Tag: real estate

  • ದಾವಣಗೆರೆ | ರೌಡಿಶೀಟರ್ ಮುಖಕ್ಕೆ ಪೆಪ್ಪರ್ ಸ್ಪ್ರೈ ಮಾಡಿ ಕೊಲೆ

    ದಾವಣಗೆರೆ | ರೌಡಿಶೀಟರ್ ಮುಖಕ್ಕೆ ಪೆಪ್ಪರ್ ಸ್ಪ್ರೈ ಮಾಡಿ ಕೊಲೆ

    ದಾವಣಗೆರೆ: ನಗರದಲ್ಲಿ (Davanagere) ಹಾಡಹಗಲೇ ಕುಖ್ಯಾತ ರೌಡಿಶೀಟರ್ ಒಬ್ಬನನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಕೊಲೆಗೈದಿದ್ದಾರೆ.

    ಹತ್ಯೆಗೀಡಾದ ರೌಡಿಶೀಟರ್‌ನನ್ನು ಸಂತೋಷ್ ಕುಮಾರ್ ಅಲಿಯಾಸ್ ಕಣುಮಾ ಎಂದು ಗುರುತಿಸಲಾಗಿದೆ. ದಾವಣಗೆರೆ ನಗರದ ಖಾಸಗಿ ಆಸ್ಪತ್ರೆಯೊಂದರ ಮುಂಭಾಗದಲ್ಲಿ ಕೊಲೆ ಮಾಡಲಾಗಿದೆ. ಹತ್ಯೆಗೀಡಾದ ರೌಡಿಶೀಟರ್ ರಿಯಲ್ ಎಸ್ಟೇಟ್ (Real Estate) ಸೆಟಲ್ಮೆಂಟ್ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ವಿಕ್ಟೋರಿಯಾ ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದ ವಿಚಾರಣಾಧೀನ ಕೈದಿ ಪೊಲೀಸ್ ವಶಕ್ಕೆ

    ಆಟೋದಲ್ಲಿ ಬಂದ ನಾಲ್ಕೈದು ಜನ ದುಷ್ಕರ್ಮಿಗಳು ಸಂತೋಷ್ ಮುಖಕ್ಕೆ ಪೆಪ್ಪರ್ ಸ್ಪ್ರೈ ಮಾಡಿ, ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

    ದಾವಣಗೆರೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ. ಹತ್ಯೆಯ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: `ಹೌಸ್‌ ಅರೆಸ್ಟ್‌’ ಶೋನಲ್ಲಿ ಸೆಕ್ಸ್‌ ಪೊಸಿಷನ್‌ಗೆ ಒತ್ತಾಯ – ನಟ ಅಜಾಜ್ ಖಾನ್‌ಗೆ ಸಮನ್ಸ್

  • ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಹೇಗೆ ಮಾಡಬೇಕು ಅನ್ನೋದು ನನಗೆ ಗೊತ್ತಿದೆ: ಡಿಕೆಶಿ

    ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಹೇಗೆ ಮಾಡಬೇಕು ಅನ್ನೋದು ನನಗೆ ಗೊತ್ತಿದೆ: ಡಿಕೆಶಿ

    ಬೆಂಗಳೂರು: ರಾಮನಗರವನ್ನು (Ramanagara) ಬೆಂಗಳೂರು ದಕ್ಷಿಣ ಜಿಲ್ಲೆ (Bengaluru South District) ಎಂದು ಹೇಗೆ ಬದಲಾಯಿಸಬೇಕು ಎನ್ನುವುದು ನನಗೆ ಗೊತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಹೇಳಿದ್ದಾರೆ.

    ರಿಯಲ್ ಎಸ್ಟೇಟ್‌ಗಾಗಿ (Real Estate) ರಾಮನಗರ ಹೆಸರನ್ನು ಬದಲಾಯಿಸಲಾಗಿದೆ ಎಂದು ಅಶ್ವತ್ಥನಾರಾಯಣ (Ashwath Narayana) ಹೇಳಿಕೆಗೆ ತಿರುಗೇಟು ನೀಡಿದ ಅವರು, ಇವರು ಬೆಂಗಳೂರಿಗೆ ಬಂದಿದ್ದು ಯಾಕೆ? ಕನಕಪುರದವರಿಗೆ, ರಾಮನಗರದವರಿಗೆ ಏನೂ ಬೇಡ್ವಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಬೆಟ್ಟಿಂಗ್‌ ಆಪ್‌ ಪ್ರಚಾರ – ದೇವರಕೊಂಡ, ಪ್ರಕಾಶ್‌ ರಾಜ್‌, ರಾಣಾ ಸೇರಿದಂತೆ 25 ಮಂದಿ ಮೇಲೆ ಕೇಸ್‌

    ಬೆಂಗಳೂರು ದಕ್ಷಿಣ ಜಿಲ್ಲೆ ಹೇಗೆ ಮಾಡ್ಬೇಕು ನಮಗೆ ಗೊತ್ತು, ರಾಮನಗರ ಹೆಸರು ಬರಬಾರದು ಎಂದು ಯಾರನ್ನು ಭೇಟಿ ಮಾಡಿದ್ದಾರೆ ಎನ್ನುವುದು ಗೊತ್ತಿದೆ. ಸಂವಿಧಾನದಲ್ಲಿ ಯಾರನ್ನ ಕೇಳ್ಬೇಕು ಅಂತೇನಿಲ್ಲ. ರಾಮನಗರ ಜಿಲ್ಲೆಯ ಹೆಸರನ್ನು ನಾವು ಬದಲಾವಣೆ ಮಾಡುತ್ತೇವೆ ಎಂದರು.

