Tag: Relax

  • ಬಾಲಿವುಡ್ ಸಿನಿಮಾಗಳಿಂದಲೂ ಸಮಂತಾ ಔಟ್: ಹೆಚ್ಚುತ್ತಾ ಹೋಗುತ್ತಿದೆ ಆತಂಕ

    ಬಾಲಿವುಡ್ ಸಿನಿಮಾಗಳಿಂದಲೂ ಸಮಂತಾ ಔಟ್: ಹೆಚ್ಚುತ್ತಾ ಹೋಗುತ್ತಿದೆ ಆತಂಕ

    ತೆಲುಗು ಸಿನಿಮಾ ರಂಗದ ಖ್ಯಾತ ತಾರಾ ಸಮಂತಾ ಅವರ ಬಗ್ಗೆ ದಿನಕ್ಕೊಂದು ಸುದ್ದಿ ಹೊರ ಬೀಳುತ್ತಿದೆ. ಮೊನ್ನೆಯಷ್ಟೇ ಅವರು ದಕ್ಷಿಣದ ಹಲವು ಸಿನಿಮಾಗಳನ್ನು ಕೈ ಬಿಟ್ಟಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಇದೀಗ ಮತ್ತೊಂದು ನ್ಯೂಸ್ ಹೊರ ಬಂದಿದ್ದು, ಬಾಲಿವುಡ್ (Bollywood) ಸಿನಿಮಾಗಳಿಂದಲೂ ಅವರನ್ನು ಕೈ ಬಿಡಲಾಗಿದೆಯಂತೆ. ಅವರ ಆರೋಗ್ಯ ಸುಧಾರಿಸಲು ಸಾಕಷ್ಟು ಸಮಯ ಬೇಕಾಗಿರುವುದರಿಂದ ಇಂಥದ್ದೊಂದು ನಿರ್ಧಾರ ತಗೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

    ಆದರೆ, ಹಲವು ಪ್ರಾಜೆಕ್ಟ್ ಗಳಿಂದ ಅವರನ್ನು ಕೈ ಬಿಡಲಾಗಿದೆ ಎನ್ನುವುದು ಸುಳ್ಳು ಎನ್ನುವ ಮಾಹಿತಿ ಹೊರ ಬಿದ್ದಿದೆ. ವಿಜಯ್ ದೇವರಕೊಂಡ (Vijay Devarakonda) ನಟನೆಯ ‘ಖುಷಿ’ ಸಿನಿಮಾದಲ್ಲಿ ಸಮಂತಾ ನಾಯಕಿಯಾಗಿ ನಟಿಸುತ್ತಿದ್ದರು. ಈಗಾಗಲೇ ಎರಡು ಹಂತದ ಚಿತ್ರೀಕರಣ ಕೂಡ ಮುಗಿದಿದೆ. ಈ ಸಿನಿಮಾದಿಂದ ಅವರನ್ನು ಕೈ ಬಿಡಲಾಗಿದೆ ಎಂದು ಹೇಳಲಾಗಿತ್ತು. ಈ ಕುರಿತು ಚಿತ್ರತಂಡವೇ ಸ್ಪಷ್ಟನೆ ಕೊಟ್ಟಿದೆ.

    ಸದ್ಯ ಸಮಂತಾ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ. ಹಾಗಾಗಿಯೇ ಶೂಟಿಂಗ್ ಪ್ರಾರಂಭಿಸಿಲ್ಲ. ಅವರು ಈಗಾಗಲೇ ಎರಡು ಹಂತದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಅವರಿಗೆ ವಿಶ್ರಾಂತಿಯ ಅಗತ್ಯ ಇರುವುದರಿಂದ ಸಂಕ್ರಾತಿಯ ನಂತರ ಮತ್ತೆ ಶೂಟಿಂಗ್ ಪ್ರಾರಂಭ ಮಾಡುತ್ತೇವೆ ಎಂದು ಖುಷಿ ತಂಡವೇ ಸ್ಪಷ್ಟನೆ ನೀಡಿದೆ. ಅವರು ಈ ಸಿನಿಮಾದಿಂದ ಹೊರ ನಡೆದಿದ್ದಾರೆ ಎನ್ನುವುದು ಕೇವಲ ಗಾಸಿಪ್ ಎಂದೂ ಅವರು ಹೇಳಿಕೆ ಕೊಟ್ಟಿದ್ದಾರೆ. ಈ ಮೂಲಕ ಸಮಂತಾ ವಿಶ್ರಾಂತಿ ಪಡೆಯುತ್ತಿದ್ದಾರೆ ಎನ್ನುವುದನ್ನೂ ಬಹಿರಂಗಪಡಿಸಿದ್ದಾರೆ. ಇದನ್ನೂ ಓದಿ: `ತೂತು ಮಡಿಕೆ’ ನಂತರ ಮತ್ತೆ ಆ್ಯಕ್ಷನ್ ಕಟ್ ಹೇಳೋಕೆ ಚಂದ್ರ ಕೀರ್ತಿ ರೆಡಿ

    ಸಮಂತಾ (Samantha) ಅಪರೂಪದ ಕಾಯಿಲೆಗೆ ತುತ್ತಾಗಿದ್ದು ಗುಟ್ಟಿನ ವಿಚಾರವೇನೂ ಅಲ್ಲ. ಈ ಕಾಯಿಲೆ ಪ್ರಾರಂಭಿಕ ಹಂತದಲ್ಲಿ ಇರುವಾಗಲೇ ಗೊತ್ತಾಗಿದ್ದರಿಂದ ಅದಕ್ಕೆ ಸೂಕ್ತ ಚಿಕಿತ್ಸೆಯನ್ನೂ ಪಡೆದುಕೊಂಡಿದ್ದಾರೆ. ಈ ಚಿಕಿತ್ಸೆ ಪಡೆಯಲೆಂದೇ ಅವರು ವಿದೇಶಕ್ಕೂ ಹಾರಿದ್ದರು. ಇದೊಂದು ಅಪಾಯಕಾರಿ ಸಮಸ್ಯೆಯಾದರೂ, ಅದಕ್ಕೆ ಸೂಕ್ತ ಚಿಕಿತ್ಸೆ ಇದೆ ಎಂದು ಸ್ವತಃ ಅವರೇ ಬರೆದುಕೊಂಡಿದ್ದರು. ಇದು ಅಭಿಮಾನಿಗಳ ಆತಂಕಕ್ಕೂ ಕಾರಣವಾಗಿತ್ತು.

    ಈ ನಡುವೆ ಸಮಂತಾ ನಟನೆಯ ಎರಡು ಚಿತ್ರಗಳು ರಿಲೀಸ್ ಆದವು. ಎರಡೂ ಚಿತ್ರದ ಪ್ರಚಾರಕ್ಕೆ ಅವರು ಬರಲಿಲ್ಲ. ಹೀಗಾಗಿ ಸಮಂತಾ ಗಂಭೀರ ಸಮಸ್ಯೆಯಿಂದಲೇ ಬಳಲುತ್ತಿದ್ದಾರೆ ಎಂದು ಹೇಳಲಾಗಿತ್ತು. ಈ ಕಾರಣದಿಂದಾಗಿಯೇ ಅವರನ್ನು ಪ್ರಾಜೆಕ್ಟ್ ಗಳಿಂದ ಕೈ ಬಿಡಲಾಗುತ್ತಿದೆ ಎಂದು ಸುದ್ದಿ ಆಗಿತ್ತು. ಈ ಸುದ್ದಿಗೆ ಕೆಲವ ತಂಡಗಳು ಈಗೀಗ ಸ್ಪಷ್ಟನೆಯನ್ನು ಕೊಡುತ್ತಿವೆ. ಈ ಮೂಲಕ ಸಮಂತಾ ಮತ್ತೆ ಚಿತ್ರೀಕರಣಕ್ಕೆ ಬರಲಿದ್ದಾರೆ ಎನ್ನುವ ವಿಶ್ವಾಸವನ್ನೂ ವ್ಯಕ್ತಪಡಿಸಿವೆ.

