Tag: red alert

  • ಜನರೇ ಗಮನಿಸಿ, ಇಂದು 3 ಜಿಲ್ಲೆಗೆ ರೆಡ್‌, 6 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ

    ಜನರೇ ಗಮನಿಸಿ, ಇಂದು 3 ಜಿಲ್ಲೆಗೆ ರೆಡ್‌, 6 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ

    ಬೆಂಗಳೂರು: ಇಂದು ಮೂರು ಜಿಲ್ಲೆಗೆ ರೆಡ್ ಅಲರ್ಟ್, ಆರು ಜಿಲ್ಲೆಗಳಿಗೆ ಹವಾಮಾನ ಇಲಾಖೆ (IMD) ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ.

    ಬೆಳಗಾವಿ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ (Red Alert) ಘೋಷಣೆಯಾಗಿದ್ದರೆ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಧಾರವಾಡ, ಗದಗ, ಹಾವೇರಿ, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ (Orange Alert) ಘೋಷಣೆಯಾಗಿದೆ.  ಇದನ್ನೂ ಓದಿ: ರಾಜ್ಯದಲ್ಲಿ ಮುಂದುವರಿದ ವರುಣಾರ್ಭಟ ಹಾಸನದ ಕೆಲವು ತಾಲೂಕಿನ, ಉಡುಪಿಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

    ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು ಸೇರಿದಂತೆ ಉಳಿದ ಎಲ್ಲಾ ಜಿಲ್ಲೆಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

    ಗಾಳಿಯ ವೇಗ ಗಂಟೆಗೆ 40-50ಕಿ.ಮೀ ಇರಲಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

    ರೆಡ್‌ ಅಲರ್ಟ್‌:
    ಇದು ಅತ್ಯುನ್ನತ ಮಟ್ಟದ ಎಚ್ಚರಿಕೆಯಾಗಿದ್ದು, ಜೀವ ಮತ್ತು ಆಸ್ತಿಗೆ ಗಮನಾರ್ಹ ಅಪಾಯವನ್ನುಂಟುಮಾಡುವ ಸಾಧ್ಯತೆ ಇರುತ್ತದೆ. ಅಪಾಯಗಳನ್ನು ತಗ್ಗಿಸಲು ಜನರು ಅಧಿಕಾರಿಗಳ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕಾಗುತ್ತದೆ. ರೆಡ್‌ ಅಲರ್ಟ್‌ ಘೋಷಣೆಯಾದರೆ 24 ಗಂಟೆಗಳ ಅವಧಿಯಲ್ಲಿ 204.5 ಮಿ.ಮೀ. ಮೀರಿದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಭಾರೀ ಮಳೆ ಬೆಳಗಾವಿಯಲ್ಲಿ 8 ಸೇತುವೆ ಜಲಾವೃತ

    ಆರೆಂಜ್‌ ಅಲರ್ಟ್‌:
    ರೆಡ್‌ ಅಲರ್ಟ್‌ನಲ್ಲಿ ಘೋಷಣೆಯಾದಷ್ಟು ಜಾಸ್ತಿ  ಅಪಾಯ ಆಗದೇ ಇದ್ದರೂ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಅಲರ್ಟ್‌ ಘೋಷಣೆಯಾದ ಜಿಲ್ಲೆಗಳಲ್ಲಿ 24 ಗಂಟೆಗಳಲ್ಲಿ 115.6-204.4 ಮಿ.ಮೀ. ನಡುವೆ ಮಳೆಯಾಗುವ ಸಂಭವವಿದೆ.

    ಯೆಲ್ಲೂ ಅಲರ್ಟ್‌:
    ರೆಡ್‌ ಮತ್ತು ಆರೆಂಜ್‌ ಅಲರ್ಟ್‌ನಲ್ಲಿ ಆಗುವಷ್ಟು ಮಳೆ ಬೀಳದೇ ಇದ್ದರೂ ದೈನಂದಿನ ದಿನಚರಿಗಳಿಗೆ ಕೆಲವು ಅಡಚಣೆಗಳನ್ನು ಉಂಟು ಮಾಡಬಹುದು. ಮುಂದಿನ 24 ಗಂಟೆಯಲ್ಲಿ 64.5–115.5 ಮಿ.ಮೀ. ಮಳೆ ಬೀಳುವ ಸಾಧ್ಯತೆಯಿದೆ.

     

  • ದೆಹಲಿಯಲ್ಲಿ ಭಾರೀ ಮಳೆ – ರೆಡ್ ಅಲರ್ಟ್ ಘೋಷಣೆ, 100ಕ್ಕೂ ಹೆಚ್ಚು ವಿಮಾನಗಳು ವಿಳಂಬ

    ದೆಹಲಿಯಲ್ಲಿ ಭಾರೀ ಮಳೆ – ರೆಡ್ ಅಲರ್ಟ್ ಘೋಷಣೆ, 100ಕ್ಕೂ ಹೆಚ್ಚು ವಿಮಾನಗಳು ವಿಳಂಬ

    ನವದೆಹಲಿ: ದೆಹಲಿಯಲ್ಲಿ (New Delhi) ಭಾರೀ ಮಳೆ (Heavy Rain) ಸುರಿದ ಪರಿಣಾಮ ನಗರದ ಕೆಲವು ಭಾಗಗಳಲ್ಲಿ ಜನಜೀವನ ಅಸ್ತವ್ಯಸಗೊಂಡಿದೆ. ಭಾರೀ ಮಳೆಯ ಹಿನ್ನೆಲೆ ಇಂದು ದೆಹಲಿಯಲ್ಲಿ ರೆಡ್ ಅಲರ್ಟ್ (Red Alert) ಘೋಷಣೆ ಮಾಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

