Tag: Ravindra Srikantaiah

  • ಸಂಸದರಾಗಿ ಏನು ಮಾಡಬೇಕೆಂಬ ಜವಾಬ್ದಾರಿ ಇಲ್ಲ – ಸಮಲತಾ ವಿರುದ್ಧ ರವೀಂದ್ರ ಶ್ರೀಕಂಠಯ್ಯ ವಾಗ್ದಾಳಿ

    ಸಂಸದರಾಗಿ ಏನು ಮಾಡಬೇಕೆಂಬ ಜವಾಬ್ದಾರಿ ಇಲ್ಲ – ಸಮಲತಾ ವಿರುದ್ಧ ರವೀಂದ್ರ ಶ್ರೀಕಂಠಯ್ಯ ವಾಗ್ದಾಳಿ

    ಮಂಡ್ಯ: ಸಂಸದರಾಗಿ ನಿಮಗೆ ಏನು ಮಾಡಬೇಕು ಎಂಬ ಜವಾಬ್ದಾರಿ ಇಲ್ಲ ಎಂದು ಸಂಸದೆ ಸಮಲತಾ ಅಂಬರೀಶ್ ವಿರುದ್ಧ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು ವಾಗ್ದಾಳಿ ನಡೆಸಿದ್ದಾರೆ.

    ಶಾಸಕರ ಕೆಲಸವನ್ನು ನಾನೇ ಮಾಡುತ್ತಿದ್ದೇನೆ ಎಂಬ ಸುಮಲತಾ ಹೇಳಿಕೆ ವಿಚಾರವಾಗಿ ಶ್ರೀರಂಗಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿಮಗೆ ಸಂಸದರಾಗಿ ಏನು ಮಾಡಬೇಕು ಎಂಬ ಜವಬ್ದಾರಿಯ ಅರಿವಿಲ್ಲ. ಶಾಸಕರಿಗೆ ಸಂಸದರಿಗೆ ಸಾಮಾನ್ಯವಾಗಿ ಅನುದಾನ ಬರುತ್ತದೆ. ಅದನ್ನು ಬಿಟ್ಟು ಬೇರೆ ಮಂಡ್ಯಕ್ಕೆ ಹೊಸದಾಗಿ ಯಾವ ಅನುದಾನ ತಂದಿದ್ದೀರಾ ಮೊದಲು ಹೇಳಿ. ನಾನು ಅನುದಾನ ತಂದಿದ್ದೇನೆ. ಬೇಕು ಅಂದರೆ ಲೆಕ್ಕ ಕೊಡುತ್ತೇನೆ. ಆದರೆ ನೀವೇನು ಅನುದಾನ ತಂದಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಸರ್ರಂತ ಸುಡುವ ಜ್ವಾಲಾಗ್ನಿ ಆಗಿ ಬಂದ ಈ ತೂಫಾನ್: ಕೆಜಿಎಫ್ 2 ಫಸ್ಟ್ ಲಿರಿಕಲ್ ಹಾಡು ರಿಲೀಸ್

    ರೈಲ್ವೆ ಯೋಜನೆಗೆ ದಕ್ಷಿಣ ಭಾರತಕ್ಕೆ 55 ಕೋಟಿ ಬಿಡುಗಡೆಯಾಗಿದೆ. ಉತ್ತರ ಭಾರತಕ್ಕೆ 13 ಸಾವಿರ ಕೋಟಿ ಬಿಡುಗಡೆಯಾಗಿದೆ. ಸಂಸದರಾಗಿ ನೀವು ಏನು ಮಾಡುತ್ತಿದ್ದೀರಾ? ಇವರಿಗೆ ಇವರ ಜವಾಬ್ದಾರಿಯ ಅರಿವಿಲ್ಲ. ಕೆ.ಆರ್. ನಗರದಲ್ಲಿ ಸ್ಟೇಟ್ ಫಂಡ್ ಕಾಮಗಾರಿಗೆ ಪೂಜೆ ಮಾಡುವುಕ್ಕೆ ಹೋಗುತ್ತಾರೆ. ಅದರಲ್ಲೂ ಎಂಎಲ್‍ಎ ಬಿಟ್ಟು ಹೋಗಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಗೆಳೆಯನ ಜೊತೆಯೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ತೇಜಸ್ವಿನಿ ಪ್ರಕಾಶ್

    ಮಂಡ್ಯ ಜಿಲ್ಲೆಗೆ ಸಂಸದರು ಏನು ಕೊಡುಗೆ ಕೊಡುತ್ತಾರೆ ಅಂತ ಜನ ಕಾಯುತ್ತಿದ್ದಾರೆ. ಮುಂದಿನ ಚುನಾವಣೆಗೆ ಜನರು ಉತ್ತರ ಕೊಡುತ್ತಾರೆ. ಈಗ ಭ್ರಮ ಲೋಕದಲ್ಲಿ ಇರುವಂತೆ ಕಾಣುತ್ತಾರೆ. ಮಂಡ್ಯ ಜಿಲ್ಲೆಗೆ ಏನಾದರೂ ಅಭಿವೃದ್ಧಿ ಮಾಡಿ. ಸಮುದಾಯ ಭವನಕ್ಕೆ ಕೊಟ್ಟಿದ್ದೇನೆ ಅಂತಾರೆ. ಯಾರೇ ಮೆಂಬರ್ ಆದರೂ ಎಂಪಿ ಫಂಡ್ ಬರುತ್ತದೆ.ಸಚಿವರಿಗೆ ಲೆಟರ್ ಕೊಟ್ಟು ಫೇಸ್ ಬುಕ್ ವಾಟ್ಸ್ ಆಫ್‍ನಲ್ಲಿ ಫೋಟೋ ಹಾಕಿಸಿಕೊಳ್ಳುತ್ತಾರೆ. ಅದನ್ನು ಬಿಟ್ಟು ಏನಾದರೂ ಹೊಸ ಯೋಜನೆ ತಂದಿದ್ದೇನೆ ಎನ್ನುವುದನ್ನು ಮಾಧ್ಯಮದ ಮುಂದೆ ಹೇಳಲಿ ಎಂದಿದ್ದಾರೆ.

