ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಆರೋಪಿ ನಟ ದರ್ಶನ್ (Actor Darshan) ನಿನ್ನೆ (ಅ.30) ಬಳ್ಳಾರಿ ಜೈಲಿನಿಂದ (Ballary Jail) ರಿಲೀಸ್ ಆಗಿದ್ದಾರೆ.
ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 2ನೇ ಆರೋಪಿಯಾಗಿದ್ದ ದರ್ಶನ್ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ 2 ತಿಂಗಳು ಕಳೆದು ನಿನ್ನೆ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಒಂದು ಕಡೆ ಜೈಲಿಗೆ ಹೊಂದಿಕೊಳ್ಳಲು ಕಷ್ಟವಾದರೆ ಇನ್ನೊಂದು ಕಡೆ ಬೆನ್ನು ನೋವು ಬೇತಾಳ ತರಹ ಕಾಡುತ್ತಿತ್ತು.
ಇದೀಗ ಬೆನ್ನು ನೋವಿಗೆ ಸರ್ಜರಿ ಸಲುವಾಗಿ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ನಿನ್ನೆ ಸಂಜೆ ಬಳ್ಳಾರಿ ಜೈಲಿಂದ ನೇರವಾಗಿ ಬೆಂಗಳೂರಿನ ಪತ್ನಿ ವಿಜಯಲಕ್ಷ್ಮಿ ಫ್ಲ್ಯಾಟ್‌ಗೆ ದರ್ಶನ್ ಬಂದಿಳಿದಿದ್ದಾರೆ.ಇದನ್ನೂ ಓದಿ: ರಾಜ್ಯದ ಹವಾಮಾನ ವರದಿ 31-10-2024
ಹೈಕೋರ್ಟ್‌ನಿಂದ ಮಧ್ಯಂತರ ಜಾಮೀನು ಸಿಕ್ಕ ಬಳಿಕ ಸಂಜೆ ವೇಳೆಗೆ ಬಳ್ಳಾರಿ ಜೈಲಿಂದ ದರ್ಶನ್ ಬಿಡುಗಡೆಯಾದರು. ಪತ್ನಿ ವಿಜಯಲಕ್ಷ್ಮಿ, ನಟ ಧನ್ವೀರ್, ಸಂಬಂಧಿ ಸುಶಾಂತ್ ನಾಯ್ಡು ಜೊತೆಗೆ ಬೆಂಗಳೂರಿಗೆ ಸುದೀರ್ಘ ಪ್ರಯಾಣ ಬೆಳೆಸಿದರು. ದಾರಿಯುದ್ದಕ್ಕೂ ದರ್ಶನ್ ಅಭಿಮಾನಿಗಳು ರಸ್ತೆಯ ಇಕ್ಕೆಲಗಳಲ್ಲಿ ನಿಂತು ದಾಸನಿಗೆ ಜೈಕಾರ ಹಾಕಿದರು. ಈ ವೇಳೆ ದರ್ಶನ್ ಅಭಿಮಾನಿಗಳತ್ತ ಕೈ ಬೀಸಿ ತಮ್ಮ ಸಂತಸವನ್ನು ವ್ಯಕ್ತಪಡಿಸಿದರು.
ಬಳ್ಳಾರಿ, ಅನಂತಪುರ, ಚಿಕ್ಕಬಳ್ಳಾಪುರ, ಬಾಗೇಪಲ್ಲಿ, ಜಗಳಪುರ, ಚದಲಾಪುರ, ದೇವನಹಳ್ಳಿ, ಹುಣಸಮಾರನಹಳ್ಳಿ, ಹೆಬ್ಬಾಳ, ಮಲ್ಲೇಶ್ವರಂ, ನವರಂಗ್, ಮೈಸೂರು ರೋಡ್ ಮೂಲಕ ಹೊಸಕೆರೆಹಳ್ಳಯ ಪತ್ನಿ ಅಪಾರ್ಟ್ಮೆಂಟ್‌ಗೆ ಭೇಟಿ ನೀಡಿದರು.
ದರ್ಶನ್ ವಿಜಯಲಕ್ಷ್ಮಿ ಫ್ಲ್ಯಾಟ್‌ಗೆ ಬರ್ತಿದ್ದಕ್ಕೆ ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿ ಸಂಭ್ರಮಾಚರಣೆ ಮಾಡಿದರು. `ಡಿ ಬಾಸ್ ಡಿ ಬಾಸ್’ ಎಂದು ಜೈಕಾರ ಹಾಕಿದರು. ಈ ವೇಳೆ ದರ್ಶನ್ ಅಭಿಮಾನಿಗಳನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿಲೇಬೇಕಾದ ಪರಿಸ್ಥಿತಿ ಎದುರಾಯಿತು.
ದಾಸ 5 ತಿಂಗಳ ಬಳಿಕ ಜೈಲಿಂದ ಬಿಡುಗಡೆ ಆಗಿದ್ದು, ಮಧ್ಯಂತರ ಜಾಮೀನು ಪಡೆದಿದ್ದಾರೆ. ಇಂದು (ಅ.31) ಮಧ್ಯಾಹ್ನ ಆಸ್ಪತ್ರೆಗೆ ದಾಖಲಾಗಲಿದ್ದಾರೆ. ಇಂದು ಪುತ್ರ ವಿನೀಶ್ ಹುಟ್ಟುಹಬ್ಬ ಇದ್ದು, ಮಗನ ಹುಟ್ಟುಹಬ್ಬ ಆಚರಣೆ ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲಾಗಲಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.ಇದನ್ನೂ ಓದಿ: ದಿನ ಭವಿಷ್ಯ 31-10-2024
ಚಿತ್ರದುರ್ಗ: ಪೋಕ್ಸೊ ಕೇಸ್‌ನಲ್ಲಿ (POCSO Case) ನ್ಯಾಯಾಂಗ ಬಂಧನದಲ್ಲಿದ್ದ ಚಿತ್ರದುರ್ಗದ ಮುರುಘಾಶ್ರೀ (Muruga Shree) ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಈ ಹಿನ್ನೆಲೆ ಜೈಲು ಆವರಣದಲ್ಲಿ ಮುರುಘಾಶ್ರೀ ಬೆಂಬಲಿಗರು ಸಂಭ್ರಮಾಚರಣೆ ಮಾಡಿದ್ದಾರೆ.
ಜೈಲಿನಿಂದ ಬಿಡುಗಡೆಯಾದ ಮುರುಘಾಶ್ರೀ ಸ್ವಾಗತಿಸಲು ಮುರುಘಾ ಮಠದ ಉಸ್ತುವಾರಿಯಾಗಿದ್ದ ಬಸವ ಪ್ರಭು ಶ್ರೀ ಮತ್ತು ಉತ್ತರಾಧಿಕಾರಿ ಬಸವಾದಿತ್ಯ ಜೈಲಿಗೆ ಧಾವಿಸಿದ್ದರು. ಬಿಡುಗಡೆಯಾದ ಮುರುಘಾಶ್ರೀ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು. ಅಲ್ಲದೇ ಅವರ ಬೆಂಬಲಿಗರು ಹೂವಿನಹಾರ ಹಾಕುವ ಮೂಲಕ ಜಯಘೋಷ ಕೂಗಿದರು. ಜೊತೆಗೆ ಸಿಹಿ ಹಂಚಿ ಸಂಭ್ರಮಿಸಿದರು. ಬಳಿಕ ಪೊಲೀಸ್ ಬಿಗಿ ಭದ್ರತೆಯಲ್ಲಿ ನಗುನಗುತ್ತಾ ಮುರುಘಾಶ್ರೀ ನಗುನಗುತ್ತಾ ತೆರಳಿದರು. ಮುರುಘಾ ಮಠದ ಮುಂದೆ ಸಾಗುತ್ತಾ ರಸ್ತೆ ಬದಿ ನಿಂತಿದ್ದ ಜನರತ್ತ ಮುರುಘಾಶ್ರೀ ಕೈ ಬೀಸಿದರು.ಇದನ್ನೂ ಓದಿ: ನಾನು ಆರೋಗ್ಯವಾಗಿದ್ದೇನೆ, ಆತಂಕ ಬೇಡ – ಅನಾರೋಗ್ಯದ ಬಗ್ಗೆ ರತನ್ ಟಾಟಾ ಸ್ಪಷ್ಟನೆ
ಈ ವೇಳೆ ಮಾದ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಮುರುಘಾಶ್ರೀ, ಕಾನೂನು ಹೋರಾಟದಲ್ಲಿ ಸತ್ಯಕ್ಕೆ ಜಯ ಸಿಗುವ ನಿರೀಕ್ಷೆಯಿದೆ. ಶರಣಸಂಸ್ಕ್ರತಿ ಉತ್ಸವದ ಸಂಭ್ರಮಾಚರಣೆ ವೇಳೆ ಬಿಡುಗಡೆಯಾಗಿರುವ ಕುರಿತು ನಾವು ಯೋಚಿಸಿ ಹೆಜ್ಜೆಇಡುತ್ತೇವೆ. ಈಗ ಮಾತನಾಡಲು ಸಕಾಲವಲ್ಲ. ಮೌನವಹಿಸುವ ಕಾಲ ಎಂದಷ್ಟೇ ಹೇಳುತ್ತೇವೆ ಎಂದರು.
