Tag: Relief Fund

  • ಉಗ್ರ ಮಸೂದ್ ಅಜರ್‌ಗೆ 14 ಕೋಟಿ ರೂ. ಪರಿಹಾರ ಘೋಷಿಸಿದ ಪಾಕಿಸ್ತಾನ

    ಉಗ್ರ ಮಸೂದ್ ಅಜರ್‌ಗೆ 14 ಕೋಟಿ ರೂ. ಪರಿಹಾರ ಘೋಷಿಸಿದ ಪಾಕಿಸ್ತಾನ

    ಇಸ್ಲಾಮಾಬಾದ್: ಪಾಕಿಸ್ತಾನ (Pakistan) ಉಗ್ರ ಪೋಷಕ ರಾಷ್ಟ್ರ ಎಂಬುದು ಮತ್ತೆ ಸಾಬೀತಾಗಿದೆ. ಪಾಕಿಸ್ತಾನ ವಿರುದ್ಧ ಭಾರತ ನಡೆಸಿದ ಆಪರೇಷನ್ ಸಿಂಧೂರ (Operation Sindoor) ಕಾರ್ಯಾಚರಣೆಯಲ್ಲಿ ಜೈಶ್-ಎ-ಮೊಹಮ್ಮದ್‌ ಮುಖ್ಯಸ್ಥ ಉಗ್ರ ಮಸೂದ್ ಅಜರ್‌ನ (Masood Azhar) 14 ಮಂದಿ ಕುಟುಂಬ ಸದಸ್ಯರ ಹತ್ಯೆ ಹಿನ್ನೆಲೆ ಪಾಕಿಸ್ತಾನ ಸರ್ಕಾರ ಮಸೂರ್ ಅಜರ್‌ಗೆ 14 ಕೋಟಿ ರೂ. ಪರಿಹಾರ ಘೋಷಿಸಿದೆ.

    ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ಭಾರತ ನಡೆಸಿದ ಪ್ರತೀಕಾರದ ದಾಳಿಯಲ್ಲಿ ನಿಷೇಧಿತ ಉಗ್ರ ಸಂಘಟನೆ ಜೈಶ್ ಎ ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಕುಟುಂಬದ 10 ಮಂದಿ ಸೇರಿ 14 ಮಂದಿ ಹತ್ಯೆಯಾಗಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದ ವಿರುದ್ಧ ಕದನ ವಿರಾಮ ಘೋಷಣೆ ಯಾಕೆ? ಮೋದಿ ಉತ್ತರ ಕೊಡಲಿ – ದಿನೇಶ್ ಗುಂಡೂರಾವ್

    ಪಾಕ್‌ನ ಬಹಾವಲ್ಪುರದಲ್ಲಿ ಉಗ್ರ ಸಂಘಟನೆಯ ಪ್ರಧಾನ ಕಚೇರಿಯ ಮೇಲೆ ನಡೆಸಿದ ದಾಳಿಯಲ್ಲಿ ಮಸೂದ್ ಕುಟುಂಬದ ಒಟ್ಟು 14 ಮಂದಿ ಮೃತಪಟ್ಟಿದ್ದಾರೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಹಿಮಾಲಯದ ಮೌಂಟ್ ಕುವಾರಿ ಶಿಖರ ಏರಿದ ಪೌರಕಾರ್ಮಿಕರ ಮಕ್ಕಳು

    ಬಹಾವಲ್ಪುರದ ಸುಭಾನ್ ಅಲ್ಲಾ ಮಸೀದಿ ಮೇಲಿನ ದಾಳಿಯಲ್ಲಿ ಬಲಿಯಾದವರಲ್ಲಿ ಪೈಕಿ ಜೆಇಎಂ ಮುಖ್ಯಸ್ಥನ ಅಕ್ಕ ಮತ್ತು ಆಕೆಯ ಪತಿ, ಸೋದರಳಿಯ ಮತ್ತು ಅವರ ಪತ್ನಿ, ಮತ್ತೊಬ್ಬ ಸೊಸೆ ಮತ್ತು ಅವರ ಕುಟುಂಬದ 5 ಮಕ್ಕಳು ಸೇರಿದ್ದಾರೆ. ಇದರ ಜೊತೆಗೆ ಮಸೂದ್‌ನ ಆಪ್ತ ಸಹಚರ, ಆತನ ತಾಯಿ ಸೇರಿ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ ಎಂದು ಅಜರ್ ಹೇಳಿಕೆಯಲ್ಲಿ ತಿಳಿಸಿದ್ದಾನೆ. ಇದನ್ನೂ ಓದಿ: ಶೋಪಿಯಾನ್‌ನಲ್ಲಿ ಉಗ್ರರ ಹತ್ಯೆ- ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದ ಭದ್ರತಾ ಪಡೆ

    ಉಗ್ರರು ಮಾತ್ರವಲ್ಲ ಅವರ ಕುಟುಂಬವನ್ನು ನಾಶ ಮಾಡಬೇಕು. ಆಗ ಉಗ್ರರ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ನ್ಯಾಯ ಸಿಗುತ್ತದೆ. ಅವರಿಗೂ ನೋವು ಏನು ಎನ್ನುವುದು ಗೊತ್ತಾಗಬೇಕೆಂಬ ಆಗ್ರಹ ಕೇಳಿ ಬಂದಿತ್ತು. ಈ ಜನರ ಆಗ್ರಹದಂತೆ ಮಸೂದ್ ಕುಟುಂಬವನ್ನೇ ಭಾರತ ನಾಶ ಮಾಡಿದೆ. ಇದನ್ನೂ ಓದಿ: ಕುಕ್ಕೆ ಸುಬ್ರಹ್ಮಣ್ಯ ಅಧ್ಯಕ್ಷನಾಗಿ ಕಾಂಗ್ರೆಸ್ ಮುಖಂಡ, ಮಾಜಿ ರೌಡಿಶೀಟರ್ ಆಯ್ಕೆ

    ಅಜರ್ ಹಿನ್ನೆಲೆ ಏನು?
    ನಿಷೇಧಿತ ಜೈಶ್-ಎ- ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ 2001ರಲ್ಲಿ ಭಾರತದ ಸಂಸತ್ತಿನ ಮೇಲೆ ನಡೆದ ದಾಳಿ ಮತ್ತು ಪುಲ್ವಾಮಾ ದಾಳಿಯ ರೂವಾರಿ ಆಗಿದ್ದಾನೆ. ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಭಾರತ ಬಾಲಾಕೋಟ್‌ನಲ್ಲಿರುವ ಜೈಷ್ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿತ್ತು. ಅದಾದ ಬಳಿಕ 2019ರ ಮೇ 1ರಂದು ವಿಶ್ವಸಂಸ್ಥೆ ಅಜರ್‌ನನ್ನ ಜಾಗತಿಕ ಉಗ್ರ ಎಂದು ಘೋಷಿಸಿತ್ತು. ಇದನ್ನೂ ಓದಿ: ʻಬಿಬಿಎಂಪಿʼ ಹೆಸರು ಇತಿಹಾಸ ಪುಟಕ್ಕೆ – ಮೇ 15ರಿಂದ ʻಗ್ರೇಟರ್‌ ಬೆಂಗಳೂರುʼ ಆಡಳಿತ ಜಾರಿ

