Tag: Ravindra Jadeja

  • ಜಡೇಜಾ CSK ನಾಯಕತ್ವ ತ್ಯಜಿಸಲು ಪ್ರಮುಖ ಕಾರಣವಿದು!

    ಜಡೇಜಾ CSK ನಾಯಕತ್ವ ತ್ಯಜಿಸಲು ಪ್ರಮುಖ ಕಾರಣವಿದು!

    ಮುಂಬೈ: ಐಪಿಎಲ್ ಆರಂಭಕ್ಕೂ ಮುನ್ನ ಮಹೇಂದ್ರ ಸಿಂಗ್ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಾಯಕತ್ವ ತೊರೆದು ಆಲ್‍ರೌಂಡರ್ ರವೀಂದ್ರ ಜಡೇಜಾಗೆ ನಾಯಕತ್ವ ವಹಿಸಿದ್ದರು. ಆದರೆ ಟೂರ್ನಿಯ ಮಧ್ಯದಲ್ಲೇ ಜಡೇಜಾ ನಾಯಕತ್ವ ತ್ಯಜಿಸಿ ಮತ್ತೆ ಧೋನಿ ನಾಯಕತ್ವ ನಿರ್ವಹಿಸುವಂತೆ ಕೇಳಿಕೊಂಡಿದ್ದಾರೆ.

    ಇದೀಗ ಜಡೇಜಾ ಬದಲು ಧೋನಿ ನಾಯಕನಾಗಿ ತಂಡವನ್ನು ಮುನ್ನಡೆಸುವ ಜವಾಬ್ದಾರಿ ಹೊತ್ತಿದ್ದಾರೆ. ಈ ನಡುವೆ ಜಡೇಜಾ ಯಾಕೆ ನಾಯಕತ್ವ ತ್ಯಜಿಸಿದ್ದಾರೆ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಕಾಡಲಾರಂಭಿಸಿದೆ. ಜಡೇಜಾ ನಾಯಕತ್ವ ತ್ಯಜಿಸಲು ಆ ಒಂದು ಕಾರಣ ಎಂಬ ಮಾತು ಕೇಳಿ ಬರುತ್ತಿದೆ. ಇದನ್ನೂ ಓದಿ: ಸಿಎಸ್‌ಕೆ ನಾಯಕತ್ವ ಮರಳಿ ಪಡೆಯುತ್ತಿದ್ದಂತೆ ಧೋನಿ ಅಭಿಮಾನಿಗಳಿಂದ ಮೀಮ್ಸ್ ಸುರಿಮಳೆ

    ಹೌದು 15ನೇ ಆವೃತ್ತಿ ಐಪಿಎಲ್‍ನಲ್ಲಿ ಜಡೇಜಾ ಸಾರಥ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 8 ಪಂದ್ಯಗಳಲ್ಲಿ 2 ಜಯ ಮತ್ತು 6 ಸೋಲು ಕಂಡು ಅಂಕಪಟ್ಟಿಯಲ್ಲಿ 4 ಅಂಕಗಳೊಂದಿಗೆ 9ನೇ ಸ್ಥಾನ ಪಡೆದಿದೆ. ಇದಕ್ಕೆ ಪ್ರಮುಖ ಕಾರಣ ಜಡೇಜಾ ನಾಯತ್ವದ ಜೊತೆಗೆ ತಮ್ಮ ವೈಯಕ್ತಿಕ ಆಟದಲ್ಲೂ ಕಳಪೆ ಪ್ರದರ್ಶನ ನೀಡಿರುವುದು. ಹೌದು ಜಡೇಜಾ 15ನೇ ಆವೃತ್ತಿಯ ಐಪಿಎಲ್‍ನಲ್ಲಿ 8 ಪಂದ್ಯಗಳಿಂದ 112 ರನ್ ಮತ್ತು ಕೇವಲ 5 ವಿಕೆಟ್ ಪಡೆದಿದ್ದಾರೆ. ಈ ಹಿಂದಿನ ಆವೃತ್ತಿಗಳಲ್ಲಿ ಯಾವುದೇ ಹೊರೆ ಇಲ್ಲದೆ ಫ್ರೀ ಯಾಗಿ ಬ್ಯಾಟ್‍ಬೀಸುತ್ತಿದ್ದ ಜಡೇಜಾ ಬ್ಯಾಟಿಂಗ್ ಈ ಬಾರಿ ಕಟ್ಟಿ ಹಾಕಿರುವಂತೆ ಭಾಸವಾಗುತ್ತಿದೆ. ಜೊತೆಗೆ ಜಡೇಜಾ ನಾಯಕತ್ವದ ಹೊರೆಯನ್ನು ನಿಭಾಯಿಸಲು ಚಡಪಡಿಸುತ್ತಿದ್ದಾರೆ. ಇದು ಪ್ರತಿ ಪಂದ್ಯದಲ್ಲೂ ಎದ್ದು ಕಾಣುತ್ತಿತ್ತು. ಜೊತೆಗೆ ಧೋನಿ ಸಲಹೆಗಳು ಕೂಡುತ್ತಿದ್ದುದು ಕಂಡುಬರುತ್ತಿತ್ತು.

    ಜಡೇಜಾ ನಾಯಕತ್ವದ ಹೊರೆಯಿಂದಾಗಿ ತಮ್ಮ ವೈಯಕ್ತಿಕ ಆಟದ ಕಡೆಗೆ ಹೆಚ್ಚಿನ ಗಮನ ಹರಿಸಲು ಸಾಧ್ಯವಾಗುತ್ತಿರಲಿಲ್ಲ. ಜೊತೆಗೆ ಜಡೇಜಾ ಮುಂದಿನ ಟಿ20 ವಿಶ್ವಕಪ್ ಗಮನದಲ್ಲಿಟ್ಟುಕೊಂಡು ಟೀಂ ಇಂಡಿಯಾದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ನಾಯಕತ್ವ ತ್ಯಜಿಸಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಇದನ್ನೂ ಓದಿ: ಚೆನ್ನೈ ನಾಯಕತ್ವ ತೊರೆದ ರವೀಂದ್ರ ಜಡೇಜಾ – ಧೋನಿಗೆ ಮತ್ತೆ ಪಟ್ಟ

    ಐಪಿಎಲ್‍ನಲ್ಲಿ ರವಿ ಚಂದ್ರನ್ ಅಶ್ವಿನ್, ರಾಹುಲ್ ತೇವಾಟಿಯಾ, ಶಾರ್ದೂಲ್ ಠಾಕೂರ್ ಸಹಿತ ಕೆಲ ಆಟಗಾರರು ಆಲ್‍ರೌಂಡರ್ ಪ್ರದರ್ಶನದ ಮೂಲಕ ಗಮನಸೆಳೆಯುತ್ತಿದ್ದಾರೆ. ಇದು ಟಿ20 ವಿಶ್ವಕಪ್ ತಂಡವನ್ನು ಆಯ್ಕೆ ಮಾಡುವ ಆಯ್ಕೆ ಸಮಿತಿ ಗಮನಿಸುತ್ತಿದೆ. ಈ ವೇಳೆ ಜಡೇಜಾ ಪ್ರದರ್ಶನ ಕೂಡ ಗಮನ ಹರಿಸುತ್ತಾರೆ ಹಾಗಾಗಿ ಜಡೇಜಾ ತಮ್ಮ ವೈಯಕ್ತಿಕ ಆಟವನ್ನು ಐಪಿಎಲ್‍ನಲ್ಲಿ ಉತ್ತಮ ಪಡಿಸಿಕೊಂಡು ಟಿ20 ವಿಶ್ವಕಪ್ ಟೀಂನಲ್ಲಿ ಸ್ಥಾನವನ್ನು ಖಚಿತ ಪಡಿಸಿಕೊಳ್ಳಲು ಪ್ಲಾನ್ ಮಾಡಿದ್ದಾರೆ ಎಂಬ ಮಾತು ಹರಿದಾಡುತ್ತಿದೆ.

