Tag: rcb

  • ಸಿಎಂ, ಡಿಸಿಎಂ, ಸಚಿವರಿಗೆ ಪ್ರಚಾರದ ಹುಚ್ಚೇ ಜಾಸ್ತಿ: ಹಾಲಿ‌ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಆಗಬೇಕು: ವಿಜಯೇಂದ್ರ ಆಗ್ರಹ

    ಸಿಎಂ, ಡಿಸಿಎಂ, ಸಚಿವರಿಗೆ ಪ್ರಚಾರದ ಹುಚ್ಚೇ ಜಾಸ್ತಿ: ಹಾಲಿ‌ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಆಗಬೇಕು: ವಿಜಯೇಂದ್ರ ಆಗ್ರಹ

    ಬೆಂಗಳೂರು: ನಿನ್ನೆ ನಡೆದ ಘಟನೆಗೆ ರಾಜ್ಯ ಸರ್ಕಾರವೇ ಸಂಪೂರ್ಣ ಹೊಣೆಯನ್ನು ಹೊರಬೇಕಾಗುತ್ತದೆ. ಸಿಎಂ, ಡಿಸಿಎಂ, ಸಚಿವರಿಗೆ ಪ್ರಚಾರದ ಹುಚ್ಚೇ ಜಾಸ್ತಿ ಆಯ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (B.Y.Vijayendra) ಕಿಡಿಕಾರಿದ್ದಾರೆ.

    ವಿಧಾನಸೌಧದಲ್ಲಿ ಮಾತನಾಡಿದ ಅವರು, ಮ್ಯಾಜಿಸ್ಟ್ರೇಟ್‌ನಿಂದ ಯಾವುದೇ ಕಾರಣಕ್ಕೂ ತನಿಖೆ ಸಾಧ್ಯವಿಲ್ಲ. ಮುಖ್ಯಮಂತ್ರಿಗಳು, ಸಚಿವರೇ ಅಪರಾಧಿ ಸ್ಥಾನದಲ್ಲಿ ಇದ್ದಾರೆ. ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ಆಗಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಮಂಡ್ಯ | ಮದ್ವೆಗೆ ಹುಡುಗಿ ನೋಡಿಕೊಂಡು ಬೆಂಗಳೂರಿಗೆ ಹೋದವನು ಮನೆಗೆ ಹಿಂತಿರುಗಿದ್ದು ಶವವಾಗಿ…

    ಪರಿಹಾರವನ್ನು ಬರೀ ಹತ್ತು ಲಕ್ಷ ಘೋಷಣೆ ಮಾಡಿದ್ದಾರೆ. ಕೇರಳದ ಆನೆ ತುಳಿತಕ್ಕೆ 25 ಲಕ್ಷ ಕೊಡ್ತೀರಾ. ಆದರೆ, ನಮ್ಮ ರಾಜ್ಯದವರಿಗೆ ಸಾವನ್ನಪ್ಪಿದವರಿಗೆ 50 ಲಕ್ಷ ಪರಿಹಾರ ಕೊಡಬೇಕು ಎಂದು ಒತ್ತಾಯಿಸಿದರು.

    ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಗೃಹ ಸಚಿವರು ರಾಜೀನಾಮೆ ಕೊಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಸರ್ಕಾರ ಸರಿಯಾಗಿ ನಿರ್ವಹಣೆ ಮಾಡಿದ್ರೆ ದುರ್ಘಟನೆ ತಡೆಯಬಹುದಿತ್ತು. ಅಹಮದಾಬಾದ್‌ನಲ್ಲಿ ನಡೆದ ಫೈನಲ್ ಮ್ಯಾಚ್‌ನಲ್ಲಿ 1.5 ಲಕ್ಷ ಜನರು ಸೇರಿದ್ರು. ಆದರೆ ಅಲ್ಲಿ ಯಾವುದೇ ಈ ರೀತಿಯ ದುರ್ಘಟನೆ ಆಗಿಲ್ಲ. ಆದರೆ ಬೆಂಗಳೂರಲ್ಲಿ ತಲೆ ತಗ್ಗಿಸುವಂತಹ ಘಟನೆ ನಡೆದಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಜಮೀರ್ ಮಗ, ರಿಜ್ವಾನ್ ಮಗ, ಸಿಎಂ ಮೊಮ್ಮಗನಿಗಾಗಿ ವಿಧಾನಸೌಧದಲ್ಲಿ ಕಾರ್ಯಕ್ರಮ ಮಾಡಿದ್ರಾ: ಸರ್ಕಾರದ ವಿರುದ್ಧ ಪ್ರತಾಪ್‌ ಸಿಂಹ ಕಿಡಿ

    ರಾಜ್ಯ ಸರ್ಕಾರ ಯಾಕೆ ಉತ್ಸಾಹ ಮತ್ತೆ ತರಾತುರಿಯಾಗಿ ಮಾಡ್ತು? ಪೂರ್ವ ತಯಾರಿ ಇಲ್ಲದೇ ಕಾರ್ಯಕ್ರಮ ಮಾಡೋದಕ್ಕೆ ಏಕೆ ಅವಕಾಶ ಮಾಡಿಕೊಡ್ತು? ವಿಧಾನಸೌಧದ ಮುಂದೆ ಆದರೂ ಸಂಭ್ರಮಾಚರಣೆ ಮಾಡುವ ಅವಶ್ಯಕತೆ ಏನಿತ್ತು? ಉಪ ಮುಖ್ಯಮಂತ್ರಿಗಳು ಮಾಡಿದ್ರೋ, ಮುಖ್ಯಮಂತ್ರಿಗಳು ಮಾಡಿದ್ರೋ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಪ್ರಶ್ನಿಸಿದರು.

    ತಾಜ್ ವೆಸ್ಟೆಂಡ್ ಹೋಟೆಲ್‌ನಿಂದ ಆಟಗಾರರು ಹೊರಡುವ ಮುನ್ನವೇ, ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಘಟನೆ ಸಂಭವಿಸಿತ್ತು. ಈ ಸಂದರ್ಭದಲ್ಲಿ ವಿಧಾನಸೌಧದಲ್ಲಿ ಯಾಕೇ ಸಂಭ್ರಮ ಮಾಡುವ ಮನಸ್ಸು ಮಾಡ್ತು? ಸಾವು-ನೋವುಗಳು ಆಗ್ತಿದ್ರು ಕೂಡ ಏಕೆ ಸಂಭ್ರಮ ಮುಂದುವರಿಸಿದ್ರು. ರಾಜ್ಯದ ಉಪಮುಖ್ಯಮಂತ್ರಿಗಳು ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗಿ ಕಪ್‌ಗೆ ಮುತ್ತಿಡ್ತಾರೆ. ಆಮೇಲೆ ಸಚಿವರ ಸೆಲ್ಫಿಯ ಭರಾಟೇ ಏನು ಅಂತೀರಾ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: Stampede Case | ಮೃತಪಟ್ಟ 11 ಸಂತ್ರಸ್ತರ ಕುಟುಂಬಳಿಗೆ RCB ಆಡಳಿತ ಮಂಡಳಿಯಿಂದ ತಲಾ 10 ಲಕ್ಷ ರೂ. ಪರಿಹಾರ ಘೋಷಣೆ

  • Stampede Case | ಮೃತಪಟ್ಟ 11 ಸಂತ್ರಸ್ತರ ಕುಟುಂಬಗಳಿಗೆ RCB ಆಡಳಿತ ಮಂಡಳಿಯಿಂದ ತಲಾ 10 ಲಕ್ಷ ರೂ. ಪರಿಹಾರ ಘೋಷಣೆ

    Stampede Case | ಮೃತಪಟ್ಟ 11 ಸಂತ್ರಸ್ತರ ಕುಟುಂಬಗಳಿಗೆ RCB ಆಡಳಿತ ಮಂಡಳಿಯಿಂದ ತಲಾ 10 ಲಕ್ಷ ರೂ. ಪರಿಹಾರ ಘೋಷಣೆ

    – ಮೃತರ ಕುಟುಂಬಗಳಿಗೆ ಒಟ್ಟು ತಲಾ 25 ಲಕ್ಷ ಪರಿಹಾರ
    – ದುಃಖದಲ್ಲಿಯೂ ಅಭಿಮಾನಿಗಳೊಂದಿಗೆ ಇರ್ತೇವೆಂದು ಭಾವುಕ ಸಂದೇಶ

    ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ (Stampede) ಮೃತಪಟ್ಟ 11 ಸಂತ್ರಸ್ತರ ಕುಟುಂಬಗಳಿಗೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಆಡಳಿತ ಮಂಡಳಿ ತಲಾ 10 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ.

    ಈಗಾಗಲೇ ಕರ್ನಾಟಕ ಸರ್ಕಾರ ತಲಾ 10 ಲಕ್ಷ ರೂ. ಘೋಷಣೆ ಮಾಡಿತ್ತು. ಇದರೊಂದಿಗೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಫ್ರಾಂಚೈಸಿಯ (RCB Franchise) ಆಡಳಿತ ಮಂಡಳಿ ತಲಾ 10 ಲಕ್ಷ ರೂ. ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ (KSCA) ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದೆ. ಹೀಗಾಗಿ ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಸಿಗಲಿದೆ. ಜೊತೆಗೆ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ಚಿಕಿತ್ಸಾ ವೆಚ್ಚವನ್ನೂ ಭರಿಸುವುದಾಗಿ ಹೇಳಿದೆ.

    ಈ ಕುರಿತು ಆರ್‌ಸಿಬಿ ಮಂಡಳಿ ತನ್ನ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಬೆಂಗಳೂರಿನಲ್ಲಿ ನಿನ್ನೆ ನಡೆದ ಘಟನೆ ನಿಜಕ್ಕೂ ದುರದೃಷ್ಟಕರ. ಇದು ಆರ್‌ಸಿಬಿ ಕುಟುಂಬಕ್ಕೆ ಅತೀವವಾದ ನೋವುಂಟು ಮಾಡಿದೆ. ಆರ್‌ಸಿಬಿ ಮೃತರ 11 ಕುಟುಂಬಗಳಿಗೆ ತಲಾ 10 ಲಕ್ಷ ರೂ.ಗಳ ಆರ್ಥಿಕ ಸಹಾಯ ಘೋಷಿಸಿದೆ. ಇದಲ್ಲದೇ ಈ ದುರಂತ ಘಟನೆಯಲ್ಲಿ ಗಾಯಗೊಂಡ ಅಭಿಮಾನಿಗಳಿಗೆ ಸಹಕರಿಸಲು ಆಸಿಬಿ ಕೇರ್ಸ್‌ ಎಂಬ ನಿಧಿಯನ್ನೂ ಸಹ ರಚಿಸಲಾಗುತ್ತಿದೆ. ನಾವು ಮಾಡುವ ಎಲ್ಲ ಒಳ್ಳೆಯದರಲ್ಲಿ, ನಮ್ಮ ಹೃದಯದಲ್ಲಿ ಯಾವಾಗಲೂ ಅಭಿಮಾನಿಗಳಿರುತ್ತಾರೆ. ದುಃಖದಲ್ಲಿಯೂ ನಾವು ಅವರೊಟ್ಟಿಗಿರುತ್ತೇವೆ ಎಂದು ಭಾವುಕ ಸಂದೇಶವನ್ನು ಹಂಚಿಕೊಂಡಿದೆ.

