ಐಸಿಸಿ ತಿಳಿಸಿದೆ. ಇದನ್ನೂ ಓದಿ: ಅಶ್ವಿನ್, ಶಮಿ ಸ್ಪಿನ್ ದಾಳಿಗೆ ಮಕಾಡೆ ಮಲಗಿದ ಕಾಂಗರೂ ಪಡೆ – ಭಾರತಕ್ಕೆ 1-0 ಜಯದ ಮುನ್ನಡೆ

    ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯ ಮೊದಲ ದಿನದ ಇನ್ನಿಂಗ್ಸ್‌ನಲ್ಲಿ 46ನೇ ಓವರ್‌ನಲ್ಲಿ ಈ ಘಟನೆ ನಡೆದಿತ್ತು. ಮೊಹಮ್ಮದ್ ಸಿರಾಜ್ ಅವರಿಂದ ವಸ್ತುವೊಂದನ್ನು ಪಡೆದುಕೊಂಡ ರವೀಂದ್ರ ಜಡೇಜಾ ಅವರು, ತಮ್ಮ ತೋರು ಬೆರಳಿಗೆ ಹಚ್ಚಿಕೊಂಡಿದ್ದರು. ಈ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡಿತ್ತು. ಇದನ್ನೂ ಓದಿ: ಜಡೇಜಾ, ಅಶ್ವಿನ್‌ ದಾಳಿಗೆ ಆಸ್ಟ್ರೇಲಿಯಾ ಪಲ್ಟಿ – ಏಕದಿನ ಶೈಲಿಯಲ್ಲಿ ರೋಹಿತ್‌ ಬ್ಯಾಟಿಂಗ್‌

    ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗುತ್ತಿದ್ದಂತೆ ಆಸ್ಟ್ರೇಲಿಯಾ ಮಾಧ್ಯಮಗಳು ರವೀಂದ್ರ ಜಡೇಜಾ ವಿರುದ್ಧ ಬಾಲ್ ಟ್ಯಾಂಪರಿಂಗ್ ಆರೋಪ ಮಾಡಿದ್ದವು. ಮೊದಲನೇ ದಿನದಾಟದ ಅಂತ್ಯಕ್ಕೆ ಮ್ಯಾಚ್ ರೆಫರಿ ಈ ವೀಡಿಯೋವನ್ನು ನಾಯಕ ರೋಹಿತ್ ಶರ್ಮಾ (Rohit Sharma) ಹಾಗೂ ಜಡೇಜಾಗೆ ತೋರಿಸಿ ಸ್ಪಷ್ಟನೆ ಕೇಳಿದ್ದರು. ಬೆರಳಿನಲ್ಲಿ ನೋವು ಕಾಣಿಸಿಕೊಂಡಿದ್ದರಿಂದ ನೋವು ನಿವಾರಕ ಕ್ರೀಮ್ ಹಚ್ಚಿಕೊಳ್ಳಲಾಗಿತ್ತು ಎಂದು ರೋಹಿತ್ ಸ್ಪಷ್ಟನೆ ನೀಡಿದ್ದರು. ಇದಾದ ಬಳಿಕ ಜಡೇಜಾಗೆ ಕ್ಲೀನ್ ಚೀಟ್ ನೀಡಲಾಗಿತ್ತು.

    ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗಾವಾಸ್ಕರ್ ಟ್ರೋಫಿ (Border Gavaskar Trophy 2023) ಟೆಸ್ಟ್ ಸರಣಿಯಲ್ಲಿ 132 ರನ್‌ಗಳ ಭರ್ಜರಿ ಜಯ ಸಾಧಿಸಿರುವ ಭಾರತ ತಂಡ 1-0 ಅಂತರದಲ್ಲಿ ಜಯದ ಮುನ್ನಡೆ ಸಾಧಿಸಿದೆ.

    ಬಾಲ್ ಟ್ಯಾಂಪರಿಂಗ್ ಅಂದ್ರೆ ಏನು?
    ಯಾವುದೇ ಪಂದ್ಯ ನಡೆಯುವ ವೇಳೆ ಚೆನ್ನಾಗಿರುವ ಚೆಂಡನ್ನು ಫೀಲ್ಡಿಂಗ್ ತಂಡದ ಆಟಗಾರರು ತಮ್ಮ ಅನುಕೂಲಕ್ಕೆ ತಕ್ಕಂತೆ ಐಸಿಸಿ ನಿಯಮಗಳ ವಿರುದ್ಧವಾಗಿ ಯಾವುದಾದಾರೂ ವಸ್ತುಗಳನ್ನು ಬಳಸಿಕೊಂಡು ವಿರೂಪಗೊಳಿಸುವುದು. ಶೈನ್ ಇರುವ ಚೆಂಡನ್ನು ಚೆನ್ನಾಗಿ ಉಜ್ಜುವುದು, ಆ ಮೂಲಕ ಚೆಂಡನ್ನು ಹೆಚ್ಚು ಸ್ವಿಂಗ್ ಆಗುವಂತೆ ಹಾಗೂ ಬ್ಯಾಟ್ಸ್ಮನ್‌ಗೆ ಆಡದಂತೆ ಮಾಡುವುದನ್ನ ಬಾಲ್ ಟ್ಯಾಂಪರಿಂಗ್ ಎಂದು ಕರೆಯುತ್ತಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅಶ್ವಿನ್, ಶಮಿ ಸ್ಪಿನ್ ದಾಳಿಗೆ ಮಕಾಡೆ ಮಲಗಿದ ಕಾಂಗರೂ ಪಡೆ – ಭಾರತಕ್ಕೆ 1-0 ಜಯದ ಮುನ್ನಡೆ

