Tag: rcb

  • ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಳಿಗೆ ಒಂದೊಂದು ಕೋಟಿ ಪರಿಹಾರ ಕೊಡಬೇಕು – ಲಕ್ಷ್ಮಿ ಹೆಬ್ಬಾಳ್ಕರ್‌ ಆಗ್ರಹ

    ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಳಿಗೆ ಒಂದೊಂದು ಕೋಟಿ ಪರಿಹಾರ ಕೊಡಬೇಕು – ಲಕ್ಷ್ಮಿ ಹೆಬ್ಬಾಳ್ಕರ್‌ ಆಗ್ರಹ

    ಬೆಳಗಾವಿ: ಕಾಲ್ತುಳಿತ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಳಿಗೆ ತಲಾ ಒಂದೊಂದು ಕೋಟಿ ಪರಿಹಾರ ಕೊಡಬೇಕು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ (Lakshmi Hebbalkar) ಆಗ್ರಹಿಸಿದ್ದಾರೆ.

    ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರ ಇನ್ನೂ ಹೆಚ್ಚಿನ ಪರಿಹಾರ ಕೊಡಬೇಕು ಅಂತಾ ನಾನು ಕೂಡ ಒತ್ತಾಯ ಮಾಡ್ತೀನಿ. ಸರ್ಕಾರ ಅಷ್ಟೇ ಅಲ್ಲ ಆರ್‌ಸಿಬಿ‌ ಫ್ರಾಂಚೈಸಿ (RCB Franchise), ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ (KSCA) ಅವರೂ ಕೊಡಬೇಕು. ಬರೀ ಹತ್ತು ಲಕ್ಷ ಅಲ್ಲ ಒಂದೊಂದು ಕೋಟಿ ಪರಿಹಾರ ಕೊಡಬೇಕು ಅಂತ ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪರಾರಿಯಾಗುತ್ತಿದ್ದ ಆರ್‌ಸಿಬಿಯ ನಿಖಿಲ್‌ ಸೋಸಲೆ ವಿಮಾನ ನಿಲ್ದಾಣದಲ್ಲಿ ಅರೆಸ್ಟ್‌

    ಎಷ್ಟೇ ಪರಿಹಾರ ಕೊಟ್ರೂ ಸತ್ತ ಜೀವ ವಾಪಸ್ ತರಲು ಆಗಲ್ಲ. ವಿಪಕ್ಷದವರು ಜನರ ದಿಕ್ಕು ತಪ್ಪಿಸಲು ಏನು ಮಾಡಬೇಕೋ ಅದನ್ನ ಮಾಡ್ತಾರೆ. ನಮ್ಮ ಹಿರಿಯರು ಏನೇನೋ ಉತ್ತರ ಕೊಡಬೇಕು ಕೊಡ್ತಾರೆ. ಘಟನೆಯಲ್ಲಿ ಇಂಟಲಿಜೆನ್ಸ್ ತಪ್ಪಾಗಿದ್ರೇ ತನಿಖೆಯಿಂದ ಗೊತ್ತಾಗುತ್ತೆ ಅಂತ ಹೇಳಿದ್ದಾರೆ. ಇದನ್ನೂ ಓದಿ:  ತನ್ನ ಬಾಯ್‌ಫ್ರೆಂಡ್‌ನಿಂದ ಮಗಳ ಮೇಲೆಯೇ ರೇಪ್‌ ಮಾಡಿಸಿದ್ದ ಬಿಜೆಪಿ ನಾಯಕಿ ಅರೆಸ್ಟ್‌

    ಏನಿದು ಪ್ರಕರಣ?
    ರಾಯಲ್ ಚಾಲೆಂಜರ್ಸ್ ಬೆಂಗಳೂರು 18 ವರ್ಷಗಳ ಬಳಿಕ ಐಪಿಎಲ್ ಚಾಂಪಿಯನ್ ಪಟ್ಟವನ್ನೇನೋ ಅಲಂಕರಿಸಿದೆ. ಆದರೆ, ಆರ್‌ಸಿಬಿ ಫ್ಯಾನ್ಸ್ ಐತಿಹಾಸಿಕ ಕ್ಷಣದ ಸಂಭ್ರಮದಲ್ಲಿ ದುರಂತ ಸಂಭವಿಸಿದೆ. 10ಕ್ಕೂ ಹೆಚ್ಚು ಅಭಿಮಾನಿಗಳು ಸಾವನ್ನಪ್ಪಿ ಸೂತಕವಾಗಿ ಆಗಿಬಿಟ್ಟಿದೆ. ಪಂಜಾಬ್ ವಿರುದ್ಧ ಬೆಂಗಳೂರು 6 ರನ್‌ಗಳ ಭರ್ಜರಿ ಜಯ ಸಾಧಿಸ್ತಿದ್ದಂತೆಯೇ ಸಿಲಿಕಾನ್ ಸಿಟಿಯಲ್ಲಿ ನಿನ್ನೆ ರಾತ್ರಿಯೇ ದೀಪಾವಳಿಯಂಥಹ ಸಂಭ್ರಮ ಇತ್ತು. ಇವತ್ತು ಇಡೀ ದಿನ ಹೆಚ್‌ಎಎಲ್ ಏರ್‌ಪೋರ್ಟ್ ರೋಡ್, ತಾಜ್ ವೆಸ್ಟ್ ಎಂಡ್ ಹೊಟೇಲ್ ರೋಡ್, ವಿಧಾನಸೌಧ, ಚಿನ್ನಸ್ವಾಮಿ ಸ್ಟೇಡಿಯಂ ರಸ್ತೆ ಸುತ್ತ ಮುತ್ತ ರೆಡ್ ಆರ್ಮಿ ಎಲ್ಲಾ ಕಡೆ ಆರ್‌ಸಿಬಿ ತಂಡಕ್ಕೆ ತಮ್ಮ ಅಭಿಮಾನ ತೋರಿದರು.

    ಇವತ್ತು ದಿಢೀರನೆ ವಿಜಯೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದರಿಂದ ಅಭಿಮಾನಿಗಳ ಸುನಾಮಿಯೇ ಸೃಷ್ಟಿ ಆಯ್ತು… ಉಚಿತ ಪ್ರವೇಶ ಆಗಿದ್ದರಿಂದ ಕ್ರೀಡಾಂಗಣಕ್ಕೆ ಫ್ಯಾನ್ಸ್ ಹರಿದುಬಂದಿತ್ತು. ಗೇಟ್ ನಂಬರ್ 18, 19, 20ರ ಬಳಿ ಅಭಿಮಾನಿ ಸಾಗರ ತಡೆಯಲು ಪೊಲೀಸರು ಹೈರಾಣಾಗಿ ಹೋದರು. ಒಂದು ಹಂತದಲ್ಲಿ ಲಾಠಿಯನ್ನೂ ಬೀಸಿದರು. ಕ್ಷಣ ಕ್ಷಣಕ್ಕೂ ಆರ್‌ಸಿಬಿ ಅಭಿಮಾನಿಗಳ ಸುನಾಮಿ ಹೆಚ್ಚುತ್ತಲೇ ಇತ್ತು. ಆದರೆ, ಗೇಟ್ ನಂ.12ರ ಬಳಿ ಗೇಟ್ ತೆಗೆಯುತ್ತಿದ್ದಂತೆಯೇ ಭಾರೀ ಪ್ರಮಾಣದಲ್ಲಿ ನೂಕು ನುಗ್ಗಲು ನಡೀತು. ಒಬ್ಬರ ಮೇಲೋಬ್ಬರು ಬಿದ್ದರು, ಉಸಿರಾಡೋಕೂ ಕೂಡ ಸಾಧ್ಯವಾಗಲಿಲ್ಲ. ತಕ್ಷಣವೇ ಹತ್ತಿರದ ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆ (ಮಲ್ಯ ರಸ್ತ್ರೆ), ಮಣಿಪಾಲ್‌ಗೆ ದಾಖಲಿಸಲಾಯಿತು. ಆದರೆ, ಬೌರಿಂಗ್ ಆಸ್ಪತ್ರೆಯಲ್ಲಿ 6, ವೈದೇಹಿ ಆಸ್ಪತ್ರೆಯಲ್ಲಿ 4 ಹಾಗೂ ಮಣಿಪಾಲ ಆಸ್ಪತ್ರೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

