Tag: RCB vs DC

  • ಡೆಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಆರ್‌ಸಿಬಿ; 6 ವಿಕೆಟ್‌ಗಳ ಅಮೋಘ ಜಯ – ನಂ.1 ಪಟ್ಟಕ್ಕೇರಿದ ಬೆಂಗಳೂರು

    ಡೆಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಆರ್‌ಸಿಬಿ; 6 ವಿಕೆಟ್‌ಗಳ ಅಮೋಘ ಜಯ – ನಂ.1 ಪಟ್ಟಕ್ಕೇರಿದ ಬೆಂಗಳೂರು

    ನವದೆಹಲಿ: ಕೃನಾಲ್‌ ಪಾಂಡ್ಯ (Krunal Pandya), ವಿರಾಟ್‌ ಕೊಹ್ಲಿ (Virat Kohli) ಶತಕದ ಜೊತೆಯಾಟ ಹಾಗೂ ಶಿಸ್ತುಬದ್ಧ ಬೌಲಿಂಗ್‌ ದಾಳಿಯ ನೆರವಿನಿಂದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡವು ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ 6 ವಿಕೆಟ್‌ಗಳ ಅಮೋಘ ಜಯ ಸಾಧಿಸಿದೆ.

    ಸೂಪರ್‌ ಸಂಡೇ ಆರ್‌ಸಿಬಿ-ಡೆಲ್ಲಿ ಕ್ಯಾಪಿಟಲ್ಸ್‌ ನಡುವಿನ ಹೈವೋಲ್ಟೇಜ್‌ ಪಂದ್ಯ ಅಭಿಮಾನಿಗಳ ಕಣ್ಣಿಗೆ ಹಬ್ಬವಾಗಿತ್ತು. ಏಕೆಂದರೆ ಬೆಂಗಳೂರಿನಲ್ಲಿ ಆರ್‌ಸಿಬಿ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ ಗೆದ್ದಾಗ ಕೆ.ಎಲ್‌ ರಾಹುಲ್‌ ಸಂಭ್ರಮಿಸಿದ ರೀತಿ ಇದಕ್ಕೆ ಕಾರಣವಾಗಿತ್ತು. ಅಂದಿನಿಂದಲೇ ಕೊಹ್ಲಿ ಸೇಡು ತೀರಿಸಿಕೊಳ್ಳಲಿದ್ದಾರೆ ಅನ್ನೋ ಪೋಸ್ಟರ್‌ಗಳು ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ಟ್ರೆಂಡಿಂಗ್‌ನಲ್ಲಿತ್ತು. ಇದೀಗ ಆರ್‌ಸಿಬಿ ಗೆಲುವು ಅಭಿಮಾನಿಗಳ ಪಾಲಿಗೆ ಬಹುದೊಡ್ಡ ಗೆಲುವಾಗಿದೆ. ಅಲ್ಲದೇ 10 ಪಂದ್ಯಗಳಲ್ಲಿ 7ರಲ್ಲಿ ಗೆಲುವು ಸಾಧಿಸಿದ್ದು, 14 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ನಂ.1 ಪಟ್ಟಕ್ಕೇರಿದೆ.

    ಗೆಲುವಿಗೆ 163 ರನ್‌ಗಳ ಗುರಿ ಪಡೆದ ಆರ್‌ಸಿಬಿ ಪವರ್‌ ಪ್ಲೇ ನಲ್ಲೇ ಪ್ರಮುಖ 3 ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೀಡಾಯಿತು. ಮೊದಲ 4 ಓವರ್‌ಗಳಲ್ಲಿ 26 ರನ್‌ಗಳಿಗೆ ಜಾಕೋಬ್‌ ಬೇಥಲ್‌ (12 ರನ್‌), ರಜತ್‌ ಪಾಟೀದಾರ್‌ (6 ರನ್‌), ದೇವದತ್‌ ಪಡಿಕಲ್‌ (0) ವಿಕೆಟ್‌ ಕಳೆದುಕೊಂಡು ಆರ್‌ಸಿಬಿ ಸಂಕಷ್ಟಕ್ಕೀಡಾಯಿತು. 10 ಓವರ್‌ ಕಳೆದರೂ 100 ರನ್‌ಗಳ ಗಡಿ ದಾಟದ ಆರ್‌ಸಿಬಿ ಪಂದ್ಯ ಗೆಲ್ಲುವುದು ಅನುಮಾನ ಎಂದೇ ಹೇಳಲಾಗುತ್ತಿತ್ತು. ಆದ್ರೆ ವಿರಾಟ್‌ ಕೊಹ್ಲಿ ಹಾಗೂ ಕೃನಾಲ್‌ ಪಾಂಡ್ಯ ಅವರ ಶತಕದ ಜೊತೆಯಾಟ ತಂಡದ ಗೆಲುವಿನ ಹಾದಿಯನ್ನು ಸುಗಮವಾಗಿಸಿತು.

    4ನೇ ವಿಕೆಟಿಗೆ ಕೃನಾಲ್‌ ಪಾಂಡ್ಯ, ವಿರಾಟ್‌ ಕೊಹ್ಲಿ ಜೋಡಿ 84 ಎಸೆತಗಳಲ್ಲಿ 119 ರನ್‌ಗಳ ಜೊತೆಯಾಟ ನೀಡಿತು. ಇದು ತಂಡದ ಗೆಲುವಿಗೆ ಕಾರಣವಾಯಿತು. ಇನ್ನೂ ಕೊನೆಯಲ್ಲಿ ಟಿಮ್‌ ಡೇವಿಡ್‌ ಅವರ ಸಿಕ್ಸರ್‌ ಬೌಂಡರಿ ಆಟದಿಂದ ಆರ್‌ಸಿಬಿಗೆ ಗೆಲುವು ಸುಲಭವಾಯಿತು. ಆರ್‌ಸಿಬಿ ಪರ ಕೃನಾಲ್‌ ಪಾಂಡ್ಯ ಅಜೇಯ 73 ರನ್‌ (47 ಎಸೆತ, 5 ಬೌಂಡರಿ, 4 ಸಿಕ್ಸರ್)‌, ವಿರಾಟ್‌ ಕೊಹ್ಲಿ 51 ರನ್‌ (47 ಎಸೆತ, 4 ಬೌಂಡರಿ) ಗಳಿಸಿದ್ರೆ, ಟಿಮ್‌ ಡೇವಿಡ್‌ 5 ಎಸೆತಗಳಲ್ಲಿ 19 ರನ್‌ ಗಳಿಸಿ ಮಿಂಚಿದರು.

