ಬೆಂಗಳೂರು: ಆರ್‌ಸಿಬಿ (RCB) ವಿಜಯೋತ್ಸವನ್ನು ಒಂದೇ ದಿನದಲ್ಲಿ ಆಚರಣೆ ನಡೆಸಲು ಅನುಮತಿ ನೀಡಿದ್ದು ಯಾಕೆ ಎಂದು ಸರ್ಕಾರ ಪ್ರಶ್ನಿಸಿ ಜೆಡಿಎಸ್ (JDS) ಆಕ್ರೋಶವನ್ನು ಹೊರಹಾಕಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ನಡೆದ ಕಾಲ್ತುಳಿತ ಪ್ರಕರಣದಲ್ಲಿ ನೈತಿಕತೆ ಹೊತ್ತು ಸಿಎಂ, ಡಿಸಿಎಂ, ಗೃಹ ಸಚಿವರು ರಾಜೀನಾಮೆ ಕೊಡಬೇಕು ಅಂತ ಜೆಡಿಎಸ್ ಆಗ್ರಹ ಮಾಡಿದೆ. ಎಕ್ಸ್‌ನಲ್ಲಿ ಸರ್ಕಾರದ ವಿರುದ್ದ ಆಕ್ರೋಶ ಹೊರ ಹಾಕಿರೋ ಜೆಡಿಎಸ್ ಈ ಘಟನೆ ಸರ್ಕಾರದ ಭದ್ರತಾ ವೈಫಲ್ಯ ಅಂತ ಕಿಡಿಕಾರಿದೆ. ಇದನ್ನೂ ಓದಿ: ಪೊಲೀಸರು ಅನುಮತಿ ನೀಡದೇ ಇದ್ರೂ ಪಟ್ಟು ಹಿಡಿದು ವಿಜಯೋತ್ಸವ ಆಯೋಜನೆ!
ಪೋಸ್ಟ್‌ನಲ್ಲಿ ಏನಿದೆ?
ಕಾಂಗ್ರೆಸ್ ಸರ್ಕಾರದ ಹುಚ್ಚು ಪ್ರಚಾರ ಪಡೆಯುವ ಗೀಳು 11ಕ್ಕೂ ಹೆಚ್ಚು ಮಂದಿಯನ್ನು ಬಲಿ ಪಡೆದಿದೆ. ಅಧಿಕಾರದ ಅಮಲಿನಲ್ಲಿರುವ ಪ್ರಚಾರಪ್ರಿಯ, ಜಾಹೀರಾತು ಪ್ರಿಯ ಕಾಂಗ್ರೆಸ್ ಸರ್ಕಾರ ಮಾಧ್ಯಮಗಳಲ್ಲಿ ರಾರಾಜಿಸಲು ಹೋಗಿ ಮುಗ್ಧ ಜನರ ಜೀವದ ಜೊತೆ ಚಲ್ಲಾಟವಾಡಿದೆ.
ವಿಜಯದ ಪರೇಡ್‌ಗಳನ್ನು ಆಚರಿಸುವ ಸಮಯದಲ್ಲಿ ಸರಿಯಾದ ನಾಗರಿಕರ ಸುರಕ್ಷತಾ ಕ್ರಮಗಳನ್ನು , ಪೊಲೀಸ್ ಭದ್ರತಾ ವ್ಯವಸ್ಥೆ ಮತ್ತು ಜನಸಂದಣಿ ನಿರ್ವಹಣೆಯೊಂದಿಗೆ ಯೋಜಿಸಬೇಕು, ರಾಜಕೀಯ ಲಾಭಕ್ಕಾಗಿ ಆತುರಪಡಬಾರದು ಎಂಬುದಕ್ಕೆ ಕಾಲ್ತುಳಿತ ದುರಂತವೇ ಸಾಕ್ಷಿ. ಇದನ್ನೂ ಓದಿ: ಕಾಲ್ತುಳಿತದಲ್ಲಿ 11 ಮಂದಿ ಸಾವು – ಮರಣೋತ್ತರ ಪರೀಕ್ಷೆ ವರದಿಯಲ್ಲಿ ಏನಿದೆ?
ಕೆಕೆಆರ್ 2 ದಿನಗಳ ನಂತರ ಕೋಲ್ಕತ್ತಾದಲ್ಲಿ ವಿಜಯ ಪರೇಡ್ ನಡೆಸಿತು. ಮುಂಬೈ 2 ದಿನಗಳ ಬಳಿಕ ವಿಜಯೋತ್ಸವ ಮೆರವಣಿಗೆ ಆಯೋಜಿಸಿತು. ಸಿಎಸ್‌ಕೆ 3 ದಿನಗಳ ನಂತರ ವಿಜಯದ ಪರೇಡ್ ನಡೆಸಿತು. ಭಾರತ ತಂಡ 5 ದಿನಗಳ ನಂತರ ತಮ್ಮ ಟಿ -20 ವಿಶ್ವಕಪ್ ವಿಜಯೋತ್ಸವ ಮೆರವಣಿಗೆ ನಡೆಸಿತು.
ಲಕ್ಷಾಂತರ ಜನ ಸೇರುವ ಕ್ರೀಡಾಂಗಣದ ಬಳಿ ಆಗಿರುವ ಭದ್ರತಾ ಲೋಪಕ್ಕೆ ಕಾಂಗ್ರೆಸ್ ಸರ್ಕಾರವೇ ಹೊಣೆ.ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆಶಿವಕುಮಾರ್, ಗೃಹ ಸಚಿವ ಪರಮೇಶ್ವರ್ ನೈತಿಕ ಹೊಣೆಹೊತ್ತು ತಕ್ಷಣ ರಾಜೀನಾಮೆ ನೀಡಬೇಕು ಅಂತ ಅಗ್ರಹಿಸಿದೆ.
– ಕೆಎಸ್‌ಸಿಎ ತಾಳಕ್ಕೆ ಕುಣಿದು ಸರ್ಕಾರದಿಂದ ಒತ್ತಡ – ಪೂರ್ವ ಸಿದ್ಧತೆ ಇಲ್ಲದೇ ಆಯೋಜನೆಯಿಂದ ಕಾಲ್ತುಳಿತ
ಬೆಂಗಳೂರು: ಸಿದ್ಧತೆ ಇಲ್ಲದೇ ಕಾರ್ಯಕ್ರಮ ನಡೆಸಿದರೆ ನಿಯಂತ್ರಣ ಮಾಡುವುದು ಕಷ್ಟ ಎಂದು ಪೊಲೀಸರು (Bengaluru Police) ತಿಳಿಸಿದ್ದರೂ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಪಟ್ಟು ಹಿಡಿದು ಕಾರ್ಯಕ್ರಮ ಆಯೋಜನೆ ಮಾಡಿದ್ದರಿಂದ ಕಾಲ್ತುಳಿತ (Stampede) ನಡೆದಿದೆ ಎಂಬ ಗಂಭೀರ ಆರೋಪ ಈಗ ಕೇಳಿ ಬಂದಿದೆ.
