Tag: Relief

  • 8 ಅಯ್ಯಪ್ಪ ಮಾಲಾಧಾರಿಗಳ ಸಾವು – ಮುಖ್ಯಮಂತ್ರಿಗಳ ನಿಧಿಯಿಂದ ತಲಾ 5 ಲಕ್ಷ ಪರಿಹಾರ ಘೋಷಣೆ

    8 ಅಯ್ಯಪ್ಪ ಮಾಲಾಧಾರಿಗಳ ಸಾವು – ಮುಖ್ಯಮಂತ್ರಿಗಳ ನಿಧಿಯಿಂದ ತಲಾ 5 ಲಕ್ಷ ಪರಿಹಾರ ಘೋಷಣೆ

    ಹುಬ್ಬಳ್ಳಿ: ಸಿಲಿಂಡರ್ ಸ್ಫೋಟಗೊಂಡು (Cylinder Blast) 8 ಮಂದಿ ಅಯ್ಯಪ್ಪ ಮಾಲಾಧಾರಿಗಳು (Ayyappa Devotees) ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಹಿನ್ನೆಲೆ ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ (Relief) ಘೋಷಿಸಲಾಗಿದೆ.

    ಎಂಟು ಜನರಿಗೆ ಪರಿಹಾರ ನೀಡಬೇಕೆಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ (Santhosh Lad) ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು. ಲಾಡ್ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಂದಿಸಿದ್ದು, ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ರೂ. ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ದೆಹಲಿ ಗಣರಾಜ್ಯೋತ್ಸವಕ್ಕೆ ಲಕ್ಕುಂಡಿಯ ಬ್ರಹ್ಮ ಜಿನಾಲಯ ಆಯ್ಕೆ – ವಿಶೇಷತೆ ಏನು?

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಘೋಷಣೆ ಮಾಡಲಾಗಿದೆ. ಸಂತೋಷ್ ಲಾಡ್ ಫೌಂಡೇಶನ್‌ನಿಂದಲೂ ಮೃತರ ಕುಟುಂಬಕ್ಕೆ ಧನ ಸಹಾಯ ಮಾಡಲಾಗಿದೆ. ಇದನ್ನೂ ಓದಿ: ರಾಜ್ಯದ ಜನತೆಗೆ ಗ್ಯಾರಂಟಿ ಶಾಕ್ – ದರ ಏರಿಕೆಗೆ ಸರ್ಕಾರ ಹೇಳೋದು ಏನು?

    ಡಿಸೆಂಬರ್ 22ರಂದು ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಂಭೀರ ಗಾಯಗೊಂಡಿದ್ದರು. ಗಾಯಾಳುಗಳಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ 8 ಮಂದಿ ಅಯ್ಯಪ್ಪ ಮಾಲಾಧಾರಿಗಳು ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಬಾಣಂತಿಯರಿಗೆ ಬದುಕುವ ಗ್ಯಾರಂಟಿ ನೀಡಿ: ಅಶೋಕ್ ಕಿಡಿ

  • ಬೆಂಗಳೂರಿನಲ್ಲಿ ಮಳೆ ಅವಾಂತರ – 60 ಮನೆಗಳಿಗೆ ಪರಿಹಾರ ನೀಡಲು ಬಿಬಿಎಂಪಿ ಪಟ್ಟಿ ಸಿದ್ಧ

    ಬೆಂಗಳೂರಿನಲ್ಲಿ ಮಳೆ ಅವಾಂತರ – 60 ಮನೆಗಳಿಗೆ ಪರಿಹಾರ ನೀಡಲು ಬಿಬಿಎಂಪಿ ಪಟ್ಟಿ ಸಿದ್ಧ

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಶನಿವಾರ ಹಾಗೂ ಭಾನುವಾರ ಸುರಿದ ಮಳೆಗೆ (Rain) ದೊಡ್ಡ ಅವಾಂತರಗಳು ಸೃಷ್ಟಿ ಆಗಿದೆ. ನೀರು ನುಗ್ಗಿ ಮನೆಗಳು ಕುಸಿದಿದ್ದವು. ಈಗ ಬಿಬಿಎಂಪಿ (BBMP) ಮಳೆಯಿಂದ ಆದ ಹಾನಿಗೆ ಪರಿಹಾರ (Relief) ಕೊಡಲು ಮುಂದಾಗಿದೆ.

    ಬೆಂಗಳೂರಿನಲ್ಲಿ ಒಂದು ಗಂಟೆ, ಎರಡು ಗಂಟೆ ಮಳೆ ಬಂತು ಎಂದರೆ ಬೆಂಗಳೂರಿಗರು ನರಕ ಅನುಭವಿಸುತ್ತಾರೆ. ಶನಿವಾರ ಬೆಂಗಳೂರಿನಲ್ಲಿ 115 ಮಿ.ಮೀ ಮಳೆ ಆಗಿತ್ತು. ಬೆಂಗಳೂರಿನ 43ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಜೋರು ಮಳೆ ಆಗಿತ್ತು. ಗಾಂಧಿ ನಗರ ವಿಧಾನಸಭಾ ಕ್ಷೇತ್ರ, ಯಲಹಂಕ ಸೇರಿದಂತೆ ಹಲವು ಕಡೆ ಮಳೆಯಾಗಿ 60ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿತ್ತು. ಈಗ ಪಾಲಿಕೆ ಮಳೆಯಿಂದ ಆದ ಹಾನಿಗೆ ಪರಿಹಾರ ನೀಡಲು ನಿರ್ಧರಿಸಿದೆ. 60 ಮನೆಗಳನ್ನು ಗುರುತು ಮಾಡಿದ್ದು, ಪ್ರತಿ ಮನೆಗೆ 10 ರಿಂದ 15 ಸಾವಿರ ಪರಿಹಾರ ನೀಡಲು ಮುಂದಾಗಿದೆ. ಇದನ್ನೂ ಓದಿ: ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತುಳು ನಾಡಿದ ದೈವ ನರ್ತನ – ಕಾನೂನು ಸಮರಕ್ಕೆ ಮುಂದಾಗಿರುವ ಕೊಡಗು ದೈವ ನರ್ತಕರ ಸಂಘ