    ಅಶ್ವಿನ್, ಶಮಿ ಸ್ಪಿನ್ ದಾಳಿಗೆ ಮಕಾಡೆ ಮಲಗಿದ ಕಾಂಗರೂ ಪಡೆ – ಭಾರತಕ್ಕೆ 1-0 ಜಯದ ಮುನ್ನಡೆ

    ನಾಗ್ಪುರ: ಟೀಂ ಇಂಡಿಯಾ ಬೌಲರ್‌ಗಳಾದ ಆರ್. ಅಶ್ವಿನ್ (Ravichandran Ashwin), ಮೊಹಮ್ಮದ್ ಶಮಿ, ಜಡೇಜಾ (Ravindra Jadeja) ಸ್ಪಿನ್ ದಾಳಿ ನೆರವಿನಿಂದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ (Australia) ವಿರುದ್ಧ ಭಾರತ 132 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ 4 ಪಂದ್ಯಗಳ ಬಾರ್ಡರ್ ಗವಾಸ್ಕರ್ ಟ್ರೋಫಿ (Border Gavaskar Trophy 2023) ಟೆಸ್ಟ್ ಸರಣಿಯಲ್ಲಿ ರೋಹಿತ್ ಪಡೆ 1-0 ಮುನ್ನಡೆ ಸಾಧಿಸಿದೆ.

    ಮೊದಲ ಇನ್ನಿಂಗ್ಸ್‌ನಲ್ಲಿ 2ನೇ ದಿನದ ಆಟಕ್ಕೆ 7 ವಿಕೆಟ್ ಕಳೆದುಕೊಂಡು 144 ರನ್‌ಗಳ ಮುನ್ನಡೆ ಸಾಧಿಸಿದ್ದ ಟೀಂ ಇಂಡಿಯಾ (Team India) ಶನಿವಾರ ಮೂರನೇ ದಿನದ ಇನ್ನಿಂಗ್ಸ್ ಆರಂಭಿಸಿತು. ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ (Mohammed Shami) ಇಬ್ಬರ ಸಾಂಘಿಕ ಬ್ಯಾಟಿಂಗ್ ಪ್ರದರ್ಶನದಿಂದ ಭಾರತ ತಂಡ 139.3 ಓವರ್‌ಗಳಿಗೆ 400 ರನ್ ಗಳಿಸಿ ಆಲೌಟ್ ಆಯಿತು. ಈ ವೇಳೆ ಅಕ್ಷರ್ ಪಟೇಲ್ 84 ರನ್ ಗಳಿಸಿದ್ರೆ, ಮೊಹಮ್ಮದ್ ಶಮಿ 37 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

    ಈ ಮೂಲಕ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 223 ರನ್‌ಗಳ ಮುನ್ನಡೆ ಸಾಧಿಸಿತ್ತು. ನಂತರ ಕ್ರೀಸ್‌ಗಿಳಿದ ಕಾಂಗರೂ ಪಡೆ ಅಶ್ವಿನ್, ಶಮಿ, ಜಡೇಜಾ ಹಾಗೂ ಅಕ್ಷರ್ ಪಟೇಲ್ (Axar Patel) ಸ್ಪಿನ್ ದಾಳಿಗೆ ಮಕಾಡೆ ಮಲಗಿತು. 32.3 ಓವರ್‌ಗಳಲ್ಲಿ ಕೇವಲ 91 ರನ್‌ಗಳಿಗೆ ಸರ್ವಪತನ ಕಂಡಿತು. ಇದರಿಂದ ಭಾರತ 132 ಭಾರೀ ರನ್‌ಗಳ ಅಂತರದಿಂದ ಜಯ ಸಾಧಿಸಿತು. ಟೀಂ ಇಂಡಿಯಾ ಎದುರು ಆಸ್ಟ್ರೇಲಿಯಾ ಮಂಡಿಯೂರಿತು.

    2ನೇ ದಿನದಾಟದಲ್ಲಿ ನಾಯಕ ರೋಹಿತ್ ಶರ್ಮಾ (120 ರನ್) ಶತಕ ಸಿಡಿಸಿದ್ದರು ಹಾಗೂ ರವೀಂದ್ರ ಜಡೇಜಾ (70 ರನ್) ಅರ್ಧಶತಕ ಗಳಿಸಿ ಮಿಂಚಿದ್ದರು. ಇದನ್ನೂ ಓದಿ: ಒಂದೂವರೆ ವರ್ಷಗಳ ಬಳಿಕ ಶತಕ ಸಿಡಿಸಿ ದಾಖಲೆ ಬರೆದ ರೋಹಿತ್

    ಆಸ್ಟ್ರೇಲಿಯಾ ಪರ ಡೇವಿಡ್ ವಾರ್ನರ್ 10, ಮಾರ್ನಸ್ ಲಾಬುಶೇನ್ 17 ರನ್ ಗಳಿಸಿದ್ರೆ, ಸ್ಟೀವನ್ ಸ್ಮಿತ್ 25 ರನ್‌ಗಳಿಸಿ ಅಜೇಯರಾಗುಳಿದರು. ಉಳಿದ ಆಟಗಾರರು ಸ್ಥಿರವಾಗಿ ನಿಲ್ಲದ ಕಾರಣ ಟೀಂ ಇಂಡಿಯಾ ಎದುರು ಸೋಲೊಪ್ಪಿಕೊಂಡಿತು. ಇದನ್ನೂ ಓದಿ: ಜಡೇಜಾ, ಅಶ್ವಿನ್‌ ದಾಳಿಗೆ ಆಸ್ಟ್ರೇಲಿಯಾ ಪಲ್ಟಿ – ಏಕದಿನ ಶೈಲಿಯಲ್ಲಿ ರೋಹಿತ್‌ ಬ್ಯಾಟಿಂಗ್‌