    ಏನೇ ಆದರೂ ಜಡೇಜಾ ನಾಯಕತ್ವದ ಹೊರೆಯಿಂದ ಹೊರಬಂದು ತಮ್ಮ ನೈಜ ಆಟವನ್ನು ಆಡುವಂತಾಗಲಿ ಎಂಬುದು ನಮ್ಮ ಆಶಯ. ಇದನ್ನೂ ಓದಿ: ರಾಜಸ್ಥಾನಕ್ಕೆ ಸೋಲಿನ ಶಾಕ್ – ಕಡೆಗೂ ಗೆದ್ದು ಬೀಗಿದ ಮುಂಬೈ

  • ಚೆನ್ನೈ ನಾಯಕತ್ವ ತೊರೆದ ರವೀಂದ್ರ ಜಡೇಜಾ – ಧೋನಿಗೆ ಮತ್ತೆ ಪಟ್ಟ

    ಚೆನ್ನೈ ನಾಯಕತ್ವ ತೊರೆದ ರವೀಂದ್ರ ಜಡೇಜಾ – ಧೋನಿಗೆ ಮತ್ತೆ ಪಟ್ಟ

    ಮುಂಬೈ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವವನ್ನು ರವೀಂದ್ರ ಜಡೇಜಾ ತೊರೆದಿದ್ದಾರೆ. ಆ ಬಳಿಕ ಇದೀಗ ಮಹೇಂದ್ರ ಸಿಂಗ್ ಧೋನಿಗೆ ಮತ್ತೆ ನಾಯಕತ್ವದ ಪಟ್ಟ ಕಟ್ಟಲಾಗಿದೆ.

    15ನೇ ಆವೃತ್ತಿ ಐಪಿಎಲ್ ಆರಂಭಕ್ಕೂ ಮುನ್ನ ಧೋನಿ, ಆಲ್‍ರೌಂಡರ್ ಜಡೇಜಾಗೆ ನಾಯಕತ್ವ ವಹಿಸಿದ್ದರು. ಆದರೆ ಜಡೇಜಾ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೀನಾಯ ಪ್ರದರ್ಶನ ತೋರಿ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಈ ಬಗ್ಗೆ ಸಿಎಸ್‍ಕೆ ತಮ್ಮ ಅಧಿಕೃತ ಟ್ವಟ್ಟರ್ ಖಾತೆಯಲ್ಲಿ ತಿಳಿಸಿದ್ದು, ಚೆನ್ನೈ ಸೂಪರ್ ಕಿಂಗ್ಸ್‌ನ  ನಾಯಕತ್ವವನ್ನು ರವೀಂದ್ರ ಜಡೆಜಾ ತೊರೆದಿದ್ದು, ಎಂ.ಎಸ್. ಧೋನಿ ಅವರು ನೂತನವಾಗಿ ನಾಯಕರಾಗಿದ್ದಾರೆ ಎಂದು ತಿಳಿಸಿದೆ. ಇದನ್ನೂ ಓದಿ: ಚೇತನ್ ಸಕಾರಿಯಾ ‘ಡ್ರ್ಯಾಗನ್ ಬಾಲ್ Z’ ಸಂಭ್ರಮಾಚರಣೆ ಹಿಂದಿದೆ ಭಾವನಾತ್ಮಕ ಸಂಬಂಧ

    CSK

    ಚೆನ್ನೈ ತಂಡ 15ನೇ ಆವೃತ್ತಿ ಐಪಿಎಲ್‍ನಲ್ಲಿ ಒಟ್ಟು 8 ಪಂದ್ಯಗಳನ್ನು ಆಡಿದ್ದು, 2 ಜಯ ಮತ್ತು 6 ಸೋಲು ಕಂಡು 4 ಅಂಕಗಳೊಂದಿಗೆ 9ನೇ ಸ್ಥಾನದಲ್ಲಿದೆ. ಈಗಾಗಲೇ ಬಹುತೇಕ ಪ್ಲೆ ಆಫ್ ಅವಕಾಶ ಕಳೆದುಕೊಂಡಿರುವ ಚೆನ್ನೈ ಇನ್ನುಳಿದ ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಮೇಲೆರುವ  ಪ್ರಯತ್ನದಲ್ಲಿದೆ. ಇದನ್ನೂ ಓದಿ: ಗುಜರಾತ್‌ ಟೈಟನ್ಸ್‌ಗೆ ರೋಚಕ ಜಯ – ಬಹುತೇಕ ಪ್ಲೇ ಆಫ್‌ಗೆ ಎಂಟ್ರಿ

  • ಐಪಿಎಲ್ 2022ರಲ್ಲಿ ಫಾಫ್ ಡು ಪ್ಲೆಸಿಸ್ ಚೆನ್ನೈ ಸೂಪರ್ ಕಿಂಗ್ಸ್ ನಾಯಕನಾಗಬೇಕಿತ್ತು: ರವಿಶಾಸ್ತ್ರಿ

    ಐಪಿಎಲ್ 2022ರಲ್ಲಿ ಫಾಫ್ ಡು ಪ್ಲೆಸಿಸ್ ಚೆನ್ನೈ ಸೂಪರ್ ಕಿಂಗ್ಸ್ ನಾಯಕನಾಗಬೇಕಿತ್ತು: ರವಿಶಾಸ್ತ್ರಿ

    ಮುಂಬೈ: ಐಪಿಎಲ್ 2022ರಲ್ಲಿ ಫಾಫ್ ಡು ಪ್ಲೆಸಿಸ್ ಚೆನ್ನೈ ಸೂಪರ್ ಕಿಂಗ್ಸ್ ನಾಯಕನಾಗಬೇಕಿತ್ತು ಎಂದು ಭಾರತದ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ.

    ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಸಿಎಸ್‍ಕೆ ಫಾಫ್ ಡು ಪ್ಲೆಸಿಸ್ ಅವರನ್ನು ಬಿಡಬಾರದಿತ್ತು. ರವೀಂದ್ರ ಜಡೇಜಾ ತಮ್ಮ ಫಾರ್ಮ್‍ನತ್ತ ಗಮನ ಹರಿಸಬೇಕಾಗಿದೆ. ಐಪಿಎಲ್ 2022ರ ಮೊದಲು ಧೋನಿ ಸಿಎಸ್‍ಕೆ ನಾಯಕತ್ವದಿಂದ ಕೆಳಗಿಳಿದಿದ್ದು, ಈ ಋತುವಿನಲ್ಲಿ ಇನ್ನೂ ತಮ್ಮ ಮೊದಲ ಗೆಲುವು ದಾಖಲಿಸದ ರವೀಂದ್ರ ಜಡೇಜಾಗೆ ನಾಯಕತ್ವವನ್ನು ಹಸ್ತಾಂತರಿಸಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಕಳೆದ ವರ್ಷ ಬೆಂಚ್ ಬಿಸಿ ಮಾಡಿದ ಆಟಗಾರರು ಈ ಬಾರಿ ಮ್ಯಾಚ್ ವಿನ್ನರ್ಸ್‌

