Tag: rebel MLA

  • ಮುಂಬೈನಿಂದ ರೆಬೆಲ್ ಶಾಸಕ ಶಿವರಾಮ್ ಹೆಬ್ಬಾರ್ ವಾಪಸ್

    ಮುಂಬೈನಿಂದ ರೆಬೆಲ್ ಶಾಸಕ ಶಿವರಾಮ್ ಹೆಬ್ಬಾರ್ ವಾಪಸ್

    ಕಾರವಾರ: ಮೈತ್ರಿ ಸರ್ಕಾರ ಬಿದ್ದ ಬೆನ್ನಲ್ಲೇ ಕಾಂಗ್ರೆಸ್‍ನ ರೆಬೆಲ್ ಶಾಸಕ ಶಿವರಾಮ್ ಹೆಬ್ಬಾರ್ ಅವರು ಮುಂಬೈನಿಂದ ವಾಪಸ್ ಆಗಿದ್ದಾರೆ.

    ಶಿವರಾಮ್ ಹೆಬ್ಬಾರ್ ಅವರು ಬುಧವಾರ ಸಂಜೆ ಯಲ್ಲಾಪುರದ ಮನೆಗೆ ಆಗಮಿಸಿದ್ದಾರೆ. ಸಾರ್ವಜನಿಕರಿಗೆ ತಿಳಿಯದಂತೆ ಶಾಸಕರು ಮನೆಗೆ ಸೇರಿದ್ದು, ಆಪ್ತರನ್ನು ಮಾತ್ರ ಕರೆದು ಮಾತುಕತೆ ನಡೆಸಿದ್ದಾರೆ. ಹೀಗಾಗಿ ಮನೆಗೆ ಬಾರದಂತೆ ಮಾಧ್ಯಮಗಳ ಮೇಲೆ ನಿರ್ಬಂಧ ಹೇರಿದ್ದಾರೆ.

    ಶಾಸಕ ಶಿವರಾಮ್ ಹೆಬ್ಬಾರ್ ಅವರು ಬಿಜೆಪಿ ಸೇರುವ ಕುರಿತು ಕುಟುಂಬದವರೊಂದಿಗೆ ಹಾಗೂ ಆಪ್ತರೊಂದಿಗೆ ಚರ್ಚೆ ನಡೆಸಿದ್ದಾರೆ. ರಾಜಕೀಯ ಭವಿಷ್ಯದಿಂದ ಬಿಜೆಪಿ ಸೇರುವುದು ಉತ್ತಮ. ಕ್ಷೇತ್ರದ ಅಭಿವೃದ್ಧಿ ಮಾಡಲು ಸಾಧ್ಯವಾಗುತ್ತದೆ ಅಂತ ತಿಳಿಸಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

  • ಅತೃಪ್ತರ ಮನವೊಲಿಕೆಗೆ ಸಿಎಂ, ಡಿಕೆಶಿಯಿಂದ ರಾತ್ರಿಯಿಡೀ ಪ್ರಯತ್ನ

    ಅತೃಪ್ತರ ಮನವೊಲಿಕೆಗೆ ಸಿಎಂ, ಡಿಕೆಶಿಯಿಂದ ರಾತ್ರಿಯಿಡೀ ಪ್ರಯತ್ನ

    ಬೆಂಗಳೂರು: ದೋಸ್ತಿ ಸರ್ಕಾರ ಉಳಿಸಿಕೊಳ್ಳಲು ಸಿಎಂ ಹಾಗೂ ಸಚಿವ ಡಿ.ಕೆ ಶಿವಕುಮಾರ್ ಅವರು ರಾತ್ರಿಯೆಲ್ಲಾ ಕಾರ್ಯಾಚರಣೆಗೆ ಇಳಿದಿದ್ದಾರೆ.

    ಸಿಎಂ ಹಾಗೂ ಡಿ.ಕೆ ಶಿವಕುಮಾರ್ ಅವರು ರಾತ್ರಿ ಅತೃಪ್ತರ ಮನೆಗೆ ಹೋಗಿ ಅವರ ಮನವೊಲಿಸಲು ಪ್ರಯತ್ನಿಸಿದ್ದಾರೆ. ಅಲ್ಲದೆ ನಿಮ್ಮ ಯಜಮಾನರಿಗೆ ವಾಪಸ್ ಬಂದು ಬಿಡಲು ಹೇಳಿ. ಇಲ್ಲದೇ ಹೋದರೆ 6 ವರ್ಷಗಳ ಕಾಲ ಅವರು ಅನರ್ಹರಾಗುತ್ತಾರೆ. ಅವರು ಈಗ ಬರದಿದ್ದರೆ ಮುಂದೆ ಪಶ್ಚಾತ್ತಾಪ ಪಡಬೇಕಾಗುತ್ತೆ ಎಂದು ಡಿಕೆಶಿ ಎಚ್ಚರಿಕೆ ನೀಡಿದ್ದಾರೆ.