    ನೀವು ಗೆದ್ದಿದ್ದು ಅಂಬರೀಶ್ ಹೆಂಡತಿ, ಅಂಬರೀಶ್ ಅವರು ಅಕಾಲಿಕವಾಗಿ ಮರಣಹೊಂದಿದರು ಎನ್ನುವ ಗೌರವಾರ್ಥದಲ್ಲಿ ಜನರು ಗೆಲ್ಲಿಸಿದ್ದಾರೆ. ಇದು ಎಲ್ಲಾ ಟೈಂನಲ್ಲಿಯೂ ನಡೆಯುವುದಿಲ್ಲ. ಅಂಬರೀಶ್ ಅವರು 25 ವರ್ಷ ಎಂಪಿಯಾಗಿ ಅನುಭವಿಸಿದ್ದಾರೆ. ಆದರೆ ಮಂಡ್ಯ ಇದ್ದಂತೆಯೇ ಇದೆ. ಆದರೆ ಪಕ್ಕದಲ್ಲಿರುವ ಹಾಸನ ಜಿಲ್ಲೆ ಅಭಿವೃದ್ಧಿಯಾಗಿದೆ. ಈಗಲಾದರೂ ಹೆಚ್ಚೆತ್ತು ಹೋರಾಟ ಮಾಡಿ ವಿಶೇಷ ಅನುದಾನ ತೆಗೆದುಕೊಂಡು ಬನ್ನಿ. ಜನರಿಗೆ ಗೊಂದಲ ಸೃಷ್ಟಿ ಮಾಡಿ. ಮುಗ್ದ ಜನರು ಹೊಡೆದಾಡುವಂತೆ ಮಾಡಬೇಡಿ ಎಂದು ಹರಿಹಾಯ್ದಿದ್ದಾರೆ.

  • ವಿವಾದವನ್ನು ರಾಜಕೀಯ ಬಳಸಿಕೊಂಡ್ರೆ ದೇಶದ್ರೋಹದ ಕೆಲಸ: ರವೀಂದ್ರ ಶ್ರೀಕಂಠಯ್ಯ

    ವಿವಾದವನ್ನು ರಾಜಕೀಯ ಬಳಸಿಕೊಂಡ್ರೆ ದೇಶದ್ರೋಹದ ಕೆಲಸ: ರವೀಂದ್ರ ಶ್ರೀಕಂಠಯ್ಯ

    ಮಂಡ್ಯ: ಹಿಜಬ್ ಹಾಗೂ ಕೇಸರಿ ಶಾಲು ವಿವಾದವನ್ನು ರಾಜಕೀಯವಾಗಿ ಬಳಸಿಕೊಂಡರೆ ಅದು ದೇಶದ್ರೋಹದ ಕೆಲಸವಾಗುತ್ತದೆ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ವಾಗ್ದಾಳಿ ನಡೆಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಸಮವಸ್ತ್ರವನ್ನು ಕಡ್ಡಾಯಗೊಳಿಸಿದೆ. ಎಲ್ಲರೂ ಅದನ್ನು ಧರಿಸಿ ಬರಬೇಕು ಜೊತೆಗೆ ಎಲ್ಲಾ ಧರ್ಮದವರು ಅದನ್ನು ಪಾಲಿಸಿಬೇಕಾಗುತ್ತದೆ. ನಮ್ಮ ದೇಶದ ಶಿಕ್ಷಣ ವ್ಯವಸ್ಥೆಯನ್ನು ಯಾರದರೂ ಹಾಳು ಮಾಡಲು ಪ್ರಯತ್ನಪಟ್ಟರೆ ಅದು ದೇಶದ್ರೋಹಕ್ಕೆ ಸಮವಾಗುತ್ತದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಹಿಜಬ್-ಕೇಸರಿ ವಿವಾದದ ಪ್ರಚೋದನಕಾರಿ ವೀಡಿಯೋ ಹರಿಬಿಟ್ಟ ಕಿಡಿಗೇಡಿಗಳು: ಪ್ರಕರಣ ದಾಖಲು

    ಹಿಜಬ್ ಹಾಗೂ ಕೇಸರಿ ಶಾಲು ವಿವಾದವನ್ನು ಯಾವುದೇ ಧರ್ಮದವರು, ಯಾವುದೇ ರಾಜಕೀಯ ಪಕ್ಷದವರು ಬಳಸಿಕೊಂಡರೆ ದೇಶದ್ರೋಹವಾಗುತ್ತದೆ. ಅತಿ ಹೆಚ್ಚು ಜನಸಂಖ್ಯೆ ಇರುವಂತಹ ದೇಶ ಮುಂದೆ ಬರುತ್ತಿದೆ ಎನ್ನುವುದಾದರೆ ಅದು ಮಕ್ಕಳ ಶಿಕ್ಷಣದಿಂದ ಮಾತ್ರವಾಗಿದೆ. ದೇಶಕ್ಕೆ ಮಾರಕವಾಗದಂತೆ ಸರ್ಕಾರದ ನಿಯಮ ಪಾಲಿಸಿ ಎಂದು ಸಲಹೆ ನೀಡಿದರು. ಇದನ್ನೂ ಓದಿ:  ಮಕ್ಕಳ ಭವಿಷ್ಯಕ್ಕೆ ನಾವೇ ಕೊಳ್ಳಿ ಇಟ್ಟರೆ ಹೇಗೆ: ಸಭಾಪತಿ ಹೊರಟ್ಟಿ

  • ಮಂಡ್ಯ ಕೋವಿಡ್ ಕೇರ್ ಸೆಂಟರ್ ವಿಚಾರಕ್ಕೆ ಶಾಸಕ, ಸಚಿವರ ಮಧ್ಯೆ ಜಟಾಪಟಿ

    ಮಂಡ್ಯ ಕೋವಿಡ್ ಕೇರ್ ಸೆಂಟರ್ ವಿಚಾರಕ್ಕೆ ಶಾಸಕ, ಸಚಿವರ ಮಧ್ಯೆ ಜಟಾಪಟಿ

    ಮಂಡ್ಯ: ಕೋವಿಡ್ ಕೇರ್ ಸೆಂಟರ್ ನಲ್ಲಿ ಮೂಲಭೂತ ಸೌಕರ್ಯದ ವಿಚಾರಕ್ಕೆ ಸಂಬಂಧಿಸಿ ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಹಾಗೂ ಸಚಿವ ನಾರಾಯಣಗೌಡ ನಡುವೆ ಜಟಾಪಟಿ ನಡೆದಿದೆ.

    ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು ಕೊರೊನಾ ವಿಚಾರಕ್ಕೆ ಸಂಬಂಧಿಸಿ ಸಚಿವರ ವಿರುದ್ಧ ವಾಗ್ದಾಳಿ ನಡಸಿದ್ದರು. ಇದಕ್ಕೆ ತಿರಗೇಟು ನೀಡಿದ ಸಚಿವ ನಾರಾಯಣಗೌಡ ಅವರು, ಒಬ್ಬ ಶಾಸಕನಾಗಿ ಏನೇನು ಕೆಲಸ ಮಾಡಬೇಕು ಎಂದು ಟ್ರೈನಿಂಗ್ ತೆಗೆದುಕೊಳ್ಳಲಿ. ನಾನು 3 ಬಾರಿ ಗೆದ್ದಿದ್ದೀನಿ ಎಂದರೆ 15 ವರ್ಷದ ಅನುಭವ ಇದೆ. ಅನುಭವನೂ ಕೌಂಟ್ ಆಗುತ್ತದೆ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು. ಕೋವಿಡ್ ಹಣ ಲೂಟಿ ಮಾಡಿದರೇ ಅದಕ್ಕೆ ಸಾಕ್ಷಿ ಕೊಡಿ. ನನ್ನ ಬಗ್ಗೆ ಟೀಕೆ ಮಾಡಿದರೆ ಅಕ್ರಮ ಗಣಿಗಾರಿಕೆ ಬಗ್ಗೆ ಮಾತನಾಡಬೇಕಾಗುತ್ತದೆ. ನನ್ನ ಮೇಲೆ ಕೊಚ್ಚೆ ಹಾರಿಸಿದರೆ ನಿಮ್ಮ ಮೇಲಿನ ಆರೋಪದ ಬಗ್ಗೆ ಮಾತಾಡುತ್ತೇನೆ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯಗೆ ಖಡಕ್ ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಪ್ರತಿಯೊಬ್ಬರಿಗೂ ಓಮಿಕ್ರಾನ್‌ ಹರಡುತ್ತೆ, ಬೂಸ್ಟರ್‌ನಿಂದಲೂ ಅದನ್ನು ತಡೆಯಲು ಸಾಧ್ಯವಿಲ್ಲ: ICMR ವೈದ್ಯ

    ನಿನ್ನೆ ಸುದ್ದಿಗಾರರೊಂದಿಗೆ ಶಾಸಕ ರವೀಂದ್ರ ಶ್ರೀಕಂಠಯ್ಯ ಮಾತನಾಡಿ, ನಾರಾಯಣಗೌರ ಮನೆಯಲ್ಲಿ 50 ಮಂದಿ ಒಂದೇ ಬಾತ್ ರೂಂ ಬಳಸುತ್ತಾರಾ?. ಮಂಡ್ಯ ಜಿಲ್ಲೆಯಲ್ಲಿ ಕೋವಿಡ್ ವೈಫಲ್ಯ ಎದ್ದು ಕಾಣುತ್ತಿದೆ. ಸಚಿವ ನಾರಾಯಣ ಗೌಡರು 3 ಬಾರಿ ಶಾಸಕರಾಗಿದ್ದಾರೆ. ಆದರೆ ಅರ್ಹತೆ ಮೇಲೆ ಗೆಲ್ಲುವುದು ಬೇರೆ, ಅದೃಷ್ಟದ ಮೇಲೆ ರಾಜಕಾರಣ ಮಾಡೋದೇ ಬೇರೆಯಾಗಿದೆ. ಅವರು ಮೇಲ್ಮನೆಯಲ್ಲಿ ಸಚಿವರ ಯೋಗ್ಯತೆ ಹರಾಜು ಹಾಕಿದ್ದಾರೆ. ನಾರಾಯಣಗೌಡ ಮಂಡ್ಯ ಜಿಲ್ಲೆಯ ಮರ್ಯಾದೆ ತೆಗೆದಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದರು. ಇದನ್ನೂ ಓದಿ: ಮುಗಿಯದ ಕೇಸರಿ ಶಲ್ಯ ವಿವಾದ – ಠಾಣೆ ಮೆಟ್ಟಿಲೇರಿದ ವಿದ್ಯಾರ್ಥಿಗಳ ಗಲಾಟೆ

  • ಕೋವಿಡ್ ನಿರ್ವಹಣೆಯಲ್ಲಿ ವೈಫಲ್ಯ ಎದ್ದು ಕಾಣುತ್ತಿದೆ: ರವೀಂದ್ರ ಶ್ರೀಕಂಠಯ್ಯ

    ಕೋವಿಡ್ ನಿರ್ವಹಣೆಯಲ್ಲಿ ವೈಫಲ್ಯ ಎದ್ದು ಕಾಣುತ್ತಿದೆ: ರವೀಂದ್ರ ಶ್ರೀಕಂಠಯ್ಯ

    ಮಂಡ್ಯ: ಕೋವಿಡ್ ನಿರ್ವಹಣೆಯಲ್ಲಿ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಮಂಡ್ಯ ಜಿಲ್ಲಾಡಳಿತದ ವಿರುದ್ಧ ಶ್ರೀರಂಗಪಟ್ಟಣದ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಓಂ ಶಕ್ತಿಯ ಯಾತ್ರೆಗೆ ಹೋದ 112 ಜನಕ್ಕೆ ಕೊರೊನಾ ಪಾಸಿಟಿವ್ ಆಗಿದೆ. ಅವರಿಗೆ ಮೂಲಭೂತ ಸೌಕರ್ಯ ಒದಗಿಸಿಲ್ಲ. ಅನಾಗರಿಕ ನಡುವಳಿಕೆಯಂತೆ ಜಿಲ್ಲಾಡಳಿತ ನಡೆದುಕೊಳ್ಳುತ್ತಿದೆ. ಡಿಸಿಗೆ ಕರೆ ಮಾಡಿದರೆ, ಬೇಜಾವಬ್ದಾರಿತನದ ಉತ್ತರ ಕೊಡುತ್ತಿದ್ದಾರೆ. ಮಂಡ್ಯದಲ್ಲಿ ಜಿಲ್ಲಾಡಳಿತ ಇಷ್ಟರ ಮಟ್ಟಿಗೆ ಕೆಟ್ಟಿದೆ ಎನ್ನುವ ಅರಿವು ನನಗೆ ಇರಲಿಲ್ಲ. ಅಧಿಕಾರಿಗಳ ಜೊತೆ ಸಭೆ ಮಾಡಿಕೊಂಡು ಕುಳಿತ್ತಿದ್ದಾರೆ, ಅವರಿಗೆ ಬಡವರ ಕಷ್ಟ ಗೊತ್ತಾಗುತ್ತಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಕಾಂಗ್ರೆಸ್‍ನವ್ರು ರೈಲು, ಬಸ್ ಯಾವುದಲ್ಲಾದ್ರೂ ಹೋಗ್ಲಿ, ಆದ್ರೆ ಸಂದರ್ಭ ನೋಡಿ ಪ್ರತಿಭಟನೆ ಮಾಡ್ಲಿ: ಸುಧಾಕರ್