    ಇನ್ನೂ ಬಿಬಿಎಂಪಿ ಪಶ್ಚಿಮ ವಲಯ, ಯಲಹಂಕ ವಲಯದಲ್ಲಿ ಹೆಚ್ಚು ಹಾನಿಯಾಗಿದೆ ಎಂದು ಹೇಳಲಾಗುತ್ತಿದೆ. ಮನೆಗೆ ನೀರು ನುಗ್ಗಿ 48 ಗಂಟೆಗಳ ಕಾಲ ಜನ ಸಮಸ್ಯೆಗೆ ಒಳಗಾಗುತ್ತಿದ್ದರೆ ಪರಿಹಾರಕ್ಕೆ ಅರ್ಹರು ಎಂದು ಪರಿಗಣನೆಗೆ ತೆಗೆದುಕೊಳ್ಳಲಾಗುತ್ತಿದೆ. ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್ ಮುಳುಗಡೆ ಸಂಬಂಧ ನೀರು ಹಾದು ಹೋಗಲು ಹೊಸ ಕಾಲುವೆ ನಿರ್ಮಾಣಕ್ಕೆ ಚಿಂತನೆ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ಇದನ್ನೂ ಓದಿ: ಒಂದೇ ಗಂಟೆಯೊಳಗೆ 120ಕ್ಕೂ ಹೆಚ್ಚು ಹಿಜ್ಬುಲ್ಲಾ ಉಗ್ರರ ತಾಣಗಳನ್ನು ಧ್ವಂಸ ಮಾಡಿದ ಇಸ್ರೇಲ್

  • ಕುವೈತ್ ಅಗ್ನಿ ದುರಂತದಲ್ಲಿ ಮೃತಪಟ್ಟ ವಿಜಯ್ ಕುಮಾರ್ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ

    ಕುವೈತ್ ಅಗ್ನಿ ದುರಂತದಲ್ಲಿ ಮೃತಪಟ್ಟ ವಿಜಯ್ ಕುಮಾರ್ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ

    ಬೆಂಗಳೂರು: ಕುವೈತ್ ಅಗ್ನಿ ದುರಂತದಲ್ಲಿ (Kuwait Fire Disaster) ಸಾವಿಗೀಡಾಗಿರುವ ಕಲಬುರಗಿ (Kalaburagi) ಜಿಲ್ಲೆಯ ಆಳಂದ ತಾಲೂಕಿನ ಸರಸಂಬ ಗ್ರಾಮದ ವಿಜಯ್ ಕುಮಾರ್ (40) ಬಿನ್ ಕೊಬ್ಬಣ್ಣ ಪ್ರಸನ್ನ ಅವರ ಅವಲಂಬಿತ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ರೂ.ಗಳ ಪರಿಹಾರವನ್ನು ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸೂಚನೆ ನೀಡಿದ್ದಾರೆ.

    ಕಳೆದ ಎಂಟು ವರ್ಷಗಳಿಂದ ವಾಹನ ಚಾಲಕರಾಗಿ ಕುವೈತ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅನಿವಾಸಿ ಭಾರತೀಯ ವಿಜಯ ಕುಮಾರ್ ಅವರ ಕುಟುಂಬದಲ್ಲಿ ಅವರ ಅಣ್ಣ ತಮ್ಮಂದಿರು ಸೇರಿದಂತೆ 8 ಜನ ಅವಲಂಬಿತರಿದ್ದಾರೆ. ಇದನ್ನೂ ಓದಿ: ಆನ್‍ಲೈನ್ ಆಪ್‍ನಲ್ಲಿ ಹಣ ಹೂಡಿ ನಷ್ಟ – ಮಹಾರಾಣಿ ವಿವಿ ಹಾಸ್ಟೆಲ್‍ನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು

    ಇವರ ಜೀವನ ನಿರ್ವಹಣೆ ದುಸ್ತರವಾಗುವುದರಿಂದ ಕೇರಳ ಸರ್ಕಾರ ಅಗ್ನಿ ದುರಂತದಲ್ಲಿ ಮೃತರ ಕುಟಂಬಕ್ಕೆ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿರುವಂತೆಯೇ ರಾಜ್ಯ ಸರ್ಕಾರವೂ ಆರ್ಥಿಕ ನೆರವು ಘೋಷಿಸಬೇಕೆಂದು ರಾಜ್ಯ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಮನವಿ ಮಾಡಿದ್ದರು. ಅವರ ಮನವಿಗೆ ಸ್ಪಂದಿಸಿ ಮುಖ್ಯಮಂತ್ರಿಗಳು ಮೃತ ವಿಜಯಕುಮಾರ್ ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಒದಗಿಸಲು ಸೂಚಿಸಿದ್ದಾರೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ A1 ಆರೋಪಿ ಪವಿತ್ರಾ ಗೌಡ ಅಸ್ವಸ್ಥ

