Tag: rebels

  • ನಿಮಗೆ ತಾಕತ್ ಇದ್ರೆ ಚುನಾವಣೆಗೆ ಬನ್ನಿ: ರೆಬೆಲ್ ಶಾಸಕರಿಗೆ ಸವಾಲೆಸೆದ ಆದಿತ್ಯ ಠಾಕ್ರೆ

    ನಿಮಗೆ ತಾಕತ್ ಇದ್ರೆ ಚುನಾವಣೆಗೆ ಬನ್ನಿ: ರೆಬೆಲ್ ಶಾಸಕರಿಗೆ ಸವಾಲೆಸೆದ ಆದಿತ್ಯ ಠಾಕ್ರೆ

    ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಹೈಡ್ರಾಮಾ ನಿಲ್ಲುವಂತೆ ಕಾಣುತ್ತಿಲ್ಲ. ಇತ್ತ ಅಸ್ಸಾಂನಲ್ಲಿ ಕುಳಿತಿರುವ ರೆಬೆಲ್ ಶಾಸಕರಿಗೆ ತಾಕತ್ ಇದ್ರೆ ಪಕ್ಷ ತೊರೆದು ಚುನಾವಣೆ ಎದುರಿಸಿ ಎಂದು ಮಹಾರಾಷ್ಟ್ರ ಸಚಿವ ಆದಿತ್ಯ ಠಾಕ್ರೆ ಸವಾಲು ಹಾಕಿದ್ದಾರೆ.

    ಶಿವಸೇನೆ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾತನಾಡಿದ ಅವರು, ಅಸ್ಸಾಂ ಸೇರಿರುವ ಬಂಡಾಯ ನಾಯಕರಿಗೆ ತಾಕತ್ ಇದ್ದರೆ ಶಿವಸೇನೆಯನ್ನು ತ್ಯಜಿಸಿ ರಾಜೀನಾಮೆ ನೀಡಿ ಚುನಾವಣೆ ಎದುರಿಸಿ. ನಿಮ್ಮ ಪ್ರಕಾರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅಸಮರ್ಥ ಆಡಳಿತಗಾರರಾದರೆ ನೀವೆಲ್ಲರೂ ಕೂಡ ಅಸಮರ್ಥ ನಾಯಕರೇ ಹಾಗಾಗಿ ಜನರ ಮುಂದೆ ನಡೆಯೋಣ. ಇದು ಸತ್ಯ ಸುಳ್ಳುಗಳ ಯುದ್ಧವಾಗಿದ್ದು, ಸತ್ಯಕ್ಕೆ ಜಯ ಸಿಕ್ಕೇ ಸಿಗುತ್ತದೆ. ನಾವು ಗೆಲ್ಲುತ್ತೇವೆ. ಆದರೆ, ನಮಗಾದ ದ್ರೋಹವನ್ನು ಎಂದಿಗೂ ಮರೆಯುವುದಿಲ್ಲ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಮುಂದುವರಿದ ರಾಜಕೀಯ ಬಿಕ್ಕಟ್ಟು – ಶಿಂಧೆ, ಫಡ್ನವೀಸ್ ಭೇಟಿ ಸರ್ಕಾರ ರಚನೆ ಚರ್ಚೆ

    ಇತ್ತ ಬಂಡಾಯದ ಬಾವುಟ ಹಾರಿಸಿ ಮಹಾ ವಿಕಾಸ್ ಅಘಾಡಿ ಸರ್ಕಾರಕ್ಕೆ ಸಂಕಷ್ಟ ತಂದೊಡ್ಡಿರುವ ಅತೃಪ್ತ ಶಾಸಕರ ನಾಯಕ ಏಕನಾಥ್ ಶಿಂಧೆ ಜೊತೆಗಿರುವ 50ಕ್ಕೂ ಹೆಚ್ಚು ನಾಯಕರು ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸುವ ಕಸರತ್ತಿನಲ್ಲಿದ್ದಾರೆ. ಇದನ್ನೂ ಓದಿ: ಯೋಗಿ ಆದಿತ್ಯನಾಥ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ಗೆ ಪಕ್ಷಿ ಬಡಿದು ಎಮರ್ಜೆನ್ಸಿ ಲ್ಯಾಂಡಿಂಗ್