    ಈಗಾಗಲೇ ಚೀಫ್ ಸೆಕ್ರೆಟರಿ ಜೊತೆ ಕರೆ ಮಾಡಿ ಮಾತನಾಡಿದ್ದೇನೆ. ಶ್ರೀರಂಗಪಟ್ಟಣದ ಜಿಲ್ಲಾಡಳಿತ ಅವ್ಯವಸ್ಥೆಯಿಂದ ಕೂಡಿದೆ, ಸರ್ಕಾರ ಇದರ ಕಡೆಗೆ ಗಮನ ಹರಿಸುತ್ತಿಲ್ಲ. ಈ ಅನಾಹುತಕ್ಕೆ ಸರ್ಕಾರವೇ ಕಾರಣವಾಗುತ್ತೆ. ಶ್ರೀರಂಗಪಟ್ಟಣದಿಂದ ನೂರಾರು ಬಸ್‍ಗಳು ಓಂ ಶಕ್ತಿಗೆ ಹೊಗುತ್ತಿದ್ದಾರೆ. ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತ ತಡೆಯುವ ಕೆಲಸ ಮಾಡುತ್ತಿಲ್ಲ. ಯಾತ್ರೆಯಿಂದ ಬಂದವರನ್ನ ಡೈವರ್ಟ್ ಮಾಡಿ, ಟೆಸ್ಟ್ ಮಾಡಿ ಕ್ವಾರಂಟೈನ್ ಮಾಡಲು ಸೂಚಿಸಿದ್ದೇನೆ ಎಂದರು. ಇದನ್ನೂ ಓದಿ: ಕಟೀಲ್, ಸಿದ್ದರಾಮಯ್ಯಗೆ ಕಂಟಕವಾಗ್ತಾರೆ: ಕೋಟ ಶ್ರೀನಿವಾಸ ಪೂಜಾರಿ

    ಜಿಲ್ಲಾಡಳಿತ ಒಟ್ಟಾರೆ ಕೋವಿಡ್ ನಿಯಂತ್ರಣದಲ್ಲಿ ವಿಫಲವಾಗಿದೆ. ಸರ್ಕಾರ ಗಂಭೀರವಾಗಿ ಪರಿಗಣಿಸದಿದ್ದರೆ ದೊಡ್ಡ ಹೋರಾಟ ಪ್ರಾರಂಭವಾಗುತ್ತೆ. ನೆಪಕ್ಕೆ ಮಾತ್ರ ಕೋವಿಡ್ ಹೆಸರು ತೆಗೆದುಕೊಳ್ಳುದ್ದಾರಯೇ? ಅಥವಾ ಜನರನ್ನು ಬದುಕಿಸಬೇಕು ಅಂತಾ ಮಾಡುತ್ತಿದ್ದಾರೆ ಅನ್ನೊದು ಗೊತ್ತಾಗುತ್ತಿಲ್ಲ ಎಂದು ಜಿಲ್ಲಾಡಳಿತ ವಿರುದ್ಧ ದೊಡ್ಡ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

  • ಸುಮಲತಾ ಅಂಬರೀಶ್ ಯಾವ ಕೆಲಸವನ್ನು ಮಾಡುತ್ತಿಲ್ಲ: ರವೀಂದ್ರ ಶ್ರೀಕಂಠಯ್ಯ

    ಸುಮಲತಾ ಅಂಬರೀಶ್ ಯಾವ ಕೆಲಸವನ್ನು ಮಾಡುತ್ತಿಲ್ಲ: ರವೀಂದ್ರ ಶ್ರೀಕಂಠಯ್ಯ

    ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಸಂಸದರು ಮಾಡುವ ಯಾವ ಕೆಲಸವನ್ನು ಮಾಡುತ್ತಿಲ್ಲ, ಬೇಡವಾದ ಕೆಲಸವನ್ನು ಮಾಡಿಕೊಂಡು ನಿಂತಿದ್ದಾರೆ ಎಂದು ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ದೂರಿದ್ದಾರೆ.

    ಮಂಡ್ಯದಲ್ಲಿ ಮಾತನಾಡಿದ ಅವರು, ಸುಮಲತಾ ಅವರು ಮಾಡಬೇಕಾದ ಯಾವುದೇ ಕೆಲಸವನ್ನು ಸರಿಯಾಗಿ ಮಾಡುತ್ತಿಲ್ಲ. ಬೇಡವಾದ ವಿಚಾರವನ್ನು ಎತ್ತಿಕೊಂಡು ಕೆಆರ್‌ಎಸ್‌ ಉಳಿಸುತ್ತೀನಿ ಎಂದು ಹೋಗಿದ್ದಾರೆ. ಕೆಆರ್‌ಎಸ್‌ ಉಳಿಸೋಕೆ ಅಳಿದು ಹೋಗಿರೋದು ಏನು? ಡ್ಯಾಂ ಏನು ಆಗಿಲ್ಲ ಸುರಕ್ಷಿತವಾಗಿ ಇದೆ. ಸಾರ್ವಜಕರಲ್ಲಿ ಅನಾವಶ್ಯಕವಾಗಿ ಗೊಂದಲ ಉಂಟುಮಾಡುತ್ತಿದ್ದಾರೆ ಎಂದಿದ್ದಾರೆ.