ಹೌದು. ಚಿನ್ನಸ್ವಾಮಿ ಕ್ರೀಡಾಂಗಣ ಮತ್ತು ವಿಧಾನಸೌಧದ ಮುಂದೆ ಜನ ಸೇರಿಸಲು ನಗರ ಪೊಲೀಸ್ ಆಯುಕ್ತರು ಒಪ್ಪಿಗೆ ನೀಡಿರಲಿಲ್ಲ. ಬಂದೋಬಸ್ತ್ ಮಾಡಿಕೊಳ್ಳದೇ ಏಕಾಏಕಿ ಭಾರೀ ಸಂಖ್ಯೆಯಲ್ಲಿ ಜನರಿಗೆ ಅವಕಾಶ ನೀಡುವುದು ಸರಿಯಲ್ಲ ಎಂದು ಹೇಳಿದ್ದರು. ಏನಾದರೂ ಹೆಚ್ಚು ಕಡಿಮೆಯಾದರೆ ನಿಯಂತ್ರಣ ಮಾಡುವುದು ಕಷ್ಟವಾಗುತ್ತದೆ. ಬೇಕಿದ್ದರೆ ಪೂರ್ವ ಸಿದ್ಧತೆ ಮಾಡಿಕೊಂಡು ಭಾನುವಾರ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಬಹುದು ಎಂದು ಸಭೆಯಲ್ಲಿ ಸಲಹೆ ನೀಡಿದ್ದರು ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮಾತೇ ಬರುತ್ತಿಲ್ಲ, ತುಂಬಾ ದುಃಖವಾಗಿದೆ: ಕಾಲ್ತುಳಿತ ದುರಂತಕ್ಕೆ ಕೊಹ್ಲಿ ಸಂತಾಪ
ಪೊಲೀಸರ ಸಲಹೆಗೆ ಕೆಎಸ್‌ಸಿಎ, ಭಾನುವಾರ ಬಹಳ ದಿನ ಆಗುತ್ತದೆ. ವಿದೇಶಿ ಆಟಗಾರರು ಅವರ ದೇಶಕ್ಕೆ ತೆರಳುತ್ತಾರೆ. ಹೀಗಾಗಿ ಬುಧವಾರವೇ ಕಾರ್ಯಕ್ರಮ ನಡೆಸಬೇಕು ಎಂದು ಪಟ್ಟುಹಿಡಿದಿದೆ. ಕೆಎಸ್‌ಸಿಎ ತಾಳಕ್ಕೆ ಸರ್ಕಾರವು ಕುಣಿದಿದೆ. ಸರ್ಕಾರದ ಒತ್ತಡ ಇದ್ದ ಕಾರಣ ಪೊಲೀಸ್ ಇಲಾಖೆ ಯಾವುದೇ ಸಿದ್ಧತೆ ನಡೆಸದೇ ಅನುಮತಿ ನೀಡಿದ್ದರಿಂದ ಈ ದುರಂತ ಸಂಭವಿಸಿದೆ ಎಂಬ ಆರೋಪ ಕೇಳಿ ಬಂದಿದೆ.
ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ (RCB) ಪಂದ್ಯದ ಟಿಕೆಟ್ ಆನ್‌ಲೈನ್‌ನಲ್ಲಿ ಕೆಲವೇ ಗಂಟೆಗಳಲ್ಲಿ ಮಾರಾಟವಾಗುತ್ತದೆ. ಈ ವಿಷಯ ಗೊತ್ತಿದ್ದರೂ ಉಚಿತ ಟಿಕೆಟ್ ಘೋಷಣೆ ಮಾಡಲಾಗಿತ್ತು. ಅಷ್ಟೇ ಅಲ್ಲದೇ ಮಧ್ಯಾಹ್ನದ 3 ಗಂಟೆಯವರೆಗೆ ಎಲ್ಲಿ ಟಿಕೆಟ್ ಸಿಗಲಿದೆ ಎಂಬ ವಿವರ ಸಹ ಪ್ರಕಟವಾಗಿರಲಿಲ್ಲ. ಕೊನೆಗೆ 3 ಗಂಟೆಯ ನಂತರ ಗೇಟ್ ತೆರೆಯಲಾಗಿತ್ತು. ಒಂದು ವೇಳೆ ಮಧ್ಯಾಹ್ನ ಗೇಟ್ ಓಪನ್ ಮಾಡಿದ್ದರೆ ಮೊದಲೇ ಪ್ರೇಕ್ಷಕರು ಒಳ ಪ್ರವೇಶಿಸುತ್ತಿದ್ದರು.
ಪಾಸ್ ಪ್ರಿಂಟ್ ಮಾಡಿ ನೀಡದೇ ಮೊದಲು ಬಂದವರಿಗೆ ಆದ್ಯತೆ ಎಂದು ಹೇಳಿದ್ದರಿಂದ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದರು. ಹೀಗೆ ಸೇರಿದ ಅಭಿಮಾನಿಗಳನ್ನು ಚದುರಿಸಲು ಸಾಧ್ಯವಾಗದ ಕಾರಣ ದುರಂತ ಸಂಭವಿಸಿದೆ.
ಬೆಂಗಳೂರು/ಹಾಸನ: ಬುಧವಾರ ಆರ್‌ಸಿಬಿ (RCB) ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (Chinnaswamy Stadium) ನಡೆದ ಕಾಲ್ತುಳಿತದಲ್ಲಿ (Stampede) ಮೃತಪಟ್ಟ ಹಾಸನ ಮೂಲದ ಭೂಮಿಕ್ ಅಂತ್ಯಕ್ರಿಯೆ ಇಂದು (ಗುರುವಾರ) ನಡೆಯಲಿದೆ.
ಭೂಮಿಕ್ ಹುಟ್ಟೂರಾದ ಹಾಸನ (Hassan) ಜಿಲ್ಲೆ ಬೇಲೂರು ತಾಲೂಕಿನ ಕುಪ್ಪುಗೋಡು ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಇಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಭೂಮಿಕ್ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರಿಸಲಾಗಿದೆ. ಇಂದು ಮಧ್ಯಾಹ್ನದ ವೇಳೆಗೆ ಭೂಮಿಕ್ ಅಂತ್ಯಕ್ರಿಯೆ ನಡೆಯಲಿದೆ. ಇದನ್ನೂ ಓದಿ: ಮಾತೇ ಬರುತ್ತಿಲ್ಲ, ತುಂಬಾ ದುಃಖವಾಗಿದೆ: ಕಾಲ್ತುಳಿತ ದುರಂತಕ್ಕೆ ಕೊಹ್ಲಿ ಸಂತಾಪ
ಭೂಮಿಕ್ ಡಿ.ಟಿ.ಲಕ್ಷ್ಮಣ-ಅಶ್ವಿನಿ ದಂಪತಿಯ ಏಕೈಕ ಪುತ್ರ. ಕಳೆದ ಇಪ್ಪತ್ತು ವರ್ಷಗಳಿಂದ ಡಿ.ಟಿ.ಲಕ್ಷ್ಮಣ ಕುಟುಂಬಸ್ಥರು ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಡಿ.ಟಿ.ಲಕ್ಷ್ಮಣ ಬೆಂಗಳೂರಿನಲ್ಲಿ ಸಣ್ಣ ಕೈಗಾರಿಕೆ ನಡೆಸುತ್ತಿದ್ದಾರೆ. ಭೂಮಿಕ್ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಇಂಜಿನಿಯರಿಂಗ್ ಓದುತ್ತಿದ್ದು ಬುಧವಾರ ಕೂಡ ಕಾಲೇಜಿಗೆ ತೆರಳಿದ್ದರು. ನಂತರ ಸ್ನೇಹಿತರ ಜೊತೆ ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗಿದ್ದು, ಕಾಲ್ತುಳಿತದಲ್ಲಿ ದಾರುಣವಾಗಿ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭೀಕರ ಕಾಲ್ತುಳಿತ; ಫ್ಯಾನ್ಸ್ ಸಾವು-ನೋವಿಗೆ ಆರ್‌ಸಿಬಿ ಶೋಕ
ಮುಂಬೈ: ಆರ್‌ಸಿಬಿ ವಿಜಯೋತ್ಸವ ಆಚರಣೆ ವೇಳೆ ಸಂಭವಿಸಿದ ಕಾಲ್ತುಳಿತಕ್ಕೆ ಅಭಿಮಾನಿಗಳ ಸಾವು-ನೋವಿಗೆ ವಿರಾಟ್ ಕೊಹ್ಲಿ ಸಂತಾಪ ಸೂಚಿಸಿದ್ದಾರೆ.