    ಈ ನಡುವೆ ಶಿವಸೇನಾ ಹೆಸರಿಗಾಗಿ ಮೂಲ ಶಿವಸೇನೆ ನಾಯಕರು ಬಂಡಾಯ ಶಾಸಕರ ನಡುವೆ ಫೈಟ್ ಜೋರಾಗಿದೆ. ಶಿವಸೇನೆ ಮತ್ತು ಬಾಳಾ ಸಾಹೇಬ್ ಠಾಕ್ರೆ ಹೆಸರು ಬಳಕೆ ಮಾಡದಂತೆ ಸಿಎಂ ಉದ್ಧವ್ ಠಾಕ್ರೆ ಎಚ್ಚರಿಕೆ ನೀಡಿದ್ದಾರೆ. ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಧಾರ ಕೈಗೊಂಡಿದ್ದ ಶಿವಸೇನೆ ನಾಯಕರು ಬಂಡಾಯ ಶಾಸಕರಿಗೆ ಪಕ್ಷದ ಹೆಸರು ಮತ್ತು ಅದರ ನಾಯಕರ ಹೆಸರು ಬಳಸಿಕೊಳ್ಳುವ ಅವಕಾಶ ಇಲ್ಲ, ಮತ್ತು ಪಕ್ಷದ್ರೋಹ ಮಾಡಿದ ಏಕನಾಥ್‌ ಶಿಂಧೆ ವಿರುದ್ಧ ಕ್ರಮಕ್ಕೆ ತಿರ್ಮಾನ ಮಾಡಲಾಗಿತ್ತು. ಬಂಡಾಯ ಶಾಸಕರು ಶಿವಸೇನೆ ಬಾಳಾ ಸಾಹೇಬ್ ಠಾಕ್ರೆ ಹೆಸರು ಬಳಕೆ ಮಾಡದಿರಲು ಸೂಚಿಸುವಂತೆ ಮೂಲ ಶಿವಸೇನೆ ನಾಯಕರು ಚುನಾವಣೆ ಆಯೋಗದ ಮೊರೆ ಕೂಡಾ ಹೋಗಿದ್ದಾರೆ.

    Live Tv

  • ಕಾಂಗ್ರೆಸ್ ಕದ ತಟ್ಟಿದ ನಾಲ್ವರು ರೆಬೆಲ್ಸ್

    ಕಾಂಗ್ರೆಸ್ ಕದ ತಟ್ಟಿದ ನಾಲ್ವರು ರೆಬೆಲ್ಸ್

    ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅನರ್ಹ ಶಾಸಕರ ವಿರುದ್ಧ ಸ್ಪರ್ಧಿಸಿ ಸೋತಿದ್ದ ಬಿಜೆಪಿ ಅಭ್ಯರ್ಥಿಗಳ ಪೈಕಿ ನಾಲ್ವರು ಕಾಂಗ್ರೆಸ್ ಸೇರುವುದು ಬಹುತೇಕ ಖಚಿತವಾಗಿದೆ.

    ಹೊಸಕೋಟೆಯ ಶರತ್ ಬಚ್ಚೇಗೌಡ, ಕಾಗವಾಡದ ರಾಜು ಕಾಗೆ, ಹಿರೇಕೆರೂರಿನ ಯು.ಬಿ. ಬಣಕಾರ್ ಹಾಗೂ ಗೋಕಾಕ್‍ನ ಅಶೋಕ್ ಪೂಜಾರಿ ಅವರನ್ನು ವಿವಿಧ ನಿಗಮ, ಮಂಡಳಿಗಳ ಅಧ್ಯಕ್ಷರನ್ನಾಗಿ ನೇಮಿಸಿ ಬಿಜೆಪಿ ಸರ್ಕಾರ ಆದೇಶ ಹೊರಡಿಸಿದೆ.

    ಆದರೆ ಇದನ್ನು ಒಪ್ಪಿಕೊಳ್ಳದೆ ಡಿ.5 ರಂದು ನಿಗದಿಯಾಗಿರುವ ಉಪ ಚುನಾವಣೆಗೆ ಟಿಕೆಟ್ ಬೇಕೆಂದು ಇವರೆಲ್ಲ ಪಟ್ಟು ಹಿಡಿದಿದ್ದಾರೆ. ಈ ಕ್ಷೇತ್ರಗಳಲ್ಲಿ ಅನರ್ಹ ಶಾಸಕರು ಬಿಜೆಪಿ ಪರ ಕಣಕ್ಕೆ ಇಳಿಯುವುದು ಬಹುತೇಕ ನಿಶ್ಚಿತವಾಗಿದೆ. ಹೀಗಾಗಿ ತಮ್ಮ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಕಾಂಗ್ರೆಸ್ ಸೇರ್ಪಡೆಗೆ ಪರಾಜಿತರು ಒಲವು ತೋರಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

    ಈಗಾಗಲೇ ಈ ನಾಲ್ವರು ತಮ್ಮ ಒಲವನ್ನು ಕಾಂಗ್ರೆಸ್ ನಾಯಕರಿಗೆ ತಲುಪಿಸಿದ್ದು ಈ ಬಗ್ಗೆ ಒಂದೆರಡು ಸುತ್ತಿನ ಸಮಾಲೋಚನೆಗಳು ನಡೆದಿವೆ ಎನ್ನಲಾಗಿದೆ.