Tag: RCBvsCSK

  • RCBvsCSK ರಣರೋಚಕ ಪಂದ್ಯದಲ್ಲಿ ಎರಡೆರಡು ದಾಖಲೆ ಉಡೀಸ್‌

    RCBvsCSK ರಣರೋಚಕ ಪಂದ್ಯದಲ್ಲಿ ಎರಡೆರಡು ದಾಖಲೆ ಉಡೀಸ್‌

    ಬೆಂಗಳೂರು: 16ನೇ ಆವೃತ್ತಿಯ ಐಪಿಎಲ್‌ನಲ್ಲಿ (IPL 2023) ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ (CSK) ನಡುವೆ ನಡೆದ ಪಂದ್ಯ ಎರಡೆರಡು ದಾಖಲೆಗಳನ್ನ ಉಡೀಸ್‌ ಮಾಡಿದೆ. ಈ ಪಂದ್ಯ ಜಿಯೋ ಸಿನಿಮಾ (Jio Cinema) ಆ್ಯಪ್‌ನಲ್ಲಿ ಹಿಂದೆಂದಿಗಿಂತಲೂ ಅತಿಹೆಚ್ಚು ಮಂದಿ ವೀಕ್ಷಣೆ ಮಾಡಿರುವುದು ಒಂದು ದಾಖಲೆಯಾದರೆ, ಈ ಆವೃತ್ತಿಯಲ್ಲಿ ಅತಿಹೆಚ್ಚು ರನ್‌ ದಾಖಲಾದ ಮೊದಲ ಪಂದ್ಯ ಎಂಬುದು ಮತ್ತೊಂದು ವಿಶೇಷ.

    ಆರ್‌ಸಿಬಿ ಹಾಗೂ ಸಿಎಸ್‌ಕೆ ನಡುವೆ ನಡೆದ ರಣರೋಚಕ ಪಂದ್ಯದಲ್ಲಿ ಬರೋಬ್ಬರಿ 33 ಸಿಕ್ಸರ್‌, 24 ಬೌಂಡರಿಗಳು ಸಿಡಿದವು. ಸಿಎಸ್‌ಕೆ ಪರ 17 ಸಿಕ್ಸರ್‌, 12 ಬೌಂಡರಿಗಳು, ಆರ್‌ಸಿಬಿ ಪರ 16 ಸಿಕ್ಸರ್‌ ಹಾಗೂ 12 ಬೌಂಡರಿಗಳು ದಾಖಲಾದವು. ಇತ್ತಂಡಗಳ ಸಿಕ್ಸರ್‌, ಬೌಂಡರಿ ಹೊಡಿಬಡಿ ಆಟದಿಂದ 240 ಎಸೆತಗಳಲ್ಲಿ ಬರೋಬ್ಬರಿ 444 ರನ್‌ ಸಿಡಿಯಿತು, ಸಿಕ್ಸರ್‌, ಬೌಂಡರಿಗಳಿಂದಲೇ 294 ರನ್‌ ದಾಖಲಾಗಿತ್ತು. ಇದು ಈ ಐಪಿಎಲ್‌ ಆವೃತ್ತಿಯಲ್ಲಿ ಅತಿಹೆಚ್ಚು ರನ್‌ ದಾಖಲಾದ ಮೊದಲ ಪಂದ್ಯ ಎನಿಸಿಕೊಂಡಿತು.

    ಇದೇ ಆವೃತ್ತಿಯಲ್ಲಿ ಕೋಲ್ಕತ್ತಾ ನೈಟ್‌ರೈಡರ್ಸ್‌ ಹಾಗೂ ಸನ್‌ ರೈಸರ್ಸ್‌ ಹೈದರಾಬಾದ್‌ ನಡುವಿನ ಪಂದ್ಯದಲ್ಲಿ 240 ಎಸೆತಗಳಲ್ಲಿ 433 ರನ್‌ ಹಾಗೂ ಕೆಕೆಆರ್‌-ಗುಜರಾತ್‌ ಟೈಟಾನ್ಸ್‌ ನಡುವಿನ ಪಂದ್ಯದಲ್ಲಿ 411 ರನ್‌ ದಾಖಲಾಗಿತ್ತು. ಇದನ್ನೂ ಓದಿ: ʻಈ ಸಲ ಕಪ್‌ ನಮ್ದೆʼ ಅಂತಿದ್ದಾರೆ ನಟಿ ಅಮೂಲ್ಯ ಮಕ್ಕಳು – ಪುಟಾಣಿ ಫ್ಯಾನ್ಸ್‌ಗೆ ನೆಟ್ಟಿಗರು ಫಿದಾ