    ಅಶ್ವಿನ್ ಸ್ಪಿನ್ ದಾಳಿ: ಪಂದ್ಯದ 2ನೇ ಇನಿಂಗ್ಸ್ನಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ತೋರಿದ ಆರ್.ಅಶ್ವಿನ್ ಡೇವಿಡ್ ವಾರ್ನರ್, ಉಸ್ಮಾನ್ ಖವಾಜ, ಮ್ಯಾಟ್ ರೆನ್‌ಶಾ, ಪೀಟರ್ ಹ್ಯಾಂಡ್ಸ್‌ಕಾಂಬ್‌ ಹಾಗೂ ಅಲೆಕ್ಸ್ ಕೆರಿ ಬ್ಯಾಟರ್‌ಗಳನ್ನ ಉರುಳಿಸಿದರು. ಈ ಮೂಲಕ ಅಶ್ವಿನ್ 5 ವಿಕೆಟ್ ಪಡೆದ ಸಾಧನೆ ಮಾಡಿದರು. ಇವರಿಗೆ ಸಾಥ್ ನೀಡಿದ್ದ ರವೀಂದ್ರ ಜಡೇಜಾ ಹಾಗೂ ಮೊಹಮ್ಮದ್ ಶಮಿ ತಲಾ ಎರಡು ವಿಕೆಟ್ ಉರುಳಿಸಿದರು. ಅಕ್ಷರ್ ಪಟೇಲ್ ಒಂದು ವಿಕೆಟ್‌ಗೆ ತೃಪ್ತಿಪಟ್ಟುಕೊಂಡರು.

    ಅಕ್ಷರ್-ಶಮಿ ಸ್ಫೋಟಕ ಬ್ಯಾಟಿಂಗ್: ಪಂದ್ಯದ ಮೂರನೇ ದಿನ ಮೊದಲ ಸೆಷನ್‌ನಲ್ಲಿ ಅಕ್ಷರ್ ಪಟೇಲ್ ಹಾಗೂ ಮೊಹಮ್ಮದ್ ಶಮಿ ಅವರು ಏಕದಿನ ಶೈಲಿಯಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ತೋರಿದರು. ಅಕ್ಷರ್ ಪಟೇಲ್ 174 ಎಸೆತಗಳಲ್ಲಿ ಒಂದು ಸಿಕ್ಸರ್ 10 ಬೌಂಡರಿಗಳೊಂದಿಗೆ 84 ರನ್ ಸಿಡಿಸಿದರೆ, ಮೊಹಮ್ಮದ್ ಶಮಿ 47 ಎಸೆತಗಳಲ್ಲಿ 3 ಭರ್ಜರಿ ಸಿಕ್ಸರ್ ಹಾಗೂ ಎರಡು ಬೌಂಡರಿಗಳೊಂದಿಗೆ 37 ರನ್ ಚಚ್ಚಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರೋಹಿತ್‌ ಶತಕ , ಜಡೇಜಾ, ಅಕ್ಷರ್‌ ಫಿಫ್ಟಿ – ಭಾರತಕ್ಕೆ 144 ರನ್‌ಗಳ ಮುನ್ನಡೆ

    ರೋಹಿತ್‌ ಶತಕ , ಜಡೇಜಾ, ಅಕ್ಷರ್‌ ಫಿಫ್ಟಿ – ಭಾರತಕ್ಕೆ 144 ರನ್‌ಗಳ ಮುನ್ನಡೆ

    ನಾಗ್ಪುರ: ಆಸ್ಟ್ರೇಲಿಯಾ (Australia) ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್‌ ಪಂದ್ಯದಲ್ಲಿ ಭಾರತ (Team India) 144 ರನ್‌ಗಳ ಮುನ್ನಡೆ ಸಾಧಿಸಿದೆ.

    ಎರಡನೇ ದಿನ ರೋಹಿತ್‌ ಶರ್ಮಾ (Rohith Sharma) ಶತಕ, ರವೀಂದ್ರ ಜಡೇಜಾ (Ravindra Jadeja) ಮತ್ತು ಅಕ್ಷರ್‌ ಪಟೇಲ್‌ (Axar Patel) ಅರ್ಧಶತಕದ ಆಟದಿಂದ ಭಾರತ ಮುನ್ನೂರು ರನ್‌ಗಳ ಗಡಿ ದಾಟಿದೆ.

    ಗುರುವಾರ 56 ರನ್‌ ಗಳಿಸಿ ಕ್ರೀಸ್‌ನಲ್ಲಿದ್ದ ರೋಹಿತ್‌ ಶರ್ಮಾ ಇಂದು 120 ರನ್‌(212 ಎಸೆತ, 15 ಬೌಂಡರಿ, 2 ಸಿಕ್ಸರ್‌) ಹೊಡೆದು ಔಟಾದರು. ಅಶ್ವಿನ್‌ 23 ರನ್‌, ಪೂಜಾ 7 ರನ್‌, ವಿರಾಟ್‌ ಕೊಹ್ಲಿ 12 ರನ್‌, ಸೂರ್ಯಕುಮಾರ್‌ ಯಾದವ್‌ 8 ರನ್‌, ಶ್ರೀಕಾರ್‌ ಭರತ್‌ 8 ರನ್‌ ಹೊಡೆದು ಔಟಾದರು. ಇದನ್ನೂ ಓದಿ: ಒಂದೂವರೆ ವರ್ಷಗಳ ಬಳಿಕ ಶತಕ ಸಿಡಿಸಿ ದಾಖಲೆ ಬರೆದ ರೋಹಿತ್

    ಮಧ್ಯಮ ಕ್ರಮಾಂಕದಲ್ಲಿ ವಿಕೆಟ್‌ ಉರುಳಿದ್ದರೂ ರವೀಂದ್ರ ಜಡೇಜಾ ಮತ್ತು ಅಕ್ಷರ್‌ ಪಟೇಲ್‌ ತಂಡಕ್ಕೆ ಆಸರೆಯಾದರು. ಇವರಿಬ್ಬರು ಮುರಿಯದ 8ನೇ ವಿಕೆಟ್‌ಗೆ 185 ಎಸೆತಗಳಲ್ಲಿ 81 ರನ್‌ ಜೊತೆಯಾಟವಾಡಿದ್ದಾರೆ. ಜಡೇಜಾ 66 ರನ್(170‌ ಎಸೆತ, 9 ಬೌಂಡರಿ), ಅಕ್ಷರ್‌ ಪಟೇಲ್‌ 52 ರನ್‌(102 ಎಸೆತ, 8 ಬೌಂಡರಿ) ಹೊಡೆದಿದ್ದು ದಿನದ ಅಂತ್ಯಕ್ಕೆ ಭಾರತ 114 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 321 ರನ್‌ ಹೊಡೆದಿದೆ.