  • Chinnaswamy Stampede | ಡಿಎನ್‌ಎ ಕಂಪನಿ ಮುಖ್ಯಸ್ಥ ನಾಪತ್ತೆ

    Chinnaswamy Stampede | ಡಿಎನ್‌ಎ ಕಂಪನಿ ಮುಖ್ಯಸ್ಥ ನಾಪತ್ತೆ

    ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (Chinnaswamy Stadium Stampede Case) ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ (FIR) ದಾಖಲಾಗುತ್ತಿದ್ದಂತೆ ಇವೆಂಟ್‌ ಮ್ಯಾನೇಜ್‌ಮೆಂಟ್‌ ಕಂಪನಿ ಡಿಎನ್‌ಎ (DNA) ಮಾಲೀಕ ನಾಪತ್ತೆಯಾಗಿದ್ದಾರೆ.

    ಕರ್ನಾಟಕದ ಮಾಜಿ ಸಿಎಂ ಕೆಂಗಲ್ ಹನುಮಂತಯ್ಯ ಅವರ ಮೊಮ್ಮಗ ವೆಂಕಟ್‌ ವರ್ಧನ್‌ (Venkat Vardhan) ಡಿಎನ್‌ಎ ಕಂಪನಿಯ ಮುಖ್ಯಸ್ಥರಾಗಿದ್ದಾರೆ. ಸಿಎಂ ಸೂಚನೆಯ ಮೇರೆಗೆ ಪೊಲೀಸರು ಬಂಧನಕ್ಕೆ ಮುಂದಾಗುತ್ತಿದ್ದಂತೆ ವೆಂಕಟ್‌ ವರ್ಧನ್‌ ನಾಪತ್ತೆಯಾಗಿದ್ದಾರೆ. ಇದನ್ನೂ ಓದಿ: ಪರಾರಿಯಾಗುತ್ತಿದ್ದ ಆರ್‌ಸಿಬಿಯ ನಿಖಿಲ್‌ ಸೋಸಲೆ ವಿಮಾನ ನಿಲ್ದಾಣದಲ್ಲಿ ಅರೆಸ್ಟ್‌

    ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ, ಕರ್ನಾಟಕ ರಾಜ್ಯ ಕ್ರಿಕೆಟ್‌ ಮಂಡಳಿ ಮತ್ತು ಕಾರ್ಯಕ್ರಮ ನಿರ್ವಹಣೆ ಮಾಡಿದ್ದ ಡಿಎನ್‌ಎ ಮೇಲೆ ಎಫ್‌ಐಆರ್‌ (FIR) ದಾಖಲಾಗಿದೆ. ಇದನ್ನೂ ಓದಿ: Stampede Case | ಸಿಎಂ ಸೂಚನೆ ಬೆನ್ನಲ್ಲೇ ನಾಲ್ವರು ಅರೆಸ್ಟ್‌, ಉಳಿದವರು ಎಸ್ಕೇಪ್‌

    ಡಿಎನ್‌ಎ ಇವೆಂಟ್‌ ಮ್ಯಾನೇಜ್‌ಮೆಂಟ್‌ ಸಂಸ್ಥೆಯ ಮೂವರು ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ನ ಓಬ್ಬರು ಸೇರಿ ನಾಲ್ವರನ್ನು ಪೊಲೀಸರು (Bengaluru Police) ಬಂಧಿಸಿದ್ದಾರೆ. ಡಿಎನ್‌ಎ ಇವೆಂಟ್‌ ಮ್ಯಾನೇಜ್ಮೆಂಟ್‌ನ ಸುನೀಲ್ ಮ್ಯಾಥ್ಯೂ, ಕಿರಣ್ ಮತ್ತು ವಿನೋದ್‌ ಬಂಧನವಾಗಿದ್ದರೆ ಕೆಎಸ್‌ಸಿಎ ಪ್ರತಿನಿಧಿಯ ಹೆಸರು ಬಹಿರಂಗವಾಗಿಲ್ಲ.

     

  • ಪರಾರಿಯಾಗುತ್ತಿದ್ದ ಆರ್‌ಸಿಬಿಯ ನಿಖಿಲ್‌ ಸೋಸಲೆ ವಿಮಾನ ನಿಲ್ದಾಣದಲ್ಲಿ ಅರೆಸ್ಟ್‌

    ಪರಾರಿಯಾಗುತ್ತಿದ್ದ ಆರ್‌ಸಿಬಿಯ ನಿಖಿಲ್‌ ಸೋಸಲೆ ವಿಮಾನ ನಿಲ್ದಾಣದಲ್ಲಿ ಅರೆಸ್ಟ್‌

    ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (Chinnaswamy Stadium Stampede Case) ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗುತ್ತಿದ್ದ ಆರ್‌ಸಿಬಿಯ (RCB) ಮಾರ್ಕೆಟಿಂಗ್‌ ಮುಖ್ಯಸ್ಥ ನಿಖಿಲ್‌ ಸೋಸಲೆಯನ್ನು (Nikhil Sosale) ವಿಮಾನ ನಿಲ್ದಾಣದಲ್ಲಿ ಬಂಧನ ಮಾಡಲಾಗಿದೆ.

    ಎಫ್‌ಐಆರ್‌ ದಾಖಲಾಗುತ್ತಿದ್ದಂತೆ ಬಂಧನ ಭೀತಿಯಿಂದ ಪಾರಾಗಲು ನಿಖಿಲ್‌ ಸೋಸಲೆ ಮುಂಬೈಗೆ ಪ್ರಯಾಣಿಸಲು ಮುಂದಾಗಿದ್ದರು. ಈ ಸಂದರ್ಭದಲ್ಲೇ ಬೆಂಗಳೂರು ಪೊಲೀಸರು ವಿಮಾನ ನಿಲ್ದಾಣಕ್ಕೆ ತೆರಳಿ ಬಂಧನ ಮಾಡಿದ್ದಾರೆ. ಇದನ್ನೂ ಓದಿ: ಕಾಲ್ತುಳಿತ ಕೇಸ್‌ | ಸಿಎಂ ಕೊಟ್ಟ ಸುಳಿವಿನಿಂದ ಪ್ರಮುಖ ಆರೋಪಿಗಳು ಪರಾರಿ

     

    ಬಂಧನ ಮಾಡಿದ್ದು ಯಾಕೆ?
    ಬೆಂಗಳೂರಿನಲ್ಲಿ ವಿಧಾನಸೌಧದಿಂದ ಚಿನ್ನಸ್ವಾಮಿ ಸ್ಟೇಡಿಯಂವರೆಗೂ ವಿಕ್ಟರಿ ಪರೇಡ್ ನಡೆಯಲಿದೆ ಎಂದು ಆರ್‌ಸಿಬಿಯ ಸಾಮಾಜಿಕ ಜಾಲತಾಣ ಖಾತೆಯಿಂದ ಪೋಸ್ಟ್‌ ಮಾಡಲಾಗಿತ್ತು. ಬೆಂಗಳೂರು ಪೊಲೀಸರ ಅನುಮತಿ ಪಡೆಯದೇ ಬುಧವಾರ ಬೆಳಗ್ಗೆ ಈ ಪೋಸ್ಟ್‌ ಪ್ರಕಟವಾಗಿತ್ತು.