  • ಪಟಾಕಿ ಗೋದಾಮು ದುರಂತ ಸೂಕ್ತ ತನಿಖೆಯಾಗಲಿ: ಬಸವರಾಜ ಬೊಮ್ಮಾಯಿ

    ಪಟಾಕಿ ಗೋದಾಮು ದುರಂತ ಸೂಕ್ತ ತನಿಖೆಯಾಗಲಿ: ಬಸವರಾಜ ಬೊಮ್ಮಾಯಿ

    – ಮೃತರ ಕುಟುಂಬಗಳಿಗೆ ಬಿಜೆಪಿಯಿಂದ ತಲಾ ಒಂದು ಲಕ್ಷ ರೂ. ಪರಿಹಾರ

    ಹಾವೇರಿ: ಹಾವೇರಿ (Haveri) ತಾಲೂಕಿನ ಆಲದಕಟ್ಟೆ ಗ್ರಾಮದ ಪಟಾಕಿ ಸಿಡಿಮದ್ದು ಗೋದಾಮಿನಲ್ಲಿ ನಾಲ್ವರು ಕಾರ್ಮಿಕರು ಸಜೀವ ದಹನವಾಗಿರುವ ಘಟನೆ ಅತ್ಯಂತ ದುಃಖದ ಸಂಗತಿಯಾಗಿದೆ. ರಾಜ್ಯ ಸರ್ಕಾರ ಈ ಘಟನೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ, ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಮನವಿ ಮಾಡಿದ್ದಾರೆ.

    ಈ ಕುರಿತು ಮಾತನಾಡಿದ ಅವರು, ಈ ರೀತಿಯ ಅಪಾಯಕಾರಿ ಸ್ಥಳಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ರಕ್ಷಣೆಗೆ ಅಗತ್ಯವಿರುವ ಮುಂಜಾಗ್ರತಾ ಕ್ರಮಗಳ ಕುರಿತು ಅಧಿಕಾರಿಗಳು ನಿಗಾವಹಿಸಬೇಕು. ಹಾವೇರಿ ಜಿಲ್ಲೆ ಹಾಗೂ ರಾಜ್ಯದಲ್ಲಿ ಈ ರೀತಿಯ ಪಟಾಕಿ (Fire Works) ಸಿಡಿಮದ್ದು ದಾಸ್ತಾನು ಕೇಂದ್ರಗಳ ಕುರಿತು ಪರಿಶೀಲನೆ ನಡೆಸಿ ಕಾರ್ಮಿಕರಿಗೆ ಸೂಕ್ತ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಇಂದೇ ಗೃಹಲಕ್ಷ್ಮಿ ಹಣ ಬರುವ ನಿರೀಕ್ಷೆಯಲ್ಲಿ ರಾಯಚೂರಿನ 3,64,059 ಫಲಾನುಭವಿಗಳು

    ಬೆಂಕಿ ಅವಘಡದಲ್ಲಿ ಸಜೀವ ದಹನವಾಗಿರುವ ಕಾರ್ಮಿಕರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಕ್ಷಣ ಸೂಕ್ತ ಪರಿಹಾರ ನೀಡಬೇಕು. ಹಾಗೂ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಗೃಹಲಕ್ಷ್ಮಿ ಚಾಲನೆಗೆ ಮೈಸೂರನ್ನೇ ಆಯ್ಕೆ ಮಾಡಿದ್ದು ಯಾಕೆ – ಇಲ್ಲಿದೆ ಇನ್‌ಸೈಡ್‌ ಸ್ಟೋರಿ

    ಬಿಜೆಪಿಯಿಂದ ತಲಾ ಒಂದು ಲಕ್ಷ ರೂ. ಪರಿಹಾರ:
    ಬೆಂಕಿ ದುರ್ಘಟನೆಯಲ್ಲಿ ಮೃತರ ಕುಟುಂಬಗಳಿಗೆ ರಾಜ್ಯ ಬಿಜೆಪಿ (BJP) ವತಿಯಿಂದ ತಲಾ ಒಂದು ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇದನ್ನೂ ಓದಿ: ನಮ್ಮ ಒತ್ತಡಕ್ಕೆ ಮಣಿದು ಪ್ರಧಾನಿ ಸಿಲಿಂಡರ್ ಬೆಲೆ 200 ರೂ. ಇಳಿಸಿದ್ದಾರೆ: ಡಿಕೆಶಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗಡಿಪಾರು ಭೀತಿಯಿಂದ ಮತ್ತೆ ನಟ ಚೇತನ್ ಗೆ ರಿಲೀಫ್

    ಗಡಿಪಾರು ಭೀತಿಯಿಂದ ಮತ್ತೆ ನಟ ಚೇತನ್ ಗೆ ರಿಲೀಫ್

    ಸಿಐ ಮಾನ್ಯತೆ ರದ್ದು ಹಿನ್ನೆಲೆಯಲ್ಲಿ ಗಡಿಪಾರು ಭೀತಿಯಲ್ಲಿದ್ದ ನಟ ಚೇತನ್‍ಗೆ (Chetan) ಹೈಕೋರ್ಟ್‍ನಿಂದ (High Court) ಈ ಹಿಂದೆ ಷರತ್ತುಬದ್ಧ ರಿಲೀಫ್ (Relief) ದೊರೆತಿತ್ತು. ಸಾಗರೋತ್ತರ ಭಾರತೀಯ ಪ್ರಜೆ ಕಾರ್ಡ್ ರದ್ದುಗೊಳಿಸಿದ್ದ ಆದೇಶದ ತಡೆಯಾಜ್ಞೆಯನ್ನು ಹೈಕೋರ್ಟ್ ಮತ್ತೆ ಶುಕ್ರವಾರ ವಿಸ್ತರಿಸಿದೆ. ಹಾಗಾಗಿ ಗಡಿಪಾರು ಭೀತಿಯಲ್ಲಿದ್ದ ಚೇತನ್ ಗೆ ಹೈಕೋರ್ಟ್ ನಿಂದ ಮತ್ತೆ ರಿಲೀಫ್ ಸಿಕ್ಕಂತಾಗಿದೆ.

    ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದ ಮುಂದೆ ಚೇತನ್ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಬಂದಿತ್ತು. ವಾದ ಆಲಿಸಿದ ನ್ಯಾಯಪೀಠ ಕೇಂದ್ರ ಸರಕಾರ ಹೊರಡಿಸಿದ್ದ ಆದೇಶಕ್ಕೆ ತಡೆಯಾಜ್ಞೆ ವಿಸ್ತರಿಸಿದ್ದಲ್ಲದೇ, ಚೇತನ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸರಕಾರಕ್ಕೆ ಸೂಚಿಸಿದೆ.  ಇದನ್ನೂ ಓದಿ:‘ಘೋಸ್ಟ್’ ಚಿತ್ರದ ಸೆಟ್ ಗೆ ಭೇಟಿ ನೀಡಿದ ಸಚಿವ ಮಧು ಬಂಗಾರಪ್ಪ

    ಚೇತನ್‍ಗೆ 2018ರಲ್ಲಿ ಓವರ್ ಸೀಸ್ ಸಿಟಿಜನ್ ಆಫ್ ಇಂಡಿಯಾ ಕಾರ್ಡ್ ನೀಡಲಾಗಿತ್ತು. ಆದರೆ ಚೇತನ್ ಮೇಲೆ ಸಮುದಾಯಗಳ ನಡುವೆ ದ್ವೇಷ ಮೂಡಿಸುವ ಯತ್ನ ಹಾಗೂ ಭಾರತ ವಿರೋಧಿ ಚಟುವಟಿಕೆ ಆರೋಪಗಳಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ (Central Government) ನೋಟಿಸ್ ನೀಡಿ ಉತ್ತರ ಪಡೆದಿತ್ತು. ಚೇತನ್ ನೀಡಿದ್ದ ಉತ್ತರ ಸಮಾಧಾನಕರವಾಗಿಲ್ಲದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಒಸಿಐ ಕಾರ್ಡ್ ರದ್ದುಪಡಿಸಿತ್ತು.

     

    ಆದರೆ ಚೇತನ್ ಪರ ವಕೀಲರು, ಚೇತನ್ ವಾದ ಆಲಿಸದೇ ಕ್ರಮ ಕೈಗೊಂಡಿರುವುದು ಸರಿಯಲ್ಲವೆಂದು ವಾದಿಸಿದ್ದರು. ಈ ವೇಳೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡು ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದರು. ಚೇತನ್ ನ್ಯಾಯಾಂಗದ ವಿರುದ್ಧವೂ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕ್ರಮಕ್ಕೆ ತಡೆ ನೀಡದಂತೆ ಕೇಂದ್ರ, ರಾಜ್ಯ ಸರ್ಕಾರದ ವಕೀಲರಾದ ಎಜಿ ಅರುಣ್ ಶ್ಯಾಮ್, ಎಎಸ್ ಜಿ ಶಾಂತಿಭೂಷಣ್ ವಾದಿಸಿದ್ದರು.

  • ನಷ್ಟದ ವರದಿ ಬಂದ ಮೇಲೆ ಕೇಂದ್ರಕ್ಕೆ ಪರಿಹಾರ ಕೇಳುವ ವಿಚಾರದಲ್ಲಿ ತೀರ್ಮಾನ: ಸಿಎಂ

    ನಷ್ಟದ ವರದಿ ಬಂದ ಮೇಲೆ ಕೇಂದ್ರಕ್ಕೆ ಪರಿಹಾರ ಕೇಳುವ ವಿಚಾರದಲ್ಲಿ ತೀರ್ಮಾನ: ಸಿಎಂ

    ಮೈಸೂರು: ಪ್ರವಾಹದಲ್ಲಿ ಸಂಭವಿಸಿದ ನಷ್ಟದ ವರದಿ ಬಂದ ಮೇಲೆ ಕೇಂದ್ರಕ್ಕೆ ಪರಿಹಾರ ಕೇಳುವ ವಿಚಾರದಲ್ಲಿ ತೀರ್ಮಾನ ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

    ನೆರೆ ಪ್ರವಾಹ ಪ್ರದೇಶಗಳಿಗೆ ಭೇಟಿ ಕೊಡುತ್ತಿರುವ ಬೊಮ್ಮಾಯಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಇಡೀ ರಾಜ್ಯ ಸರ್ಕಾರ ರಸ್ತೆಗಿಳಿದು ಕೆಲಸ ಮಾಡುತ್ತಿದೆ. ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ-ತಮ್ಮ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ನೆರೆ ಹಾನಿ ಪ್ರದೇಶಕ್ಕೆ ಹೋಗುತ್ತಿಲ್ಲ ಎಂಬುದು ಸುಳ್ಳು. ನನ್ನ ಹಾದಿಯಾಗಿ ಎಲ್ಲ ಸಚಿವರುಗಳು ಕೆಲಸ ಮಾಡುತ್ತಿದ್ದಾರೆ ಎಂದು ಸ್ಪಷ್ಟನೆ ಕೊಟ್ಟರು. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ – ಸಂಸದರ ಬೇಡಿಕೆಗೆ ಮಣಿದ್ರಾ ಉದ್ಧವ್? 

    ರಾಜ್ಯದಲ್ಲಿ ನೆರೆ ಹಾನಿ ವಿಚಾರ, ಇಂದು ಸಂಜೆಯೊಳಗಡೆ ಮೊದಲ ಹಂತದ ನಷ್ಟದ ಅಧಿಕೃತ ಅಂಕಿ ಅಂಶ ಬಿಡುಗಡೆ ಮಾಡಲಾಗುತ್ತೆ. ನಷ್ಟದ ವರದಿ ಬಂದ ಮೇಲೆ ಕೇಂದ್ರಕ್ಕೆ ಪರಿಹಾರ ಕೇಳುವ ವಿಚಾರದಲ್ಲಿ ತೀರ್ಮಾನ ಮಾಡುತ್ತೇವೆ. ಸದ್ಯಕ್ಕೆ 750 ಕೋಟಿ ರೂ. ಎನ್‍ಡಿಆರ್‌ಎಫ್ ಹಣ ನಮ್ಮಲ್ಲಿ ಇದೆ ಎಂದು ತಿಳಿಸಿದರು.