    ಸಂಸದರಿಂದ ಮಂಡ್ಯ ಜಿಲ್ಲೆಯಲ್ಲಿ ಹಾಹಾಕಾರ ಸೃಷ್ಟಿಯಾಗಿದೆ. ಗಣಿಗಾರಿಕೆ ಸ್ಥಗಿತಗೊಂಡಿರುವುದರಿಂದ ಜಿಲ್ಲೆಯಲ್ಲಿ ಆಗಬೇಕಾದ ಅಭಿವೃದ್ಧಿ ಕೆಲಗಳಿಗೆ ಕಚ್ಚಾ ವಸ್ತುಗಳು ಪೂರೈಕೆ ಆಗುತ್ತಿಲ್ಲ. ಜನ ಸಾಮಾನ್ಯರಿಗೆ ಮನೆ ಕಟ್ಟಲು ಕಲ್ಲು, ಜೆಲ್ಲಿ, ಎಂ ಸ್ಯಾಂಡ್ ಸಿಗುತ್ತಿಲ್ಲ, ದುಪ್ಪಟ್ಟು ಹಣಕೊಟ್ಟು ಕೊಳ್ಳುವ ಸ್ಥಿತಿ ಜಿಲ್ಲೆಯಲ್ಲಿ ನಿರ್ಮಾಣವಾಗಿದೆ. ಯಡಿಯೂರಪ್ಪ ಅವರು ಸಿಎಂ ಆಗಿದ್ದ ವೇಳೆ ಅಕ್ರಮ ಗಣಿಗಾರಿಕೆಯನ್ನು ಸಕ್ರಮ ಮಾಡಬೇಕೆಂದು ಹೇಳಿದರು. ಆದರೆ ಅಧಿಕಾರಿಗಳು ರಾಜ್ಯಕ್ಕೆ ಒಂದು ಜಿಲ್ಲೆಗೆ ಒಂದು ಕಾನೂನು ಎಂಬಂತೆ ವರ್ತನೆ ಮಾಡುತ್ತಿದ್ದಾರೆ ಇದರಿಂದ ಜನರು ಆಕ್ರೋಶಗೊಂಡಿದ್ದಾರೆ ಎಂದರು.  ಇದನ್ನೂ ಓದಿ:  ಮುಳುಗಡೆಯಾಗಲಿದೆ ಮಂಗಳೂರು, ಮುಂಬೈ, ಚೆನ್ನೈ

    ಸುಮಲತಾ ಅಂಬರೀಶ್ ಅವರು ಬೇಡಾವಾದ ಕೆಲಸ ಬಿಟ್ಟು ಅವರ ಕೆಲಸವನ್ನು ಸರಿಯಾಗಿ ಮಾಡಬೇಕು. ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಮಂಡ್ಯ ಜಿಲ್ಲೆಯ ವ್ಯಾಪ್ತಿಯಲ್ಲಿ ಎಷ್ಟು ಅಂಡರ್ ಪಾಸ್ ಬೇಕು ಎಂದು ಗಡ್ಕರಿ ಅವರ ಬಳಿ ಮಾತನಾಡಲಿ. ಜಿಲ್ಲೆಯಲ್ಲಿ ಸಂಸದರ ಕೆಲಸವನ್ನು ಶಾಸಕರು ಮಾಡಬೇಕಾದಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಸಂಸದೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

  • ಕೊರೊನಾ ನಡುವೆಯೂ ಹಾಲಿ-ಮಾಜಿ ಶಾಸಕರ ಬೆಂಬಲಿಗರ ಗುದ್ದಾಟ

    ಕೊರೊನಾ ನಡುವೆಯೂ ಹಾಲಿ-ಮಾಜಿ ಶಾಸಕರ ಬೆಂಬಲಿಗರ ಗುದ್ದಾಟ

    ಮಂಡ್ಯ: ರಾಜ್ಯದಲ್ಲಿ ದಿನೇ ದಿನೇ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸದ ನಡುವೆಯೂ ಹಾಲಿ ಮತ್ತು ಮಾಜಿ ಶಾಸಕರ ಬೆಂಬಲಿಗರ ಮಧ್ಯೆ ಗುದ್ದಾಟ ನಡೆದಿದೆ.

    ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಈ ಘಟನೆ ನಡೆದಿದೆ. ಶ್ರೀರಂಗಪಟ್ಟಣ ತಾಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್‍ನ ವಾಣಿಜ್ಯ ಮಳಿಗೆಗಳ ಉದ್ಘಾಟನೆ ವೇಳೆ ಹಾಲಿ ಮತ್ತು ಮಾಜಿ ಶಾಸಕರ ಬೆಂಬಲಿಗರ ಮಧ್ಯೆ ಗುದ್ದಾಟ ನಡೆದಿದೆ.

    ಉದ್ಘಾಟನೆಗೆ ಶಾಸಕ ರವೀಂದ್ರ ಶ್ರೀಕಂಠಯ್ಯರನ್ನ ಆಹ್ವಾನಿಸದೆ ಮಾಜಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡರನ್ನ ಆಹ್ವಾನಿಸಿದ್ದಕ್ಕೆ ರವೀಂದ್ರ ಶ್ರೀಕಂಠಯ್ಯ ಬೆಂಬಲಿಗರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವೇಳೆ ಇಬ್ಬರು ಬೆಂಬಲಿಗರ ನಡುವೆ ವಾಗ್ವಾದ ಮತ್ತು ಮಾತಿನ ಚಕಮಕಿ ನಡೆದಿದೆ.

    ಅಲ್ಲದೇ ಕೈ ಕೈ ಮಿಲಾಯಿಸುವ ಹಂತಕ್ಕೆ ಬೆಂಬಲಿಗರು ಹೋಗಿದ್ದರು. ಇದರಿಂದ ಕೊರೊನಾ ಅಟ್ಟಹಾಸದ ನಡುವೆಯೂ ಮಾಸ್ಕ್, ಸಾಮಾಜಿಕ ಅಂತರವೂ ಇಲ್ಲದೆ ಬೆಂಬಲಿಗರು ವಾಗ್ವಾದ ಮಾಡಿದ್ದಾರೆ ಎಂದು ತಿಳಿದುಬಂದಿದೆ.

  • ಜೆಡಿಎಸ್‍ನ ಮತ್ತೆರಡು ವಿಕೆಟ್ ಪತನ – ಬಿಜೆಪಿಗೆ ಶಾಸಕರ ಜಂಪ್?

    ಜೆಡಿಎಸ್‍ನ ಮತ್ತೆರಡು ವಿಕೆಟ್ ಪತನ – ಬಿಜೆಪಿಗೆ ಶಾಸಕರ ಜಂಪ್?