ಏನಿದು ಪ್ರಕರಣ:
ಚಿತ್ರದುರ್ಗದ (Chitradurga) ಮುರುಘಾಶ್ರೀ ವಿರುದ್ಧ 2022ರ ಆ.26 ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪೋಕ್ಸೊ ಕೇಸ್ ದಾಖಲಾಗಿದ್ದು, ಮುರುಘಾ ಮಠದ ಹಾಸ್ಟೆಲ್‌ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರಿಂದ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಎ1 ಮುರುಘಾಶ್ರೀ, ಎ2 ಲೇಡಿ ವಾರ್ಡನ್ ರಶ್ಮಿ, ಎ3 ಬಸವಾದಿತ್ಯ, ಎ4 ಮ್ಯಾನೇಜರ್ ಪರಮಶಿವಯ್ಯ, ಎ5 ವಕೀಲ ಗಂಗಾಧರಯ್ಯ ವಿರುದ್ಧ ಕೇಸ್ ದಾಖಲಾಗಿತ್ತು.ಇದನ್ನೂ ಓದಿ: ಬಸ್‌ಗೆ ಬೈಕ್ ಅಡ್ಡಬಂದಿದ್ದಕ್ಕೆ ಡ್ರೈವರ್, ನಿರ್ವಾಹಕನ ಜೊತೆ ಬೈಕ್ ಸವಾರನ ಹೊಡೆದಾಟ
ಅದೇ ವರ್ಷ ಆ.27ರಂದು ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ಕೇಸ್ ವರ್ಗಾವಣೆಯಾಗಿದ್ದು, 2022ರ ಸೆ.01 ರಂದು ಎ1 ಮುರುಘಾಶ್ರೀ, ಎ2 ವಾರ್ಡನ್ ರಶ್ಮಿ ಬಂಧನಕ್ಕೊಳಗಾಗಿದ್ದರು. ಬಳಿಕ ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಮುರುಘಾಶ್ರೀ ವಿರುದ್ಧ 2022ರ ಅ.13 ರಂದು ಮಠದ ಅಡುಗೆ ಸಹಾಯಕಿಯಿಂದ ಮತ್ತೊಂದು ದೂರು ದಾಖಲಾಗಿತ್ತು. ಆ ಕೇಸಲ್ಲಿ ತನ್ನಿಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆಯೂ ಲೈಂಗಿಕ ಕಿರುಕುಳ ನೀಡಿರುವುದಾಗಿಯೂ ಎಂದು ಕೂಡ ಉಲ್ಲೇಖಿಸಿದ್ದರು
ಈ ವೇಳೆ ಎ1 ಮುರುಘಾಶ್ರೀ, ಎ2 ವಾರ್ಡನ್ ರಶ್ಮಿ, ಎ3 ಬಸವಾದಿತ್ಯ, ಎ4 ಪರಮಶಿವಯ್ಯ, ಎ5 ವಕೀಲ ಗಂಗಾಧರಯ್ಯ, ಎ6 ಮುರುಘಾಶ್ರೀ ಸಹಾಯಕ ಮಹಾಲಿಂಗ, ಎ7 ಅಡುಗೆಭಟ್ಟ ಕರಿಬಸಪ್ಪ ವಿರುದ್ದ ಕೇಸ್ ದಾಖಲಾಗಿದ್ದು, ಸಂಪೂರ್ಣ ತನಿಖೆ ನಡೆಸಿದ ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಹಾಗೂ ಚಿತ್ರದುರ್ಗ ಡಿವೈಎಸ್ಪಿ ಅನಿಲ್ ಕುಮಾರ್ ನೇತೃತ್ವದ ತಂಡವು 2022ರ ಅ.27 ರಂದು 694 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿತ್ತು. ಅದರಲ್ಲಿ 347 ಪುಟಗಳ ಎ ಮತ್ತು ಬಿ ಎಂದು ಎರಡು ಸೆಟ್ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಇನ್ನೂ 2023ರ ಜ.10ಕ್ಕೆ ದಾಖಲಾದ 2ನೇ ಪೋಕ್ಸೊ ಪ್ರಕರಣದಲ್ಲಿ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು 761 ಪುಟಗಳ ಚಾರ್ಜ್‌ಶೀಟ್‌ನ್ನು ಸಲ್ಲಿಸಿದ್ದರು. ಇಷ್ಟೆಲ್ಲ ಸಾಕ್ಷ್ಯಾಧಾರ ಹಾಗೂ ಚಾರ್ಜ್‌ಶೀಟ್ ಮೇಲೆ ಚಿತ್ರದುರ್ಗ ನ್ಯಾಯಾಲಯ ವಿಚಾರಣೆ ನಡೆಸಿತ್ತು. ವಿಚಾರಣೆ ನಡಯುವಾಗಲೇ 2023ರ ನ.8 ರಂದು ಹೈಕೋರ್ಟ್ ನಿಂದ ಮುರುಘಾಶ್ರೀಗೆ ಷರತ್ತುಬದ್ಧ ಜಾಮೀನು ಮಂಜೂರಾಗಿತ್ತು. ನ.16ರಿಂದು ಜಿಲ್ಲಾ ಕಾರಾಗೃಹದಿಂದ ಮುರುಘಾಶ್ರೀ ಬಿಡುಗಡೆಯಾಗಿದ್ದರು.ಇದನ್ನೂ ಓದಿ: ಫೇಕ್ ಷೇರು ಮಾರ್ಕೆಟ್ ವೆಬ್‌ಸೈಟ್ ಮಾಡಿ ಕೊಟ್ಯಂತರ ರೂ. ವಂಚನೆ – 8 ಸೈಬರ್ ವಂಚಕರು ಅರೆಸ್ಟ್
2ನೇ ಪೋಕ್ಸೋ ಕೇಸಿನಲ್ಲಿ ಜಾಮೀನು ಪಡೆಯದ ಹಿನ್ನೆಲೆಯಲ್ಲಿ ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹಿನ್ನೆಲೆ ಪುನಃ ನ.20ರಂದು ಮಧ್ಯಾಹ್ನ ಮುರುಘಾಶ್ರೀ ಮತ್ತೆ ಬಂಧನಕ್ಕೊಳಗಾದರು. ಬಳಿಕ ಅವರನ್ನು ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ಆಗ ನ.20 ಸಂಜೆ ವೇಳೆಗೆ ಹೈಕೋರ್ಟ್ ಸೂಚನೆ ಮೇರೆಗೆ ಅಂದು ಬಿಡುಗಡೆ ಭಾಗ್ಯ ಸಿಕ್ಕಿತ್ತು.
ಆಗ ಸಂತ್ರಸ್ತೆಯರು ಮುರುಘಾಶ್ರೀಗಳ ಜಾಮೀನು ರದ್ದತಿ ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋದ ಹಿನ್ನೆಲೆಯಲ್ಲಿ ಮುಖ್ಯ ಸಾಕ್ಷ ವಿಚಾರಣೆ ಪೂರ್ಣ ಆಗುವವರೆಗೆ ಮುರುಘಾಶ್ರೀ ಬಂಧನದಲ್ಲಿಡುವಂತೆ ಸುಪ್ರಿಂ ಕೋರ್ಟ್ ಆದೇಶ ಮಾಡಿತ್ತು. ಹೀಗಾಗಿ 2024ರ ಮೇ.27 ರಂದು ಕೋರ್ಟ್ ಎದುರು ಶರಣಾದ ಮುರುಘಾಶ್ರೀಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶಿಸಿತ್ತು.