    ಪ್ರಸ್ತುತ ಐಪಿಎಲ್ 2022ರಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಈಗಾಗಲೇ ತನ್ನ ಆರಂಭಿಕ ನಾಲ್ಕು ಪಂದ್ಯಗಳನ್ನು ಕಳೆದುಕೊಂಡಿದೆ. ಇದು ಫ್ರಾಂಚೈಸಿ ಇತಿಹಾಸದಲ್ಲಿ ಮೊದಲ ಬಾರಿಗೆ ಸಂಭವಿಸಿದೆ. ಚೆನ್ನೈ ಟೂರ್ನಿಯಲ್ಲಿ ನಾಲ್ಕು ಬಾರಿ ಟ್ರೋಫಿ ಎತ್ತಿ ಹಿಡಿದಿದೆ. ಆದರೆ ಈ ಋತುವಿನಲ್ಲಿ ಜಯದ ಲಯ ಕಂಡುಕೊಳ್ಳಲು ಹೆಣಗಾಡುತ್ತಿದೆ ಎಂದರು. ಇದನ್ನೂ ಓದಿ: ರಾಹುಲ್ ಗೋಲ್ಡನ್ ಡಕ್ – ನಿರಾಸೆಗೊಂಡ ಆಥಿಯಾ ಶೆಟ್ಟಿ

    ಐಪಿಎಲ್ 2022ರ ಮೆಗಾ ಹರಾಜಿನಲ್ಲಿ ರೂ. 7 ಕೋಟಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಖರೀದಿಸಿದ ಫಾಫ್ ಡು ಪ್ಲೆಸಿಸ್ ಅವರು ತಮ್ಮ ಸಂಪೂರ್ಣ ಐಪಿಎಲ್ ವೃತ್ತಿಜೀವನವನ್ನು ಸಿಎಸ್‍ಕೆಯೊಂದಿಗೆ ಕಳೆದಿದ್ದರು. ಅವರು ಈ ಹಿಂದೆ ಚೆನ್ನೈನ 2021 ರ ಐಪಿಎಲ್ ವಿಜಯೋತ್ಸವದಲ್ಲಿ 59 ಎಸೆತಗಳಲ್ಲಿ 86 ರನ್ ಗಳಿಸಿ ಪ್ರಮುಖ ಪಾತ್ರ ವಹಿಸಿದ್ದರು. ಕೆಕೆಆರ್ ವಿರುದ್ಧದ ಫೈನಲ್‍ನಲ್ಲಿ ಪ್ಲೇಯರ್ ಆಫ್ ದಿ ಮ್ಯಾಚ್ ಸಹ ಅವರು ತಮ್ಮ ಮುಡಿಗೇರಿಸಿಕೊಂಡಿದ್ದರು.

    ರವೀಂದ್ರ ಜಡೇಜಾ ಅವರ ಮೇಲೆ ಯಾವುದೇ ನಾಯಕತ್ವದ ಒತ್ತಡವನ್ನು ಹೇರದೆ ಆಟಗಾರನಾಗಿಯೇ ಆಡಿಸಬೇಕಿತ್ತು ಎಂದು ಅಭಿಪ್ರಾಯಪಟ್ಟರು.

  • ಚೆನ್ನೈ ತಂಡದ ಹೊಸ ಸೂಪರ್ ಕಿಂಗ್‍ಗೆ ಪೋಸ್ಟ್ ಮೂಲಕ ಶುಭಕೋರಿದ ಅಮುಲ್

    ಚೆನ್ನೈ ತಂಡದ ಹೊಸ ಸೂಪರ್ ಕಿಂಗ್‍ಗೆ ಪೋಸ್ಟ್ ಮೂಲಕ ಶುಭಕೋರಿದ ಅಮುಲ್

    ಮುಂಬೈ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನೂತನ ನಾಯಕ ರವೀಂದ್ರ ಜಡೇಜಾ ಮತ್ತು ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಗೆ 15ನೇ ಆವೃತ್ತಿ ಐಪಿಎಲ್ ಆರಂಭಕ್ಕೂ ಮುನ್ನ ಸಿಹಿತಿಂಡಿಗಳ ಕಂಪನಿ ಅಮುಲ್ ಪೋಸ್ಟ್ ಒಂದನ್ನು ಹಾಕಿಕೊಂಡು ಶುಭಕೋರಿದೆ.

    ಚೆನ್ನೈ ತಂಡದ ನಾಯಕತ್ವವನ್ನು ಧೋನಿ ತ್ಯಜಿಸಿ ರವೀಂದ್ರ ಜಡೇಜಾಗೆ ಪಟ್ಟ ಕಟ್ಟಿದ್ದಾರೆ. ಇಂದು 15ನೇ ಆವೃತ್ತಿ ಐಪಿಎಲ್ ಆರಂಭವಾಗುತ್ತಿದ್ದು, ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಎದುರುಬದುರಾಗುತ್ತಿದೆ. ಈ ಪಂದ್ಯದಲ್ಲಿ ಎರಡು ತಂಡಗಳು ಕೂಡ ನೂತನ ನಾಯಕನೊಂದಿಗೆ ಕಣಕ್ಕಿಳಿಯುತ್ತಿದೆ. ಚೆನ್ನೈ ತಂಡದ ನಾಯಕ ಜಡ್ಡು ಮೊಟ್ಟ ಮೊದಲ ಬಾರಿ ನಾಯಕನಾಗಿ 4 ಬಾರಿ ಐಪಿಎಲ್ ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಸಿಎಸ್‍ಕೆ ತಂಡವನ್ನು ಮುನ್ನಡೆಸಲಿದ್ದಾರೆ. ಹಾಗಾಗಿ ಅಮುಲ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಾಕಿಕೊಂಡಿದ್ದು, ಈ ಪೋಸ್ಟ್‌ನಲ್ಲಿ  ಚೆನ್ನೈನ ಹೊಸ ಸೂಪರ್ ಕಿಂಗ್‍ಗೆ Amul SIRV WITH LOVE ಎಂದು ಬರೆದುಕೊಂಡಿದೆ. ಇದನ್ನೂ ಓದಿ:  ಇಂದಿನಿಂದ ಐಪಿಎಲ್ ಆರಂಭ – ಅತಿ ಹೆಚ್ಚು ರನ್ ಸಿಡಿಸಿದ ಟಾಪ್ ತಂಡಗಳು

    ಇಂದು ಅಧಿಕೃತವಾಗಿ ಟೂರ್ನಿ ಆರಂಭವಾಗುತ್ತಿದ್ದು, ಕೋಲ್ಕತ್ತಾ ತಂಡವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸುತ್ತಿದ್ದಾರೆ. ಅಯ್ಯರ್ ಈ ಹಿಂದೆ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಿದ ಅನುಭವ ಹೊಂದಿದ್ದಾರೆ. ಇತ್ತ ಜಡೇಜಾ ಮೊಟ್ಟ ಮೊದಲ ಬಾರಿಗೆ ಸಿಎಸ್‍ಕೆ ತಂಡವನ್ನು ಮುನ್ನಡೆಸುತ್ತಿದ್ದರೂ ಕೂಡ ಧೋನಿ ಜೊತೆಗಿರುವ ನಂಬಿಕೆಯಲ್ಲಿದ್ದಾರೆ. ಎರಡು ತಂಡಗಳು ಕೂಡ ಬಲಿಷ್ಠ ಬ್ಯಾಟಿಂಗ್ ಲೈನ್ ಆಪ್ ಹೊಂದಿದ್ದು, ರೋಚಕ ಕಾದಾಟಕ್ಕೆ ಪಂದ್ಯ ಸಾಕ್ಷಿಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಸಿಎಸ್‍ಕೆ ನಾಯಕ ಸ್ಥಾನಕ್ಕೆ ಧೋನಿ ರಾಜೀನಾಮೆ

    ಸಿಎಸ್‌ಕೆ ಮತ್ತು ಕೆಕೆಆರ್‌ ನಡುವೆ ಇಂದು ಸಂಜೆ 7:30ಕ್ಕೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದ್ದು, ಈ ಮೂಲಕ ಮುಂದಿನ 3 ತಿಂಗಳ ಕಾಲ ಕ್ರಿಕೆಟ್ ಜಾತ್ರೆಗೆ ಅಧಿಕೃತ ಚಾಲನೆ ಸಿಗಲಿದೆ.