    ಮಂಡ್ಯ: ಉಪಚುನಾವಣೆಯಲ್ಲಿ ಮೊದಲ ಬಾರಿಗೆ ಜಿಲ್ಲೆಯ ಕೆ.ಆರ್.ಪೇಟೆ ಕ್ಷೇತ್ರದ ಮೂಲಕ ಖಾತೆ ತೆರೆದಿದ್ದ ಬಿಜೆಪಿ ಸದ್ಯ ಜಿಲ್ಲೆಯಲ್ಲಿ ಭದ್ರ ಬುನಾದಿ ನಿರ್ಮಿಸುವತ್ತ ಸಾಗಿದೆ. ಬಿಜೆಪಿ ಇದೀಗ ಜಿಲ್ಲೆಯ ಮತ್ತೆರಡು ಕ್ಷೇತ್ರಗಳಲ್ಲಿ ಕಮಲ ಅರಳಿಸಲು ಮುಂದಾದಂತೆ ಕಾಣುತ್ತಿದೆ. ಈ ನಿಟ್ಟಿನಲ್ಲಿ ಜೆಡಿಎಸ್ ಶಾಸಕರಾದ ನಾಗಮಂಗಲದ ಸುರೇಶ್‍ಗೌಡ ಹಾಗೂ ಶ್ರೀರಂಗಪಟ್ಟಣದ ರವೀಂದ್ರ ಶ್ರೀಕಂಠಯ್ಯ ಅವರು ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆಗಳ ಕುರಿತ ಚರ್ಚೆ ಜಿಲ್ಲೆಯಲ್ಲಿ ದಟ್ಟವಾಗಿ ಕಾಣುತ್ತಿದೆ.

    ಜೆಡಿಎಸ್ ಭದ್ರ ಕೋಟೆಯಾಗಿರುವ ಮಂಡ್ಯ ಜಿಲ್ಲೆಯನ್ನು ಸಂಪೂರ್ಣವಾಗಿ ಬಿಜೆಪಿ ಕೋಟೆಯನ್ನಾಗಿ ಮಾಡಿಕೊಳ್ಳಲು ಬಿಜೆಪಿ ಚಿಂತನೆ ನಡೆಸಿದೆ ಎನ್ನಲಾಗಿದೆ. ಪರಿಣಾಮ ರಾಜ್ಯ ಬಿಜೆಪಿ ಸರ್ಕಾರ ಸೇಫ್ ಆದರೂ ಮತ್ತೊಂದು ಆಪರೇಷನ್ ಕಮಲ ಮಾಡಲು ಮಾತುಕತೆ ನಡೆಯುತ್ತಿದೆ ಎಂಬ ಮಾತು ಜಿಲ್ಲೆಯ ರಾಜಕೀಯ ಪಡಸಾಲೆಯಲ್ಲಿ ಕೇಳಿ ಬಂದಿದೆ. ಜೆಡಿಎಸ್‍ನ ಶಾಸಕರಾಗಿರುವ ಸುರೇಶ್‍ಗೌಡ ಮತ್ತು ರವೀಂದ್ರ ಶ್ರೀಕಂಠಯ್ಯ ಇಬ್ಬರು ಕೂಡ ಜೆಡಿಎಸ್‍ಗೆ ಗುಡ್ ಬಾಯ್ ಹೇಳಿ ಬಿಜೆಪಿ ಬಾವುಟ ಹಿಡಿಯಲು ಮನಸ್ಸು ಮಾಡಿದ್ದಾರೆ ಎಂದು ಅವರ ಆಪ್ತ ಮೂಲಗಳು ಹೇಳುತ್ತಿವೆ.

    ಕೆ.ಆರ್.ಪೇಟೆ ಕ್ಷೇತ್ರದಲ್ಲಿ ನಾರಾಯಣಗೌಡ ಅವರ ಗೆಲುವು ನೋಡಿರುವ ಜೆಡಿಎಸ್ ಶಾಸಕರು ತಮ್ಮ ಭವಿಷ್ಯ ಕಟ್ಟಿಕೊಳ್ಳಲು ಇದೇ ಸೂಕ್ತ ಎಂಬ ನಿರ್ಧಾರಕ್ಕೆ ಬಂದಂತೆ ಕಾಣುತ್ತಿದೆ. ಹೀಗಾಗಿ ಬಿಜೆಪಿಗೆ ಸೇರಿ ತಮ್ಮ ರಾಜಕೀಯ ಭವಿಷ್ಯವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ಪಡುತ್ತಿದ್ದಾರೆ ಎನ್ನಲಾಗುತ್ತಿದೆ. ಈ ಹಿಂದೆ ಆಪರೇಷನ್ ಕಮಲ ಆದ ವೇಳೆಯೂ ಈ ಇಬ್ಬರೂ ಬಿಜೆಪಿಗೆ ಹೋಗುತ್ತಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಆದರೆ ಕಾರಣಾಂತರಗಳಿಂದ ಈ ಇಬ್ಬರೂ ಬಿಜೆಪಿಗೆ ಹೋಗಲಿಲ್ಲ, ಈಗ ಖಂಡಿತವಾಗಿಯೂ ಹೋಗುತ್ತಾರೆ ಎಂದು ಆಪ್ತ ಮೂಲಗಳು ಹೇಳುತ್ತಿವೆ. ಇಬ್ಬರು ಶಾಸಕರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಸಿಎಂ ಯಡಿಯೂರಪ್ಪ ಅವರು ಮನಸ್ಸು ಮಾಡಿದ್ದು, ಸಚಿವ ಸಂಪುಟ ವಿಸ್ತರಣೆ ಬಳಿಕ 2ನೇ ಆಪರೇಷನ್‍ಗೆ ಕೈ ಹಾಕುವ ಸಾಧ್ಯತೆ ಹೆಚ್ಚಿವೆ.