    ಅಲ್ಲದೇ ಪಾಕ್ ಸೇನೆ ಹಾಗೂ ಉಗ್ರರ ನಂಟಿನ ಮಗದೊಂದು ಸ್ಫೋಟಕ ವೀಡಿಯೋ ಕೂಡ ರಿಲೀಸ್ ಆಗಿದೆ. ಭಾರತದ ಆಪರೇಷನ್ ಸಿಂಧೂರದಲ್ಲಿ ಹತನಾದ ಮೋಸ್ಟ್ ವಾಟೆಂಡ್ ಲಷ್ಕರ್ ಉಗ್ರ ಮುದಾಸೀರ್ ಮನೆಗೆ ಪಾಕಿಸ್ತಾನದ ಲೆಫ್ಟಿನೆಂಟ್ ಜನರಕ್ ಫಯಾಸ್ ಹುಸೇನ್ ಷಾ ಭೇಟಿ ನೀಡಿದ್ದಾರೆ. ಇವರಿಗೆ ಉನ್ನತ ಸ್ಥಾನದಲ್ಲಿರುವ ಇನ್ನಿತರ ಮಿಲಿಟರಿ ಅಧಿಕಾರಿಗಳು ಕೂಡ ಸಾಥ್ ನೀಡಿದ್ದಾರೆ. ಇದನ್ನೂ ಓದಿ: ಕರ್ನಲ್ ಸೋಫಿಯಾ ಪತಿ ಮನೆ ಮೇಲೆ RSS ದಾಳಿ ವದಂತಿ – ಸುಳ್ಳು ಸುದ್ದಿ ನಂಬದಂತೆ ಬೆಳಗಾವಿ ಎಸ್ಪಿ ಮನವಿ

  • ನಮಗೆ ಕೋವಿಡ್ ಪರಿಹಾರ ಬೇಡ – ಸರ್ಕಾರದ ಹಣವನ್ನು ತಿರಸ್ಕರಿಸಿದ 893 ಕುಟುಂಬಗಳು

    ನಮಗೆ ಕೋವಿಡ್ ಪರಿಹಾರ ಬೇಡ – ಸರ್ಕಾರದ ಹಣವನ್ನು ತಿರಸ್ಕರಿಸಿದ 893 ಕುಟುಂಬಗಳು

    ಬೆಂಗಳೂರು: ಕೋವಿಡ್‍ನಿಂದ ಮೃತಪಟ್ಟವರ ಕುಟುಂಬಗಳಿಗೆ ಕೇಂದ್ರ ಸರ್ಕಾರ ನೀಡಿದ್ದ 50 ಸಾವಿರ ರೂ. ಪರಿಹಾರ ಧನವನ್ನು ಕರ್ನಾಟಕದ 893 ಕುಟುಂಬಗಳು ತಿರಸ್ಕರಿಸಿವೆ.

    ಎಪಿಎಲ್ ಮತ್ತು ಬಿಪಿಎಲ್ ಕಾರ್ಡುದಾರರಿಗೆ ಕೊರೊನಾ ಪರಿಹಾರ ಧನವು ಕೇಂದ್ರ ಸರ್ಕಾರದಿಂದ ಘೋಷಣೆಯಾಗಿತ್ತು. ರಾಜ್ಯ ಸರ್ಕಾರವು ಹೆಚ್ಚುವರಿಯಾಗಿ ಒಂದು ಲಕ್ಷ ರೂ. ಪರಿಹಾರ ಧನವನ್ನು ನೀಡಿತ್ತು. ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಒಟ್ಟು 1.5 ಲಕ್ಷ ರೂ. ಪರಿಹಾರ ಧನವನ್ನು ಘೋಷಣೆ ಮಾಡಲಾಗಿತ್ತು. ಇದನ್ನೂ ಓದಿ: ಧೋವಲ್‌ ಸಂಧಾನ – ಗಡಿಯಿಂದ ಪೂರ್ಣ ಸೇನೆ ವಾಪಸ್‌ಗೆ ಚೀನಾ ಒಪ್ಪಿಗೆ

    COVID-19
    Nurse Tina Nguyen administers a nasal swab to a patient in their car at a coronavirus testing site outside International Community Health Services in the Chinatown-International District during the coronavirus disease (COVID-19) outbreak in Seattle, Washington, U.S. March 26, 2020. REUTERS/Lindsey Wasson – RC2VRF96BFCZ

     

    ಸರ್ಕಾರ ಪರಿಹಾರ ಘೋಷಣೆ ಮಾಡಿದರೂ ಕುಟುಂಬಗಳ ಅವರ ಹೆಸರಿನಲ್ಲಿ ಹಣವನ್ನು ಸ್ವೀಕರಿಸುವುದಿಲ್ಲ ಎಂದು ಹೇಳಿವೆ. ನಮಗೆ ಮೃತಪಟ್ಟವರ ಹೆಸರಿನಲ್ಲಿ ಸರ್ಕಾರದ ಹಣ ಬೇಡ. ಅದನ್ನು ಬಡವರಿಗೆ ನೀಡಿ ಎಂದು ಹೇಳಿವೆ. ಇದನ್ನೂ ಓದಿ: Galwan Clash ಚೀನಾದ ಸುಳ್ಳು ಬಯಲು – 38 ಪಿಎಲ್‌ಎ ಯೋಧರು ಸಾವು – ಭಾರತದ ಸೇನೆಗೆ ಹೆದರಿ ಪರಾರಿಯಾದ ಚೀನಿ ಸೈನಿಕರು

    ರಾಜಧಾನಿ ಬೆಂಗಳೂರು ಒಂದರಲ್ಲೇ 521 ಕುಟುಂಬಗಳು ಕೋವಿಡ್ ಪರಿಹಾರ ಧನವನ್ನು ನಿರಾಕರಿಸಿವೆ. ಕೊರೊನಾದಿಂದ ರಾಜಧಾನಿಯಲ್ಲಿ ಸಾವಿರಕ್ಕೂ ಹೆಚ್ಚು ಜನ ಬಲಿಯಾಗಿದ್ದರು. ಸರ್ಕಾರದ ಅನುದಾನಗಳು ಸೂಕ್ತ ಸಮಯಕ್ಕೆ ಕೈ ಸೇರುವುದೇ ಕಷ್ಟವಾಗಿರುವ ಸಮಯದಲ್ಲಿ ಕುಟುಂಬಗಳು ಪರಿಹಾರ ಬೇಡ ಎಂದು ಹೇಳಿವೆ.

    ಯಾವ ಜಿಲ್ಲೆಯಲ್ಲಿ ಎಷ್ಟು ಕುಟುಂಬ ನಿರಾಕರಣೆ?
    ಬಿಬಿಎಮ್‍ಪಿ ವ್ಯಾಪ್ತಿಯಲ್ಲಿ 481, ಬೆಂಗಳೂರು ನಗರ 40, ಕೋಲಾರ 55, ಮೈಸೂರು 29, ಹಾಸನ 26, ದಕ್ಷಿಣ ಕನ್ನಡ 24, ಕಲಬುರಗಿ 23, ಕೊಪ್ಪಳ 17 ಮಂಡ್ಯ 17 ಶಿವಮೊಗ್ಗ 16, ಉತ್ತರಕನ್ನಡ 14, ಬಳ್ಳಾರಿ 13, ಚಿಕ್ಕಮಗಳೂರು 12, ಚಾಮರಾಜನಗರ 11, ಬಾಗಲಕೋಟೆ 9, ಉಡುಪಿ 9, ಬೆಳಗಾವಿ 9, ಚಿಕ್ಕಬಳ್ಳಾಪುರ ಮತ್ತು ವಿಜಯಪುರ ತಲಾ 8, ಬೀದರ ಮತ್ತು ತುಮಕೂರು ತಲಾ 7, ಹಾವೇರಿ 6, ಬೆಂಗಳೂರು ಗ್ರಾಮಾಂತರ ಗದಗ ಹಾಗೂ ರಾಯಚೂರು ತಲಾ 5, ಚಿತ್ರದುರ್ಗ 3, ದಾವಣಗೆರೆ 2, ಯಾದಗಿರಿ 1

  • ನಾರಾಯಣ್ ಅಚಾರ್ ಮಕ್ಕಳಿಗೆ ಪರಿಹಾರದ ಹಣ ಪಡೆಯಲು ಮತಾಂತರ ಅಡ್ಡಿ

    ನಾರಾಯಣ್ ಅಚಾರ್ ಮಕ್ಕಳಿಗೆ ಪರಿಹಾರದ ಹಣ ಪಡೆಯಲು ಮತಾಂತರ ಅಡ್ಡಿ

    ಮಡಿಕೇರಿ: ತಲಕಾವೇರಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ್ ಅಚಾರ್ ಪುತ್ರಿಯರಿಬ್ಬರು ಹಿಂದೂ ಧರ್ಮವನ್ನು ತೊರೆದು ಅನ್ಯಧರ್ಮಕ್ಕೆ ಮತಾಂತರಗೊಂಡಿರುವುದು ರಾಜ್ಯ ಸರ್ಕಾರದ ಪರಿಹಾರದ ಹಣ ಪಡೆಯಲು ಇದೀಗ ಅಡ್ಡಿಯಾಗಿದೆ.

