Tag: rcb

  • RCB ಸೋಲಿಗೆ ಅಶ್ವಿನಿ ಪುನೀತ್‌ರಾಜ್‌ಕುಮಾರ್‌ ಹೊಣೆ ಅಂತಾ ಕೀಳುಮಟ್ಟದ ಪೋಸ್ಟ್‌- ಕಿಡಿಗೇಡಿ ಮೇಲೆ ಬಿತ್ತು FIR

    RCB ಸೋಲಿಗೆ ಅಶ್ವಿನಿ ಪುನೀತ್‌ರಾಜ್‌ಕುಮಾರ್‌ ಹೊಣೆ ಅಂತಾ ಕೀಳುಮಟ್ಟದ ಪೋಸ್ಟ್‌- ಕಿಡಿಗೇಡಿ ಮೇಲೆ ಬಿತ್ತು FIR

    ದೊಡ್ಮನೆ ಸೊಸೆ ಅಶ್ವಿನಿ ಪುನೀತ್ ರಾಜ್‌ಕುಮಾರ್ (Ashwini Puneeth Rajkumar) ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದವರ ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಿಸಲಾಗಿದೆ. ಆರ್‌ಸಿಬಿ (RCB) ಸೋಲಿಗೆ ಅಶ್ವಿನಿ ಅವರೇ ಕಾರಣ ಎಂದು ನಿಂದಿಸಿದ ಅನಾಮಿಕ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

    ಕಳೆದ ಮಾರ್ಚ್ ತಿಂಗಳು 19ನೇ ತಾರೀಕಿನಂದು ಬೆಂಗಳೂರಿನ ಆರ್‌ಸಿಬಿ ಅನ್‌ಬಾಕ್ಸ್ ಇವೆಂಟ್‌ನಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರನ್ನು ಆಹ್ವಾನಿಸಿದ್ದರು. ಅದರಂತೆ ಅಶ್ವಿನಿ ಅವರು ಆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದಾದ ನಂತರ ಐಪಿಎಲ್ ಪ್ರಾರಂಭವಾಗಿ ಆರ್‌ಸಿಬಿ ತಂಡ ಕೆಲ ಪಂದ್ಯಗಳಲ್ಲಿ ಸೋತಿದೆ. ದರ್ಶನ್ ಅಭಿಮಾನಿ ಎಂದು ಹೇಳಿಕೊಂಡಿರುವ ‘ಗಜಪಡೆ’ ಹೆಸರಿನ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ, ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಆರ್‌ಸಿಬಿ ಕಾರ್ಯಕ್ರಮಕ್ಕೆ ಬಂದಿದ್ದಕ್ಕೆ ತಂಡ ಸೋತಿದೆ ಎಂದು ನಿಂದಿಸಲಾಗಿದೆ. ಅಭಿಮಾನಿಗಳಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ `ಸುದೀಪ್ ಅಭಿಮಾನಿ’ ಎಂದು ಖಾತೆಯ ಹೆಸರು ಬದಲಿಸಿದ್ದಾರೆ. ಇದರ ವಿರುದ್ಧ ಅಪ್ಪು ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಕಾನೂನು ಸಮರ ಸಾರಿದ್ದಾರೆ.

    ಅಶ್ವಿನಿ ಪುನೀತ್ ರಾಜ್ ಕುಮಾರ್ ಬಗ್ಗೆ ಬರೆದ ಕೀಳು ಮಟ್ಟದ ಪೋಸ್ಟ್‌ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಅದರಲ್ಲೂ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸ್ ಕಮಿಷನರ್ ಭೇಟಿ ಮಾಡಿ ಎಫ್‌ಐಆರ್ ದಾಖಲಿಸಿದ್ದಾರೆ. ಇದನ್ನೂ ಓದಿ:ಟಿಲ್ಲು ಸ್ಕ್ವೇರ್ ಸಕ್ಸಸ್ ನಂತರ ದುಬಾರಿ ನಟಿಯಾದ ಅನುಪಮಾ ಪರಮೇಶ್ವರನ್

    ಸಾಕಷ್ಟು ಬಾರಿ ಈ ಫ್ಯಾನ್ಸ್ ವಾರ್ ಕನ್ನಡದಲ್ಲಿ ನಡೆದಿದೆ. ಅದಕ್ಕೆ ಫುಲ್ ಸ್ಟಾಪ್ ಹಾಕುವಂತೆ ಸ್ವತಃ ದರ್ಶನ್ ಅವರೇ ಈ ಹಿಂದೆ ವಿಡಿಯೋ ಮೂಲಕ ಮನವಿ ಮಾಡಿದ್ದರು. ತಮ್ಮ ಅಭಿಮಾನಿಗಳು ಯಾವುದೇ ಕಾರಣಕ್ಕೂ ಬೇರೆಯ ನಟರ ಅಥವಾ ಅಭಿಮಾನಿಗಳನ್ನು ನಿಂದಿಸಬಾರದು ಎಂದು ಮನವಿ ಮಾಡಿದ್ದರು. ಆದರೂ, ಪದೇ ಪದೇ ಇಂತಹ ಘಟನೆಗಳು ನಡೆಯುತ್ತಲೇ ಇವೆ.

  • ಐಪಿಎಲ್‌ನಲ್ಲಿ ಮತ್ತೊಂದು ದಾಖಲೆ ಉಡೀಸ್‌ -‌ ಬರೋಬ್ಬರಿ 35 ಕೋಟಿ ಮಂದಿ ವೀಕ್ಷಣೆ!

    ಐಪಿಎಲ್‌ನಲ್ಲಿ ಮತ್ತೊಂದು ದಾಖಲೆ ಉಡೀಸ್‌ -‌ ಬರೋಬ್ಬರಿ 35 ಕೋಟಿ ಮಂದಿ ವೀಕ್ಷಣೆ!

    ವಿಶಾಖಪಟ್ಟಣಂ: 2024ರ ಐಪಿಎಲ್‌ (IPL 2024) ಆವೃತ್ತಿ ಹಲವು ಅವಿಸ್ಮರಣೀಯ ದಾಖಲೆಗಳಿಗೆ ಸಾಕ್ಷಿಯಾಗಿದೆ. ಮೈದಾನದಲ್ಲಿ ಹುರಿಯಾಳುಗಳು ಬ್ಯಾಟ್‌ ಹಿಡಿದು ಅಬ್ಬರಿಸುತ್ತಾ ದಾಖಲೆಗಳನ್ನು ಬರೆಯುತ್ತಿದ್ದರೆ, ಗ್ರೌಂಡ್‌ ಹೊರಗೆ ಕ್ರಿಕೆಟ್‌ ಅಭಿಮಾನಿಗಳು ವೀಕ್ಷಣೆಯಲ್ಲಿ ದಾಖಲೆ ಮಾಡುತ್ತಿದ್ದಾರೆ. ಬುಧವಾರ ಕೋಲ್ಕತ್ತಾ ನೈಟ್‌ರೈಡರ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ (KKR vs DC) ವಿರುದ್ಧ ಪಂದ್ಯದ ಬಳಿಕ 17ನೇ ಆವೃತ್ತಿ ಮತ್ತೊಂದು ದಾಖಲೆಗೆ ಸಾಕ್ಷಿಯಾಗಿದೆ.

    ಲೀಗ್‌ ಸುತ್ತಿನ ಮೊದಲ 10 ಪಂದ್ಯಗಳಲ್ಲಿ ದಾಖಲೆಯ 35 ಕೋಟಿ ವೀಕ್ಷಣೆ ಕಂಡಿದೆ.‌ ಕೋವಿಡ್‌ ಬಳಿಕ ಸ್ಟಾರ್‌ ಸ್ಫೋರ್ಟ್ಸ್‌ನಲ್ಲಿ (Star Sports) ಐಪಿಎಲ್‌ ಟೂರ್ನಿಯ ಮೊದಲ 10 ಪಂದ್ಯಗಳನ್ನು 35 ಕೋಟಿ ಮಂದಿ ವೀಕ್ಷಣೆ ಮಾಡಿದ್ದಾರೆ. ಇದು ಹಿಂದಿನ ಎಲ್ಲಾ ದಾಖಲೆಗಳನ್ನ ನುಚ್ಚುನೂರು ಮಾಡಿದೆ. ಬಾರ್ಕ್‌ (BARC) ದತ್ತಾಂಶಗಳನ್ನು ಉಲ್ಲೇಖಿಸಿ ಸ್ಟಾರ್‌ಸ್ಫೋರ್ಟ್ಸ್‌ ಮಾಹಿತಿ ಹಂಚಿಕೊಂಡಿದೆ. ಇದನ್ನೂ ಓದಿ: ರಿಷಭ್‌ ಪಂತ್‌ ಸೇರಿದಂತೆ ಇಡೀ ಡೆಲ್ಲಿ ತಂಡಕ್ಕೆ ಭಾರೀ ದಂಡ

    ಅಲ್ಲದೇ ಟಿವಿಯಲ್ಲಿ ಪಂದ್ಯಾವಳಿಯ ಒಟ್ಟು ವೀಕ್ಷಣೆ ಸಮಯವು 8,028 ಕೋಟಿ ನಿಮಿಷಗಳಷ್ಟು ತಲುಪಿದೆ. ಇದು ಕಳೆದ ವರ್ಷಕ್ಕಿಂತ 20% ಹೆಚ್ಚಳವಾಗಿದೆ. ಅಲ್ಲದೇ ಹಿಂದಿನ ಎಲ್ಲಾ ಆವೃತ್ತಿಗಳಿಗೆ ಹೋಲಿಸಿದರೆ, 17ನೇ ಆವೃತ್ತಿಯ ಐಪಿಎಲ್‌ ಪಂದ್ಯದ ರೇಟಿಂಗ್‌ಗಳು 22% ರಷ್ಟು ಏರಿಕೆಯಾಗಿದೆ ಎಂದು ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ನ ಕ್ರೀಡಾ ವಿಭಾಗದ ಮುಖ್ಯಸ್ಥ ಸಂಜೋಗ್ ಗುಪ್ತಾ ತಿಳಿಸಿದ್ದಾರೆ.