ಇಂದಿಗೆ ಸಂತ್ರಸ್ತೆಯರಿಬ್ಬರು ಸೇರಿದಂತೆ 13 ಜನರ ಸಾಕ್ಷ ವಿಚಾರಣೆ ಅಂತ್ಯವಾದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಆದೇಶದಂತೆ ಮುರುಘಾಶ್ರೀಗೆ ಇಂದು ಬಿಡುಗಡೆ ಭಾಗ್ಯ ಸಿಕ್ಕಿದೆ. ಇನ್ನು ಕೋರ್ಟ್ ಆದೇಶದಂತೆ ಬಿಡುಗಡೆಯಾದ ಮುರುಘಾಶ್ರೀ ಹೈಕೋರ್ಟ್ ಷರತ್ತಿನ ಅನ್ವಯ ಚಿತ್ರದುರ್ಗ ನಗರದಲ್ಲಿ ನೆಲೆಸದೇ ದಾವಣಗೆರೆಯ (Davanagere) ಶಿವಯೋಗ ಮಂದಿರಕ್ಕೆ ತೆರಳಿದರು.
ಇನ್ನು ಮುರುಘಾಶ್ರೀ ಪರ ಹೈಕೋರ್ಟ್ ವಕೀಲರಾದ ಸಿವಿ ನಾಗೇಶ್ ವಾದ ಮಂಡಿಸಿದ್ದರು. ಇವರಿಗೆ ಚಿತ್ರದುರ್ಗದ ಮುರುಘಾ ಮಠದ ವಕೀಲರಾದ ಕೆನ್ ವಿಶ್ವನಾಥಯ್ಯ, ಉಮೇಶ್ ಹಾಗೂ ಪ್ರತಾಪ್ ಜೋಗಿ ಸಾಥ್ ನೀಡಿದ್ದರು. ಈ ವೇಳೆ ಮುರುಘಾಶ್ರೀ ಬೆಂಬಲಿಗರಾದ ಜಿತೇಂದ್ರ, ವಕೀಲ ಪ್ರತಾಪ್, ಶಿಷ್ಯರಾದ ಬಸವಪ್ರಭು ಶ್ರೀ ಸೇರಿದಂತೆ ಮುರುಘಾಶ್ರೀ ಬೆಂಬಲಿಗರು ಇದ್ದರು.ಇದನ್ನೂ ಓದಿ: ಮೈಕ್ರೋRNA ಆವಿಷ್ಕಾರ – ವಿಕ್ಟರ್, ಗ್ಯಾರಿಗೆ ನೊಬೆಲ್ ಪುರಸ್ಕಾರ
– ಜಾಮೀನು ಆದೇಶ ಬಳಿಕ ಶ್ಯೂರಿಟಿಗಾಗಿ 9 ದಿನಗಳ ಕಾಲ ಪರದಾಡಿದ್ದ ಕುಟುಂಬಸ್ಥರು
ತುಮಕೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಹಿನ್ನೆಲೆ ಜಾಮೀನು ಸಿಕ್ಕ ಬಳಿಕವೂ ಬಿಡುಗಡೆಯಾಗದೇ ಪರದಾಡುತ್ತಿದ್ದ ಮೂವರು ಆರೋಪಿಗಳು ಇಂದು (ಅ.2) ತುಮಕೂರು ಜೈಲಿನಿಂದ (Tumkuru Jail) ಬಿಡುಗಡೆಯಾಗಿದ್ದಾರೆ.
ಎ-16 ಆರೋಪಿ ಕೇಶವಮೂರ್ತಿಗೆ ಹೈಕೋಟ್‌ನಿಂದ ಹಾಗೂ ಎ-15 ಆರೋಪಿ ಕಾರ್ತಿಕ್, ಎ-17 ಆರೋಪಿ ನಿಖಿಲ್‌ಗೆ 57ನೇ ಸಿಸಿಹೆಚ್ ಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಸಿಕ್ಕಿತ್ತು. ಕೋರ್ಟ್ ಆರೋಪಿಗಳ ಕುಟುಂಬಸ್ಥರಿಗೆ 2 ಲಕ್ಷ ರೂ. ಹಣ ಹಾಗೂ ಇಬ್ಬರು ಶೂರಿಟಿದಾರರನ್ನ ಹೊಂದಿಸಲು ಸೂಚಿಸಿತ್ತು. ಆದರೆ ಜಾಮೀನು ಶ್ಯೂರಿಟಿಗೂ ಹಣವಿಲ್ಲದೇ ಆರೋಪಿಗಳ ಕುಟುಂಬಸ್ಥರು ಪರದಾಡುತ್ತಿದ್ದರು.
ಸತತ 9 ದಿನಗಳಿಂದ ಶ್ಯೂರಿಟಿದಾರರು ಸಿಗದೇ ಪರದಾಟ ನಡೆಸಿದ್ದ ಕುಟುಂಬಸ್ಥರಿಗೆ ಮಂಗಳವಾರ ಜಾಮೀನು ಶ್ಯೂರಿಟಿ ಪ್ರಕ್ರಿಯೆ ಪೂರ್ಣಗೊಂಡಿದೆ. ಮಂಗಳವಾರ ರಾತ್ರಿ ತುಮಕೂರು ಜೈಲಾಧಿಕಾರಿಗಳಿಗೆ ಜಮೀನು ಆದೇಶದ ಪ್ರತಿ ಮೇಲ್ ಮೂಲಕ ತಲುಪಿದ್ದು, ಬುಧವಾರ ಎ-16 ಆರೋಪಿ ಕೇಶವಮೂರ್ತಿ, ಎ-15 ಆರೋಪಿ ಕಾರ್ತಿಕ್, ಎ-17 ಆರೋಪಿ ನಿಖಿಲ್ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.ಇದನ್ನೂ ಓದಿ: ಪುಣೆಯಲ್ಲಿ ಹೆಲಿಕಾಪ್ಟರ್ ಪತನ – ಮೂವರು ದುರ್ಮರಣ
ಸೆಪ್ಟೆಂಬರ್ 18 ರಿಯಲ್ ಸ್ಟಾರ್ ಉಪೇಂದ್ರ (Upendra) ಅವರ ಹುಟ್ಟುಹಬ್ಬ. ಈ ದಿನದಂದು ಅವರು ನಟಿಸಿ, ನಿರ್ದೇಶಿಸಿರುವ ಬಹು ನಿರೀಕ್ಷಿತ “UI” ಚಿತ್ರದ ಬಗ್ಗೆ ಮಾತನಾಡಿ, ಹೆಚ್ಚಿನ ಮಾಹಿತಿ ನೀಡಿದ್ದಾರೆ. ಹುಟ್ಟುಹಬ್ಬದ (Birthday) ದಿನ ಅವರ ನಿವಾಸದಲ್ಲಿ ಆಯೋಜಿಸಲಾಗಿದ್ದ “UI” ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ನಟ, ನಿರ್ದೇಶಕ ಉಪೇಂದ್ರ, ನಿರ್ಮಾಪಕರಾದ ಜಿ.ಮನೋಹರನ್, ಕೆ.ಪಿ.ಶ್ರೀಕಾಂತ್, ಸಹ ನಿರ್ಮಾಪಕರಾದ ನವೀನ್, ತುಳಸಿರಾಮ ನಾಯ್ಡು(ಲಹರಿ ವೇಲು), ನಾಯಕಿ ರೀಶ್ಮಾ ನಾಣಯ್ಯ, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್, ಕಲಾ ನಿರ್ದೇಶಕ ಶಿವಕುಮಾರ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ “UI” ಚಿತ್ರದ ವಿಭಿನ್ನ ಪೋಸ್ಟರ್ ಸಹ ಬಿಡುಗಡೆಯಾಗಿದೆ.