    ಅನೇಕ ಕಡೆಗಳಲ್ಲಿ ಭೂ ಕುಸಿತವಾಗಿದೆ. ರಸ್ತೆಗಳು ಹಾಳಾಗಿದೆ, ಮನೆ ಹಾನಿ, ಪ್ರಾಣ ಹಾನಿಯೂ ಉಂಟಾಗಿದೆ. ಎಲ್ಲದರ ಬಗ್ಗೆ ವರದಿ ಸಿದ್ಧವಾಗುತ್ತಿದೆ. ಸಂಜೆಯೊಳಗಡೆ ಅಧಿಕೃತ ಮಾಹಿತಿ ಪ್ರಕಟವಾಗುತ್ತೆ ಎಂದರು.

    ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆ ವಿಚಾರಕ್ಕೆ ಉತ್ತರಿಸಿದ ಅವರು, ಆರು ತಿಂಗಳ ಹಿಂದೆಯೇ ಅಧ್ಯಕ್ಷರ ಬದಲಾವಣೆಗೆ ಕೋರ್ ಕಮಿಟಿಯಲ್ಲಿ ತೀರ್ಮಾನ ಮಾಡಿದ್ದೇವೆ. ಒಂದುವರೆ ವರ್ಷ ಪೂರೈಸಿರುವ ಅಧ್ಯಕ್ಷರುಗಳು ರಾಜೀನಾಮೆ ಸೂಚನೆ ನೀಡಿದ್ದೇವೆ. ಒಂದುವರೆ ವರ್ಷ ಅಧಿಕಾರ ಪೂರೈಸಿರುವವರ ಪಟ್ಟಿ ತಯಾರಿಸಿದ್ದೇವೆ. ಶೀಘ್ರದಲ್ಲೇ ಅದರ ಅಧಿಕೃತ ಆದೇಶ ಹೊರಡಿಸುತ್ತೇವೆ ಎಂದು ಹೇಳಿದರು. ಇದನ್ನೂ ಓದಿ:  ಉದಯಪುರ ಹತ್ಯೆ ಬಗ್ಗೆ ಪೋಸ್ಟ್ – ಬಾಲಕಿಗೆ ಕೊಲೆ, ಅತ್ಯಾಚಾರ ಬೆದರಿಕೆ ಹಾಕಿದ ಜಮ್ಮು, ಕಾಶ್ಮೀರದ ವ್ಯಕ್ತಿ 

    ಬೆಂಗಳೂರಿನ ಚಾಮರಾಜಪೇಟೆ ಬಂದ್‌ ವಿಚಾರವನ್ನು ಸ್ಥಳೀಯ ಅಧಿಕಾರಿಗಳೇ ನೋಡಿಕೊಳ್ಳುತ್ತಾರೆ ಎಂದರು.

    Live Tv
    [brid partner=56869869 player=32851 video=960834 autoplay=true]

  • ಅಸ್ಸಾಂ ಪ್ರವಾಹಕ್ಕೆ ಮರುಗಿದ ಮಹಾರಾಷ್ಟ್ರ ರೆಬೆಲ್‌ ಶಾಸಕರು – ಪರಿಹಾರ ನಿಧಿಗೆ 51 ಲಕ್ಷ ರೂ. ಸಹಾಯ

    ಅಸ್ಸಾಂ ಪ್ರವಾಹಕ್ಕೆ ಮರುಗಿದ ಮಹಾರಾಷ್ಟ್ರ ರೆಬೆಲ್‌ ಶಾಸಕರು – ಪರಿಹಾರ ನಿಧಿಗೆ 51 ಲಕ್ಷ ರೂ. ಸಹಾಯ

    ಮುಂಬೈ: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಬಂಡಾಯ ಎದ್ದಿರುವ ಶಿವಸೇನಾ ಶಾಸಕರು, ಅಸ್ಸಾಂನ ಪ್ರವಾಹ ಪರಿಹಾರ ನಿಧಿಗೆ 51 ಲಕ್ಷ ರೂ. ನೀಡಿದ್ದಾರೆ.

    ಸಚಿವ ಏಕನಾಥ್‌ ಶಿಂಧೆ ನೇತೃತ್ವದಲ್ಲಿ ಶಿವಸೇನಾ ಶಾಸಕರು ಮಹಾರಾಷ್ಟ್ರ ಸರ್ಕಾರದ ವಿರುದ್ಧ ಬಂಡಾಯವೆದ್ದು ಗುಜರಾತ್‌ನ ಸೂರತ್‌ನ ಹೋಟೆಲ್‌ನಲ್ಲಿದ್ದರು. ನಂತರ ಅಸ್ಸಾಂನ ಗುವಾಹಟಿಯ ಹೋಟೆಲ್‌ಗೆ ಶಿಫ್ಟ್‌ ಆಗಿ ಕಳೆದ ಒಂದು ವಾರದಿಂದ ಅಲ್ಲಿ ಇದ್ದರು. ಇದನ್ನೂ ಓದಿ: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು – ಸಂಜೆ 5 ಗಂಟೆಗೆ ಸುಪ್ರೀಂನಲ್ಲಿ ಮಹತ್ವದ ಅರ್ಜಿ ವಿಚಾರಣೆ

    ಅಸ್ಸಾಂನ ಕೆಲವು ಭಾಗಗಳು ಭೀಕರ ಪ್ರವಾಹದಿಂದ ತತ್ತರಿಸಿರುವ ಸಂದರ್ಭದಲ್ಲೂ ಶಿವಸೇನಾ ಭಿನ್ನಮತೀಯರು ಗುವಾಹಟಿಯ ಐಷಾರಾಮಿ ಹೋಟೆಲ್‌ನಲ್ಲಿ ತಂಗಿದ್ದಾರೆ ಎಂಬ ಟೀಕೆಗಳು ಕೇಳಿಬಂದಿದ್ದವು. ಈ ನಡುವೆ ಶಿಂಧೆ ಅವರು ಅಸ್ಸಾಂ ಮುಖ್ಯಮಂತ್ರಿ ಪರಿಹಾರ ನಿಧಿಗೆ 51 ಲಕ್ಷ ರೂ. ನೀಡಿದ್ದಾರೆ.

