Tag: RBI Governor

  • ಆರ್‌ಬಿಐ ನೂತನ ಗವರ್ನರ್‌ ಆಗಿ ಸಂಜಯ್‌ ಮಲ್ಹೋತ್ರಾ ಅಧಿಕಾರ ಸ್ವೀಕಾರ

    ಆರ್‌ಬಿಐ ನೂತನ ಗವರ್ನರ್‌ ಆಗಿ ಸಂಜಯ್‌ ಮಲ್ಹೋತ್ರಾ ಅಧಿಕಾರ ಸ್ವೀಕಾರ

    ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ ನ (RBI) 26ನೇ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ (Sanjay Malhotra) ಅವರು ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ಡಿ.11 ರಿಂದ (ಇಂದಿನಿಂದ) ಜಾರಿಗೆ ಬರುವಂತೆ ಮುಂದಿನ 3 ವರ್ಷಗಳ ಕಾಲ ಗವರ್ನರ್ ಆಗಿ ಅಧಿಕಾರ ನಿರ್ವಹಿಸಲಿದ್ದಾರೆ ಎಂದು ಆರ್‌ಬಿಐ ತಿಳಿಸಿದೆ.

    ಶಕ್ತಿಕಾಂತ ದಾಸ್‌ (Shaktikanta Das) ಅವರ ಅಧಿಕಾರಾವಧಿ ಡಿ.10ರಂದು (ಮಂಗಳವಾರ) ಕೊನೆಗೊಂಡಿತು. ಈ ಹಿನ್ನೆಲೆ ಬುಧವಾರ ಮಲ್ಹೋತ್ರಾ ಅಧಿಕಾರ ಸ್ವೀಕರಿಸಿದ್ದಾರೆ. 2018ರ ಡಿ.12ರಂದು ಮಾಜಿ ಗವರ್ನರ್‌ ಊರ್ಜಿತ್ ಪಟೇಲ್ ಅವರ ಹಠಾತ್ ನಿರ್ಗಮನದ ನಂತರ, RBIನ 25ನೇ ಗವರ್ನರ್ ಆಗಿ ಶಕ್ತಿಕಾಂತ ದಾಸ್‌ ನೇಮಕಗೊಂಡಿದ್ದರು. ಮೂರು ವರ್ಷ ಅಧಿಕಾರ ಪೂರ್ಣಗೊಳಿಸಿದ ಬಳಿಕ 2ನೇ ಅವಧಿಗೂ ಅವರನ್ನೇ ಮುಂದುವರಿಸಲಾಗಿತ್ತು.

    ಯಾರು ಸಂಜಯ್‌ ಮಲ್ಹೋತ್ರಾ?
    ಸಂಜಯ್‌ ಮಲ್ಹೋತ್ರಾ ಅವರು 1990ರ ಬ್ಯಾಚ್‌ನ ರಾಜಸ್ಥಾನ ಕೇಡರ್‌ನ ಐಎಎಸ್‌ ಅಧಿಕಾರಿಯಾಗಿದ್ದಾರೆ. ಅವರು ಈ ಹಿಂದೆ ಸರ್ಕಾರಿ ಸ್ವಾಮ್ಯದ ಆರ್‌ಇಸಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಜವಾಬ್ದಾರಿ ನಿರ್ವಹಿಸಿದ್ದರು. ಅಲ್ಲದೇ ತೆರಿಗೆ ಸಂಗ್ರಹ ಇತ್ತೀಚಿನ ದಿನಗಳಲ್ಲಿ ಭಾರೀ ಏರಿಕೆ ಕಾಣುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಬಜೆಟ್‌ ವಿಚಾರದಲ್ಲಿ ತೆರಿಗೆ ಸಂಬಂಧಿತ ಪ್ರಸ್ತಾವನೆಗಳನ್ನು ಅವರು ಪರಿಶೀಲಿಸುತ್ತಿದ್ದರು. ಜಿಎಸ್‌ಟಿ ಕೌನ್ಸಿಲ್‌ನ ಪದನಿಮಿತ್ತ ಕಾರ್ಯದರ್ಶಿಯಾಗಿ ಹಾಗೂ ಸರಕು ಮತ್ತು ಸೇವಾ ತೆರಿಗೆಯಲ್ಲಿ ರಾಜ್ಯಗಳ ನಿರೀಕ್ಷೆಗಳ ವಿಚಾರಗಳಂಥ ಕ್ಲಿಷ್ಟ ಸಂದರ್ಭಗಳನ್ನು ಜಾಣ್ಮೆಯಿಂದ ನಿಭಾಯಿಸಿದ್ದರು.