    ಶಾಸ್ತ್ರಿ ಭವನ, ಆರ್‌ಕೆ ಪುರಂ, ಮೋತಿ ಬಾಗ್ ಮತ್ತು ಕಿದ್ವಾಯಿ ನಗರ ಸೇರಿದಂತೆ ದೆಹಲಿ-ಎನ್‌ಸಿಆರ್‌ನ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಮಳೆಗೆ ನಗರದ ರಸ್ತೆಗಳಲ್ಲಿ ನೀರು ನಿಂತು ಸಂಚಾರ ಅಸ್ತವ್ಯಸ್ತಗೊಂಡಿದೆ. ದೆಹಲಿಯಲ್ಲಿ ಮಿಂಚು ಮತ್ತು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆಯ ಪರಿಣಾಮ ಪಂಚಕುಯಿಯನ್ ಮಾರ್ಗ್, ಮಿಂಟೋ ರಸ್ತೆ, ಮಥುರಾ ರಸ್ತೆ ಹಾಗೂ ಭಾರತ್ ಮಂಟಪದ ಗೇಟ್ ಸಂಖ್ಯೆ 7 ಜಲಾವೃತಗೊಂಡಿದೆ. ಇದನ್ನೂ ಓದಿ: ಆಪರೇಷನ್ ಅಖಾಲ್ | ಭದ್ರತಾ ಸಿಬ್ಬಂದಿ, ಉಗ್ರರ ನಡುವೆ ಗುಂಡಿನ ಚಕಮಕಿ – ಇಬ್ಬರು ಯೋಧರು ಹುತಾತ್ಮ

    ಇನ್ನು ಗೌತಮಬುದ್ಧನಗರದಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ದೆಹಲಿ, ಎನ್‌ಸಿಆರ್‌ನ ಹೆಚ್ಚಿನ ಸ್ಥಳಗಳಲ್ಲಿ ಮಧ್ಯಮದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗೋಹಾನಾ, ಸೋನಿಪತ್, ರೋಹ್ಟಕ್, ಸೋಹಾನಾ, ಪಲ್ವಾಲ್, ನುಹ್, ಔರಂಗಾಬಾದ್ ಮತ್ತು ಇತರ ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಸಮಾಧಿ ಶೋಧ ಮ್ಯಾರಥಾನ್ – ಐದು ಅಡಿ ಅಗೆದರೂ ಸಿಕ್ಕಿದ್ದು ಬರೀ ಮಣ್ಣು

    ಭಾರೀ ಮಳೆಯಿಂದಾಗಿ ಪ್ರತಿಕೂಲ ಹವಾಮಾನ ಉಂಟಾಗಿದ್ದು, ದೆಹಲಿಯಲ್ಲಿ ನೂರಕ್ಕೂ ಹೆಚ್ಚು ವಿಮಾನಗಳು ವಿಳಂಬವಾಗಿದೆ. ಇದನ್ನೂ ಓದಿ: ಪುಟಿನ್‌ ಭೇಟಿಗೆ ಟ್ರಂಪ್‌ ಮುಹೂರ್ತ ಫಿಕ್ಸ್‌ – ಉಕ್ರೇನ್‌ನಲ್ಲಿ ಶಾಂತಿ ಸ್ಥಾಪನೆಗೆ ಮಾತುಕತೆ

  • ಕೇರಳದಲ್ಲಿ ಭಾರೀ ಮಳೆಗೆ 5 ಸಾವು – 8 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

    ಕೇರಳದಲ್ಲಿ ಭಾರೀ ಮಳೆಗೆ 5 ಸಾವು – 8 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

    – ಕಣ್ಣೂರು, ಎರ್ನಾಕುಳಂ, ಕಾಸರಗೋಡು ಜಿಲ್ಲೆಗಳಲ್ಲಿ ಮಳೆಗೆ ಭಾರೀ ಹಾನಿ
    – ಮಧುವಾಹಿನಿ ಅಬ್ಬರಕ್ಕೆ ಮಧೂರು ದೇಗುಲ ಮುಳುಗಡೆ

    ತಿರುವನಂತಪುರಂ: ಕೇರಳದಲ್ಲಿ ( ಶುಕ್ರವಾರ ಸುರಿದ ಭಾರಿ ಮಳೆಗೆ ಕನಿಷ್ಠ ಐದು ಜನರು ಸಾವನ್ನಪ್ಪಿದ್ದು, ರಾಜ್ಯಾದ್ಯಂತ ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಭಾರೀ ಗಾಳಿ ಮತ್ತು ಉಬ್ಬರವಿಳಿತದಿಂದಾಗಿ ಮನೆಗಳಿಗೆ ವ್ಯಾಪಕ ಹಾನಿಯಾಗಿದೆ.

    ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ಎಂಟು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಮತ್ತು ಉಳಿದ ಆರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿತ್ತು. ಶನಿವಾರ ರಾಜ್ಯಾದ್ಯಂತ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ಜೂನ್ 5 ರವರೆಗೆ ರಾಜ್ಯಾದ್ಯಂತ ಭಾರೀ ಮಳೆ ಮುಂದುವರಿಯಲಿದೆ. ಕೇರಳದಲ್ಲಿ ಮುಂದಿನ ಐದು ದಿನಗಳವರೆಗೆ ಪಶ್ಚಿಮ ದಿಕ್ಕಿನ ಗಾಳಿ ಬೀಸುವ ನಿರೀಕ್ಷೆಯಿದೆ. ಗುಡ್ಡಗಾಡು ಪ್ರದೇಶಗಳಲ್ಲಿ ಮತ್ತು ನದಿ ದಂಡೆಯ ಬಳಿ ಹೈ ಅಲರ್ಟ್ ಘೋಷಿಸಲಾಗಿದೆ ಎಂದು ರಾಜ್ಯ ಕಂದಾಯ ಸಚಿವ ಕೆ. ರಾಜನ್ ತಿಳಿಸಿದ್ದಾರೆ.