  • ರಿಯಲ್ ಎಸ್ಟೇಟ್ ಜೊತೆ ಪೊಲೀಸರು ಕೈ ಜೋಡಿಸಿದ್ರೆ ಸಹಿಸೊಲ್ಲ- ಸಿಎಂ ಎಚ್ಚರಿಕೆ

    ರಿಯಲ್ ಎಸ್ಟೇಟ್ ಜೊತೆ ಪೊಲೀಸರು ಕೈ ಜೋಡಿಸಿದ್ರೆ ಸಹಿಸೊಲ್ಲ- ಸಿಎಂ ಎಚ್ಚರಿಕೆ

    ಬೆಂಗಳೂರು: ಅಪರಾಧಿಗಳಿಗೆ ಭಯದ ವಾತಾವರಣ, ಜನಸಾಮಾನ್ಯರಿಗೆ ಭಯಮುಕ್ತ ವಾತಾವರಣ ನಿರ್ಮಿಸಬೇಕು. ರಿಯಲ್ ಎಸ್ಟೇಟ್ ಜೊತೆ ಪೊಲೀಸರು ಕೈ ಜೋಡಿಸಿದ್ರೆ ಸಹಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah), ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕರೆ ನೀಡಿದ್ದಾರೆ.

    ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಚಾಮರಾಜಪೇಟೆ, ಕಬ್ಬನ್ ಪಾರ್ಕ್ ಮತ್ತು ಹೈಗ್ರೌಂಡ್ಸ್ ಪೊಲೀಸ್ ಠಾಣೆ, ಕಚೇರಿಗಳನ್ನು ಉದ್ಘಾಟಿಸಿದ ಬಳಿಕ ಪುಲಕೇಶಿ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಪೊಲೀಸ್ ವಸತಿ ಸಮುಚ್ಛಯಗಳನ್ನು ಉದ್ಘಾಟಿಸಿ ಮಾತನಾಡಿದ ಸಿಎಂ, ಪೊಲೀಸರಿಗೆ ಕಿವಿಮಾತು ಹೇಳಿದರು.ಇದನ್ನೂ ಓದಿ: ಗಡ್ಕರಿ ಭೇಟಿಯಾದ ಹೆಚ್‌ಡಿಕೆ – ಮಂಡ್ಯ ಹೊರವರ್ತುಲ ರಸ್ತೆ ಯೋಜನೆ, ಬೈಪಾಸ್ ಅಭಿವೃದ್ಧಿಗೆ ಮನವಿ

    ರಾಜ್ಯದ ಜನಸಂಖ್ಯೆ 7 ಕೋಟಿ ದಾಟಿ ಹೋಗುತ್ತಿದೆ. ಇವರೆಲ್ಲರ ರಕ್ಷಣೆ, ಆಸ್ತಿಪಾಸ್ತಿ, ಮಾನ, ಪ್ರಾಣ ರಕ್ಷಿಸಿ ನೆಮ್ಮದಿಯ ಬದುಕಿಗೆ ಸುರಕ್ಷಿತ ವಾತಾವರಣ ಸೃಷ್ಟಿಸುವ ಜವಾಬ್ದಾರಿ ಪೊಲೀಸ್ ಇಲಾಖೆ ಮೇಲಿದೆ. ಇದಕ್ಕಾಗಿ ಇಲಾಖೆಗೆ ಅಗತ್ಯವಾದ ಸವಲತ್ತು ಮತ್ತು ನೂತನ ಠಾಣೆಗಳನ್ನು ಒದಗಿಸಲು ಸರ್ಕಾರ ಸದಾ ಸಿದ್ಧವಿದೆ ಎಂದರು.

    ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಇದ್ದಾಗ ಅಭಿವೃದ್ಧಿಯ ವೇಗ ಹೆಚ್ಚುತ್ತದೆ. ಹೀಗಾಗಿ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ರೂಪಿಸಿ ಠಾಣೆಗೆ ಬರುವವರನ್ನು ಆರೋಗ್ಯಕರವಾಗಿ ನಡೆಸಿಕೊಳ್ಳಿ. ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಕಡಿಮೆ ಆಗುತ್ತಿರುವುದು ನೆಮ್ಮದಿಯ ಸಂಗತಿ. ಆದರೆ ಪೊಲೀಸರು ಚಾಪೆ ಕೆಳಗೆ ತೂರಿದರೆ ಅಪರಾಧಿಗಳು ರಂಗೋಲಿ ಕೆಳಗೆ ತೂರಿ ಕಾನೂನಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಾರೆ. ಇದಕ್ಕೆ ಅವಕಾಶ ಆಗಬಾರದು ಎಂದು ತಿಳಿಸಿದರು.

    ಜನರಿಗೆ ಉದ್ಯೋಗ ಇಲ್ಲದಿರುವುದು, ಬದುಕಿಗೆ ಅವಕಾಶ ಇಲ್ಲದಿರುವಾಗ ಅಪರಾಧ ಜಗತ್ತಿನ ಕಡೆಗೆ ಆಕರ್ಷಿತರಾಗುತ್ತಾರೆ. ನಗರದಲ್ಲಿ ರಿಯಲ್ ಎಸ್ಟೇಟ್ ದಂಧೆ ಕಾರಣದಿಂದ ಅಪರಾಧಗಳು ಹೆಚ್ಚಾಗುತ್ತಿವೆ. ಆದ್ದರಿಂದ ಪೊಲೀಸರು ರಿಯಲ್ ಎಸ್ಟೇಟ್ ಮಾಫಿಯಾ ಜೊತೆ ಕೈ ಜೋಡಿಸಿದರೆ ಸಹಿಸಲ್ಲ. ಯಾವುದೇ ಕಾರಣಕ್ಕೂ ರಿಯಲ್ ಎಸ್ಟೇಟ್‌ಗೆ ಬೆಂಬಲ ನೀಡಬಾರದು. ಬೆಂಬಲ ಕೊಡುವ ಕೆಲಸ ಮಾಡಿದರೆ ಸರ್ಕಾರ ಸಹಿಸಲ್ಲ. ಅಪರಾಧಿಗಳಿಗೆ ಭಯದ ವಾತಾವರಣ, ಜನಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಬೇಕು ಎಂದರು.

