Tag: reliance

  • ಸಾಲದ ಸುಳಿಯಲ್ಲಿರೋ ತಮ್ಮನ ರಕ್ಷಣೆಗೆ ಧಾವಿಸಿದ ಅಣ್ಣ ಮುಕೇಶ್: ಎಷ್ಟು ಕೋಟಿಗೆ ಆರ್‌ಕಾಂ ಖರೀದಿ?

    ಸಾಲದ ಸುಳಿಯಲ್ಲಿರೋ ತಮ್ಮನ ರಕ್ಷಣೆಗೆ ಧಾವಿಸಿದ ಅಣ್ಣ ಮುಕೇಶ್: ಎಷ್ಟು ಕೋಟಿಗೆ ಆರ್‌ಕಾಂ ಖರೀದಿ?

    ಮುಂಬೈ: ಸಾಲದ ಸುಳಿಗೆ ಸಿಲುಕಿರುವ ಅನಿಲ್ ಅಂಬಾನಿ ರಿಲಯನ್ಸ್ ಕಮ್ಯೂನಿಕೇಶನ್ಸ್(ಆರ್‌ಕಾಂ) ಸ್ಪೆಕ್ಟ್ರಂ ಟವರ್, ಆಪ್ಟಿಕಲ್ ಫೈಬರ್ ನೆಟ್‍ವರ್ಕ್ ಮತ್ತು ಇತರೆ ವೈರ್‌ಲೆಸ್‌ ಸಂಪತ್ತನ್ನು ಖರೀದಿಸಲು ಮುಕೇಶ್ ಅಂಬಾನಿ ಮುಂದಾಗಿದ್ದಾರೆ.

    ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿಯ ಜಿಯೋ ಇನ್ಫೋಕಾಂ ಲಿಮಿಟೆಡ್‍ಗೆ ತನ್ನ ಆಸ್ತಿಯನ್ನು ಮಾರಾಟ ಮಾಡುವ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ರಿಲಯನ್ಸ್ ಕಮ್ಯೂನಿಕೇಷನ್ ಗುರುವಾರ ತಿಳಿಸಿದೆ.

    ಎಷ್ಟು ಕೋಟಿ ರೂ.ಗಳ ಒಪ್ಪಂದ ನಡೆದಿದೆ ಎನ್ನುವುದನ್ನು ಎರಡೂ ಕಂಪೆನಿಗಳು ಬಹಿರಂಗ ಪಡಿಸಿಲ್ಲ. ಆದರೆ ಬ್ಯಾಂಕಿಂಗ್ ಮೂಲಗಳ ಪ್ರಕಾರ 24 ಸಾವಿರ ಕೋಟಿಗಳಿಂದ 25 ಸಾವಿರ ಕೋಟಿ ರೂ.ಗಳವರೆಗೆ ಈ ಒಪ್ಪಂದ ನಡೆದಿದೆ ಎಂದು ಅಂದಾಜಿಸಲಾಗಿದೆ. ಈ ಒಪ್ಪಂದ 2018ರ ಮಾರ್ಚ್ ಒಳಗಡೆ ಪೂರ್ಣಗೊಳ್ಳುವ ಸಾಧ್ಯತೆಯಿದೆ.

    45 ಸಾವಿರ ಕೋಟಿ ರೂ. ಸಾಲ ಸುಳಿಗೆ ಆರ್‌ಕಾಂ ಸಿಲುಕಿದ್ದು, ರಿಲಯನ್ಸ್ ಸ್ಥಾಪಕ ಧೀರೂಭಾಯಿ ಅಂಬಾನಿ ಅವರ 85 ಜನ್ಮ ದಿನಾಚರಣೆ ಸಂದರ್ಭದಲ್ಲಿಯೇ ಈ ಬೆಳವಣಿಗೆ ನಡೆದಿರುವುದು ಭಾರೀ ಮಹತ್ವ ಪಡೆದುಕೊಂಡಿದೆ.  ಇದನ್ನೂ ಓದಿ: ಹೊಸ ವರ್ಷಕ್ಕೆ ಜಿಯೋದಿಂದ ಎರಡು ಹೊಸ ಪ್ಲಾನ್

    ಆರ್‌ಕಾಂಗೆ ಸೇರಿದ ಸಂಪತ್ತು ಮಾರಾಟ ಮಾಡಿ ಬ್ಯಾಂಕ್‍ಗಳ 40 ಸಾವಿರ ಕೋಟಿ ರೂ. ಸಾಲವನ್ನು ಪಾವತಿ ಮಾಡಲಾಗುವುದು ಎಂದು ಅನಿಲ್ ಅಂಬಾನಿ ಮೊನ್ನೆ ತಿಳಿಸಿದ್ದರು. ಆರ್‌ಕಾಂ ಸೇರಿದ ಸಂಪತ್ತು ಖರೀದಿಯಿಂದ ತನ್ನ ಮನೆ ಮನೆಗಳಿಗೆ ಫೈಬರ್, ವೈಯರ್‍ಲೆಸ್ ಸೇವೆ ಮತ್ತು ಉದ್ಯಮ ಸೇವೆ ವಿಸ್ತರಿಸಲು ಸಹಾಯವಾಗಲಿದೆ ಎಂದು ಜಿಯೋ ತಿಳಿಸಿದೆ.

    2016 ರ ಸೆಪ್ಟೆಂಬರ್ ನಲ್ಲಿ ಸೇವೆ ಆರಂಭಿಸಿದ ಜಿಯೋಗೆ ದೇಶದಲ್ಲಿ 16 ಕೋಟಿ ಗ್ರಾಹಕರಿದ್ದು, ನವೆಂಬರ್ ಮೊದಲ ವಾರದಲ್ಲಿ ರಿಲಯನ್ಸ್ ಕಮ್ಯೂನಿಕೇಶನ್ 2ಜಿ ಕರೆ ಸೇವೆಯನ್ನು ಡಿಸೆಂಬರ್ 1ರಿಂದ ಸ್ಥಗಿತಗೊಳಿಸಲಿದ್ದೇವೆ ಎಂದು ಹೇಳಿತ್ತು.

    ಇನ್ನು ಮುಂದೆ ಕೇವಲ 4ಜಿ ಸೇವೆಯನ್ನು ಮಾತ್ರ ನೀಡಲಾಗುವುದು. 4ಜಿ ಸೇವೆ ಬಳಸುತ್ತಿರುವ ಗ್ರಾಹಕರು ರಿಲಯನ್ಸ್ ಸೇವೆಯನ್ನು ಮುಂದುವರಿಸಬಹುದು. 2ಜಿ ಸೇವೆಯನ್ನು ಇನ್ನು ಮುಂದೆ ನೀಡಲು ಸಾಧ್ಯವಿಲ್ಲ. 2ಜಿ ಸೇವೆ ಬೇಕಿದ್ದಲ್ಲಿ ಬೇರೆ ಟೆಲಿಕಾಂ ಕಂಪೆನಿಗೆ ಹೋಗಬಹುದು ಎಂದು ತಿಳಿಸಿತ್ತು.

    ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಇತರ ಕಂಪೆನಿಗಳಿಗೆ ರಿಲಯನ್ಸ್ ಗ್ರಾಹಕರು ನಂಬರ್ ಪೋರ್ಟಿಂಗ್ ಅರ್ಜಿ ಹಾಕಿದರೆ ಪೋರ್ಟಿಂಗ್ ಮನವಿಯನ್ನು ಸ್ವೀಕರಿಸುವಂತೆ ಸೂಚಿಸಿತ್ತು.

    ನಷ್ಟದಲ್ಲಿರುವ ಆರ್‌ಕಾಂ  ಇತ್ತೀಚೆಗೆ ಏರ್‍ಸೆಲ್ ಕಂಪೆನಿಯನ್ನು ಖರೀದಿಸಲು ರಿಲಯನ್ಸ್ ಪ್ರಯತ್ನ ನಡೆಸಿತ್ತು. ಆದರೆ ಅದರಲ್ಲಿ ಯಶಸ್ವಿಯಾಗಿರಲಿಲ್ಲ. ಆಂಧ್ರಪ್ರದೇಶ, ಹರ್ಯಾಣ, ಮಹಾರಾಷ್ಟ್ರ, ಉತ್ತಪ್ರದೇಶ ಪೂರ್ವ ಮತ್ತು ಪಶ್ಚಿಮ, ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳದಲ್ಲಿ 2ಜಿ ಮತ್ತು 4ಜಿ ಸೇವೆ ಯನ್ನು ರಿಲಯನ್ಸ್ ನೀಡುತ್ತಿದೆ. ಇದನ್ನೂ: ಜಿಯೋದಿಂದಾಗಿ ಭಾರತದ ಟೆಲಿಕಾಂ ಮಾರುಕಟ್ಟೆಯಲ್ಲಿ ಆಗಿರೋ ಆ 9 ಬದಲಾವಣೆಗಳು

  • ಡಿಸೆಂಬರ್ 1ರಿಂದ ರಿಲಯನ್ಸ್ 2ಜಿ ಕರೆ ಸ್ಥಗಿತ

    ಡಿಸೆಂಬರ್ 1ರಿಂದ ರಿಲಯನ್ಸ್ 2ಜಿ ಕರೆ ಸ್ಥಗಿತ

    ನವದೆಹಲಿ: ಅನಿಲ್ ಅಂಬಾನಿ ನೇತೃತ್ವದ ರಿಲಯನ್ಸ್ ಕಮ್ಯೂನಿಕೇಶನ್ 2ಜಿ ಕರೆ ಸೇವೆಯನ್ನು ಡಿಸೆಂಬರ್ 1ರಿಂದ ಸ್ಥಗಿತಗೊಳಿಸಲು ನಿರ್ಧರಿಸಿದೆ.