  • ಸಿಎಸ್‍ಕೆ ನಾಯಕ ಸ್ಥಾನಕ್ಕೆ ಧೋನಿ ರಾಜೀನಾಮೆ

    ಸಿಎಸ್‍ಕೆ ನಾಯಕ ಸ್ಥಾನಕ್ಕೆ ಧೋನಿ ರಾಜೀನಾಮೆ

    ಮುಂಬೈ: ಐಪಿಎಲ್ ಆರಂಭಕ್ಕೂ ಮುನ್ನ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಚೆನ್ನೈ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದು, ರವೀಂದ್ರ ಜಡೇಜಾ ಅವರು ನೂತನ ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿದ್ದಾರೆ.

    ಈ ಬಗ್ಗೆ ಸಿಎಸ್‍ಕೆ ತಮ್ಮ ಅಧಿಕೃತ ಟ್ವಟ್ಟರ್ ಖಾತೆಯಲ್ಲಿ ತಿಳಿಸಿದ್ದು, ಚೆನ್ನೈ ಸೂಪರ್ ಕಿಂಗ್ಸ್‌ನ ಎಂ.ಎಸ್. ಧೋನಿ ನಾಯಕತ್ವವನ್ನು ತೊರೆದಿದ್ದು, ರವೀಂದ್ರ ಜಡೆಜಾ ಅವರು ನೂತನವಾಗಿ ನಾಯಕರಾಗಿದ್ದಾರೆ ಎಂದು ತಿಳಿಸಿದೆ.

    2012 ರಿಂದ ಚೆನ್ನೈ ಸೂಪರ್ ಕಿಂಗ್ಸ್‌ನಲ್ಲಿ ಆಡುತ್ತಿರುವ ಜಡೇಜಾ ಅವರು, ಸಿಎಸ್‍ಕೆಯನ್ನು ಮುನ್ನಡೆಸುವ ಮೂರನೇ ಆಟಗಾರನಾಗಲಿದ್ದಾರೆ. ಧೋನಿ ಈ ಟೂರ್ನಿಯಲ್ಲಿ ತಂಡದ ಆಟಗಾರನಾಗಿ ಮುಂದುವರೆಯಲಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ಟ್ರಾನ್ಸ್‌ಫಾರ್ಮರ್‌ಗಳ ಆಡಿಟ್‍ಗೆ ಆದೇಶ: ಸುನೀಲ್ ಕುಮಾರ್

    ಐಪಿಎಲ್ 2022ರ ಆರಂಭಿಕ ಪಂದ್ಯವು ಸಿಎಸ್‍ಕೆ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯಲಿದೆ. ಧೋನಿ ನಾಯಕತ್ವದಲ್ಲಿ ಸಿಎಸ್‍ಕೆ ನಾಲ್ಕು ಬಾರಿ ಐಪಿಎಲ್ ಪ್ರಶಸ್ತಿಯನ್ನು ಗೆದ್ದಿತ್ತು. ಇದನ್ನೂ ಓದಿ:  ಕೆಪಿಎಸ್‍ಸಿಗೆ ಹೊಸ ರೂಪ ಕೊಡ್ತೀವಿ: ಬೊಮ್ಮಾಯಿ

  • ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌ – ರವೀಂದ್ರ ಜಡೇಜಾ ವಿಶ್ವ ನಂಬರ್ 1 ಆಲ್‍ರೌಂಡರ್

    ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌ – ರವೀಂದ್ರ ಜಡೇಜಾ ವಿಶ್ವ ನಂಬರ್ 1 ಆಲ್‍ರೌಂಡರ್

    ದುಬೈ: ಟೀಂ ಇಂಡಿಯಾದ ಆಲ್‍ರೌಂಡರ್ ರವೀಂದ್ರ ಜಡೇಜಾ ಐಸಿಸಿಯ ನೂತನ ಟೆಸ್ಟ್ ಆಲ್‍ರೌಂಡರ್ ರ‍್ಯಾಂಕಿಂಗ್‌ನಲ್ಲಿ ನಂಬರ್ 1 ಸ್ಥಾನಕ್ಕೇರಿದ್ದಾರೆ.

    ಇಂದು ಐಸಿಸಿ ಬಿಡುಗಡೆ ಮಾಡಿರುವ ನೂತನ ಟೆಸ್ಟ್ ರ‍್ಯಾಂಕಿಂಗ್‌ನ ಆಲ್‍ರೌಂಡರ್ ವಿಭಾಗದಲ್ಲಿ ಜಡೇಜಾ 406 ಅಂಗಳೊಂದಿಗೆ ನಂಬರ್ 1 ಸ್ಥಾನ ಪಡೆದಿದ್ದಾರೆ. ಜಡೇಜಾ ಬಳಿಕ ಜೇಸನ್ ಹೋಲ್ಡರ್ ಇದ್ದು, 382 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇದನ್ನೂ ಓದಿ: ರಾವಲ್ಪಿಂಡಿ ಮೈದಾನದಲ್ಲಿ ಭಾಂಗ್ರಾ ನೃತ್ಯ ಮಾಡಿದ ಡೇವಿಡ್ ವಾರ್ನರ್

    ಜಡೇಜಾ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಪರ ಬ್ಯಾಟಿಂಗ್‍ನಲ್ಲಿ 175 ರನ್ ಮತ್ತು ಬೌಲಿಂಗ್‍ನಲ್ಲಿ 9 ವಿಕೆಟ್ ಕಿತ್ತು ಮಿಂಚಿದ್ದರು. ಈ ಭರ್ಜರಿ ಪ್ರದರ್ಶನದ ಬಳಿಕ ರ‍್ಯಾಂಕಿಂಗ್‌ನಲ್ಲಿ ಏರಿಕೆ ಕಂಡು ನಂಬರ್ 1 ಸ್ಥಾನಕ್ಕೇರಿದ್ದಾರೆ. ಈ ಹಿಂದೆ ಜೇಸನ್ ಹೋಲ್ಡರ್ 2021ರ ಫೆಬ್ರವರಿ ಬಳಿಕ ಆಲ್‍ರೌಂಡರ್ ಪಟ್ಟಿಯಲ್ಲಿ ನಂಬರ್ 1 ಸ್ಥಾನದಲ್ಲಿದ್ದರು. ಇದೀಗ ಜಡೇಜಾ ನಂಬರ್ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ. ಇದನ್ನೂ ಓದಿ: ಮಹಿಳಾ ದಿನಾಚರಣೆ ಪ್ರಯುಕ್ತ ಶಭಾಷ್ ಮಿಥು ಚಿತ್ರದ ಪೋಸ್ಟರ್ ಹಂಚಿಕೊಂಡ ತಾಪ್ಸಿ ಪನ್ನು

    ಜಡೇಜಾ ಈ ಹಿಂದೆ 2017ರಲ್ಲಿ ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌ನ ನಂಬರ್ 1 ಆಲ್‍ರೌಂಡರ್ ಆಗಿ ಗುರುತಿಸಿಕೊಂಡಿದ್ದರು. ಇದೀಗ ಮತ್ತೆ ರ‍್ಯಾಂಕಿಂಗ್‌ನ ಪ್ರಗತಿ ಕಂಡು ನಂಬರ್ 1 ಆಲ್‍ರೌಂಡರ್ ಆಗಿ ಜಡೇಜಾ ಕಾಣಿಸಿಕೊಂಡಿದ್ದಾರೆ.