    ಪೇದೆಗಳು, ಎಸ್‌ಐಗಳು, ಇನ್ಸ್ಪೆಕ್ಟರ್‌ಗಳೇ ಹೆಚ್ಚೆಚ್ಚು ಕೆಲಸ ಮಾಡ್ತಾರೆ. ಇವರ ಯೋಗಕ್ಷೇಮ ಕೂಡ ನಮ್ಮ ಜವಾಬ್ದಾರಿ. ಪೊಲೀಸ್ ಸಿಬ್ಬಂದಿಯ ಗೃಹ ಯೋಜನೆಯನ್ನು ಸರ್ಕಾರ ಮುಂದುವರೆಸುತ್ತದೆ ಎಂದು ಇದೇ ಸಂದರ್ಭದಲ್ಲಿ ಸಿಎಂ ಭರವಸೆ ನೀಡಿದರು. ಗೃಹ ಸಚಿವ ಪರಮೇಶ್ವರ್, ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ಇದನ್ನೂ ಓದಿ: ಕನ್ನಡದ ನಟಿಗೆ ಬಿಗ್ ಚಾನ್ಸ್- ತೆಲುಗಿನತ್ತ ಶರಣ್ಯ ಶೆಟ್ಟಿ

  • ರಿಯಲ್‌ ಎಸ್ಟೇಟ್‌ ಮಾಫಿಯಾದಿಂದ ಮನನೊಂದು ದಂಪತಿ ಆತ್ಮಹತ್ಯೆ; 12 ಮಂದಿ ವಿರುದ್ಧ FIR

    ರಿಯಲ್‌ ಎಸ್ಟೇಟ್‌ ಮಾಫಿಯಾದಿಂದ ಮನನೊಂದು ದಂಪತಿ ಆತ್ಮಹತ್ಯೆ; 12 ಮಂದಿ ವಿರುದ್ಧ FIR

    – ಡೆತ್‌ನೋಟ್‌ನಲ್ಲಿದ್ದ ರಹಸ್ಯವೇನು?

    ಮಡಿಕೇರಿ: ರಿಯಲ್ ಎಸ್ಟೇಟ್ ಮಾಫಿಯಾದಿಂದ‌ (Real Estate Mafia) ಮನನೊಂದು ಉದ್ಯಮಿಯೊಬ್ಬರು ಪತ್ನಿಯೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಬೈಲಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಹೊನ್ನೂರ್ ಕಾವಲ್ ನಲ್ಲಿ ಬುಧವಾರ ಸಂಜೆ ನಡೆದಿದೆ. ಪ್ರಕರಣ ಸಂಬಂಧ 12 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

    ಕೊಡಗಿನ‌ ಕುಶಾಲನಗರದಲ್ಲಿ (Kushalnagar) ಉದ್ಯಮ ನಡೆಸುತ್ತಿದ್ದ ಮೂಲತಃ ಕೊಪ್ಪ ನಿವಾಸಿ ‌ಸುರೇಶ್ (40) ಹಾಗೂ ಅವರ ಪತ್ನಿ ಪಲ್ಲವಿ (28) ಆತ್ಮಹತ್ಯೆಗೆ ಶರಣಾದವರು. ಕೊಪ್ಪ ನಿವಾಸಿ ಜಯಣ್ಣ ಅವರ ಪುತ್ರ ಸುರೇಶ್ ತನ್ನ ಪತ್ನಿಯನ್ನು ದೇವಸ್ಥಾನಕ್ಕೆಂದು ಹೇಳಿ ದೊಡ್ಡಹೊನ್ನೂರು ಕಾವಲ್‌ನ ಜಮೀನಿನ ಹಳೆಯ ಖಾಲಿ ಮನೆಗೆ ಕರೆತಂದಿದ್ದು ಅಲ್ಲಿ ಇಬ್ಬರೂ ನೇಣಿಗೆ ಶರಣಾಗಿದ್ದಾರೆ. ಇದನ್ನೂ ಓದಿ: 39 ಸಾವಿರ ಕೋಟಿ ಅನುದಾನದಲ್ಲಿ ಕರ್ನಾಟಕದಲ್ಲಿ ರೈಲ್ವೆ ಕೆಲಸ ಆರಂಭ: ಸೋಮಣ್ಣ

    ರಿಯಲ್ ಎಸ್ಟೇಟ್ ಮಾಫಿಯಾ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ಮೃತ ಸುರೇಶ್ ಆತ್ಮಹತ್ಯೆಗೆ ಕಾರಣರಾದವರ ಹೆಸರನ್ನ ಡೆತ್‌ನೋಟ್‌ನಲ್ಲಿ ಬರೆದಿಟ್ಟಿದ್ದಾರೆ. ಈ ಸಂಬಂಧ ಬೈಲುಕೊಪ್ಪ ಪೊಲೀಸ್ ಠಾಣೆಯಲ್ಲಿ ‌12 ಮಂದಿ ವಿರುದ್ಧ ಕರಣ ದಾಖಲಾಗಿದೆ. ಮೃತ ದಂಪತಿ ಮರಣೋತ್ತರ ಪರೀಕ್ಷೆ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ಇದನ್ನೂ ಓದಿ: ಕಬ್ಬು ಬೆಲೆ ನಿಗದಿಗಾಗಿ ಹೋರಾಟ- ಸಿಎಂಗೆ ಘೇರಾವ್ ಹಾಕಲು ನಿರ್ಧರಿಸಿದ ಮುಧೋಳ ರೈತರು