    ಇನ್ನು ಮುಂದೆ ಕೇವಲ 4ಜಿ ಸೇವೆಯನ್ನು ಮಾತ್ರ ನೀಡಲಾಗುವುದು. 4ಜಿ ಸೇವೆ ಬಳಸುತ್ತಿರುವ ಗ್ರಾಹಕರು ರಿಲಯನ್ಸ್ ಸೇವೆಯನ್ನು ಮುಂದುವರಿಸಬಹುದು ಎಂದು ಹೇಳಿದೆ. 2ಜಿ ಸೇವೆಯನ್ನು ಇನ್ನು ಮುಂದೆ ನೀಡಲು ಸಾಧ್ಯವಿಲ್ಲ. 2ಜಿ ಸೇವೆ ಬೇಕಿದ್ದಲ್ಲಿ ಬೇರೆ ಟೆಲಿಕಾಂ ಕಂಪೆನಿಗೆ ಹೋಗಬಹುದು ಎಂದು ಹೇಳಿದೆ.

    ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಇತರ ಕಂಪೆನಿಗಳಿಗೆ ರಿಲಯನ್ಸ್ ಗ್ರಾಹಕರು ನಂಬರ್ ಪೋರ್ಟಿಂಗ್ ಅರ್ಜಿ ಹಾಕಿದರೆ ಪೋರ್ಟಿಂಗ್ ಮನವಿಯನ್ನು ಸ್ವೀಕರಿಸುವಂತೆ ಸೂಚಿಸಿದೆ.

    2ಜಿ ಮತ್ತು 4ಜಿ ಸೇವೆಗಳನ್ನು ಒದಗಿಸುತ್ತಿರುವ ರಿಲಯನ್ಸ್ 46 ಸಾವಿರ ಕೋಟಿ ರೂ. ನಷ್ಟದಲ್ಲಿದೆ. ಇತ್ತೀಚೆಗೆ ಏರ್‍ಸೆಲ್ ಕಂಪೆನಿಯನ್ನು ಖರೀದಿಸಲು ರಿಲಯನ್ಸ್ ಪ್ರಯತ್ನ ನಡೆಸಿತ್ತು. ಆದರೆ ಅದರಲ್ಲಿ ಯಶಸ್ವಿಯಾಗಿರಲಿಲ್ಲ.

    ಆಂಧ್ರಪ್ರದೇಶ, ಹರ್ಯಾಣ, ಮಹಾರಾಷ್ಟ್ರ, ಉತ್ತಪ್ರದೇಶ ಪೂರ್ವ ಮತ್ತು ಪಶ್ಚಿಮ, ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳದಲ್ಲಿ 2ಜಿ ಮತ್ತು 4ಜಿ ಸೇವೆ ಯನ್ನು ರಿಲಯನ್ಸ್ ನೀಡುತ್ತಿದೆ.

  • ದೀಪಾವಳಿಗೆ ಜಿಯೋ ಗಿಫ್ಟ್: 399 ರೂ. ರಿಚಾರ್ಜ್ ಮಾಡಿ ಫುಲ್ ಕ್ಯಾಶ್‍ಬ್ಯಾಕ್ ಪಡೆಯಿರಿ

    ದೀಪಾವಳಿಗೆ ಜಿಯೋ ಗಿಫ್ಟ್: 399 ರೂ. ರಿಚಾರ್ಜ್ ಮಾಡಿ ಫುಲ್ ಕ್ಯಾಶ್‍ಬ್ಯಾಕ್ ಪಡೆಯಿರಿ

    ಮುಂಬೈ: ಟೆಲಿಕಾಂ ಕಂಪೆನಿಗಳ ಮಧ್ಯೆ ಮತ್ತೊಮ್ಮೆ ಡೇಟಾ ಸಮರ ಆರಂಭವಾಗುವ ಸಾಧ್ಯತೆಯಿದೆ. ರಿಲಯನ್ಸ್ ಜಿಯೋ ದೀಪಾವಳಿ ಹಿನ್ನೆಲೆಯಲ್ಲಿ ಪ್ರೈಮ್ ಗ್ರಾಹಕರಿಗೆ 399 ರೂ. ಕ್ಯಾಶ್ ಬ್ಯಾಕ್ ಆಫರನ್ನು ಪ್ರಕಟಿಸಿದೆ.

    399 ರೂ. ರಿಚಾರ್ಜ್ ಮಾಡಿದರೆ 50 ರೂ. 8 ವೋಚರ್ ನೀಡಲಾಗುವುದು. ಈ ವೋಚರ್ ಮೂಲಕ ಮುಂದೆ 50 ರೂ. ನಿಂದ ಆರಂಭವಾಗಿ 399 ರೂ. ವರೆಗಿನ ಆಫರನ್ನು ರಿಚಾರ್ಜ್ ಮಾಡಬಹುದು ಎಂದು ಜಿಯೋ ತಿಳಿಸಿದೆ.

    84 ದಿನಗಳ ವ್ಯಾಲಿಡಿಟಿ ಹೊಂದಿರುವ 399 ರೂ. ರಿಚಾರ್ಜ್ ಮಾಡಿದರೆ ಪ್ರತಿದಿನ ಗರಿಷ್ಠ 1 ಜಿಬಿ ಡೇಟಾ ಬಳಕೆ ಮಾಡಬಹುದು. ಅಲ್ಲದೇ ಹೊರ ಹೊಗುವ ಎಲ್ಲ ಕರೆಗಳು ಉಚಿತವಾಗಿರಲಿದೆ ಎಂದು ತಿಳಿಸಿದೆ.

    ಅಕ್ಟೋಬರ್ 12 ರಿಂದ 18ರವರೆಗೆ ರಿಚಾರ್ಜ್ ಮಾಡಿದ ಗ್ರಾಹಕರಿಗೆ ಈ ಆಫರ್ ಲಭ್ಯವಾಗಲಿದೆ. ವೋಚರನ್ನು ಗ್ರಾಹಕರು ನವೆಂಬರ್ 15ರ ನಂತರ ಬಳಸಬಹುದಾಗಿದೆ.

     

  • ಡೇಟಾ ಆಯ್ತು ಈಗ ಉಚಿತ ಜಿಯೋ ಫೋನ್: 153 ರೂಪಾಯಿಗೆ ಅನ್‍ಲಿಮಿಟೆಡ್ ಡೇಟಾ

    ಡೇಟಾ ಆಯ್ತು ಈಗ ಉಚಿತ ಜಿಯೋ ಫೋನ್: 153 ರೂಪಾಯಿಗೆ ಅನ್‍ಲಿಮಿಟೆಡ್ ಡೇಟಾ

    ಮುಂಬೈ: ಜಿಯೋದ ಕಡಿಮೆ ಬೆಲೆಯ 4ಜಿ ಫೀಚರ್ ಫೋನ್ ಬಿಡುಗಡೆಯಾಗಿದೆ. ರಿಲಯನ್ಸ್ ಇಂಡಸ್ಟ್ರೀಸ್ 40ನೇ ವಾರ್ಷಿಕ ಸಭೆಯಲ್ಲಿ ಈ ಫೋನ್ ಬಿಡುಗಡೆಯಾಗಿದೆ.

    ಈ ಫೋನಿಗೆ 1500 ರೂ. ನಿಗದಿ ಮಾಡಲಾಗಿದೆ. ಆದರೆ ಮೂರು ವರ್ಷದ ಬಳಿಕ ಈ ಫೋನ್ ನೀಡಿದ ಹಣವನ್ನು ಮರುಪಾವತಿ ಮಾಡಲಾಗುವುದು ಎಂದು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ತಿಳಿಸಿದ್ದಾರೆ.

    ಈ ಫೋನನ್ನು ಮುಕೇಶ್ ಅಂಬಾನಿ ‘ಭಾರತದ ಇಂಟಲಿಜೆಂಟ್ ಸ್ಮಾರ್ಟ್ ಫೋನ್’ ಎಂದು ಬಣ್ಣಿಸಿದ್ದಾರೆ. ಈ ಫೋನ್ ಬೀಟಾ ಟೆಸ್ಟಿಂಗ್ ಆಗಸ್ಟ್ 15 ರಿಂದ ಆರಂಭವಾಗಲಿದ್ದು, ಆಗಸ್ಟ್ 24ರಿಂದ ಮುಂಗಡ ಬುಕ್ಕಿಂಗ್ ಆರಂಭವಾಗಲಿದೆ. ಈ ವರ್ಷದ ಸೆಪ್ಟೆಂಬರ್ ನಲ್ಲಿ ಈ ಫೋನ್ ಗ್ರಾಹಕರ ಕೈಗೆ ಸಿಗಲಿದೆ.