    ಕೊಟ್ಟಾಯಂ ಜಿಲ್ಲೆಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಇಬ್ಬರು ಯುವಕರು ಮುಳುಗಿ ಸಾವನ್ನಪ್ಪಿದ್ದರೆ, ತಿರುವನಂತಪುರಂ ಬಳಿಯ ಸಮುದ್ರದಲ್ಲಿ ಮೀನುಗಾರಿಕೆ ದೋಣಿ ಮಗುಚಿ ಬಿದ್ದು ಮೀನುಗಾರನೊಬ್ಬ ಸಾವನ್ನಪ್ಪಿದ್ದಾನೆ. ಕೊಚ್ಚಿಯಲ್ಲಿ ಮರ ಬಿದ್ದು 85 ವರ್ಷದ ಎಂಜಿಎನ್‌ಆರ್‌ಇಜಿಎ ಕಾರ್ಯಕರ್ತೆಯೊಬ್ಬರು ಮೃತಪಟ್ಟಿದ್ದಾರೆ. ಪಶ್ಚಿಮ ಬಂಗಾಳದ ಮೂಲದ ವ್ಯಕ್ತಿಯೊಬ್ಬ ಕೊಚ್ಚಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

    ಬಹುತೇಕ ಎಲ್ಲಾ ಜಿಲ್ಲೆಗಳ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಡಿಂಗಿ ದೋಣಿಗಳ ಮೂಲಕ ಕುಟುಂಬಗಳನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಯಿತು. ನದಿಗಳ ಬಳಿ ವಾಸಿಸುವ ಜನರನ್ನು ಸಹ ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಯಿತು. ರಾಜ್ಯಾದ್ಯಂತ 2,000 ಕ್ಕೂ ಹೆಚ್ಚು ಜನರನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಯಿತು.

    ರಾಜ್ಯಾದ್ಯಂತ ಭಾರೀ ಮಳೆಗೆ ಮರಗಳು ಉರುಳಿಬಿದ್ದ ಪರಿಣಾಮ ಮನೆಗಳಿಗೆ ಹಾನಿಯಾಗಿದೆ. ರಾಜ್ಯದಾದ್ಯಂತ ಕರಾವಳಿ ಪ್ರದೇಶಗಳಲ್ಲಿನ ಅನೇಕ ಮನೆಗಳು ಉಬ್ಬರವಿಳಿತದ ಪರಿಣಾಮವಾಗಿ ನಾಶವಾದವು. ಮಳೆಯಿಂದಾಗಿ ರಾಜ್ಯಾದ್ಯಂತ ವ್ಯಾಪಕ ಬೆಳೆ ನಷ್ಟವಾಗಿದೆ.

  • ಉಡುಪಿಯಲ್ಲಿ ಭಾರೀ ಮಳೆ – ಅಂಗಡಿಗಳಿಗೆ ನುಗ್ಗಿತು ಕೆಸರು ನೀರು

    ಉಡುಪಿಯಲ್ಲಿ ಭಾರೀ ಮಳೆ – ಅಂಗಡಿಗಳಿಗೆ ನುಗ್ಗಿತು ಕೆಸರು ನೀರು

    – ಹೆದ್ದಾರಿಗೆ ಹರಿದ ಭಾರೀ ಪ್ರಮಾಣದ ಕೆಸರು ನೀರು, ವಾಹನ ಸವಾರರ ಪರದಾಟ
    – 14 ಫೀಟ್ ಇದ್ದ ಚರಂಡಿ ಈಗ ನಾಲ್ಕು ಫೀಟ್

    ಉಡುಪಿ: ಉಡುಪಿಯಲ್ಲಿ(Udupi) ಭಾರೀ ಮಳೆಯಾಗುತ್ತಿದ್ದು, ಅಂಗಡಿಗಳಿಗೆ ಕೆಸರು ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಜಡಿ ಮಳೆಗೆ ಜಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದೆ.

    ನಗರ ಅಪ್ಸರಾ ಐಸ್‌ಕ್ರೀಮ್ ಮಳಿಗೆಗೆ ಭಾರೀ ಮಳೆ ನೀರು ಮತ್ತು ಕೆಸರು ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಲಕ್ಷಾಂತರ ರೂ. ಫ್ರಿಡ್ಜ್, ಕೂಲರ್‌ಗಳಿಗೆ ಹಾನಿಯಾಗಿದೆ. ರಸ್ತೆ ಒತ್ತುವರಿ ಹಾಗೂ ಬಿಲ್ಡಿಂಗ್ ಪಾರ್ಕಿಂಗ್ ಒತ್ತುವರಿಯಿಂದ 14 ಫೀಟ್ ಇದ್ದ ಚರಂಡಿ ಈಗ ನಾಲ್ಕು ಅಡಿಗೆ ಇಳಿದಿದೆ. ಅವೈಜ್ಞಾನಿಕ ಚರಂಡಿ ನಿರ್ಮಾಣ ಮತ್ತು ಏಕಾಏಕಿ ಗಾಳಿ ಮಳೆ ಜೊತೆ ಕೆಸರು ಮಿಶ್ರಿತ ನೀರು ಬಂದ ಕಾರಣ ತಗ್ಗು ಪ್ರದೇಶದ ಅಂಗಡಿಗಳು ಮನೆಗಳು ಜಲಾಮಯವಾಗಿದೆ. ಇದನ್ನೂ ಓದಿ: ದರ್ಶನ್‌ & ಗ್ಯಾಂಗ್‌ಗೆ ಮತ್ತೆ ಶಾಕ್‌ ಕೊಟ್ಟ ಕಾಮಾಕ್ಷಿಪಾಳ್ಯ ಪೊಲೀಸರು