    ಬೆಂಗಳೂರು ನಗರ ಪೊಲೀಸ್‌ ಆಯುಕ್ತ ದಯಾನಂದ್‌ ಅವರು ಪರೇಡ್‌ಗೆ ಅನುಮತಿ ನಿರಾಕರಿಸಿದ ನಂತರವೂ ಸಾಮಾಜಿಕ ಜಾಲತಾಣದಲ್ಲಿ ಈ ಪೋಸ್ಟ್‌ ಡಿಲೀಟ್‌ ಆಗಿರಲಿಲ್ಲ. ಅಷ್ಟೇ ಅಲ್ಲದೇ ಸ್ಟೇಡಿಯಂನಲ್ಲಿ ವಿಜಯೋತ್ಸವ ಆಚರಣೆಗೆ ಉಚಿತ ಟಿಕೆಟ್‌ ಎಂದು ಪೋಸ್ಟ್‌ ಮಾಡಲಾಗಿತ್ತು. ಇದನ್ನೂ ಓದಿ: Stampede Case | ಸಿಎಂ ಸೂಚನೆ ಬೆನ್ನಲ್ಲೇ ನಾಲ್ವರು ಅರೆಸ್ಟ್‌, ಉಳಿದವರು ಎಸ್ಕೇಪ್‌

     

    ಉಚಿತ ಟಿಕೆಟ್‌ ಎಂದು ಘೋಷಣೆಯ ಬಳಿಕ ಟಿಕೆಟ್‌ ಎಲ್ಲಿ ಸಿಗುತ್ತದೆ ಎಂಬ ಮಾಹಿತಿ ಯಾರ ಬಳಿಯೂ ಇರಲಿಲ್ಲ. ನಂತರ ಗೇಟ್‌ 9 ಮತ್ತು 10 ರ ಬಳಿ ಮಧ್ಯಾಹ್ನ 1 ಗಂಟೆಯ ನಂತರ ಟಿಕೆಟ್‌ ಸಿಗಲಿದೆ ಎಂದು ಘೋಷಣೆ ಮಾಡಲಾಗಿತ್ತು. ಆದರೆ ಮಧ್ಯಾಹ್ನ 1 ಗಂಟೆಯಾದರೂ ಟಿಕೆಟ್‌ ವಿತರಣೆ ಪ್ರಕ್ರಿಯೆ ನಡೆದಿರಲಿಲ್ಲ. ಈ ಮಧ್ಯೆ ಮಧ್ಯಾಹ್ನ 3:14ಕ್ಕೆ ಆರ್‌ಸಿಬಿ ವೆಬ್‌ಸೈಟ್‌ನಲ್ಲಿ ಟಿಕೆಟ್‌ ಸಿಗಲಿದೆ ಎಂದು ಪೋಸ್ಟ್‌ ಮಾಡಲಾಗಿತ್ತು.

    ನಿಖಿಲ್ ಸೂಚನೆಯಂತೆ ಇವೆಂಟ್‌ ಮ್ಯಾನೆಜ್‌ಮೆಂಟ್‌ ಕಂಪನಿ ಡಿಎನ್‌ಎ ಕೆಲಸ ಮಾಡುತ್ತಿತ್ತು. ಸಂಜೆಯ ವೇಳೆ ನಿಖಿಲ್‌ ಸೂಚನೆಯಂತೆ ದಿಢೀರ್‌ ಆಗಿ 22 ಗೇಟ್‌ಗಳ ಪೈಕಿ ಕೇವಲ 19,20,22 ಗೇಟ್‌ಗಳನ್ನು ಮಾತ್ರ ಓಪನ್‌ ಮಾಡಲಾಗಿತ್ತು. ಇದರಿಂದಾಗಿ ಕಾಲ್ತುಳಿತ ಸಂಭವಿಸಿತ್ತು.

    ಬೆಳಗ್ಗೆಯಿಂದಲೂ ಸ್ಟೇಡಿಯಂ ಸುತ್ತ ಲಕ್ಷಾಂತರ ಜನ ಸೇರಲು ಆರ್‌ಸಿಬಿ ವಿಕ್ಟರಿ ಪೋಸ್ಟ್‌ ನೇರ ಕಾರಣವಾಗಿರುವ ಕಾರಣ ಬಂಧನ ಮಾಡಲಾಗಿದೆ.

  • ಕಾಲ್ತುಳಿತ ಕೇಸ್‌ | ಸಿಎಂ ಕೊಟ್ಟ ಸುಳಿವಿನಿಂದ ಪ್ರಮುಖ ಆರೋಪಿಗಳು ಪರಾರಿ

    ಕಾಲ್ತುಳಿತ ಕೇಸ್‌ | ಸಿಎಂ ಕೊಟ್ಟ ಸುಳಿವಿನಿಂದ ಪ್ರಮುಖ ಆರೋಪಿಗಳು ಪರಾರಿ

    ಬೆಂಗಳೂರು: ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaih) ನೀಡಿದ ಸುಳಿವಿನಿಂದ ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣದ (Chinnaswamy Stadium Stampede Case) ಪ್ರಮುಖ ಆರೋಪಿಗಳು ಪರಾರಿಯಾಗಿದ್ದಾರೆ.

    ಹೌದು. ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ, ಕರ್ನಾಟಕ ರಾಜ್ಯ ಕ್ರಿಕೆಟ್‌ ಮಂಡಳಿ (KSCA) ಮತ್ತು ಕಾರ್ಯಕ್ರಮ ನಿರ್ವಹಣೆ ಮಾಡಿದ್ದ ಡಿಎನ್‌ಎ ಮೇಲೆ ಎಫ್‌ಐಆರ್‌ (FIR) ದಾಖಲಾಗಿದೆ. ಎಫ್‌ಐಆರ್‌ ದಾಖಲಾದ ನಂತರ ಈ ಮೂರು ಸಂಸ್ಥೆಗಳ ಪ್ರಮುಖರನ್ನು ಬಂಧಿಸಬೇಕಿತ್ತು. ಆದರೆ ಪೊಲೀಸರ ಬಂಧನಕ್ಕೂ ಮೊದಲೇ ಈ ಸಂಸ್ಥೆಗಳ ಪ್ರಮುಖರು ಪರಾರಿಯಾಗಿದ್ದಾರೆ.

    ಸಿಎಂ ಹೇಳಿದ್ದೇನು?
    ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಈ ಪ್ರಕರಣವನ್ನು ನಾವು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ನಿರ್ಲಕ್ಷ್ಯ ವಹಿಸಿದ ವ್ಯಕ್ತಿಗಳ ವಿರುದ್ಧ ಕ್ರಮ ಆಗಲಿದೆ. ಮೂರು ಸಂಸ್ಥೆಗಳ ಮುಖ್ಯಸ್ಥರನ್ನು ಬಂಧಿಸುತ್ತೇವೆ ಎಂದು ಹೇಳಿದ್ದರು.