    ಈ ಫೋನಿನಲ್ಲಿ ಜಿಯೋ ಸಿನಿಮಾ, ಸಿನಿಮಾ ಮ್ಯೂಸಿಕ್ ಸೇರಿದಂತೆ ಜಿಯೋ ಆಪ್ಲಿಕೇಶನ್ ಪ್ರಿ ಲೋಡೆಡ್ ಆಗಿ ಇರಲಿದೆ.

    ಗುಣವೈಶಿಷ್ಟ್ಯ ಏನು?
    ಆಲ್ಫಾ ನ್ಯುಮರಿಕ್ ಕೀಪ್ಯಾಡ್, 2.4 ಇಂಚಿನ ಕ್ಯೂವಿಜಿಎ ಡಿಸ್ಪ್ಲೇ 240*320 ಪಿಕ್ಸೆಲ್, ಎಫ್ ಎಂ ರೇಡಿಯೋ, ಟಾರ್ಚ್ ಲೈಟ್, ಹೆಡ್ ಫೋನ್ ಜ್ಯಾಕ್, ಎಸ್‍ಡಿ ಕಾರ್ಡ್ ಸ್ಲಾಟ್, ಫೋನ್ ಕಾಂಟಾಕ್ಟ್, ಕಾಲ್ ಹಿಸ್ಟರಿ

    ಈ ಫೀಚರ್ ಫೋನ್ ಖರೀದಿಸಿದ ಗ್ರಾಹಕರಿಗೆ ತಿಂಗಳಿಗೆ 153 ರೂ. ರಿಚಾರ್ಚ್ ಆಫರ್ ಅನ್ನು ಜಿಯೋ ಬಿಡುಗಡೆ ಮಾಡಿದೆ. ಈ ಆಫರ್ ನಲ್ಲಿ ಗ್ರಾಹಕರಿಗೆ ಆನ್ ಲಿಮಿಟೆಡ್ ಡೇಟಾ ಪ್ಯಾಕ್ ಸಿಗಲಿದೆ. ಅಷ್ಟೇ ಅಲ್ಲದೇ ಎಂದಿನಂತೆ ಹೊರ ಹೋಗುವ ಕರೆಗಳು ಮತ್ತು ಮೆಸೇಜ್ ಗಳು ಉಚಿತವಾಗಿ ಸಿಗಲಿದೆ.

    ಕಡಿಮೆ ಬೆಲೆಯಲ್ಲಿ ಯಾಕೆ?
    ಜಿಯೋ ಈಗ ಹೊಸ ಗ್ರಾಹಕರನ್ನು ಸೆಳೆಯುಲು ಮಂದಾಗುತ್ತಿದೆ. ಸೆಪ್ಟೆಂಬರ್ ನಲ್ಲಿ ಆರಂಭವಾದ ಬಳಿಕ ನಂತರದ ತಿಂಗಳಿನಲ್ಲಿ ಭಾರೀ ಸಂಖ್ಯೆಯಲ್ಲಿ ಗ್ರಾಹಕರು ಜಿಯೋಗೆ ಸೇರ್ಪಡೆಯಾಗಿದ್ದರು. ಆದರೆ ಮಾರ್ಚ್ ತಿಂಗಳಿನಲ್ಲಿ ಕಡಿಮೆ ಸಂಖ್ಯೆಯಲ್ಲಿ ಗ್ರಾಹಕರು ಸೇರ್ಪಡೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಜಿಯೋ ಈಗ 2ಜಿ ಸೇವೆಯನ್ನು ಬಳಸುತ್ತಿರುವ ಗ್ರಾಹಕರ ಆಕರ್ಷಿಸಲು ಫೀಚರ್ ಫೋನ್ ತಯಾರಿಸಿದೆ. ಅಷ್ಟೇ ಅಲ್ಲದೇ ಪ್ರಸ್ತುತ ಮಾರುಕಟ್ಟೆಯಲ್ಲಿ 4ಜಿ ಎಲ್‍ಟಿಇ ಬೆಂಬಲಿಸುವ ಫೋನ್ ಗಳಿದ್ದರೂ ಇವುಗಳ ಬೆಲೆ ಜಾಸ್ತಿ ಇರುವ ಕಾರಣ ಜಿಯೋ ಈಗ ಫೋನ್ ತಯಾರಿಸಿದೆ.

    ಜಿಯೋ 999 ರೂ.ನಿಂದ ಆರಂಭವಾಗಿ 1500 ರೂ ಒಳಗಡೆ ಕೀ ಪ್ಯಾಡ್ ಹೊಂದಿರುವ ಎಲ್‍ಟಿಇ ತಂತ್ರಜ್ಞಾನಕ್ಕೆ ಸಪೋರ್ಟ್ ಮಾಡುವ ಫೀಚರ್ ಫೋನ್‍ಗಳನ್ನು ಬಿಡುಗಡೆ ಮಾಡಲಿದೆ ಎನ್ನುವ ವರದಿ ಈ ಹಿಂದೆ ಮಾಧ್ಯಮಗಳಲ್ಲಿ ಪ್ರಕಟಗೊಂಡಿತ್ತು. ಪ್ರಸ್ತುತ ಜಿಯೋ ಎಲ್‍ವೈಎಫ್ ಹೆಸರಿನಲ್ಲಿ ಆಂಡ್ರಯ್ಡ್ ಫೋನ್‍ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿತ್ತು.

    ಏನಿದು ವಾಯ್ಸ್ ಓವರ್ ಎಲ್‍ಟಿಇ? ಉಚಿತ ಕರೆ ಯಾಕೆ?
    ಇಲ್ಲಿಯವರೆಗೆ ಟೆಲಿಕಾಂ ಕಂಪೆನಿಗಳು ಕರೆ ಮತ್ತು ಡೇಟಾ ಸೇವೆಗಳನ್ನು ಪ್ರತ್ಯೇಕವಾಗಿ ನಿಭಾಯಿಸುತಿತ್ತು. ಆದರೆ ಜಿಯೋ ಈ ಎರಡನ್ನೂ ಒಟ್ಟಿಗೆ ನಿಭಾಯಿಸುತ್ತದೆ. ಇದರಿಂದಾಗಿ ಖರ್ಚು ಕಡಿಮೆ ಆಗುತ್ತದೆ. ಡೇಟಾವನ್ನು ಬಳಸಿಕೊಂಡು ಕರೆ ಮಾಡುವ ತಂತ್ರಜ್ಞಾನವೇ ವಾಯ್ಸ್ ಓವರ್ ಲಾಂಗ್ ಟರ್ಮ್ ಎವಲ್ಯೂಶನ್(ಎಲ್‍ಟಿಇ). ಇದರಲ್ಲಿ ಕರೆಗೆ ಬೇರೆ, ಡೇಟಾಗೆ ಬೇರೆ ಎಂದು ಹಣ ನೀಡಬೇಕಿಲ್ಲ. ಡೇಟಾಗೆ ನೀಡಿದ ಹಣದಲ್ಲೇ ಕರೆಯನ್ನೂ ಉಚಿತವಾಗಿ ಮಾಡಬಹುದು. ವೇಗದ ಇಂಟರ್ನೆಟ್ ಇದ್ದರೆ ಮಾತ್ರ ಈ ಸೇವೆಯನ್ನು ಗ್ರಾಹಕರು ಯಶಸ್ವಿಯಾಗಿ ಬಳಸಿಕೊಳ್ಳಬಹುದು. ಹಲವು ಫೋನ್ ಗಳು ಎಲ್‍ಟಿಇ ಬೆಂಬಲಿಸದ ಕಾರಣ ಜಿಯೋ ಸಿಮ್ ಹಾಕಲು ಸಾಧ್ಯವಾಗುತ್ತಿರಲಿಲ್ಲ. ಏರ್ಟೆಲ್ ಮತ್ತು ವೊಡಾಫೋನ್‍ಗಳು ಪ್ರಯೋಗಿಕ ಪರೀಕ್ಷೆ ನಡೆಸುತ್ತಿದ್ದು ಕೆಲ ತಿಂಗಳಿನಲ್ಲಿ ಈ ವೋಲ್ಟ್ ಸೇವೆ ಗ್ರಾಹಕರಿಗೆ ಲಭ್ಯವಾಗಲಿದೆ. ಜಿಯೋ ಸೇವೆ ಆರಂಭವಾದ ಬಳಿಕ ಭಾರತದಲ್ಲಿ ಬಿಡುಗಡೆಯಾಗುತ್ತಿರುವ ಬಹುತೇಕ ಕಂಪೆನಿಗಳ ಫೋನ್ ಗಳು ಎಲ್‍ಟಿಇ ಟೆಕ್ನಾಲಜಿಯನ್ನು ಬೆಂಬಲಿಸುತ್ತಿದೆ.