    ಟಾಡ್ ಮರ್ಫಿ 5 ವಿಕೆಟ್‌ ಕಿತ್ತರೆ, ಪ್ಯಾಟ್‌ ಕಮ್ಮಿನ್ಸ್‌ ಮತ್ತು ನಥನ್‌ ಲಿಯಾನ್‌ ತಲಾ ಒಂದೊಂದು ವಿಕೆಟ್‌ ಪಡೆದಿದ್ದಾರೆ. ರವೀಂದ್ರ ಜಡೇಜಾ, ಅಶ್ವಿನ್‌ ಬೌಲಿಂಗ್‌ ದಾಳಿಗೆ ಪಲ್ಟಿ ಹೊಡೆದ ಆಸ್ಟ್ರೇಲಿಯಾ  177 ರನ್‌ಗಳಿಗೆ ಆಲೌಟ್‌ ಆಗಿತ್ತು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜಡೇಜಾ, ಅಶ್ವಿನ್‌ ದಾಳಿಗೆ ಆಸ್ಟ್ರೇಲಿಯಾ ಪಲ್ಟಿ – ಏಕದಿನ ಶೈಲಿಯಲ್ಲಿ ರೋಹಿತ್‌ ಬ್ಯಾಟಿಂಗ್‌

    ಜಡೇಜಾ, ಅಶ್ವಿನ್‌ ದಾಳಿಗೆ ಆಸ್ಟ್ರೇಲಿಯಾ ಪಲ್ಟಿ – ಏಕದಿನ ಶೈಲಿಯಲ್ಲಿ ರೋಹಿತ್‌ ಬ್ಯಾಟಿಂಗ್‌

    ನಾಗ್ಪುರ: ರವೀಂದ್ರ ಜಡೇಜಾ, ಅಶ್ವಿನ್‌ ಬೌಲಿಂಗ್‌ ದಾಳಿಗೆ ಪಲ್ಟಿ ಹೊಡೆದ ಆಸ್ಟ್ರೇಲಿಯಾ (Australia) 177 ರನ್‌ಗಳಿಗೆ ಆಲೌಟ್‌ ಆಗಿದೆ.

    ತನ್ನ ಸರದಿ ಆರಂಭಿಸಿದ ಭಾರತ (Team India) ದಿನದ ಅಂತ್ಯಕ್ಕೆ 24 ಓವರ್‌ಗಳಲ್ಲಿ 1 ವಿಕೆಟ್‌ ನಷ್ಟಕ್ಕೆ 77 ರನ್‌ ಗಳಿಸಿದ್ದು 100 ರನ್‌ ಹಿನ್ನಡೆಯಲ್ಲಿದೆ.

    ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಆಸ್ಟ್ರೇಲಿಯಾ ಆರಂಭದಲ್ಲೇ 2 ರನ್‌ಗಳಿಗೆ 2 ವಿಕೆಟ್‌ ಕಳೆದುಕೊಂಡಿತ್ತು. ಆದರೆ ಸ್ಮಿತ್‌ ಮತ್ತು ಲಾಬುಶೇನ್‌ ಮೂರನೇ ವಿಕೆಟಿಗೆ 82 ರನ್‌ ಜೊತೆಯಾಟವಾಡಿ ಸ್ವಲ್ಪ ಚೇತರಿಕೆ ನೀಡಿದರು. ಈ ಮಧ್ಯೆ ಸ್ಪಿತ್‌ ಔಟಾಗಿದ್ದೇ ತಡ ಆಸ್ಟ್ರೇಲಿಯಾದ ಪತನ ಆರಂಭವಾಯಿತು.

    93 ರನ್‌ ಒಳಗಡೆ ಕೊನೆಯ 8 ವಿಕೆಟ್‌ಗಳು ಪತನಗೊಂಡ ಪರಿಣಾಮ ಆಸ್ಟ್ರೇಲಿಯಾ ಅಂತಿಮವಾಗಿ 63.5 ಓವರ್‌ಗಳಲ್ಲಿ 177 ರನ್‌ಗಳಿಗೆ ಆಲೌಟ್‌ ಆಯ್ತು. ಲಾಬುಶೇನ್‌ 49 ರನ್‌, ಸ್ಮಿತ್‌ 37 ರನ್‌, ಪೀಟರ್‌ ಹ್ಯಾಡ್ಸ್‌ಕೋಂಬ್‌ 31 ರನ್‌, ಅಲೆಕ್ಸ್‌ ಕ್ಯಾರಿ 36 ರನ್‌ ಹೊಡೆದು ಔಟ್‌ ಆದರು.  ಇದನ್ನೂ ಓದಿ: ಹೊಲದಲ್ಲಿ ಟ್ರ್ಯಾಕ್ಟರ್‌ ಓಡಿಸಿದ ಧೋನಿ

    ಮರಳಿ ತಂಡ ಸೇರಿದ ಜಡೇಜಾ (Ravindra Jadeja) 47 ರನ್‌ ನೀಡಿ 5 ವಿಕೆಟ್‌ ಕಿತ್ತರೆ, ಅಶ್ವಿನ್‌ (Ashwin) 42 ರನ್‌ ನೀಡಿ 3 ವಿಕೆಟ್‌ ಪಡೆದರು. ಶಮಿ, ಸಿರಾಜ್‌ ತಲಾ ಒಂದೊಂದು ವಿಕೆಟ್‌ ಪಡೆದರು.

