Tag: Red Fort

  • ಕೆಂಪು ಕೋಟೆಯಲ್ಲಿ 1.5 ಕೋಟಿ ಮೌಲ್ಯದ ಕಲಶ ಕದ್ದ ಕಳ್ಳ ಅರೆಸ್ಟ್

    ಕೆಂಪು ಕೋಟೆಯಲ್ಲಿ 1.5 ಕೋಟಿ ಮೌಲ್ಯದ ಕಲಶ ಕದ್ದ ಕಳ್ಳ ಅರೆಸ್ಟ್

    ನವದೆಹಲಿ: ಐತಿಹಾಸಿಕ ಕೆಂಪು ಕೋಟೆ (Red Fort) ಆವರಣದಲ್ಲಿ ನಡೆದ ಜೈನರ ಧಾರ್ಮಿಕ ಕಾರ್ಯಕ್ರಮದಲ್ಲಿ ಎರಡು ಚಿನ್ನದ ಕಲಶವನ್ನು (Golden Kalash) ಕಳ್ಳತನ ಮಾಡಿದ ಆರೋಪಿಯನ್ನು ಉತ್ತರ ಪ್ರದೇಶದ ಅಪರಾಧ ವಿಭಾಗದ ಪೊಲೀಸರು (Crime Branch) ಬಂಧಿಸಿದ್ದಾರೆ.

    ಆರೋಪಿಯನ್ನು ಹಾಪುರ್ ನಿವಾಸಿ ಭೂಷಣ್ ವರ್ಮಾ ಎಂದು ಗುರುತಿಸಲಾಗಿದೆ. ಆರೋಪಿಯು ಜೈನ್ ಧರ್ಮದ ಧಾರ್ಮಿಕ ಕಾರ್ಯಕ್ರಮದಲ್ಲಿ 1.5 ಕೋಟಿ ಮೌಲ್ಯದ ವಜ್ರ, ರತ್ನ ಖಚಿತ ಕಲಶವನ್ನು ಕಳವು ಮಾಡಿದ್ದ. ಇದನ್ನೂ ಓದಿ: Viral Video | ಕೆಂಪು ಕೋಟೆಯಲ್ಲಿ 1.5 ಕೋಟಿ ಮೌಲ್ಯದ ವಜ್ರ, ರತ್ನ ಖಚಿತ ಕಲಶ ಕಳವು

    ಜೈನ ಅರ್ಚಕನ (Jain Priest) ವೇಷದಲ್ಲಿ ಬಂದ ಆರೋಪಿ ಬೆಲೆಬಾಳುವ ವಸ್ತುಗಳನ್ನ ದೋಚಿದ್ದ. ಈ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲೂ ವೈರಲ್ ಆಗಿತ್ತು.

    ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿ, ಬಿಎನ್‌ಎಸ್ ಸೆಕ್ಷನ್ 303 (2)ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

     ಏನಿದು ಪ್ರಕರಣ?
    ಕೆಂಪುಕೋಟೆ ಆವರಣದಲ್ಲಿರುವ ಪಾರ್ಕ್ನಲ್ಲಿ `ದಶಲಕ್ಷಣ ಮಹಾಪರ್ವ’ ಹೆಸರಿನಲ್ಲಿ ಆ.15ರಿಂದ ಸೆ.9ರ ವರೆಗೆ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಜೈನ ಕಾರ್ಯಕ್ರಮದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿಶೇಷ ಅತಿಥಿಯಾಗಿದ್ದರು. ಈ ಸಂದರ್ಭ ಕಳ್ಳತನ ನಡೆದಿದೆ. ಜೈನ ಅರ್ಚಕನ ವೇಷದಲ್ಲಿ ಬಂದ ಆರೋಪಿ ಬೆಲೆ ಬಾಳುವ ವಸ್ತುಗಳನ್ನು ಒಂದು ಚೀಲದಲ್ಲಿ ತುಂಬಿಕೊಂಡು ಹೋಗಿದ್ದ. ಆಯೋಜಕರು ಗಣ್ಯರನ್ನು ಸ್ವಾಗತಿಸುವ ಭರದಲ್ಲಿದ್ದಾಗ ಆರೋಪಿ ವಸ್ತುಗಳನ್ನ ದೋಚಿದ್ದ.

  • Viral Video | ಕೆಂಪು ಕೋಟೆಯಲ್ಲಿ 1.5 ಕೋಟಿ ಮೌಲ್ಯದ ವಜ್ರ, ರತ್ನ ಖಚಿತ ಕಲಶ ಕಳವು

    Viral Video | ಕೆಂಪು ಕೋಟೆಯಲ್ಲಿ 1.5 ಕೋಟಿ ಮೌಲ್ಯದ ವಜ್ರ, ರತ್ನ ಖಚಿತ ಕಲಶ ಕಳವು

    – ಜೈನ ಅರ್ಚಕನ ವೇಷದಲ್ಲಿ ಬಂದ ಕಳ್ಳನಿಂದ ಕೃತ್ಯ

    ನವದೆಹಲಿ: ಐತಿಹಾಸಿಕ ಕೆಂಪು ಕೋಟೆ ಆವರಣದಲ್ಲಿ ನಡೆದ ಜೈನರ ಧಾರ್ಮಿಕ ಕಾರ್ಯಕ್ರಮದಲ್ಲಿ (Jain Event) 1.5 ಕೋಟಿ ಮೌಲ್ಯದ ಎರಡು ಚಿನ್ನದ ಕಲಶ (Golden Kalash) ಹಾಗೂ ಇತರ ಬೆಲೆ ಬಾಳುವ ವಸ್ತುಗಳನ್ನು ಕಳ್ಳತನ ಮಾಡಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

    ಅರ್ಚಕನ (Jain Priest) ವೇಷದಲ್ಲಿ ಬಂದ ಕಳ್ಳ ಬೆಲೆಬಾಳುವ ವಸ್ತುಗಳನ್ನ ದೋಚಿದ್ದಾನೆ. ಈ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸೋಷಿಯಲ್‌ ಮೀಡಿಯಾದಲ್ಲೂ ಈಗ ವೈರಲ್‌ ಆಗಿದೆ. ಕಳ್ಳ ಅರ್ಚಕನನ್ನ ಗುರುತಿಸಿದ್ದು. ಶೀಘ್ರದಲ್ಲೇ ಆತನನ್ನ ಬಂಧಿಸುವುದಾಗಿ ಪೊಲೀಸರು (Delhi Police) ತಿಳಿಸಿದ್ದಾರೆ. ಇದನ್ನೂ ಓದಿ: ಹನಿಮೂನ್ ಮರ್ಡರ್‌ ಕೇಸ್ | 790 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ – ಕೊಲೆಯಾದ ರಘುವಂಶಿ ಪತ್ನಿಯೇ ಪ್ರಮುಖ ಆರೋಪಿ

    ಏನೇನು ಕಳ್ಳತನ?
    ಕಳ್ಳ ಅರ್ಚಕ ಕದ್ದ ವಸ್ತುಗಳಲ್ಲಿ ಚಿನ್ನದ ಜರಿ (ಕಲಶ), ಸುಮಾರು 760 ಗ್ರಾಂ ತೂಕದ ಚಿನ್ನದ ತೆಂಗಿನಕಾಯಿ (ಕಲಸದ ಮೇಲಿಡುವ ತೆಂಗು ಮಾದರಿ ವಸ್ತು), ವಜ್ರಗಳು, ರತ್ನ ಹಾಗೂ ಮಾಣಿಕ್ಯಗಳಿಂದ ಕೂಡಿದ ಸಣ್ಣ ಗಾತ್ರದ 115 ಗ್ರಾಂ ಚಿನ್ನದ ಕಲಶ ಸೇರಿವೆ.