    17ನೇ ಆವೃತ್ತಿಯ ಐಪಿಎಲ್‌ ಟೂರ್ನಿಯು ಕಳೆದ ಮಾರ್ಚ್‌ 22ರಂದು ಚೆನ್ನೈನ ಚೆಪಾಕ್‌ ಕ್ರೀಡಾಂಗಣದಲ್ಲಿ ಉದ್ಘಾಟನೆಗೊಂಡಿತು. ಚೆನ್ನೈ ಸೂಪರ್‌ ಕಿಂಗ್ಸ್‌ ಮತ್ತು ಆರ್‌ಸಿಬಿ ನಡುವಿನ ಉದ್ಘಾಟನಾ ಪಂದ್ಯವನ್ನು ಸುಮಾರು 16.8 ಕೋಟಿ ಮಂದಿ ವೀಕ್ಷಣೆ ಮಾಡಿದ್ದರು. ಮೊದಲ 6 ಪಂದ್ಯಗಳನ್ನು ಜಿಯೋ ಸಿನಿಮಾದಲ್ಲಿ ಆಪ್‌ನಲ್ಲಿ 20 ಕೋಟಿ ಮಂದಿ ವೀಕ್ಷಿಸಿದ್ದರು. ಇದನ್ನೂ ಓದಿ: ಕೆಕೆಆರ್‌ ರನ್‌ ಹೊಳೆಯಲ್ಲಿ ಮುಳುಗಿದ ಡೆಲ್ಲಿ – ನೈಟ್‌ರೈಡರ್ಸ್‌ಗೆ 106 ರನ್‌ಗಳ ಭರ್ಜರಿ ಜಯ

    ಡಿಸ್ನಿ ಸ್ಟಾರ್‌ ಟಾಟಾ ಐಪಿಎಲ್‌ ಟೂರ್ನಿಯನ್ನು 10 ಭಾಷೆಗಳಲ್ಲಿ ಮತ್ತು 14 ವಾಹಿನಿಗಳಲ್ಲಿ ಪ್ರಸಾರ ಮಾಡುತ್ತಿದೆ. ಅಲ್ಲದೇ ಶ್ರವಣದೋಷವುಳ್ಳವರಿಗಾಗಿ ಸಂಕೇತ ಭಾಷೆಯಲ್ಲಿಯೂ ಕಾಮೆಂಟ್ರಿ ಪ್ರಸಾರ ಮಾಡಲಾಗುತ್ತಿದೆ. ಈ ನಡುವೆ ಜಿಯೋ ಸಿನಿಮಾ ತನ್ನ ಆಪ್‌ ಮತ್ತು ಕಂಪ್ಯೂಟರ್‌ ವೀಕ್ಷಕರಿಗೆ ಜೀತೋ ಧನ್ ಧನಾ ಧನ್ ಸ್ಪರ್ಧೆಯ ಮೂಲಕ ಪ್ರತೀ ಪಂದ್ಯದ ವೀಕ್ಷಣೆಯ ವೇಳೆ ಕಾರು ಗೆಲ್ಲುವ ಜೊತೆ ಅತ್ಯಾಕರ್ಷಕ ಬಹುಮಾನಗಳನ್ನೂ ವಿತರಿಸಲಾಗುತ್ತಿದೆ. ಕಳೆದ ವರ್ಷವೂ ಟಾಟಾ ಐಪಿಎಲ್‌ನ ಮೊದಲ 5 ವಾರಗಳಲ್ಲಿ 1,300 ಕೋಟಿಗೂ ಅಧಿಕ ವಿಡಿಯೋ ವೀಕ್ಷಣೆಯ ದಾಖಲೆಯನ್ನು ಜಿಯೋ ಸಿನಿಮಾ ತನ್ನದಾಗಿಸಿಕೊಂಡಿತ್ತು. ಇದನ್ನೂ ಓದಿ: 2ನೇ ಬಾರಿಗೆ ಆರ್‌ಸಿಬಿ ದಾಖಲೆ ನುಚ್ಚುನೂರು – ಐಪಿಎಲ್‌ ಇತಿಹಾಸದಲ್ಲಿ ಮತ್ತೊಂದು ವಿಶೇಷ ಸಾಧನೆ

  • ‌ಕೆಕೆಆರ್‌ ರನ್‌ ಹೊಳೆಯಲ್ಲಿ ಮುಳುಗಿದ ಡೆಲ್ಲಿ – ನೈಟ್‌ರೈಡರ್ಸ್‌ಗೆ 106 ರನ್‌ಗಳ ಭರ್ಜರಿ ಜಯ

    ‌ಕೆಕೆಆರ್‌ ರನ್‌ ಹೊಳೆಯಲ್ಲಿ ಮುಳುಗಿದ ಡೆಲ್ಲಿ – ನೈಟ್‌ರೈಡರ್ಸ್‌ಗೆ 106 ರನ್‌ಗಳ ಭರ್ಜರಿ ಜಯ

    – ಸಿಕ್ಸರ್‌, ಬೌಂಡರಿ ಸುರಿಮಳೆ – ಪಂತ್‌ ಸ್ಪೋಟಕ ಅರ್ಧಶತಕ ವ್ಯರ್ಥ

    ವಿಶಾಖಪಟ್ಟಣಂ: ಸುನೀಲ್‌ ನರೇನ್‌, ರಘುವಂಶಿ, ರಿಂಕು, ರಸೆಲ್‌ ಸ್ಫೋಟಕ ಬ್ಯಾಟಿಂಗ್‌ ಹಾಗೂ ಸಂಘಟಿತ ಬೌಲಿಂಗ್‌ ದಾಳಿ ನೆರವಿನಿಂದ ಕೋಲ್ಕತ್ತಾ ನೈಟ್‌ರೈಡರ್ಸ್‌ (Kolkata Knight Riders) ತಂಡವು ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ವಿರುದ್ಧ 106 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಅಲ್ಲದೇ ಅಧಿಕ ರನ್‌ರೇಟ್‌ನೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

    ಇಲ್ಲಿನ ಡಾ.ವೈ.ಎಸ್. ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್‌ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ ಬರೋಬ್ಬರಿ 272 ರನ್‌ ಸಿಡಿಸಿತ್ತು. ಈ ಗುರಿ ಡೆಲ್ಲಿ ಕ್ಯಾಪಿಟಲ್ಸ್‌ 17.2 ಓವರ್‌ಗಳಲ್ಲೇ 166 ರನ್‌ಗಳಿಗೆ ಸರ್ವಪತನ ಕಂಡು ಸೋಲೊಪ್ಪಿಕೊಂಡಿತು.

    273‌ ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್‌ ಆರಂಭದಲ್ಲೇ ಸ್ಫೋಟಕ ಪ್ರದರ್ಶನ ನೀಡಲು ಮುಂದಾಯಿತು. ಆದ್ರೆ ರನ್‌ ಕಲೆಹಾಕುವ ಅವಸರದಲ್ಲಿ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೀಡಾಯಿತು. ಮಧ್ಯಮ ಕ್ರಮಾಂಕದಲ್ಲಿ ನಾಯಕ ರಿಷಭ್‌ ಪಂತ್‌, ಟ್ರಿಸ್ಟಾನ್‌ ಸ್ಟಬ್ಸ್‌ ಸ್ಫೋಟಕ ಅರ್ಧಶತಕಗಳ ಹೋರಾಟವೂ ವ್ಯರ್ಥವಾಯಿತು.

    ಡೆಲ್ಲಿ ಪರ 220 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ರಿಷಭ್‌ ಪಂತ್‌ (Rishabh Pant) 55 ರನ್‌ (25 ಎಸೆತ, 5 ಸಿಕ್ಸರ್‌, 4 ಬೌಂಡರಿ), ಸ್ಟಬ್ಸ್‌ 54 ರನ್‌ (32 ಎಸೆತ, 4 ಸಿಕ್ಸರ್‌, 4 ಬೌಂಡರಿ), ಡೇವಿಡ್‌ ವಾರ್ನರ್‌ (David Warner) 18 ರನ್‌, ಪೃಥ್ವಿ ಶಾ 10 ರನ್‌ ಗಳಿಸಿದರೆ, ಮಿಚೆಲ್‌ ಮಾರ್ಷ್‌ ಹಾಗೂ ಅಭಿಷೇಕ್‌ ಪೋರೆಲ್‌ ಶೂನ್ಯ ಸುತ್ತಿದರು. ಉಳಿದ ಬ್ಯಾಟರ್‌ಗಳು ಕ್ರೀಸ್‌ನಲ್ಲಿ ನೆಲೆಯೂರದೇ ಪೆವಿಲಿಯನ್‌ ಪರೇಡ್‌ ನಡೆಸಿದರು. ಅಂತಿಮವಾಗಿ ಡೆಲ್ಲಿ 166 ರನ್‌ಗಳಿಗೆ ಆಲೌಟ್‌ ಆಯಿತು.

    ಡೆಲ್ಲಿ ಕ್ಯಾಪಿಟಲ್ಸ್‌ ಪರ ವೈಭವ್‌ ಅರೋರ ಮತ್ತು ವರುಣ್‌ ಚಕ್ರವರ್ತಿ ತಲಾ 3 ವಿಕೆಟ್‌ ಕಿತ್ತರೆ, ದುಬಾರಿ ಆಟಗಾರ ಮಿಚೆಲ್‌ ಸ್ಟಾರ್ಕ್‌ 2 ವಿಕೆಟ್‌ ಹಾಗೂ ಆಂಡ್ರೆ ರಸೆಲ್‌, ಸುನೀಲ್‌ ನರೇನ್‌ ತಲಾ ಒಂದೊಂದು ವಿಕೆಟ್‌ ಕಿತ್ತರು.

    ಇದಕ್ಕೂ ಮುನ್ನ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ದುಕೊಂಡ ಕೆಕೆಆರ್‌ 7 ವಿಕೆಟ್‌ ನಷ್ಟಕ್ಕೆ 20 ಓವರ್‌ಗಳಲ್ಲಿ 272 ರನ್‌ ಬಾರಿಸಿತ್ತು. ಪಿಲ್‌ ಸಾಲ್ಟ್‌ 18 ರನ್‌, ಸುನೀಲ್‌ ನರೇನ್‌ 85 ರನ್‌ (39 ಎಸೆತ, 7 ಸಿಕ್ಸರ್‌, 7 ಬೌಂಡರಿ), ರಘು ವಂಶಿ 54 ರನ್‌ (27 ಎಸೆತ, 3 ಸಿಕ್ಸರ್‌, 5 ಬೌಂಡರಿ), ರಸೆಲ್‌ 41 ರನ್‌ (19 ಎಸೆತ, 3 ಸಿಕ್ಸರ್‌, 4 ಬೌಂಡರಿ), ರಿಂಕು ಸಿಂಗ್‌ 26 ರನ್‌ (8 ಎಸೆತ, 3 ಸಿಕ್ಸರ್‌, 1 ಬೌಂಡರಿ), ಶ್ರೇಯಸ್‌ ಅಯ್ಯರ್‌ 18 ರನ್‌, ವೆಂಕಟೇಶ್‌ ಅಯ್ಯರ್‌ 5 ರನ್‌, ರಮಣದೀಪ್‌ ಸಿಂಗ್‌ 2 ರನ್‌, ಮಿಚೆಲ್‌ ಸ್ಟಾರ್ಕ್‌ 1 ರನ್‌ ಗಳಿಸಿದರು. ಅಲ್ಲದೇ ತಂಡಕ್ಕೆ ಹೆಚ್ಚುವರಿ 22 ರನ್‌ಗಳು ತಂಡಕ್ಕೆ ಸೇರ್ಪಡೆಯಾಯಿತು.