ಇನ್‌ಸ್ಟಾದಲ್ಲಿ ಪೋಸ್ಟ್ ಹಾಕಿರುವ ಅವರು, ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತದಿಂದ ಉಂಟಾದ ಸಾವು-ನೋವಿನಿಂದ ತೀವ್ರ ದುಃಖಿತನಾಗಿದ್ದೇನೆ. ಬಾಯಿಂದ ಮಾತುಗಳೇ ಹೊರಡುತ್ತಿಲ್ಲ ಎಂದು ಕೊಹ್ಲಿ ಶೋಕಿಸಿದ್ದಾರೆ.
ತಮ್ಮ ನೋವಿನ ಜೊತೆಗೆ ಕೊಹ್ಲಿ, ಆರ್‌ಸಿಬಿಯ ನೋವಿನ ಸಂದೇಶವನ್ನು ಹಂಚಿಕೊಂಡಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ ಆರ್‌ಸಿಬಿ, ಬುಧವಾರ ಮಧ್ಯಾಹ್ನ ತಂಡದ ಆಗಮನದ ನಿರೀಕ್ಷೆಯಲ್ಲಿ ಬೆಂಗಳೂರಿನಲ್ಲಿ ಸಂಭವಿಸಿದ ದುರಂತದ ಬಗ್ಗೆ ಮಾಧ್ಯಮ ವರದಿಗಳ ಮೂಲಕ ಬೆಳಕಿಗೆ ಬಂದಿರುವ ದುರದೃಷ್ಟಕರ ಘಟನೆಗಳಿಂದ ನಾವು ತೀವ್ರ ದುಃಖಿತರಾಗಿದ್ದೇವೆ. ಎಲ್ಲರ ಸುರಕ್ಷತೆ ಮತ್ತು ಯೋಗಕ್ಷೇಮ ನಮಗೆ ಅತ್ಯಂತ ಮುಖ್ಯವಾಗಿದೆ ಎಂದು ತಿಳಿಸಿದೆ.
ಜೀವಹಾನಿಗೆ ಆರ್‌ಸಿಬಿ ಶೋಕ ವ್ಯಕ್ತಪಡಿಸುತ್ತದೆ. ಸಂತ್ರಸ್ತರ ಕುಟುಂಬಗಳಿಗೆ ಸಂತಾಪಗಳು. ಪರಿಸ್ಥಿತಿಯ ಬಗ್ಗೆ ತಿಳಿದ ತಕ್ಷಣ, ನಾವು ನಮ್ಮ ಕಾರ್ಯಕ್ರಮವನ್ನು ತ್ವರಿತವಾಗಿ ತಿದ್ದುಪಡಿ ಮಾಡಿದ್ದೇವೆ. ಸ್ಥಳೀಯ ಆಡಳಿತದ ಮಾರ್ಗದರ್ಶನ ಮತ್ತು ಸಲಹೆಯನ್ನು ಅನುಸರಿಸಿದ್ದೇವೆ. ಆರ್‌ಸಿಬಿ ಅಭಿಮಾನಿಗಳು ದಯವಿಟ್ಟು ಸುರಕ್ಷಿತವಾಗಿರಿ ಎಂದು ಮನವಿ ಮಾಡಿಕೊಂಡಿದೆ.
18 ವರ್ಷಗಳ ಬಳಿಕ ಆರ್‌ಸಿಬಿ ಐಪಿಎಲ್ ಟ್ರೋಫಿ ಜಯಸಿದೆ. ಅದೇ ಖುಷಿಯಲ್ಲಿ ಬುಧವಾರ ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸವ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ನಿರೀಕ್ಷೆಯಂತೆ ಬೆಂಗಳೂರು ಆರ್‌ಸಿಬಿ ತಂಡದ ಆಟಗಾರರು ಆಗಮಿಸಿದ್ದರು. ಅವರನ್ನು ಸರ್ಕಾರದಿಂದ ಅಭಿನಂದಿಸಲಾಯಿತು. ನೆಚ್ಚಿನ ಆಟಗಾರರನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ಈ ವೇಳೆ ಕಾಲ್ತುಳಿತ ದುರಂತ ಸಂಭವಿಸಿ, 11 ಮಂದಿ ಮೃತಪಟ್ಟರು. 50ಕ್ಕೂ ಹೆಚ್ಚು ಮಂದಿ ಗಾಯಗೊಂಡರು.
ಮುಂಬೈ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭೀಕರ ಕಾಲ್ತುಳಿತಕ್ಕೆ ಸಂಭವಿಸಿದ ಸಾವು-ನೋವಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಶೋಕ ವ್ಯಕ್ತಪಡಿಸಿದೆ.
ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ ಆರ್‌ಸಿಬಿ, ಬುಧವಾರ ಮಧ್ಯಾಹ್ನ ತಂಡದ ಆಗಮನದ ನಿರೀಕ್ಷೆಯಲ್ಲಿ ಬೆಂಗಳೂರಿನಲ್ಲಿ ಸಂಭವಿಸಿದ ದುರಂತದ ಬಗ್ಗೆ ಮಾಧ್ಯಮ ವರದಿಗಳ ಮೂಲಕ ಬೆಳಕಿಗೆ ಬಂದಿರುವ ದುರದೃಷ್ಟಕರ ಘಟನೆಗಳಿಂದ ನಾವು ತೀವ್ರ ದುಃಖಿತರಾಗಿದ್ದೇವೆ. ಎಲ್ಲರ ಸುರಕ್ಷತೆ ಮತ್ತು ಯೋಗಕ್ಷೇಮ ನಮಗೆ ಅತ್ಯಂತ ಮುಖ್ಯವಾಗಿದೆ ಎಂದು ತಿಳಿಸಿದೆ.
𝗢𝗳𝗳𝗶𝗰𝗶𝗮𝗹 𝗦𝘁𝗮𝘁𝗲𝗺𝗲𝗻𝘁: 𝗥𝗼𝘆𝗮𝗹 𝗖𝗵𝗮𝗹𝗹𝗲𝗻𝗴𝗲𝗿𝘀 𝗕𝗲𝗻𝗴𝗮𝗹𝘂𝗿𝘂
We are deeply anguished by the unfortunate incidents that have come to light through media reports regarding public gatherings all over Bengaluru in anticipation of the team’s arrival this… pic.twitter.com/C0RsCUzKtQ
— Royal Challengers Bengaluru (@RCBTweets) June 4, 2025
ಜೀವಹಾನಿಗೆ ಆರ್‌ಸಿಬಿ ಶೋಕ ವ್ಯಕ್ತಪಡಿಸುತ್ತದೆ. ಸಂತ್ರಸ್ತರ ಕುಟುಂಬಗಳಿಗೆ ಸಂತಾಪಗಳು. ಪರಿಸ್ಥಿತಿಯ ಬಗ್ಗೆ ತಿಳಿದ ತಕ್ಷಣ, ನಾವು ನಮ್ಮ ಕಾರ್ಯಕ್ರಮವನ್ನು ತ್ವರಿತವಾಗಿ ತಿದ್ದುಪಡಿ ಮಾಡಿದ್ದೇವೆ. ಸ್ಥಳೀಯ ಆಡಳಿತದ ಮಾರ್ಗದರ್ಶನ ಮತ್ತು ಸಲಹೆಯನ್ನು ಅನುಸರಿಸಿದ್ದೇವೆ. ಆರ್‌ಸಿಬಿ ಅಭಿಮಾನಿಗಳು ದಯವಿಟ್ಟು ಸುರಕ್ಷಿತವಾಗಿರಿ ಎಂದು ಮನವಿ ಮಾಡಿಕೊಂಡಿದೆ.
