Tag: ravindra kalakshetra

  • ದ್ವಾರಕೀಶ್ ನಿಧನ: ನಾಳೆ 7 ಗಂಟೆಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

    ದ್ವಾರಕೀಶ್ ನಿಧನ: ನಾಳೆ 7 ಗಂಟೆಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

    ಹಿರಿಯ ನಟ ದ್ವಾರಕೀಶ್ (Dwarakish) ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ನಾಳೆ ಬೆಳಗ್ಗೆ 7 ಗಂಟೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ (Ravindra Kalakshetra) ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಏಳು ಗಂಟೆಯಿಂದ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಂತರ ಚಾಮರಾಜಪೇಟೆಯ ಟಿಆರ್ ಮಿಲ್ ನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತಿದೆ.

    ಈ ಕುರಿತಂತೆ ಮಾತನಾಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್.ಎಂ. ಸುರೇಶ್, ದ್ವಾರಕೀಶ್ ಚಿತ್ರರಂಗದ ದೊಡ್ಡ ಆಸ್ತಿ. ಅವರ ಅಗಲಿಕೆ ಎಲ್ಲರಿಗೂ ತುಂಬಾ ನೋವಾಗಿದೆ. ಅವರು ಕೇವಲ ನಟರಲ್ಲ ನಿರ್ದೇಶಕ, ನಿರ್ಮಾಪಕ ಕೂಡ ಹೌದು. ಹಾಗಾಗಿ ನಾಳೆ ಚಿತ್ರರಂಗ ಬಂದ್ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ನಾಳೆ ಸ್ವಯಂಪ್ರೇರಿತವಾಗಿ ಬಂದ್ ಮಾಡಬೇಕು ಅಂತ ಕೇಳಿಕೊಳ್ತೀನಿ. ಅವರು ಎಲ್ಲರಿಗೂ ದೊಡ್ಡ ಆಸ್ತಿ. ಅಂತ್ಯಕ್ರಿಯೆ ಬಗ್ಗೆ ಸರ್ಕಾರದ ಜೊತೆ ಮಾತಾಡ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

    ಕಂಬನಿ ಮಿಡಿದ ರಜನಿಕಾಂತ್

    ದ್ವಾರಕೀಶ್ ಮತ್ತು ರಜನಿಕಾಂತ್ ಬಹುಕಾಲದ ಗೆಳೆಯರು. ದ್ವಾರಕೀಶ್ ಹೇಳಿದವರಿಗೆ ರಜನಿಕಾಂತ್ ಕಾಲ್ ಶೀಟ್ ಕೊಡುತ್ತಿದ್ದರು ಎಂದು ಸ್ವತಃ ದ್ವಾರಕೀಶ್ ಅವರೇ ಹೇಳಿದ್ದಾರೆ. ಅಡ್ಡ ವಾರಿಸು ಸಿನಿಮಾದಲ್ಲಿ ರಜನಿಕಾಂತ್ ನಟಿಸಿದ್ದರೆ, ಈ ಸಿನಿಮಾವನ್ನು ದ್ವಾರಕೀಶ್ ನಿರ್ಮಾಣ ಮಾಡಿದ್ದರು. 1983ರಲ್ಲಿ ಈ ಚಿತ್ರ ಬಿಡುಗಡೆ ಆಗಿತ್ತು. ಆನಂತರ ನೀ ಬರೆದ ಕಾದಂಬರಿ, ಗುಂಗುವಾ ಸೇರಿದಂತೆ ಹಲವು ಚಿತ್ರಗಳಲ್ಲಿಇಬ್ಬರೂ ಕೆಲಸ ಮಾಡಿದ್ದಾರೆ. ಹಾಗೆ ಇವರ ಸ್ನೇಹವಿತ್ತು.

     

    ಈ ಸ್ನೇಹಕ್ಕೆ ಕುರುಹು ಎನ್ನುವಂತೆ ತಮ್ಮಿಬ್ಬರ ಸ್ನೇಹವನ್ನು ರಜನಿಕಾಂತ್ ನೆನಪಿಸಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ರಜನಿ, ನನ್ನ ಬಹುಕಾಲದ ಆತ್ಮೀಯ ಗೆಳೆಯ ದ್ವಾರಕೀಶ್ ಅವರ ನಿಧನ ನನಗೆ ಅತೀ ನೋವನ್ನು ತಂದಿದೆ. ಹಾಸ್ಯ ನಟನಾಗಿ ವೃತ್ತಿ ಜೀವನ ಆರಂಭಿಸಿ, ಆನಂತರ ದೊಡ್ಡ ನಿರ್ಮಾಪಕರು ಹಾಗೂ ನಿರ್ದೇಶಕರಾಗಿ ಬೆಳೆದರು ಹಾಗೂ ಬೆಳೆಸಿದರು. ಅವರ ಅಗಲಿಕೆ ನೋವು ತಂದಿದೆ. ಅವರಿಗೆ ಭಾವ ಪೂರ್ಣ ಸಂತಾಪ ಎಂದು ಬರೆದುಕೊಂಡಿದ್ದಾರೆ.

