Tag: Ravindra Srikanthaiah

  • ಜನರ ಬಳಿ ಸುಲಿಗೆ ಮಾಡ್ಕೊಂಡು ನಿಂತಿದ್ದೀರಾ?- ಅಧಿಕಾರಿಗಳಿಗೆ ರವೀಂದ್ರ ಶ್ರೀಕಂಠಯ್ಯ ಕ್ಲಾಸ್

    ಜನರ ಬಳಿ ಸುಲಿಗೆ ಮಾಡ್ಕೊಂಡು ನಿಂತಿದ್ದೀರಾ?- ಅಧಿಕಾರಿಗಳಿಗೆ ರವೀಂದ್ರ ಶ್ರೀಕಂಠಯ್ಯ ಕ್ಲಾಸ್

    ಮಂಡ್ಯ: ಜನರ ಬಳಿ ಸುಲಿಗೆ ಮಾಡಿಕೊಂಡು ನಿಂತಿದ್ದೀರಾ, ಸಂಬಳ ತಗೊಳ್ತೀರಾ ನಿಮಗೆ ಮಾನ ಮರ್ಯಾದೆ ಇಲ್ವಾ ಎಂದು ಸರ್ವೆ ಇಲಾಖೆ ಅಧಿಕಾರಿಗಳನ್ನು ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ.

    ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಸರ್ವೆ ಇಲಾಖೆಯಲ್ಲಿ ಜಮೀನು ಸ್ಕೆಚ್ ಇತರೆ ವಿಷಯಗಳಿಗೆ ತಿಂಗಳಗಟ್ಟಲೆ ಅಲೆಸುವ ಬಗ್ಗೆ ಅಧಿಕಾರಿಗಳ ವಿರುದ್ಧ ರವೀಂದ್ರ ಶ್ರೀಕಂಠಯ್ಯಗೆ ಹಲವು ದಿನಗಳಿಂದ ದೂರು ಕೇಳಿಬಂದಿತ್ತು. ಹೀಗಾಗಿ ರೈತರು ನೀಡಿದ ದೂರಿನ ಬಳಿಕ ಪರಿಶೀಲನೆಗೆ ರವೀಂದ್ರ ಶ್ರೀಕಂಠಯ್ಯ ಇಲಾಖೆಯ ಕಚೇರಿಗೆ ತೆರಳಿದ್ದರು. ಈ ವೇಳೆ ಜನರಿಗೆ ದಾಖಲಾತಿ ನೀಡದೆ ಶಿಥಿಲಗೊಂಡಿವೆ ಎಂದು ಸಿಬ್ಬಂದಿಯೊಬ್ಬರು ಉತ್ತರಿಸುತ್ತಿದ್ದ ಶಾಕರಿಗೆ ಉತ್ತರ ನೀಡುತ್ತಾರೆ. ಇದನ್ನೂ ಓದಿ:  ಹಾಗಲಕಾಯಿಂದ ಮಾಡಿ ರುಚಿಯಾದ ಪಲ್ಯ

    ಉತ್ತರ ನೀಡಿದ ಸರ್ವೆ ಇಲಾಖೆ ಮೇಲ್ವಿಚಾರಕ ಸುರೇಶ್‍ಗೆ ರವೀಂದ್ರ ಶ್ರೀಕಂಠಯ್ಯ ಕ್ಲಾಸ್ ತೆಗೆದುಳ್ಳುತ್ತಾರೆ. ಸಂಬಳ ತಗೊಳ್ತೀರಾ ನಿಮಗೆ ಮಾನ ಮರ್ಯಾದೆ ಇಲ್ವ, ದಾಖಲೆಗಳನ್ನ ನೀವು ಕಳೆದುಕೊಂಡು ಜನರತ್ರ ಸುಲಿಗೆ ಮಾಡ್ತಿದ್ದೀರಾ. ಈ ವೇಳೆ ಸರ್ವೆ ಇಲಾಖೆ ಮೇಲಧಿಕಾರಿಗಳಿಗೂ ಫೋನ್ ಮೂಲಕ ಶಾಸಕರು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ನಾನು ಫುಲ್ ಥ್ರಿಲ್ ಆಗಿದ್ದೇನೆ ಅಂದ್ರು ಡಿಂಪಲ್ ಕ್ವೀನ್ ರಚಿತಾ