    ಸಿಎಂ ಬಂಧಿಸುತ್ತೇವೆ ಎಂದು ಲೈವ್‌ನಲ್ಲಿ ಹೇಳಿದ್ದರಿಂದ ಪೊಲೀಸರು ಸ್ಥಳಕ್ಕೆ ತೆರಳುವ ಮೊದಲೇ ಆರೋಪಿಗಳು ಪರಾರಿಯಾಗಿದ್ದಾರೆ. ಒಂದು ವೇಳೆ ಸಿಎಂ ತಪ್ಪಿತ್ತಸ್ಥರ ವಿರುದ್ಧ ಕ್ರಮ ಆಗಲಿದೆ ಎಂದಿದ್ದರೆ ಆರೋಪಿಗಳು ಪರಾರಿಯಾಗುವ ಸಾಧ್ಯತೆ ಕಡಿಮೆ ಇತ್ತು.

     

    ಬಂಧಿತರು ಯಾರು?
    ಡಿಎನ್‌ಎ ಇವೆಂಟ್‌ ಮ್ಯಾನೇಜ್‌ಮೆಂಟ್‌ ಸಂಸ್ಥೆಯ ಮೂವರು ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ನ ಓಬ್ಬರು ಸೇರಿ ನಾಲ್ವರನ್ನು ಪೊಲೀಸರು (Bengaluru Police) ಬಂಧಿಸಿದ್ದಾರೆ. ಡಿಎನ್‌ಎ ಇವೆಂಟ್‌ ಮ್ಯಾನೇಜ್ಮೆಂಟ್‌ನ ಸುನೀಲ್ ಮ್ಯಾಥ್ಯೂ, ಕಿರಣ್ ಮತ್ತು ವಿನೋದ್ ಬಂಧನವಾಗಿದ್ದರೆ ಕೆಎಸ್‌ಸಿಎ ಪ್ರತಿನಿಧಿಯ ಹೆಸರು ಬಹಿರಂಗವಾಗಿಲ್ಲ.

    ಆರೋಪಿಗಳಾಗಬೇಕಿದ್ದ ಕೆಎಸ್‌ಸಿಎ ಪ್ರಮುಖರು ರಾತ್ರಿಯೇ ಪರಾರಿಯಾಗಿದ್ದು ಅವರ ಪತ್ತೆಗೆ ಪೊಲೀಸರು ಈಗ ಶೋಧ ನಡೆಸುತ್ತಿದ್ದಾರೆ.

  • ಅತ್ಯಂತ ಕರಾಳ ದಿನ, ಡಿಸಿಎಂ ಅಪರಾಧಿ ಅನ್ನೋದು ರಾಜ್ಯಕ್ಕೆ ಗೊತ್ತಿದೆ: ಭಾಸ್ಕರ್‌ ರಾವ್‌ ಆಕ್ರೋಶ

    ಅತ್ಯಂತ ಕರಾಳ ದಿನ, ಡಿಸಿಎಂ ಅಪರಾಧಿ ಅನ್ನೋದು ರಾಜ್ಯಕ್ಕೆ ಗೊತ್ತಿದೆ: ಭಾಸ್ಕರ್‌ ರಾವ್‌ ಆಕ್ರೋಶ

    ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ (Chinnaswamy Stadium Stampede Case) ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ ದಯಾನಂದ್‌ (B Dayananda) ಅವರನ್ನು ಅಮಾನತು ಮಾಡಿದ್ದಕ್ಕೆ ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ (Bhaskar Rao) ಕಿಡಿಕಾರಿದ್ದಾರೆ.

    ಎಕ್ಸ್‌ನಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಅಮಾನತು ಕರ್ನಾಟಕ ಪೊಲೀಸ್ (Karnataka Police) ಇತಿಹಾಸದಲ್ಲಿ ಅತ್ಯಂತ ಕರಾಳ ದಿನ ಎಂದು ಪೋಸ್ಟ್‌ ಮಾಡಿದ್ದಾರೆ.


    ಪೋಸ್ಟ್‌ನಲ್ಲಿ ಏನಿದೆ?
    ಸಿದ್ದರಾಮಯ್ಯ (Siddaramaiah) ಅವರು ಭಯಗೊಂಡಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನು ಅಮಾನತು ಮಾಡಿರುವುದು ಕರ್ನಾಟಕ ಪೊಲೀಸ್ ಇತಿಹಾಸದಲ್ಲಿ ಅತ್ಯಂತ ಕರಾಳ ದಿನ. ಸತ್ಯ ಹೇಳಿದ್ದಕ್ಕೆ ಅವರಿಗೆ ಶಿಕ್ಷೆಯ ರೂಪದಲ್ಲಿ ಬಹುಮಾನ ನೀಡಿದ್ದಾರೆ. ಇದನ್ನೂ ಓದಿ: Stampede Case | ಸಿಎಂ ಸೂಚನೆ ಬೆನ್ನಲ್ಲೇ ನಾಲ್ವರು ಅರೆಸ್ಟ್‌, ಉಳಿದವರು ಎಸ್ಕೇಪ್‌

    ದಯಾನಂದ್‌ ಮತ್ತು ಅವರ ತಂಡ ಬೆಂಗಳೂರನ್ನು ಸುರಕ್ಷಿತವಾಗಿಡಲು ಇಡೀ ರಾತ್ರಿ ಶ್ರಮಿಸಿತ್ತು. ಸಾವಿನ ಪರೇಡ್‌ ನಡೆಸಲು ಕಾರಣರಾದ ಉಪಮುಖ್ಯಮಂತ್ರಿಯೇ ಈ ಪ್ರಕರಣದಲ್ಲಿ ಪ್ರಮುಖ ಅಪರಾಧಿ ಎಂದು ಕರ್ನಾಟಕದ ಎಲ್ಲರಿಗೂ ತಿಳಿದಿದೆ.

    ಯಾವುದೇ ಮುಖ್ಯಮಂತ್ರಿ ಇಷ್ಟು ಅಸಹಾಯಕ, ಹೇಡಿಯಾಗಲು ಸಾಧ್ಯವಿಲ್ಲ. ಸರ್ಕಾರದ ಕೈಗೆ ರಕ್ತ ಅಂಟಿಕೊಂಡಿದ್ದು ಈಗ ನಿಯಂತ್ರಣವನ್ನು ಕಳೆದುಕೊಂಡಿದ್ದು ಅಪಾಯದಲ್ಲಿದೆ.

  • Stampede Case | ಸಿಎಂ ಸೂಚನೆ ಬೆನ್ನಲ್ಲೇ ನಾಲ್ವರು ಅರೆಸ್ಟ್‌, ಉಳಿದವರು ಎಸ್ಕೇಪ್‌

    Stampede Case | ಸಿಎಂ ಸೂಚನೆ ಬೆನ್ನಲ್ಲೇ ನಾಲ್ವರು ಅರೆಸ್ಟ್‌, ಉಳಿದವರು ಎಸ್ಕೇಪ್‌

    ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ (Chinnaswamy Stampede Case) ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

    ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸೂಚನೆ ನೀಡಿದ ಬೆನ್ನಲ್ಲೇ ಡಿಎನ್‌ಎ ಇವೆಂಟ್‌ ಮ್ಯಾನೇಜ್‌ಮೆಂಟ್‌ ಸಂಸ್ಥೆಯ ಮೂವರು ಹಾಗೂ ಆರ್ಸಿಬಿ ಮಾರ್ಕೆಟಿಂಗ್ ಹೆಡ್ ಸೇರಿ ನಾಲ್ವರನ್ನು ಪೊಲೀಸರು (Bengaluru Police) ಬಂಧಿಸಿದ್ದಾರೆ. ಡಿಎನ್‌ಎ ಇವೆಂಟ್‌ ಮ್ಯಾನೇಜ್ಮೆಂಟ್‌ನ ಸುನೀಲ್ ಮ್ಯಾಥ್ಯೂ, ಕಿರಣ್ ಮತ್ತು ವಿನೋದ್, ಆರ್‌ಸಿಬಿ ಮಾರ್ಕೆಟಿಂಗ್‌ ಹೆಡ್‌ ನಿಖಿಲ್ ಬಂಧಿತರು. ಇದನ್ನೂ ಓದಿ: Chinnaswamy Stampede Case – ಆರ್‌ಸಿಬಿ ಫ್ರಾಂಚೈಸಿ, ಕೆಎಸ್‌ಸಿಎ ವಿರುದ್ಧ FIR 