    ಇನ್ನಿಂಗ್ಸ್‌ ಆರಂಭಿಸಿದ ನಾಯಕ ರೋಹಿತ್‌ ಶರ್ಮಾ (Rohith Sharma) ಏಕದಿನ ಪಂದ್ಯದಂತೆ ಬ್ಯಾಟ್‌ ಬೀಸಿದ್ದಾರೆ. ರಾಹುಲ್‌ 20 ರನ್‌ಗಳಿಸಿ ಔಟಾಗಿದ್ದಾರೆ. ಮೊದಲ ದಿನದ ಅಂತ್ಯಕ್ಕೆ ಭಾರತ 24 ಓವರ್‌ಗಳಲ್ಲಿ 1 ವಿಕೆಟ್‌ ನಷ್ಟಕ್ಕೆ 77 ರನ್‌ ಗಳಿಸಿದೆ. ರೋಹಿತ್‌ ಶರ್ಮಾ 56 ರನ್‌(69 ಎಸೆತ, 9 ಬೌಂಡರಿ, 1 ಸಿಕ್ಸರ್‌), ಅಶ್ವಿನ್‌ 0 ರನ್‌ ಗಳಿಸಿದ್ದು ಶುಕ್ರವಾರ ಬ್ಯಾಟಿಂಗ್‌ ಮುಂದುವರಿಸಲಿದ್ದಾರೆ.

    ಅಶ್ವಿನ್‌ ಈ ಪಂದ್ಯದಲ್ಲಿ ಅಲೆಕ್ಸ್‌ ಕ್ಯಾರಿ ಅವರನ್ನು ಔಟ್‌ ಮಾಡುವ ಮೂಲಕ 450 ವಿಕೆಟ್‌ ಕಿತ್ತ ಸಾಧನೆ ಮಾಡಿದರು. ಸದ್ಯ ಅಶ್ವಿನ್‌ 89 ಪಂದ್ಯಗಳಿಂದ 452 ವಿಕೆಟ್‌ ಪಡೆದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಿಕ್ಸರ್, ಬೌಂಡರಿ ಸುರಿಮಳೆ – ಸ್ಫೋಟಕ ಅರ್ಧ ಶತಕ ಸಿಡಿಸಿ ದಾಖಲೆ ಬರೆದ ಅಕ್ಷರ್ ಪಟೇಲ್

    ಸಿಕ್ಸರ್, ಬೌಂಡರಿ ಸುರಿಮಳೆ – ಸ್ಫೋಟಕ ಅರ್ಧ ಶತಕ ಸಿಡಿಸಿ ದಾಖಲೆ ಬರೆದ ಅಕ್ಷರ್ ಪಟೇಲ್

    ಮುಂಬೈ: ಭಾರತ-ಶ್ರೀಲಂಕಾ (INDvsSL) ನಡುವಿನ ಟಿ20 ಸರಣಿಯ 2ನೇ ಪಂದ್ಯದಲ್ಲಿ ಸಿಕ್ಸರ್, ಬೌಂಡರಿಗಳ ಸುರಿಮಳೆ ಸುರಿಸಿದ ಟೀಂ ಇಂಡಿಯಾ (Team India) ಆಟಗಾರ ಅಕ್ಷರ್ ಪಟೇಲ್ (Axar Patel), ಆಲ್‌ರೌಂಡರ್ ರವೀಂದ್ರ ಜಡೇಜಾ (Ravindra Jadeja) ಅವರ ದಾಖಲೆಯನ್ನು ಸರಿಗಟ್ಟಿದ್ದು, ಹೊಸ ದಾಖಲೆ ನಿರ್ಮಿಸಿದ್ದಾರೆ.

    ಹೌದು. ಶ್ರೀಲಂಕಾ (SriLanka) ವಿರುದ್ಧದ 2ನೇ ಪಂದ್ಯದಲ್ಲಿ 209.67 ಸ್ಟ್ರೈಕ್‌ರೇಟ್‌ ನಲ್ಲಿ ಬ್ಯಾಟ್ ಬೀಸಿದ ಅಕ್ಷರ್ ಪಟೇಲ್ 20 ಎಸೆತಗಳಲ್ಲಿ ಸ್ಫೋಟಕ ಅರ್ಧ ಶತಕ ಸಿಡಿಸಿದ್ದಾರೆ. ಇದರಲ್ಲಿ 6 ಸಿಕ್ಸರ್, 2 ಬೌಂಡರಿಗಳು ಸೇರಿವೆ. ಈ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ (T20I Cricket) 7ನೇ ಕ್ರಮಾಂಕದಲ್ಲಿ ಸ್ಫೋಟಕ ಅರ್ಧ ಶತಕ ಸಿಡಿಸಿ, ರವೀಂದ್ರ ಜಡೇಜಾ ಅವರ ದಾಖಲೆಯನ್ನ ಮುರಿದಿದ್ದಾರೆ. ರವೀಂದ್ರ ಜಡೇಜಾ 2020ರಲ್ಲಿ 7ನೇ ಕ್ರಮಾಂಕದಲ್ಲಿ ಬಂದು 44 ರನ್ ಸಿಡಿಸಿದ್ದರು.

    ಇಷ್ಟೇ ಅಲ್ಲದೇ ಕಡಿಮೆ ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ ಭಾರತದ 5ನೇ ಆಟಗಾರ ಎನ್ನಿಸಿಕೊಂಡಿದ್ದಾರೆ. ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ (Yuvraj Singh) 2007 T20 ವಿಶ್ವಕಪ್‌ನಲ್ಲಿ (ICC World) ಇಂಗ್ಲೆಂಡ್ (England) ವಿರುದ್ಧ ಕೇವಲ 12 ಎಸೆತಗಳಲ್ಲಿ 50 ರನ್ ಚಚ್ಚಿ ವಿಶ್ವದಾಖಲೆ ನಿರ್ಮಿಸಿದ್ದಾರೆ. ಇದನ್ನೂ ಓದಿ: ಸಿಕ್ಸರ್‌, ಬೌಂಡರಿಗಳ ಸುರಿಮಳೆ ಆಟ – ಆರಂಭದಲ್ಲಿ ಹಿನ್ನಡೆಯಾದ್ರೂ ಹೋರಾಡಿ ಸೋತ ಭಾರತ