ನನ್ನ ಹುಟ್ಟುಹಬ್ಬಕ್ಕೆ ಹಾರೈಸಿರುವ ಪ್ರತಿಯೊಬ್ಬರಿಗೂ ಧನ್ಯವಾದ ಎಂದು ಮಾತನಾಡಿದ ಉಪೇಂದ್ರ ಅವರು, ಐದಾರು ಮದುವೆ ಆಗಬಹುದು. ಆದರೆ ಒಂದು ಚಿತ್ರ ನಿರ್ದೇಶನ ಮಾಡುವುದು ಅದಕ್ಕಿಂತ ಕಷ್ಟ. ಇನ್ನೂ ನಾನು ಬಹಳ ವರ್ಷಗಳ ನಂತರ ನಿರ್ದೇಶಿಸಿರುವ “UI” ಚಿತ್ರ ಬಿಡುಗಡೆಯ ಹಂತಕ್ಕೆ ತಲುಪಿದೆ. ಚಿತ್ರವನ್ನು ಅದ್ದೂರಿಯಾಗಿ ನಿರ್ಮಿಸಿರುವ ನಿರ್ಮಾಪಕರು ಅಕ್ಟೋಬರ್ ನಲ್ಲಿ ತೆರೆಗೆ ತರುವ ಪ್ರಯತ್ನದಲ್ಲಿದ್ದಾರೆ. ತಾಂತ್ರಿಕ(ಟೆಕ್ನಿಕಲ್) ಕಾರ್ಯಗಳು ಹೆಚ್ಚಾಗಿರುವುದು ಹಾಗೂ ಸಿನಿಮಾ ಕನ್ನಡ ಸೇರಿದಂತೆ ಬಹು ಭಾಷೆಗಳಲ್ಲಿ ಬರುತ್ತಿರುವುದರಿಂದ ಬಿಡುಗಡೆ ಸ್ವಲ್ಪ ವಿಳಂಬವಾಗುತ್ತಿದೆ. ಜನರು ಯಾವಗಲೂ ನನಗೆ ತಲೆಯಲ್ಲಿ ಹುಳ ಬಿಡುತ್ತೀರಾ ಎನ್ನುತ್ತಾರೆ. ಅದರೆ ಈ ಚಿತ್ರದಲ್ಲಿ ಹುಳ ತೆಗೆಯುವ ಕೆಲಸ ಮಾಡುತ್ತಿದ್ದೇನೆ. ಪ್ರೇಕ್ಷಕರು ನಮಗಿಂತ ತುಂಬಾ ಬುದ್ದಿವಂತರು. ಅವರ ನಿರೀಕ್ಷೆ ಹೆಚ್ಚು ಇರುತ್ತದೆ. ಅದಕ್ಕೆ ತಕ್ಕ ಹಾಗೆ ಸಿನಿಮಾ ಮಾಡುವ ಜವಾಬ್ದಾರಿ ನಮ್ಮ ಮೇಲಿರುತ್ತದೆ. ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್, ಕಲಾ ನಿರ್ದೇಶಕ ಶಿವಕುಮಾರ್ ಸೇರಿದಂತೆ ಎಲ್ಲಾ ತಂತ್ರಜ್ಞರ ಹಾಗೂ ಕಲಾವಿದರ ಸಹಕಾರದಿಂದ “UI” ಉತ್ತಮ ಚಿತ್ರವಾಗಿ ಬರಲಿದೆ ಎಂದರು.
ಉಪೇಂದ್ರ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿ ಮಾತನಾಡಿದ ನಿರ್ಮಾಪಕ ಜಿ.ಮನೋಹರನ್, ಇದು ಪ್ಯಾನ್ ಇಂಡಿಯಾ ಚಿತ್ರವಾಗಿರುವುದರಿಂದ ಬಿಡುಗಡೆ ಸ್ವಲ್ಪ ತಡವಾಯಿತು.ಅಕ್ಟೋಬರ್ ನಲ್ಲಿ ಚಿತ್ರ ತೆರೆಗೆ ಬರಲಿದೆ ಎಂದು ತಿಳಿಸಿದರು. 25 ವರ್ಷಗಳ ನನ್ನ ಸಿನಿ ಜರ್ನಿಯಲ್ಲಿ ಶಿವಣ್ಣ ಅವರ ಜೊತೆಗಿನ ಒಡನಾಟ ಹಾಗೂ ಉಪೇಂದ್ರ ಅವರು ನಮ್ಮ ಬ್ಯಾನರ್ ನ ಚಿತ್ರವನ್ನು ನಿರ್ದೇಶಿಸಿರುವುದು ನನಗೆ ತುಂಬಾ ಖುಷಿಕೊಟ್ಟ ವಿಚಾರ. ಎಲ್ಲರಂತೆ ನಾನು ಉಪೇಂದ್ರ ಅವರ ನಿರ್ದೇಶನಕ್ಕೆ ಅಭಿಮಾನಿ. ಈ ಚಿತ್ರವನ್ನು ತೆರೆಯ ಮೇಲೆ ನೋಡುವ ಕಾತುರ ಅವರ ಅಭಿಮಾನಿಗಳಂತೆ ನನಗೂ ಇದೆ. ಸದ್ಯದಲ್ಲೇ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡುತ್ತೇವೆ ಎಂದರು ನಿರ್ಮಾಪಕ ಕೆ.ಪಿ.ಶ್ರೀಕಾಂತ್.
ಸಹ ನಿರ್ಮಾಪಕರಾದ ನವೀನ್, ತುಳಸಿರಾಮ ನಾಯ್ಡು(ಲಹರಿ ವೇಲು), ನಾಯಕಿ ರೀಶ್ಮಾ ನಾಣಯ್ಯ, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಹಾಗೂ ಕಲಾ ನಿರ್ದೇಶಕ ಶಿವಕುಮಾರ್ ಅವರು “UI” ಚಿತ್ರದ ಬಗ್ಗೆ ಮಾತನಾಡಿದರು.
ವಿಶ್ವಕರ್ಮ ಸಿನಿಮಾಸ್ ಲಾಂಛನದಲ್ಲಿ ಈರಣ್ಣ ಸುಭಾಷ್ ಬಡಿಗೇರ್ ನಿರ್ಮಿಸಿರುವ, ಸಿದ್ದುವಜ್ರಪ್ಪ ನಿರ್ದೇಶನದ ಹಾಗೂ ರಾಜ್ ಪ್ರವೀಣ್ ನಾಯಕನಾಗಿ ನಟಿಸಿರುವ “ರಾವುತ” ಚಿತ್ರದ ಹಾಡುಗಳು ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಕಾಂಗ್ರೆಸ್ ಮುಖಂಡ ಹೆಚ್ ಎಂ ರೇವಣ್ಣ ‘ರಾವುತ’ (Ravuta) ಚಿತ್ರದ ಹಾಡುಗಳನ್ನು (Songs) ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಸಿರಿ ಮ್ಯೂಸಿಕ್ ನಲ್ಲಿ ಈ ಚಿತ್ರದ ಹಾಡುಗಳು ಬಿಡುಗಡೆಯಾಗಿದೆ. ಹಾಡುಗಳ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
ಇದು ನನ್ನ ಮೊದಲ ನಿರ್ದೇಶನದ ಚಿತ್ರ ಎಂದು ಮಾತನಾಡಿದ ನಿರ್ದೇಶಕ ಸಿದ್ದು ವಜ್ರಪ್ಪ, ಇದು ಸಾವಿನ ನಂತರ ನಡೆಯುವ ಕಥೆ. ಈ ಕುರಿತು ನಾನು ಪುಸ್ತಕಗಳನ್ನು ಓದಿ ತಿಳಿದುಕೊಂಡಿದ್ದೇನೆ. ಗರುಡ ಪುರಾಣದ ಕೆಲವು ಅಂಶಗಳು ಹಾಗೂ ನಾನು ಚಿಕ್ಕವಯಸ್ಸಿನಲ್ಲಿ ಕಂಡಿದ್ದ ಕೆಲವು ಘಟನೆಗಳು ಈ ಕಥೆಗೆ ಸ್ಪೂರ್ತಿ. ಚಿತ್ರದ ನಾಯಕನಾಗಿ ರಾಜ್ ಪ್ರವೀಣ್ ಅಭಿನಯಿಸಿದ್ದಾರೆ. ಶಿವಬಸವ ಹಾಗೂ ಬಲ್ಲವ ಎರಡು ಪಾತ್ರಗಳಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ನಾಯಕಿ ಭವಾನಿ ಪುರೋಹಿತ್ ಅವರು ಎರಡು ಶೇಡ್ ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಮೂರು ಹಾಡುಗಳಿದ್ದು ಸುಚಿನ್ ಶರ್ಮ ಸಂಗೀತ ನೀಡಿದ್ದಾರೆ. ವಿನಯ್ ಗೌಡ ಈ ಚಿತ್ರದ ಛಾಯಾಗ್ರಹಕರು. ಇತ್ತೀಚೆಗೆ ಚಿತ್ರದ ಸೆನ್ಸಾರ್ ಸಹ ಮುಗಿದಿದ್ದು, ಮಂಡಳಿಯಿಂದ ಚಿತ್ರಕ್ಕೆ ಮೆಚ್ಚುಗೆ ಮಾತುಗಳು ಕೇಳಿಬಂದಿದೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದೆ ಎಂದರು.