     

     

     

     

  • ಜಿಯೋ ಗ್ರಾಹಕರ ಮಾಹಿತಿ ಸೋರಿಕೆ ಆಗಿದ್ಯಾ? ನಿಮ್ಮ ಅನುಮಾನಗಳಿಗೆ ಇಲ್ಲಿದೆ ಉತ್ತರ

    ಜಿಯೋ ಗ್ರಾಹಕರ ಮಾಹಿತಿ ಸೋರಿಕೆ ಆಗಿದ್ಯಾ? ನಿಮ್ಮ ಅನುಮಾನಗಳಿಗೆ ಇಲ್ಲಿದೆ ಉತ್ತರ

    ನವದೆಹಲಿ: ರಿಲಯನ್ಸ್ ಜಿಯೋ ಗ್ರಾಹಕರ ಡೇಟಾ ಲೀಕ್ ಆಗಿದೆ ಎನ್ನುವ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗಿದೆ.

    magicapk.com ತಾಣ ಜಿಯೋ ಬಳಕೆದಾರರ ಮಾಹಿತಿಯನ್ನು ಪ್ರಕಟಿಸಿದೆ. ಆದರೆ ಜಿಯೋ ಈ ಸುದ್ದಿಯನ್ನು ತಿರಸ್ಕರಿಸಿದ್ದು, ಬಳಕೆದಾರರ ಮಾಹಿತಿ ಸೋರಿಕೆಯಾಗಿಲ್ಲ ಎಂದು ಸ್ಪಷ್ಟ ಪಡಿಸಿದೆ.

    ಆಗಿದ್ದು ಏನು?
    ಭಾನುವಾರ ಸಂಜೆ ಕೆಲ ಜಿಯೋ ಬಳಕೆದಾರರು ನಮ್ಮ ಮಾಹಿತಿ ಸೋರಿಕೆಯಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಪ್ರಕಟಿಸಿದ್ದರು. ಈ ಪೋಸ್ಟ್, ಟ್ವೀಟ್ ಗಳು ಸಂಚಲನ ಮೂಡಿಸಿದ ಬಳಿಕ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಯಿತು.

    ಈ ವೆಬ್‍ಸೈಟ್ ನಲ್ಲಿರುವ ಮಾಹಿತಿಗಳು ನಿಜವಾಗಿಯೂ ಸೋರಿಕೆಯಾಗಿದ್ಯಾ ಎಂದು ಪರಿಶೀಲನೆ ನಡೆಸಿದ್ದು, ಈ ವೇಳೆ ನಮೂದಿಸಿದ ಮೊಬೈಲ್ ನಂಬರ್ ಮತ್ತು ಅದಕ್ಕೆ ಸಂಬಂಧಿಸಿದ ಗ್ರಾಹಕರ ಸಂಖ್ಯೆ ತಾಳೆ ಆಗುತ್ತಿರಲಿಲ್ಲ ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ಹಾಗಾದ್ರೆ ಸೋರಿಕೆಯಾಗಿದ್ದು ಹೇಗೆ?
    ಥರ್ಡ್ ಪಾರ್ಟಿ ವೆಬ್‍ಸೈಟ್ ಮೂಲಕ ರಿಚಾರ್ಜ್ ಮಾಡಲು ಸಾಧ್ಯವಿದೆ. ಹೀಗಾಗಿ ಈ ವೆಬ್‍ಸೈಟ್ ಗಳಲ್ಲಿ ರಿಚಾರ್ಜ್ ಮಾಡಿದ ಗ್ರಾಹಕರ ಮೊಬೈಲ್ ಸಂಖ್ಯೆಗಳು ಲೀಕ್ ಆಗಿರಬಹುದು ಎಂದು ಕೆಲ ಮಾಧ್ಯಮಗಳು ವರದಿ ಪ್ರಕಟಿಸಿದೆ.

    ಸಸ್ಪೆಂಡ್ ಆಗಿದೆ ವೆಬ್‍ಸೈಟ್:
    ಜಿಯೋ ಗ್ರಾಹಕರ ಮಾಹಿತಿ ಸೋರಿಕೆ ಮಾಡಿದ್ದೇವೆ ಎಂದು ಪ್ರಕಟಿಸಿದ ಬಳಿಕ ಈಗ ಈ ವೆಬ್‍ಸೈಟ್ ಅಮಾನತು ಆಗಿದ್ದು, ಯಾವುದೇ ಪುಟ ಓಪನ್ ಆಗುತ್ತಿಲ್ಲ. ಐಪಿ ವಿಳಾಸ ಚೆಕ್ ಮಾಡಿದಾಗ ಮುಂಬೈ ಮೂಲದ ವೆಬ್‍ಸೈಟ್ ಇದಾಗಿದ್ದು, ಈ ವರ್ಷ ಮೇ ತಿಂಗಳಿನಲ್ಲಿ ಡೊಮೈನ್ ರಿಜಿಸ್ಟ್ರರ್ ಆಗಿದೆ. ವೆಬ್‍ಸೈಟ್ ಸಸ್ಪೆಂಡ್ ಆಗಿದ್ಯಾ ಅಥವಾ ಬಹಳಷ್ಟು ಜನ ಭೇಟಿ ನೀಡಿದ್ದರಿಂದ ಹೆವಿ ಟ್ರಾಫಿಕ್ ಆಗಿ ಪೇಜ್ ಓಪನ್ ಆಗುತ್ತಿಲ್ಲವೇ ಎನ್ನುವುದು ದೃಢಪಟ್ಟಿಲ್ಲ

    ಸೋರಿಕೆಯಾಗಿಲ್ಲ:
    ಗ್ರಾಹಕರ ಯಾವುದೇ ಮಾಹಿತಿ ಸೋರಿಕೆಯಾಗಿಲ್ಲ. ಗ್ರಾಹಕರ ಮಾಹಿತಿ ನಾವು ಸುರಕ್ಷಿತವಾಗಿ ಇಟ್ಟಕೊಂಡಿದ್ದೇವೆ. ಈಗಾಗಲೇ ನಾವು ಈ ಸಂಬಂಧ ವೆಬ್‍ಸೈಟ್ ವಿರುದ್ಧ ಕಾನೂನು ಸಂಸ್ಥೆಗಳಿಗೆ ಮಾಹಿತಿ ನೀಡಿದ್ದೇವೆ ಎಂದು ಜಿಯೋದ ವಕ್ತಾರರು ತಿಳಿಸಿದ್ದಾರೆ.

  • ಜಿಯೋದಿಂದ ಕಡಿಮೆ ಬೆಲೆಯಲ್ಲಿ ಎಲ್‍ಟಿಇ ಫೀಚರ್ ಫೋನ್: ಬೆಲೆ ಎಷ್ಟು ಗೊತ್ತೆ?

    ಜಿಯೋದಿಂದ ಕಡಿಮೆ ಬೆಲೆಯಲ್ಲಿ ಎಲ್‍ಟಿಇ ಫೀಚರ್ ಫೋನ್: ಬೆಲೆ ಎಷ್ಟು ಗೊತ್ತೆ?

    ಮುಂಬೈ: ರಿಲಯನ್ಸ್ ಜಿಯೋ ಎಲ್‍ಟಿಇ ಟೆಕ್ನಾಲಜಿ ಸಪೋರ್ಟ್ ಮಾಡುವ ಫೀಚರ್ ಫೋನ್ ತಯಾರಿಸುತ್ತಿರುವ ವಿಚಾರ ನಿಮಗೆ ಗೊತ್ತೆ ಇದೆ. ಈಗ ಈ ಫೋನ್ ಶೀಘ್ರದಲ್ಲೇ ಬಿಡುಗಡೆಯಾಗುವ ಸಾಧ್ಯತೆಯಿದೆ.

    ಹೌದು. ಜಿಯೋ 500 ರೂ. ಬೆಲೆಯ ಫೀಚರ್ ಫೋನ್ ತಯಾರಿಸಿದೆ ಎಂದು ಮಾಧ್ಯಮವೊಂದು ಸುದ್ದಿಯನ್ನು ಪ್ರಕಟಿಸಿದೆ. ಜುಲೈ 21ರಂದು ರಿಲಯನ್ಸ್ ಇಂಡಸ್ಟ್ರೀನ್ ವಾರ್ಷಿಕ ಸಭೆಯ ವೇಳೆ ಈ ಫೋನ್ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

    ಜಿಯೋ ಫೀಚರ್ ಫೋನಿನ ಬೆಲೆ ಅಂದಾಜು 500 ರೂ. ಇರಲಿದೆ. 2ಜಿ ಫೋನ್ ಹೊಂದಿರುವ ಗ್ರಾಹಕರು ನೇರವಾಗಿ 4ಜಿ ಫೋನ್ ಗಳನ್ನು ಸುಲಭವಾಗಿ ಪಡೆಯಲು ಕಡಿಮೆ ಬೆಲೆಯಲ್ಲಿ ಈ ಫೋನ್ ಬಿಡುಗಡೆ ಮಾಡಲು ಜಿಯೋ ಮುಂದಾಗಿದೆ ಎಂದು ಟೆಲಿಕಾಂ ವಲಯದ ವಿಶ್ಲೇಷಕರೊಬ್ಬರು ತಿಳಿಸಿದ್ದಾರೆ.