    ಡಿಕೆ ಶಿವಕುಮಾರ್ ಅವರು ಎಲ್ಲಾ ಅತೃಪ್ತ ಶಾಸಕರ ಕುಟುಂಬದವನ್ನು ಸಂಪರ್ಕಸಿದ್ದಾರೆ. ನಮ್ಮ ಕುಟುಂಬದವರನ್ನು ಭೇಟಿ ಆಗುತ್ತಿದ್ದಾರೆ ಎಂಬ ವಿಚಾರ ತಿಳಿದ ತಕ್ಷಣ ಅತೃಪ್ತ ಶಾಸಕರು ಸ್ಪೀಕರ್ ಕಚೇರಿಗೆ ಪತ್ರ ರವಾನಿಸಿದ್ದಾರೆ.

     

    ಪತ್ರದಲ್ಲಿ ನಾವು ಈಗಾಗಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇವೆ. ರಾಜೀನಾಮೆಯನ್ನು ಶೀಘ್ರವೇ ಅಂಗೀಕರಿಸಬೇಕೆಂದು ನಾವು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದೇವೆ. ಇದರ ನಡುವೆ ನಮ್ಮ ಪಕ್ಷದ ಕಡೆಯಿಂದ ಅನರ್ಹತೆ ಅರ್ಜಿ ನಿಮ್ಮ ಬಳಿ ಬಂದಿದೆ ಅಂತ ಗೊತ್ತಾಗಿದೆ ಎಂದು ಉಲ್ಲೇಖಿಸಿದ್ದಾರೆ.

    ಅನರ್ಹತೆ ವಿಚಾರ ಸಂಬಂಧ ಪಕ್ಷದ ಕಡೆಯಿಂದ ಯಾವುದೇ ನೋಟಿಸ್ ಬಂದಿಲ್ಲ. ಆದರೆ ಇಂದು ನೀವು ಹಾಜರಾಗಿ ಎಂದು ನೋಟಿಸ್ ನೀಡಿದ್ದೀರಿ. ಕೆಲ ಅನಿವಾರ್ಯ ಕಾರಣಗಳಿಂದ ನಾವು ಹೊರಗಡೆ ಇದ್ದು ನಿಮ್ಮ ಪ್ರಶ್ನೆ ಉತ್ತರಿಸಲು ನಮಗೆ 4 ವಾರಗಳ ಸಮಯ ಬೇಕು ಎಂದು ಸ್ಪೀಕರ್ ಅವರಿಗೆ ಅತೃಪ್ತ ಶಾಸಕರು ಪತ್ರ ಬರೆದಿದ್ದಾರೆ.

  • ಪದೇ ಪದೇ ಮುಂಬೈಗೆ ಬಂದು ಶಾಂತಿ ಕೆಡಿಸ್ತಿದ್ದಾರೆ- ರೆಬೆಲ್ಸ್ ಕಿಡಿ

    ಪದೇ ಪದೇ ಮುಂಬೈಗೆ ಬಂದು ಶಾಂತಿ ಕೆಡಿಸ್ತಿದ್ದಾರೆ- ರೆಬೆಲ್ಸ್ ಕಿಡಿ

    ಮುಂಬೈ: ಪದೇ ಪದೇ ನಮ್ಮನ್ನು ಭೇಟಿ ಮಾಡಲು ಮುಂಬೈಗೆ ಬಂದು ನಮ್ಮ ಶಾಂತಿಯನ್ನು ಕೆಡಿಸುತ್ತಿದ್ದಾರೆ ಎಂದು ಮನವೊಲಿಕೆಗೆ ಬರುತ್ತಿರುವ ಹಿರಿಯ ನಾಯಕರ ವಿರುದ್ಧ ರೆಬೆಲ್ ಶಾಸಕರು ಕಿಡಿಕಾರಿದ್ದಾರೆ.

    ಮೈತ್ರಿ ಪಕ್ಷದ ಹಿರಿಯ ನಾಯಕರು ಇಂದು ಮುಂಬೈ ತೆರಳಿ ಅತೃಪ್ತರ ಮನ ಓಲೈಸುವ ಕಾರ್ಯ ಮಾಡುತ್ತಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಮುಂಬೈ ನಗರಿ ಮತ್ತೊಂದು ಹೈಡ್ರಾಮಾಕ್ಕೆ ವೇದಿಕೆ ಅಗುತ್ತಾ ಎಂಬ ಪ್ರಶ್ನೆ ಹುಟ್ಟುಕೊಂಡಿದೆ.

    ಯಾಕೆಂದರೆ ಪದೇ ಪದೇ ನಮ್ಮನ್ನು ಭೇಟಿ ಮಾಡಲು ಮುಂಬೈಗೆ ಬಂದು ನಮ್ಮ ಶಾಂತಿ ಕದಡುತ್ತಿದ್ದಾರೆಂದು ಅತೃಪ್ತರು ದೂರಿದ್ದು, ಅವರಿಂದ ನಮಗೆ ಜೀವಬೆದರಿಕೆಯಿದೆ ಹೀಗಾಗಿ ರಕ್ಷಣೆ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗುವ ಸಾಧ್ಯತೆಯಿದೆ ಎನ್ನಲಾಗಿದೆ.