    ಬಲ ನೀಡಿದ ಶತಕ, ಅರ್ಧಶತಕಗಳ ಜೊತೆಯಾಟ:
    ಆರಂಭದಿಂದಲೇ ಡೆಲ್ಲಿ ಬೌಲರ್‌ಗಳನ್ನು ಬೆಂಡೆತ್ತಲು ಶುರು ಮಾಡಿದ ಕೆಕೆಆರ್‌ ಬ್ಯಾಟರ್‌ಗಳು ಕೊನೇವರೆಗೂ ಕ್ರೀಸ್‌ನಲ್ಲಿ ಅಬ್ಬರಿಸಿದರು. ಮೊದಲ ವಿಕೆಟ್‌ಗೆ ಪಿಲ್‌ ಸಾಲ್ಟ್‌ – ಸುನೀಲ್‌ ನರೇನ್‌ ಜೋಡಿ 27 ಎಸೆತಗಳಲ್ಲಿ 60 ರನ್‌ ಬಾರಿಸಿದರೆ, 2ನೇ ವಿಕೆಟ್‌ಗೆ ರಘುವಂಶಿ ಮತ್ತು ಸುನೀಲ್‌ ನರೇನ್‌ ಜೋಡಿ 48 ಎಸೆತಗಳಲ್ಲಿ ಬರೋಬ್ಬರಿ 104 ರನ್‌ ಕಲೆಹಾಕಿತು. ಈ ಬೆನ್ನಲ್ಲೇ ರಸೆಲ್‌-ಅಯ್ಯರ್‌ ಜೋಡಿ ಕೇವಲ 24 ಎಸೆತಗಳಲ್ಲಿ ಸ್ಫೋಟಕ 56 ರನ್‌ ಬಾರಿಸಿದರೆ, ರಿಂಕು-ರಸೆಲ್‌ ಜೋಡಿ ಕೇವಲ 11 ಎಸೆತಗಳಲ್ಲಿ 32 ರನ್‌ ಚಚ್ಚಿತು. ಪರಿಣಾಮ ತಂಡದ ಮೊತ್ತ 270 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು. ಡೆಲ್ಲಿ ಪರ ಅನ್ರಿಚ್ ನಾರ್ಟ್ಜೆ 3 ವಿಕೆಟ್‌ ಕಿತ್ತರೆ, ಇಶಾಂತ್‌ ಶರ್ಮಾ 2 ವಿಕೆಟ್‌ ಹಾಗೂ ಖಲೀಲ್‌ ಅಹ್ಮದ್‌ ಮತ್ತು ಮಿಚೆಲ್‌ ಮಾರ್ಷ್‌ ತಲಾ ಒಂದೊಂದು ವಿಕೆಟ್‌ ಪಡೆದರು.

    ಕೆಕೆಆರ್‌ ರನ್‌ ಏರಿದ್ದು ಹೇಗೆ?
    50 ರನ್‌ 23 ಎಸೆತ
    100 ರನ್‌ 45 ಎಸೆತ
    150 ರನ್‌ 66 ಎಸೆತ
    200 ರನ್‌ 92 ಎಸೆತ
    250 ರನ್‌ 111 ಎಸೆತ
    272 ರನ್‌ 120 ಎಸೆತ

  • 2ನೇ ಬಾರಿಗೆ ಆರ್‌ಸಿಬಿ ದಾಖಲೆ ನುಚ್ಚುನೂರು – ಐಪಿಎಲ್‌ ಇತಿಹಾಸದಲ್ಲಿ ಮತ್ತೊಂದು ವಿಶೇಷ ಸಾಧನೆ

    2ನೇ ಬಾರಿಗೆ ಆರ್‌ಸಿಬಿ ದಾಖಲೆ ನುಚ್ಚುನೂರು – ಐಪಿಎಲ್‌ ಇತಿಹಾಸದಲ್ಲಿ ಮತ್ತೊಂದು ವಿಶೇಷ ಸಾಧನೆ

    ವಿಶಾಖಪಟ್ಟಣಂ: ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಬ್ಯಾಟರ್‌ಗಳರು ಸಿಕ್ಸರ್‌, ಬೌಂಡರಿ ಚಚ್ಚಿದ ಪರಿಣಾಮ ಕೋಲ್ಕತ್ತಾ ನೈಟ್‌ರೈಡರ್ಸ್‌ ತಂಡವು ಐಪಿಎಲ್‌ನಲ್ಲಿ (IPL) ಮತ್ತೊಂದು ವಿಶೇಷ ಸಾಧನೆ ಮಾಡಿದೆ.

    7 ವಿಕೆಟ್‌ ನಷ್ಟಕ್ಕೆ 272 ರನ್‌ ಸಿಡಿಸುವ ಮೂಲಕ ಐಪಿಎಲ್‌ ಟೂರ್ನಿ ಇತಿಹಾಸದಲ್ಲೇ ಅತಿ ಹೆಚ್ಚು ರನ್‌ ಸಿಡಿಸಿದ 2ನೇ ತಂಡ ಹೆಗ್ಗಳಿಗೆಕೆ ಕೆಕೆಆರ್‌ ತಂಡ ಪಾತ್ರವಾಗಿದೆ. ಈ ಹಿಂದೆ ಅತಿ ಹೆಚ್ಚು ರನ್‌ ಸಿಡಿಸಿದ ದಾಖಲೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡದ ಹೆಸರಿನಲ್ಲಿತ್ತು. 2013ರಲ್ಲಿ ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ ಪುಣೆ ವಾರಿಯರ್ಸ್‌ ವಿರುದ್ಧ 5 ವಿಕೆಟ್‌ ನಷ್ಟಕ್ಕೆ 263 ರನ್‌ ಹೊಡೆದಿತ್ತು. ಈ ಪಂದ್ಯದಲ್ಲಿ ಕ್ರಿಸ್‌ ಗೇಲ್‌ ಔಟಾಗದೇ 175 ರನ್‌ ಚಚ್ಚಿದ್ದರು.

    ಆದ್ರೆ ಇತ್ತೀಚೆಗಷ್ಟೇ ಮುಂಬೈ ಇಂಡಿಯನ್ಸ್‌ ವಿರುದ್ಧದ ಪಂದ್ಯದಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡವು 277 ಬಾರಿಸುವ ಮೂಲಕ ಆರ್‌ಸಿಬಿ ಹೆಸರಿನಲ್ಲಿದ್ದ ದಾಖಲೆಯನ್ನು ನುಚ್ಚುನೂರು ಮಾಡಿತ್ತು. ಈದೀಗ ಕೋಲ್ಕತ್ತಾ ನೈಟ್‌ರೈಡರ್ಸ್‌ 272 ರನ್‌ ಸಿಡಿಸುವ ಮೂಲಕ ಆರ್‌ಸಿಬಿ ದಾಖಲೆಯನ್ನ ನುಚ್ಚುನೂರು ಮಾಡಿದೆ. ಆದ್ರೆ ಹೈದರಾಬಾದ್‌ ತಂಡದ 277 ರನ್‌ಗಳ ದಾಖಲೆ ಮುರಿಯುವಲ್ಲಿ ವಿಫಲವಾಯಿತು.

    IPL ನಲ್ಲಿ ರನ್‌ ಹೊಳೆ ಹರಿಸಿದ ಟಾಪ್‌-5 ತಂಡಗಳು:
    ಸನ್‌ ರೈಸರ್ಸ್‌ ಹೈದರಾಬಾದ್‌ – 277 ರನ್‌
    ಕೋಲ್ಕತ್ತಾ ನೈಟ್‌ ರೈಡರ್ಸ್‌ – 272 ರನ್‌
    ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು – 263 ರನ್‌
    ಲಕ್ನೋ ಸೂಪರ್‌ ಜೈಂಟ್ಸ್‌ – 257 ರನ್‌
    ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು – 248

    ರನ್‌ ಏರಿದ್ದು ಹೇಗೆ?
    50 ರನ್‌ 23 ಎಸೆತ
    100 ರನ್‌ 45 ಎಸೆತ
    150 ರನ್‌ 66 ಎಸೆತ
    200 ರನ್‌ 92 ಎಸೆತ
    250 ರನ್‌ 111 ಎಸೆತ
    272 ರನ್‌ 120 ಎಸೆತ

    ಬಲ ನೀಡಿದ ಶತಕ, ಅರ್ಧಶತಕಗಳ ಜೊತೆಯಾಟ:
    ಆರಂಭದಿಂದಲೇ ಡೆಲ್ಲಿ ಬೌಲರ್‌ಗಳನ್ನು ಬೆಂಡೆತ್ತಲು ಶುರು ಮಾಡಿದ ಕೆಕೆಆರ್‌ ಬ್ಯಾಟರ್‌ಗಳು ಕೊನೇವರೆಗೂ ಕ್ರೀಸ್‌ನಲ್ಲಿ ಅಬ್ಬರಿಸಿದರು. ಮೊದಲ ವಿಕೆಟ್‌ಗೆ ಪಿಲ್‌ ಸಾಲ್ಟ್‌ – ಸುನೀಲ್‌ ನರೇನ್‌ ಜೋಡಿ 27 ಎಸೆತಗಳಲ್ಲಿ 60 ರನ್‌ ಬಾರಿಸಿದರೆ, 2ನೇ ವಿಕೆಟ್‌ಗೆ ರಘುವಂಶಿ ಮತ್ತು ಸುನೀಲ್‌ ನರೇನ್‌ ಜೋಡಿ 48 ಎಸೆತಗಳಲ್ಲಿ ಬರೋಬ್ಬರಿ 104 ರನ್‌ ಕಲೆಹಾಕಿತು. ಈ ಬೆನ್ನಲ್ಲೇ ರಸೆಲ್‌-ಅಯ್ಯರ್‌ ಜೋಡಿ ಕೇವಲ 24 ಎಸೆತಗಳಲ್ಲಿ ಸ್ಫೋಟಕ 56 ರನ್‌ ಬಾರಿಸಿದರೆ, ರಿಂಕು-ರಸೆಲ್‌ ಜೋಡಿ ಕೇವಲ 11 ಎಸೆತಗಳಲ್ಲಿ 32 ರನ್‌ ಚಚ್ಚಿತು. ಪರಿಣಾಮ ತಂಡದ ಮೊತ್ತ 270 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು.