    ಈ ವಸ್ತುಗಳೆಲ್ಲವು ಉದ್ಯಮಿ ಸುಧೀರ್ ಜೈನ್ ಅವರಿಗೆ ಸೇರಿದ್ದಾಗಿದೆ. ಪ್ರತಿದಿನ ಅವರು ಆಚರಣೆಗಳಿಗಾಗಿ ಬೆಲೆಬಾಳುವ ವಸ್ತುಗಳನ್ನು ತರುತ್ತಿದ್ದರು ಎನ್ನಲಾಗಿದೆ. ಈ ವಸ್ತುಗಳನ್ನು ಪೂಜಾ ಕೈಂಕರ್ಯ, ಆಚರಣೆಗಳಲ್ಲಿ ಬಳಸುವುದು ಪವಿತ್ರ ಹಾಗೂ ಶ್ರೇಷ್ಠ ಅನ್ನೋದು ಜೈನರ ನಂಬಿಕೆ.  ಇದನ್ನೂ ಓದಿ: ಯುವತಿಯನ್ನು ಪ್ರೀತಿಸಿ, ಮದುವೆಯಾಗಿ ಕಿರುಕುಳ ಆರೋಪ – ಮಾಜಿ ಕಾರ್ಪೊರೇಟರ್ ದಂಪತಿ, ಪುತ್ರನ ವಿರುದ್ಧ FIR

    ಕಳ್ಳತನ ಆಗಿದ್ದು ಯಾವಾಗ?
    ಕೆಂಪುಕೋಟೆ ಆವರಣದಲ್ಲಿರುವ ಪಾರ್ಕ್‌ನಲ್ಲಿ ʻದಶಲಕ್ಷಣ ಮಹಾಪರ್ವʼ ಹೆಸರಿನಲ್ಲಿ ಆ.15 ರಿಂದ ಸೆ.9ರ ವರೆಗೆ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಜೈನ ಕಾರ್ಯಕ್ರಮದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿಶೇಷ ಅತಿಥಿಯಾಗಿದ್ದರು. ಇದೇ ಸಂದರ್ಭದಲ್ಲಿ ಕಳ್ಳತನ ನಡೆದಿದೆ. ಜೈನ ಅರ್ಚಕನ ವೇಷದಲ್ಲಿ ಬಂದ ವ್ಯಕ್ತಿ ಬೆಲೆ ಬಾಳುವ ವಸ್ತುಗಳನ್ನು ಒಂದು ಚೀಲದಲ್ಲಿ ತುಂಬಿಕೊಂಡು ಹೋಗಿದ್ದಾನೆ. ಆಯೋಜಕರು ಗಣ್ಯರನ್ನು ಸ್ವಾಗತಿಸುವ ಭರದಲ್ಲಿದ್ದಾಗ ವ್ಯಕ್ತಿ ವಸ್ತುಗಳನ್ನ ದೋಚಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಜೈನ ಸಮುದಾಯದ ಮುಖಂಡರು ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಕಲಶವು ಕೇವಲ ಆರ್ಥಿಕ ಮೌಲ್ಯ ಮಾತ್ರವಲ್ಲದೆ, ಧಾರ್ಮಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಹೊಂದಿತ್ತು. ಇಂತಹ ಘಟನೆಯು ಜೈನ ಸಮುದಾಯಕ್ಕೆ ಆಘಾತಕಾರಿಯಾಗಿದೆ. ಕೆಂಪು ಕೋಟೆಯಂತಹ ಸ್ಥಳದಲ್ಲಿ ಇದು ಸಂಭವಿಸಿರುವುದು ಆತಂಕಕಾರಿಯಾಗಿದೆ. ಪೊಲೀಸರು ಶೀಘ್ರವಾಗಿ ಕಾರ್ಯಪ್ರವೃತ್ತರಾಗಿ ಕಲಶ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ:  ಮುಂಬೈನಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ – ನೋಯ್ಡಾದಲ್ಲಿ ಆರೋಪಿ ಅರೆಸ್ಟ್

  • ಮೋದಿ ಇಂದು ದಣಿದಿದ್ದಾರೆ, ನಾಳೆ ನಿವೃತ್ತಿ ಆಗ್ತಾರೆ – ಜೈರಾಮ್‌ ರಮೇಶ್‌

    ಮೋದಿ ಇಂದು ದಣಿದಿದ್ದಾರೆ, ನಾಳೆ ನಿವೃತ್ತಿ ಆಗ್ತಾರೆ – ಜೈರಾಮ್‌ ರಮೇಶ್‌

    ನವದೆಹಲಿ: 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೆಂಪು ಕೋಟೆಯಿಂದ ಪ್ರಧಾನಿ ನರೇಂದ್ರ ಮೋದಿ (PM Modi) ಮಾಡಿದ ಸ್ವಾತಂತ್ರ್ಯ ದಿನಾಚರಣೆಯ ಭಾಷಣವನ್ನ ವಿಪಕ್ಷವಾದ ಕಾಂಗ್ರೆಸ್‌ ಟೀಕಿಸಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘ (RSS)ವನ್ನು ಸಮಾಧಾನಪಡಿಸಲು, ಮೋದಿ ಸ್ವಾತಂತ್ರ್ಯೋತ್ಸವದ ಭಾಷಣವನ್ನ ರಾಜಕೀಯಗೊಳಿಸಿದ್ದಾರೆ ಕಿಡಿ ಕಾರಿವೆ.

    ರಾಷ್ಟ್ರೀಯ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ (Jairam Ramesh) ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಸುದೀರ್ಘ ಪೋಸ್ಟ್‌ವೊಂದನ್ನ ಹಂಚಿಕೊಂಡಿದ್ದಾರೆ. ಮೋದಿ ಭಾಷಣವನ್ನ ಅರ್ಥಹೀನ, ಹಳಸಿದ, ನೀರಸ ಹಾಗೂ ಬೂಟಾಟಿಕೆ ಎಂದು ಕರೆದಿದ್ದಾರೆ. ಇದರೊಂದಿಗೆ ಎಸ್ಪಿ ನಾಯಕ ಅಖಿಲೇಶ್‌ ಯಾದವ್‌, ಅಸಾದುದ್ದೀನ್‌ ಓವೈಸಿ ಸೇರಿದಂತೆ ಹಲವರು ಮೋದಿ ಭಾಷಣ ಖಂಡಿಸಿದ್ದಾರೆ. ಇದನ್ನೂ ಓದಿ: ರೈತರ ಕಾವಲಿಗೆ ನಾನು ತಡೆ ಗೋಡೆಯಂತೆ ನಿಂತಿದ್ದೇನೆ – ಕೆಂಪು ಕೋಟೆಯಿಂದ ಟ್ರಂಪ್‌ಗೆ ಮೋದಿ ಖಡಕ್ ಸಂದೇಶ