    ಆ ನಂತರ ಕೆ.ಎಲ್.ರಾಹುಲ್ (KL Rahul) 18 ಎಸೆತಗಳಲ್ಲಿ, ಸೂರ್ಯಕುಮಾರ್ ಯಾದವ್ (Suryakumar Yadav) 18 ಎಸೆತಗಳಲ್ಲಿ ಹಾಗೂ ಗೌತಮ್ ಗಂಭೀರ್ 19 ಎಸೆತಗಳಲ್ಲಿ ಸ್ಫೋಟಕ 50 ರನ್ ಸಿಡಿಸಿದ್ದಾರೆ. ಇದೀಗ ಈ ಸಾಲಿನಲ್ಲಿ ಅಕ್ಷರ್ ಪಟೇಲ್ ಸಹ ಸ್ಥಾನ ಪಡೆದಿದ್ದಾರೆ. 20 ಎಸತೆಗಳಲ್ಲಿ 50 ರನ್ (6 ಸಿಕ್ಸರ್, 2 ಬೌಂಡರಿ) ಪೂರೈಸಿ ದಾಖಲೆ ಬರೆದಿದ್ದಾರೆ. ಇದನ್ನೂ ಓದಿ: ನೋಬಾಲ್ ಎಸೆಯುವುದು ಅಪರಾಧ – ಅರ್ಶ್‍ದೀಪ್ ಸಿಂಗ್ ತಪ್ಪಿಗೆ ಚಾಟಿ ಬೀಸಿದ ಪಾಂಡ್ಯ

    ಗುರುವಾರ ಭಾರತ ಶ್ರೀಲಂಕಾ ನಡುವಿನ ಟಿ20 ಸರಣಿಯ 2ನೇ ಪಂದ್ಯದಲ್ಲಿ ಶ್ರೀಲಂಕಾ ನೀಡಿದ 207 ರನ್‌ಗಳ ಗುರಿ ಬೆನ್ನತ್ತಿದ ಭಾರತ 8 ವಿಕೆಟ್‌ಗಳ ನಷ್ಟಕ್ಕೆ 190 ರನ್ ಗಳಿಸಿ ಸೋಲನ್ನು ಒಪ್ಪಿಕೊಂಡಿತು. ಈ ಪಂದ್ಯದಲ್ಲಿ 20 ಎಸೆತಗಳಲ್ಲಿ 50 ರನ್ ಚಚ್ಚಿದ ಅಕ್ಷರ್ ಪಟೇಲ್ 31 ಎಸೆತಗಳಲ್ಲಿ 65 ರನ್ ಗಳಿಸಿ ಔಟಾದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜಾಮ್‍ನಗರದಲ್ಲಿ ಅರಳಿದ ಕಮಲ- ಜಡೇಜಾ ಪತ್ನಿಗೆ ಭರ್ಜರಿ ಜಯ

    ಜಾಮ್‍ನಗರದಲ್ಲಿ ಅರಳಿದ ಕಮಲ- ಜಡೇಜಾ ಪತ್ನಿಗೆ ಭರ್ಜರಿ ಜಯ

    ಗಾಂಧಿನಗರ: ಬಹುನಿರೀಕ್ಷೆ ಹುಟ್ಟಿಸಿದ್ದ ಟೀಂ ಇಂಡಿಯಾದ ಆಲ್‍ರೌಂಡರ್ ರವೀಂದ್ರ ಜಡೇಜಾ (Ravindra Jadeja) ಅವರ ಪತ್ನಿ ರಿವಾಬಾ ಜಡೇಜಾ (Rivaba Jadeja) ಅವರು ಗುಜರಾತ್ ಚುನಾವಣೆಯಲ್ಲಿ (Gujarat Election) ಭರ್ಜರಿ ಜಯ ಸಿಕ್ಕಿದೆ.

    ಜಾಮ್‍ನಗರ ಕ್ಷೇತ್ರದಲ್ಲಿ ರಿವಾಬಾ ಜಡೇಜಾ ಬಿಜೆಪಿಯಿಂದ (BJP) ಸ್ಪರ್ಧಿಸಿದ್ದರು. ಇಂದು ನಡೆದ ಮತ ಎಣಿಕೆ ಸಂದರ್ಭದಲ್ಲಿ ಆಪ್‍ನ ಕರ್ಶನ್‍ಭಾಯ್ ಕರ್ಮೂರ್ ಅವರ ವಿರುದ್ಧ 40 ಸಾವಿರಕ್ಕೂ ಅಧಿಕ ಮತಗಳಿಂದ ಭಾರೀ ಮುನ್ನಡೆ ಸಾಧಿಸಿ ವಿಜಯ ಸಾಧಿಸಿದರು.

    ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 11 ಅಭ್ಯರ್ಥಿಗಳು ಜಾಮ್‍ನಗರ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಈ ಕ್ಷೇತ್ರದಲ್ಲಿ 57.82% ಮತದಾನವಾಗಿದೆ. ಇದು 2017ರ ಚುನಾವಣೆಗೆ ಹೋಲಿಸಿದರೆ 7.68% ಅಧಿಕ ಮತದಾನವಾಗಿದೆ.