    ಅಗಸ್ಟ್ 15 ರಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಇಬ್ಬರು ಪುತ್ರಿಯರಿಗೆ ತಲಾ 2.50 ಲಕ್ಷ ರೂ ನಂತೆ ಪರಿಹಾರ ಹಣ ನೀಡಿದ್ದರು. ಅಗಸ್ಟ್ 5 ರಂದು ಬ್ರಹ್ಮಗಿರಿ ಬೆಟ್ಟದ ಸಾಲಿನ ಗಜಗಿರಿ ಬೆಟ್ಟ ಕುಸಿದು ನಾರಾಯಣ ಅಚಾರ್, ಶಾಂತ ಅಚಾರ್, ಆನಂದ ತೀರ್ಥ ಸ್ವಾಮಿಜಿ, ರವಿ ಕಿರಣ್ ಮತ್ತು ಶ್ರೀನಿವಾಸ್ ಅದರು ಭೂ ಸಮಾಧಿಯಾಗಿದ್ದರು. ಈ ಪೈಕಿ ಶಾಂತ ಅಚಾರ್ ಮತ್ತು ಶ್ರೀನಿವಾಸ್ ಭಟ್ ಅವರ ಮೃತ ದೇಹಗಳು ಪತ್ತೆ ಹಚ್ಚಲು ಸಾಧ್ಯವಾಗಿಲ್ಲ.

    ಆಸ್ಟ್ರೇಲಿಯಾ, ನ್ಯೂಜಿಲೆಂಡ್ ದೇಶದಲ್ಲಿ ನೆಲೆಸಿರುವ ನಾರಾಯಣ್ ಅಚಾರ್ ಮಕ್ಕಳು ವಿದೇಶದಿಂದ ಮರಳಿ ಬಂದ ಮೇಲೆ ತಮ್ಮ ಪಾಲಕರು ನಾಪತ್ತೆಯಾಗಿರುವ ಬಗ್ಗೆ ಭಾಗಮಂಡಲ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದರು. ಅದಕ್ಕೂ ಮೊದಲು ನಾರಾಯಣ್ ಅಚಾರ್ ಸಹೋದರಿಯ ಸುಶೀಲಾ ಅವರು ನಾಪತ್ತೆ ಅಗಿರುವ ಬಗ್ಗೆ ದೂರು ದಾಖಲು ಮಾಡಿದ್ರು.

    ದೂರು ನೀಡುವ ಸಂದರ್ಭ ಪುತ್ರಿಯರು ಶಾರದ ಅಚಾರ್ ಮತ್ತು ನಮಿತಾ ಅಚಾರ್ ಎಂದು ತಮ್ಮ ಹೆಸರು ಉಲ್ಲೇಖ ಮಾಡಿದ್ರು. ಅದರ ಆಧಾರದ ಮೇಲೆ ರಾಜ್ಯ ಸರ್ಕಾರ ಪರಿಹಾರ ಹಣವನ್ನು ನಮಿತಾ ಶಾರದಾ ಅಚಾರ್ ಎಂದು ಹೆಸರು ಉಲ್ಲೇಖ ಮಾಡಿ ಹಂಚಿಕೆ ಮಾಡಿದ್ರು. ಹಣ ಹಂಚಿಕೆ ಮಾಡುವ ಸಂದರ್ಭ ಆನಂದ ತೀರ್ಥ ಸ್ವಾಮೀಜಿಯರ ಹಣವು ನಮಗೆ ಬರಬೇಕು ಎಂದು ಹೇಳಿದ್ರು.

    ಇದೀಗ ಪರಿಹಾರದ ಚೆಕ್ ಅನ್ನು ಭಾಗಮಂಡಲದ ನಾಡ ಕಚೇರಿಗೆ ನಾರಾಯಣ್ ಅಚಾರ್ ಮಕ್ಕಳು ಚೆಕ್ ವಾಪಸ್ಸು ಮಾಡಿದ್ದಾರೆ. ನಮ್ಮ ಇಬ್ಬರ ಹೆಸರು ಬದಲು ಮಾಡಬೇಕು. ಶೆನೋನ್ ಫರ್ನಾಂಡೀಸ್ (ಶಾರದಾ ಅಚರ್), ನಮಿತಾ ನಜೇರತ್ ಎಂಬ ಹೆಸರಿಗೆ ಚೆಕ್ ನೀಡಬೇಕು ಎಂದು ಕೊರಿದ್ದಾರೆ. ಈ ಹಿನ್ನೆಲೆಯಲ್ಲಿ ಮಡಿಕೇರಿ ತಹಶೀಲ್ದಾರ್ ಮಹೇಶ್ ಚೆಕ್ ತಡೆಹಿಡಿದಿದ್ದಾರೆ. ಹೆಸರು ಬದಲಾವಣೆ ಮಾಡಿಕೊಂಡು ಇರುವುದಕ್ಕೆ ಸೂಕ್ತವಾದ ದಾಖಲೆಗಳನ್ನು ನೀಡಿ ಪರಿಹಾರದ ಹಣ ಪಡೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ.

  • ಎತ್ತಿನಹೊಳೆ ಯೋಜನೆ, ಬಾಕಿ ಪರಿಹಾರವನ್ನು ಶೀಘ್ರ ವಿತರಿಸಿ: ಗೋಪಾಲಯ್ಯ

    ಎತ್ತಿನಹೊಳೆ ಯೋಜನೆ, ಬಾಕಿ ಪರಿಹಾರವನ್ನು ಶೀಘ್ರ ವಿತರಿಸಿ: ಗೋಪಾಲಯ್ಯ

    ಹಾಸನ: ಆಹಾರ, ನಾಗರೀಕ ಸರಬರಾಜು ಮಾತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ಗೋಪಾಲಯ್ಯ ಅವರು ಇಂದು ಎತ್ತಿನ ಹೊಳೆ ಯೋಜನಾ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಇದೊಂದು ಬಯಲು ಸೀಮೆಗೆ ನೀರು ಪೂರೈಸುವ ಮಹತ್ವದ ಯೋಜನೆ ಆದಷ್ಟು ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಿ ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. ಯೋಜನೆ ಉದ್ದೇಶಕ್ಕೆ ಸ್ವಾದೀನ ಪಡಿಸಿಕೊಂಡ ಜಮೀನಿಗೆ ಬಾಕಿ ಇರುವ ಪರಿಹಾರವನ್ನು ಸಹ ಶೀಘ್ರವಾಗಿ ವಿತರಿಸಿ ಎಂದು ಸಚಿವರು ತಿಳಿಸಿದರು.