    ಏನಿದು ಪ್ರಕರಣ?
    ರಾಯಲ್ ಚಾಲೆಂಜರ್ಸ್ ಬೆಂಗಳೂರು 18 ವರ್ಷಗಳ ಬಳಿಕ ಐಪಿಎಲ್ ಚಾಂಪಿಯನ್ ಪಟ್ಟವನ್ನೇನೋ ಅಲಂಕರಿಸಿದೆ. ಆದರೆ, ಆರ್‌ಸಿಬಿ ಫ್ಯಾನ್ಸ್ ಐತಿಹಾಸಿಕ ಕ್ಷಣದ ಸಂಭ್ರಮದಲ್ಲಿ ದುರಂತ ಸಂಭವಿಸಿದೆ. 10ಕ್ಕೂ ಹೆಚ್ಚು ಅಭಿಮಾನಿಗಳು ಸಾವನ್ನಪ್ಪಿ ಸೂತಕವಾಗಿ ಆಗಿಬಿಟ್ಟಿದೆ. ಪಂಜಾಬ್ ವಿರುದ್ಧ ಬೆಂಗಳೂರು 6 ರನ್‌ಗಳ ಭರ್ಜರಿ ಜಯ ಸಾಧಿಸ್ತಿದ್ದಂತೆಯೇ ಸಿಲಿಕಾನ್ ಸಿಟಿಯಲ್ಲಿ ನಿನ್ನೆ ರಾತ್ರಿಯೇ ದೀಪಾವಳಿಯಂಥಹ ಸಂಭ್ರಮ ಇತ್ತು. ಇವತ್ತು ಇಡೀ ದಿನ ಹೆಚ್‌ಎಎಲ್ ಏರ್‌ಪೋರ್ಟ್ ರೋಡ್, ತಾಜ್ ವೆಸ್ಟ್ ಎಂಡ್ ಹೊಟೇಲ್ ರೋಡ್, ವಿಧಾನಸೌಧ, ಚಿನ್ನಸ್ವಾಮಿ ಸ್ಟೇಡಿಯಂ ರಸ್ತೆ ಸುತ್ತ ಮುತ್ತ ರೆಡ್ ಆರ್ಮಿ ಎಲ್ಲಾ ಕಡೆ ಆರ್‌ಸಿಬಿ ತಂಡಕ್ಕೆ ತಮ್ಮ ಅಭಿಮಾನ ತೋರಿದರು.

    ಇವತ್ತು ದಿಢೀರನೆ ವಿಜಯೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದರಿಂದ ಅಭಿಮಾನಿಗಳ ಸುನಾಮಿಯೇ ಸೃಷ್ಟಿ ಆಯ್ತು… ಉಚಿತ ಪ್ರವೇಶ ಆಗಿದ್ದರಿಂದ ಕ್ರೀಡಾಂಗಣಕ್ಕೆ ಫ್ಯಾನ್ಸ್ ಹರಿದುಬಂದಿತ್ತು. ಗೇಟ್ ನಂಬರ್ 18, 19, 20ರ ಬಳಿ ಅಭಿಮಾನಿ ಸಾಗರ ತಡೆಯಲು ಪೊಲೀಸರು ಹೈರಾಣಾಗಿ ಹೋದರು. ಒಂದು ಹಂತದಲ್ಲಿ ಲಾಠಿಯನ್ನೂ ಬೀಸಿದರು. ಕ್ಷಣ ಕ್ಷಣಕ್ಕೂ ಆರ್‌ಸಿಬಿ ಅಭಿಮಾನಿಗಳ ಸುನಾಮಿ ಹೆಚ್ಚುತ್ತಲೇ ಇತ್ತು. ಆದರೆ, ಗೇಟ್ ನಂ.12ರ ಬಳಿ ಗೇಟ್ ತೆಗೆಯುತ್ತಿದ್ದಂತೆಯೇ ಭಾರೀ ಪ್ರಮಾಣದಲ್ಲಿ ನೂಕು ನುಗ್ಗಲು ನಡೀತು. ಒಬ್ಬರ ಮೇಲೋಬ್ಬರು ಬಿದ್ದರು, ಉಸಿರಾಡೋಕೂ ಕೂಡ ಸಾಧ್ಯವಾಗಲಿಲ್ಲ. ತಕ್ಷಣವೇ ಹತ್ತಿರದ ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆ (ಮಲ್ಯ ರಸ್ತ್ರೆ), ಮಣಿಪಾಲ್‌ಗೆ ದಾಖಲಿಸಲಾಯಿತು. ಆದರೆ, ಬೌರಿಂಗ್ ಆಸ್ಪತ್ರೆಯಲ್ಲಿ 6, ವೈದೇಹಿ ಆಸ್ಪತ್ರೆಯಲ್ಲಿ 4 ಹಾಗೂ ಮಣಿಪಾಲ ಆಸ್ಪತ್ರೆಯಲ್ಲಿ ಒಬ್ಬರು ಸಾವನ್ನಪ್ಪಿದರು.

  • ಮಗಳಿಗೆ ಮದುವೆ ಮಾಡಲು ಯೋಜಿಸಿದ್ದೆವು, ನಮ್ಮ ಕಷ್ಟ ಯಾವ ತಂದೆ-ತಾಯಿಗೂ ಬೇಡ: ಮೃತ ಟೆಕ್ಕಿ ತಂದೆ ಕಣ್ಣೀರು

    ಮಗಳಿಗೆ ಮದುವೆ ಮಾಡಲು ಯೋಜಿಸಿದ್ದೆವು, ನಮ್ಮ ಕಷ್ಟ ಯಾವ ತಂದೆ-ತಾಯಿಗೂ ಬೇಡ: ಮೃತ ಟೆಕ್ಕಿ ತಂದೆ ಕಣ್ಣೀರು

    – ಸಾಫ್ಟ್‌ವೇರ್‌ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ ಸಹನಾ ಕಾಲ್ತುಳಿತಕ್ಕೆ ಬಲಿ

    ಕೋಲಾರ: ಮಗಳಿಗೆ ಮದುವೆ ಮಾಡಬೇಕು ಎಂದುಕೊಂಡಿದ್ದೆವು. ಈಗ ಅವಳೇ ಇಲ್ಲ. ನಮಗಾದ ಕಷ್ಟ ಯಾವ ತಂದೆ-ತಾಯಿಗೂ ಬರುವುದು ಬೇಡ ಎಂದು ಕಾಲ್ತುಳಿತಕ್ಕೆ ಮೃತಪಟ್ಟ ಟೆಕ್ಕಿ ಸಹನಾ ತಂದೆ ಕಣ್ಣೀರಿಟ್ಟಿದ್ದಾರೆ.

    ಕೋಲಾರದಲ್ಲಿ (Kolar) ‘ಪಬ್ಲಿಕ್ ಟಿವಿ’ ಜೊತೆ ಮಾತನಾಡುವಾಗ ಸಹನಾ ತಂದೆ ಸುರೇಶ್ ಬಾಬು ಕಣ್ಣೀರಾಕಿದ್ದಾರೆ. ಚೆನ್ನಾಗಿ ಓದಿ ಇಂಜಿನಿಯರಿಂಗ್ ಮಾಡಿ ಕೆಲಸ‌ ಮಾಡ್ತಾ ಇದ್ದಳು. ತಂದೆ-ತಾಯಿ ಮಾತು ಮೀರದೆ ಒಳ್ಳೆಯ ಮಗಳಾಗಿದ್ದಳು. ಕಂಪನಿಯೊಂದರಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದಳು. ಮದುವೆ ಕೂಡ ಮಾಡಬೇಕು ಎಂದುಕೊಂಡಿದ್ದೆವು. ನಿನ್ನೆ ನಮಗೆ ತಿಳಿಸಿ ಆರ್‌ಸಿಬಿ ವಿಜಯೋತ್ಸವಕ್ಕೆ ತೆರಳಿದ್ದಳು. ಈ ಮೊದಲು ಆರ್‌ಸಿಬಿ ಮ್ಯಾಚ್ ನೋಡೋದಕ್ಕೆ ಹೋಗಿದ್ದಳು. ಆದರೆ, ಕಾಲ್ತುಳಿತದಲ್ಲಿ ಅಮಾಯಕರು ಬಲಿಯಾಗಿದ್ದಾರೆ ಎಂದು ನೊಂದು ನುಡಿದಿದ್ದಾರೆ. ಇದನ್ನೂ ಓದಿ: ಆರ್‌ಸಿಬಿ ಟೀಶರ್ಟ್‌ನಿಂದ ಮೃತ ಪತ್ನಿಯ ಗುರುತು ಪತ್ತೆ ಮಾಡಿದ ಪತಿ

    RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಸಂಭವಿಸಿದ್ದು ಸರ್ಕಾರದ ನಿರ್ಲಕ್ಷ್ಯದಿಂದ ಎಂದು ರಾಜ್ಯ ಸರ್ಕಾರದ ವಿರುದ್ಧ ಸಹನಾ ಪೋಷಕರ ಮತ್ತು ಸ್ನೇಹಿತರು ಆಕ್ರೋಶ ಹೊರಹಾಕಿದ್ದಾರೆ. ಮೃತ ಸಹನಾ, ಶಿಕ್ಷಕ ದಂಪತಿಯಾದ ಸುರೇಶ್ ಬಾಬು ಹಾಗೂ ಮಂಜುಳಾ ಮೊದಲನೇ ಪುತ್ರಿಯಾಗಿದ್ದರು.