  • ಜಡೇಜಾ ಆಲ್‍ರೌಂಡರ್ ಆಟಕ್ಕೆ ಮಂಕಾದ ಲಂಕಾ – ಭಾರತಕ್ಕೆ ಭರ್ಜರಿ ಇನ್ನಿಂಗ್ಸ್ ಜಯ

    ಜಡೇಜಾ ಆಲ್‍ರೌಂಡರ್ ಆಟಕ್ಕೆ ಮಂಕಾದ ಲಂಕಾ – ಭಾರತಕ್ಕೆ ಭರ್ಜರಿ ಇನ್ನಿಂಗ್ಸ್ ಜಯ

    ಮೊಹಾಲಿ: ರವೀಂದ್ರ ಜಡೇಜಾ ಮತ್ತು ಆರ್.ಅಶ್ವಿನ್ ಸ್ಪಿನ್ ಜೋಡಿಯ ಮೋಡಿಗೆ ಮಂಕಾದ ಶ್ರೀಲಂಕಾ ಮೊದಲ ಟೆಸ್ಟ್ ಪಂದ್ಯದಲ್ಲಿ ಸೋಲೊಪ್ಪಿಕೊಂಡಿದೆ. ಭಾರತ ಇನ್ನಿಂಗ್ಸ್ ಹಾಗೂ 222 ರನ್‍ಗಳ ಭರ್ಜರಿ ಜಯ ಸಾಧಿಸಿದೆ.

    ಭಾರತದ ಪರ ಬ್ಯಾಟಿಂಗ್ ಮತ್ತು ಬೌಲಿಂಗ್‍ನಲ್ಲಿ ಅದ್ಭುತ ಪ್ರದರ್ಶನದ ಮೂಲಕ ಆಲ್‍ರೌಂಡರ್ ಆಟ ಪ್ರದರ್ಶಿಸಿದ ರವೀಂದ್ರ ಜಡೇಜಾ ಬ್ಯಾಟಿಂಗ್‍ನಲ್ಲಿ ಅಜೇಯ 175 ರನ್ ಮತ್ತು ಬೌಲಿಂಗ್‍ನಲ್ಲಿ 9 ವಿಕೆಟ್ ಕಿತ್ತು ಶ್ರೀಲಂಕಾಗೆ ಕಾಡಿದರು. ಈ ಜಯದೊಂದಿಗೆ ಭಾರತ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ. ಇದನ್ನೂ ಓದಿ: ರವೀಂದ್ರ ಜಡೇಜಾ ಅದ್ವಿತೀಯ ಸಾಧನೆ

    ಈ ಮೊದಲು 2ನೇ ದಿನದಾಟದ ಅಂತ್ಯಕ್ಕೆ ಶ್ರೀಲಂಕಾ 43 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 108 ರನ್‍ಗಳಿಸಿದ್ದ ಲಂಕಾ 3ನೇ ದಿನದಾಟ ಮುಂದುವರಿಸಿತು. ದಿನದಾಟದ ಆರಂಭದಿಂದಲೂ ವಿಕೆಟ್ ಕಳೆದುಕೊಂಡು ಸಾಗಿದ ಲಂಕಾ ಅಂತಿಮವಾಗಿ 65 ಓವರ್‌ಗಳಲ್ಲಿ 174 ರನ್‍ಗಳಿಗೆ ಸರ್ವಪತನ ಕಂಡಿತು. ಭಾರತದ ಪರ ರವೀಂದ್ರ ಜಡೇಜಾ ಲಂಕಾ ಬ್ಯಾಟ್ಸ್‌ಮ್ಯಾನ್‌ಗಳಿಗೆ ಕಂಟಕವಾದರು. ಮೊದಲ ಇನ್ನಿಂಗ್ಸ್‌ನಲ್ಲಿ 5 ವಿಕೆಟ್‍ಗಳ ಗೊಂಚಲು ಪಡೆದು ಮಿಂಚಿದರು. ಇದನ್ನೂ ಓದಿ: ಮಹಿಳಾ ವಿಶ್ವಕಪ್ 2022- ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

    ನಂತರ 400 ರನ್‍ಗಳ ಹಿನ್ನಡೆಯೊಂದಿಗೆ ಫಾಲೋ ಆನ್ ಏರಿದ ಲಂಕಾ ಎರಡನೇ ಇನ್ನಿಂಗ್ಸ್‌ನಲ್ಲೂ ತನ್ನ ಬ್ಯಾಟಿಂಗ್ ವೈಫಲ್ಯ ಮುಂದುವರಿಸಿತು. ಆರಂಭಿಕ ಆಟಗಾರ ಲಹಿರು ತಿರಿಮನ್ನೆ ಶೂನ್ಯ ಸುತ್ತಿದರೆ, ನಾಯಕ ದಿಮುತ್ ಕರುಣಾರತ್ನೆ 27 ರನ್ (46 ಎಸೆತ, 6 ಬೌಂಡರಿ)ಗೆ ಸುಸ್ತಾದರು. ಬಳಿಕ ಬಂದ ಪಾತುಂ ನಿಸ್ಸಾಂಕ 6 ರನ್ (19 ಎಸೆತ, 1 ಬೌಂಡರಿ) ಸಿಡಿಸಿ ಔಟ್ ಆದರು. 94 ರನ್‍ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಶ್ರೀಲಂಕಾಗೆ ಏಂಜೆಲೊ ಮ್ಯಾಥ್ಯೂಸ್ 28 ರನ್ (75 ಎಸೆತ, 2 ಬೌಂಡರಿ, 1 ಸಿಕ್ಸ್) ಮತ್ತು ಧನಂಜಯ ಡಿಸಿಲ್ವ 30 ರನ್ (58 ಎಸೆತ, 5 ಬೌಂಡರಿ) ಸಿಡಿಸಿ ಅಲ್ಪ ಚೇತರಿಕೆ ನೀಡದರು. ಈ ಜೋಡಿ 4ನೇ ವಿಕೆಟ್‍ಗೆ 49 ರನ್ (102 ಎಸೆತ) ಗಳ ಜೊತೆಯಾಟವಾಡಿತು. ಇವರಿಬ್ಬರ ವಿಕೆಟ್ ಕಳೆದುಕೊಂಡ ಬಳಿಕ ಶ್ರೀಲಂಕಾ ಮತ್ತೆ ಕುಸಿತಕಂಡಿತು. ಟೀಂ ಇಂಡಿಯಾದ ಸ್ಪಿನ್ ಜೋಡಿ ಆರ್.ಅಶ್ವಿನ್ ಮತ್ತು ರವೀಂದ್ರ ಜಡೇಜಾ ನಾ ಮುಂದು ತಾ ಮುಂದು ಎಂಬಂತೆ ವಿಕೆಟ್ ಬೇಟೆ ಆರಂಭಿಸಿದರು. ಇವರಿಬ್ಬರ ದಾಳಿಗೆ ನಲುಗಿದ ಲಂಕಾ ಬ್ಯಾಟ್ಸ್‌ಮ್ಯಾನ್‌ಗಳಾದ ಚರಿತ್ ಅಸಲಂಕಾ 20 ರನ್ (9 ಎಸೆತ, 2 ಬೌಂಡರಿ, 2 ಸಿಕ್ಸ್), ಸುರಂಗ ಲಕ್ಮಲ್ 0, ಲಸಿತ್ ಎಂಬುಲ್ದೇನಿಯ 2, ವಿಶ್ವ ಫೆರ್ನಾಂಡೋ 0, ಲಹಿರು ಕುಮಾರ್‌ 4 ರನ್‌ ವಿಕೆಟ್‌ ಒಪ್ಪಿಸಿದರು. ನಿರೋಶನ್ ಡಿಕ್ವೆಲ್ಲಾ ಅಜೇಯ 51  ರನ್‍  (81 ಎಸೆತ, 6 ಬೌಂಡರಿ) ಸಿಡಿಸಿ ಮಿಂಚಿದರು. ಅಂತಿಮವಾಗಿ 60 ಓವರ್‌ಗಳ ಅಂತ್ಯಕ್ಕೆ 178 ರನ್ ಗಳಿಗೆ ಆಲೌಟ್ ಆಗಿ ಸೋಲು ಕಂಡಿದೆ. ಇದನ್ನೂ ಓದಿ: ಅಂದು ಸಚಿನ್, ಇಂದು ಜಡೇಜಾ – ದ್ರಾವಿಡ್, ರೋಹಿತ್ ನಡೆಗೆ ನೆಟ್ಟಿಗರು ಕಿಡಿ


