Tag: rcb

  • ಬಿಳಿ ಪಾರಿವಾಳಗಳಿಂದಲೂ ಕೊಹ್ಲಿಗೆ ಗೌರವ – ಇದು ವೈಟ್‌ ಆರ್ಮಿ ಎಂದ ಕೊಹ್ಲಿ ಫ್ಯಾನ್ಸ್‌

    ಬಿಳಿ ಪಾರಿವಾಳಗಳಿಂದಲೂ ಕೊಹ್ಲಿಗೆ ಗೌರವ – ಇದು ವೈಟ್‌ ಆರ್ಮಿ ಎಂದ ಕೊಹ್ಲಿ ಫ್ಯಾನ್ಸ್‌

    ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ (Chinnaswamy Stadium) ಮೇಲೆ ಇಂದು ಬಿಳಿ ಪಾರಿವಾಳಗಳು (White Pigeons) ಹಾರಿದ್ದು ಕ್ರಿಕೆಟ್‌ ಪ್ರೇಮಿಗಳ ಮೊಬೈಲ್‌ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಟೆಸ್ಟ್‌ ಕ್ರಿಕೆಟಿಗೆ (Test Cricket) ವಿರಾಟ್‌ ಕೊಹ್ಲಿ (Virat Kohli) ನಿವೃತ್ತಿ ಹೇಳಿದ್ದಕ್ಕೆ ಇಂದು ಅಭಿಮಾನಿಗಳು ಬಿಳಿ ಬಣ್ಣ ಜರ್ಸಿ ಧರಿಸಿ ಮೈದಾನಕ್ಕೆ ಆಗಮಿಸಿದ್ದಾರೆ. ಮಳೆಯಿಂದಾಗಿ (Rain) ಪಂದ್ಯ ಸರಿಯಾದ ಸಮಯದಲ್ಲಿ ಆರಂಭವಾಗಿಲ್ಲ. ತುಂತುರು ಮಳೆ ಬೀಳುವ ಸಮಯದಲ್ಲೇ ಆಕಾಶದಲ್ಲಿ ಬಿಳಿ ಬಣ್ಣದ ಪಾರಿವಾಳಗಳು ಹಾರಿ ಹೋಗಿವೆ. ಇದನ್ನೂ ಓದಿ: ಆರ್‌ಸಿಬಿ, ಕೆಕೆಆರ್‌ ಪಂದ್ಯ 5 ಓವರ್‌ಗೆ ಸೀಮಿತವಾಗುತ್ತಾ?

    ಕೊಹ್ಲಿ ಅಭಿಮಾನಿಗಳು ಟೆಸ್ಟ್‌ ಕ್ರಿಕೆಟಿಗೆ ನಿವೃತ್ತಿ ಹೇಳಿದ್ದಕ್ಕೆ ಕೊಹ್ಲಿಗೆ ಗೌರವ ಸಲ್ಲಿಸಲು ಬಿಳಿ ಪಾರಿವಾಳಗಳು ಸ್ಟೇಡಿಯಂ ಮೇಲೆ ಹಾರಿವೆ ಎಂದು ಬಣ್ಣಿಸಿದ್ದಾರೆ. ವಿರಾಟ್ ಕೊಹ್ಲಿಗೂ ಪ್ರಕೃತಿಯೂ ಗೌರವ ಸಲ್ಲಿಸಿದೆ. ಆಕಾಶದಲ್ಲಿರುವ ಬಿಳಿಯರು ಕೂಡ ಚಿನ್ನಸ್ವಾಮಿಯ ಮೇಲೆ ಹಾರಿದ್ದಾರೆ – ವೈಟ್ ಆರ್ಮಿ ಎಂದು ಬರೆದಿದ್ದಾರೆ.

    ರನ್ ಮಿಷನ್ ಎಂದೇ ಖ್ಯಾತಿ ಪಡೆದಿದ್ದ ವಿರಾಟ್‌ ಕೊಹ್ಲಿ(Virat Kohli) ರನ್ ಹಸಿವು ಕಿಂಚಿತ್ತೂ ಕಡಿಮೆಯಾಗಿರಲಿಲ್ಲ. ಅದಾಗಲೇ ವೈಟ್ ಜೆರ್ಸಿ ಕ್ರಿಕೆಟ್‌ಗೆ ವಿದಾಯ ಹೇಳಿಬಿಟ್ಟಿದ್ದ ಕೊಹ್ಲಿಗೆ ಕೊನೆ ಪಕ್ಷ ಬಿಸಿಸಿಐ ವಿದಾಯದ ಪಂದ್ಯವಾಡಿಸಿ ಬೀಳ್ಕೊಡುಗೆ ನೀಡಬಹುದಿತ್ತು. ಆದರೆ ದಿಢೀರ್‌ ನಿವೃತ್ತಿ ಘೋಷಿಸಿದ್ದರಿಂದ ಸಾಧ್ಯವಾಗಲಿಲ್ಲ. ಹೀಗಾಗಿ ಆರ್‌ಸಿಬಿ ಫ್ಯಾನ್ಸ್ ಇಂದಿನ ಪಂದ್ಯಕ್ಕೆ ಕೊಹ್ಲಿಗೆ ಗೌರವ ಸಲ್ಲಿಸಲು ನಂಬರ್‌ 18ರ ವೈಟ್ ಜೆರ್ಸಿ(White Jersy) ಧರಿಸಿ ಬಂದಿದ್ದಾರೆ. ಇದನ್ನೂ ಓದಿ: 40,000 ಫ್ಯಾನ್ಸ್‌ಗಳಿಂದ ವೈಟ್ ಜೆರ್ಸಿಯಲ್ಲಿ `ಕಿಂಗ್ ಕೊಹ್ಲಿ’ಗೆ ಗೌರವ

  • ಆರ್‌ಸಿಬಿ, ಕೆಕೆಆರ್‌ ಪಂದ್ಯ 5 ಓವರ್‌ಗೆ ಸೀಮಿತವಾಗುತ್ತಾ?

    ಆರ್‌ಸಿಬಿ, ಕೆಕೆಆರ್‌ ಪಂದ್ಯ 5 ಓವರ್‌ಗೆ ಸೀಮಿತವಾಗುತ್ತಾ?

    ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ಮತ್ತು ಕೋಲ್ಕತ್ತಾ ನೈಟ್‌ ರೈಡರ್ಸ್‌ (KKR)  ಪಂದ್ಯ 5 ಓವರ್‌ಗಳ ಆಟಕ್ಕೆ ಸೀಮಿತವಾಗುತ್ತಾ ಎಂಬ ಪ್ರಶ್ನೆ ಎದ್ದಿದೆ.

    ಹೌದು, ಬೆಂಗಳೂರಿನಲ್ಲಿ (Bengaluru) ಭಾರೀ ಮಳೆಯಾಗುತ್ತಿದ್ದು ಪಂದ್ಯ ಇನ್ನೂ ಆರಂಭವಾಗಿಲ್ಲ. ಒಂದು ವೇಳೆ ಮಳೆ ಮುಂದುವರಿದರೆ ಓವರ್‌ ಕಡಿತವಾಗುತ್ತದೆ.

    ರಾತ್ರಿ 8:45ಕ್ಕೆ ಪಂದ್ಯ ಆರಂಭವಾದರೆ ಓವರ್‌ನಲ್ಲಿ ಕಡಿತವಾಗುವುದಿಲ್ಲ. ನಂತರ ಪಂದ್ಯ ನಡೆದರೆ ಓವರ್‌ ಕಡಿತವಾಗುತ್ತದೆ. ರಾತ್ರಿ 10:56ರ ವರೆಗೆ ಪಂದ್ಯ ನಡೆಸಲು ಅವಕಾಶವಿದ್ದು ಕನಿಷ್ಠ 5 ಓವರ್‌ ಆದರೂ ಆಡಿಸಬಹುದು.