    ಒಂದೇ ಸಮಯದಲ್ಲಿ ಎರಡೂ ಕಡೆ ಸಂಭ್ರಮಾಚಾರಣೆ ಮಾಡಿದ್ದು ಸರಿ ಇಲ್ಲ. ಜನರು ಒಂದೇ ಸಮನೆ ನುಗ್ಗಿದ ಹಿನ್ನೆಲೆ ಅಮಾಯಕರು ಬಲಿಯಾಗಿದ್ದಾರೆ. ಸರ್ಕಾರ ಈ ಬಗ್ಗೆ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕಿತ್ತು. ಸರ್ಕಾರದ ನಿರ್ಲಕ್ಷ್ಯದಿಂದ ಮತ್ತು ಸರಿಯಾದ ಪ್ಲಾನ್‌ ಮಾಡಿಕೊಳ್ಳದ ಕಾರಣ 11 ಜನ ಅಮಾಯಕರು ಬಲಿಯಾದರು ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಕೇಸ್‌ – ಪೊಲೀಸರನ್ನ ಸಂಪರ್ಕಿಸದೇ ವಿಕ್ಟರಿ ಪೆರೇಡ್‌ ಘೋಷಿಸಿದ್ದ RCB ಫ್ರಾಂಚೈಸಿ

  • KSCA ಪ್ರಸ್ತಾಪವನ್ನು ಸರ್ಕಾರ ದಿಢೀರ್‌ ಒಪ್ಪಿಕೊಂಡಿದ್ದರಿಂದ ದುರಂತ!

    KSCA ಪ್ರಸ್ತಾಪವನ್ನು ಸರ್ಕಾರ ದಿಢೀರ್‌ ಒಪ್ಪಿಕೊಂಡಿದ್ದರಿಂದ ದುರಂತ!

    ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಪ್ರಸ್ತಾಪವನ್ನು ಸರ್ಕಾರ  ದಿಢೀರ್ ಆಗಿ ಒಪ್ಪಿಕೊಂಡ ಕಾರಣ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (Chinnaswamy Stadium) ಕಾಲ್ತುಳಿತ ನಡೆದಿದೆ.

    ಹೌದು. ಬುಧವಾರ ಆರ್‌ಸಿಬಿ (RCB) ವಿಜಯೋತ್ಸವ ಆಚರಣೆ ಮಾಡುವುದಕ್ಕೆ ಕೆಎಸ್‌ಸಿಎ ಸರ್ಕಾರದ ಬಳಿ ಅನುಮತಿ ಕೇಳಿತ್ತು. ಕೆಎಸ್‌ಸಿಎ ಅನುಮತಿಗೆ ಸರ್ಕಾರ ಬುಧವಾರ ಬೇಡ ಬೇರೆ ದಿನ ಆಯೋಜನೆ ಮಾಡಿ ಎಂದು ಸೂಚಿಸಬಹುದಿತ್ತು. ಆದರೆ ಸರ್ಕಾರ ಚಿನ್ನಸ್ವಾಮಿ ಸ್ಟೇಡಿಯಂ ಕಾರ್ಯಕ್ರಮದ ಜೊತೆ ಹೆಚ್ಚುವರಿಯಾಗಿ ವಿಧಾನಸೌಧದ (Vidhana Soudha) ಕಾರ್ಯಕ್ರಮವನ್ನು ಸೇರಿಸಿತ್ತು.

    ಎರಡು ಕಾರ್ಯಕ್ರಮಗಳ ಘೋಷಣೆಯಾದ ನಂತರ ಗೃಹ ಇಲಾಖೆ ಯಾವ ರೀತಿ ಕಾರ್ಯಕ್ರಮ? ಎರಡು ಕಡೆ ಎಷ್ಟು ಜನ ಸೇರಬಹುದು? ಸಿದ್ದತೆ ಹೇಗೆ ಎಂಬುದರ ಕುರಿತು ಮುಂಜಾಗ್ರತಾ ಕ್ರಮಗಳನ್ನು ಮಾಡಬೇಕಿತ್ತು. ಇದನ್ನೂ ಓದಿ: ಆರ್‌ಸಿಬಿ ಟೀಶರ್ಟ್‌ನಿಂದ ಮೃತ ಪತ್ನಿಯ ಗುರುತು ಪತ್ತೆ ಮಾಡಿದ ಪತಿ

    ಚಿನ್ನಸ್ವಾಮಿಗೆ ರೋಡ್‌ ಶೋ ಮೂಲಕ ಆರ್‌ಸಿಬಿ ಆಟಗಾರರು ಬರಬೇಕಿತ್ತು. ಆದರೆ ವಿಕ್ಟರಿ ಪರೇಡ್‌ಗೆ ಭದ್ರತಾ ಕಾರಣ ನೀಡಿ ಪೊಲೀಸ್‌ ಇಲಾಖೆ ಅನುಮತಿ ನೀಡಿರಲಿಲ್ಲ. ಆದರೆ ಸರ್ಕಾರ ರೋಡ್‌ ಶೋ ಜಾಗದಲ್ಲಿ ವಿಧಾನಸೌಧದ ಕಾರ್ಯಕ್ರಮ ಸೇರ್ಪಡೆ ಮಾಡಿತ್ತು. ಯಾವುದೇ ಪೂರ್ವಭಾವಿ ಸಭೆ ಮಾಡದೇ ಏಕಾಏಕಿ ನಿರ್ಧಾರ ಮಾಡಿ ಅನುಮತಿ ನೀಡಿದ್ದರಿಂದ ದುರಂತ ಸಂಭವಿಸಿದೆ.

    ದುರಂತಕ್ಕೆ ಕಾರಣ ಏನು?
    ಮಧ್ಯಾಹ್ನ ಮೂರು ಗಂಟೆಯವರೆಗೆ ಅಭಿಮಾನಿಗಳು ಸರದಿಯಲ್ಲೇ ನಿಂತುಕೊಂಡಿದ್ದರು. ವಿಕ್ಟರಿ ಪರೇಡ್‌ ರದ್ದಾದ ವಿಚಾರ ತಿಳಿದ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿಅಭಿಮಾನಿಗಳು ಚಿನ್ನಸ್ವಾಮಿಯತ್ತ ಬರತೊಡಗಿದರು.

    ಈ ಸಂದರ್ಭದಲ್ಲಿ ಕೆಲ ಗೇಟ್‌ಗಳಿಂದ ಅಭಿಮಾನಿಗಳನ್ನು ಒಳಗಡೆ ಬಿಡುತ್ತಿದ್ದರು. ಕಾರ್ಯಕ್ರಮ ಉಚಿತ ಎಂದು ಹೇಳಿದ್ದರೂ ಯಾಕೆ ಉಳಿದ ಗೇಟ್‌ಗಳಿಂದ ಜನರನ್ನು ಒಳಗಡೆ ಬಿಡಲಾಗುತ್ತಿದೆ ಎಂದು 18,19,20 ಗೇಟ್‌ನಲ್ಲಿದ್ದ ಅಭಿಮಾನಿಗಳು ಆಯೋಜಕರು, ಪೊಲೀಸರ ಜೊತೆ ಪ್ರಶ್ನೆ ಮಾಡಲು ಆರಂಭಿಸಿದ್ದಾರೆ.

     

    ಗೇಟ್‌ಗಳ ಬಳಿ ಅಭಿಮಾನಿಗಳ ಸಂಖ್ಯೆ ಜಾಸ್ತಿ ಆಗುತ್ತಿದ್ದಂತೆ ಕೆಲವರು ಸ್ಟೇಡಿಯಂ ಕಾಂಪೌಂಡ್‌ ಹತ್ತಿ ಒಳ ನುಗ್ಗಲು ಆರಂಭಿಸಿದ್ದಾರೆ. ಅಭಿಮಾನಿಗಳ ಹುಚ್ಚಾಟವನ್ನು ನಿಉಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದಾರೆ.

    ತಳ್ಳಾಟ ನೂಕಾಟ ಆರಂಭವಾಗುತ್ತಿದ್ದಂತೆ ದಿಢೀರ್‌ ಗೇಟ್‌ ಓಪನ್‌ ಮಾಡಲಾಗಿದೆ. ಓಪನ್‌ ಮಾಡಿದ್ದೇ ತಡ ಜನ ಒಳಗಡೆ ನುಗ್ಗಲು ಓಡಿದ್ದಾರೆ. ಓಡುವ ವೇಳೆ ಕೆಳಗೆ ಕೆಲವರು ಬಿದ್ದಿದ್ದಾರೆ. ಬಿದ್ದವರ ಮೇಲೆ ಓಡಿದ್ದರಿಂದ ದುರಂತ ಸಂಭವಿಸಿದೆ.

  • Stampede Case | ದೊಡ್ಡಮಟ್ಟದ ಸಮಾರಂಭಗಳಿಗೆ ಹೊಸ ಎಸ್‌ಒಪಿ ರೂಪಿಸುತ್ತೇವೆ – ಪರಮೇಶ್ವರ್

    Stampede Case | ದೊಡ್ಡಮಟ್ಟದ ಸಮಾರಂಭಗಳಿಗೆ ಹೊಸ ಎಸ್‌ಒಪಿ ರೂಪಿಸುತ್ತೇವೆ – ಪರಮೇಶ್ವರ್

    – ಎಲ್ಲಿ, ಏನು ಲೋಪ ಆಗಿದೆ ಅನ್ನೋದು ಗೊತ್ತಾದ ಬಳಿಕ ತಪ್ಪು ಯಾರದ್ದು ಅಂತ ಹೊತ್ತಾಗುತ್ತೆ ಎಂದ ಪರಂ

    ಬೆಂಗಳೂರು: ದೊಡ್ಡ‌ಮಟ್ಟದ ಸಭೆ, ಸಮಾರಂಭ ಮತ್ತು ವಿಜಯೋತ್ಸವ ಕಾರ್ಯಕ್ರಮಗಳಿಗೆ ಹೊಸ ಎಸ್‌ಒಪಿ (ಸ್ಟ್ಯಾಂಡರ್ಡ್ ಆಪರೇಟಿವ್ ಪ್ರೊಸಿಜರ್) ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ (G Parameshwar) ಹೇಳಿದರು.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ನಡೆದ ಘಟನೆ ರಾಜ್ಯದ ಕ್ರಿಕೆಟ್ ಇತಿಹಾಸದಲ್ಲಿ (Cricket History) ಆಗಿರಲಿಲ್ಲ. ಮೊದಲನೇಯದಾಗಿ ಸಾವನ್ನಪ್ಪಿರುವ ಆತ್ಮಕ್ಕೆ ಶಾಂತಿ ಕೊರುತ್ತೇನೆ. ಕುಟುಂಬವರ್ಗದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ. ಸಿಎಂ ಅ‌ವರು ನಿನ್ನೆ ಸಭೆ ನಡೆಸಿ, ಅನೇಕ ಮಾಹಿತಿ ಪಡೆದು ಮಾತನಾಡಿದ್ದಾರೆ. ಈ ಬಗ್ಗೆ ಮ್ಯಾಜೆಸ್ಟ್ರೆಟಿಯಲ್ ತನಿಖೆಗೆ ಆದೇಶ ಮಾಡಿದ್ದಾರೆ. ಬೆಂಗಳೂರು ನಗರ ಜಿಲ್ಲಾಧಿಕಾರಿ (Bengaluru City DC) ನೇತೃತ್ವದಲ್ಲಿ ತನಿಖೆಯಾಗಬೇಕೆಂದು ಆದೇಶಿಸಲಾಗಿದೆ. ಅವರು ಯಾರೇ ಆಗಿರಲಿ ಕಠಿಣವಾದ ಕ್ರಮ ತೆಗೆದುಕೊಳ್ಳುತ್ತೇವೆ. ಈಗ ವಿವರಣೆ ಮಾಡಲು ಹೋಗುವುದಿಲ್ಲ. ತನಿಖೆಯ ವರದಿ ಬರುವವರೆಗು ಹೇಳಲು ಸಾಧ್ಯವಿಲ್ಲ ಎಂದು ಪರಮೇಶ್ವರ್ ಹೇಳಿದರು.