    ಟೀಂ ಇಂಡಿಯಾ ಪರ ಭರ್ಜರಿ ದಾಳಿ ನಡೆಸಿದ ರವೀಂದ್ರ ಜಡೇಜಾ ಮತ್ತು ಆರ್.ಅಶ್ವಿನ್ ತಲಾ  4 ವಿಕೆಟ್‌ ಪಡೆದು ಸಂಭ್ರಮಿಸಿದರು., ಮೊಹಮ್ಮದ್ ಶಮಿ 2 ವಿಕೆಟ್ ಪಡೆದರು.

  • ರವೀಂದ್ರ ಜಡೇಜಾ ಅದ್ವಿತೀಯ ಸಾಧನೆ

    ರವೀಂದ್ರ ಜಡೇಜಾ ಅದ್ವಿತೀಯ ಸಾಧನೆ

    ನವದೆಹಲಿ: ಭಾರತ ಕ್ರಿಕೆಟ್ ತಂಡದ ಆಲ್‍ರೌಂಡರ್ ರವೀಂದ್ರ ಜಡೇಜಾ ಭಾನುವಾರ ಒಂದೇ ಟೆಸ್ಟ್‌ನಲ್ಲಿ 150ಕ್ಕೂ ಅಧಿಕ ರನ್ ಸಿಡಿಸಿದ ಮತ್ತು ಐದು ವಿಕೆಟ್‍ಗಳನ್ನು ಪಡೆದ ವಿಶ್ವದ ಆರನೇ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ.

    ಪ್ರಸ್ತುತ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್‌ನ 3ನೇ ದಿನದಾಟದಲ್ಲಿ ಜಡೇಜಾ ಐದು ವಿಕೆಟ್‍ಗಳನ್ನು ಕಬಳಿಸುವ ಮೂಲಕ ಈ ಸಾಧನೆ ಮಾಡಿದ್ದಾರೆ. ಇದಕ್ಕೂ ಮುನ್ನ ಜಡೇಜಾ ಮೊದಲ ಇನಿಂಗ್ಸ್‌ನಲ್ಲಿ ಅಜೇಯ 175 ರನ್ ಸಿಡಿಸುವ ಮೂಲಕ ಭಾರತವನ್ನು 450 ರನ್‍ಗಳ ಗಡಿ ದಾಟಿಸುವಲ್ಲಿ ಯಶಸ್ವಿಯಾದರು.

    ಈ ಮೊದಲು ವಿನೂ ಮಂಕಡ್, ಡೆನಿಸ್ ಅಟ್ಕಿನ್ಸನ್, ಪೊಲ್ಲಿ ಉಮ್ರಿಗರ್, ಗ್ಯಾರಿ ಸೋಬರ್ಸ್ ಮತ್ತು ಮುಷ್ತಾಕ್ ಮೊಹಮ್ಮದ್ ಈ ಸಾಧನೆ ಮಾಡಿದ ಇತರ ಐದು ಆಟಗಾರರಾಗಿದ್ದರು.

    ಶ್ರೀ ಲಂಕಾ ತಂಡವು ಮೊದಲ ಇನ್ನಿಂಗ್ಸ್‍ನಲ್ಲಿ 138/4ಕ್ಕೆ ತಮ್ಮ 3ನೇ ದಿನದ ಆಟವಾವನ್ನು ಪ್ರಾರಂಭಿಸಿತ್ತು. ಲಂಕಾದ ಬ್ಯಾಟರ್‌ಗಳಾದ ಪಾತುಮ್ ನಿಸ್ಸಾಂಕ್ ಮತ್ತು ಚರಿತ್ ಅಸಲಂಕಾ ಜೋಡಿಯು ಒಟ್ಟು 53 ರನ್‍ಗಳನ್ನು ತಂಡಕ್ಕೆ ಸೇರಿಸಿದ್ದರು. ನಂತರದಲ್ಲಿ ಅಂತಿಮವಾಗಿ 58ನೇ ಓವರ್‌ನಲ್ಲಿ ಜಸ್ಪ್ರೀತ್ ಬುಮ್ರಾ ಅಸಲಂಕಾ (29) ಅವರ ವಿಕೆಟ್ ತೆಗೆಯುವ ಮೂಲಕ ಈ ಜೋಡಿ ಆಟಕ್ಕೆ ಬ್ರೇಕ್ ಹಾಕಿದರು.

    ನಂತರದಲ್ಲಿ ಬ್ಯಾಟಿಂಗ್‍ಗೆ ಇಳಿದ ನಿರೋಶನ್ ಡಿಕ್ವೆಲ್ಲಾ ಕೇವಲ (2) ರನ್ ಗಳಿಸುವಷ್ಟರಲ್ಲಿ ಜಡೇಜಾ ಅವರಿಗೆ ವಿಕೆಟ್ ಒಪ್ಪಿಸಿದರು. ಅದೇ ಓವರ್‌ನಲ್ಲಿ ಜಡೇಜಾ ಸುರಂಗಾ ಲಕ್ಮಲ್ (0) ವಿಕೆಟ್‍ನ್ನು ಪಡೆಯುವಲ್ಲಿ ಯಶಸ್ವಿಯಾದರೂ.

    ಕೊನೆಯಲ್ಲಿ ಶ್ರೀಲಂಕಾ ತಂಡವು 174 ರನ್‍ಗಳಿಗೆ ಆಲೌಟ್ ಆಗಿದೆ. ಈ ವೇಳೆ ಭಾರತವು 400 ರನ್‍ಗಳ ಮುನ್ನಡೆ ಸಾಧಿಸಿದ್ದು, ಅತಿಥೇಯರ ಮೇಲೆ ಫಾಲೋ-ಆನ್ ಹೆರಿದ್ದಾರೆ.

  • ಅಶ್ವಿನ್ ನೂತನ ಮೈಲಿಗಲ್ಲು – ಸಂಕಷ್ಟದಲ್ಲಿ ಲಂಕಾ

    ಅಶ್ವಿನ್ ನೂತನ ಮೈಲಿಗಲ್ಲು – ಸಂಕಷ್ಟದಲ್ಲಿ ಲಂಕಾ

    ಮೊಹಾಲಿ: ಭಾರತ ಮತ್ತು ಶ್ರೀಲಂಕಾ ನಡುವಿನ ಟೆಸ್ಟ್ ಪಂದ್ಯದ ಎರಡನೇ ದಿನ ಟೀಂ ಇಂಡಿಯಾ ಸ್ಪಿನ್ನರ್ ಆರ್. ಅಶ್ವಿನ್ ನೂತನ ಮೈಲಿಗಲ್ಲು ನೆಟ್ಟಿದ್ದಾರೆ.