    ಈ ವಿಚಾರದ ಬಗ್ಗೆ ಮಾಧ್ಯಮಗಳು ಜಿಯೋ ಕಂಪೆನಿಯನ್ನು ಸಂಪರ್ಕಿಸಿದ್ದು, ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

    ಕಡಿಮೆ ಬೆಲೆಯಲ್ಲಿ ಯಾಕೆ?
    ಜಿಯೋ ಈಗ ಹೊಸ ಗ್ರಾಹಕರನ್ನು ಸೆಳೆಯುಲು ಮಂದಾಗುತ್ತಿದೆ. ಸೆಪ್ಟೆಂಬರ್ ನಲ್ಲಿ ಆರಂಭವಾದ ಬಳಿಕ ನಂತರದ ತಿಂಗಳಿನಲ್ಲಿ ಭಾರೀ ಸಂಖ್ಯೆಯಲ್ಲಿ ಗ್ರಾಹಕರು ಜಿಯೋಗೆ ಸೇರ್ಪಡೆಯಾಗಿದ್ದರು. ಆದರೆ ಮಾರ್ಚ್ ತಿಂಗಳಿನಲ್ಲಿ ಕಡಿಮೆ ಸಂಖ್ಯೆಯಲ್ಲಿ ಗ್ರಾಹಕರು ಸೇರ್ಪಡೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಜಿಯೋ ಈಗ 2ಜಿ ಸೇವೆಯನ್ನು ಬಳಸುತ್ತಿರುವ ಗ್ರಾಹಕರ ಆಕರ್ಷಿಸಲು ಫೀಚರ್ ಫೋನ್ ತಯಾರಿಸಿದೆ. ಅಷ್ಟೇ ಅಲ್ಲದೇ ಪ್ರಸ್ತುತ ಮಾರುಕಟ್ಟೆಯಲ್ಲಿ 4ಜಿ ಎಲ್‍ಟಿಇ ಬೆಂಬಲಿಸುವ ಫೋನ್ ಗಳಿದ್ದರೂ ಇವುಗಳ ಬೆಲೆ ಜಾಸ್ತಿ ಇರುವ ಕಾರಣ ಜಿಯೋ ಈಗ ಫೋನ್ ತಯಾರಿಸಿ ಬಿಡುಗಡೆ ಮಾಡಲು ಮುಂದಾಗಿದೆ.

    ಜಿಯೋ 999 ರೂ.ನಿಂದ ಆರಂಭವಾಗಿ 1500 ರೂ ಒಳಗಡೆ ಕೀ ಪ್ಯಾಡ್ ಹೊಂದಿರುವ ಎಲ್‍ಟಿಇ ತಂತ್ರಜ್ಞಾನಕ್ಕೆ ಸಪೋರ್ಟ್ ಮಾಡುವ ಫೀಚರ್ ಫೋನ್‍ಗಳನ್ನು ಬಿಡುಗಡೆ ಮಾಡಲಿದೆ ಎನ್ನುವ ವರದಿ ಈ ಹಿಂದೆ ಮಾಧ್ಯಮಗಳಲ್ಲಿ ಪ್ರಕಟಗೊಂಡಿತ್ತು. ಪ್ರಸ್ತುತ ಜಿಯೋ ಎಲ್‍ವೈಎಫ್ ಹೆಸರಿನಲ್ಲಿ ಆಂಡ್ರಯ್ಡ್ ಫೋನ್‍ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದೆ.

    ಈ ವರ್ಷದ ಜನವರಿಯಲ್ಲಿ ಗೂಗಲ್ ಸಿಇಒ ಸುಂದರ್ ಪಿಚೈ ಭಾರತಕ್ಕೆ ಬಂದಿದ್ದಾಗ ಕಡಿಮೆ ಬೆಲೆಯಲ್ಲಿ ಆಂಡ್ರಾಯ್ಡ್ ಫೋನ್ ತಯಾರಿಸಲಾಗುವುದು ಎಂದು ತಿಳಿಸಿದ್ದರು. ಭಾರತಕ್ಕೆ 30 ಡಾಲರ್(2 ಸಾವಿರ ರೂ.) ಬೆಲೆಯ ಆಂಡ್ರಾಯ್ಡ್ ಫೋನ್ ಅಗತ್ಯವಿದೆ ಎಂದು ಹೇಳಿದ್ದರು. ಇದಕ್ಕೆ ಪೂರಕ ಎಂಬಂತೆ ಜಿಯೋ ಕಂಪೆನಿ ಮತ್ತು ಗೂಗಲ್ ಜೊತೆಗೂಡಿ ಆಂಡ್ರಾಯ್ಡ್ ಫೋನ್ ತಯಾರಿಸಲಿದೆ ಎಂದು ಟೆಕ್ ಮೂಲಗಳ ಮಾಹಿತಿಯನ್ನು ಆಧರಿಸಿ ಈ ಹಿಂದೆ ಮಾಧ್ಯಮವೊಂದು ವರದಿ ಮಾಡಿತ್ತು.

    ಏನಿದು ವಾಯ್ಸ್ ಓವರ್ ಎಲ್‍ಟಿಇ?
    ಇಲ್ಲಿಯವರೆಗೆ ಟೆಲಿಕಾಂ ಕಂಪೆನಿಗಳು ಕರೆ ಮತ್ತು ಡೇಟಾ ಸೇವೆಗಳನ್ನು ಪ್ರತ್ಯೇಕವಾಗಿ ನಿಭಾಯಿಸುತಿತ್ತು. ಆದರೆ ಜಿಯೋ ಈ ಎರಡನ್ನೂ ಒಟ್ಟಿಗೆ ನಿಭಾಯಿಸುತ್ತದೆ. ಇದರಿಂದಾಗಿ ಖರ್ಚು ಕಡಿಮೆ ಆಗುತ್ತದೆ. ಡೇಟಾವನ್ನು ಬಳಸಿಕೊಂಡು ಕರೆ ಮಾಡುವ ತಂತ್ರಜ್ಞಾನವೇ ವಾಯ್ಸ್ ಓವರ್ ಲಾಂಗ್ ಟರ್ಮ್ ಎವಲ್ಯೂಶನ್(ಎಲ್‍ಟಿಇ). ಇದರಲ್ಲಿ ಕರೆಗೆ ಬೇರೆ, ಡೇಟಾಗೆ ಬೇರೆ ಎಂದು ಹಣ ನೀಡಬೇಕಿಲ್ಲ. ಡೇಟಾಗೆ ನೀಡಿದ ಹಣದಲ್ಲೇ ಕರೆಯನ್ನೂ ಉಚಿತವಾಗಿ ಮಾಡಬಹುದು. ವೇಗದ ಇಂಟರ್‍ನೆಟ್ ಇದ್ದರೆ ಮಾತ್ರ ಈ ಸೇವೆಯನ್ನು ಗ್ರಾಹಕರು ಯಶಸ್ವಿಯಾಗಿ ಬಳಸಿಕೊಳ್ಳಬಹುದು.  ಹಲವು ಫೋನ್ ಗಳು ಎಲ್‍ಟಿಇ  ಬೆಂಬಲಿಸದ ಕಾರಣ ಜಿಯೋ ಸಿಮ್ ಹಾಕಲು ಸಾಧ್ಯವಾಗುತ್ತಿರಲಿಲ್ಲ.  ಏರ್‍ಟೆಲ್ ಮತ್ತು ವೊಡಾಫೋನ್‍ಗಳು ಪ್ರಯೋಗಿಕ ಪರೀಕ್ಷೆ ನಡೆಸುತ್ತಿದ್ದು ಕೆಲ ತಿಂಗಳಿನಲ್ಲಿ ಈ ವೋಲ್ಟ್ ಸೇವೆ ಗ್ರಾಹಕರಿಗೆ ಲಭ್ಯವಾಗಲಿದೆ. ಜಿಯೋ ಸೇವೆ ಆರಂಭವಾದ ಬಳಿಕ ಭಾರತದಲ್ಲಿ ಬಿಡುಗಡೆಯಾಗುತ್ತಿರುವ ಬಹುತೇಕ ಕಂಪೆನಿಗಳ ಫೋನ್ ಗಳು ಎಲ್‍ಟಿಇ  ಟೆಕ್ನಾಲಜಿಯನ್ನು ಬೆಂಬಲಿಸುತ್ತಿದೆ.

    ಇದನ್ನೂ ಓದಿ: ಗ್ರಾಹಕರಿಗೆ ಉಚಿತ ಡೇಟಾ ನೀಡಿದ್ದ ಜಿಯೋಗೆ ಆಗಿರುವ ನಷ್ಟ ಎಷ್ಟು ಗೊತ್ತೆ?

  • ಜಿಯೋಗೆ ಮಾರ್ಚ್ ನಲ್ಲಿ ಅತಿ ಕಡಿಮೆ ಸಂಖ್ಯೆಯ ಗ್ರಾಹಕರು ಸೇರ್ಪಡೆ

    ಜಿಯೋಗೆ ಮಾರ್ಚ್ ನಲ್ಲಿ ಅತಿ ಕಡಿಮೆ ಸಂಖ್ಯೆಯ ಗ್ರಾಹಕರು ಸೇರ್ಪಡೆ

    ನವದೆಹಲಿ: ಮಾರ್ಚ್ ತಿಂಗಳಿನಲ್ಲಿ ಜಿಯೋ ಗೆ ಹೊಸದಾಗಿ 60 ಲಕ್ಷ ಗ್ರಾಹಕರು ಮಾತ್ರ ಸೇರ್ಪಡೆಯಾಗಿದ್ದಾರೆ ಎಂದು ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ತಿಳಿಸಿದೆ.