    ಜಿಲ್ಲಾಧಿಕಾರಿ ಅರ್.ಗಿರೀಶ್, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬಿ.ಎ ಪರಮೇಶ್ ಉಪ ವಿಭಾಗಾಧಿಕಾರಿ ಗಿರಿಶ್ ನಂದನ್, ಎತ್ತಿನ ಹೊಳೆ ಯೋಜನೆ ಕಾರ್ಯಪಾಲಕ ಅಭಿಯಂತರರಾದ ಜಯಣ್ಣ, ತಹಶೀಲ್ದಾರ್ ಮಂಜುನಾಥ್, ಮಾಜಿ ಶಾಸಕರಾದ ಹೆಚ್.ಎಂ ವಿಶ್ವನಾಥ್ ಮತ್ತಿತರರು ಹಾಜರಿದ್ದರು.

  • ಆಟೋ, ಟ್ಯಾಕ್ಸಿ ಚಾಲಕರಿಗೆ 5 ಸಾವಿರ ರೂ. ಘೋಷಣೆ – ಯಾವೆಲ್ಲಾ ಚಾಲಕರು ಅರ್ಹರು?

    ಆಟೋ, ಟ್ಯಾಕ್ಸಿ ಚಾಲಕರಿಗೆ 5 ಸಾವಿರ ರೂ. ಘೋಷಣೆ – ಯಾವೆಲ್ಲಾ ಚಾಲಕರು ಅರ್ಹರು?

    ಬೆಂಗಳೂರು: ಕೊರೊನಾ ಲಾಕ್‍ಡೌನ್‍ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ರಾಜ್ಯ ಸರ್ಕಾರದಿಂದ 5 ಸಾವಿರ ರೂ. ಪರಿಹಾರ ನೀಡುವುದಾಗಿ ಸಿಎಂ ಘೋಷಣೆ ಮಾಡಿದ್ದಾರೆ.

    ಆಟೋ ಮತ್ತು ಟ್ಯಾಕ್ಸಿಯನ್ನು ಓಡಿಸಿಕೊಂಡು ಜೀವನ ಮಾಡುತ್ತಿದ್ದ ಚಾಲಕರು ಈ ಲಾಕ್‍ಡೌನ್ ಸಮಯದಲ್ಲಿ ಬಹಳ ಕಷ್ಟ ಅನುಭವಿಸಿದ್ದಾರೆ. ಹೀಗಾಗಿ ಅವರಿಗಾಗಿ ಸರ್ಕಾರ ಸಿಎಂ ಪರಿಹಾರ ನಿಧಿಯಿಂದ ಹಣ ಕೊಡಲು ತೀರ್ಮಾನ ಮಾಡಿದೆ. ಈ ಹಣವನ್ನು ವಿರತಣೆ ಮಾಡಲು ಸಾರಿಗೆ ಇಲಾಖೆಯ ಅಯುಕ್ತರು ಸರ್ಕಾರದ ನಡವಳಿಕೆಗಳ ಪಟ್ಟಿಯನ್ನು ತಯಾರಿಸಿದ್ದು ರಾಜ್ಯಪಾಲರ ಸಹಿಯೊಂದೇ ಬಾಕಿಯಿದೆ. ಈ ನಡವಳಿ ಪ್ರಕಾರ ಯಾವೆಲ್ಲಾ ಚಾಲಕರಿಗೆ ಈ ಹಣ ಸಿಗುತ್ತದೆ ಎಂಬುದರ ಮಾಹಿತಿ ಇಲ್ಲಿದೆ.

    ಯಾವೆಲ್ಲಾ ಚಾಲಕರು ಅರ್ಹರರು?
    1. ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಚಾಲನೆ ಮಾಡಲು ಚಾಲನಾ ಅನುಜ್ಞಾ ಪತ್ರ ಮತ್ತು ಬ್ಯಾಡ್ಜ್ ಹೊಂದಿರುವವರು ಮಾತ್ರ ಈ ಯೋಜನೆಯ ಫಲಾನುಭವಿಗಳಾಗಿರುತ್ತಾರೆ.
    2. ಫಲಾನುಭವಿಗಳು ಆಟೋರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಾಗಿದ್ದು, ದಿನಾಂಕ: 01-03-2020 ಕ್ಕೆ ಚಾಲ್ತಿಯಲ್ಲಿರುವ ಚಾಲನಾ ಅನುಜ್ಞಾ ಪತ್ರದ ವಿವರಗಳನ್ನು ಪೋರ್ಟಲ್ ನಲ್ಲಿ ನಮೂದಿಸಬೇಕಾಗಿರುತ್ತದೆ.
    3. ಚಾಲಕರ ಆಧಾರ್ ಕಾರ್ಡ್ ವಿವರಗಳನ್ನು ಪೋರ್ಟಲ್‍ನಲ್ಲಿ ನಮೂದಿಸಬೇಕಾಗಿರುತ್ತದೆ.


    4. ಚಾಲಕರ ಬ್ಯಾಂಕ್ ಅಕೌಂಟ್ ವಿವರ, ಸಂಬಂಧಪಟ್ಟ ಬ್ಯಾಂಕಿನ ಐಎಫ್‍ಎಸ್‍ಸಿ ಕೋಡ್, ಎಂಐಸಿಆರ್ ಕೋಡ್‍ಗಳ ವಿವರಗಳನ್ನು ಪೋರ್ಟಲ್‍ನಲ್ಲಿ ನಮೂದಿಸಬೇಕಾಗಿರುತ್ತದೆ.
    5. ಚಾಲಕರು ಚಾಲನೆ ಮಾಡುವ ವಾಹನದ ನೋಂದಣಿ ಸಂಖ್ಯೆ ವಿವರಗಳನ್ನು ಪೋರ್ಟಲ್‍ನಲ್ಲಿ ನಮೂದಿಸಬೇಕಾಗಿರುತ್ತದೆ. ವಾಹನ್-4 ತಂತ್ರಾಂಶದಿಂದ ವಿವರಗಳನ್ನು ನೇರವಾಗಿ ಪಡೆಯುವುದು.
    6. ಚಾಲನಾ ಅನುಜ್ಞಾ ಪತ್ರದ ವಿವರಗಳನ್ನು ಸಾರಿಗೆ ಇಲಾಖೆಯ ಸಾರಥಿ-4 ತಂತ್ರಾಂಶದಿಂದ ನೇರವಾಗಿ ಪಡೆದುಕೊಳ್ಳಬೇಕು.


    7. ಆಟೋರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರು ತಮ್ಮ ದೈನಂದಿನ ಉದ್ಯೋಗವನ್ನು ನಡೆಸಲಾಗದ ಆದಾಯ ಕಳೆದುಕೊಂಡಿರುವ ಬಗ್ಗೆ ಸ್ವಯಂ ಘೋಷಣೆ ಮಾಡಬೇಕು.
    8. ಈ ಯೋಜನೆಯನ್ನು ಜಾರಿಗೊಳಿಸಲು ಅರ್ಹ ಚಾಲಕರು ತಮ್ಮ ಅರ್ಜಿಗಳನ್ನು ‘ಸೇವಾಸಿಂಧು’ವಿನ ಮುಖಾಂತರ ಸಲ್ಲಿಸಲು ವ್ಯವಸ್ಥೆ ಮಾಡಬೇಕಾಗಿರುತ್ತದೆ. ಈ ಬಗ್ಗೆ ‘ಸೇವಾಸಿಂಧು’ ವಿನಲ್ಲಿ ಸೂಕ್ತ ವ್ಯವಸ್ಥೆ ಮಾಡುವಂತೆ ಇ-ಆಡಳಿತ ಇಲಾಖೆಯನ್ನು ಕೋರಬಹುದಾಗಿದೆ.
    9. ಅರ್ಹ ಫಲಾನುಭವಿಗಳಿಗೆ ಆಧಾರ್ ಸಂಖ್ಯೆಯ ಮೂಲಕ ಡಿಬಿಟಿ ಮಾಡಬೇಕು ಅಥವಾ ಆನ್‍ಲೈನ್ ಮೂಲಕ ಬ್ಯಾಂಕಿಗೆ ಜಮಾ ಮಾಡಬೇಕು.
    10. ಫಲಾನುಭವಿಗಳು ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಲು ಅನುವಾಗುವಂತೆ ಅರ್ಹ/ಅನರ್ಹ ಅರ್ಜಿದಾರರ ಪಟ್ಟಿಯನ್ನು ತಂತ್ರಾಂಶದಲ್ಲಿ ಅಳವಡಿಸಿಕೊಳ್ಳಬೇಕು.