    ರಾತ್ರಿ 10:50 ರ ನಂತರವೂ ಮಳೆ ಸುರಿದರೆ ಪಂದ್ಯವನ್ನು ರದ್ದುಗೊಳಿಸಲಾಗುತ್ತದೆ. ಪಂದ್ಯ ರದ್ದುಗೊಂಡರೆ ಎರಡು ತಂಡಗಳಿಗೂ ಸಮಾನವಾಗಿ ಒಂದೊಂದು ಅಂಕ ನೀಡಲಾಗುತ್ತದೆ. ಹೀಗಾಗಿ ಆರ್‌ಸಿಬಿ 12 ಪಂದ್ಯಗಳಿಂದ 17 ಅಂಕ ಪಡೆದರೆ ಕೆಕೆಆರ್‌ 13 ಪಂದ್ಯವಾಡಿ 12 ಅಂಕ ಪಡೆಯುತ್ತದೆ. ಈ ಮೂಲಕ ಕೆಕೆಆರ್‌ ಟೂರ್ನಿಯಿಂದ ನಿರ್ಗಮಿಸುತ್ತದೆ.

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎಷ್ಟೇ ಮಳೆಯಾದರೂ, ಮಳೆ ನಿಂತ ನಂತರ ಕೆಲವೇ ನಿಮಿಷಗಳಲ್ಲಿ ಪಂದ್ಯಗಳು ಆರಂಭಿಸಬಹುದು. ಉದಾಹರಣೆಗೆ 1 ಗಂಟೆ ಭಾರೀ ಮಳೆ ಸುರಿದರೂ ಕೆಲವೇ ನಿಮಿಷಗಳಲ್ಲಿ ಪಂದ್ಯವನ್ನು ಆರಂಭಿಸಬಹುದು. ಕ್ರೀಡಾಂಗಣದಲ್ಲಿ ಸಬ್ ಏರ್ ಸಿಸ್ಟಂ ಅಳವಡಿಕೆಯಾಗಿದ್ದು ಕೂಡಲೇ ನೀರನ್ನು ಹೊರ ಹಾಕಲಾಗುತ್ತದೆ. ಬಿಸಿ ಗಾಳಿಯನ್ನು ಹಾಯಿಸಿ ಮೈದಾನವನ್ನ ಒಣಗಿಸುವ ವ್ಯವಸ್ಥೆಯಿದೆ. 4.5 ಕೋಟಿ ರೂ. ವೆಚ್ಚದಲ್ಲಿ ಈ ವ್ಯವಸ್ಥೆಯನ್ನು ಅಳವಡಿಸಲಾಗಿದೆ.

    ಆಪರೇಷನ್‌ ಸಿಂಧೂರ ಕಾರ್ಯಾಚರಣೆಯ ನಂತರ ಸ್ಥಗಿತಗೊಂಡಿದ್ದ ಐಪಿಎಲ್‌ ಪಂದ್ಯಗಳು ಇಂದಿನಿಂದ ಮತ್ತೆ ಆರಂಭವಾಗಲಿದೆ. ಈಗಾಗಲೇ 16 ಅಂಕ ಗಳಿಸಿರುವ ಆರ್‌ಸಿಬಿ ನಾಳಿನ ಪಂದ್ಯ ಗೆದ್ದರೆ ಪ್ಲೇ ಆಫ್‌ ಪ್ರವೇಶಿಸಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.

  • ಬೆಂಗಳೂರಿನಲ್ಲಿ ಭಾರೀ ಮಳೆ | ಆರ್‌ಸಿಬಿ-ಕೆಕೆಆರ್‌ ಪಂದ್ಯಕ್ಕೆ ಅಡ್ಡಿ

    ಬೆಂಗಳೂರಿನಲ್ಲಿ ಭಾರೀ ಮಳೆ | ಆರ್‌ಸಿಬಿ-ಕೆಕೆಆರ್‌ ಪಂದ್ಯಕ್ಕೆ ಅಡ್ಡಿ

    ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ಮತ್ತು ಕೋಲ್ಕತ್ತಾ ನೈಟ್‌ ರೈಡರ್ಸ್‌ (KKR) ವಿರುದ್ಧದ ಪಂದ್ಯಕ್ಕೆ ಮಳೆ (Rain) ಅಡ್ಡಿಯಾಗಿದೆ.

    ಸಂಜೆ ಬೆಂಗಳೂರಿನಲ್ಲಿ ಜೋರಾಗಿ ಮಳೆ ಆರಂಭವಾಗಿದೆ. ಹೀಗಾಗಿ ಮಳೆ ನಿಂತರಷ್ಟೇ ಪಂದ್ಯ ಆರಂಭವಾಗಲಿದೆ. ಹವಾಮಾನ ಇಲಾಖೆ ಇಂದು ಸಂಜೆ ಜೋರಾಗಿ ಮಳೆ ಸುರಿಯಲಿದೆ ಎಂದು ಮೊದಲೇ ಮುನ್ಸೂಚನೆ ನೀಡಿತ್ತು.

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎಷ್ಟೇ ಮಳೆಯಾದರೂ, ಮಳೆ ನಿಂತ ನಂತರ ಕೆಲವೇ ನಿಮಿಷಗಳಲ್ಲಿ ಪಂದ್ಯಗಳು ಆರಂಭಿಸಬಹುದು. ಉದಾಹರಣೆಗೆ ಒಂದು ಗಂಟೆ ಭಾರೀ ಮಳೆ ಸುರಿದರೂ ಕೆಲವೇ ನಿಮಿಷಗಳಲ್ಲಿ ಪಂದ್ಯವನ್ನು ಆರಂಭಿಸಬಹುದು.

    ಕ್ರೀಡಾಂಗಣದಲ್ಲಿ ಸಬ್ ಏರ್ ಸಿಸ್ಟಂ ಅಳವಡಿಕೆಯಾಗಿದ್ದು ಕೂಡಲೇ ನೀರನ್ನು ಹೊರ ಹಾಕಲಾಗುತ್ತದೆ. ಬಿಸಿ ಗಾಳಿಯನ್ನು ಹಾಯಿಸಿ ಮೈದಾನವನ್ನ ಒಣಗಿಸುವ ವ್ಯವಸ್ಥೆಯಿದೆ. 4.5 ಕೋಟಿ ರೂ. ವೆಚ್ಚದಲ್ಲಿ ಈ ವ್ಯವಸ್ಥೆಯನ್ನು ಅಳವಡಿಸಲಾಗಿದೆ.

    ಆಪರೇಷನ್‌ ಸಿಂಧೂರ ಕಾರ್ಯಾಚರಣೆಯ ನಂತರ ಸ್ಥಗಿತಗೊಂಡಿದ್ದ ಐಪಿಎಲ್‌ ಪಂದ್ಯಗಳು ಇಂದಿನಿಂದ ಮತ್ತೆ ಆರಂಭವಾಗಲಿದೆ. ಈಗಾಗಲೇ 16 ಅಂಕ ಗಳಿಸಿರುವ ಆರ್‌ಸಿಬಿ ನಾಳಿನ ಪಂದ್ಯ ಗೆದ್ದರೆ ಪ್ಲೇ ಆಫ್‌ ಪ್ರವೇಶಿಸಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.

  • ಇಂದು RCB vs KKR ಪಂದ್ಯ – ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಬಾಂಬ್ ಸ್ಕ್ವಾಡ್‌ ಪರಿಶೀಲನೆ

    ಇಂದು RCB vs KKR ಪಂದ್ಯ – ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಬಾಂಬ್ ಸ್ಕ್ವಾಡ್‌ ಪರಿಶೀಲನೆ

    ಬೆಂಗಳೂರು: ಭಾರತ ಮತ್ತು ಪಾಕಿಸ್ತಾನ (India – Pakistan) ನಡುವಿನ ಉದ್ವಿಗ್ನತೆಯಿಂದಾಗಿ 1 ವಾರಗಳ ಕಾಲ ಸ್ಥಗಿತಗೊಂಡಿದ್ದ 18ನೇ ಆವೃತ್ತಿಯ ಐಪಿಎಲ್ ಚುಟುಕು ಕ್ರಿಕೆಟ್ ಹಬ್ಬ ಇಂದಿನಿಂದ ಪುನರಾರಂಭವಾಗುತ್ತಿದೆ. ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಂದು (Chinnaswamy Stadium) ಆರ್‌ಸಿಬಿ-ಕೆಕೆಆರ್‌ ತಂಡಗಳು ಮುಖಾಮುಖಿಯಾಗಲಿವೆ. ಹಿಗಾಗಿ ಚಿನ್ನಸ್ವಾಮಿ ಅಂಗಳದಲ್ಲಿ ಅತಿಹೆಚ್ಚು ಜನ ಸೇರುವ ಹಿನ್ನೆಲೆ ಸ್ಟೇಡಿಯಂ ಸುತ್ತಮುತ್ತ ಭದ್ರತೆ ಪರಿಶೀಲಿಸಲಾಗಿದೆ.