    ಇನ್ನೂ ಕೆಎಸ್‌ಸಿಎ ಪ್ರಮುಖರೆಲ್ಲಾ ನಿನ್ನೆ ರಾತ್ರಿಯೇ ಎಸ್ಕೇಪ್‌ ಆಗಿದ್ದು, ಅವರ ಮನೆಗಳಿಗೂ ತೆರಳಿ ಪೊಲೀಸರು ಹುಡುಕಾಟ ನಡೆಸಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಪೊಲೀಸರು ಅನುಮತಿ ನೀಡದೇ ಇದ್ರೂ ಪಟ್ಟು ಹಿಡಿದು ವಿಜಯೋತ್ಸವ ಆಯೋಜನೆ!

    ಕಾಲ್ತುಳಿತ ಪ್ರಕರಣ ಸಂಬಂಧ ಗುರುವಾರ ರಾತ್ರಿ ತುರ್ತು ಸುದ್ದಿಗೋಷ್ಠಿ ನಡೆಸಿದ್ದ ಸಿಎಂ, ತನಿಖೆಯನ್ನ ಸಿಐಡಿಗೆ ವಹಿಸಲಾಗಿದೆ. 2 ಎಫ್‌ಐಆರ್ ಅನ್ನ ಸಿಐಡಿಗೆ ವಹಿಸಿರುವುದಾಗಿ ತಿಳಿಸಿದ್ದರು. ಅಲ್ಲದೇ ಕಾಲ್ತುಳಿತಕ್ಕೆ ಕಾರಣರಾದ ಆರ್‌ಸಿಬಿ ಆಡಳಿತ ಮಂಡಳಿ, ಡಿಎನ್‌ಎ ಇವೆಂಟ್‌ ಮ್ಯಾನೇಜ್ಮೆಂಟ್‌ ಸಂಸ್ಥೆ ಹಾಗೂ ಕೆಎಸ್‌ಸಿಎ ಪ್ರತಿನಿಧಿಗಳನ್ನು ಬಂಧಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಈ ಬೆನ್ನಲ್ಲೇ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಮಾತೇ ಬರುತ್ತಿಲ್ಲ, ತುಂಬಾ ದುಃಖವಾಗಿದೆ: ಕಾಲ್ತುಳಿತ ದುರಂತಕ್ಕೆ ಕೊಹ್ಲಿ ಸಂತಾಪ

    ಏನಿದು ಪ್ರಕರಣ?
    ರಾಯಲ್ ಚಾಲೆಂಜರ್ಸ್ ಬೆಂಗಳೂರು 18 ವರ್ಷಗಳ ಬಳಿಕ ಐಪಿಎಲ್ ಚಾಂಪಿಯನ್ ಪಟ್ಟವನ್ನೇನೋ ಅಲಂಕರಿಸಿದೆ. ಆದರೆ, ಆರ್‌ಸಿಬಿ ಫ್ಯಾನ್ಸ್ ಐತಿಹಾಸಿಕ ಕ್ಷಣದ ಸಂಭ್ರಮದಲ್ಲಿ ದುರಂತ ಸಂಭವಿಸಿದೆ. 10ಕ್ಕೂ ಹೆಚ್ಚು ಅಭಿಮಾನಿಗಳು ಸಾವನ್ನಪ್ಪಿ ಸೂತಕವಾಗಿ ಆಗಿಬಿಟ್ಟಿದೆ. ಪಂಜಾಬ್ ವಿರುದ್ಧ ಬೆಂಗಳೂರು 6 ರನ್‌ಗಳ ಭರ್ಜರಿ ಜಯ ಸಾಧಿಸ್ತಿದ್ದಂತೆಯೇ ಸಿಲಿಕಾನ್ ಸಿಟಿಯಲ್ಲಿ ನಿನ್ನೆ ರಾತ್ರಿಯೇ ದೀಪಾವಳಿಯಂಥಹ ಸಂಭ್ರಮ ಇತ್ತು. ಇವತ್ತು ಇಡೀ ದಿನ ಹೆಚ್‌ಎಎಲ್ ಏರ್‌ಪೋರ್ಟ್ ರೋಡ್, ತಾಜ್ ವೆಸ್ಟ್ ಎಂಡ್ ಹೊಟೇಲ್ ರೋಡ್, ವಿಧಾನಸೌಧ, ಚಿನ್ನಸ್ವಾಮಿ ಸ್ಟೇಡಿಯಂ ರಸ್ತೆ ಸುತ್ತ ಮುತ್ತ ರೆಡ್ ಆರ್ಮಿ ಎಲ್ಲಾ ಕಡೆ ಆರ್‌ಸಿಬಿ ತಂಡಕ್ಕೆ ತಮ್ಮ ಅಭಿಮಾನ ತೋರಿದರು. ಇದನ್ನೂ ಓದಿ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭೀಕರ ಕಾಲ್ತುಳಿತ; ಫ್ಯಾನ್ಸ್‌ ಸಾವು-ನೋವಿಗೆ ಆರ್‌ಸಿಬಿ ಶೋಕ

    ಇವತ್ತು ದಿಢೀರನೆ ವಿಜಯೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದರಿಂದ ಅಭಿಮಾನಿಗಳ ಸುನಾಮಿಯೇ ಸೃಷ್ಟಿ ಆಯ್ತು… ಉಚಿತ ಪ್ರವೇಶ ಆಗಿದ್ದರಿಂದ ಕ್ರೀಡಾಂಗಣಕ್ಕೆ ಫ್ಯಾನ್ಸ್ ಹರಿದುಬಂದಿತ್ತು. ಗೇಟ್ ನಂಬರ್ 18, 19, 20ರ ಬಳಿ ಅಭಿಮಾನಿ ಸಾಗರ ತಡೆಯಲು ಪೊಲೀಸರು ಹೈರಾಣಾಗಿ ಹೋದರು. ಒಂದು ಹಂತದಲ್ಲಿ ಲಾಠಿಯನ್ನೂ ಬೀಸಿದರು. ಕ್ಷಣ ಕ್ಷಣಕ್ಕೂ ಆರ್‌ಸಿಬಿ ಅಭಿಮಾನಿಗಳ ಸುನಾಮಿ ಹೆಚ್ಚುತ್ತಲೇ ಇತ್ತು. ಆದರೆ, ಗೇಟ್ ನಂ.12ರ ಬಳಿ ಗೇಟ್ ತೆಗೆಯುತ್ತಿದ್ದಂತೆಯೇ ಭಾರೀ ಪ್ರಮಾಣದಲ್ಲಿ ನೂಕು ನುಗ್ಗಲು ನಡೀತು. ಒಬ್ಬರ ಮೇಲೋಬ್ಬರು ಬಿದ್ದರು, ಉಸಿರಾಡೋಕೂ ಕೂಡ ಸಾಧ್ಯವಾಗಲಿಲ್ಲ. ತಕ್ಷಣವೇ ಹತ್ತಿರದ ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆ (ಮಲ್ಯ ರಸ್ತ್ರೆ), ಮಣಿಪಾಲ್‌ಗೆ ದಾಖಲಿಸಲಾಯಿತು. ಆದರೆ, ಬೌರಿಂಗ್ ಆಸ್ಪತ್ರೆಯಲ್ಲಿ 6, ವೈದೇಹಿ ಆಸ್ಪತ್ರೆಯಲ್ಲಿ 4 ಹಾಗೂ ಮಣಿಪಾಲ ಆಸ್ಪತ್ರೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