ಆರ್‌ಸಿಬಿ ಗೆಲುವು ವಿಜಯೋತ್ಸವದ ವೇಳೆ ಯಡವಟ್ಟು ಸಂಭವಿಸಿದೆ. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತಕ್ಕೆ 11 ಆರ್‌ಸಿಬಿ ಫ್ಯಾನ್ಸ್ ದುರ್ಮರಣಕ್ಕೀಡಾಗಿದ್ದಾರೆ. 50ಕ್ಕೂ ಹೆಚ್ಚು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
– ಡಿಸಿಎಂ ಚೈಲ್ಡಿಷ್ ಥರ ಆಡಲಿಲ್ಲ ಅಂದಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ: ಕೇಂದ್ರ ಸಚಿವ
ನವದೆಹಲಿ: ಅಲ್ಲಿ ಹೆಣಗಳು ಬಿದ್ದಿವೆ, ಇವರು ಕಪ್‌ಗೆ ಮುತ್ತು ಕೊಟ್ಟುಕೊಂಡು ನಿಂತಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹರಿಹಾಯ್ದರು.
ಕಾಲ್ತುಳಿತ ದುರಂತ ಪ್ರಕರಣ ಕುರಿತು ಮಾತನಾಡಿದ ಅವರು, ಅವರು ಏನ್ ಹೇಳಿದ್ರು? ಕಾರ್ಯಕ್ರಮ ನಿಲ್ಲಿಸಲು ಅಂತಾ ಹೇಳಿದ್ದಾರೆ ಅಲ್ವಾ. ಕ್ರೀಡಾಂಗಣಕ್ಕೆ ಹೋಗಿ ಕಾರ್ಯಕ್ರಮ ನಿಲ್ಲಿಸ್ತೀವಿ ಅಂದ್ರು. ಅಲ್ಲಿ ಹೋಗಿ ಕಪ್‌ಗೆ ಮುತ್ತು ಕೊಡಲು ಹೋಗಿದ್ದಾರೆ. ಹೆಣ ಬಿದ್ದಿದೆ, ಇವರು ಹೋಗಿ ಹೆಣದ ಮುಂದೆ ಕಪ್‌ಗೆ ಮತ್ತು ಕೊಟ್ಟಿಕೊಂಡು ನಿಂತಿದ್ದಾರೆ. ಇವರೇ ಆರ್‌ಸಿಬಿ ಗೆಲ್ಲಿಸಿಕೊಂಡು ಕಪ್ ತೆಗೆದುಕೊಂಡು ಬರೋ ಥರ ಮಾಡಿದ್ದಾರೆ. ಕ್ರಿಕೆಟ್ ಅಭಿಮಾನಿಗಳ ಸಾವಿನ ನಡುವೆ ಮುತ್ತು ಕೊಟ್ಟಿಕೊಂಡು ನಿಂತಿದ್ದಾರೆ ಎಂದು ಸಿಎಂ ಮತ್ತು ಡಿಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು.
ನಿನ್ನೆ ಒಂದು ರೀತಿಯ ಕುತೂಹಲ ಘಟಕ್ಕೆ ತಲುಪಿ ಆರ್‌ಸಿಬಿ ತಂಡ ಐಪಿಎಲ್ ಕಪ್ ಗೆದ್ದಿದೆ. ಇಂತಹ ಸಂದರ್ಭದಲ್ಲಿ ಇಷ್ಟೊಂದು ತರಾತುರಿಯಲ್ಲಿ ಸರ್ಕಾರದ ವತಿಯಿಂದ ಅಭಿನಂದನೆ ಸಲ್ಲಿಸಲು ತೀರ್ಮಾನ ಮಾಡಿದ್ದು ಯಾರು? ಅವರಿಗೆ ಇನ್ವಿಟೇಷನ್ ಕೊಟ್ಟಿದ್ದು ಯಾರು? ಅವರಿಗೆ ಸರ್ಕಾರ ಆಹ್ವಾನ ಕೊಟ್ಟಿದ್ದು ತಪ್ಪು ಅಂತಾಲೂ ನಾನು ಹೇಳಲ್ಲ. ಏರ್ ಪೋರ್ಟ್ನ ಡ್ರಾಮಾ ಕೂಡ ತೋರಿಸಿದ್ದೀರಿ. ಅಲ್ಲಿಗೆ ಯಾರು ಹೋದರು? ಆಯೋಜನೆ ಮಾಡಿದ್ದು ಯಾರು? ನಮ್ಮ ಡಿಸಿಎಂ ಅವರೇ ಬೆವರು ಸುರಿಸಿ ಕಪ್ ಗೆದ್ದಾರೋ ಅನ್ನೋ ತರ ಮುತುವರ್ಜಿಯಿಂದ ಹೋಗಿದ್ದಾರೆ. ಕನಕಪುರದವರನ್ನ ಕರೆದುಕೊಂಡು ಹೋಗಿದ್ದಾರೆ. ಬೇರೆ ಯಾರೂ ಹೋಗಿಲ್ಲ. ಇದು ಕನಕಪುರದ ಆರ್‌ಸಿಬಿನಾ? ಚೇಲಾಗಳು ಬೆಂಬಲಿಗರನ್ನ ಕರೆದುಕೊಂಡು ಹೋಗಿದ್ದಾರೆ ಡಿಕೆಶಿ ಎಂದು ಕಿಡಿಕಾರಿದರು.
ಏರ್‌ಪೋರ್ಟ್ನಿಂದ ವಿಧಾನಸೌಧಕ್ಕೆ ಕರೆದುಕೊಂಡು ಹೋಗಿದ್ದಾರೆ. ಎರಡು ಕಾರ್ಯಕ್ರಮ ಮಾಡುವ ಅವಕಾಶ ಏನಿತ್ತು? ಅಮಾಯಕರನ್ನ ಬಲಿಪಡುವ ಅವಕಾಶ ಏನಿತ್ತು? ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರಂಭದಲ್ಲಿ ಬೀಗ ತೆರೆದು ಬಿಟ್ಟಿದ್ದರೆ ಈ ಪರಿಸ್ಥಿತಿ ಬರುತ್ತಿತ್ತಾ? ಈ ಸರ್ಕಾರ ಕಟುಕರ ಸರ್ಕಾರ. ಸಿಎಂ ನಿಷ್ಕ್ರಿಯ ಸಿಎಂ. ಡಿಸಿಎಂ ಮುಂದೆ ಸಿಎಂ ನಿಷ್ಕ್ರಿಯ. ಇನ್ನೂ ಹೋಮ್ ಮಿನಿಸ್ಟರ್ ಬಗ್ಗೆ ಮಾತಾಡೋದೇ ಬೇಡ. ಹೇಳು ಅಂದರೆ ಹೇಳ್ತಾರೆ ಇಲ್ಲಾಂದ್ರೆ ಇಲ್ಲ. ವಿಧಾನಸೌಧ ಮುಂದೆ ಕಾರ್ಯಕ್ರಮ ನಡೆಯುವಾಗಲೇ 4 ಜನರು ಸತ್ತಿದ್ದರು. ತರಾತುರಿಯಲ್ಲಿ ಮಾಡುವ ಅವಶ್ಯಕತೆ ಏನಿತ್ತು. ಆಗಲೇ ಕಾರ್ಯಕ್ರಮ ನಿಲ್ಲಿಸಬೇಕಿತ್ತು. ನಿನ್ನೆಯಿಂದಲೇ ಏನು ಅಂತಾ ಎಲ್ಲ ಗೊತ್ತಿತ್ತು. ವಿಧಾನಸೌಧ ಮುಂದೆಯೇ ಜನರು ಡಿಸಿಎಂಗೆ ಮರ್ಯಾದೆ ತೆಗೆದಿದ್ದಾರೆ. ಜನರು ನಿಮ್ಮನ್ನ ನೋಡಲು ಬಂದಿಲ್ಲ ಅಂತಾ ಎಂದು ವಾಗ್ದಾಳಿ ನಡೆಸಿದರು.