    ಇನ್ನು ಎಡೆಬಿಡದೇ ಸುರಿಯುತ್ತಿರುವ ಮಳೆ ಮಣಿಪಾಲ(Manipal) ಭಾಗದಲ್ಲಿ ಅವಾಂತರ ಸೃಷ್ಟಿ ಮಾಡಿದೆ. ಮಣಿಪಾಲ, ಪರ್ಕಳ ಭಾಗದಲ್ಲಿ ವಿಪರೀತ ಮಳೆಯಾದ ಕಾರಣ ಬೆಟ್ಟದ ಮೇಲಿಂದ ಹರಿದ ಭಾರೀ ಪ್ರಮಾಣದ ನೀರು ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿದೆ. ಮಣಿಪಾಲ- ಲಕ್ಷ್ಮೀಂದ್ರ ನಗರ ಇಳಿಜಾರು ಪ್ರದೇಶವು ಕೆಸರು ನೀರಿನಿಂದ ಜಲಾವೃತವಾಗಿದೆ. ಉಡುಪಿ ಮಣಿಪಾಲ ರಸ್ತೆಯಲ್ಲಿ ಪೊಲೀಸರು ಏಕಮುಖ ಸಂಚಾರ ವ್ಯವಸ್ಥೆ ಮಾಡಿದ್ದು, ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ಇದನ್ನೂ ಓದಿ: ಹೊಸೂರು ರಸ್ತೆಯಲ್ಲಿ ‘ಸ್ವಿಮ್ಮಿಂಗ್ ಪೂಲ್’ – ವಾಹನ ಸಂಚಾರ ಬಂದ್

    ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮತ್ತು ಸುತ್ತಮುತ್ತಲ ಬಹು ಮಹಡಿ ಕಟ್ಟಡಗಳು ನೀರು ಹರಿಯುವ ಕಾಲುವೆಗಳನ್ನು ಒತ್ತುವರಿ ಮಾಡಿದ್ದೇ ಇಷ್ಟೆಲ್ಲಾ ಸಮಸ್ಯೆಗೆ ಕಾರಣ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಉಡುಪಿ ಶಾಸಕ ಯಶ್‌ಪಾಲ್(Yashpal) ಸುವರ್ಣ ಸ್ಥಳಕ್ಕೆ ಭೇಟಿ ನೀಡಿ, ಒತ್ತುವರಿಯಾದ ಎಲ್ಲಾ ಕಟ್ಟಡದ ಪಾರ್ಕಿಂಗ್ ಪ್ರದೇಶಗಳನ್ನು ತೆರವು ಮಾಡಬೇಕು ಎಂದು ಆದೇಶ ನೀಡಿದರು. ಇದನ್ನೂ ಓದಿ: ಮುಂದಿನ 3 ಗಂಟೆಯಲ್ಲಿ ಬೆಂಗಳೂರು ಸೇರಿದಂತೆ 5 ಜಿಲ್ಲೆಗಳಲ್ಲಿ ಭಾರೀ ಮಳೆ

    ಜಿಲ್ಲೆಯ ಹಲವೆಡೆ ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ದಿನಪೂರ್ತಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

  • ದೆಹಲಿ | ಬಿರುಗಾಳಿ, ಗುಡುಗು ಸಹಿತ ಭಾರೀ ಮಳೆ – ಮನೆ ಕುಸಿದು ನಾಲ್ವರು ಸಾವು, ರೆಡ್ ಅಲರ್ಟ್ ಘೋಷಣೆ

    ದೆಹಲಿ | ಬಿರುಗಾಳಿ, ಗುಡುಗು ಸಹಿತ ಭಾರೀ ಮಳೆ – ಮನೆ ಕುಸಿದು ನಾಲ್ವರು ಸಾವು, ರೆಡ್ ಅಲರ್ಟ್ ಘೋಷಣೆ

    – 100ಕ್ಕೂ ಅಧಿಕ ವಿಮಾನಗಳ ಹಾರಾಟದಲ್ಲಿ ವಿಳಂಬ

    ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಇಂದು ಬೆಳಿಗ್ಗೆಯಿಂದ ಸುರಿಯುತ್ತಿರುವ ಭಾರೀ ಮಳೆಗೆ ಮನೆ ಮೇಲೆ ಮರ ಉರುಳಿ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಓರ್ವ ಗಾಯಗೊಂಡಿರುವ ಘಟನೆ ದ್ವಾರಕಾದ (Dwaraka) ನಜಾಫ್‌ಗಢ ಪ್ರದೇಶದಲ್ಲಿ ನಡೆದಿದೆ.ಇದನ್ನೂ ಓದಿ: ಸುಹಾಸ್‌ಗೆ ಆತ್ಮರಕ್ಷಣೆಗೆ ಒಂದು ದೊಣ್ಣೆಯನ್ನೂ ಇಟ್ಟುಕೊಳ್ಳಲು ಪೊಲೀಸರು ಅವಕಾಶ ನೀಡಲಿಲ್ಲ: ಹರೀಶ್ ಪೂಂಜಾ