    ಸರ್ಕಾರದ ನಿರಂತರ ರಕ್ಷಣಾ ಕಾರ್ಯಕ್ಕೆ ಶಿಂಧೆ ಅವರು ಪರಿಹಾರ ನಿಧಿಗೆ ಧನ ಸಹಾಯ ಮಾಡಿದ್ದಾರೆ. ಇಲ್ಲಿನ ಜನರ ಕಷ್ಟವನ್ನು ನಾವು ನಿರ್ಲಕ್ಷಿಸುವಂತಿಲ್ಲ ಎಂದು ಬಂಡಾಯ ಶಾಸಕರ ತಂಡ ವಕ್ತಾರ ದೀಪಕ್‌ ಕೇಸಾರ್ಕರ್‌ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ರೆಬೆಲ್ ಶಾಸಕರು ನಾಳೆ ಮುಂಬೈಗೆ ಎಂಟ್ರಿ

    ಅಸ್ಸಾಂನಲ್ಲಿ ಭೀಕರ ಪ್ರವಾಹ ಬಂದು ಸಂಕಷ್ಟ ಎದುರಾದ ಸಂದರ್ಭದಲ್ಲೇ ಶಿವಸೇನಾ ಬಂಡಾಯ ಶಾಸಕರು ಇಲ್ಲಿನ ಗುವಾಹಟಿಯ ಐಷರಾಮಿ ಹೋಟೆಲ್‌ಗೆ ಬಂದು ಬೀಡುಬಿಟ್ಟಿದ್ದರು. ಪ್ರವಾಹ ಪರಿಸ್ಥಿತಿ ಸಂದರ್ಭದಲ್ಲಿ ಇವರ ವರ್ತನೆಗೆ ಭಾರಿ ಟೀಕೆ ವ್ಯಕ್ತವಾಗಿತ್ತು. ಇಲ್ಲಿಂದ ಹೊರಡಿ ಎಂದು ಹೋಟೆಲ್‌ ಬಳಿ ಪ್ರತಿಭಟನೆ ಕೂಡ ನಡೆಸಲಾಗಿತ್ತು.

    ನಾಳೆಯೇ ಬಹುಮತ ಸಾಬೀತುಪಡಿಸುವಂತೆ ಉದ್ಧವ್‌ ಠಾಕ್ರೆ ಅವರಿಗೆ ಮಹಾರಾಷ್ಟ್ರ ರಾಜ್ಯಪಾಲರು ಸೂಚನೆ ಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಬಂಡಾಯ ಶಾಸಕರು ಗುವಾಹಟಿಯಿಂದ ಮುಂಬೈಗೆ ಬರಲು ಸಿದ್ಧತೆ ನಡೆಸಿದ್ದಾರೆ.

    Live Tv

  • ಸರ್ಕಾರ ನೀಡಿದ ಕೊರೊನಾ ಡೆತ್ ಪರಿಹಾರ ಚೆಕ್‍ನಲ್ಲಿ ಸಮಸ್ಯೆ- ಬ್ಯಾಂಕ್‍ಗೆ ಅಲೆದು ನೊಂದ ಜನರು

    ಸರ್ಕಾರ ನೀಡಿದ ಕೊರೊನಾ ಡೆತ್ ಪರಿಹಾರ ಚೆಕ್‍ನಲ್ಲಿ ಸಮಸ್ಯೆ- ಬ್ಯಾಂಕ್‍ಗೆ ಅಲೆದು ನೊಂದ ಜನರು

    ನೆಲಮಂಗಲ: ಕೊರೊನಾದಿಂದ ಅನೇಕ ಕುಟುಂಬ ಬೀದಿಗೆ ಬಿದ್ದಿವೆ. ಇನ್ನೂ ಅನೇಕರು ಕುಟುಂಬಸ್ಥರನ್ನು ಕಳೆದುಕೊಂಡು ನೋವಲ್ಲಿ ಮುಳಿಗಿದ್ದಾರೆ. ಸರ್ಕಾರ ಕೊರೊನಾದಿಂದ ಮೃತಪಟ್ಟ ಕುಟುಂಬಸ್ಥರಿಗೆ ಪರಿಹಾರ ರೂಪದಲ್ಲಿ ಒಂದು ಲಕ್ಷ ರೂ.ಗಳನ್ನ ಬಿಡುಗಡೆ ಮಾಡಿದೆ. ಆದರೆ ಪರಿಹಾರ ಹಣದ ಚೆಕ್‍ನಲ್ಲಿ ಸಮಸ್ಯೆ ಆಗಿರುವ ಆರೋಪ ಕೇಳಿಬಂದಿದೆ.