    ಆರ್‌ಎಸ್‌ಎಸ್‌ ಸಮಾಧಾನಪಡಿಸಲು ಕೆಂಪು ಕೋಟೆ ಭಾಷಣ
    2024ರ ಲೋಕಸಭಾ ಫಲಿತಾಂಶಗಳ ನಂತರ ನಿರ್ಣಾಯಕವಾಗಿ ದುರ್ಬಲಗೊಂಡಿರುವ ಪ್ರಧಾನಿ ಮೋದಿ, ತಮ್ಮ ಅಧಿಕಾರಾವಧಿಯ ವಿಸ್ತರಣೆಗಾಗಿ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಸಮಾಧಾನಪಡಿಸಲು ಕೆಂಪು ಕೋಟೆ (Red Fort) ಭಾಷಣವನ್ನ ಬಳಸಿಕೊಂಡಿದ್ದಾರೆ. ಪ್ರಧಾನಿಯವರ ಇಂದಿನ ಭಾಷಣದ ಅತ್ಯಂತ ತೊಂದರೆದಾಯಕ ಅಂಶವೆಂದರೆ, ಕೆಂಪುಕೋಟೆಯಿಂದ ಆರ್‌ಎಸ್‌ಎಸ್‌ನ ಹೆಸರನ್ನು ಉಲ್ಲೇಖಿಸಿರುವುದಾಗಿದೆ. ಇದು ಸಾಂವಿಧಾನಿಕ, ಜಾತ್ಯತೀತ ಗಣರಾಜ್ಯದ ಚೈತನ್ಯದ ಸ್ಪಷ್ಟ ಉಲ್ಲಂಘನೆಯಾಗಿದೆ. ಮುಂದಿನ ತಿಂಗಳು ಪ್ರಧಾನಿ ಮೋದಿ 75ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಆರ್‌ಎಸ್‌ಎಸ್‌ನ ಉಲ್ಲೇಖ ಅಧಿಕಾರದಲ್ಲಿ ಮುಂದುವರೆಯುವ ಹತಾಶ ಪ್ರಯತ್ನವಲ್ಲದೇ ಬೇರೇನೂ ಅಲ್ಲ ಎಂದಿದ್ದಾರೆ. ಇದನ್ನೂ ಓದಿ: ಸತತ 12ನೇ ಧ್ವಜಾರೋಹಣ, 103 ನಿಮಿಷ ಸುದೀರ್ಘ ಭಾಷಣ – ಇಂದಿರಾ ಗಾಂಧಿ ದಾಖಲೆ ಮುರಿದ ಮೋದಿ

    ಅಲ್ಲದೇ ಚುನಾವಣಾ ಆಯೋಗದಂತಹ ನಮ್ಮ ಮೂಲಭೂತ ಸಾಂವಿಧಾನಿಕ ಸಂಸ್ಥೆಗಳ ಪತನಕ್ಕೆ ಪ್ರಧಾನಿಯೇ ಕಾರಣ ಮತ್ತು ಮಾಸ್ಟರ್ ಮೈಂಡ್ ಆಗಿದ್ದರೂ, ಏಕತೆ, ಸೇರ್ಪಡೆ ಮತ್ತು ಪ್ರಜಾಪ್ರಭುತ್ವದ ಕುರಿತು ಪ್ರಧಾನಿಯವರು ದೀರ್ಘ ಭಾಷಣ ಮಾಡಿದ್ದಾರೆ. ಚುನಾವಣಾ ಪ್ರಕ್ರಿಯೆಯ ವಿಶ್ವಾಸಾರ್ಹತೆಯ ಕುರಿತು ವಿರೋಧ ಪಕ್ಷದ ನಾಯಕರು ಎತ್ತಿದ ಮೂಲಭೂತ ಪ್ರಶ್ನೆಗಳಿಗೆ ಇನ್ನೂ ಉತ್ತರಿಸಿಲ್ಲ. ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಮೂಲಕ ಲಕ್ಷಾಂತರ ಮತದಾರರನ್ನು ಮತದಾನದಿಂದ ವಂಚಿತಗೊಳಿಸಲಾಗುತ್ತಿದೆ ಎಂದು ಆಕ್ಷೇಪಿಸಿದ್ದಾರೆ. ಇದನ್ನೂ ಓದಿ: 12 ಸ್ವಾತಂತ್ರ್ಯ ಸಂಭ್ರಮಗಳಲ್ಲಿ ಭಾಗಿ; 2014-2025ರ ವರೆಗೆ ಮೋದಿ ಪೇಟ, ವಿಭಿನ್ನ ಲುಕ್‌ ನೋಡಿ..

    ಸ್ವಾತಂತ್ರ್ಯ ದಿನವು ಒಂದು ದೃಷ್ಟಿಕೋನ, ಪ್ರಾಮಾಣಿಕತೆ ಮತ್ತು ಸ್ಫೂರ್ತಿಯ ಕ್ಷಣವಾಗಿರಬೇಕು. ಆದರೆ ಇಂದಿನ ಭಾಷಣವು ಸ್ವ-ಪ್ರಶಂಸೆ ಮತ್ತು ಆಯ್ದ ಕಥೆಗಳ ಮಂದ ಮಿಶ್ರಣವಾಗಿತ್ತು. ದೇಶದ ಆಳವಾದ ಆರ್ಥಿಕ ಬಿಕ್ಕಟ್ಟು, ನಿರುದ್ಯೋಗ ಬಿಕ್ಕಟ್ಟು ಮತ್ತು ವೇಗವಾಗಿ ಬೆಳೆಯುತ್ತಿರುವ ಆರ್ಥಿಕ ಅಸಮಾನತೆಯ ಬಗ್ಗೆ ಯಾವುದೇ ಪ್ರಾಮಾಣಿಕ ಉಲ್ಲೇಖವಿರಲಿಲ್ಲ ಎಂದು ಟೀಕಿಸಿದರಲ್ಲದೇ ಕೊನೆಯಲ್ಲಿ ಪ್ರಧಾನಿ ಇಂದು ದಣಿದಂತೆ ಕಾಣುತ್ತಿದ್ದರು. ಅವರು ಶೀಘ್ರದಲ್ಲೇ ನಿವೃತ್ತರಾಗಲಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: Photo Gallery | ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯೋತ್ಸವದ ಸಂಭ್ರಮ – ʻಆಪರೇಷನ್ ಸಿಂಧೂರʼ ಪ್ರತಿಬಿಂಬ

    ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು?
    ಈ ಕುರಿತು ಪಕ್ಷದ ಪ್ರಧಾನ ಕಚೇರಿಯಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ದಾರ್ಶನಿಕ ನಾಯಕರು ಬಲವಾದ ಭಾರತಕ್ಕೆ ಅಡಿಪಾಯ ಹಾಕಿದ್ದಾರೆ. ಆದರೆ ಬಿಜೆಪಿ ಅಧಿಕಾರದಲ್ಲಿ ಉಳಿಯಲು ಯಾವುದೇ ಮಟ್ಟದ ಅನೈತಿಕತೆಗೆ ಇಳಿಯಲು ಸಿದ್ಧವಾಗಿದೆ. ಭಾರತದ ಸ್ವಾತಂತ್ರ್ಯ ಹೋರಾಟದ ಕಥೆಯು ಕಾಂಗ್ರೆಸ್ಸಿನ ಕಥೆಗೆ ಸಮಾನಾರ್ಥಕವಾಗಿದೆ. ಆದರೆ ಸ್ವಾತಂತ್ರ್ಯ ವೀರರು ದೇಶಕ್ಕಾಗಿ ಕಂಡ ಕನಸು ಈಗ ಮತ್ತಷ್ಟು ದೂರ ಸರಿಯುತ್ತಿದೆ. ಬಿಜೆಪಿ ಅಧಿಕಾರದಲ್ಲಿ ಉಳಿಯಲು ಅನೈತಿಕ ಮಾರ್ಗವನ್ನು ಅನುಸರಿಸುತ್ತಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹರಿಹಾಯ್ದರು. ಇದನ್ನೂ ಓದಿ: ವರ್ಷಕ್ಕೆ 5 ಸಾವಿರ ಉಳಿತಾಯ – ವಾರ್ಷಿಕ ಟೋಲ್‌ ಪಾಸ್‌ | ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