    ಈ ರೀತಿಯ ನಡವಳಿಕೆಗಳನ್ನು ಸಾರಿಗೆ ಆಯುಕ್ತರು ಸರ್ಕಾರಕ್ಕೆ ತಯಾರಿಸಿ ಕೊಟ್ಟಿದ್ದು, ಇಂದು ಅಥವಾ ನಾಳೆ ಸರ್ಕಾರದ ಆದೇಶ ಪ್ರಕಟವಾಗುವ ಸಾದ್ಯತೆ ಇದೆ.

  • ನಡೆದು ನಡೆದು ಸಾವನ್ನಪ್ಪಿದ್ದ ಮಹಿಳೆ-ಕುಟುಂಬಕ್ಕೆ 3 ಲಕ್ಷ ರೂ. ಪರಿಹಾರ

    ನಡೆದು ನಡೆದು ಸಾವನ್ನಪ್ಪಿದ್ದ ಮಹಿಳೆ-ಕುಟುಂಬಕ್ಕೆ 3 ಲಕ್ಷ ರೂ. ಪರಿಹಾರ

    ರಾಯಚೂರು: ಕೊರೊನಾ ಲಾಕ್‍ಡೌನ್ ಹಿನ್ನೆಲೆ ಬಳ್ಳಾರಿಯಲ್ಲಿ ಸಾವನ್ನಪ್ಪಿದ್ದ ರಾಯಚೂರಿನ ಸಿಂಧನೂರಿನ ಕಟ್ಟಡ ಕಾರ್ಮಿಕ ಮಹಿಳೆ ಗಂಗಮ್ಮ ಕುಟುಂಬಕ್ಕೆ ಕೊನೆಗೂ ಕಾರ್ಮಿಕ ಕಲ್ಯಾಣ ಮಂಡಳಿ ಪರಿಹಾರ ನೀಡಿದೆ.

    ಗಂಗಮ್ಮನ ಇಬ್ಬರು ಮಕ್ಕಳ ಹೆಸರಲ್ಲಿ ತಲಾ 1 ಲಕ್ಷ 50 ಸಾವಿರದಂತೆ ಮೂರು ಲಕ್ಷ ರೂಪಾಯಿಯ ಎರಡು ಭದ್ರತಾ ಠೇವಣಿಯ ಬಾಂಡ್‍ಗಳನ್ನು ನೀಡಲಾಗಿದೆ. ಎರಡು ವರ್ಷದ ಅವಧಿಯ ಎರಡು ಬಾಂಡ್‍ಗಳನ್ನು ನೀಡುವ ಮೂಲಕ ಮಂಡಳಿ ಮಕ್ಕಳ ಸಹಾಯಕ್ಕೆ ಮುಂದಾಗಿದೆ.

    ಗಂಗಮ್ಮ ಮಂಡಳಿಯ ನೋಂದಾಯಿತ ಕಾರ್ಮಿಕಳಲ್ಲವಾಗಿದ್ದರಿಂದ 5 ಲಕ್ಷ ರೂಪಾಯಿ ಬದಲಾಗಿ ಕೇವಲ 3 ಲಕ್ಷ ಮಾತ್ರ ಪರಿಹಾರ ಬಂದಿದೆ. ವಿಶೇಷ ಪ್ರಕರಣವೆಂದು ಪರಿಗಣಿಸಿ ಗಂಗಮ್ಮಳ ಮಕ್ಕಳಾದ ಪ್ರೀತಿ ಹಾಗೂ ಮಂಜುನಾಥ್‍ಗೆ ಪರಿಹಾರ ನೀಡಲಾಗಿದೆ. ಬೆಂಗಳೂರಿನಲ್ಲಿ ಕಟ್ಟಡ ಕೆಲಸದಲ್ಲಿ ತೊಡಗಿದ್ದ ಗಂಗಮ್ಮ ಲಾಕ್‍ಡೌನ್ ನಿಂದ ವಾಪಸ್ ಬರುತ್ತಿದ್ದರು. ಮರಳಿ ಬರಲು ವಾಹನ ವ್ಯವಸ್ಥೆಯಿಲ್ಲದೆ ಕಾಲ್ನಡಿಗೆಯಲ್ಲಿ ಬಂದು ಬಳ್ಳಾರಿಯಲ್ಲಿ ಅನಾರೋಗ್ಯಕ್ಕೆ ತುತ್ತಾಗಿ ವಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು.

    ತಾಯಿಯನ್ನೇ ಅವಲಂಬಿಸಿದ್ದ ಇಬ್ಬರು ಮಕ್ಕಳು ತಬ್ಬಲಿಗಳಾಗಿದ್ದಾರೆ. ಕೊನೆಗೂ ಮಂಡಳಿ ಸಹಾಯಕ್ಕೆ ಮುಂದಾಗಿದ್ದು, ಸಿಂಧನೂರು ತಹಶೀಲ್ದಾರ್ ಇಬ್ಬರು ಮಕ್ಕಳಿಗೆ ತಲಾ ಒಂದೂವರೆ ಲಕ್ಷದ ಬಾಂಡ್ ನೀಡಿದ್ದಾರೆ.

  • ಪುರಾತನ ಕಾಲದ 2 ಲಕ್ಷ ನಾಣ್ಯ ಹರಾಜು ಮಾಡಲು ಮುಂದಾದ ನಾಣ್ಯಶಾಸ್ತ್ರಜ್ಞ

    ಪುರಾತನ ಕಾಲದ 2 ಲಕ್ಷ ನಾಣ್ಯ ಹರಾಜು ಮಾಡಲು ಮುಂದಾದ ನಾಣ್ಯಶಾಸ್ತ್ರಜ್ಞ

    – 20 ವರ್ಷದಿಂದ 8 ಲಕ್ಷ ನಾಣ್ಯ ಸಂಗ್ರಹ
    – ಕೊರೊನಾ ಪರಿಹಾರ ನಿಧಿಗಾಗಿ ಮಾರಾಟ

    ಭುನವೇಶ್ವರ: ಇಡೀ ದೇಶವೇ ಕೊರೊನಾದಿಂದ ತತ್ತರಿಸಿ ಹೋಗಿದೆ. ಇದರಿಂದ ಬಡವರು, ನಿರ್ಗತಿಕರು ಮತ್ತು ಕೂಲಿ ಕಾರ್ಮಿಕರು ಪರದಾಡುತ್ತಿದ್ದಾರೆ. ಈಗಾಗಲೇ ಅನೇಕರು ಕೊರೊನಾ ವಿರುದ್ಧ ಹೋರಾಟಕ್ಕೆ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಇದೀಗ ಒಡಿಶಾದ ಪ್ರಸಿದ್ಧ ನಾಣ್ಯಶಾಸ್ತ್ರಜ್ಞ ಕೊರೊನಾ ಪರಿಹಾರ ನಿಧಿಗೆ ಸಹಾಯ ಮಾಡಲು ತಾವು ಸಂಗ್ರಹಿಸಿರುವ ಪುರಾತನ ನಾಣ್ಯಗಳನ್ನು ಮಾರಾಟ ಮಾಡಲು ನಿರ್ಧರಿಸಿದ್ದಾರೆ.