    Live Tv
    [brid partner=56869869 player=32851 video=960834 autoplay=true]

  • ಸಮಂತಾ ವಿಶ್ರಾಂತಿಯಲ್ಲಿದ್ದಾರೆ, ಖುಷಿ ಸಿನಿಮಾ ಬಿಟ್ಟಿಲ್ಲ ಎಂದು ಸ್ಪಷ್ಟನೆ ಕೊಟ್ಟ ತಂಡ

    ಸಮಂತಾ ವಿಶ್ರಾಂತಿಯಲ್ಲಿದ್ದಾರೆ, ಖುಷಿ ಸಿನಿಮಾ ಬಿಟ್ಟಿಲ್ಲ ಎಂದು ಸ್ಪಷ್ಟನೆ ಕೊಟ್ಟ ತಂಡ

    ಕ್ಷಿಣದ ಖ್ಯಾತ ತಾರೆ ಸಮಂತಾ (Samantha) ಆರೋಗ್ಯದ ಕಾರಣದಿಂದಾಗಿ ಸಿನಿಮಾ ರಂಗದಿಂದ ದೂರ ಉಳಿದಿದ್ದಾರೆ ಎನ್ನುವುದು ನಿಜವಾಗಿದೆ. ಆದರೆ, ಹಲವು ಪ್ರಾಜೆಕ್ಟ್ ಗಳಿಂದ ಅವರನ್ನು ಕೈ ಬಿಡಲಾಗಿದೆ ಎನ್ನುವುದು ಸುಳ್ಳು ಎನ್ನುವ ಮಾಹಿತಿ ಹೊರ ಬಿದ್ದಿದೆ. ವಿಜಯ್ ದೇವರಕೊಂಡ (Vijay Devarakonda) ನಟನೆಯ ‘ಖುಷಿ’ (Khushi) ಸಿನಿಮಾದಲ್ಲಿ ಸಮಂತಾ ನಾಯಕಿಯಾಗಿ ನಟಿಸುತ್ತಿದ್ದರು. ಈಗಾಗಲೇ ಎರಡು ಹಂತದ ಚಿತ್ರೀಕರಣ ಕೂಡ ಮುಗಿದಿದೆ. ಈ ಸಿನಿಮಾದಿಂದ ಅವರನ್ನು ಕೈ ಬಿಡಲಾಗಿದೆ ಎಂದು ಹೇಳಲಾಗಿತ್ತು. ಈ ಕುರಿತು ಚಿತ್ರತಂಡವೇ ಸ್ಪಷ್ಟನೆ ಕೊಟ್ಟಿದೆ.

    ಸದ್ಯ ಸಮಂತಾ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ. ಹಾಗಾಗಿಯೇ ಶೂಟಿಂಗ್ ಪ್ರಾರಂಭಿಸಿಲ್ಲ. ಅವರು ಈಗಾಗಲೇ ಎರಡು ಹಂತದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಅವರಿಗೆ ವಿಶ್ರಾಂತಿಯ ಅಗತ್ಯ ಇರುವುದರಿಂದ ಸಂಕ್ರಾತಿಯ ನಂತರ ಮತ್ತೆ ಶೂಟಿಂಗ್ ಪ್ರಾರಂಭ ಮಾಡುತ್ತೇವೆ ಎಂದು ಖುಷಿ ತಂಡವೇ ಸ್ಪಷ್ಟನೆ ನೀಡಿದೆ. ಅವರು ಈ ಸಿನಿಮಾದಿಂದ ಹೊರ ನಡೆದಿದ್ದಾರೆ ಎನ್ನುವುದು ಕೇವಲ ಗಾಸಿಪ್ ಎಂದೂ ಅವರು ಹೇಳಿಕೆ ಕೊಟ್ಟಿದ್ದಾರೆ. ಈ ಮೂಲಕ ಸಮಂತಾ ವಿಶ್ರಾಂತಿ ಪಡೆಯುತ್ತಿದ್ದಾರೆ ಎನ್ನುವುದನ್ನೂ ಬಹಿರಂಗಪಡಿಸಿದ್ದಾರೆ. ಇದನ್ನೂ ಓದಿ: ಡೇಂಜರ್ ಝೋನ್‌ನಲ್ಲಿ 8 ಸ್ಪರ್ಧಿಗಳು, ಯಾರ ಆಟಕ್ಕೆ ಬ್ರೇಕ್ ಹಾಕಲಿದ್ದಾರೆ ಬಿಗ್ ಬಾಸ್

    ಸಮಂತಾ ಅಪರೂಪದ ಕಾಯಿಲೆಗೆ ತುತ್ತಾಗಿದ್ದು ಗುಟ್ಟಿನ ವಿಚಾರವೇನೂ ಅಲ್ಲ. ಈ ಕಾಯಿಲೆ ಪ್ರಾರಂಭಿಕ ಹಂತದಲ್ಲಿ ಇರುವಾಗಲೇ ಗೊತ್ತಾಗಿದ್ದರಿಂದ ಅದಕ್ಕೆ ಸೂಕ್ತ ಚಿಕಿತ್ಸೆಯನ್ನೂ ಪಡೆದುಕೊಂಡಿದ್ದಾರೆ. ಈ ಚಿಕಿತ್ಸೆ ಪಡೆಯಲೆಂದೇ ಅವರು ವಿದೇಶಕ್ಕೂ ಹಾರಿದ್ದರು. ಇದೊಂದು ಅಪಾಯಕಾರಿ ಸಮಸ್ಯೆಯಾದರೂ, ಅದಕ್ಕೆ ಸೂಕ್ತ ಚಿಕಿತ್ಸೆ ಇದೆ ಎಂದು ಸ್ವತಃ ಅವರೇ ಬರೆದುಕೊಂಡಿದ್ದರು. ಇದು ಅಭಿಮಾನಿಗಳ ಆತಂಕಕ್ಕೂ ಕಾರಣವಾಗಿತ್ತು.

    ಈ ನಡುವೆ ಸಮಂತಾ ನಟನೆಯ ಎರಡು ಚಿತ್ರಗಳು ರಿಲೀಸ್ ಆದವು. ಎರಡೂ ಚಿತ್ರದ ಪ್ರಚಾರಕ್ಕೆ ಅವರು ಬರಲಿಲ್ಲ. ಹೀಗಾಗಿ ಸಮಂತಾ ಗಂಭೀರ ಸಮಸ್ಯೆಯಿಂದಲೇ ಬಳಲುತ್ತಿದ್ದಾರೆ ಎಂದು ಹೇಳಲಾಗಿತ್ತು. ಈ ಕಾರಣದಿಂದಾಗಿಯೇ ಅವರನ್ನು ಪ್ರಾಜೆಕ್ಟ್ ಗಳಿಂದ ಕೈ ಬಿಡಲಾಗುತ್ತಿದೆ ಎಂದು ಸುದ್ದಿ ಆಗಿತ್ತು. ಈ ಸುದ್ದಿಗೆ ಕೆಲವ ತಂಡಗಳು ಈಗೀಗ ಸ್ಪಷ್ಟನೆಯನ್ನು ಕೊಡುತ್ತಿವೆ. ಈ ಮೂಲಕ ಸಮಂತಾ ಮತ್ತೆ ಚಿತ್ರೀಕರಣಕ್ಕೆ ಬರಲಿದ್ದಾರೆ ಎನ್ನುವ ವಿಶ್ವಾಸವನ್ನೂ ವ್ಯಕ್ತಪಡಿಸಿವೆ.

    Live Tv
    [brid partner=56869869 player=32851 video=960834 autoplay=true]

  • ಸಿದ್ದರಾಮಯ್ಯ ಟೆನ್ಷನ್ ಫ್ರೀ – ಮೂರು ದಿನ ರೆಸಾರ್ಟ್‌ನಲ್ಲಿ ವಿಶ್ರಾಂತಿ

    ಸಿದ್ದರಾಮಯ್ಯ ಟೆನ್ಷನ್ ಫ್ರೀ – ಮೂರು ದಿನ ರೆಸಾರ್ಟ್‌ನಲ್ಲಿ ವಿಶ್ರಾಂತಿ

    ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಪರಮಾಪ್ತ ಸಿಎಂ ಇಬ್ರಾಹಿಂ ಕಾಂಗ್ರೆಸ್ ತೊರೆಯುವ ಹಂತದಲ್ಲಿದ್ದಾರೆ. ಇಂತಹ ಸಂದರ್ಭದಲ್ಲೂ ಕರ್ನಾಟಕ ಕಾಂಗ್ರೆಸ್ ಮುಖಂಡ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೇ ಮೂರು ದಿನಗಳ ಕಾಲ ವಿಶ್ರಾಂತಿ ಪಡೆಯಲು ಮೈಸೂರಿಗೆ ತೆರಳಿದ್ದಾರೆ.