    ಇಂದಿನ ಪಂದ್ಯ ಕಿಂಗ್‌ ಕೊಹ್ಲಿ (Virat Kohli) ಅಭಿಮಾನಿಗಳಿಗೆ ತುಂಬಾನೇ ವಿಶೇಷ. ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬಳಿಕ ಆಡುತ್ತಿರುವ ಮೊದಲ ಪಂದ್ಯ ಇದಾಗಿದೆ. ಹಾಗಾಗಿ ಇಂದಿನ ಪಂದ್ಯದಲ್ಲಿ ಕೊಹ್ಲಿ ಮುಖ್ಯ ಆಕರ್ಷಣೆಯಾಗಿರಲಿದ್ದಾರೆ. ಇದರಿಂದ ಹೆಚ್ಚಿನ ಜನ ಸೇರುವ ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ಭದ್ರತೆ ಪರಿಶೀಲನೆ ನಡೆಸಲಾಗಿದೆ. ಬಾಂಬ್‌ ನಿಷ್ಕ್ರಿಯ ದಳ ಮತ್ತು ಶ್ವಾನದಳದಿಂದ ಪರಿಶೀಲನೆ ನಡೆಸಲಾಗಿದೆ. ಸ್ಟೇಡಿಯಂ ಸುತ್ತಮುತ್ತ ಇರುವ ಬೃಹತ್ ಮರಗಳನ್ನೂ ಪರಿಶೀಲಿಸಲಾಗಿದೆ.

    ಗೆದ್ದರೆ ಪ್ಲೇ ಆಫ್‌ಗೆ
    ಸದ್ಯ ಆಡಿರುವ 11 ಪಂದ್ಯಗಳಿಂದ 8 ಜಯ, 3 ಸೋಲು ಕಂಡಿರುವ ರಜತ್ ಪಾಟೀದಾರ್ ಸಾರಥ್ಯದ ಆರ್‌ಸಿಬಿ, +0.482 ನೆಟ್ ರನ್‌ರೇಟ್‌ನೊಂದಿಗೆ 16 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. 16 ಅಂಕ ಪಡೆದಿರುವ ಗುಜರಾತ್ ಟೈಟನ್ಸ್ +0.793 ನೆಟ್ ರನ್‌ರೇಟ್‌ನೊಂದಿಗೆ ಅಗ್ರಸ್ಥಾನದಲ್ಲಿದೆ. ಆರ್‌ಸಿಬಿಯು ಇಂದಿನ ಪಂದ್ಯವನ್ನು ಗೆದ್ದರೆ 18 ಅಂಕಗಳೊಂದಿಗೆ 18ನೇ ಆವೃತ್ತಿಯ ಐಪಿಎಲ್ ಪ್ಲೇ-ಆಫ್‌ಗೆ ಪ್ರವೇಶಿಸಲಿದೆ. ಜೊತೆಗೆ 18 ಆವೃತ್ತಿಗಳಲ್ಲಿ ಮೊದಲ ಬಾರಿಗೆ ಪ್ಲೇ ಆಫ್ ಪ್ರವೇಶಿಸಿದ ಇತಿಹಾಸವನ್ನು ಆರ್‌ಸಿಬಿ ನಿರ್ಮಿಸಲಿದೆ.

    ಅತ್ತ 12 ಪಂದ್ಯಗಳನ್ನಾಡಿರುವ ಅಜಿಂಕ್ಯಾ ರಹಾನೆ ನೇತೃತ್ವದ ಕೋಲ್ಕತ್ತಾ ನೈಟ್ ರೈಡರ್ಸ್, 11 ಅಂಕಗಳೊಂದಿಗೆ 6ನೇ ಸ್ಥಾನದಲ್ಲಿದೆ. ಪ್ಲೇ ಆಫ್ ಸ್ಪರ್ಧೆಯನ್ನು ಜೀವಂತವಾಗಿಟ್ಟುಕೊಳ್ಳಬೇಕಾದರೆ 3 ಬಾರಿಯ ಚಾಂಪಿಯನ್ ಕೆಕೆಆರ್‌ಗೆ ಉತ್ತಮ ರನ್‌ರೇಟ್‌ನೊಂದಿಗೆ ಇಂದಿನ ಪಂದ್ಯ ಗೆಲ್ಲುವುದು ಅನಿವಾರ್ಯ. ಒಂದು ವೇಳೆ ಸೋತರೆ ಪ್ಲೇ ಆಫ್ ಸ್ಪರ್ಧೆಯಿಂದ ಹೊರಗುಳಿದ 4ನೇ ತಂಡವಾಗಲಿದೆ. ಹೀಗಾಗಿ ರಹಾನೆ ಬಳಗಕ್ಕೆ ಶನಿವಾರದ ಪಂದ್ಯ ‘ಮಾಡು ಇಲ್ಲವೇ ಮಡಿ’ ಎಂಬಂತಾಗಿದೆ.

    ಹಿಂದಿನ 4 ಪಂದ್ಯಗಳಲ್ಲಿ ಅಜೇಯ ದಾಖಲೆ ಕಾಯ್ದುಕೊಂಡಿರುವ ಆರ್‌ಸಿಬಿ, ತವರಿನಲ್ಲಿ 3ನೇ ಹಾಗೂ ಸತತ 5ನೇ ಜಯದ ನಿರೀಕ್ಷೆಯಲ್ಲಿ ಕಣಕ್ಕಿಳಿಯುತ್ತಿದೆ. ಅತ್ತ ತಾನಾಡಿದ ಹಿಂದಿನ 3 ಪಂದ್ಯಗಳಲ್ಲಿ 2 ಜಯ ಹಾಗೂ 1 ಸೋಲು ಕಂಡಿರುವ ಕೆಕೆಆರ್, ಪ್ಲೇ ಆಫ್ ಸ್ಪರ್ಧೆಯಲ್ಲಿ ಉಳಿಯಲು ಗೆಲುವಿನ ಅನಿವಾರ್ಯತೆಯನ್ನು ಎದುರಿಸುತ್ತಿದೆ.

    ರಜತ್ ಪಾಟೀದಾರ್ ಲಭ್ಯ:
    ಇನ್ನೂ ಹಿಂದಿನ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ತವರಿನಲ್ಲಿ ನಡೆದ ಪಂದ್ಯದಲ್ಲಿ ಬೆರಳು ಗಾಯಕ್ಕೆ ಒಳಗಾಗಿದ್ದ ಆರ್‌ಸಿಬಿ ನಾಯಕ ರಜತ್ ಪಾಟೀದಾರ್, ಕೆಕೆಆರ್ ವಿರುದ್ಧದ ಪಂದ್ಯಕ್ಕೆ ಲಭ್ಯರಾಗುವ ಸಾಧ್ಯತೆ ದಟ್ಟವಾಗಿದೆ. ಶುಕ್ರವಾರ ತಂಡದ ಅಭ್ಯಾಸದಲ್ಲಿ ಅವರು ಭರ್ಜರಿ ತಾಲೀಮು ನಡೆಸಿರುವುದು ತಂಡದ ದೊಡ್ಡ ಚಿಂತೆಯನ್ನು ದೂರ ಮಾಡಿದೆ.

  • IPL 2025 | ಪ್ಲೇ-ಆಫ್‌ ಮೇಲೆ ಆರ್‌ಸಿಬಿ ಕಣ್ಣು – ಕೊಹ್ಲಿಯೇ ಆಕರ್ಷಣೆ, ಇಂದು ಗೆದ್ದರೆ ಇತಿಹಾಸ

    IPL 2025 | ಪ್ಲೇ-ಆಫ್‌ ಮೇಲೆ ಆರ್‌ಸಿಬಿ ಕಣ್ಣು – ಕೊಹ್ಲಿಯೇ ಆಕರ್ಷಣೆ, ಇಂದು ಗೆದ್ದರೆ ಇತಿಹಾಸ

    ಬೆಂಗಳೂರು: ಭಾರತ ಮತ್ತು ಪಾಕಿಸ್ತಾನ (India And Pakistan) ನಡುವಿನ ಸಂಘರ್ಷದಿಂದಾಗಿ ಒಂದು ವಾರ‌ ಸ್ಥಗಿತಗೊಂಡಿದ್ದ 18ನೇ ಆವೃತ್ತಿಯ ಐಪಿಎಲ್‌ ಚುಟುಕು ಕ್ರಿಕೆಟ್‌ ಹಬ್ಬ ಇಂದಿನಿಂದ ಪುನರಾರಂಭವಾಗುತ್ತಿದೆ.

