Tag: Reliance Group

  • ಅನಿಲ್‌ ಅಂಬಾನಿ ಆಪ್ತ ಸಹಾಯಕ ಅಶೋಕ್‌ ಕುಮಾರ್‌ ಬಂಧನ

    ಅನಿಲ್‌ ಅಂಬಾನಿ ಆಪ್ತ ಸಹಾಯಕ ಅಶೋಕ್‌ ಕುಮಾರ್‌ ಬಂಧನ

    ನವದೆಹಲಿ: ಉದ್ಯಮಿ ಅನಿಲ್ ಅಂಬಾನಿ ಅವರ ರಿಲಯನ್ಸ್ ಗ್ರೂಪ್‌ನ ಹಿರಿಯ ಕಾರ್ಯನಿರ್ವಾಹಕ ಅಧಿಕಾರಿ, ರಿಲಯನ್ಸ್ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಕುಮಾರ್ ಪಾಲ್ ಅವರನ್ನು ಜಾರಿ ನಿರ್ದೇಶನಲಾಯದ ಅಧಿಕಾರಿಗಳು ಬಂಧಿಸಿದ್ದಾರೆ.

    ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಬಹುಕೋಟಿ ಬ್ಯಾಂಕ್ ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಅನಿಲ್ ಅಂಬಾನಿ ನೇತೃತ್ವದ ರಿಲಯನ್ಸ್ ಗ್ರೂಪ್‌ಗೆ ಸಂಬಂಧಿಸಿದ ಕಂಪನಿಗಳನ್ನು ಈಗಾಗಲೇ ಇಡಿ ತನಿಖೆ ನಡೆಸುತ್ತಿದೆ.

    ಅಶೋಕ್ ಕುಮಾರ್ ಪಾಲ್ ರಿಲಯನ್ಸ್ ಪವರ್ ಲಿಮಿಟೆಡ್‌ನ ಮುಖ್ಯ ಹಣಕಾಸು ಅಧಿಕಾರಿ. RPL ಒಂದು ಷೇರು ಮಾರುಕಟ್ಟೆಯಲ್ಲಿ ಪಟ್ಟಿಮಾಡಿದ ಕಂಪನಿಯಾಗಿದ್ದು, ಅಲ್ಲಿ ಸಾರ್ವಜನಿಕರು 75% ಕ್ಕಿಂತ ಹೆಚ್ಚು ಷೇರುಗಳನ್ನು ಹೊಂದಿದ್ದಾರೆ. ಸಾರ್ವಜನಿಕ ಹೂಡಿದ ಹಣವನ್ನು ಬೇರೆಡೆಗೆ ತಿರುಗಿಸುವಲ್ಲಿ ಅವರು ನಿರ್ಣಾಯಕ ಪಾತ್ರ ವಹಿಸಿದ್ದಾರೆ ಎಂದು ಇಡಿ ತಿಳಿಸಿದೆ.

    ನಕಲಿ ಸಾರಿಗೆ ಇನ್‌ವಾಯ್ಸ್‌ಗಳ ಮೂಲಕ ಕೋಟ್ಯಂತರ ರೂಪಾಯಿಗಳ ಹಣವನ್ನು ಬೇರೆಡೆಗೆ ತಿರುಗಿಸುವಲ್ಲಿ ಅವರು ನಿರ್ಣಾಯಕ ಪಾತ್ರ ವಹಿಸಿದ್ದರು. ಅವರು SAP/ಮಾರಾಟಗಾರರ ಸಾಮಾನ್ಯ ಕೆಲಸದ ಹರಿವಿನ ಹೊರಗೆ ಟೆಲಿಗ್ರಾಮ್/ವಾಟ್ಸಾಪ್ ಮೂಲಕ ಬಿಡುಗಡೆಗಳನ್ನು ಅನುಮೋದಿಸಿದರು ಮತ್ತು ದಾಖಲೆಗಳನ್ನು ಸುಗಮಗೊಳಿಸಿದರು ಎಂದು ಆರೋಪಿಸಲಾಗಿದೆ.