    ೩ ದಿನಗಳ ವಿಶ್ರಾಂತಿ ತೆಗೆದುಕೊಳ್ಳುವುದಾಗಿ ಸಿದ್ದರಾಮಯ್ಯ ಭಾನುವಾರ ಸಂಜೆ ಕಾರಾಪುರ ಲಾಡ್ಜ್ ರೆಸಾರ್ಟ್‌ಗೆ ತೆರಳಿದ್ದಾರೆ. ಅಲ್ಲಿಂದ ಅವರು ಸ್ವಲ್ಪ ಸಮಯಗಳ ಕಾಲ ವಿಶ್ರಾಂತಿ ಪಡೆದು ಕಬಿನಿ ಜಲಾಶಯ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬೋಟ್ ಮೂಲಕ ಕಬಿನಿ ಹಿನ್ನೀರಿನಲ್ಲಿರುವ ಆರೆಂಜ್ ಕೌಂಟಿ ರೆಸಾರ್ಟ್‌ಗೆ ತೆರಳಿದ್ದಾರೆ. ಇದನ್ನೂ ಓದಿ: ಇಂದು ಜನ ಕೆಟ್ಟಿಲ್ಲ, ಲೀಡರ್‌ಗಳು ಕೆಟ್ಟಿದ್ದಾರೆ: ಬಸವರಾಜ ರಾಯರೆಡ್ಡಿ ಕಿಡಿ

    siddaramaiah

    ೩ ದಿನಗಳ ವಿಶ್ರಾಂತಿಯ ಸಮಯದಲ್ಲಿ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಭಾಗಿಯಾಗಿ ನಂತರ ಸಿದ್ದರಾಮಯ್ಯ ಫೆಬ್ರವರಿ ೨ ರಂದು ಬೆಂಗಳೂರಿಗೆ ಮರಳಲಿದ್ದಾರೆ. ಇದನ್ನೂ ಓದಿ: ಅಕ್ರಮ ಆಸ್ತಿ ಖರೀದಿಸಿಲ್ಲ – 3 ಕೋಟಿ ಮಾನನಷ್ಟ ಕೇಸ್‌ ಹಾಕ್ತೀನಿ ಎಂದ ಚನ್ನಣ್ಣನವರ್‌

  • ಯಶಸ್ವಿ ಜಂಬೂ ಸವಾರಿ ಮುಗಿಸಿ ರಿಲ್ಯಾಕ್ಸ್ ಮೂಡಿನಲ್ಲಿ ಗಜಪಡೆ

    ಯಶಸ್ವಿ ಜಂಬೂ ಸವಾರಿ ಮುಗಿಸಿ ರಿಲ್ಯಾಕ್ಸ್ ಮೂಡಿನಲ್ಲಿ ಗಜಪಡೆ

    ಮೈಸೂರು: ದಸರಾ ವೇಳೆ ಯಶಸ್ವಿಯಾಗಿ ಜಂಬೂ ಸವಾರಿ ಮುಗಿಸಿದ ಗಜ ಪಡೆಗಳು ಫುಲ್ ರೆಸ್ಟ್ ನಲ್ಲಿ ಇವೆ. ಮಾವುತರು, ಕಾವಾಡಿಗಳು ವಿಶ್ರಾಂತಿಯ ಮೊರೆ ಹೋಗಿದ್ದಾರೆ.

    ಗಜಪಡೆ ನಾಯಕ ಅರ್ಜುನ, ಬಲರಾಮ ಸಹಿತ ಎಲ್ಲಾ ಆನೆಗಳು ವಿಶ್ರಾಂತಿ ಪಡೆಯುತ್ತಿದ್ದು, ಆನೆಗಳಿಗೆ ಮಾವುತರು ಸ್ನಾನ ಮಾಡಿಸಿ, ಗಜಪಡೆಗಳ ಜೊತೆ ಮಾವುತರು, ಕಾವಾಡಿಗಳು ವಿಶ್ರಾಂತಿ ಪಡೆಯುತ್ತಿದ್ದಾರೆ. ಸದ್ಯ ವಿಶ್ರಾಂತಿಯಲ್ಲಿರುವ ಆನೆಗಳು ಗುರುವಾರ ಅಥವಾ ಶುಕ್ರವಾರ ಮತ್ತೆ ಅರಮನೆಯಿಂದ ಕಾಡಿಗೆ ತೆರಳಲಿದೆ. ಇದನ್ನೂ ಓದಿ:ಜಂಬೂಸವಾರಿ ವೇಳೆ ವಾಲಿದ ಅಂಬಾರಿ- ಕೈಸನ್ನೆ ಮಾಡಿದ ಪ್ರಮೋದಾದೇವಿ

    ಮಂಗಳವಾರ ನಡೆದ ಅದ್ಧೂರಿ ಜಂಬೂ ಸವಾರಿಯಲ್ಲಿ 750 ಕೆಜಿ ತೂಕದ ಅಂಬಾರಿಯಲ್ಲಿ ಚಾಮುಂಡಿದೇವಿಯನ್ನು ಹೊತ್ತುಕೊಂಡು ನಾಯಕ ಅರ್ಜುನ ಗಜಪಡೆ ಜೊತೆ ಹೆಜ್ಜೆ ಹಾಕಿ ದಸರಾವನ್ನು ಯಶಸ್ವಿಯಾಗಿದ್ದಾನೆ. ಅರಮನೆ ಉತ್ತರ ದ್ವಾರವಾದ ಬಲರಾಮ ದ್ವಾರದಲ್ಲಿ ಮಧ್ಯಾಹ್ನ 2.09ಕ್ಕೆ ಶುಭ ಮಕರ ಲಗ್ನದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ ಸಂಜೆ 4.17ರ ಶುಭ ಕುಂಬ ಲಗ್ನದಲ್ಲಿ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿ ಮೆರವಣಿಗೆಗೆ ಸಿಎಂ ಯಡಿಯೂರಪ್ಪ ಚಾಲನೆ ನೀಡಿದ್ದರು. ಇದನ್ನೂ ಓದಿ:ಅರ್ಜುನನಿಗೆ ಇನ್ನೂ 10 ವರ್ಷ ಅಂಬಾರಿ ಹೊರುವ ತಾಕತ್ತಿದೆ- ಮಾವುತ ವಿನು

    ಜಂಬೂ ಸವಾರಿಯಲ್ಲಿ 8ನೇ ಬಾರಿಗೆ ಅರ್ಜುನ 750 ಕೆಜಿ ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಸಿರುವ ನಾಡದೇವತೆ ಚಾಮುಂಡೇಶ್ವರಿಯನ್ನು ಹೊತ್ತು ರಾಜ ಗಾಂಭೀರ್ಯದಿಂದ ಸಾಗಿದ್ದನು. ಈ ಜಂಬೂಸವಾರಿಯಲ್ಲಿ 39 ಸ್ತಬ್ಧ ಚಿತ್ರಗಳು, ವಿವಿಧ ಜಾನಪದ ಕಲಾತಂಡಗಳು, 100ಕ್ಕೂ ಹೆಚ್ಚು ಕಲಾ ತಂಡಗಳು, ಉತ್ತರ ಭಾರತದ ವಿವಿಧ ರಾಜ್ಯಗಳ 5 ಕಲಾ ತಂಡ, 1,675 ಕಲಾವಿದರು ಸೇರಿದಂತೆ ಒಟ್ಟು 2 ಸಾವಿರ ಮಂದಿ ಭಾಗಿಯಾಗಿದ್ದವು.