    ಜಿಲ್ಲಾ ಕೇಂದ್ರದಲ್ಲಿ ಕುಳಿತು ಝೂಮ್ ಮೀಟ್ ನಲ್ಲೇ ಕಾಲ ಕಳೆಯುತ್ತಿದ್ದೀರಾ..? ದರೋಡೆ ಮಾಡಲು ನಿಮ್ಮ ಸಿಬ್ಬಂದಿಯನ್ನ ಬಿಟ್ಟಿದ್ದೀರಾ..? ನಿಮ್ಮನ್ನ ಬೇರೆ ಕಾನೂನು ಮಾಡಿ ಅಂತಿದ್ದೀವಾ..? ಕಾನೂನು ಏನಿದೆ ಅದನ್ನೇ ಮಾಡಿ. ಸಿಬ್ಬಂದಿಯನ್ನ ದುಡ್ಡಿಗೆ ಬಿಟ್ಟು, ದಲ್ಲಾಳಿ ಮಾಡಿಕೊಂಡಿದ್ದೀರಾ ಎಂದು ಪ್ರಶ್ನೆಗಳ ಸುರಿಮಳೆಗೈದ್ರು. ಮೇಲ್ವಿಚಾರಕ ಸುರೇಶ್ ವಿರುದ್ಧ ಕ್ರಮ ಕೈಗೊಳ್ಳಿ ಎಂದು ರವೀಂದ್ರ ಶ್ರೀಕಂಠಯ್ಯ ಗರಂ ಆದರು.

     

  • ಸುಮಲತಾ ಬೆನ್ನಲ್ಲೇ ಅಕ್ರಮ ಗಣಿಗಳ ಮೇಲೆ ತಹಶೀಲ್ದಾರ್ ದಾಳಿ

    ಸುಮಲತಾ ಬೆನ್ನಲ್ಲೇ ಅಕ್ರಮ ಗಣಿಗಳ ಮೇಲೆ ತಹಶೀಲ್ದಾರ್ ದಾಳಿ

    ಮಂಡ್ಯ: ಸಂಸದೆ ಸುಮಲತಾ ದಾಳಿ ಬೆನ್ನಲ್ಲೇ ಅಕ್ರಮ ಗಣಿಗಳ ಮೇಲೆ ತಹಶೀಲ್ದಾರ್ ದಾಳಿ ಮಾಡಿ ಗಣಿಗಳನ್ನು ಬಂದ್ ಮಾಡಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

    ಶ್ರೀರಂಗಪಟ್ಟಣದ ಚೆನ್ನನಕೆರೆ ಪ್ರದೇಶದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕಲ್ಲು ಕ್ವಾರೆ ಹಾಗೂ ಶ್ರೀರಂಗಪಟ್ಟಣ ಕ್ವಾರೆಗಳ ಮೇಲೆ ತಹಶೀಲ್ದಾರ್ ರೂಪಾ ದಾಳಿ ಮಾಡಿ ಬಂದ್ ಮಾಡಿಸಿದ್ದಾರೆ. ಇದನ್ನೂ ಓದಿ: ಅಕ್ರಮ ಗಣಿಗಾರಿಕೆ ಬಗ್ಗೆ ಸಿಬಿಐ ತನಿಖೆ ಆಗಬೇಕು – ಮಂಡ್ಯ ಸಂಸದೆ ಸುಮಲತಾ ಆಗ್ರಹ

