Tag: Red sandal

  • ಅಪರಿಚಿತ ವಾಹನ ಹಿಟ್ ಅಂಡ್ ರನ್ – ತಾಯಿ ಸಾವು, ಮಗು ಸ್ಥಿತಿ ಗಂಭೀರ

    ಅಪರಿಚಿತ ವಾಹನ ಹಿಟ್ ಅಂಡ್ ರನ್ – ತಾಯಿ ಸಾವು, ಮಗು ಸ್ಥಿತಿ ಗಂಭೀರ

    – ರಕ್ತಚಂದನ ಕಳವು ಮಾಡೋಕೆ ಟಿಟಿ ಕಳ್ಳತನ ಮಾಡಿದ್ದ ಸ್ಮಗ್ಲರ್ ಅಂದರ್

    ಚಿಕ್ಕಬಳ್ಳಾಪುರ: ಶಾಲೆಯಿಂದ ಮಗುವನ್ನು ಕರೆದುಕೊಂಡುಬರಲು ಮತ್ತೊಬ್ಬ ಮಗುವಿನೊಂದಿಗೆ ಹೊರಟಿದ್ದ ಮಹಿಳೆ ರಸ್ತೆ ಬದಿ ನಿಂತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapur) ನಗರದ ನಂದಿ ಮೋರಿ ಬಳಿ ಸಂಭವಿಸಿದೆ. ಚಾಲಕ ಕಾರಿನ ಸಮೇತ ಎಸ್ಕೇಪ್‌ ಆಗಿದ್ದಾನೆ.

    ಘಟನೆಯಲ್ಲಿ ತಾಯಿ (25 ವರ್ಷದ ಭಾನುಪ್ರಿಯಾ) ಸಾವನ್ನಪ್ಪಿದ್ದು, 4 ವರ್ಷದ ಮಗು ಮನೋಜ್ ಸ್ಥಿತಿ ಗಂಭೀರವಾಗಿದೆ. ಮಗುವಿನ ತಲೆಗೆ ಪೆಟ್ಟಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮೃತಳ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಇದನ್ನೂ ಓದಿ: ಸಚಿವರ ಕಾರ್ಯವೈಖರಿ ಬಗ್ಗೆ ಹೈಕಮಾಂಡ್ ರಿಪೋರ್ಟ್ ಕೇಳಿದೆ: ಡಾ. ಎಂ.ಸಿ.ಸುಧಾಕರ್

    ಸ್ಮಗ್ಲರ್ ಅಂದರ್:
    ಮತ್ತೊಂದು ಪ್ರಕರಣದಲ್ಲಿ ರಕ್ತಚಂದನ ಕಳ್ಳತನ ಮಾಡೋಕೆ ಚಿಕ್ಕಬಳ್ಳಾಪುರದಲ್ಲಿ (Chikkaballapura) ಟಿಟಿ ವಾಹನ ಕಳವು ಮಾಡಿದ್ದ ಖತರ್ನಾಕ್ ಕಳ್ಳನನ್ನ ಚಿಕ್ಕಬಳ್ಳಾಪುರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆಂಧ್ರ ಮೂಲದ ಫ್ರಕ್ಕುದೀನ್ ಆಲಿಯಾಸ್ ತಿರುಪತಿ ಫಕ್ರುದ್ದೀನ್ ಬಂಧಿತ ಕಳ್ಳ. ಇದನ್ನೂ ಓದಿ: ಪವರ್ ಶೇರಿಂಗ್: ಡಿಕೆಶಿ, ನಮ್ಮ ನಡುವೆ ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸ್ಪಷ್ಟನೆ

    ಅಂದಹಾಗೆ ಈತ ವೃತ್ತಿಯಲ್ಲಿ ರಕ್ತಚಂದನದ ಸ್ಮಗ್ಲರ್ ಆಗಿದ್ದು, ಈತನ ಮೇಲೆ ಆಂಧ್ರ, ತೆಲಂಗಾಣ, ಕರ್ನಾಟಕದಲ್ಲಿ 77ಕ್ಕೂ ಹೆಚ್ಚು ಪ್ರಕರಣಗಳಿವೆ. ಈತ ಚಿಕ್ಕಬಳ್ಳಾಪುರದಲ್ಲಿ ಮೇ 1 ರಂದು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ಮಂಜುನಾಥ್ ಎಂಬುವವರಿಗೆ ಸೇರಿದ್ದ ಟಿಟಿ ವಾಹನ ಕಳವು ಮಾಡಿಕೊಂಡು ಪರಾರಿಯಾಗಿದ್ದ. ಈ ಸಂಬಂಧ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಈತನನ್ನ ರಕ್ತಚಂದನ ಕಳವು ಪ್ರಕರಣದಲ್ಲಿ ಆಂಧ್ರ ಪೊಲೀಸರು ಬಂಧಿಸಿ, ಟಿಟಿ ವಾಹನ ವಶಕ್ಕೆ ಪಡೆದುಕೊಂಡಿದ್ರು. ಈಗ ಆಂಧ್ರ ಪೊಲೀಸರ ಮಾಹಿತಿ ಮೇರೆಗೆ ಕಳ್ಳನನ್ನ ಬಾಡಿ ವಾರೆಂಟ್ ಮೇರೆಗೆ ವಶಕ್ಕೆ ಪಡೆದು ಆತ ಕಳವು ಮಾಡಿದ್ದ ಟಿಟಿ ಜಾಗದಲ್ಲಿ ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ಇದನ್ನೂ ಓದಿ: 7.99 ಲಕ್ಷಕ್ಕೆ ಅತ್ಯಾಕರ್ಷಕ ಹೊಸ ಅಮೇಜ್ ಕಾರು ಬಿಡುಗಡೆ