    ಟಾಸ್ ಸೋತು ಬ್ಯಾಟಿಂಗ್‌ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್‌ ಉತ್ತಮ ಆರಂಭವನ್ನೇ ಪಡೆಯಿತು. ಅಭಿಷೇಕ್ ಪೊರೇಲ್ 28 ಮತ್ತು ಫಫ್ ಡುಪ್ಲೆಸಿ 22 ರನ್ ಸಿಡಿಸಿದರು. ಕರುಣ್ ನಾಯರ್ 4 ರನ್‌ಗೆ ಪೆವಿಲಿಯನ್ ಸೇರಿಕೊಂಡರು. ಉತ್ತಮವಾಗಿ ಆಡಿದ ಕೆ.ಎಲ್. ರಾಹುಲ್ 41 (39 ಎಸೆತ) ರನ್‌ಗಳ ಕೊಡುಗೆ ನೀಡಿದರು. ಒಂದು ಹಂತದಲ್ಲಿ 200ರ ಸಮೀಪಕ್ಕೆ ತಲುಪಬಹುದು ಎನ್ನುವಂತಿದ್ದ ರನ್ ಗತಿ ಆರ್‌ಸಿಬಿ ಬೌಲರ್‌ಗಳ ಬಿಗಿ ಹಿಡಿತಕ್ಕೆ ರನ್‌ ಕದಿಯಲು ತಿಣುಕಾಡುತ್ತಾ ಸಾಗಿತು. ಅತ್ತ ರನ್‌ ಬರದ ಡೆಲ್ಲಿ ಕ್ಯಾಪಿಟಲ್ಸ್‌ ಮತ್ತೊಂದೆಡೆ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಳ್ಳುತ್ತಲೇ ಸಾಗಿತು. ಆದ್ರೆ ಕೊನೆಯಲ್ಲಿ ಅಬ್ಬರಿಸಿದ ಟ್ರಿಸ್ಟನ್‌ ಸ್ಟಬ್ಸ್‌ 18 ಎಸೆತಗಳಲ್ಲಿ 34 ರನ್ ಗಳಿಸುವ ಮೂಲಕ ಡೆಲ್ಲಿ 163 ರನ್‌ಗಳ ಗುರಿ ನೀಡಲು ನೆರವಾದರು.

    ಆರ್‌ಸಿಬಿ ಪರ ಭುವನೇಶ್ವರ್ ಕುಮಾರ್ 33 ರನ್ ನೀಡಿ 3 ವಿಕೆಟ್ ಕಿತ್ತರೆ, ಹೇಜಲ್ವುಡ್‌ 36 ರನ್ ನೀಡಿ 2 ವಿಕೆಟ್ ಪಡೆದರು.

    ರಾಹುಲ್‌ vs ಕೊಹ್ಲಿ:
    ಕೆಲವು ದಿನಗಳ ಹಿಂದಷ್ಟೇ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಆರ್‌ಸಿಬಿಯನ್ನು ಸೋಲಿಸಿತ್ತು. ಆಗ ಗೆಲುವಿನ ರುವಾರಿಯಾಗಿದ್ದ ಕೆ.ಎಲ್ ರಾಹುಲ್ ಅವರು, ʻಇದು ನನ್ನ ಗ್ರೌಂಡ್‌ʼ ಎಂದು ʻಕಾಂತಾರʼ ಚಲನಚಿತ್ರದ ದೃಶ್ಯದ ಮಾದರಿಯನ್ನು ಅನುಕರಿಸಿದ್ದರು. ಇದೀಗ ಗೆದ್ದು ಆರ್‌ಸಿಬಿ ಸೋಲಿಗೆ ಸೇಡು ತೀರಿಸಿಕೊಂಡಿದೆ.

  • RCBvsDC | ಪಂದ್ಯದ ಟಿಕೆಟ್ ಕಾಳಸಂತೆಯಲ್ಲಿ ಮಾರಾಟ – 8 ಮಂದಿ ಸಿಸಿಬಿ ಬಲೆಗೆ

    RCBvsDC | ಪಂದ್ಯದ ಟಿಕೆಟ್ ಕಾಳಸಂತೆಯಲ್ಲಿ ಮಾರಾಟ – 8 ಮಂದಿ ಸಿಸಿಬಿ ಬಲೆಗೆ

    ಬೆಂಗಳೂರು: ಐಪಿಎಲ್ (IPL) ಮ್ಯಾಚ್‌ಗಳ ಟಿಕೆಟ್ ಸಿಕ್ಕರೆ ಅವರೇ ಪುಣ್ಯವಂತರು ಎನ್ನುವ ಹಾಗಾಗಿದೆ. ಯಾಕೆಂದರೆ ಎಷ್ಟೇ ಕಷ್ಟಪಟ್ಟರೂ ಸಹ ಟಿಕೆಟ್‌ಗಳು ಸಿಕ್ತಿಲ್ಲ. ಗುರುವಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್‌ಸಿಬಿ (Royal Challengers Bengaluru) ಹಾಗೂ ದೆಹಲಿ (Delhi Capitals) ನಡುವಿನ ಪಂದ್ಯದ ಟಿಕೆಟ್‌ಗಳನ್ನ ದುಪ್ಪಟ್ಟು ಬೆಲೆಗೆ ಬ್ಲಾಕ್‌ನಲ್ಲಿ ಮಾರಾಟ ಮಾಡುತ್ತಿದ್ದ 8 ಮಂದಿ ಆರೋಪಿಗಳನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

    ಚಿನ್ನಸ್ವಾಮಿ ಸ್ಟೇಡಿಯಂನ (Chinnaswamy Stadium) ಸುತ್ತಮುತ್ತ, ಕಬ್ಬನ್ ಪಾರ್ಕ್ (Cubbon Park) ಒಳಗೆ ಟಿಕೆಟ್ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಸಿಸಿಬಿ ಡಿಸಿಪಿ ಅಕಾಯ್ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಅರೆಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ರಾಣಾ ಕರೆತಂದ ವಿಮಾನಕ್ಕೆ ನೀಡಲಾಗಿತ್ತು ಡಮ್ಮಿ ಕೋಡ್‌, ಮಧ್ಯೆ 11 ಗಂಟೆ ಪಿಟ್‌ ಸ್ಟಾಪ್‌!

