Tag: Referee

  • ಕಾನ್ ಫೆಸ್ಟಿವೆಲ್ : ದೀಪಿಕಾ ಪಡುಕೋಣೆ ತೀರ್ಪುಗಾರರಾಗಿ ಆಯ್ಕೆ

    ಕಾನ್ ಫೆಸ್ಟಿವೆಲ್ : ದೀಪಿಕಾ ಪಡುಕೋಣೆ ತೀರ್ಪುಗಾರರಾಗಿ ಆಯ್ಕೆ

    ಹಿಂದೆ ಜಿಯೋ ಮಾಮಿ ಮುಂಬೈ ಫಿಲ್ಮ್ ಫೆಸ್ಟಿವಲ್ ನ್ಲಿ ಎರಡು ವರ್ಷಗಳ ಕಾಲ ಅಧ್ಯಕ್ಷರಾಗಿ ಕೆಲಸ ಮಾಡಿರುವ ಗುಳಿಕೆನ್ನೆ ಚೆಲುವು, ಕನ್ನಡತಿ ಬಾಲಿವುಡ್ ಖ್ಯಾತ ನಟಿ ದೀಪಿಕಾ ಪಡುಕೋಣೆಗೆ ಪ್ರತಿಷ್ಠಿತ ಕ್ಯಾನ್ ಫೆಸ್ಟಿವೆಲ್ ನಲ್ಲಿ ತೀರ್ಪುಗಾರರಾಗಿ ಕಾರ್ಯನಿರ್ವಹಿಸುವಂತಹ ಅವಕಾಶ ಸಿಕ್ಕಿದೆ. ಇಂತಹ ಪ್ರತಿಷ್ಠಿತ ಚಿತ್ರೋತ್ಸವದಲ್ಲಿ ಈ ರೀತಿಯ ಗೌರವ ಸಿಗುವುದು ಅಪರೂಪ. ಹಾಗಾಗಿ ದೀಪಿಕಾ ಪಡುಕೋಣೆ ಇಂಥದ್ದೊಂದು ಗೌರವಕ್ಕೆ ಪಾತ್ರರಾಗಿದ್ದಾರೆ. ಇದನ್ನೂ ಓದಿ : ‘ಗುರು’ ಹೆಸರು ‘ಯುವ’ ರಾಜಕುಮಾರ್ ಬದಲಾಗಿದ್ದು ಹೇಗೆ? : ನಾಮಬಲ ನಂಬಿಕೆಯ ಡಾ.ರಾಜ್ ಕುಟುಂಬ

    ಮೇ 17 ರಿಂದ 28ರವರೆಗೆ 2022ರ ಕಾನ್ ಫಿಲ್ಮ್ ಫೆಸ್ಟಿವೆಲ್ ನಡೆಯಲಿದ್ದು, 75ನೇ ಕಾನ್ ಚಲನಚಿತ್ರೋತ್ಸವ ಜ್ಯೂರಿಯಾಗಿ ದೀಪಿಕಾ ಪಡುಕೋಣೆ ಆಯ್ಕೆಯಾಗಿದ್ದಾರೆ ಎಂದು ಅಧಿಕೃತ ಕಾನ್ ಪೇಜ್ ನಲ್ಲೇ ಘೋಷಿಸಲಾಗಿದೆ. ಅಲ್ಲದೇ ಇವರೊಂದಿಗೆ ಫ್ರೆಂಚ್ ನಟ ವಿನ್ಸೆಂಟ್ ಲಿಂಡನ್ ಕೂಡ ಮುಖ್ಯ ತೀರ್ಪುಗಾರರಾಗಿ ಕೆಲಸ ಮಾಡಲಿದ್ದಾರೆ. ಇದನ್ನೂ ಓದಿ : ಹೊಂಬಾಳೆ ಫಿಲ್ಮ್ಸ್‌ನಿಂದ ಯುವರಾಜ್ ಕುಮಾರ್ ಲಾಂಚ್: ನಿನ್ನೆಯೇ ಬ್ರೇಕ್ ಮಾಡಿತ್ತು ಪಬ್ಲಿಕ್ ಟಿವಿ

    ಒಟ್ಟು 21 ಸಿನಿಮಾಗಳು ಆಯ್ಕೆಯ ಸುತ್ತಿನಲ್ಲಿದ್ದು, ಎಂಟು ತೀರ್ಪುಗಾರರ ತಂಡವು ಪ್ರಶಸ್ತಿಗಾಗಿ ಸಿನಿಮಾಗಳನ್ನು ಆರಿಸಲಿದೆ. ಮೇ.28 ರಂದು ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಆಯ್ಕೆಯಾದ ವಿಜೇತ ಚಿತ್ರಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