    ಈ ಕುರಿತು ಬಿಜೆಪಿ ಸೇರುವ ಬಗ್ಗೆ ಮಾತನಾಡಿದ್ದ ಸುರೇಶ್ ಗೌಡ ಅವರು ಈ ಸುದ್ದಿಯನ್ನು ಅಲ್ಲಗೆಳೆದಿದ್ದರು. ಅಲ್ಲದೇ ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಎಲ್ಲರೊಂದಿಗೂ ಸ್ನೇಹದಿಂದ ಇರುವುದಾಗಿ ಹೇಳಿದ್ದರು. ನನಗೆ ಆಫರ್ ಬಂದಿತ್ತು ಎಂದಷ್ಟೇ ನಾನು ಹೇಳಿದ್ದೇನೆ. ಆದರೆ ಪಕ್ಷ ಬಿಡುವುದಿಲ್ಲ, ಮೈತ್ರಿ ಸರ್ಕಾರ ಬಿದ್ದು ಹೋದ ಬಳಿಕ ನಾವ್ಯಾಕೆ ಬಿಜೆಪಿಗೆ ಹೋಗಲಿಲ್ಲ ಅನಿಸುತ್ತಿತ್ತು. ಆದರೆ ಇದೀಗ ಅನರ್ಹ ಶಾಸಕರ ಬಗ್ಗೆ ಆತ್ಮಾವಲೋಕನ ಮಾಡಿಕೊಂಡರೆ ನಾವು ತೆಗೆದುಕೊಂಡ ನಿರ್ಧಾರವೇ ಸರಿ ಎಂದನಿಸುತ್ತಿದೆ ಎಂದು ಸುರೇಶ್ ಗೌಡ ಹೇಳಿದ್ದರು. ಆದರೆ ಕೆಲ ದಿನಗಳ ಹಿಂದೆಯಷ್ಟೇ ಕ್ಷೇತ್ರಕ್ಕೆ ಭೇಟಿ ನೀಡಿದ್ದ ಬಿಎಸ್‍ವೈ ಅವರ ಕಾಲಿಗೆ ಸುರೇಶ್ ಗೌಡ ಅವರು ನಮಸ್ಕರಿಸಿ ಅಚ್ಚರಿ ಮೂಡಿಸಿದ್ದರು.

    ಜೆಡಿಎಸ್ ಸೇರ್ಪಡೆಯಾಗುವ ಸುದ್ದಿ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ರವೀಂದ್ರ ಶ್ರೀಕಂಠಯ್ಯ ಅವರು, ಈ ಬಾರಿಯ ಚುನಾವಣೆಯಲ್ಲಿ ನಾನು ಎಚ್‍ಡಿಕೆ ಅವರ ನೇತ್ರತ್ವದಲ್ಲಿ ಗೆದ್ದು ಬಂದಿದ್ದೇನೆ. ಯಾವುದೇ ಕಾರಣಕ್ಕೂ ನಾನು ಶಾಸಕ ಸ್ಥಾನ ಕೊನೆಯಾಗುವ ಅವಧಿಯವರೆಗೂ ಪಕ್ಷ ಬಿಡುವ ನಿರ್ಧಾರ ಮಾಡಲ್ಲ. ಕುಮಾರಸ್ವಾಮಿ ಅವರ ಮನಸ್ಸಿಗೆ ನೋವುಂಟು ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

  • ಸುಮಲತಾ ಕಾಂಗ್ರೆಸ್ ಅಭ್ಯರ್ಥಿ: ರವೀಂದ್ರ ಶ್ರೀಕಂಠಯ್ಯ

    ಸುಮಲತಾ ಕಾಂಗ್ರೆಸ್ ಅಭ್ಯರ್ಥಿ: ರವೀಂದ್ರ ಶ್ರೀಕಂಠಯ್ಯ

    – ಮಾತಿನ ಭರದಲ್ಲಿ ಶ್ರೀಕಂಠಯ್ಯ ಎಡವಟ್ಟು
    – ಸುಮಲತಾ ಪರ ಪ್ರಚಾರ ಮಾಡೋರಲ್ಲಿ ಯಾರು ಜಿಲ್ಲೆಗಾಗಿ ದುಡಿದಿದ್ದಾರೆ?

    ಮಂಡ್ಯ: ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು ಮಾತಿನ ಭರದಲ್ಲಿ ಸುಮಲತಾ ಅಂಬರೀಶ್ ಅವರನ್ನು ಕಾಂಗ್ರೆಸ್ ಅಭ್ಯರ್ಥಿ ಎಂದು ಹೇಳಿ ಎಡವಟ್ಟು ಮಾಡಿಕೊಂಡಿದ್ದಾರೆ.

    ಜಿಲ್ಲೆಯ ಶ್ರೀರಂಗಪಟ್ಟಣ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಶಾಸಕರು, “ಸುಮಲತಾ ಅವರು ಕಾಂಗ್ರೆಸ್ ಅಭ್ಯರ್ಥಿ” ಎಂದು ಹೇಳಿದರು. ತಕ್ಷಣವೇ ಕಾರ್ಯಕರ್ತರು, ಮೈತ್ರಿ ಪಕ್ಷಗಳ ಸ್ಥಳೀಯ ಮುಖಂಡರು “ಅಲ್ಲ, ಅಲ್ಲ” ಎಂದು ಕೂಗಿದರು. ಶಾಸಕರು ಕೂಡಲೇ ಎಚ್ಚೆತ್ತುಕೊಂಡು ತನ್ನ ಹೇಳಿಕೆಯನ್ನು ಸರಿಪಡಿಸಿಕೊಂಡು,”ಸುಮಲತಾ ಅವರು ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ” ಎಂದರು.

    ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಅವರನ್ನು ಸ್ಪರ್ಧೆಗೆ ಇಳಿಸುವ ಪ್ರಸ್ತಾವನೆ ಇರಲಿಲ್ಲ. ನಮ್ಮ ಒತ್ತಾಯದ ಮೇರೆಗೆ ಹಾಗೂ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ನಿಖಿಲ್ ಅವರನ್ನು ಚುನಾವಣಾ ಕಣಕ್ಕೆ ಇಳಿಸಿದ್ದಾರೆ ಎಂದು ಸ್ಪಷ್ಟನೆ ನೀಡಿದರು.

    ಅಂಬರೀಶ್ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕರು, ಮಾಜಿ ಸಚಿವ ಅಂಬರೀಶ್ ಅವರು ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತಂದಿದ್ದಾರೆ. ಆದರೂ ಮೂರು ಬಾರಿ ಕಾಂಗ್ರೆಸ್ಸಿನ ಠೇವಣಿ ಕಳೆದರು. ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಭವಿಷ್ಯ ಧೂಳೀಪಟವಾಯಿತು ಎಂದು ವ್ಯಂಗ್ಯವಾಡಿದರು.