    ಸೆಪ್ಟೆಂಬರ್‍ನಲ್ಲಿ ಅಧಿಕೃತವಾಗಿ ಬಿಡುಗಡೆಯಾದ ಬಳಿಕದ ಮಾರ್ಚ್ ತಿಂಗಳಿನಲ್ಲಿ ಅತಿ ಕಡಿಮೆ ಸಂಖ್ಯೆಯ ಗ್ರಾಹಕರು ಜಿಯೋಗೆ ಸೇರ್ಪಡೆಯಾಗಿದ್ದಾರೆ ಎಂದು ಟ್ರಾಯ್ ತಿಳಿಸಿದೆ. ಈ ಅವಧಿಯಲ್ಲಿ ಏರ್‍ಟೆಲ್ 30 ಲಕ್ಷ, ಐಡಿಯಾ 21 ಲಕ್ಷ, ವೊಡಾಫೋನ್ 1.8 ಲಕ್ಷ ಮಂದಿ ಹೊಸದಾಗಿ ಸೇರ್ಪಡೆಯಾಗಿದ್ದಾರೆ.

    ಬಿಡುಗಡೆಯಾದ ಮೊದಲ ತಿಂಗಳಿನಲ್ಲಿ 1.6 ಕೋಟಿ ಗ್ರಾಹಕರನ್ನು ತಲುಪಿದ್ದ ಜಿಯೋ ಅಕ್ಟೋಬರ್ ನಲ್ಲಿ 1.96 ಕೋಟಿ, ನವೆಂಬರ್ ನಲ್ಲಿ 1.63 ಕೋಟಿ ಗ್ರಾಹಕರನ್ನು ತಲುಪಿತ್ತು. ಹ್ಯಾಪಿ ನ್ಯೂ ಇಯರ್ ಪ್ಲಾನ್ ಬಳಿಕ ಜಿಯೋಗೆ ಹೊಸದಾಗಿ 2.3 ಕೋಟಿ ಗ್ರಾಹರು ಸೇರ್ಪಡೆಯಾಗಿದ್ದರು.

    ಪ್ರಸ್ತುತ ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಏರ್‍ಟೆಲ್ 23.39%, ವೊಡಾಫೋನ್ 17.87%, ಐಡಿಯಾ 16.70% ಪಾಲನ್ನು ಪಡೆದುಕೊಂಡಿದ್ದರೆ, ಜಿಯೋ 9.29% ಪಡೆದುಕೊಂಡಿದೆ.

    ಕೇವಲ 5 ಕೋಟಿ ಗ್ರಾಹಕರನ್ನು 83 ದಿನದಲ್ಲಿ ತಲುಪಿದ್ದ ಜಿಯೋ, 10 ಕೋಟಿ ಗ್ರಾಹಕರ ಸಂಖ್ಯೆಯನ್ನು 2017ರ ಫೆಬ್ರವರಿಯಲ್ಲಿ 22 ರಂದು ತಲುಪಿತ್ತು.

    ಇದನ್ನೂ ಓದಿ: ಗ್ರಾಹಕರಿಗೆ ಉಚಿತ ಡೇಟಾ ನೀಡಿದ್ದ ಜಿಯೋಗೆ ಆಗಿರುವ ನಷ್ಟ ಎಷ್ಟು ಗೊತ್ತೆ?

  • ಈ ನಗರಗಳಲ್ಲಿ ಆಗ್ತಿದೆ ಜಿಯೋ ಫೈಬರ್ ಬ್ರಾಂಡ್‍ಬ್ಯಾಂಡ್ ಟೆಸ್ಟಿಂಗ್: ನಿಮ್ಮ ನಗರ ಇದ್ಯಾ?

    ಈ ನಗರಗಳಲ್ಲಿ ಆಗ್ತಿದೆ ಜಿಯೋ ಫೈಬರ್ ಬ್ರಾಂಡ್‍ಬ್ಯಾಂಡ್ ಟೆಸ್ಟಿಂಗ್: ನಿಮ್ಮ ನಗರ ಇದ್ಯಾ?

    ಮುಂಬೈ: ಕಡಿಮೆ ಬೆಲೆಯಲ್ಲಿ ಗ್ರಾಹಕರಿಗೆ ಡೇಟಾ ನೀಡಿ ಕಮಾಲ್ ಮಾಡಿದ್ದ ಜಿಯೋ ಈಗ ಫೈಬರ್ ಬ್ರಾಡ್‍ಬ್ಯಾಂಡ್ ಸೇವೆಯನ್ನು ಆರಂಭಿಸಲು ಮುಂದಾಗುತ್ತಿದ್ದು ಕೆಲ ನಗರಗಳಲ್ಲಿ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸುತ್ತಿದೆ.

    ವ್ಯಕ್ತಿಯೊಬ್ಬರು ಜಿಯೋ ಫೈಬರ್ ಸೇವೆಯ ಬಗ್ಗೆ ಟ್ವಿಟ್ಟರ್ ನಲ್ಲಿ ಕೇಳಿದ್ದಕ್ಕೆ ಜಿಯೋ ಕೇರ್ ಮುಂಬೈ, ದೆಹಲಿ ಎನ್‍ಸಿಆರ್, ಅಹಮದಾಬಾದ್, ಜಾಮ್‍ನಗರ, ಸೂರತ್ ಮತ್ತು ವಡೋದರಾದಲ್ಲಿ ಪರೀಕ್ಷೆ ನಡೆಯುತ್ತಿದೆ ಎಂದು ಉತ್ತರಿಸಿದೆ.

    ಈ ವೇಳೆ ದೇಶದ ಮತ್ತಷ್ಟು ನಗರಗಳಲ್ಲಿ ಈ ಸೇವೆಯನ್ನು ಪರಿಚಯಿಸಲಾಗುತ್ತದೆ ಎಂದು ತಿಳಿಸಿದ್ದು, ಪಟ್ಟಿಯಲ್ಲಿ ಯಾವೆಲ್ಲ ನಗರಗಳಿವೆ ಎನ್ನುವ ಮಾಹಿತಿಯನ್ನು ತಿಳಿಸಿಲ್ಲ.

    ಈಗಾಗಲೇ ಜಿಯೋ ಫೈಬರ್ ಬ್ರಾಡ್‍ಬ್ಯಾಂಡ್ ಸೇವೆ ಪಡೆಯುವ ಕೆಲ ಗ್ರಾಹಕರು ಈ ಹಿಂದೆ ಟ್ವೀಟ್ ಮಾಡಿದ್ದು, 1 ಜಿಬಿಪಿಎಸ್ ಸಂಪರ್ಕದಲ್ಲಿ 70 ಎಂಬಿಪಿಎಸ್ 100 ಎಂಬಿಪಿಎಸ್ ಡೇಟಾ ಸ್ಪೀಡ್ ಸಿಕ್ಕಿದೆ ಎಂದು ಹೇಳಿದ್ದರು. ಪುಣೆಯಲ್ಲಿ 743.28 ಎಂಬಿಪಿಎಸ್ ಡೇಟಾ ಸ್ಪೀಡ್ ದಾಖಲಾಗಿತ್ತು.

    ಈ ಫೈಬರ್ ಸೇವೆಯನ್ನು ಯಾವಾಗ ಆರಂಭವಾಗಲಿದೆ ಎನ್ನುವುದನ್ನು ಜಿಯೋ ಇನ್ನು ಅಧಿಕೃತವಾಗಿ ತಿಳಿಸಿಲ್ಲ. ಜಿಯೋ ಫೈಬರ್ ರೂಟರ್ ಬೆಲೆ 4 ಸಾವಿರ- 4,500 ರೂ. ಇರಲಿದೆ ಎಂದು ಹೇಳಲಾಗುತ್ತಿದ್ದು, ಖರೀದಿಸಿದ ಮೊದಲ 90 ದಿನ ಈ ಸೇವೆ ಜಿಯೋದಂತೆ ಉಚಿತವಾಗಿ ಸಿಗಲಿದೆ

    2016ರ ಸೆಪ್ಟೆಂಬರ್ ನಲ್ಲಿ ನಡೆದ ರಿಲಯನ್ಸ್ ವಾರ್ಷಿಕ ಸಭೆಯಲ್ಲಿ ಮುಕೇಶ್ ಅಂಬಾನಿ ಮಲ್ಟಿ ಗಿಗಾಬೈಟ್ ಸೇವೆಯನ್ನು ದೇಶದ 100 ನಗರಗಳಲ್ಲಿ ಆರಂಭಿಸಲಾಗುವುದು ಎಂದು ತಿಳಿಸಿದ್ದರು.

    ಇದನ್ನೂ ಓದಿ: ಗ್ರಾಹಕರಿಗೆ ಉಚಿತ ಡೇಟಾ ನೀಡಿದ್ದ ಜಿಯೋಗೆ ಆಗಿರುವ ನಷ್ಟ ಎಷ್ಟು ಗೊತ್ತೆ?