    ಅದರಲ್ಲೂ ಕಾಂಗ್ರೆಸ್ ಪಕ್ಷದ 10 ಶಾಸಕರು ತಮ್ಮ ಪಕ್ಷದ ಹಿರಿಯ ನಾಯಕರ ವಿರುದ್ಧ ದೂರು ನೀಡಲು ಮುಂದಾಗಿದ್ದಾರೆ. ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಗುಲಾಂನಬಿ ಆಜಾದ್ ನಮ್ಮನ್ನು ಭೇಟಿ ಮಾಡಲು ಬರಲಿದ್ದಾರೆ. ನಮಗೆ ಯಾರನ್ನೂ ಭೇಟಿ ಮಾಡುವುದು ಇಷ್ಟವಿಲ್ಲವೆಂದು ಅತೃಪ್ತ ಶಾಸಕರು ಸ್ಥಳೀಯ ಠಾಣೆ ಮೂಲಕ ಮುಂಬೈ ಪೊಲೀಸ್ ಕಮೀಷನರ್ ಗೆ ಪತ್ರ ಬರೆದಿದ್ದಾರೆ.

    ಸೂಕ್ತ ಭದ್ರತೆ ನೀಡುವಂತೆ ಅತೃಪ್ತರು ಮಹಾರಾಷ್ಟ್ರ ಪೊಲೀಸರಿಗೆ ಮನವಿ ಮಾಡಿದ್ದು, ಸುಪ್ರೀಂಕೋರ್ಟ್ ಗೂ ಸಹ ಇಂದು ಮನವಿ ಸಲ್ಲಿಸಲು ಚಿಂತನೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

  • ಯೂ ಟರ್ನ್ ಹೊಡೆದ ಎಂಟಿಬಿ ನಾಗರಾಜ್

    ಯೂ ಟರ್ನ್ ಹೊಡೆದ ಎಂಟಿಬಿ ನಾಗರಾಜ್

    ಬೆಂಗಳೂರು: ಘಟಾನುಘಟಿ ನಾಯಕರ ಮುಂದೆ ರಾಜೀನಾಮೆ ವಾಪಸ್ ಪಡೆಯುತ್ತೇನೆ ಎಂದು ಹೇಳಿದ ಕಾಂಗ್ರೆಸ್ ಶಾಸಕ ಎಂ.ಟಿ.ಬಿ ನಾಗರಾಜ್ ಏಕಾಂಗಿಯಾಗಿ ಕಾರಿನಲ್ಲಿ ಸಿಕ್ಕಿದಾಗ ತಮ್ಮ ಮಾತಿನ ವರಸೆಯನ್ನೇ ಬದಲಿಸಿದರು. ಸುಧಾಕರ್ ರಾಜೀನಾಮೆ ವಾಪಸ್ ಪಡೆಯಲು ಒಪ್ಪಿಕೊಂಡಿಲ್ಲ ಎಂದಾದರೆ ನಾನೊಬ್ಬನೇ ವಾಪಸ್ ಬಂದು ಏನು ಮಾಡಲಿ ಎಂದು ಎಂಟಿಬಿ ನಾಗರಾಜ್ ಪ್ರಶ್ನಿಸಿದ್ದಾರೆ.

    ಸುಧಾಕರ್ ಅವರನ್ನು ಸಂಪರ್ಕ ಮಾಡಿ ಅವರ ಜೊತೆ ಮಾತನಾಡಿ ನಾವು ಸೆಟ್ಲ್ ಮಾಡಿದ್ದೀವಿ ನಿಂದೇನಪ್ಪಾ ಎಂದು ಕೇಳ್ತೀನಿ. ನಾವಿಬ್ಬರೂ ಜೊತೆಯಾಗಿಯೇ ರಾಜೀನಾಮೆ ನೀಡಿದ್ದೆವು. ಇದ್ದರೆ ಪಾರ್ಟಿಯಲ್ಲಿ ಇಬ್ಬರೂ ಇರಬೇಕು, ಹೋದರೆ ಇಬ್ಬರೂ ಹೋಗಬೇಕು ಅಂದುಕೊಂಡು ಬಂದಿದ್ದೆವು. ಅದರಂತೆಯೇ ಸುಧಾಕರ್ ಮನವೊಲಿಸಬೇಕಲ್ಲಾ ಎಂದು ಪ್ರಶ್ನಿಸಿದರು.