    ಮಫ್ತಿಯಲ್ಲಿ ಟಿಕೆಟ್ ಖರೀದಿಸುವ ನೆಪದಲ್ಲಿ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಪೊಲೀಸರು, ಆರೋಪಿಗಳನ್ನು ಬಂಧಿಸಿ ಕಬ್ಬನ್ ಪಾರ್ಕ್ ಪೊಲೀಸರಿಗೆ ಒಪ್ಪಿಸಿದರು. ಈ ಬಗ್ಗೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತರನ್ನು ವಿಚಾರಣೆ ಮಾಡಲಾಗುತ್ತಿದೆ. ಇದನ್ನೂ ಓದಿ: ಆಕಾಶದಲ್ಲೇ ತುಂಡಾದ ಹೆಲಿಕಾಪ್ಟರ್‌ನ ಫ್ಯಾನ್‌ – ಐವರು ದುರ್ಮರಣ

    ಬ್ಲಾಕ್ ಟಿಕೆಟ್ ಹಿಂದೆ ಯಾರಿದ್ದಾರೆ. ಟಿಕೆಟ್ ಹೇಗೆ ಸಿಕ್ತು ಎಂಬ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

  • ತವರಲ್ಲಿ ಮತ್ತೆ ಸೋತ ಆರ್‌ಸಿಬಿ – ಕೆ.ಎಲ್‌.ರಾಹುಲ್‌ ಮಿಂಚು; ಡೆಲ್ಲಿಗೆ 6 ವಿಕೆಟ್‌ಗಳ ಜಯ

    ತವರಲ್ಲಿ ಮತ್ತೆ ಸೋತ ಆರ್‌ಸಿಬಿ – ಕೆ.ಎಲ್‌.ರಾಹುಲ್‌ ಮಿಂಚು; ಡೆಲ್ಲಿಗೆ 6 ವಿಕೆಟ್‌ಗಳ ಜಯ

    ಬೆಂಗಳೂರು: ಕೆ.ಎಲ್‌.ರಾಹುಲ್‌ ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ಆರ್‌ಸಿಬಿ ವಿರುದ್ಧ ಡೆಲ್ಲಿ 6 ವಿಕೆಟ್‌ಗಳ ಜಯ ಸಾಧಿಸಿತು. ಆ ಮೂಲಕ ತವರಲ್ಲಿ ಆರ್‌ಸಿಬಿಗೆ ಮತ್ತೊಂದು ಸೋಲಿನ ಕಹಿ ಅನುಭವವಾಯಿತು.

    ಟಾಸ್‌ ಸೋತರೂ ಗೆಲುವಿನ ಛಲದೊಂದಿಗೆ ಬ್ಯಾಟಿಂಗ್‌ ನಡೆಸಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಆರಂಭದಲ್ಲೇ ಅಬ್ಬರಿಸಿತು. ಕೇವಲ 3 ಓವರ್‌ಗೆ 50 ರನ್‌ ಸಿಡಿಸಿ ಗಮನ ಸೆಳೆದಿತ್ತು. ಫಿಲ್‌ ಸಾಲ್ಟ್‌ 17 ಬಾಲ್‌ಗೆ 3 ಸಿಕ್ಸರ್‌ ಮತ್ತು 4 ಫೋರ್‌ ಚಚ್ಚಿ 37 ರನ್‌ ಗಳಿಸಿದ್ದರು. ಸಾಲ್ಟ್‌ ಅಬ್ಬರಕ್ಕೆ ಅಕ್ಷರಶಃ ಡೆಲ್ಲಿ ಬೌಲರ್‌ಗಳು ನಡುಗಿದ್ದರು. ಈ ಮಧ್ಯೆ 1 ರನ್‌ ಕದಿಯಲು ಹೋಗಿ ಸಾಲ್ಟ್‌ ರನೌಟ್‌ ಆಗಿ ಆಘಾತ ನೀಡಿದರು. ನಂತರ ಬಂದ ದೇವದತ್‌ ಪಡಿಕ್ಕಲ್‌ ಕೇವಲ 1 ರನ್‌ಗೆ ವಿಕೆಟ್‌ ಒಪ್ಪಿಸಿ ಹೊರನಡೆದರು. ಈ ಮಧ್ಯೆ ಭರವಸೆ ಆಟಗಾರನಾಗಿದ್ದ ವಿರಾಟ್‌ ಕೊಹ್ಲಿ 2 ಸಿಕ್ಸರ್‌, 1 ಫೋರ್‌ನೊಂದಿಗೆ 22 ರನ್‌ ಗಳಿಸಿ ಔಟಾಗಿದ್ದು ನಿರಾಸೆ ಮೂಡಿಸಿತು.

    ನಂತರ ಬಂದ ಯಾವೊಬ್ಬ ಬ್ಯಾಟರ್‌ ಕೂಡ ಕ್ರೀಸ್‌ನಲ್ಲಿ ನಿಲ್ಲಲಿಲ್ಲ. ರಜತ್‌ ಪಾಟೀದಾರ್‌ 25 ರನ್‌ಗೆ ವಿಕೆಟ್‌ ಒಪ್ಪಿಸಿ ಪೆವಿಲಿಯನ್‌ ಕಡೆ ಮುಖ ಮಾಡಿದರು. ಲಿಯಾಮ್‌ ಲಿವಿಂಗ್‌ಸ್ಟೋನ್‌ 4, ಜಿತೇಶ್‌ ಶರ್ಮಾ 3 ರನ್‌ ಅಷ್ಟೇ ಗಳಿಸಿ ವಿಫಲರಾದರು. ಕೃಣಾಲ್‌ ಪಾಂಡೆ 18 ರನ್‌ ಗಳಿಸಿ ಔಟಾದರು. ಕೊನೆ ಘಳಿಗೆಯಲ್ಲಿ ಟಿಮ್‌ ಡೇವಿಡ್‌ ಎಂದಿನಂತೆ ತಮ್ಮ ಅಬ್ಬರದ ಬ್ಯಾಟಿಂಗ್‌ ಪ್ರದರ್ಶನ ನೀಡಿದರು. 20 ಬಾಲ್‌ಗೆ 4 ಸಿಕ್ಸರ್‌, 2 ಫೋರ್‌ನೊಂದಿಗೆ 37 ರನ್‌ ಗಳಿಸಿ ತಂಡವು ಸವಾಲಿನ ಮೊತ್ತ ಪೇರಿಸಲು ನೆರವಾದರು. ಅಂತಿಮವಾಗಿ ಆರ್‌ಸಿಬಿ 20 ಓವರ್‌ಗೆ 7 ವಿಕೆಟ್‌ ನಷ್ಟಕ್ಕೆ 163 ರನ್‌ ಗಳಿಸಿತು.