  • ಬೆಂಗಳೂರು ಕಾಲ್ತುಳಿತಕ್ಕೆ 11 ಸಾವು ಕೇಸ್‌ – ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಸಿಎಂ ಸೂಚನೆ

    ಬೆಂಗಳೂರು ಕಾಲ್ತುಳಿತಕ್ಕೆ 11 ಸಾವು ಕೇಸ್‌ – ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಸಿಎಂ ಸೂಚನೆ

    ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಪ್ರಕರಣದಲ್ಲಿ ಆರ್‌ಸಿಬಿ, ಡಿಎನ್‌ಎ, ಕೆಎಸ್‌ಸಿಎ ಪ್ರತಿನಿಧಿಗಳನ್ನು ಬಂಧಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

    ಕಾಲ್ತುಳಿತ ಪ್ರಕರಣದಲ್ಲಿ ಆರ್‌ಸಿಬಿ ಫ್ರಾಂಚೈಸಿ- ಎ1, ಡಿಎನ್‌ ಎಂಟರ್‌ಟೈನ್‌ಮೆಂಟ್‌ ಸಂಸ್ಥೆ (ಈವೆಂಟ್‌ ಮ್ಯಾನೇಜ್‌ಮೆಂಟ್‌) ಎ2, ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯು ಎ3 ಆರೋಪವನ್ನು ಹೊತ್ತಿವೆ. ಕಬ್ಬನ್‌ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

    ಪ್ರಕರಣ ಸಂಬಂಧ ಕೆಎಸ್‌ಸಿಎ, ಸಮಾರಂಭ ಆಯೋಜಿಸಿದ್ದ ಆರ್‌ಸಿಬಿ ಫ್ರಾಂಚೈಸಿ, ವಿಜಯೋತ್ಸವದ ವೇಳೆ ಭದ್ರತೆ ಹೊಣೆ ಹೊತ್ತಿದ್ದ ಡಿಎನ್‌ಎ ಈವೆಂಟ್‌ ಮ್ಯಾನೇಜ್‌ಮೆಂಟ್‌ಗೆ ನೋಟಿಸ್‌ ಜಾರಿ ಮಾಡಲಾಗಿದೆ.

  • ಕಾಲ್ತುಳಿತಕ್ಕೆ 11 ಮಂದಿ ಬಲಿ ಕೇಸ್ – ನ್ಯಾಯಾಂಗ, ಸಿಐಡಿ ತನಿಖೆಗೆ ಸರ್ಕಾರ ಆದೇಶ

    ಕಾಲ್ತುಳಿತಕ್ಕೆ 11 ಮಂದಿ ಬಲಿ ಕೇಸ್ – ನ್ಯಾಯಾಂಗ, ಸಿಐಡಿ ತನಿಖೆಗೆ ಸರ್ಕಾರ ಆದೇಶ

    ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ (Bengaluru Stampede) ಪ್ರಕರಣವನ್ನು ನ್ಯಾಯಾಂಗ ಮತ್ತು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ತಿಳಿಸಿದರು.

    ಕಾಲ್ತುಳಿತ ಪ್ರಕರಣ ಸಂಬಂಧ ತುರ್ತು ಸುದ್ದಿಗೋಷ್ಠಿ ನಡೆಸಿದ ಸಿಎಂ, ಕೆಲವು ಮಾಹಿತಿ ಸಿಕ್ಕಿದ ಮೇಲೆ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇವೆ. ತನಿಖೆಯನ್ನ ಸಿಐಡಿಗೆ ವಹಿಸಲಾಗಿದೆ. 2 ಎಫ್‌ಐಆರ್ ಅನ್ನ ಸಿಐಡಿಗೆ ವಹಿಸಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಬೆಳಗ್ಗಿನ ಜಾವ 4 ಗಂಟೆ ವರೆಗೆ ಕೆಲಸ ಮಾಡಿದ್ದ ಪೊಲೀಸರಿಗೆ ಮತ್ತೆ ಬಂದೋಬಸ್ತ್‌ ನೀಡಲು ಆಗ್ತಿತ್ತಾ? – ಸರ್ಕಾರಕ್ಕೆ ಹೈಕೋರ್ಟ್‌ ಚಾಟಿ

    ಎರಡು ರೀತಿಯಲ್ಲಿ ತನಿಖೆಗೆ ಸರ್ಕಾರ ನಿರ್ಧರಿಸಿದೆ. ನ್ಯಾ.ಮೈಕಲ್ ಡಿ ಕುನ್ಹಾ ನೇತೃತ್ವದಲ್ಲಿ ಏಕ ಸದಸ್ಯ ಆಯೋಗದ ತನಿಖೆ ಹಾಗೂ ಸಿಐಡಿ ನೇತೃತ್ವದಲ್ಲಿ ತನಿಖೆಗೆ ನಿರ್ಧರಿಸಲಾಗಿದೆ ಎಂದರು.

    ಯಾರನ್ನ ಅರೆಸ್ಟ್ ಮಾಡಬೇಕು ಅಂತ ಹೇಳಿದ್ದೇವೆ. ಪ್ರತಿನಿಧಿಗಳನ್ನ ಬಂಧನ ಮಾಡಿದ್ದೇವೆ. ಇಂಟಲಿಜೆನ್ಸ್ ಫೇಲ್ ಆಗಿರೋ ಬಗ್ಗೆ ಚರ್ಚೆ ಆಗಿದೆ. ವರದಿ ಬಂದ ಮೇಲೆ ಕ್ರಮದ ಬಗ್ಗೆ ಕ್ರಮ ಎಂದು ಸಿಎಂ ತಿಳಿಸಿದರು. ಇದನ್ನೂ ಓದಿ: Chinnaswamy Stampede Case – ಆರ್‌ಸಿಬಿ ಫ್ರಾಂಚೈಸಿ, ಕೆಎಸ್‌ಸಿಎ ವಿರುದ್ಧ FIR

  • ಇಷ್ಟು ಜನ ಸೇರ್ತಾರೆ ಅಂತಾ ಗೊತ್ತಿರ್ಲಿಲ್ಲ ಅನ್ನೋದು ಎಷ್ಟು ಸರಿ? – ಕಾಲ್ತುಳಿತ ದುರಂತಕ್ಕೆ ರಕ್ಷಿತಾ ಬೇಸರ

    ಇಷ್ಟು ಜನ ಸೇರ್ತಾರೆ ಅಂತಾ ಗೊತ್ತಿರ್ಲಿಲ್ಲ ಅನ್ನೋದು ಎಷ್ಟು ಸರಿ? – ಕಾಲ್ತುಳಿತ ದುರಂತಕ್ಕೆ ರಕ್ಷಿತಾ ಬೇಸರ

    – ನನಗೂ ಮಗ ಇದ್ದಾನೆ, ಏನಾದ್ರೂ ಆದ್ರೆ ಹೇಗೆ ತಡ್ಕೊಳ್ಳೋಕೆ ಆಗುತ್ತೆ ಎಂದ ನಟಿ

    ಆರ್‌ಸಿಬಿ (RCB) ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ದುರಂತಕ್ಕೆ ನಟಿ ರಕ್ಷಿತಾ ಪ್ರೇಮ್‌ (Rakshitha Prem) ಬೇಸರ ವ್ಯಕ್ತಪಡಿಸಿದ್ದಾರೆ. ಆರ್‌ಸಿಬಿ ಅಭಿಮಾನಿಗಳ ಸಾವು ನೆನೆದು ನಟಿ ಭಾವುಕರಾಗಿದ್ದಾರೆ.