    ನಾನು ಕಾಂಗ್ರೆಸ್‍ನಲ್ಲೇ ಇರುವ ತೀರ್ಮಾನಕ್ಕೆ ಬಂದಿದ್ದೇನೆ. ನೀನೇನ್ ಯೋಚನೆ ಮಾಡ್ತೀಯಾ ಎಂದು ಸುಧಾಕರ್ ಅವರನ್ನು ಕೇಳುತ್ತೇನೆ. ನನ್ನ ಪ್ರಕಾರ ಸುಧಾಕರ್ ನನ್ನ ಮನವಿಗೆ ಒಪ್ಪಿಕೊಳ್ಳಲೇ ಬೇಕು. ಸುಧಾಕರ್ ಒಪ್ಪಿಕೊಂಡಿಲ್ಲ ಎಂದರೆ ನಾನು ಒಬ್ಬನೇ ಬಂದು ಏನು ಮಾಡೋಕಾಗುತ್ತದೆ ಎಂದು ಮಾತು ಮುಗಿಸಿ ಕಾರಿನಲ್ಲಿ ಹೊರಟರು.

    ಇದಕ್ಕೂ ಮುನ್ನ ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ನಡೆದ ಸಂಧಾನ ಸಭೆ ಬಳಿಕ ಸಚಿವ ಎಂಟಿಬಿ ನಾಗರಾಜ್ ಅವರು, ಕಾರಣಾಂತರಗಳಿಂದ ಮನಸ್ಸಿಗೆ ಬೇಜಾರು ಆಗಿತ್ತು. ಹೀಗಾಗಿ ರಾಜೀನಾಮೆ ಕೊಟ್ಟಿದ್ದೆ. ಈಗ ಪಕ್ಷದ ನಾಯಕರ ಮಾತಿಗೆ ಬೆಲೆ ಕೊಟ್ಟು ನಿರ್ಧಾರವನ್ನು ಬದಲಿಸಿ, ರಾಜೀನಾಮೆ ವಾಪಸ್ ಪಡೆಯುತ್ತೇನೆ. ಕಾಂಗ್ರೆಸ್‍ನಲ್ಲೇ ಉಳಿಯುತ್ತೇನೆ ಹಾಗೂ ಸ್ನೇಹಿತರನ್ನು ಕರೆತರುತ್ತೇನೆ ಎಂದು ಭರವಸೆ ನೀಡಿದರು.

    ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ಕೊಟ್ಟಿದ್ದೇನೆ. ಕಾಂಗ್ರೆಸ್ ಪಕ್ಷದಿಂದ ಹೊರ ಹೋಗುವುಕ್ಕೆ ನನಗೂ ಇಷ್ಟ ಇರಲಿಲ್ಲ. ಶಾಸಕ ಡಾ.ಸುಧಾಕರ್ ಹಾಗೂ ನಾನು ಆತ್ಮೀಯರು. ಹೀಗಾಗಿ ಇಬ್ಬರು ಚರ್ಚೆ ಮಾಡಿಯೇ ರಾಜೀನಾಮೆ ಸಲ್ಲಿಸಿದ್ದೇವು. ಇಂದು ಹಿರಿಯ ನಾಯಕರು ಪಕ್ಷಕ್ಕೆ ನನ್ನ ಅವಶ್ಯಕತೆ ಎಷ್ಟಿದೆ ಎನ್ನುವುದನ್ನು ಮನವರಿಕೆ ಮಾಡಿದ್ದಾರೆ. ಹೀಗಾಗಿ ರಾಜೀನಾಮೆ ವಾಪಸ್ಸು ಪಡೆಯುತ್ತೇನೆ. ರಾಜೀನಾಮೆ ವಾಪಸ್ ಪಡೆಯುವಂತೆ ಸುಧಾಕರ್ ಅವರಿಗೂ ಸಲಹೆ ನೀಡುತ್ತೇನೆ ಎಂದು ಹೇಳಿದರು.

    ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ, ಸುಧಾಕರ್ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ. ಅವರು ಮುಂಬೈನಿಂದ ವಾಪಸ್ ಬರುತ್ತಾರೆ ಎಂಬ ನಂಬಿಕೆ ನನಗಿದೆ. ವಿಶ್ವಾಸಮತಯಾಚನೆ ವೇಳೆಗೆ ಎಲ್ಲ ಅತೃಪ್ತ ಶಾಸಕರ ಮನವೊಲಿಕೆ ಯತ್ನಿಸುತ್ತೇವೆ ಎಂದು ತಿಳಿಸಿದರು.

  • ರಾಜೀನಾಮೆ ವಾಪಸ್ ಪಡೆಯುತ್ತೇನೆ: ಎಂಟಿಬಿ ನಾಗರಾಜ್

    ರಾಜೀನಾಮೆ ವಾಪಸ್ ಪಡೆಯುತ್ತೇನೆ: ಎಂಟಿಬಿ ನಾಗರಾಜ್

    ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿದ್ದು, ಸಚಿವ ಎಂಟಿಬಿ ನಾಗರಾಜ್ ಅವರು ರಾಜೀನಾಮೆ ವಾಪಸ್ ಪಡೆಯಲು ಮುಂದಾಗಿದ್ದಾರೆ.