    27 ವರ್ಷದ ನಾಣ್ಯಶಾಸ್ತ್ರಜ್ಞ ಡೆಬಿ ಪ್ರಸಾದ್ ಮಂಗರಾಜ್ ನಾಣ್ಯ ಮಾರಾಟ ಮಾಡಲು ಮುಂದಾಗಿದ್ದಾರೆ. ಇವರು ಒಡಿಶಾದಲ್ಲಿ ನಾಣ್ಯಗಳ ಸಂಗ್ರಹದ ಮೂಲಕ ಖ್ಯಾತಿ ಗಳಿಸಿದ್ದಾರೆ. ಚಕ್ರವರ್ತಿಗಳಾದ ಅಶೋಕ, ಚಂದ್ರಗುಪ್ತ ಮೌರ್ಯ ಮತ್ತು ಮರಾಠ ರಾಜ ಶಿವಾಜಿ ಅವರ ಕಾಲಕ್ಕೆ ಸೇರಿದ 8 ಲಕ್ಷಕ್ಕೂ ಹೆಚ್ಚು ಹಳೆಯ ನಾಣ್ಯಗಳನ್ನು ಸಂಗ್ರಹಿಸಿದ್ದಾರೆ. ಅದರಲ್ಲಿ ಕನಿಷ್ಠ 2 ಲಕ್ಷ ನಾಣ್ಯವನ್ನು ಹರಾಜು ಮಾಡಲು ನಿರ್ಧರಿಸಿದ್ದಾರೆ.

    ಮಂಗರಾಜ್ ಸುಮಾರು 20 ವರ್ಷಗಳಿಂದ ಪುರಾತನ ನ್ಯಾಣಗಳನ್ನು ಸಂಗ್ರಹಿಸಲು ಪ್ರಾರಂಭಿಸಿದ್ದರು. ಆದರೆ ಇದೀಗ ಕೊರೊನಾ ವಿರುದ್ಧ ಹೋರಾಡಲು ಪಿಎಂ ಕೇರ್ಸ್ ನಿಧಿಗೆ ಮತ್ತು ಒಡಿಶಾ ಸರ್ಕಾರದ ಸಿಎಂ ಪರಿಹಾರ ನಿಧಿಗೆ ಹಣ ನೀಡಲು ಮುಂದಾಗಿದ್ದಾರೆ.

    ಈ ಬಗ್ಗೆ ಮಾತನಾಡಿದ ನಾಣ್ಯಶಾಸ್ತ್ರಜ್ಞ, ಪ್ರತಿದಿನ ನಾನು ಮಾಧ್ಯಮಗಳಲ್ಲಿ ಕೊರೊನಾದಿಂದ ಭಾರತ ಮತ್ತು ಇತರ ದೇಶಗಳಲ್ಲಿ ಹೆಚ್ಚುತ್ತಿರುವ ಸಾವುಗಳು ಬಗ್ಗೆ ನೋಡಿದ್ದೇನೆ. ಈಗ ದೇಶ ತುಂಬಾ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದೆ. ಆದ್ದರಿಂದ ನಾನು ಇಂತಹ ಸಮಯದಲ್ಲಿ ಏನಾದರೂ ಮಾಡಬೇಕು ಎಂದು ಯೋಚಿಸಿದೆ. ನಾಣ್ಯಗಳನ್ನು ಮಾರಾಟ ಮಾಡುವ ಆಲೋಚನೆ ನನಗೆ ಎಂದಿಗೂ ಬಂದಿರಲಿಲ್ಲ. ಎಲ್ಲಾ ವರ್ಷಗಳಲ್ಲಿ ನಾಣ್ಯಗಳನ್ನು ನಾನೇ ಖರೀದಿಸಿ ಸಂಗ್ರಹಿಸುತ್ತಿದ್ದೆ. ಆದರೆ ಈಗ ಜನರಿಗೆ ಸಹಾಯ ಮಾಡುವುದಕ್ಕಾಗಿ ನಾನು ಅದನ್ನು ಹರಾಜು ಮಾಡಲು ನಿರ್ಧರಿಸಿದ್ದೇನೆ ಎಂದು ಹೇಳಿದರು.

    ಮಂಗರಾಜ್ ಈಗ ಮುಂಬೈನಲ್ಲಿರುವ ತಮ್ಮ ಸಹೋದರಿಯೊಂದಿಗೆ ವಾಸಿಸುತ್ತಿದ್ದಾರೆ. ಅವರನ್ನು ನಾಣ್ಯಗಳನ್ನು ಮಾರಾಟ ಮಾಡಲು ಸಂಪರ್ಕಿಸಿದ್ದಾರೆ. ಈಗಾಗಲೇ ನಾಣ್ಯಗಳಿಗೆ ಕೋಟ್ಯಂತರ ರೂಪಾಯಿ ನೀಡಲು ಕೆಲವರು ಮುಂದಾಗಿದ್ದಾರೆ. ಮುಂದಿನ ತಿಂಗಳು ಭುವನೇಶ್ವರದಲ್ಲಿ ಹರಾಜನ್ನು ನಿಗದಿ ಮಾಡಲಾಗಿದೆ. ಆಫ್‍ಲೈನ್‍ನಲ್ಲಿ ಹರಾಜು ನಡೆಯಲಿದೆ.

    ನಾಣ್ಯಗಳು:
    ಚಕ್ರವರ್ತಿಗಳಾದ ಅಶೋಕ, ಚಂದ್ರಗುಪ್ತ ಮೌರ್ಯ, ಗುಪ್ತಾ ರಾಜವಂಶ ಮತ್ತು ಮರಾಠ ರಾಜ ಶಿವಾಜಿಯ ಕಾಲದಿಂದ ನಾಣ್ಯಗಳನ್ನು ಸಂಗ್ರಹಿಸಿದ್ದಾರೆ. ಅಲ್ಲದೇ ಬ್ರಿಟಿಷ್ ನಾಣ್ಯಗಳ ಪೈಕಿ, ಕಿಂಗ್ ಜಾರ್ಜ್ 5, ಕಿಂಗ್ ಜಾರ್ಜ್ 6 ಮತ್ತು ರಾಣಿ ವಿಕ್ಟೋರಿಯಾ ಆಳ್ವಿಕೆಯಲ್ಲಿ ಹಲವಾರು ನಾಣ್ಯಗಳನ್ನು ಸಂಗ್ರಹಿಸಿದ್ದಾರೆ. ಜೊತೆಗೆ ಅಮೆರಿಕ, ಇಂಗ್ಲೆಂಡ್, ಹಾಂಗ್‍ಕಾಂಗ್, ಬೆಲ್ಜಿಯಂ, ಫ್ರಾನ್ಸ್, ಆಸ್ಟ್ರೇಲಿಯಾ, ಇಟಲಿ, ನೇಪಾಳದ ಲೋಹ ಮತ್ತು ಕಾಗದದ ಕರೆನ್ಸಿಗಳನ್ನು ಸಂಗ್ರಹಿಸಿದ್ದಾರೆ.