    ದುರ್ಘಟನೆಯಲ್ಲಿ 11 ಜನ ಸಾವನ್ನಪ್ಪಿದ್ದು, 56 ಜನ ಗಾಯಗೊಂಡಿದ್ದಾರೆ. 46 ಜನ ಚಿಕಿತ್ಸೆ ಪಡೆದು ಮನೆಗಳಿಗೆ ಹೋಗಿದ್ದಾರೆ. 10 ಜನ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ಪಡೆಯುತ್ತಿದ್ದು, ಗಂಭೀರವಾಗಿ ಗಾಯಗೊಂಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದರು. ಇದನ್ನೂ ಓದಿ: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣ – ಮಕ್ಕಳ ಸಾವು ನೆನೆದು ಕಣ್ಣೀರಿಟ್ಟ ಡಿಕೆಶಿ

    ಇಂತಹ ಘಟನೆಗಳು ಆಗಬಾರದು ಎಂಬ ವಿಚಾರದಲ್ಲಿ ಗೃಹ ಇಲಾಖೆಯಿಂದ ಒಂದು ಹೊಸ ಎಸ್‌ಒಪಿ (ಸ್ಟ್ಯಾಂಡರ್ಡ್ ಆಪರೇಟಿವ್ ಪ್ರೊಸಿಜರ್) ಮಾಡುತ್ತೇವೆ.‌ ಇನ್ಮುಂದೆ ಯಾವುದೇ ದೊಡ್ಡ ಸಮಾರಂಭ, ಸಭೆ, ವಿಜಯೋತ್ಸವ ನಡೆಯುವಾಗ ಪೊಲೀಸ್ ಇಲಾಖೆಯ ನಿರ್ದೇಶನ ಏನು ಬರುತ್ತದೆ, ಅದರ ಚೌಕಟ್ಟಿನಲ್ಲಿ ಕಾರ್ಯಕ್ರಮಗಳನ್ನು ಮಾಡಬೇಕು ಎಂದು ಪರಮೇಶ್ವರ್ ಹೇಳಿದರು. ಇದನ್ನೂ ಓದಿ: Stampede Case | ಕಾಲ್ತುಳಿತ ಬಗ್ಗೆ ʻಪಬ್ಲಿಕ್‌ ಟಿವಿʼ ಪ್ರಶ್ನೆಗೆ ಉತ್ತರ ನೀಡದೇ ನುಣುಚಿದ KSCA

    ಹೊಸ ಎಸ್‌ಒಪಿ ಮಾಡುತ್ತೇವೆ. ನಾವು ಕೆಲವು ಸೂಚನೆಗಳನ್ನು ಕೊಡುತ್ತೇವೆ. ಯಾವತ್ತು ಕೂಡ ಇಂತಹ ಘಟನೆಗಳಾಗಬಾರದು. ಅಮಾಯಕರ ಸಾವುಗಳು ಆಗಬಾರದು. ಇದೆಲ್ಲವನ್ನು ನೋಡಿದಾಗ ನೋವಾಗುತ್ತದೆ. ನಿನ್ನೆ ಶವಗಾರದಲ್ಲಿ ನೋಡಿದಾಗ ದುಃಖವಾಯಿತು. 20-25 ವರ್ಷ ವಯಸ್ಸಿನವರು ಸಂತೋಷದಿಂದ ಆಚರಣೆಗೆ ಬಂದಾಗ ಜೀವವನ್ನೇ‌ ಕಳೆದುಕೊಂಡಿದ್ದಾರೆ. ಇದೆಲ್ಲವನ್ನು ಯಾರು ಊಹೆ ಮಾಡಿರಲಿಲ್ಲ. ಘಟನೆಗೆ ಸಂಬಂಧಿಸಿದಂತೆ ಕಠಿಣವಾದ ಕ್ರಮ ತೆಗೆದುಕೊಳ್ಳುತ್ತೇವೆ. ಎಲ್ಲಿ ಲೋಪವಾಗಿದೆ ಎಂಬುದನ್ನು ಪರಿಶೀಲಿಸುತ್ತೇವೆ ಎಂದು ತಿಳಿಸಿದರು.

    ಒಬ್ಬ ವ್ಯಕ್ತಿ ತನಗಿದ್ದ ಒಬ್ಬ ಮಗನನ್ನ ಕಳೆದಕೊಂಡ ಬಗ್ಗೆ ವೈದೇಹಿ ಆಸ್ಪತ್ರೆಯಲ್ಲಿ ಹೇಳಿಕೊಂಡರು. ಮಗ ಕಾಲೇಜಿಗೆ ಹೋಗುವುದಾಗಿ ಬೆಳಗ್ಗೆ 6 ಗಂಟೆಗೆ ಮನೆ ಬಿಟ್ಟಿದ್ದ. ಈ ರಿತೀಯಾಗಿದೆ. ಸಮುದಾಯ ಸಂತೋಷದಲ್ಲಿ ಬಂದರು. ಇದನ್ನು ಯಾರು ಕೂಡ ಊಹಿಸಿರಲಿಲ್ಲ. 34 ಸಾವಿರ ಸೀಟುಗಳ ಸಾಮಾರ್ಥ್ಯ ಇರುವ ಸ್ಟೇಡಿಯಂಗೆ 3 ಲಕ್ಷ‌ ಜನ ಬಂದಿದ್ದರು. ಇದನ್ನೂ ಓದಿ: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಕೇಸ್‌ – ಪೊಲೀಸರನ್ನ ಸಂಪರ್ಕಿಸದೇ ವಿಕ್ಟರಿ ಪೆರೇಡ್‌ ಘೋಷಿಸಿದ್ದ RCB ಫ್ರಾಂಚೈಸಿ

    ಮೆಟ್ರೋ ಸಂಸ್ಥೆಯವರು ನೀಡಿರುವ ಮಾಹಿತಿ ಪ್ರಕಾರ ಬೆಳಗ್ಗೆ 9 ಗಂಟೆಯಿಂದ ರಾತ್ರಿ 11 ಗಂಟೆವರೆಗೆ 8.7 ಲಕ್ಷ ಜನ ಮೆಟ್ರೋದಲ್ಲಿ ಪ್ರಯಾಣ‌ ಮಾಡಿದ್ದಾರೆ. ತನಿಖೆಯ ವರದಿ ಬರುವವರೆಗೂ ಏನನ್ನು ಹೇಳುವುದಿಲ್ಲ‌. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಘಟನೆ ನಡೆದ ಸ್ಥಳ‌ ಪರಿಶೀಲನೆ ಮಾಡುತ್ತೇನೆ. ಆರ್‌ಸಿಬಿ, ಕೆಎಸ್‌ಸಿಎ ಅವರೊಂದಿಗೆ ಸಭೆ ಮಾಡುತ್ತೇನೆ. ತಾಂತ್ರಿಕವಾಗಿ ಏನೇ ಇದ್ದರು ಸಹ ಡಿಜಿಪಿ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರು ನೋಡಿಕೊಳ್ಳುತ್ತಾರೆ ಎಂದು ಹೇಳಿದರು.

    ಎಲ್ಲಿ ಮತ್ತು ಏನು ಲೋಪ ಆಗಿದೆ ಎಂಬುದು ಗೊತ್ತಾದ ಬಳಿಕ ತಪ್ಪು ಯಾರದ್ದು ಎಂಬುದು ಗೊತ್ತಾಗಲಿದೆ ಎಂದರು. ಇದನ್ನೂ ಓದಿ: ಕಾಲ್ತುಳಿತ ಸರ್ಕಾರದ ಪ್ರಾಯೋಜಿತ ಅಮಾಯಕರ ಹತ್ಯಾಕಾಂಡ: ಅಶೋಕ್ ಕಿಡಿ

  • ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣ – ಮಕ್ಕಳ ಸಾವು ನೆನೆದು ಕಣ್ಣೀರಿಟ್ಟ ಡಿಕೆಶಿ

    ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣ – ಮಕ್ಕಳ ಸಾವು ನೆನೆದು ಕಣ್ಣೀರಿಟ್ಟ ಡಿಕೆಶಿ

    – ನನ್ನ ಹೊಟ್ಟೆ ಉರಿಯುತ್ತಿದೆ ಎಂದು ಗದ್ಗದಿತರಾದ ಡಿಸಿಎಂ

    ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಿಂದ (Stampede) ಉಂಟಾದ ಸಾವು-ನೋವು ನೆನೆದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ (DK Shivakumar) ಕಣ್ಣೀರಿಟ್ಟಿದ್ದಾರೆ. ಮಕ್ಕಳ ಸಾವು ನೆನೆದು ಗದ್ಗದಿತರಾಗಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳೊಂದಿಗೆ ಈ ಕುರಿತು ಮಾತನಾಡಿದ ಅವರು, ನನಗೆ ಹೊಟ್ಟೆ ಉರಿಯುತ್ತಿದೆ, ಆ ಮಕ್ಕಳ ತಾಯಿ ಮಾತನಾಡೋದನ್ನ ಸಹಿಸೋಕೆ ಆಗ್ತಾ ಇಲ್ಲ ಅಂತ ಕಣ್ಣೀರು ಹಾಕಿದ್ರು. ಇದನ್ನೂ ಓದಿ: Stampede Case | ಕಾಲ್ತುಳಿತ ಬಗ್ಗೆ ʻಪಬ್ಲಿಕ್‌ ಟಿವಿʼ ಪ್ರಶ್ನೆಗೆ ಉತ್ತರ ನೀಡದೇ ನುಣುಚಿದ KSCA