    ಇದನ್ನೂ ಓದಿ:ಸಿಮ್ ಆಯ್ತು ಜಿಯೋ ಸೆಟ್‍ಟಾಪ್ ಬಾಕ್ಸ್: ವಿಶೇಷತೆ ಏನು? ಬೆಲೆ ಎಷ್ಟು? ಆರಂಭ ಯಾವಾಗ?

  • ಗ್ರಾಹಕರಿಗೆ ಉಚಿತ ಡೇಟಾ ನೀಡಿದ್ದ ಜಿಯೋಗೆ ಆಗಿರುವ ನಷ್ಟ ಎಷ್ಟು ಗೊತ್ತೆ?

    ಗ್ರಾಹಕರಿಗೆ ಉಚಿತ ಡೇಟಾ ನೀಡಿದ್ದ ಜಿಯೋಗೆ ಆಗಿರುವ ನಷ್ಟ ಎಷ್ಟು ಗೊತ್ತೆ?

    ನವದೆಹಲಿ: ಗ್ರಾಹಕರಿಗೆ ಉಚಿತ ಡೇಟಾ ನೀಡಿರುವ ರಿಲಯನ್ಸ್ ಜಿಯೋ ಕಳೆದ ಆರು ತಿಂಗಳಿನಲ್ಲಿ 22.5 ಕೋಟಿ ರೂ. ನಿವ್ವಳ ನಷ್ಟವನ್ನು ಅನುಭವಿಸಿದೆ.

    ಮುಂಬೈ ಷೇರು ವಿನಿಮಯ ಕೇಂದ್ರಕ್ಕೆ (ಬಿಎಸ್‍ಇ) ಸೋಮವಾರ ಸಲ್ಲಿಸಿದ್ದ ಲೆಕ್ಕ ಪತ್ರದಲ್ಲಿ ಈ ವಿವರವನ್ನು ಜಿಯೋ ನೀಡಿದೆ.

    ಮಾರ್ಚ್ 31ಕ್ಕೆ ಅಂತ್ಯಗೊಂಡ ಹಣಕಾಸು ವರ್ಷದಲ್ಲಿ 22.5 ಕೋಟಿ ರೂ. ನಷ್ಟವನ್ನು ಅನುಭವಿಸಿದ್ದರೆ, ಈ ಹಿಂದಿನ ಹಣಕಾಸು ವರ್ಷದಲ್ಲಿ 7.46 ಕೋಟಿ ರೂ. ನಿವ್ವಳ ನಷ್ಟವನ್ನು ಅನುಭವಿಸಿತ್ತು. ಜಿಯೋದ ಒಟ್ಟು ಆದಾಯ ಕಳೆದ 6 ತಿಂಗಳಿನಲ್ಲಿ 2.25 ಕೋಟಿ ರೂ.ಗಳಿಂದ 54 ಲಕ್ಷ ರೂ. ಇಳಿಕೆಯಾಗಿದೆ.

    ಸೆಪ್ಟೆಂಬರ್ ತಿಂಗಳಿನಲ್ಲಿ ಆರಂಭಗೊಂಡಿದ್ದ ಜಿಯೋ ಮಾರ್ಚ್ 31ರ ವರೆಗೆ ಉಚಿತ ಸೇವೆಯನ್ನು ನೀಡಿತ್ತು. ಏಪ್ರಿಲ್ ಬಳಿಕ ಗ್ರಾಹಕರಿಂದ ತನ್ನ ಸೇವೆಗಳಿಗೆ ಶುಲ್ಕ ಪಡೆಯಲು ಆರಂಭಿಸಿತ್ತು.

    ಜಿಯೋ ಪ್ರೈಮ್ ನೋಂದಣಿಗೆ 99 ರೂ., ಸಮ್ಮರ್ ಸರ್‍ಪ್ರೈಸ್ ಆಫರ್ ಗೆ 303 ರೂ. ಬಳಿಕ ಧನ್ ಧನಾ ಧನ್ ಆಫರ್‍ಗೆ 309 ರೂ. ಶುಲ್ಕ ವಿಧಿಸಿತ್ತು.

    ಜಾಗತಿಕ ಹಣಕಾಸು ಸಂಸ್ಥೆ ಮೊರ್ಗಾನ್ ಸ್ಟಾನ್ಲಿ ಈ ಹಿಂದೆ ಜಿಯೋ 2020ರ ನಂತರ ಲಾಭ ಗಳಿಸಲಿದೆ ಎಂದು ಹೇಳಿತ್ತು. 2018ರಲ್ಲಿ 218 ಕೋಟಿ ರೂ., 2019 ರಲ್ಲಿ 209 ಕೋಟಿ ರೂ., 2020ರಲ್ಲಿ 233 ಕೋಟಿ ರೂ. ಆದಾಯಗಳಿಸಲಿದೆ ಎಂದು ಅದು ಅಂದಾಜಿಸಿದೆ.

    12 ಕೋಟಿ  ಬಳಕೆದಾರರಲ್ಲಿ ಈಗ 7.2 ಕೋಟಿ ಜನ ಪ್ರೈಮ್ ಸದಸ್ಯರಾಗಿದ್ದಾರೆ ಎಂದು ಜಿಯೋ ಹೇಳಿದೆ.

    2010ರಲ್ಲಿ ಆರಂಭಗೊಂಡಿದ್ದ ಜಿಯೋ 6 ವರ್ಷಗಳ ಎಲ್‍ಟಿಇ ನೆಟ್‍ವರ್ಕ್ ವಿಸ್ತರಣೆ ಮಾಡಿ, 2016ರ ಸೆಪ್ಟೆಂಬರ್‍ನಲ್ಲಿ ಆರಂಭಗೊಂಡಿತ್ತು. ಈಗ ಕೇವಲ ಆಫರ್‍ಗಳಿಗೆ ಮಾತ್ರ ಜಿಯೋ ಶುಲ್ಕ ವಿಧಿಸಿದ್ದರೂ ಮಾರ್ಚ್ 31, 2018ರ ನಂತರ ಜಿಯೋ ಆಪ್ ಗುಚ್ಚಗಳಿಗೆ ಶುಲ್ಕ ವಿಧಿಸಲಿದೆ.

    ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಜಿಯೋಗೆ ಒಟ್ಟು 2.5 ಲಕ್ಷ ಕೋಟಿ ರೂ.ಗಳನ್ನು  ಹೂಡಿಕೆ ಮಾಡಲಾಗಿದೆ ಎಂದು ಈ ಹಿಂದೆ ತಿಳಿಸಿದ್ದರು.

     ಇದನ್ನೂ ಓದಿ: ಈಗ ಬಿಎಸ್‍ಎನ್‍ಎಲ್‍ನಿಂದ ಗ್ರಾಹಕರಿಗೆ ಬಂಪರ್ ಆಫರ್

    ಇದನ್ನೂ ಓದಿ: ಜಿಯೋಗೆ ಫೈಟ್ ನೀಡಲು ಏರ್‍ಟೆಲ್‍ನಿಂದ ಪ್ರತಿದಿನ 1ಜಿಬಿ ಡೇಟಾದ ಹೊಸ ಆಫರ್ ರಿಲೀಸ್

    ಇದನ್ನೂ ಓದಿ: ಜಿಯೋ ಬಳಕೆದಾರರಿಗೆ ಮತ್ತೊಂದು ಗುಡ್‍ನ್ಯೂಸ್

    ಇದನ್ನೂ ಓದಿ: ಜಿಯೋ ಎಫೆಕ್ಟ್: 7 ವರ್ಷದಲ್ಲಿ ಮೊದಲ ಬಾರಿಗೆ ಟೆಲಿಕಾಂ ಕಂಪೆನಿಗಳ ಆದಾಯ ಭಾರೀ ಇಳಿಕೆ

    ಇದನ್ನೂ ಓದಿ:ಸಿಮ್ ಆಯ್ತು ಜಿಯೋ ಸೆಟ್‍ಟಾಪ್ ಬಾಕ್ಸ್: ವಿಶೇಷತೆ ಏನು? ಬೆಲೆ ಎಷ್ಟು? ಆರಂಭ ಯಾವಾಗ?

     


  • ಜಿಯೋ ಎಫೆಕ್ಟ್: 7 ವರ್ಷದಲ್ಲಿ ಮೊದಲ ಬಾರಿಗೆ ಟೆಲಿಕಾಂ ಕಂಪೆನಿಗಳ ಆದಾಯ ಭಾರೀ ಇಳಿಕೆ

    ಜಿಯೋ ಎಫೆಕ್ಟ್: 7 ವರ್ಷದಲ್ಲಿ ಮೊದಲ ಬಾರಿಗೆ ಟೆಲಿಕಾಂ ಕಂಪೆನಿಗಳ ಆದಾಯ ಭಾರೀ ಇಳಿಕೆ

    ನವದೆಹಲಿ: ರಿಲಯನ್ಸ್ ಜಿಯೋ ಆಫರ್‍ಗಳಿಂದಾಗಿ 7 ವರ್ಷದಲ್ಲಿ ಮೊದಲ ಬಾರಿಗೆ 9 ಟೆಲಿಕಾಂ ಕಂಪೆನಿಗಳ ಆದಾಯ 2016-17ರಲ್ಲಿ 18.8 ಲಕ್ಷ ಕೋಟಿ ರೂ.ಗೆ ಕುಸಿತವಾಗಿದೆ ಎಂದು ಹೂಡಿಕೆ ಮಧ್ಯಸ್ಥಿಕೆ ಸಂಸ್ಥೆ ಸಿಎಲ್‍ಎಸ್‍ಎ ಅಂಕಿಅಂಶಗಳನ್ನು ಆಧಾರಿಸಿ ಲೈವ್‍ಮಿಂಟ್ ವರದಿ ಮಾಡಿದೆ.