  • 17,000 ಕೋಟಿ ಬ್ಯಾಂಕ್ ಲೋನ್ ವಂಚನೆ ಕೇಸ್ – ಇಡಿ ವಿಚಾರಣೆಗೆ ಹಾಜರಾದ ಅನಿಲ್ ಅಂಬಾನಿ

    17,000 ಕೋಟಿ ಬ್ಯಾಂಕ್ ಲೋನ್ ವಂಚನೆ ಕೇಸ್ – ಇಡಿ ವಿಚಾರಣೆಗೆ ಹಾಜರಾದ ಅನಿಲ್ ಅಂಬಾನಿ

    ನವದೆಹಲಿ: 17,000 ಕೋಟಿ ರೂ. ಬ್ಯಾಂಕ್ ಸಾಲ ವಂಚನೆ ಪ್ರಕರಣ ಸಂಬಂಧ ಮಂಗಳವಾರ ರಿಲಯನ್ಸ್ ಗ್ರೂಪ್ಸ್ (Reliance Groups) ಅಧ್ಯಕ್ಷ ಅನಿಲ್ ಅಂಬಾನಿ (Anil Ambani) ಇಡಿ ವಿಚಾರಣೆಗೆ (ED) ಹಾಜರಾಗಿದ್ದರು.ಇದನ್ನೂ ಓದಿ: 3,000 ಕೋಟಿ ಸಾಲ ವಂಚನೆ ಕೇಸ್‌ – ಅನಿಲ್‌ ಅಂಬಾನಿಗೆ ಸೇರಿದ 50 ಕಂಪನಿಗಳ ಮೇಲೆ ED ದಾಳಿ

    ದೆಹಲಿಯಲ್ಲಿರುವ (Delhi) ಇಡಿ ಕಚೇರಿಗೆ ಮಂಗಳವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಅನಿಲ್ ಅಂಬಾನಿಯವರು ಆಗಮಿಸಿದ್ದರು. ಇಡಿ ವಿಚಾರಣೆ ವೇಳೆ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ಸದ್ಯ ರಿಲಯನ್ಸ್ ಇನ್‌ಫ್ರಾಸ್ಟ್ರಕ್ಚರ್ ಸೇರಿದಂತೆ ಹಲವು ಅನಿಲ್ ಅಂಬಾನಿ ಸಮೂಹ ಸಂಸ್ಥೆಗಳಿಂದ ಹಣಕಾಸು ಅಕ್ರಮಗಳು ಮತ್ತು 17,000 ಕೋಟಿ ರೂ.ಗೂ ಹೆಚ್ಚು ಬ್ಯಾಂಕ್ ಸಾಲ ವಂಚನೆಗೆ ಸಂಬಂಧಿಸಿದಂತೆ ಇಡಿ ತನಿಖೆ ನಡೆಸುತ್ತಿದೆ.