    ಬೆಂಗಳೂರಿನ (Bengaluru) ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಂದು ಕೆಕೆಆರ್‌-ಆರ್‌ಸಿಬಿ (KKR vs RCB) ತಂಡಗಳು ಮುಖಾಮುಖಿಯಾಗಲಿವೆ. ರಾತ್ರಿ 7:30ಕ್ಕೆ ಪಂದ್ಯ ಆರಂಭವಾಗಲಿದ್ದು, ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಹೇಳಿರುವ ವಿರಾಟ್‌ ಕೊಹ್ಲಿ (Virat Kohli) ಎಲ್ಲರ ಆಕರ್ಷಣೆಯಾಗಲಿದ್ದಾರೆ.

    ಸದ್ಯ ಆಡಿರುವ 11 ಪಂದ್ಯಗಳಿಂದ 8 ಜಯ, 3 ಸೋಲು ಕಂಡಿರುವ ರಜತ್‌ ಪಾಟಿದಾರ್‌ (Rajat Patidar) ಸಾರಥ್ಯದ ಆರ್‌ಸಿಬಿ, +0.482 ನೆಟ್‌ ರನ್‌ರೇಟ್‌ನೊಂದಿಗೆ 16 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. 16 ಅಂಕ ಪಡೆದಿರುವ ಗುಜರಾತ್‌ ಟೈಟನ್ಸ್‌ +0.793 ನೆಟ್‌ ರನ್‌ರೇಟ್‌ನೊಂದಿಗೆ ಅಗ್ರಸ್ಥಾನದಲ್ಲಿದೆ. ಆರ್‌ಸಿಬಿಯು ಇಂದಿನ ಪಂದ್ಯವನ್ನು ಗೆದ್ದರೆ 18 ಅಂಕಗಳೊಂದಿಗೆ 18ನೇ ಆವೃತ್ತಿಯ ಐಪಿಎಲ್‌ ಪ್ಲೇ-ಆಫ್‌ಗೆ ಪ್ರವೇಶಿಸಲಿದೆ. ಜೊತೆಗೆ 18 ಆವೃತ್ತಿಗಳಲ್ಲಿ ಮೊದಲ ಬಾರಿಗೆ ಪ್ಲೇ ಆಫ್‌ ಪ್ರವೇಶಿಸಿದ ಇತಿಹಾಸವನ್ನು ಆರ್‌ಸಿಬಿ ನಿರ್ಮಿಸಲಿದೆ.

    ಅತ್ತ 12 ಪಂದ್ಯಗಳನ್ನಾಡಿರುವ ಅಜಿಂಕ್ಯಾ ರಹಾನೆ ನೇತೃತ್ವದ ಕೋಲ್ಕತ್ತಾ ನೈಟ್‌ ರೈಡರ್ಸ್‌, 11 ಅಂಕಗಳೊಂದಿಗೆ 6ನೇ ಸ್ಥಾನದಲ್ಲಿದೆ. ಪ್ಲೇಆಫ್‌ ಸ್ಪರ್ಧೆಯನ್ನು ಜೀವಂತವಾಗಿಟ್ಟುಕೊಳ್ಳಬೇಕಾದರೆ 3 ಬಾರಿಯ ಚಾಂಪಿಯನ್‌ ಕೆಕೆಆರ್‌ಗೆ ಉತ್ತಮ ರನ್‌ರೇಟ್‌ನೊಂದಿಗೆ ಇಂದಿನ ಪಂದ್ಯ ಗೆಲ್ಲುವುದು ಅನಿವಾರ್ಯ. ಒಂದು ವೇಳೆ ಸೋತರೆ ಪ್ಲೇಆಫ್‌ ಸ್ಪರ್ಧೆಯಿಂದ ಹೊರಗುಳಿದ 4ನೇ ತಂಡವಾಗಲಿದೆ. ಹೀಗಾಗಿ ರಹಾನೆ ಬಳಗಕ್ಕೆ ಶನಿವಾರದ ಪಂದ್ಯ ‘ಮಾಡು ಇಲ್ಲವೇ ಮಡಿ’ ಎಂಬಂತಾಗಿದೆ.

    ಹಿಂದಿನ 4 ಪಂದ್ಯಗಳಲ್ಲಿ ಅಜೇಯ ದಾಖಲೆ ಕಾಯ್ದುಕೊಂಡಿರುವ ಆರ್‌ಸಿಬಿ, ತವರಿನಲ್ಲಿ 3ನೇ ಹಾಗೂ ಸತತ 5ನೇ ಜಯದ ನಿರೀಕ್ಷೆಯಲ್ಲಿ ಕಣಕ್ಕಿಳಿಯುತ್ತಿದೆ. ಅತ್ತ ತಾನಾಡಿದ ಹಿಂದಿನ 3 ಪಂದ್ಯಗಳಲ್ಲಿ 2 ಜಯ ಹಾಗೂ 1 ಸೋಲು ಕಂಡಿರುವ ಕೆಕೆಆರ್‌, ಪ್ಲೇಆಫ್‌ ಸ್ಪರ್ಧೆಯಲ್ಲಿ ಉಳಿಯಲು ಗೆಲುವಿನ ಅನಿವಾರ್ಯತೆಯನ್ನು ಎದುರಿಸುತ್ತಿದೆ.

    ರಜತ್‌ ಪಾಟೀದಾರ್‌ ಲಭ್ಯ:
    ಇನ್ನೂ ಹಿಂದಿನ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ತವರಿನಲ್ಲಿ ನಡೆದ ಪಂದ್ಯದಲ್ಲಿ ಬೆರಳು ಗಾಯಕ್ಕೆ ಒಳಗಾಗಿದ್ದ ಆರ್‌ಸಿಬಿ ನಾಯಕ ರಜತ್‌ ಪಾಟೀದಾ‌ರ್, ಕೆಕೆಆರ್ ವಿರುದ್ಧದ ಪಂದ್ಯಕ್ಕೆ ಲಭ್ಯರಾಗುವ ಸಾಧ್ಯತೆ ದಟ್ಟವಾಗಿದೆ. ಶುಕ್ರವಾರ ತಂಡದ ಅಭ್ಯಾಸದಲ್ಲಿ ಅವರು ಭರ್ಜರಿ ತಾಲೀಮು ನಡೆಸಿರುವುದು ತಂಡದ ದೊಡ್ಡ ಚಿಂತೆಯನ್ನು ದೂರ ಮಾಡಿದೆ.

    ಮಳೆಯದ್ದೇ ಆತಂಕ:
    ಆರ್‌ಸಿಬಿ ಮತ್ತು ಕೆಕೆಆರ್ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ. ಈ ಬಾರಿ ಬೌಲಿಂಗ್‌ಗೆ ಹೆಚ್ಚು ಸಹಕರಿಸುವ ಚಿನ್ನಸ್ವಾಮಿ ಪಿಚ್‌ನಲ್ಲಿ ಮಳೆಯೂ ಮೇಲುಗೈ ಸಾಧಿಸಬಹುದು. ಇದಕ್ಕೆ ಅನುಗುಣವಾಗಿ ಉಭಯ ತಂಡಗಳು ಕಾರ್ಯತಂತ್ರ ರೂಪಿಸಬೇಕಿದೆ. ಒಂದು ವೇಳೆ ಮಳೆಯಿಂದಾಗಿ ಪಂದ್ಯ ರದ್ದಾದರೆ, ಉಭಯ ತಂಡಗಳು ತಲಾ ಒಂದೊಂದು ಅಂಕ ಪಡೆದುಕೊಳ್ಳಲಿವೆ. ಮಳೆಯಿಂದ ಪಂದ್ಯ ರದ್ದಾಗಿ ಒಂದು ಅಂಕ ಪಡೆದರೂ ಆರ್‌ಸಿಬಿ ಪ್ಲೇ ಆಫ್‌ ಖಚಿತವಾಗಲಿದೆ.