    164 ರನ್‌ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್‌ ಆರಂಭಿಕ ಆಘಾತ ಎದುರಿಸಿತು. ಕೇವಲ 10 ರನ್‌ ಗಳಿಸಿದ್ದಾಗಲೇ 2 ವಿಕೆಟ್‌ (ಫಫ್‌ ಡುಪ್ಲೆಸಿಸ್‌ 2, ಜೇಕ್ ಫ್ರೇಸರ್-ಮೆಕ್‌ಗುರ್ಕ್ 7 ರನ್) ಕಳೆದುಕೊಂಡಿತ್ತು. 30 ರನ್‌ ಹೊತ್ತಿಗೆ‌ 3 ವಿಕೆಟ್‌ ಬಿತ್ತು. 58 ರನ್‌ ಗಳಿಸಿದಾಗ 4 ವಿಕೆಟ್‌ ಉದುರಿದ್ದವು. ಹೀಗೆ ಆಡಿದರೆ ಗೆಲುವು ದಕ್ಕಿಸಿಕೊಳ್ಳಬಹುದೆಂದು ಭಾವಿಸಿದ್ದ ಆರ್‌ಸಿಬಿಗೆ ಡೆಲ್ಲಿ ಕ್ಯಾಪ್ಟನ್‌ ಕೆ.ಎಲ್.ರಾಹುಲ್‌ ತಲೆನೋವಾದರು. ಜವಾಬ್ದಾರಿಯುತ ಮತ್ತು ಏಕಾಂಗಿ ಹೋರಾಟ ನಡೆಸಿದ ರಾಹುಲ್‌ 53 ಬಾಲ್‌ಗೆ 6 ಸಿಕ್ಸರ್‌, 7 ಫೋರ್‌ನೊಂದಿಗೆ 93 ರನ್‌ ಕಲೆಹಾಕಿದರು. ಆರಂಭದಲ್ಲೇ ರಾಹುಲ್‌ ಕ್ಯಾಚನ್ನು ಪಾಟೀದಾರ್‌ ಕೈಚೆಲ್ಲಿದ್ದೇ ಆರ್‌ಸಿಬಿ ಸೋಲಿಗೆ ಪ್ರಮುಖ ಕಾರಣವಾಯಿತು.

    ರಾಹುಲ್‌ಗೆ ಟ್ರಿಸ್ಟಾನ್ ಸ್ಟಬ್ಸ್ (38 ರನ್) ಜೊತೆಯಾಗಿ ಸಾಥ್‌ ನೀಡಿದರು.‌ ರಾಹುಲ್‌, ಸ್ಟಬ್ಸ್‌ ಜೊತೆಯಾಟದ ನೆರವಿನಿಂದ ಆರ್‌ಸಿಬಿ ವಿರುದ್ಧ ಡೆಲ್ಲಿ ಗೆಲುವು ದಾಖಲಿಸಿತು. 17.5 ಓವರ್‌ಗೆ 4 ವಿಕೆಟ್‌ ನಷ್ಟಕ್ಕೆ ಡೆಲ್ಲಿ ಗುರಿ ತಲುಪಿ ಗೆದ್ದಿತು.

  • ಬೆಂಗಳೂರಲ್ಲಿ ಆರ್‌ಸಿಬಿ ಪಂದ್ಯ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ

    ಬೆಂಗಳೂರಲ್ಲಿ ಆರ್‌ಸಿಬಿ ಪಂದ್ಯ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ

    ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್‌ ಮತ್ತು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB vs DC) ನಡುವಿನ ಐಪಿಎಲ್‌ ಪಂದ್ಯವನ್ನು ಸಿಎಂ ಸಿದ್ದರಾಮಯ್ಯ (Siddaramaiah) ವೀಕ್ಷಿಸಿದರು.

    ಸಚಿವರಾದ ಕೆ.ಎನ್.ರಾಜಣ್ಣ ಹಾಗೂ ಬೈರತಿ ಸುರೇಶ್ ಜೊತೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ (IPL 2025) ಪಂದ್ಯವನ್ನು ಸಿಎಂ ವೀಕ್ಷಸಿ ಎಂಜಾಯ್‌ ಮಾಡಿದರು. ಇದನ್ನೂ ಓದಿ: ಸ್ಟಾರ್ಕ್‌ಗೆ ಒಂದೇ ಓವರ್‌ನಲ್ಲಿ 30 ರನ್‌ ಚಚ್ಚಿದ ಸಾಲ್ಟ್‌ – ಹುಚ್ಚೆದ್ದು ಕುಣಿದ RCB ಫ್ಯಾನ್ಸ್‌

    ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ 20 ಓವರ್‌ಗಳಿಗೆ 7 ವಿಕೆಟ್‌ ನಷ್ಟಕ್ಕೆ 163 ರನ್‌ ಗಳಿಸಿದೆ. ಫಿಲ್ ಸಾಲ್ಟ್ 37, ವಿರಾಟ್‌ ಕೊಹ್ಲಿ 22, ರಜತ್‌ ಪಾಟಿದಾರ್‌ 25, ಟಿಮ್‌ ಡೇವಿಡ್‌ 37, ಕೃಣಾಲ್‌ ಪಾಂಡೆ 18 ರನ್‌ ಗಳಿಸಿದ್ದಾರೆ.

    ಡೆಲ್ಲಿ ಪರ ವಿಪ್ರಜ್ ನಿಗಮ್, ಕುಲ್ದೀಪ್‌ ಯಾದವ್‌ ತಲಾ 2 ಹಾಗೂ ಮುಕೇಶ್‌ ಕುಮಾರ್‌, ಮೋಹಿತ್‌ ಶರ್ಮಾ ತಲಾ 1 ವಿಕೆಟ್‌ ಪಡೆದರು. ಇದನ್ನೂ ಓದಿ: ಚೆನ್ನೈ ತಂಡದಿಂದ ರುತುರಾಜ್‌ ಔಟ್‌ – ತಲಾ ಮತ್ತೆ ಕ್ಯಾಪ್ಟನ್‌

  • ಸ್ಟಾರ್ಕ್‌ಗೆ ಒಂದೇ ಓವರ್‌ನಲ್ಲಿ 30 ರನ್‌ ಚಚ್ಚಿದ ಸಾಲ್ಟ್‌ – ಹುಚ್ಚೆದ್ದು ಕುಣಿದ RCB ಫ್ಯಾನ್ಸ್‌

    ಸ್ಟಾರ್ಕ್‌ಗೆ ಒಂದೇ ಓವರ್‌ನಲ್ಲಿ 30 ರನ್‌ ಚಚ್ಚಿದ ಸಾಲ್ಟ್‌ – ಹುಚ್ಚೆದ್ದು ಕುಣಿದ RCB ಫ್ಯಾನ್ಸ್‌

    ಬೆಂಗಳೂರು:‌ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡದ ಆರಂಭಿಕ ಆಟ ಇಂದು ಅಭಿಮಾನಿಗಳನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿದೆ.