  • ಬೆಳಗ್ಗೆ 11ರಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

    ಬೆಳಗ್ಗೆ 11ರಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

    ನ್ನಡ ಸಿನಿಮಾ ರಂಗದ ಹಿರಿಯ ನಟಿ ಲೀಲಾವತಿ ಅವರ ಅಂತಿಮ ದರ್ಶನಕ್ಕೆ ಇಂದು ಬೆಳಗ್ಗೆಯಿಂದ ನೆಲಮಂಗಲದ ಅಂಬೇಡ್ಕರ್  ಮೈದಾನದಲ್ಲಿ ವ್ಯವಸ‍್ಥೆ ಮಾಡಲಾಗಿದೆ. ನೆಲಮಂಗಲ ಸುತ್ತಮುತ್ತಲಿನ ಗ್ರಾಮಸ್ಥರು, ಸಿನಿಮಾ ಅಭಿಮಾನಿಗಳು, ಹಾಗೂ ಕಲಾವಿದರು ಮತ್ತು ತಂತ್ರಜ್ಞರು ಮೈದಾನಕ್ಕೆ ಆಗಮಿಸಿ ಅಗಲಿದ ನೆಚ್ಚಿನ ನಟಿಯ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

    ಬೆಳಗ್ಗೆ 10 ಗಂಟೆವರೆಗೂ ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲೇ ಪಾರ್ಥೀವ ಶರೀರ ಇರಿಸಲಾಗುತ್ತಿದ್ದು, ನಂತರ ಬೆಂಗಳೂರಿನತ್ತ (Bangalore) ತಗೆದುಕೊಂಡು ಹೋಗಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿರುವ (Ravindra Kalakshetra) ಸಂಸ ಬಯಲು ರಂಗ ಮಂದಿರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಿಎಂ ಸಿದ್ಧರಾಮಯ್ಯ ಸೇರಿದಂತೆ ಸಚಿವ ಸಂಪುಟದ ಅನೇಕ ಸಚಿವರು ಹಾಗೂ ಚಿತ್ರೋದ್ಯಮದ ಗಣ್ಯರು ಆಗಮಿಸಿ, ಅಂತಿಮ ದರ್ಶನ ಪಡೆಯಲಿದ್ದಾರೆ.

    ಓಡೋಡಿ ಬಂದ ಮೊಮ್ಮಗ, ಸೊಸೆ

    ಅಗಲಿದ ಹಿರಿಯ ಚೇತನ ಲೀಲಾವತಿ ಅವರ ಅಂತಿಮ ದರ್ಶನ ಪಡೆಯಲು ಚೆನ್ನೈನಿಂದ ಲೀಲಾವತಿ ಅವರ ಸೊಸೆ, ಅಂದರೆ ವಿನೋದ್ ರಾಜ್ ಅವರ ಪತ್ನಿ ಅನು (Anu) ಮತ್ತು ಲೀಲಾವತಿ (Leelavati) ಮೊಮ್ಮಗ  ಯುವರಾಜ್ (Yuvraj) ಆಗಮಿಸಿದ್ದಾರೆ. ನಿನ್ನೆ ರಾತ್ರಿಯೇ ಅವರು ಚೆನ್ನೈನಿಂದ ಹೊರಟು ನೆಲಮಂಗಲ ತಲುಪಿ, ಇಂದು ಅಂತಿಮ ದರ್ಶನ ಪಡೆದಿದ್ದಾರೆ.

     

    ವಿನೋದ್ ರಾಜ್ (Vinod Raj) ಮದುವೆ ವಿಚಾರವಾಗಿ ಹಲವಾರು ಗೊಂದಲಗಳು ಇದ್ದವು. ತಾಯಿಗಾಗಿ ವಿನೋದ್ ಮದುವೆ ಆಗದೇ, ತಾಯಿಯ ಸೇವೆಯಲ್ಲಿದ್ದಾರೆ ಎಂದು ಹೇಳಲಾಗಿತ್ತು. ಇತ್ತೀಚೆಗಷ್ಟೇ ವಿನೋದ್ ರಾಜ್ ಮದುವೆ ಆಗಿರುವ ಸುದ್ದಿಯನ್ನು ನಿರ್ದೇಶಕರೊಬ್ಬರು ಫೋಟೋ ಸಮೇತ ವಿವರಿಸಿದ್ದರು. ವಿನೋದ್ ರಾಜ್ ಮದುವೆ ವಿಚಾರವನ್ನು ಸ್ವತಃ ಲೀಲಾವತಿ ಮತ್ತು ವಿನೋದ್ ರಾಜ್ ಕೂಡ ಒಪ್ಪಿಕೊಂಡಿದ್ದರು.

  • ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ನಿರ್ದೇಶಕ ಭಗವಾನ್ ಅಂತಿಮ ದರ್ಶನಕ್ಕೆ ಸಿದ್ಧತೆ

    ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ನಿರ್ದೇಶಕ ಭಗವಾನ್ ಅಂತಿಮ ದರ್ಶನಕ್ಕೆ ಸಿದ್ಧತೆ

    ಇಂದು ಬೆಳಗ್ಗೆ ನಿಧನರಾಗಿರುವ ಕನ್ನಡದ ಹೆಸರಾಂತ ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್ (Dorai Bhagavan) ಅವರ ಪಾರ್ಥೀವ ಶರೀರವನ್ನು ಆಸ್ಪತ್ರೆಯಿಂದ ಸಹಕಾರಿ ನಗರದ ಅವರ ನಿವಾಸಕ್ಕೆ ತರಲಾಗಿದೆ. ಕುಟುಂಬಸ್ಥರು ವಿಧಿ ವಿಧಾನ ಮುಗಿಸಿದ ನಂತರ ಅಭಿಮಾನಿಗಳಿಗಾಗಿ ಅಂತಿಮ ದರ್ಶನಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ (Ravindra Kalakshetra) ಮಧ್ಯಾಹ್ನ 12.30ರ  ನಂತರ ವ್ಯವಸ್ಥೆ ಮಾಡಿರುವುದಾಗಿ ಭಗವಾನ್ ಪುತ್ರ ರಿಚ್ಚಿ ತಿಳಿಸಿದ್ದಾರೆ.

    ಶ್ರೀನಿವಾಸ್ ಕೃಷ್ಣ ಅಯ್ಯಂಗಾರ್ ಭಗವಾನ್ ಇವರು ಪೂರ್ಣ ಹೆಸರು. 1933ರಲ್ಲಿ ಮೈಸೂರಿನ ತಮಿಳು ಅಯ್ಯಂಗಾರ್ ಕುಟುಂಬದಲ್ಲಿ ಜನಿಸಿದ್ದ ಇವರು, ರಂಗಭೂಮಿ ಹಿನ್ನೆಲೆಯುಳ್ಳವರು. ಕಾಲೇಜು ದಿನಗಳಲ್ಲಿ ರಂಗಭೂಮಿಯ ಸಾಕಷ್ಟು ಚಟುವಟಿಕೆಗಳಲ್ಲಿ ತೊಡಗಿಕೊಂಡವರು. 1956ರಲ್ಲಿ ಕಣಗಾಲ್ ಪ್ರಭಾಕರ ಶಾಸ್ತ್ರಿಗಳಿಗೆ ಸಹಾಯಕ ನಿರ್ದೇಶಕರಾಗಿ ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದವರು. ಇದನ್ನೂ ಓದಿ: ಸದ್ದಿಲ್ಲದೇ ಆದಿಯೋಗಿ ಶಿವನ ದರ್ಶನ ಪಡೆದ ರಜನಿಕಾಂತ್

    1966ರಲ್ಲಿ ತೆರೆಕಂಡ ಸಂಧ್ಯಾರಾಗ ಚಿತ್ರದ ಮೂಲಕ ಸಹಾಯಕ ನಿರ್ದೇಶಕರಾಗಿ ಭಡ್ತಿ ಪಡೆದವರು. ನಂತರ ನಿರ್ದೇಶಕ ದೊರೈರಾಜ್ ಜೊತೆಗೂಡಿ ಸ್ವತಂತ್ರ ನಿರ್ದೇಶಕರಾದವರು. 1993ರಲ್ಲಿ ದೊರೈರಾಜ್ ನಿಧನದ ನಂತರ ಒಂಟಿಯಾದರು ಭಗವಾನ್. ಬರೋಬ್ಬರಿ 49 ಸಿನಿಮಾಗಳನ್ನು ಈ ಜೋಡಿ ನಿರ್ದೇಶನ ಮಾಡಿದ್ದು ವಿಶೇಷ. ಈ ಜೋಡಿಯ ಮತ್ತೊಂದು ದಾಖಲೆಯೆಂದರೆ 24 ಕಾದಂಬರಿ ಆಧರಿಸಿದ ಸಿನಿಮಾಗಳನ್ನು ಈ ಜೋಡಿ  ನಿರ್ದೇಶನ ಮಾಡಿದೆ.