    (more…)

  • 79th Independence Day: ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

    79th Independence Day: ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

    ನವದೆಹಲಿ: ದೇಶಾದ್ಯಂತ 79ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಕೆಂಪುಕೋಟೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದರು.

    ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಘೋಷವಾಕ್ಯ ‘ನಯ ಭಾರತ’. ಸಮೃದ್ಧ, ಸುರಕ್ಷಿತ ಮತ್ತು ದಿಟ್ಟ ನವ ಭಾರತದ ನಿರಂತರ ಉದಯವನ್ನು ಸ್ಮರಿಸುವ ಧ್ಯೇಯವಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

    ಧ್ವಜಾರೋಹಣಕ್ಕೂ ಮುನ್ನ ದೆಹಲಿಯ ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಗೌರವ ಸಲ್ಲಿಸಿದರು. ನಂತರ ರಾಷ್ಟ್ರದ ನೇತೃತ್ವ ವಹಿಸಿ ಸಂಭ್ರಮಿಸಲು ಕೆಂಪು ಕೋಟೆಗೆ ಆಗಮಿಸಿದರು. ಮೋದಿ ಅವರನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸ್ವಾಗತಿಸಿದರು.

    ಬಳಿಕ ಪಿಎಂ ಮೋದಿ ಧ್ವಜಾರೋಹಣ ನೆರವೇರಿಸಿದರು. ರಾಷ್ಟ್ರಗೀತೆ ಮೊಳಗಿತು. ಎಲ್ಲರೂ ಎದ್ದು ನಿಂತು ಗೌರವ ಸಲ್ಲಿಸಿದರು. ಈ ವೇಳೆ ಭಾರತೀಯ ವಾಯುಪಡೆಯ ಎರಡು Mi-17 ಹೆಲಿಕಾಪ್ಟರ್‌ಗಳು ಕೆಂಪು ಕೋಟೆಯ ಮೇಲೆ ಹಾರಾಟ ನಡೆಸಿ, ಪುಷ್ಪವೃಷ್ಟಿಗೈದವು. ಒಂದು ಹೆಲಿಕಾಪ್ಟರ್‌ ತಿರಂಗವನ್ನು ಹಾರಾಡಿಸಿತು. ಮತ್ತೊಂದು ಹೆಲಿಕಾಪ್ಟರ್‌, ಆಪರೇಷನ್ ಸಿಂಧೂರ್‌ನ ಬ್ಯಾನರ್ ಅನ್ನು ಪ್ರದರ್ಶಿಸಿತು. ಆ ಮೂಲಕ ಶತ್ರು ದೇಶಗಳಿಗೆ ದಿಟ್ಟ ಉತ್ತರ ಕೊಟ್ಟ ಆಪರೇಷನ್‌ ಸಿಂಧೂರ ಬಗ್ಗೆ ಅರಿವು ಮೂಡಿಸಿತು.

  • ಸಂಭ್ರಮಕ್ಕೆ ಸಜ್ಜಾಗಿದೆ ಕೆಂಪು ಕೋಟೆ – ಸ್ವಾತಂತ್ರ್ಯ ದಿನಾಚರಣೆಯಲ್ಲಿ ʻಆಪರೇಷನ್ ಸಿಂಧೂರʼದ ಪ್ರತಿಬಿಂಬ

    ಸಂಭ್ರಮಕ್ಕೆ ಸಜ್ಜಾಗಿದೆ ಕೆಂಪು ಕೋಟೆ – ಸ್ವಾತಂತ್ರ್ಯ ದಿನಾಚರಣೆಯಲ್ಲಿ ʻಆಪರೇಷನ್ ಸಿಂಧೂರʼದ ಪ್ರತಿಬಿಂಬ

    – ಭದ್ರತೆಗೆ 10,000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ

    ನವದೆಹಲಿ: ದೆಹಲಿಯ ಕೆಂಪು ಕೋಟೆ (Red Fort) 2025ರ ಸ್ವಾತಂತ್ರ್ಯ ದಿನಾಚರಣೆಗೆ ಸಜ್ಜಾಗಿದೆ. ಸ್ವಾತಂತ್ರ‍್ಯ ದಿನಾಚರಣೆಯಲ್ಲಿ ಭಾಗವಹಿಸಲು ಸುಮಾರು 5,000 ವಿಶೇಷ ಅತಿಥಿಗಳನ್ನ ವಿವಿಧ ಕ್ಷೇತ್ರಗಳಿಂದ ಆಹ್ವಾನಿಸಲಾಗಿದೆ. ಜೊತೆಗೆ ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ (Independence Day) ಆಪರೇಷನ್ ಸಿಂಧೂರ ಪ್ರತಿಬಿಂಬಿಸಲಿದೆ. ಗ್ಯಾನ್‌ಪಥದಲ್ಲಿ ಲಾಂಛನ ಪ್ರದರ್ಶನ ಇರಲಿದೆ.

    ಈ ವರ್ಷದ ಆಮಂತ್ರಣ ಪತ್ರಿಕೆಗಳಲ್ಲೂ ಆಪರೇಷನ್ ಸಿಂಧೂರ (Operation Sindoor) ಲೋಗೋ ಮುದ್ರಿಸಲಾಗಿದೆ. ಆಪರೇಷನ್ ಸಿಂಧೂರದಲ್ಲಿ ಭಾಗವಹಿಸಿದ 15 ರಕ್ಷಣಾ ಸಿಬ್ಬಂದಿಗೆ ಗೌರವದ ಪ್ರತೀಕವಾಗಿ ಪದಕ ಘೋಷಿಸಲಾಗಿದ್ದು, ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ವಿತರಿಸಲಾಗುತ್ತದೆ. ಭಾರತೀಯ ವಾಯುಪಡೆಯ ಮೂರು ಹೆಲಿಕಾಪ್ಟರ್‌ಗಳು ಕೆಂಪು ಕೋಟೆಯ ಮೇಲೆ ಆಪರೇಷನ್ ಸಿಂಧೂರನ ಧ್ವಜ ಹಾರಿಸುವ ಮೂಲಕ ವಿಶೇಷ ಫ್ಲೈಪಾಸ್ಟ್ (Air Show) ನಡೆಸಲಿವೆ. ಜೊತೆಗೆ ಆಪರೇಷನ್ ಸಿಂಧೂರದಲ್ಲಿ ಭಾಗಿಯಾಗಿದ್ದ ಬಿಎಸ್‌ಎಫ್‌ನ (BSF) 16 ಯೋಧರಿಗೆ ಶೌರ್ಯ ಪದಕ ಘೋಷಿಸಲಾಗಿದೆ.