  • ಮೇ 17 ರಿಂದ ಮತ್ತೆ ಐಪಿಎಲ್‌ ಆರಂಭ

    ಮೇ 17 ರಿಂದ ಮತ್ತೆ ಐಪಿಎಲ್‌ ಆರಂಭ

    ಮುಂಬೈ: ಒಂದು ವಾರ ಮುಂದೂಡಿಕೆಯಾಗಿದ್ದ ಐಪಿಎಲ್‌ ಪಂದ್ಯಗಳು (IPL Match) ಮೇ 17 ರಿಂದ ಮತ್ತೆ ಆರಂಭವಾಗಲಿದೆ.

    ಮೇ 29ಕ್ಕೆ ಮೊದಲ ಕ್ವಾಲಿಫೈಯರ್‌ ಪಂದ್ಯ ನಡೆದರೆ ಮೇ 30 ಎಲಿಮಿನೇಟರ್‌ ಪಂದ್ಯ ನಡೆಯಲಿದೆ. ಜೂನ್‌ 1 ರಂದು ಎರಡನೇ ಕ್ವಾಲಿಫೈಯರ್‌ ಪಂದ್ಯ ನಡೆದರೆ ಜೂನ್‌ 3 ರಂದು ಫೈನಲ್‌ ಪಂದ್ಯ ನಡೆಯಲಿದೆ.

    ಬೆಂಗಳೂರು, ಜೈಪುರ, ದೆಹಲಿ, ಮುಂಬೈ, ಅಹಮದಾಬಾದ್‌, ಲಕ್ನೋದಲ್ಲಿ ಉಳಿದ ಪಂದ್ಯಗಳು ನಡೆಯಲಿದೆ. ಕ್ವಾಲಿಫೈಯರ್‌, ಎಲಿಮಿನೇಟರ್‌ ಮತ್ತು ಫೈನಲ್‌ ಪಂದ್ಯದ ಸ್ಥಳಗಳು ನಿಗದಿಯಾಗಿಲ್ಲ. ಇದನ್ನೂ ಓದಿ: ಪಾಕ್‌ ಜೊತೆ ಮಾತುಕತೆ ನಡೆದ್ರೆ ಭಯೋತ್ಪಾದನೆ, POK ಬಗ್ಗೆ ಮಾತ್ರ: ಮೋದಿ ಖಡಕ್‌ ಮಾತು

    ಆರ್‌ಸಿಬಿ (RCB) ಮತ್ತು ಕೆಕೆಆರ್‌ (KKR) ಮಧ್ಯೆ ಮೇ 17 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಮೊದಲ ಪಂದ್ಯ ನಡೆಯಲಿದೆ.

  • IPL 2025 ಟೂರ್ನಿ 1 ವಾರ ಸ್ಥಗಿತ – ಶೀಘ್ರವೇ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ

    IPL 2025 ಟೂರ್ನಿ 1 ವಾರ ಸ್ಥಗಿತ – ಶೀಘ್ರವೇ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ

    – ಆರ್‌ಸಿಬಿ vs ಲಕ್ನೋ ಪಂದ್ಯದ ಟಿಕೆಟ್‌ ಶುಲ್ಕ ಶೀಘ್ರದಲ್ಲೇ ವಾಪಸ್‌

    ನವದೆಹಲಿ: ಭಾರತ ಮತ್ತು ಪಾಕ್‌ ನಡುವಿನ ಪ್ರತೀಕಾರ ಸಮರ ಜೋರಾಗುತ್ತಿದ್ದಂತೆ ಭದ್ರತಾ ಕಾರಣಗಳಿಂದ 18ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2025) ಟೂರ್ನಿಯನ್ನು ಬಿಸಿಸಿಐ ಒಂದು ವಾರಗಳ ಕಾಲ ಸ್ಥಗಿತಗೊಳಿಸಿದೆ.

    ಇಂದು ನಡೆದ ಮಹತ್ವದ ಸಭೆಯಲ್ಲಿ ಭಾರತೀಯ ಕ್ರಿಕೆಟ್‌ ಮಂಡಳಿ (BCCI) ಈ ನಿರ್ಧಾರ ಕೈಗೊಂಡಿದೆ. ಅದರಂತೆ ಇಂದಿನಿಂದ ನಿಗದಿಯಾಗಿದ್ದ ಎಲ್ಲಾ ಪಂದ್ಯಗಳ ಒಂದು ವಾರಗಳ ಕಾಲ ಅಮಾನತುಗೊಳಿಸಿದೆ. ಸಂಬಂಧಪಟ್ಟವರೊಂದಿಗೆ ಸಮಾಲೋಚಿಸಿ ಪರಿಸ್ಥಿತಿ ನೋಡಿಕೊಂಡು ಪರಿಷ್ಕೃತ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸುವುದಾಗಿ ಬಿಸಿಸಿಐ ಹೇಳಿದೆ. ಆದ್ರೆ ಕೆಲ ವರದಿಗಳು ಭಾರತ ಮತ್ತು ಇಂಗ್ಲೆಂಡ್‌ ಟೆಸ್ಟ್‌ ಸರಣಿ ಬಳಿಕ ಪಂದ್ಯ ಮುಂದುವರಿಯುವ ಸಾಧ್ಯತೆಯಿದೆ ಎಂದು ತಿಳಿಸಿವೆ.

    ಪ್ರಸ್ತುತ 18ನೇ ಆವೃತ್ತಿಯ ಐಪಿಎಲ್ ಗುರುವಾರದ ಸ್ಥಗಿತಗೊಂಡ ಪಂಜಾಬ್ ಕಿಂಗ್ಸ್ (Punjab Kings) ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯ ಸೇರಿ 58 ಪಂದ್ಯಗಳು ನಡೆದಿವೆ. ಇನ್ನೂ ನಾಲ್ಕು ಪ್ಲೇ ಆಫ್ಸ್ ಪಂದ್ಯಗಳೂ ಸೇರಿ 16 ಪಂದ್ಯಗಳು ಬಾಕಿ ಇವೆ. ಸದ್ಯ ಬಿಸಿಸಿಐ ಆಟಗಾರರು ಮತ್ತು ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಿದೆ. ಆಟಗಾರರನ್ನು ಮನೆಗಳಿಗೆ ಸುರಕ್ಷಿತವಾಗಿ ಕಳುಹಿಸುವ ವ್ಯವಸ್ಥೆಗಳ ಬಗ್ಗೆ ಗಮನಹರಿಸಲಿದೆ. ಉದ್ವಿಗ್ನತೆ ಶಮನವಾದ ಬಳಿಕ ಹೊಸ ದಿನಾಂಕಗಳನ್ನು ಪ್ರಕಟಿಸಲಿದೆ ಎಂದು ಬಿಸಿಸಿಐ, ಐಪಿಎಲ್‌ ಮಂಡಳಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

    RCB vs LSG ಪಂದ್ಯ ಟಿಕೆಟ್‌ ವಾಪಸ್‌:
    ಇಂದು ಲಕ್ನೋದ ಏಕನಾ ಕ್ರೀಡಾಂಗಣದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ಮತ್ತು ಲಕ್ನೋ ಸೂಪರ್‌ ಜೈಂಟ್ಸ್‌ (LSG) ತಂಡಗಳ ನಡುವೆ ಹಣಾಹಣಿ ನಡೆಯಬೇಕಿತ್ತು. ಪ್ಲೇ ಆಫ್‌ ಅಧಿಕೃತ ಪ್ರವೇಶಕ್ಕೆ ಇಂದಿನ ಪಂದ್ಯದ ಗೆಲುವು ಅನಿವಾರ್ಯವಾಗಿತ್ತು. ಪಂದ್ಯ ಸ್ಥಗಿತಗೊಳಿಸಿದ್ದರಿಂದ ಟಿಕೆಟ್‌ ಖರೀದಿ ಮಾಡಿರುವ ಎಲ್ಲಾ ಗ್ರಾಹಕರಿಗೂ ಶೀಘ್ರದಲ್ಲೇ ಹಣ ವಾಪಸ್‌ ನೀಡುವುದಾಗಿ ಐಪಿಎಲ್‌ ಮಂಡಳಿ ತಿಳಿಸಿದೆ.