    ಅಶ್ವಿನ್ ಒಟ್ಟು 85 ಟೆಸ್ಟ್ ಪಂದ್ಯದಿಂದ 432 ವಿಕೆಟ್ ಪಡೆಯುವ ಮೂಲಕ ರಿಚರ್ಡ್ ಹ್ಯಾಡ್ಲೀ ಅವರನ್ನು ಹಿಂದಿಕ್ಕಿ ಟೆಸ್ಟ್‌ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ 11ನೇ ಸ್ಥಾನ ಪಡೆದಿದ್ದಾರೆ. ರಿಚರ್ಡ್ ಹ್ಯಾಡ್ಲೀ 86 ಟೆಸ್ಟ್‌ಗಳಿಂದ 431 ವಿಕೆಟ್ ಪಡೆದ ಸಾಧನೆ ಮಾಡಿದ್ದರು. ಇದೀಗ ಈ ದಾಖಲೆಯನ್ನು ಅಶ್ವಿನ್ ಹಿಂದಿಕ್ಕಿದ್ದಾರೆ. ಇದನ್ನೂ ಓದಿ: ಅಂದು ಸಚಿನ್, ಇಂದು ಜಡೇಜಾ – ದ್ರಾವಿಡ್, ರೋಹಿತ್ ನಡೆಗೆ ನೆಟ್ಟಿಗರು ಕಿಡಿ

    ಎರಡನೇ ದಿನ ಟೀಂ ಇಂಡಿಯಾ ಬ್ಯಾಟಿಂಗ್ ಮತ್ತು ಬೌಲಿಂಗ್‍ನಲ್ಲಿ ಮಿಂಚುಹರಿಸಿದೆ. ಮೊದಲ ದಿನ 85 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 375 ರನ್ ಪೇರಿಸಿದ್ದ ಭಾರತ 2ನೇ ದಿನ ರವೀಂದ್ರ ಜಡೇಜಾರ ಆಕರ್ಷಕ ಶತಕ ಮತ್ತು ಆರ್ ಅಶ್ವಿನ್‍ರ ಅರ್ಧಶತಕದ ನೆರವಿನಿಂದ 550ರ ಗಡಿದಾಟಿತು. ಇದನ್ನೂ ಓದಿ: ವಾರ್ನ್ ಭವಿಷ್ಯ ನುಡಿದ ಯುವಕ – ರಾಕ್‍ಸ್ಟಾರ್ ಜಡೇಜಾ ದಾಖಲೆಯ ಶತಕ

    ಆರ್. ಅಶ್ವಿನ್ 61 ರನ್ (82 ಎಸೆತ, 8 ಬೌಂಡರಿ) ಸಿಡಿಸಿ ಔಟ್ ಆದರು. ಈ ಮೊದಲು ಜಡೇಜಾ ಜೊತೆ ಅಶ್ವಿನ್ 7ನೇ ವಿಕೆಟ್‍ಗೆ 130 ರನ್ (174 ಎಸೆತ) ಗಳ ಜೊತೆಯಾಟವಾಡಿದರು. ಎರಡನೇ ದಿನ ಜಡ್ಡು ಮನಮೋಹಕ ಹೊಡೆಗಳಿಂದ ಟೀಂ ಇಂಡಿಯಾದ ರನ್ ಶಿಖರವನ್ನು ಕಟ್ಟಿದರು. ಅಂತಿಮವಾಗಿ 129.2 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡ ಭಾರತ 574 ರನ್ ಪೇರಿಸುತ್ತಿದ್ದಂತೆ, ನಾಯಕ ರೋಹಿತ್ ಶರ್ಮಾ ಇನ್ನಿಂಗ್ಸ್ ಡಿಕ್ಲೇರ್ ಘೋಷಿಸಿದರು. ಜಡೇಜಾ 175 ರನ್ (228 ಎಸೆತ, 17 ಬೌಂಡರಿ, 3 ಸಿಕ್ಸ್) ಮತ್ತು ಮೊಹಮ್ಮದ್ ಶಮಿ 20 ರನ್ (34 ಎಸೆತ, 3 ಬೌಂಡರಿ) ಸಿಡಿಸಿ ಅಜೇಯರಾಗಿ ಉಳಿದರು. ಇದನ್ನೂ ಓದಿ: 10 ವರ್ಷದ ಹುಡುಗ ಎಂದಿದ್ದ ಶೇನ್ ವಾರ್ನ್ ಕನಸಲ್ಲಿ ಸಚಿನ್ ಬಂದಿದ್ದು ಹೇಗೆ..?

    ನಂತರ ಬ್ಯಾಟಿಂಗ್ ಆರಂಭಿಸಿದ ಶ್ರೀಲಂಕಾ ತಂಡಕ್ಕೆ ಆರಂಭದಲ್ಲೇ ಜಡೇಜಾ ಬೌಲಿಂಗ್‍ನಲ್ಲಿ ಶಾಕ್ ನೀಡಿದರು. ದಿಮುತ್ ಕರುಣಾರತ್ನೆ 28 ರನ್ (71 ಎಸೆತ, 5 ಬೌಂಡರಿ) ಸಿಡಿಸಿ ಜಡೇಜಾ ಬೌಲಿಂಗ್‍ನಲ್ಲಿ ಎಲ್‍ಬಿಡಬ್ಲ್ಯೂ ಆಗಿ ವಿಕೆಟ್ ಒಪ್ಪಿಸಿದರು. ನಂತರ ಅಶ್ವಿನ್ 2 ವಿಕೆಟ್ ಕಿತ್ತು ಲಂಕಾ ಬ್ಯಾಟ್ಸ್‌ಮ್ಯಾನ್‌ಗಳಿಗೆ ಮುಳುವಾದರು. ದಿನದಾಟದ ಅಂತ್ಯಕ್ಕೆ ಶ್ರೀಲಂಕಾ 43 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 108 ರನ್ ಗಳಿಸಿದ್ದು, ಇನ್ನೂ 466 ರನ್‍ಗಳ ಹಿನ್ನಡೆಯಲ್ಲಿದೆ.

  • ಅಂದು ಸಚಿನ್, ಇಂದು ಜಡೇಜಾ – ದ್ರಾವಿಡ್, ರೋಹಿತ್ ನಡೆಗೆ ನೆಟ್ಟಿಗರು ಕಿಡಿ

    ಅಂದು ಸಚಿನ್, ಇಂದು ಜಡೇಜಾ – ದ್ರಾವಿಡ್, ರೋಹಿತ್ ನಡೆಗೆ ನೆಟ್ಟಿಗರು ಕಿಡಿ

    ಮೊಹಾಲಿ: ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡ ವಿಚಾರಕ್ಕೆ ಈಗ ಕೋಚ್ ದ್ರಾವಿಡ್ ಮತ್ತು ರೋಹಿತ್ ಶರ್ಮಾ ಟೀಕೆಗೆ ಗುರಿಯಾಗಿದ್ದಾರೆ.