    ಕಾನ್ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಕಂಪ್ಯೂಟರ್ ಸೈನ್ಸ್ ಪದವಿ ಪಡೆದಿರುವ ಮಲ್ಹೋತ್ರಾ ಅವರು ಯುಎಸ್‌ನ ಪ್ರಿನ್ಸ್‌ಟನ್ ವಿಶ್ವವಿದ್ಯಾಲಯದಿಂದ ಸಾರ್ವಜನಿಕ ನೀತಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

    33 ವರ್ಷಗಳ ತಮ್ಮ ವೃತ್ತಿಜೀವನದಲ್ಲಿ ವಿದ್ಯುತ್‌, ಹಣಕಾಸು, ತೆರಿಗೆ, ಮಾಹಿತಿ ತಂತ್ರಜ್ಞಾನ, ಗಣಿ ಇನ್ನೂ ಹಲವು ಕ್ಷೇತ್ರಗಳಲ್ಲಿ ಕೆಲಸ ಮಾಡಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರದಲ್ಲಿ ಹಣಕಾಸು ಮತ್ತು ತೆರಿಗೆ ಇಲಾಖೆಯಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಆರ್‌ಬಿಐ ಗವರ್ನರ್‌ ಆಗಿ ನೇಮಕಗೊಳ್ಳುವುದಕ್ಕೂ ಮುನ್ನ ಹಣಕಾಸು ಸೇವೆಗಳ ಇಲಾಖೆಯಲ್ಲಿ ಕಂದಾಯ ಕಾರ್ಯದರ್ಶಿಯಾಗಿದ್ದರು.

  • ಆರ್‌ಬಿಐ ನೂತನ ಗವರ್ನರ್‌ ಆಗಿ ಸಂಜಯ್‌ ಮಲ್ಹೋತ್ರಾ ನೇಮಕ

    ಆರ್‌ಬಿಐ ನೂತನ ಗವರ್ನರ್‌ ಆಗಿ ಸಂಜಯ್‌ ಮಲ್ಹೋತ್ರಾ ನೇಮಕ

    ನವದೆಹಲಿ: ಭಾರತೀಯ ರಿಸರ್ವ್‌ ಬ್ಯಾಂಕ್‌ (RBI) ನೂತನ ಗವರ್ನರ್‌ ಆಗಿ ಕಂದಾಯ ಕಾರ್ಯದರ್ಶಿ ಸಂಜಯ್‌ ಮಲ್ಹೋತ್ರಾ (Sanjay Malhotra) ಅವರನ್ನು ನೇಮಕ ಮಾಡಲಾಗಿದೆ.‌

    ಹಾಲಿ ಗರ್ವನರ್‌ ಶಕ್ತಿಕಾಂತ ದಾಸ್‌ (Shaktikanta Das) ಅವರ ಅಧಿಕಾರಾವಧಿ ಡಿ.10ರಂದು (ಮಂಗಳವಾರ) ಕೊನೆಗೊಳ್ಳಲಿದೆ. ಡಿಸೆಂಬರ್‌ 11ರಂದು ಬುಧವಾರ ರಿಸರ್ವ್‌ ಬ್ಯಾಂಕ್‌ನ ಮುಂದಿನ ಗವರ್ನರ್‌ ಆಗಿ ಮಲ್ಹೋತ್ರಾ ಅಧಿಕಾರ ಸ್ವೀಕರಿಸಲಿದ್ದಾರೆ. ಮುಂದಿನ ಮೂರು ವರ್ಷಗಳ ಕಾಲ ಅವರು ಕೇಂದ್ರೀಯ ಬ್ಯಾಂಕ್‌ ಅನ್ನು ಮುನ್ನಡೆಸಲಿದ್ದಾರೆ ಎಂದು ಕೇಂದ್ರ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