    ಜಮ್ಮು ಮತ್ತು ಪಠಾಣ್‌ಕೋಟ್ ನಗರಗಳಲ್ಲಿ ದಾಳಿಯ ಎಚ್ಚರಿಕೆಗಳು ಬಂದಿದ್ದರಿಂದ ಗುರುವಾರ (ಮೇ 8) ಧರ್ಮಶಾಲಾದಲ್ಲಿ ನಡೆಯಬೇಕಿದ್ದ ಪಂದ್ಯವನ್ನು ಅರ್ಧಕ್ಕೆ ಮೊಟಕುಗೊಳಿಸಲಾಗಿತ್ತು. ಈ ವಿಚಾರವಾಗಿ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಅವರು ಖಾಸಗಿ ವಾಹಿನಿಯಲ್ಲಿ ಮಾತನಾಡಿದ್ದರು.

    ಅತ್ತ ಪಾಕ್‌ನಲ್ಲಿ ನಡೆಯುತ್ತಿದ್ದ ಪಾಕಿಸ್ತಾನ್ ಸೂಪರ್ ಲೀಗ್‌ನ ಉಳಿದ ಎಲ್ಲಾ ಪಂದ್ಯಗಳನ್ನು ದುಬೈಗೆ ಸ್ಥಳಾಂತರಿಸುವಂತೆ ಪಾಕ್‌ ಸರ್ಕಾರ ಪಾಕಿಸ್ತಾನ ಕ್ರಿಕೆಟ್‌ ಬೋರ್ಡ್‌ಗೆ ಸೂಚನೆ ನೀಡಿದೆ.

  • Breaking | ಭಾರತ-ಪಾಕ್‌ ಉದ್ವಿಗ್ನತೆ – IPL 2025 ಟೂರ್ನಿ ಸಸ್ಪೆಂಡ್‌!

    Breaking | ಭಾರತ-ಪಾಕ್‌ ಉದ್ವಿಗ್ನತೆ – IPL 2025 ಟೂರ್ನಿ ಸಸ್ಪೆಂಡ್‌!

    ನವದೆಹಲಿ: ಭಾರತ ಮತ್ತು ಪಾಕಿಸ್ತಾನ (India Pakistan) ನಡುವೆ ಪ್ರತೀಕಾರ ಸಮರ ಜೋರಾಗುತ್ತಿದ್ದಂತೆ 18ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2025) ಟೂರ್ನಿಯನ್ನು ಬಿಸಿಸಿಐ (BCCI) ಅನಿರ್ದಿಷ್ಟಾವಧಿಗೆ ಮುಂದೂಡಿದೆ.

    ಇಂದು ನಡೆದ ಮಹತ್ವದ ಸಭೆಯಲ್ಲಿ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಈ ನಿರ್ಧಾರ ಕೈಗೊಂಡಿದೆ. ಅದರಂತೆ ಇಂದಿನಿಂದ ನಡೆಯುವ ಎಲ್ಲಾ ಪಂದ್ಯಗಳನ್ನು ಅನಿರ್ದಿಷ್ಟಾವಧಿವರೆಗೆ ಮುಂದೂಡಿದೆ. ಸದ್ಯ ಪ್ಲೇ ಆಫ್ಸ್‌ ಸೇರಿ 16 ಪಂದ್ಯಗಳು ಬಾಕಿ ಉಳಿದಿವೆ. ಸದ್ಯ ಬಿಸಿಸಿಐ ಆಟಗಾರರು ಮತ್ತು ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಿದೆ. ಆಟಗಾರರನ್ನು ಸದ್ಯಕ್ಕೆ ಮನೆಗಳಿಗೆ ಸುರಕ್ಷಿತವಾಗಿ ಕಳುಹಿಸುವ ವ್ಯವಸ್ಥೆಗಳ ಬಗ್ಗೆ ಗಮನಹರಿಸಲಿದೆ. ಉದ್ವಿಗ್ನತೆ ಶಮನವಾದ ಬಳಿಕ ಹೊಸ ದಿನಾಂಕಗಳನ್ನು ಪ್ರಕಟಿಸಲಿದೆ ಎಂದು ಬಿಸಿಸಿಐ ಉನ್ನತ ಮೂಲಗಳು ತಿಳಿಸಿವೆ.

    ಪ್ರಸ್ತುತ 18ನೇ ಆವೃತ್ತಿಯ ಐಪಿಎಲ್‌ ಗುರುವಾರದ ಸ್ಥಗಿತಗೊಂಡ ಪಂಜಾಬ್‌ ಕಿಂಗ್ಸ್‌ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ನಡುವಿನ ಪಂದ್ಯ ಸೇರಿ 58 ಪಂದ್ಯಗಳು ನಡೆದಿವೆ. ಇನ್ನೂ ನಾಲ್ಕು ಪ್ಲೇ ಆಫ್ಸ್‌ ಪಂದ್ಯಗಳೂ ಸೇರಿ 16 ಪಂದ್ಯಗಳು ಬಾಕಿ ಇವೆ.

    ಜಮ್ಮು ಮತ್ತು ಪಠಾಣ್‌ಕೋಟ್ ನಗರಗಳಲ್ಲಿ ದಾಳಿಯ ಎಚ್ಚರಿಕೆಗಳು ಬಂದಿದ್ದರಿಂದ ಗುರುವಾರ ಧರ್ಮಶಾಲಾದಲ್ಲಿ ನಡೆಯಬೇಕಿದ್ದ ಪಂದ್ಯವನ್ನು ರದ್ದುಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಈ ವಿಚಾರವಾಗಿ BCCI ಉಪಾಧ್ಯಕ್ಷ ರಾಜೀವ್ ಶುಕ್ಲಾ ಅವರು ಖಾಸಗಿ ವಾಹಿನಿಯಲ್ಲಿ ಮಾತನಾಡಿದ್ದರು.

    ಅಲ್ಲದೇ ಪಾಕ್‌ನಲ್ಲಿ ನಡೆಯುತ್ತಿದ್ದ ಪಾಕಿಸ್ತಾನ್‌ ಸೂಪರ್‌ ಲೀಗ್‌ನ ಉಳಿದ ಎಲ್ಲಾ ಪಂದ್ಯಗಳನ್ನು ದುಬೈಗೆ ಸ್ಥಳಾಂತರಿಸಲು ಪಿಸಿಬಿ ನಿರ್ಧಾರ ಕೈಗೊಂಡಿದೆ.

  • ಐಪಿಎಲ್‌ನಿಂದ ಪಡಿಕ್ಕಲ್ ಔಟ್ – ಮತ್ತೊಬ್ಬ ಕನ್ನಡಿಗನಿಗೆ ಮಣೆ ಹಾಕಿದ ಆರ್‌ಸಿಬಿ

    ಐಪಿಎಲ್‌ನಿಂದ ಪಡಿಕ್ಕಲ್ ಔಟ್ – ಮತ್ತೊಬ್ಬ ಕನ್ನಡಿಗನಿಗೆ ಮಣೆ ಹಾಕಿದ ಆರ್‌ಸಿಬಿ

    ಬೆಂಗಳೂರು: 18ನೇ ಆವೃತ್ತಿಯ ಐಪಿಎಲ್‌ನಲ್ಲಿ ಪ್ರಶಸ್ತಿ ಗೆಲ್ಲುವ ರೇಸ್‌ನಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಕ್ಕೆ ಶಾಕ್ ಎದುರಾಗಿದೆ. ಸ್ಟಾರ್ ಆಟಗಾರ ಕನ್ನಡಿಗ ದೇವದತ್ ಪಡಿಕ್ಕಲ್(Devdutt Padikkal) ಆರೋಗ್ಯ ಸಮಸ್ಯೆಯಿಂದ ಐಪಿಎಲ್‌ನಿಂದಲೇ ಹೊರಬಿದ್ದಿದ್ದಾರೆ.

    ಪಡಿಕ್ಕಲ್ ಅವರು ಸ್ನಾಯು ಸೆಳೆತಕ್ಕೆ ತುತ್ತಾಗಿದ್ದು, ಆರ್‌ಸಿಬಿಯ(RCB) ಇನ್ನುಳಿದ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಇದೀಗ ಪಡಿಕ್ಕಲ್ ಸ್ಥಾನವನ್ನು ತುಂಬಲು ಮತ್ತೊಬ್ಬ ಕನ್ನಡಿಗ ಮಯಾಂಕ್ ಅಗರ್‌ವಾಲ್‌ನನ್ನು(Mayank Agarwal) ತಂಡಕ್ಕೆ ಸೇರ್ಪಡೆ ಮಾಡಲಾಗಿದೆ ಎಂದು ಫ್ರಾಂಚೈಸಿ ತಿಳಿಸಿದೆ. ಇದನ್ನೂ ಓದಿ: ಬೀಚ್‌ನಲ್ಲಿ ಸುನಾಮಿ ಎಬ್ಬಿಸಿ, ಪಡ್ಡೆ ಹುಡುಗರಿಗೆ ಗ್ಲಾಮರ್‌ ಟ್ರೀಟ್‌ ಕೊಟ್ಟ ರಮ್ಯಾ!