    ಸಂಜೆ 4.30ಕ್ಕೆ ಹೊರಟ ಅಂಬಾರಿ ಸಂಜೆ 7 ಗಂಟೆಗೆ ಬನ್ನಿ ಮಂಟಪ ತಲುಪಿ, ಇತ್ತ ರಾತ್ರಿ 7.30ಕ್ಕೆ ಬನ್ನಿಮಂಟಪದಲ್ಲಿ ಪಂಜಿನ ಕವಾಯತಿನ ಕಾರ್ಯಕ್ರಮದಲ್ಲಿ ನೂರಾರು ಮಂದಿ ಪಂಜನ್ನು ಹಿಡಿದು ಸಾಹಸ ಪ್ರದರ್ಶಿಸಿದರು. ಈ ಪಂಜಿನ ಕವಾಯತಿನ ಬಳಿಕ ರಾತ್ರಿ 10 ಗಂಟೆಗೆ ಪಟಾಕಿ ಸಿಡಿಸೋ ಮೂಲಕ ದಸರಾ ಯಶಸ್ವಿ ತೆರೆಕಂಡಿದೆ.

    https://www.youtube.com/watch?v=xz6CgKrcUOs

  • ವಿಶ್ರಾಂತಿಗಾಗಿ ವಿದೇಶಕ್ಕೆ ಹಾರಿದ ಕುಮಾರಸ್ವಾಮಿ

    ವಿಶ್ರಾಂತಿಗಾಗಿ ವಿದೇಶಕ್ಕೆ ಹಾರಿದ ಕುಮಾರಸ್ವಾಮಿ

    ಬೆಂಗಳೂರು: ಮೈತ್ರಿ ಸರ್ಕಾರ ಪತನವಾದ ಬಳಿಕ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ಬೇಸರಗೊಂಡಿದ್ದು, ಹೆಚ್ಚು ಸಮಯವನ್ನು ವಿಶ್ರಾಂತಿಯಲ್ಲೇ ಕಳೆಯುತ್ತಿದ್ದಾರೆ. ಇದೀಗ ವಿಶ್ರಾಂತಿಗಾಗಿಯೇ ಮಲೇಷ್ಯಾಗೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಈ ಎಲ್ಲ ಜಂಜಾಟಗಳನ್ನು ಬದಿಗೊತ್ತಿ ವಿದೇಶ ಪ್ರವಾಸಕ್ಕೆ ಎಚ್.ಡಿ.ಕುಮಾರಸ್ವಾಮಿ ತೆರಳಿದ್ದು, ನಿನ್ನೆ ತಡ ರಾತ್ರಿ ಇಬ್ಬರು ಆಪ್ತರೊಂದಿಗೆ ವಿಮಾನ ಹತ್ತಿದ್ದಾರೆ. ನಾಲ್ಕು ದಿನಗಳ ಕಾಲ ಮಲೇಷ್ಯಾದಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ ಎಂದು ತಿಳಿದು ಬಂದಿದೆ.

    ಇತ್ತೀಚೆಗೆ ನೆರೆ ಪೀಡಿತ ಪ್ರದೇಶಗಳಲ್ಲಿ ಎಚ್‍ಡಿಕೆ ಪ್ರವಾಸ ಮಾಡಿ, ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿದ್ದರು. ಇದರ ನಡುವೆಯೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಮಾತಿನ ಯುದ್ಧವೇ ನಡೆದಿತ್ತು, ಇಬ್ಬರು ನಾಯಕರು ಆರೋಪ, ಪ್ರತ್ಯಾರೋಪಗಳನ್ನು ಮಾಡಿದ್ದರು. ಇದೀಗ ಎಲ್ಲದರಿಂದ ವಿಶ್ರಾಂತಿ ಪಡೆಯಲು ಮಲೇಷ್ಯಾಗೆ ತೆರಳಿದ್ದಾರೆ.

    ಇತ್ತೀಚೆಗೆ ಎಚ್.ಡಿ.ದೇವೇಗೌಡ ಹಾಗೂ ಸಿದ್ದರಾಮಯ್ಯನವರ ನಡುವೆ ಮಹಾ ಯುದ್ಧವೇ ನಡೆದಿತ್ತು. ಇದಾದ ಬಳಿಕ ಇದು ಸಿದ್ದರಾಮಯ್ಯ ಹಾಗೂ ಎಚ್.ಡಿ.ಕುಮಾರಸ್ವಾಮಿಯವರ ಮಧ್ಯೆ ಪ್ರಾರಂಭವಾಯಿತು. ಇಬ್ಬರು ನಾಯಕರೂ ಸಹ ಆರೋಪ ಪ್ರತ್ಯಾರೋಪಗಳನ್ನು ಮಾಡುವ ಮೂಲಕ ನೇರ ಕದನಕ್ಕೆ ಇಳಿದಿದ್ದರು.

    ಆಂಗ್ಲ ಪತ್ರಿಕೆಗೆ ನೀಡಿದ ಸಂದರ್ಶನವೊಂದರಲ್ಲಿ ಎಚ್‍ಡಿಕೆ ಸಿದ್ದರಾಮಯ್ಯನವರ ಮೇಲೆ ವಾಗ್ದಾಳಿ ನಡೆಸಿ, ಮೈತ್ರಿ ಸರ್ಕಾರದಲ್ಲಿ ಸಿಎಂ ಅಲ್ಲ, `ಎಫ್‍ಡಿಎ (ಫಸ್ಟ್ ಡಿವಿಷನ್) ಕ್ಲರ್ಕ್’ ಆಗಿದ್ದೆ ಎಂದು ಹೇಳಿಕೆ ನೀಡುವ ಮೂಲಕ ಮಾಜಿ ಸಿಎಂ ವಿರುದ್ಧ ಹರಿಹಾಯ್ದಿದ್ದರು.

    ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಆಡಳಿತ ನಡೆಸುತ್ತಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯಗೆ ಜೆಡಿಎಸ್ಸೇ ಮೊದಲ ವೈರಿಯಾಗಿತ್ತು. ಮೈತ್ರಿ ಸರ್ಕಾರ ಇದ್ದಾಗ ಸಿದ್ದರಾಮಯ್ಯ ಅವರು ಖುಷಿ ಆಗಿರಲಿಲ್ಲ ಎಂದು ಎಚ್‍ಡಿಕೆ ಆರೋಪಿಸಿದ್ದರು.

    ಕುಮಾರಸ್ವಾಮಿಯಿಂದ ಕಾಂಗ್ರೆಸ್‍ಗೆ ತೊಂದರೆ ಅನ್ನೋದು ಸಿದ್ದರಾಮಯ್ಯ ವಾದವಾಗಿತ್ತು. ಆದರೆ ಪ್ರತಿನಿತ್ಯ ಸಿದ್ದರಾಮಯ್ಯರಿಂದ ಸರ್ಕಾರ ಅಸ್ಥಿರಗೊಳಿಸಲು ಯತ್ನ ನಡೆಯುತ್ತಿತ್ತು. ಸಿಎಂ ಆಗಿದ್ದಾಗ ನನ್ನ ನೈತಿಕತೆಯನ್ನು ಕುಗ್ಗಿಸಲು ಸಿದ್ದರಾಮಯ್ಯ ಯತ್ನಿಸುತ್ತಿದ್ದರು. ಸಿದ್ದರಾಮಯ್ಯ ಬೆಂಬಲಿಗರು ಸಿದ್ದರಾಮಯ್ಯರೇ ಮತ್ತೆ ಸಿಎಂ ಆಗಬೇಕು ಎಂದು ಹೇಳುತ್ತಲೇ ಇದ್ದರು. ಒಂದು ವೇಳೆ ಸಿದ್ದರಾಮಯ್ಯ ಸಿಎಂ ಆಗಿ ವಾಪಸ್ ಆದರೆ ಮಾತ್ರ ನಮ್ಮ ಬೆಂಬಲ ಎಂದು ಅತೃಪ್ತ ಶಾಸಕರು ಹೇಳಿದ್ದರು. ಅವರ ಮಾತಿನ ಅರ್ಥ ಏನು? ಅತೃಪ್ತರ ಶಾಸಕರನ್ನು ಸಿದ್ದರಾಮಯ್ಯ ನಿಯಂತ್ರಣದಲ್ಲಿಟ್ಟುಕೊಳ್ಳಬೇಕಿತ್ತು ತಾನೇ? ಆದರೆ ಸಿದ್ದರಾಮಯ್ಯ ಹಾಗೇ ಮಾಡಲಿಲ್ಲ ಎಂದು ಕಿಡಿಕಾರಿದ್ದರು.