    2018ರ ಡಿ.12ರಂದು ಮಾಜಿ ಗವರ್ನರ್‌ ಊರ್ಜಿತ್ ಪಟೇಲ್ ಅವರ ಹಠಾತ್ ನಿರ್ಗಮನದ ನಂತರ, RBIನ 25ನೇ ಗವರ್ನರ್ ಆಗಿ ಶಕ್ತಿಕಾಂತ ದಾಸ್‌ ನೇಮಕಗೊಂಡಿದ್ದರು. ಮೂರು ವರ್ಷ ಅಧಿಕಾರ ಪೂರ್ಣಗೊಳಿಸಿದ ಬಳಿಕ 2ನೇ ಅವಧಿಗೂ ಅವರನ್ನ ಮುಂದುವರಿಸಲಾಗಿತ್ತು.

    ಸಂಜಯ್‌ ಮಲ್ಹೋತ್ರಾ ಅವರು 1990ರ ಬ್ಯಾಚ್‌ನ ರಾಜಸ್ಥಾನ ಕೇಡರ್‌ನ ಐಎಎಸ್‌ ಅಧಿಕಾರಿಯಾಗಿದ್ದಾರೆ. ಅವರು ಈ ಹಿಂದೆ ಸರ್ಕಾರಿ ಸ್ವಾಮ್ಯದ ಆರ್‌ಇಸಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಜವಾಬ್ದಾರಿ ನಿರ್ವಹಿಸಿದ್ದರು. ಅಲ್ಲದೇ ತೆರಿಗೆ ಸಂಗ್ರಹ ಇತ್ತೀಚಿನ ದಿನಗಳಲ್ಲಿ ಭಾರೀ ಏರಿಕೆ ಕಾಣುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಬಜೆಟ್‌ ವಿಚಾರದಲ್ಲಿ ತೆರಿಗೆ ಸಂಬಂಧಿತ ಪ್ರಸ್ತಾವನೆಗಳನ್ನು ಅವರು ಪರಿಶೀಲಿಸುತ್ತಿದ್ದರು. ಜಿಎಸ್‌ಟಿ ಕೌನ್ಸಿಲ್‌ನ ಪದನಿಮಿತ್ತ ಕಾರ್ಯದರ್ಶಿಯಾಗಿ ಹಾಗೂ ಸರಕು ಮತ್ತು ಸೇವಾ ತೆರಿಗೆಯಲ್ಲಿ ರಾಜ್ಯಗಳ ನಿರೀಕ್ಷೆಗಳ ವಿಚಾರಗಳಂಥ ಕ್ಲಿಷ್ಟ ಸಂದರ್ಭಗಳನ್ನು ಜಾಣ್ಮೆಯಿಂದ ನಿಭಾಯಿಸಿದ್ದರು.

    ಕಾನ್ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಕಂಪ್ಯೂಟರ್ ಸೈನ್ಸ್ ಪದವಿ ಪಡೆದಿರುವ ಮಲ್ಹೋತ್ರಾ ಅವರು ಯುಎಸ್‌ನ ಪ್ರಿನ್ಸ್‌ಟನ್ ವಿಶ್ವವಿದ್ಯಾಲಯದಿಂದ ಸಾರ್ವಜನಿಕ ನೀತಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

    33 ವರ್ಷಗಳ ತಮ್ಮ ವೃತ್ತಿಜೀವನದಲ್ಲಿ ವಿದ್ಯುತ್‌, ಹಣಕಾಸು, ತೆರಿಗೆ, ಮಾಹಿತಿ ತಂತ್ರಜ್ಞಾನ, ಗಣಿ ಇನ್ನೂ ಹಲವು ಕ್ಷೇತ್ರಗಳಲ್ಲಿ ಕೆಲಸ ಮಾಡಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರದಲ್ಲಿ ಹಣಕಾಸು ಮತ್ತು ತೆರಿಗೆ ಇಲಾಖೆಯಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಆರ್‌ಬಿಐ ಗವರ್ನರ್‌ ಆಗಿ ನೇಮಕಗೊಳ್ಳುವುದಕ್ಕೂ ಮುನ್ನ ಹಣಕಾಸು ಸೇವೆಗಳ ಇಲಾಖೆಯಲ್ಲಿ ಕಂದಾಯ ಕಾರ್ಯದರ್ಶಿಯಾಗಿದ್ದರು.