    ಡೆಲ್ಲಿಗೆ 273 ರನ್‌ಗಳ ಗುರಿ:
    ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ದುಕೊಂಡ ಕೆಕೆಆರ್‌ 7 ವಿಕೆಟ್‌ ನಷ್ಟಕ್ಕೆ 20 ಓವರ್‌ಗಳಲ್ಲಿ 272 ರನ್‌ ಬಾರಿಸಿತು. ಪಿಲ್‌ ಸಾಲ್ಟ್‌ 18 ರನ್‌, ಸುನೀಲ್‌ ನರೇನ್‌ 85 ರನ್‌ (39 ಎಸೆತ, 7 ಸಿಕ್ಸರ್‌, 7 ಬೌಂಡರಿ), ರಘು ವಂಶಿ 54 ರನ್‌ (27 ಎಸೆತ, 3 ಸಿಕ್ಸರ್‌, 5 ಬೌಂಡರಿ), ರಸೆಲ್‌ 41 ರನ್‌ (19 ಎಸೆತ, 3 ಸಿಕ್ಸರ್‌, 4 ಬೌಂಡರಿ), ರಿಂಕು ಸಿಂಗ್‌ 26 ರನ್‌ (8 ಎಸೆತ, 3 ಸಿಕ್ಸರ್‌, 1 ಬೌಂಡರಿ) ಚಚ್ಚಿದರು. ಹೆಚ್ಚುವರಿ 22 ರನ್‌ಗಳು ತಂಡಕ್ಕೆ ಸೇರ್ಪಡೆಯಾಯಿತು.

  • ವಿರಾಟ್ ಕೊಹ್ಲಿ ನೋಡಿದ ಖುಷಿಯಲ್ಲಿ ಏಟುಗಳು ಬಿದ್ರು ನೋವಾಗಲಿಲ್ಲ: ಕೊಹ್ಲಿ ಅಭಿಮಾನಿ ಮಾತು

    ವಿರಾಟ್ ಕೊಹ್ಲಿ ನೋಡಿದ ಖುಷಿಯಲ್ಲಿ ಏಟುಗಳು ಬಿದ್ರು ನೋವಾಗಲಿಲ್ಲ: ಕೊಹ್ಲಿ ಅಭಿಮಾನಿ ಮಾತು

    – ಆರ್‌ಸಿಬಿ ಕಪ್ ಗೆದ್ದೇ ಗೆಲ್ಲುತ್ತೆ ಎಂದ ಚಿನ್ನಾ

    ರಾಯಚೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಹಾಗೂ ಪಂಜಾಬ್ ತಂಡಗಳ ನಡುವೆ ನಡೆಯುತ್ತಿದ್ದ ಟಿ20 ಐಪಿಎಲ್ ಪಂದ್ಯದ ವೇಳೆ ಏಕಾಏಕಿ ಕ್ರೀಡಾಂಗಣದಲ್ಲಿ ನುಗ್ಗಿ ವಿರಾಟ್ ಕೊಹ್ಲಿ ಕಾಲಿಗೆ ಬಿದ್ದು, ತಬ್ಬಿಕೊಂಡಿದ್ದ ರಾಯಚೂರಿನ (Raichuru) ಎಲ್‌ಬಿಎಸ್ ನಗರ ಯುವಕ ಅಭಿಮಾನಿ ಚಿನ್ನಾ ಈಗ ರಾಯಚೂರಿಗೆ ಮರಳಿದ್ದು ಖುಷಿಯಲ್ಲಿ ತೇಲಾಡುತ್ತಿದ್ದಾನೆ.

    ಭದ್ರತಾ ಸಿಬ್ಬಂದಿ ಭದ್ರತೆಯನ್ನ ಮೀರಿ ಒಳನುಗ್ಗಿದ್ದಕ್ಕೆ ಮನಸೋಇಚ್ಚೆ ಥಳಿಸಿದ್ದರು. ಮಾನವ ಹಕ್ಕುಗಳ ಉಲ್ಲಂಘನೆ ಆರೋಪದಲ್ಲಿ ಮಾನವ ಹಕ್ಕು ಆಯೋಗಕ್ಕೆ ದೂರು ಕೂಡ ಸಲ್ಲಿಕೆಯಾಗಿದೆ. ಆದ್ರೆ ಇದ್ಯಾವುದರ ಪರಿವೇ ಇಲ್ಲದ ವಿರಾಟ್ ಕೊಹ್ಲಿ (Virat Kohli) ಅಭಿಮಾನಿ ಚಿನ್ನಾ ನನಗೆ ವಿರಾಟ್ ಕೊಹ್ಲಿಯನ್ನ ನೋಡಬೇಕಿತ್ತು, ಮಾತನಾಡಿಸಬೇಕಿತ್ತು. ಅದಕ್ಕೆ ಕ್ರೀಡಾಂಗಣ ಒಳಗೆ ನುಗ್ಗಿದ್ದೆ. ಹಾಗೇ ನುಗ್ಗುವುದು ತಪ್ಪು ಅನ್ನೋದು ನನಗೆ ಗೊತ್ತಿಲ್ಲ. ಕೊಹ್ಲಿಯನ್ನ ಮಾತನಾಡಿಸಬೇಕು ಅನ್ನೋದಷ್ಟೆ ನನ್ನ ಗುರಿಯಾಗಿತ್ತು ಅಂತ ಹೇಳಿದ್ದಾನೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಕೊಹ್ಲಿ ಅಭಿಮಾನಿಗೆ ಥಳಿತ – ಮಾನವ ಹಕ್ಕುಗಳ ಆಯೋಗಕ್ಕೆ ದೂರು

    ಅಲ್ಲಿನ ಭದ್ರತಾ ಸಿಬ್ಬಂದಿ ನನಗೆ ಚೆನ್ನಾಗಿ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ರು. ಪೊಲೀಸರು ಚಿಕಿತ್ಸೆ ಕೊಡಿಸಿ ಬಿಟ್ಟಿದ್ದಾರೆ. ವಿರಾಟ್ ಕೊಹ್ಲಿಯನ್ನ ನೋಡಿರುವ ಖುಷಿಯಲ್ಲಿ ನನಗೆ ಯಾವ ಏಟುಗಳು ನೋವು ಕೊಟ್ಟಿಲ್ಲ. ನನಗೆ ಥಳಿಸಿದ್ದಕ್ಕೆ ದೂರು ದಾಖಲಾಗಿರುವ ಬಗ್ಗೆ ನನಗೆ ಗೊತ್ತಿಲ್ಲ ಎಂದಿದ್ದಾನೆ‌. ರಾಯಚೂರಿಗೆ ಮರಳಿದ ಮೇಲೆ ಪೊಲೀಸರು ಆಧಾರ್ ಕಾರ್ಡ್ ಹಾಕುವಂತೆ ಫೋನ್ ಮಾಡಿದ್ರು ಅಷ್ಟೇ ಎಂದಿದ್ದಾನೆ.

    ಕೊಹ್ಲಿ ಕಾಲಿಗೆ ಬಿದ್ದು ಬಂದಾಗಿ‌ನಿಂದ ಯುವಕನಿಗೆ ನಗರದಲ್ಲಿ ಫುಲ್ ಡಿಮ್ಯಾಂಡ್ ಬಂದಿದೆ. ಕೊಹ್ಲಿ ಅಭಿಮಾನಿ ಚಿನ್ನಾನನ್ನು ಭೇಟಿಯಾಗಿ ಜನ ಶುಭಾಶಯಗಳನ್ನ ಹೇಳುತ್ತಿದ್ದಾರೆ. ಘಟನೆಯನ್ನ ನೆನೆದು ಭಾವುಕನಾಗುವ ಚಿನ್ನಾ, ನಾನು ಕೊಹ್ಲಿ ಸರ್ ಆಶೀರ್ವಾದ ಪಡೆದಿದ್ದೀನಿ. ನನಗೆ ಹೊಡೆಯಬೇಡಿ ಎಂದು ಗಾರ್ಡ್‌ಗಳಿಗೆ ಕೊಹ್ಲಿ ಹೇಳಿದ್ರು. ನಾನು ನಿಮ್ಮ ಬಿಗ್ ಫ್ಯಾನ್ ಸರ್ ಎಂದೆ. ಕೊಹ್ಲಿ ಥ್ಯಾಂಕ್ಸ್ ಅಂದ್ರು ಅಂತ ಚಿನ್ನಾ ಖುಷಿಯಿಂದ ಹೇಳುತ್ತಾನೆ. ಇದನ್ನೂ ಓದಿ: IPL 2024: ತವರಿನಲ್ಲೇ ಆರ್‌ಸಿಬಿಗೆ ಹೀನಾಯ ಸೋಲು – ಲಕ್ನೋಗೆ 28 ರನ್‌ಗಳ ಸೂಪರ್‌ ಜಯ

    ವಿರಾಟ್ ಕೊಹ್ಲಿಯನ್ನ ಭೇಟಿಯಾಗಬೇಕು ಅಂತಾ ಚಿಕ್ಕವನಿದ್ದಾಗಿನಿಂದ ಆಸೆ ಇತ್ತು. ಹಾಗಾಗಿ ಮೀಟ್ ಆಗಲೇಬೇಕು ಅಂತಾ ಆವತ್ತಿನ ಪಂದ್ಯಕ್ಕೆ ಹೋಗಿದ್ದೆ. ಕೊನೆಗೂ ಕೊಹ್ಲಿ ಅವರನ್ನು ಭೇಟಿ ಆದೆ. ಆರ್‌ಸಿಬಿ ಕಪ್ ಗೆದ್ದೇ ಗೆಲ್ಲುತ್ತೆ. ಈ ಬಾರಿಯಲ್ಲದಿದ್ದರೂ ಮುಂದಿನ ಬಾರಿಯಾದ್ರೂ ಕಪ್ ನಮ್ದೆ ಅಂತ ಚಿನ್ನಾ ಆರ್‌ಸಿಬಿ‌ (RCB) ಹಾಗೂ ವಿರಾಟ್ ಕೊಹ್ಲಿ ಮೇಲಿನ ಅಭಿಮಾನ ವ್ಯಕ್ತಪಡಿಸಿದ್ದಾನೆ.