    ಈ‌ ನಡುವೆ ಗುರುವಾರ (ಇಂದು) ಮಧ್ಯಾಹ್ನ ಮೃತದೇಹಗಳನ್ನು ಮುಂದಿಟ್ಟು ಮೃತನ ಸಂಬಂಧಿಕರು, ಸ್ನೇಹಿತರು ಹಾಗೂ ಕುಶಾಲನಗರ, ಕೊಪ್ಪ ಗ್ರಾಮಸ್ಥರು ರಸ್ತೆ ತಡೆ ಪ್ರತಿಭಟನೆ ನಡೆಸಿದರು. ಶವಾಗಾರದ ಮುಂಭಾಗ ದಂಪತಿಗಳ ಸಾವಿಗೆ ಕಾರಣರಾದ ರಿಯಲ್ ಎಸ್ಟೇಟ್ ಮಾಫಿಯಾಗೆ ಸಂಬಂಧಿಸಿದ ಆರೋಪಿಗಳನ್ನು ಬಂಧಿಸುವಂತೆ ಪ್ರತಿಭಟನೆ ಆಗ್ರಹಿಸಿದರು. ಆರೋಪಿಗಳು ಪ್ರಭಾವ ಶಾಲಿಗಳಾಗಿದ್ದು ಹಲವರಿಗೆ ವಂಚನೆ ಎಸಗಿದ್ದಾರೆ. ಇದರಿಂದ ಅಮಾಯಕ ದಂಪತಿ ಪ್ರಾಣ ಕಳೆದುಕೊಳ್ಳುವಂತಾಗಿದೆ.‌ ಇಂತಹ ಪ್ರಕರಣಗಳು ಮರುಕಳಿಸದಂತೆ ಆರೋಪಿಗಳನ್ನು ಕೂಡಲೆ ಬಂಧಿಸಿ ಕ್ರಮಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಪೊಲೀಸರನ್ನು ಒತ್ತಾಯಿಸಿದರು. ಇದನ್ನೂ ಓದಿ: ಕೊಡಗಿನಲ್ಲಿ ಹೆಚ್ಚಾದ ಕಾಡು ಪ್ರಾಣಿಗಳ ಹಾವಳಿ – ಜೀವ ಭಯದಲ್ಲಿ ದಿನ ಕಳೆಯುತ್ತಿರುವ ಜನ

    ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಮೃತ ಸುರೇಶ್ ಅವರ ಸ್ನೇಹಿತ ಕೆ.ಜಿ ಮನು, ಸುರೇಶ್ ನಡೆಸುತ್ತಿದ್ದ ವ್ಯವಹಾರದಲ್ಲಿ‌ ಕೆಲವರು ಮೂಗು ತೂರಿಸಿ ದ್ರೋಹ ಮಾಡಿದ್ದಾರೆ. ಕುಶಾಲನಗರ ಸರ್ಕಾರಿ ಡಿಗ್ರಿ‌ ಕಾಲೇಜು ಬಳಿ ಬಡಾವಣೆ ನಿರ್ಮಾಣಕ್ಕೆ ಜಾಗವೊಂದನ್ನು ಅಭಿವೃದ್ದಿಪಡಿಸುತ್ತಿದ್ದರು. ಸುರೇಶ್ ವ್ಯವಹಾರಕ್ಕೆ ಅಡ್ಡಗಾಲು ಹಾಕಿದ ರಿಯಲ್ ಎಸ್ಟೇಟ್ ಮಾಫಿಯಾದ ಕೆಲವರು ಮಾಲೀಕರಿಗೆ ಹೆಚ್ಚಿನ ಲಾಭದ ಆಮೀಷವೊಡ್ಡಿ ಆತನಿಂದ ವ್ಯವಹಾರ ಕಸಿದುಕೊಂಡಿದ್ದಾರೆ. ಇದರಿಂದ ಹೂಡಿಕೆ ಮಾಡಿದ್ದ ಹಣ ಕಳೆದುಕೊಂಡು ಇತ್ತ ಜಾಗವೂ‌ ಇಲ್ಲದೇ ಮನನೊಂದು ಕೊನೆಗೇ ಯಾವುದೇ ದಾರಿ ಕಾಣದೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದಕ್ಕೆ ಕಾರಣರಾದ ಜಾಗ ಮಾಲೀಕರು ಹಾಗೂ ಸಂಬಂಧಿಸಿದವರಿಗೆ ಸೂಕ್ತ ಕಾನೂನು ಕ್ರಮ ಆಗಬೇಕಿದೆ ಎಂದು ಆಗ್ರಹಿಸಿದರು.

  • ಕೊಡಗು| ಪತ್ನಿ ಜೊತೆ ರಿಯಲ್‌ ಎಸ್ಟೇಟ್‌ ಉದ್ಯಮಿ ನೇಣಿಗೆ ಶರಣು

    ಕೊಡಗು| ಪತ್ನಿ ಜೊತೆ ರಿಯಲ್‌ ಎಸ್ಟೇಟ್‌ ಉದ್ಯಮಿ ನೇಣಿಗೆ ಶರಣು

    ಮಡಿಕೇರಿ: ಪತ್ನಿ ಜೊತೆ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು (Real Estate Businessman) ನೇಣಿಗೆ ಶರಣಾದ ಘಟನೆ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ.

    ಕೊಪ್ಪ ನಿವಾಸಿ ಜಯಣ್ಣ ಅವರ ಪುತ್ರ ಸುರೇಶ್ (40) ಹಾಗೂ ಅವರ ಪತ್ನಿ ಪಲ್ಲವಿ (28) ಮೃತ ದಂಪತಿ.  ಇದನ್ನೂ ಓದಿ: ಪತ್ನಿ, ಮಗುವನ್ನು ಕೊಂದು ವ್ಯಕ್ತಿ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ – ಕಾರ್ತಿಕ್ ಸಾಲದ ಸುಳಿಗೆ ಇಡೀ ಸಂಸಾರ ಬಲಿ?

    ಬೈಲುಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಹೊನ್ನೂರು ಕಾವಲ್‌ನಲ್ಲಿರುವ ಜಮೀನಿನ ಹಳೆಯ ಖಾಲಿ ಮನೆಯೊಂದರಲ್ಲಿ ದಂಪತಿ ನೇಣಿಗೆ (Suicide) ಶರಣಾಗಿದ್ದಾರೆ.