  • 2023ರ ಆರ್ಥಿಕ ವರ್ಷದಲ್ಲಿ GDP ಬೆಳವಣಿಗೆ ಶೇ.7ಕ್ಕಿಂತ ಹೆಚ್ಚಾಗಲಿದೆ – RBI ಗವರ್ನರ್‌

    2023ರ ಆರ್ಥಿಕ ವರ್ಷದಲ್ಲಿ GDP ಬೆಳವಣಿಗೆ ಶೇ.7ಕ್ಕಿಂತ ಹೆಚ್ಚಾಗಲಿದೆ – RBI ಗವರ್ನರ್‌

    ನವದೆಹಲಿ: 2023ರ ಆರ್ಥಿಕ ವರ್ಷದಲ್ಲಿ ದೇಶದ ಜಿಡಿಪಿ (GDP) ಬೆಳವಣಿಗೆ ಶೇ.7ಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಆರ್‌ಬಿಐ (RBI) ಗವರ್ನರ್‌ ಶಕ್ತಿಕಾಂತ ದಾಸ್ (Shaktikanta Das) ಹೇಳಿದ್ದಾರೆ.

    ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ಕಳೆದ ಹಣಕಾಸು ವರ್ಷದ 3 ಮತ್ತು 4ನೇ ತ್ರೈಮಾಸಿಕದಲ್ಲಿ ಆರ್ಥಿಕ ವೇಗ ಕಾಯ್ದುಕೊಂಡಿರುವ ಹಿನ್ನೆಲೆಯಲ್ಲಿ 2022-23ರ ಬೆಳವಣಿಗೆಯು 7 ಶೇಕಡಕ್ಕಿಂತ ಹೆಚ್ಚಾಗಿರುತ್ತದೆ. ಇದರಿಂದ ಅಚ್ಚರಿ ಪಡಬೇಕಾದುದ್ದಿಲ್ಲ. 2022-23 ರ ತಾತ್ಕಾಲಿಕ ವಾರ್ಷಿಕ ಅಂದಾಜುಗಳನ್ನು ಪ್ರಸಕ್ತ ವರ್ಷದ ಮೇ 31ರಂದು ಬಿಡುಗಡೆ ಮಾಡಲಾಗುತ್ತದೆ ಎಂದಿದ್ದಾರೆ.

    ವಾಸ್ತವವಾಗಿ ಆರ್‌ಬಿಐ ಮೇಲ್ವಿಚಾರಣೆ ಮಾಡಿದಾಗ ಎಲ್ಲಾ ಹೆಚ್ಚಿನ ಆವರ್ತನ ಸೂಚಕಗಳಲ್ಲಿ, 4ನೇ ತ್ರೈಮಾಸಿಕದಲ್ಲಿ ಆರ್ಥಿಕ ವೇಗ ಕಾಯ್ದುಕೊಂಡಿರುವುದು ಗಮನಕ್ಕೆ ಬಂದಿದೆ. ಪ್ರಸಕ್ತ ವರ್ಷದಲ್ಲೇ ಆರ್‌ಬಿಐ ಶೇ.6.5ರಷ್ಟು ಪ್ರಗತಿ ದರ ನಿರೀಕ್ಷಿಸಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬ್ಯಾಂಕ್‌ಗಳಲ್ಲಿ ಶುರುವಾಯ್ತು ಪಿಂಕ್ ನೋಟ್ ವಿನಿಮಯ – RBI ಆದೇಶದ ವಿರುದ್ಧ ಹೈಕೋರ್ಟ್‌ಗೆ ಅರ್ಜಿ

    ಹಣದುಬ್ಬರ, ಬ್ಯಾಂಕಿಂಗ್‌ ಒತ್ತಡಗಳು ಹಾಗೂ ಜಾಗತಿಕ ಅನಿಶ್ಚಿತತೆಯ ನಡುವೆ ಭಾರತೀಯ ಬ್ಯಾಂಕಿಂಗ್‌ ವ್ಯವಸ್ಥೆಯು ಸ್ಥಿರವಾಗಿದೆ. ಉತ್ತಮವಾದ ಬಂಡವಾಳ ಹೂಡಿಕೆ, ಆಸ್ತಿಯ ಗುಣಮಟ್ಟ ಹಾಗೂ‌ ಸುಧಾರಿತ ಲಾಭದಾಯಕತೆ ಇವೆಲ್ಲವೂ ದೇಶದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಿವೆ ಎಂದಿದ್ದಾರೆ.