    ಜು.24ರಂದು ಮುಂಬೈನಲ್ಲಿನ 50 ಕಂಪನಿಗಳು ಮತ್ತು ಅವರ ವ್ಯವಹಾರಗಳಿಗೆ ಸಂಬAಧಿಸಿದ 25 ವ್ಯಕ್ತಿಗಳು ಸೇರಿದಂತೆ 35 ಕಡೆಗಳಲ್ಲಿ ಇಡಿ ಶೋಧ ಕಾರ್ಯಾಚರಣೆ ನಡೆಸಿತ್ತು. ಬಳಿಕ ಸಮನ್ಸ್ ಜಾರಿ ಮಾಡಿತ್ತು. 2017 ಮತ್ತು 2019ರ ನಡುವೆ ಯೆಸ್ ಬ್ಯಾಂಕ್ ನೀಡಿದ ಸುಮಾರು 3,000 ಕೋಟಿ ರೂ.ಗಳ ಸಾಲವನ್ನು ಬೇರೆಡೆಗೆ ವರ್ಗಾಯಿಸಲಾಗಿದೆ. 3,000 ಕೋಟಿ ರೂ. ಸಾಲ ತೀರಿಸಲು ಯೆಸ್ ಬ್ಯಾಂಕ್ ಅಧಿಕಾರಿಗಳಿಗೆ ಅನಿಲ್ ಅಂಬಾನಿ ಲಂಚ ನೀಡಲು ಮುಂದಾಗಿದ್ದರು ಎನ್ನುವ ಆರೋಪ ಕೂಡ ಇದೆ.ಇದನ್ನೂ ಓದಿ: ಆವತ್ತು ಸೈಕಲ್; ಇವತ್ತು ಸ್ಕೂಟರ್ – ಹೊಸ ಫ್ಲೈಓವರ್ ಮೇಲೆ ಡಿಕೆಶಿ ಸ್ಕೂಟರ್ ಸವಾರಿ

  • 3,000 ಕೋಟಿ ಸಾಲ ವಂಚನೆ ಕೇಸ್‌ – ಅನಿಲ್‌ ಅಂಬಾನಿಗೆ ಸೇರಿದ 50 ಕಂಪನಿಗಳ ಮೇಲೆ ED ದಾಳಿ

    3,000 ಕೋಟಿ ಸಾಲ ವಂಚನೆ ಕೇಸ್‌ – ಅನಿಲ್‌ ಅಂಬಾನಿಗೆ ಸೇರಿದ 50 ಕಂಪನಿಗಳ ಮೇಲೆ ED ದಾಳಿ

    – 35ಕ್ಕೂ ಹೆಚ್ಚು ಸ್ಥಳಗಳಲ್ಲಿ ತೀವ್ರ ಶೋಧ

    ಮುಂಬೈ: ಯೆಸ್ ಬ್ಯಾಂಕ್‌ಗೆ 3,000 ಕೋಟಿ ಸಾಲ ವಂಚನೆ ಪ್ರಕರಣಕ್ಕೆ (Yes Bank fraud probe) ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು ಉದ್ಯಮಿ ಅನಿಲ್ ಅಂಬಾನಿ (Anil Ambani) ಮಾಲೀಕತ್ವದ ರಿಲಯನ್ಸ್ ಗ್ರೂಪ್​ಗೆ ಸೇರಿದ ಹಲವು ಕಂಪನಿಗಳ ಮೇಲೆ ದಾಳಿ ಮಾಡಿದೆ.

    ಸುಮಾರು 35ಕ್ಕೂ ಹೆಚ್ಚು ಸ್ಥಳಗಳು, ರಿಲಯನ್ಸ್ ಅನಿಲ್ ಅಂಬಾನಿ ಗ್ರೂಪ್ (RAAGA)ನ 50 ಕಂಪನಿಗಳ ಮೇಲೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಇಡಿ ದಾಳಿ ನಡೆಸಿರುವುದಾಗಿ ರೆಡ್‌ಬಾಕ್ಸ್ ಗ್ಲೋಬಲ್ ಇಂಡಿಯಾ X ನಲ್ಲಿ ಪೋಸ್ಟ್ ಹಂಚಿಕೊಂಡಿದೆ. ಇದನ್ನೂ ಓದಿ: ED ಭರ್ಜರಿ ಬೇಟೆ – ಟಿಎಂಸಿ ಮಾಜಿ ಸಂಸದನ ಪುತ್ರನಿಗೆ ಸೇರಿದ 127 ಕೋಟಿ ಮೌಲ್ಯದ ಷೇರು ಜಪ್ತಿ