    ಕನ್ನಡದ ಅಷ್ಟೂ ಸೂಪರ್ ಸ್ಟಾರ್ ಸಿನಿಮಾಗಳಿಗೆ ನಿರ್ದೇಶನ ಮಾಡಿದ ಹೆಗ್ಗಳಿಕೆ ಈ ಜೋಡಿಯದ್ದು. ಜೇಡರ ಬಲೆ, ಕಸ್ತೂರಿ ನಿವಾಸ, ಎರಡು ಕನಸು, ಬಯಲು ದಾರಿ, ಗಿರಿಕನ್ಯೆ, ಚಂದನದ ಗೊಂಬೆ, ಜೀವನ ಚೈತ್ರ, ಒಡಹುಟ್ಟಿದವರು, ಯಾರಿವನು, ಮುನಿಯನ ಮಾದರಿ ಹೀಗೆ ಅಷ್ಟೂ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಫಸ್ಟ್ ಟೈಂ ರವೀಂದ್ರ ಕಲಾಕ್ಷೇತ್ರದಲ್ಲಿ ಮದ್ವೆ- ವಿವಾದಕ್ಕೆ ಕಾರಣವಾಗಿದೆ ಆಡಳಿತ ಮಂಡಳಿಯ ನಿರ್ಧಾರ

    ಫಸ್ಟ್ ಟೈಂ ರವೀಂದ್ರ ಕಲಾಕ್ಷೇತ್ರದಲ್ಲಿ ಮದ್ವೆ- ವಿವಾದಕ್ಕೆ ಕಾರಣವಾಗಿದೆ ಆಡಳಿತ ಮಂಡಳಿಯ ನಿರ್ಧಾರ

    ಬೆಂಗಳೂರು: ನಗರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವೇದಿಕೆಯಾಗಿದ್ದ ರವೀಂದ್ರ ಕಲಾಕ್ಷೇತ್ರ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದೆ. ಪ್ರಪ್ರಥಮ ಬಾರಿಗೆ ರವೀಂದ್ರ ಕಲಾಕ್ಷೇತ್ರ ಆಡಳಿತ ಮಂಡಳಿ ಕಲಾಕ್ಷೇತ್ರದ ಆವರಣದಲ್ಲಿ ಮದುವೆಗೆ ಅವಕಾಶ ನೀಡಿದ್ದು, ಇದೀಗ ವಿವಾದಕ್ಕೆ ಕಾರಣವಾಗಿದೆ.

    ಕಲಾಕ್ಷೇತ್ರದ ಇತಿಹಾಸದಲ್ಲೇ ಮೊದಲ ಬಾರಿಗೆ ವಿವಾಹ ಮಹೋತ್ಸವವೊಂದು ಜರುಗಿದೆ. ರಂಗಕರ್ಮಿ ಶಿವು ಹಾಗೂ ಪೂಜಾ ವಿವಾಹ ಮಹೋತ್ಸವಕ್ಕೆ ನೀತಿ ನಿಯಮ ಉಲ್ಲಂಘಿಸಿ ಅವಕಾಶ ಮಾಡಿಕೊಡಲಾಗಿದೆ. ಕಲಾವಿದರು, ಸ್ನೇಹಿತರು, ಸಂಬಂಧಿಗಳ ಸಮ್ಮುಖದಲ್ಲಿ ಇಂದು ಶಿವು ಹಾಗೂ ಪೂಜಾ ವಿವಾಹ ನೆರವೇರಿದೆ. ಬಿಂಕ ಬಿನ್ನಾಣರ ಕಲಾ ತಂಡದಿಂದ ಈ ಮದುವೆ ಆಯೋಜಿಸಲಾಗಿತ್ತು. ವಿವಾಹದಲ್ಲಿ ನೂರಾರು ಜನ ಭಾಗಿಯಾಗಿದ್ರು.

    ಕಲಾವಿದರ ಒತ್ತಾಯಕ್ಕೆ ಮಣಿದು ಆಡಳಿತ ಮಂಡಳಿ ಮದುವೆಗೆ ಅವಕಾಶ ನೀಡಿದೆ ಎನ್ನಲಾಗಿದೆ. ರಂಗಕರ್ಮಿ ಶಿವು ಆಸೆಯಂತೆ ಸರಳ ವಿವಾಹಕ್ಕೆ ಅವಕಾಶ ಮಾಡಿಕೊಟ್ಟ ಆಡಳಿತ ಮಂಡಳಿ ಕ್ರಮಕ್ಕೆ ಸಾಹಿತ್ಯ ವಲಯದಲ್ಲಿ ತೀವ್ರ ಅಪಸ್ವರ ವ್ಯಕ್ತವಾಗಿದೆ.