    ಬೆಳಗಿನ ಜಾವದಿಂದ ಭಾರೀ ಮಳೆ ಸುರಿಯುತ್ತಿದ್ದು, ಗಂಟೆಗೆ 80 ಕಿ.ಮೀ ವೇಗದಲ್ಲಿ ಗಾಳಿ ಬೀಸಿದ್ದು, ಪರಿಣಾಮ ಈ ಅವಘಡ ಸಂಭವಿಸಿದೆ. ಮರ ಉರುಳಿ ಬಿದ್ದ ಪರಿಣಾಮ ಮನೆ ಕುಸಿದಿದ್ದು, ಓರ್ವ ಮಹಿಳೆ ಹಾಗೂ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ಮೃತ ಮಹಿಳೆಯನ್ನು ಜ್ಯೋತಿ (26) ಎಂದು ಗುರುತಿಸಲಾಗಿದ್ದು, ಆಕೆಯ ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ದ್ವಾರಕಾ, ಗುರುಗ್ರಾಮ್ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಮರಗಳು ನೆಲಕ್ಕುರುಳಿವೆ.

    ದೆಹಲಿಯ ಪ್ರಮುಖ ರಸ್ತೆಗಳಲ್ಲಿ ಅಗಾಧ ಪ್ರಮಾಣದ ನೀರು ನಿಂತಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಸದ್ಯ ಹವಾಮಾನ ಇಲಾಖೆ ರೆಡ್ ಅಲರ್ಟ್ (Red Alert) ಘೋಷಿಸಿದ್ದು, ಗಾಳಿಯ ತೀವ್ರತೆಯಿಂದಾಗಿ 100ಕ್ಕೂ ಅಧಿಕ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಈ ಕುರಿತು ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Delhi International Airport) ಹಾಗೂ ಏರ್ ಇಂಡಿಯಾ (Air India) ವಿಮಾನ ವಿಳಂಬ, ಮಾರ್ಗ ಬದಲಾವಣೆ ಬಗ್ಗೆ ಮಾಹಿತಿ ಹಂಚಿಕೊಂಡಿವೆ.ಇದನ್ನೂ ಓದಿ: ಕರ್ನಾಟಕದ ಮರಾಠಿ ಮಾತನಾಡುವ ಪ್ರದೇಶಗಳು ಇನ್ನೂ ಮಹಾರಾಷ್ಟ್ರ ಭಾಗವಾಗಿಲ್ಲ: ಅಜಿತ್‌ ಪವಾರ್‌

  • ಗುಜರಾತ್‌ನ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ – ಮಳೆಗೆ 15 ಸಾವು, 23 ಸಾವಿರ ಮಂದಿ ಸ್ಥಳಾಂತರ

    ಗುಜರಾತ್‌ನ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ – ಮಳೆಗೆ 15 ಸಾವು, 23 ಸಾವಿರ ಮಂದಿ ಸ್ಥಳಾಂತರ

    ಗಾಂಧೀನಗರ್: ಗುಜರಾತ್‌ನಲ್ಲಿ (Gujarat) ಭಾರೀ ಮಳೆಯಾಗುತ್ತಿದ್ದು ಹಲವು ಜಿಲ್ಲೆಗಳಿಗೆ ಕೇಂದ್ರ ಹವಾಮಾನ ಇಲಾಖೆ (Meteorological Department)  ರೆಡ್ ಅಲರ್ಟ್ ಘೋಷಿಸಿದೆ.

    ಹವಾಮಾನ ಇಲಾಖೆ ಪ್ರವಾಹ ಪರಿಸ್ಥಿತಿ ನಡುವೆ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, 11 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ (Red Alert) ಮತ್ತು 22 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ (Yellow Alert) ಘೋಷಣೆ ಮಾಡಿದೆ. ಕಚ್ಛ್, ದ್ವಾರಕಾ, ಜಾಮ್‌ನಗರ, ಮೊರ್ಬಿ, ಸುರೇಂದ್ರನಗರ, ಜುನಾಗಢ್, ರಾಜ್‌ಕೋಟ್, ಬೊಟಾಡ್, ಗಿರ್ಸೋಮನಾಥ್, ಅಮ್ರೇಲಿ ಮತ್ತು ಭಾವನಗರ ಸೇರಿದಂತೆ ಸೌರಾಷ್ಟ್ರ ಪ್ರದೇಶಗಳಿಗೆ ರೆಡ್ ಅಲರ್ಟ್, ಮಧ್ಯ ಗುಜರಾತ್ ಮತ್ತು ದಕ್ಷಿಣ ಗುಜರಾತ್‌ಗೆ ಹಳದಿ ಅಲರ್ಟ್ ಘೋಷಿಸಿದೆ. ಇದನ್ನೂ ಓದಿ: Anjanadri Betta | ಧಾರ್ಮಿಕ ಭಾವನೆಗಳಿಗೆ ಧಕ್ಕೆ – SDPI ದೂರಿನ ಬೆನ್ನಲ್ಲೇ ಗಂಗಾವತಿಯಲ್ಲಿ ಬಿಲ್ಲು, ಬಾಣಗಳಿರುವ ವಿದ್ಯುತ್ ಕಂಬ ತೆರವಿಗೆ ಆದೇಶ

    ಭಾರೀ ಮಳೆಯಿಂದಾಗಿ ಗುಜರಾತ್‌ನ ವಿವಿಧ ಜಿಲ್ಲೆಗಳಲ್ಲಿ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ. 23,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ ಮತ್ತು 300 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ಈಗಾಗಲೇ 14 ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ತುಕಡಿಗಳು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಯ 22 ತುಕಡಿಗಳನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರ ಎರಡು ಪ್ರತ್ಯೇಕ ಅಪಘಾತ- ಐದು ಮಂದಿಯ ದಾರುಣ ಸಾವು

  • ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗೆ ರೆಡ್‌ ಅಲರ್ಟ್‌ – ಇಂದು ಭಾರೀ ಮಳೆ ಸಾಧ್ಯತೆ

    ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗೆ ರೆಡ್‌ ಅಲರ್ಟ್‌ – ಇಂದು ಭಾರೀ ಮಳೆ ಸಾಧ್ಯತೆ

    ಬೆಂಗಳೂರು: ರಾಜ್ಯದ ನಾಲ್ಕು ಜಿಲ್ಲೆಗೆ ರೆಡ್‌ ಅಲರ್ಟ್‌ (Red Alert) ಜಾರಿಯಾಗಿದ್ದರೆ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ (Orange Alert) ಜಾರಿಯಾಗಿದದೆ

    ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗೆ ರೆಡ್‌ ಅಲರ್ಟ್‌ ಜಾರಿಯಾಗಿದ್ದು, ಭಾರೀ ಮಳೆ (Heavy Rain) ಬೀಳಲಿದೆ. ಉತ್ತರ ಕನ್ನಡ, ಉಡುಪಿ, ಹಾಸನ ಜಿಲ್ಲೆಗಳಿಗೆ ಹವಾಮಾನ ಇಲಾಖೆ (IMD) ಆರೆಂಜ್‌ ಅಲರ್ಟ್‌ ಜಾರಿ ಮಾಡಿದೆ. ಬೆಳಗಾವಿ, ಮೈಸೂರಿಗೆ ಯೆಲ್ಲೋ ಅಲರ್ಟ್‌ ಜಾರಿಯಾಗಿದೆ. ಇದನ್ನೂ ಓದಿ: Wayanad Landslide: ರಕ್ಷಣಾ ಕಾರ್ಯಾಚರಣೆ ಯಾಕೆ ಕಷ್ಟವಾಗುತ್ತಿದೆ?

     

    ರೆಡ್‌ ಅಲರ್ಟ್‌ ಜಾರಿಯಾದ ಜಿಲ್ಲೆಗಳ ಪೈಕಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ. ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಇದನ್ನೂ ಓದಿ: Wayanad Landslide : ಅರ್ಧ ಸೆಕೆಂಡ್‌ನಲ್ಲಿ ನೂರು ಜನ ಸಮಾಧಿ!

    ಉತ್ತರ ಕನ್ನಡ, ಬೆಳಗಾವಿ ಮತ್ತು ಮೈಸೂರು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗಬಹುದು ಎಂದು ಐಎಂಡಿ ತಿಳಿಸಿದೆ.

  • ಕರಾವಳಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಜಾರಿ – ಮುಂದಿನ ಮೂರು ಗಂಟೆಯಲ್ಲಿ ಭಾರೀ ಮಳೆ ಸಾಧ್ಯತೆ

    ಕರಾವಳಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಜಾರಿ – ಮುಂದಿನ ಮೂರು ಗಂಟೆಯಲ್ಲಿ ಭಾರೀ ಮಳೆ ಸಾಧ್ಯತೆ

    – 24 ಗಂಟೆಯಲ್ಲಿ ಕರಾವಳಿಯಲ್ಲಿ ದಾಖಲೆ ಮಳೆ

    ಬೆಂಗಳೂರು: ಕರಾವಳಿಯಲ್ಲಿ (Coastal Karnataka) ಮಳೆಯ ಅಬ್ಬರ ಜೋರಾಗಿದ್ದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳು ತತ್ತರಗೊಂಡಿವೆ. ಮತ್ತೆ ಮೂರು ಗಂಟೆಯ ಒಳಗಡೆ ಭಾರೀ ಮಳೆಯಾಗಲಿದೆ (Heavy Rains) ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

    ಕಳೆದ 24 ಗಂಟೆಗಳಲ್ಲಿ ದಾಖಲೆ ಮಳೆ ಬಿದ್ದಿದ್ದು, ಈಗಾಗಲೇ ಈ ಭಾಗದ ಬಹುತೇಕ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಉಡುಪಿಯಲ್ಲಿ (Udupi) 24 ಗಂಟೆಯಲ್ಲಿ 210.5 ಮೀ.ಮೀ ಮಳೆ ಬಿದ್ದ ಪರಿಣಾಮ 150ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ.  ಇದನ್ನೂ ಓದಿ: ಭಾರೀ ಮಳೆಗೆ ಉಡುಪಿ ತತ್ತರ – ಉಕ್ಕಿ ಹರಿದ ಇಂದ್ರಾಣಿ ತೀರ್ಥ, 150ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು

     
    ಕರ್ನಾಟಕದ ಕರಾವಳಿ, ಕೊಂಕಣ ಮತ್ತು ಗೋವಾ, ಮಧ್ಯ ಮಹಾರಾಷ್ಟ್ರ ಇಂದು ಭಾರೀ ಮಳೆಯಾಗಲಿದ್ದು ಐಎಂಡಿ ರೆಡ್‌ ಅಲರ್ಟ್‌ (Red Alert) ಘೋಷಣೆ ಮಾಡಿದೆ. ಮುಂದಿನ 4-5 ದಿನ ಈ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಕೇವಲ 6 ಗಂಟೆಯಲ್ಲಿ 300 ಮಿ.ಮೀ ಮಳೆ – ಮಹಾಮಳೆಗೆ ಮುಳುಗಿದ ಮುಂಬೈ

     24 ಗಂಟೆಯಲ್ಲಿ ಎಲ್ಲಿ ಎಷ್ಟು ಮಳೆಯಾಗಿದೆ?
    ಉತ್ತರ ಕನ್ನಡ : 264 ಮಿ.ಮೀ.
    ಉಡುಪಿ: 210.5 ಮಿ.ಮೀ.
    ದಕ್ಷಿಣ ಕನ್ನಡ : 168 ಮಿ.ಮೀ.