  • ಮಯಾಂಕ್‌ ವೇಗಕ್ಕೆ ಐಪಿಎಲ್‌ನಲ್ಲಿ ದಾಖಲೆಗಳು ಪುಡಿ ಪುಡಿ!

    ಮಯಾಂಕ್‌ ವೇಗಕ್ಕೆ ಐಪಿಎಲ್‌ನಲ್ಲಿ ದಾಖಲೆಗಳು ಪುಡಿ ಪುಡಿ!

    ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ಧ ನಡೆದ ಪಂದ್ಯದಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ತಂಡದ ಯುವ ವೇಗಿ ಮಯಾಂಕ್‌ ಯಾದವ್‌ ಅವರ ಭರ್ಜರಿ ಬೌಲಿಂಗ್‌ ಪ್ರದರ್ಶನ ಲಕ್ನೋ ತಂಡಕ್ಕೆ ಗೆಲುವು ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ 17ನೇ ಆವೃತ್ತಿಯ ಐಪಿಎಲ್‌ನಲ್ಲಿ ಅತ್ಯಂತ ವೇಗದ ಎಸೆತ ಎಸೆಯುವ ಮೂಲಕ ತಮ್ಮ ದಾಖಲೆಯನ್ನು ತಾವೇ ಮುರಿದಿದ್ದಾರೆ.

    ಇದಕ್ಕೂ ಮುನ್ನ ಪಂಜಾಬ್‌ ಕಿಂಗ್ಸ್‌ ವಿರುದ್ಧದ ಪಂದ್ಯದಲ್ಲಿ ಗಂಟೆಗೆ 155.8 ಕಿಮೀ ವೇಗದಲ್ಲಿ ಬೌಲಿಂಗ್‌ ಮಾಡಿದ್ದ ಮಯಾಂಕ್, ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಗಂಟೆಗೆ 156.7 ಕಿಮೀ ವೇಗದಲ್ಲಿ ಬೌಲಿಂಗ್‌ ಮಾಡುವ ಮೂಲಕ ಅತೀ ವೇಗದ ಬೌಲರ್ ಎನಿಸಿಕೊಂಡಿದ್ದಾರೆ. ಆರ್‌ಸಿಬಿ ವಿರುದ್ಧ ಸಮರ ಸಾರಿದ ಮಯಾಂಕ್‌ ಆಲ್‌ರೌಂಡರ್‌ಗಳಾದ ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರೂನ್ ಗ್ರೀನ್ ಮತ್ತು ರಜತ್ ಪಾಟಿದಾರ್ ವಿಕೆಟ್‌ ಕಬಳಿಸುವ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟರು. ಇದರೊಂದಿಗೆ ಆತಿಥೇಯ ಆರ್‌ಸಿಬಿ ಎದುರು 4 ಓವರ್‌ಗಳಲ್ಲಿ 14 ರನ್‌ ಕೊಟ್ಟು 3 ವಿಕೆಟ್‌ ಪಡೆಯುವ ಮೂಲಕ ಐಪಿಎಲ್‌ ಇತಿಹಾಸದಲ್ಲಿ ಪದಾರ್ಪಣೆ ಬಳಿಕ ಸತತ ಪಂದ್ಯಶ್ರೇಷ್ಠ ಪಡೆದ ಮೊದಲ ಆಟಗಾರ ಎಂಬ ದಾಖಲೆಯನ್ನೂ ತಮ್ಮ ಹೆಗಲಿಗೇರಿಸಿಕೊಂಡರು.

    ಐಪಿಎಲ್‌ನಲ್ಲಿ ಐತಿಹಾಸಿಕ ದಾಖಲೆ:
    21 ವರ್ಷ ವಯಸ್ಸಿನ ಮಯಾಂಕ್‌ ಯಾದವ್‌ ಗಂಟೆಗೆ 156.7 ಕಿಮೀ ವೇಗದಲ್ಲಿ ಬೌಲಿಂಗ್‌ ಮಾಡುವ ಮೂಲಕ ಐಪಿಎಲ್‌ ಇತಿಹಾಸದಲ್ಲಿ ಹೊಸ ದಾಖಲೆಯನ್ನೂ ಬರೆದಿದ್ದಾರೆ. 150 ಕಿಮೀಗಿಂತಲೂ ಅಧಿಕ ವೇಗದಲ್ಲಿ ಬೌಲಿಂಗ್‌ ಮಾಡಿದ 4ನೇ ಬೌಲರ್‌ ಎನಿಸಿಕೊಂಡಿದ್ದಾರೆ. ಇದನ್ನೂ ಓದಿ: IPL 2024: ತವರಿನಲ್ಲೇ ಆರ್‌ಸಿಬಿಗೆ ಹೀನಾಯ ಸೋಲು – ಲಕ್ನೋಗೆ 28 ರನ್‌ಗಳ ಸೂಪರ್‌ ಜಯ

    ವೇಗದ ಬೌಲಿಂಗ್‌ ಮಾಡಿದ ಟಾಪ್‌-5 ಆಟಗಾರರು:
    * ಶಾನ್‌ ಟೈಟ್‌ – 2011ರಲ್ಲಿ – 157.7 ಕಿಮೀ
    * ಲಾಕಿ ಫರ್ಗೂಸನ್‌ – 2022ರಲ್ಲಿ – 157.3 ಕಿಮೀ
    * ಉಮ್ರಾನ್‌ ಮಲಿಕ್‌ – 2022ರಲ್ಲಿ – 157.0 ಕಿಮೀ
    * ಮಯಾಂಕ್‌ ಯಾದವ್‌ – 2024ರಲ್ಲಿ – 156.7 ಕಿಮೀ
    * ಅನ್‌ರಿಚ್‌ ನಾರ್ಟೆ – 2020ರಲ್ಲಿ – 156.2 ಕಿಮೀ

    ತನ್ನದೇ ದಾಖಲೆ ಬಗ್ಗೆ ಮಯಾಂಕ್‌ ಹೇಳಿದ್ದೇನು?
    ಆರ್‌ಸಿಬಿ ವಿರುದ್ಧ ಪಂದ್ಯ ಗೆದ್ದ ಬಳಿಕ ಪೋಸ್ಟ್‌ ಪ್ರೆಸೆಂಟೇಷನ್‌ನಲ್ಲಿ ಮಾತನಾಡಿದ ಮಯಾಂಕ್‌, ವಿಕೆಟ್‌ ಪಡೆಯುವುದಕ್ಕಿಂತಲೂ ತಂಡಕ್ಕೆ ಪಂದ್ಯಗಳನ್ನು ಗೆದ್ದುಕೊಡುವುದೇ ನನ್ನ ಮುಖ್ಯಗುರಿ. 2 ಪಂದ್ಯಗಳಲ್ಲಿ ನಾನು 6 ವಿಕೆಟ್‌ ಪಡೆದಿರುವುದು ನನಗೆ ಮುಖ್ಯವಲ್ಲ. ನನ ಗುರಿ ಏನಿದ್ದರೂ ನನ್ನ ಫ್ರಾಂಚೈಸಿಗೆ ಸಾಧ್ಯವಾದಷ್ಟು ಪಂದ್ಯಗಳನ್ನು ಗೆದ್ದುಕೊಡುವುದು. ಇದೇ ನನ್ನ ಮುಖ್ಯ ಗುರಿ ಕೂಡ. ಪಂಜಾಬ್‌ ಕಿಂಗ್ಸ್‌ ಮತ್ತು ಆರ್‌ಸಿಬಿ ವಿರುದ್ಧದ ಪಂದ್ಯಗಳಲ್ಲಿ ತಂಡಕ್ಕೆ ಗೆಲುವು ತಂದುಕೊಡಲು ನೆರವಾಗಿರುವುದಕ್ಕೆ ಬಹಳ ಸಂತಸವಿದೆ ಎಂದಿದ್ದಾರೆ.

    ಅಲ್ಲದೇ ನನ್ನ ದೇಹವನ್ನು ಬಹಳ ಎಚ್ಚರಿಕೆಯಿಂದ ನೋಡಿಕೊಳ್ಳುತ್ತಿದ್ದೇನೆ. ಸೇವಿಸುವ ಆಹಾರದ ಕಡೆಗೆ ಗಮನ ಕೊಟ್ಟು ನಂತರ ನಿದ್ರೆ ಮತ್ತು ಕಸರತ್ತಿನ ಕಡೆಗೆ ಗಮನ ನೀಡುತ್ತೇನೆ. ಫಾಸ್ಟ್‌ ಬೌಲರ್‌ ಒಬ್ಬನಿಗೆ ವಿಶ್ರಾಂತಿ ಅತ್ಯಗತ್ಯ. ಈ ಕಡೆಗೆ ಹೆಚ್ಚಿ ಆದ್ಯತೆ ಕೊಡುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಳಪೆ ಪ್ರದರ್ಶನದಿಂದ ಶಾಹೀನ್‌ ಶಾಗೆ ತಲೆದಂಡ – ಮತ್ತೆ ನಾಯಕನ ಪಟ್ಟಕ್ಕೇರಿದ ಬಾಬರ್‌ ಆಜಂ

  • ತವರಿನಲ್ಲಿ ಆರ್‌ಸಿಬಿಗೆ ಹೀನಾಯ ಸೋಲು – ಕೋಲ್ಕತ್ತಾಗೆ 7 ವಿಕೆಟ್‌ಗಳ ಭರ್ಜರಿ ಜಯ

    ತವರಿನಲ್ಲಿ ಆರ್‌ಸಿಬಿಗೆ ಹೀನಾಯ ಸೋಲು – ಕೋಲ್ಕತ್ತಾಗೆ 7 ವಿಕೆಟ್‌ಗಳ ಭರ್ಜರಿ ಜಯ

    – 15 -18 ಓವರ್‌ನಲ್ಲಿ ಆರ್‌ಸಿಬಿ ಹೊಡೆದದ್ದು ಕೇವಲ 29 ರನ್‌
    – ದಿಢೀರ್‌ ಕುಸಿತ ಕಂಡ ಆರ್‌ಸಿಬಿಯ ಮಧ್ಯಮ ಕ್ರಮಾಂಕ

    ಬೆಂಗಳೂರು: ಬೌಲರ್‌ಗಳ ಕೆಟ್ಟ ಪ್ರದರ್ಶನದಿಂದಾಗಿ ತವರಿನಲ್ಲಿ ಆರ್‌ಸಿಬಿ (RCB) ಪಂದ್ಯವನ್ನು ಸೋತಿದ್ದು ಕೋಲ್ಕತ್ತಾ ನೈಟ್‌ ರೈಡರ್ಸ್‌ (KKR) 7 ವಿಕೆಟ್‌ಗಳ ಜಯ ಸಾಧಿಸಿದೆ. ಸತತ ಎರಡು ಜಯ ಸಾಧಿಸುವ ಮೂಲಕ ಕೋಲ್ಕತ್ತಾ ಐಪಿಎಲ್‌ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಿದೆ.