    ದಾಖಲೆ ಬರೆದ ಜಿಯೋ ಆ್ಯಪ್:
    ಕಳೆದ ವಾರ ರಾಜಸ್ಥಾನ್‌ ರಾಯಲ್ಸ್‌ ನಡುವೆ ನಡೆದ ಪಂದ್ಯದ ವೇಳೆ ಸಿಎಸ್‌ಕೆ ನಾಯಕ ಧೋನಿ ಮತ್ತು ರವೀಂದ್ರ ಜಡೇಜಾ ಅವರು 20ನೇ ಓವರ್‌ನಲ್ಲಿ ಕ್ರೀಸ್‌ನಲ್ಲಿದ್ದರು. ಈ ವೇಳೆ ಜಿಯೋ ಸಿನಿಮಾದಲ್ಲಿ 2.2 ಕೋಟಿ ಮಂದಿ ವೀಕ್ಷಣೆ ಮಾಡುತ್ತಿದ್ದರು. ಇದು ಈವರೆಗೆ ಜಿಯೋ ಸಿನಿಮಾ ಆ್ಯಪ್‌ನಲ್ಲಿ ಅತಿ ಹೆಚ್ಚು ವೀಕ್ಷಣೆ ಕಂಡ ಐಪಿಎಲ್‌ ಪಂದ್ಯವಾಗಿತ್ತು. ಈ ಹಿಂದೆ ಲಕ್ನೋ ವಿರುದ್ಧದ ಪಂದ್ಯದಲ್ಲಿ ಧೋನಿ ಬ್ಯಾಟಿಂಗ್‌ ಮಾಡುತ್ತಿದ್ದಾಗ 1.7 ಕೋಟಿ ಮಂದಿ ಜಿಯೋ ಸಿನಿಮಾವನ್ನು ವೀಕ್ಷಣೆ ಮಾಡುತ್ತಿದ್ದರು. ಆದ್ರೆ ಸೋಮವಾರ ಆರ್‌ಸಿಬಿ ನಡುವಿನ ಪಂದ್ಯವನ್ನ 2.4 ಕೋಟಿ ಮಂದಿ ವೀಕ್ಷಣೆ ಮಾಡಿದ್ದಾರೆ.

    18.4 ಓವರ್‌ಗಳಲ್ಲಿ 2.3 ಕೋಟಿ ಇದ್ದ ವೀಕ್ಷಕರ ಸಂಖ್ಯೆ 19 ಹಾಗೂ 20ನೇ ಓವರ್‌ನಲ್ಲಿ 2.4 ಕೋಟಿಗೆ ಏರಿತ್ತು. ಇದು ಅತಿ ಹೆಚ್ಚು ವೀಕ್ಷಣೆ ಕಂಡ ಮೊದಲ ಪಂದ್ಯವಾಗಿದ್ದು, ಹಿಂದೆಲ್ಲಾ ದಾಖಲೆಗಳನ್ನ ಉಡೀಸ್‌ ಮಾಡಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಆರ್‌ಸಿಬಿ, ಚೆನ್ನೈ ಮ್ಯಾಚ್ – ಟಿಕೆಟ್‍ಗಾಗಿ ಮುಗಿಬಿದ್ದ ಅಭಿಮಾನಿಗಳಿಗೆ ಲಾಠಿ ಚಾರ್ಜ್