    ಶುಕ್ರವಾರ ಏನೇನು ಕಾರ್ಯಕ್ರಮ?
    * ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೆಳಿಗ್ಗೆ 7:30ಕ್ಕೆ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ.
    * ಧ್ವಜಾರೋಹಣದ ಬಳಿಕ ರಾಷ್ಟ್ರಗೀತೆ, ಬಳಿಕ 21 ಗನ್ ಸೆಲ್ಯೂಟ್ ಮೂಲಕ ಗೌರವ ವಂದನೆ
    * ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ಗಳಿಂದ ಪುಷ್ಪವೃಷ್ಠಿ ನೆರವೇರಿಸಿದ ಬಳಿಕ
    * ಪ್ರಧಾನಿ ಮೋದಿ ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ
    * ಈ ವರ್ಷದ ಥೀಮ್ ʻನಯಾ ಭಾರತʼ (ನವಭಾರತ) ಆಗಿದ್ದು, ದೇಶದ ಸಾಂಸ್ಕೃತಿಕ ವೈವಿಧ್ಯತೆ, ಸೇನಾ ಸಾಮರ್ಥ್ಯ ಮತ್ತು ತಾಂತ್ರಿಕ ಪ್ರಗತಿಯನ್ನು ಪ್ರದರ್ಶಿಸಲಾಗುವುದು
    * ಸುಮಾರು 6,000 ವಿಶೇಷ ಅತಿಥಿಗಳು, ಯುವಕರು, ರೈತರು, ಮಹಿಳೆಯರು, ಮತ್ತು ಸರ್ಕಾರಿ ಯೋಜನೆಗಳ ಫಲಾನುಭವಿಗಳು ಕಾರ್ಯಕ್ರಮವನ್ನು ವೀಕ್ಷಿಸಲಿದ್ದಾರೆ.

    ಹೇಗಿರಲಿದೆ ಭದ್ರತೆ?
    * ಕೆಂಪು ಕೋಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ 10,000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ.
    * ವೇದಿಕೆ ಸುತ್ತಮುತ್ತಲಿನ ಪ್ರದೇಶದಲ್ಲಿ ನಾಲ್ಕು ಹಂತದಲ್ಲಿ ಭದ್ರತೆ ಇರಲಿದೆ, ಪ್ರಧಾನಿ ಸುತ್ತ ಎಸ್‌ಪಿಜಿ ಕಾವಲು ಕಾಯಲಿದೆ.
    * 1,000 ಫೇಸ್ ಡಿಟೆಕ್ಷನ್ ಕ್ಯಾಮೆರಾಗಳು, ಆಧುನಿಕ ತಪಾಸಣೆ ಉಪಕರಣಗಳು, CCTV ಮತ್ತು ಫೇಸ್ ಡಿಟೆಕ್ಷನ್ ತಂತ್ರಜ್ಞಾನ ಅಳವಡಿಸಲಾಗಿದೆ.
    * ಗುಪ್ತಚರ ಮಾಹಿತಿಯ ಆಧಾರದ ಮೇಲೆ ದೆಹಲಿ ಮತ್ತು NCR ಪ್ರದೇಶದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ
    * 70 PCR ವಾಹನಗಳು, ಗಸ್ತು ವಾಹನಗಳು ಮತ್ತು ತುರ್ತು ರಕ್ಷಣಾ ಘಟಕದ ವಾಹನಗಳನ್ನ ಕೆಂಪು ಕೋಟೆಯ ಸುತ್ತಲೂ ನಿಯೋಜಿಸಲಾಗಿದೆ
    * ಆಂಟಿ-ಡ್ರೋನ್ ಸಿಸ್ಟಮ್‌ನಂತಹ ಆಧುನಿಕ ತಂತ್ರಜ್ಞಾನವನ್ನ ಭದ್ರತೆಗಾಗಿ ಬಳಸಲಾಗುತ್ತಿದೆ.

    ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆಪರೇಷನ್‌ ಸಿಂಧೂರದ ಪ್ರತಿಬಿಂಬ
    1. ಗ್ಯಾನ್‌ಪಥ್‌ನಲ್ಲಿ ಲಾಂಛನ ಪ್ರದರ್ಶನ: ಕೆಂಪು ಕೋಟೆಯ ಗ್ಯಾನ್‌ಪಥ್‌ನ ವೀಕ್ಷಣಾ ಕೇಂದ್ರದಲ್ಲಿ ಆಪರೇಷನ್ ಸಿಂಧೂರದ ಲಾಂಛನವನ್ನು ಪ್ರದರ್ಶಿಸಲಾಗುವುದು. ಇದರ ಜೊತೆಗೆ, ಹೂವಿನ ಅಲಂಕಾರವೂ ಈ ಕಾರ್ಯಾಚರಣೆಯ ಥೀಮ್‌ಗೆ ತಕ್ಕಂತೆ ರೂಪಿಸಲಾಗಿದೆ.

    2. ಆಮಂತ್ರಣ ಪತ್ರಿಕೆಗಳಲ್ಲಿ ಲಾಂಛನ: ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಆಮಂತ್ರಣ ಪತ್ರಿಕೆಗಳ ಮೇಲೆ ಆಪರೇಷನ್ ಸಿಂಧೂರದ ಲಾಂಛನವನ್ನು ಮುದ್ರಿಸಲಾಗಿದೆ. ಜೊತೆಗೆ, ಕೇಂದ್ರ ವಿಸ್ತಾರದ ಚಿತ್ರದ ಬದಲಿಗೆ ಚೆನಾಬ್ ರೈಲ್ವೇ ಸೇತುವೆಯ ಚಿತ್ರವನ್ನು ಒಳಗೊಂಡಿದೆ, ಇದನ್ನು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದರು.

    3. ವಿಶೇಷ ಗೌರವ ಸಮಾರಂಭ: ಆಪರೇಷನ್ ಸಿಂಧೂರದಲ್ಲಿ ಭಾಗವಹಿಸಿದ 15 ರಕ್ಷಣಾ ಸಿಬ್ಬಂದಿಯನ್ನ ಕೆಂಪು ಕೋಟೆಯ ರ‍್ಯಾಂಪ್‌ನಲ್ಲಿ ಗೌರವಿಸಲಾಗುವುದು. ಅವರಿಗೆ ಗೌರವ ಪದಕಗಳನ್ನ ಘೋಷಿಸಲಾಗುವುದು, ಇದು ಈ ಕಾರ್ಯಾಚರಣೆಯ ಯಶಸ್ಸಿಗೆ ಸಮರ್ಪಿತವಾಗಿದೆ.

    4. ಏರ್‌ಫೋರ್ಸ್‌ನ ವಿಶೇಷ ಪ್ರದರ್ಶನ: ಭಾರತೀಯ ವಾಯುಪಡೆಯ ಮೂರು ಹೆಲಿಕಾಪ್ಟರ್‌ಗಳು ಕೆಂಪು ಕೋಟೆಯ ಮೇಲೆ ಆಪರೇಷನ್ ಸಿಂಧೂರದ ಧ್ವಜವನ್ನ ಹಾರಿಸುವ ಮೂಲಕ ವಿಶೇಷ ಫ್ಲೈಪಾಸ್ಟ್ ನಡೆಸಲಿವೆ. ಒಂದು ಹೆಲಿಕಾಪ್ಟರ್ ರಾಷ್ಟ್ರಧ್ವಜವನ್ನ ಹಾರಿಸಿದ್ರೆ, ಇನ್ನೊಂದು ಆಪರೇಷನ್ ಸಿಂಧೂರದ ಧ್ವಜವನ್ನ ಹಾರಿಸಲಿದೆ.