    ಮಧ್ಯರಾತ್ರಿ ದುಡ್ಡು ಪಡೆದವರನ್ನು ನೀವು ನಂಬಿದ್ದೀರಿ. ಪ್ರಾಮಾಣಿಕ ಕಾಂಗ್ರೆಸ್ಸಿಗರನ್ನು ನೀವು ಧೂಳೀಪಟ ಮಾಡುತ್ತಾ ಇದ್ದೀರಿ. 30 ವರ್ಷಗಳ ಕಾಲ ಕಾಂಗ್ರೆಸ್‍ನಲ್ಲಿದ್ದು ದ್ರೋಹ ಮಾಡುತ್ತಿರುವಿರಿ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಉಪವಾಸ ಕುಳಿತ್ತಿದ್ದರಿಂದ ಕಾವೇರಿ ಉಳಿಯಿತು. ಸಂಕಷ್ಟ ಪರಿಸ್ಥಿತಿಯಲ್ಲಿ ಇದ್ದೇವೆ. ಜಿಲ್ಲೆಯ ಜನರಿಗೆ ತೊಂದರೆ ಕೊಟ್ಟು ರಾಜಕಾರಣ ಮಾಡಬೇಡಿ. ನಿಮ್ಮ ಪರ ಪ್ರಚಾರ ಮಾಡುತ್ತಿರುವವರಲ್ಲಿ ಯಾರು ಜಿಲ್ಲೆಯ ಅಭಿವೃದ್ಧಿಗೆ ದುಡಿದಿದ್ದಾರೆ? ಪ್ರಚಾರಕ್ಕೆ ಸಿನಿಮಾದವರನ್ನು ಕರೆದುಕೊಂಡು ಬಂದಿದ್ದೀರಿ. ಅಭಿವೃದ್ಧಿ ವಿಚಾರವಾಗಿ ಮಾತನಾಡುವ ನೈತಿಕತೆ ನಿಮಗಿಲ್ಲ ಎಂದು ಸುಮಲತಾ ಅಂಬರೀಶ್ ವಿರುದ್ಧ ವಾಗ್ದಾಳಿ ನಡೆಸಿದರು.

  • ಮಂಡ್ಯ ಶಾಸಕರಿಗೆ ಉತ್ತಮ ಖಾತೆ ನೀಡಿದ್ದಾರೆ – ಸ್ವಪಕ್ಷದ ಕಾರ್ಯಕರ್ತರಿಗೆ ಶಾಸಕರ ಟಾಂಗ್

    ಮಂಡ್ಯ ಶಾಸಕರಿಗೆ ಉತ್ತಮ ಖಾತೆ ನೀಡಿದ್ದಾರೆ – ಸ್ವಪಕ್ಷದ ಕಾರ್ಯಕರ್ತರಿಗೆ ಶಾಸಕರ ಟಾಂಗ್

    ಮಂಡ್ಯ: ಮುಖ್ಯಮಂತ್ರಿ ಕುಮಾರಸ್ವಾಮಿಯವರು ಜನ ಸೇವೆ ಮಾಡಲು ಮಂಡ್ಯ ಜಿಲ್ಲೆಯ ಶಾಸಕರಿಗೆ ಎರಡು ಉತ್ತಮ ಖಾತೆ ನೀಡಿದ್ದಾರೆ ಎಂದು ಹೇಳುವ ಮೂಲಕ, ಸಣ್ಣನೀರಾವರಿ ಖಾತೆ ವಿರೋಧಿಸಿ ಸಚಿವ ಪುಟ್ಟರಾಜು ಪರ ಪ್ರತಿಭಟನೆ ಮಾಡಿದ ಸ್ವಪಕ್ಷದ ಕಾರ್ಯಕರ್ತರಿಗೆ ಶಾಸಕ ರವೀಂದ್ರ ಶ್ರೀಕಂಠಯ್ಯ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

    ಇಂದು ಶ್ರೀರಂಗಪಟ್ಟಣದ ತಾಲ್ಲೂಕು ಪಂಚಾಯಿತಿಯಲ್ಲಿ ತಮ್ಮ ನೂತನ ಕಚೇರಿಯಲ್ಲಿ ಪೂಜೆ ಸಲ್ಲಿಸಿ ಮಾತನಾಡಿದ ಶಾಸಕ ರವೀಂದ್ರ ಶ್ರೀಕಂಠಯ್ಯ ಜಿಲ್ಲೆಯ ಏಳೂ ಶಾಸಕರು ಒಗ್ಗಟ್ಟಾಗಿದ್ದೇವೆ ಎಂದು ತಿಳಿಸಿದರು.

    ಜಿಲ್ಲೆಯಲ್ಲಿ ದೇವೇಗೌಡರ ಸಂಬಂಧಿ ಸಾರಿಗೆ ಸಚಿವ ಡಿಸಿ ತಮ್ಮಣ್ಣ ಮತ್ತು ಸಣ್ಣ ನೀರಾವರಿ ಸಚಿವ ಸಿಎಸ್ ಪುಟ್ಟರಾಜು ನಡುವೆ ನಡೆಯುತ್ತಿರುವ ಮಂಡ್ಯ ಜಿಲ್ಲಾ ಉಸ್ತುವಾರಿ ಸಂಬಂಧಿಸಿದ ಹಗ್ಗ ಜಗ್ಗಾಟದ ಬಗ್ಗೆ ಮಾತನಾಡಿ, ಜಿಲ್ಲೆಯ ನಾಯಕರಲ್ಲಿ ಯಾವ ಗೊಂದಲವೂ ಇಲ್ಲ. ಪಕ್ಷದ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲ ಬದ್ಧ ಎಂದು ತಿಳಿಸಿದರು.

    ಇದೇ ವೇಳೆ ಪುಟ್ಟರಾಜುಗೆ ನೀಡಿರುವ ಖಾತೆ ಒಳ್ಳೆಯ ಖಾತೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಕುಮಾರಸ್ವಾಮಿ ತಾವು ಕೊಟ್ಟ ಮಾತಿನಂತೆ ಸಾಲ ಮನ್ನಾ ಮಾಡುತ್ತಾರೆ ಎಂದು ಇದೇ ಸಂದರ್ಭದಲ್ಲಿ ರವೀಂದ್ರ ಶ್ರೀಕಂಠಯ್ಯ ವಿಶ್ವಾಸ ವ್ಯಕ್ತಪಡಿಸಿದರು.