    ಒಂದು ವೇಳೆ ಯಡಿಯೂರಪ್ಪ ಸರ್ಕಾರ ನಡೆಸಲು ವಿಫಲರಾಗಿ ಸರ್ಕಾರ ಪತನವಾದರೆ ಈಗ ವಿಪಕ್ಷ ನಾಯಕರಾಗಿರುವ ಸಿದ್ದರಾಮಯ್ಯ ತಾವು ಮತ್ತೆ ಸಿಎಂ ಆಗಬಹುದು ಎಂಬ ಲೆಕ್ಕಾಚಾರದಲ್ಲಿದ್ದಾರೆ. ಸಿದ್ದರಾಮಯ್ಯ ನಮ್ಮವರೇ ಆಗಿದ್ದು, ಅವರ ಬೆನ್ನಿಗೆ ನಾವು ಚೂರಿ ಇರಿದಿಲ್ಲ. ಜೆಡಿಎಸ್‍ನಲ್ಲಿದ್ದಾಗ ಡಿಸಿಎಂ ಆಗಿದ್ದ ಸಿದ್ದರಾಮಯ್ಯ ಪಕ್ಷಕ್ಕೆ ಪರ್ಯಾಯವಾಗಿ ಅಹಿಂದ ಸಂಘಟನೆ ನಡೆಸಿ ಜೆಡಿಎಸ್ ಬೆಳವಣಿಗೆಗೆ ಅಡ್ಡಿ ಆದರು. ಈ ಮೂಲಕ ಜೆಡಿಎಸ್‍ಗೆ ಮೋಸ ಮಾಡಿದರು. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಜೆಡಿಎಸ್‍ನಿಂದ ಅವರನ್ನು ಉಚ್ಛಾಟನೆ ಮಾಡಿದೆವು ಎಂದಿದ್ದಾರೆ.

    ನಾನು ಸಿಎಂ ಆಗಿದ್ದಾಗ ಕಾಂಗ್ರೆಸ್‍ನವರ ಒತ್ತಡದಲ್ಲಿ ಕೆಲಸ ಮಾಡಬೇಕಿತ್ತು. ಕಾಂಗ್ರೆಸ್ ನನ್ನ ಮೇಲೆ ಸವಾರಿ ಮಾಡಿತು. ವರ್ಗಾವಣೆಯಲ್ಲೂ ಅವರು ಹೇಳಿದ್ದನ್ನೇ ಮಾಡಬೇಕಿತ್ತು. ಡಿಸಿ ವರ್ಗಾವಣೆಯಲ್ಲೂ ನನಗೆ ಸ್ವಾತಂತ್ರ್ಯ ಇರಲಿಲ್ಲ. ವರ್ಗಾವಣೆ ನನ್ನ ವ್ಯಾಪ್ತಿಗೆ ಬಂದರೂ ನಾನು ಕಾಂಗ್ರೆಸ್‍ನವರು ಏನು ಹೇಳುತ್ತಾರೋ ಅದನ್ನೇ ಮಾಡಬೇಕಿತ್ತು, ಇವತ್ತು ಒಳ್ಳೆಯ ವ್ಯಕ್ತಿಗಳಿಗೆ ರಾಜಕೀಯ ಅಲ್ಲ. ನನ್ನ ರಾಜಕೀಯ ಭವಿಷ್ಯದ ಬಗ್ಗೆಯೇ ನನಗೆ ಗ್ಯಾರಂಟಿ ಇಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದರು.

  • ಕಾಪು ಬೀಚ್‍ಗೆ ಸಿಎಂ ಫಿದಾ – ಸಮುದ್ರ ತೀರದಲ್ಲಿ ವಾಕಿಂಗ್

    ಕಾಪು ಬೀಚ್‍ಗೆ ಸಿಎಂ ಫಿದಾ – ಸಮುದ್ರ ತೀರದಲ್ಲಿ ವಾಕಿಂಗ್

    ಉಡುಪಿ: ಕರ್ನಾಟಕದ ಎರಡನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರದ ಬಳಿಕ ಮುಖ್ಯಮಂತ್ರಿ ಕುಮಾರಸ್ವಾಮಿ ರಿಲಾಕ್ಸ್ ಮೂಡ್‍ನಲ್ಲಿದ್ದು, ಇಂದು ಕಾಪು ಬೀಚ್ ಬಳಿ ವಾಕಿಂಗ್ ಮಾಡಿದ್ದಾರೆ.

    ಸಿಎಂ ಕುಮಾರಸ್ವಾಮಿ ಅವರು ಉಡುಪಿಯ ಕಾಪು ಸಮೀಪದ ಮೂಳೂರಿನಲ್ಲಿರುವ ಸಾಯಿರಾಧಾ ಹೆಲ್ತ್ ರಿಸಾರ್ಟ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಭಾನುವಾರ ತಡರಾತ್ರಿ ಒಂದು ಗಂಟೆಯವರೆಗೂ ಕಾರ್ಯಕರ್ತರು ಹಾಗೂ ಜೆಡಿಎಸ್ ಮುಖಂಡರ ಜೊತೆ ಸಮಾಲೋಚನೆಯಲ್ಲಿ ನಿರತರಾಗಿದ್ದರು.

    ಕುಮಾರಸ್ವಾಮಿ ಮೊದಲೇ ಈ ದಿನ ಯಾವುದೇ ಕಾರ್ಯಕರ್ತರನ್ನು ಭೇಟಿಯಾಗಲ್ಲ ಎಂದು ತಿಳಿಸಿದ್ದರು. ಹೀಗಾಗಿ ರೆಸಾರ್ಟ್ ಆವರಣದಲ್ಲಿ ಇಂದು ಯಾರೂ ಕಂಡುಬರಲಿಲ್ಲ. ಈ ಖಾಸಗಿ ಭೇಟಿಯನ್ನು ಸಿಎಂ ಸಂಪೂರ್ಣ ರಹಸ್ಯವಾಗಿರಿಸಿದ್ದು, ಭಾನುವಾರ ರಾತ್ರಿ ಮಾಧ್ಯಮದವರನ್ನು ಕಂಡು ಸಿಡಿಮಿಡಿಗೊಂಡಿದ್ದರು. ಹಾಗಾಗಿ ಇಂದು ಯಾವುದೇ ಕಾರಣಕ್ಕೂ ಮಾಧ್ಯಮದವರನ್ನು ಭೇಟಿಯಾಗದೇ ಇರಲು ನಿರ್ಧರಿಸಿದ್ದರು. ಹೀಗಾಗಿ ಸಿಎಂ ಮಾಧ್ಯಮಗಳ ಕ್ಯಾಮೆರಾದ ಕಣ್ಣಿಗೆ ಬೀಳಲಿಲ್ಲ. ಆದರೂ ಸಿಎಂ ಕಾಪು ಕಡಲತೀರದಲ್ಲಿ ರಿಲಾಕ್ಸ್ ಮೂಡಿನಲ್ಲಿರುವುದು ಮೊಬೈಲ್ ನಲ್ಲಿ ಸೆರೆಯಾಗಿದೆ.

    ಭಾನುವಾರ ಕಾಲಿಗೆ ಮಸಾಜ್ ಮಾಡಿಸಿಕೊಂಡಿದ್ದ ಸಿಎಂ, ಬೇಡಿಕೆಗೆ ಅನುಸಾರ ಚಿಕಿತ್ಸೆ ನೀಡಲು ನಿರ್ಧರಿಸಲಾಗಿದೆ. ಎರಡು ದಿನಗಳ ಕಾಲ ಈ ರೆಸಾರ್ಟ್ ನಲ್ಲಿ ತಂಗಲಿರುವ ಸಿಎಂ ರಾಜಕೀಯ ಚಟುವಟಿಕೆಗಳಿಂದ ಸಂಪೂರ್ಣ ದೂರ ಇರಲಿದ್ದಾರೆ. ಇಂದು ಬೆಳಿಗ್ಗೆ ಇಡ್ಲಿ-ವಡೆ, ನೀರ್ ದೋಸೆ, ಪೂರಿ ಬ್ರೇಕ್ ಫಾಸ್ಟ್ ಗೆ ವ್ಯವಸ್ಥೆ ಮಾಡಲಾಗಿತ್ತು. ಮಧ್ಯಾಹ್ನಕ್ಕೆ ಪೂರ್ಣ ಸಸ್ಯಾಹಾರ ವ್ಯವಸ್ಥೆ ಮಾಡಲಾಗಿದೆ.

    ತನ್ಮಯ್ ಗೋಸ್ವಾಮಿ ಸೂಚನೆಯಂತೆ ಪ್ರಕೃತಿ ಚಿಕಿತ್ಸೆ ನಡೆಯಲಿದೆ. ಇದೇ ವೇಳೆ ಸಿಎಂ ಜೊತೆಗೆ ಸಚಿವರಾದ ಪುಟ್ಟರಾಜು, ಸಾರಾ ಮಹೇಶ್, ಶ್ರೀನಿವಾಸ್ ಶಾಸಕರಾದ ಶಿವಲಿಂಗೇಗೌಡ ಹಾಗೂ ಭೋಜೇಗೌಡ ಕಾಣಿಸಿಕೊಂಡಿದ್ದಾರೆ. ಮೂಳೂರು ಕಡಲತೀರಕ್ಕೆ ಫಿದಾ ಆಗಿರುವ ಸಿಎಂ, ಈ ಕುರಿತು ಜೊತೆಗಿದ್ದವರ ಜೊತೆಗೆ ಸಂತೋಷ ಹಂಚಿಕೊಂಡಿದ್ದಾರೆ.