    ಅತಿ ಹೆಚ್ಚು ವೀಕ್ಷಣೆ ಕಂಡ ಪಂದ್ಯಗಳು
    1. ಚೆನ್ನೈ ಸೂಪರ್‌ ಕಿಂಗ್ಸ್‌ Vs ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು – 2.4 ಕೋಟಿ
    2. ಚೆನ್ನೈ ಸೂಪರ್‌ ಕಿಂಗ್ಸ್‌ Vs ರಾಜಸ್ಥಾನ ರಾಯಲ್ಸ್‌ – 2.2 ಕೋಟಿ
    3. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು Vs ಲಕ್ನೋ ಸೂಪರ್‌ ಜೈಂಟ್ಸ್‌ – 1.8 ಕೋಟಿ
    4. ಮುಂಬೈ ಇಂಡಿಯನ್ಸ್‌ Vs ಡೆಲ್ಲಿ ಕ್ಯಾಪಿಟಲ್ಸ್‌ – 1.7 ಕೋಟಿ
    5. ಚೆನ್ನೈ ಸೂಪರ್‌ ಕಿಂಗ್ಸ್‌ Vs ಲಕ್ನೋ ಸೂಪರ್‌ ಜೈಂಟ್ಸ್‌ – 1.7 ಕೋಟಿ
    6. ಚೆನ್ನೈ ಸೂಪರ್‌ ಕಿಂಗ್ಸ್‌ Vs ಗುಜರಾತ್‌ ಟೈಟಾನ್ಸ್‌ – 1.6 ಕೋಟಿ

  • IPL 2023: ಕಣಕ್ಕಿಳಿಯಲು RCB, CSK ಬಲಿಷ್ಠ ತಂಡ ರೆಡಿ – ಈ ಸಲ ಕಪ್ ಯಾರದ್ದು?

    IPL 2023: ಕಣಕ್ಕಿಳಿಯಲು RCB, CSK ಬಲಿಷ್ಠ ತಂಡ ರೆಡಿ – ಈ ಸಲ ಕಪ್ ಯಾರದ್ದು?

    ಬೆಂಗಳೂರು: ಮಾರ್ಚ್ 31 ರಿಂದ 16ನೇ ಆವೃತ್ತಿಯ ಐಪಿಎಲ್ (IPL 2023) ಆರಂಭವಾಗುತ್ತಿದ್ದು, ಮಾಜಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ (CSK) ಹಾಗೂ ಹಾಲಿ ಚಾಂಪಿಯನ್ಸ್ ಗುಜರಾತ್ ಟೈಟಾನ್ಸ್ (GT) ತಂಡಗಳು ಉದ್ಘಾಟನಾ ಪಂದ್ಯದಲ್ಲಿ ಸೆಣಸಲಿವೆ.

    ಐಪಿಎಲ್ ಆರಂಭಕ್ಕೆ ದಿನಗಣನೆ ಬಾಕಿಯಿರುವಾಗಲೇ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (BCB) ತಂಡಗಳು ಬಲಿಷ್ಠ ತಂಡದ ಪಟ್ಟಿಯನ್ನ ಬಿಡುಗಡೆ ಮಾಡಿವೆ. ಇದನ್ನೂ ಓದಿ: IPL 2023: ಈ ಬಾರಿ ಸಿಎಸ್‌ಕೆ ಕಪ್ ಗೆಲ್ಲಲ್ಲ, ಆರ್‌ಸಿಬಿ ಗೆದ್ದರೆ ಖುಷಿ – ಭಾರತದ ಮಾಜಿ ಕ್ರಿಕೆಟಿಗ ಭವಿಷ್ಯ

    ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿಯವರ (Virat Kohli) ಅದ್ಭುತ ಫಾರ್ಮ್ನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲುವ ಕನಸಿನೊಂದಿಗೆ ಕಣಕ್ಕಿಳಿಯುತ್ತಿದೆ. ಇಲ್ಲಿಯವರೆಗೂ ಬೆಂಗಳೂರು ಮೂಲದ ತಂಡ ಐಪಿಎಲ್ ಟೂರ್ನಿಯಲ್ಲಿ ಒಮ್ಮೆಯೂ ಚಾಂಪಿಯನ್ ಆಗಿಲ್ಲ. ಆದ್ದರಿಂದ ಈ ಬಾರಿ ತನ್ನ ಪ್ರಶಸ್ತಿ ಗೆಲುವಿನ ಬರ ನೀಗಿಸಿಕೊಳ್ಳಲಿದೆಯೇ ಎಂಬುದನ್ನ ಕಾದು ನೋಡಬೇಕಿದೆ. ಇದನ್ನೂ ಓದಿ: IPL 2023: RCB ತಂಡಕ್ಕೆ ಆನೆ ಬಲ – ವಿಲ್‌ ಜಾಕ್ಸ್‌ ಬದಲಿಗೆ ಕಿವೀಸ್‌ ಸ್ಟಾರ್‌ ಆಲ್‌ರೌಂಡರ್‌ ಸೇರ್ಪಡೆ