ಸಿಎಂ ಹೇಳ್ತಾರೆ, ಈ ಸಂದರ್ಭದಲ್ಲಿ ಲಕ್ಷಾಂತರ ಸೇರಿದಾಗ ಹೀಗೆ ಅಂತಾ. ಅದಕ್ಕೆ ಹೇಳಿದ್ದು ನೀವು ನಿಷ್ಕ್ರಿಯ ಸಿಎಂ ಅಂತಾ. ಇಂತಹವರನ್ನ ಹೊರಹಾಕಿ ಅಂತಾ ಹೇಳೋದು. ಇದು ಸರ್ಕಾರದ ವೈಫಲ್ಯ. ಲಕ್ಷಾಂತರ ಜನರು ಸೇರಿದ್ದಾರೆ. ಪೊಲೀಸರು ಮೊದಲೇ ಹೇಳಿದ್ದಾರೆ. ಪೊಲೀಸ್ ಕಮಿಷನರ್ ಹೇಳಿದ್ದಾರೆ. ಎರಡು ಕಾರ್ಯಕ್ರಮ ಮಾಡಿದರೆ ಸೆಕ್ಯುರಿಟಿ ಸಮಸ್ಯೆ ಆಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ, ನಿರ್ಲಕ್ಷö್ಯ ತೋರಿ ಹೀಗೆ ಮಾಡಿದ್ದಾರೆ. ಮೃತರ ಕುಟುಂಬಸ್ಥರಿಗೆ ದುಃಖ ಬರಿಸುವ ಶಕ್ತಿಯನ್ನು ಭಗವಂತೆ ನೀಡಲಿ ಎಂದರು.
ನಾನು ರಾಜಕೀಯ ಮಾಡ್ತಿಲ್ಲ. ಇದು ಕಣ್ಣಾರೆ ನಡೆದಿರುವ ಕಥೆ. ಡಿಸಿಎಂ ಚೈಲ್ಡಿಷ್ ತರ ಆಡಿಲ್ಲ ಅಂದಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ. ಮಂಗಳೂರು ಘಟನೆ ನೋಡಿ, ಗಡಿಪಾರು ಮಾಡ್ತಾರಂತೆ. ಗಡಿಪಾರು ಮಾಡಿಲ್ಲ ಅಂದರೆ ಏನ್ ಮಾಡ್ತೀರಿ. ನಿಮಗೆ ಹದ್ದುಬಸ್ತಿನಲ್ಲಿ ಇಡಲು ಆಗಲ್ವಾ? ಎರಡು ವರ್ಷಗಳಿಂದ ಶಾಂತಿ ನೆಲೆಸಿಲ್ಲ. ರಾಜ್‌ಕುಮಾರ್ ನಿಧನರಾದಾಗ ಸರ್ಕಾರಕ್ಕೆ ಮಾಹಿತಿ ಇರಲಿಲ್ಲ. ಕುಟುಂಬದವರು ಹೇಳಿರಲಿಲ್ಲ. ಮಾಧ್ಯಮ ಮೂಲಕ ಗೊತ್ತಾಗಿದ್ದು. ನಾವು ಕೊನೆ ಹಂತದಲ್ಲಿ ಕಂಠೀರವ ಸ್ಟೇಡಿಯಂಗೆ ತೆಗೆದುಕೊಂಡು ಹೋಗಿ ಅಂತಿಮ ದರ್ಶನಕ್ಕೆ ಇಟ್ಟಿದ್ವಿ. ಕಾಂಗ್ರೆಸ್ ಪಟಲಾಂನವರು ಸೀಮೆಎಣ್ಣೆ ಇಟ್ಟುಕೊಂಡು ಅಶಾಂತಿ ಕ್ರಿಯೇಟ್ ಮಾಡಲು ಬಂದಿದ್ದರು. ಗೋಲಿಬಾರ್ ಮಾಡಿದ್ವಿ. ಅಂಬರೀಶ್ ನಿಧನರಾದಾಗ ಶಾಂತಿ ಕಾಪಾಡಿದೆ ಎಂದು ಹಿಂದಿನ ಘಟನೆಗಳನ್ನು ನೆನಪಿಸಿಕೊಂಡರು.
ಇವರು ಪ್ಲಾನ್ ಮಾಡಿರುವ ಕಾರ್ಯಕ್ರಮ ಅಲ್ಲ. ಇವರು ಎಕ್ಸ್ಪೋಸ್ ಮಾಡಲು ಮಾಡಿದ ಕಾರ್ಯಕ್ರಮ ಇದು. ಕಳೆದ ಬಾರಿ ಮುಂಬೈನಲ್ಲಿ ಐದು ಲಕ್ಷ ಜನರು ಸೇರಿದ್ದರು. ಆಗ ಯಾವುದೇ ಅನಾಹುತ ಆಗಲಿಲ್ಲ ಎಂದು ಕಾಂಗ್ರೆಸ್ ಸರ್ಕಾರದ ನಡೆಗೆ ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದರು.
ಬೆಂಗಳೂರು: ನಗರದ (Bengaluru) ಚಿನ್ನಸ್ವಾಮಿ ಸ್ಟೇಡಿಯಂ (Chinnaswamy Stadium) ಬಳಿ ಆರ್‌ಸಿಬಿ (RCB) ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿದಲ್ಲಿ (Stampede) ಮೃತಪಟ್ಟ 11 ಜನರ ಮಾಹಿತಿ ಲಭ್ಯವಾಗಿದೆ.
ಕಾಲ್ತುಳಿತಕ್ಕೆ ಇಬ್ಬರು ವಿದ್ಯಾರ್ಥಿಗಳ ದುರಂತ ಅಂತ್ಯ
ಕನಕಶ್ರೀ ಲೇಔಟ್‌ನಲ್ಲಿ ವಾಸವಿದ್ದ 9 ನೇ ತರಗತಿ ವಿದ್ಯಾರ್ಥಿನಿ ದಿವ್ಯಾಂಶಿಕ ( 14) ಎಂಬಾಕೆ ಮೃತಪಟ್ಟಿದ್ದು, ಈಕೆ ಶಿವಕುಮಾರ್ , ಆಶ್ವಿನಿ ದಂಪತಿಯ ಪುತ್ರಿ ಎಂದು ತಿಳಿದು ಬಂದಿದೆ. ಇಂದು ಮಧ್ಯಾಹ್ನ ತಾಯಿ ಅಶ್ವಿನಿ , ಚಿಕ್ಕಮ್ಮ ರಚನಾ, ದಿವ್ಯಾಂಶ್ರೀ ಸೇರಿದಂತೆ 4 ಮಂದಿ ಸ್ಟೇಡಿಯಂ ಬಳಿ ಬಂದಿದ್ದರು. ಈ ವೇಳೆ ಕಾಲ್ತುಳಿತವಾಗಿ ದಿವ್ಯಾಂಶ್ರೀ ಸಾವನ್ನಪ್ಪಿದ್ದಳು. ಇದನ್ನೂ ಓದಿ: ಕಾಲ್ತುಳಿತದಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ: ಸಿಎಂ ಘೋಷಣೆ
ಯಲಹಂಕ ಸರ್ಕಾರಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ಶಿವು (17) ಎಂಬ ಬಾಲಕ ಸಾವನ್ನಪ್ಪಿದ್ದಾನೆ. ಈತ ಯಾದಗಿರಿ ಮೂಲದನಾಗಿದ್ದು, ಇವರ ಕುಟುಂಬ ಕಣ್ಣೂರಿನಲ್ಲಿ ವಾಸವಾಗಿತ್ತು. ಈತನ ತಂದೆ ತಾಯಿ ಇಬ್ಬರು ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.