    ಆರ್‌ಸಿಬಿ ಪರ 3ನೇ ಕ್ರಮಾಂಕದಲ್ಲಿ ಆಡುತ್ತಿದ್ದ ಪಡಿಕ್ಕಲ್ 10 ಪಂದ್ಯಗಳಲ್ಲಿ 247ರನ್ ಕಲೆಹಾಕಿದ್ದರು. ಇದರಲ್ಲಿ 2 ಅರ್ಧಶತಕಗಳೂ ಒಳಗೊಂಡಿವೆ. ಹೆಚ್ಚಿನ ಪಂದ್ಯಗಳಲ್ಲಿ ದೇವದತ್ತ್ ಕಳಪೆ ಬ್ಯಾಟಿಂಗ್ ಮೂಲಕ ನಿರಾಶೆ ಮೂಡಿಸಿದ್ದರು. ಇದನ್ನೂ ಓದಿ: ಆಪರೇಷನ್ ಸಿಂಧೂರವನ್ನು ಜಗತ್ತಿಗೆ ವಿವರಿಸಿದ್ದ ಕರ್ನಲ್ ಸೋಫಿಯಾ ಬೆಳಗಾವಿಯ ಸೊಸೆ!

    ಇನ್ನು ಮಯಾಂಕ್ 2011ರಲ್ಲಿ ಆರ್‌ಸಿಬಿ ಪರ ಆಡುವ ಮೂಲಕ ಐಪಿಎಲ್ ವೃತ್ತಿಜೀವನಕ್ಕೆ ಪಾದಾರ್ಪಣೆ ಮಾಡಿದ್ದರು. ಬಳಿಕ ಅವರು ಆರ್‌ಸಿಬಿಯಿಂದ ಹೊರಬಿದ್ದಿದ್ದರು. ಇವರು ಐಪಿಎಲ್‌ನಲ್ಲಿ ವಿವಿಧ ತಂಡಗಳ ಪರ ಒಟ್ಟು 127 ಪಂದ್ಯಗಳನ್ನಾಡಿದ್ದಾರೆ.

    ಕಳೆದ ಆವೃತ್ತಿಯಲ್ಲಿ ಸನ್‌ರೈಸ್‌ರ್ಸ್ ಹೈದರಾಬಾದ್(Sunrisers Hyderabad) ಪರ ಇದ್ದ ಮಯಾಂಕ್ ಅಗರ್ವಾಲ್ ಕಳಪೆ ಪ್ರದರ್ಶನ ನೀಡಿ ಟೀಕೆಗೆ ಗುರಿಯಾಗಿದ್ದರು. ಹಾಗಾಗಿ 2025ರ ಐಪಿಎಲ್‌ಗೆ ನಡೆದ ಹರಾಜಿನಲ್ಲಿ ಅನ್‌ಸೋಲ್ಡ್ ಆಗಿದ್ದರು. ಆದರೆ ಈ ಬಾರಿ ಮಯಾಂಕ್‌ರನ್ನ ಆರ್‌ಸಿಬಿ ಫ್ರಾಂಚೈಸಿಯು 1 ಕೋಟಿ ರೂ.ಗೆ ಖರೀದಿ ಮಾಡಿದೆ. ಇದನ್ನೂ ಓದಿ: ಭಾರತದ ವಿರುದ್ಧವೇ ಪೋಸ್ಟ್ – ಮಲಯಾಳಂ ನಟಿ ವಿರುದ್ಧ ಆಕ್ರೋಶ

    ಸದ್ಯ ಆರ್‌ಸಿಬಿಗೆ ಲೀಗ್ ಸುತ್ತಿನಲ್ಲಿ ಮೂರು ಪಂದ್ಯಗಳು ಬಾಕಿ ಉಳಿದಿವೆ. ಮೇ 9ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಏಕನಾ ಕ್ರೀಡಾಂಗಣದಲ್ಲಿ ಕಾದಾಟಕ್ಕಿಳಿಯಲಿದೆ. ಮೇ 13ರಂದು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಹಾಗೂ ಮೇ 17ರಂದು ಕೆಕೆಆರ್ ವಿರುದ್ಧ ತವರು ಕ್ರೀಡಾಂಗಣದಲ್ಲಿ ಆಡಲಿದೆ.

  • ಡೋಂಟ್ವರಿ ಸಿಎಸ್‌ಕೆ ಬೇಬಿಮಾ – ಸಿಎಸ್‌ಕೆ ಅಭಿಮಾನಿಗಳನ್ನ ರೊಚ್ಚಿಗೆದ್ದು ಕಿಚಾಯಿಸಿದ ಆರ್‌ಸಿಬಿ ಫ್ಯಾನ್ಸ್‌

    ಡೋಂಟ್ವರಿ ಸಿಎಸ್‌ಕೆ ಬೇಬಿಮಾ – ಸಿಎಸ್‌ಕೆ ಅಭಿಮಾನಿಗಳನ್ನ ರೊಚ್ಚಿಗೆದ್ದು ಕಿಚಾಯಿಸಿದ ಆರ್‌ಸಿಬಿ ಫ್ಯಾನ್ಸ್‌

    17 ಆವೃತ್ತಿ ಕಳೆದರೂ ಒಂದೇ ಒಂದು ಬಾರಿ ಕಪ್‌ ಗೆದ್ದಿಲ್ಲ.. ಪ್ರತೀ ಸೀಸನ್‌ನಲ್ಲೂ ಕಪ್‌ ಗೆಲ್ಲುವ ಲೆಕ್ಕಾಚಾರ.. ಕೊನೆಗೆ ಕಣ್ಣೀರ ವಿದಾಯ… ಆದಾಗ್ಯೂ ಆರ್‌ಸಿಬಿ ಅಭಿಮಾನಿಗಳ (RCB Fans) ಕ್ರೇಜ್‌ ಮಾತ್ರ ಕಡಿಮೆಯಾಗಿಲ್ಲ. ಪ್ರತಿಬಾರಿಯೂ ಹೊಸ ಉರುಪಿನೊಂದಿಗೆ ನಿರೀಕ್ಷೆಗಿಂತಲೂ ಹೆಚ್ಚಿನ ಬೆಂಬಲ ವ್ಯಕ್ತವಾಗುತ್ತಿದೆ. ಅದೇ ರೀತಿ ನಿನ್ನೆ ನಡೆದ ಹೈವೋಲ್ಟೇಜ್‌ ಪಂದ್ಯದಲ್ಲಿ ಬೆಂಕಿ ಬಿರುಗಾಳಿಯ ಹಗ್ಗಜಗ್ಗಾಟ ಜೋರಾಗಿಯೇ ಇತ್ತು. ಪಂದ್ಯದ ಕೊನೇ ಎಸೆತದವರೆಗೂ ರೋಚಕತೆಯಿಂದ ಕೂಡಿತ್ತು. ಆದ್ರೆ ಪಂದ್ಯ ಗೆದ್ದ ಬಳಿಕ ರೊಚ್ಚಿಗೆದ್ದ ಆರ್‌ಸಿಬಿ ಅಭಿಮಾನಿಗಳು ಸಿಎಸ್‌ಕೆ ಫ್ಯಾನ್ಸ್‌ಗಳಿಗೆ (CSK Fans) ಸಿಕ್ಕಾಪಟ್ಟೆ ಟಾಂಗ್‌ ಕೊಡಲು ಶುರು ಮಾಡಿದ್ದಾರೆ.