    ಅತೃಪ್ತ ಶಾಸಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದ ಎಂಟಿಬಿ ನಾಗರಾಜ್ ಅವರ ಮನವೊಲಿಸುವಲ್ಲಿ ಸಿಎಂ, ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವರಾದ ಡಿ.ಕೆ.ಶಿವಕುಮಾರ್, ಜಮೀರ್ ಅಹ್ಮದ್ ಖಾನ್ ಯಶಸ್ವಿಯಾಗಿದ್ದಾರೆ. ಈ ಮೂಲಕ ದೋಸ್ತಿ ಸರ್ಕಾರ ಕೊಂಚ ನಿರಾಳವಾಗಿದೆ.

    ಸಂಧಾನ ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವ ಎಂಟಿಬಿ ನಾಗರಾಜ್ ಅವರು, ಕಾರಣಾಂತರಗಳಿಂದ ಮನಸ್ಸಿಗೆ ಬೇಜಾರು ಆಗಿತ್ತು. ಹೀಗಾಗಿ ರಾಜೀನಾಮೆ ಕೊಟ್ಟಿದ್ದೆ. ಈಗ ಪಕ್ಷದ ನಾಯಕರ ಮಾತಿಗೆ ಬೆಲೆ ಕೊಟ್ಟು ನಿರ್ಧಾರವನ್ನು ಬದಲಿಸಿ, ರಾಜೀನಾಮೆ ವಾಪಸ್ ಪಡೆಯುತ್ತೇನೆ. ಕಾಂಗ್ರೆಸ್‍ನಲ್ಲೇ ಉಳಿಯುತ್ತೇನೆ ಹಾಗೂ ಸ್ನೇಹಿತರನ್ನು ಕರೆತರುತ್ತೇನೆ ಎಂದು ಭರವಸೆ ನೀಡಿದರು.

    ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ಕೊಟ್ಟಿದ್ದೇನೆ. ಕಾಂಗ್ರೆಸ್ ಪಕ್ಷದಿಂದ ಹೊರ ಹೋಗುವುಕ್ಕೆ ನನಗೂ ಇಷ್ಟ ಇರಲಿಲ್ಲ. ಶಾಸಕ ಡಾ.ಸುಧಾಕರ್ ಹಾಗೂ ನಾನು ಆತ್ಮೀಯರು. ಹೀಗಾಗಿ ಇಬ್ಬರು ಚರ್ಚೆ ಮಾಡಿಯೇ ರಾಜೀನಾಮೆ ಸಲ್ಲಿಸಿದ್ದೇವು. ಹಿರಿಯ ನಾಯಕರು ಪಕ್ಷಕ್ಕೆ ನನ್ನ ಅವಶ್ಯಕತೆ ಎಷ್ಟಿದೆ ಎನ್ನುವುದನ್ನು ಇಂದು ಮನವರಿಕೆ ಮಾಡಿದ್ದಾರೆ. ಹೀಗಾಗಿ ರಾಜೀನಾಮೆ ವಾಪಸ್ಸು ಪಡೆಯುತ್ತೇನೆ. ರಾಜೀನಾಮೆ ವಾಪಸ್ ಪಡೆಯುವಂತೆ ಸುಧಾಕರ್ ಅವರಿಗೂ ಸಲಹೆ ನೀಡುತ್ತೇನೆ ಎಂದು ಹೇಳಿದರು.

    ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ, ಸುಧಾಕರ್ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ. ಅವರು ಮುಂಬೈನಿಂದ ವಾಪಸ್ ಬರುತ್ತಾರೆ ಎಂಬ ನಂಬಿಕೆ ನನಗಿದೆ. ವಿಶ್ವಾಸಮತಯಾಚನೆ ವೇಳೆಗೆ ಎಲ್ಲ ಅತೃಪ್ತ ಶಾಸಕರ ಮನವೊಲಿಕೆ ಯತ್ನಿಸುತ್ತೇವೆ ಎಂದು ತಿಳಿಸಿದರು.

  • ರಾಜೀನಾಮೆ ಅಂಗೀಕಾರಕ್ಕೆ ಸುಪ್ರೀಂ ಮೊರೆ ಹೋದ ಶಾಸಕರು – ದೂರಿನಲ್ಲಿ ಏನಿದೆ?

    ರಾಜೀನಾಮೆ ಅಂಗೀಕಾರಕ್ಕೆ ಸುಪ್ರೀಂ ಮೊರೆ ಹೋದ ಶಾಸಕರು – ದೂರಿನಲ್ಲಿ ಏನಿದೆ?

    ಬೆಂಗಳೂರು: ಮುಂಬೈನಲ್ಲಿರುವ ಅತೃಪ್ತ ಶಾಸಕರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ನಮ್ಮ ರಾಜೀನಾಮೆ ಅಂಗೀಕರಿಸಲು ಸ್ಪೀಕರ್ ಅವರಿಗೆ ನಿರ್ದೇಶನ ನೀಡುವಂತೆ ಮನವಿ ಸಲ್ಲಿಸಿದ್ದಾರೆ.