    ಚೆನ್ನನಕೆರೆ ಸಮೀಪದಲ್ಲಿ ಅಕ್ರಮವಾಗಿ ಕಲ್ಲು ಕ್ವಾರೆ ನಡೆಯುತ್ತಿದ್ದು, ಅಕ್ರಮ ಕ್ವಾರೆ ಪ್ರದೇಶಗಳಿಗೆ ಶ್ರೀರಂಗಪಟ್ಟಣ ತಹಶೀಲ್ದಾರ್ ರೂಪ ಪೊಲೀಸರ ಜೊತೆ ದಾಳಿ ನಡೆಸಿ ಅಕ್ರಮ ಕ್ವಾರೆಗಳಿಗೆ ಬೀಗ ಜಡಿದಿದ್ದಾರೆ. ಇತ್ತೀಚೆಗಷ್ಟೇ ಈ ಪ್ರದೇಶಗಳಿಗೆ ಭೇಟಿ ಪರಿಶೀಲನೆ ನಡೆಸಿದ್ದ ಸಂಸದೆ ಸುಮಲತಾ ಅವರು ಅಕ್ರಮ ಕಲ್ಲು ಕ್ವಾರೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದರು. ಇದರ ಬೆನ್ನಲ್ಲೇ ಅಧಿಕಾರಿಗಳು ಅಕ್ರಮ ಕಲ್ಲು ಕ್ವಾರೆಗಳ ಮೇಲೆ ದಾಳಿ ಮಾಡಿದ್ದಾರೆ. ಕಠಿಣ ಕ್ರಮಕ್ಕೆ ಮುಂದಾಗಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸದಂತೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: 19ನೇ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಸ್ವೀಕಾರ

    ಶ್ರೀರಂಗಪಟ್ಟಣ ತಾಲೂಕಿನ ಚೆನ್ನನಕೆರೆ ಮತ್ತು ಹಂಗರಹಳ್ಳಿಯಲ್ಲಿ ನಡೆಯುತ್ತಿದ್ದ ಗಣಿಗಾರಿಕೆ ವೀಕ್ಷಣೆಗೆ ಹೋಗದಂತೆ ಅಡ್ಡಿಪಡಿಸಿದ್ದನ್ನು ನೋಡಿ ಸುಮಲತಾ, ಇದೇನ್ ಭಾರತ-ಪಾಕಿಸ್ತಾನ ಗಡಿನಾ ಎಂದು ಆಘಾತ ವ್ಯಕ್ತಪಡಿಸಿದ್ದರು. ಗಣಿಗಾರಿಕೆಯಿಂದ ಬಿರುಕು ಬಿಟ್ಟಿರುವ ಊರವರ ಮನೆಗಳನ್ನು ನೋಡಿ ಶಾಕ್ ಆಗಿದ್ದರು. ಅಕ್ರಮ ಗಣಿಗಾರಿಕೆ ಬಗ್ಗೆ ಮಾತಾಡುವ ವೇಳೆ ವಿಷಯವನ್ನು ಬೇರೆಡೆಗೆ ತಿರುಗಿಸುವ ಯತ್ನ ಮಾಡಲಾಗ್ತಿದೆ. ಶಾಸಕರಿಗೆ ನಿಮ್ಮ ಕೊಡುಗೆ ಏನು..? ನಿಮ್ಮ ಕಣ್ಣ ಮುಂದೆಯೇ ಇಷ್ಟು ಭ್ರಷ್ಟಾಚಾರ, ಅನ್ಯಾಯ ನಡೆಯುತ್ತಿದ್ದರೂ ಏಕೆ ಸುಮ್ಮನಿದ್ದೀರಿ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯಗೆ ಸುಮಲತಾ ತಿರುಗೇಟು ನೀಡಿದ್ದರು.

    ಮಾಜಿ ಶಾಸಕ ಬಂಡಿಸಿದ್ದೇಗೌಡ ಮಾಲೀಕತ್ವದ ಗಣಿಗಾರಿಕೆಗೂ ಭೇಟಿ ನೀಡುವಂತೆ ಘೋಷಣೆ ಕೂಗಿದರು. ಆ ಬಳಿಕ ಬಂಡಿಸಿದ್ದೇಗೌಡ ಮಾಲೀಕತ್ವದ ಗಣಿಗಾರಿಕೆಗೂ ಸುಮಲತಾ ಭೇಟಿ ನೀಡಿ ಪರಿಶೀಲಿಸಿದ್ದರು.