  • ಕೆಂಪು ಕೋಟೆಗೆ ಪ್ರವೇಶಿಸಲು ಯತ್ನ – ಐವರು ಬಾಂಗ್ಲಾ ಪ್ರಜೆಗಳು ಅರೆಸ್ಟ್‌

    ಕೆಂಪು ಕೋಟೆಗೆ ಪ್ರವೇಶಿಸಲು ಯತ್ನ – ಐವರು ಬಾಂಗ್ಲಾ ಪ್ರಜೆಗಳು ಅರೆಸ್ಟ್‌

    ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಗೆ ಇನ್ನು 10 ದಿನಗಳಷ್ಟೇ ಬಾಕಿಯಿದೆ. ಈ ಹಿನ್ನೆಲೆ ದೆಹಲಿಯಾದ್ಯಂತ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಹೀಗಿದ್ದೂ ಕೆಂಪು ಕೋಟೆ (Red Fort) ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ ಬಾಂಗ್ಲಾದೇಶದ ಐವರು ಅಕ್ರಮ ವಲಸಿಗರನ್ನ ದೆಹಲಿ ಪೊಲೀಸರು (Delhi Police) ಬಂಧಿಸಿದ್ದಾರೆ.

    ಹೌದು. ಕೆಂಪು ಕೋಟೆಯ ಪ್ರವೇಶ ನಿಯಂತ್ರಣ ಬಿಂದುವಿನ ಬಳಿ ಆ ಪ್ರದೇಶದಲ್ಲಿ ನಿಯೋಜಿಸಲಾದ ಪೊಲೀಸ್ ತಂಡವು ಆರೋಪಿಗಳನ್ನು ವಿಚಾರಿಸಿ ಬಂಧಿಸಿದೆ. ಇದನ್ನೂ ಓದಿ: ಪಾಕ್ ಪರ ಬೇಹುಗಾರಿಕೆ – ಮತ್ತೊಬ್ಬ ಶಂಕಿತನ ಬಂಧನ

    20 ರಿಂದ 25 ವರ್ಷ ವಯಸ್ಸಿನ ಇಬ್ಬರು ಆರೋಪಿಗಳು ನಿಯಮಿತ ತಪಾಸಣೆಯ ಸಮಯದಲ್ಲಿ ಸರಿಯಾದ ದಾಖಲೆಗಳನ್ನ ತೋರಿಸುವಲ್ಲಿ ವಿಫಲರಾಗಿದ್ದಾರೆ. ಹೆಚ್ಚಿನ ತಪಾಸಣೆ ನಡೆಸಿದಾಗ ಅವರು ಅಕ್ರಮವಾಗಿ ನೆಲೆಸಿರುವುದು ಕಂಡು ಬಂದಿದೆ. ಇದನ್ನೂ ಓದಿ: ಭಾರತದಿಂದ ಖರೀದಿಸುವ ಎಲ್ಲ ಸರಕುಗಳಿಗೂ ಸುಂಕ – ಭಾರತ ಕೌಂಟರ್‌ಗೆ ಟ್ರಂಪ್‌ ಬಿಗ್‌ ವಾರ್ನಿಂಗ್‌

    ಈ ಕುರಿತು ಪ್ರತಿಕ್ರಿಯಿಸಿರುವ ಉಪ ಪೊಲೀಸ್ ಆಯುಕ್ತ (ಉತ್ತರ ಜಿಲ್ಲೆ) ರಾಜ ಬಂಥಿಯಾ, ಇವರೆಲ್ಲರೂ ಅಕ್ರಮ ವಲಸಿಗರಾಗಿದ್ದು, ಅಕ್ರಮವಾಗಿ ಕೆಂಪು ಕೋಟೆ ಆವರಣಕ್ಕೆ ಪ್ರವೇಶಿಸಲು ಪ್ರಯತ್ನಿಸಿದ್ದರು. ಹೀಗಾಗಿ ಐವರು ಬಾಂಗ್ಲಾದೇಶದ ಪ್ರಜೆಗಳನ್ನ ಬಂಧಿಸಲಾಗಿದೆ. ವಿಚಾರಣೆಯ ಸಮಯದಲ್ಲಿ, ಅವರು ಸುಮಾರು 3-4 ತಿಂಗಳ ಹಿಂದೆ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿ ದೆಹಲಿಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಸಾರಿಗೆ ಮುಷ್ಕರ | ಇದು ಪಾಪರ್‌ ಸರ್ಕಾರ, ಪರಿಹಾರ ಕೊಡದಿದ್ರೆ ಅಧಿಕಾರ ಬಿಟ್ಟು ತೊಲಗಿ – ಅಶೋಕ್‌ ವಾಗ್ದಾಳಿ

  • ಸೂಕ್ಷ್ಮ ಮಾಹಿತಿ ಸೋರಿಕೆ – 600 ಪಾಕಿಸ್ತಾನಿಯರ ಸಂಪರ್ಕದಲ್ಲಿದ್ದ ಬೇಹುಗಾರ ವಾರಣಾಸಿಯಲ್ಲಿ ಅರೆಸ್ಟ್‌

    ಸೂಕ್ಷ್ಮ ಮಾಹಿತಿ ಸೋರಿಕೆ – 600 ಪಾಕಿಸ್ತಾನಿಯರ ಸಂಪರ್ಕದಲ್ಲಿದ್ದ ಬೇಹುಗಾರ ವಾರಣಾಸಿಯಲ್ಲಿ ಅರೆಸ್ಟ್‌

    – ಬಾಬರಿ ಮಸೀದಿ ಧ್ವಂಸಕ್ಕೆ ಸೇಡು ತೀರಿಸಿಕೊಳ್ಳಲು ವಾಟ್ಸಪ್‌ ಗ್ರೂಪಲ್ಲಿ ಪ್ರಚೋದನೆ
    – ಜ್ಞಾನವಾಪಿ ಮಸೀದಿ, ಕೆಂಪು ಕೋಟೆ ಫೋಟೋ ಪಾಕ್‌ಗೆ ರವಾನೆ

    ಲಕ್ನೋ: ಪಾಕಿಸ್ತಾನದ ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ವಾರಣಾಸಿಯ (Varanasi) ವ್ಯಕ್ತಿಯೊಬ್ಬನನ್ನ ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (UP ATS) ಬಂಧಿಸಿದೆ. ಇದರೊಂದಿಗೆ ದೇಶದ ವಿವಿಧೆಡೆ ಬಂಧಿತ ಪಾಕ್‌ ಬೇಹುಗಾರರ (Spy) ಸಂಖ್ಯೆ 12ಕ್ಕೆ ಏರಿಕೆಯಾಗಿದೆ.