  • ಯುವಿ 6,6,6,6,6,6 ಬಳಿಕ ಬ್ಯಾಟ್ ಪರಿಶೀಲಿಸಿದ್ದ ರೆಫರಿ

    ಯುವಿ 6,6,6,6,6,6 ಬಳಿಕ ಬ್ಯಾಟ್ ಪರಿಶೀಲಿಸಿದ್ದ ರೆಫರಿ

    ಮುಂಬೈ: ಯುವರಾಜ್ ಸಿಂಗ್ ಭಾರತೀಯ ಕ್ರಿಕೆಟ್ ಕಂಡ ಅತ್ಯುತ್ತಮ ಸ್ಫೋಟಕ ಆಟಗಾರರಲ್ಲಿ ಒಬ್ಬರು. ಏಕಾಂಗಿಯಾಗಿ ತಂಡಕ್ಕೆ ಗೆಲುವು ತಂದುಕೊಡುವ ಸಾಮರ್ಥ್ಯ ಹೊಂದಿದ್ದ ಯುವಿ, ಟೀಂ ಇಂಡಿಯಾ 2007 ಟಿ20 ಮತ್ತು 2011ರ ಏಕದಿನ ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದು. ಸದ್ಯ ಲಾಕ್‍ಡೌನ್‍ನಿಂದ ಮನೆಯಲ್ಲೇ ಉಳಿದಿರುವ ಯುವಿ, ಕ್ರಿಕೆಟ್ ವೃತ್ತಿ ಜೀವನದ ಕುರಿತು ಕೆಲ ವಿಶೇಷ ಮಾಹಿತಿಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

    ಸದಾ ಇತರೇ ಆಟಗಾರರೊಂದಿಗೆ ಹಾಸ್ಯಮಯವಾಗಿ ಕಾಣಿಸಿಕೊಳ್ಳುತ್ತಿದ್ದ ಯುವರಾಜ್ ಸಿಂಗ್, ಎದುರಾಳಿ ಬೌಲರ್ ಗಳನ್ನು ಅಷ್ಟೇ ಸುಲಲಿತಾಗಿ ದಂಡಿಸುತ್ತಿದ್ದರು. 2007ರಲ್ಲಿ ನಡೆದಿದ್ದ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಇಂಗ್ಲೆಂಡ್ ವಿರುದ್ಧ ಪಂದ್ಯದಲ್ಲಿ ಆಂಡ್ರ್ಯೂ ಫ್ಲಿಂಟಾಫ್ ಮಾತಿಗೆ ತಿರುಗೇಟು ನೀಡಿದ್ದ ಯುವರಾಜ್ ಸಿಂಗ್, ಸ್ಟುವರ್ಟ್ ಬ್ರಾಡ್ ಓವರಿನ 6 ಎಸೆತಗಳಲ್ಲಿ 6 ಸಿಕ್ಸರ್ ಸಿಡಿಸಿ ದಾಖಲೆ ಬರೆದಿದ್ದರು. ಅಂದು ನಡೆದ ಘಟನೆ ಬಳಿಕ ನಡೆದ ಕೆಲ ಆಸ್ತಕಿಕಾರ ಮಾಹಿತಿಯನ್ನು ಯುವಿ ತಿಳಿಸಿದ್ದಾರೆ.

    2007ರ ಸೆ.10 ರಂದು ನಡೆದಿದ್ದ ಪಂದ್ಯದ ಇನ್ನಿಂಗ್ಸ್ ನ 18 ಓವರ್ ಎಸೆದ ಫ್ಲಿಂಟಾಫ್ ಬೌಲಿಂಗ್‍ನಲ್ಲಿ ಯುವಿ 2 ಬೌಂಡರಿ ಸಿಡಿಸಿದ್ದರು. ಆದರೆ ಓವರಿನ ಅಂತಿಮ ಎಸೆತದಲ್ಲಿ ನಾನ್ ಸ್ಟ್ರೈಕ್‍ನಲ್ಲಿದ್ದ ಯುವರಾಜ್ ಸಿಂಗ್ ಅವರನ್ನು ಫ್ಲಿಂಟಾಫ್ ಮಾತಿನ ಚಾಟಿ ಬೀಸಿ ಕೆರಳಿಸಿದ್ದರು. ಆನ್‍ಫೀಲ್ಡ್ ನಲ್ಲೇ ಫ್ಲಿಂಟಾಫ್ ವಿರುದ್ಧ ತಿರುಗಿಬಿದಿದ್ದ ಯುವಿ ಬ್ಯಾಟ್ ತೋರಿಸಿ ಮುನ್ನುಗಿದ್ದರು. ಆದರೆ ಈ ವೇಳೆಗೆ ಇತರೇ ಆಟಗಾರರು, ಅಂಪೈರ್ ನಡುವೆ ಬಂದು ಇಬ್ಬರ ಜಗಳ ಬಿಡಿಸುವ ಕಾರ್ಯ ಮಾಡಿದರು.