  • ಅಕ್ರಮ ಕಲ್ಲು ಗಣಿಗಾರಿಕೆಗೆ ಹೆಚ್‍ಡಿಕೆಯೇ ಪ್ರಮುಖ ರೂವಾರಿ: ಎಎಪಿ ಆರೋಪ

    ಅಕ್ರಮ ಕಲ್ಲು ಗಣಿಗಾರಿಕೆಗೆ ಹೆಚ್‍ಡಿಕೆಯೇ ಪ್ರಮುಖ ರೂವಾರಿ: ಎಎಪಿ ಆರೋಪ

    ಬೆಂಗಳೂರು: ರಾಜ್ಯದ ಹಳೇ ಮೈಸೂರು ಭಾಗದ ವಿವಿಧೆಡೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಆಪ್ತರಿಂದ ಭಾರೀ ಪ್ರಮಾಣದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು, ರಾಜ್ಯ ಬಿಜೆಪಿ ಸರ್ಕಾರವು ಇದಕ್ಕೆ ಬೆಂಬಲವಾಗಿ ನಿಂತಿದೆ ಎಂದು ಇಂದಿಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆಮ್ ಆದ್ಮಿ ಪಕ್ಷದ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಆರೋಪಿಸಿದರು.

    ಕೆಆರ್‍ಎಸ್ ನಿರ್ಮಾಣದ ಹಿಂದೆ ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್ ಎಂ. ವಿಶ್ವೇಶ್ವರಯ್ಯ ಮುಂತಾದ ಮಹನೀಯರ ಶ್ರಮವಿದೆ. ಲಕ್ಷ ಎಕರೆಗೂ ಅಧಿಕ ಭೂಮಿಗೆ ಕೆಆರ್‍ಎಸ್ ನೀರುಣಿಸುತ್ತಿದೆ. ಕೆಆರ್‍ಎಸ್ ಸಮೀಪ ಅಕ್ರಮ ಗಣಿಗಾರಿಕೆ ಎಗ್ಗಿಲ್ಲದೇ ನಡೆಯುತ್ತಿದ್ದು, ಇದರಿಂದ ಅಣೆಕಟ್ಟೆ ಒಡೆದು ಹೋದರೆ ಭಾರೀ ಅನಾಹುತ ಸಂಭವಿಸಲಿದೆ. ಇದನ್ನು ಅರ್ಥ ಮಾಡಿಕೊಳ್ಳದ ಕುಮಾರಸ್ವಾಮಿಯವರು ಅಕ್ರಮದ ವಿರುದ್ಧ ಧ್ವನಿ ಎತ್ತಿರುವ ಸುಮಲತಾ ವಿರುದ್ಧ ಬಾಯಿಗೆ ಬಂದಂತೆ ಮಾತನಾಡುತ್ತಿರುವುದು ನಾಚಿಕೆಗೇಡು.

    ಕೆಆರ್‍ಎಸ್‍ನಿಂದ ಕೇವಲ ಹತ್ತು ಕಿಮೀ ದೂರದಲ್ಲಿರುವ ಬೇಬಿ ಬೆಟ್ಟದಲ್ಲಿ ಸದ್ಯ 80ಕ್ಕೂ ಹೆಚ್ಚು ಕ್ರಷರ್ ಗಳಿದ್ದು, ಈ ಪೈಕಿ 50 ಕ್ರಷರ್ ಅನಧಿಕೃತ. ಹಂಗರಹಳ್ಳಿಯಿಂದ ಪ್ರತಿದಿನ 500ಕ್ಕೂ ಹೆಚ್ಚು ಲಾರಿಗಳಲ್ಲಿ ಕಲ್ಲುಗಳು ಹೋಗುತ್ತಿವೆ. ಅಕ್ರಮದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್‍ನ ಅನೇಕ ಮುಖಂಡರು ಶಾಮೀಲಾಗಿದ್ದಾರೆ. ದಂಧೆಯ ಪ್ರಮುಖ ರೂವಾರಿಯಾಗಿ ಕುಮಾರಸ್ವಾಮಿ ಇವೆಲ್ಲದರ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಅವರಿಗೆ ಸಹಾಯಕರಾಗಿ ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ಪುಟ್ಟರಾಜು ಇದ್ದಾರೆ ಎಂದು ಜಗದೀಶ್ ವಿ .ಸದಂ ಆರೋಪಿಸಿದರು.

    ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದ ಪಕ್ಷದ ಕಾನೂನು ವಿಭಾಗದ ರಾಜ್ಯಾಧ್ಯಕ್ಷ ನಂಜಪ್ಪ ಕಾಳೇಗೌಡ ರವರು ಮಾತನಾಡಿ ಬೆಂಗಳೂರು ಗ್ರಾಮಾಂತರ, ರಾಮನಗರ, ಚೆನ್ನಪಟ್ಟಣ, ಮಂಡ್ಯ, ಮೈಸೂರು, ಕನಕಪುರ ಭಾಗಗಳಲ್ಲಿ ರಾಜ್ಯದ ನೈಸರ್ಗಿಕ ಸಂಪತ್ತು ಅವ್ಯಾಹತವಾಗಿ ಲೂಟಿಯಾಗುತ್ತಿದ್ದು, ಸರ್ಕಾರದ ಬೊಕ್ಕಸ ಸೇರಬೇಕಾಗಿದ್ದ ಸಾವಿರಾರು ಕೋಟಿ ರೂಪಾಯಿ ರಾಜಸ್ವ ಧನವು ರಾಜಕಾರಣಿಗಳು ಹಾಗೂ ಉದ್ಯಮಿಗಳ ಪಾಲಾಗುತ್ತಿದೆ. ಇದನ್ನೂ ಓದಿ: ಅಂಬರೀಶ್ ಪಾರ್ಥಿವ ಶವ ತಂದಿದ್ದೇ ಹೆಚ್‍ಡಿಕೆ, ಆ ಫೋಟೋವನ್ನೂ ವೈರಲ್ ಮಾಡ್ಲಿ: ಕೆಟಿಎಸ್ ಆಗ್ರಹ

    ಈ ಹಿಂದೆ ಎಎಪಿಯ ತಂಡವು ಸ್ವತಃ ಬೇಬಿ ಬೆಟ್ಟಕ್ಕೆ ತೆರಳಿ ಪರಿಶೀಲನೆ ನಡೆಸಿತ್ತು. ನಮ್ಮ ಒತ್ತಡಕ್ಕೆ ಮಣಿದು ಬೇಬಿ ಬೆಟ್ಟದಲ್ಲಿನ ಅಕ್ರಮ ಗಣಿಗಾರಿಕೆಗೆ ಸರ್ಕಾರ ತಕ್ಷಣವೇ ಬ್ರೇಕ್ ಹಾಕಿತ್ತು. ಆದರೆ ಕೆಲ ದಿನಗಳ ನಂತರ ಮತ್ತೆ ಅಕ್ರಮಕ್ಕೆ ಅವಕಾಶ ಮಾಡಿಕೊಟ್ಟಿದೆ. ನಾವು ಸರ್ಕಾರಕ್ಕೆ ಅನೇಕ ಪತ್ರಗಳನ್ನು ಬರೆದಿದ್ದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಅಕ್ರಮಕ್ಕೆ ಸಹಕಾರ ನೀಡುತ್ತಾ ಆಡಳಿತ ನಡೆಸುವ ಬದಲು ದಂಧೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ, ಇಲ್ಲವೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದರು. ಇದನ್ನೂ ಓದಿ: ಸುಮಲತಾರಿಗೆ ರಾಜಕಾರಣದಲ್ಲಿ ಅನುಭವದ ಕೊರತೆ ಇದೆ: ನಿಖಿಲ್

  • ಅಕ್ರಮ ಗಣಿಗಾರಿಕೆ ಬಗ್ಗೆ ಸಿಬಿಐ ತನಿಖೆ ಆಗಬೇಕು – ಮಂಡ್ಯ ಸಂಸದೆ ಸುಮಲತಾ ಆಗ್ರಹ

    ಅಕ್ರಮ ಗಣಿಗಾರಿಕೆ ಬಗ್ಗೆ ಸಿಬಿಐ ತನಿಖೆ ಆಗಬೇಕು – ಮಂಡ್ಯ ಸಂಸದೆ ಸುಮಲತಾ ಆಗ್ರಹ

    – ದಾಳಿ ಹೆಸರಲ್ಲಿ ದುಡ್ಡು ವಸೂಲಿಗೆ ಹೋಗಿರ್ಬೇಕು, ಹೆಚ್‍ಡಿಕೆ ಕಿಡಿ

    ಮಂಡ್ಯ: ಕನ್ನಂಬಾಡಿ ಅಣೆಕಟ್ಟು ವಿಷಯದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಮಂಡ್ಯ ಸಂಸದೆ ಸುಮಲತಾ ನಡುವಿನ ನೇರ ಸಂಘರ್ಷ ಇನ್ನಷ್ಟು ತೀವ್ರಗೊಂಡಿದೆ. ಅಕ್ರಮ ಕಲ್ಲುಗಣಿಗಾರಿಕೆ ಬಗ್ಗೆ ಸಿಬಿಐ ತನಿಖೆಗೆ ಆಗ್ರಹಿಸಿರುವ ಸುಮಲತಾ ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದ್ದಾರೆ.