ಇದು ನನ್ನ ಅಭಿನಯದ ಮೂರನೇ ಚಿತ್ರ. ನಿರ್ದೇಶಕರು ಹಾಗೂ ನನ್ನದು ಎಂಟು ವರ್ಷಗಳ ಗೆಳೆತನ. ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ಕಥೆ ಮೆಚ್ಚಿ, ಅವಕಾಶ ನೀಡಿದ ನಿರ್ಮಾಪಕರಿಗೆ ಧನ್ಯಾವಾದ. ನಿರ್ದೇಶಕರು ಹೇಳಿದ ಹಾಗೆ ನಾನು ಈ ಚಿತ್ರದಲ್ಲಿ ಎರಡಲ್ಲ, ಮೂರು ಶೇಡ್ ಗಳಲ್ಲಿ ಕಾಣಿಸಿಕೊಂಡಿದ್ದೇನೆ ಎಂದರು ನಾಯಕ ರಾಜ್ ಪ್ರವೀಣ್.
ನಾನು ಮೂಲತಃ ಐಟಿ ಉದ್ಯೋಗಿ. ನಿರ್ದೇಶಕರು ಹೇಳಿದ ಕಥೆ ಇಷ್ಟವಾಗಿ ಸಿನಿಮಾ ನಿರ್ಮಾಣಕ್ಕೆ ಮುಂದಾದೆ. ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಈರಣ್ಣ ಸುಭಾಷ್ ಬಡಿಗೇರ್. ನಾಯಕಿ ಭವಾನಿ ಪುರೋಹಿತ್, ಸಂಗೀತ ನಿರ್ದೇಶಕ ಸುಚಿನ್ ಶರ್ಮ, ಸಿರಿಚಿಕ್ಕಣ್ಣ, ರಾಘವ್ ಗೌಡಪ್ಪ, ಮಾರೇಶ್, ನರಸಿಂಹ ಹಾಗೂ ಹರ್ಷ ವರ್ಧನ್ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.
ಹೊನ್ನರಾಜ್ ನಿರ್ದೇಶನದ ‘ಮಿಸ್ಟರ್ ಅಂಡ್ ಮಿಸಸ್’ (Mr. and Mrs. Raja Huli) ರಾಜಾಹುಲಿ ಚಿತ್ರವೀಗ ಸಿದ್ದವಾಗಿದೆ. ಹೊನ್ನರಾಜ್ ಮೊದಲ ಬಾರಿಗೆ ಆಕ್ಷನ್ ಕಟ್ ಹೇಳುವ ಜೊತೆಗೆ ಚಿತ್ರದ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಅಲ್ಲದೆ ನಿರ್ಮಾಣವನ್ನೂ ಮಾಡಿದ್ದಾರೆ. ಈ ಚಿತ್ರದ ನೂತನ ಪೋಸ್ಟರನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗಡೆ ಧರ್ಮಸ್ಥಳದಲ್ಲಿ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ನಾಯಕ ಹೊನ್ನರಾಜ್, ರಾಜೇಂದ್ರ, ನಂದಿಹಳ್ಳಿ ಶಿವಣ್ಣ, ಜಗದೀಶ್ , ಸಹನಿರ್ದೇಶಕ ಪ್ರಕಾಶ್ ವೆಂಕಟರಮಣ, ಸ್ಟಿಲ್ ವೆಂಕಟೇಶ್, ಮೋಹನ್, ಜಗನ್ನಾಥ್ ಇತರರಿದ್ದರು. ನೈಜ ಘಟನೆಯನ್ನು ಆಧರಿಸಿ ನಿರ್ಮಾಣವಾಗಿರುವ ಫ್ಯಾಮಿಲಿ ಎಂಟರ್ ಟೈನ್ ಮೆಂಟ್ ಚಿತ್ರ ಇದಾಗಿದೆ. ಇಲ್ಲಿ ನಾಯಕ ಯಶ್ ಅಭಿಮಾನಿ, ಸ್ನೇಹಕ್ಕೆ ಹೆಚ್ಚು ಬೆಲೆ ಕೊಡುವವನು, ಸದಾ ಸಮಾಜ ಸೇವೆಯಲ್ಲಿ ತೊಡಗಿರುವ ನಾಯಕ ಮದುವೆ ಆಗ್ತಾನೋ ಇಲ್ಲವೋ, ಎನ್ನುವುದೇ ಚಿತ್ರದ ಕಥಾಹಂದರ.
ಈ ಚಿತ್ರಕ್ಕೆ ಮದ್ದೂರು, ಹುಳಿಯಾರು, ಚಿಕ್ಕನಾಯಕನಾಹಳ್ಳಿ, ಶ್ರೀರಂಗಪಟ್ಟಣದ ಸುತ್ತಮುತ್ತ ಚಿತ್ರೀಕರಿಸಲಾಗಿದೆ. ನಾಯಕಿ ಶೃತಿ ಬಬಿತ ಬಜಾರಿ ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ. ಸಂಜಯ್ ಶ್ರೀನಿವಾಸ್ ನಿರ್ಮಾಣದಲ್ಲಿ ಕೈಜೋಡಿಸಿದ್ದಾರೆ. ವಿನು ಮನಸು ಅವರ ಸಂಗೀತ, ಶಿವಪುತ್ರ ಅವರ ಛಾಯಾಗ್ರಹಣ, ಗಿರೀಶ್ ಅವರ ನೃತ್ಯ ನಿರ್ದೇಶನಈ ಚಿತ್ರಕ್ಕಿದೆ. ಮೈಸೂರು ಮಂಜುಳ , ರೇಖಾದಾಸ್ ಮತ್ತಿತರರು ಈ ಚಿತ್ರದಲ್ಲಿದ್ದಾರೆ.
ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ ’ಲೈಫ್ ಆಫ್ ಮೃದುಲ’ (Life of Mridala) ಚಿತ್ರವನ್ನು ಮದನ್ ಮೂವೀಸ್ ಬ್ಯಾನರ್ ಅಡಿಯಲ್ಲಿ ಮದನ್‌ಕುಮಾರ್.ಸಿ ನಾಯಕ ಮತು ನಿರ್ಮಾಪಕ. ಸಂಭಾಷಣೆ ಬರೆದಿರುವ ಯೋಗಿದೇವಗಂಗೆ ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ. ಇವರೊಂದಿಗೆ ತೇಜಸ್ವಿನಿ.ಆರ್.ಗೌಡ ಪ್ರೋತ್ಸಾಹವಿದೆ. ಹಲವು ನಿರ್ದೇಶಕರ ಬಳಿ ಕೆಲಸ ಕಲಿತಿರುವ ಕೋಲಾರದ ಚೇತನ್ ತ್ರಿವೇಣ್ ಸಿನಿಮಾಕ್ಕೆ ರಚನೆ,ಚಿತ್ರಕಥೆ, ಸಾಹಸ ಹಾಗೂ ಆಕ್ಷನ್ ಕಟ್ ಹೇಳಿದ್ದಾರೆ. ಕಳೆದ ತಿಂಗಳು ಹಾಡುಗಳು ಹೊರಬಂದಿದ್ದು, ಎಲ್ಲಾ ಕಡೆ ಸದ್ದು ಮಾಡುತ್ತಿದೆ. ಈಗ ಪ್ರಚಾರದ ಎರಡನೇ ಹಂತವಾಗಿ ಟ್ರೇಲರ್ ಬಿಡುಗಡೆ ಸಮಾರಂಭವು ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ಹಿರಿಯ ನಟ ದತ್ತಣ್ಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಮೈಕ್ ತೆಗೆದುಕೊಂಡ ದತ್ತಣ್ಣ, ಇವತ್ತಿನ ಕಾಲಘಟ್ಟದಲ್ಲಿ ನಾವು ಒಳ್ಳೆ ಸಿನಿಮಾ ಮಾಡಿದ್ದೇವೆ. ಹೇಗಿರಬಹುದು ಎನ್ನುವ ಕುತೂಹಲವನ್ನು ಕೆರಳಿಸಲಿಕ್ಕೆ ಟ್ರೇಲರ್ ಅಂತ ಲಾಂಚ್ ಮಾಡುತ್ತಾರೆ. ಸೀಮಿತ ಉದ್ದೇಶದಿಂದ ಇಡೀ ವಿಚಾರವನ್ನು ಹೇಳುವ ಅಗತ್ಯವಿಲ್ಲ. ಎರಡ ಗಂಟೆ ಚಿತ್ರವನ್ನು ಎರಡು ನಿಮಿಷದಲ್ಲಿ ತೋರಿಸುವ ಪ್ರಕ್ರಿಯೆ, ಅದೇ ಸೃಜನಾತ್ಮಕ ಕಾರ್ಯವಿಧಾನವಾಗಿದೆ. ಇದರಲ್ಲಿ ನಿರ್ದೇಶಕ ಮತ್ತು ಸಂಕಲನಕಾರನ ಶ್ರಮ ನಿಜಕ್ಕೂ ಶ್ಲಾಘನೀಯ. ಅದಕ್ಕಾಗಿ ಮೆಚ್ಚುಗೆ ವ್ಯಕ್ತಪಡಿಸಬೇಕು. ಟ್ರೇಲರ್ ಪೂರಕವಾಗಿದ್ದು, ಸಿನಿಮಾ ನೋಡಬೇಕು ಅನಿಸೋ ರೀತಿಯಲ್ಲಿ ಸಿದ್ದ ಪಡಿಸಿದ್ದಾರೆ. ಮಾತು ಮುಂದುವರೆಸುತ್ತಾ, ನಾನೊಬ್ಬ ಕೆಟ್ಟ ವಿಮರ್ಶಕ. ಅಷ್ಟು ಸುಲಭವಾಗಿ ಒಪ್ಪಿಕೊಳ್ಳುವವನಲ್ಲ. ನಿರ್ದೇಶಕರು ಬೈಟ್ಸ್ ಕೊಡಬೇಕೆಂದು ಕೋರಿಕೊಂಡರು. ಚಿತ್ರ ನೋಡಿದ ಮೇಲೆ ಕೊಡುತ್ತೇನೆಂದು ಷರತ್ತು ಹಾಕಿದೆ. ನಂತರ ಎರಡು ಗಂಟೆ ಸಿನಿಮಾ ನನ್ನನ್ನು ನೋಡಿಸಿಕೊಂಡು ಹೋಯಿತು. ಈ ನೋಡಿಸಿಕೊಂಡು ಹೋಗುವುದು. ಅದು ಮೊದಲ ಶಕ್ತಿ. ಪುಸ್ತಕ ನೋಡುವಾಗ ಓದಿಸಿಕೊಂಡು ಹೋಗುತ್ತೆ. ಸಂಗೀತ ಕೇಳುವಾಗ ನಮ್ಮನ್ನು ಬೇರೆ ಲೋಕಕ್ಕೆ ಕರೆದುಕೊಂಡು ಹೋಗುವ ರೀತಿಯಲ್ಲಿ ಮಾಡಿದ್ದಾರೆ. ಹೆಣ್ಣಿನ ತೊಳಲಾಟ, ಮಾನವೀಯ ಮುಖಗಳನ್ನು ರಕ್ಷಣೆ ಮಾಡುವ ರೀತಿಯನ್ನು ಜನರಿಗೆ ತಲುಪಿಸುವ ಪ್ರಯತ್ನ ಮಾಡಲಾಗಿದೆ. ಚಿತ್ರವು ಗಾಢವಾಗಿ ಮನಸ್ಸಿಗೆ ತಟ್ಟುತ್ತದೆ. ಹೊಸಬರಾಗಿದ್ದರೂ ಕಲಾವಿದರ ಪ್ರತಿಭೆಯಲ್ಲಿ ಕೊರತೆ ಕಂಡು ಬಂದಿಲ್ಲ. ಮುಂದಿನ ದಿನಗಳಲ್ಲಿ ತೆರೆಗೆ ಬಂದಾಗ, ಅಲ್ಲಿ ಅವಕಾಶ ಸಿಕ್ಕರೆ ಮತ್ತಷ್ಟು ಮಾತನಾಡುವೆನೆಂದು ದತ್ತಣ್ಣ ವಿರಾಮ ತೆಗೆದುಕೊಂಡರು. ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಹರಿಪರಾಕ್ ಉಪಸ್ತಿತರಿದ್ದರು.
ಕಾಲ್ಪನಿಕ ಡಾರ್ಕ್ ಡ್ರಾಮಾ ಜಾನರ್‌ನ ಕಥೆಯಾಗಿದ್ದು, ಮೃದುಲಾ ಎಂಬುವಳ ಜೀವನದಲ್ಲಿ ಎದುರಾಗುವ ಮೂರು ವಿಭಿನ್ನ ಕಾಲ ಘಟ್ಟಗಳು ಬರುತ್ತದೆ. ಆಕೆಗೆ ಬದುಕಲ್ಲಿ ಅನಿರೀಕ್ಷಿತವಾಗಿ ಬರುವ ಸವಾಲನ್ನು ಯಾವ ರೀತಿ ಎದುರಿಸುತ್ತಾಳೆ ಎಂಬುದನ್ನು ಕುತೂಹಲ ತಿರುವುಗಳ ಮೂಲಕ ಥ್ರಿಲ್ಲರ್ ರೂಪದಲ್ಲಿ ತೋರಿಸಲಾಗಿದೆ.
ನಾಯಕಿಯಾಗಿ ಪೂಜ ಲೋಕಪುರ್. ತಾರಾಗಣದಲ್ಲಿ ಆಶಾಸುಜಯ್, ಶಶಾಂಕ್, ಕುಲದೀಪ್, ಯೋಗಿದೇವಗಂಗೆ, ತೇಜಸ್ವಿನಿ.ಆರ್.ಗೌಡ, ಅನೂಪ್‌ಥಾಮಸ್, ಪ್ರೀತಿಚಿದಾನಂದ್, ಶರೀಫ್ ಮುಂತಾದವರು ನಟಿಸಿದ್ದಾರೆ. ಸಂಗೀತ ರಾಹುಲ್.ಎಸ್.ವಾಸ್ತರ್, ಛಾಯಾಗ್ರಹಣ ಅಚ್ಚುಸುರೇಶ್, ಸಂಕಲನ ವಸಂತಕುಮಾರ್.ಕೆ ಅವರದಾಗಿದೆ. ಬೆಂಗಳೂರು, ಕುಂದಾಪುರ ಸುಂದರ ತಾಣಗಳಲ್ಲಿ ೨೫ ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ
ದರ್ಶನ್ ಬಿಡುಗಡೆಗಾಗಿ ಅವರ ಫ್ಯಾನ್ಸ್ ಮತ್ತು ಕುಟುಂಬ ಹಲವಾರು ದಿನಗಳಿಂದ ಕಾಯ್ತಿದ್ದಾರೆ. ದರ್ಶನ್ ಬಿಡುಗಡೆಗಾಗಿ ದೇವರ ಮೊರೆ ಕೂಡ ಹೋಗಿದ್ದಾರೆ. ನಾಡಿನ ಕೆಲ ಶಕ್ತಿ ದೇವತೆಗಳು ಬಿಡುಗಡೆಗಾಗಿ ಭವಿಷ್ಯ ನುಡಿದಿವೆ. ಈಗ ಮತ್ತೊಂದು ದೈವ ದರ್ಶನ್ ಬಿಡುಗಡೆಯ ಭವಿಷ್ಯ ನುಡಿದಿದ್ದು, ಕರಾರುವಕ್ಕಾದ ಸಮಯವನ್ನೂ ಅದು ಭವಿಷ್ಯ ನುಡಿದಿದೆ.