    2022ರ ಐಪಿಎಲ್ ಟೂರ್ನಿಯಲ್ಲಿ ಕೊಹ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶನದ ಹೊರತಾಗಿಯೂ ಆರ್‌ಸಿಬಿ ಪ್ಲೇ ಆಫ್‌ಗೆ ಪ್ರವೇಶಿತ್ತು. ಮೊದಲ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗೆದ್ದು, ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ತಾನ್ ರಾಯಲ್ಸ್ ವಿರುದ್ಧ ನಡೆದ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಆರ್‌ಸಿಬಿ ಸೋತು ನಿರಾಶೆ ಅನುಭವಿಸಿತ್ತು.

    ಕಳೆದ ಬಾರಿ ಪ್ಲೆ ಆಫ್‌ನಿಂದ ಹೊರಗುಳಿದಿದ್ದ ಚೆನ್ನೈ ಸೂಪರ್ ಕಿಂಗ್ಸ್ ಈ ಬಾರಿ ಹಲವು ಆಟಗಾರರ ಬದಲಾವಣೆಯೊಂದಿಗೆ ಬಲಿಷ್ಠ ತಂಡವಾಗಿ ಹೊರಹೊಮ್ಮಿದೆ. 16.25 ಕೋಟಿ ರೂ. ದುಬಾರಿ ಬೆಲೆಗೆ ಬಿಕರಿಯಾದ ಇಂಗ್ಲೆಂಡ್ ತಂಡದ ಆಲ್‌ರೌಂಡರ್ ಬೆನ್‌ಸ್ಟೋಕ್ಸ್ ಸಹ ಸಿಎಸ್‌ಕೆ ತಂಡಲ್ಲಿದ್ದು, ಆನೆಬಲ ಬಂದಂತಾಗಿದೆ.

    ಅಲ್ಲದೇ ಈಗಾಗಲೇ ಟಿ20, ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್‌ಗಳಲ್ಲಿ ನಿವೃತ್ತಿಯಾಗಿರುವ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಎಂ.ಎಸ್ ಧೋನಿ (MS Dhoni) ಈ ಬಾರಿ ಕೊನೆಯ ಐಪಿಎಲ್ ಆಡಲಿದ್ದಾರೆ. ಆದ್ದರಿಂದ ಚೆನ್ನೈ ತಂಡ ಮಾಹಿಗೆ ಗೆಲುವಿನ ವಿದಾಯ ನೀಡಲು ಕಪ್ ಗೆಲ್ಲಲ್ಲೇಬೇಕೆಂದು ಪಣ ತೊಟ್ಟಿದೆ.

    ಆರ್‌ಸಿಬಿ ತಂಡದ ಬಲಿಷ್ಠ ಪ್ಲೇಯಿಂಗ್ -11:
    ಫಾಫ್ ಡು ಪ್ಲೆಸಿಸ್ (ನಾಯಕ, ಓಪನರ್) ವಿರಾಟ್ ಕೊಹ್ಲಿ (ಓಪನರ್), ರಜತ್ ಪಾಟಿದಾರ್ (ಬ್ಯಾಟ್ಸ್ಮನ್), ಗ್ಲೆನ್ ಮ್ಯಾಕ್ಸ್ವೆಲ್ (ಆಲ್‌ರೌಂಡರ್), ಮಹಿಪಾಲ್ ಲೊಮ್ರೋರ್ (ಬ್ಯಾಟ್ಸ್ಮನ್), ದಿನೇಶ್ ಕಾರ್ತಿಕ್ (ವಿ.ಕೀ), ಶಹಬಾಝ್ ಅಹ್ಮದ್ (ಆಲ್‌ರೌಂಡರ್), ವಾನಿಂದು ಹಸರಂಗ (ಆಲ್‌ರೌಂಡರ್), ಹರ್ಷಲ್ ಪಟೇಲ್ (ವೇಗದ ಬೌಲರ್), ಜೋಶ್ ಹೇಝಲ್‌ವುಡ್ (ವೇಗದ ಬೌಲರ್), ಮೊಹಮ್ಮದ್ ಸಿರಾಜ್ (ವೇಗದ ಬೌಲರ್).