    ಸುಮಾರು 20 ವಿವಿಧ ದೇಶಗಳ ನಾಣ್ಯಗಳು ಮತ್ತು ಪ್ಲಾಸ್ಟಿಕ್, ಚಿನ್ನ ಮತ್ತು ಇತರ ಅಮೂಲ್ಯ ಲೋಹಗಳಿಂದ ಮಾಡಿದ ನಾಣ್ಯಗಳು ಸಹ ಇವೆ ಎಂದು ಮಂಗರಾಜ್ ತಿಳಿಸಿದ್ದಾರೆ. ಕೊರೊನಾ ವಿರುದ್ಧ ಹೋರಾಡಲು ಸರ್ಕಾರಕ್ಕೆ ಸಹಾಯ ಮಾಡಲು ನಾಣ್ಯಶಾಸ್ತ್ರಜ್ಞ ತಾವು ಸಂಗ್ರಹಿಸಿದ್ದ ಪುರಾತನ ಕಾಲದ ನಾಣ್ಯಗಳನ್ನು ಹರಾಜು ಮಾಡಲು ನಿರ್ಧರಿಸಿದ್ದಾರೆ.

  • ಮೂರು ಫಂಡ್‍ಗೆ ತಲಾ 1 ಲಕ್ಷ ಪಿಂಚಣಿ ದೇಣಿಗೆ ನೀಡಿದ ದೇವೇಗೌಡ್ರು

    ಮೂರು ಫಂಡ್‍ಗೆ ತಲಾ 1 ಲಕ್ಷ ಪಿಂಚಣಿ ದೇಣಿಗೆ ನೀಡಿದ ದೇವೇಗೌಡ್ರು

    ಬೆಂಗಳೂರು: ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡರು ತಮ್ಮ ಪಿಂಚಣಿ ಹಣವನ್ನು ಕೊರೊನಾ ಪರಿಹಾರ ನಿಧಿಗೆ ದೇಣಿಗೆಯಾಗಿ ನೀಡಿದ್ದಾರೆ.

    ದೇವೇಗೌಡರು ಪಿಎಂ ಕೇರ್ಸ್ ಫಂಡ್, ಮುಖ್ಯಮಂತ್ರಿ ಪರಿಹಾರ ನಿಧಿ ಮತ್ತು ಕೇರಳ ಸಿಎಂ ಪರಿಹಾರ ನಿಧಿಗೆ ತಲಾ ಒಂದೊಂದು ಲಕ್ಷ ದೇಣಿಗೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ.

    “ಕೊರೊನಾ ನಿಯಂತ್ರಣ ನಿಧಿಗೆ ನಾನು ಪಡೆಯುವ ಪಿಂಚಣಿ ಹಣವನ್ನು ನೀಡುತ್ತಿದ್ದೇವೆ. ಪಿಎಂ ಕೇರ್ಸ್ ಫಂಡ್, ಕರ್ನಾಟಕ ಮುಖ್ಯಮಂತ್ರಿ ಪರಿಹಾರ ನಿಧಿ ಮತ್ತು ಕೇರಳ ಮುಖ್ಯಮಂತ್ರಿ ಪರಿಹಾರ ನಿಧಿಗೆ ತಲಾ 1 ಲಕ್ಷ ನೀಡುತ್ತಿದ್ದೇವೆ” ಎಂದು ಬರೆದುಕೊಂಡಿದ್ದಾರೆ.

    ಈ ಮೂಲಕ ಕೊರೊನಾ ಪರಿಹಾರ ನಿಧಿಗೆ ದೇವೇಗೌಡರು ಮೂರು ಲಕ್ಷ ರೂಪಾಯಿಯನ್ನು ದೇಣಿಗೆಯಾಗಿ ನೀಡುತ್ತಿದ್ದಾರೆ. ಮಹಾಮಾರಿ ಕೊರೊನಾ ವೈರಸ್‍ಗೆ ಇಡೀ ದೇಶವೇ ಆರ್ಥಿಕ ನಷ್ಟವನ್ನು ಅನುಭವಿಸುತ್ತಿದೆ. ಹೀಗಾಗಿ ಪಿಎಂ, ಸಿಎಂ ಕೊರೊನಾ ಪರಿಹಾರ ನಿಧಿಗೆ ತಮ್ಮ ಕೈಲಾದಷ್ಟು ಸಹಾಯ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಈಗಾಗಲೇ ಅನೇಕರು ಕೊರೊನಾ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ.

  • ಕೊರೊನಾ ವಿರುದ್ಧ ಹೋರಾಟಕ್ಕೆ ಟಾಲಿವುಡ್ ನಾಯಕರ ಆರ್ಥಿಕ ಸಹಾಯ – ಯಾರು ಎಷ್ಟು ಕೊಟ್ಟಿದ್ದಾರೆ?

    ಕೊರೊನಾ ವಿರುದ್ಧ ಹೋರಾಟಕ್ಕೆ ಟಾಲಿವುಡ್ ನಾಯಕರ ಆರ್ಥಿಕ ಸಹಾಯ – ಯಾರು ಎಷ್ಟು ಕೊಟ್ಟಿದ್ದಾರೆ?

    ಹೈದರಾಬಾದ್: ಕೊರೊನಾ ಸೋಂಕು ಹರಡುವ ಹಿನ್ನೆಲೆಯಲ್ಲಿ ಭಾರತ ಬಂದ್ ಆಗಿದೆ. ಇಡೀ ದೇಶದ ಜನರು ಕೋವಿಂಡ್ ವಿರುದ್ಧ ಹೋರಾಡಲು ಒಗ್ಗಟ್ಟಾಗಿದ್ದಾರೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿಯಿಂದ ಹಿಡಿದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಆರ್ಥಿಕ ಸಹಾಯ ಮಾಡುವಂತೆ ದೇಶದ ಜನರನ್ನು ಕೋರಿದ್ದಾರೆ.

    ಪಿಎಂ ಮತ್ತು ಸಿಎಂಗಳ ಮನವಿ ಸ್ಪಂದಿಸಿರುವ ಟಾಲಿವುಡ್ ನಾಯಕರು ಸರ್ಕಾರದ ನೆರವಿಗೆ ಬಂದಿದ್ದಾರೆ. ನಟ ಪವನ್ ಕಲ್ಯಾಣ ಎರಡು ಕೋಟಿ ಆರ್ಥಿಕ ನೆರವು ನೀಡಿದ್ದಾರೆ. ಈ ಪೈಕಿ ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ಒಂದು ಕೋಟಿ, ಆಂಧ್ರ ಪ್ರದೇಶ ಮತ್ತು ತೆಲಂಗಾಣ ಮುಖ್ಯಮಂತ್ರಿ ಪರಿಹಾರ ನಿಧಿಗೆ ತಲಾ 50 ಲಕ್ಷ ರೂ. ನೆರವು ನೀಡಿದ್ದಾರೆ.

    ಟಾಲಿವುಡ್‍ನ ಮತ್ತೋರ್ವ ನಟ ಮಹೇಶ್ ಬಾಬು ಆಂಧ್ರ ಪ್ರದೇಶ ಮತ್ತು ತೆಲಂಗಾಣ ಮುಖ್ಯಮಂತ್ರಿ ಪರಿಹಾರ ನಿಧಿಗೆ ಒಂದು ಕೋಟಿ ನೀಡಿ ಸಹಾಯ ಹಸ್ತ ಚಾಚಿದ್ದಾರೆ.

    ಪವನ್ ಕಲ್ಯಾಣ ಆರ್ಥಿಕ ಸಹಾಯ ಮಾಡಿದ್ದನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಇದರಿಂದ ಪ್ರೇರಣೆಗೊಂಡ ನಟ ರಾಮ್‍ಚರಣ್ 70 ಲಕ್ಷ ರೂ. ಆರ್ಥಿಕ ನೆರವು ನೀಡಿದ್ದು, ಕೇಂದ್ರ ಸರ್ಕಾರ ಮತ್ತು ಆಂಧ್ರ ಪ್ರದೇಶ, ತೆಲಂಗಾಣ ಸರ್ಕಾರ ಪರಿಹಾರ ನಿಧಿಗೆ ಹಂಚಿಕೆ ಮಾಡಿದ್ದಾರೆ.