ಕಾಲ್ತುಳಿತಕ್ಕೆ ಬಲಿಯಾದ ಟೆಕ್ಕಿ
ಅಮೇಜಾನ್ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಟೆಕ್ಕಿ ದೇವಿ (25) ಎಂಬವರು ಸಾವನ್ನಪ್ಪಿದ್ದಾರೆ. ಮೂಲತಃ ತಮಿಳುನಾಡಿನ ನಿವಾಸಿಯಾಗಿದ್ದ ಅವರು, ಮಾರತ್ ಹಳ್ಳಿ ಬಳಿ ಪಿಜಿಯಲ್ಲಿ ವಾಸವಾಗಿದ್ದರು. ಇವರು ತಂದೆ ತಾಯಿಗೆ ಒಬ್ಬಳೇ ಮಗಳಾಗಿದ್ದರು. ತಂದೆ, ತಾಯಿ ಇಬ್ಬರಿಗೂ ವಯಸ್ಸಾಗಿದ್ದು ದುಡಿದು ಕುಟುಂಬ ನಿರ್ವಹಣೆ ಮಾಡುತ್ತಿದ್ದರು. ಇದನ್ನೂ ಓದಿ: ಆರ್‌ಸಿಬಿ ವಿಜಯೋತ್ಸವದ ವೇಳೆ ಯಡವಟ್ಟು – ಕಾಲ್ತುಳಿತಕ್ಕೆ 10 ಆರ್‌ಸಿಬಿ ಫ್ಯಾನ್ಸ್ ದುರ್ಮರಣ
ಕೋಲಾರದ ಇಂಜಿನಿಯರ್ ದುರ್ಮರಣ
ಬೆಂಗಳೂರಿನಲ್ಲಿ ಇಂಜಿನಿಯರ್ ಕೆಲಸ ಮಾಡುತ್ತಿದ್ದ ಕೋಲಾರದ ಯುವತಿ ಸಹನಾ (24) ಎಂಬಾಕೆ ಕಾಲ್ತುಳಿತದಲ್ಲಿ ಸಾವಿಗೀಡಾಗಿದ್ದಾರೆ. ಈಕೆ ಕೆಜಿಎಫ್ ತಾಲೂಕಿನ ಬಡಮಾಕನಹಳ್ಳಿ ಗ್ರಾಮದವರಾಗಿದ್ದರು. ಇಂಜಿನಿಯರಿಂಗ್ ಮುಗಿಸಿ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇವರು ಶಿಕ್ಷಕ ದಂಪತಿಯಾದ ಸುರೇಶ ಬಾಬು ಮತ್ತು ಮಂಜುಳಾ ಅವರ ಪುತ್ರಿ ಎಂದು ತಿಳಿದು ಬಂದಿದೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ರಾಯಸಮುದ್ರದ ಪೂರ್ಣಚಂದ್ರ ಎಂಬವರು ಸಾವಿಗೀಡಾಗಿದ್ದಾರೆ. ಇವರು ಸಿವಿಲ್ ಇಂಜಿನಿಯರಿಂಗ್ ವ್ಯಾಸಾಂಗ ಮಾಡಿದ್ದರು. ಮೃತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಹಾಸನ ಜಿಲ್ಲೆಯ ಬೇಲೂರಿನ ಭೂಮಿಕ್ ಎಂಬಾತ ಸಹ ಘಟನೆಯಲ್ಲಿ ಸಾವಿಗೀಡಾಗಿದ್ದಾರೆ. ಇವರು ಬೆಂಗಳೂರಿನ 8ನೇ ಮೈಲಿಯ ಸೌಂದರ್ಯ ಕಾಲೇಜಿನ ಬಳಿ ವಾಸವಾಗಿದ್ದರು.
ನವದೆಹಲಿ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ (RCB) ವಿಜಯೋತ್ಸವದ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತ ದುರಂತಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu), ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
The loss of lives in the tragic happening at a stadium in Bengaluru is shocking and heartbreaking. My condolences to the bereaved families and prayers for the speedy recovery of the injured.
— President of India (@rashtrapatibhvn) June 4, 2025
ಕಾಲ್ತುಳಿತದಿಂದ 11 ಜನರು ಮೃತಪಟ್ಟಿದ್ದಾರೆ. ಘಟನೆಗೆ ವಿಷಾದ ವ್ಯಕ್ತಪಡಿಸಿದ ದ್ರೌಪದಿ ಮುರ್ಮು, ಬೆಂಗಳೂರಿನ ಕ್ರೀಡಾಂಗಣದಲ್ಲಿ ನಡೆದ ದುರಂತ ಘಟನೆಯಲ್ಲಿ ಸಂಭವಿಸಿದ ಜೀವಹಾನಿ ಆಘಾತಕಾರಿ ಮತ್ತು ಹೃದಯವಿದ್ರಾವಕ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಕಾಲ್ತುಳಿತದಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ: ಸಿಎಂ ಘೋಷಣೆ
The tragic stampede near Bengaluru’s Chinnaswamy Stadium during RCB’s IPL victory celebrations is heartbreaking.
My condolences to the families who lost their loved ones. Wishing a swift and full recovery to all those injured.
In this hour of grief, I stand with the people of…
ಆರ್‌ಸಿಬಿಯ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ದುರಂತ ಹೃದಯವಿದ್ರಾವಕ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರೆಲ್ಲರೂ ಶೀಘ್ರವಾಗಿ ಮತ್ತು ಸಂಪೂರ್ಣವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಈ ದುಃಖದ ಸಮಯದಲ್ಲಿ, ನಾನು ಬೆಂಗಳೂರಿನ ಜನರೊಂದಿಗೆ ನಿಲ್ಲುತ್ತೇನೆ. ಕರ್ನಾಟಕ ಸರ್ಕಾರವು ಸಂತ್ರಸ್ತ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲಾ ಬೆಂಬಲ ಮತ್ತು ಪರಿಹಾರವನ್ನು ಒದಗಿಸಬೇಕು. ಈ ದುರಂತವು ನೋವಿನ ಜ್ಞಾಪನೆಯಾಗಿದೆ. ಸಾರ್ವಜನಿಕ ಕಾರ್ಯಕ್ರಮಗಳಿಗೆ ಪ್ರತಿಯೊಂದು ಸುರಕ್ಷತಾ ಪ್ರೋಟೋಕಾಲ್ ಅನ್ನು ಪರಿಶೀಲಿಸಬೇಕು ಮತ್ತು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಜನರ ಸುರಕ್ಷತೆ ಮೊದಲ ಆದ್ಯತೆಯಾಗಬೇಕು ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ (Chinnaswamy Stadium) ಬಳಿ ಸಂಭವಿಸಿದ ಕಾಲ್ತುಳಿತದಿಂದ ಆದ ಜೀವಹಾನಿ ಮತ್ತು ಗಾಯಗೊಂಡವರ ಬಗ್ಗೆ ಕೇಳಿ ತೀವ್ರ ದುಃಖವಾಗಿದೆ ಎಂದು ಉದ್ಯಮಿ ವಿಜಯ್ ಮಲ್ಯ (Vijay Mallya) ಹೇಳಿಕೊಂಡಿದ್ದಾರೆ.