    ಇದನ್ನ ಯಾವ ಫ್ಯಾಮಿಲಿ ಕೂಡ ತಡೆದುಕೊಳ್ಳಲ್ಲ. ಪೊಲೀಸ್ ಇಲಾಖೆ (Police Department) ಕೂಡಲೇ ಹೇಳ್ತು ಇದನ್ನ ತಡೆಯಿರಿ ಅಂತ. ನಾನೂ ಕೂಡಲೇ ಮ್ಯಾನೇಜ್ಮೆಂಟ್‌ಗೆ ಹೇಳಿದೆ, ಅವರು ಹೋಗೋದಕ್ಕೂ ಕೂಡ ಜಾಗ ಇರಲಿಲ್ಲ. ಕೂಡಲೇ ಅವರನ್ನ ನಾನು ಕಾರ್‌ನಲ್ಲಿ ಕೂರಿಸಿಕೊಂಡು ಹೋದೆ, ಮಾಧ್ಯದವರು ಹೇಳಿದ ಬಳಿಕವೇ ನಮಗೆ ಗೊತ್ತಾಯ್ತು ಎಂದು ತಿಳಿಸಿದ್ರು. ಇದನ್ನೂ ಓದಿ: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಕೇಸ್‌ – ಪೊಲೀಸರನ್ನ ಸಂಪರ್ಕಿಸದೇ ವಿಕ್ಟರಿ ಪೆರೇಡ್‌ ಘೋಷಿಸಿದ್ದ RCB ಫ್ರಾಂಚೈಸಿ

    ಯಾರು ಏನೇ ಹೇಳಿದರೂ ಟೀಕೆ ಮಾಡಲಿ, ಸದನದಲ್ಲಿ ಎಲ್ಲವೂ ಬರಲಿದೆ. ಅವರವರ ಕಾಲದಲ್ಲಿ ಏನಾಯ್ತು ಅಂತ ಗೊತ್ತಿದೆ. ರಾಜ್ ಕುಮಾರ್ ಸತ್ತಾಗ ಏನಾಯ್ತು ಅಂತ ಗೊತ್ತಿದೆ. ನಾನು ಆಗ ದೆಹಲಿಯಲ್ಲಿ ಇದ್ದೆ, ಕುಮಾರಸ್ವಾಮಿ ಟೀಕೆ ಮಾಡುತ್ತಲೇ ಇರಲಿ. ಡರ್ಟಿ ಪಾಲಿಟಿಕ್ಸ್ ನಾನು ಮಾತಾಡಲ್ಲ. ಹೌದು ಯಾರೇ ಮಾಡಿದರೂ ಕೂಡ ಸರ್ಕಾರ ಜವಬ್ದಾರಿ ತೆಗೆದುಕೊಳ್ಳುತ್ತದೆ. ಇದು ಕರ್ನಾಟಕದ ಇಮೇಜ್‌, ನಮ್ಮ ಮನಸ್ಸಿಗೆ, ನಮ್ಮ ಕುಟುಂಬಕ್ಕೂ ನೋವಾಗಿದೆ. ಒಬ್ಬರು ತಾಯಿ ಹೇಳ್ತಾರೆ ಪೋಸ್ಟ್ ಮಾರ್ಟಮ್ ಮಾಡಬೇಡಿ ಅಂತ, ಎಷ್ಟು ಹೊಟ್ಟೆ ಉರಿಯಬೇಕು ಅಲ್ವ? ಈ ವಿಚಾರದಲ್ಲಿ ರಾಜಕೀಯ ಮಾಡೋದು ಬೇಡ ಅಂತ ಕಣ್ಣೀರಿಟ್ಟಿದ್ದಾರೆ.

    ಮುಂದುವರಿದು.. ಇವರು ಸಾವಿನ ಮೇಲೆಯೇ ರಾಜಕೀಯ ಮಾಡೋದು. ಬಿಜೆಪಿ, ಜೆಡಿಎಸ್‌ನ ಪೊಲಿಟಿಕಲ್ ಅಜೆಂಡಾನೇ ಅದು, 18 ವರ್ಷದ ಬಳಿಕ ಕಪ್ ಬಂದಿದೆ ಅಂದಾಗ ಸಹಜವಾಗಿ ಅಭಿಮಾನ ಇರುತ್ತದೆ. ಸಿಎಂ, ಗೃಹ ಸಚಿವರು, ಸರ್ಕಾರ ಶಾಕ್ ನಲ್ಲಿ ಇದೆ. ಇಷ್ಟು ದೊಡ್ಡ ಘಟನೆ ಆಗುತ್ತೆ ಅಂತ ಅಂದುಕೊಂಡೇ ಇರಲಿಲ್ಲ. ಈ ಪ್ರಕರಣ ಗಂಭೀರವಾಗಿ ತೆಗೆದುಕೊಂಡಿದ್ದೇವೆ. ನಾನು ಪೊಲಿಟಿಕಲ್ ಬಗ್ಗೆ, ವಿಪಕ್ಷದ ಟೀಕೆಗೆ ಮಾತನಾಡಲ್ಲ. ನಾನು ಜನರಿಗೆ ಮಾತ್ರ ಉತ್ತರ ಕೊಡ್ತೀನಿ. ಇವರೆಲ್ಲಾ ಪಾಲಿಟಿಕ್ಸ್ ಮಾಡೋ ಮಾಸ್ಟರ್ ಮೈಂಡ್ಸ್ ಅಷ್ಟೆ ಅಂತ ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾದ್ದು 5 ದಿನ, ಸಿಎಸ್‌ಕೆ 3 ದಿನದ ನಂತರ ಆಚರಣೆ ಮಾಡಿದ್ರೆ ಒಂದೇ ದಿನದಲ್ಲಿ ವಿಜಯೋತ್ಸವ ಆಚರಿಸಿದ್ದು ಯಾಕೆ? – ಜೆಡಿಎಸ್‌ ಆಕ್ರೋಶ

    ಏನಿದು ಪ್ರಕರಣ?
    ರಾಯಲ್ ಚಾಲೆಂಜರ್ಸ್ ಬೆಂಗಳೂರು 18 ವರ್ಷಗಳ ಬಳಿಕ ಐಪಿಎಲ್ ಚಾಂಪಿಯನ್ ಪಟ್ಟವನ್ನೇನೋ ಅಲಂಕರಿಸಿದೆ. ಆದರೆ, ಆರ್‌ಸಿಬಿ ಫ್ಯಾನ್ಸ್ ಐತಿಹಾಸಿಕ ಕ್ಷಣದ ಸಂಭ್ರಮದಲ್ಲಿ ದುರಂತ ಸಂಭವಿಸಿದೆ. 10ಕ್ಕೂ ಹೆಚ್ಚು ಅಭಿಮಾನಿಗಳು ಸಾವನ್ನಪ್ಪಿ ಸೂತಕವಾಗಿ ಆಗಿಬಿಟ್ಟಿದೆ. ಪಂಜಾಬ್ ವಿರುದ್ಧ ಬೆಂಗಳೂರು 6 ರನ್‌ಗಳ ಭರ್ಜರಿ ಜಯ ಸಾಧಿಸ್ತಿದ್ದಂತೆಯೇ ಸಿಲಿಕಾನ್ ಸಿಟಿಯಲ್ಲಿ ನಿನ್ನೆ ರಾತ್ರಿಯೇ ದೀಪಾವಳಿಯಂಥಹ ಸಂಭ್ರಮ ಇತ್ತು. ಇವತ್ತು ಇಡೀ ದಿನ ಹೆಚ್‌ಎಎಲ್ ಏರ್‌ಪೋರ್ಟ್ ರೋಡ್, ತಾಜ್ ವೆಸ್ಟ್ ಎಂಡ್ ಹೊಟೇಲ್ ರೋಡ್, ವಿಧಾನಸೌಧ, ಚಿನ್ನಸ್ವಾಮಿ ಸ್ಟೇಡಿಯಂ ರಸ್ತೆ ಸುತ್ತ ಮುತ್ತ ರೆಡ್ ಆರ್ಮಿ ಎಲ್ಲಾ ಕಡೆ ಆರ್‌ಸಿಬಿ ತಂಡಕ್ಕೆ ತಮ್ಮ ಅಭಿಮಾನ ತೋರಿದರು.

    ಇವತ್ತು ದಿಢೀರನೆ ವಿಜಯೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದರಿಂದ ಅಭಿಮಾನಿಗಳ ಸುನಾಮಿಯೇ ಸೃಷ್ಟಿ ಆಯ್ತು… ಉಚಿತ ಪ್ರವೇಶ ಆಗಿದ್ದರಿಂದ ಕ್ರೀಡಾಂಗಣಕ್ಕೆ ಫ್ಯಾನ್ಸ್ ಹರಿದುಬಂದಿತ್ತು. ಗೇಟ್ ನಂಬರ್ 18, 19, 20ರ ಬಳಿ ಅಭಿಮಾನಿ ಸಾಗರ ತಡೆಯಲು ಪೊಲೀಸರು ಹೈರಾಣಾಗಿ ಹೋದರು. ಒಂದು ಹಂತದಲ್ಲಿ ಲಾಠಿಯನ್ನೂ ಬೀಸಿದರು. ಕ್ಷಣ ಕ್ಷಣಕ್ಕೂ ಆರ್‌ಸಿಬಿ ಅಭಿಮಾನಿಗಳ ಸುನಾಮಿ ಹೆಚ್ಚುತ್ತಲೇ ಇತ್ತು. ಆದರೆ, ಗೇಟ್ ನಂ.12ರ ಬಳಿ ಗೇಟ್ ತೆಗೆಯುತ್ತಿದ್ದಂತೆಯೇ ಭಾರೀ ಪ್ರಮಾಣದಲ್ಲಿ ನೂಕು ನುಗ್ಗಲು ನಡೀತು. ಒಬ್ಬರ ಮೇಲೋಬ್ಬರು ಬಿದ್ದರು, ಉಸಿರಾಡೋಕೂ ಕೂಡ ಸಾಧ್ಯವಾಗಲಿಲ್ಲ. ತಕ್ಷಣವೇ ಹತ್ತಿರದ ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆ (ಮಲ್ಯ ರಸ್ತ್ರೆ), ಮಣಿಪಾಲ್‌ಗೆ ದಾಖಲಿಸಲಾಯಿತು. ಆದರೆ, ಬೌರಿಂಗ್ ಆಸ್ಪತ್ರೆಯಲ್ಲಿ 6, ವೈದೇಹಿ ಆಸ್ಪತ್ರೆಯಲ್ಲಿ 4 ಹಾಗೂ ಮಣಿಪಾಲ ಆಸ್ಪತ್ರೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