    ಜಡೇಜಾ ಪತ್ನಿ ರಿವಾಬಾ ಜಡೇಜಾ ಬಿಜೆಪಿಯಿಂದ ಸ್ಪರ್ಧಿಸಿದ ಜಾಮ್‍ನಗರ ಉತ್ತರ ವಿಧಾನಸಭಾ ಕ್ಷೇತ್ರದಲ್ಲೇ ರವೀಂದ್ರ ಜಡೇಜಾ ಅವರ ಸಹೋದರಿ ನೈನಾ ಜಡೇಜಾ ಕಾಂಗ್ರೆಸ್ ಪರ ಭರ್ಜರಿ ಪ್ರಚಾರ ಕೈಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಜಾಮ್‍ನಗರ ಕ್ಷೇತ್ರ ಚುನಾವಣೆಯ ಫಲಿತಾಂಶ ತೀವ್ರ ಕುತೂಹಲ ಏರ್ಪಟ್ಟಿತ್ತು. ಇದನ್ನೂ ಓದಿ: ಗುಜರಾತ್‌ನಲ್ಲಿ ಬಿಜೆಪಿಗೆ ಭಾರೀ ಮುನ್ನಡೆ

    ಇಂದು ನಡೆಯುತ್ತಿರುವ ಗುಜರಾತ್ ಬಹುತೇಕ ಮುಗಿದಿದ್ದು, ಬಿಜೆಪಿ ಸತತ 7ನೇ ಬಾರಿ ಅಧಿಕಾರಕ್ಕೆ ಏರುವುದು ಪಕ್ಕಾ ಆಗಿದೆ. ಇದನ್ನೂ ಓದಿ: 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ – ಗುಜರಾತ್‌ನಲ್ಲಿ ದಾಖಲೆ ಬರೆಯುತ್ತಾ ಬಿಜೆಪಿ?

    Live Tv
    [brid partner=56869869 player=32851 video=960834 autoplay=true]

  • ಜಡೇಜಾ ಟೀಂ ಇಂಡಿಯಾ ಪರ ಆಡಲು ಅನ್‍ಫಿಟ್ – ಬಿಜೆಪಿ ಪರ ಪ್ರಚಾರಕ್ಕೆ ಫಿಟ್

    ಜಡೇಜಾ ಟೀಂ ಇಂಡಿಯಾ ಪರ ಆಡಲು ಅನ್‍ಫಿಟ್ – ಬಿಜೆಪಿ ಪರ ಪ್ರಚಾರಕ್ಕೆ ಫಿಟ್

    ಗಾಂಧೀನಗರ: ಗಾಯಾಳುವಾಗಿ ಟೀಂ ಇಂಡಿಯಾದಿಂದ (Team India) ಹೊರಗುಳಿದಿರುವ ಆಲ್‍ರೌಂಡರ್ ರವೀಂದ್ರ ಜಡೇಜಾ (Ravindra Jadeja)  ಅನ್‍ಫಿಟ್ ಕಾರಣ ಹೇಳಿ ಬಾಂಗ್ಲಾದೇಶ ವಿರುದ್ಧದ ಸರಣಿಯಿಂದ ವಿಶ್ರಾಂತಿ ಪಡೆದಿದ್ದಾರೆ. ಆದರೆ ಅತ್ತ ಗುಜರಾತ್‍ನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ (Gujarat Election) ಬಿಜೆಪಿ (BJP) ಪರ ಪ್ರಚಾರ ರ್‍ಯಾಲಿಯಲ್ಲಿ ಭಾಗವಹಿಸಿ ಟೀಕೆಗೆ ಗುರಿಯಾಗಿದ್ದಾರೆ.

    ರವೀಂದ್ರ ಜಡೇಜಾ ಪತ್ನಿ ರಿವಾಬಾ ಜಡೇಜಾ (Rivaba Jadega) ಅವರಿಗೆ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಗುಜರಾತ್‍ನ ಜಾಮ್‍ನಗರ ಉತ್ತರದಿಂದ (Jamnagar North) ಬಿಜೆಪಿ ಅಭ್ಯರ್ಥಿಯಾಗಿ ರಿವಾಬಾ ಜಡೇಜಾ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ ಜಡೇಜಾ ಪತ್ನಿ ಪರ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ (Narendra Modi), ಅಮಿತ್ ಶಾ (Amit Shah) ಸೇರಿದಂತೆ ಘಟಾನುಘಟಿ ನಾಯಕರು ಬಿಜೆಪಿ ಪರ ಪ್ರಚಾರದಲ್ಲಿ ತೊಡಗಿದ್ದು, ಇವರೊಂದಿಗೆ ಜಡೇಜಾ ಕೂಡ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: ಜಡೇಜಾ ಪತ್ನಿಗೆ ಗುಜರಾತ್‍ನ ಜಾಮ್‌ನಗರ ಉತ್ತರದಿಂದ ಬಿಜೆಪಿ ಟಿಕೆಟ್

    ಇದೀಗ ಜಡೇಜಾ ಈ ನಡೆ ಕುರಿತಾಗಿ ಟೀಕೆಗಳು ಕೇಳಿ ಬರುತ್ತಿದೆ. ಟಿ20 ವಿಶ್ವಕಪ್‍ಗೂ (T20 World Cup) ಮುನ್ನ ಏಷ್ಯಾಕಪ್‍ನಲ್ಲಿ (Asia Cup) ಜಡೇಜಾ ಗಾಯಗೊಂಡು ಟೀಂ ಇಂಡಿಯಾದಿಂದ ಹೊರಗುಳಿದಿದ್ದರು. ಆ ಬಳಿಕ ಗಾಯದಿಂದ ಚೇತರಿಕೆ ಕಂಡಿದ್ದು, ಬಾಂಗ್ಲಾದೇಶ ಸರಣಿಗೆ ತಂಡಕ್ಕೆ ಮೊದಲು ಆಯ್ಕೆಯಾಗಿದ್ದರು. ಆದರೆ ಆ ಬಳಿಕ ದಿಢೀರ್ ಆಗಿ ಜಡೇಜಾ ಅನ್‍ಫಿಟ್ ಎಂದು ತಿಳಿಸಿ ವಿಶ್ರಾಂತಿ ಬಯಸಿದ್ದಾರೆ. ಈ ನಡುವೆ ಪತ್ನಿ ಪರ ಪ್ರಚಾರ ರ್‍ಯಾಲಿಗಳಲ್ಲಿ ಭಾಗವಹಿಸುತ್ತಿದ್ದಾರೆ. ಇದನ್ನು ಕಂಡ ಅಭಿಮಾನಿಗಳು ಜಡೇಜಾಗೆ ದೇಶದ ಪರ ಆಡುವುದಕ್ಕಿಂತ ಪತ್ನಿಯ ಪರ ಪ್ರಚಾರ ಹೆಚ್ಚಾಯಿತೇ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಅರ್ಜೆಂಟೀನಾಗೆ ಮಾಡು ಇಲ್ಲವೇ ಮಡಿ ಪಂದ್ಯ – ಕತಾರ್ ಕಥೆ ಮುಗಿಯಿತು