    ಟೆಲಿಕಾಂ ಕಂಪೆನಿಗಳು 2015- 16ನೇ ಸಾಲಿನಲ್ಲಿ 19.3 ಲಕ್ಷ ಕೋಟಿ ರೂ. ಆದಾಯಗಳಿಸಿದ್ದರೆ, ಮುಂದಿನ ವರ್ಷಗಳಲ್ಲಿ ಈ ಆದಾಯ ಮತ್ತಷ್ಟು ಕಡಿಮೆಯಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

    2017-18ನೇ ಸಾಲಿನಲ್ಲಿ 1.84 ಲಕ್ಷ ಕೋಟಿ ರೂ. 2018-19ನೇ ಸಾಲಿನಲ್ಲಿ 18.7 ಲಕ್ಷ ಕೋಟಿ ರೂ. ಆದಾಯ ಬರಬಹುದೆಂದು ಈ ಹಿಂದೆ ಲೆಕ್ಕಾಚಾರ ಹಾಕಲಾಗಿತ್ತಾದರೂ ಅದೂ ಸಹ ಕಡಿಮೆಯಾಗಲಿದೆ ಎಂದು ವರದಿ ತಿಳಿಸಿದೆ.

    ಡಿಸೆಂಬರ್‍ನಲ್ಲಿ ಮುಕ್ತಾಯವಾದ ತ್ರೈಮಾಸಿಕ ಅವಧಿಯಲ್ಲಿ 9 ದೂರಸಂಪರ್ಕ ಕಂಪೆನಿಗಳ ಆದಾಯ ಶೇ. 1.1ರಷ್ಟು ಕುಸಿತವಾಗಿತ್ತು. ಇದು ಕಳೆದ 6 ತ್ರೈಮಾಸಿಕಗಳಲ್ಲೇ ದಾಖಲಾಗಿರುವ ಕಡಿಮೆ ಲಾಭದ ಪ್ರಮಾಣ ಎಂದು ಕೇರ್ ರೇಟಿಂಗ್ ಏಜೆನ್ಸಿ ತಿಳಿಸಿದೆ.

    ಡಿಸೆಂಬರ್‍ನಲ್ಲಿ ಕೊನೆಗೊಂಡ ತ್ರೈಮಾಸಿಕ ಅವಧಿಯಲ್ಲಿ ಏರ್‍ಟೆಲ್ ಆದಾಯದಲ್ಲಿ ಶೇ. 10.4ರ ಕುಸಿತವಾಗಿದ್ದರೆ, ಐಡಿಯಾದ ಆದಾಯದಲ್ಲಿ ಶೇ. 10.8ರಷ್ಟು ಇಳಿಕೆಯಾಗಿತ್ತು ಎಂದು ಕೇರ್ ರೇಟಿಂಗ್ ಏಜೆನ್ಸಿ ತಿಳಿಸಿದೆ.

    ಮೆಸೇಜ್, ಕರೆ, ಆಪ್ ಗಳನ್ನು ಉಚಿತವಾಗಿ ನೀಡಿ, ಡೇಟಾಗೆ ಮಾತ್ರ ಜಿಯೋ ದರ ನಿಗದಿ ಪಡಿಸಿದ ಕಾರಣ ಟೆಲಿಕಾಂ ಕಂಪೆನಿಗಳ ಆದಾಯದಲ್ಲಿ ಭಾರೀ ಇಳಿಕೆಯಾಗಿದೆ.

    ಇದನ್ನೂ ಓದಿ: ಜಿಯೋ ಎಫೆಕ್ಟ್: ಏರ್‍ಟೆಲ್‍ನಿಂದ ಟೆಲಿನಾರ್ ಕಂಪೆನಿ ಖರೀದಿ

    ಜಿಯೋಗೆ ಸ್ಪರ್ಧೆ ನೀಡಲು ಫೆಬ್ರವರಿಯಲ್ಲಿ ಏರ್‍ಟೆಲ್ ನಾರ್ವೆಯ ಟೆಲಿನಾರ್ ಕಂಪೆನಿಯ ಭಾರತದ ಘಟಕವನ್ನು ಖರೀದಿಸಿತ್ತು. ಮಾರ್ಚ್‍ನಲ್ಲಿ ದೇಶದ ಅತೀ ದೊಡ್ಡ ಟೆಲಿಕಾಂ ಸಂಸ್ಥೆಯನ್ನು ಸ್ಥಾಪಿಸುವ ಸಲುವಾಗಿ ಐಡಿಯಾ ಸೆಲ್ಯುಲರ್ ಮತ್ತು ಬ್ರಿಟಿಷ್ ಟೆಲಿಕಾಂ ಸಂಸ್ಥೆ ವೊಡಾಫೋನ್ ಭಾರತದ ಘಟಕ ವಿಲೀನಗೊಳ್ಳುತ್ತಿರುವ ಬಗ್ಗೆ ಘೋಷಿಸಿತ್ತು. ಐಡಿಯಾ ಹಾಗೂ ವೊಡಾಫೋನ್  ಇಂಡಿಯಾ ವಿಲೀನದಿಂದ 40 ಕೋಟಿಗೂ ಅಧಿಕ ಗ್ರಾಹಕರನ್ನೊಳಗೊಂಡ ಭಾರತದ ಅತೀ ದೊಡ್ಡ ಟೆಲಿಕಾಮ್ ಸಂಸ್ಥೆಯಾಗಿ ಹೊರಹೊಮ್ಮಲಿದೆ.

    ಸೆಪ್ಟೆಂಬರ್‍ನಲ್ಲಿ ಆರಂಭಗೊಂಡಿದ್ದ ಜಿಯೋ ಆರಂಭದಲ್ಲಿ ಡಿಸೆಂಬರ್ ವರೆಗೆ ಗ್ರಾಹಕರಿಗೆ ವೆಲಕಂ ಆಫರ್ ನೀಡಿತ್ತು. ಇದಾದ ಬಳಿಕ ಮಾರ್ಚ್ 31ರವರೆಗೆ ಹ್ಯಾಪಿ ನ್ಯೂ ಇಯರ್ ಪ್ಲಾನ್ ಬಿಡುಗಡೆ ಮಾಡಿತ್ತು. ಇದಾದ ಬಳಿಕ 99 ರೂ. ನೀಡಿ ಪ್ರೈಮ್ ಸದಸ್ಯರಾದವರಿಗೆ ಸಮ್ಮರ್ ಸರ್‍ಪ್ರೈಸ್ ಆಫರನ್ನು ಪ್ರಕಟಿಸಿ ಬಳಿಕ ಟ್ರಾಯ್ ನಿರ್ದೇಶನ ಮೇಲೆ ಈ ಆಫರ್‍ಗಳನ್ನು ಜಿಯೋ ಹಿಂದಕ್ಕೆ ಪಡೆದುಕೊಂಡಿದೆ. ಇದಾದ ಬಳಿಕ ಏಪ್ರಿಲ್ 11 ರಂದು ಧನ್ ಧನ ಧನ್ ಹೆಸರಿನಲ್ಲಿ ಮೂರು ತಿಂಗಳು ವ್ಯಾಲಿಡಿಟಿ ಹೊಂದಿರುವ ಹೊಸ ಆಫರ್‍ಗಳನ್ನು ಪರಿಚಯಿಸಿದೆ.

    ಇದನ್ನೂ ಓದಿ: ಜಿಯೋ ಎಫೆಕ್ಟ್: ಐಡಿಯಾ, ವೊಡಾಫೋನ್ ಇಂಡಿಯಾ ವಿಲೀನ

    ಪ್ರಸ್ತುತ ಜಿಯೋಗೆ 10 ಕೋಟಿ ಗ್ರಾಹಕರಿದ್ದಾರೆ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಹೇಳಿದ್ದಾರೆ. ಕಡಿಮೆ ಅವಧಿಯಲ್ಲಿ ಅತಿ ಹೆಚ್ಚು ಸಂಖ್ಯೆಯ ಗ್ರಾಹಕರನ್ನು ಸಂಪಾದಿಸುವ ಮೂಲಕ ಜಿಯೋ ವಿಶ್ವದಾಖಲೆ ನಿರ್ಮಿಸಿದೆ.

    ಇದನ್ನೂ ಓದಿ:ಸಿಮ್ ಆಯ್ತು ಜಿಯೋ ಸೆಟ್‍ಟಾಪ್ ಬಾಕ್ಸ್: ವಿಶೇಷತೆ ಏನು? ಬೆಲೆ ಎಷ್ಟು? ಆರಂಭ ಯಾವಾಗ?

    ಇದನ್ನೂ ಓದಿ: ಜಿಯೋದಿಂದ ಈಗ ಧನ್ ಧನಾ ಧನ್ ಹೊಸ ಆಫರ್