  • ಪುಷ್ಪ ಸಿನಿಮಾ ಮಾದರಿಯಲ್ಲಿ ದರೋಡೆ – ಇಬ್ಬರು ಹೆಡ್ ಕಾನ್‍ಸ್ಟೇಬಲ್ ಸಸ್ಪೆಂಡ್

    ಪುಷ್ಪ ಸಿನಿಮಾ ಮಾದರಿಯಲ್ಲಿ ದರೋಡೆ – ಇಬ್ಬರು ಹೆಡ್ ಕಾನ್‍ಸ್ಟೇಬಲ್ ಸಸ್ಪೆಂಡ್

    ಬೆಂಗಳೂರು: ಇತ್ತೀಚೆಗೆ ತೆರೆ ಕಂಡ ತೆಲುಗು ಭಾಷೆಯ ಪುಷ್ಪ ಸಿನಿಮಾದ ಮಾದರಿಯಲ್ಲೇ ಸ್ಮಗ್ಲರ್ ಗಳಿಂದಲೇ ಪೊಲೀಸರು ದರೋಡೆ ಮಾಡಿಸಿರುವ ಘಟನೆ ನಗರದಲ್ಲಿ ನಡೆದಿದೆ. ದರೋಡೆ ಮಾಡಿಸಿ ಸಿಕ್ಕಿಬಿದ್ದ ಇಬ್ಬರು ಹೆಡ್ ಕಾನ್‍ಸ್ಟೇಬಲ್‍ಗಳನ್ನು ಅಮಾನತು ಮಾಡಲಾಗಿದೆ.

    ಗಿರಿನಗರ ಹೆಡ್ ಕಾನ್‍ಸ್ಟೇಬಲ್ ಮೋಹನ್, ಮಹದೇವಪುರ ಹೆಡ್ ಕಾನ್‍ಸ್ಟೇಬಲ್ ಮಮತೇಶ್ ಗೌಡ ಅಮಾನತುಗೊಂಡಿದ್ದಾರೆ. ಇವರಿಬ್ಬರು 2018 ರಿಂದ ಸಿಸಿಬಿಯಲ್ಲಿದ್ದರು. ಕಳೆದ ಒಂದು ತಿಂಗಳ ಹಿಂದಷ್ಟೇ ಸಿಸಿಬಿಯಿಂದ ಗಿರಿನಗರ ಹಾಗೂ ಮಹಾದೇವಪುರ ಠಾಣೆಗೆ ವರ್ಗಾವಣೆಯಾಗಿದ್ದರು. ಸಿಸಿಬಿಯಲ್ಲಿ ಇದ್ದ ವೇಳೆ ರಕ್ತ ಚಂದನದ ಅಡ್ಡೆಗಳ ಮೇಲೆ ದಾಳಿ ನಡೆಸಿದ್ದರು. ಹೀಗಾಗಿ ಅವರಿಬ್ಬರಿಗೆ ರಕ್ತಚಂದನ ದರೋಡೆ ಅಡ್ಡೆ ಹಾಗೂ ಗ್ಯಾಂಗ್‍ಗಳ ಬಗ್ಗೆ ತಿಳಿದಿತ್ತು. ಇದನ್ನೂ ಓದಿ: ವೊಡಾಫೋನ್‌ ಐಡಿಯಾದಲ್ಲಿ ಈಗ ಭಾರತ ಸರ್ಕಾರವೇ ಅತಿ ದೊಡ್ಡ ಪಾಲುದಾರ