    ಹೌದು. ಡೆಲ್ಲಿ ವಿರುದ್ಧ ಆರಂಭದಿಂದಲೇ ಅಬ್ಬರಿಸಲು ಶುರು ಮಾಡಿದ ಆರಂಭಿಕ ಆಟಗಾರ ಫಿಲ್‌ ಸಾಲ್ಟ್‌ (Phil Salt) 3ನೇ ಓವರ್‌ನಲ್ಲಿ ಮಿಚೆಲ್‌ ಸ್ಟಾರ್ಕ್‌ ಬೌಲಿಂಗ್‌ಗೆ (Mitchell Starc) 30 ರನ್‌ ಚಚ್ಚಿದರು. ಮೊದಲ ಎಸೆತದಲ್ಲೇ ಸಿಕ್ಸರ್‌ ಬಾರಿಸಿದ ಸಾಲ್ಟ್‌, ಬಳಿಕ 4, 4, ನೋಬಾಲ್‌+4, 6, 1LB, 4LB ಬಾರಿಸುವ ಮೂಲಕ ಒಂದೇ ಓವರ್‌ನಲ್ಲಿ 30 ರನ್‌ ಬಾರಿಸಿದ್ರು, ಫಿಲ್‌ ಸಾಲ್ಟ್‌ ಅವರ ಈ ಆಟ ಅಭಿಮಾನಿಗಳನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿತ್ತು.

    ವಿಶ್ವದ ಅತ್ಯಂತ ಶ್ರೀಮಂತ ಫ್ರಾಂಚೈಸಿ ಲೀಗ್‌ ಟೂರ್ನಿಯಲ್ಲಿ ಆರ್‌ಸಿಬಿ ತಂಡಕ್ಕೆ ಸಾಕಷ್ಟು ಟ್ರೆಂಡ್‌ ಇದೆ. ಇಲ್ಲಿಯವರೆಗೂ ಒಂದೇ ಒಂದು ಬಾರಿ ಪ್ರಶಸ್ತಿ ಗೆಲ್ಲಲು ಸಾಧ್ಯವಾಗದೇ ಇದ್ದರೂ ಆರ್‌ಸಿಬಿ, ಇತರೆ ಎಲ್ಲಾ ತಂಡಗಳಿಗಿಂತಲೂ ಅತ್ಯಂತ ಹೆಚ್ಚಿನ ಅಭಿಮಾನಿಗಳನ್ನ ಹೊಂದಿದೆ.

    ಫೇಸ್‌ಬುಕ್‌, ಇನ್ಸ್ಟಾಗ್ರಾಮ್‌, ಟ್ವಿಟರ್ ಸೇರಿದಂತೆ ಸೋಶಿಯಲ್‌ ಮೀಡಿಯಾದಲ್ಲಿ ಕೋಟ್ಯಂತರ ಫಾಲೋವರ್ಸ್ ಇದ್ದಾರೆ. ಪಂದ್ಯ ಗೆದ್ದರೂ, ಸೋತರೂ ಆರ್‌ಸಿಬಿ ತಂಡವನ್ನ ಬೆಂಬಲಿಸುವ ಪ್ರಾಮಾಣಿಕ ಅಭಿಮಾನಿಗಳು (RCB Fans) ಇವರಾಗಿದ್ದಾರೆ. ಆರ್‌ಸಿಬಿ… ಆರ್‌ಸಿಬಿ ಎಂದು ಕೂಗುತ್ತಾ ಆಟಗಾರರನ್ನು ಹುರಿದುಂಬಿಸುತ್ತಾರೆ. ಅದೇ ರೀತಿ ಫ್ಯಾನ್ಸ್‌ ಫಿಲ್‌ ಸಾಲ್ಟ್‌ ಅವರನ್ನು ಹುರಿದುಂಬಿಸುತ್ತಿದ್ದರು. ಆದ್ರೆ 4ನೇ ಓವರ್‌ನ 5ನೇ ಎಸೆತದಲ್ಲಿ ಅನಗತ್ಯ ರನ್‌ ಕದಿಯಲು ಯತ್ನಿಸಿ ಸಾಲ್ಟ್‌ ರನೌಟ್‌ಗೆ ತುತ್ತಾದರು.

  • ನಾವಿಕನಿಲ್ಲದ ದೋಣಿಯಲ್ಲಿ ಮುಳುಗಿದ ಡೆಲ್ಲಿ – ಆರ್‌ಸಿಬಿಗೆ 47 ರನ್‌ಗಳ ಜಯ; ಪ್ಲೇ ಆಫ್‌ ಕನಸು ಜೀವಂತ!

    ನಾವಿಕನಿಲ್ಲದ ದೋಣಿಯಲ್ಲಿ ಮುಳುಗಿದ ಡೆಲ್ಲಿ – ಆರ್‌ಸಿಬಿಗೆ 47 ರನ್‌ಗಳ ಜಯ; ಪ್ಲೇ ಆಫ್‌ ಕನಸು ಜೀವಂತ!

    ಬೆಂಗಳೂರು: ರಿಷಭ್‌ ಪಂತ್‌ ಅವರ ಅನುಪಸ್ಥಿತಿಯಲ್ಲಿ ಆರ್‌ಸಿಬಿ ವಿರುದ್ಧ ಅಖಾಡಕ್ಕಿಳಿದಿದ್ದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಹೀನಾಯ ಸೋಲಿಗೆ ತುತ್ತಾಗಿದೆ. ಆದ್ರೆ ತವರಿನಲ್ಲೇ 47 ರನ್‌ಗಳ ಭರ್ಜರಿ ಜಯ ಸಾಧಿಸಿದ ಆರ್‌ಸಿಬಿ ಪ್ಲೇ ಆಫ್‌ ಕನಸನ್ನು ಜೀವಂತವಾಗಿರಿಸಿಕೊಂಡಿದೆ.

    ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 9 ವಿಕೆಟ್‌ ನಷ್ಟಕ್ಕೆ 187 ರನ್‌ ಗಳಿಸಿತ್ತು. ಹೊಸ ನಾಯಕನ ನೇತೃತ್ವದಲ್ಲಿ ಸ್ಪರ್ಧಾತ್ಮಕ ರನ್‌ಗಳ ಗುರಿ ಬೆನ್ನತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್‌ 19.1 ಓವರ್‌ಗಳಲ್ಲಿ 140 ರನ್‌ಗಳಿಗೆ ಸರ್ವಪತನ ಕಂಡಿತು.

    188 ರನ್‌ಗಳ ಬೃಹತ್‌ ಮೊತ್ತದ ಚೇಸಿಂಗ್‌ ಆರಂಭಿಸಿದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಆರಂಭದಲ್ಲೇ ಆಘಾತ ಎದುರಿಸಿತು. ಸ್ಫೋಟಕ ಪ್ರದರ್ಶನ ನೀಡಲು ಮುಂದಾದ ಆರಂಭಿಕ ಆಟಗಾರ ಡೇವಿಡ್‌ ವಾರ್ನರ್‌ 1 ರನ್‌ಗಳಿಗೆ ಔಟಾದರು. ಈ ಬೆನ್ನಲ್ಲೇ ಅಭಿಷೇಕ್‌ ಪೋರೆಲ್‌ 2 ರನ್‌ಗಳಿಗೆ ವಿಕೆಟ್‌ ಒಪ್ಪಿಸಿ ಹೊರನಡೆದರು. ಇನ್ನೂ 8 ಎಸೆತಗಳಲ್ಲಿ 21 ರನ್‌ (2 ಸಿಕ್ಸರ್‌, 2 ಬೌಂಡರಿ) ಬಾರಿಸಿದ್ದ ಫ್ರೆಸರ್‌ ಮೆಕ್‌ಗಾರ್ಕ್‌ ಸಹ ವಿಕೆಟ್‌ ಒಪ್ಪಿಸಿದರು. ಮೊದಲ 6 ಓವರ್‌ಗಳಲ್ಲಿ 54 ರನ್‌ ಗಳಿಸಿದ್ದ ಡೆಲ್ಲಿ ಕ್ಯಾಪಿಟಲ್ಸ್‌ ಪ್ರಮುಖ 4 ವಿಕೆಟ್‌ಗಳನ್ನು ಕಳೆದುಕೊಂಡಿತ್ತು.

    ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿದ್ದ ಡೆಲ್ಲಿ ತಂಡಕ್ಕೆ ಟ್ರಿಸ್ಟಾನ್ಸ್‌ ಸ್ಟಬ್ಸ್‌ ಬೂಸ್ಟ್‌ ನೀಡುತ್ತಾರೆ ಎಂಬ ನಿರೀಕ್ಷೆಯಲ್ಲಿ ತಂಡ ಇತ್ತು. ಆದ್ರೆ ಅನಗತ್ಯವಾಗಿ ಒಂದು ರನ್‌ ಕದಿಯಲು ಯತ್ನಿಸಿ ರನೌಟ್‌ಗೆ ತುತ್ತಾದರು. ಇದು ಡೆಲ್ಲಿ ತಂಡಕ್ಕೆ ತುಂಬಲಾರದ ನಷ್ಟವಾಯಿತು. ಅಲ್ಲದೇ ಮಧ್ಯಮ ಕ್ರಮಾಂಕದಲ್ಲಿ ನಾಯಕ ರಿಷಭ್‌ ಪಂತ್‌ ಅವರ ಅನುಪಸ್ಥಿತಿ ಸಹ ಡೆಲ್ಲಿ ತಂಡವನ್ನು ಕಾಡಿತು.

    ಇನ್ನೂ ಏಕಾಂಗಿ ಹೋರಾಟ ನಡೆಸಿದ ನಾಯಕ ಅಕ್ಷರ್‌ ಪಟೇಲ್‌ 39 ಎಸೆತಗಳಲ್ಲಿ 57 ರನ್‌ (3 ಸಿಕ್ಸರ್‌, 5 ಬೌಂಡರಿ) ಗಳಿಸಿದ್ದು ಬಿಟ್ಟರೆ ಉಳಿದ ಯಾರೊಬ್ಬರು ಕ್ರೀಸ್‌ನಲ್ಲಿ ಉಳಿಯದ ಕಾರಣ ಆರ್‌ಸಿಬಿ ಸುಲಭ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಯಿತು. ಇನ್ನುಳಿದಂತೆ ಶಾಯ್‌ ಹೋಪ್‌ 29 ರನ್‌, ಕುಮಾರ್‌ ಕುಮಾರ್‌ ಕುಶಾರ್ಗ 2 ರನ್‌, ಸ್ಟಬ್ಸ್‌ 3 ರನ್‌, ರಸಿಕ್‌ ಸಲಾಮ್‌ 10 ರನ್‌, ಮುಕೇಶ್‌ ಕುಮಾರ್‌ 3 ರನ್‌, ಕುಲ್ದೀಪ್‌ ಯಾದವ್‌ 3 ರನ್‌ ಗಳಿಸಿ ಔಟಾದರು.

    ಇದಕ್ಕೂ ಮುನ್ನ ಸಂಘಟಿತ ಬ್ಯಾಟಿಂಗ್‌ ಪ್ರದರ್ಶನ ನೀಡಿದ ಆರ್‌ಸಿಬಿ ಆಟಗಾರರು 200 ರನ್‌ಗಳನ್ನು ತಲುಪುವಲ್ಲಿ ವಿಫಲರಾದರು. ರಜತ್ ಪಾಟೀದಾರ್ ಸ್ಫೋಟಕ ಅರ್ಧಶತಕ, ವಿಲ್ ಜ್ಯಾಕ್ಸ್, ವಿರಾಟ್ ಕೊಹ್ಲಿ ಸ್ಫೋಟಲ ಪ್ರದರ್ಶನದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 9 ವಿಕೆಟ್ ಕಳೆದುಕೊಂಡು 187 ರನ್ ಬಾರಿಸಿತ್ತು. ಈ ಮೂಲಕ ಡೆಲ್ಲಿ ತಂಡಕ್ಕೆ ಸ್ಪರ್ಧಾತ್ಮಕ ಗುರಿ ನೀಡಿತ್ತು.