    ಇಂದು ಬೆಳಗ್ಗೆ ಮುಂಬೈನಲ್ಲಿರುವ 10 ಶಾಸಕರು ಅರ್ಜಿಯನ್ನು ಸಲ್ಲಿಸಿದ್ದಾರೆ. ಶನಿವಾರ ನಾವು ಸ್ಪೀಕರ್ ಕಚೇರಿಗೆ ತೆರಳಿ ರಾಜೀನಾಮೆ ಸಲ್ಲಿಸಿದ್ದೇವೆ. ಆದರೆ ಇಲ್ಲಿಯವರೆಗೂ ರಾಜೀನಾಮೆ ಅಂಗೀಕಾರವಾಗಿಲ್ಲ. ಹೀಗಾಗಿ ರಾಜೀನಾಮೆಯನ್ನು ಅಂಗೀಕಾರ ಮಾಡುವಂತೆ ಸ್ಪೀಕರ್ ಅವರಿಗೆ ಸೂಚನೆ ನೀಡಬೇಕೆಂದು 10 ಶಾಸಕರು ಮನವಿ ಮಾಡಿದ್ದಾರೆ.

    ಈ ಸಂಬಂಧ ನ್ಯಾಯಾಲಯ ಅರ್ಜಿಯ ತುರ್ತು ವಿಚಾರಣೆಗೆ ಗುರುವಾರ ಸಮಯ ನೀಡಿದೆ. ಅರ್ಜಿದಾರರ ಪರವಾಗಿ ಹಿರಿಯ ವಕೀಲ ಮುಕುಲ್ ರೋಹ್ಟಗಿ ವಾದ ಮಂಡಿಸಲಿದ್ದಾರೆ. ಮುಖ್ಯ. ನ್ಯಾ.ರಂಜನ್ ಗೋಗೊಯ್ ಅವರಿದ್ದ ಪೀಠ ಅರ್ಜಿಯನ್ನು ವಿಚಾರಣೆಯನ್ನು ನಡೆಸಲಿದೆ.

    ದೂರಿನಲ್ಲಿ ಏನಿದೆ?
    ಜುಲೈ 6ರಂದು ಎಲ್ಲ 10 ಶಾಸಕರು ರಾಜೀನಾಮೆ ಸಲ್ಲಿಸಲು ವಿಧಾನಸೌಧಕ್ಕೆ ಆಗಮಿಸುತ್ತಿರುವ ವಿಷಯ ತಿಳಿದು ಸ್ಪೀಕರ್ ಕಚೇರಿಯಿಂದ ಹೊರ ನಡೆದಿದ್ದಾರೆ. ಹೀಗಾಗಿ ಸ್ಪೀಕರ್ ಕಚೇರಿಯ ಕಾರ್ಯದರ್ಶಿಗಳಿಗೆ ರಾಜೀನಾಮೆಯನ್ನು ಸಲ್ಲಿಸಿದ್ದೇವೆ. ಅಲ್ಲಿಂದ ನೇರವಾಗಿ ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆಯನ್ನು ಸಲ್ಲಿಸಲಾಗಿದೆ. ಪಕ್ಷೇತರ ಶಾಸಕರಿಬ್ಬರು ಮೈತ್ರಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದಿದ್ದಾರೆ. ಸ್ಪೀಕರ್ ಉದ್ದೇಶಪೂರ್ವಕವಾಗಿಯೇ ಜುಲೈ 9ರವರೆಗೆ ಬೇಕೆಂತಲೇ ಕಚೇರಿಗೆ ಬಂದಿಲ್ಲ. ಈಗಾಗಲೇ ಇಬ್ಬರು ಪಕ್ಷೇತರ ಶಾಸಕರು ಸರ್ಕಾರಕ್ಕೆ ನೀಡಿದ ಬೆಂಬಲವನ್ನು ವಾಪಸ್ ಪಡೆದು ಬಿಜೆಪಿಗೆ ಬೆಂಬಲವನ್ನು ನೀಡಿದ್ದಾರೆ.