    ಯೆಸ್‌ ಬ್ಯಾಂಕ್‌ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (ಸಿಬಿಐ) ದಾಖಲಿಸಿದ್ದ 2 ಎಫ್‌ಐಆರ್‌ಗಳನ್ನು ಆಧರಿಸಿ ಹಾಗೂ ಬ್ಯಾಂಕ್ ಆಫ್ ಬರೋಡಾ, ನ್ಯಾಷನಲ್ ಹೌಸಿಂಗ್ ಬ್ಯಾಂಕ್ ಮತ್ತಿತರ ಏಜೆನ್ಸಿಗಳಿಂದ ದೊರೆತ ಮಾಹಿತಿ ಆಧಾರದ ಮೇಲೆ ತೀವ್ರ ಶೋಧ ನಡೆಸುತ್ತಿದೆ. 25ಕ್ಕೂ ಹೆಚ್ಚು ಮಂದಿಯನ್ನೂ ವಿಚಾರಣೆಗೆ ಒಳಪಡಿಸಲಾಗಿದೆ.

    2017 ಮತ್ತು 2019ರ ನಡುವೆ ರಿಲಯನ್ಸ್ ಅನಿಲ್ ಅಂಬಾನಿ ಗ್ರೂಪ್ ಅಡಿಯಲ್ಲಿರುವ ಸಂಸ್ಥೆಗಳಿಗೆ ಯೆಸ್‌ ಬ್ಯಾಂಕ್‌ 3,000 ಕೋಟಿ ರೂ. ಸಾಲ ನೀಡಿತ್ತು. ಆದ್ರೆ ಈ ಸಾಲದ ಹಣವನ್ನ ಗ್ರೂಪ್‌ನ ಇತರ ಶೆಲ್‌ ಕಂಪನಿಗಳಿಗೆ (ಬೇನಾಮಿ ಕಂಪನಿ) ಅಕ್ರಮವಾಗಿ ವರ್ಗಾವಣೆ ಮಾಡಲಾಗಿತ್ತು. ಈ ಮೂಲಕ ಬ್ಯಾಂಕ್‌ಗಳು, ಷೇರುದಾರರು, ಹೂಡಿಕೆದಾರರು ಮತ್ತು ಇತರ ಸಾರ್ವಜನಿಕ ಸಂಸ್ಥೆಗಳನ್ನ ವಂಚಿಸುವ ಮೂಲಕ ಸಾರ್ವಜನಿಕ ಹಣವನ್ನು ದುರ್ಬಳಕೆ ಮಾಡಿಕೊಂಡಿರುವುದಾಗಿ ಇಡಿ ಪತ್ತೆಹಚ್ಚಿದೆ. ಪ್ರಾಥಮಿಕ ತನಿಖೆಯಲ್ಲಿ ಇದಕ್ಕೆ ಸಾಕ್ಷ್ಯಾಧಾರಗಳೂ ಸಿಕ್ಕಿವೆ ಅಂತ ಇಡಿ ಹೇಳಿದೆ. ಇದನ್ನೂ ಓದಿ: ಬಿಜೆಪಿಯಿಂದ ಮುಂದಿನ ಉಪರಾಷ್ಟ್ರಪತಿ ಆಯ್ಕೆ – ಮೋದಿ ವಿದೇಶಿ ಪ್ರವಾಸದ ಬಳಿಕ ಅಂತಿಮ ನಿರ್ಧಾರ