    ಮೋಹನ್, ಮಮತೇಶ್ ಡಿಸೆಂಬರ್ 15 ರಂದು ಕಾರಿನಲ್ಲಿ ಹೊಸಕೋಟೆ ಸಂತೆ ಸರ್ಕಲ್ ಬಳಿ ದಾಳಿ ಮಾಡಿದ್ದರು. ಈ ವೇಳೆ ಟಾಟಾ ಏಸ್‍ನಲ್ಲಿ ತರುತ್ತಿದ್ದ ರಕ್ತ ಚಂದನವನ್ನು ಸೀಜ್ ಮಾಡಿದ್ದರು. ಅವರು ಸೀಜ್ ಮಾಡಿದ ರಕ್ತಚಂದನದ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿರಲಿಲ್ಲ. ಆದರೆ 5 ದಿನಗಳ ನಂತರ ಸ್ಥಳೀಯರು ಹೊಸಕೋಟೆ ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ. ಹೊಸಕೋಟೆ ಪೊಲೀಸರು ಎಫ್‍ಐಆರ್ ಹಾಕಿ, ಹುಡುಕುತ್ತಿದ್ದಾರೆ ಎಂಬ ವಿಚಾರ ತಿಳಿಯುತ್ತಿದ್ದಂತೆ ಇಬ್ಬರೂ ಪರಾರಿಯಾಗಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಮೋಹನ್, ಮಮತೇಶ್ ಅವರನ್ನು ಅಮಾನತು ಮಾಡಲಾಗಿದೆ. ಐಜಿಪಿ ಚಂದ್ರಶೇಖರ್, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಈ ಕುರಿತು ಮಾಹಿತಿ ನೀಡಿದ್ದಾರೆ. ಅಮಾನತುಗೊಂಡು 20 ದಿನ ಕಳೆದರೂ ಹೆಡ್ ಕಾನ್‍ಸ್ಟೇಬಲ್‍ಗಳ ಬಂಧನವಾಗಿಲ್ಲ.

    ಕೃತ್ಯ ಹೇಗೆ ಎಸಗುತ್ತಿದ್ದರು?
    ಮೋಹನ್, ಮಮತೇಶ್‍ಗೆ ಸಿಸಿಬಿಯಲ್ಲಿದ್ದ ವೇಳೆ ರಕ್ತ ಚಂದನದ ಸ್ಮಗ್ಲಿಂಗ್ ಅಡ್ಡೆಗಳ ಪರಿಚಯ ಆಗುತ್ತದೆ. ಅಲ್ಲದೇ ಆಂಧ್ರದಲ್ಲಿ ರಕ್ತಚಂದನದ ಮರಕಡಿಯಲು ಬೆಂಗಳೂರಿನಿಂದ ಕೂಲಿಗೆ ಜನ ಹೋಗುತ್ತಿರುತ್ತಾರೆ. ಅಂತಹವರನ್ನು ಮೋಹನ್, ಮಮತೇಶ್ ಪೊಲೀಸ್ ಬಾತ್ಮೀದಾರರಾಗಿ ಬಳಸಿಕೊಳ್ಳುತ್ತಿರುತ್ತಾರೆ. ರಕ್ತಚಂದನದ ಮರ ಕಡಿಯಲು ಬೆಂಗಳೂರಿನಿಂದ ಹೋದವರು ಮರ ಕಡಿದು ಲಾರಿಗೆ ತುಂಬಿಸುತ್ತಿದ್ದಂತೆ, ಲಾರಿಯ ನಂಬರ್ ಹಾಗೂ ಲಾರಿಯಲ್ಲಿ ಎಷ್ಟು ಲೋಡ್ ಇದೆ? ವಾಹನ ಎಲ್ಲಿಗೆ ಹೋಗುತ್ತದೆ ಎಂಬ ಬಗ್ಗೆ ಮಾಹಿತಿಯನ್ನು ಸ್ಮಗ್ಲರ್‌ ಗಳು ಈ ಇಬ್ಬರು ಪೊಲೀಸರಿಗೆ ನೀಡುತ್ತಿದ್ದರು. ಇದನ್ನೂ ಓದಿ: ಭಾರತದಲ್ಲಿ ಬಿಟ್ ಕಾಯಿನ್ ಚಲಾವಣೆ ಕಾನೂನುಬದ್ಧ – ಮೋದಿ ಟ್ವಿಟ್ಟರ್‌ ಖಾತೆ ಹ್ಯಾಕ್‌

    ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿ ರಕ್ತ ಚಂದನ ವಶಕ್ಕೆ ಪಡೆಯುತ್ತಿದ್ದರು. ನಂತರ ಅದನ್ನು ಯಾರಿಗೂ ತೋರಿಸದೇ ಅಕ್ರಮವಾಗಿ ಮಾರಾಟ ಮಾಡುತ್ತಿದ್ದರು. ಈ ರೀತಿ ಹಣಗಳಿಸಿರುವ ಆರೋಪದ ಮೇಲೆ ಎಫ್‍ಐಆರ್ ದಾಖಲಿಸಲಾಗಿದೆ.