    ಆರ್‌ಬಿಐ ಮೇ 2022ರಿಂದ ರೆಪೊ ದರವನ್ನ 250 ಬೇಸಿಸ್‌ ಪಾಯಿಂಟ್‌ಗಳಷ್ಟು ಹೆಚ್ಚಿಸಿದೆ. ಮುಂದಿನ ದಿನಗಳಲ್ಲಿ ಇದಕ್ಕೆ ವಿರಾಮ ನೀಡುವ ಸಾಧ್ಯತೆಗಳಿವೆ. ಆದ್ರೆ ಇದು ನನ್ನ ಕೈಯಲ್ಲಿ ಇಲ್ಲ. ಆರ್ಥಿಕ ಸ್ಥಿತಿಯನ್ನು ಅವಲಂಭಿಸಿರುತ್ತದೆ ಎಂದು ಅವರು ಒತ್ತಿ ಹೇಳಿದ್ದಾರೆ. ಇದನ್ನೂ ಓದಿ: ಹವಾಲಾ ಹಣದ ಮೇಲೆ ED, IT ನಿಗಾ – ಪೆಟ್ರೋಲ್ ಬಂಕ್ ಮೇಲೆ ಕಣ್ಣು

  • ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್‍ಗೆ ಕೊರೊನಾ ಸೋಂಕು

    ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್‍ಗೆ ಕೊರೊನಾ ಸೋಂಕು

    ಮುಂಬೈ: ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅವರಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಟ್ವೀಟ್ ಮೂಲಕ ತಮ್ಮ ಆರೋಗ್ಯದ ಮಾಹಿತಿಯನ್ನ ಶಕ್ತಿಕಾಂತ್ ದಾಸ್ ನೀಡಿದ್ದಾರೆ.

    ಟ್ವೀಟ್: ನನಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ. ನಾನು ಆರೋಗ್ಯವಾಗಿದ್ದು, ನನ್ನ ಸಂಪರ್ಕದಲ್ಲಿದ್ದವರು ಎಚ್ಚರಿಕೆಯಿಂದಿರಿ. ವೈದ್ಯರ ಸಲಹೆ ಹೋಂ ಐಸೋಲೇಷನ್ ಗೆ ಒಳಗಾಗಿದ್ದು, ಮನೆಯಿಂದಲೇ ಕಾರ್ಯ ನಿರ್ವಹಿಸುತ್ತೇನೆ. ಆರ್‍ಬಿಐ ಕೆಲಸಗಳಲ್ಲಿ ಎಂದಿನಂತೆ ನಡೆಯಲಿದ್ದು, ಡೆಪ್ಯೂಟಿ ಗವರ್ನರ್ ಮತ್ತು ಅಧಿಕಾರಿಗಳ ಜೊತೆ ದೂರವಾಣಿ ಮೂಲಕ ಸಂಪರ್ಕದಲ್ಲಿರುತ್ತೇನೆ ಎಂದು ಶಕ್ತಿಕಾಂತ್ ದಾಸ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

    ಕಳೆದ ಏಳು ದಿನಗಳಿಂದ ಭಾರತದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಗುಣಮಖ ಪ್ರಮಾಣ ಶೇ.90ಕ್ಕೆ ತಲುಪಿದೆ. ಅಕ್ಟೋಬರ್ 19ರಿಂದ ದೇಶದಲ್ಲಿ 55 ಸಾವಿರಕ್ಕೂ ಅಧಿಕ ಕಡಿಮೆ ಪ್ರಕರಣಗಳು ವರದಿ ಆಗುತ್ತಿವೆ.