     

    View this post on Instagram

     

    A post shared by Amith Dollin (@amith_adda)

    ಕೆಲವರು ರಸ್ತೆಯಲ್ಲಿ, ಸೋಷಿಯಲ್‌ ಮೀಡಿಯಾಗಳಲ್ಲಿ ಹಾಗೂ ಮೆಟ್ರೋ ಟ್ರೈನ್‌ಗಳಲ್ಲಿ (Metro Train) ಸಿಎಸ್‌ಕೆ ಫ್ಯಾನ್ಸ್‌ಗಳನ್ನ ಕೆಣಕಿದ್ದಾರೆ. ಕೆಲವರು ಹದ್ದು ಮೀರಿ ವರ್ತಿಸಿದ್ದು ಪೊಲೀಸರಿಂದ ಗೂಸಾ ಸಹ ತಿಂದಿದ್ದಾರೆ. ಈ ಕುರಿತ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿವೆ. ಇದನ್ನೂ ಓದಿ: ಚೆನ್ನೈ ಎಡವಟ್ಟಿನಿಂದ ಆರ್‌ಸಿಬಿಗೆ ಗೆಲುವು – ಬಿಸಿ ಬಿಸಿ ಚರ್ಚೆಗೆ ಗ್ರಾಸವಾದ DRS

    ಇನ್‌ಸ್ಟಾಗ್ರಾಮ್‌ನಲ್ಲಿ ವೈರಲ್‌ ಆದ ವಿಡಿಯೋನಲ್ಲಿ ಆರ್‌ಸಿಬಿ ಅಭಿಮಾನಿಯೊಬ್ಬರು ಸಿನಿಮಾ ಹಾಡೊಂದಕ್ಕೆ ಹೋಲಿಕೆ ಮಾಡಿ ಸಿಎಸ್‌ಕೆ ಮತ್ತು ಅಭಿಮಾನಿಗಳಿಗೆ ಟಾಂಗ್‌ ಕೊಟ್ಟಿದ್ದಾರೆ. ʻಮರಳಿ ಬಾರದ ಊರಿಗೆ ಸಿಎಸ್‌ಕೆ ಹೋಗಯ್ತೆ.. ಹೋಗಯ್ತೆ ತಮಿಳ್‌ ನಾಡಿಗೆ, ಧೋನಿ ಹಾರ್ಟು ರಿಚ್ಚು, ಸಿಎಸ್‌ಕೆ ಫ್ಯಾನ್ಸ್‌ಗೆ ಹಿಡಿತು ಹುಚ್ಚು… ಇನ್ಮೇಲೆ ವಿಸಿಲ್‌ ಪೋಡು ಅನ್ನಂಗಿಲ್ಲ…. ಡೋಂಟ್ವರಿ ಸಿಎಸ್‌ಕೆ ಬೇಬಿಮಾ, ಇನ್ಮೆಲ್‌ ವಿಸಿಲ್‌ ಪೋಡೊ ಅನ್ನೋದೆಲ್ಲ ಬಿಟ್ಬಿಡಮ್ಮ.. ಅಂತ ಹಾಡು ಹೇಳಿ ಕಿಚಾಯಿಸಿದ್ದಾರೆ. ಇದನ್ನೂ ಓದಿ: IPL 2025 | ಆರ್‌ಸಿಬಿಗೆ 2 ರನ್‌ಗಳ ರೋಚಕ ಜಯ – 16 ವರ್ಷಗಳ ಬಳಿಕ ಹೊಸ ಮೈಲುಗಲ್ಲು

    ಮ್ಯಾಚ್‌ ಮಾತ್ರ ಸೂಪರ್‌ ಆಗಿತ್ತು. ಯಶ್‌ ದಯಾಳ್‌ ಕೊನೇ ಓವರ್‌ನಲ್ಲಿ ನೋಬಾಲ್‌ ಹಾಕಿದಾಗ ನನಗೆ ಹೆವಿ ಟೆನ್ಶನ್‌ ಆಗಿತ್ತು, ಅಲ್ಲೊಬ್ಬ ತಲಾ ತಲಾ ಪುಡಿ ಪುಡಿ ಅಂತ ಕೂಗ್ತಾ ಇದ್ದ.. ಅವೆಲ್ಲ ಮಸ್ತ್‌ ಆಗಿತ್ತು. ಏನೇ ಆಗಲಿ ನಮಗೆ ನಂ.7 ಗಿಂತ ನಂ.18 ಮುಖ್ಯ. ಬೆಂಗಳೂರಿನ ಭಗವಂತ ಕಿಂಗ್‌ ಕೊಹ್ಲಿ ಅಂತ ಗುಣಗಾನ ಮಾಡಿದ್ದಾರೆ. ಇದನ್ನೂ ಓದಿ: ಸ್ಫೋಟಕ ಫಿಫ್ಟಿ – ಕನ್ನಡಿಗ ಕೆ.ಎಲ್‌ ರಾಹುಲ್‌ ದಾಖಲೆ ಸರಿಗಟ್ಟಿದ ರೊಮಾರಿಯೊ ಶೆಫರ್ಡ್

    ಮಧ್ಯರಾತ್ರಿಯಲ್ಲೂ ಕುಗ್ಗದ ಅಭಿಮಾನಿಗಳ ಉತ್ಸಾಹ
    ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎರಡು ಬಾರಿ ಬಗ್ಗು ಬಡಿದ ರಾಯಲ್ ಪಡೆಗೆ ಅಭಿಮಾನಿಗಳು ಮಧ್ಯರಾತ್ರಿ ನೀಡಿದ ಸ್ವಾಗತ ನೋಡಿ ಖುದ್ದು ಆರ್​ಸಿಬಿ ಆಟಗಾರರೇ ರೋಮಾಂಚನಗೊಂಡಿದ್ದರು. ರಸ್ತೆಯುದ್ದಕ್ಕೂ ಕಾದು ನಿಂತಿದ್ದ ಅಭಿಮಾನಿಗಳ ಹರ್ಷೋದ್ಗಾರ ಮುಗಿಲು ಮುಟ್ಟಿತು. ಮಧ್ಯರಾತ್ರಿಯವರೆಗೆ ಕಾದು ನಿಂತು ತೋರಿದ ಈ ಅಭಿಮಾನಕ್ಕೆ ಆರ್​ಸಿಬಿ ಆಟಗಾರರು ಪುಳಕಿತರಾಗಿದ್ದಾರೆ. ಅಷ್ಟೇ ಅಲ್ಲದೇ ಈ ಕ್ರೇಝ್ ನೋಡಿ ರೋಮಾಂಚನಗೊಂಡ ಕೃನಾಲ್ ಪಾಂಡ್ಯ, ಈ ಸಲ ಇವರಿಗಾಗಿ ನಾವು ಕಪ್ ಗೆಲ್ಲಲೇಬೇಕು ಎಂದು ಶಪಥ ಮಾಡಿದ್ದಾರೆ. ಇದೀಗ ಆರ್​ಸಿಬಿ ಅಭಿಮಾನಿಗಳ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

    ಆರ್​ಸಿಬಿಗೆ ಮುಂದಿನ ಎದುರಾಳಿಗಳು ಯಾರು?
    ಲೀಗ್​ ಹಂತದಲ್ಲಿ ಆರ್​ಸಿಬಿ ತಂಡಕ್ಕೆ ಉಳಿದಿರುವುದು ಕೇವಲ 3 ಮ್ಯಾಚ್​ಗಳು ಮಾತ್ರ. ಈ ಪಂದ್ಯಗಳಲ್ಲಿ ಆರ್​ಸಿಬಿ ಲಕ್ನೋ ಸೂಪರ್ ಜೈಂಟ್ಸ್ (ಮೇ 9), ಸನ್​ರೈಸರ್ಸ್ ಹೈದರಾಬಾದ್ (ಮೇ 13) ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ (ಮೇ 17) ತಂಡಗಳನ್ನು ಎದುರಿಸಲಿದೆ. ಆದ್ರೆ ಈಗಾಗಲೇ ಬಹುತೇಕ ಪ್ಲೇ ಆಫ್‌ ಹಾದಿಯನ್ನು ಖಚಿತಪಡಿಸಿಕೊಂಡಿರುವ ಆರ್‌ಸಿಬಿ ಇನ್ನೊಂದು ಪಂದ್ಯ ಗೆದ್ದರೆ ಅಧಿಕೃತವಾಗಿ ಪ್ಲೇ ಆಫ್‌ಗೆ ಎಂಟ್ರಿ ಕೊಡಲಿದೆ. ಇದನ್ನೂ ಓದಿ: ಸಿಎಸ್‌ಕೆ ವಿರುದ್ಧ ಅಬ್ಬರದ ಆಟ – ಆರ್‌ಸಿಬಿ ಪರ ಸಿಕ್ಸರ್‌ನಿಂದಲೇ ದಾಖಲೆ ಬರೆದ ಕಿಂಗ್‌ ಕೊಹ್ಲಿ