  • Stampede Case | ಕಾಲ್ತುಳಿತ ಬಗ್ಗೆ ʻಪಬ್ಲಿಕ್‌ ಟಿವಿʼ ಪ್ರಶ್ನೆಗೆ ಉತ್ತರ ನೀಡದೇ ನುಣುಚಿದ KSCA

    Stampede Case | ಕಾಲ್ತುಳಿತ ಬಗ್ಗೆ ʻಪಬ್ಲಿಕ್‌ ಟಿವಿʼ ಪ್ರಶ್ನೆಗೆ ಉತ್ತರ ನೀಡದೇ ನುಣುಚಿದ KSCA

    – RCB ಮ್ಯಾನೇಜ್ಮೆಂಟ್‌ನಿಂದಲೂ NO COMMENTS ಅಂತ ಪ್ರತಿಕ್ರಿಯೆ

    ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವಿಕ್ಟರಿ ಪರೇಡ್‌ ಸಂಭ್ರಮದ ವೇಳೆ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ʻಪಬ್ಲಿಕ್‌ ಟಿವಿʼಗೆ (Public TV) ಪ್ರತಿಕ್ರಿಯೆ ನೀಡಲು ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ ನುಣುಚಿಕೊಂಡಿದೆ. ಪ್ರತಿಕ್ರಿಯೆ ಕೇಳಿದ್ರೆ, ಹಿಂದೆ – ಮುಂದೆ ತಪ್ಪಿಸಿಕೊಂಡು, ಓಡಿದ್ದಾರೆ. ಕೆಎಸ್‌ಸಿಎ (KSCA) ಅಧಿಕಾರಿಗಳ ಈ ನಡೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

    ಹೌದು. ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ʻಪಬ್ಲಿಕ್‌ ಟಿವಿʼ ಕೆಎಸ್‌ಸಿಎ ಪ್ರಧಾನ ಕಾರ್ಯದರ್ಶಿ ಎ. ಶಂಕರ್‌ ಅವರನ್ನ ಸಂಪರ್ಕಿಸಿತ್ತು. ನಿರಂತರ ಪ್ರಯತ್ನ ಮಾಡಿದ್ರೂ, ಒಂದೇ ಒಂದು ಮಾತೂ ಆಡದ ಅಧಿಕಾರಿ ಹಿಂದೆ ಮುಂದೆ ತಪ್ಪಿಸಿಕೊಂಡು ಓದಿದ್ದಾರೆ. ಅತ್ತ ಆರ್‌ಸಿಬಿ ಆಡಳಿತ ಮಂಡಳಿ ಕೋಡ ನೋ ಕಾಮೆಂಟ್ಸ್‌ ಅಂತ ಪ್ರತಿಕ್ರಿಯೆ ನೀಡಿದೆ. ಜೊತೆಗೆ KSCA ಕಡೆಗೆ ಬೆರಳು ತೋರಿಸಿ ಸುಮ್ಮನಾಗಿದೆ. ಇದನ್ನೂ ಓದಿ: ಟೀಂ ಇಂಡಿಯಾದ್ದು 5 ದಿನ, ಸಿಎಸ್‌ಕೆ 3 ದಿನದ ನಂತರ ಆಚರಣೆ ಮಾಡಿದ್ರೆ ಒಂದೇ ದಿನದಲ್ಲಿ ವಿಜಯೋತ್ಸವ ಆಚರಿಸಿದ್ದು ಯಾಕೆ? – ಜೆಡಿಎಸ್‌ ಆಕ್ರೋಶ

    ಕೆಎಸ್‌ಸಿಎ, ಆರ್‌ಸಿಬಿ ಮ್ಯಾನೇಜ್ಮೆಂಟ್ ವಿರುದ್ಧ ದೂರು:
    ಇನ್ನೂ ಈ ನಡುವೆ ವಕೀಲ ರಂಗನಾಥ್ ರೆಡ್ಡಿ ಅವರು, ಚಿನ್ನಸ್ವಾಮಿ ಮೈದಾನದ ಬಳಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂದಿಸಿದಂತೆ ಕೆಎಸ್‌ಸಿಎ ಹಾಗೂ RCB ಮ್ಯಾನೇಜ್ಮೆಂಟ್ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಕೇಸ್‌ – ಪೊಲೀಸರನ್ನ ಸಂಪರ್ಕಿಸದೇ ವಿಕ್ಟರಿ ಪೆರೇಡ್‌ ಘೋಷಿಸಿದ್ದ RCB ಫ್ರಾಂಚೈಸಿ

    ಏನಿದು ಪ್ರಕರಣ?
    ರಾಯಲ್ ಚಾಲೆಂಜರ್ಸ್ ಬೆಂಗಳೂರು 18 ವರ್ಷಗಳ ಬಳಿಕ ಐಪಿಎಲ್ ಚಾಂಪಿಯನ್ ಪಟ್ಟವನ್ನೇನೋ ಅಲಂಕರಿಸಿದೆ. ಆದರೆ, ಆರ್‌ಸಿಬಿ ಫ್ಯಾನ್ಸ್ ಐತಿಹಾಸಿಕ ಕ್ಷಣದ ಸಂಭ್ರಮದಲ್ಲಿ ದುರಂತ ಸಂಭವಿಸಿದೆ. 10ಕ್ಕೂ ಹೆಚ್ಚು ಅಭಿಮಾನಿಗಳು ಸಾವನ್ನಪ್ಪಿ ಸೂತಕವಾಗಿ ಆಗಿಬಿಟ್ಟಿದೆ. ಪಂಜಾಬ್ ವಿರುದ್ಧ ಬೆಂಗಳೂರು 6 ರನ್‌ಗಳ ಭರ್ಜರಿ ಜಯ ಸಾಧಿಸ್ತಿದ್ದಂತೆಯೇ ಸಿಲಿಕಾನ್ ಸಿಟಿಯಲ್ಲಿ ನಿನ್ನೆ ರಾತ್ರಿಯೇ ದೀಪಾವಳಿಯಂಥಹ ಸಂಭ್ರಮ ಇತ್ತು. ಇವತ್ತು ಇಡೀ ದಿನ ಹೆಚ್‌ಎಎಲ್ ಏರ್‌ಪೋರ್ಟ್ ರೋಡ್, ತಾಜ್ ವೆಸ್ಟ್ ಎಂಡ್ ಹೊಟೇಲ್ ರೋಡ್, ವಿಧಾನಸೌಧ, ಚಿನ್ನಸ್ವಾಮಿ ಸ್ಟೇಡಿಯಂ ರಸ್ತೆ ಸುತ್ತ ಮುತ್ತ ರೆಡ್ ಆರ್ಮಿ ಎಲ್ಲಾ ಕಡೆ ಆರ್‌ಸಿಬಿ ತಂಡಕ್ಕೆ ತಮ್ಮ ಅಭಿಮಾನ ತೋರಿದರು. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣದ ಹೊಣೆ ಡಿಕೆಶಿ ಹೊರಬೇಕು: ಜೆಡಿಎಸ್

    ಇವತ್ತು ದಿಢೀರನೆ ವಿಜಯೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದರಿಂದ ಅಭಿಮಾನಿಗಳ ಸುನಾಮಿಯೇ ಸೃಷ್ಟಿ ಆಯ್ತು… ಉಚಿತ ಪ್ರವೇಶ ಆಗಿದ್ದರಿಂದ ಕ್ರೀಡಾಂಗಣಕ್ಕೆ ಫ್ಯಾನ್ಸ್ ಹರಿದುಬಂದಿತ್ತು. ಗೇಟ್ ನಂಬರ್ 18, 19, 20ರ ಬಳಿ ಅಭಿಮಾನಿ ಸಾಗರ ತಡೆಯಲು ಪೊಲೀಸರು ಹೈರಾಣಾಗಿ ಹೋದರು. ಒಂದು ಹಂತದಲ್ಲಿ ಲಾಠಿಯನ್ನೂ ಬೀಸಿದರು. ಕ್ಷಣ ಕ್ಷಣಕ್ಕೂ ಆರ್‌ಸಿಬಿ ಅಭಿಮಾನಿಗಳ ಸುನಾಮಿ ಹೆಚ್ಚುತ್ತಲೇ ಇತ್ತು. ಆದರೆ, ಗೇಟ್ ನಂ.12ರ ಬಳಿ ಗೇಟ್ ತೆಗೆಯುತ್ತಿದ್ದಂತೆಯೇ ಭಾರೀ ಪ್ರಮಾಣದಲ್ಲಿ ನೂಕು ನುಗ್ಗಲು ನಡೀತು. ಒಬ್ಬರ ಮೇಲೋಬ್ಬರು ಬಿದ್ದರು, ಉಸಿರಾಡೋಕೂ ಕೂಡ ಸಾಧ್ಯವಾಗಲಿಲ್ಲ. ತಕ್ಷಣವೇ ಹತ್ತಿರದ ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆ (ಮಲ್ಯ ರಸ್ತ್ರೆ), ಮಣಿಪಾಲ್‌ಗೆ ದಾಖಲಿಸಲಾಯಿತು. ಆದರೆ, ಬೌರಿಂಗ್ ಆಸ್ಪತ್ರೆಯಲ್ಲಿ 6, ವೈದೇಹಿ ಆಸ್ಪತ್ರೆಯಲ್ಲಿ 4 ಹಾಗೂ ಮಣಿಪಾಲ ಆಸ್ಪತ್ರೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

  • ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಕೇಸ್‌ – ಪೊಲೀಸರನ್ನ ಸಂಪರ್ಕಿಸದೇ ವಿಕ್ಟರಿ ಪೆರೇಡ್‌ ಘೋಷಿಸಿದ್ದ RCB ಫ್ರಾಂಚೈಸಿ

    ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಕೇಸ್‌ – ಪೊಲೀಸರನ್ನ ಸಂಪರ್ಕಿಸದೇ ವಿಕ್ಟರಿ ಪೆರೇಡ್‌ ಘೋಷಿಸಿದ್ದ RCB ಫ್ರಾಂಚೈಸಿ

    ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ 18 ವರ್ಷಗಳ ಬಳಿಕ ಐಪಿಎಲ್ ಚಾಂಪಿಯನ್ ಪಟ್ಟವನ್ನ ಮುಡಿಗೇರಿಸಿಕೊಂಡಿದೆ. ಆದರೆ, ಆರ್‌ಸಿಬಿ ಫ್ಯಾನ್ಸ್‌ಗಳು ಈ ಐತಿಹಾಸಿಕ ಕ್ಷಣವನ್ನು ಸಂಭ್ರಮಿಸುತ್ತಿದ್ದಾಗಲೇ ದುರಂತ ಸಂಭವಿಸಿದೆ. ಕಾಲ್ತುಳಿತದಲ್ಲಿ (Chinnaswamy Stampede) ಉಂಟಾದ ಅಭಿಮಾನಿಗಳ ಸಾವು-ನೋವಿಗೆ ಆರ್‌ಸಿಬಿ ಫ್ರಾಂಚೈಸಿ ಹಾಗೂ ಪೊಲೀಸ್‌ ಇಲಾಖೆಯ ವೈಫಲ್ಯವೇ ಕಾರಣ ಅನ್ನೋದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

    ಹೌದು. ಮಂಗಳ ರಾತ್ರಿ 11:20ರ ಸುಮಾರಿಗೆ ಆರ್‌ಸಿಬಿ ವಿಜಯಶಾಲಿಯಾಗಿತ್ತು, ಇದರಿಂದ ರಾತ್ರಿಯಿಡೀ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ಬುಧವಾರ ಸಹ ಬೆಂಗಳೂರು ನಗರದ ವಿವಿಧೆಡೆ ಅಭಿಮಾನಿಗಳು ಸಂಭ್ರಮಾಚರಣೆ ಕೈಗೊಂಡಿದ್ದರು. ಹೀಗಿರುವಾಗಲೇ ಬೆಳಗ್ಗೆ 7:01 ಗಂಟೆಗೆ ಆರ್‌ಸಿಬಿ ಫ್ರಾಂಚೈಸಿ ಇಂದು 3:30ರ ಬಳಿಕ ವಿಧಾನಸೌಧದಿಂದ ಚಿನ್ನಸ್ವಾಮಿ ಸ್ಟೇಡಿಯಂ ವರೆಗೆ ವಿಕ್ಟರಿ ಪೆರೇಡ್‌ ನಡೆಸೋದಾಗಿ ತನ್ನ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನ ಹಂಚಿಕೊಂಡಿತ್ತು. ಆದ್ರೆ ಘೋಷಣೆಗೂ ಮುನ್ನ ಯಾವುದೇ ಪೊಲೀಸ್‌ (Bengaluru Police Department) ಅನುಮತಿ ಪಡೆದಿರಲಿಲ್ಲ. ಪೊಲೀಸರು ಸಹ ಈ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ. ಮ್ಯಾನೇಜ್ಮೆಂಟ್‌ಗೂ ಸರಿಯಾದ ಸೂಚನೆ ಕೊಡದೇ 11 ಗಂಟೆಯಾದ್ರೂ ಸಭೆ ಮಾಡುವುದರಲ್ಲೇ ಕಾಲ ಕಳೆದರು. ನಿರಂತರ ಸಭೆ ನಡೆಸುತ್ತಿದ್ದ ಪೊಲೀಸರು 12 ಗಂಟೆ ಕಳೆದರೂ ಸರಿಯಾದ ತೀರ್ಮಾನಕ್ಕೆ ಬರೋದ್ರಲ್ಲಿ ವಿಫಲರಾಗಿದ್ದರು. ಇದನ್ನೂ ಓದಿ: ಮಾತೇ ಬರುತ್ತಿಲ್ಲ, ತುಂಬಾ ದುಃಖವಾಗಿದೆ: ಕಾಲ್ತುಳಿತ ದುರಂತಕ್ಕೆ ಕೊಹ್ಲಿ ಸಂತಾಪ

    ಈ ನಡುವೆ ಮುಖ್ಯಮಂತ್ರಿಗಳು ಪಾಲ್ಗೊಳ್ಳುತ್ತಿದ್ದರಿಂದ ಸ್ಟೇಡಿಯಂಗಿಂತ ವಿಧಾನಸೌಧ ಕಾರ್ಯಕ್ರಮಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗಿತ್ತು. ಅಲ್ಲಿ ಅತಿಹೆಚ್ಚು ಪೊಲೀಸರನ್ನ ನಿಯೋಜನೆ ಮಾಡಲಾಗಿತ್ತು. ಇದಾದ ಬಳಿಕ ಪೊಲೀಸರು ಮಧ್ಯಾಹ್ನ 2 ಗಂಟೆ ವೇಳೆಗೆ ಟಿಕೆಟ್‌, ಪಾಸ್‌ ಇದ್ದವರಿಗೆ ಮಾತ್ರ ಅವಕಾಶ ಅಂತ ಪ್ರೆಸ್‌ನೋಟ್‌ ಹೊರಡಿಸಿದ್ದರು. ಆದ್ರೆ ಟಿಕೆಟ್‌ ಎಲ್ಲಿ ಸಿಗುತ್ತೆ ಅನ್ನೋದನ್ನ ಫ್ರಾಂಚೈಸಿ ಸ್ಪಷ್ಟಪಡಿಸಿರಲಿಲ್ಲ, ಪೊಲೀಸರು ಇದನ್ನ ಪ್ರಶ್ನೆ ಮಾಡಲಿಲ್ಲ. ಅಲ್ಲದೇ ಮಧ್ಯಾಹ್ನ 3:30ರ ಸುಮಾರಿಗೆ ಫ್ರೀ ಪಾಸ್‌ ಸಿಗುತ್ತೆ ಅಂತ ತನ್ನ ವೆಬ್‌ಸೈಟ್‌ ಮತ್ತು ಸೋಷಿಯಲ್‌ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿತ್ತು. ಸಂಜೆ 5 ರಿಂದ 6 ಗಂಟೆ ವರೆಗೆ ಪೆರೇಡ್‌ ನಡೆಯಲಿದೆ ಅಂತ ಪೋಸ್ಟ್‌ ಹಂಚಿಕೊಂಡಿತ್ತು. ಆದ್ರೆ ಅಷ್ಟರಲ್ಲಾಗಲೇ ಸ್ಟೇಡಿಯಂ ಬಳಿ ಲಕ್ಷಾಂತರ ಜನ ಜಮಾಯಿಸಿದ್ದರು. ಇದನ್ನೂ ಓದಿ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭೀಕರ ಕಾಲ್ತುಳಿತ; ಫ್ಯಾನ್ಸ್‌ ಸಾವು-ನೋವಿಗೆ ಆರ್‌ಸಿಬಿ ಶೋಕ

    ಈ ನಡುವೆ ಗೃಹಸಚಿವ ಪರಮೇಶ್ವರ್‌ ಅವರು ವಿಕ್ಟರಿ ಪೆರೇಡ್ ಇಲ್ಲ, ವಿಧಾನಸೌಧಕ್ಕೆ ಎಂಟ್ರಿ ಇಲ್ಲ, ಸ್ಟೇಡಿಯಂಗೆ ಹೋಗಿ ಅಂದುಬಿಟ್ಟರು. ಮಾಹಿತಿ ತಿಳಿದ ಜನ ಸ್ಟೇಡಿಯಂಗೆ ನುಗ್ಗಲು ಯತ್ನಿಸಿದ್ರು ಈ ಎಲ್ಲ ಬೆಳವಣಿಗೆಯಿಂದ ಅಭಿಮಾನಿಗಳ ಸಾವು ನೋವಾಗಿದೆ. ಇದನ್ನೂ ಓದಿ: ಟೀಂ ಇಂಡಿಯಾದ್ದು 5 ದಿನ, ಸಿಎಸ್‌ಕೆ 3 ದಿನದ ನಂತರ ಆಚರಣೆ ಮಾಡಿದ್ರೆ ಒಂದೇ ದಿನದಲ್ಲಿ ವಿಜಯೋತ್ಸವ ಆಚರಿಸಿದ್ದು ಯಾಕೆ? – ಜೆಡಿಎಸ್‌ ಆಕ್ರೋಶ

    ದುರಂತಕ್ಕೆ ಪ್ರಮುಖ ಕಾರಣಗಳೇನು?
    * ವಿಕ್ಟರಿ ಪೆರೇಡ್‌ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಪೊಲೀಸರು ತಡ ಮಾಡಿದ್ದು
    * ಆಡಳಿತ ಮಂಡಳಿಗೆ ಖಡಕ್ ಸೂಚನೆ ಕೊಡೋದಕ್ಕೆ ಹಿಂದೇಟು ಹಾಕಿದ್ದು
    * ಟಿಕೆಟ್ ಮತ್ತು ಪಾಸ್ ಬಗ್ಗೆ ಪೊಲೀಸರಿಗೆ ಮಾಹಿತಿಯೇ ಇರಲಿಲ್ಲ
    * ಜನಕ್ಕೆ ಮಾಹಿತಿ ನೀಡೋದಕ್ಕೆ ಪೊಲೀಸರಿಗೆ ಆಸಕ್ತಿಯೇ ಇರಲ್ಲಿಲ್ಲ
    * ಕಾರ್ಯಕ್ರಮ ಬೇಡ ಅನ್ನೋದಕ್ಕೆ ಪೊಲೀಸರ ಮೇಲೆ ಇದ್ದ ಒತ್ತಡ
    * ವಿಧಾನಸೌದದ ಕಾರ್ಯಕ್ರಮ, ಪೆರೇಡ್ ಎರಡೂ ಬೇಡ ಅಂದಿದ್ದ ಆಯುಕ್ತರು
    * ಪೊಲೀಸ್ ನಿಯೋಜನೆಯಲ್ಲಿ ನಿರಂತರವಾಗಿ ಯಡವಟ್ಟು
    * ಗೇಟ್ ತೆಗೆಯಲು ಹಿಂದೆಟು

  • ಕ್ರಿಕೆಟ್ ಇತಿಹಾಸದಲ್ಲೇ ಇಂತಹ ಘಟನೆ ಆಗಿರಲಿಲ್ಲ: ಪರಮೇಶ್ವರ್

    ಕ್ರಿಕೆಟ್ ಇತಿಹಾಸದಲ್ಲೇ ಇಂತಹ ಘಟನೆ ಆಗಿರಲಿಲ್ಲ: ಪರಮೇಶ್ವರ್

    – ದೊಡ್ಡಮಟ್ಟದ ಸಮಾರಂಭಗಳಿಗೆ ಹೊಸ ಎಸ್‌ಒಪಿ ರೂಪಿಸುತ್ತೇವೆ ಎಂದ ಗೃಹಸಚಿವ

    ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (Chinnaswamy Stampede) ನಡೆದ ಘಟನೆ ಕ್ರಿಕೆಟ್ ಇತಿಹಾಸದಲ್ಲೇ ಆಗಿರಲಿಲ್ಲ ಎಂದು ಗೃಹಸಚಿವ ಜಿ ಪರಮೇಶ್ವರ್ (G Parameshwar) ಹೇಳಿದ್ದಾರೆ.