    ಶ್ರೀರಂಗಪಟ್ಟಣ ತಾಲೂಕಿನ ಚೆನ್ನನಕೆರೆ ಮತ್ತು ಹಂಗರಹಳ್ಳಿಯಲ್ಲಿ ನಡೆಯುತ್ತಿದ್ದ ಗಣಿಗಾರಿಕೆ ವೀಕ್ಷಣೆಗೆ ಹೋಗದಂತೆ ಅಡ್ಡಿಪಡಿಸಿದ್ದನ್ನು ನೋಡಿ ಸುಮಲತಾ, ಇದೇನ್ ಭಾರತ-ಪಾಕಿಸ್ತಾನ ಗಡಿನಾ ಎಂದು ಆಘಾತ ವ್ಯಕ್ತಪಡಿಸಿದ್ದಾರೆ. ಗಣಿಗಾರಿಕೆಯಿಂದ ಬಿರುಕು ಬಿಟ್ಟಿರುವ ಊರವರ ಮನೆಗಳನ್ನು ನೋಡಿ ಶಾಕ್ ಆದರು. ಅಕ್ರಮ ಗಣಿಗಾರಿಕೆ ಬಗ್ಗೆ ಮಾತಾಡುವ ವೇಳೆ ವಿಷಯವನ್ನು ಬೇರೆಡೆಗೆ ತಿರುಗಿಸುವ ಯತ್ನ ಮಾಡಲಾಗ್ತಿದೆ…? ಶಾಸಕರಿಗೆ ನಿಮ್ಮ ಕೊಡುಗೆ ಏನು..? ನಿಮ್ಮ ಕಣ್ಣ ಮುಂದೆಯೇ ಇಷ್ಟು ಭ್ರಷ್ಟಾಚಾರ, ಅನ್ಯಾಯ ನಡೆಯುತ್ತಿದ್ದರೂ ಏಕೆ ಸುಮ್ಮನಿದ್ದೀರಿ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯಗೆ ತಿರುಗೇಟು ನೀಡಿದ್ದಾರೆ. ಆದ್ರೆ ಸಂಸದೆ ಬೇಬಿ ಬೆಟ್ಟಕ್ಕೆ ಭೇಟಿ ನೀಡಲಿಲ್ಲ. ಇದನ್ನೂ ಓದಿ: ಹೆಣ್ಣಿನ ಬಗ್ಗೆ ಹೇಗೆ ಮಾತಾಡ್ಬೇಕು ಅಂತ ಮಾಜಿ ಸಿಎಂ ಅರ್ಥ ಮಾಡಿಕೊಳ್ಳಬೇಕು: ಸುಮಲತಾ ಕಿಡಿ

    ಇನ್ನು ಶ್ರೀರಂಗಪಟ್ಟಣದಲ್ಲಿ ಸಂಸದೆ ಕಾರಿಗೆ ಮುತ್ತಿಗೆ ಹಾಕಿದ ಶಾಸಕರ ಬೆಂಬಲಿಗರು ಮಾಜಿ ಶಾಸಕ ಬಂಡಿಸಿದ್ದೇಗೌಡ ಮಾಲೀಕತ್ವದ ಗಣಿಗಾರಿಕೆಗೂ ಭೇಟಿ ನೀಡುವಂತೆ ಘೋಷಣೆ ಕೂಗಿದರು. ಆ ಬಳಿಕ ಬಂಡಿಸಿದ್ದೇಗೌಡ ಮಾಲೀಕತ್ವದ ಗಣಿಗಾರಿಕೆಗೂ ಸುಮಲತಾ ಭೇಟಿ ನೀಡಿ ಪರಿಶೀಲಿಸಿದರು. ಇದನ್ನೂ ಓದಿ: ನಾನು ಕ್ಷಮೆ ಕೇಳೋದಿಲ್ಲ ಸುಮಲತಾ ಕುತಂತ್ರಿ: ಎಚ್‍ಡಿಕೆ