  • ರಿಲ್ಯಾಕ್ಸ್ ಮೂಡ್‍ನಲ್ಲಿ ಅರ್ಜುನ ಆಂಡ್ ಟೀಂ

    ರಿಲ್ಯಾಕ್ಸ್ ಮೂಡ್‍ನಲ್ಲಿ ಅರ್ಜುನ ಆಂಡ್ ಟೀಂ

    ಮೈಸೂರು: ಕಾಡನಿಂದ ನಾಡಿಗೆ ಬಂದಿರುವ ದಸರಾ ಗಜಪಡೆ ಈಗ ಫುಲ್ ರಿಲ್ಯಾಕ್ಸ್ ಮೂಡಿನಲ್ಲಿವೆ. ಕಾಡಿನಿಂದ ಬಂದಿರುವ ಅತಿಥಿಗಳಿಗೆ ನಾಡಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ. ಕಾಡಿನಲ್ಲಿ ಬೇಕಾದ್ದನ್ನು ತಿನ್ನುತ್ತಿದ್ದ ಗಜಪಡೆಗೆ ಇಲ್ಲಿ ಅತಿ ಪೌಷ್ಠಿಕವಾದ ಆಹಾರ ನೀಡಿ ಆರೈಕೆ ಮಾಡಲಾಗುತ್ತಿದೆ.

    ದಸರೆಗಾಗಿ ಕಾಡನಿಂದ ಬಂದಿರುವ ದಸರಾ ಗಜಪಡೆ ಈಗ ಮೈಸೂರಿನ ಅಶೋಕ್‍ಪುರಂನಲ್ಲಿನ ಅರಣ್ಯ ಭವನದಲ್ಲಿ ವಿಶ್ರಾಂತಿ ಪಡೆಯುತ್ತಿವೆ. ಕ್ಯಾಪ್ಟನ್ ಅರ್ಜುನ, ಧನಂಜಯ, ಚೈತ್ರ, ಗೋಪಿ, ವಿಕ್ರಮ, ವರಲಕ್ಷ್ಮಿ ಆನೆಗಳು ಸಂಪೂರ್ಣವಾಗಿ ವಿಶ್ರಾಂತಿಯಲ್ಲಿವೆ. ಈ ಆನೆಗಳು ಮೊದಲ ತಂಡದಲ್ಲಿ ಮೈಸೂರಿಗೆ ಬಂದಿದ್ದು, ಎರಡನೇ ತಂಡದಲ್ಲಿ ಇನ್ನೂ ಆರು ಆನೆಗಳು ಮುಂದಿನ ವಾರ ಮೈಸೂರಿಗೆ ಬರಲಿವೆ. ಇದನ್ನೂ ಓದಿ: ನಾಡಹಬ್ಬಕ್ಕೆ ಸಿದ್ಧತೆ ಶುರು- 4,050 ಕೆ.ಜಿ ತೂಕದ ಧನಂಜಯನಿಗೆ ಮೊದ್ಲ ದಸರಾ

    ಈಗ ಬಂದಿರುವ ಆನೆಗಳಿಗೆ ಭತ್ತ, ಹಸಿ ಹುಲ್ಲು, ಸೊಪ್ಪು, ಕಾಯಿ ಬೆಲ್ಲ ನೀಡಿ ಹಾರೈಕೆ ಮಾಡಲಾಗುತ್ತಿದೆ. ಬೆಳಗ್ಗೆ, ಮಧ್ಯಾಹ್ನ, ಸಂಜೆ ಮತ್ತು ರಾತ್ರಿ ಹೀಗೆ ನಾಲ್ಕು ಹಂತಗಳಲ್ಲಿ ಆನೆಗಳಿಗೆ ಪೌಷ್ಠಿಕವಾದ ಆಹಾರ ನೀಡಿ ಪರಿಪೂರ್ಣವಾಗಿ ಆರೈಕೆ ಮಾಡಲಾಗುತ್ತಿದೆ. ಅಲ್ಲದೆ ಆನೆಗಳ ಆರೋಗ್ಯದ ಬಗ್ಗೆಯೂ ವೈದ್ಯರು ತಪಾಸಣೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಮೈಸೂರಿಗೆ ಹೊರಟ ದಸರಾ ಆನೆಗಳು – ಇಷ್ಟವಾದ ಆಹಾರ ಕೊಟ್ಟ ನಂತ್ರ ಲಾರಿ ಹತ್ತಿದ ಧನಂಜಯ

    ಈ ಆನೆಗಳನ್ನು ನಾಳೆ ಸಂಜೆ 4 ಗಂಟೆಗೆ ಮೈಸೂರಿನ ಅರಮನೆಗೆ ಬರ ಮಾಡಿಕೊಳ್ಳಲಾಗುತ್ತದೆ. ಆನೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಿ,ಟಿ. ದೇವೇಗೌಡ ಅರಮನೆಯ ಬಲರಾಮ ದ್ವಾರದಲ್ಲಿ ಸಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಅರಮನೆ ಆವರಣಕ್ಕೆ ಸ್ವಾಗತಿಸಲಿದ್ದಾರೆ ಎಂದು ಆನೆಯ ವೈದ್ಯರಾದ ನಾಗರಾಜ್ ತಿಳಿಸಿದರು.

    ಅರಣ್ಯ ಭವನದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಆನೆಗಳನ್ನು ನೋಡಲು ಜನರು ತಂಡೋಪಡವಾಗಿ ಬರುತ್ತಿದ್ದಾರೆ. ಅದರಲ್ಲೂ ಇದೇ ಮೊದಲ ಬಾರಿಗೆ ದಸರೆಗೆ ಬಂದಿರುವ ಧನಂಜಯ ಆನೆ ಎಲ್ಲರ ಆರ್ಕಷಣೆಯಾಗಿದೆ. ಆನೆಗಳ ಜೊತೆ ಸೆಲ್ಫಿ ತೆಗೆಸಿಕೊಂಡು ಜನ ಸಂಭ್ರಮ ಪಡುತ್ತಿದ್ದಾರೆ ಎಂದು ಸ್ಥಳೀಯ ಗೋಪಿ ಹೇಳಿದರು.

    ಆನೆಗಳು ನಾಳೆ ಅರಮನೆ ಆವರಣ ಪ್ರವೇಶಿಸಿದ ಮೇಲೆ ಆನೆಗಳಿಗೆ ತಾಲೀಮು ಶುರುವಾಗಲಿದೆ. ಬೆಳಗ್ಗೆ ಮತ್ತು ಸಂಜೆ ಎರಡು ಬಾರಿ ಆನೆಗಳಿಗೆ ದಸರಾ ಮೆರವಣಿಗೆ ಸಾಗುವ ಹಾದಿಯಲ್ಲಿ ತಾಲೀಮು ಮಾಡಿಸಿ ನಗರದ ಪರಿಸರಕ್ಕೆ ಅವುಗಳ ಮನ:ಸ್ಥಿತಿಯನ್ನು ಹೊಂದಿಸಲಾಗುತ್ತದೆ. ಈ ಮೂಲಕ ಮೈಸೂರಲ್ಲಿ ಆನೆ ದರ್ಬಾರ್ ಶುರುವಾಗಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=ufz9ZpgsZ_o

  • ಪತ್ನಿ, ಮಕ್ಕಳಿಗೆ ಚಿಕನ್ ತಯಾರಿಸಿ ಉಣಬಡಿಸಿದ ಕಾರವಾರ ಶಾಸಕ ಸತೀಶ್ ಸೈಲ್

    ಪತ್ನಿ, ಮಕ್ಕಳಿಗೆ ಚಿಕನ್ ತಯಾರಿಸಿ ಉಣಬಡಿಸಿದ ಕಾರವಾರ ಶಾಸಕ ಸತೀಶ್ ಸೈಲ್

    ಕಾರವಾರ: ಒಂದೆಡೆ ಅಬ್ಬರದ ಪ್ರಚಾರ, ಸದಾ ತುಂಬಿ ತುಳುಕುತಿದ್ದ ಜನರ ಸಂತೆ, ಟೀಕೆ ಟಿಪ್ಪಣಿಗಳ ನಡುವೆ ತಾನು ಗೆಲ್ಲಬೇಕೆಂಬ ಹಂಬಲದಲ್ಲಿ ವಿಧಾನಸಭಾ ಚುನಾವಣೆಯ ರಂಗಿನ ರಣರಂಗದಲ್ಲಿ ಸದಾ ಬಿಸಿಯಾಗಿದ್ದ ಪ್ರತಿಷ್ಠಿತ ಕಣವಾದ ಕಾರವಾರ ವಿಧಾನಸಭಾ ಕ್ಷೇತ್ರದ ಮೂರು ಪಕ್ಷದ ನಾಯಕರು ಈಗ ರಿಲ್ಯಾಕ್ಸ್ ಮೂಡಿನಲ್ಲಿದ್ದಾರೆ.