    ರಿಯಲ್ ಎಸ್ಟೇಟ್ ಮಾಫಿಯಾದ ಒತ್ತಡ, ಉದ್ಯಮದಲ್ಲಿ‌ ನಷ್ಟ, ಸಾಲಗಾರರ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಸುರೇಶ್‌ ಅವರು ಡೆತ್‌ನೋಟ್‌ ಬರೆದಿದ್ದು ಸಾವಿಗೆ ಕೆಲವರ ಹೆಸರನ್ನು ಉಲ್ಲೇಖ ಮಾಡಿದ್ದಾರೆ.

    ಘಟನೆಗೆ ಸಂಬಂಧಿಸಿದಂತೆ ಬೈಲುಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

  • ಎರಡು ಎಕರೆ ಜಮೀನು ಖರೀದಿಸಿದ ಶಾರುಖ್ ಪುತ್ರಿ  ಸುಹಾನಾ ಖಾನ್

    ಎರಡು ಎಕರೆ ಜಮೀನು ಖರೀದಿಸಿದ ಶಾರುಖ್ ಪುತ್ರಿ ಸುಹಾನಾ ಖಾನ್

    ಬಾಲಿವುಡ್ ಖ್ಯಾತ ನಟ ಶಾರುಖ್ ಖಾನ್ (Shah Rukh Khan)  ಪುತ್ರಿ ಸುಹಾನಾ (Suhana Khan) ರಿಯಲ್ ಎಸ್ಟೇಟ್ (Real Estate) ಉದ್ಯಮಕ್ಕೆ ಕಾಲಿಟ್ಟಿದ್ದೀರಾ? ಹಾಗಂತ ಮಾತನಾಡುತ್ತಿದೆ ಬಿಟೌನ್. ಮುಂಬೈ ಸಮೀಪದ ಅಲಿಭಾಗ್ ನಲ್ಲಿ ಸುಹಾನಾ ಬರೋಬ್ಬರಿ ಎರಡು ಎಕರೆ ಜಮೀನು ಖರೀದಿಸಿದ್ದಾರಂತೆ. ಹಾಗಾಗಿ ಸುಹಾನಾ ರಿಯಲ್ ಎಸ್ಟೇಟ್ ಉದ್ಯಮ ಆರಂಭಿಸಲಿದ್ದಾರೆ ಎನ್ನುವ ಅನುಮಾನ ಮೂಡಿದೆ.

    ಈ ಜಮೀನಿಗಾಗಿ ಅವರು 12.91 ಕೋಟಿ ರೂಪಾಯಿ ನೀಡಿದ್ದು, ಈ ಪ್ರಮಾಣದ ಹಣ ತೊಡಗಿಸಿದ್ದು ಅವರ ಹೊಸ ಯೋಜನೆಗಾಗಿ ಎಂದು ಹೇಳಲಾಗುತ್ತಿದೆ. ಈ ಹಿಂದೆ ಸುಹಾನಾ ಸಿನಿಮಾ ರಂಗದಲ್ಲೇ ಸಕ್ರೀಯರಾಗುತ್ತಾರೆ ಎಂದು ಹೇಳಲಾಗಿತ್ತು. ಅದರಂತೆ ಚಿತ್ರವೊಂದರಲ್ಲಿ ನಟಿಸಿದ್ದರು. ಈಗ ರಿಯಲ್ ಎಸ್ಟೇಟ್ ನಲ್ಲಿ ಭಾರೀ ಹೂಡಿಕೆ ಮಾಡಿದ್ದಾರೆ.

    ಸುಹಾನಾ ಖಾನ್ ದುಬಾರಿ ಹುಡುಗಿ ಎಂದೇ ಫೇಮಸ್. ಸಾರ್ವಜನಿಕ ಸಮಾರಂಭಗಳಲ್ಲಿ ಅವರು ಕಾಣಿಸಿಕೊಂಡಾಗ ಅವರ ಧರಿಸುವ ಬಟ್ಟೆಗಳ ಬೆಲೆ ಬಗ್ಗೆ ಯಾವತ್ತಿಗೂ ಚರ್ಚೆ ಆಗುತ್ತದೆ.  ಇತ್ತೀಚೆಗೆ ಗೆಳತಿಯರೊಂದಿಗೆ ಕಾಣಿಸಿಕೊಂಡಿದ್ದ ಸುಹಾನಾ ಬರೋಬ್ಬರಿ 69,574 ರೂ. ಬೆಲೆಯ ಶೂ ಧರಿಸಿದ್ದರು ಎಂದು ಮಾಧ್ಯಮವೊಂದು ವರದಿ ಮಾಡಿತ್ತು. ಕೇವಲ ಸಿನಿಮಾ ನಟ-ನಟಿಯರು ಹೆಚ್ಚು ಬೆಲೆ ಬಾಳುವ ಶೂ ಮತ್ತು ಬಟ್ಟೆಗಳನ್ನು ಧರಿಸುತ್ತಾರೆ ಎಂಬ ಮಾತನ್ನು ಸುಹಾನ ಸುಳ್ಳು ಮಾಡಿದ್ದರು.

     

    ಸುಹನಾ ತನ್ನ ಗೆಳತಿಯರಾದ ಶನಯಾ ಕಪೂರ್ ಮತ್ತು ಅಹನಾ ಪಾಂಡ್ಯೆ ರೊಂದಿಗೆ ಕಾಣಿಸಿಕೊಳ್ಳುವ ಮೂಲಕ ಎಲ್ಲರನ್ನು ಆಕರ್ಷಿಸಿದ್ದರು. ನೀಲಿ ಬಣ್ಣದ ಟೋನ್ ಜೀನ್ಸ್ ಜೊತೆಗೆ ಬಿಳಿ ಬಣ್ಣದ ಕ್ರಾಪ್ ಟಾಪ್ ಧರಿಸಿದ್ದ ಸುಹನಾ ಕ್ಲಾಸಿ ಲುಕ್ ನಲ್ಲಿ ಕಾಣಿಸಿಕೊಂಡಿದ್ದರು. ಅವೆಲ್ಲವೂ ದುಬಾರಿ ಬೆಲೆಯದ್ದು ಆಗಿದ್ದವು.