    ಶಿವಮೊಗ್ಗ : 118.5 ಮಿ.ಮೀ.
    ವಿಜಯಪುರ : 89 ಮಿ.ಮೀ.
    ಬೆಳಗಾವಿ : 87.5 ಮಿ.ಮೀ.
    ಚಿಕ್ಕಮಗಳೂರು: 67.5 ಮಿ.ಮೀ.
    ಕೊಡಗು: 58.5 ಮಿ.ಮೀ.

     

  • ಕೇರಳದ ಕೆಲವು ರಾಜ್ಯಗಳಿಗೆ ಮೇ 20ರವರೆಗೆ ರೆಡ್ ಅಲರ್ಟ್

    ಕೇರಳದ ಕೆಲವು ರಾಜ್ಯಗಳಿಗೆ ಮೇ 20ರವರೆಗೆ ರೆಡ್ ಅಲರ್ಟ್

    ತಿರುವನಂತಪುರಂ: ಭಾರತೀಯ ಹವಾಮಾನ ಇಲಾಖೆ (IMD) ಕೇರಳದ (Kerala) ಪತ್ತನಂತಿಟ್ಟ, ಇಡುಕ್ಕಿ, ಅಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಮೇ 20 ರವರೆಗೆ ರೆಡ್ ಅಲರ್ಟ್ (Red Alert) ಘೋಷಿಸಿದೆ.

    ಭಾರೀ ಮಳೆಯ (Rain) ಹಿನ್ನೆಲೆ ತಿರುವನಂತಪುರಂ, ಕೊಲ್ಲಂ ಮತ್ತು ಎರ್ನಾಕುಲಂ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕಣ್ಣೂರು ಮತ್ತು ಕೋಝಿಕ್ಕೋಡ್ ಹೊರತುಪಡಿಸಿ ಕೇರಳದ ಎಲ್ಲಾ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಪತ್ನಿಯ ಗುಪ್ತಾಂಗದಲ್ಲಿ ರಂಧ್ರ ಮಾಡಿ ಬೀಗ ಜಡಿದು ವಿಕೃತಿ ಮೆರೆದ ಪತಿ!

    ರೆಡ್ ಅಲರ್ಟ್ 24 ಗಂಟೆಗಳಲ್ಲಿ 20 ಸೆಂ.ಮೀಗಿಂತ ಹೆಚ್ಚು ಮಳೆಯನ್ನು ಸೂಚಿಸುತ್ತದೆ. ಆರೆಂಜ್ ಅಲರ್ಟ್ ಮಳೆ (6 ಸೆಂ.ಮೀ ನಿಂದ 20 ಸೆಂ.ಮೀ. ಹೆಚ್ಚು ಮಳೆ ಸೂಚಿಸಿದರೆ ಯೆಲ್ಲೋ ಅಲರ್ಟ್ 6- 11 ಸೆಂ.ಮೀ ಮಳೆಯನ್ನು ಸೂಚಿಸುತ್ತದೆ. ಬಲವಾದ ಗಾಳಿ ಮತ್ತು ಪ್ರಕ್ಷುಬ್ಧ ವಾತಾವರಣದ ಕಾರಣ ಮುಂದಿನ ಸೂಚನೆ ನೀಡುವವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಅಕ್ರಮ ಮರಳು ಅಡ್ಡಾದ ಮೇಲೆ ಅಧಿಕಾರಿಗಳ ದಾಳಿ – 1.58 ಕೋಟಿ ರೂ. ಮೌಲ್ಯದ ಮರಳು ಜಪ್ತಿ

    ಭಾರತೀಯ ರಾಷ್ಟ್ರೀಯ ಸಾಗರ ಮಾಹಿತಿ ಸೇವೆಗಳ ಕೇಂದ್ರ (INCOIS) ಭಾನುವಾರ ಕೇರಳ ಮತ್ತು ದಕ್ಷಿಣ ತಮಿಳುನಾಡು ಕರಾವಳಿಯಲ್ಲಿ ಹೆಚ್ಚಿನ ಅಲೆಗಳ ಮುನ್ಸೂಚನೆ ನೀಡಿದೆ. ಕೇರಳ ಕರಾವಳಿಯಲ್ಲಿ 0.4 ಮೀಟರ್‌ನಿಂದ 1.2 ಮೀಟರ್‌ನಷ್ಟು ಅಲೆಗಳು ಏಳುವ ಸಾಧ್ಯತೆಯಿದೆ ಎಂದು ಸಂಸ್ಥೆ ತಿಳಿಸಿದೆ. ಇದನ್ನೂ ಓದಿ: ಅಪರಾಧಿ ಸ್ಥಾನದಲ್ಲಿರುವ ರಾಜ್ಯ ಸರ್ಕಾರವನ್ನು ಗಲ್ಲಿಗೇರಿಸಬೇಕು: ಆರ್.ಅಶೋಕ್

    ಭಾನುವಾರದಿಂದ ಮೇ 22ರ ನಡುವೆ ರಾಜ್ಯದ ಕೆಲವು ಸ್ಥಳಗಳಲ್ಲಿ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಒಂದೇ ವಾರದಲ್ಲಿ 25,900 ಕೊರೊನಾ ಪ್ರಕರಣಗಳು ಪತ್ತೆ- ಸಿಂಗಾಪುರದಲ್ಲಿ ಮಾಸ್ಕ್‌ ಕಡ್ಡಾಯ