    ನೆಲಮಂಗಲ ತಾಲೂಕಿನ ಮಲ್ಲರಬಾಣವಾಡಿ ನಿವಾಸಿ ನಾಗಮ್ಮ  ಕೊರೊನಾದಿಂದ ಮೃತಪಟ್ಟಿದ್ದು, ಅವರ ಪತಿ ರಂಗಸ್ವಾಮಿ ಹೆಸರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಒಂದು ಲಕ್ಷ ರೂ. ಚೆಕ್ ಪರಿಹಾರದ ರೂಪದಲ್ಲಿ ನೀಡಿದೆ. ಇದನ್ನೂ ಓದಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‍ಗೆ ಕೊರೊನಾ

    ಜಿಲ್ಲಾಧಿಕಾರಿ ಶ್ರೀನಿವಾಸ್ ಅವರು ನೀಡಿದ್ದ ಚೆಕ್ ಈಗ ಅಸಲಿಯೋ ನಕಲಿಯೋ ಎಂಬ ಅನುಮಾನ ಜನರಲ್ಲಿ ಮೂಡತೊಡಗಿದೆ. ಚೆಕ್ ಪಡೆದು ಬ್ಯಾಂಕಿನಲ್ಲಿ ವಿಚಾರಿಸಿದರೆ ಹಣವಿಲ್ಲ ಎಂದು ವಾಪಸ್ ಕಳಿಸಿದ್ದು, ನಂತರ ಕಚೇರಿಗೂ ಬ್ಯಾಂಕಿಗೂ ಅಲೆದಾಡಿದರೂ ಯಾವುದೇ ಪ್ರಯೋಜನ ಆಗಿಲ್ಲ ಎಂದು ರಂಗಸ್ವಾಮಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಇದನ್ನೂ ಓದಿ:  ದೇಶಾದ್ಯಂತ ಮೊದಲ ದಿನ 40 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಲಸಿಕೆ

    ಹೀಗೆ ನೂರಾರು ಕುಟುಂಬಗಳಿಗೆ ಪರಿಹಾರದ ಹಣದಲ್ಲಿ ಅನ್ಯಾಯ ಆಗಿರುವ ಸಾಧ್ಯತೆ ಇದ್ದು, ಸರ್ಕಾರ ಕೂಡಲೇ ಪರಿಹಾರದ ಹಣವನ್ನು ತಲುಪಿಸುವ ಕೆಲಸ ಮಾಡಬೇಕಿದೆ ಎಂದು ಜನರು ಆಗ್ರಹಿಸಿದ್ದಾರೆ.

  • ಕೊರೊನಾ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ

    ಕೊರೊನಾ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ

    ಬೆಂಗಳೂರು: ಕೋವಿಡ್-19 ವೈರಾಣು ಸೋಂಕಿನಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮೃತಪಟ್ಟ ವ್ಯಕ್ತಿಗಳವಾರಸುದಾರರ ಕುಟುಂಬಗಳು ಕಾನೂನುಬದ್ಧ ಪರಿಹಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಇದನ್ನೂ ಓದಿ: ಹೊಸ ಬಟ್ಟೆ ಧರಿಸಿ ವೃದ್ಧ ದಂಪತಿ ಆತ್ಮಹತ್ಯೆಗೆ ಶರಣು!

    ರಾಜ್ಯ ಸರ್ಕಾರವು ಸಂಧ್ಯಾ ಸುರಕ್ಷಾ ಯೋಜನೆಯಡಿ ಕೋವಿಡ್ ನಿಂದ ಮೃತಪಟ್ಟ ಬಡತನ ರೇಖೆಗಿಂತ ಕೆಳಗಿನ(ಬಿಪಿಎಲ್) ಕುಟುಂಬದ ಒಬ್ಬ ಕಾನೂನು ಬದ್ಧ ವಾರಸುದಾರರಿಗೆ ರೂ. 1.00 ಲಕ್ಷಗಳ ಪರಿಹಾರ ಹಾಗೂ ಕೋವಿಡ್ ನಿಂದ ಮೃತಪಟ್ಟ ವ್ಯಕ್ತಿಗಳ ಕಾನೂನುಬದ್ಧ ವಾರಸುದಾರರಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ರಾಜ್ಯ ವಿಪತ್ತು ಪರಿಹಾರ ನಿಧಿ (ಎಸ್‍ಡಿಆರ್‍ಎಫ್)ಯಡಿ ರೂ. 50,000ಗಳನ್ನು ನೇರ ನಗದು ವರ್ಗಾವಣೆ ವ್ಯವಸ್ಥೆ (ಡಿಬಿಟಿ) ಮೂಲಕ ಪಾವತಿಸಲಾಗುವುದು. ಇದನ್ನೂ ಓದಿ: ರಾಜ್ಯದಲ್ಲಿ ಕೊರೊನಾ ಪ್ರಕರಣ ಏರಿಳಿತ – ಇಂದು 214 ಕೇಸ್, 12 ಸಾವು

    ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ ಹಾಗೂ ದೇವನಹಳ್ಳಿ ತಾಲ್ಲೂಕು ತಹಶೀಲ್ದಾರ್ ಕಚೇರಿಗಳಲ್ಲಿ ಕಾನೂನುಬದ್ಧ ವಾರಸುದಾರರು ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವುದು. ಅರ್ಜಿದಾರರು ನಿಗದಿಪಡಿಸಿದ ನಮೂನೆ-1(ಫಾರಂ-1)ರಲ್ಲಿ ಮೃತ ವ್ಯಕ್ತಿ ಮತ್ತು ಅರ್ಜಿದಾರರ ವಿವರಗಳು ಹಾಗೂ ದಾಖಲೆಗಳನ್ನು ನೀಡಬೇಕು.