ಆರ್‌ಸಿಬಿ (RCB) ಗೆಲುವು ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ (Chinnaswamy Stadium) ಬಳಿ ಸಂಭವಿಸಿದ ಕಾಲ್ತುಳಿತಕ್ಕೆ (Stampede) 11 ಆರ್‌ಸಿಬಿ ಫ್ಯಾನ್ಸ್ ದುರ್ಮರಣಕ್ಕೀಡಾಗಿದ್ದಾರೆ. 50ಕ್ಕೂ ಹೆಚ್ಚು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಬೆಂಗಳೂರು: ಆರ್‌ಸಿಬಿ (RCB) ವಿಜಯೋತ್ಸವದ ವೇಳೆ ಕಾಲ್ತುಳಿತದಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಘೋಷಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಕಾಲ್ತುಳಿತ ದುರಂತಕ್ಕೆ ವಿಷಾದ ವ್ಯಕ್ತಪಡಿಸಿದರು. ನಿನ್ನೆ ಆರ್‌ಸಿಬಿ ತಂಡ ಫೈನಲ್ ಪಂದ್ಯ ಜಯಗೊಳಿಸಿತ್ತು. ಇಂದು ವಿಜಯೋತ್ಸವ ಆಯೋಜಿಸಲಾಗಿತ್ತು. ಕ್ರಿಕೆಟ್ ಅಸೋಸಿಯೇಷನ್, ಸರ್ಕಾರದ ವತಿಯಿಂದಲೂ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಇಂತಹ ಘಟನೆ ನಡೆಯಬಾರದಾಗಿತ್ತು. ಬಹಳ ದೊಡ್ಡ ದುರಂತ ನಡೆದಿದೆ. ಕಾಲ್ತುಳಿತಕ್ಕೆ ಒಳಗಾಗಿ 11 ಜನ ಮೃತರಾಗಿದ್ದಾರೆ. 47 ಜನರು ಗಾಯಗೊಂಡಿದ್ದಾರೆ ಎಂದು ಸಿಎಂ ವಿಷಾದಿಸಿದರು. ಇದನ್ನೂ ಓದಿ: ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ | ಇದು ಹೃದಯ ವಿದ್ರಾವಕ ಘಟನೆ – ಮೃತರಿಗೆ ಮೋದಿ ಸಂತಾಪ
ನಾನು ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆಗೆ ಭೇಟಿ ಕೊಟ್ಟಿದ್ದೆ. ಸಂಭ್ರಮ ಆಚರಣೆ ಮಾಡುವಾಗ ಇಂತಹ ದುರಂತ ನಡೆಯಬಾರದಿತ್ತು. ನಮ್ಮ ನಿರೀಕ್ಷೆಗೂ ಮೀರಿ ಅಭಿಮಾನಿಗಳು ಸೇರಿದ್ದರು. ಘಟನೆಗೆ ಸರ್ಕಾರ ಬಹಳ ದುಃಖ ವ್ಯಕ್ತಪಡಿಸುತ್ತದೆ ಎಂದು ತಿಳಿಸಿದರು.
ವಿಧಾನಸೌಧ ಎದರು 1 ಲಕ್ಷಕ್ಕೂ ಹೆಚ್ಚು ಜನ ಸೇರಿದ್ದರು. ಅಲ್ಲಿ ಯಾವುದೇ ಅನಿರೀಕ್ಷಿತ ಘಟನೆ ದುರಂತ ನಡೆದಿಲ್ಲ. ಒಂದು ಲಕ್ಷಕ್ಕೂ ಹೆಚ್ಚು ಜನ ವಿಧಾನಸೌಧದ ಮುಂದೆ ಸೇರಿದ್ರು. ವಿಧಾನಸೌಧದ ಮುಂದೆ ನಡೆದ ಸಮಾರಂಭದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಆದರೆ, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈ ದುರಂತ ಆಗಿದೆ. ಯಾರು ಸಹ ಇದನ್ನ ನಿರೀಕ್ಷೆ ಮಾಡಿರಲಿಲ್ಲ. ಕೆಎಸ್‌ಸಿಎ, ಸರ್ಕಾರ ಇದನ್ನ ನಿರೀಕ್ಷಿಸಿರಲಿಲ್ಲ. ಕ್ರೀಡಾಂಗಣದಲ್ಲಿ 35 ಸಾವಿರ ಜನರಿಗೆ ಮಾತ್ರ ಆಸನದ ವ್ಯವಸ್ಥೆ ಇತ್ತು. ಆದರೆ 2-3 ಲಕ್ಷ ಜನ ಬಂದಿದ್ದರಂತೆ. ಇಂದು ಸಂಭ್ರಮದ ಬಗ್ಗೆ ಕೆಎಸ್‌ಸಿಎ ಮಾಹಿತಿ ಕೊಟ್ಟಿತ್ತು. ಹೀಗಾಗಿ ಇಷ್ಟು ಜನ ಬರುತ್ತಾರೆಂಬ ನಿರೀಕ್ಷೆ ಇರಲಿಲ್ಲ. ಆಸನದ ವ್ಯವಸ್ಥೆ ಇರುವಷ್ಟು ಅಥವಾ ಅದಕ್ಕಿಂತ ಸ್ವಲ್ಪ ಹೆಚ್ಚು ಬರುವ ನಿರೀಕ್ಷೆ ಇತ್ತು ಎಂದರು. ಇದನ್ನೂ ಓದಿ: ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ – ಇದು ಹೃದಯ ವಿದ್ರಾವಕ ಘಟನೆ; ರಮ್ಯಾ ಬೇಸರ
ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ನೀಡಲಾಗುವುದು. ಗಾಯಗೊಂಡವರಿಗೆ ಉಚಿತ ಚಿಕಿತ್ಸೆ ಕೊಡುತ್ತೇವೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದವರಿಗೂ ಸರ್ಕಾರ ಹಣ ಕೊಡುತ್ತದೆ. ಎಲ್ಲಾ ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡಲಾಗುವುದು. ಒಟ್ಟು 47 ಜನ ಗಾಯಗೊಂಡಿದ್ದಾರೆ. ಕೆಲವರು ಚಿಕಿತ್ಸೆ ಪಡೆದು ಹೋಗಿದ್ದಾರೆ. ಒಟ್ಟಾರೆ 47 ಜನಕ್ಕೆ ಗಾಯ ಆಗಿದೆ. ಎಲ್ಲಾ ಗಾಯಾಳುಗಳು ಅಪಾಯದಿಂದ ಪಾರಾಗಿದ್ದಾರೆ ಎಂದು ಡಾಕ್ಟರ್ ಹೇಳಿದ್ದಾರೆ. ಗಾಯಾಳುಗಳ ಸಾರಿಗೆ, ಊಟ ಎಲ್ಲಾ ವ್ಯವಸ್ಥೆ ಸರ್ಕಾರ ಮಾಡಲಿದೆ. ಅನಿರೀಕ್ಷಿತ ದುರಂತ ಇದು ಎಂದು ಸಿಎಂ ನೊಂದು ನುಡಿದರು.