    ಜುಲೈ 9ರಂದು ಕಚೇರಿಗೆ ಆಗಮಿಸಿದ ಸ್ಪೀಕರ್, ಎಂಟು ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲ, ಐವರ ಶಾಸಕರ ಪತ್ರಗಳು ಕ್ರಮಬದ್ಧವಾಗಿದೆ ಎಂದು ತಿಳಿಸಿದ್ದಾರೆ. ಜುಲೈ 12ರಂದು ವಿಚಾರಣೆಗೆ ಹಾಜರಾಗಬೇಕೆಂದು ಐವರಲ್ಲಿ ಮೂವರಿಗೆ ತಿಳಿಸಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಸಭೆಯ ನಾಯಕರು ರಾಜೀನಾಮೆ ಸಲ್ಲಿಸಿರುವ ಶಾಸಕರನ್ನು ಅನರ್ಹಗೊಳಿಸಬೇಕೆಂದು ಸ್ವೀಕರ್ ಅವರಿಗೆ ಅರ್ಜಿ ಸಲ್ಲಿಸಿದ್ದಾರೆ. 10 ಶಾಸಕರು ತಮ್ಮ ಸ್ವಇಚ್ಛೆಯಿಂದ ರಾಜೀನಾಮೆ ಸಲ್ಲಿಸಿದ್ರೆ ಅವರನ್ನು ಅನರ್ಹಗೊಳಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಸ್ವೀಕರ್ ಅವರಿಗೆ ಸಲ್ಲಿಸಿರುವ ಅರ್ಜಿಯನ್ನು ರದ್ದುಗೊಳಿಸಬೇಕು.

    ಜುಲೈ 12ರಂದು ಅಧಿವೇಶನ ಆರಂಭಗೊಳ್ಳಲಿದ್ದು, ಅಂದೇ ಸ್ಪೀಕರ್ ರಾಜೀನಾಮೆ ಕ್ರಮಬದ್ಧವಾಗಿರುವ ಶಾಸಕರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಸ್ಪೀಕರ್ ನಡೆ ಯಾರದ್ದೊ ಒತ್ತಡಕ್ಕೆ ಮಣಿದಂತೆ ಕಾಣುತ್ತಿದೆ. ಬಹುಮತವಿಲ್ಲದ ಸರ್ಕಾರ ಶಾಸಕರನ್ನು ಅನರ್ಹಗೊಸುವಂತೆ ಬೆದರಿಕೆಯನ್ನು ಹಾಕಿದೆ. ಶಾಸಕರಾದ ನಾವು ಯಾವುದೇ ಭಯ, ಒತ್ತಡ, ಪ್ರಲೋಭನೆಗೆ ಬಲಿಯಾಗದೇ ಸ್ವಇಚ್ಛೆಯಿಂದ ರಾಜೀನಾಮೆ ನೀಡಿದ್ದೇವೆ.

    ನಮ್ಮ ರಾಜೀನಾಮೆ ಅಂಗೀಕಾರವಾಗದೇ ಇರೋದು ಸಂವಿಧಾನದ 14ನೇ ಪರಿಚ್ಚೇದದ ಸ್ಪಷ್ಟ ಉಲ್ಲಂಘನೆ ಆಗಿದೆ. ನಾವು ಕರ್ನಾಟಕ ವಿಧಾನಸಭಾ ನಿಯಮಾವಳಿ ರೂಲ್ ನಂಬರ್ 202 ಪ್ರಕಾರ ರಾಜೀನಾಮೆ ಪತ್ರ ಸಲ್ಲಿಸಿದೇವೆ. ಆರ್ಟಿಕಲ್ 190 ರ ಪ್ರಕಾರ ರಾಜೀನಾಮೆ ಪತ್ರದಲ್ಲಿ ಕೇವಲ ಸಹಿ ಇದ್ರೆ ಸಾಕು ಜೊತೆಗೆ ಸ್ಪೀಕರ್ ಗೆ ತೃಪ್ತಿ ಆದ್ರೆ ಸಾಕು. ರಾಜೀನಾಮೆ ಪತ್ರ ಹೀಗೆ ಇರಬೇಕು ಎಂಬ ಕಾನೂನು ಇಲ್ಲ. ನಾವು ಸ್ಪೀಕರ್ ಕಚೇರಿಗೆ ಹೋಗಿರುವ ಬಗ್ಗೆ ಮಾಧ್ಯಮಗಳಲ್ಲಿ ಬಂದಿದೆ, ಅದನ್ನು ಸ್ಪೀಕರ್ ಕೂಡಾ ನೋಡಿದ್ದಾರೆ.

    ಸ್ಪೀಕರ್ ಕಾನೂನು ಪ್ರಕಾರ ನಡೆದುಕೊಳ್ಳುತ್ತಿಲ್ಲ ಮತ್ತು ಪಕ್ಷಪಾತ ನೀತಿ ಅನುಸರಿಸುತ್ತಿದ್ದಾರೆ. ಈಗ ಮೈತ್ರಿ ಸರ್ಕಾರ ಅಧಿಕೃತವಾಗಿ ಬಹುಮತ ಕಳೆದುಕೊಂಡಿದೆ. ಹೀಗಿದ್ದರೂ ರಮೇಶ್ ಕುಮಾರ್ ತಾವು ಸದನದ ಸ್ಪೀಕರ್ ಅಂತಾ ಅಂದುಕೊಂಡಿದ್ದಾರೆ. ಬಹುಮತ ಕಳೆದುಕೊಂಡ ಸರ್ಕಾರದಲ್ಲಿ ಸ್ಪೀಕರ್ ಮತ್ತು ಸಿಎಂ ಪವರ್ ಲೇಸ್ ಇದ್ದಂಗೆ. ಹಾಗಾಗಿ ನ್ಯಾಯಾಲಯ ಮಧ್ಯಪ್ರವೇಶಿಸಿ, ಸಂವಿಧಾನ ಉಳಿಸಬೇಕು. ನಮ್ಮ ಅರ್ಜಿಯನ್ನ ಮಾನ್ಯ ಮಾಡಬೇಕು. ಸ್ಪೀಕರ್ ನಮ್ಮ ರಾಜೀನಾಮೆಯನ್ನ ಅಂಗೀಕರಿಸುವಂತೆ ನ್ಯಾಯಾಲಯ ನಿರ್ದೇಶನ ನೀಡಬೇಕು.