    ಇನ್ನು ಸುಮಲತಾ ಮತ್ತು ಕುಮಾರಸ್ವಾಮಿ ನಡುವಿನ ವಾಕ್ಸಮರ ಮುಂದುವರಿದಿದೆ. ತಮ್ಮನ್ನು ಭ್ರಷ್ಟಾಚಾರದ ರಾಯಭಾರಿ, ಡೀಲ್ ಮಾಸ್ಟರ್, ಚೈಲ್ಡಿಶ್ ಎಂದು ಕರೆದಿರುವ ಸುಮಲತಾಗೆ ಕುಮಾರಸ್ವಾಮಿ ‘ಗಣಿ ಮಾಲೀಕರಿಂದ ಹಣ ವಸೂಲಿಗೆ ಹೋಗಿರಬಹುದು’ ತಿರುಗೇಟು ನೀಡಿದ್ದಾರೆ. ಪ್ರಜ್ವಲ್ ರೇವಣ್ಣ ಭವಿಷ್ಯದ ಬಗ್ಗೆ ಮಾತಾಡಲು ಸುಮಲತಾ ಏನು ಜ್ಯೋತಿಷಿನಾ ಎಂದು ಮಾಜಿ ಪ್ರಧಾನಿ ದೇವೇಗೌಡರು ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: ಮಾಜಿ ಸಿಎಂ ಹೆಚ್‍ಡಿಕೆ ಪ್ರತಿಯೊಂದು ಕೆಲಸದಲ್ಲಿ ಡೀಲ್ ಮಾಡುವ ಮಾಸ್ಟರ್: ಸುಮಲತಾ ಅಂಬರೀಶ್

  • ಡಿಕೆಶಿಗೆ ಸಾರಥಿಯಾದ ಜೆಡಿಎಸ್ ಶಾಸಕ

    ಡಿಕೆಶಿಗೆ ಸಾರಥಿಯಾದ ಜೆಡಿಎಸ್ ಶಾಸಕ

    ಮಂಡ್ಯ: ಮಾಜಿ ಸಚಿವ ಡಿ.ಕೆ ಶಿವಕುಮಾರ್ ಸದ್ಯ ಟೆಂಪಲ್ ರನ್ ಮಾಡುತ್ತಿದ್ದು, ಇಂದು ಮಂಡ್ಯ ಜಿಲ್ಲೆಯಲ್ಲಿನ ದೇಗುಲ ದರ್ಶನಕ್ಕೆ ಬಂದಿದ್ದ ಡಿಕೆಶಿ ಅವರಿಗೆ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಸಾರಥಿಯಾಗಿದ್ದರು.

    ಹೌದು, ರವೀಂದ್ರ ಅವರು ತಮ್ಮ ಕಾರಿನಲ್ಲೇ ಡಿಕೆಶಿ ಅವರಿಗೆ ದೇಗುಲ ಯಾತ್ರೆ ಮಾಡಿಸಿ ಸಾರಥಿಯಾಗಿದ್ದಾರೆ. ಅದರಲ್ಲೂ ಸ್ವತಃ ತಾವೇ ಕಾರು ಚಾಲನೆ ಮಾಡಿ, ಕನಕಪುರ ಬಂಡೆಗೆ ದೇಗುಲ ದರ್ಶನ ಮಾಡಿಸಿರುವುದು ವಿಶೇಷವಾಗಿತ್ತು. ಶ್ರೀರಂಗನಾಥ ದೇಗುಲ, ಟಿಪ್ಪು ಮಡಿದ ಸ್ಥಳ, ನಿಮಿಷಾಂಭ ದೇವಿ ದೇವಸ್ಥಾನ ಹೀಗೆ ವಿವಿಧ ಸ್ಥಳಗಳಲ್ಲಿ ಕಾಂಗ್ರೆಸ್ ನಾಯಕನಿಗೆ ಜೆಡಿಎಸ್ ಶಾಸಕ ಸಾಥ್ ನೀಡಿದರು. ಇದನ್ನೂ ಓದಿ:‘ನಿಮ್ಮ ಕತ್ತನ್ನೇ ಹೊಡಿತೀನಿ’ – ಖಡ್ಗ ತೋರಿಸಿ ಅಭಿಮಾನಿಗಳಿಗೆ ಬಿಸಿ ಮುಟ್ಟಿಸಿದ ಡಿಕೆಶಿ