    ಟೂರ್ನಿಗೆ ಆರ್‌ಸಿಬಿ ತಂಡ:
    ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಸುಯಶ್ ಪ್ರಭುದೇಸಾಯಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್(ವಿ.ಕೀ), ಅನುಜ್ ರಾವತ್, ಫಿನ್ ಆಲೆನ್, ಗ್ಲೆನ್ ಮ್ಯಾಕ್ಸ್ವೆಲ್, ವಾನಿಂದು ಹಸರಂಗ, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಡೇವಿಡ್ ವಿಲ್ಲೀ, ಕರಣ್ ಶರ್ಮಾ, ಮಹಿಪಾಲ್ ಲೊಮ್ರೋರ್, ಮೊಹಮ್ಮದ್ ಸಿರಾಜ್, ಜಾಶ್ ಹೇಝಲ್‌ವುಡ್, ಸಿದ್ದಾರ್ಥ್ ಕೌಲ್, ಆಕಾಶ್ ದೀಪ್, ರೀಸ್ ಟಾಪ್ಲಿ, ಹಿಮಾಂಶು ಶರ್ಮಾ, ಮೈಕಲ್ ಬ್ರೇಸ್‌ವೆಲ್, ಮನೋಜ್ ಭಾಂಡಗಿ, ರಾಜನ್ ಕುಮಾರ್, ಅವಿನಾಶ್ ಸಿಂಗ್, ಸೋನು ಯಾದವ್.

    ಚೆನ್ನೈ ಸೂಪರ್ ಕಿಂಗ್ಸ್ನಲ್ಲಿ ಪ್ಲೇಯಿಂಗ್-11:
    ಎಂ.ಎಸ್.ಧೋನಿ (ನಾಯಕ), ಡಿವೋನ್ ಕಾನ್ವೆ, ಋತುರಾಜ್ ಗಾಯಕ್ವಾಡ್, ಬೆನ್ ಸ್ಟೋಕ್ಸ್, ಅಂಬಟಿ ರಾಯುಡು, ಸುಭ್ರಾಂಶು ಸೇನಾಪತಿ, ಮೊಯಿನ್ ಅಲಿ, ಶಿವಮ್ ದುಬೆ, ರವೀಂದ್ರ ಜಡೇಜಾ, ದೀಪಕ್ ಚಹಾರ್, ಮಹೇಶ್ ತೀಕ್ಷಣ ಹಾಗೂ ಮುಖೇಶ್ ಛೌಧರಿ.

    ಟೂರ್ನಿಗೆ ಸಿಎಸ್‌ಕೆ ತಂಡ:
    ಎಂ.ಎಸ್ ಧೋನಿ (ನಾಯಕ), ಡಿವೊನ್ ಕಾನ್ವೇ, ಋತುರಾಜ್ ಗಾಯಕ್ವಾಡ್, ಅಂಬಟಿ ರಾಯುಡು, ಸುಭ್ರಾಂಶು ಸೇನಾಪತಿ, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಡ್ವೈನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ರವೀಂದ್ರ ಜಡೇಜಾ, ಅಜಿಂಕ್ಯ ರಹಾನೆ, ಬೆನ್ ಸ್ಟೋಕ್ಸ್, ಮುಖರ್ ದೇಶ್‌ಗಾವ್, ತುಷಾರ್ ದೇಶ್‌ಗಾವ್, ತುಷಾರ್ ದೇಶ್‌ಗಾವ್, , ಮಥೀಶ ಪತಿರಾನ, ಸಿಮರ್ಜೀತ್ ಸಿಂಗ್, ದೀಪಕ್ ಚಾಹರ್, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ, ಶೇಕ್ ರಶೀದ್, ನಿಶಾಂತ್ ಸಿಧು, ಅಜಯ್ ಮಂಡಲ್, ಸಿಸಂದ ಮಗಳ.