  • ರೆಬೆಲ್ ಶಾಸಕರಿಗೆ ಕೊನೆಯ ಅವಕಾಶ- ಕಾದು ನೋಡಲು ಮುಂದಾದ ಕೈ ಪಡೆ

    ರೆಬೆಲ್ ಶಾಸಕರಿಗೆ ಕೊನೆಯ ಅವಕಾಶ- ಕಾದು ನೋಡಲು ಮುಂದಾದ ಕೈ ಪಡೆ

    ಬೆಂಗಳೂರು: ಬಂಡಾಯ ಶಾಸಕರ ವಿರುದ್ಧ ಅನರ್ಹತೆ ಅಸ್ತ್ರ ಬಳಸಲು ಮುಂದಾಗಿರುವ ಕಾಂಗ್ರೆಸ್ ಕೊನೆಯ ಘಳಿಗೆಯವರೆಗೆ ಕಾದು ನೋಡುವ ತಂತ್ರಕ್ಕೆ ಮುಂದಾಗಿದೆ.

    ಹೌದು. ಇಂದೇ ಅನರ್ಹತೆಗೆ ಶಿಫಾರಸ್ಸು ಮಾಡದೆ ಒಂದೆರಡು ದಿನ ಕಾದು ನೋಡಲು ಕೈ ಪಾಳಯ ನಿರ್ಧರಿಸಿದೆ. ಅತೃಪ್ತರು ರಾಜೀನಾಮೆ ನೀಡುವ ಸಾಧ್ಯತೆ ತೀರಾ ಕಡಿಮೆಯಿದ್ದು, ಅಧಿವೇಶನಕ್ಕೂ ಹಾಜರಾಗೋದು ಡೌಟು ಎನ್ನಲಾಗ್ತಿದೆ.

    ಶುಕ್ರವಾರ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದಿದ್ದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಅತೃಪ್ತರ ಅನರ್ಹತೆಗೆ ಸ್ಪೀಕರ್‍ಗೆ ಶಿಫಾರಸ್ಸು ಮಾಡಲು ನಿರ್ಧರಿಸಲಾಗಿತ್ತು. ಆದ್ರೆ ಇದೀಗ ಅತೃಪ್ತರಿಗೆ ಕಡೆಯ ಅವಕಾಶ ನೀಡುವ ಬಗ್ಗೆ ಯೋಚಿಸಲಾಗ್ತಿದೆ. ಶುಕ್ರವಾರ ಶಾಸಕರು ಗೈರಾಗುವ ಅಥವಾ ಸದನಕ್ಕೆ ಬಂದು ಕ್ರಾಸ್ ವೋಟಿಂಗ್ ಮಾಡಿದ್ರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ.  ಇದನ್ನೂ ಓದಿ: ಕೈ ಅತೃಪ್ತರ ಅನರ್ಹತೆ ಯಾವಾಗ? ಕಾಂಗ್ರೆಸ್ ನಡೆ ಏನು?

    ರಾಜೀನಾಮೆಯಿಂದ ಏನು ಪ್ರಯೋಜನವಿಲ್ಲ ಎಂಬುದನ್ನ ಅರಿತ ಶಾಸಕರು ಸದನಕ್ಕೆ ಬಂದು ಅವಮಾನ ಎದುರಿಸುವ ಬದಲು, ಬಜೆಟ್ ಅನುಮೋದನೆ ದಿನವೇ ಬಂದು ಸದನದಲ್ಲಿ ಬಂದು ತಮ್ಮ ಸಹಮತ ವ್ಯಕ್ತಪಡಿಸಿ ಅನರ್ಹತೆ ಭೀತಿಯಿಂದ ಪಾರಾಗುವ ಸಾಧ್ಯತೆ ಇದೆ ಎಂಬುದಾಗಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಅತೃಪ್ತರು ಗೈರಾಗಿದ್ದು ಯಾಕೆ? ಅನರ್ಹತೆಗೊಳಿಸಿದ್ದು ಯಾಕೆ? ಸಿದ್ದರಾಮಯ್ಯ ನೀಡಿದ ಸ್ಪಷ್ಟನೆ ಏನು?

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv