Tag: realtive

  • ಬಿಜೆಪಿ ಶಾಸಕನ ಸಂಬಂಧಿ ಮೇಲೆ ಗುಂಡಿನ ದಾಳಿ – ಸ್ಥಳದಲ್ಲೇ ಸಾವು

    ಬಿಜೆಪಿ ಶಾಸಕನ ಸಂಬಂಧಿ ಮೇಲೆ ಗುಂಡಿನ ದಾಳಿ – ಸ್ಥಳದಲ್ಲೇ ಸಾವು

    – ವಾಕಿಂಗ್ ಹೋಗಿದ್ದಾಗ ಗುಂಡಿಕ್ಕಿ ಹತ್ಯೆ

    ಲಕ್ನೋ: ವಾಕಿಂಗ್ ಹೋಗಿದ್ದ ಭಾರತೀಯ ಜನತಾ ಪಾರ್ಟಿ(ಬಿಜೆಪಿ)ಯ ಶಾಸಕನ ಸಂಬಂಧಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಗಾಜಿಯಾಬಾದ್ ನಲ್ಲಿ ಇಂದು ಬೆಳಗ್ಗೆ ನಡೆದಿದೆ.

    ಮೃತ ದುರ್ದೈವಿಯನ್ನು ನರೇಶ್ ತ್ಯಾಗಿ(58) ಎಂದು ಗುರುತಿಸಲಾಗಿದೆ. ಇವರು ಇಂದು ಬೆಳಗ್ಗೆ ಎಂದಿನಂತೆ ಮನೆಯ ಬಳಿ ವಾಕಿಂಗ್ ಹೋಗಿದ್ದರು. ಈ ವೇಳೆ ಎರಡು ಬೈಕಿನಲ್ಲಿ ಬಂದ ದುಷ್ಕರ್ಮಿಗಳು ನರೇಶ್ ಮೇಲೆ ದಾಳಿ ಮಾಡಿದ್ದಾರೆ. ಘಟನೆ ನಡೆದ ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಅಲ್ಲದೆ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣ ಸಂಬಂಧ ತನಿಖೆ ಕೈಗೆತ್ತಿಕೊಂಡಿದ್ದಾರೆ.

    ಮೃತರನ್ನು ಮುರಾದನಗರ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಅಜಿತ್ ಪಾಲ್ ಸಂಬಂಧಿ ಎಂದು ತಿಳಿದುಬಂದಿದೆ. ಮೃತ ನರೇಶ್, ಪಿಡಬ್ಲ್ಯುಡಿ ಗುತ್ತಿಗೆದಾರರಾಗಿ ಕೆಲ ಸ ನಿರ್ವಹಿಸುತ್ತಿದ್ದರು. ಬೈಕಿನಲ್ಲಿ ಬಂದ ದುಷ್ಕರ್ಮಿಗಳು ದೇವಸ್ಥಾನದ ಸಮೀಪ ನರೇಶ್ ತ್ಯಾಗಿ ಅವರ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ಪರಿಣಾಮ ನರೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕೂಡಲೇ ದುಷ್ಕರ್ಮಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ.

    ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಲು ಈಗಾಗಲೇ ಎಸ್‍ಎಸ್‍ಪಿ 4 ತಂಡಗಳನ್ನು ರಚಿಸಲಾಗಿದೆ. ಇತ್ತ ಘಟನೆ ನಡೆದಿದ್ದಲ್ಲಿನ ಸ್ಥಳೀಯ ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಕೊಲೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ.

  • ಟಿವಿ ತೋರಿಸೋದಾಗಿ ಹೇಳಿ ಸಂಬಂಧಿಕನಿಂದಲೇ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ!

    ಟಿವಿ ತೋರಿಸೋದಾಗಿ ಹೇಳಿ ಸಂಬಂಧಿಕನಿಂದಲೇ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ!

    ಮೈಸೂರು: ಹೆಚ್.ಡಿ ಕೋಟೆಯ ಗ್ರಾಮವೊಂದರಲ್ಲಿ 11 ವರ್ಷದ ಬಾಲಕಿಯ ಮೇಲೆ ಸಂಬಂಧಿಕನೇ ಅತ್ಯಾಚಾರ ಮಾಡಿದ್ದಾನೆ..

    ಆರೋಪಿಯನ್ನು 25 ವರ್ಷದ ಚಂದ್ರಶೇಖರ್ ಎಂದು ಗುರುತಿಸಲಾಗಿದೆ. ಮೂಲತಃ ವಿಡಿಯೋಗ್ರಾಫರ್ ಆಗಿರುವ ಚಂದ್ರಶೇಖರ್ ಅತ್ಯಾಚಾರಕ್ಕೊಳಗಾದ ಬಾಲಕಿಯ ಸಂಬಂಧಿಕನಾಗಿದ್ದಾನೆ. ಈತ ಟಿವಿ ತೋರಿಸುವುದಾಗಿ ಹೇಳಿ ಬಾಲಕಿಯನ್ನು ತನ್ನ ಮನೆಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾನೆ.

    ಸದ್ಯಕ್ಕೆ ನೊಂದ ಬಾಲಕಿಯು ಹೆಚ್.ಡಿ ಕೋಟೆಯ ಸರಕಾರಿ ಆಸ್ಪತ್ರೆಯ `ಗೆಳತಿ’ ವಿಶೇಷ ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಈಗಾಗಲೇ ಚಂದ್ರಶೇಖರ್ ಅನ್ನು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.

    ಈ ಸಂಬಂಧ ಹೆಚ್.ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.