    ಕೊರೊನಾ ವಿರುದ್ಧದ ಹೋರಾಟಕ್ಕೆ ಎಲ್ಲರೂ ಒಂದಾಗಬೇಕಿದ್ದು, ಸರ್ಕಾರದ ನೆರವಿಗೆ ನಿಲ್ಲಬೇಕಿದೆ. ಎಲ್ಲರೂ ಸಾಧ್ಯವಾದಷ್ಟು ನೆರವು ನೀಡಿ ಎಂದು ಈ ನಟರು ಮನವಿ ಮಾಡಿಕೊಂಡಿದ್ದಾರೆ.

  • ಪ್ರವಾಹ ಕಳೆದು 4 ತಿಂಗಳಾದ್ರೂ ನಿಂತಿಲ್ಲ ಸಂತ್ರಸ್ತರ ಕಣ್ಣೀರು

    ಪ್ರವಾಹ ಕಳೆದು 4 ತಿಂಗಳಾದ್ರೂ ನಿಂತಿಲ್ಲ ಸಂತ್ರಸ್ತರ ಕಣ್ಣೀರು

    ಬೆಳಗಾವಿ(ಚಿಕ್ಕೋಡಿ): ನಾಡಿನೆಲ್ಲೆಡೆ ಸಂಕ್ರಾಂತಿ ಹಬ್ಬವನ್ನ ಎಲ್ಲರೂ ಸಡಗರ ಸಂಭ್ರಮದಿಂದ ಆಚರಿಸಲು ಸಿದ್ಧತೆ ನಡೆಸಿದ್ದಾರೆ. ಆದರೆ ಪ್ರವಾಹ ಸಂತ್ರಸ್ತರು ಕಣ್ಣೀರಲ್ಲೇ ಹಬ್ಬ ಆಚರಿಸುತ್ತಿದ್ದಾರೆ. ಸರ್ಕಾರ ಎಲ್ಲರಿಗೂ ಪರಿಹಾರ ನೀಡಿದ್ದೇವೆ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿದೆ. ಆದರೆ ಇತ್ತ ಸಂತ್ರಸ್ತರು ಪರಿಹಾರಕ್ಕಾಗಿ ಅಲೆದಾಡಿ ಕಣ್ಣೀರು ಹಾಕುತ್ತಿದ್ದಾರೆ.

    ಬೆಳಗಾವಿ ಜಿಲ್ಲೆಯ ಕೃಷ್ಣಾ ನದಿ ತೀರದ ಪ್ರವಾಹಕ್ಕೆ ಸಿಲುಕಿ ಮನೆಗಳನ್ನ ಕಳೆದುಕೊಂಡಿರುವ ಸಂತ್ರಸ್ತರು ಕಣ್ಣೀರಲ್ಲಿ ಹಬ್ಬ ಆಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರದ ಖಜಾನೆಯಲ್ಲಿ ಹಣದ ಕೊರತೆಯಿಲ್ಲ ಎಂದು ಸಿಎಂ ಹೇಳಿಕೊಳ್ಳುತ್ತಿದ್ದಾರೆ. ಆದರೆ ಈ ಭಾಗದ ಸಂತ್ರಸ್ತರಿಗೆ ಯಾವುದೇ ಪರಿಹಾರ ಸಿಗದೇ ಕಣ್ಣೀರು ಹಾಕುತ್ತಿದ್ದಾರೆ. ಸರ್ಕಾರಿ ಕಚೇರಿಗಳಿಗೆ ಅಲೆದಾಡಿ ತಮ್ಮ ಚಪ್ಪಲಿ ಸವೆದುಕೊಳ್ಳುತ್ತಿದ್ದಾರೆ. ಸರ್ಕಾರದ ಅಧಿಕಾರಿಗಳು ಮಾತ್ರ ಟೆಕ್ನಿಕಲ್ ಪ್ರಾಬ್ಲಮ್ ಇದೆ ಎಂದು ಸಂತ್ರಸ್ತರನ್ನು ಮನೆಗೆ ಕಳುಹಿಸಿಕೊಡುತ್ತಿದ್ದಾರೆ. ಇದರಿಂದ ಬೇಸತ್ತಿರುವ ಸಂತ್ರಸ್ತರು ಸರ್ಕಾರದ ಖಜಾನೆ ಬಳಿ ಹಣ ಇದೆಯೋ? ಇಲ್ಲವೋ? ಎನ್ನುವ ಸಂಶಯ ವ್ಯಕ್ತಪಡಿಸಿದ್ದಾರೆ.

    ಸರ್ಕಾರದ ಬಳಿ ಹಣದ ಕೊರತೆ ಇರುವ ಕಾರಣ ಸಂತ್ರಸ್ತರಿಗೆ ಪರಿಹಾರ ವಿತರಣೆಯಲ್ಲಿ ವಿಳಂಬ ನೀತಿ ಅನುಸರಿಸುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಂಪೂರ್ಣ ಮನೆ ಕಳೆದುಕೊಂಡವರಿಗೆ ಇದುವರೆಗೂ 10 ಸಾವಿರ ರೂ. ಬಿಟ್ಟು ಬೇರೆ ಪರಿಹಾರ ಸಿಕ್ಕಿಲ್ಲ. ತಮ್ಮ ಸ್ವಂತ ಖರ್ಚಿನಿಂದ ಕೆಲವರು ಸಾಲ ಮಾಡಿಕೊಂಡು ಶೆಡ್ ನಿರ್ಮಾಣ ಮಾಡಿಕೊಂಡಿದ್ದಾರೆ. ಕೆಲವರಿಗೆ ಮಾತ್ರ ಪರಿಹಾರ ಸಿಕ್ಕಿದ್ದು, ಸಂಪೂರ್ಣವಾಗಿ ಮನೆ ಕಳೆದುಕೊಂಡ ಸಾಕಷ್ಟು ಕುಟುಂಬಗಳಿಗೆ ಪರಿಹಾರ ಸಿಕ್ಕಿಲ್ಲ.

    ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಮಾಂಜರಿ, ಕಲ್ಲೋಳ ಕಾಗವಾಡ ತಾಲೂಕಿನ ಜೂಗುಳ, ಮಂಗಾವತಿ ಸೇರಿದಂತೆ ಸಾಕಷ್ಟು ಗ್ರಾಮಗಳಲ್ಲಿ ಅರ್ಧಕ್ಕೂ ಹೆಚ್ಚು ನಿಜವಾದ ಸಂತ್ರಸ್ತರಿಗೆ ಪರಿಹಾರ ಸಿಕ್ಕಿಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಿರ್ಲಕ್ಷ್ಯದಿಂದ ಪ್ರವಾಹ ಕಳೆದು ನಾಲ್ಕು ತಿಂಗಳಾದರೂ ಸಂತ್ರಸ್ತರ ಕಣ್ಣೀರಿನ ಕಥೆ ಮುಗಿಯುತ್ತಿಲ್ಲ. ಸಿಎಂ ಯಡಿಯೂರಪ್ಪ ಅವರು ಇನ್ನಾದರೂ ಎಚ್ಚೆತ್ತುಕೊಂಡು ಖಜಾನೆ ತುಂಬಿದ ಕಥೆ ಹೇಳುವುದನ್ನ ಬಿಟ್ಟು ನೆರವಿಗೆ ನಿಲ್ಲಬೇಕು ಎನ್ನುವುದೇ ಸಂತ್ರಸ್ತರ ಆಗ್ರಹವಾಗಿದೆ.