    ಆರ್‌ಸಿಬಿ (RCB) ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟ ಘಟನೆ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೊದಲು ಸಾವನ್ನಪ್ಪಿದವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಕುಟುಂಬ ವರ್ಗದವರಿಗೆ ದು:ಖ ಭರಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ. ಬುಧವಾರ ಸಿಎಂ ಎಲ್ಲಾ ಮಾಹಿತಿ ಪಡೆದು ಮಾತನಾಡಿದ್ದಾರೆ. ಯಾರೇ ತಪ್ಪು ಮಾಡಿದ್ದರೂ ನಾವು ಕ್ರಮ ತೆಗೆದುಕೊಳ್ಳುತ್ತೇವೆ. ಈಗ ಯಾವುದೇ ವಿವರಣೆ ಕೊಡಲ್ಲ. ಮ್ಯಾಜಿಸ್ಟ್ರೇಟ್ ತನಿಖೆ ಆದ ನಂತರ ಮಾಹಿತಿ ಪಡೆದು ಮಾತನಾಡುತ್ತೇನೆ ಎಂದರು. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣದ ಹೊಣೆ ಡಿಕೆಶಿ ಹೊರಬೇಕು: ಜೆಡಿಎಸ್

    ಘಟನೆಯಲ್ಲಿ 11 ಜನ ಸಾವನ್ನಪ್ಪಿದ್ದು, 56 ಮಂದಿ ಗಾಯಗೊಂಡಿದ್ದಾರೆ. 46 ಗಾಯಾಳುಗಳು ಮನೆಗೆ ಹೋಗಿದ್ದಾರೆ. 10 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವವರಿಗೆ ಗಂಭೀರ ಗಾಯಗಳೇನೂ ಆಗಿಲ್ಲ, ಆತಂಕ ಇಲ್ಲ. ಮುಂದೆ ಇಂಥ ವಿಜಯೋತ್ಸವಗಳು ನಡೆಸುವ ಸಂದರ್ಭ ಬಂದಾಗ ಪೊಲೀಸ್ ನಿರ್ದೇಶನಗಳ ಚೌಕಟ್ಟಿನೊಳಗೇ ಮಾಡುತ್ತೇವೆ. ಇದಕ್ಕಾಗಿ ಹೊಸ ಎಸ್‌ಒಪಿ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಕಾಲ್ತುಳಿತ ಪ್ರಕರಣ – ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಹೈಕೋರ್ಟ್

    ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಅಭಿಮಾನಿಗಳು ರಾತ್ರಿಯೆಲ್ಲಾ ಸೆಲೆಬ್ರೇಷನ್ ಮಾಡಿದ್ದರು. ಬೆಳಗ್ಗೆಯೂ ಸೆಲಬ್ರೇಷನ್ ಶುರುವಾಯ್ತು, ಬಹಳಷ್ಟು ಅಭಿಮಾನಿಗಳು ಬೆಂಗಳೂರಿನಲ್ಲೇ ಇದ್ದರು. ಹಾಗಾಗಿ ಕಾರ್ಯಕ್ರಮಕ್ಕೆ ಬಂದಿದ್ದರು. ವೈದೇಹಿ ಆಸ್ಪತ್ರೆಗೆ ನಾನು ಹೋಗಿದ್ದೆ. ಸತ್ತ ಮಗ 6 ಗಂಟೆಗೆ ಮನೆ ಬಿಟ್ಟಿದ್ದ ಎಂದು ಒಬ್ಬರು ತಂದೆ ಹೇಳಿದ್ದಾರೆ. 35,000 ಜನ ಸಾಮರ್ಥ್ಯ ಇರುವ ಗ್ರೌಂಡ್‌ನಲ್ಲಿ 3 ಲಕ್ಷ ಜನ ಬಂದಿದ್ದಾರೆ. ಮೆಟ್ರೋ ಮಾಹಿತಿ ಪ್ರಕಾರ, ರಾತ್ರಿ 8 ಗಂಟೆಯಿಂದ 9 ಗಂಟೆಯವರೆಗೆ 8 ಲಕ್ಷ ಜನ ಓಡಾಡಿದ್ದಾರೆ. ನಾನು ಈಗ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಹೋಗಿ ಸ್ಥಳ ಪರೀಶೀಲನೆ ಮಾಡುತ್ತೇನೆ. ವಿಧಾನ ಸೌಧದಲ್ಲಿ ಪುಣ್ಯಕ್ಕೆ ಯಾವುದೇ ಅಹಿತಕರ ಘಟನೆ ಆಗಿಲ್ಲ. ಈವರೆಗೂ ಯಾವುದೇ ಎಫ್‌ಐಆರ್ ಆಗಿಲ್ಲ. ಆ ಬಗ್ಗೆಯೂ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಮಾತನಾಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಟೀಂ ಇಂಡಿಯಾದ್ದು 5 ದಿನ, ಸಿಎಸ್‌ಕೆ 3 ದಿನದ ನಂತರ ಆಚರಣೆ ಮಾಡಿದ್ರೆ ಒಂದೇ ದಿನದಲ್ಲಿ ವಿಜಯೋತ್ಸವ ಆಚರಿಸಿದ್ದು ಯಾಕೆ? – ಜೆಡಿಎಸ್‌ ಆಕ್ರೋಶ

  • ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣದ ಹೊಣೆ ಡಿಕೆಶಿ ಹೊರಬೇಕು: ಜೆಡಿಎಸ್

    ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣದ ಹೊಣೆ ಡಿಕೆಶಿ ಹೊರಬೇಕು: ಜೆಡಿಎಸ್

    ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ (Chinnaswamy Stadium Stampede) ಪ್ರಕರಣಕ್ಕೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಕಾರಣ ಎಂದು ಜೆಡಿಎಸ್ (JDS) ವಾಗ್ದಾಳಿ ನಡೆಸಿದೆ.

    ಎಕ್ಸ್‌ನಲ್ಲಿ ಡಿಕೆಶಿ ವಿರುದ್ಧ ಕಿಡಿಕಾರಿರುವ ಜೆಡಿಎಸ್, ಡಿಕೆ ಶಿವಕುಮಾರ್‌ಗೆ ಧಿಕ್ಕಾರ ಎಂದು ಆಕ್ರೋಶ ಹೊರಹಾಕಿದೆ. ಇದನ್ನೂ ಓದಿ: ಕಾಲ್ತುಳಿತ ಪ್ರಕರಣ – ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಹೈಕೋರ್ಟ್

    ಎಕ್ಸ್‌ನಲ್ಲಿ ಏನಿದೆ?
    ಆರ್‌ಸಿಬಿ ಗೆಲುವಿನಲ್ಲಿ ಪ್ರಚಾರ ಪಡೆಯಲು ಹೋಗಿ ಹಲವರ ಉಸಿರು ನಿಲ್ಲಿಸಿದ ಡಿಸಿಎಂ ಡಿಕೆ ಶಿವಕುಮಾರ್‌ಗೆ ಧಿಕ್ಕಾರ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಯೇ ಆರ್‌ಸಿಬಿ ತಂಡದ ಆಟಗಾರರಿಗೆ ಸನ್ಮಾನ ಕಾರ್ಯಕ್ರಮ ಮಾಡಬಹುದಿತ್ತು. ಅದನ್ನು ಬಿಟ್ಟು ಕಾಂಗ್ರೆಸ್ ಸರ್ಕಾರ ವಿಧಾನಸೌಧದ ಮುಂದೆ ಆತುರಾತುರವಾಗಿ ಕಾರ್ಯಕ್ರಮ ಆಯೋಜಿಸಿ ಆರ್‌ಸಿಬಿ ತಂಡದ ಜೊತೆ ಸಿಎಂ, ಡಿಸಿಎಂ, ಸಚಿವರು ಮತ್ತವರ ಮಕ್ಕಳ ಫೋಟೋಶೂಟ್ ಶೋಕಿಗೆ ಮುಗ್ಧರು ಪ್ರಾಣ ಕಳೆದುಕೊಂಡಿರುವುದು ಘೋರ ದುರಂತ. ಇದನ್ನೂ ಓದಿ: ಟೀಂ ಇಂಡಿಯಾದ್ದು 5 ದಿನ, ಸಿಎಸ್‌ಕೆ 3 ದಿನದ ನಂತರ ಆಚರಣೆ ಮಾಡಿದ್ರೆ ಒಂದೇ ದಿನದಲ್ಲಿ ವಿಜಯೋತ್ಸವ ಆಚರಿಸಿದ್ದು ಯಾಕೆ? – ಜೆಡಿಎಸ್‌ ಆಕ್ರೋಶ

    ವಿಧಾನಸೌಧ ಮುಂದೆಯೇ ಸರ್ಕಾರದ ಆಡಳಿತ ಯಂತ್ರ ಬೀಡು ಬಿಟ್ಟಿತ್ತು. ಆದರೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಹತ್ತಾರು ಸಾವಿರ ಸಂಖ್ಯೆಯಲ್ಲಿ ಆರ್‌ಸಿಬಿ ಅಭಿಮಾನಿಗಳು ಸೇರಿದ್ದ ವೇಳೆ ಸೂಕ್ತ ಬಿಗಿ ಬಂದೋಬಸ್ತ್ ಕೈಗೊಳ್ಳದೇ ನಿರ್ಲಕ್ಷ್ಯ ತೋರಿರುವುದು ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ಜಗಜ್ಜಾಹೀರುಗೊಳಿಸಿದೆ. ಕಾಲ್ತುಳಿತ ದುರಂತದಲ್ಲಿ 11 ಜನರ ಸಾವಿಗೆ ಡಿಸಿಎಂ ಡಿಕೆಶಿಯೇ ಹೊಣೆ ಹೊರಬೇಕು ಎಂದು ಆಗ್ರಹಿಸಿದೆ. ಇದನ್ನೂ ಓದಿ: ಕಾಲ್ತುಳಿತದಲ್ಲಿ 11 ಮಂದಿ ಸಾವು – ಮರಣೋತ್ತರ ಪರೀಕ್ಷೆ ವರದಿಯಲ್ಲಿ ಏನಿದೆ?