  • ರಿಯಲ್ ಎಸ್ಟೇಟ್ ಬ್ರೋಕರ್ ಮೇಲೆ ‘ಕೈ’ ಕಾರ್ಪೋರೇಟರ್ ಸಹೋದರನಿಂದ ಮಾರಣಾಂತಿಕ ಹಲ್ಲೆ

    ರಿಯಲ್ ಎಸ್ಟೇಟ್ ಬ್ರೋಕರ್ ಮೇಲೆ ‘ಕೈ’ ಕಾರ್ಪೋರೇಟರ್ ಸಹೋದರನಿಂದ ಮಾರಣಾಂತಿಕ ಹಲ್ಲೆ

    ಹುಬ್ಬಳ್ಳಿ: ರಿಯಲ್ ಎಸ್ಟೇಟ್ ಬ್ರೋಕರ್ ಮೇಲೆ ಕಾಂಗ್ರೆಸ್ ಕಾರ್ಪೋರೇಟರ್ ಸಹೋದರ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಹೆಣ್ಣು ಮಕ್ಕಳು ಅಂತ ನೋಡದೆ ನಾಲ್ಕೈದು ರೌಡಿಗಳ ಜೊತೆ ಸೇರಿಕೊಂಡು ಮನಬಂದಂತೆ ಥಳಿಸಿರುವ ಘಟನೆ ಹುಬ್ಬಳ್ಳಿಯಲ್ಲಿ (Hubballi) ನಡೆದಿದೆ. ಈ ಮೂಲಕ ಗೃಹ ಸಚಿವ ಜಿ. ಪರಮೇಶ್ವರ್ ಅವರೇ ನಿಮ್ಮ ಸರ್ಕಾರದಲ್ಲಿ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ವಾ. ಕಾಂಗ್ರೆಸ್ (Congres) ಅಧಿಕಾರದಲ್ಲಿದೆ ಅಂದರೆ ನಿಮ್ಮ ಸ್ಥಳೀಯ ಮುಖಂಡರು ಏನು ಮಾಡಿದ್ರು ನಡೆಯುತ್ತಾ ಅಂತ ಹುಬ್ಬಳ್ಳಿ ಜನ ಪ್ರಶ್ನೆ ಮಾಡುವಂತಾಗಿದೆ.

    ಹುಬ್ಬಳ್ಳಿ ಬಿಡ್ನಾಳದಲ್ಲಿ ಈ ಪ್ರಕರಣ ನಡೆದಿದ್ದು, ರಿಯಲ್ ಎಸ್ಟೇಟ್ ಬ್ರೋಕರ್ ಗುರುಸಿದ್ದಪ್ಪ ಮತ್ತು ಕುಟುಂಬಸ್ಥರ ಮೇಲೆ ರೌಡಿ ಶೀಟರ್ ಶಿವರಾಜ್ ಗೌರಿ ಮತ್ತು ಸಹಚರರಿಂದ ಕೃತ್ಯ ನಡೆದಿದೆ. ಆರೋಪಿ ಶಿವರಾಜ್ ಗೌರಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯ ನಾಗರಾಜ್ ಗೌರಿ ಸಹೋದರನಾಗಿದ್ದಾನೆ.  ಇದನ್ನೂ ಓದಿ: ನಿಗಮ ಮಂಡಳಿ ನೇಮಕಾತಿ ವಿಚಾರದಲ್ಲಿ ಎಲ್ಲರ ಅಭಿಪ್ರಾಯ ಕೇಳಲು ಕಷ್ಟ: ಸಿದ್ದರಾಮಯ್ಯ

    ಹಣಕಾಸಿನ ಮಾತುಕತೆಗೆಂದು ಗುರುಸಿದ್ದಪ್ಪನನ್ನು ತುಷಾರ್ ಎಂಬವರ ಆಫೀಸ್‍ಗೆ ಆರೋಪಿ ಶಿವರಾಜ್ ಕರೆಸಿದ್ದರು. ಈ ವೇಳೆ ಏಕಾಏಕಿ ಗುರುಸಿದ್ದಪ್ಪ ಮೇಲೆ ಹಲ್ಲೆ ನಡೆಸಿದ ಶಿವರಾಜ್ ಗೌರಿ, ನಾನು ಕಾಂಗ್ರೆಸ್ ಲೀಡರ್, ಕಾಂಗ್ರೆಸ್ ಕಾರ್ಪೊರೇಟರ್ ತಮ್ಮ ಅಂತ ದರ್ಪ ತೋರಿದ್ದಾರೆ ಎನ್ನಲಾಗಿದೆ.

    ಗುರುಸಿದ್ದಪ್ಪರನ್ನು ಬಿಡಸಲು ಬಂದ ಪತ್ನಿ ಮತ್ತು ಮಕ್ಕಳ ಮೇಲೂ ಹಲ್ಲೆ ನಡೆಸಿ, ಅವರ ಮಗಳು ಅನ್ನಪೂರ್ಣ ಬಟ್ಟೆ ಹರಿದು ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಕುರಿತು ರೌಡಿ ಶೀಟರ್ ಶಿವರಾಜ್, ತುಷಾರ್, ಅಜರುದ್ದೀನ್ ಎಂಬವರ ಮೇಲೆ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