    ಗೆಲ್ಲಲು 183 ರನ್‌ಗಳ ಗುರಿಯನ್ನು ಪಡೆದ ಕೋಲ್ಕತ್ತಾ  16.5 ಓವರ್‌ಗಳಲ್ಲಿ 3  ವಿಕೆಟ್‌ ನಷ್ಟಕ್ಕೆ  186 ರನ್‌ ಹೊಡೆದು ಜಯ ಸಾಧಿಸಿತು. ಇಲ್ಲಿಯವರೆಗೆ ತವರಿನಲ್ಲಿ ನಡೆದ ಎಲ್ಲಾ 9 ಪಂದ್ಯಗಳನ್ನು ತವರಿನ ತಂಡಗಳೇ ಜಯಗಳಿಸಿದ್ದವು. ಆದರೆ ಆರ್‌ಸಿಬಿ ತವರಿನ ಎರಡನೇ ಪಂದ್ಯದಲ್ಲಿ ಎಡವಿದೆ. ಇದನ್ನೂ ಓದಿ: ದೈವಕೋಲದ ವೇಳೆ ಸಾರ್ವಜನಿಕ ಸಭೆ – ಜಯಪ್ರಕಾಶ್ ಹೆಗ್ಡೆ ವಿರುದ್ಧ ಕೇಸ್

    ಸ್ಫೋಟಕ ಆರಂಭ: ಆರಂಭಿಕ ಆಟಗಾರರಾದ ಪಿಲ್‌ ಸಾಲ್ಟ್‌ (Phil Salt) ಮತ್ತು ಸುನೀಲ್‌ ನರೈನ್‌ (Sunil Narine) ಕೇವಲ 39 ಎಸೆತಗಳಲ್ಲಿ 86 ರನ್‌ ಜೊತೆಯಾಟವಾಡುವ ಮೂಲಕ ತಂಡಕ್ಕೆ ಭದ್ರವಾದ ಅಡಿಪಾಯ ಹಾಕಿದರು. ನರೈನ್‌ 47 ರನ್‌ (22 ಎಸೆತ, 2 ಬೌಂಡರಿ, 5 ಸಿಕ್ಸ್‌) ಹೊಡೆದರೆ ಕೀಪರ್‌ ಪಿಲ್‌ ಸಾಲ್ಟ್‌ 30 ರನ್‌ (20 ಎಸೆತ, 2 ಬೌಂಡರಿ, 2 ಸಿಕ್ಸರ್‌) ಹೊಡೆದು ಔಟಾದರು.

    ಆರಂಭಿಕ ಆಟಗಾರರು ಔಟಾದರೂ ವೆಂಕಟೇಶ್‌ ಅಯ್ಯರ್‌ ಬಿರುಸಿನ ಆಟವಾಡಿ 50 ರನ್‌ (30 ಎಸೆತ, 3 ಬೌಂಡರಿ, 4 ಸಿಕ್ಸರ್‌) ಹೊಡೆದು ಕ್ಯಾಚ್‌ ನೀಡಿ ಹೊರನಡೆದರು. ಇದನ್ನೂ ಓದಿ: ಮುಲಾಯಂ ಸರ್ಕಾರದಿಂದ ರಕ್ಷಣೆ – ಅನ್ಸಾರಿಯನ್ನು ಬಂಧಿಸಿದ್ದಕ್ಕೆ ಡಿಎಸ್‌ಪಿಗೆ ರಾಜೀನಾಮೆ ಶಿಕ್ಷೆ!

    ನಾಯಕ ಶ್ರೇಯಸ್‌ ಅಯ್ಯರ್‌ ಔಟಾಗದೇ 39 ರನ್‌(24 ಎಸೆತ, 2 ಬೌಂಡರಿ, 2 ಸಿಕ್ಸ್‌), ರಿಂಕು ಸಿಂಗ್‌ ಔಟಾಗದೇ 5 ರನ್‌ ಹೊಡೆದು ತಂಡವನ್ನು ಗೆಲುವಿನ ದಡ ಸೇರಿಸಿದರು.

    ಮಧ್ಯಮ ಕ್ರಮಾಂಕದಲ್ಲಿ ಕುಸಿತ:   ಡುಪ್ಲೆಸಿಸ್‌ 8 ರನ್‌ ಗಳಿಸಿ ಔಟಾದರೂ ಕ್ಯಾಮರೂನ್‌ ಗ್ರೀನ್‌ 33 ರನ್‌ (21 ಎಸೆತ, 4 ಬೌಂಡರಿ, 2 ಸಿಕ್ಸರ್‌), ಮ್ಯಾಕ್ಸ್‌ವೆಲ್‌ 28 ರನ್‌(19 ಎಸೆತ, 3 ಬೌಂಡರಿ, 1 ಸಿಕ್ಸರ್‌) ಸಿಡಿಸಿ ಔಟಾದರು.

    ರಜತ್‌ ಪಾಟೀದರ್‌ ಮತ್ತು ಅನುಜ್‌ ರಾವತ್‌ ತಲಾ 3 ರನ್‌ ಗಳಿಸಿ ಔಟಾದ್ದರಿಂದ ರನ್‌ ದಿಢೀರ್‌ ಕುಸಿತವಾಯಿತು. ಹೀಗಿದ್ದರೂ ಕೊಹ್ಲಿ (Virat Kohli) ಮತ್ತು ದಿನೇಶ್‌ ಕಾರ್ತಿಕ್‌ (Dinesh Karthik) ಕೊನೆಯಲ್ಲಿ ಸಿಕ್ಸ್‌, ಬೌಂಡರಿ ಸಿಡಿಸಿದ ಪರಿಣಾಮ ಆರ್‌ಸಿಬಿ 6 ವಿಕೆಟ್‌ ನಷ್ಟಕ್ಕೆ 182 ರನ್‌ ಗಳಿಸಿತು.

    ಆರ್‌ಸಿಬಿ ಸೋತಿದ್ದು ಹೇಗೆ?
    ಇನ್ನಿಂಗ್ಸ್‌ 15ನೇ ಓವರ್‌ನಲ್ಲಿ 10 ರನ್‌, 16ನೇ ಓವರ್‌ನಲ್ಲಿ 7 ರನ್‌, 17ನೇ ಓವರ್‌ನಲ್ಲಿ 7 ರನ್‌, 18ನೇ ಓವರ್‌ನಲ್ಲಿ 5 ರನ್‌ ಗಳಿಸಿತು. ಈ ಓವರ್‌ಗಳಲ್ಲಿ ಸಿಕ್ಸ್‌, ಬೌಂಡರಿಗಳು ಸಿಡಿಯಲ್ಪಟ್ಟಿದ್ದರೆ ಪಂದ್ಯ ಸ್ವಲ್ಪ ಫೈಟ್‌ ಬರುತ್ತಿತ್ತು. ಇನ್ನಿಂಗ್ಸ್‌ನ 19ನೇ ಓವರ್‌ನಲ್ಲಿ 13 ರನ್‌ ಬಂದರೆ 20ನೇ ಓವರ್‌ನಲ್ಲಿ 16 ರನ್‌ ಬಂದಿತ್ತು. ಇದರೊಂದಿಗೆ ಬೌಲರ್‌ಗಳು ವಿಕೆಟ್‌ ಕಿತ್ತು ಒತ್ತಡ ಹೇರಲಿಲ್ಲ. ಇತರೇ ರೂಪದಲ್ಲಿ 15 ರನ್‌ ( ಲೆಗ್‌ ಬೈ7, ವೈಡ್‌ 8 ) ಬಿಟ್ಟು ಕೊಟ್ಟ ಕಾರಣ ಆರ್‌ಸಿಬಿ ಪಂದ್ಯವನ್ನು ಸೋತಿದೆ.

  • ಇಂದು ಬೆಂಗ್ಳೂರಿನಲ್ಲಿ ಆರ್‌ಸಿಬಿ V/s ಕೆಕೆಆರ್‌ ನಡುವೆ ಹೈವೋಲ್ಟೇಜ್‌ ಕದನ – ಯಾರಿಗೆ ಗೆಲುವು?

    ಇಂದು ಬೆಂಗ್ಳೂರಿನಲ್ಲಿ ಆರ್‌ಸಿಬಿ V/s ಕೆಕೆಆರ್‌ ನಡುವೆ ಹೈವೋಲ್ಟೇಜ್‌ ಕದನ – ಯಾರಿಗೆ ಗೆಲುವು?

    – ಕೊಹ್ಲಿ – ಗಂಭೀರ್‌ ಮತ್ತೆ ಮುಖಾಮುಖಿ
    – 24.75 ಕೋಟಿ ರೂ. ಸರದಾರ ಮಿಚೆಲ್‌ ಸ್ಟಾರ್ಕ್‌ ಮೇಲೆ ಎಲ್ಲರ ಕಣ್ಣು

    ಬೆಂಗಳೂರು: ತವರು ಮೈದಾನ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (chinnaswamy stadium) ಇಂದು (ಮಾ.29) ಕೋಲ್ಕತಾ ನೈಟ್ ರೈಡರ್ಸ್ (Kolkata Knight Riders) ತಂಡವನ್ನು ಎದುರಿಸಲು ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ತಂಡ ಸಜ್ಜಾಗಿದೆ.

    17ನೇ ಆವೃತ್ತಿಯ ಐಪಿಎಲ್‌ನಲ್ಲಿ ಆರ್‌ಸಿಬಿಗೆ ಇದು 3ನೇ ಪಂದ್ಯವಾಗಿದ್ದು, ತವರಿನಲ್ಲಿ ನಡೆಯುತ್ತಿರುವ 2ನೇ ಪಂದ್ಯವಾಗಿದೆ. ಇನ್ನೂ ಕೆಕೆಆರ್‌ಗೆ ಆವೃತ್ತಿಯ 2ನೇ ಪಂದ್ಯವಾಗಿದೆ. ಇತ್ತಂಡಗಳು ಈವರೆಗೆ ಒಟ್ಟು 32 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಆರ್‌ಸಿಬಿ 14 ರಲ್ಲಿ ಗೆಲುವು ಸಾಧಿಸಿದ್ದರೆ, ಕೋಲ್ಕತ್ತಾ 18 ಪಂದ್ಯಗಳಲ್ಲಿ ಜಯಗಳಿಸಿದೆ. ಕೆಕೆಆರ್ ವಿರುದ್ಧ ಬೆಂಗಳೂರು ತಂಡ ಗರಿಷ್ಠ ರನ್‌ 213 ಆಗಿದ್ದರೆ, ಬೆಂಗಳೂರು ತಂಡದ ವಿರುದ್ಧ ಕೆಕೆಆರ್‌ ಗಳಿಸಿರುವ ಗರಿಷ್ಠ ರನ್‌ 222 ರನ್‌ ಆಗಿದೆ.  ಇದನ್ನೂ ಓದಿ: ಯಾರಾದ್ರು ಕೊಟ್ರೆ ನಾವೂ ತಿರುಗಿಸಿ ಕೊಡ್ತೀವಿ – ಮತ್ತೆ ಗಂಭೀರ್‌ಗೆ ಕೌಂಟರ್‌ ಕೊಟ್ಟ ಕಿಂಗ್‌ ಕೊಹ್ಲಿ

    ಟಾಪ್‌-4ನಲ್ಲಿ ಕೋಲ್ಕತ್ತಾ:
    ಶ್ರೇಯಸ್‌ ಅಯ್ಯರ್‌ ನಾಯಕತ್ವದ ಕೆಕೆಆರ್‌ ಪಡೆ, ತನ್ನ ತವರು ಮೈದಾನದಲ್ಲಿ ಆಡಿದ ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧ ಜಯ ಸಾಧಿಸಿತ್ತು. ಅತ್ತ ಆರ್‌ಸಿಬಿ ತಂಡವು ಆಡಿರುವ 2 ಪಂದ್ಯಗಳಲ್ಲಿ, ಪಂಜಾಬ್‌ ವಿರುದ್ಧದ ಕೊನೆಯ ಪಂದ್ಯ ಗೆದ್ದು 2 ಅಂಕ ಸಂಪಾದಿಸಿದೆ. ತಂಡವು ಸದ್ಯ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದ್ದರೆ, ಕೋಲ್ಕತಾ 1 ಪಂದ್ಯದಿಂದ 2 ಅಂಕ ಗಳಿಸಿ 4ನೇ ಸ್ಥಾನದಲ್ಲಿದೆ.

    ಪಿಚ್‌ ರಿಪೋರ್ಟ್‌ ಹೇಗಿದೆ?
    ಬೆಂಗಳೂರು ಮೈದಾನವು ಚಿಕ್ಕ ಬೌಂಡರಿಗಳನ್ನು ಹೊಂದಿರುವುದರಿಂದ ಇದು ಬ್ಯಾಟಿಂಗ್‌ ಸ್ನೇಹಿ ಪಿಚ್‌ ಆಗಿದೆ. ಈ ಪಂದ್ಯದಲ್ಲಿ ಉಭಯ ತಂಡಗಳಲ್ಲೂ ಪವರ್‌ ಹಿಟ್ಟರ್‌ಗಳಿದ್ದಾರೆ. ಹೀಗಾಗಿ ಬ್ಯಾಟರ್‌ಗಳಿಗೆ ಪಿಚ್‌ ಸ್ವರ್ಗವಾಗಿದ್ದು, ರನ್‌ ಹೊಳೆ ಹರಿಯುವ ಸಾಧ್ಯತೆಗಳಿವೆ.  ಇದನ್ನೂ ಓದಿ: ಆರ್‌ಸಿಬಿ ದಾಖಲೆ ಉಡೀಸ್‌ – ಐಪಿಎಲ್‌ನಲ್ಲಿ ಇತಿಹಾಸ ಸೃಷ್ಟಿಸಿದ ಹೈದರಾಬಾದ್‌

    ಸ್ಟಾರ್ಕ್‌ ಮೇಲೆ ಕಣ್ಣು:
    ಐಪಿಎಲ್‌ ಕ್ರಿಕೆಟ್‌ ಇತಿಹಾಸದಲ್ಲೇ ಅತ್ಯಧಿಕ ಬೆಲೆಗೆ ಬಿಕರಿಯಾಗಿರುವ ಮಿಚೆಲ್‌ ಸ್ಟಾರ್ಕ್‌ ಅವರ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಭಾರೀ ನಿರೀಕ್ಷೆಯೊಂದಿಗೆ ಕಣಕ್ಕಿಳಿದಿದ್ದ ಮಿಚೆಲ್‌ ಸ್ಟಾರ್ಕ್‌ ಮೊದಲ ಪಂದ್ಯದಲ್ಲಿ ಒಂದೇ ಒಂದು ವಿಕೆಟ್‌ ಪಡೆಯದೇ 4 ಓವರ್‌ಗಳಲ್ಲಿ 53 ರನ್‌ ಚಚ್ಚಿಸಿಕೊಂಡು, ಟೀಕೆಗೆ ಗುರಿಯಾಗಿದ್ದರು. ಹಾಗಾಗಿ ಈ ಪಂದ್ಯದಲ್ಲಾದರೂ ಆರ್‌ಸಿಬಿ ಕಲಿಗಳನ್ನು ಕಟ್ಟಿಹಾಕುತ್ತಾರಾ ಅನ್ನೋದನ್ನ ಕಾದುನೋಡಬೇಕಿದೆ.

    ಗಂಭೀರ್‌-ಕೊಹ್ಲಿ ಮತ್ತೆ ಮುಖಾಮುಖಿ:
    17ನೇ ಆವೃತ್ತಿಯಲ್ಲಿ ಮತ್ತೆ ತವರು ತಂಡಕ್ಕೆ ಮೆಂಟರ್‌ ಆಗಿ ಮರಳಿರುವ ಕೆಕೆಆರ್‌ ತಂಡದ ಮಾಜಿ ಆಟಗಾರ ಗೌತಮ್‌ ಗಂಭೀರ್‌ ಹಾಗೂ ಕೊಹ್ಲಿ ಮತ್ತೆ ಮುಖಾಮುಖಿಯಾಗುತ್ತಿದ್ದಾರೆ. ಕಳೆದ ಆವೃತ್ತಿಯಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ತಂಡದ ಕೋಚ್‌ ಆಗಿದ್ದ ಗಂಭೀರ್‌ ಹಾಗೂ ಆರ್‌ಸಿಬಿ ಆಟಗಾರ ಕೊಹ್ಲಿ ನಡುವೆ ಮಾತಿನ ಚಕಮಕಿ ನಡೆದು, ದೊಡ್ಡಮಟ್ಟದಲ್ಲಿ ಸದ್ದು ಮಾಡಿತ್ತು.

  • ಕೊಹ್ಲಿ, ಕಾರ್ತಿಕ್‌, ಮಹಿಪಾಲ್‌ ಸ್ಫೋಟಕ ಆಟ – ಆರ್‌ಸಿಬಿಗೆ 4 ವಿಕೆಟ್‌ಗಳ ರೋಚಕ ಜಯ

    ಕೊಹ್ಲಿ, ಕಾರ್ತಿಕ್‌, ಮಹಿಪಾಲ್‌ ಸ್ಫೋಟಕ ಆಟ – ಆರ್‌ಸಿಬಿಗೆ 4 ವಿಕೆಟ್‌ಗಳ ರೋಚಕ ಜಯ

    ಬೆಂಗಳೂರು: ವಿರಾಟ್‌ ಕೊಹ್ಲಿ (Virat kohli) ಸ್ಫೋಟಕ ಅರ್ಧಶತಕ ಮತ್ತು ಕೊನೆಯಲ್ಲಿ ಕಾರ್ತಿಕ್‌ (Dinesh Karthik), ಮಹಿಪಾಲ್‌ (Mahipal Lomror) ಅವರ ಸಿಕ್ಸರ್‌ ಬೌಂಡರಿ ನೆರವಿನಿಂದ ಆರ್‌ಸಿಬಿ (RCB) ತವರಿನಲ್ಲಿ ಪಂಜಾಬ್‌ ಕಿಂಗ್ಸ್‌ (Punjab Kings) ವಿರುದ್ಧ 4 ವಿಕೆಟ್‌ಗಳ ರೋಚಕ ಜಯ ಸಾಧಿಸಿ ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿದೆ.

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ  ಗೆಲ್ಲಲು 177 ರನ್‌ಗಳ ಕಠಿಣ ಗುರಿಯನ್ನು ಪಡೆದ ಆರ್‌ಸಿಬಿ ಇನ್ನೂ 4 ಎಸೆತ ಬಾಕಿ ಇರುವಂತೆಯೇ 6 ವಿಕೆಟ್‌ ನಷ್ಟಕ್ಕೆ 178 ರನ್‌ ಹೊಡೆದು ಮೊದಲ ಜಯ ದಾಖಲಿಸಿತು.

    ಕೊನೆಯ 30 ಎಸೆತಗಳಲ್ಲಿ 59 ರನ್‌ ಬೇಕಿತ್ತು. 16ನೇ ಓವರ್‌ನಲ್ಲಿ 12 ರನ್‌ ಬಂದರೂ ಕೊಹ್ಲಿ 77 ರನ್‌(49 ಎಸೆತ, 11 ಬೌಂಡರಿ, 2 ಸಿಕ್ಸರ್‌) ಹೊಡೆದು ಔಟಾದ ಕಾರಣ ಪಂದ್ಯ ರೋಚಕ ತಿರುವು ಪಡೆದುಕೊಂಡಿತ್ತು. 16.2 ನೇ ಓವರ್‌ನಲ್ಲಿ ಅನುಜ್‌ ರಾವತ್‌ ಎಲ್‌ಬಿ ಔಟಾಗಿದ್ದರಿಂದ ಪಂದ್ಯ ಪಂಜಾಬ್‌ ಕಡೆಗೆ ವಾಲಿತ್ತು. ಇದನ್ನೂ ಓದಿ: ಭಾರತದಲ್ಲೇ ಐಪಿಎಲ್‌ – ಪೂರ್ಣ ವೇಳಾಪಟ್ಟಿ ಪ್ರಕಟ, ಯಾವ ದಿನ ಯಾವ ಮ್ಯಾಚ್‌?