    ಗುಜರಾತ್‍ನಲ್ಲಿ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ. ಈಗಾಗಲೇ ಬಿಜೆಪಿ, ಕಾಂಗ್ರೆಸ್ (Congress), ಎಎಪಿ (AAP) ಸೇರಿ ಎಲ್ಲಾ ಪಕ್ಷಗಳು ಭರದಿಂದ ಪ್ರಚಾರದಲ್ಲಿ ತೊಡಗಿಕೊಂಡಿವೆ.

    Live Tv
    [brid partner=56869869 player=32851 video=960834 autoplay=true]

  • ಜಡೇಜಾ ಪತ್ನಿಗೆ ಗುಜರಾತ್‍ನ ಜಾಮ್‌ನಗರ ಉತ್ತರದಿಂದ ಬಿಜೆಪಿ ಟಿಕೆಟ್

    ಜಡೇಜಾ ಪತ್ನಿಗೆ ಗುಜರಾತ್‍ನ ಜಾಮ್‌ನಗರ ಉತ್ತರದಿಂದ ಬಿಜೆಪಿ ಟಿಕೆಟ್

    ಗಾಂಧೀನಗರ: ಟೀಂ ಇಂಡಿಯಾದ ಸ್ಟಾರ್ ಆಲ್‍ರೌಂಡರ್ ರವೀಂದ್ರ ಜಡೇಜಾ (Ravindra Jadeja) ಪತ್ನಿ ರಿವಾಬಾ ಜಡೇಜಾ (Rivaba Jadega) ಅವರಿಗೆ ಗುಜರಾತ್ ವಿಧಾನಸಭಾ ಚುನಾವಣೆಗೆ (Gujarat Polls) ಬಿಜೆಯಿಂದ (BJP) ಟಿಕೆಟ್ ಸಿಕ್ಕಿದೆ. ಗುಜರಾತ್‍ನ ಜಾಮ್‌ನಗರ ಉತ್ತರದಿಂದ (Jamnagar North) ರಿವಾಬಾ ಜಡೇಜಾ ಸ್ಪರ್ಧಿಸಲಿದ್ದಾರೆ.

    ನಿನ್ನೆ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಸಿತ್ತು. ಸಭೆಯಲ್ಲಿ ಪಕ್ಷದ ಮುಖ್ಯಸ್ಥ ಜೆ.ಪಿ ನಡ್ಡಾ, ಪ್ರಧಾನಿ ನರೇಂದ್ರ ಮೋದಿ (Narendra Modi), ಗೃಹ ಸಚಿವ ಅಮಿತ್ ಶಾ (Amit Shah), ರಕ್ಷಣಾ ಸಚಿವ ರಾಜ್‍ನಾಥ್ ಸಿಂಗ್ ಪಾಲ್ಗೊಳ್ಳಂಡಿದ್ದರು. ಸಭೆಯಲ್ಲಿ ಒಟ್ಟು 100ಕ್ಕೂ ಅಧಿಕ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಗುಜರಾತ್‍ನ ಜಮ್ನಗರ ಉತ್ತರದಿಂದ ರಿವಾಬಾ ಜಡೇಜಾ ಬಿಜೆಪಿ ಟಿಕೆಟ್ ನೀಡಿದೆ. ಇದನ್ನೂ ಓದಿ: ಭಾರತ-ಇಂಗ್ಲೆಂಡ್ ಸೆಮಿ ಸಮರ – ಗೆದ್ದವರು ಫೈನಲ್‍ಗೆ ಸೋತವರು ಮನೆಗೆ

    2016ರಲ್ಲಿ ಜಡೇಜಾ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ರಿವಾಬಾ ಜಡೇಜಾ ಮೆಕ್ಯಾನಿಕಲ್ ಎಂಜಿನಿಯರ್ ಪದವೀಧರೆ. ಅಲ್ಲದೇ ಕಾಂಗ್ರೆಸ್ ಹಿರಿಯ ಆಯಕ ಹರಿಸಿಂಗ್ ಸೋಲಂಕಿ ಅವರ ಸಂಬಂಧಿಯಾಗಿದ್ದಾರೆ. ರಿವಾಬಾ ಜಡೇಜಾರನ್ನು ಬಿಜೆಪಿ ನಾಯಕರಾದ ಹಾರ್ದಿಕ್ ಪಟೇಲ್ ಮತ್ತು ಅಲ್ಪೇಶ್ ಬಿಜೆಪಿಗೆ ಸೇರ್ಪಡೆ ಮಾಡಿಕೊಂಡಿದ್ದರು. ಇದೀಗ ಬಿಜೆಪಿ ಟಿಕೆಟ್ ನೀಡಿ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಿದೆ. ಇದನ್ನೂ ಓದಿ: ಮುಂಬೈ ಗಲ್ಲಿಯಲ್ಲಿ ಅಭಿಮಾನಿಗಳ ಜೊತೆ ಕ್ರಿಕೆಟ್ ಆಡಿದ ಎಬಿಡಿ

    ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ಪಕ್ಷದ ಹಿರಿಯ ನಾಯಕ ಭೂಪೇಂದ್ರ ಸಿನ್ಹ್ ಚುಡಾಸಮಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ. ಹಾಗಾಗಿ ಅವರನ್ನು ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಿಂದ ಕೈಬಿಟ್ಟಿದೆ. ಗುಜರಾತ್‍ನಲ್ಲಿ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.

    Live Tv
    [brid partner=56869869 player=32851 video=960834 autoplay=true]