  • ಯಲಹಂಕ ದೊಡ್ಡದೇನಲ್ಲ ನನಗೆ. ಬಾರಲೇ ಅಲ್ಲಿಗೆ ಬರೀನಿ ಬಾ: ಸಚಿವ ಸುಧಾಕರ್‌ ಧಮ್ಕಿ

    ಯಲಹಂಕ ದೊಡ್ಡದೇನಲ್ಲ ನನಗೆ. ಬಾರಲೇ ಅಲ್ಲಿಗೆ ಬರೀನಿ ಬಾ: ಸಚಿವ ಸುಧಾಕರ್‌ ಧಮ್ಕಿ

    – ಸುಧಾಕರ್‌ ವಿರುದ್ಧ ಜಾತಿ ನಿಂದನೆ ಕೇಸ್‌

    ಬೆಂಗಳೂರು: “ಯಲಹಂಕ ದೊಡ್ಡದೇನಲ್ಲ ನನಗೆ. ಬಾರಲೇ ಅಲ್ಲಿಗೆ ಬರೀನಿ ಬಾ. ಯಾವನ್ ನನ್ನತ್ರ ಗಾಂಚಾಲಿ, ಗೀಂಚಾಲಿ ನಡೆಯಲ್ಲ.ಎಲ್ಲದಕ್ಕೂ ರೆಡಿಯಾಗಿ ಬಂದಿರ್ತೀವಿ. ಸತ್ತೋಗಿರೋ ಪ್ರಾಪರ್ಟಿ ಉಳಿಸಿದ್ದೀನಿ. ಏ ಕೇಳಮ್ಮಾ ಸುಮ್ಮನೇ ಇಲ್ಲಿ” ಇದು ಸಿದ್ದರಾಮಯ್ಯ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಖಾತೆ ಸಚಿವ ಡಿ.ಸುಧಾಕರ್‌ (D Sudhakar) ಅವರು ಮಹಿಳೆಗೆ ಅವಾಜ್‌ ಹಾಕಿದ ಪರಿ.

    ದೌರ್ಜನ್ಯ, ವಂಚನೆ, ಹಲ್ಲೆ ಮತ್ತು ಜಾತಿ ನಿಂದನೆ ಆರೋಪದಡಿ ಯೋಜನೆ ಮತ್ತು ಸಾಂಖ್ಯಿಕ ಖಾತೆ ಸಚಿವ ಡಿ.ಸುಧಾಕರ್‌ (Sudhkar) ಸೇರಿ ಮೂವರ ವಿರುದ್ಧ ಯಲಹಂಕ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾದ ಬೆನ್ನಲ್ಲೇ ಅವರು ಮಹಿಳಿಗೆ ಅವಾಜ್‌ ಹಾಕಿದ ವಿಡಿಯೋ ಲಭ್ಯವಾಗಿದೆ.  ಇದನ್ನೂ ಓದಿ: ಡಿಕೆ ಬ್ರದರ್ಸ್‌ಗೆ ಠಕ್ಕರ್‌ – ಲೋಕಸಭೆಗೆ ಹೆಚ್‌ಡಿಕೆ ಸ್ಪರ್ಧೆ?

     

    ಯಲಹಂಕ ನಿವಾಸಿ ಸುಬ್ಬಮ್ಮ ಎಂಬುವವರು ನೀಡಿದ ದೂರಿನ ಮೇರೆಗೆ ಸೆವೆನ್‌ ಹಿಲ್ಸ್‌ ಡೆವಲಪರ್ಸ್‌ ಮತ್ತು ಟ್ರೇಡ​ರ್ಸ್‌ ಪಾಲುದಾರರಾದ ಸಚಿವ ಡಿ.ಸುಧಾಕರ್‌, ಶ್ರೀನಿವಾಸ್‌, ಭಾಗ್ಯಮ್ಮ ಎಂಬುವವರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ದಾಖಲಾದ ಬೆನ್ನಲ್ಲೇ ಎಸಿಪಿ ಸುಧಾಕರ್‌ಗೆ ಕರೆ ಮಾಡಿದ್ದು ದಾಖಲಾತಿಯನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.

    ದೂರಿನಲ್ಲಿ ಏನಿದೆ?
    ಸೆವೆನ್‌ ಹಿಲ್ಸ್‌ ಡೆವಲಪರ್ಸ್‌ ಮತ್ತು ಟ್ರೇಡರ್ಸ್‌ನವರು (Seven Hills Developers and Traders) ಯಲಹಂಕ ಗ್ರಾಮದ ಸರ್ವೆ ನಂಬರ್‌ 108/1ರ 1.30 ಎಕರೆ ಜಮೀನನ್ನು ಮೋಸದಿಂದ ಕಬಳಿಕೆ ಮಾಡಿದ್ದಾರೆ. ಈ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿರುವಾಗ ಗುಂಪು ಕಟ್ಟಿಕೊಂಡು ಬಂದು ದೌರ್ಜನ್ಯ ಎಸೆಗಿದ್ದಾರೆ. ಮಹಿಳೆಯರನ್ನು ಕರೆದುಕೊಂಡು ಬಂದು ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.


    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಧಾರವಾಡವನ್ನು ಬೆಚ್ಚಿ ಬೀಳಿಸಿದ್ದ ಮರ್ಡರ್ ಪ್ರಕರಣ: ಪಿಸ್ತೂಲ್ ಕೊಟ್ಟವ ಅರೆಸ್ಟ್

    ಧಾರವಾಡವನ್ನು ಬೆಚ್ಚಿ ಬೀಳಿಸಿದ್ದ ಮರ್ಡರ್ ಪ್ರಕರಣ: ಪಿಸ್ತೂಲ್ ಕೊಟ್ಟವ ಅರೆಸ್ಟ್

    ಧಾರವಾಡ: ಹುಬ್ಬಳ್ಳಿ (Hubballi) ಹಾಗೂ ಧಾರವಾಡದ (Dharwad) ಜನತೆಯನ್ನು ಬೆಚ್ಚಿ ಬೀಳಿಸಿದ್ದ ಕಮಲಾಪುರದ (Kamalapur) ಜೋಡಿ ಕೊಲೆಗೆ (Murder) ಪಿಸ್ತೂಲ್ ಕೊಟ್ಟ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ರೌಡಿಶೀಟರ್ ಮಂಜು ಸಾವಂತ ಎಂದು ಗುರುತಿಸಲಾಗಿದೆ. ಇದುವರೆಗೂ ಪ್ರಕರಣದಲ್ಲಿ ಒಟ್ಟು 7 ಅರೋಪಿಗಳನ್ನು ಬಂಧಿಸಲಾಗಿತ್ತು. ಈತನ ಬಂಧನದಿಂದಾಗಿ ಆರೋಪಿಗಳ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಧಾರವಾಡದಲ್ಲಿ ಡಬಲ್ ಮರ್ಡರ್ – ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