    ಈ ವೇಳೆ ಜೊತೆಯಾದ ಕಾರ್ತಿಕ್‌ ಮತ್ತು ಇಂಪ್ಯಾಕ್ಟ್‌ ಪ್ಲೇಯರ್‌ ಮಹಿಪಾಲ್‌ ಮುರಿಯದ 7ನೇ ವಿಕೆಟಿಗೆ ಕೇವಲ 18 ಎಸೆತಗಳಲ್ಲಿ 48 ರನ್‌ ಜೊತೆಯಾಟವಾಡಿ ಆರ್‌ಸಿಬಿಗೆ ಗೆಲುವು ತಂದುಕೊಟ್ಟರು.  ವಿಕೆಟ್‌ ಪತನವಾಗುತ್ತಿದ್ದರೂ ಕ್ರೀಸ್‌ನಲ್ಲಿ ನಿಂತು ಸ್ಫೋಟಕ ಅರ್ಧಶತಕ ಸಿಡಿಸಿದ ಕೊಹ್ಲಿ ಅರ್ಹವಾಗಿಯೇ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನಾರದರು.

    17ನೇ ಓವರ್‌ನಲ್ಲಿ 11 ರನ್‌ ಬಂದರೆ 18ನೇ ಓವರ್‌ನಲ್ಲಿ 13 ರನ್‌ ಬಂತು. 19ನೇ ಓವರ್‌ನಲ್ಲಿ ಕಾರ್ತಿಕ್‌ ಬೌಂಡರಿ, ಸಿಕ್ಸ್‌ ಸಿಡಿಸಿದ ಪರಿಣಾಮ 13 ರನ್‌ ಬಂತು. ಕೊನೆಯ 6 ಎಸೆತದಲ್ಲಿ 10 ರನ್‌ ಬೇಕಿತ್ತು. ಅರ್ಶ್‌ದೀಪ್‌ ಸಿಂಗ್‌ ಎಸೆದ ಮೊದಲ ಎಸೆತವನ್ನು ಕಾರ್ತಿಕ್‌ ಸಿಕ್ಸರ್‌ಗೆ ಅಟ್ಟಿದರು. ಎರಡನೇ ಎಸೆತದಲ್ಲಿ ಬೌಂಡರಿಗೆ ಸಿಡಿಸಿ ತವರು ನೆಲದಲ್ಲಿ ಆರ್‌ಸಿಬಿಗೆ ಜಯ ತಂದುಕೊಟ್ಟರು.

    ಕಾರ್ತಿಕ್‌ ಔಟಾಗದೇ 28 ರನ್‌(10 ಎಸೆತ, 3 ಬೌಂಡರಿ, 2 ಸಿಕ್ಸರ್‌), ಮಹಿಪಾಲ್‌ ಔಟಾಗದೇ 17 ರನ್‌ (8 ಎಸೆತ, 2 ಬೌಂಡರಿ, 1 ಸಿಕ್ಸರ್‌) ರನ್‌ ಹೊಡೆದರು.

    ಆರ್‌ಸಿಬಿ ಆರಂಭದಲ್ಲೇ ವಿಕೆಟ್‌ ಕಳೆದುಕೊಂಡಿತು. ನಾಯಕ ಡುಪ್ಲೆಸಿಸ್‌ 3 ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದರು. ಬೆನ್ನಲ್ಲೇ ಕ್ಯಾಮರೂನ್‌ ಗ್ರೀನ್‌ 3 ರನ್‌ ಗಳಿಸಿ ಔಟಾದರು. ನಂತರ ಬಂದ ರಜತ್‌ ಪಾಟಿದರ್‌ 18 ರನ್‌ ( 18 ಎಸೆತ, 1 ಬೌಂಡರಿ) ಹೊಡೆದು ಬೌಲ್ಡ್‌ ಆದರು. ಬೆನ್ನಲ್ಲೇ ಮ್ಯಕ್ಸ್‌ವೆಲ್‌ 3 ರನ್‌ ಗಳಿಸಿ ಹರ್‌ಪ್ರೀತ್‌ ಬ್ರಾರ್‌ಗೆ ಬೌಲ್ಡ್‌ ಆದರು.

    ಟಾಸ್‌ ಸೋತು ಮೊದಲ ಬ್ಯಾಟ್‌ ಮಾಡಿದ ಪಂಜಾಬ್‌ ಕಿಂಗ್ಸ್‌ಗೆ ನಾಯಕ ಶಿಖರ್‌ ಧವನ್‌ ಬಲ ತುಂಬಿ 45 ರನ್‌ (37 ಎಸೆತ, 4 ಬೌಂಡರಿ) ಹೊಡೆದು ಔಟಾದರು. ನಂತರ ಪ್ರಭಾಸಿಮ್ರಾನ್ ಸಿಂಗ್ 25 ರನ್‌, ಲಿವಿಂಗ್‌ ಸ್ಟೋನ್‌ 17 ರನ್‌, ಸ್ಯಾಮ್‌ ಕರ್ರನ್‌ 23 ರನ್‌ ರನ್‌ ಹೊಡೆದರು. ಕೊನೆಯಲ್ಲಿ ಶಶಾಂಕ್‌ ಸಿಂಗ್‌ 21 ರನ್‌ ( 8 ಎಸೆತ, 1 ಬೌಂಡರಿ, 2 ಸಿಕ್ಸರ್‌) ಜಿತೇಶ್‌ ಶರ್ಮಾ 27 ರನ್‌ (20 ಎಸೆತ, 1 ಬೌಂಡರಿ, 2 ಸಿಕ್ಸರ್‌) ಹೊಡೆದರು. ಅಂತಿಮವಾಗಿ ಪಂಜಾಬ್‌ ಕಿಂಗ್ಸ್‌ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 176 ರನ್‌ ಗಳಿಸಿತು.

    ಸಿರಾಜ್‌ 2 ಮತ್ತು ಮ್ಯಾಕ್ಸ್‌ವೆಲ್‌ ತಲಾ ಎರಡು ವಿಕೆಟ್‌ ಪಡೆದರೆ ಯಶ್‌ ದಯಾಳ್‌, ಅಲ್ಜಾರಿ ಜೋಸೆಫ್‌ ತಲಾ ಒಂದೊಂದು ವಿಕೆಟ್‌ ಪಡೆದರು.

  • ಪಂದ್ಯದ ವೇಳೆ ಕ್ರೀಸ್‌ಗೆ ನುಗ್ಗಿ ಕೊಹ್ಲಿ ಕಾಲು ಹಿಡಿದ ಆರ್‌ಸಿಬಿ ಅಭಿಮಾನಿ ವಶಕ್ಕೆ

    ಪಂದ್ಯದ ವೇಳೆ ಕ್ರೀಸ್‌ಗೆ ನುಗ್ಗಿ ಕೊಹ್ಲಿ ಕಾಲು ಹಿಡಿದ ಆರ್‌ಸಿಬಿ ಅಭಿಮಾನಿ ವಶಕ್ಕೆ

    ಬೆಂಗಳೂರು: ಆರ್‌ಸಿಬಿ (RCB) ಅಭಿಮಾನಿಯೊಬ್ಬ ಐಪಿಎಲ್ (IPL 2024) ಪಂದ್ಯದ ವೇಳೆ ಕ್ರೀಸ್‌ಗೆ ನುಗ್ಗಿ ಕೊಹ್ಲಿ (Virat Kohli) ಕಾಲು ಹಿಡಿದ ಘಟನೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದಿದೆ.

    ಇಂದು ಆರ್‌ಸಿಬಿ ಮತ್ತು ಪಂಜಾಬ್ ಕಿಂಗ್ಸ್ ನಡುವೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (Chinnaswamy Stadium) ರೋಚಕ ಐಪಿಎಲ್ ಪಂದ್ಯ ನಡೆಯುತ್ತಿದೆ. ವಿರಾಟ್ ಕೊಹ್ಲಿ ಬ್ಯಾಟಿಂಗ್ ಬರುತ್ತಿದ್ದಂತೆ ಅಭಿಮಾನಿಯೊಬ್ಬ ಹೈ ಸೆಕ್ಯೂರಿಟಿ ಮಧ್ಯೆಯೂ ಕ್ರೀಸ್ ಒಳಗಡೆ ನುಗ್ಗಿ ಕೊಹ್ಲಿ ಕಾಲು ಹಿಡಿದು ಹುಚ್ಚಾಟ ನಡೆಸಿದ್ದಾನೆ. ಇದನ್ನೂ ಓದಿ: ಭಾರತದಲ್ಲೇ ಐಪಿಎಲ್‌ – ಪೂರ್ಣ ವೇಳಾಪಟ್ಟಿ ಪ್ರಕಟ, ಯಾವ ದಿನ ಯಾವ ಮ್ಯಾಚ್‌?

    ಕೊಹ್ಲಿ ಬರುವುದನ್ನೇ ಕಾಯುತ್ತಿದ್ದ ಅಭಿಮಾನಿ ಎಲ್ಲಾ ರೂಲ್ಸ್‌ಗಳನ್ನು ಮುರಿದು ಕ್ರೀಸ್ ಒಳಗಡೆ ನುಗ್ಗಿ ಏಕಾಏಕಿ ಕೊಹ್ಲಿ ಕಾಲಿಗೆ ಬಿದ್ದು ಬಳಿಕ ಅಪ್ಪಿಕೊಳ್ಳಲು ಪ್ರಯತ್ನಿಸಿದ್ದಾನೆ. ಘಟನೆ ನಡೆದ ಕೂಡಲೇ ಒಳನುಗ್ಗಿದ ಅಭಿಮಾನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಐಪಿಎಲ್‌ ಅಂಗಳದಲ್ಲಿ ಕ್ಯಾಪ್ಟನ್ಸಿ ಕಿಚ್ಚು – ಕರ್ಮ ಸುಮ್ಮನೆ ಬಿಡಲ್ಲ; ಪಾಂಡ್ಯ ವಿರುದ್ಧ ಫ್ಯಾನ್ಸ್‌ ಫುಲ್‌ ಗರಂ