    ಎರಡನೇ ದಿನದಾಟದ 129.2 ಓವರ್ ಆದಾಗ ಭಾರತ 8 ವಿಕೆಟ್ ನಷ್ಟಕ್ಕೆ 574 ರನ್ ಗಳಿಸಿತ್ತು. ಈ ವೇಳೆ ನಾಯಕ ರೋಹಿತ್ ಶರ್ಮಾ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದ್ದಾರೆ. ಇದರಿಂದಾಗಿ ದ್ವಿಶತಕದ ಹೊಸ್ತಿಲಲ್ಲಿದ್ದ ರವೀಂದ್ರ ಜಡೇಜಾ ಆಟಕ್ಕೆ ಬ್ರೇಕ್ ಬಿತ್ತು. ಇದನ್ನೂ ಕಂಡ ಅಭಿಮಾನಿಗಳು ದ್ರಾವಿಡ್ ಮತ್ತು ರೋಹಿತ್ ಶರ್ಮಾ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಕಿಡಿಕಾರುತ್ತಿದ್ದಾರೆ. ಇದನ್ನೂ ಓದಿ: ವಾರ್ನ್ ಭವಿಷ್ಯ ನುಡಿದ ಯುವಕ – ರಾಕ್‍ಸ್ಟಾರ್ ಜಡೇಜಾ ದಾಖಲೆಯ ಶತಕ

    ರವೀಂದ್ರ ಜಡೇಜಾ ಮೊದಲದಿನದಾಟದ ಅಂತ್ಯಕ್ಕೆ ಅಜೇಯ 45 ರನ್ (82 ಎಸೆತ, 5 ಬೌಂಡರಿ) ಸಿಡಿಸಿದ್ದರು. ಎರಡನೇ ದಿನದಾಟ ಮುಂದುವರಿಸಿದ ಜಡ್ಡು ಬೌಂಡರಿ, ಸಿಕ್ಸರ್‌ಗಳ ಅಬ್ಬರದಾಟ ಆರಂಭಿಸಿದರು. 87 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಬಳಿಕ ಮತ್ತಷ್ಟು ಬಿರುಸಿನ ಬ್ಯಾಟಿಂಗ್‍ಗೆ ಮುಂದಾದ ಜಡ್ಡು 160 ಎಸೆತಗಳಲ್ಲಿ 100 ರನ್ ಸಿಡಿಸಿ ಶತಕ ಪೂರೈಸಿದರು. ಆ ಬಳಿಕವು ತನ್ನ ಬ್ಯಾಟಿಂಗ್ ವೈಭವ ಮುಂದುವರಿಸಿದ ಜಡೇಜಾ 211 ಎಸೆತಗಳಲ್ಲಿ 150 ರನ್ ಪೂರೈಸಿದರು. ಅಲ್ಲದೆ ಮೊಹಮ್ಮದ್ ಶಮಿ ಜೊತೆ 9ನೇ ವಿಕೆಟ್‍ಗೆ 100 ರನ್ (91 ಎಸೆತ)ಗಳ ಜೊತೆಯಾಟವಾಡಿದರು. ಇದರಲ್ಲಿ 69 ರನ್ ಜಡೇಜಾ ಸಿಡಿಸಿದರೆ, ಇನ್ನೂಳಿದ 20 ರನ್ ಶಮಿ ಬ್ಯಾಟ್‍ನಿಂದ ಬಂದಿತ್ತು. ಇದನ್ನೂ ಓದಿ: 10 ವರ್ಷದ ಹುಡುಗ ಎಂದಿದ್ದ ಶೇನ್ ವಾರ್ನ್ ಕನಸಲ್ಲಿ ಸಚಿನ್ ಬಂದಿದ್ದು ಹೇಗೆ..?

    150 ರನ್ ಸಿಡಿಸಿದ ಬಳಿಕ ಜಡ್ಡು ಬ್ಯಾಟಿಂಗ್‍ನಲ್ಲಿ ಮತ್ತಷ್ಟು ಆಕರ್ಷಕ ಹೊಡೆತಗಳು ಕಂಡುಬಂದವು. ಜಡೇಜಾ ಚೊಚ್ಚಲ ದ್ವಿಶತಕ ಸಿಡಿಸುತ್ತಾರೆ ಎಂದು ಕಾಯುತ್ತಿದ್ದವರಿಗೆ ನಾಯಕ ರೋಹಿತ್ ಶರ್ಮಾ ನಿರಾಸೆ ಮೂಡಿಸಿದರು. ಜಡೇಜಾ 175 ರನ್ (228 ಎಸೆತ, 17 ಬೌಂಡರಿ, 3 ಸಿಕ್ಸ್) ಸಿಡಿಸಿ ಉತ್ತಮವಾಗಿಯೇ ಬ್ಯಾಟಿಂಗ್ ಮಾಡುತ್ತಿದ್ದರು. ಆದರೆ ರೋಹಿತ್ ಶರ್ಮಾ ಅಷ್ಟೂತ್ತಿಗಾಗಲೇ ಡಿಕ್ಲೇರ್ ಘೋಷಿಸಿದ್ದರು. ಇದರಿಂದ ಜಡೇಜಾ ಚೊಚ್ಚಲ ದ್ವಿಶತಕವನ್ನು 25 ರನ್‍ಗಳ ಅಂತರದಿಂದ ತಪ್ಪಿಸಿಕೊಂಡರು. ಇದನ್ನೂ ಓದಿ: ಇಂದು ಭಾವನಾತ್ಮಕ ಪೋಸ್ಟ್ ಮಾಡಿದ್ದ ಶೇನ್ ವಾರ್ನ್

    https://twitter.com/AbduswamadMH/status/1500051643328446468

    ಇದೀಗ ಸಾಮಾಜಿಕ ಜಾಲತಾಣದಲ್ಲಿ ರೋಹಿತ್ ಶರ್ಮಾ ಮತ್ತು ರಾಹುಲ್ ದ್ರಾವಿಡ್ ಬಗ್ಗೆ ವಿವಿಧ ಕಾಮೆಂಟ್ ಹರಿದಾಡುತ್ತಿದೆ. ಈ ಹಿಂದೆ ಪಾಕಿಸ್ತಾನ ವಿರುದ್ಧ 2004ರಲ್ಲಿ ಮುಲ್ತಾನ್ ಟೆಸ್ಟ್ ವೇಳೆ ಸಚಿನ್ ತೆಂಡೂಲ್ಕರ್ 194 ರನ್ ಸಿಡಿಸಿದ್ದ ವೇಳೆ ಟೀಂ ಇಂಡಿಯಾದ ನಾಯಕರಾಗಿದ್ದ ರಾಹುಲ್ ದ್ರಾವಿಡ್ ಡಿಕ್ಲೇರ್ ಘೋಷಿಸಿದ್ದರು. ದ್ವಿಶತಕ ಕೈತಪ್ಪಿದ್ದಕ್ಕೆ ಸಚಿನ್ ಅಭಿಮಾನಿಗಳು ರಾಹುಲ್ ದ್ರಾವಿಡ್ ವಿರುದ್ಧ ಟೀಕೆ ವ್ಯಕ್ತಪಡಿಸಿದ್ದರು. ಇದೀಗ ಜಡೇಜಾ 175 ರನ್ ಸಿಡಿಸಿದ್ದ ವೇಳೆ ನಾಯಕ ರೋಹಿತ್ ಶರ್ಮಾ ಡಿಕ್ಲೇರ್ ಘೋಷಿಸಿದ್ದಾರೆ. ಇಷ್ಟು ಬೇಗ ಡಿಕ್ಲೇರ್ ಘೋಷಣೆ ಮಾಡಿದ್ದು ಯಾಕೆ ಎಂದು ಪ್ರಶ್ನಿಸಿ ಸಾಮಾಜಿಕ ಜಾಲತಾಣದಲ್ಲಿ ರೋಹಿತ್ ಮತ್ತು ದ್ರಾವಿಡ್ ಅವರನ್ನು ಟೀಕಿಸುತ್ತಿದ್ದಾರೆ.