    ದಾಖಲೆಗಳು:
    – ಕೋವಿಡ್-19 ಪಾಸಿಟಿವ್ ವರದಿ ಮತ್ತು ಕೋವಿಡ್ ರೋಗಿ ಸಂಖ್ಯೆ(ಬಿ.ಯು. ಸಂಖ್ಯೆ)
    – ಮರಣ ಪ್ರಮಾಣ ಪತ್ರ ಅಥವಾ ಮರಣ ಕಾರಣ ಪ್ರಮಾಣ ಪತ್ರ (ಫಾರಂ-4/4ಎ),
    – ಮೃತ ವ್ಯಕ್ತಿಯ ಆಧಾರ್ ಪ್ರತಿ ಅಥವಾ ಇತರೆ ಗುರುತಿನ ಪತ್ರಗಳು,
    – ಮೃತ ವ್ಯಕ್ತಿಯ ಬಿಪಿಎಲ್ ಪಡಿತರ ಚೀಟಿ(ರಾಜ್ಯ ಸರ್ಕಾರದ ಪರಿಹಾರ ಮೊತ್ತಕ್ಕಾಗಿ),
    – ಅರ್ಜಿದಾರರ ಆಧಾರ್ ಕಾರ್ಡ್ ಪ್ರತಿ, ಅರ್ಜಿದಾರರ ಬಿಪಿಎಲ್ ಪಡಿತರ ಚೀಟಿ(ರಾಜ್ಯ ಸರ್ಕಾರದ ಪರಿಹಾರ ಮೊತ್ತಕ್ಕಾಗಿ),
    – ಬ್ಯಾಂಕ್ / ಅಂಚೆ ಖಾತೆ ಪುಸ್ತಕ ಪ್ರತಿ, ಅರ್ಜಿದಾರರ ಸ್ವಯಂ ಘೋಷಣಾ ಪತ್ರ (ಫಾರಂ-2)


    – ಮೃತ ವ್ಯಕ್ತಿಯ ಪತಿ/ ಪತ್ನಿಯನ್ನು ಹೊರತುಪಡಿಸಿ, ಕುಟುಂಬದ ಇತರೆ ಸದಸ್ಯರು ಅರ್ಜಿ ಸಲ್ಲಿಸಿದ್ದಲ್ಲಿ ಮಾತ್ರ ಕುಟುಂಬದ ಉಳಿದ ಸದಸ್ಯರಿಂದ ನಿರಾಕ್ಷೇಪಣಾ ಪತ್ರ(ಫಾರಂ-3) ಪಡೆದು ಅರ್ಜಿಯೊಂದಿಗೆ ಸಲ್ಲಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಪ್ರವಾಹ ಸಂತ್ರಸ್ತರಿಗೆ ಇನ್ನೂ ಸಿಕ್ಕಿಲ್ಲ ಪರಿಹಾರ- ಸಂತ್ರಸ್ಥರ ಧರಣಿ ಸತ್ಯಾಗ್ರಹ

    ಪ್ರವಾಹ ಸಂತ್ರಸ್ತರಿಗೆ ಇನ್ನೂ ಸಿಕ್ಕಿಲ್ಲ ಪರಿಹಾರ- ಸಂತ್ರಸ್ಥರ ಧರಣಿ ಸತ್ಯಾಗ್ರಹ

    ಚಿಕ್ಕೋಡಿ/ಬೆಳಗಾವಿ: ಪರಿಹಾರ ನೀಡುವಂತೆ ಆಗ್ರಹಿಸಿ ಕೃಷ್ಣಾ ನದಿ ತೀರದ ಪ್ರವಾಹ ಸಂತ್ರಸ್ಥರು ಪ್ರತಿಭಟನೆ ನಡೆಸಿದರು.

    ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜುಗುಳ ಗ್ರಾಮದಲ್ಲಿ ಧರಣಿ ಸತ್ಯಾಗ್ರಹ ನಡೆಸಿದ ಕೃಷ್ಣಾ ತೀರದ ಜುಗುಳ, ಮಂಗಾವತಿ, ಶಹಾಪುರ, ಮಳವಾಡ ಗ್ರಾಮಗಳ ಸಂತ್ರಸ್ಥರು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ಪ್ರವಾಹ ಬಂದು ಹೋಗಿ ಮೂರು ತಿಂಗಳು ಕಳೆದರೂ ಸರ್ಕಾರ ಸಂತ್ರಸ್ಥರಿಗೆ ಪರಿಹಾರ ನೀಡಿಲ್ಲ. ಪ್ರವಾಹ ಬಂದಾಗ ಮನೆಗಳನ್ನು ಕಳೆದುಕೊಂಡಿದ್ದೇವೆ. ಇದುವರೆಗೆ ಸರ್ಕಾರದ ಪರಿಹಾರ ಬಂದಿಲ್ಲ. ಬೆಳೆ ಹಾನಿ ಪರಿಹಾರ ಸೇರಿದಂತೆ ಸರ್ಕಾರ ಘೋಷಿಸಿರುವ ಯಾವುದೇ ಪರಿಹಾರ ಸಂತ್ರಸ್ಥರಿಗೆ ತಲುಪಿಲ್ಲ. ಅಲ್ಲದೆ ಮನೆ ಮಂಜೂರು ಮಾಡುವಲ್ಲಿ ಗ್ರಾಮ ಪಂಚಾಯತಿ ಅಧಿಕಾರಿಗಳು ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಕೋವಿಡ್ ಸಮಯದಲ್ಲಿ ವೈದ್ಯರ ಸೇವೆಗೆ ಸಿಗದ ಪ್ರೋತ್ಸಾಹ ಧನ- ಕ್ರಿಮ್ಸ್ ವೈದ್ಯರ ಪ್ರತಿಭಟನೆ

    ಲಾಗಿನ್ ಶುರು ಇದ್ದರೂ ಮನೆಗಳ ಮಂಜುರಾತಿಗೆ ತಾಲೂಕು ಆಡಳಿತ ಮುಂದಾಗಿಲ್ಲ. ತಕ್ಷಣವೇ ಸರ್ಕಾರ ಸಂತ್ರಸ್ಥರಿಗೆ ಪರಿಹಾರ ನೀಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.