    ರಾಜಧಾನಿ ತಿರುವನಂತಪುರಂನಲ್ಲಿ ಭಾನುವಾರ ಬೆಳಗಿನ ಜಾವ ಸುರಿದ ಭಾರಿ ಮಳೆಗೆ ತಗ್ಗು ಪ್ರದೇಶಗಳಲ್ಲಿನ ಹಲವಾರು ಮನೆಗಳು ನೀರಿನಿಂದ ಜಲಾವೃತವಾಗಿವೆ. ಇದನ್ನೂ ಓದಿ: ಪ್ಲೇ ಆಫ್‍ಗೆ RCB ಕ್ವಾಲಿಫೈ- ಘಾಟಿ ಸುಬ್ರಹ್ಮಣ್ಯದಲ್ಲಿ ಹರಕೆ ತೀರಿಸಿದ ಅಭಿಮಾನಿ

  • ಉತ್ತರದಲ್ಲಿ ಅವಾಂತರದ ಬಳಿಕ ಮುಂಗಾರು ದಕ್ಷಿಣ ಭಾರತಕ್ಕೆ – ಕರ್ನಾಟಕ ಸೇರಿ 3 ರಾಜ್ಯಗಳಲ್ಲಿ ರೆಡ್ ಅಲರ್ಟ್

    ಉತ್ತರದಲ್ಲಿ ಅವಾಂತರದ ಬಳಿಕ ಮುಂಗಾರು ದಕ್ಷಿಣ ಭಾರತಕ್ಕೆ – ಕರ್ನಾಟಕ ಸೇರಿ 3 ರಾಜ್ಯಗಳಲ್ಲಿ ರೆಡ್ ಅಲರ್ಟ್

    ನವದೆಹಲಿ: ಉತ್ತರ ಭಾರತದ ಹಲವಾರು ರಾಜ್ಯಗಳಲ್ಲಿ ಜನಜೀವನ ಅಸ್ತವ್ಯಸ್ತ ಉಂಟುಮಾಡಿದ ಬಳಿಕ ಎಡೆಬಿಡದೆ ಸುರಿಯುತ್ತಿರುವ ಮಳೆ (Rain) ದಕ್ಷಿಣ ಭಾರತಕ್ಕೆ ಶಿಫ್ಟ್ ಆಗಿದೆ. ಕರ್ನಾಟಕ, ತೆಲಂಗಾಣ ಹಾಗೂ ಕೇರಳದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಹಿನ್ನೆಲೆ ರೆಡ್ ಅಲರ್ಟ್ (Red Alert) ಅನ್ನು ಘೋಷಿಸಲಾಗಿದೆ.

    ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ತೆಲಂಗಾಣದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಂಗಳವಾರ ತೆಲಂಗಾಣದ ಮಹಬೂಬ್‌ನಗರ ಜಿಲ್ಲೆಯಲ್ಲಿ ಉಕ್ಕಿ ಹರಿಯುತ್ತಿದ್ದ ಹೊಳೆಯಲ್ಲಿ ಇಬ್ಬರು ಬಾಲಕಿಯರು ಕೊಚ್ಚಿಕೊಂಡು ಹೋಗಿದ್ದಾರೆ. ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ರಾಜ್ಯದ ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ.

    ಹೈದರಾಬಾದ್‌ನಲ್ಲಿ ಟ್ರಾಫಿಕ್ ಜಾಮ್ ಅನ್ನು ತಡೆಗಟ್ಟುವ ಸಲುವಾಗಿ ಐಟಿ ಕಂಪನಿಗಳಿಗೆ ಉದ್ಯೋಗಿಗಳು ಹಂತ ಹಂತವಾಗಿ ಕೆಲಸದಿಂದ ಮರಳುವಂತೆ ಮಾಡಲು ಪೊಲೀಸರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಕಳೆದ 24 ಗಂಟೆಯಲ್ಲಿ ಕೆಆರ್‌ಎಸ್ ಡ್ಯಾಂಗೆ ಹರಿದು ಬಂದ 4 ಟಿಎಂಸಿ ನೀರು – 104 ಅಡಿಗೆ ಏರಿಕೆ

    ಕರ್ನಾಟಕದಲ್ಲಿ ಹವಾಮಾನ ಇಲಾಖೆಯು ಕರಾವಳಿ ಪ್ರದೇಶಗಳಲ್ಲಿನ ಜನರು ಜಲಾವೃತಕ್ಕೆ ಒಳಗಾಗುವ ಪ್ರದೇಶಗಳಿಂದ ದೂರ ಉಳಿಯುವಂತೆ ಕೇಳಿಕೊಂಡಿದೆ. ನಿರಂತರ ಮಳೆಯಿಂದಾಗಿ ಕುಸಿಯುವ ಹಂತದಲ್ಲಿರುವ ಕಟ್ಟಡ ಹಾಗೂ ರಸ್ತೆಗಳಿಂದ ದೂರವಿರಲು ತಿಳಿಸಿದೆ. ಇದನ್ನೂ ಓದಿ: ಸರ್ಕಾರ ಮುಸ್ಲಿಂ ಓಲೈಕೆಗೆ ಸಂವಿಧಾನಬಾಹಿರವಾಗಿ ವರ್ತಿಸಿದ್ರೆ ಪರಿಣಾಮ ನೆಟ್ಟಗಿರಲ್ಲ: ಸುನೀಲ್ ಕುಮಾರ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]