    ನಾನು ಕೂಡ ಆರ್‌ಸಿಬಿ ದೊಡ್ಡ ಫ್ಯಾನ್. ರಾತ್ರಿಯೆಲ್ಲ ಇಲ್ಲಿ ಬೈಕ್ ರ‍್ಯಾಲಿ ಮಾಡ್ತಿದ್ರು, ಸಂಭ್ರಮ ಪಡ್ತಿದ್ರು. 18ನೇ ವರ್ಷಕ್ಕೆ ಕಪ್ ಗೆದ್ದ ಸಂಭ್ರಮ ಮನೆ ಮಾಡಿತ್ತು. ಆದರೆ, ನಿನ್ನೆ ನಡೆದ ಘಟನೆ ತುಂಬಾ ನೋವು ತಂದಿದೆ ಎಂದು ನಟಿ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಬೆಳಗ್ಗಿನ ಜಾವ 4 ಗಂಟೆ ವರೆಗೆ ಕೆಲಸ ಮಾಡಿದ್ದ ಪೊಲೀಸರಿಗೆ ಮತ್ತೆ ಬಂದೋಬಸ್ತ್‌ ನೀಡಲು ಆಗ್ತಿತ್ತಾ? – ಸರ್ಕಾರಕ್ಕೆ ಹೈಕೋರ್ಟ್‌ ಚಾಟಿ

    ವಿಧಾನಸೌದದ ಮುಂದೆ ಸ್ಟೇಡಿಯಂ ಮುಂದೆ ಅಷ್ಟೂ ಜನ ನಿಂತಿದ್ರು. ಆರ್‌ಸಿಬಿ ಪ್ರೈವೈಟ್ ಪ್ರಾಂಚೈಸಿ, ಎರಡ್ಮೂರು ದಿನ ಕಾದು ಕಾರ್ಯಕ್ರಮಕ್ಕೆ ಟಿಕೆಟ್ ಮಾಡಿದ್ರೆ ಇಷ್ಟು ನೂಕು ನುಗ್ಗಲು ಆಗ್ತಿರಲಿಲ್ಲ. ಓಪನ್ ಇನ್ವೈಟ್ ಮಾಡಿದ್ದು ತಪ್ಪು. ಅಲ್ಲದೇ ಪೊಲೀಸರ ಮೇಲೆ ತಪ್ಪು ಹೊರೆಸೋದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

    ಚಿಕ್ಕ ಮಕ್ಕಳು, ಮಹಿಳೆಯರು, ಯುವಕರಿದ್ದರು. ಯಾರು ಇದಕ್ಕೆ ಉತ್ತರ ಕೊಡ್ತಾರೆ? ಇದಕ್ಕೆ ಹೊಣೆ ಯಾರು? ಇದು ವ್ಯವಸ್ಥೆಯ ವಿಫಲತೆ. ಇಷ್ಟು ಜನ ಸೇರ್ತಾರೆ ಅಂತಾ ಗೊತ್ತಿರ್ಲಿಲ್ಲ ಅನ್ನೋದು ಎಷ್ಟು ಸರಿ? ನನಗೂ ಮಗ ಇದ್ದಾನೆ. ಏನಾದ್ರೂ ಆದ್ರೆ ಹೇಗೆ ತಡ್ಕೊಳ್ಳೋಕೆ ಆಗುತ್ತೆ ಎಂದು ದುರಂತಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: Chinnaswamy Stampede Case – ಆರ್‌ಸಿಬಿ ಫ್ರಾಂಚೈಸಿ, ಕೆಎಸ್‌ಸಿಎ ವಿರುದ್ಧ FIR

  • Chinnaswamy Stampede Case – ಆರ್‌ಸಿಬಿ ಫ್ರಾಂಚೈಸಿ, ಕೆಎಸ್‌ಸಿಎ ವಿರುದ್ಧ FIR

    Chinnaswamy Stampede Case – ಆರ್‌ಸಿಬಿ ಫ್ರಾಂಚೈಸಿ, ಕೆಎಸ್‌ಸಿಎ ವಿರುದ್ಧ FIR

    ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಕ್ಟರಿ ಸೆಲೆಬ್ರೇಷನ್ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ 11 ಮಂದಿ ಬಲಿಯಾಗಿದ್ದಾರೆ. ಈ ಪ್ರಕರಣದ (Chinnaswamy Stampede Case) ತನಿಖೆ ನಡೆಸಿರುವ ಇದೀಗ ಯುಡಿಆರ್ ಬದಲಿಗೆ ಎಫ್‌ಐಆರ್‌ (FIR) ದಾಖಲಿಸಿದ್ದಾರೆ.

    ಆರ್‌ಸಿಬಿ ಫ್ರಾಂಚೈಸಿ, ಕೆಎಸ್‌ಸಿಎ ಮತ್ತು ಡಿಎನ್‌ಎ ಇವೆಂಟ್ ಮ್ಯಾನೇನ್ಮೆಂಟ್‌ ಸಂಸ್ಥೆ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್‌ 105 (ಮಾನವ ನರಹತ್ಯೆ), BNS 106, 118(1), 118(2), 190, 132, 125A,125(B) ಅಡಿಯಲ್ಲಿ ಕೇಸ್ ದಾಖಲು ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಂಡ್ಯ | ಮದ್ವೆಗೆ ಹುಡುಗಿ ನೋಡಿಕೊಂಡು ಬೆಂಗಳೂರಿಗೆ ಹೋದವನು ಮನೆಗೆ ಹಿಂತಿರುಗಿದ್ದು ಶವವಾಗಿ…

    ಈ ಮೊದಲು ಯುಡಿಆರ್‌ (UDR) ದಾಖಲಿಸಲಾಗಿತ್ತು, ಇದು ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಈ ಬಗ್ಗೆ ʻಪಬ್ಲಿಕ್‌ ಟಿವಿʼ ಪ್ರಶ್ನೆ ಮಾಡಿತ್ತು. ಯುಡಿಆರ್ ಅಂದ್ರೆ, ಅನ್ ನ್ಯಾಚುರಲ್ ಡೆತ್ ರಿಪೋರ್ಟ್ (ಅಸಹಜ ಸಾವಿನ ವರದಿ) ಈ ಬೆನ್ನಲ್ಲೇ ಎಚ್ಚೆತ್ತ ಪೊಲೀಸ್‌ ಇಲಾಖೆ ಎಫ್‌ಐಆರ್‌ ದಾಖಲಿಸಿದೆ. ಇದನ್ನೂ ಓದಿ: ಜಮೀರ್ ಮಗ, ರಿಜ್ವಾನ್ ಮಗ, ಸಿಎಂ ಮೊಮ್ಮಗನಿಗಾಗಿ ವಿಧಾನಸೌಧದಲ್ಲಿ ಕಾರ್ಯಕ್ರಮ ಮಾಡಿದ್ರಾ: ಸರ್ಕಾರದ ವಿರುದ್ಧ ಪ್ರತಾಪ್‌ ಸಿಂಹ ಕಿಡಿ