ಈವರೆಗೂ ದರ್ಶನ್ ಕುಟುಂಬ ಮತ್ತು ಫ್ಯಾನ್ಸ್ ಮಾತ್ರ ದೇವರ ಮೊರೆ ಹೋಗಿದ್ದರು. ಈಗ ಬೆಂಗಳೂರಿನ ದೇವಸ್ಥಾನವೊಂದರ ಅರ್ಚಕರೇ ದರ್ಶನ್ ಯಾವಾಗ ಬಿಡುಗಡೆಯಾಗ್ತಾರೆ ಅಂತ ದೈವ ಮೊರೆ ಹೋಗಿದ್ದಾರೆ. ಅವರು ಕುಟ್ಟೊ ಕಲ್ಲು ಮೂಲಕ ಬರೆದು ಹೇಳೋ ಭವಿಷ್ಯ ಕೇಳಿದ್ದಾರೆ.
ಬೆಂಗಳೂರಿನ ಬಾಪೂಜಿನಗರದ ಶಾರದಾಂಬೆ ದೇವಸ್ಥಾನದ ಅರ್ಚಕರ ಮಗಳಿಂದ ಭವಿಷ್ಯ ಹೇಳಿಸಲಾಗಿದ್ದು, ಎರಡು ತಿಂಗಳೊಳಗೆ ದರ್ಶನ್ ಬಿಡುಗಡೆಯಾಗ್ತಾರೆ ಅಂತ ಭವಿಷ್ಯ ನುಡಿಯಲಾಗಿದೆ. ಓಂ ಶಕ್ತಿ ಶಾರದಾಂಬೆಯೇ ಕಲ್ಲು ಮೂಲಕ ಭವಿಷ್ಯ ಬರೆಸಿದ್ದಾಗೆ ಹೇಳಿದ್ದಾರೆ ದೇವಸ್ಥಾನದ ಅರ್ಚಕರು.
ದರ್ಶನ್ ಮೀನಾ ರಾಶಿಯಲ್ಲಿದ್ದಾರೆ. ಟೈ ಸರಿಯಿಲ್ಲ. ಗ್ರಹಗತಿಗಳು ಸರಿಯಿಲ್ಲ. ಒಂದುವರೆ, ಎರಡು ತಿಂಗಳೊಳಗೆ ಜೈಲಿಂದ ಹೊರ ಬರ್ತಾರೆ. ಗುರುಬಲ ಇಲ್ಲ. ಕೆಟ್ಟ ದೆಸೆ ನಡೆಯುತ್ತಿದೆ. ಶನಿ ಮಹಾತ್ಮನು ಆಸ್ಥಾನದಲ್ಲಿ ಬಂದು ಕೂತಿದ್ದಾನೆ. ಆರ್ ಆರ್ ನಗರದ ದರ್ಶನ ನಿವಾಸಕ್ಕೆ ವಾಸ್ತು ದೋಷವಿದೆ. ಮನೆಯ ಮೂಲೆ ಸರಿಯಿಲ್ಲ ಅಂತ ಭವಿಷ್ಯ ನುಡಿದಿದೆ.
ಕಿರುತೆರೆಯ ಮುರುಗ ಖ್ಯಾತಿಯ ನಟ ಮುನಿಕೃಷ್ಣ ನಾಯಕನಾಗಿ ನಟಿಸಿದ್ದ ಕೊಡೆಮುರುಗ ಚಿತ್ರ ಅದ್ಭುತ ಯಶಸ್ಸು ಕಂಡಿತ್ತು. ಆ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಮುನಿಕೃಷ್ಣ ಅವರೀಗ ತಮ್ಮ ಎರಡನೇ ಚಿತ್ರವನ್ನು ತೆರೆಗೆ ತರಲು ಹೊರಟಿದ್ದಾರೆ. ಆ ಚಿತ್ರದ ಹೆಸರು ‘ಮುರುಗ ಸನ್ ಆಫ್ ಕಾನೂನು’. (Murugan Son of Law) ಚಿತ್ರದಲ್ಲಿ ಮುನಿಕೃಷ್ಣ ಅವರು ನಾಯಕನಾಗಿ ನಟಿಸುವ ಜೊತೆಗೆ ತಮ್ಮ ಎ.ಎಸ್.ಎ. ಪ್ರೊಡಕ್ಷನ್ ಬ್ಯಾನರ್‌ನಲ್ಲಿ ನಿರ್ಮಾಣ ಕೂಡ ಮಾಡಿದ್ದಾರೆ. ಇತ್ತೀಚೆಗಷ್ಟೇ ಈ ಚಿತ್ರದ ಟ್ರೈಲರ್‌ನ್ನು (Trailer) ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಎಸ್.ಎ. ಚಿನ್ನೆಗೌಡರು ಬಿಡುಗಡೆ ಮಾಡಿದರು. ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ಹೂವಿನ ಹಡಗಲಿ ಶಾಸಕ ಕೃಷ್ಣನಾಯಕ್, ಹಿರಿಯ ನಟಿ ಪ್ರೇಮಾ ಹಾಗೂ ಟಾಲಿವುಡ್ ನಟಿ ಮಿಸ್ ಎಡಿನ್ ರೋಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಈ ಚಿತ್ರವನ್ನು ವಿಜಯ್ ಪ್ರವೀಣ್ ನಿರ್ದೇಶನ ಮಾಡಿದ್ದಾರೆ.
ಜಾಗ ಕೇಳಿಕೊಂಡು ಊರಿಗೆ ಬರುವ ಖಳನಾಯಕ ನಂತರ ಇಡೀ ಊರನ್ನೇ ತನ್ನ ಕಬ್ಜ ಮಾಡಿಕೊಳ್ಳುತ್ತಾನೆ. ಮುರುಗನ ತಂದೆಯನ್ನೂ ಕೊಲೆ ಮಾಡಿಸುತ್ತಾನೆ. ನಂತರ ಎಲ್.ಎಲ್.ಬಿ.ಓದಿಕೊಂಡಿದ್ದ ಮುರುಗ ಹೇಗೆ ಕಾನೂನಾತ್ಮಕವಾಗಿ ತನ್ನ ಜಾಗದ ಜೊತೆಗೆ ಊರನ್ನೂ ಉಳಿಸಿಕೊಳ್ಳುತ್ತಾನೆ ಎಂಬುದೇ ಮುರುಗ ಸನ್ ಆಫ್ ಕಾನೂನು ಚಿತ್ರದ ಕಥಾಹಂದರ. ಆನೇಕಲ್, ಮಲ್ಪೆ, ಬೆಂಗಳೂರು ಸುತ್ತಮುತ್ತ 62 ದಿನಗಳ ಕಾಲ ಈ ಚಿತ್ರದ ಚಿತ್ರೀಕರಣ ನಡೆಸಲಾಗಿದೆ.
ವೇದಿಕೆಯಲ್ಲಿ ನಿರ್ದೇಶಕ ವಿಜಯ್ ಮಾತನಾಡಿ ನನ್ನ ನಿರ್ದೇಶನದ 5ನೇ ಚಿತ್ರವಿದು. ಪುನೀತ್ ರಾಜಕುಮಾರ ಅವರು ನಮ್ಮ ಚಿತ್ರದ ಟೈಟಲ್ ಲಾಂಚ್ ಮಾಡಿಕೊಟ್ಟಿದ್ದರು. ಇದೊಂದು ಔಟ್ ಆಂಡ್ ಔಟ್ ಕಾಮಿಡಿ ಸಿನಿಮಾ’ ಎಂದು ಹೇಳಿದರು. ನಂತರ ಮಾತನಾಡಿದ ಮುನಿಕೃಷ್ಣ ‘ ಶೀರ್ಷಿಕೆ ಗೀತೆಯನ್ನು ಅಪ್ಪು ಸರ್ ಹಾಡಬೇಕಿತ್ತು. 10 ದಿನ ಶೂಟ್ ಆದಮೇಲೆ ಸಿನಿಮಾ ನಿಂತುಹೋಗಿತ್ತು. ಪುನೀತ್ ಅವರು ಹರಸಿದ ಸಿನಿಮಾ ನಿಲ್ಲಬಾರದೆಂದು ಸ್ವಂತ ಮನೆ ಮಾರಿ ಕಷ್ಟಪಟ್ಟು ಸಿನಿಮಾ ಮುಗಿಸಿದ್ದೇನೆ. ಮುಂದಿನ ತಿಂಗಳು ರಿಲೀಸ್ ಮಾಡುವ ಪ್ಲ್ಯಾನ್ ಇದೆ. ಚಿತ್ರದಲ್ಲಿ ಮೂವರು ನಾಯಕಿಯರಿದ್ದಾರೆ ಎಂದರು.