ಯಾರು ಕಾಲ್ತುಳಿತದಲ್ಲಿ ಸತ್ತಿದ್ದಾರೆ ಅವರ ಆತ್ಮಕ್ಕೆ ಶಾಂತಿ ಸಿಗಲಿ ಅಂತ ಸರ್ಕಾರ ಪ್ರಾರ್ಥನೆ ಮಾಡುತ್ತದೆ. ವಿದ್ಯಾರ್ಥಿಗಳು, ಯುವಕ-ಯುವತಿಯರು ಮೃತರಾಗಿದ್ದಾರೆ. ಅವರ ಪೋಷಕರಿಗೆ ಸಾವಿನ ದುಃಖ ಭರಿಸೋ ಶಕ್ತಿ ದೇವರು ಕೊಡಲಿ ಎಂದರಲ್ಲದೇ, ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಲಾಗಿದೆ ಎಂದರು. ಇದನ್ನೂ ಓದಿ: ಅನ್ ಕಂಟ್ರೋಲ್ಡ್ ಕ್ರೌಡ್ ಆಯ್ತು: ಕಾಲ್ತುಳಿತದ ಬಗ್ಗೆ ಡಿಕೆಶಿ ರಿಯಾಕ್ಷನ್
ಯಾರು ತಪ್ಪಿತಸ್ಥರು ಇದ್ದಾರೆ ಅವರ ಮೇಲೆ ತನಿಖೆ ಮಾಡಿ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಇದೊಂದು ಅನಿರೀಕ್ಷಿತ ಘಟನೆ. ಯಾರು ನಿರೀಕ್ಷೆ ಮಾಡಿರಲಿಲ್ಲ. ಭದ್ರತಾ ವೈಫಲ್ಯ ಇಲ್ಲ. ವಿರೋಧ ಪಕ್ಷದ ತರಹ ಯಾಕೆ ಮಾತಾಡ್ತೀರಾ? ಅನಿರೀಕ್ಷಿತವಾಗಿ ಜನ ಬಂದಿದ್ದರು. ಅದಕ್ಕೆ ಆಗಿದೆ. ಇದರಲ್ಲಿ ರಾಜಕೀಯ ಮಾತಾಡೊಲ್ಲ. ಬಿಜೆಪಿ ಅವರು ರಾಜಕೀಯ ಮಾಡ್ತಾರೆ. ನಾನು ಅದಕ್ಕೆ ಮಾತಾಡೊಲ್ಲ. ಅನಿರೀಕ್ಷಿತ ಘಟನೆ ಆಗಿರೋದ್ರಿಂದ ಡಿಸಿ ತನಿಖೆ ಮಾಡಿಸ್ತೀವಿ ಎಂದು ತಿಳಿಸಿದರು.
ಘಟನೆಯನ್ನ ಸಮರ್ಥನೆ ಮಾಡಿಕೊಳ್ಳೊಲ್ಲ. ಇದರಲ್ಲಿ ರಾಜಕೀಯ ಮಾಡೊಲ್ಲ. ಡಿಸಿ ತನಿಖೆಗೆ 15 ದಿನ ಸಮಯ ಕೊಡ್ತೀವಿ. ತನಿಖೆಯಿಂದ ಏನ್ ಬರುತ್ತೋ ನೋಡೋಣ. ಗೇಟ್ ಚಿಕ್ಕದು ಇತ್ತು. ಅದನ್ನ ಮುರಿದು ಒಳಗೆ ಹೋಗೋ ಪ್ರಯತ್ನ ಮಾಡಿದ್ದಾರೆ. ಯಾರು ಇದನ್ನ ನಿರೀಕ್ಷೆ ಮಾಡಿರಲಿಲ್ಲ. ನಿರೀಕ್ಷೆಗೂ ಮೀರಿ ಜನರು ಬಂದಿದ್ದರು. ಹೀಗಾಗಿ, ಈ ಘಟನೆ ಸಂಭವಿಸಿದೆ. ಖಚಿತವಾಗಿ ಏನು ನಡೆದೇ ಇಲ್ಲ ಅಂತ ನಾನು ಹೇಳಿಲ್ಲ. ಹೀಗಾಗಿ, ಡಿಸಿ ನೇತೃತ್ವದಲ್ಲಿ ತನಿಖೆಗೆ ಆದೇಶ ಮಾಡಲಾಗಿದೆ ಎಂದರು.
ಗ್ರ‍್ಯಾಂಡ್ ಸ್ಟೆಪ್ ಮೇಲೆ ಪೊಲೀಸರು ಕಾರ್ಯಕ್ರಮ ಮಾಡಬೇಡಿ ಅಂತ ಹೇಳಿಲ್ಲ. ಯಾವ ಅಧಿಕಾರಿಗಳು ಮಾಡಬೇಡಿ ಅಂತ ಹೇಳಿಲ್ಲ. KSCA ಕಾರ್ಯಕ್ರಮ ಆಯೋಜನೆ ಮಾಡಿತ್ತು. ನಾವು ವಿಧಾನಸೌಧದ ಮುಂದೆ ಮಾಡಿದ್ವಿ. ಅಲ್ಲೇನು ನಡೆದಿಲ್ಲ, ಸುಖಾಂತ್ಯವಾಗಿದೆ. ಕ್ರೀಡಾಂಗಣದಲ್ಲಿ ಇದು ಆಗಿರೋದು. ವಿಧಾನಸೌಧದ ಮುಂದೆ ಏನು ನಡೆದಿಲ್ಲ. ಕ್ರೀಡಾಂಗಣದ ಬಳಿ ಮಾತ್ರ ನಡೆದಿರೋದು. ಇಂತಹ ಘಟನೆ ಬೇಕಾದಷ್ಟು ಕಡೆ ನಡೆದಿದೆ. ಕುಂಭಮೇಳದಲ್ಲಿ ನಡೆದಿತ್ತು ಅಂತ ನಾನು ಹೇಳಿಲ್ಲ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ಮೈಸೂರು ಪೇಟಾ ತೊಡಿಸಿ, ಶಾಲು ಹೊದಿಸಿ ಆರ್‌ಸಿಬಿ ಆಟಗಾರರನ್ನು ಸನ್ಮಾನಿಸಿದ ಸಿಎಂ, ಡಿಸಿಎಂ
ನಾವು ಸಮಾರಂಭ ಕರೆದಿರಲಿಲ್ಲ. ಕೆಎಸ್‌ಸಿಎ ಅವರು ಕೇಳಿದ್ರು ಪರ್ಮಿಷನ್ ಕೊಟ್ಟಿದ್ವಿ. ದುರಂತ ನಡೆಯಬಾರದಿತ್ತು ನಡೆದಿದೆ. ಸರ್ಕಾರ ಇದಕ್ಕೆ ದುಃಖ ಪಡ್ತೀವಿ. ಕ್ರೀಡಾಂಗಣದಲ್ಲಿ ಪೊಲೀಸ್ ಭದ್ರತೆ ಮಾತ್ರ ಕೊಡ್ತೀವಿ. ಅಲ್ಲಿ ಆಗಬಾರದಿತ್ತು ಆಗಿದೆ. ಅದಕ್ಕೆ ಡಿಸಿ ತನಿಖೆ ಆದೇಶ ಮಾಡಿದ್ದೇವೆ. ಯಾರೇ ತಪ್ಪು ಮಾಡಿದ್ರು ಕ್ರಮ ಆಗುತ್ತದೆ ಎಂದರು.