    ತುಫೈಲ್ ಬಂಧಿತ ಆರೋಪಿ. ಪಾಕ್‌ ಪ್ರಜೆಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ತುಫೈಲ್‌ ದೇಶದ ಭದ್ರತೆಗೆ ಸಂಬಂಧಿಸಿದ ಸೂಕ್ಷ್ಮ ಮತ್ತು ಗೌಪ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಕಳುಹಿಸುತ್ತಿದ್ದ. ರಾಜ್‌ಘಾಟ್, ನಮೋ ಘಾಟ್, ಜ್ಞಾನವಾಪಿ ಮಸೀದಿ, ರೈಲ್ವೆ ನಿಲ್ದಾಣ ಮತ್ತು ಕೆಂಪು ಕೋಟೆ (Red Fort) ಸೇರಿದಂತೆ ಆಯಕಟ್ಟಿನ ಸ್ಥಳಗಳ ಫೋಟೋ ಮತ್ತು ಮಾಹಿತಿಯನ್ನ ಹಂಚಿಕೊಂಡಿದ್ದಾನೆ ಅನ್ನೋದು ತನಿಖೆ ಸಮಯದಲ್ಲಿ ಗೊತ್ತಾಗಿದೆ.

    ಅಲ್ಲದೇ ಕೆಲವು ಸ್ಥಳೀಯರನ್ನು ಪಾಕಿಸ್ತಾನಿಯರೊಟ್ಟಿಗೆ ಸಂಪರ್ಕಿಸುವ ವಾಟ್ಸಪ್‌ ಗ್ರೂಪ್‌ಗಳಲ್ಲಿ ತುಫೈಲ್‌ ಸಕ್ರೀಯವಾಗಿದ್ದ. ಅಲ್ಲಿ ತೆಹ್ರೀಕ್-ಇ-ಲಬ್ಬೈಕ್ ಉಗ್ರ ಸಂಘಟನೆಯ ನಾಯಕ ಮೌಲಾನಾ ಸಾದ್ ರಿಜ್ವಿಯ ಉಪನ್ಯಾಸ ವಿಡಿಯೋಗಳನ್ನ ಹಂಚಿಕೊಳ್ಳುತ್ತಿದ್ದ. ಬಾಬರಿ ಮಸೀದಿ (Babri Masjid) ಧ್ವಂಸಕ್ಕೆ ಸೇಡು ತೀರಿಸಿಕೊಳ್ಳಲು ಮತ್ತು ಶರಿಯಾ ಕಾನೂನು ಹೇರಿಕೆಯನ್ನು ಉತ್ತೇಜಿಸುವ ಪ್ರಚೋದನಕಾರಿ ಸಂದೇಶಗಳನ್ನು ಹಂಚಿಕೊಳ್ಳುತ್ತಿದ್ದ ಅನ್ನೋದು ಎಂಬುದು ತನಿಖೆ ವೇಳೆ ಬೆಳಕಿಗೆ ಬಂದಿದೆ.

    ನಫೀಸಾ ಎಂಬ ಪಾಕಿಸ್ತಾನಿ ಮಹಿಳೆಯ ಸಂಪರ್ಕದಲ್ಲೂ ತುಫೈಲ್‌ ಇದ್ದ. ಆಕೆಯ ಪತಿ ಪಾಕಿಸ್ತಾನಿ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಒಟ್ಟಾರೆ ತುಫೈಲ್‌ 600 ಪಾಕಿಸ್ತಾನಿಯರೊಂದಿಗೆ ಸಂಪರ್ಕದಲ್ಲಿದ್ದ ಎಂದು ತನಿಖಾ ದಳದ ಮೂಲಗಳಿಂದ ತಿಳಿದುಬಂದಿದೆ. ಈ ಸಂಬಂಧ ತನಿಖೆ ಮುಂದುವರಿದಿದೆ.

  • 76ನೇ ಗಣರಾಜೋತ್ಸವಕ್ಕೆ ಸಕಲ ಸಿದ್ಧತೆ – ಭದ್ರತೆ ಹೇಗಿದೆ?

    76ನೇ ಗಣರಾಜೋತ್ಸವಕ್ಕೆ ಸಕಲ ಸಿದ್ಧತೆ – ಭದ್ರತೆ ಹೇಗಿದೆ?

    ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಾಳೆ ನಡೆಯಲಿರುವ ಗಣರಾಜೋತ್ಸವಕ್ಕೆ (Republic Day) ಸಕಲ ಸಿದ್ಧತೆ ನಡೆದಿದ್ದು, ಕರ್ತವ್ಯ ಪಥ್‌ನಲ್ಲಿ ಪರೇಡ್‌ಗೆ ತಯಾರಿ ಕೂಡ ಮಾಡಲಾಗುತ್ತಿದೆ.

    ಜನವರಿ 26 ಭಾನುವಾರದಂದು 76ನೇ ಗಣರಾಜೋತ್ಸವ ಆಚರಣೆ ಹಿನ್ನೆಲೆ ದೆಹಲಿಯ ಕೆಂಪುಕೋಟೆಯಲ್ಲಿ ಗಣರಾಜೋತ್ಸವ ಸಂಭ್ರಮಕ್ಕಾಗಿ ಸಕಲ ಸಿದ್ಧತೆ ನಡೆದಿದ್ದು, ಅಂತಿಮ ಹಂತದ ತಯಾರಿಯೂ ಪೂರ್ಣಗೊಂಡಿದೆ. ಸುವರ್ಣ ಭಾರತ, ಪರಂಪರೆ ಮತ್ತು ಅಭಿವೃದ್ಧಿ ಥೀಮ್‌ನಲ್ಲಿ ಗಣರಾಜೋತ್ಸವ ಆಚರಣೆ ಮಾಡಲಾಗುತ್ತಿದ್ದು, ಇಂಡೋನೇಷ್ಯಾದ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಸಮ್ಮುಖದಲ್ಲಿ ಪರೇಡ್ ನಡೆಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಸೇರಿ ಗಣ್ಯರು ಭಾಗಿಯಾಗಲಿದ್ದಾರೆ.ಇದನ್ನೂ ಓದಿ: Republic Day | ನಾಳೆ ಬೆಳಗ್ಗೆ 6 ರಿಂದಲೇ ಮೆಟ್ರೋ ಸಂಚಾರ

    ಪರೇಡ್‌ನಲ್ಲಿ 15 ರಾಜ್ಯಗಳು, ಕೇಂದ್ರಾಳಿತ ಪ್ರದೇಶಗಳು ಹಾಗೂ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳಿಂದ ಸ್ತಬ್ಧಚಿತ್ರ ಪ್ರದರ್ಶನ, ಹತ್ತು ಸಾವಿರಕ್ಕೂ ಅಧಿಕ ವಿಶೇಷ ಅತಿಥಿಗಳು, ಒಂದು ಲಕ್ಷಕ್ಕೂ ಅಧಿಕ ಮಂದಿ ಸಾಕ್ಷಿಯಾಗಲಿದ್ದಾರೆ.