ನಟಿ ಪ್ರೇಮಾ ಮಾತನಾಡಿ ಟ್ರೇಲರ್ ನೋಡಿ ತುಂಬಾ ಖುಷಿ ಆಯ್ತು. ಈ ಚಿತ್ರದಿಂದ ನಿರ್ಮಾಪಕರಿಗೆ 10 ಮನೆ ಕೊಳ್ಳುವ ಶಕ್ತಿ ಬರಲಿ’ ಎಂದು ಶುಭ ಹಾರೈಸಿದರು. ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಚಿನ್ನೆಗೌಡ ಮಾತನಾಡಿ, ‘ಅಪ್ಪು ಹಾರೈಸಿದ ಸಿನಿಮಾ ಆಗಿದ್ದರಿಂದ ನಿರ್ಮಾಪಕರು ಹಟದಿಂದ ಸಿನಿಮಾ ಮಾಡಿದ್ದಾರೆ. ಟ್ರೇಲರ್ ಚನ್ನಾಗಿದೆ. ತಂಡಕ್ಕೆ ಒಳ್ಳೆಯದಾಗಲಿ’ ಎಂದರು.
ನಾಯಕಿ ಮಮತಾ ರಾವುತ್ ಮಾತನಾಡಿ ‘ನಾನು ಮದುವೆಯಾದ 15 ದಿನಗಳಲ್ಲಿ ಈ ಚಿತ್ರದ ಆಫರ್ ಬಂತು. ತುಂಬಾ ವರ್ಷಗಳಿಂದ ಹಳ್ಳಿ ಹುಡುಗಿಯ ಪಾತ್ರ ಮಾಡುವ ಆಸೆ ಇತ್ತು. ಅದು ಈ ಚಿತ್ರದಿಂದ ಈಡೇರಿದೆ’ ಎಂದರು. ಮತ್ತೋರ್ವ ನಾಯಕಿ ಕಿರಣ್ ಯೋಗೇಶ್ವರ ಸಹ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು. ಈ ಹಿಂದೆ ನಾಯಕನಾಗಿ ನಟಿಸಿದ್ದ ಧನ್‌ವೀರ್ ಈ ಚಿತ್ರದಲ್ಲಿ ಖಳನಟನಾಗಿ ಕಾಣಿಸಿಕೊಂಡಿದ್ದು ತನ್ನ ಪಾತ್ರದ ಕುರಿತಂತೆ ಹೇಳಿದರು. ಉಳಿದಂತೆ ಹಿರಿಯ ಕಲಾವಿದ ಎಂ.ಎಸ್. ಉಮೇಶ್, ಸಾಹಸ ನಿರ್ದೇಶಕ ಕೌರವ್ ವೆಂಕಟೇಶ್ ಮಾತನಾಡಿದರು. ಶೋಭ ರಾಜ್, ಥ್ರಿಲ್ಲರ್ ಮಂಜು, ರಮೇಶ್ ಭಟ್ ಉಳಿದ ತಾರಾಗಣದಲ್ಲಿದ್ದಾರೆ.
ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut) ನಟನೆಯ ‘ಎಮರ್ಜೆನ್ಸಿ’ (Emergency) ಸಿನಿಮಾ ನವೆಂಬರ್ 24ರಂದು ರಿಲೀಸ್ (Release) ಆಗಬೇಕಿತ್ತು. ಆದರೆ, ಕಾರಣಾಂತರಗಳಿಂದ ಬಿಡುಗಡೆ ದಿನಾಂಕವನ್ನು ಮುಂದಕ್ಕೆ ಹಾಕಿದ್ದರು ಕಂಗನಾ. ಈ ಕುರಿತು ಅವರು ಸೋಷಿಯಲ್ ಮೀಡಿಯಾದಲ್ಲಿ ಈ ಹಿಂದೆಯೇ ಬರೆದುಕೊಂಡಿದ್ದರು. ‘ನಾವು ಘೋಷಿಸಿದ ತಿಂಗಳಲ್ಲಿ ಅಧಿಕ ಸಂಖ್ಯೆಯಲ್ಲಿ ಸಿನಿಮಾಗಳು ರಿಲೀಸ್ ಆಗುತ್ತಿದ್ದು, 2024ರಲ್ಲಿ ಬಿಡುಗಡೆ ಮಾಡಲು ಪ್ಲ್ಯಾನ್ ಮಾಡಿದ್ದೇವೆ ಎಂದು ಬರೆದುಕೊಂಡಿದ್ದರು. ಈಗ ಜೂನ್ ನಲ್ಲಿ ಸಿನಿಮಾವನ್ನು ತೆರೆಗೆ ತರುವುದಾಗಿ ಅಪ್ ಡೇಟ್ ನೀಡಿದ್ದರು. ಈಗ ಜೂನ್‍ನಲ್ಲೂ ಸಿನಿಮಾ ಆಗುತ್ತಿಲ್ಲ.
ಹೌದು, ಈಗಾಗಲೇ ಅವರು ರಾಜಕೀಯ ಅಖಾಡಕ್ಕೆ ಇಳಿದಿದ್ದಾರೆ. ಮಂಡಿ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದಾರೆ. ಚುನಾವಣೆ ಪ್ರಚಾರದಲ್ಲೇ ಅವರು ಬ್ಯುಸಿಯಾಗಿರುವುದರಿಂದ ಜೂನ್‍್ ನಲ್ಲಿ ಎಮರ್ಜೆನ್ಸಿ ಸಿನಿಮಾ ಬರಲ್ಲ. ಬದಲಿ ದಿನಾಂಕವನ್ನು ಅವರು ನಂತರ ತಿಳಿಸಬಹುದು.
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಕುರಿತಾದ ‘ಎಮರ್ಜೆನ್ಸಿ’ ಸಿನಿಮಾದ ಬಹುತೇಕ ಚಿತ್ರೀಕರಣ ಮುಗಿದಿದ್ದು, ಈ ಸಿನಿಮಾಗಾಗಿ ತಮ್ಮೆಲ್ಲ ಆಸ್ತಿಯನ್ನು ಅಡ ಇಟ್ಟಿರುವುದಾಗಿ ಬರೆದುಕೊಂಡಿದ್ದಾರೆ. ಎಮರ್ಜೆನ್ಸಿ ಸಿನಿಮಾ ಕಂಗನಾ ಪಾಲಿಗೆ ಅಳಿವು ಉಳಿವಿನ ಪ್ರಶ್ನೆ. ಈ ಸಿನಿಮಾದಲ್ಲಿ ಕೇವಲ ನಟಿಯಾಗಿ ಮಾತ್ರವಲ್ಲ, ನಿರ್ದೇಶಕಿಯಾಗಿ, ನಿರ್ಮಾಪಕಿಯಾಗಿಯೂ ಅವರು ಕೆಲಸ ಮಾಡಿದ್ದಾರೆ.
ಎಮರ್ಜೆನ್ಸಿ ಸಿನಿಮಾದಲ್ಲಿ ಕಂಗನಾ ಜವಾಬ್ದಾರಿ ಜಾಸ್ತಿ ಮಾಡಿಕೊಂಡಿದ್ದಾರೆ. ಮೂರು ಜವಾಬ್ದಾರಿ ಹೊತ್ತುಕೊಂಡಿರುವ ಕಾರಣಕ್ಕಾಗಿ ಅವರು ತಮ್ಮ ಆಸ್ತಿಯನ್ನು ಅಡವಿಡುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಅವರು ಇಂದಿರಾ ಗಾಂಧಿಯ ಪಾತ್ರವನ್ನು ನಿರ್ವಹಿಸಿದ್ದು, ಕೆಲ ಫೋಟೋಗಳನ್ನೂ ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.