    ಸದಾ ಜನರ ಮಧ್ಯೆ ಇರುವ ನಾಯಕರು ತಮ್ಮ ವೈಯಕ್ತಿಕ ಬದುಕಿಗೆ ಸಮಯ ಕೊಟ್ಟದ್ದು ಅಲ್ಪ ಸಮಯ. ಇದೇ ತಿಂಗಳ 15 ರಂದು ಫಲಿತಾಂಶದ ನಿರೀಕ್ಷೆಯಲ್ಲಿರುವ ಈ ನಾಯಕರು ಇಂದು ತಮ್ಮ ಒತ್ತಡವನ್ನು ಕಮ್ಮಿ ಮಾಡಿಕೊಳ್ಳಲು ಅಡುಗೆ ಮಾಡಿ ಕುಟುಂಬವರಿಗೆ ಬಡಿಸಿದ್ದಾರೆ.

    ಕಳೆದ ಎರಡು ತಿಂಗಳ ಚುನಾವಣಾ ಕುರುಕ್ಷೇತ್ರಕ್ಕೆ ಪೂರ್ಣ ವಿರಾಮ ಬಿದ್ದಿದೆ. ಇನ್ನು 15ನೇ ದಿನಾಂಕದಂದು ಜನರ ನಿರ್ಧಾರದ ಫಲಿತಾಂಶ ಬರಬೇಕಿದೆ. ತಾವು ಪಟ್ಟ ಶ್ರಮದ ನಿರೀಕ್ಷೆಯಲ್ಲಿ ನಾಯಕರು ಒತ್ತಡದಲ್ಲಿ ಇರೋದು ಸಹಜವಾಗಿದೆ. ತ್ರಿಕೋನ ಸ್ಪರ್ಧೆ ಇರುವ ಕಾರವಾರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಹಾಲಿ ಪಕ್ಷೇತರ ಶಾಸಕ ಸತೀಶ್ ಸೈಲ್, ಜೆಡಿಎಸ್ ನಿಂದ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಮತ್ತು ಬಿಜೆಪಿಯಿಂದ ರೂಪಾಲಿ ನಾಯ್ಕ ಸ್ಪರ್ಧಿಸಿದ್ದರು.

    ಸದ್ಯ ಇಂದು ಮತ್ತು ನಾಳೆ ಮನಸ್ಸಿನಲ್ಲಿ ಅಳುಕು ಮತ್ತು ಒತ್ತಡ ಇದ್ದರು ಮೂವರು ಅಭ್ಯರ್ಥಿಗಳು ಈ ಒತ್ತಡ ಮರೆಯಲು ಹರಸಾಹಸ ಪಡುತಿದ್ದಾರೆ. ಕಳೆದ ಎರಡು ತಿಂಗಳಿಂದ ಕ್ಷೇತ್ರ ಸುತ್ತಿ ಪ್ರಚಾರ ನಡೆಸಿ ದಣಿದಿರುವ ಜೆಡಿಎಸ್ ಅಭ್ಯರ್ಥಿ ಮಾಜಿ ಸಚಿವ ಆನಂದ್ ಆಸ್ನೋಟಿಕರ್ ಗೋವಾಕ್ಕೆ ತೆರಳಿ ರಿಲ್ಯಾಕ್ಸ್ ಮಾಡುತ್ತಿದ್ದು, ಅವರ ಅಧಿಕೃತ ನಿವಾಸ ಜನರಿಲ್ಲದೇ ಬಿಕೋ ಎನ್ನುತಿತ್ತು. ಒತ್ತಡ ಮರೆಯಲು ಜನರಿಂದ ದೂರ ವಿರಲು ಬಯಸಿರುವ ಬಿಜೆಪಿ ಅಭ್ಯರ್ಥಿ ರೂಪಾಲಿ ನಾಯ್ಕ ಕಾರವಾರದ ಸೋನಾರವಾಡದಲ್ಲಿರುವ ಮನೆಯ ಮುಂಭಾಗಕ್ಕೆ ಬೀಗ ಹಾಕಿ ಒಳ ಸೇರಿದ್ದಾರೆ. ಮನೆಯ ಬಳಿ ಬಂದ ಜನರ ಸಂಪರ್ಕಕ್ಕೆ ಸಿಗಲಿಲ್ಲ.

    ಇನ್ನು ಕಾಂಗ್ರೆಸ್ ನಿಂದ ಸ್ಪರ್ಧಿಸಿರುವ ಹಾಲಿ ಪಕ್ಷೇತರ ಶಾಸಕ ಸತೀಶ್ ಸೈಲ್ ರವರ ಮಾಜಾಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿರುವ ಮನೆ ಕೂಡ ಯಾವುದೇ ಕಾರ್ಯಕರ್ತರ ಸದ್ದಿಲ್ಲದೇ ತಟಸ್ಥವಾಗಿತ್ತು. ಶಾಂತವಾಗಿದ್ದ ಮನೆಯಲ್ಲಿ ಸತೀಶ್ ಸೈಲ್ ಪತ್ನಿ ಕಲ್ಪನಾರೊಂದಿಗೆ ಅಡುಗೆ ಮನೆ ಸೇರಿ ಮಧ್ಯಾಹ್ನದ ಊಟಕ್ಕಾಗಿ ಚಿಕನ್ ತಯಾರಿಸಿದ್ದಾರೆ. ಅವರ ಕುಷಲೋಪರಿ ವಿಚಾರಿಸಲು ಬಂದವರಿಗೆ ತಮ್ಮ ಕೈಯಾರೆ ಟೀ ಮಾಡಿ ನೀಡಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನಾನು ರಾಜಕೀಯ ಕ್ಷೇತ್ರಕ್ಕೆ ಬಂದಾಗಿನಿಂದ ಸಂಸಾರಕ್ಕೆ ಹೆಚ್ಚು ಸಮಯ ಕೊಡಲಾಗುತಿಲ್ಲ. ಮಕ್ಕಳೊಂದಿಗೆ ಬೆರೆಯದೇ ಎಷ್ಟೂ ದಿನಗಳಾಗಿವೆ. ಒಂದು ದಿನವಾದರೂ ನನ್ನ ಒತ್ತಡ ಮರೆತು ಮಕ್ಕಳು ಸಂಸಾರದೊಂದಿಗೆ ಬೆರೆಯಬೇಕೆಂದು ತೀರ್ಮಾನಿಸಿ ಜಂಜಾಟದಿಂದ ರಿಲಾಕ್ಸ್ ಮಾಡುತ್ತಿದ್ದೇನೆ ಎಂದು ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ.

    ನನ್ನ ತಂದೆ ಕ್ಯಾನ್ಸರ್ ನಿಂದ ತೀರಿಕೊಂಡರು. ಆಗ ಅವರಿಗೆ ಕ್ಯಾನ್ಸರ್ ಇದೇ ಎಂದು ತಿಳಿದುಕೊಳ್ಳವ ವೇಳೆ ಅವರು ನಮ್ಮನ್ನು ಅಗಲಿದ್ದರು. ಕಾರವಾರ ಕ್ಷೇತ್ರದಲ್ಲಿ ಕೈಗಾ ಅಣು ಸ್ಥಾವರ, ಆದಿತ್ಯ ಬಿರ್ಲಾ ಕೆಮಿಕಲ್ ಕಾರ್ಖಾನೆಗಳಿವೆ. ಇವುಗಳಿಂದ ಸಾಕಷ್ಟು ಜನರಿಗೆ ಕ್ಯಾನ್ಸರ್ ನಂತಹ ರೋಗಗಳು ಬಂದಿವೆ. ಕ್ಯಾನ್ಸರ್ ಪೀಡಿತ ರೋಗಿಗಳಿಗೆ ಚಿಕಿತ್ಸೆ ಕೊಡಿಸಲು ಆಸ್ಪತ್ರೆ ವ್ಯವಸ್ಥೆ ಸರಿಯಾಗಿ ಇಲ್ಲ. ನನ್ನ ಅವಧಿಯಲ್ಲಿ ಕ್ಯಾನ್ಸರ್ ಆಸ್ಪತ್ರೆ ಮಾಡಿಸುವ ಪ್ರಯತ್ನ ಮಾಡಿದ್ದೇನೆ. ಈಗ ಅದು ಸಫಲವಾಗಿದೆ ಎಂದು ತಮ್ಮ ತಂದೆಯನ್ನು ನೆನೆದು ಭಾವುಕರಾದ್ರು.