    ಸಾಲ ಅನುಮೋದನೆ ವಿಚಾರದಲ್ಲಿ ಯೆಸ್ ಬ್ಯಾಂಕ್ ಪ್ರಕ್ರಿಯೆ ಅನುಮಾನಾಸ್ಪದವಾಗಿದೆ. ಸರಿಯಾದ ಹಣಕಾಸು ಸ್ಥಿತಿ ಇಲ್ಲದ ಕಂಪನಿಗಳು, ಸಾಮಾನ್ಯ ನಿರ್ದೇಶಕರಿರುವ ಕಂಪನಿಗಳಿಗೆ ಸಾಲ ಮಂಜೂರು ಮಾಡಲಾಗಿದೆ. ಸರಿಯಾಗಿ ಅವಲೋಕನ ಮಾಡುವ ಪ್ರಯತ್ನ ಆಗಿಲ್ಲ. ಸಾಲಕ್ಕೆ ಅನುಮೋದನೆ ಆಗುವ ಮುನ್ನವೇ ಅಥವಾ ಅದೇ ದಿನವೇ ಸಾಲದ ಹಣ ಬಿಡುಗಡೆ ಮಾಡಲಾಗಿದೆ ಎಂದು ಯೆಸ್ ಬ್ಯಾಂಕ್​ನ ವ್ಯವಸ್ಥೆಯಲ್ಲಿರುವ ಲೋಪಗಳನ್ನು ಇಡಿ ಎತ್ತಿ ತೋರಿಸಿದೆ. ಇಡಿ ನೀಡಿರುವ ಮಾಹಿತಿ ಪ್ರಕಾರ ರಿಲಯನ್ಸ್ ಗ್ರೂಪ್​ಗೆ ಸೇರಿದ 50 ಕಂಪನಿಗಳ ಮೇಲೆ ಇಡಿ ದಾಳಿ ನಡೆಸಿದ್ದು ಶೋಧ ಆರಂಭಿಸಿದೆ.

    ಇಡಿ ಆರೋಪದ ಮುಖ್ಯಾಂಶಗಳು
    * 3,000 ಕೋಟಿ ಸಾಲ ಮಂಜೂರು ಮಾಡಲು ಯೆಸ್‌ ಬ್ಯಾಂಕ್‌ನ ಸಿಇಓ ಹಾಗೂ ಇತರರು ಭಾಗಿಯಾಗಿದ್ದಾರೆ. ದೊಡ್ಡ ಮಟ್ಟದ ಸಾಲ ಮಂಜೂರು ಮಾಡಿಸಲು ಕೆಲ ಬ್ಯಾಂಕ್‌ ಅಧಿಕಾರಿಗಳು ಲಂಚ ಪಡೆದಿರಬಹುದು ಎಂದು ಇಡಿ ಶಂಕಿಸಿದೆ.
    * ಈ ಬೆನ್ನಲ್ಲೇ ರಿಲಯನ್ಸ್ ಹೋಮ್ ಫೈನಾನ್ಸ್ ಲಿಮಿಟೆಡ್ (RHFL) ನಲ್ಲಿ ಭಾರೀ ಅಕ್ರಮ ನಡೆದಿರುವ ಬಗ್ಗೆ ಷೇರು ಪೇಟೆ ಮಂಡಳಿ SEBI (ಸೆಬಿ) ವರದಿಯೊಂದನ್ನ ಸಲ್ಲಿದೆ. ವರದಿಯ ಪ್ರಕಾರ, ಸಂಸ್ಥೆಯ ಕಾರ್ಪೊರೇಟ್ ಸಾಲ ಬಂಡವಾಳವು 2017-18ನೇ ಹಣಕಾಸು ವರ್ಷದಲ್ಲಿ 3,742 ಕೋಟಿ ರೂ.ಗಳಷ್ಟಿತ್ತು. ಆದ್ರೆ 2018-19ನೇ ಹಣಕಾಸು ವರ್ಷದಲ್ಲಿ ಇದರ ಪ್ರಮಾಣ 8,670 ಕೋಟಿ ರೂ.ಗಳಿಗೆ ಏರಿಕೆಯಾಗಿದೆ ಎಂದು ಸೆಬಿ ತನ್ನ ವರದಿಯಲ್ಲಿ ಹೇಳಿದೆ.  ಇದನ್ನೂ ಓದಿ: ಬ್ರಿಟನ್‌ನಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ – ಇಂದೇ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಸಾಧ್ಯತೆ