    ಮೊದಲಿಗೆ ಆರ್‌ಸಿಬಿ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ನಾಯಕ ಫಾಫ್ ಡು ಪ್ಲೆಸಿಸ್ ಕೇವಲ 6 ರನ್ ಗಳಿಸಿ ಮುಕೇಶ್ ಕುಮಾರ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು ಮತ್ತೊಂದು ತುದಿಯಲ್ಲಿ ಕೇವಲ 13 ಎಸೆತಗಳಲ್ಲಿ ಒಂದು ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 27 ರನ್ ಸಿಡಿಸಿದ ವಿರಾಟ್ ಕೊಹ್ಲಿ, ಇಶಾಂತ್ ಶರ್ಮಾಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್‌ಗೆ ಮರಳಿದರು.

    ಅಬ್ಬರಿಸಿದ ಪಾಟೀದಾರ್-ಜ್ಯಾಕ್ಸ್:
    ಕೇವಲ 36 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡು ಕಂಗಾಲಾಗಿದ್ದ ಆರ್‌ಸಿಬಿ ತಂಡಕ್ಕೆ 3ನೇ ವಿಕೆಟ್‌ಗೆ ರಜತ್ ಪಾಟೀದಾರ್ ಹಾಗೂ ವಿಲ್ ಜ್ಯಾಕ್ಸ್ ಕೇವಲ 53 ಎಸೆತಗಳಲ್ಲಿ 88 ರನ್‌ಗಳ ಜೊತೆಯಾಟ ನೀಡುವ ಮೂಲಕ ಬಲ ತುಂಬಿದರು. ಮೈಚಳಿ ಬಿಟ್ಟು ಬ್ಯಾಟ್ ಬೀಸಿದ ಪಾಟೀದಾರ್ ಕೇವಲ 29 ಎಸೆತಗಳಲ್ಲೇ 5ನೇ ಅರ್ಧಶತಕ ಸಿಡಿಸಿದರು. ಅಂತಿಮವಾಗಿ ಪಾಟೀದಾರ್ 32 ಎಸೆತಗಳಲ್ಲಿ 52 ರನ್ (3 ಸಿಕ್ಸರ್‌, 3 ಬೌಂಡರಿ) ಚಚ್ಚಿ ಔಟಾದರು. ಈ ಬೆನ್ನಲ್ಲೇ ವಿಲ್ ಜ್ಯಾಕ್ಸ್‌ 41 ರನ್ (29 ಎಸೆತ, 3 ಬೌಂಡರಿ, 2 ಸಿಕ್ಸರ್) ಬಾರಿಸಿ ಪೆವಿಲಿಯನ್‌ ಹಾದಿ ಹಿಡಿದರು. ಬಳಿಕ ಕ್ರೀಸ್‌ಗಿಳಿದ ಕ್ಯಾಮರೂನ್‌ ಗ್ರೀನ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶನ ನೀಡಿದರು. 24 ಎಸೆತ ಎದುರಿಸಿದ ಗ್ರೀನ್‌ ಅಜೇಯ 32 ರನ್ (1 ಬೌಂಡರಿ, 2 ಸಿಕ್ಸರ್) ಬಾರಿಸಿದರು.

    ಇನ್ನು ಮಧ್ಯಮ ಕ್ರಮಾಂಕದಲ್ಲಿ ಆರ್‌ಸಿಬಿ ಭರ್ಜರಿಯಾಗಿ ರನ್ ಗಳಿಸಿತಾದರೂ ಉತ್ತಮವಾಗಿ ಫಿನೀಶ್ ಮಾಡಲು ಸಾಧ್ಯವಾಗಲಿಲ್ಲ. ಮಹಿಪಾಲ್ ಲೋಮ್ರಾರ್ ಕೇವಲ 13 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ನಿರ್ಣಾಯಕ ಘಟ್ಟದಲ್ಲಿ ದಿನೇಶ್ ಕಾರ್ತಿಕ್ ಶೂನ್ಯ ಸುತ್ತಿ ಪೆವಿಲಿಯನ್ ಸೇರಿದರು. ಇದು ಆರ್‌ಸಿಬಿ ರನ್ ವೇಗಕ್ಕೆ ಕಡಿವಾಣ ಬೀಳುವಂತೆ ಮಾಡಿತು.

    ಡೆಲ್ಲಿ ಕ್ಯಾಪಿಟಲ್ಸ್‌ ಪರ ಖಲೀಲ್‌ ಅಹ್ಮದ್‌, ರಸಿಕ್‌ ಸಲಾಮ್‌ ತಲಾ 2 ವಿಕೆಟ್‌ ಕಿತ್ತರೆ, ಇಶಾಂತ್‌ ಶರ್ಮಾ, ಮುಕೇಶ್‌ ಕುಮಾರ್‌, ಕುಲ್ದೀಪ್‌ ಯಾದವ್‌ ತಲಾ ಒಂದೊಂದು ವಿಕೆಟ್‌ ಪಡೆದರು.

  • ತವರಿನಲ್ಲಿ ಆರ್‌ಸಿಬಿಗೆ ಇಂದು ನಿರ್ಣಾಯಕ ಪಂದ್ಯ – ಗೆದ್ದರಷ್ಟೇ ಪ್ಲೇ-ಆಫ್‌ ಕನಸು ಜೀವಂತ

    ತವರಿನಲ್ಲಿ ಆರ್‌ಸಿಬಿಗೆ ಇಂದು ನಿರ್ಣಾಯಕ ಪಂದ್ಯ – ಗೆದ್ದರಷ್ಟೇ ಪ್ಲೇ-ಆಫ್‌ ಕನಸು ಜೀವಂತ

    – ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ V/S ಡೆಲ್ಲಿ ಫೈಟ್‌

    ಬೆಂಗಳೂರು: ತವರಿನಲ್ಲಿ ಇಂದು (ಭಾನುವಾರ) ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (Royal Challengers Bengaluru) ತಂಡ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ವಿರುದ್ಧ ನಿರ್ಣಾಯಕ ಕದನಕ್ಕೆ ಸಜ್ಜಾಗಿದೆ. ಈ ಪಂದ್ಯ ಗೆದ್ದರಷ್ಟೇ ಆರ್‌ಸಿಬಿಗೆ (RCB) ಪ್ಲೇ-ಆಫ್‌ಗೇರುವ ಕನಸು ಜೀವಂತವಾಗಿರಲಿದೆ. ಒಂದರ್ಥದಲ್ಲಿ ಇದು ಆರ್‌ಸಿಬಿಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಲಿದೆ.

    ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಇಂದು ನಡೆಯುವ ಪಂದ್ಯದಲ್ಲಿ ಒಂದು ವೇಳೆ ಆರ್‌ಸಿಬಿ ಸೋತರೆ ನಾಕೌಟ್‌ನಿಂದ ಅಧಿಕೃತವಾಗಿ ಹೊರಬೀಳಲಿದೆ. ಡೆಲ್ಲಿ ಕ್ಯಾಪಿಟಲ್ಸ್‌ಗೂ (DC) ಪಂದ್ಯವನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಸೋತರೆ ನಾಕೌಟ್‌ ಹಾದಿ ಕಠಿಣವಾಗಲಿದೆ. ಇದನ್ನೂ ಓದಿ: ಪ್ಲೇ-ಆಫ್‌ಗೆ ಎಂಟ್ರಿ ಕೊಟ್ಟ ಕೆಕೆಆರ್‌

    ಆರ್‌ಸಿಬಿ ಒಟ್ಟು 12 ಪಂದ್ಯಗಳನ್ನು ಆಡಿದ್ದು, 5 ಪಂದ್ಯಗಳಲ್ಲಿ ಜಯಗಳಿಸಿದೆ. ಟೂರ್ನಿಯ ಆರಂಭಿಕ 8 ಪಂದ್ಯಗಳಲ್ಲಿ ಡು ಪ್ಲೆಸಿಸ್‌ ನಾಯಕತ್ವದ ಆರ್‌ಸಿಬಿ 7 ರಲ್ಲಿ ಸೋತಿದೆ. ಆದರೆ ಕಳೆದ 4 ಪಂದ್ಯಗಳಲ್ಲಿ ಅಭೂತಪೂರ್ವ ಪ್ರದರ್ಶನದೊಂದಿಗೆ ಜಯಭೇರಿ ಬಾರಿಸಿದೆ. ಗುಜರಾತ್‌ ವಿರುದ್ಧ 9 ವಿಕೆಟ್‌ಗಳ ಗೆಲುವು ಮತ್ತು ಪಂಜಾಬ್‌ ವಿರುದ್ಧ 60 ರನ್‌ಗಳ ಜಯ ಆರ್‌ಸಿಬಿ ತಂಡದ ರನ್‌ ನೆಟ್‌ ರೇಟನ್ನು ಹೆಚ್ಚಿಸಿರುವುದು ಪ್ಲಸ್‌ ಪಾಯಿಂಟ್‌ ಆಗಿದೆ. ಸದ್ಯ ತಂಡಕ್ಕೆ ಎರಡು ಪಂದ್ಯಗಳಿದ್ದು, ಭಾರಿ ಅಂತರದಲ್ಲಿ ಗೆಲ್ಲಬೇಕಿದೆ. ಅದೃಷ್ಟ ಖುಲಾಯಿಸಿದರೆ ಪ್ಲೇ-ಆಫ್‌ಗೇರುವ ಸಾಧ್ಯತೆ ಇದೆ.

    ಡೆಲ್ಲಿ 12 ರಲ್ಲಿ 6 ಪಂದ್ಯಗಳನ್ನು ಗೆದ್ದಿದೆ. ತಂಡ 12 ಅಂಕ ಸಂಪಾದಿಸಿದ್ದು, ಪ್ಲೇ-ಆಫ್‌ಗೇರಲು ಉಳಿದಿರುವ ಎರಡೂ ಪಂದ್ಯಗಳನ್ನು ಗೆಲ್ಲಬೇಕು. ಆರ್‌ಸಿಬಿ ವಿರುದ್ಧ ಇಂದು ನಡೆಯುವ ಪಂದ್ಯದಲ್ಲಿ ಸೋತರೆ ಡೆಲ್ಲಿಗೆ ಪ್ಲೇ-ಆಫ್‌ ಹಾದಿ ಇನ್ನೂ ಕಠಿಣವಾಗಲಿದೆ. ಇದನ್ನೂ ಓದಿ: ಟೆಸ್ಟ್‌ಗೆ ಇಂಗ್ಲೆಂಡ್ ಕ್ರಿಕೆಟ್ ದಂತಕಥೆ ಜೇಮ್ಸ್ ಆಂಡರ್ಸನ್ ನಿವೃತ್ತಿ

    ವಿರಾಟ್‌ ಕೊಹ್ಲಿ ಉತ್ತಮ ಲಯದಲ್ಲಿದ್ದಾರೆ. ಪಂದ್ಯಗಳಲ್ಲಿ ದಾಖಲೆ ಕೂಡ ಬರೆಯುತ್ತಿದ್ದಾರೆ. ತವರಿನಲ್ಲಿ ಕೊಹ್ಲಿ ಆಟವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರರಾಗಿದ್ದಾರೆ. ವಿಲ್‌ ಜಾಕ್ಸ್‌, ರಜತ್‌ ಪಾಟೀದಾರ್‌ ಕೂಡ ನಿರೀಕ್ಷೆ ಮೂಡಿಸಿದ್ದಾರೆ. ಡು ಪ್ಲೆಸಿಸ್‌ ಮತ್ತು ದಿನೇಶ್‌ ಕಾರ್ತಿಕ್‌ ತಂಡದ ಕೈ ಹಿಡಿಯಬೇಕಿದೆ. ಬೌಲರ್‌ಗಳು ಕಳೆದ ನಾಲ್ಕು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ತೋರುತ್ತಿದ್ದಾರೆ. ಅದನ್ನೇ ಮುಂದುವರಿಸಿದರೆ ತಂಡಕ್ಕೆ ಸಹಕಾರಿಯಾಗಲಿದೆ.

    ಡೆಲ್ಲಿ ತಂಡದಲ್ಲೂ ಜೇಕ್‌ ಫ್ರೇಸರ್‌, ಅಭಿಷೇಕ್‌ ಪೊರೆಲ್‌ ಮೇಲೆ ಹೆಚ್ಚಿನ ನಿರೀಕ್ಷೆ ಇದೆ. ಬ್ಯಾಟಿಂಗ್‌ ಸ್ನೇಹಿ ಪಿಚ್‌ನಲ್ಲಿ ಡೆಲ್ಲಿ ಬೌಲರ್‌ಗಳು ಆರ್‌ಸಿಬಿ ಬ್ಯಾಟರ್‌ಗಳನ್ನು ಕಟ್ಟಿಹಾಕಬೇಕಿದೆ. ಇಂದು ಸಂಜೆ 7:30 ಪಂದ್ಯ ನಡೆಯಲಿದೆ.