    ಫ್ಲಿಂಟಾಫ್ ಮಾತಿನ ಚಾಟಿಯಿಂದ ಸಿಟ್ಟಿಗೆದ್ದ ಯುವಿ 19ನೇ ಓವರ್ ಎಸೆದ ಸ್ಟುವರ್ಟ್ ಬ್ರಾಡ್ ಬೌಲಿಂಗ್‍ನಲ್ಲಿ 6 ಸಿಕ್ಸರ್ ಸಿಡಿಸಿ ದಾಖಲೆ ಬರೆದಿದ್ದರು. ಅಂದು ತಮಗೆ 6 ಎಸೆತಗಳಲ್ಲಿ 6 ಸಿಕ್ಸರ್ ಸಿಡಿಸುವ ಯೋಚನೆ ಇರಲಿಲ್ಲ. ಆದರೆ ಫ್ಲಿಂಟಾಪ್ ತೋರಿದ ವರ್ತನೆಯಿಂದ ಕೋಪಗೊಂಡು ಎಲ್ಲಾ ಎಸೆತಗಳನ್ನು ಬೌಂಡರಿ ಗೆರೆದಾಡಿ ಹೊಡೆಯಲು ಯತ್ನಿಸಿದೆ. ಅಲ್ಲದೇ 6 ಸಿಕ್ಸರ್ ಸಿಡಿಸಿದ ಬಳಿಕ ಪಂದ್ಯದ ಹಲವು ಅಚ್ಚರಿಯ ಘಟನೆಗಳು ನಡೆದವು. ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ 30 ಎಸೆತಗಳಲ್ಲಿ 70 ರನ್ ಸಿಡಿಸಿದ ಬಳಿಕ ವಿಕೆಟ್ ಕೀಪರ್ ಆಡಮ್ ಗಿಲ್‍ಕ್ರಿಸ್ಟ್ ಬ್ಯಾಟ್ ಕುರಿತು ಸಂಶಯ ವ್ಯಕ್ತಪಡಿಸಿದ್ದರು ಎಂದು ಯುವಿ ಹೇಳಿದ್ದಾರೆ.

    ಅಂದು ತಮ್ಮ ಬಳಿಗೆ ಆಗಮಿಸಿದ್ದ ಆಸ್ಟ್ರೇಲಿಯಾ ತಂಡದ ಕೋಚ್, ನಿಮ್ಮ ಬ್ಯಾಟ್ ಹಿಂದೆ ಫೈಬರ್ ಇದೆಯೇ? ಅಲ್ಲದೇ ಅದು ಕಾನೂನು ಬದ್ಧವಾಗಿದೆಯಾ ಎಂದು ಪ್ರಶ್ನಿಸಿದ್ದರು. ಆಗ ಪಂದ್ಯದ ರೆಫರಿಗೆ ಬ್ಯಾಟ್ ಪರೀಕ್ಷಿಸಲು ತಿಳಿಸಿದ್ದೆ. ಗಿಲ್‍ಕ್ರಿಸ್ಟ್ ಕೂಡ ಘಟನೆ ಬಳಿಕ ಇಂತಹ ಬ್ಯಾಟ್‍ಗಳನ್ನು ಎಲ್ಲಿ? ಯಾರು? ತಯಾರಿಸಿಕೊಡುತ್ತಾರೆ ಎಂದು ತಮ್ಮ ಬಳಿ ಕೇಳಿದ್ದರು ಎಂದು ತಿಳಿಸಿದ್ದಾರೆ. 2007 ಹಾಗೂ 2011ರ ವಿಶ್ವಕಪ್‍ನಲ್ಲಿ ನಾನು ಆಡಿದ್ದ ಎರಡು ಬ್ಯಾಟ್‍ಗಳು ನನಗೆ ವಿಶೇಷ ಎಂದು ಯುವರಾಜ್ ತಿಳಿಸಿದ್ದಾರೆ.