    ಕಾರ್ಯಕ್ರಮದ ಹಿನ್ನೆಲೆ ಕರ್ತವ್ಯ ಪಥ್ ಸುತ್ತ ಭದ್ರತೆಯನ್ನು ಹೆಚ್ಚಿಸಲಾಗಿದ್ದು, 15,000ಕ್ಕೂ ಅಧಿಕ ಪೊಲೀಸರು, 70 ಪ್ಯಾರಾ ಮಿಲಿಟರಿ ಕಂಪನಿಗಳ ನಿಯೋಜನೆ ಮಾಡಲಾಗಿದೆ. ಒಟ್ಟು ಆರು ಹಂತಗಳಲ್ಲಿ ಭದ್ರತೆಯನ್ನು ಮಾಡಿಕೊಳ್ಳಲಾಗಿದ್ದು, ಎಲ್ಲ ಕಡೆಗಳಲ್ಲಿಯೂ ಸಿಸಿಟಿವಿ ಕ್ಯಾಮೆರಾ, 500 ಎಐ ಕ್ಯಾಮೆರಾಗಳ ಅಳವಡಿಸಲಾಗಿದೆ. 40 ಅಧಿಕ ಕಂಟ್ರೋಲ್ ರೂಂಗಳಿಂದ ಇಡೀ ಕಾರ್ಯಕ್ರಮದ ಮೇಲೆ ಹದ್ದಿನ ಕಣ್ಣು ಇರಿಸಲಾಗಿದೆ.ಇದನ್ನೂ ಓದಿ: ಭಾರತಕ್ಕೆ ಜಯ – ಮುಂಬೈ ದಾಳಿಕೋರ ತಹಾವೂರ್ ರಾಣಾ ಹಸ್ತಾಂತರಕ್ಕೆ ಅಮೆರಿಕ ಸುಪ್ರೀಂ ಅನುಮತಿ

  • ಸ್ವಾತಂತ್ರ್ಯೋತ್ಸವದಂದು ರಾಹುಲ್‍ಗೆ ಸರ್ಕಾರದಿಂದ ಅವಮಾನ – ಕೇಂದ್ರದ ವಿರುದ್ಧ ಕಾಂಗ್ರೆಸ್ ಕಿಡಿ

    ಸ್ವಾತಂತ್ರ್ಯೋತ್ಸವದಂದು ರಾಹುಲ್‍ಗೆ ಸರ್ಕಾರದಿಂದ ಅವಮಾನ – ಕೇಂದ್ರದ ವಿರುದ್ಧ ಕಾಂಗ್ರೆಸ್ ಕಿಡಿ

    ನವದೆಹಲಿ: ಕೆಂಪುಕೋಟೆಯಲ್ಲಿ (Red Fort)  ನಡೆದ ಸ್ವಾತಂತ್ರ್ಯ ದಿನಾಚರಣೆ (Independence Day) ಕಾರ್ಯಕ್ರಮದಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ಕೇಂದ್ರ ಸರ್ಕಾರ ಅವಮಾನ ಮಾಡಿದೆ ಎಂದು ಕಾಂಗ್ರೆಸ್ (Congress) ಕಿಡಿಕಾರಿದೆ.

    ದಶಕದ ಬಳಿಕ ಇದೇ ಮೊದಲ ಬಾರಿಗೆ ವಿಪಕ್ಷ ನಾಯಕರು ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗಿಯಾಗಿದ್ದರು. ಆದರೆ ವಿಪಕ್ಷ ನಾಯಕ ರಾಹುಲ್ ಗಾಂಧಿಯವರಿಗೆ ಮೊದಲ ಸಾಲಿನಲ್ಲಿ ನಿಗದಿ ಮಾಡಬೇಕಿತ್ತು. ಆದರೆ ಐದನೇ ಸಾಲಿನಲ್ಲಿ ನಿಗದಿ ಮಾಡಿ ಅವಮಾನ ಮಾಡಲಾಗಿದೆ ಎಂದು ಕಾಂಗ್ರೆಸ್ ಆಕ್ರೋಶ ಹೊರಹಾಕಿದೆ.

    ಮೊದಲ ಸಾಲಿನಲ್ಲಿ ಒಲಿಂಪಿಕ್ಸ್ ಪದಕ ವಿಜೇತರಾದ ಮನುಭಾಕರ್, ಸರಬ್ಜೋತ್ ಸಿಂಗ್, ಸಚಿವರಾದ ಅಮಿತ್ ಶಾ, ಶಿವರಾಜ್ ಸಿಂಗ್ ಚೌಹಾಣ್, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಸೇರಿ ಹಲವರು ಗಣ್ಯರು ಕುಳಿತಿದ್ದರು. ಪ್ರೋಟೋಕಾಲ್ ಪ್ರಕಾರ ಅಧಿಕೃತ ವಿಪಕ್ಷ ನಾಯಕರಿಗೆ ಮೊದಲ ಸಾಲಿನಲ್ಲಿಯೇ ಆಸನ ನಿಗದಿ ಮಾಡಬೇಕಿತ್ತು.

    ಈ ವಿಚಾರ ಜೋರಾಗುತ್ತಿದ್ದಂತೆ ರಕ್ಷಣಾ ಸಚಿವಾಲಯದ ಮೂಲಗಳು, ರಾಹುಲ್ ಗಾಂಧಿ ಅವರಿಗೆ ಮೊದಲ ಸ್ಥಾನದಲ್ಲೇ ಸೀಟ್ ನೀಡಲಾಗಿತ್ತು. ಆದರೆ ಅವರು ಒಲಿಂಪಿಕ್ಸ್ ಪದಕ ವಿಜೇತರ ಜೊತೆ ಕೂರುವುದಾಗಿ ಹೇಳಿದ್ದರಿಂದ ಅವರಿಗೆ ಅಲ್ಲಿ ಸೀಟ್ ನಿಗದಿ ಮಾಡಲಾಗಿದೆ ಎಂದು ತಿಳಿಸಿವೆ.

    ಸೀಟ್ ವಿಚಾರಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ರಾಹುಲ್ ಗಾಂಧಿ ಮತ್ತು ರಕ್ಷಣಾ ಸಚಿವಾಲಯದಿಂದ ಯಾವುದೇ ಅಧಿಕೃತ ಹೇಳಿಕೆ ಪ್ರಕಟವಾಗಿಲ್ಲ.

  • Independence Day: ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ – PHOTOS ನೋಡಿ..

    Independence Day: ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ – PHOTOS ನೋಡಿ..

    ರಾಜಘಾಟ್‌ನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಸಮಾಧಿಗೆ ಪುಷ್ಪನಮನ ಸಲ್ಲಿಸಿದ ಪ್ರಧಾನಿ ಮೋದಿ.

    ಕೆಂಪುಕೋಟೆಯಲ್ಲಿ ಪ್ರಧಾನಿಗೆ ಗನ್‌ ಸೆಲ್ಯೂಟ್‌.

    78ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಕೆಂಪುಕೋಟೆಯಲ್ಲಿ ನೆರೆದಿದ್ದ ಜನಸ್ತೋಮ.

    78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜನರಿಗೆ ಹಸ್ತಾಲಾಘವ ಮಾಡಿದ ಪ್ರಧಾನಿ.

    ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ.

    ತ್ರಿವರ್ಣ ಧ್ವಜಕ್ಕೆ ಹೆಲಿಕಾಪ್ಟರ್‌ನಿಂದ ಪುಷ್ಪವೃಷ್ಟಿ.

    78 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಆಕಾಶದಲ್ಲಿ ಹಾರಾಡಿದ ತ್ರಿವರ್ಣ ಬಲೂನ್‌ಗಳ ನೋಟ.

    ದೇಶದ ಜನರನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ. 

    ದೆಹಲಿಯ ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನದ ಸಂಭ್ರಮದ ಝಲಕ್.