    ಜೆಡಿಎಸ್ ಸ್ವಾಗತ, ಬೆಂಬಲ ನೀಡಿದ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆಶಿ, ನಾವು ಮತ್ತು ಜೆಡಿಎಸ್ ಅವರು ಒಟ್ಟಿಗೆ ಕೆಲಸ ಮಾಡಿದ್ದೇವೆ. ಜೆಡಿಎಸ್ ಮತ್ತು ನಮ್ಮ ಪ್ರೀತಿ ವೈಯಕ್ತಿಕ ವಿಚಾರ. ಪಕ್ಷದ ಸಿದ್ದಾಂತಗಳನ್ನು ಇಬ್ಬರೂ ಒಪ್ಪಿಕೊಳ್ಳುತ್ತೇವೆ. ಜಾತ್ಯಾತೀತ ತತ್ವದ ಬಗ್ಗೆ ಒಪ್ಪಿಕೊಳ್ಳುತ್ತೇವೆ. ನಾವು ಒಟ್ಟಿಗೆ ಕೆಲಸ ಮಾಡಬೇಕಿದೆ. ರಾಜಕೀಯವಾಗಿ ನಮ್ಮ ಇಬ್ಬರ ಪಕ್ಷದಲ್ಲಿ ಬೇಕಾದಷ್ಟು ಭಿನ್ನಾಭಿಪ್ರಾಯಗಳು ಇರಬಹುದು. ಆದರೆ ಕಾರ್ಯಕರ್ತರು ಪ್ರೀತಿ ಮಾಡವಾಗ ನಾವು ಇಲ್ಲ ಎಂದು ಹೇಳಲು ಆಗುವುದಿಲ್ಲ. ಎಲ್ಲರೂ ಒಗ್ಗಟ್ಟಿನಿಂದ ಹೋಗುವ ಕೆಲಸ ಕಾರ್ಯಕರ್ತರು ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.  ಇದನ್ನೂ ಓದಿ:ಡಿಕೆಶಿ ಜೊತೆ ಜಿಟಿಡಿ ಚಾಮುಂಡಿ ದರ್ಶನ- ದೇವೇಗೌಡ್ರನ್ನು ನೋಡ್ತಿದ್ದಂತೆ ಎಸ್ಕೇಪ್

    ಶ್ರೀರಂಗಪಟ್ಟಣದಲ್ಲಿ ಟಿಪ್ಪು ಮಡಿದ ಸ್ಥಳಕ್ಕೆ ಭೇಟಿ ಕೊಟ್ಟ ಡಿಕೆಶಿ ಅವರನ್ನು ಸ್ಥಳೀಯ ಮುಸ್ಲಿಂ ಮುಖಂಡರು ಪೇಟ, ಕತ್ತಿ ನೀಡಿ ಅಭಿನಂದನೆ ಸಲ್ಲಿಸಿದರು. ಈ ವೇಳೆ ಡಿಕೆಶಿ ಅವರನ್ನು ನೋಡಲು ಬಂದಿದ್ದ ಅಭಿಮಾನಿಗಳು ಗಲಾಟೆ ಮಾಡುತ್ತಿದ್ದರು. ಆಗ ಡಿಕೆಶಿ ಸುಮ್ಮನಿರಿ ಎಂದು ಮನವಿ ಮಾಡಿದರು. ಆದರೂ ಅವರ ಹಿಂದೆ ನಿಂತಿದ್ದ ಅಭಿಮಾನಿಗಳು ಡಿಕೆಶಿಯನ್ನು ನೋಡಲು ಗಲಾಟೆ ಮಾಡುತ್ತಿದ್ದರು. ಹೀಗಾಗಿ ‘ಏಯ್ ಸುಮ್ನಿರಿ, ಹಿಂಗೇ ಮಾತಾಡ್ತಿದ್ರೆ ನಿಮ್ಮ ಕತ್ತನ್ನೇ ಹೊಡಿತೀನಿ’ ಎಂದು ಕೈಯಲ್ಲಿದ್ದ ಖಡ್ಗ ತೋರಿಸಿ ತಮಾಷೆ ಮಾಡಿದರು.