    ಅನುಮಾನ ಮೂಡಲು ಮೂರು ಕಾರಣ
    ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯನ್ನು (KSCA) ಹೊಣೆಗಾರರನ್ನಾಗಿ ಮಾಡಿಲ್ಲ. ಪೊಲೀಸ್ ಇಲಾಖೆಯ ಅನುಮತಿ ಪಡೆಯದೇ ಸಾಮಾಜಿಕ ಜಾಲತಾಣದಲ್ಲಿ ಇವತ್ತು (ಜೂ. 4) ಆರ್‌ಸಿಬಿ ತಂಡದ ವಿಕ್ಟರಿ ಪರೇಡ್ ಇದೆ ಅಂತ ಪ್ರಕಟಣೆ ನೀಡಿ, ಆ ಮೂಲಕ ಲಕ್ಷಾಂತರ ಜನರು ಜಮಾವಣೆಯಾಗಲು ನೇರ ಕಾರಣವಾಗಿರುವ ಆರ್‌ಸಿಬಿ ಮ್ಯಾನೇಜ್ ಮೆಂಟ್ ಅನ್ನು ಹೊಣೆಗಾರರನ್ನಾಗಿಸಿಲ್ಲ. ಇನ್ನು, ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಆಟಗಾರರಿಗೆ ಸನ್ಮಾನ ಕಾರ್ಯಕ್ರಮವನ್ನು ನಿರ್ವಹಿಸುವ ಜವಾಬ್ದಾರಿ ಹೊತ್ತಿದ್ದ ಡಿಎನ್ಎ ಇವೆಂಟ್ ಮ್ಯಾನೇಜ್ ಮೆಟ್ ಸಂಸ್ಥೆಯನ್ನು ಹೊಣೆಗಾರರನ್ನಾಗಿ ಮಾಡಿಲ್ಲ. ಇದು ಅನುಮಾನಕ್ಕೆ ಕಾರಣವಾಗಿದೆ. ಇದನ್ನೂ ಓದಿ: Stampede Case | ಮೃತಪಟ್ಟ 11 ಸಂತ್ರಸ್ತರ ಕುಟುಂಬಗಳಿಗೆ RCB ಆಡಳಿತ ಮಂಡಳಿಯಿಂದ ತಲಾ 10 ಲಕ್ಷ ರೂ. ಪರಿಹಾರ ಘೋಷಣೆ

    ಏನಿದು ಪ್ರಕರಣ?
    ರಾಯಲ್ ಚಾಲೆಂಜರ್ಸ್ ಬೆಂಗಳೂರು 18 ವರ್ಷಗಳ ಬಳಿಕ ಐಪಿಎಲ್ ಚಾಂಪಿಯನ್ ಪಟ್ಟವನ್ನೇನೋ ಅಲಂಕರಿಸಿದೆ. ಆದರೆ, ಆರ್‌ಸಿಬಿ ಫ್ಯಾನ್ಸ್ ಐತಿಹಾಸಿಕ ಕ್ಷಣದ ಸಂಭ್ರಮದಲ್ಲಿ ದುರಂತ ಸಂಭವಿಸಿದೆ. 10ಕ್ಕೂ ಹೆಚ್ಚು ಅಭಿಮಾನಿಗಳು ಸಾವನ್ನಪ್ಪಿ ಸೂತಕವಾಗಿ ಆಗಿಬಿಟ್ಟಿದೆ. ಪಂಜಾಬ್ ವಿರುದ್ಧ ಬೆಂಗಳೂರು 6 ರನ್‌ಗಳ ಭರ್ಜರಿ ಜಯ ಸಾಧಿಸ್ತಿದ್ದಂತೆಯೇ ಸಿಲಿಕಾನ್ ಸಿಟಿಯಲ್ಲಿ ನಿನ್ನೆ ರಾತ್ರಿಯೇ ದೀಪಾವಳಿಯಂಥಹ ಸಂಭ್ರಮ ಇತ್ತು. ಇವತ್ತು ಇಡೀ ದಿನ ಹೆಚ್‌ಎಎಲ್ ಏರ್‌ಪೋರ್ಟ್ ರೋಡ್, ತಾಜ್ ವೆಸ್ಟ್ ಎಂಡ್ ಹೊಟೇಲ್ ರೋಡ್, ವಿಧಾನಸೌಧ, ಚಿನ್ನಸ್ವಾಮಿ ಸ್ಟೇಡಿಯಂ ರಸ್ತೆ ಸುತ್ತ ಮುತ್ತ ರೆಡ್ ಆರ್ಮಿ ಎಲ್ಲಾ ಕಡೆ ಆರ್‌ಸಿಬಿ ತಂಡಕ್ಕೆ ತಮ್ಮ ಅಭಿಮಾನ ತೋರಿದರು. ಇದನ್ನೂ ಓದಿ: ಮಗಳಿಗೆ ಮದುವೆ ಮಾಡಲು ಯೋಜಿಸಿದ್ದೆವು, ನಮ್ಮ ಕಷ್ಟ ಯಾವ ತಂದೆ-ತಾಯಿಗೂ ಬೇಡ: ಮೃತ ಟೆಕ್ಕಿ ತಂದೆ ಕಣ್ಣೀರು

    ಇವತ್ತು ದಿಢೀರನೆ ವಿಜಯೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದರಿಂದ ಅಭಿಮಾನಿಗಳ ಸುನಾಮಿಯೇ ಸೃಷ್ಟಿ ಆಯ್ತು… ಉಚಿತ ಪ್ರವೇಶ ಆಗಿದ್ದರಿಂದ ಕ್ರೀಡಾಂಗಣಕ್ಕೆ ಫ್ಯಾನ್ಸ್ ಹರಿದುಬಂದಿತ್ತು. ಗೇಟ್ ನಂಬರ್ 18, 19, 20ರ ಬಳಿ ಅಭಿಮಾನಿ ಸಾಗರ ತಡೆಯಲು ಪೊಲೀಸರು ಹೈರಾಣಾಗಿ ಹೋದರು. ಒಂದು ಹಂತದಲ್ಲಿ ಲಾಠಿಯನ್ನೂ ಬೀಸಿದರು. ಕ್ಷಣ ಕ್ಷಣಕ್ಕೂ ಆರ್‌ಸಿಬಿ ಅಭಿಮಾನಿಗಳ ಸುನಾಮಿ ಹೆಚ್ಚುತ್ತಲೇ ಇತ್ತು. ಆದರೆ, ಗೇಟ್ ನಂ.12ರ ಬಳಿ ಗೇಟ್ ತೆಗೆಯುತ್ತಿದ್ದಂತೆಯೇ ಭಾರೀ ಪ್ರಮಾಣದಲ್ಲಿ ನೂಕು ನುಗ್ಗಲು ನಡೀತು. ಒಬ್ಬರ ಮೇಲೋಬ್ಬರು ಬಿದ್ದರು, ಉಸಿರಾಡೋಕೂ ಕೂಡ ಸಾಧ್ಯವಾಗಲಿಲ್ಲ. ತಕ್ಷಣವೇ ಹತ್ತಿರದ ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆ (ಮಲ್ಯ ರಸ್ತ್ರೆ), ಮಣಿಪಾಲ್‌ಗೆ ದಾಖಲಿಸಲಾಯಿತು. ಆದರೆ, ಬೌರಿಂಗ್ ಆಸ್ಪತ್ರೆಯಲ್ಲಿ 6, ವೈದೇಹಿ ಆಸ್ಪತ್ರೆಯಲ್ಲಿ 4 ಹಾಗೂ ಮಣಿಪಾಲ ಆಸ್ಪತ್ರೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.