    ಕಳೆದ ಮೇ 25 ರಂದು ಹಣದ ವಿಚಾರಕ್ಕೆ ರಿಯಲ್ ಎಸ್ಟೇಟ್ ಉದ್ಯಮಿ (Real Estate) ಮಹ್ಮದ್ ಕುಡಚಿ ಎಂಬುವವರನ್ನು ಕೊಲೆ ಮಾಡಲಾಗಿತ್ತು. ಈ ವೇಳೆ ಇನ್ನೋರ್ವ ಗಣೇಶ ಎಂಬಾತ ಕೂಡ ಸಾವಿಗೀಡಾಗಿದ್ದ. ನಂತರ ತನಿಖೆ ಕೈಗೊಂಡಿದ್ದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದರು. ವಿಚಾರಣೆ ವೇಳೆ ಮಂಜು ಸಾವಂತ ಬಳಿ ಪಿಸ್ತೂಲ್ ಪಡೆದಿದ್ದಾಗಿ ಆರೋಪಿಗಳು ಒಪ್ಪಿಕೊಂಡಿದ್ದರು. ಇದನ್ನೂ ಓದಿ: ಉದ್ದೇಶಪೂರ್ವಕವಾಗಿಯೇ ಉರುಳಿಸಲಾಗಿದೆ: 1700 ಕೋಟಿಯ ಸೇತುವೆ ಕುಸಿತಕ್ಕೆ ಬಿಹಾರ ಡಿಸಿಎಂ ಸಮರ್ಥನೆ

  • ಧಾರವಾಡದಲ್ಲಿ ಡಬಲ್ ಮರ್ಡರ್ – ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

    ಧಾರವಾಡದಲ್ಲಿ ಡಬಲ್ ಮರ್ಡರ್ – ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

    ಧಾರವಾಡ: ರಿಯಲ್ ಎಸ್ಟೇಟ್ (Real Estate) ಉದ್ಯಮಿ ಸೇರಿ ಇಬ್ಬರನ್ನು ಬರ್ಬರವಾಗಿ ಹತ್ಯೆ (Murder) ಮಾಡಿರುವ ಘಟನೆ ಧಾರವಾಡದಲ್ಲಿ (Dharwad) ತಡರಾತ್ರಿ ನಡೆದಿದೆ.

    ರಿಯಲ್ ಎಸ್ಟೇಟ್ ಉದ್ಯಮಿ ಮಹಮ್ಮದ್ ಕುಡಚಿ ಹಾಗೂ ಮತ್ತೊರ್ವ ವ್ಯಕ್ತಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ. ನಗರದ ಕಮಲಾಪುರ (Kamalapur) ಹೊರವಲಯದ ಮನೆ ಎದುರು ಮಹಮ್ಮದ್ ಕುಳಿತಿದ್ದಾಗ ದುಷ್ಕರ್ಮಿಗಳ ಗುಂಪು ಅವರ ಮೇಲೆ ದಾಳಿ ನಡೆಸಿದೆ. ಈ ವೇಳೆ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ವಿಜಯ್ ಮಲ್ಯಗೆ ಮುಳುವಾಗಿದ್ದ ಟಿಪ್ಪು ಖಡ್ಗ 145 ಕೋಟಿಗೆ ಹರಾಜು

    ಮಹಮ್ಮದ್ ಅವರ ಅವರ ಮನೆಯಲ್ಲಿದ್ದ ಮತ್ತೋರ್ವನ ಮೇಲೂ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ದಾಳಿಯಿಂದ ತಪ್ಪಿಸಿಕೊಳ್ಳಲು ಆತ ಓಡಿ ಹೋಗಿದ್ದು, ಮನೆಯಿಂದ ರಸ್ತೆಯುದ್ದಕ್ಕೂ ರಕ್ತ ಚೆಲ್ಲಾಡಿದೆ. ಆತ ಕೂಡ ಸ್ವಲ್ಪ ದೂರದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಆತನ ಹೆಸರು ತಿಳಿದು ಬಂದಿಲ್ಲ.

    ಸ್ಥಳಕ್ಕೆ ಪೊಲೀಸ್ ಆಯುಕ್ತ ರಮಣ್ ಗುಪ್ತಾ ಸೇರಿದಂತೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೋಡಿ ಕೊಲೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು. ಈ ಹತ್ಯೆ ಹಿಂದಿನ ಕಾರಣ ಏನು ಎಂಬುದನ್ನು ಬಹಿರಂಗಪಡಿಸಲಾಗುವುದು ಎಂದು ಗುಪ್ತಾ ಅವರು ತಿಳಿಸಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಮಾರಕಾಸ್ತ್ರಗಳು ಪತ್ತೆಯಾಗಿವೆ. ಆರೋಪಿಗಳ ಪತ್ತೆಗೆ ತನಿಖಾ ತಂಡ ರಚನೆ ಮಾಡಲಾಗಿದೆ. ಡಾಗ್ ಸ್ಕ್ವಾಡ್ ಹಾಗೂ ಬೆರಳಚ್ಚು ತಜ್ಞರು ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಮಹಿಳೆಯರಿಗೆ ಉಚಿತ ಪ್ರಯಾಣ – ಮಾರ್ಗಸೂಚಿಯಲ್ಲಿ ಏನಿರಬಹುದು?