    ನನ್ನ ಕ್ಷೇತ್ರದ ಜನರಿಗೆ ಉದ್ಯೋಗ ಇಲ್ಲಿಯೇ ಸಿಗುವಂತೆ ಮಾಡಬೇಕು. ಅದಕ್ಕಾಗಿ ಈ ಬಾರಿ ಚುನಾವಣಾ ಕಣದಲ್ಲಿದ್ದೇನೆ. ನನ್ನ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿರುವೆ ಎಂದು ನಾಲ್ಕು ವರ್ಷದ ತಮ್ಮ ಸಾಧನೆಯ ಬಗ್ಗೆ ಮನದ ಮಾತು ಹಂಚಿಕೊಂಡ್ರು. ಕಾರವಾರ ಕ್ಷೇತ್ರದ ಮೂರು ಪಕ್ಷದ ಅಭ್ಯರ್ಥಿಗಳು ಇಂದು ಜನರ, ಕಾರ್ಯಕರ್ತರ ಜಂಜಾಟದಿಂದ ದೂರ ಉಳಿದು ತಮ್ಮ ದಣಿವನ್ನು ನೀಗಿಸಿಕೊಂಡಿದ್ದು, 15ರ ಅಗ್ನಿ ಪರೀಕ್ಷೆಗೆ ರಿಫ್ರೆಶ್ ಆಗುತ್ತಿದ್ದಾರೆ.

  • ವಿಮಾನ ನಿಲ್ದಾಣದಲ್ಲೇ ಹಾಯಾಗಿ ಮಲಗಿ ರಿಲ್ಯಾಕ್ಸ್ ಮಾಡಿದ್ರು ಧೋನಿ

    ವಿಮಾನ ನಿಲ್ದಾಣದಲ್ಲೇ ಹಾಯಾಗಿ ಮಲಗಿ ರಿಲ್ಯಾಕ್ಸ್ ಮಾಡಿದ್ರು ಧೋನಿ

    ಚೆನ್ನೈ: ವಿಶ್ವ ಕ್ರಿಕೆಟ್‍ನ ಕೂಲ್ ಕ್ಯಾಪ್ಟನ್ ಎಂದೇ ಪ್ರಸಿದ್ಧಿ ಪಡೆದಿರುವ ಮಹೇಂದ್ರ ಸಿಂಗ್ ಧೋನಿ ಮತ್ತೊಮ್ಮೆ ತಮ್ಮ ಸರಳ ನಡವಳಿಕೆಯಿಂದ ಕ್ರಿಕೆಟ್ ಅಭಿಮಾನಿಗಳ ಮನಗೆದ್ದಿದ್ದಾರೆ.

    ಚೆನ್ನೈನಿಂದ ಕೋಲ್ಕತ್ತಾಗೆ ತೆರಳಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಭಾರತೀಯ ಕ್ರಿಕೆಟ್ ತಂಡದ ಆಟಗಾರರು ವಿಮಾನ ನಿಲ್ದಾಣದಲ್ಲಿ ಕಾಯಬೇಕಾಯಿತು. ಈ ಸಮಯದಲ್ಲಿ ಎಲ್ಲಾ ಆಟಗಾರರು ಹರಟೆ ಹೋಡಿಯುತ್ತಾ ಕಾಲಕಳೆದರೆ, ಧೋನಿ ಮಾತ್ರ ವಿಮಾನ ನಿಲ್ದಾಣ ನೆಲದ ಮೇಲೆಯೇ ಮಲಗಿ ರಿಲ್ಯಾಕ್ಸ್ ಮಾಡಿದ್ದಾರೆ.

    ಧೋನಿ ನೆಲದ ಮೇಲೆ ಮಲಗಿ ರಿಲ್ಯಾಕ್ಸ್ ಮಾಡುತ್ತಿರುವ ಫೋಟೋಗಳನ್ನು ಬಿಬಿಸಿಐ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಈ ಫೋಟೋಗಳನ್ನು ಕಂಡ ಅಭಿಮಾನಿಗಳು ಧೋನಿಯವರ ಸರಳತೆಯನ್ನು ಮೆಚ್ಚಿ ಕೊಂಡಾಡಿದ್ದಾರೆ.

    ಈ ಫೋಟೋಗಳಲ್ಲಿ ಭಾರತದ ಮಾಜಿ ನಾಯಕ ಧೋನಿ ಸೇರಿದಂತೆ, ನಾಯಕ ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ ಮುಂತಾದವರನ್ನ ಕಾಣಬಹುದು.

    ಪ್ರಸ್ತುತ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಜಯಗಳಿಸಿ ಸರಣಿಯಲ್ಲಿ 1-0 ಅಂತರದಲ್ಲಿ ಟೀಮ್ ಇಂಡಿಯಾ ಮುನ್ನಡೆ ಕಾಯ್ದುಕೊಂಡಿದೆ. ಸರಣಿಯ ಎರಡನೇ ಪಂದ್ಯಕ್ಕಾಗಿ ಕೋಲ್ಕತ್ತಾಗೆ ತೆರಳಲು ಚೆನ್ನೈ ವಿಮಾನ ನಿಲ್ದಾಣಕ್ಕೆ ತಂಡ ಆಗಮಿಸಿತ್ತು.

    ಎಲ್ಲರೂ ವಿಮಾನ ನಿಲ್ದಾಣದಲ್ಲಿ ಕುಳಿತು ಸಮಯ ಕಳೆಯುತ್ತಿದ್ದಾರೆ, ಲೆಜೆಂಡ್ ಆಟಗಾರ ಮಾತ್ರ ರಿಲ್ಯಾಕ್ಸ್ ಮಾಡುತ್ತಿದ್ದಾರೆ. ಈ ಕಾರಣಕ್ಕಾಗಿಯೇ ಇಂತಹ ಆಟಗಾರ ಬೇರೆಲ್ಲೂ ಇಲ್ಲ ಎಂದು ಅಭಿಮಾನಿಯೊಬ್ಬರು ಟ್ವೀಟ್ ಮಾಡಿದ್ದಾರೆ

    ಧೋನಿ ಯಾವಾಗಲೂ ಡಿಫರೆಂಟ್ ಆಗಿ ಕಾಣಿಸಿಕೊಳ್ಳತ್ತಾರೆ. ಧೋನಿ ಅವರ ಸರಳತೆಗೆ ಇದುವೆ ಸಾಕ್ಷಿ, ಅವರು ಮತ್ತೆ ನೆಲದ ಮೇಲೆ ಮಲಗಿದ್ದಾರೆ. ಧೋನಿ ಎಂದು ತಮ್ಮ ಸಾಮರ್ಥ್ಯವನ್ನು ವ್ಯರ್ಥ ಮಾಡುವುದಿಲ್ಲ ಎಂದು ಅಭಿಮಾನಿಗಳು ಧೋನಿಯ ಸರಳತೆಯನ್ನು ಮೆಚ್ಚಿ ಕೊಂಡಾಡಿದ್ದಾರೆ.

    ಲಂಕಾ ಪ್ರವಾಸದ ವೇಳೆ ಪಂದ್ಯದಲ್ಲೂ ಧೋನಿ ಮೈದಾನದಲ್ಲೇ ಮಲಗಿ ರಿಲ್ಯಾಕ್ಸ್ ಮಾಡಿದ್ದನ್ನು ಇದೇ ಸಂದರ್ಭದಲ್ಲಿ ಸ್ಮರಿಸಬಹುದಾಗಿದೆ.

    https://twitter.com/KalamWalaBae/status/909673919115755520